Monday, August 10, 2026
Monday, August 10, 2026
Home Blog Page 202

Bengaluru International Film Festival ‘ಲಾಸ್ಟ್ ಲ್ಯಾಂಡ್’ ,’ಸಬರ್ ಬೋಂಡಾ’ ಮತ್ತು ಕನ್ನಡದ ” ವನ್ಯ” ಚಿತ್ರಗಳಿಗೆ ಪ್ರಶಸ್ತಿ

0

Bengaluru International Film Festival ೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಚಿತ್ರಗಳ ಘೋಷಣೆ

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ: ೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಶುಕ್ರವಾರ ಅಂತ್ಯಗೊಂಡಿದ್ದು, ಜಪಾನ್‌ ದೇಶದದ ʼಲಾಸ್ಟ್‌ ಲ್ಯಾಂಡ್‌ʼ, ಮರಾಠಿಯ ʼಸಬರ್‌ ಬೊಂದಾʼ ಮತ್ತು ʼವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿವೆ.

ಅತ್ಯುತ್ತಮ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ ೧೦ ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ತಲಾ ಐದು ಲಕ್ಷ ರೂ. ಮತ್ತು ಎರಡು ಲಕ್ಷ ರೂ. ನೀಡಿ ಗೌರವಿಸಲಾಯಿತು.

ಏಷ್ಯನ್‌ ಚಿತ್ರ ವಿಭಾಗದಲ್ಲಿ ಈ ವರ್ಷ ಒಟ್ಟು ೧೫ ಚಿತ್ರಗಳು ಪ್ರಶಸ್ತಿ ಕಣದಲ್ಲಿದ್ದವು. ಈ ಪೈಕಿ ಜಪಾನ್‌ನ ʼದಿ ಲಾಸ್ಟ್‌ ಲ್ಯಾಂಡ್‌ʼ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾದರೆ, ಭಾರತದ ʼಶೇಪ್‌ ಆಫ್‌ ಮೋಮೋʼ ಮತ್ತು ಜಪಾನ್‌ನ ʼದಿ ಡೀಪೆಸ್ಟ್‌ ಸ್ಪೇಸ್‌ ಇನ್‌ ಯೂಎಸ್‌ʼ ಚಿತ್ರಗಳು ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗೆ ಭಾಜನವಾಗಿವೆ. ಫಿಲಿಪೈನ್ಸ್‌ನ ʼರಿಪಬ್ಲಿಕ್‌ ಆಫ್‌ ಪಿಪೊಲಿಪಿನಾಸ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

Bengaluru International Film Festival ಭಾರತೀಯ (ಚಿತ್ರಭಾರತಿ) ವಿಭಾಗದಲ್ಲಿ ಮರಾಠಿ ಚಿತ್ರ ʼಸಬರ್‌ ಬೊಂಡಾʼ ಅತ್ಯುತ್ತಮ ಚಿತ್ರ ಪ್ರಶಸ್ತಿ ತನ್ನದಾಗಿಸಿಕೊಂಡರೆ, ಮಲಯಾಳಂನ ʼಮೋಹಂʼ ಮತ್ತು ʼಕಾಡುʼ ಚಿತ್ರಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗಳನ್ನು ಗೆದ್ದಿವೆ. ಮರಾಠಿ ಭಾಷೆಯ ʼಗೊಂದಾಳ್‌ʼ ಚಿತ್ರವು ಫಿಪ್ರೆಸ್ಕಿ ಪ್ರಶಸ್ತಿ ಪಡೆದರೆ, ಮಲಯಾಳಂ ಭಾಷೆಯ ʼಸರ್ಕೀಟ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಕನ್ನಡ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ೧೪ ಚಿತ್ರಗಳು ಸ್ಪರ್ಧಿಸಿದ್ದು, ಈ ಪೈಕಿ ʼವನ್ಯಾʼ ಚಿತ್ರವು ಅತ್ಯುತ್ತಮ ಪ್ರಶಸ್ತಿಯನ್ನು ಗೆದ್ದಿದೆ. ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರಗಳಾಗಿ ʼನಮ್‌ ಸಾಲಿʼ ಮತ್ತು ʼರಾವಣ ರಾಜ್ಯದಲ್ಲಿ ನವದಂಪತಿಗಳುʼ ಆಯ್ಕೆಯಾದರೆ, ʼಹಕ್ಕಿಗಾಗಿʼ ಚಿತ್ರಕ್ಕಾಗಿ ನೆಟ್‌ಪ್ಯಾಕ್‌ ತೀರ್ಪುಗಾರರ ಪ್ರಶಸ್ತಿ ಸಿಕ್ಕಿದೆ. ʼಮೃಗತೃಷ್ಣʼ ಮತ್ತು ʼಫೋರ್‌ ಬೈ ಫೋರ್‌ʼ ಚಿತ್ರಗಳು ತೀರ್ಪುಗಾರರ ವಿಶೇಷ ಮನ್ನಣೆಗೆ ಭಾಜನವಾಗಿವೆ.

