Monday, August 10, 2026
Monday, August 10, 2026
Home Blog Page 200

Madhu Bangarappa ಕ್ರಿಕೆಟ್ ಕೇವಲ ಆಟವಲ್ಲ.ಅದು ಸಾಧನೆಯ ಹಾದಿಯಾಗಿದೆ- ಮಧು ಬಂಗಾರಪ್ಪ

0

Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಗುಡ್ಡೆಮನೆ ಗ್ರಾಮದ ನಾಳಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ‘ಬಂಗಾರಪ್ಪ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ. ಮಧು ಬಂಗಾರಪ್ಪ ಪಾಲ್ಗೊಂಡಿದ್ದರು.

ಕ್ರಿಕೆಟ್ ಕೇವಲ ಒಂದು ಆಟವಲ್ಲ ಅದು ಸಾಧನೆಯ ಹಾದಿಯಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ರಾಜ್ಯಮಟ್ಟದ ಪಂದ್ಯಾವಳಿಗಳು ನಡೆಯುವುದರಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳು ದೊರಕುತ್ತವೆ. ಸತತ 4 ದಿನಗಳ ಕಾಲ ಶಿಸ್ತುಬದ್ಧವಾಗಿ ಈ ಟೂರ್ನಿಯನ್ನು ಆಯೋಜಿಸಿದ ಯುವಕರ ತಂಡಕ್ಕೆ ಮತ್ತು ಭಾಗವಹಿಸಿದ ಎಲ್ಲಾ ಆಟಗಾರರಿಗೆ ಅಭಿನಂದನೆಗಳನ್ನು ಮಧು ಬಂಗಾರಪ್ಪ ತಿಳಿಸಿದರು

Madhu Bangarappa ಬಳಿಕ ಪ್ರಥಮ ಬಹುಮಾನವಾಗಿ 2 ಲಕ್ಷ ರೂಪಾಯಿಗಳ ನಗದು, ದ್ವಿತೀಯ ಬಹುಮಾನವಾಗಿ 1 ಲಕ್ಷ ರೂಪಾಯಿಗಳ ನಗದು ಬಹುಮಾನದ ಚೆಕ್ ಗಳನ್ನು ವಿಜೇತ ತಂಡಗಳಿಗೆ ನೀಡುವ ಮೂಲಕ ಬಂಗಾರಪ್ಪ ಟ್ರೋಫಿ ಗೆದ್ದ ಸಾಧಕರಿಗೆ ಸಚಿವರು ಶುಭ ಹಾರೈಸಿದರು

ಸರ್ಕಾರದ ಸೂಚನೆಯಂತೆ ಕನ್ನಡ ಭಾಷಾ ನೀತಿ & ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ- ಪ್ರಭುಲಿಂಗ ಕವಳಿಕಟ್ಟಿ

