Thursday, June 11, 2026
Thursday, June 11, 2026
Home Blog Page 197

Shivamogga Police ಅನಾಮಧೇಯ ವ್ಯಕ್ತಿ ಸಾವು, ವಾರಸುದಾರರ ಪತ್ತೆಗೆ ಪೊಲೀಸ್ ಠಾಣೆಯಿಂದ ಮನವಿ

0

Shivamogga Police ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ನ.29 ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾನೆ.
ಮೃತ ಅಪರಿಚಿತ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈ ಕಟ್ಟು, ಗೋಧಿ ಮೈ ಬಣ್ಣ, ತಲೆಯಲ್ಲಿ 2 ಇಂಚು ಉದ್ದದ ಕಪ್ಪು- ಬಿಳಿ ಕೂದಲು ಇದ್ದು, ಮುಖದಲ್ಲಿ 1/4 ಇಂಚು ಉದ್ದದ ಕಪ್ಪು-ಬಿಳಿ ಗಡ್ಡವಿರುತ್ತದೆ. ಎಡಗೈ ಒಳಭಾಗದಲ್ಲಿ ಅಮ್ಮ ಎಂಬ ಟ್ಯಾಟೂ ಇರುತ್ತದೆ. ಮೃತನ ಮೈ ಮೇಲೆ ನೀಲಿ ಬಿಳಿ ಅಡ್ಡಗೆರೆಗಳಿರುವ ಟೀ ಶರ್ಟ್,ಬೂದು ಬಣ್ಣದ ಫಾರ್ಮಲ್ ಪ್ಯಾಂಟ್ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೋಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Consumer Disputes Redressal Commission ಮೋಸದಿಂದ ಕಟಾಯಿಸಿದ ಹಣದ ಬಗ್ಗೆ ದೂರು ಸಲ್ಲಿಸಿದರೂ ಕ್ರಮಕೈಗೊಳ್ಳದ ಬ್ಯಾಂಕ್ ನಿಂದ ಗ್ರಾಹಕರಿಗೆ ಪರಿಹಾರ ನೀಡಲು ಆದೇಶ

0

Consumer Disputes Redressal Commission ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮ ಕೈಗೊಳ್ಳದ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ, ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ದೂರುದಾರರಾದ ದೇವಾಪ್ರಸಾದ್, ಶಾಂತಿನಗರ, ಶಿವಮೊಗ್ಗ, ವ್ಯವಸ್ಥಾಪಕರು ಯೂನಿಯನ್ ಬ್ಯಾಂಕ್, ವಿನೋಬನಗರ ಶಾಖೆ, ಶಿವಮೊಗ್ಗ, ಯೂನಿಯನ್ ಬ್ಯಾಂಕ್, ರೀಜಿನಲ್ ಆಫೀಸ್, ಶಿವಮೊಗ್ಗ, ಇವರ ವಿರುದ್ಧ ದೂರನ್ನು ಸಲ್ಲಿಸಿ, 1ನೇ ಎದುರುದಾರರ ಬ್ಯಾಂಕಿನ ಹಲವು ವರ್ಷಗಳಿಂದ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ದಿ: 24/05/2024 ರಂದು ಸಂಜೆ ಸುಮಾರು 6.34 ಕ್ಕೆ ರೂ.1,85,500/- ಖಾತೆಯಿಂದ ಕಟಾವಾಗಿರುವುದಾಗಿ ದೂರುದಾರರ ಪೋನ್‌ಗೆ ಸಂದೇಶ ಬಂದಿರುತ್ತದೆ.

ಈ ವಿಷಯವನ್ನು ದೂರುದಾರರು 1ನೇ ಎದುರುದಾರ ಬ್ಯಾಂಕ್‌ಗೆ ವರದಿ ಮಾಡಿ, ಇದು ಅನಧಿಕೃತವಾದ/ಮೋಸದ ವ್ಯವಹಾರವಾಗಿರುತ್ತದೆ.

ಆದ್ದರಿಂದ ಸದರಿ ಮೊತ್ತ ಪಾವತಿ ತಡೆ ಹಿಡಿಯಲು ತಿಳಿಸಿದ್ದು, 1ನೇ ಎದುರುದಾರರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ತದನಂತರ, ದೂರುದಾರರು ಸೈಬರ್ ಕ್ರೈಂ ಪೋಲಿಸ್ ಠಾಣೆ, ಶಿವಮೊಗ್ಗ, ಇವರಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ದೂರುದಾರರು 4ನೇ ಎದುರುದಾರರಿಗೆ ನೋಟೀಸ್ ನೀಡಿರುತ್ತಾರೆ. ನೋಟೀಸ್ ತಲುಪಿದ್ದು ಯಾವುದೇ ಕ್ರಮ/ಪ್ರತ್ಯುತ್ತರವನ್ನು ನೀಡದೇ ಅನಧಿಕೃತವಾಗಿ ಕಟಾವಣೆ ಆದ ಮೊತ್ತವನ್ನು ದೂರುದಾರರ ಖಾತೆಗೆ ಮರು ಜಮೆ ಮಾಡದೇ ಸೇವಾ ನ್ಯೂನತೆ ಎಸಗಿರುತ್ತಾರೆ ಎಂದು ದೂರನ್ನು ಸಲ್ಲಿಸಿರುತ್ತಾರೆ.

