Monday, August 10, 2026
Monday, August 10, 2026
Home Blog Page 199

District Legal Services Authority ಜೀತಪದ್ಧತಿಯಂತಹ ಅನಿಷ್ಠ ಪದ್ಧತಿ ಅಸ್ತಿತ್ವ, ಅತ್ಯಂತ ನೋವಿನ ಸಂಗತಿ- ನ್ಯಾ. ಜಿ.ಎ.ಮಂಜುನಾಥ್

0

District Legal Services Authority ಸ್ವಾತಂತ್ರ್ಯಾ ನಂತರ 7-8 ದಶಕಗಳು ಉರುಳಿದರೂ ದೇಶದಲ್ಲಿ ಜೀತಪದ್ದತಿಯಂತಹ ಅನಿಷ್ಠ ಅಸ್ತಿತ್ವದಲ್ಲಿರುವುದು ಅತ್ಯಂತ ನೋವಿನ ಸಂಗತಿ ಮಾತ್ರವಲ್ಲ ನಾಗರೀಕ ಸಮಾಜ ತಲೆತಗ್ಗಿಸುವಂತದ್ದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ಜಿ.ಎ. ಅವರು ಹೇಳಿದರು.
ಅವರು ಶಿವಮೊಗ್ಗ ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮುಕ್ತಿ ಅಲಯನ್ಸ್‌ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜೀತಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ದೇಶದ ಬೆಳವಣಿಗೆಗೆ ಕಳಂಕ ಮತ್ತು ಮಾರಕವಾಗಿದ್ದ ಈ ಪಿಡುಗನ್ನು ನಿರ್ಮೂಲನೆಗೊಳಿಸಲು 1976ರಲ್ಲಿಯೇ ಸರ್ಕಾರ ಕಾಯ್ದೆಯನ್ನು ಅನುಷ್ಟಾನಗೊಳಿಸಿದೆ. ಆದಾಗ್ಯೂ ಈ ಅನಿಷ್ಟ ನಾಗರೀಕ ಸಮಾಜದಲ್ಲಿಯೇ ಅಸ್ತಿತ್ವದಲ್ಲಿರುವುದು ದುರಂತ ಎಂದವರು ನುಡಿದರು.
ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಬೀದರ್‌ನಂತಹ ಜಿಲ್ಲಾ ಕೇಂದ್ರಗಳಲ್ಲಿಯೇ ಈ ಜೀತಪದ್ದತಿ ಇನ್ನೂ ಜೀವಂತವಾಗಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದಂತೆ 8800ಕ್ಕೂ ಹೆಚ್ಚಿನ ಪ್ರಕರಣಗಳು ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆಗಾಗಿ ಬಾಕಿ ಇವೆ ಎಂದರು.
District Legal Services Authority ವ್ಯಕ್ತಿಯ ಕನಿಷ್ಟ ಆಲೋಚನೆ ಮತ್ತು ಮಾನಸಿಕ ಗುಲಾಮತನ ಜೀತಪದ್ದತಿಯ ಜೀವಂತವಾಗಿರುವುದಕ್ಕೆ ಕಾರಣವಾಗಿದೆ.ಮಾಡಿದ ಕೆಲಸಕ್ಕೆ ಸರಿಯಾದ ಕೂಲಿ ಕೊಡದೆ, ಶ್ರಮಕ್ಕೆ ತಕ್ಕ ಬೆಲೆ ಕೊಡದೆ ಅತ್ಯಂತ ಕನಿಷ್ಟವಾಗಿ ದುಡಿಸಿಕೊಳ್ಳುವ ಕೆಟ್ಟ ಪದ್ದತಿ ಇದಾಗಿದೆ. ಪೋಷಕರ ಬಡತನ, ಅನಕ್ಷರತೆ ಮತ್ತು ಉಳ್ಳವರೊಂದಿಗೆ ಮಾಡಿಕೊಂಡ ಸಾಲ ಜೀತಪದ್ದತಿಯ ಉಳಿವಿಗೆ ಕಾರಣವಾಗಿದೆ ಎಂದ ಅವರು, ಇದರ ನಿರ್ಮೂಲನೆಗೆ ಜವಾ‍ಬ್ದಾರಿಯುತ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ಸಂತೋಷ್‌ ಎಂ.ಎಸ್., ಅವರು ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಕಳೆದ ಒಂದು ದಶಕದಿಂದೀಚೆಗೆ ಜೀತಪದ್ದತಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿಲ್ಲದಿರುವುದು ಅಥವಾ ಕಂಡುಬಾರದಿರುವುದು ಸಮಾಧಾನದ ಸಂಗತಿಯಾಗಿದೆ. ಜೀತಪದ್ದತಿ ಕಾನೂನು ದೇಶದಲ್ಲಿ ಜಾರಿಗೆ ಬಂದು ಸರಿಯಾಗಿ 50ವರ್ಷಗಳೇ ಸಂದಿವೆ. ಇಂತಹ ಸಂದರ್ಭದಲ್ಲಿ ಕಳೆದ ವರ್ಷವೊಂದರಲ್ಲಿ 148ಜೀತಕುಟುಂಬಗಳನ್ನು ಗುರುತಿಸಿ, ಅವರಿಗೆ ಪುನರ್‌ ವಸತಿ ಕಲ್ಪಿಸಿ, ಸಮಾಜದ ಮುಖ್ಯವಾಹಿನಿಗೆ ಕರೆತರಲಾಗಿದೆ ಎಂದರು.
ಕಲ್ಲುಕ್ವಾರಿ ಮತ್ತು ಇಟ್ಟಿಗೆ ಗುಮ್ಮಿಗಳಲ್ಲಿ ಜೀತಪದ್ದತಿಯಡಿ ಜೀವನ ನಿರ್ವಹಿಸುತ್ತಿರುವ ಅನೇಕ ಪ್ರಕರಣಗಳನ್ನು ಗುರುತಿಸಲಾಗಿದೆ. ಅದಕ್ಕಾಗಿ ಸ್ಥಳೀಯವಾಗಿರುವ 13 ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಸಮಸ್ಯೆ ಸಕಾಲಿಕ ಪರಿಹಾರ ನೆರವು ಒದಗಿಸಲು ಹಾಗೂ ತಕ್ಷಣದ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್‌ ಅಧಿಕಾರಿ ರಮೇಶಕುಮಾರ್‌ ತಿಳಿಸಿದರು.
ಮನೆಮನೆ ಭೇಟಿ ಕಾರ್ಯಕ್ರಮದ ವ್ಯವಸ್ಥಿತ ಅನುಷ್ಟಾನದಿಂದಾಗಿ ಪೊಲೀಸ್‌ ಜನಸ್ನೇಹಿಯಾಗಿ ಗುರುತಿಸಿಕೊಳ್ಳುತ್ತಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ಕೇಳಿಬರುತ್ತಿದೆ. ಇದರಿಂದ ಸಿಬ್ಬಂಧಿಗಳ ಕಾರ್ಯದಲ್ಲಿ ಸಹಜವಾಗಿ ಉತ್ಸಾಹ ಕಂಡುಬರುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್‌ ವಿ., ಹೆಚ್ಚುವರಿ ರಕ್ಷಣಾಧಿಕಾರಿ ರಮೇಶ್‌ಕುಮಾರ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರಸ್ವಾಮಿ, ಮುಕ್ತಿ ಅಲಯನ್ಸ್‌ನ ಸದಸ್ಯ ಎಸ್.ಹೆಚ್.ಚೌಡಪ್ಪ, ಸಂಯೋಜಕ ರಾಜೇಂದ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ, ಬಾಲಕಾರ್ಮಿಕ ಯೋಜನಾಧಿಕಾರಿ ರಘು, ಶ್ರೀಮತಿ ಸುಖಿತಾ ಮತ್ತಿತರರು ಉಪಸ್ಥಿತರಿದ್ದರು.

