Tuesday, August 11, 2026
Tuesday, August 11, 2026
Home Blog Page 205

ಪೊಲೀಸ್ ಸಿಬ್ಬಂದಿಗಳ ಕುಂದುಕೊರತೆ ಆಲಿಸಿದ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್.

0

01-02-2026 ರಂದು ಬೆಳಿಗ್ಗೆ, ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಡಿಎಆರ್ ಘಟಕದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್
ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು.

ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿ, ನಂತರ ಸದರಿಯವರಿಗೆ ಉತ್ತಮ ಕರ್ತವ್ಯ ನಿರ್ವಹಿಸುವ ಸಂಬಂಧ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

Shivamogga District Health and Family Welfare Department ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಕರೆ- ಪ್ರಕಟಣೆ

0

Shivamogga District Health and Family Welfare Department ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು, ತುಮರಿ, ಆವಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ & ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಫೆ. 06 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.

ಕ್ರಾಂತಿಕಾರಿ ಕಾಯಕಯೋಗಿ ಶರಣ ಮಡಿವಾಳ ಮಾಚಿದೇವ- ಗುಡ್ಡಪ್ಪ ಜಡೆ

0

ಜಾತಿ, ಮತ, ಕಾಯಕದಿಂದ ಯಾರೂ ಮೇಲಲ್ಲ, ಯಾರೂ ಕೀಳಲ್ಲ ಎಂಬ ಸಮ ಸಮಾಜದ ಪರಿಕಲ್ಪನೆಯನ್ನು ಜಗತ್ತಿಗೆ ಸಾರಿದ 12ನೇ ಶತಮಾನದ ಶರಣರು ಕ್ರಾಂತಿಪುರುಷರು. ಮಹಾಮನೆಯ ಕ್ರಾಂತಿಕಾರಿ, ಕಾಯಕ ಯೋಗಿ, ವೀರವ್ರತ ಪರಿಪಾಲಕನೆಂದು ಪ್ರಶಂಸೆ ಪಡೆದಿದ್ದವರು ಮಡಿವಾಳ ಮಾಚಿದೇವರು ಎಂದು ಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷ ಗುಡ್ಡಪ್ಪ ಜಡೆ ಹೇಳಿದರು.

ಸೊರಬ ಪಟ್ಟಣದ ದಂಡಾವತಿ ಬ್ಲಾಕ್‌ನ ಮಡಿವಾಳರ ಕೇರಿಯಲ್ಲಿ ಮಡಿವಾಳ ಮಾಚಿದೇವ ವೃತ್ತ ಉದ್ಘಾಟಿಸಿ ಅವರು ಮಾತನಾಡಿದರು.

ವಿಶಾಲ ಮನೋಧರ್ಮ ಮಡಿವಾಳ ಸಮುದಾಯದ ಜನರಲ್ಲಿದೆ. ಶಿವಶರಣ ಮಾಚಿದೇವರ ಮಾರ್ಗದರ್ಶನದಿಂದ ಮುನ್ನಡೆಯುತ್ತಿರುವುದೇ ಇದಕ್ಕೆ ಕಾರಣ. ಮಾಚಿದೇವ ಸಮಾಜದ ಕೊಳಕು ತೊಳೆದು ಹಾಕಿದವರು. ಕಾಯಕದ ಆಧಾರದಲ್ಲಿ ವಿಭಜನೆ ಆಗುತ್ತಿರುವ ಸಮಾಜಕ್ಕೆ ಮಾಚಿದೇವರ ಸಂದೇಶ ಆದರ್ಶವಾಗಬೇಕಾದ ಅಗತ್ಯವಿದೆ ಎಂದರು.