Consumer Disputes Redressal Commission ಆಯೋಗವು ನಿಯಮಾನುಸಾರ ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಸುತ್ತೋಲೆ ದಿ: 06/07/2017 ರಂತೆ, ಎದುರುದಾರರು ಅನಧಿಕೃತವಾಗಿ/ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮವನ್ನು ಕೈಗೊಳ್ಳದಿರುವುದರಿಂದ, ಮರುಜಮೆ ಮಾಡದಿರುವುದರಿಂದ, ಸೇವಾನ್ಯೂನತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ. ದೂರನ್ನು ಪುರಸ್ಕರಿಸಿ, 1 ಮತ್ತು 2ನೇ ಎದುರುದಾರರು ದೂರುದಾರರಿಗೆ ರೂ.1,85,500/-ಗಳಿಗೆ ದಿನಾಂಕ:24/05/2024 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ.9 ರಂತೆ ಬಡ್ಡಿಯನ್ನು ಸೇರಿಸಿ, 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದ್ದಲ್ಲಿ ವಾರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ, ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು, ಹಾಗೂ ರೂ.10,000/-ಗಳನ್ನು ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ ದಿನದಿಂದ 45 ದಿನಗಳ ಒಳಗೆ ಪಾವತಿಸುವುದು, ತಪ್ಪಿದ್ದಲ್ಲಿ ವಾರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ನೀಡುವವರೆಗೆ ನೀಡಬೇಕೆಂದು ಎಂದು ಆಯೋಗದ ಅಧ್ಯಕ್ಷರಾದ ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನು ಒಳಗೊಂಡ ಪೀಠವು ದಿನಾಂಕ: 29/11/2025 ರಂದು ಆದೇಶಿಸಿದೆ.

B.Y. Raghavendra ವಾತಾವರಣ ಆಧಾರಿತ ಬೆಳೆವಿಮೆ ಹಣ ನೀಡಲು ಮತ್ತು ಅಡಿಕೆಗೆ ಬಂದಿರುವ ಎಲೆ ಚುಕ್ಕೆ ರೋಗ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರ

0

B.Y. Raghavendra ಸಂಸತ್ತಿನಲ್ಲಿ ಶೂನ್ಯ ಕಾಲ ಉಲ್ಲೇಖದ ಮೂಲಕ ಮಲೆನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ರೈತರು ಎದುರಿಸುತ್ತಿರುವ ಗಂಭೀರ ಸಂಕಷ್ಟವನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಪ್ರಸ್ತಾಪಿಸಿದ್ದಾರೆ.

ಹಳದಿ ಎಲೆ ರೋಗ (YLD) ಹಾಗೂ ಎಲೆ ಚುಕ್ಕೆ ರೋಗ (LSD) ಎಂಬ ಭೀಕರ ರೋಗಗಳು, ಜೊತೆಗೆ ಸತತವಾಗಿ ನಾಲ್ಕು ತಿಂಗಳು ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಲ್ಲಿ ಭಾರೀ ನಷ್ಟವಾಗಿದೆ. ಪರಿಣಾಮವಾಗಿ, ಅನೇಕ ರೈತರು ಈ ವರ್ಷ ನಿರೀಕ್ಷಿಸಿದ್ದ ಫಸಲಿನ ಕೇವಲ ನಾಲ್ಕನೇ ಭಾಗವಷ್ಟೇ ದೊರೆಯುವ ಸ್ಥಿತಿ ಎದುರಿಸುತ್ತಿದ್ದಾರೆ.
ಅದೇ ವೇಳೆ, ಬೆಳೆ ವಿಮೆ ಯೋಜನೆಯಾದ WBCIS ಅನುಷ್ಠಾನದಲ್ಲಿ ಕಂಡುಬರುವ ಗಂಭೀರ ತೊಂದರೆಗಳನ್ನು ಸಹ ನಾನು ಉಲ್ಲೇಖಿಸಿದೆ. ಅನೇಕ ಮಳೆಮಾಪನ ಕೇಂದ್ರಗಳು ಕಾರ್ಯನಿರ್ವಹಿಸದೇ ಇರುವುದು, ಮೂರು ವರ್ಷಕ್ಕೊಮ್ಮೆ ಮಾತ್ರ ಪರಿಷ್ಕಾರಗೊಳ್ಳುವ ತಾಂತ್ರಿಕ ಮಾನದಂಡಗಳು, ಮತ್ತು 20 ರಿಂದ 45 ಕಿಮೀ ದೂರದಲ್ಲಿರುವ ಬ್ಯಾಕಪ್ ಮಳೆಮಾಪನ ಕೇಂದ್ರಗಳ ತಡವಾದ ಅಧಿಸೂಚನೆ–ಇವುಗಳ ಪರಿಣಾಮವಾಗಿ ಹಲವಾರು ಅರ್ಹ ರೈತರು ಯೋಗ್ಯ ಪರಿಹಾರವನ್ನೇ ಪಡೆಯದ ಸ್ಥಿತಿ ಉಂಟಾಗಿದೆ ಎಂದಿದ್ದಾರೆ.