0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಡಳಿತದ ನಿಯಂತ್ರಣದಲ್ಲಿ ಹಾಗೂ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಕನ್ನಡ ಭಾಷಾನೀತಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನ್ನಡ ಅನುಷ್ಟಾನದಲ್ಲಿ ಲೋಪದೋಷಗಳು ಕಂಡುಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಲಾಗುವ ಸಭೆ-ಸಮಾರಂಭಗಳ ತಿಳುವಳಿಕೆಯನ್ನು ಕನ್ನಡದಲ್ಲಿಯೇ ಅಚ್ಚುಹಾಕಿಸಿ ಸಂಬಂಧಿಸಿದವರಿಗೆ ತಲುಪಿಸಲು ಸೂಚಿಸಲಾಗುವುದು ಎಂದ ಅವರು, ಪ್ರತಿ ಕಚೇರಿಯಿಂದ ನಡೆಸಲಾಗುವ ಪತ್ರ ವ್ಯವಹಾರಗಳೂ ಕನ್ನಡದಲ್ಲಿಯೇ ಇರುವಂತೆ ಸೂಚಿಸಲಾಗುವುದು ಎಂದರು.
ಪ್ರತಿ ನಾಮಫಲಕಗಳ ಮೇಲೆ ಆಯಾ ಊರಿನ ಹೆಸರನ್ನು ಬರೆದಿರಬೇಕು. ರಾಜ್ಯದ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಹಾಗೂ ಭಾಷಾನೀತಿಯ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ನೂತನವಾಗಿ ನೇಮಕಗೊಂಡಿರುವ ಜಾಗೃತಿ ಸಮಿತಿ ಸದಸ್ಯರುಗಳ ಸಲಹೆ-ಸಹಕಾರವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಡಾ|| ಎ.ಬಿ.ರಾಮಚಂದ್ರ ಅವರು ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ನಿರ್ವಹಿಸುವ ಪ್ರತಿ ಕಡತಗಳು, ಅಧಿಕಾರಿಗಳು ಬರೆಯುವ ಟಿಪ್ಪಣಿಗಳೂ ಸಹ ಆಂಗ್ಲಭಾಷೆಯಲ್ಲಿರುವುದನ್ನು ಗಮನಿಸಲಾಗಿದೆ. ಈ ಎಲ್ಲಾ ಸಂದರ್ಭಗಳಲ್ಲಿಯೂ ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆ ಕನ್ನಡ ಅನುಷ್ಟಾನಕ್ಕೆ ತೊಡಕಾಗಿದೆ ಎಂದರು.
ಸಾಂಸ್ಕೃತಿಕವಾಗಿ, ಭಾಷಿಕವಾಗಿ ಕನ್ನಡ ಭಾಷೆಯ ಅಸ್ಮಿತತೆಯ ಕೇಂದ್ರ ಬಿಂದು ಶಿವಮೊಗ್ಗ ಜಿಲ್ಲೆ. ಇಲ್ಲಿಂದಲೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿಸುವ ಕಾರ್ಯ ಆರಂಭಗೊಳ್ಳಬೇಕು. ಆದ್ದರಿಂದ ಪ್ರತಿ ತಿಂಗಳಲ್ಲಿ ಒಂದು ದಿನ ಮೂರು ಕಚೇರಿಗಳಿಗೆ, ಶಾಲೆ-ಕಾಲೇಜು ವಿಶ್ವವಿದ್ಯಾಲಯಗಳಿಗೆ ಜಾಗೃತಿ ಸಮಿತಿ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ನಗರದಲ್ಲಿನ ಅಂಗಡಿ-ಮುಂಗಟ್ಟುಗಳ ನಾಮಫಲಕಗಳೂ ಸಹ ಶೇ.60ಕನ್ನಡದಲ್ಲಿರಬೇಕೆಂಬ ನಿಯಮವಿದೆ. ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನೂತನ ಅಂಗಡಿಗಳಿಗೆ ಹಾಗೂ ಅದರ ನವೀಕರಣ ಸಂದರ್ಭದಲ್ಲಿ ಅಂಗಡಿಯ ನಾಮಫಲಕದ ಛಾಯಾಚಿತ್ರವನ್ನು ಅವಲೋಕಿಸಿ ಪರವಾನಿಗೆ ನೀಡಬೇಕು. ಖಾಸಗಿ ಶಾಲೆಗಳಲ್ಲಿಯೂ ಸರ್ಕಾರದ ಕನ್ನಡ ಪಠ್ಯಕ್ರಮಕ್ಕೆ ಬದಲಾಗಿ ಬೇರೆಯದಾದ ಪಠ್ಯಕ್ರಮ ಬೋದಿಸುತ್ತಿರುವುದು, ವಿಶೇಷವಾಗಿ ಕನ್ನಡವನ್ನು ನಿರ್ಲಕ್ಷಿಸಿ, ಇಂಗ್ಲೀಷಿನಲ್ಲಿಯೇ ಬೋದಿಸುತ್ತಿರುವುದನ್ನು ಗಮನಿಸಲಾಗಿದೆ. ಈ ಎಲ್ಲೆಡೆಯಲ್ಲೂ ಕನ್ನಡ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲೇಬೇಕಾದ ಅಗತ್ಯವಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಕನ್ನಡ ಜಾಗೃತ ಸಮಿತಿ ಸದಸ್ಯ ಡಿ.ಮಂಜುನಾಥ್‌ಅವರು ಮಾತನಾಡಿ, ರಾಷ್ಟ್ರೀಯ ಬ್ಯಾಂಕುಗಳ ಚಲನ್‌ಗಳಲ್ಲಿ, ರೈಲ್ವೇ ಟಿಕೇಟ್‌ಗಳಲ್ಲಿ ಕನ್ನಡ ಕಾಣೆಯಾಗಿರುವುದು ಆಘಾತಕಾರಿಯಾಗಿದೆ. ಇಲ್ಲಿ ಕನ್ನಡ ಬಳಕೆಗೆ ಸೂಚನೆ ನೀಡಬೇಕು. ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂಧಿಗಳು ಕನ್ನಡಿಗರಾಗಿರಬೇಕು. ಅಥವಾ ಕನ್ನಡ ಕಲಿತು ಮಾತನಾಡಿ, ಜನರಿಗೆ ಸಕಾಲಿಕವಾಗಿ ಸ್ಪಂದಿಸುವಂತಾಗಬೇಕು. ವಿದ್ಯುತ್‌ನಿಗಮ, ವಿವಿಧ ಕೈಗಾರಿಕೆಗಳಲ್ಲಿ ಮತ್ತು ಅಲ್ಲಿನ ಉತ್ಪನ್ನಗಳ ಮೇಲೆ ಕನ್ನಡ ಬಳಸುವಂತೆ ಸೂಚಿಸಬೇಕು ಎಂದವರು ನುಡಿದರು.
ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವವರು ಶೇ.80ರಷ್ಟು ಜನ ಕನ್ನಡಿಗರಿರಲಿ. ಡೆತ್‌ರಿಪೋರ್ಟ್‌ಕನ್ನಡದಲ್ಲಿಯೂ ಇರಲಿ. ಪೋಷಕರಿಗೆ ಆಂಗ್ಲ ವ್ಯಾಮೋಹ ಸರಿಯಲ್ಲ. ಕಳೆದ ಸಾಲಿನ ಎಸ್.ಎಸ್.‌ಎಲ್‌.ಸಿ. ಪರೀಕ್ಷೆಯಲ್ಲಿ 1.65ಲಕ್ಷ ಮಕ್ಕಳು ಕನ್ನಡದಲ್ಲಿ ಅನುತ್ತೀರ್ಣರಾಗಿರುವುದಕ್ಕೆ ಕಾರಣಗಳನ್ನು ಗುರುತಿಸಿ, ಸುಧಾರಣೆಗೆ ಕ್ರಮ ವಹಿಸಲಾಗುತ್ತಿದೆ. ಡಾ|| ಎ.ಬಿ.ರಾಮಚಂದ್ರ, ಜಾಗೃತಿ ಸಮಿತಿ ಸದಸ್ಯರು.

