Sunday, November 8, 2026
Sunday, November 8, 2026
Home Blog Page 2035

ಒಂದು ಕೋವಿಡ್ ಸೋಂಕಿದ್ದರೂ ಇಡೀ ಶಾಲೆಯ ಮಕ್ಕಳ ತಪಾಸಣೆ

0

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ರಾಜ್ಯದ ಯಾವುದೇ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಒಂದೇ ಒಂದು ಕೋವಿಡ್ ಸೋಂಕು ಪತ್ತೆಯಾದರೇ, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು.

“ಕೋವಿಡ್ ಸೋಂಕು ಕಂಡು ಬಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿ, ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ಕೋವಿಡ್ ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಸಭೆಯಲ್ಲಿ ಸಚಿವರು ಸೂಚಿಸಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 31ರವರೆಗೆ 1 ರಿಂದ 9ನೇ ತರಗತಿಗಳ ಭೌತಿಕ ತರಗತಿಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಮಾತ್ರ ಸ್ಥಗಿತಗೊಳಿಸಲಾಗಿದೆ ಉಳಿದಂತೆ ವಿದ್ಯಾರ್ಥಿಗಳಿಗೆ ಆನ್ಲೈನ್ ಹಾಗೂ ಪರ್ಯಾಯ ಬೋಧನೆ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

“ಶಾಲೆಗಳಲ್ಲಿ ಭೌತಿಕ ತರಗತಿಗಳು ನಡೆಯದೇ ಈಗಾಗಲೇ ಮಕ್ಕಳು ಶೈಕ್ಷಣಿಕವಾಗಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದಾರೆ. ಆನ್ಲೈನ್ ತರಗತಿಗಳು ಬೌತಿಕ ತರಗತಿ ಗಳಷ್ಟು ಪರಿಣಾಮಕಾರಿಯಲ್ಲ ಎಂಬುದು ಸಾಬೀತಾಗಿದೆ. ಗ್ರಾಮಾಂತರ ಪ್ರದೇಶಗಳ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಓದು ಬರಹದಲ್ಲಿ ಹಿಂದುಳಿದಿದ್ದಾರೆ. ಆದ್ದರಿಂದ ಬೌದ್ಧಿಕ ತರಗತಿಗಳನ್ನು ನಿಲ್ಲಿಸುವ ಆತುರದ ನಿರ್ಧಾರ ತೆಗೆದುಕೊಳ್ಳುವುದು ಬೇಡ” ಎಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಎಲ್ಲಾ ಬಿಕ್ಕಟ್ಟುಗಳಿಂದ ಪಾಕಿಸ್ತಾನ್ ಉಳಿಸಿರುವೆ- ಇಮ್ರಾನ್ ಖಾನ್

0

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು 1 ಶತಕೋಟಿ ಮೊತ್ತದ ಬೇಲ್‌ಔಟ್ ಪ್ಯಾಕೇಜ್‌ಗೆ ಅಂತರರಾಷ್ಟ್ರೀಯ ಹಣಕಾಸು ನಿಧಿಯ ಅಗತ್ಯತೆಗಳನ್ನು ಪೂರೈಸಲು ವಿವಾದಾತ್ಮಕ ಕಾನೂನನ್ನು ಅಂಗೀಕರಿಸುವ ಸವಾಲನ್ನು ಎದುರಿಸುತ್ತಿದ್ದಾರೆ. ತಮ್ಮ ಸರ್ಕಾರದ ಅಡಿಯಲ್ಲಿ ದೇಶದ ಆರ್ಥಿಕ ಸ್ಥಿತಿ ಬೇರೆ ದೇಶಗಳಿಗೆ ಹೋಲಿಸಿದರೆ ಉತ್ತಮವಾಗಿದೆ ಎಂದು ಹೇಳಿದ್ದಾರೆ.
ಪ್ರಪಂಚಕ್ಕೆ ಹೋಲಿಸಿದರೆ ಪಾಕಿಸ್ತಾನ ಇನ್ನೂ ಅಗ್ಗದ ದೇಶಗಳಲ್ಲಿ ಒಂದಾಗಿದೆ. ಅವರು ನಮ್ಮನ್ನು ಅಸಮರ್ಥರು ಎಂದು ಕರೆಯುತ್ತಾರೆ, ಆದರೆ ನಮ್ಮ ಸರ್ಕಾರವು ಎಲ್ಲಾ ಬಿಕ್ಕಟ್ಟುಗಳಿಂದ ರಾಷ್ಟ್ರವನ್ನು ಉಳಿಸಿದೆ ಎಂಬುದು ಸತ್ಯ ಎಂದಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ರಾವಲ್ಪಿಂಡಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಆಯೋಜಿಸಿದ್ದ ಲಿವಿಂಗ್ ಇಂಟರ್‌ನ್ಯಾಶನಲ್ ಚೇಂಬರ್ ಶೃಂಗಸಭೆ 2022 ರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ತೈಲ ಬೆಲೆಗಳು ಇತರ ದೇಶಗಳಿಗಿಂತ ಕಡಿಮೆಯಾಗಿದೆ ಎಂದು ಹೇಳಿದರು. ವಿವಾದಾತ್ಮಕ ಹಣಕಾಸು ಮಸೂದೆಯು ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಸ್ವಾಯತ್ತತೆಯನ್ನು ಒಳಗೊಂಡಿತ್ತು. ಈ ವಿಷಯವನ್ನು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಚರ್ಚೆಗೆ ತೆಗೆದುಕೊಳ್ಳುತ್ತಿದ್ದಂತೆ, ವಿರೋಧ ಪಕ್ಷದ ನಾಯಕ ಮತ್ತು ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಜ್ ಷರೀಫ್ ಅವರು, ದೇಶವು ಒಂದು ಕಡೆ ಅಣುಶಕ್ತಿಯಾಗಲು ಮತ್ತು ಇನ್ನೊಂದು ಕಡೆ ಭಿಕ್ಷಾಟನೆಯ ಬಟ್ಟಲು ಹಿಡಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ದೇಶದ ಆರ್ಥಿಕತೆಯನ್ನು ಮುಳುಗಿಸಿದೆ ಎಂದು ಷರೀಫ್ ಹೇಳಿದರು. ವಿವಾದಾತ್ಮಕ ಹಣಕಾಸು ಮಸೂದೆಯನ್ನು ಹಿಂಪಡೆಯುವಂತೆ ಅವರು ಸರ್ಕಾರಕ್ಕೆ ಕರೆ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಒಮಿಕ್ರಾನ್ ಜಾತಕ ಬಿಚ್ಚಿಟ್ಟ ಬ್ರಿಟನ್ನಿನ ಬ್ರಿಸ್ಟಲ್ ವಿ.ವಿ.