ಮಾಚೇನಹಳ್ಳಿಯಿಂದ ವ್ಯಕ್ತಿ ನಾಪತ್ತೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟಣೆ

0

ಶಿವಮೊಗ್ಗ ತಾಲೂಕು ಮಾಚೇನಹಳ್ಳಿ ಡೈರಿ ಹತ್ತಿರುವಿರುವ ಶ್ರೀ ಮಹಾಲಕ್ಷ್ಮೀ ಬಾರ್ & ರೆಸ್ಟೋರೆಂಟ್‌ನಲ್ಲಿ ಕ್ಯಾಶಿಯರ್ ಆಗಿದ್ದ ಲಕ್ಷ್ಮೀಶ್ ಎಂಬ 30 ವರ್ಷದ ವ್ಯಕ್ತಿ ಫೆ. 05 ರಂದು ಕಾಣೆಯಾಗಿದ್ದು, ಈತನ ಚಹರೆ 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕುತ್ತಿಗೆಯಲ್ಲಿ L ಮತ್ತು ಬಲಗೈಯಲ್ಲಿ ಹಾರ್ಟ್ ಗುರುತಿನ ಟ್ಯಾಟು ಇರುತ್ತದೆ. ಈತ ಕಾಣೆಯಾದ ದಿನ ಬಾದಮಿ ಮತ್ತು ಬಿಳಿ ಬಣ್ಣದ ಶರ್ಟ್, ನೀಲಿಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಜರ್ಕಿನ್ ಧರಿಸಿರುತ್ತಾನೆ
ಈ ವ್ಯಕ್ತಿ ಕಂಡು ಬಂದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ – 08182-261400/261418/ 9480803332/ 9480803350 ಗಳನ್ನು ಮತ್ತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Mahashivratri ಮಹಾ ಶಿವರಾತ್ರಿ ಪ್ರಯುಕ್ತ ಶಿವಮೊಗ್ಗದ ಶಿವಾಲಯದಲ್ಲಿ”ಕಾಶಿ ವಿಶ್ವನಾಥ ದರ್ಶನ”