ಮಡಿವಾಳ ಸಮಾಜದ ‌ಯುವ ಮುಖಂಡ ಹಾಗೂ ಮಡಿವಾಳರ‌ ಕೇರಿ ಅಧ್ಯಕ್ಷ ಎಂ.ಪಿ. ರಾಘವೇಂದ್ರ ಮಾತನಾಡಿ, ಮಡಿವಾಳರ ಕೇರಿ ಅಭಿವೃದ್ಧಿ ಆಗಬೇಕಿದೆ. ಈಗಾಗಲೆ ಹಲವು ಬಾರಿ ಈ ವೃತ್ತಕ್ಕೆ ಮಡಿವಾಳ ಮಾಚಿದೇವರ ಹೆಸರನ್ನು ನಾಮಕರಣ ಮಾಡುವಂತೆ ಮನವಿಯನ್ನು ಸಲ್ಲಿಸಲಾಗಿದೆ. ಸ್ಥಳೀಯ ಪ್ರತಿನಿಧಿಗಳು ಇದಕ್ಕೆ ಸಹಕಾರವನ್ನು ನೀಡಿದ್ದಾರೆ. ಅವರ ಹೆಸರನ್ನು ಉಳಿಸುವ ಜೊತೆಗೆ ಅವರ ಆದರ್ಶ ಮತ್ತು ಮಾರ್ಗದರ್ಶನ ಮುಂದಿನ ಸಮಾಜಕ್ಕೆ ತಿಳಿಯಬೇಕಿದೆ ಎಂದರು.

ಈ‌ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಎಂ.ಡಿ. ಉಮೇಶ್, ಪ್ರಭು ಮೇಸ್ತ್ರಿ, ಸಮಾಜ ಸೇವಕ ರಾಜು ಹಿರಿಯಾವಲಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಧ್ಯ ಪ್ರಾಂತ್ಯ ಮಾಜಿ ಅಧ್ಯಕ್ಷ ಸಿ.ಪಿ. ಈರೇಶ್ ಗೌಡ, ಯುವಾ ಬ್ರಿಗೇಡ್ ಜಿಲ್ಲಾ ಸಂಚಾಲಕ ಮಹೇಶ್ ಖಾರ್ವಿ ಸೇರಿದಂತೆ ಇತರರಿದ್ದರು.

Subbaiah Medical College ವೈದ್ಯರು ಸದೃಢ ಆರೋಗ್ಯ ಕಾಪಾಡಿಕೊಂಡರೆ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯ- ಡಾ.ಸಿ.ಆರ್.ಚಂದ್ರಶೇಖರ್

0

Subbaiah Medical College ವೈದ್ಯ ವೃತ್ತಿಯಲ್ಲಿ ಇರುವವರು ಸಹ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆ ಸಮಾನವಾಗಿ ಗಮನ ಹರಿಸುವುದು ಅವಶ್ಯಕ ಎಂದು ಪದ್ಮಶ್ರೀ ಪುರಸ್ಕೃತ ಮನೋವೈದ್ಯ ಡಾ. ಸಿ.ಆರ್.ಚಂದ್ರಶೇಖರ್ ಹೇಳಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಘಟಕದ ವತಿಯಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಆರೋಗ್ಯ ನಿರ್ವಹಣೆ ಕುರಿತ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ವೈದ್ಯರು ಸದೃಢ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯ. ಒತ್ತಡ ನಿರ್ವಹಣೆ, ಜೀವನಶೈಲಿ ಬದಲಾವಣೆಗಳು ಮತ್ತು ಸಮತೋಲನ ಜೀವನ ನಡೆಸಬೇಕು ಎಂದು ಉಪಯುಕ್ತ ಸಲಹೆಗಳನ್ನು ನೀಡಿದರು.