0

ಬ್ರಿಟನ್ ನ ‘ಬ್ರಿಸ್ಟಲ್ ವಿಶ್ವವಿದ್ಯಾಲಯದ ಏರೋಸಾಲ್’ ಸಂಶೋಧನಾ ಕೇಂದ್ರದಲ್ಲಿ ಕೋವಿಡ್ 19, ಡೆಲ್ಟಾ, ಓಮಿಕ್ರಾನ್ ವೈರಾಣು ಗಾಳಿಯಲ್ಲಿ ಐದು ಸೆಕೆಂಡ್ ಇದ್ದರೆ ಸಾಕು ತನ್ನ 90% ಸಾಮರ್ಥ್ಯ ಕಳೆದುಕೊಳ್ಳುತ್ತದೆ. ಸೀನುವಿಕೆ, ಕೆಮ್ಮು, ಉಗುಳಿನಿಂದ ಗಾಳಿಗೆ ಚಿಮ್ಮಿದ ಕೋವಿಡ್ ವೈರಸ್ 5 ಸೆಕೆಂಡ್ ಒಳಗೆ ವ್ಯಕ್ತಿಯೊಬ್ಬರ ಹೊಕ್ಕಬೇಕು. ಇಲ್ಲವಾದಲ್ಲಿ ವೈರಾಣುವಿನ ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಸಂಶೋಧನೆಯಲ್ಲಿ ವರದಿಯಲ್ಲಿ ತಿಳಿಸಿದೆ.

ಡಬ್ಲ್ಯೂಹೆಚ್ಒ ನ ಆರೋಗ್ಯಾಧಿಕಾರಿ ಕ್ಯಾಥರೀನ್ ಸ್ಮಾಲ್ ವುಡ್ ಅವರು ಕೊರೋನಾ ರೂಪಾಂತರಿ ಓಮಿಕ್ರಾನ್, ಡೆಲ್ಟಾ ಸೋಂಕಿತರನ್ನು ಫ್ಲೂ ಪೀಡಿತರಂತೆ ಪರಿಗಣಿಸಿ ಸರಳ ಚಿಕಿತ್ಸೆ ನೀಡುವುದು ಕೆಲವೊಮ್ಮೆ ಅಪಾಯಕಾರಿ. ಪ್ರತಿ ಸೋಂಕಿತರಲ್ಲೂ ವಿವಿಧ ರೋಗ ಲಕ್ಷಣಗಳಿರುತ್ತವೆ. ವೈದ್ಯರು ಕೂಲಂಕಷ ಪರಿಶೀಲನೆ ನಡೆಸಬೇಕು. ಸಾಮಾನ್ಯ ಜ್ವರವೇ ಬೇರೆ, ಕೊರೋನಾದ ಜ್ವರ ಲಕ್ಷಣವೇ ಬೇರೆ” ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೇಶವಾಸಿಗಳ ಭದ್ರತೆಗೆ ನಾವು ಬದ್ಧರು – ಜ.ನರವಾಣೆ