0

Mahashivratri ಮಹಾಶಿವರಾತ್ರಿ ಪ್ರಯುಕ್ತ ನಗರದ ಸವಳಂಗ ರಸ್ತೆಯಲ್ಲಿರುವ ನೇಮೋಜಿರಾವ್ ಬಡಾವಣೆಯ ಶಿವಾಲಯದಲ್ಲಿ ಫೆಬ್ರವರಿ 15ರಂದು ಸಂಜೆ 5ರಿಂದ ರಾತ್ರಿ 10ರವರೆಗೆ ಕಾಶಿ ವಿಶ್ವನಾಥ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಕಾರ್ಯಕ್ರಮ ಆಯೋಜಿಸಿದ್ದು, ಪ್ರದಕ್ಷಿಣೆ ಲಿಂಗು ದರ್ಶನ, ಸಹಸ್ರಲಿಂಗ ದರ್ಶನ, ಸ್ವಪರಿವರ್ತನೆ ಮಂಟಪ, ಆಧ್ಯಾತ್ಮ ಚಿತ್ರ ಪ್ರದರ್ಶನದಿಂದ ಮೌಲ್ಯ ಜಾಗೃತಿ, ಕಮಲೋದ್ಭವ ಲಿಂಗು ದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದೆ.
ಸಂಜೆ 6ರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾಜಯೋಗ ಶಿಕ್ಷಕಿ ಬ್ರಹ್ಮಕುಮಾರಿ ಸ್ವಾತಿ ಮಹಾಶಿವರಾತ್ರಿ ಸಂದೇಶ ನೀಡುವರು.
Mahashivratri ಸಂಜೆ 7ರಿಂದ ಗೌರವಾರ್ಪಣಾ ಮಹೋತ್ಸವ ನಡೆಯಲಿದ್ದು, ರಾತ್ರಿ 8ರಿಂದ ಸಾಂಸ್ಕೃತಿಕ ಮಹೋತ್ಸವ ನಡೆಯಲಿದೆ. ಶ್ರೀ ಗೌರಿ ಕಲಾಕೇಂದ್ರದ ತಂಡದಿAದ ಶಿವನ ನೃತ್ಯ ಕಾರ್ಯಕ್ರಮ ಇರಲಿದೆ. ಅಂಚೆ ಇಲಾಖೆಯ ಪೋಸ್ಟ್ ಮ್ಯಾನ್ ಮತ್ತು ಎಂಟಿಎಸ್ ವರ್ಗದವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೊರಬ ತಾ.ಉದ್ರಿವಡ್ಡಿಗೇರಿ ಯಿಂದ ಯುವತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಮಾಹಿತಿ

0

ಸೊರಬ ತಾಲೂಕು ಉದ್ರಿ ವಡ್ಡಿಗೇರಿ ವಾಸಿ ಹನುಮಂತರಪ್ಪ ಎಂಬುವವರ ಮಗಳು 17 ವರ್ಷದ ಶಶಿಕಲಾ ಎಂಬ ಯುವತಿ ಫೆ 01 ರಂದು ಗೇಟ್ ಹತ್ತಿರ ಹೋಗಿ ಬರುತ್ತೇನೆಂದು ಹೋದವಳು ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ 4.8 ಅಡಿ ಎತ್ತರ, ದುಂಡುಮುಖ, ಕಪ್ಪು ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ.
ಈ ಯುವತಿಯು ಕಂಡು ಬಂದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ – 08182-261400 ಸಾಗರ ಗ್ರಾಮಾಂತರ ಠಾಣೆ. ಎ.ಎಸ್.ಪಿ. ಸಾಗರ ಉಪವಿಭಾಗ -08183-226082, ಪಿ.ಐ ಸಾಗರ ಗ್ರಾಮಾಂತರ ಠಾಣೆ- 9480803361, ಪಿ.ಎಸ್.ಐ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ- 9480803385 ಇವರುಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Information and Public Relations Department ಶಿವಮೊಗ್ಗ ಜಿಲ್ಲೆ ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್. ಅರ್ಹರಿಂದ ಅರ್ಜಿಗಳ ಆಹ್ವಾನ

0

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.

ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪಅವರು ನೇತೃತ್ವದಲ್ಲಿ ಪರಿಶೀಲನೆ

0

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖರಾಬು ಕಟ್ಟೆ, ಕೆರೆ ಹಾಗೂ ಸರ್ಕಾರಿ ಜಮೀನುಗಳಲ್ಲಿನ 6 ಘೋಷಿತ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದಂತೆ, ದಿನಾಂಕ ಮಾನ್ಯ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಿಧಾನಸಭೆಯ ನಿಯಮ 73ರ ಅಡಿಯಲ್ಲಿ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿ, ಮಾನ್ಯ ಸಭಾಧ್ಯಕ್ಷರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದರು.

ಈ ಚರ್ಚೆಯ ಮುಂದುವರಿದ ಕ್ರಮವಾಗಿ, ಸದರಿ ಕೊಳಚೆ ಪ್ರದೇಶಗಳ ವಸ್ತುಸ್ಥಿತಿಯನ್ನು ನೇರವಾಗಿ ಅರಿಯಲು ಹಾಗೂ ಮುಂದಿನ ಅಗತ್ಯ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ, ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ಶ್ರೀಮತಿ ಜಯ ಅವರ ತಂಡವು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿ ಜಂಟಿ ಸ್ಥಳ ಪರಿಶೀಲನೆ ನಡೆಸಿತು.