ಈ ಚಿತ್ರೋತ್ಸವದಲ್ಲಿ 70 ದೇಶಗಳ ಸುಮಾರು 300ಕ್ಕೂ ಹೆಚ್ಚು ಅತ್ಯುತ್ತಮ ಚಲನಚಿತ್ರಗಳು, ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಂಡಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.

ಸೊರಬದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲು

0

ಸೊರಬ ಪಟ್ಟಣದ ಶ್ರೀರಂಗನಾಥ ದೇವಸ್ಥಾನ ಸಮೀಪ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ನಕಲಿ ಕೀ ಬಳಸಿ ಕಳ್ಳತನ ಮಾಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ರಾಘವೇಂದ್ರ ಬಡಾವಣೆ ನಿವಾಸಿ ಜೆ.ಎಸ್. ರಾಘವೇಂದ್ರ ಗುಡಿಗಾರ್ ಅವರು ಹೋಟೆಲ್ ಒಂದರಲ್ಲಿ ಊಟಕ್ಕೆಂದು ತೆರಳಿದ್ದರು. ಊಟ ಮುಗಿಸಿ ಹೊರ ಬಂದಾಗ ಹೀರೋ ಫ್ಯಾಷನ್ ಪ್ರೋ ಕಂಪನಿಯ ( ಕೆ.ಎ.15. ವೈ. 7692) ಬೈಕ್ ಕಳುವಾಗಿರುವುದು ತಿಳಿದಿದೆ.

ಸಮೀಪದ ಅಂಬಿಕಾ ವೈನ್ಸ್‌ನ ಸಿಸಿ ಕ್ಯಾಮಾರವನ್ನು ಪರಿಶೀಲಿಸಿದಾಗ ಇಬ್ಬರು ಕಳ್ಳರು ಬೈಕ್ ಕಳುವು ಮಾಡಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Chamber of Commerce Shivamogga ತಂತ್ರಜ್ಞಾನ, ವ್ಯವಹಾರ ಸಂಶೋಧನೆ , ಅಭಿವೃದ್ಧಿ , ಹೆಚ್ಚಿನ ಹೂಡಿಕೆಗೆ ಸರ್ಕಾರದ ಬೆಂಬಲವನ್ನ ನಿರೀಕ್ಷಿಸುತ್ತೇವೆ: ಬಿ.ಗೋಪಿನಾಥ್