B.Y. Raghavendra ಈ ಹಿನ್ನೆಲೆಯಲ್ಲಿ, ಸಮೀಪದ ಹಾಗೂ ಹವಾಮಾನಕ್ಕೆ ತಕ್ಕಂತೆ ನಿಖರ ಮಾಹಿತಿಯನ್ನು ಹೊಂದಿರುವ ಕೇಂದ್ರಗಳ ಆಧಾರದ ಮೇಲೆ ರೈತರಿಗೆ 2024–25ರ ಪರಿಹಾರವನ್ನು ಮರು ಲೆಕ್ಕ ಹಾಕುವಂತೆ, ಮಳೆ SMS ಸೇವೆಯನ್ನು ಪುನರ್‌ಸ್ಥಾಪಿಸುವಂತೆ, ರೋಗ ನಿಯಂತ್ರಣಕ್ಕೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಹಾಗೂ ಅಡಿಕೆ ಬೆಳೆ ನಷ್ಟಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ ನೀಡುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರವನ್ನು ನಾನು ಮನವಿ ಮಾಡಿದ್ದೇನೆ. ನಮ್ಮ ಅನ್ನದಾತರಿಗೆ ನ್ಯಾಯ, ರಕ್ಷಣೆ ಮತ್ತು ಸಮಯೋಚಿತ ಸಹಾಯ ದೊರೆಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

MESCOM ಡಿಸೆಂಬರ್ 5. ಶಿವಮೊಗ್ಗದ ಬಿಎಸ್ಎನ್ಎಲ್ ಭವನ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ

0

MESCOM ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.5 ರಂದು ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ನಗರದ ಬಿಎಸ್ ಎನ್ ಎಲ್ ಭವನ ಬಿ ಮತ್ತು ಸಿ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Shimoga Press Trust ಸೇವಾಮನೋಭಾವದಿಂದ ಉಚಿತ ಆರೋಗ್ಯ ತಪಾಸಣೆ ಸಮಾಜಕ್ಕೆ ದೊಡ್ಡ ಕೊಡುಗೆ- ಆರ್.ಮಾರುತಿ