ಆಂಗ್ಲಮಾಧ್ಯಮ ಶಾಲೆಗಳಲ್ಲಿ ಕನ್ನಡ ಕಲಿಕೆಯನ್ನು ಉಪೇಕ್ಷಿಸಲಾಗುತ್ತಿದೆ. ಉರ್ದು ಶಾಲೆಗಳ ಕನ್ನಡ ಶಿಕ್ಷಕರಿಗೆ ಕನ್ನಡ ಬಾಷಾಕಲಿಕೆ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸುವ ಅಗತ್ಯವಿದೆ. ಡಿ.ಮಂಜುನಾಥ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಕನ್ನಡ ಜಾಗೃತ ಸಮಿತಿ ಸದಸ್ಯರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್‌ಹಾಲಾಡಿ, ಕನ್ನಡ ಜಾಗೃತಿ ಸಮಿತಿ ಸದಸ್ಯ ಹೆಚ್.ಜಿ.ಮಲ್ಲಯ್ಯ, ಸತೀಶ್‌ಅಧೀನಸಾರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ ಸುರೇಶ್‌ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Department of Kannada and Culture ಫೆಬ್ರವರಿ 10. ಜಿಲ್ಲಾಡಳಿತದಿಂದ ಕಾಯಕ ಶರಣರ ಜಯಂತಿ ಆಚರಣೆಗೆ ಸಿದ್ಧತೆ

0

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆ. 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಕಾಯಕ ಶರಣರ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
Department of Kannada and Culture ಜಿಲ್ಲೆಯ ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿ.ಪಂ ಸಿಇಓ, ಮಹಾನಗರ ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ಶಂಕರಘಟ್ಟ ಸಾಹಿತಿಗಳಾದ ಡಾ. ಬಸವರಾಜ್ ನೆಲ್ಲಿಸರ ರವರಿಂದ ವಿಶೇಷ ಉಪನ್ಯಾಸ ನೀಡುವರು.

Shimoga Soldier Welfare and Rehabilitation Department ಡಿಜಿಆರ್ ವತಿಯಿಂದ ಬೆಂಗಳೂರಿನಲ್ಲಿ ಮಾಜಿ ಸೈನಿಕರಿಗೆ ಉದ್ಯೋಗ ಮೇಳ

0

Shimoga Soldier Welfare and Rehabilitation Department ಡೈರೆಕ್ಟೋರೇಟ್ ಜನರಲ್ ರಿಸೆಟ್ಲ್ ಮೆಂಟ್ ಇವರ ಪ್ರಾಯೋಜಕತ್ವದಲ್ಲಿ ಮಾಜಿ ಸೈನಿಕರಿಗಾಗಿ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಅಂಡ್ ಸೆಂಟರ್, ಬೆಂಗಳೂರು ಇಲ್ಲಿ ಫೆ 27 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮಾಜಿ ಸೈನಿಕರು, ಮಾಜಿ ಸೈನಿಕ ಗುರುತಿನ ಚೀಟಿ ಮತ್ತು ಬಯೊಡೇಟದ 5 ಪ್ರತಿಗಳೊಂದಿಗೆ ನೇರವಾಗಿ ಭಾಗವಹಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿರುತ್ತಾರೆ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 020-26341217/011-20863432 ಹಾಗೂ ವೆಬ್‌ಸೈಟ್ drzspne@desw.gov.in,/ seopadgr@desw.gov.in ಅನ್ನು ಸಂಪರ್ಕಿಸಬಹುದು.