0

Chamber of Commerce Shivamogga ಜೈವಿಕ ತಂತ್ರಜ್ಞಾನ ವಲಯ, ಸಂಶೋಧನೆ ಮತ್ತು ಅಭಿವೃದ್ಧಿ ಮೂಲಸೌಕರ್ಯವನ್ನು ಉತ್ತೇಜಿಸಲು ಶಿವಮೊಗ್ಗದಲ್ಲಿ ತಂತ್ರಜ್ಞಾನ ಮತ್ತು ನಾವೀನ್ಯತೆ ಸಂಬಂಧಿತ ಚಟುವಟಿಕೆ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಚೇರಿಗೆ ಆಗಮಿಸಿದ್ದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ, ಎಫ್‌ಕೆಸಿಸಿಐ ಕೋರ್ ಕಮಿಟಿಯ ಮಾಹಿತಿ ತಂತ್ರಜ್ಞಾನ ಸಮಿತಿಯ ಶಮಂತ್ ನೆಲ್ಲಿಕೆರೆ ಮತ್ತು ಗೋಪಿಕ ಪಿಲ್ಲೈ ಅವರನ್ನು ಸ್ವಾಗತಿಸಿ ಸಭೆಯಲ್ಲಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಲಭ್ಯವಿರುವ ಪ್ರತಿಭೆ ಮತ್ತು ಕೌಶಲ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಶಿವಮೊಗ್ಗ ನಗರದಲ್ಲಿ ನಾವೀನ್ಯತೆ, ತಂತ್ರಜ್ಞಾನ, ವ್ಯವಹಾರ ಸಂಶೋಧನೆ ಮತ್ತು ಅಭಿವೃದ್ಧಿ ಇನ್‌ಕುಬೇಟರ್, ಶಿಕ್ಷಣ ಮತ್ತು ಮೂಲಸೌಕರ್ಯಕ್ಕೆ ಒತ್ತು ನೀಡುವ ಮೂಲಕ ಹೆಚ್ಚಿನ ಹೂಡಿಕೆ ಅವಕಾಶಗಳು ಮತ್ತು ಉದ್ಯೋಗಾವಕಾಶವನ್ನು ಸರ್ಕಾರದ ಮಟ್ಟದಿಂದ ನಿರೀಕ್ಷಿಸುತ್ತಿದ್ದೇವೆ ಎಂದು ತಿಳಿಸಿದರು.

ಶಿವಮೊಗ್ಗವನ್ನು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮೂಲಕ ಪ್ರಮುಖ ತಂತ್ರಜ್ಞಾನ ಮತ್ತು ಕೈಗಾರಿಕಾ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಸ್ಟಾರ್ಟ್ಅಪ್, ಕೃಷಿ, ತಂತ್ರಜ್ಞಾನ ಸೇರಿದಂತೆ ಹಲವು ಅವಕಾಶಗಳು ಇಲ್ಲಿದೆ. ಪ್ರಾದೇಶಿಕ ಬೆಳವಣಿಗೆಯನ್ನು ಹೆಚ್ಚಿಸಲು ಪ್ಲಗ್-ಅಂಡ್-ಪ್ಲೇ ಮೂಲಸೌಕರ್ಯ, ಸಬ್ಸಿಡಿಗಳು, ಬಾಡಿಗೆ ಬೆಂಬಲದಂತಹ ಪ್ರೋತ್ಸಾಹಕದ ಅವಶ್ಯಕತೆಯಿದೆ. ಶಿವಮೊಗ್ಗದಂತಹ ನಗರಗಳಿಗೆ ಸ್ಥಳಾಂತರಗೊಳ್ಳುವ ಅಥವಾ ಪ್ರಾರಂಭವಾಗುವ ಕಂಪನಿಗಳಿಗೆ ಕರ್ನಾಟಕ ಸರ್ಕಾರವು ಸರ್ಕಾರಿ ಪ್ರೋತ್ಸಾಹ ಧನ ಮತ್ತು ಬೆಂಬಲ ಗಮನಾರ್ಹ ಸವಲತ್ತುಗಳನ್ನು ನೀಡಬೇಕು ಎಂದರು.