0

ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ನಾಗಾಲ್ಯಾಂಡ್ ನಲ್ಲಿ ಜನರ ಮೇಲೆ ಗುಂಡು ಹಾರಿಸಿದ ಘಟನೆ ವಿಷಾದನೀಯ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುತ್ತಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಸೂಕ್ತ ಕ್ರಮದ ಭರವಸೆ ನೀಡಲಾಗಿದೆ ಎಂದು ಹೇಳಿದರು. ಕಾರ್ಯಾಚರಣೆಯ ಸಂದರ್ಭದಲ್ಲಿಯೂ ನಾವು ನಮ್ಮ ದೇಶವಾಸಿಗಳ ಭದ್ರತೆಗೆ ಬದ್ಧರಾಗಿರುತ್ತೇವೆ ಎಂದು ಸೇನಾ ಮುಖ್ಯಸ್ಥರು ಹೇಳಿದರು. ನಾವು ಕಾರ್ಯಾಚರಣೆಯ ಅನುಭವವನ್ನು ಒಳಗೊಂಡಿರುವ ಎಸ್ ಒಪಿ ಗಳನ್ನು ಹೊಂದಿದ್ದೇವೆ. ಅವುಗಳು ಸಮಯದ ಪರೀಕ್ಷೆಯಾಗಿ ನಿಂತಿವೆ. ನಮ್ಮ ಎಸ್ಒಪಿ ಗಳನ್ನು ಮತ್ತಷ್ಟು ಪರಿಷ್ಕರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಕಳೆದ ವರ್ಷ ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಕೆಲವು ನಾಗಾ ಯುವಕರು ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ. ಭದ್ರತಾ ಪಡೆಗಳಿಂದ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗಿದೆ. ವರದಿಯ ಪ್ರಕಾರ, ಸಿಟ್ಟಿಗೆದ್ದ ಗ್ರಾಮಸ್ಥರು ಭದ್ರತಾ ಪಡೆಗಳ ವಾಹನಗಳನ್ನು ಸುಟ್ಟುಹಾಕಿದರು ಮತ್ತು ಕೋಪಗೊಂಡ ಜನಸಮೂಹವನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಕೆಲವರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಒಮಿಕ್ರಾನ್ ಸೋಂಕು ಏರಿದಷ್ಟೇ ಇಳಿಯಲಿದೆ-ಅಲಿ ಮೊಕ್ದಾದ್

0

ವಿಜ್ಞಾನಿಗಳು ಕೋವಿಡ್ -19 ರ ಆತಂಕಕಾರಿ ಓಮಿಕ್ರಾನ್ ಅಲೆಯು ಬ್ರಿಟನ್‌ ಮತ್ತು ಯುಎಸ್ ನಲ್ಲಿ ಉತ್ತುಂಗಕ್ಕೇರಿರಬಹುದು ಎಂದು ತಿಳಿಸಿದ್ದಾರೆ.
ಈ ರೂಪಾಂತರವು ತುಂಬಾ ವ್ಯಾಪಕವಾಗಿ ಸಾಂಕ್ರಾಮಿಕವಾಗಿದೆ ಎಂದು ಸಾಬೀತಾಗಿದೆ. ಇದು ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ಕೇವಲ ಒಂದೂವರೆ ತಿಂಗಳ ನಂತರ ಈಗಾಗಲೇ ಸೋಂಕಿಗೆ ಒಳಗಾಗುವ ಜನರಿಲ್ಲದಿರಬಹುದು. ಅದು ಮೇಲಕ್ಕೆ ಹೋದಷ್ಟೇ ವೇಗವಾಗಿ ಕೆಳಗೆ ಬರಲಿದೆ ಎಂದು ಸಿಯಾಟಲ್‌ನ ವಾಷಿಂಗ್ಟನ್ ವಿಶ್ವವಿದ್ಯಾಲಯದ ಆರೋಗ್ಯ ಮೆಟ್ರಿಕ್ ವಿಜ್ಞಾನಗಳ ಅಧಿಕಾರಿ ಅಲಿ ಮೊಕ್ದಾದ್ ಹೇಳಿದ್ದಾರೆ.