0

Shimoga Press Trust ಆಸ್ಪತ್ರೆಗಳು ಪ್ರಸ್ತುತ ದಿನಮಾನಗಳಲ್ಲಿ ವಾಣಿಜ್ಯ ಕೇಂದ್ರಗಳಾಗಿ ಮಾರ್ಪಟ್ಟಿದ್ದು, ವೈದ್ಯರುಗಳಲ್ಲಿ ಸೇವಾ ಮನೋಭಾವನೆ ಕಡಿಮೆಯಾಗಿದೆ ಎಂದು ವಾರ್ತಾಧಿಕಾರಿ ಆರ್ ಮಾರುತಿ ತಿಳಿಸಿದರು.
ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಹಾಗೂ ತೃಪ್ತಿ ಹಾಸ್ಪಿಟಲ್ ಇವರ ಸಂಯುಕ್ತ ಆಶ್ರಯದಲ್ಲಿ ತೃಪ್ತಿ ಆಸ್ಪತ್ರೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ತೃಪ್ತಿ ಆಸ್ಪತ್ರೆಯ ವೈದ್ಯ ಡಾ.ಚಂದ್ರಶೇಖರ್ ಅವರು ಸೇವಾ ಮನೋಭಾವದಿಂದ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸುತ್ತಿರವುದು ಸಮಾಜಕ್ಕೆ ನೀಡುತ್ತಿರುವು ಬಹುದೊಡ್ಡ ಕೊಡುಗೆಯಾಗಿದೆ ಎಂದರು.
ಸೇವಾ ಮನೋಭಾವ ಮತ್ತು ಸಾಮಾಜಿಕ ಕಳಕಳಿ ಇರುವವರಿಗೆ ಮಾತ್ರ ಇಂತಹ ಕಾರ್ಯಗಳನ್ನು ನಡೆಸಲು ಸಮಯ ಸಿಗುತ್ತದೆ ಎಂದು ಹೇಳಿದರು.
Shimoga Press Trust ಶಿವಮೊಗ್ಗ ನಗರದಲ್ಲಿ ಇಂತಹ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯವಾಗಿದ್ದು, ಆರೋಗ್ಯದ ಬಗ್ಗೆ ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದ ಅವರು, ದೇಹದ ಭಾಗಗಳಲ್ಲಿ ಮುಖ್ಯವಾಗಿರುವ ಮೂತ್ರಕೋಶ, ಲಿವರ್, ಹೃದಯ ಇವುಗಳ ತಪಾಸಣೆಗೆ ಇತರೆ ಆಸ್ಪತ್ರೆಗಳಲ್ಲಿ ಸಾಕಷ್ಟು ಹಣ ಪಾವತಿ ಮಾಡಬೇಕಾಗುತ್ತದೆ. ಆದರೆ ತೃಪ್ತಿ ಆಸ್ಪತ್ರೆ ಇವುಗಳ ತಪಾಸಣೆಯನ್ನು ಉಚಿತವಾಗಿ ನಡೆಸುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದು ಹೇಳಿದರು.
ಆಸ್ಪತ್ರೆಯ ವೈದ್ಯ ಡಾ.ಚಂದ್ರಶೇಖರ್ ಮಾತನಾಡಿ, ಪ್ರತಿಯೊಬ್ಬರಿಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಕನಸಾಗಿದೆ. ಈ ನಿಟ್ಟಿನಲ್ಲಿ ಉಚಿತ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡಿದ್ದೇನೆ. ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯ. ಆದ್ದರಿಂದ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ದೊರಕಿಸಿ ಕೊಡುವುದು ನನ್ನ ಮೊದಲ ಆಧ್ಯತೆಯಾಗಿದೆ. ಕಿಡ್ನಿ, ಲಿವರ್ ಹಾಗೂ ಹೃದಯದ ಆರೋಗ್ಯ ಉತ್ತಮವಾಗಿದ್ದರೆ ಮನುಷ್ಯ ಆರೋಗ್ಯವಾಗಿರುತ್ತಾನೆ. ಇವುಗಳು ಉತ್ತಮವಾಗಿರಬೇಕಾದರೆ ಮಿತವಾದ ಆಹಾರ, ವ್ಯಾಯಾಮ ಮತ್ತು ನಡಿಗೆಯನ್ನು ಮಾಡಲೇಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಹೊನ್ನಾಳಿ ಚಂದ್ರಶೇಖರ್, ಗೋ.ವಾ.ಮೋಹನಕೃಷ್ಣ ಮತ್ತಿರರಿದ್ದರು.

Minority Welfare Department ವಿಶೇಷ ಪ್ರೋತ್ಸಾಹ ಸೌಲಭ್ಯಕ್ಕೆ ಅರ್ಜಿ ಆಹ್ವಾನ

0

Minority Welfare Department 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ರೂ.25000/-ಗಳ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುವುದು.
Minority Welfare Department ಅರ್ಜಿ ಸಲ್ಲಿಸಲು ದಿ: 31.12.2025 ಕಡೆಯ ದಿನಾಂಕವಾಗಿದ್ದು, ಅರ್ಜಿಯನ್ನು sevasindhu.karnataka.gov.in ಮೂಲಕ ಸಲ್ಲಿಸಿ ನಂತರ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ಮೊಹರು ಮತ್ತು ಸಹಿ/ದೃಢೀಕರಣ ಪಡೆದು, ಅರ್ಜಿಯೊಂದಿಗೆ ನಿವಾಸಿ ದೃಢೀಕರಣ ಪತ್ರ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಸೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಳಿಗೆ ಪ್ರಾಂಶುಪಾಲರಿಂದ ದೃಢೀಕರಿಸಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220206 ಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Kuvempu University ಶಿವಮೊಗ್ಗದ ಸುದೀಪ್ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಹೈಜಂಪ್ ಸ್ಪರ್ಧೆ, ಚಿನ್ನದ ಪದಕ ವಿಜೇತ

0

Kuvempu University ರಾಜಸ್ಥಾನದಲ್ಲಿ ಆಯೋಜಿಸಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಶಿವಮೊಗ್ಗದ ವಿದ್ಯಾರ್ಥಿ ಚಿನ್ನದ ಪದಕ ವಿಜೇತನಾಗಿದ್ದಾನೆ.