Chamber of Commerce Shivamogga ಶಿವಮೊಗ್ಗದಂತಹ ನಗರಗಳನ್ನು ತಂತ್ರಜ್ಞಾನ ವಾಣಿಜ್ಯದ ಕೇಂದ್ರಗಳಾಗಿ ಪರಿವರ್ತಿಸುವುದು. ಬೆಂಗಳೂರಿನ ಮೇಲಿನ ಹೊರೆ ಕಡಿಮೆ ಮಾಡುವುದು ಮತ್ತು ಸ್ಥಳೀಯ ಉದ್ಯಮಶೀಲತೆಯನ್ನು ಬೆಳೆಸುವುದು ಬೆಂಗಳೂರಿನಾಚೆ ಕಾರ್ಯಕ್ರಮದ ಗುರಿಯಾಗಿದೆ. ಕೈಗಾರಿಕಾ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ಮೂಲಕ ಬೆಳವಣಿಗೆಗೆ ಅನುಕೂಲವಾಗುವ ವಿತರಣಾ ಐಟಿ/ಐಟಿಇಎಸ್ ಮಾದರಿಯನ್ನು ಸಕ್ರಿಯಗೊಳಿಸುವತ್ತ ಗಮನಹರಿಸಿ ಸರ್ಕಾರವು ಹೊಸ ಐಟಿ ನೀತಿಯನ್ನು ಮುಂಚೂಣಿಗೆ ತಂದಿದೆ ಎಂದರು.

‘ಬೆಂಗಳೂರಿನಾಚೆಗೆ’ ಉಪಕ್ರಮವು ತಂತ್ರಜ್ಞಾನ ಮತ್ತು ನಾವೀನ್ಯತೆ ಸಂಬಂಧಿತ ಚಟುವಟಿಕೆಯನ್ನು ಇತರ ನಗರಗಳಿಗೆ ಸ್ಥಳಾಂತರಿಸುವ ಸರ್ಕಾರದ ಪ್ರಸ್ತುತ ಪ್ರಯತ್ನಗಳಿಗೆ ಬೆಂಬಲ ಮತ್ತು ಎಲ್ಲ ರೀತಿಯ ಸಹಕಾರ ನೀಡಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಬದ್ಧವಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಎಸ್.ಎಸ್.ಉದಯ್ ಕುಮಾರ್, ವಸಂತ್ ಹೋಬಳಿದಾರ್, ಎಸ್.ಪಿ.ಶಂಕರ್, ಜಿ.ವಿ.ಕಿರಣ್ ಕುಮಾರ್, ರವಿಪ್ರಕಾಶ್ ಜೆನ್ನಿ, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಟಿ.ಆರ್.ಅಶ್ವಥ್ ನಾರಾಯಣ ಶೆಟ್ಟಿ ಭಾಗವಹಿಸಿದ್ದರು.

Ambedkar Bhavan Shivamogga ಫೆಬ್ರವರಿ 14. ” ಹ್ಯಾಪಿ ಫೀಟ್- 2026″ ವಿಶೇಷ ನೃತ್ಯ ಪ್ರದರ್ಶನ

0

Ambedkar Bhavan Shivamogga ನೃತ್ಯಸಿರಿ ಡ್ಯಾನ್ಸ್ ಸ್ಟುಡಿಯೋ ವತಿಯಿಂದ “ಹ್ಯಾಪಿ ಫೀಟ್-2026” ವಿಶೇಷ ನೃತ್ಯ ಪ್ರದರ್ಶನ ಹಾಗೂ ಸಂಗೀತ ಸಂಜೆ ಕಾರ್ಯಕ್ರಮವನ್ನು ಫೆ. 14ರ ಸಂಜೆ 5.30ಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಮಾಧುರಿ ಪರಶುರಾಮ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸ್ಥೆಯ 50ಕ್ಕೂ ಹೆಚ್ಚು ಪ್ರತಿಭಾವಂತ ಕಲಾವಿದರು ಶಾಸ್ತ್ರೀಯ ನೃತ್ಯ, ಇಂಡಿಯನ್ ಕಾಂಟೆಂಪರರಿ, ಫ್ರೀಸ್ಟೈಲ್ ಹಾಗೂ ಬಾಲಿವುಡ್ ಶೈಲಿಯ ನೃತ್ಯ ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 99866 72177 ಸಂಪರ್ಕಿಸಬಹುದು.