ವಾಷಿಂಗ್ಟನ್ ವಿಶ್ವವಿದ್ಯಾನಿಲಯವು ತನ್ನದೇ ಆದ ಅತ್ಯಂತ ಪ್ರಭಾವಶಾಲಿ ಮಾದರಿಯ ಯೋಜನೆಗಳ ಪ್ರಕಾರ, ಯುಎಸ್ ನಲ್ಲಿ ದೈನಂದಿನ ವರದಿಯಾದ ಪ್ರಕರಣಗಳ ಸಂಖ್ಯೆಯು ಜನವರಿ 19 ರ ವೇಳೆಗೆ 1.2 ಮಿಲಿಯನ್‌ಗೆ ಏರುತ್ತದೆ ಮತ್ತು ನಂತರ ತೀವ್ರವಾಗಿ ಕುಸಿಯುತ್ತದೆ ಏಕೆಂದರೆ ಎಲ್ಲರೂ ಸೋಂಕಿಗೆ ಒಳಗಾಗಬಹುದು ಎಂದು ತಿಳಿದುಬಂದಿದೆ. ವಿಶ್ವವಿದ್ಯಾನಿಲಯದ ಸಂಕೀರ್ಣ ಲೆಕ್ಕಾಚಾರಗಳ ಪ್ರಕಾರ, ಯುಎಸ್ ನಲ್ಲಿನ ಹೊಸ ದೈನಂದಿನ ಸೋಂಕುಗಳ ಸಂಖ್ಯೆ ಉತ್ತುಂಗಕ್ಕೇರಿದೆ.
ಸರ್ಕಾರದ ಲೆಕ್ಕಚಾರದ ಪ್ರಕಾರ, ಜನವರಿ 6 ರಂದು ಒಮಿಕ್ರಾನ್ ಸೋಂಕಿತರ ಸಂಖ್ಯೆ 6 ಮಿಲಿಯನ್ ತಲುಪಿದೆ. ಬ್ರಿಟನ್‌ನಲ್ಲಿ, , ಹೊಸ ಕೋವಿಡ್ -19 ಪ್ರಕರಣಗಳು ಕಳೆದ ವಾರದಲ್ಲಿ ದಿನಕ್ಕೆ ಸುಮಾರು 140,000 ಕ್ಕೆ ಇಳಿದವು. ಈ ತಿಂಗಳ ಆರಂಭದಲ್ಲಿ ದಿನಕ್ಕೆ 200,000 ಕ್ಕಿಂತ ಹೆಚ್ಚಾಗಿದೆ. ಈ ವಾರ ಯುಕೆಯ ರಾಷ್ಟ್ರೀಯ ಆರೋಗ್ಯ ಸೇವೆಯ ಅಂಕಿಅಂಶಗಳ ಪ್ರಕಾರ, ವಯಸ್ಕರು ಕೊರೊನಾ ವೈರಸ್ ನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಲು ಪ್ರಾರಂಭಿಸಿವೆ‌. ಬ್ರಿಟನ್‌ನ ಮುಕ್ತ ವಿಶ್ವವಿದ್ಯಾಲಯದ ಅನ್ವಯಿಕ ಅಂಕಿಅಂಶಗಳ ನಿವೃತ್ತ ಪ್ರಾಧ್ಯಾಪಕ ಕೆವಿನ್ ಮೆಕ್‌ಕಾನ್ವೇ, ಪ್ರಕಾರ ಕೋವಿಡ್ -19 ಪ್ರಕರಣಗಳು ಇನ್ನೂ ಹೆಚ್ಚುತ್ತಿವೆ ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಹಣದುಬ್ಬರ ದರ ಶೇ 4 ಕ್ಕೆಮಿತಿ: ಆರ್. ಬಿ .ಐ .ಗುರಿ

0

ಡಿಸೆಂಬರ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ದರವು ಆರು ತಿಂಗಳ ಗರಿಷ್ಠ ಮಟ್ಟದ ಶೇಕಡ 5.59ಕ್ಕೆ ತಲುಪಿದೆ. ಆಹಾರ ವಸ್ತುಗಳು, ಇಂದಿನಿಂದ ಬೆಲೆ ಹೆಚ್ಚಳವಾಗಿದೆ ಇದಕ್ಕೆ ಒಂದು ಕಾರಣವಾಗಿದೆ.
ಕೇಂದ್ರ ಸರ್ಕಾರವು ಭಾರತೀಯ ರಿಸರ್ವ್ ಬ್ಯಾಂಕ್ ಗೆ ಚಿಲ್ಲರೆ ಹಣದುಬ್ಬರ ದರವನ್ನು ಶೇಕಡ 4ಕ್ಕೆ ಮಿತಿಗೊಳಿಸಬೇಕು ಎಂಬ ಗುರಿ ನೀಡಿದೆ. ಆದರೆ, ಚಿಲ್ಲರೆ ಹಣದುಬ್ಬರ ದರವು ಶೇ.4ಕ್ಕಿಂತ ಎರಡು ಅಂಶಗಳಷ್ಟು ಹೆಚ್ಚಾಗಲು ಅಥವಾ ಕಡಿಮೆ ಆಗಲು ಅವಕಾಶ ಇದೆ.
ಡಿಸೆಂಬರ್ ನಲ್ಲಿ ದಾಖಲಾಗಿರುವ ಚಿಲ್ಲರೆ ಹಣದುಬ್ಬರ ದರವು ಗರಿಷ್ಠ ಮಟ್ಟಕ್ಕೆ ಸನಿಹದಲ್ಲಿದೆ. ಹೀಗಿದ್ದರೂ, ಓಮಿಕ್ರಾನ್ ಸೃಷ್ಟಿಸಿರುವ ಅಸ್ಥಿರ ವಾತಾವರಣದ ಕಾರಣದಿಂದಾಗಿ ಆರ್ ಬಿಐ ಹಣದುಬ್ಬರ ನಿಯಂತ್ರಣಕ್ಕಿಂತಲೂ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುವ, ಹಣಕಾಸಿನ ನೀತಿಯಲ್ಲಿ ಬದಲಾವಣೆ ಮಾಡದೆ ಇರುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಆಹಾರ ಮತ್ತು ಪಾನೀಯದ ಜೊತೆಗೆ ಬಟ್ಟೆ ಹಾಗೂ ಪಾದರಕ್ಷೆಗಳ ಬೆಲೆಯಲ್ಲಿ ಕೂಡ ಡಿಸೆಂಬರ್ ನಲ್ಲಿ ಏರಿಕೆಯಾಗಿದೆ.
ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ದರವು ನವೆಂಬರ್ ನಲ್ಲಿ ಶೇ 4.91ರಷ್ಟು ಇತ್ತು. 2020ರ ಡಿಸೆಂಬರ್ ನಲ್ಲಿ ಇದು ಶೇ.4.59ರಷ್ಟು ಆಗಿತ್ತು. 2021ರ ಅಕ್ಟೋಬರ್ ನಂತರದಲ್ಲಿ ಚಿಲ್ಲರೆ ಹಣದುಬ್ಬರ ದರವು ಹೆಚ್ಚಳ ಆಗುತ್ತಿದೆ.
ಡಿಸೆಂಬರ್ ನಲ್ಲಿ ಆಹಾರ ಪದಾರ್ಥಗಳ ಹಣದುಬ್ಬರ ಪ್ರಮಾಣವು ಶೇ.4ಕ್ಕಿಂತ ಜಾಸ್ತಿ ಆಗಿದೆ. ನವೆಂಬರ್ ನಲ್ಲಿ ಇದು ಶೇ.1.9ರಷ್ಟು ಇತ್ತು.
ನವೆಂಬರ್ ತಿಂಗಳಲ್ಲಿ ದೇಶದಲ್ಲಿನ ಕೈಗಾರಿಕಾ ಉತ್ಪಾದನೆಯು 9 ತಿಂಗಳ ಕನಿಷ್ಠ ಮಟ್ಟವಾದ ಶೇ.1.4ಕ್ಕೆ ಇಳಿಕೆಯಾಗಿದೆ. ಅಕ್ಟೋಬರ್ ನಲ್ಲಿ ಇದು ಶೇ.3.2ರಷ್ಟು ಇತ್ತು ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪ್ರೊ ಕಬಡ್ಡಿ ಲೀಗ್ : ಸ್ಟೀಲರ್ಸ್-ಯೋಧಾ ಟೈ ಬುಲ್ಸ್ ಗೆ ಜಯಭೇರಿ