ಖೇಲೋ ಇಂಡಿಯಾದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಮೂರನೇ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ 2.8 ಮೀಟರ್ ಎತ್ತರ ಜಿಗಿತ ಮಾಡಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ವಿಜೇತನಾಗಿದ್ದಾನೆ.

ಖೇಲೋ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಭಾರತ ದೇಶ ಪ್ರತಿನಿಧಿಸುವ ಗುರಿ ಹೊಂದಿದ್ದೇನೆ ಎಂದು ವಿಜೇತ ಸ್ಪರ್ಧಿ ಸುದೀಪ್ ಅನಿಸಿಕೆ ವ್ಯಕ್ತಪಡಿಸಿದ್ದಾನೆ.

Kuvempu University ಕುವೆಂಪು ವಿಶ್ವವಿದ್ಯಾಲಯದಿಂದ ಪ್ರತಿನಿಧಿಸಿದ್ದ ಡಿವಿಎಸ್ ಕಾಲೇಜಿನ ವಿದ್ಯಾರ್ಥಿ ಸುದೀಪ್ ಸಾಧನೆಗೆ ದೇಶೀಯ ವಿದ್ಯಾಶಾಲಾ ಸಮಿತಿ ಆಡಳಿತ ಮಂಡಳಿ ಹಾಗೂ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯ ಡಾ. ಎಂ.ವೆಂಕಟೇಶ್ , ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಚಿನ್. ಕೆ ಅಭಿನಂದಿಸಿದ್ದಾರೆ.

Agricultural Science Centre ಮಹಿಳೆಯರು ಕೃಷಿ ಮತ್ತು ಕುಟುಂಬ ನಿರ್ವಹಣೆಯಲ್ಲಿ ಪಾಲ್ಗೊಳ್ಳುತ್ತಾರೆ- ಡಾ.ಬಿ.ಹೇಮ್ಲಾನಾಯಕ್