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

0

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ದಿನಾಂಕ 05.02.2026 ರಂದು ತಾಲೂಕಿನ 10 ಮಂದಿ ಮಾಶಾಸನ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು.

ಪೂಜ್ಯ ಡಾ. ಡಿ ವೀರೇಂದ್ರಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಆಶಯದಂತೆ ಪ್ರತೀ ತಿಂಗಳು 59 ಮಂದಿ ನಿರ್ಗತಿಕರಿಗೆ ರೂ.1000/- ಮಾಶಾಸನ ನೀಡಲಾಗುತ್ತಿದೆ. ಅಲ್ಲದೇ ಪ್ರತೀ ವರ್ಷದಂತೆ ಕಡು ಬಡವರಿಗೆ ವಾತ್ಸಲ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಿಟ್ ನಲ್ಲಿ ದಿನ ಬಳಕೆಗೆ ಅಗತ್ಯ ವಸ್ತುಗಳಾದ ಚಾಪೆ, ದಿಂಬು, ಬೆಡ್ ಶೀಟ್ ಗಳು, ಟವಲ್, ಸೀರೆ, ಲಂಗ, ನೈಟಿ, ಪಂಚೆ, ಶರ್ಟ್, ಬರ್ಮುಡಾ, ಸೋಪು, ಬಚಾಣಿಕೆ ಮುಂತಾದ ವಸ್ತುಗಳನ್ನು ನೀಡಲಾಗಿದೆ.

Dharmasthala Rural Development Project ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ನ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಮುರುಳಿಧರ್ ಶೆಟ್ಟಿ, ಜಿಲ್ಲಾ ಎಂ.ಐ.ಎಸ್ ಯೋಜನಾಧಿಕಾರಿಗಳಾದ ಶ್ರೀಯುತ ಬಾಲಕೃಷ್ಣ ನಾಯ್ಕ್, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಮತಿ ಯಶೋಧ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ, ವಲಯಗಳ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು, ವಲಯಗಳ ಒಕ್ಕೂಟ ಪದಾಧಿಕಾರಿಗಳು, ಊರಿನ ಗಣ್ಯರು, ಉಪಸ್ಥಿತರಿದ್ದರು.

ಕರವೇ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ

0

ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ ವಚನ ಸಮಾರಂಭವು ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಜನಮನ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ ಜನಾರ್ಧನ್ ಸಾಲಿಯನ್ ರವರು ಭಾಗವಹಿಸಿ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎನ್, ಮಾಲತೇಶ್, ಸಹಕಾರ್ಯದರ್ಶಿಯಾಗಿ ಪಿ ಪಾರ್ಥಿಬನ್, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಕೆ. ಕಿರಣ್ ಕುಮಾರ್, ರಾಜ್ಯ ಉಪಾಧ್ಯಕ್ಷರಾಗಿ ಶ್ರೀಮತಿ ವೀಣಾ ಹೆಚ್,ಮತ್ತು ಶ್ರೀ ಮತಿ ಸುಮಾ ಕೆ ಎಸ್, ರಾಜ್ಯ ಖಜಾಂಚಿಯಾಗಿ ಸಿದ್ದಣ್ಣಯ್ಯ, ನಿರ್ದೇಶಕರುಗಳಾದ ಎಸ್ಆರ್ ಅಶೋಕ್,ಹಾಗೂ ಸಂಗೇಶ್ವರ, ಇವರುಗಳು ಅಧಿಕಾರದ ಪ್ರಮಾಣವಚನವನ್ನು ಸ್ವೀಕರಿಸಿದರು. ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಯಿತು. ಈ ಸಭೆಯಲ್ಲಿ ಇನ್ನಿತರ ಸದಸ್ಯರುಗಳಾದ ಮೈಕಲ್ ಮುರುಗನ್, ಪ್ರತಾಪ್,ರಂಜಿತ್ ಗಾಯಕ್ವಾಡ್, ರಾಮು ವಿ,ಲಕ್ಷ್ಮೀಶ ಡಿ ಆರ್, ಹರ್ಷಿತ್ ಭಾರದ್ವಾಜ್, ಶ್ರೀನಿವಾಸ್, ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಸಂಘಟನೆಯ ವಿಷಯದಲ್ಲಿ ಅವಿರತ ಪ್ರಯತ್ನಿಸಿದ ಶ್ರೀ ಮತಿ ವೀಣಾ ಹೆಚ್ ರವರನ್ನು ಸನ್ಮಾನಿಸಲಾಯಿತು. ಶಿವಮೊಗ್ಗ ತಾಲೂಕು ವಿವಿಧ ಜಿಲ್ಲೆಯ ರಾಜ್ಯ ಸಂಘಟನೆಯ ಸಂಘಟಿತರಾಗಲು ಸಂಪರ್ಕಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ,ಮಾಲತೇಶ್ ಶಿವಮೊಗ್ಗ 990182600