0

ಬೆಂಗಳೂರಿನ ವೈಟ್ ಫೀಲ್ಡ್ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲೀಗ್ ಪಂದ್ಯಾವಳಿಯು ಬುಧವಾರ 4 ತಂಡಗಳ ನಡುವೆ ಪಂದ್ಯ ನಡೆಯಿತು.

ಸ್ಟೀಲರ್ಸ್ ಮತ್ತು ಯೋಧಾ ತಂಡಗಳ ನಡುವೆ ಪಂದ್ಯ “ಡ್ರಾ”
ಹರಿಯಾಣ ಸ್ಟೀಲರ್ಸ್(36) ಮತ್ತು ಯು.ಪಿ ಯೋಧಾ(36) ತಂಡಗಳ ನಡುವೆ ನಡೆಯಿತು.ಎರಡು ತಂಡಗಳು ಸಮಬಲದ ಪೈಪೋಟಿ ನಡೆಸಿ ಪಂದ್ಯವನ್ನು ‘ಟೈ’ ಮಾಡಿಕೊಂಡಿವೆ.
ಅರ್ಧವಿರಾಮದ ಹೊತ್ತಿಗೆ ಯೋಧಾ ತಂಡವು 14-13 ರಿಂದ ಮುನ್ನಡೆ ಸಾಧಿಸಿತ್ತು.ವಿರಾಮದ ನಂತರ ವಿಕಾಸ್ ಚುರುಕಿನ ದಾಳಿ ನಡೆಸಿದರು.
ನಾಯಕನಿಗೆ ತಕ್ಕ ಆಟವಾಡಿದ ಹರಿಯಾಣ ತಂಡದ ಆಟಗಾರ ವಿಕಾಸ್ ಖಂಡೋಲಾ 17 ಅಂಕ ಮತ್ತು ಯೋಧಾ ತಂಡದ ಆಟಗಾರ ಸುರೀಂದರ್ ಗಿಲ್ 14 ಅಂಕ ಗಳಿಸಿ ಇಬ್ಬರು ಕೂಡ ತಂಡಗಳನ್ನು ಸಮಬಲದತ್ತ ಎಳೆದೊಯ್ದರು.