0

Agricultural Science Centre ಕೃಷಿ ನಿರತ ಮಹಿಳಾ ದಿನಾಚರಣೆಯನ್ನು ದಿನಾಂಕ 4.12.2025 ರದ್ದು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ಆಚರಿಸಲಾಯಿತು. ಕೃಷಿಯಲ್ಲಿ ಮಹಿಳೆಯರ ದಿನವನ್ನು ಡಿಸೆಂಬರ್ 4 ,2018 ರಿಂದ ಪ್ರತಿ ವರ್ಷ ಭಾರತೀಯ ಕೃಷಿ ಸಂಶೋಧನಾ ಮಂಡಳಿಯು ಪ್ರತಿ ವರ್ಷ ಆಚರಿಸಲು ನಿರ್ಧರಿಸಲಾಗಿದೆ. ಇದರ ಮುಖ್ಯ ಉದ್ದೇಶ ಕೃಷಿಯಲ್ಲಿ ಮಹಿಳೆಯರ ಕೊಡುಗೆಗಳನ್ನು ಗುರುತಿಸುವುದು ಮತ್ತು ಗೌರವಿಸುವುದಾಗಿದೆ, ಜೊತೆಗೆ ಮಹಿಳೆಯರು ಹೆದರಿಸುವ ಸವಾಲುಗಳನ್ನು ಪರಿಹರಿಸುವುದು. ಈ ದಿನದಂದು ಮಹಿಳೆಯರ ಸಬಲೀಕರಣಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಮತ್ತು ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಸವಾಲುಗಳು ಮತ್ತು ಅವರ ಕೊಡುಗೆಗಳ ಕುರಿತು ಚರ್ಚಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ಕೋಕೋ ಬೆಳೆಯ ಉತ್ಪಾದನೆ, ಸಂಸ್ಕರಣೆ, ಮತ್ತು ಮೌಲ್ಯವರ್ಧನ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರ ನವಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
Agricultural Science Centre ಈ ಸಮಾರಂಭದ ಅಧ್ಯಕ್ಷತೆಯನ್ನು ಡಾ. ಬಿ .ಹೆಮ್ಲಾ ನಾಯಕ್, ಶಿಕ್ಷಣ ನಿರ್ದೇಶಕರು ಹಾಗೂ ಪ್ರಭಾರ ಕುಲಪತಿಗಳು ನೆರವೇರಿಸಿ ಕೃಷಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೇ ಕಾರ್ಯಕ್ರಮವು ಸಾಧ್ಯವಿಲ್ಲ ಮತ್ತು ಮಹಿಳೆಯರು ಕೃಷಿ ಆಧಾರಿತ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಮಹಿಳೆಯರು ಕೃಷಿ ಮತ್ತು ಕುಟುಂಬ ನಿರ್ವಹಣೆ ಎರಡರಲ್ಲೂ ಪ್ರಮುಖ ಪಾತ್ರ ವಹಿಸುವುದರಿಂದ ಮಹಿಳೆಯರ ಈ ಕಾರ್ಯ ತುಂಬಾ ಶ್ಲಾಘನೀಯ ವಾಗಿದೆ ಎಂದು ಪ್ರಶಂಶಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಪ್ರತಿಭಾ , ಸಂಸ್ಥಾಪಕರು, ಜೀವನಮುಖಿ ಸಂಸ್ಥೆ, ಸಾಗರ ಇವರು ನೆರವೇರಿಸಿ ಮಹಿಳೆಯರ ಕೃಷಿಯಲ್ಲಿ ಕೆಲಸಗಳನ್ನು ಶ್ಲಾಘಿಸಿದರು. ರ್ಡಾಕ್ಟರ್ ಸುನಿಲ್ ಸಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತವನ್ನು ಕೋರಿ ಹಾಗೂ ಈ ಕಾರ್ಯಕ್ರಮದ ಕುರಿತಾಗಿ ವಾಸ್ತವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಡಾ ನಾರಾಯಣ ಮಾವರ್ಕರ್, ಡೀನ್ ಸ್ನಾತೋಕೋತರ,
ಡಾಕ್ಟರ್ ಡಿ ತಿಪ್ಪೇಶ್ , ಡೀನ್ ಕೃಷಿ, ಮಂಜುಳಾ ಕೃಷಿ ಉಪನಿರ್ದೇಶಕರು, ಡಾಕ್ಟರ್ ಸಂಜಯ್ ಜಂಟಿ ನಿರ್ದೇಶಕರು ತೋಟಗಾರಿಕೆ ಇಲಾಖೆ ಇವರುಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಡಾ. ಸುಧಾರಣೆ ಅವರು ನೆರವೇರಿಸಿ ಕೊಟ್ಟರು. ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಎಲ್ಲಾ ವಿಜ್ಞಾನಿಗಳು ಸಿಬ್ಬಂದಿ ವರ್ಗದವರು ಮತ್ತು 150 ರೈತ ಮಹಿಳೆಯರು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು.

Seeta Ramanjaneya Swamy Temple ಕೋಟೆ ಆಂಜನೇಯ ದೇಗುಲದ ಸಮಗ್ರ ಅಭಿವೃದ್ಧಿ ಬಗ್ಗೆ ಶಾಸಕ ಚೆನ್ನಿ ಅಧಿಕಾರಿಗಳೊಂದಿಗೆ ಚರ್ಚೆ

0

Seeta Ramanjaneya Swamy Temple ಶಿವಮೊಗ್ಗ ನಗರದ ಐತಿಹಾಸಿಕ ದೂರ್ವಾಸ ಕ್ಷೇತ್ರ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ದೇವಸ್ಥಾನದ ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ವಿಶೇಷ ಸಮಾಲೋಚನೆ ನಡೆಸಿದರು.

ದೇವಾಲಯದ ಸೌಂದರ್ಯೀಕರಣ, ಮೂಲಭೂತ ಸೌಕರ್ಯಗಳ ಸುಧಾರಣೆ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹತ್ವದ ಯೋಜನೆಗಳನ್ನು ಚರ್ಚಿಸಿದರು.

Seeta Ramanjaneya Swamy Temple ಭೇಟಿಯ ಸಂದರ್ಭ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್, ಪ್ರಮುಖರಾದ ಪ್ರಭಾಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಲಚಂದ್ರ, ಅರ್ಚಕರಾದ ಶ್ರೀರಾಮ್ ಪ್ರಸಾದ್ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

S.N. Channabasappa ಅವಕಾಶ ದೊರೆತರೆ ವಿಕಲಚೇತನರು ಏನು ಬೇಕಾದರೂ ಸಾಧಿಸುತ್ತಾರೆ- ಶಾಸಕ ಚನ್ನಬಸಪ್ಪ