ಗ್ಲೋರಿಯಾ ಕಿರಣ್ ಗೆ ಜಿಲ್ಲಾ ಮಟ್ಟದ ಪ್ರತಿಭಾ ಪ್ರಶಸ್ತಿ

0

ಶಿವಮೊಗ್ಗ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಸಾಧಾರಣ ಪ್ರತಿಭೆವುಳ್ಳ ಮಕ್ಕಳಿಗೆ ನೀಡುವ ಜಿಲ್ಲಾ ಮಟ್ಟದ 2025 – 26 ಪ್ರಶಸ್ತಿಯನ್ನು ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಅನನ್ಯ ವಿದ್ಯಾಪೀಠದ 8ನೇ ತರಗತಿ ವಿದ್ಯಾರ್ಥಿನಿ ಗ್ಲೋರಿಯಾ ಕಿರಣ್ ರಂಜಾರಿಯೋ ಗೆ ಕಲೆ ಸಾಂಸ್ಕೃತಿಕ ಸಂಗೀತ ಕ್ಷೇತ್ರದಲ್ಲಿ ನ ಪ್ರತಿಭೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿದ್ದಾರೆ. ಈ ಪ್ರತಿಭಾನ್ವಿತೆ ಕಲಾರ್ಪಾಣಾ ಸ್ಕೂಲ್ ಆಫ್ ಆರ್ಟ್ಸ್‌ನ ತಾಯಿ ವಿದುಷಿ ಸಿಂಧು ಸೆಬಾಸ್ಟಿಯನ್ ಮತ್ತು ತಂದೆ ಕಿರಣ್ ರಂಜಾರಿಯೋ ಆಗಿದ್ದಾರೆ.

Samanvaya Trust ಉಚಿತ ವಾಚನಾಲಯ ದ ಪ್ರಯೋಜನ ಪಡೆದು ಉನ್ನತ ಹುದ್ದೆಗೆ ಆಯ್ಕೆಯಾದ ರಾಜಶೇಖರ್ ಗೆ ಸನ್ಮಾನ

0

Samanvaya Trust ಸಮನ್ವಯ ಟ್ರಸ್ಟ್ ನ ಕೆ.ಎ.ದಯಾನಂದ ಐಎಎಸ್ ವಾಚನಾಲಯದಲ್ಲಿ ಅಧ್ಯಯನ ನಡೆಸುತ್ತಿದ್ದ ಸೊರಬ ತಾಲೂಕಿನ ಹಲಸಿನಕೊಪ್ಪ ಗ್ರಾಮದ ರಾಜಶೇಖರ ಅವರು ಕೇಂದ್ರ ಸರ್ಕಾರದ ಗೃಹ ಇಲಾಖೆಯ ಸಿಐಎಸ್‌ಎಫ್ ( ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ) ಜನರಲ್ ಡ್ಯೂಟಿ ಹುದ್ದೆಗೆ ನೇಮಕಗೊಂಡಿದ್ದಾರೆ.