S.N.Chennabasappa ಕೊಳಚೆ ಪ್ರದೇಶದ ವಸ್ತುಸ್ಥಿತಿ ಬಗ್ಗೆ ಉನ್ನತ ಅಧಿಕಾರಿಗಳಿಂದ ಜಂಟಿ ಸ್ಥಳ ಪರಿಶೀಲನೆ- ಶಾಸಕ ಚೆನ್ನಿ

0

S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಖಾರಾಬು ಕಟ್ಟೆ, ಕೆರೆ ಹಾಗೂ ಸರ್ಕಾರಿ ಜಮೀನುಗಳಲ್ಲಿನ 6 ಘೋಷಿತ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದಂತೆ, ದಿನಾಂಕ 03.02.2026 ರಂದು ವಿಧಾನಸಭೆಯ ನಿಯಮ 73ರ ಅಡಿಯಲ್ಲಿ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿ, ಮಾನ್ಯ ಸಭಾಧ್ಯಕ್ಷರೊಂದಿಗೆ ವಿಸ್ತೃತ ಚರ್ಚೆ ನಡೆಸಲಾಗಿತ್ತು.

ಈ ಚರ್ಚೆಯ ಮುಂದುವರಿದ ಕ್ರಮವಾಗಿ, ಸದರಿ ಕೊಳಚೆ ಪ್ರದೇಶಗಳ ವಸ್ತುಸ್ಥಿತಿಯನ್ನು ನೇರವಾಗಿ ಅರಿಯಲು ಹಾಗೂ ಮುಂದಿನ ಅಗತ್ಯ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ, ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ಶ್ರೀಮತಿ ಜಯ ಅವರ ತಂಡವು ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿ ಜಂಟಿ ಸ್ಥಳ ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಕೊಳಚೆ ಪ್ರದೇಶಗಳ ಭೌತಿಕ ಸ್ಥಿತಿ, ನಿವಾಸಿಗಳ ಸಮಸ್ಯೆಗಳು, ಕಾನೂನು ಹಾಗೂ ತಾಂತ್ರಿಕ ಅಂಶಗಳು, ಜೊತೆಗೆ ಮೂಲಭೂತ ಸೌಕರ್ಯಗಳ ಅಗತ್ಯತೆಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಈ ಜಂಟಿ ಪರಿಶೀಲನೆ ಕೊಳಚೆ ಪ್ರದೇಶಗಳ ನಿವಾಸಿಗಳ ಹಕ್ಕುಗಳ ರಕ್ಷಣೆಯ ಜೊತೆಗೆ, ಶಾಶ್ವತ ಪುನರ್ವಸತಿ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಗರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಂದಿನ ಸ್ಪಷ್ಟ ಮತ್ತು ಪರಿಣಾಮಕಾರಿ ಕ್ರಮಗಳಿಗೆ ದಿಕ್ಕು ನೀಡುವ ಮಹತ್ವದ ಹೆಜ್ಜೆಯಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಸಹಕಾರದೊಂದಿಗೆ ಶೀಘ್ರವೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ.

S.N.Chennabasappa ಈ ಸಂದರ್ಭದಲ್ಲಿ ತಸಿಲ್ದಾರಾದ ಶ್ರೀ ರಾಜೀವ್, ಸ್ಲಂ ಬೋರ್ಡ್ ನ ಅಧಿಕಾರಿಗಳಾದ ಶ್ರೀ ಪ್ರಸನ್ನ, ಶ್ರೀ ಮಂಜಪ್ಪ, ಪಾಲಿಕೆಯ ಕಂದಾಯ ಅಧಿಕಾರಿಗಳಾದ ಶ್ರೀ ಪೂಜಾರ್, ಶ್ರೀ ನಾಗೇಂದ್ರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಬಿಜೆಪಿ ನಗರ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ದೀನ್ ದಯಾಳ್ ಸೇರಿದಂತೆ ಬಿಜೆಪಿಯ ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ಶ್ರದ್ಧೆ ,ನಿಷ್ಠೆ ಮತ್ತು ಪ್ರಾಮಾಣಿಕತೆ ಇರುವ ಕಾಯಕದಿಂದ ಬಡತನವೇ ಇರದು- ಸಿ.ಎಸ್.ಚಂದ್ರಭೂಪಾಲ