0

S.N. Channabasappa ವಿಕಲಚೇತನರಿಗೆ ಅನುಕಂಪವಲ್ಲ-ಅವಕಾಶ ಬೇಕಾಗಿದ್ದು, ಅದು ದೊರೆತಲ್ಲಿ ಏನು ಬೇಕಾದರೂ ಸಾಧಿಸುತ್ತಾರೆಂದು ತೊರಿಸಿಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕುವೆಂಪು ರಂಗಮಂದಿರದಲ್ಲಿ “ಸಾಮಾಜಿಕ ಪ್ರಗತಿಯನ್ನು ಸಾಧಿಸಲು ವಿಕಲಚೇತನರನ್ನು ಒಳಗೊಂಡ ಸಮಾಜವನ್ನು ರೂಪಿಸುವುದು” ಎಂಬ ಘೋಷವಾಕ್ಯದಡಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇವಲ ವಿಶೇಷಚೇತನರು ಮಾತ್ರವಲ್ಲದೆ ಇಡೀ ಮನುಕುಲವೇ ನೆನಪಿಡುವಂತಹ ದಿನ ಇವತ್ತಾಗಿದೆ. “ಮನಸ್ಸಿದ್ದರೆ ಮಾರ್ಗ” ಎಂಬ ನಾಣ್ಗುಡಿಯಂತೆ ವಿಶೇಷಚೇತನ ಮಹಿಳೆಯರು ಸಾಧನೆ ಮಾಡುತ್ತಿದ್ದಾರೆ. ಕ್ರಿಕೆಟ್‌ನಲ್ಲಿ ಕಾವ್ಯ, ಕುಸ್ತಿಯಲ್ಲಿ ಗೌರಮ್ಮ, ಥ್ರೋಬಾಲ್‌ನಲ್ಲಿ ಜ್ಯೋತಿ ಇಂತಹ ವಿಶೇಷಚೇತನ ಮಹಿಳೆಯರು ಅವಕಾಶ ಸಿಕ್ಕರೆ ಇಡೀ ಜಗತ್ತನ್ನೆ ಗೆಲ್ಲುತ್ತೇವೆ ಎಂದು ತೋರಿಸಿದ್ದಾರೆ.

ಜಿಲ್ಲೆಯ ಮಹಿಳೆಯರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಈ ದೇಶಕ್ಕೆ ಕೀರ್ತಿ ಮತ್ತು ಗೌರವ ತಂದಿದ್ದಾರೆ. ದೇಹದ ಎಲ್ಲಾ ಅಂಗಗಳು ಸರಿಯಾಗಿದ್ದೂ ಸಾಧನೆ ಮಾಡಲು ಹಿಂಜರಿಯುವ ಪೀಳಿಗೆಗೆ ವಿಶೇಷಚೇತನರು ಮಾದರಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ನಮ್ಮ ಸಮಾಜದಲ್ಲಿ ತಾಯಿಗಿಂತ ದೊಡ್ಡ ಶಕ್ತಿ ಇನ್ನೊಂದಿಲ್ಲ. ಆಕೆಗೆ ಬದಲಿ ವ್ಯವಸ್ಥೆಯೂ ಇಲ್ಲ. ಇಂತಹ ವಿಶೇಷಚೇತನ ಮಕ್ಕಳನ್ನು ಸಾಕಿ, ಸಲುಹಿ ಸಾಧನೆ ಮಾಡಲು ಮಾನಸಿಕವಾಗಿ ಸಿದ್ದಗೊಳಿಸಿದ ತಾಯಂದಿರೆಲ್ಲರಿಗೂ ಅಭಿನಂದನೆಗಳು. ಇಂತಹ ಮಕ್ಕಳು ಇರುವ ಮನೆಗಳು ಬಲಯುತವಾಗಿರುತ್ತದೆ.

ವಿಶೇಷಚೇತನರು ಇತರರ ಮೇಲೆ ಅವಲಂಬಿತವಾಗದೆ ತಮ್ಮ ಸಾಧನೆಯ ಹಾದಿಯನ್ನು ರೂಪಿಸಿಕೊಳ್ಳಬೇಕು. ಅದಕ್ಕೆಂದೇ ನಿಮ್ಮ ಕುಟುಂಬಗಳು, ಸರ್ಕಾರಗಳು ಬೆಂಬಲವಾಗಿ ನಿಂತು, ಅನೇಕ ಸವಲತ್ತುಗಳನ್ನು ನೀಡುತ್ತಿವೆ ಎಂದರು.