ಕೆ.ಎ.ದಯಾನಂದ್ ಐಎಎಸ್ ಹೆಸರಿನಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಎರಡು ವರ್ಷದಿಂದ ಉಚಿತ ವಾಚನಾಲಯ ನಡೆಸುತ್ತಿದ್ದು, ಈವರೆಗೂ 7 ಆಕಾಂಕ್ಷಿಗಳು ಕೇಂದ್ರ ಮತ್ತು ಸರ್ಕಾರದ ಹುದ್ದೆಗೆ ನೇಮಕಗೊಂಡಿದ್ದಾರೆ.

ಸೊರಬ ತಾಲೂಕಿನ ಹಲಸಿನಕೊಪ್ಪ ಗ್ರಾಮದ ಸುರೇಶ್ ಅವರ ಪುತ್ರ ರಾಜಶೇಖರ ಅವರು ಕೆ.ಎ. ದಯಾನಂದ ಉಚಿತ ವಾಚನಾಲಯದಲ್ಲಿ ಅಧ್ಯಯನ ನಡೆಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದರು.

ಸಾವಿರಾರು ಪುಸ್ತಕಗಳು ಉಚಿತ ವಾಚನಾಲಯದಲ್ಲಿ ಲಭ್ಯವಿದ್ದು, ಡಿಜಿಟಲ್ ಲೈಬ್ರರಿ ಸೌಲಭ್ಯ ಸಹ ಇದೆ.
ಸಿಐಎಸ್‌ಎಫ್ ( ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ) ಜನರಲ್ ಡ್ಯೂಟಿ ಹುದ್ದೆಗೆ ಆಯ್ಕೆಯಾಗಿರುವ ರಾಜಶೇಖರ ಅವರಿಗೆ ಸಮನ್ವಯ ಟ್ರಸ್ಟ್ ನ ಕೆ.ಎ.ದಯಾನಂದ ಐಎಎಸ್ ವಾಚನಾಲಯದ ಪರವಾಗಿ ಅಭಿನಂದಿಸಲಾಯಿತು.

Samanvaya Trust ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ಆಡಳಿತಾಧಿಕಾರಿ ಯತೀಶ್, ಸಮನ್ವಯ ಕಾಶಿ, ತರಬೇತಿ ಕೇಂದ್ರದ ವಿದ್ಯಾರ್ಥಿಗಳು ರಾಜಶೇಖರ ಅವರಿಗೆ ಶುಭಕೋರಿದರು.

MESCOM ಫೆ.7. ಶಿವಮೊಗ್ಗದ ಕೋಟೆ ರಸ್ತೆ, ಗಾಂಧಿಬಜಾರ್ ಸುತ್ತಮುತ್ತ ವಿದ್ಯುತ್ ನಿಲುಗಡೆ.ಮೆಸ್ಕಾಂ ಪ್ರಕಟಣೆ

0

MESCOM ಶಿವಮೊಗ್ಗ ನಗರದ ಎಂಆರ್.ಎಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ಫೆ.07 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೋಟೆ ರಸ್ತೆ, ಅಶೋಕರಸ್ತೆ, ಗಾಂಧಿಬಜಾರ್, ಓಬಿಎಲ್ ರಸ್ತೆ, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನ ಕೇರಿ, ಪೆನ್ಷನ್ ಮೊಹಲ್ಲಾ, ನಾಗಪ್ಪ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

DVS College of Arts, Science and Commerce ಬಜೆಟ್ ನಲ್ಲಿ ಭಾರತದ ಸಾಲದ ಪ್ರಮಾಣ ಮತ್ತು ಕಟ್ಟುವ ಬಡ್ಡಿಯ ಪ್ರಮಾಣ ಇಳಿಮುಖದ ಲಕ್ಷಣವಿದೆ: ಪ್ರೊ.ಬಿ.ಎಂ.ಕುಮಾರಸ್ವಾಮಿ