0

ಶ್ರದ್ದೆ, ನಿಷ್ಟೆ ಮತ್ತು ಪ್ರಾಮಾಣಿಕತೆಯಿಂದ ಕಾಯಕದಲ್ಲಿ ತೊಡಗಿದಾಗ ಬಡತನವೇ ಇರುವುದಿಲ್ಲ ಎಂದು ಕಾಯಕ ಶರಣರು ತಮ್ಮ ನಡೆ ಮತ್ತು ನುಡಿಯ ಮೂಲಕ ಸಾರಿದ್ದಾರೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಅಸಮಾನತೆ, ತಾರತಮ್ಯ ಮತ್ತು ಕೆಟ್ಟ ಸಂಪ್ರದಾಯಗಳನ್ನು ಹೋಗಲಾಡಿಸಲು ಅವರೆಲ್ಲ ಹೋರಾಡಿದ್ದಾರೆ. ಪ್ರತಿಯೊಬ್ಬರೂ ಕಾಯಕದಲ್ಲಿ ತೊಡಗಬೇಕು. ಆಗ ಸಮಾಜದಲ್ಲಿ ಬಡತನವೆಂಬುದು ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರತಿಯೊಬ್ಬ ಶರಣರು ಸಮಾಜದ ಅಭಿವೃದ್ದಿಗಾಗಿ ಮತ್ತು ಏಳ್ಗೆಯ ದಿಶೆಯಲ್ಲಿ ಶ್ರಮಿಸಿದ್ದು ವಚನಗಳ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ. 12 ನೇ ಶತಮಾನದಿಂದ ನಡೆದು ಬಂದ ಶರಣರ ಕಾಯಕ ಸಂಸ್ಕೃತಿಯನ್ನು ನಾವೆಲ್ಲ ಮುಂದುವರೆಸಿಕೊAಡು ಹೋಗೋಣ ಎಂದರು.
ದಾರ್ಶನಿಕರು, ಶರಣರು ಮತ್ತು ಮಹಾನ್ ವ್ಯಕ್ತಿಗಳ ತತ್ವಗಳು, ವಿಚಾರಗಳು ಮತ್ತು ಜೀವನ ಚರಿತ್ರೆ ತಿಳಿಸುವಂತಹ ಕಾರ್ಯಕ್ರಮಗಳನ್ನು ಶಾಲಾ-ಕಾಲೇಜುಗಳಲ್ಲಿ ನಡೆಸಬೇಕು. ಆಗ ಮಕ್ಕಳು ಮತ್ತು ವಿದ್ಯಾರ್ಥಿಗಳು ಈ ಬಗ್ಗೆ ತಿಳಿದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದರು.
ಶAಕರಘಟ್ಟದ ಸಾಹಿತಿಗಳಾದ ಡಾ.ಬಸವರಾಜ್ ನೆಲ್ಲಿಸರ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಶರಣರು ಆಡಿದ ಮಾತುಗಳು, ನೀಡಿದ ವಚನಗಳು ಜೀವನ್ಮುಖಿಯಾಗಿವೆ. ಸಿನೆಮಾ, ಸೀರಿಯಲ್, ಮೊಬೈಲ್‌U ನೋಡುವುದನ್ನು ಬಿಟ್ಟು ಶರಣರ ವಚನ ಸಾಹಿತ್ಯವನ್ನು ಓದಿ ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಿಜವಾದ ಕಲ್ಯಾಣ ಆಗುತ್ತದೆ.
ಬಸವಣ್ಣನವರು ಸೇರಿದಂತೆ ಎಲ್ಲ ಶರಣರು, ಎಲ್ಲ ಜಾತಿ, ಧರ್ಮಗಳು ಒಂದೇ ಎಂದು ಸಾರಿ ಸಮಾಜದಲ್ಲಿ ತಾಂಡವವಾಡುತ್ತಿದ್ದ ಅನಿಷ್ಟ ಪದ್ದತಿಗಳಿಗೆ ಚಾಟಿ ಬೀಸಿ, ಹೆಣ್ಣಿಗೆ ಗೌರವ ಮತ್ತು ಸಮಾನತೆ ನೀಡಬೇಕು, ಅಸ್ಪೃಶ್ಯತೆ ಹೋಗಬೇಕು ಎಂದು ಹೋರಾಡಿದ್ದರು.
ಕಾಯಕಕ್ಕೆ ಮತ್ತೊಂದು ಹೆಸರಾದ ಶರಣರಾದ ಮಾದಾರ ಚನ್ನಯ್ಯನವರು ಬಸವಣ್ಣನವರಿಗಿಂತ ಹಿರಿಯರಾಗಿದ್ದು ಕುದುರೆ ಕಾಯುವ ಕಾಯಕದಲ್ಲಿ ತೊಡಗಿ, ಬರುವ ಶರಣರಿಗೆ ಅಂಬಲಿ ಪ್ರಸಾದ ನೀಡುತ್ತ ಶಿವನನ್ನೇ ಒಲಿಸಿಕೊಂಡಿದ್ದರು, ಮಾದಾರ ದೂಳಯ್ಯ ತಮ್ಮ ಕಾಯಕದೊಂದಿಗೆ ಹಲವಾರು ವಚನ ರಚಿಸಿದ್ದಾರೆ. ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಮತ್ತು ಉರಿಲಿಂಗ ಪೆದ್ದಿಯವರು ಸಹ ಕಾಯಕ ನಿಷ್ಟೆಗೆ ಹೆಸರಾಗಿದ್ದು, ಸಮಾಜದಲ್ಲಿನ ಅನಿಷ್ಟ ಪದ್ದತಿ ನಿವಾರಣೆಗೆ ತಮ್ಮ ಕೊಡುಗೆ ನೀಡಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಾಡು, ನೃತ್ಯ, ಮತ್ತು ಉಪನ್ಯಾಸಗಳ ಮೂಲಕ ಕಾಯಕ ಶರಣರ, ದಾರ್ಶನಿಕರ ಬಗ್ಗೆ ತಿಳಿಸಿ ಹೇಳುವ ಕೆಲಸ ಆಗಬೇಕು. ಆಗ ಮಾತ್ರ ಮುಂದಿನ ಪೀಳಿಗೆಗೆ ಶರಣರ ವಚನಗಳು, ತತ್ವಗಳನ್ನು ತಲುಪಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾಡಳಿತ ಕಚೇರಿಯ ತಹಶೀಲ್ದಾರ್ ಪ್ರದೀಪ್ ಆರ್ ಮಾತನಾಡಿ, ವಚನಕಾರರು ಯಾವುದೇ ಒಂದು ಸಮುದಾಯಕ್ಕೆ ಸೇರಿದವರಲ್ಲ. ಜಾತಿ ಮತ್ತು ಧರ್ಮಗಳನ್ನು ಮೀರಿದವರು. 12ನೇ ಶತಮಾನದ ವಚನ ಸಾಹಿತ್ಯ ಸಮುದ್ರವಿದ್ದಂತೆ. ಪರ್ವತದಷ್ಟು ಎತ್ತರವಾದ ವಿಚಾರಗಳಿವೆ. ದಾರ್ಶನಿಕರ ಆಶಯಗಳು, ತತ್ವಗಳು, ವಿಚಾರಗಳು ಮುಂದಿನ ಪೀಳಿಗೆಗೆ ತಲುಪಬೇಕು. ಈ ನಿಟ್ಟಿನಲ್ಲಿ ನಾವೆಲ್ಲ ಶ್ರಮಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಹಾಜರಿದ್ದರು.