ವೈದ್ಯರು ಸೋಂಕು ರೋಗಗಳು, ಪೋಷಕಾಂಶ ಕೊರತೆ, ಒತ್ತಡ, ಖಿನ್ನತೆ, ಆತಂಕ, ಹೃದಯ ಹಾಗೂ ರಕ್ತನಾಳ ಸಂಬಂಧಿತ ಕಾಯಿಲೆಗಳು, ಸ್ಟ್ರೋಕ್, ಮಧುಮೇಹ, ಕ್ಯಾನ್ಸರ್, ವ್ಯಸನಗಳು ಮುಂತಾದ ಅನೇಕ ಸಮಸ್ಯೆಗಳಿಗೆ ಹೆಚ್ಚು ಒಳಗಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಮಾತೃದೇವೋ ಭವ, ಪಿತೃದೇವೋ ಭವ, ಗುರುದೇವೋ ಭವ ಎಂದು ಹೇಳುವಾಗ ವೈದ್ಯೋ ನಾರಾಯಣ ಹರಿ” ಎಂಬ ಉನ್ನತ ಸ್ಥಾನಮಾನ ಸಮಾಜದಲ್ಲಿ ವೈದ್ಯರಿಗೆ ಮಾತ್ರ ಇದೆ. ಪ್ರತಿಯೊಬ್ಬರೂ ಸೇವಾ ಮನೋಭಾವ ವೃದ್ಧಿಸಿಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯಕೀಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ವೈದ್ಯರಾಗಿ ಎದುರಿಸಬೇಕಾದ ವೃತ್ತಿಪರ ಹಾಗೂ ವೈಯಕ್ತಿಕ ಸವಾಲುಗಳು ಮತ್ತು ಅವಕ್ಕೆ ಬೇಕಾದ ಮಾನಸಿಕ-ದೈಹಿಕ ಸಿದ್ಧತೆ ಕುರಿತು ವಿವರಿಸಿದರು.

Subbaiah Medical College ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಘಟಕದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಡಾ. ವಿನಾಯಕ ಜಿ, ಡಾ. ಸಿದ್ಧಲಿಂಗಪ್ಪ, ಡಾ. ಬಿ.ಎಸ್. ಸುರೇಶ್, ಡಾ. ವಿನಯಾ ಶ್ರೀನಿವಾಸ್, ಡಾ. ಕೌಸ್ತುಭ ಅರುಣ್, ಡಾ. ವಿ.ಎಲ್.ಎಸ್. ಕುಮಾರ್, ಡಾ. ಶೀಲಾ ವಿಜಯ್, ಡಾ. ವಿಜಯಾನಂದ್, ಡಾ. ಪದ್ಮೇಗೌಡ, ಶ್ರೇಯಸ್ ಸೇರಿದಂತೆ ಹಲವು ಗಣ್ಯ ವೈದ್ಯರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.

ಎಟಿಎನ್ ಸಿಸಿ ಹಿರಿಯ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿದ್ದು ಸಮಾಜ ಸೇವೆ ಮಾಡುತ್ತಿದ್ದಾರೆ- ದೇವಕುಮಾರ್.

0

ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿದ ಸಂಸ್ಥೆ ಎಟಿಎನ್‌ಸಿಸಿ ಎಂದು ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ಉಪಾಧ್ಯಕ್ಷ ದೇವಕುಮಾರ್ ಹೇಳಿದರು.