0

DVS College of Arts, Science and Commerce ಭಾರತ ಎಲ್ಲ ಕ್ಷೇತ್ರಗಳಲ್ಲಿ ಸ್ವಾವಲಂಬನೆ ಸಾಧಿಸಲು ಬಜೆಟ್ ಅತ್ಯಂತ ಸಹಕಾರಿಯಾಗುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಕೇಂದ್ರ ಬಜೆಟ್ 2026 ಒಂದು ವಿಶೇಷಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ವರ್ಷದ ಬಜೆಟ್ 2047ರ ಆತ್ಮ ನಿರ್ಭರ ಭಾರತ್ ಅಂದರೆ ಎಲ್ಲ ವಿಷಯಗಳಲ್ಲಿ ಸ್ವಾವಲಂಬನೆ ಸಾಧಿಸಲು ಈ ಬಜೆಟ್ ಸಹಕಾರಿಯಾಗಲಿದೆ. ಬಹಳ ಮುಖ್ಯವಾಗಿ ಭಾರತದ ಸಾಲದ ಪ್ರಮಾಣ ಮತ್ತು ಸಾಲಕ್ಕೆ ಕಟ್ಟುವ ಬಡ್ಡಿಯ ಪ್ರಮಾಣ ಇಳಿಮುಖವಾದರೂ ಅದನ್ನು ಇನ್ನಷ್ಟು ಕಡಿಮೆ ಮಾಡಿಕೊಳ್ಳುವ ಅವಕಾಶವಿದೆ ಎಂದು ತಿಳಿಸಿದರು.
DVS College of Arts, Science and Commerce ಇಂದಿನ ಬಜೆಟ್‌ನಲ್ಲಿ ಬಹಳ ಮುಖ್ಯವಾಗಿ ಎಂಎಸ್‌ಎಂಇಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಒಳ್ಳೆಯ ಲಕ್ಷಣವಾಗಿದೆ. ಒಟ್ಟಾರೆ ಬಜೆಟ್ ಉತ್ತಮವಾಗಿದ್ದು, ಅಭಿವೃದ್ಧಿಯತ್ತ ಭಾರತವನ್ನು ಕೊಂಡೊಯ್ಯುತ್ತದೆ ಎಂದು ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಬಸಪ್ಪ ಗೌಡ ಮಾತನಾಡಿ, ಬಜೆಟ್ ಎಂಬುದು ರಾಷ್ಟ್ರ ರಕ್ಷಣೆಯನ್ನು ಒಳಗೊಂಡಂತೆ ದೇಶದ ಅಭಿವೃದ್ಧಿಯನ್ನು ಸೂಚಿಸುತ್ತದೆ. ಮುಂದುವರಿದ ರಾಷ್ಟ್ರಗಳಲ್ಲಿ ರಕ್ಷಣಾ ವೆಚ್ಚ ಹೆಚ್ಚಾಗಿರುತ್ತದೆ. ಆದ್ದರಿಂದ ನಮ್ಮ ದೇಶದಲ್ಲೂ ಇದಕ್ಕೆ ಹೆಚ್ಚು ಗಮನ ಕೊಡಬೇಕು ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷ ಜಿ.ಮಧುಸೂದನ್ ಮಾತನಾಡಿ, ವಿದ್ಯಾರ್ಥಿಗಳು ಬಜೆಟ್ ಅಂಶಗಳನ್ನು ಅಧ್ಯಯನ ನಡೆಸಿ ಅದರ ಪರಿಣಾಮಗಳನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ನಿರ್ದೇಶಕ ಎಂ.ರಾಜು, ಸಹಾಯಕ ಪ್ರಾಧ್ಯಾಪಕ ಎಸ್.ಶಿವಲಿಂಗಂ, ಎಚ್.ಎಲ್.ರಂಜಿತಾ ಇತರರಿದ್ದರು.