ಪಾರದರ್ಶಕತೆ ಮತ್ತು ಗೌಪ್ಯತೆ ಕಾಪಾಡಲು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳ ಬಳಕೆ, ರಾಜ್ಯ ಸರ್ಕಾರದ ನಿರ್ಧಾರ

0

ಸ್ಥಳೀಯ ಪ್ರಾಧಿಕಾರಗಳ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಹಿಂದಿನಂತೆ ಮತಪತ್ರಗಳ ಮೂಲಕ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮತಪತ್ರ ಬಳಸಿ ಚುನಾವಣೆ ನಡೆಸಲು ಈಗಾಗಲೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದೀಗ ಗ್ರಾಮೀಣ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅದೇ ಮಾದರಿ ಅನುಸರಿಸಲು ಕಾಯ್ದೆಗೆ ತಿದ್ದುಪಡಿ ತಂದು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ (ಬ್ಯಾಲೆಟ್‌ ಪೇಪರ್‌) ಮೂಲಕವೇ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಾಗರದ ಎಲ್.ಬಿ.ಕಾಲೇಜಿನಲ್ಲಿ ವೃತ್ತಪರ ಮಾರ್ಗದರ್ಶನ ಕಾರ್ಯಕ್ರಮ

0

ಎಲ್. ಬಿ. ಮತ್ತು ಎಸ್. ಬಿ. ಎಸ್. ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿಗಳಿಗೆ ಶ್ರೀ ಶಿಶಿರ ಎಂ. ಎಸ್., ಮಂಚಾಲೆ ( SAGE BANK, ಬೆಂಗಳೂರು, ಇದರ ಇಂಜಿನಿಯರ್ ) ಇವರು ವೃತ್ತಿಪರ ಮಾರ್ಗದರ್ಶನ ಮತ್ತು ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಕುರಿತಂತೆ ಸುಮಾರು 2:30 ಗಂಟೆಗಳ ಕಾಲ ಅತ್ಯಂತ ಉಪಯುಕ್ತ ಮಾಹಿತಿಗಳನ್ನು ನೀಡಿದರು.

ಓರ್ವ ವ್ಯಕ್ತಿ , ವ್ಯಕ್ತಿತ್ವದಿಂದ ದೊಡ್ಡವನಾಗುತ್ತಾನೆ ಹೊರತು ಆಸ್ತಿ ಅಂತಸ್ತಿನಿಂದಲ್ಲ- ಎಂ.ಎನ್.ಸುಂದರರಾಜ್