CM Siddharamaiah ನರೇಂದ್ರ ಮೋದಿ ಅವರು ಸಂಪೂರ್ಣ ಅಮೆರಿಕಕ್ಕೆ ಶರಣಾಗಿದ್ದಾರೆ- ಸಿದ್ಧರಾಮಯ್ಯ

0

CM Siddharamaiah ಭಾರತ & ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ ಆಗಲಿರುವುದು ಖಂಡಿತ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ.

ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು 25%ರಿಂದ 18%ಕ್ಕೆ ಇಳಿಸಿ ಭಾರತಕ್ಕೆ ಮಹದುಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಭಾರತ ಸೊನ್ನೆಗಿಳಿಸಿದೆ. ಮೇಲ್ನೋಟದಲ್ಲಿಯೇ ಈ ತಾರತಮ್ಯದಿಂದ ಆಗಿರುವ ಅನ್ಯಾಯ ಸ್ಪಷ್ಟವಾಗಿ ಕಾಣುತ್ತಿದ್ದರೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಸ್ವಾಗತಿಸಿರುವುದು ಭಾರತದ 149 ಕೋಟಿ ಜನರಿಗೆ ಮಾಡುತ್ತಿರುವ ಮಹಾದ್ರೋಹವಾಗಿದೆ ಎಂದು ಸೀಎಂ ಸಿದ್ಧರಾಮಯ್ಯನವರು x ಖಾತೆಯಲ್ಲಿ ದೀರ್ಘವಾಗಿ ಲೇಖನ ಬರೆದಿದ್ದಾರೆ.

ಸದ್ಯ ಭಾರತ ಶೇಕಡಾ 40ರಷ್ಟು ತೈಲವನ್ನು ರಷ್ಯಾದಿಂದ ಖರೀದಿಸುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತಲೆಬಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ತೈಲ ಖರೀದಿಯನ್ನು ಕೈಬಿಟ್ಟು ಅಮೆರಿಕ ಮತ್ತು ವೆನಿಜುವೆಲಾ ದೇಶಗಳಿಂದ ತೈಲ ಖರೀದಿಸಲು ಒಪ್ಪಿಕೊಂಡಿರುವುದು ಈ ಒಪ್ಪಂದದ ಮುಖ್ಯಾಂಶವಾಗಿದೆ. ಇದು ಭಾರತದ ಸಂಪೂರ್ಣ ಶರಣಾಗತಿಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದ್ದು ಅದರ ಪರಿಣಾಮವಾಗಿ ಉಳಿದ ಅಗತ್ಯವಸ್ತುಗಳು ಕೂಡಾ ದುಬಾರಿಯಾಗಲಿದೆ.