ವಿಧಾನ ಪರಿಷತ್ ಶಾಸಕರಾದ ಧನಂಜಯ ಸರ್ಜಿ ಮಾತನಾಡಿ, ವಿಕಲಚೇತನರಲ್ಲ ಇವರು ವಿಶೇಷಚೇತನರು. ಇವರಿಗೆ ಅನುಕಂಪ ಬೇಕಾಗಿಲ್ಲ, ಬದುಕುವ ಹಕ್ಕು ನೀಡಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಈ ಮೂರೂ ವಿಶೇಷಚೇತನರನ್ನು ವೇದಿಕೆಗೆ ಆಹ್ವಾನಿಸಿರುವುದು ಈ ಕಾರ್ಯಕ್ರಮದ ಗೌರವವನ್ನು ಹೆಚ್ಚಿಸಿದೆ ಎಂದರು.

ವೈಫಲ್ಯತೆ ದೇಹಕ್ಕೆ ಬರಬಹುದು, ಮನಸ್ಸಿಗಲ್ಲ. ದೇಹಕ್ಕೆ ಮಿತಿ ಇರಬಹುದು, ಕನಸಿಗಲ್ಲ. ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಕಾವ್ಯ, ಗೌರಮ್ಮ, ಜ್ಯೋತಿ. ಮನಸ್ಸು ಮಾಡಿದರೆ ಸಾಧನೆಗೆ ಯಾವುದ್ದೇ ಅಡ್ಡಿ ಇಲ್ಲ ಎಂಬುದಕ್ಕೆ ಈ ಮೂವರು ಉತ್ತಮ ಉದಾಹರಣೆ. ನೀವೆಲ್ಲಾ ಉದಾತ್ತ ಕನಸುಗಳನ್ನು ಕಾಣಬೇಕು. ಅದನ್ನು ಸಾಧಿಸುವಲ್ಲಿ ಪ್ರಯತ್ನಿಸಬೇಕು. ಕಣ್ಣಿದ್ದರೂ ಕಣ್ಣೆತ್ತಿ ನೋಡದವರು ನಿಜವಾದ ಕುರುಡರು. ಸಾಧನೆ ಮಾಡದೇ ಇರುವುದು ನಿಜವಾದ ಅಂಗವಿಕಲ್ಯ ಎಂದರು.

ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು ಮಾತನಾಡಿ, ವಿಕಲಚೇತನರ ಬಗ್ಗೆ ಅಪಾರ ಪ್ರೀತಿ ಮತ್ತು ಕಾಳಜಿ ಹೊಂದಿದ್ದ ವಿಶ್ವ ಆರೋಗ್ಯ ಸಂಸ್ಥೆ 1992 ರಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಮಾಡಲು ನಿರ್ಧರಿಸಿತು. ವಿಕಲಚೇತನ ಮಹಿಳೆಯರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದಿದ್ದಾರೆ.

ಈ ಸಾಧನೆ ಮಾಡಲು ಮಾನಸಿಕವಾಗಿ ಹಾಗೂ ದೈಹಿಕವಾಗಿ ಶಕ್ತಿ ಕೊಟ್ಟಿರುವ ನಿಮ್ಮ ಪೋಷಕರು, ಶಿಕ್ಷಕರು ಹಾಗೂ ಶ್ರಮಿಸಿದ ನಿಮಗೆ ಯಶಸ್ಸಿನ ಗೌರವ ಸಲ್ಲಬೇಕು ಎಂದ ಅವರು ಇವರನ್ನು ಲಾಲನೆ ಪಾಲನೆ ಮಾಡುವ ತಾಯಂದಿರಿಗೆ ಗೌರವಧವನ್ನು ಹೆಚ್ಚಿಸಬೇಕು. ಈ ಬಗ್ಗೆ ಸರ್ಕಾರಕ್ಕೆ ಮನವಿಯನ್ನು ಮಾಡುತ್ತೇವೆ ಎಂದರು.

S.N. Channabasappa ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ತಾಜುದ್ದೀನ್‌ಖಾನ್, ಡಿಸಿ ಕಚೇರಿ ತಹಸೀಲ್ದಾರ್ ಪ್ರದೀಪ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಯ ಇಲಾಖೆಯ ಉಪ ನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುವರ್ಣ ವಿ. ನಾಯ್ಕ್, ಅಂತರಾಷ್ಟ್ರೀಯ ಮಹಿಳಾ ದೃಷ್ಟಿವಿಕಲಚೇತನ ವಿಶ್ವಕಪ್ ಕ್ರೀಡಾಪಟು ಕಾವ್ಯ, ಅಂತರಾಷ್ಟ್ರೀಯ ಪಂಜುಕುಸ್ತಿ ಕ್ರೀಡಾಪಟು ಗೌರಮ್ಮ, ಅಂತರಾಷ್ಟ್ರೀಯ ಥ್ರೋಬಾಲ್ ಕ್ರೀಡಾಪಟು ಜ್ಯೋತಿ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.