0

ಭೂಪಾಳಂ ವಿಜಯಕುಮಾರ್ ಒಬ್ಬ ಸಾತ್ವಿಕ ಭಾವಜೀವಿ ಆಗಿದ್ದರು ಸದಾ ಹಸನ್ಮುಖಿಯಾಗಿ ಎಲ್ಲರೊಡನೆ ಸ್ನೇಹದಿಂದ ಇದ್ದ ಒಬ್ಬ ಸಜ್ಜನ. ಒಳ್ಳೆಯ ಕವಿಯಾಗಿ ಉತ್ತಮ ವೀಣಾ ವಾದಕರಾಗಿ ಮತ್ತು ಪ್ರಗತಿಪರ ರೈತರಾಗಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮೀಯರಾಗಿ ಬಾಳಿದವರು. ಅನೇಕ ಪ್ರತಿಷ್ಠಿತ ವೇದಿಕೆಗಳಲ್ಲಿ ಕವನವಾಚನ ಮಾಡುವಾಗ ಸಹವೇ ಆ ಕವನಗಳಿಗೆ ರಾಗ ಸಂಯೋಜಿಸಿ ಹಾಡುತ್ತಿದ್ದರು. ತಮ್ಮ ಭೂಪಾಳ0 ವಂಶದ ಬಗ್ಗೆ ಅಪಾರ ಗೌರವವನ್ನು ಇಟ್ಟುಕೊಂಡಿದ್ದವರು. ತಮ್ಮ ಮನೆಯಲ್ಲಿ ಆಗಾಗ ಸಾಹಿತ್ಯ ಮತ್ತು ಸಂಗೀತದ ಕಾರ್ಯಕ್ರಮಗಳನ್ನು ಆಯೋಜಿಸಿ ತಮ್ಮ ಗೆಳೆಯರನ್ನು ಆಹ್ವಾನಿಸಿ ರಂಜಿಸುತ್ತಿದ್ದರು ಎಂದು ಸಾಹಿತಿ ಎಂ ಎನ್ ಸುಂದರರಾಜ್ ತಿಳಿಸಿದ್ದಾರೆ. ಅವರು ವಿಜಯಪಥ ಅಡಿಯಲ್ಲಿ ನಡೆದ ವಿಜಯ್ ಕುಮಾರ್ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಒಬ್ಬ ವ್ಯಕ್ತಿ ತನ್ನ ವ್ಯಕ್ತಿತ್ವದಿಂದ ದೊಡ್ಡವನಾಗುತ್ತಾನೆ ಹೊರತಾಗಿ ಆತನ ಆಸ್ತಿ ಅಂತಸ್ತಿ ನಂದಲ್ಲ ಎಂದು ಈ ಸಂದರ್ಭದಲ್ಲಿ ಹೇಳಿ ವಿಜಯ್ ಕುಮಾರ್ ಅವರ ಜೀವನದ ಕೆಲವು ಘಟನೆಗಳನ್ನು ತಿಳಿಸಿಕೊಟ್ಟರು. ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ಉದ್ಯಮಿ ಟಿಆರ್ ಅಶ್ವತ ನಾರಾಯಣ ಶೆಟ್ಟಿ ಅವರು ನಡೆಸಿಕೊಟ್ಟರು. ಅವರು ಮಾತನಾಡುತ್ತಾ ವಿಜಯಕುಮಾರ್ ತಮ್ಮ ಅಪೂರ್ವ ವ್ಯಕ್ತಿತ್ವ ಮತ್ತು ಕವಿ ಮನಸ್ಸಿನಿಂದ ಹೆಚ್ಚು ಪ್ರಸಿದ್ಧರಾಗಿದ್ದರು ಎಂದು ತಿಳಿಸಿದರು.
ಮತ್ತೋರ್ವ ಮುಖ್ಯ ಅತಿಥಿ ಶಿವಮೊಗ್ಗ ಟೈಮ್ಸ್ ನ ಸಂಪಾದಕರಾದ ಎಸ್ ಚಂದ್ರಕಾಂತ್ ಅವರು ಮಾತನಾಡಿ ವಿಜಯಕುಮಾರ್ ಅನೇಕ ಬಾರಿ ಕವನ ವಾಚನ ಮಾಡಿದ್ದನ್ನು ತಾವು ಕೇಳಿರುವುದಾಗಿ ತಿಳಿಸಿ ಅವರ ಎರಡು ಕವನ ಸಂಕಲನಗಳನ್ನು ತಮಗೆ ನೀಡಿದ್ದನ್ನು ನೆನಪು ಮಾಡಿಕೊಂಡರು. ಹಾಗೆ ಭೂಪಾಳ0 ಚಂದ್ರಶೇಖರಯ್ಯನವರು ತಮಗೆ ಪತ್ರಿಕೋದ್ಯಮದ ಒಳ ತಿರುವುಗಳನ್ನು ತಿಳಿಸಿಕೊಟ್ಟ ಮಹಾನುಭಾವರು ಎಂಬುದನ್ನು ಬಿಚ್ಚಿಟ್ಟರು. ಭೂಪಾಳಂ ಕುಟುಂಬದವರು ಕೋವಿಡ್ ಸಮಯದಲ್ಲಿ ಸುಮಾರು ಐದು ಕೋಟಿ ರೂಪಾಯಿಗಳ ನೆರವನ್ನು ಮೆಗ್ಗಾನ್ ಆಸ್ಪತ್ರೆಗೆ ನೀಡಿದ್ದನ್ನು ಸ್ಮರಿಸಿದರು.
ಅಧ್ಯಕ್ಷತೆ ವಹಿಸಿದ್ದ ಸುವರ್ಣ ವಿಜಯಕುಮಾರ್ ಅವರು ಮಾತನಾಡಿ ಇಂದಿಗೂ ತಮ್ಮ ಪತಿ ಬಗ್ಗೆ ಇಷ್ಟೊಂದು ಅಭಿಮಾನ ಇರುವುದು ತಮಗೆ ಸಂತಸ ತಂದಿದೆ ಎಂದು ಹೇಳಿದರು. ಕೌಟುಂಬಿಕವಾಗಿ ಅತ್ಯಂತ ಪ್ರೀತಿ ಹೊಂದಿ ತಮ್ಮ ಬಗ್ಗೆಯೂ ಒಂದು ಕವನವನ್ನು ಬರೆದಿದ್ದನ್ನು ಅಭಿಮಾನದಿಂದ ಹೇಳಿಕೊಂಡರು.
ಪ್ರಾರಂಭದಲ್ಲಿ ಪ್ರತಿಭಾ ನಾಗರಾಜ್ ಅವರಿಂದ ಪ್ರಾರ್ಥನೆ ನಡೆಯಿತು ದೀಪಿಕಾ ಸ್ವಾಗತಿಸಿದರು ಕಾರ್ಯಕ್ರಮ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟವರು ಶಾಂತಾ ಶೆಟ್ಟಿಯವರು.
ಕಾರ್ಯಕ್ರಮದ ಅಂಗವಾಗಿ ಜಯಶ್ರೀ ಶ್ರೀಧರ್ ವಸಂತ ವೇಣುಗೋಪಾಲ್ ಉಮಾ ದಿಲೀಪ್ ಲಕ್ಷ್ಮಿ ಮಹೇಶ್ ವಿಜಯ್ ಕುಮಾರ್ ಅವರ ಗೀತೆಗಳ ನ್ನು ಸುಶ್ರಾವ್ಯವಾಗಿ ಹಾಡಿದರು ಶೋಭಾ ಸತೀಶ್ ಅವರು ಸ್ವರಚಿತ ಕವನ ವಾಚನ ಮಾಡಿದರು. ಕೊನೆಯಲ್ಲಿ ಶರತ್ ಅವರು ವಂದನಾರ್ಪಣೆ ನಡೆಸಿಕೊಟ್ಟರು. ಒಟ್ಟಿನಲ್ಲಿ ಈ ಒಂದು ಕಾರ್ಯಕ್ರಮ ಅತ್ಯಂತ ಸ್ನೇಹದ ವಾತಾವರಣದಲ್ಲಿ ನಡೆದು ಎಲ್ಲರನ್ನೂ ಭಾವುಕತೆಯ ತ್ತ ಕರೆದು ವೈದಿತು.
ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಜಿ ವಿಜಯಕುಮಾರ್ ಸಹಿತ 12 ಗಣ್ಯರಿಗೆ ಗೌರವಾರ್ಪಣೆ ನಡೆಯಿತು.