ಡೆಲ್ಲಿ ವಿರುದ್ಧ ಬುಲ್ಸ್ ಗೆ ರೋಚಕ ಜಯ
ಬೆಂಗಳೂರು ಬುಲ್ಸ್ (61) ಮತ್ತು ದಬಾಂಗ್ ಡೆಲ್ಲಿ (22) ತಂಡಗಳ ನಡುವೆ ಪಂದ್ಯ ನಡೆಯಿತು.ಬೆಂಗಳೂರು ಬುಲ್ಸ್ ತಂಡವು ದಬಾಂಗ್ ಡೆಲ್ಲಿ ತಂಡದ ವಿರುದ್ಧ ಬರೋಬ್ಬರಿ 39 ಅಂಕಗಳ ಅಂತರದಿಂದ ಜಯ ಸಾಧಿಸಿದೆ.
ಮೊದಲಾರ್ಧದಲ್ಲಿಯೇ ಬೆಂಗಳೂರು ತಂಡವು 27-11 ರಿಂದ ಮುನ್ನಡೆಯಲ್ಲಿತ್ತು.ನಂತರ ಅವಧಿಯಲ್ಲಿ ಬುಲ್ಸ್ ಪಡೆಯ ಆಟಕ್ಕೆ ಡೆಲ್ಲಿ ಮಂಕಾಯಿತು.
ಸೋಲಿಲ್ಲದ ಸರದಾರ ಎಂದೇ ಬೀಗಿ ಜಯ ಗಳಿಸುತ್ತಾ ಮುಂದೆ ಸಾಗುತ್ತಿದ್ದ ಡೆಲ್ಲಿ ತಂಡಕ್ಕೆ ಬೆಂಗಳೂರು ಬುಲ್ಸ್ ತಂಡದ ಆಪತ್ಭಾಂದವ ಪವನ್ ಶೆರಾವತ್ ಬಳಗವು ಸತತ ಎರಡನೇ ಸೋಲಿನ ರುಚಿ ತೋರಿಸಿ ತಂಡವನ್ನು ಬಗ್ಗು ಬಡಿಯಿತು.
ಇಲ್ಲಿಯವರೆಗೂ ನಡೆದ ಈ ಪಂದ್ಯಾವಳಿಯಲ್ಲಿ ಬೆಂಗಳೂರು ಬುಲ್ಸ್ ಗಳಿಸಿದ್ದ 61 ಅಂಕಗಳ ಈ ಟೂರ್ನಿಯಲ್ಲಿ ಯಾವುದೇ ತಂಡವು ಗಳಿಸಿದ ಗರಿಷ್ಠ ಅಂಕಗಳಾಗಿವೆ.

ಟಾಪ್ ಅಂಕಪಟ್ಟಿಯಲ್ಲಿರುವ 4 ತಂಡಗಳು:
೧. ಪಟ್ನಾ ಪೈರೇಟ್ಸ್ – 34
೨. ಬೆಂಗಳೂರು ಬುಲ್ಸ್ – 33
೩. ದಬಾಂಗ್ ಡೆಲ್ಲಿ – 32
೪. ತಮಿಳ್ ತಲೈವಾಸ್ – 27
ಇಂದು ನಡೆಯಲಿರುವ ಪಂದ್ಯಗಳು:
೧. ಬೆಂಗಾಲ್ ವಾರಿಯರ್ಸ್ ಮತ್ತು ತಮಿಳ್ ತಲೈವಾಸ್
ಸಮಯ:7.30
೨. ಯು.ಮುಂಬಾ ಮತ್ತು ಪುಣೇರಿ ಪಲ್ಟನ್
ಸಮಯ:8.30

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕನ್ನಡಕ್ಕೆ ಮಲತಾಯಿ ಧೋರಣೆ ತೋರಿಸಬೇಡಿ – ಡಾ.ಮನು ಬಳಿಗಾರ್

0

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯವನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪಗಳು ಆಗಿಂದಾಗ್ಗೆ ಕೇಳಿಬರುತ್ತಿವೆ. ಈಗ ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರವು 11 ವೈದ್ಯಕೀಯ ಕಾಲೇಜುಗಳು ಮತ್ತು ಒಂದು ಅಭಿಜಾತ ತಮಿಳು ಭಾಷಾ ಸಂಸ್ಥೆಯನ್ನು ತನ್ನದೇ ಖರ್ಚಿನಲ್ಲಿ ಸ್ಥಾಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇವುಗಳನ್ನು ಗುರುವಾರ ಉದ್ಘಾಟಿಸಲಿದ್ದಾರೆ.

ಈ ವಿಷಯದ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ.ಮನು ಬಳಿಗಾರ್ ಅವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕೇಂದ್ರೀಯ ಭಾಷಾ ಸಂಸ್ಥಾನದ ಉನ್ನತ ಕನ್ನಡ ಅಧ್ಯಯನ ಸಂಸ್ಥೆಗೆ ಸ್ವಾಯತ್ತ ಸ್ಥಾನಮಾನ ಕೊಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅನೇಕ ಬಾರಿ ಆಗ್ರಹಿಸಿದ್ದೇನೆ. ಆದರೆ ಕೇಂದ್ರ ಸರ್ಕಾರ ಗಮನ ಕೊಡಲಿಲ್ಲ. ಈಗಲಾದರೂ ಕನ್ನಡ ಅಧ್ಯಯನ ಸಂಸ್ಥೆಗೆ ವಾರ್ಷಿಕ 10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಬೇಕು.