ಎಟಿಎನ್‌ಸಿಸಿ ಹಿರಿಯ ವಿದ್ಯಾರ್ಥಿ ಬಳಗದ ವಾಣಿಜ್ಯ ಕಲರವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಗಪ್ಪ ಶೆಟ್ಟಿ ಮತ್ತು ಅವರ ಸ್ನೇಹಿತರು ಸ್ಥಾಪಿಸಿದ ರಾಜ್ಯದ ಪ್ರಥಮ ವಾಣಿಜ್ಯ ಕಾಲೇಜಿನಲ್ಲಿ ಓದಿದ ಹಲವಾರು ವಿದ್ಯಾರ್ಥಿಗಳು ಸರ್ಕಾರದಲ್ಲಿ ಅತ್ಯುನ್ನತ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಾಜಕೀಯವಾಗಿ ಹಲವರು ಉನ್ನತ ಸ್ಥಾನ ಹೊಂದಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಚಲನಚಿತ್ರ ನಿರ್ಮಾಪಕ ರಮೇಶ್ ಅವರು ತಮ್ಮ ಜೀವನ ರೂಪಿಸಿದ ಕಾಲೇಜಿಗೆ ಋಣಿಯಾಗಿರುವುದಾಗಿ ತಿಳಿಸಿದರು. ಒಂದೇ ಕಾಲೇಜಿನಲ್ಲಿ ಓದಿದ ಅತ್ಯಂತ ಹಿರಿಯರು ಹಾಗೂ ಕಿರಿಯರು ಸೇರಿ ತಮ್ಮ ಪರಿಚಯ ಮಾಡಿಕೊಂಡು ತಾವು ತೊಡಗಿಕೊಂಡಿರುವ ಉದ್ಯೋಗದ ಮಾಹಿತಿ ನೀಡಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಿರಿಯ ವಿದ್ಯಾರ್ಥಿ ಬಳಗದ ಸದಸ್ಯರು, ರಾಜ್ಯದ ಪ್ರಥಮ ವಾಣಿಜ್ಯ ಕಾಲೇಜು ಪ್ರಾರಂಭದ ದಿನದಿಂದ ಇಂದಿನವರೆವಿಗೂ ಓದಿದ ಹಾಗೂ ಹಲವಾರು ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತ ಬೆಂಗಳೂರಿನಲ್ಲಿ ನೆಲೆಸಿರುವ ಎಲ್ಲ ಹಿರಿಯ ವಿದ್ಯಾರ್ಥಿಗಳು ರಾಜ್ಯ ನೌಕರರ ಸಂಘದ ಭವನದಲ್ಲಿ ಒಂದೆಡೆ ಸೇರಿದ್ದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಎಸ್.ವಾಗೇಶ್ ಮಾತನಾಡಿ, ರಾಜಧಾನಿಯಲ್ಲಿ ಉದ್ಯೋಗದಾತರಾಗಿ ಇರುವವರು ಅವಶ್ಯಕ ಉದ್ಯೋಗಿಗಳನ್ನು ಹೊಂದಲು ತಾವು ಓದಿದ ಇಂದಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದರೆ ನಾವು ಇಂದು ಮಾಡಿರುವ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ. ಓದಿದ ಕಾಲೇಜು, ಹಳೆಯ ಸ್ನೇಹಿತರು ಭೇಟಿಯಾದಾಗ ಸಿಗುವ ಸಂತೋಷಕ್ಕೆ ಪಾರವೇ ಇಲ್ಲ. ಅದನ್ನು ಓದಗಿಸಲು ಚಿಕ್ಕ ಪ್ರಯತ್ನ ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆಯ ಕೊಡುಗೆ, ಇತಿಹಾಸ, ರಾಷ್ಟ್ರ ನಾಯಕರನ್ನು ನೀಡಿರುವ ಬಗ್ಗೆ ನಿರೂಪಕ ಸಮನ್ವಯ ಕಾಶಿ ವಿವರಿಸಿದರು. 1986ನೇ ಸಾಲಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸ್ಮಿತಾ ರೂಪೇಶ್ ಸ್ವಾಗತಿಸಿದರು. ಜಿ.ವಿಜಯಕುಮಾರ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಶಿವಾನಂದರಾವ್ ಸಭಿಕರಿಗೆ ವಿಶೇಷ ಸ್ವರ್ಧೆ ಏರ್ಪಡಿಸಿ ಬಹುಮಾನ ನೀಡಿದರು.

ಉಪಾಧ್ಯಕ್ಷ ಕೇಶವಮೂರ್ತಿ ವಂದಿಸಿದರು. ದಿಲೀಪ್ ನಾಡಿಗ್, ನವೀನ್, ಅಂಬೋರೆ, ಸುರೇಶ್, ಮಹೇಶ್, ಕುಮಾರ್ ಗೌಡ, ಶ್ರೀಕಾಂತ್ ಕಾಮತ್, ಶಂಕರ್ ಇತರರಿದ್ದರು.