ಈ ಒಪ್ಪಂದದಿಂದ ಆಗಲಿರುವ ಸಣ್ಣಪುಟ್ಟ ಲಾಭಗಳನ್ನು ದೊಡ್ಡ ಸಾಧನೆ ಎಂದು ಬಿಂಬಿಸುತ್ತಿರುವ ಕೇಂದ್ರ ಸರ್ಕಾರ ಭಾರತೀಯರಿಗೆ, ಮುಖ್ಯವಾಗಿ ದೇಶದ ರೈತ ಸಮುದಾಯಕ್ಕೆ ಆಗುತ್ತಿರುವ ನಷ್ಟವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡುತ್ತಿದೆ. ಈ ಒಪ್ಪಂದವನ್ನು ಅಮೆರಿಕದ ರೈತ ಸಮುದಾಯ ಒಕ್ಕೊರಲಿನಿಂದ ಸ್ವಾಗತಿಸಿ ಕುಣಿದಾಡುತ್ತಿರುವುದೇ ಈ ಒಪ್ಪಂದ ಭಾರತದ ರೈತರ ಪಾಲಿನ ಮರಣಶಾಸನವಾಗಲಿದೆ ಎಂಬುದಕ್ಕೆ ಸೂಚನೆಯಾಗಿದೆ.

ಭಾರತಕ್ಕೆ ಹೋಲಿಸಿದರೆ ಅತೀ ಹೆಚ್ಚಿನ ಪ್ರಮಾಣದ ಸಬ್ಸಿಡಿ ಪಡೆಯುತ್ತಿರುವ ಅಮೆರಿಕದ ರೈತರು ಭಾರತದ ಕೃಷಿ ಉತ್ಪನ್ನಗಳಿಗಿಂತ ಕಡಿಮೆ ಬೆಲೆಗೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಿದೆ. ಈ ಅಪಾಯವನ್ನು ತಪ್ಪಿಸಲಿಕ್ಕಾಗಿಯೇ ಇಲ್ಲಿಯವರೆಗಿನ ಎಲ್ಲ ಸರ್ಕಾರಗಳು ಅಮೆರಿಕದಿಂದ ಆಮದಾಗುತ್ತಿರುವ ಕೃಷಿ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದ ಸುಂಕ ಹೇರುತ್ತಾ ಬಂದಿವೆ. ಈಗ ಈ ಆಮದು ಸುಂಕವನ್ನು ರದ್ದುಗೊಳಿಸದರೆ ದೇಶದ ಮಾರುಕಟ್ಟೆಗಳಲ್ಲಿ ಅಮೆರಿಕದ ಅಗ್ಗದ ದರದ ಆಹಾರಧಾನ್ಯ, ಹಣ್ಣು, ತರಕಾರಿ ಮತ್ತು ಡೇರಿ ಉತ್ಪನ್ನಗಳು ಲಗ್ಗೆ ಇಡಲಿದೆ.. ಇದರಿಂದ ಭಾರತದ ರೈತರು ದಿವಾಳಿ ಸ್ಥಿತಿ ತಲುಪಲಿದ್ದು, ಅವರಿಗೆ ಆತ್ಮಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲದ ಸ್ಥಿತಿ ನಿರ್ಮಾಣವಾಗಬಹುದು.

ಸಂಪೂರ್ಣವಾಗಿ ಶರಣಾಗತಿಯಾಗಿರುವ ಈ ಒಪ್ಪಂದಕ್ಕೆ ಭಾರತೀಯರ ಹಿತರಕ್ಷಣೆಯ ಉದ್ದೇಶ ಖಂಡಿತ ಇಲ್ಲ. ಅಮೆರಿಕದ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ಎದುರಿಸುತ್ತಿರುವ ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪ್ಸ್ಟೀನ್ ಫೈಲ್ಸ್ ನಲ್ಲಿ ಕಾಣಿಸಿಕೊಂಡಿರುವ ಪ್ರಧಾನಿ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಲು ಸಾಧ್ಯವೇ?

ಜಾಗತಿಕವಾಗಿ ಭಾರತ ಹಿಂದೆಂದೂ ಇಷ್ಟೊಂದು ದುರ್ಬಲವಾಗಿರಲಿಲ್ಲ. ರಾಜತಾಂತ್ರಿಕವಾಗಿಯ ಎದುರಾಗುವ ಒತ್ತಡಗಳನ್ನು ಇಲ್ಲಿಯ ವರೆಗಿನ ಎಲ್ಲ ಪ್ರಧಾನಿಗಳು ಸಮರ್ಥವಾಗಿ ಎದುರಿಸಿ ಭಾರತದ ಸಾರ್ವಭೌಮತೆ ಮತ್ತು ಗೌರವವನ್ನು ಕಾಪಾಡಿಕೊಂಡು ಬಂದಿದ್ದಾರೆ. ದೇಶದ ಮೊದಲ ಪ್ರಧಾನಿ ಪಂಡಿತ ಜವಾಹರಲಾಲ ನೆಹರೂ ಅವರ ಅಲಿಪ್ತ ನೀತಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿತ್ತು. ಪ್ರಧಾನಿ ಇಂದಿರಾಗಾಂಧಿಯವರು ದೈತ್ಯ ಅಮೆರಿಕದ ಒತ್ತಡವನ್ನು ಕೂಡಾ ಲೆಕ್ಕಿಸದೆ ಪಾಕಿಸ್ಥಾನವನ್ನು ಮಣಿಸಿದ್ದು ಈಗ ಇತಿಹಾಸವಾಗಿದೆ. ಜಾಗತಿಕವಾಗಿ ಎಲ್ಲ ದೇಶಗಳು ಆರ್ಥಿಕ ಹಿಂಜರಿತದಿಂದ ತತ್ತರಿಸುತ್ತಿದ್ದಾಗ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಿದ್ದ ಡಾ.ಮನಮೋಹನ್ ಸಿಂಗ್ ಅವರು ಹೊಸ ಆರ್ಥಿಕ ಯುಗದ ಪ್ರವರ್ತಕರಾಗಿದ್ದರು.