ಕರ್ನಾಟಕದಿಂದ ಲೋಕಸಭೆಗೆ 25 ಮಂದಿ ಸಂಸದರನ್ನು ಆರಿಸಿ ಕಳಿಸಲಾಗಿದೆ. ತಮಿಳುನಾಡಿನಲ್ಲಿ ಬಿಜೆಪಿಯಿಂದ ಒಬ್ಬರನ್ನು ಮಾತ್ರ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಆದರೆ ತಮಿಳುನಾಡಿನ ವೈದ್ಯ ಕ್ಷೇತ್ರ ಮತ್ತು ಭಾಷಾ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ನೆರವು ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿರುವುದು ಕನ್ನಡಿಗರ ಕಣ್ಣುಕುಕ್ಕುವಂತಾಗಿದೆ.

“25 ಜನ ಬಿಜೆಪಿ ಸಂಸದರನ್ನು ಆರಿಸಿ ಕಳಿಸಿರುವ ಕರ್ನಾಟಕದ ಹಿತಕ್ಕಾಗಿ ಕೇಂದ್ರಸರ್ಕಾರ ಎದ್ದು ಕಾಣುವಂಥದ್ದು ಏನನ್ನು ಮಾಡಿಲ್ಲ. ಲೋಕಸಭೆಗೆ ಆಯ್ಕೆಯಾಗಿ ಹೋದವರು ಈ ಬಗ್ಗೆ ಧ್ವನಿ ಎತ್ತದೆ ಇರುವುದು ವಿಷಾದನೀಯ” ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪಾದಯಾತ್ರೆ ಸದ್ಯಕ್ಕೆ ಸ್ಥಗಿತ : ಡಿ.ಕೆ.ಶಿವಕುಮಾರ್

0

ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರೋಧದ ನಡುವೆಯೂ ರಾಜ್ಯ ಕಾಂಗ್ರೆಸ್ ಪಕ್ಷವು ಮೇಕೆದಾಟು ಪಾದಯಾತ್ರೆಯನ್ನು ಕೈಗೊಂಡಿತ್ತು. ಇದೇ ಸನ್ನಿವೇಶದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕೋವಿಡ್ ಹಿನ್ನೆಲೆಯಲ್ಲಿ ಕೋವಿಡ್ ನಿರೋಧಕ ಕ್ರಮಗಳ ಬಗ್ಗೆ ಮಾಹಿತಿಯನ್ನು ಕೇಳಿತ್ತು. ಎಚ್ಚೆತ್ತುಕೊಂಡ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಪಾದಯಾತ್ರೆ ನಿಲ್ಲಿಸಲು ಆದೇಶ ಜಾರಿ ಮಾಡಿತ್ತು.

ಕಾಂಗ್ರೆಸ್ ಪಕ್ಷವು ಇಂದು ಸಭೆ ಸೇರಿ ಸದ್ಯಕ್ಕೆ ಪಾದಯಾತ್ರೆ ತಾತ್ಕಾಲಿಕ ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಈ ವಿಷಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪಾದಯಾತ್ರೆ ಕುರಿತಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ರಾಜ್ಯದ ಬಹುದಿನದ ಬೇಡಿಕೆಯಾದ ಮೇಕೆದಾಟು ಯೋಜನೆ ನಿರ್ಮಾಣ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆಯಲು ತಾವು ನೀರಿಗಾಗಿ ನಡಿಗೆ ಪಾದಯಾತ್ರೆ ಕೈಗೊಂಡಿದ್ದೀರಿ. ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಂಪೂರ್ಣ ಬಹುಮತವಿದೆ. ಆದರೆ ಮನುಕುಲಕ್ಕೆ ಗಂಡಾಂತರವಾಗಿ ಕಾಡುತ್ತಿರುವ ಕೋವಿಡ್ ವೈರಸ್ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಾ ವಿವಿಧ ರೀತಿಯಲ್ಲಿ ರೂಪಾಂತರಗೊಂಡು ನಮ್ಮನ್ನು ಕಾಡುತ್ತಿದೆ. ಇದರ ಬೇನೆಯಿಂದ ಇಡೀ ಪ್ರಪಂಚ ನಲುಗಿ ಹೋಗಿದೆ. ಹಲವು ಸಾವು-ನೋವುಗಳು ಸಂಭವಿಸಿ ಅನಾಹುತ ಸೃಷ್ಟಿಸಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಎಷ್ಟೇ ಪ್ರಯತ್ನಿಸಿದರೂ ಇನ್ನು ತಹಬದಿಗೆ ಬಂದಿಲ್ಲ.