DC Shivamogga ಫೆಬ್ರವರಿ 10 ರಂದು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಲ್ಲಿ ಜಂತು ನಿರೋಧಕ ಮಾತ್ರೆ ಉಚಿತ ವಿತರಣೆ- ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಶಿವಮೊಗ್ಗ ಜಿಲ್ಲೆಯಾದ್ಯಂತ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡುವ ಮೂಲಕ ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಈ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಂತು ಹುಳು ಇರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಅದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ಎಲ್ಲ 1 ರಿಂದ 19 ವರ್ಷದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.
ಫೆ.10 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೊಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು.
ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಜಾಗೃತಿ ಚಟುವಟಿಕೆಗಳ ಮೂಲಕ ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಶಿಕ್ಷಕರು, ಸಿಡಿಪಿಓ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪೋಷಕರು ಈ ಕಾರ್ಯಕ್ರಮ ಶೇ.100 ಯಶಸ್ವಿಯಾಗಲು ಸಹಕರಿಸಬೇಕು ಎಂದರು.
DC Shivamogga ಆರ್‌ಸಿಹೆಚ್‌ಓ ಡಾ.ಓ.ಮಲ್ಲಪ್ಪ ಮಾತನಾಡಿ, ಮಣ್ಣಿನ ಮೂಲಕ ಹರಡುವ ಜಂತುಹುಳು ಸೋಂಕು ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತದೆ. ನಮ್ಮ ದೇಶದಲ್ಲಿ 61 ಕೋಟಿ ಸೋಂಕಿತರಿದ್ದು, ರಾಜ್ಯದಲ್ಲಿ 2015 ರಲ್ಲಿ ನಡೆಸಿದ ಬೇಸ್‌ಲೈನ್ ಸಮೀಕ್ಷೆ ಪ್ರಕಾರ 1 ರಿಂದ 19 ವರ್ಷ ವಯಸ್ಸಿನ ಸುಮಾರು ಶೇ.49 ಮಕ್ಕಳು ಪೀಡಿತರಾಗುವ ಸಾಧ್ಯತೆ ಇದೆ. ಜಂತುಹುಳು ಬಾಧೆಯಿಂದಾಗಿ ವ್ಯಕ್ತಿಯ ದೈಹಿಕ ಮತ್ತು ಬೌದ್ದಿಕ ಸಾಮರ್ಥ್ಯ ಕುಗ್ಗಿ ಆರ್ಥಿಕ ಪ್ರಗತಿಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಎಲ್ಲ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಉಗುರುಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಬಯಲಿನಲ್ಲಿ ಮಲ ವಿಸರ್ಜನೆ ಮಾಡಬಾರದು. ಬರಿಗಾಲಿನಲ್ಲಿ ನಡೆಯದೇ ಚಪ್ಪಲಿಗಳನ್ನು ಧರಿಸಬೇಕು ಎಂದು ತಿಳಿಸಿದರು.
ಕಳೆದ ಸಾಲಿನಲ್ಲಿ 4,70,316 ಮಕ್ಕಳಿಗೆ ಮಾತ್ರೆ ನೀಡುವ ಗುರಿ ನೀಡಲಾಗಿತ್ತು. ಶೇ.98 ಪ್ರಗತಿ ಸಾಧಿಸಲಾಗಿತ್ತು. ಇದೀಗ ಮಾತ್ರೆಗಳ ಸರಬರಾಜು ಆಗಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಎಲ್ಲ ಅರ್ಹ ಮಕ್ಕಳಿಗೆ ಮಾತ್ರೆಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಹೆಚ್‌ಓ ಡಾ. ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಡಿಪಿಐ ಮಂಜುನಾಥ್, ಇತರೆ ವೈದ್ಯಾಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Podar International School ಜಾನಪದ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿವಮೊಗ್ಗದ ಕು.ಹೊನಲು