ಶಿವಮೊಗ್ಗದ ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಅವರಿಗೆ “ಸಾಹಿತ್ಯ ಸಿರಿ ಪ್ರಶಸ್ತಿ”

0

ಫೆ. 21 ಹಾಗೂ 22 ರಂದು ಬೆಳ್ಳೂರಿನಲ್ಲಿ ನಡೆಯುವ 10 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನೀಡುವ ಪ್ರತಿಷ್ಠಿತ “ಸಾಹಿತ್ಯ ಸಿರಿ ಪ್ರಶಸ್ತಿ”ಗೆ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಗೋಪಾಲ್ ಎಸ್ ಯಡಗೆರೆ ಆಯ್ಕೆಯಾಗಿದ್ದಾರೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣೇಶ್ ತಿಳಿಸಿದ್ದಾರೆ.

ಗೋಪಾಲ್ ಎಸ್ ಯಡಗೆರೆ ಅವರ ಪರಿಚಯ :

ನರಸಿಂಹರಾಜಪುರ ತಾಲ್ಲೂಕಿನ ಯಡಗೆರೆಯಲ್ಲಿ ಜನಿಸಿದ ಗೋಪಾಲ್, ಹುಟ್ಟೂರು ಯಡಗೆರೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ. ಪ್ರಸ್ತುತ ಗೋಪಾಲ್ ಎಸ್ ಯಡಗೆರೆ ಅವರು ಶಿವಮೊಗ್ಗದ ಕನ್ನಡಪ್ರಭ ಪತ್ರಿಕೆಯ ವಿಶೇಷ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

ಈಗಾಗಲೇ 3 ಪುಸ್ತಕಗಳನ್ನು ಅವರು ಬರೆದಿದ್ದು ಲೋಕಾರ್ಪಣೆಗೊಂಡಿದೆ. “ನಾನಾಗದ ನಾನು” ಎಂಬ ಕವನ ಸಂಕಲನ, “ಸೋಲನ್ನು ಸೋಲಿಸು” ಹಾಗೂ “ಮಿಸ್ಡ್ ಕಾಲ” ಎಂಬ ಪುಸ್ತಕ ಬಿಡುಗಡೆಯಾಗಿದೆ. “ಸೋಲನ್ನು ಸೋಲಿಸು” ಕೃತಿಗೆ ರಾಜ್ಯ ಮಟ್ಟದ ಸಾಹಿತ್ಯ ಪ್ರಶಸ್ತಿ ಲಭಿಸಿದೆ.