CM Siddharamaiah ಆದರೆ ಇಂದು ವಿಶ್ವದಲ್ಲಿ ಭಾರತಕ್ಕೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚಾಗಿದೆ. ವಿದೇಶಾಂಗ ನೀತಿ ಎಂದರೆ ಭಾಷಣ, ಘೋಷಣೆ, ಕೈಕುಲುಕಾಟ ಮತ್ತು ಸ್ವಪ್ರಚಾರವಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿದುಕೊಂಡಂತಿದೆ. ಚೀನಾ ಮತ್ತು ಅಮೆರಿಕದಂತಹ ದೈತ್ಯ ಶಕ್ತಿಗಳ ನಡುವೆ ಸಿಕ್ಕಿಹಾಕಿಕೊಂಡಿರುವ ಭಾರತ ತನ್ನ ಅಸ್ಮಿತೆಯನ್ನು ಸಂಪೂರ್ಣ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ತಲೆಮೇಲೆ ಕೂರಿಸಿ ಮೆರೆದಾಡಿದ್ದ ಮೋದಿ ಅವರು ಈಗ ಅದೇ ಟ್ರಂಪ್ ರ ಆಜ್ಞಾಪಾಲಕರಾಗುವ ದೈನೇಸಿ ಸ‍್ಥಿತಿಗೆ ಬಂದಿದ್ದು ವಿಷಾದನೀಯ. ಮೋದಿಯವರ 56 ಇಂಚಿನ ಎದೆ ಮತ್ತು ವಿಶ್ವಗುರುವಿನ ಕಿರೀಟವನ್ನು ಟ್ರಂಪ್ ಪ್ರತಿದಿನ ಕುಟ್ಟಿ ಪುಡಿ ಮಾಡುತ್ತಿದ್ದಾರೆ.

ವಿದೇಶಾಂಗ ನೀತಿಯಿಂದ ಹಿಡಿದು ಆರ್ಥಿಕ ಮತ್ತು ಸಾಮಾಜಿಕ ನೀತಿಯ ವರೆಗೂ ಎಲ್ಲ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿರುವ ಪ್ರಧಾನಿ ಮೋದಿಯವರು ರಾಜೀನಾಮೆ ಕೊಟ್ಟು ದೇಶದ ಮತ್ತು ಅಳಿದುಳಿದ ಅವರ ಗೌರವವನ್ನು ಉಳಿಸಿಕೊಳ್ಳುವುದು ಒಳ್ಳೆಯದು ಎಂದು ಮುಖ್ಯಮಂತ್ರಿಗಳು ತಮ್ಮ ಅನಿಸಿಕೆಯನ್ನು
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

B.Y.Raghavendra ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಸಂಸದ ರಾಘವೇಂದ್ರ

0

B.Y.Raghavendra ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಂಸ್ಥಾನ, ಶ್ರೀ ಮಹರ್ಷಿ ಗುರುಪೀಠ, ರಾಜನಹಳ್ಳಿ, ಹರಿಹರದಲ್ಲಿ ಶ್ರೀ ಮಠದ 28ನೇ ವಾರ್ಷಿಕೋತ್ಸವ, ಲಿಂಗೈಕ ಜಗದ್ಗುರು ಶ್ರೀ ಪುಣ್ಯಾನಂದ ಪುರಿ ಮಹಾಸ್ವಾಮೀಜಿ ಯವರ 19ನೇ ವರ್ಷದ ಪುಣ್ಯಾರಾಧನೆ ಹಾಗೂ ಪರಮಪೂಜ್ಯ ಜಗದ್ಗುರು ಶ್ರೀ ಡಾ. ವಾಲ್ಮೀಕಿ ಪ್ರಸನ್ನನಂದ ಮಹಾಸ್ವಾಮೀಜಿಯವರ 18ನೇ ವರ್ಷದ ಪಟ್ಟಾಧಿಕಾರ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಆಯೋಜಿಸಲಾದ ವೈದ್ಯಕೀಯ ಗೋಷ್ಠಿಯಲ್ಲಿ ಪ್ರಮುಖ ವೈದ್ಯರುಗಳು ಭಾಗವಹಿಸಿ ಭಕ್ತರಿಗೆ ಆರೋಗ್ಯ ಸೇವೆ ಹಾಗೂ ಮಾರ್ಗದರ್ಶನ ನೀಡಿದರು.

B.Y.Raghavendra ಧರ್ಮ, ಸಂಸ್ಕೃತಿ ಮತ್ತು ಸಮಾಜಸೇವೆಯ ಸಮನ್ವಯಗೊಂಡ ಈ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.