0

Podar International School ಶಿವಮೊಗ್ಗ ನಗರದ ಪೋದಾರ್ ಇಂಟರ್ನ್ಯಾಷನಲ್ ಶಾಲೆಯಲ್ಲಿ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕು.ಹೊನಲು.ಎಸ್ ಇತ್ತೀಚೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸಿದ ಜಿಲ್ಲಾ ಮಟ್ಟ ಮತ್ತು ವಿಭಾಗ ಮಟ್ಟದ ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿಗಳಾದ ಡಾ.ಶೈಲಜಾ ಎ.ಸಿ ಮತ್ತು ಶ್ರೀ ಯುತ ಸುಧಾಕರ್ ರವರ ಪುತ್ರಿಯಾಗಿರುವ ಈಕೆ ಶಿಕ್ಷಣದ ಜೊತೆಗೆ ಸುಗಮ ಸಂಗೀತ, ಭರತನಾಟ್ಯ, ಶಾಸ್ತ್ರೀಯ ಸಂಗೀತ, ಯೋಗಾಸನ, ಕ್ರೀಡೆ, ಜಾನಪದ ನೃತ್ಯ, ಪ್ರವಾಸ, ಚಿತ್ರ ಕಲೆ ಹೀಗೆ ಹಲವು ಹವ್ಯಾಸಗಳನ್ನು ರೂಢಿಸಿಕೊಂಡಿದ್ದಾಳೆ. 3 ವರ್ಷ ವಯಸ್ಸಿನಿಂದಲೇ ನವರಸ ಅಭಿನಯ, ಭಾವಗೀತೆ, ಶ್ಲೋಕ, ಮಂಕುತಿಮ್ಮನ ಕಗ್ಗ, ಜಾನಪದ ಗೀತೆಗಳನ್ನು ಹಾಡುವ ಮೂಲಕ ಗಮನಸೆಳೆದ್ದಿದ್ದಾಳೆ.

ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಯಲ್ಲಿ ಆಸಕ್ತಿ ಬೆಳಸಿಕೊಂಡ ಪ್ರತಿಭೆ ಮೊದಲು ಶಿವಮೊಗ್ಗ ರಂಗಾಯಣದ ಕಲಾವಿದರೊಂದಿಗೆ ರಂಗ ಗೀತೆಗಳ ಗಾಯನ ಕಾರ್ಯಕ್ರಮ, ಮಕ್ಕಳ ಬೇಸಿಗೆ ಶಿಬಿರ, ರಿಯಾಲಿಟಿ ಶೋ ಮತ್ತು ಉಸಿರಾ ನಾಟಕಗಳಲ್ಲಿ ನಟಿಸಿ ಪ್ರಶಂಸೆಗೆ ಪಾತ್ರಳಾಗಿದ್ದಳು. ಇದರ ಜೊತೆಗೆ ವೀರಗಾಸೆ, ಪಟ ಕುಣಿತ, ಛದ್ಮವೇಷ, ಸಂಗೀತ ಹಲವು ಕಾರ್ಯಗಳಲ್ಲಿ ಛಾಪು ಮೂಡಿಸಿದ್ದಲ್ಲದೇ ಸಹಚೇತನ ನಾಟ್ಯಾಲಯದ ಕಿರಿಯ ವಿದ್ಯಾರ್ಥಿನಿಯಾಗಿ ನಾಟ್ಯಾರಾಧನ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ, ಪಂಡಿತ್ ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ಗಾಯನ ಕಾರ್ಯಕ್ರಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಚಿಗುರು ಕಾರ್ಯಕ್ರಮದಲ್ಲಿ ಜಾನಪದ ಗೀತೆ ಗಾಯನದಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದ್ದಾಳೆ.
Podar International School ಆದಿಚುಂಚನಗಿರಿ ನಿರ್ಮಲಾನಂದಶ್ರೀಗಳು ಮತ್ತು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಯುತ ಗೊಲ್ಲಹಳ್ಳಿ ಶಿವಪ್ರಸಾದ್ ರವರ ಮುಂದೆ ಹಾಡಿ ಗಮನ ಸೆಳೆದಿದ್ದಾಳೆ ಈ ಪೋರಿ. ಕಲೆ ಮಾತ್ರವಲ್ಲದೆ ಓದಿನಲ್ಲಿ ಕೂಡ ಮುಂದಿದ್ದು ಶಾಲೆಯಲ್ಲಿನ ಓಟದ ಸ್ಪರ್ಧೆ, ಪದ್ಯ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ಯಂಗ್ ಎಕ್ಸ್ ಫ್ಲೋರಲ್ ಆಗಿ ಪ್ರಶಂಸೆಗಳಿಸಿದ್ದಾಳೆ. ಪ್ರಸ್ತುತ ಹಿಂದೂಸ್ತಾನಿ ಸಂಗೀತವನ್ನು ಶ್ರೀ ನಿಷಾದ್ ಹರ್ಲಾಪುರ್ ರಿಂದ ಮತ್ತು ಭರತನಾಟ್ಯವನ್ನು ಸಹನಾ ಚೇತನ್ ಹಾಗೂ ಶೈಲಜಾ ಕುಮಾರ್ ಚನ್ನರಾಯಪಟ್ಟಣ ಇವರಿಂದ ಕಲಿಯುತ್ತಿದ್ದಾಳೆ. ಬೆಳೆಯುವ ಸಿರಿ ಮೊಳಕೆಯಲ್ಲೆ ಎಂಬಂತೆ ಬಹುಮುಖ ಪ್ರತಿಭೆಯಾಗಿ ಹೊರಹೊಮ್ಮಿದ್ದಾಳೆ ಕು.ಹೊನಲು.