ಬೆಂಗಳೂರು ವಿಶ್ವದ ನಗರಗಳ ಪಟ್ಟಿಯಲ್ಲಿ ಸ್ಥಾನಗಳಿಸಿದೆ. ಪ್ರಪಂಚದ ನಾನಾ ಮೂಲೆಗಳಿಂದ ಪ್ರತಿನಿತ್ಯ ಜನರು ಬಂದು ಹೋಗುತ್ತಿದ್ದಾರೆ. ಇದರ ಮಧ್ಯೆ ಕೊರೋನಾ ವೈರಸ್ ವೇಗವಾಗಿ ಹಬ್ಬುತ್ತಿದೆ. ಇಂತಹ ಸಂದರ್ಭದಲ್ಲಿ ತಾವು ಕೈಗೊಂಡಿರುವ ಪಾದಯಾತ್ರೆ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಅಡ್ಡಿ ಪಡಿಸುವ ಸಾಧ್ಯತೆ ಇದೆ ಎಂದು ಎಸ್.ಎಂ.ಕೃಷ್ಣಾ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾದಯಾತ್ರೆ ತಾತ್ಕಾಲಿಕ ಸ್ಥಗಿತಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ.

“ಕೋವಿಡ್ ನಿಯಮಾವಳಿಗಳು ಸಡಿಲಗೊಳಿಸಿದ ನಂತರ ಪಾದಯಾತ್ರೆಯನ್ನು ಆರಂಭಿಸುತ್ತೇವೆ. ಈ ಪಾದಯಾತ್ರೆಗೆ ಮುಕ್ತಾಯ ಅನ್ನೋದಿಲ್ಲ. ಜನರ ಹಿತದೃಷ್ಟಿಯಿಂದ ಪಾದಯಾತ್ರೆಯನ್ನು ಸ್ಥಗಿತಗೊಳಿಸಿದ್ದೇವೆ. ನಾವು ರಾಮನಗರ ದಿಂದಲೇ ಮತ್ತೆ ಪಾದಯಾತ್ರೆಯ ಆರಂಭಿಸುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಬಾರದು.ಬಿಜೆಪಿ ಅವರು ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದರೂ, ಕೋಮುಭಾವನೆ ಪ್ರಚೋದಿಸುವ ಭಾಷಣ ಮಾಡಿದ್ದರೂ, ಬಿಜೆಪಿಯವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೇವಲ ಕಾಂಗ್ರೆಸ್ ನವರ ವಿರುದ್ಧ ಮಾತ್ರ ಏಕೆ ಕೇಸ್ ಹಾಕ್ತೀರಿ” ಎಂದು ಸರ್ಕಾರವನ್ನ ಡಿ.ಕೆ.ಶಿವಕುಮಾರ್ ಅವರು ಮಾತಿನಿಂದ ಚುಚ್ಚಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಹ ಪಾದಯಾತ್ರೆ ನಿಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಫೋನ್ ಕರೆ ಮೂಲಕ ತಿಳಿಸಿದ್ದು, ರಾಜ್ಯದ ಹಲವು ನಾಯಕರು ಪಾದಯಾತ್ರೆ ನಿಲ್ಲಿಸೋಣ ಕೋವಿಡ್ ಪರಿಸ್ಥಿತಿ ಬಳಿಕ ಮುಂದುವರೆಸೋಣ ಎಂದು ಸಭೆಯಲ್ಲಿ ಒತ್ತಾಯಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೊಟಕುಗೊಳಿಸಲು ತೀರ್ಮಾನ ಕೈಗೊಂಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message ‘Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪರಿಸ್ಥಿತಿ ನೋಡಿ ಲಾಕ್ ಡೌನ್ ಜಾರಿಗೆ- ಕೆ.ಎಸ್.ಈಶ್ವರಪ್ಪ

0

ಸದ್ಯಕ್ಕೆ ಲಾಕ್ ಡೌನ್ ಜಾರಿಮಾಡುವ ಪರಿಸ್ಥಿತಿಯಿಲ್ಲ.ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಪರಿಸ್ಥಿತಿ ಕೈಮೀರಿದರೆ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪನವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 60 ಮಕ್ಕಳಿಗೆ ಕೊರೊನಾ ಬಂದಿದೆ ಎಂಬ ಒಂದೇ ಕಾರಣಕ್ಕೆ ಎಲ್ಲ ಶಾಲೆಗಳನ್ನು ಬಂದ್ ಮಾಡುವುದು ಸರಿಯಲ್ಲ. ಈ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪರಿಸ್ಥಿತಿ ಅವಲೋಕಿಸಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಗ್ರಾಮಪಂಚಾಯತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು. ರಾಜ್ಯದ ಸುಮಾರು 6 ಸಾವಿರ ಗ್ರಾಮಪಂಚಾಯಿತಿಗಳನ್ನು ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದರು.
ಈ ಟಾಸ್ಕ್ ಫೋರ್ಸ್ ನಲ್ಲಿ ಗ್ರಾಮ ಪಂಚಾಯಿತಿ ಮತ್ತು ಇತರೆ ಸರಕಾರಿ ಅಧಿಕಾರಿಗಳು ಇರಲಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಕೋವಿಡ್ ಪರಿಸ್ಥಿತಿ, ಯಾರಿಗೆ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಬೇಕು, ಯಾರನ್ನು ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂಬುದನ್ನು ಆರೋಗ್ಯ ಅಧಿಕಾರಿಗಳ ಜೊತೆ ಚರ್ಚಿಸಿ ಸಮಿತಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.