ಗೋಪಾಲ್ ಎಸ್ ಯಡಗೆರೆ ಅವರು 1988 ರಿಂದ ಪತ್ರಿಕೋದ್ಯಮ ಆರಂಭಿಸಿದ್ದು, ಉದಯವಾಣಿ ದಿನ ಪತ್ರಿಕೆಯಲ್ಲಿ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ನಂತರ, ಕನ್ನಡ ಪ್ರಭ ಪತ್ರಿಕೆಯಲ್ಲಿ ಶಿವಮೊಗ್ಗ ಪ್ರಧಾನ ವರದಿಗಾರರಾಗಿ ಕಾರ್ಯಾರಂಭ ಮಾಡಿ, ಪದೋನ್ನತಿ ಹೊಂದಿ ವಿಶೇಷ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಉದಯವಾಣಿ, ಕನ್ನಡಪ್ರಭ ಪತ್ರಿಕೆಯ ಜೊತೆಗೆ ತರಂಗ, ತುಷಾರ ಪತ್ರಿಕೆಗಳಲ್ಲಿ ಹಲವಾರು ಲೇಖನ, ಮುಖಪುಟ ಲೇಖನ ಪ್ರಕಟಗೊಂಡಿದೆ. ಆಕಾಶವಾಣಿಯಲ್ಲಿ ಕವನ ವಾಚನ ಮಾಡಿದ್ದಾರೆ. 2021 ರಲ್ಲಿ ಕರ್ನಾಟಕ ಸರ್ಕಾರವು ಕರ್ನಾಟಕ ಮಾದ್ಯಮ ಅಕಾಡೆಮಿ ಸದಸ್ಯರನ್ನಾಗಿ ನೇಮಕ ಮಾಡಿತ್ತು.

International Human Rights Day ಮಾನವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿರಬೇಕು- ನ್ಯಾ.ಸಂತೋಷ ಕುಮಾರ್

0

International Human Rights Day ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಂತೋಷ್ ಕುಮಾರ್ ಹೇಳಿದರು.

ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ತಾಲೂಕು ಸೂಗೂರು ಗ್ರಾಮದ ತುಂಗಭದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಕುರಿತು ಅದರ ಬೆಳವಣಿಗೆ ಹಾಗೂ ಮಹತ್ವವನ್ನು ಶಾಲಾ ಮಕ್ಕಳಿಗೆ ವಿವರಿಸಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಶಿವಮೊಗ್ಗದ ವಕೀಲ, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರಿ ವಿರೋಧಿ ಸಂಸ್ಥೆಯ ರಾಷ್ಟ್ರೀಯ ಕಾನೂನು ಸಲಹೆಗಾರ, ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸ್ ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮಾನವ ಹಕ್ಕುಗಳು ಪ್ರತಿಯೊಂದು ಹಂತದಲ್ಲಿಯೂ ಉಲ್ಲಂಘನೆ ಆಗುತ್ತಿರುವುದು ತುಂಬಾ ಶೋಚನೀಯ ವಿಚಾರ ಎಂದು ಹೇಳಿದರು.

International Human Rights Day ಪ್ರತಿಯೊಬ್ಬ ಮನುಷ್ಯನು ತನ್ನ ಹಕ್ಕು ಹಾಗೂ ಕರ್ತವ್ಯ ನಿರ್ವಹಣೆ ಬಗ್ಗೆ ಎಚ್ಚೆತ್ತುಕೊಂಡರೆ ಯಾವುದೇ ಹಕ್ಕಿನ ಉಲ್ಲಂಘನೆಯಾಗಲು ಸಾಧ್ಯವಿಲ್ಲ. ಆದ್ದರಿಂದ ಇವತ್ತಿನ ಸಮಾಜದಲ್ಲಿ ತನ್ನ ಜವಾಬ್ದಾರಿಗಳನ್ನು ಅರಿತು ನಡೆಯುವುದೇ ನಿಜವಾದ ಮಾನವ ಹಕ್ಕುಗಳನ್ನು ರಕ್ಷಿಸಿಕೊಳ್ಳುವ ಒಂದು ದೊಡ್ಡ ಅಸ್ತ್ರವಾಗಿದೆ ಎಂದು ತಿಳಿಸಿದರು.

ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾಧ್ಯಕ್ಷ ಸಿದ್ದೇಶ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

“ದಂತಪುರಾಣ” ಸಿನಿಮಾ ತಂಡ ಪ್ರಮುಖರಿಗೆ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆ ವತಿಯಿಂದ ಸನ್ಮಾನ

0

ಶ್ರೀಯುತ ವಿಶಾಲ್ ರಾಜ್ ಅವರ ನಿರ್ದೇಶನದಲ್ಲಿ ಮತ್ತು ಹೊಸಪೇಟೆಯ ಶ್ರೀಯುತ ಶರ್ಮ ಅವರ ನಿರ್ಮಾಣದಲ್ಲಿ ಮೂಡಿಬಂದ ಈ ಚಲನಚಿತ್ರವು ದಿನಾಂಕ 06-02-2026 ರಂದು ಹೊಸಪೇಟೆಯ ಮೀರಲಾಂ ಚಿತ್ರಮಂದಿರದಲ್ಲಿ ಭರ್ಜರಿಯಾಗಿ ಬಿಡುಗಡೆಯಾಯಿತು. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡ ಈ ಚಿತ್ರಕ್ಕೆ ಅಭಿನಂದನೆಗಳ ಸುರಿಮಳೆಯೇ ಸುರಿಯಿತು.

ಈ ಹಿನ್ನೆಲೆಯಲ್ಲೇ, ದಿನಾಂಕ 07-02-2026 ರಂದು ಕಿರ್ಲೋಸ್ಕರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್.ವಿ. ಗುಮಾಸ್ತೆ ಅವರು ಚಿತ್ರ ನಿರ್ದೇಶಕರನ್ನೂ ಮತ್ತು ನಿರ್ಮಾಪಕರನ್ನೂ ಕಾರ್ಖಾನೆಗೆ ಆತ್ಮೀಯವಾಗಿ ಆಹ್ವಾನಿಸಿ ಸನ್ಮಾನಿಸಿದರು. ಬಳಿಕ ಕಿರ್ಲೋಸ್ಕರ್ ಆಡಿಟೋರಿಯಂನಲ್ಲಿ ದಂತಪುರಾಣ ಚಲನಚಿತ್ರದ ವಿಶೇಷ ವೀಕ್ಷಣೆ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಈ ಸಂದರ್ಭದಲ್ಲಿ ಅವರು ಚಿತ್ರತಂಡಕ್ಕೆ ಶುಭಾಶಯಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಈ ವೀಕ್ಷಣೆ ಕಾರ್ಯಕ್ರಮದಲ್ಲಿ ಕಿರ್ಲೋಸ್ಕರ್ ಆಫೀಸರ್ಸ್ ಕ್ಲಬ್ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಚಲನಚಿತ್ರವನ್ನು ಆಸಕ್ತಿಯಿಂದ ವೀಕ್ಷಿಸಿದರು. ಆಡಿಟೋರಿಯಂನಲ್ಲಿ ನಡೆದ ಈ ಕಾರ್ಯಕ್ರಮವು ಸಾಂಸ್ಕೃತಿಕ ಸೌಹಾರ್ದತೆಯ ವಾತಾವರಣದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಕಿರ್ಲೋಸ್ಕರ್ ಲೇಡೀಸ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಕಮಲಾ ಗುಮಾಸ್ತೆಯವರು ಈ ಸಂದರ್ಭದಲ್ಲಿ ಚಿತ್ರತಂಡವನ್ನು ಸನ್ಮಾನಿಸಿ ಶುಭಾಶಯ ಕೋರಿದರು.

ಈ ಚಲನಚಿತ್ರದಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿ, ಪರಂಪರೆ, ರೂಢಿ-ಪದ್ದತಿ ಮತ್ತು ಆಚರಣೆಗಳ ಜೊತೆಗೆ ಇಂದಿನ ಜೀವನಶೈಲಿಯನ್ನು ಒಟ್ಟುಗೂಡಿಸಿ ಮನಸಿಗೆ ಹತ್ತಿರವಾಗುವ ಕಥಾವಸ್ತುವಿನ ಮೂಲಕ ಚಿತ್ರವನ್ನು ನಿರ್ಮಿಸಲಾಗಿದೆ. ವಿಶೇಷವಾಗಿ ಅಜ್ಜಿಗೆ ಹಲ್ಲು ಕಟ್ಟಿಸಿ, ಅವಳಿಗೂ ಎಲ್ಲರಂತೆ ಆಹಾರ ಸೇವಿಸಲು ಸಾಧ್ಯವಾಗುವಂತೆ ಮಾಡುವ ದೀರ್ಘ ಕಥಾವಳಿ ನೋಡುಗರ ಗಮನ ಸೆಳೆಯುತ್ತದೆ. ಇಂದಿನ ಮಕ್ಕಳು ಅಜ್ಜಿಯೊಂದಿಗೆ ಸಮಯ ಕಳೆಯದೆ ಇರುವ ಪರಿಸ್ಥಿತಿಯನ್ನು ಮನದಟ್ಟುಗೊಳಿಸುವಂತೆ ಚಿತ್ರ ಮನಸ್ಸನ್ನು ಕರಗಿಸುತ್ತದೆ.

ಒಟ್ಟಾರೆ, ದಂತಪುರಾಣ ಚಲನಚಿತ್ರದ ಈ ವಿಶೇಷ ವೀಕ್ಷಣೆ ಕಾರ್ಯಕ್ರಮವು ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಯಶಸ್ವಿಯಾಗಿ ನೆರವೇರಿತು. ತಾವು ಸಹ ಸಮೀಪದ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ವೀಕ್ಷಿಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ವಿನಂತಿ.

ವರದಿ:
ಮುರುಳೀಧರ್ ನಾಡಿಗೇರ್