Shivaganga Yoga Center ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮಗೊಳಿಸುತ್ತದೆ- ಡಾ.ಸಿ.ವಿ.ರುದ್ರಾರಾಧ್ಯ

0

Shivaganga Yoga Center ಯೋಗ ಮಾನಸಿಕ ಹಾಗೂ ದೈಹಿಕ ಸದೃಢತೆ ಜೊತೆಗೆ ದೀರ್ಘಾಯುಷ್ಯ ಉಳ್ಳವರಾಗಿ ಮಾಡುವುದರಲ್ಲಿ ಸಂದೇಹವಿಲ್ಲ ಎಂದು ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾಕ್ಟರ್ ಸಿ.ವಿ. ರುದ್ರಾರಾಧ್ಯ ನುಡಿದರು ಅವರು ಇಂದು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆ ಹಾಗೂ ಶಿವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು ಸನಾತನ ಕಾಲದ ಯೋಗ ಇಂದಿಗೂ ಪ್ರಸ್ತುತ. ಪ್ರತಿನಿತ್ಯ ಕ್ರಮಬದ್ಧವಾಗಿ ಗುರು ಮುಖೇನ ಯೋಗ, ಪ್ರಾಣಾಯಾಮ ಹಾಗೂ ಧ್ಯಾನ ಮಾಡುವುದರಿಂದ ಆರೋಗ್ಯದಿಂದ ಇರಲು ಸಾಧ್ಯ ಇದರಿಂದ ನಕಾರಾತ್ಮಕ ಭಾವನೆಗಳು ದೂರವಾಗುತ್ತವೆ ಜೊತೆಗೆ ಮಾನಸಿಕ ಖಿನ್ನತೆ ದೂರವಾಗುತ್ತದೆ ಏಂದು ನುಡಿದ ಅವರು ಶಿವಗಂಗಾ ಯೋಗ ಕೇಂದ್ರದಲ್ಲಿ ನಡೆಯುವ ಶಿವರಾತ್ರಿ ಜಾಗರಣೆ, ಶಿವನ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮದಲ್ಲಿ ಎಲ್ಲರೂ ತಪ್ಪದೆ ಭಾಗವಹಿಸಲು ಕರೆ ನೀಡಿದರು. ಶಿವಗಂಗಾ ಯೋಗ ಕೇಂದ್ರದ ಮಾಜಿ ಕಾರ್ಯದರ್ಶಿಎಸ್. ಎಸ್ . ಜ್ಯೋತಿ ಪ್ರಕಾಶ ಅವರು ಮಾತನಾಡುತ್ತಾ ಶಿವಗಂಗಾ ಯೋಗ ಕೇಂದ್ರ ನಮ್ಮ ನಾಡಿಗೆ ಒಂದು ವಿಶೇಷವಾದ ಕೊಡುಗೆಯನ್ನು ನೀಡಿದೆ ಶಿವಮೊಗ್ಗದಲ್ಲಿ ಸಾಕಷ್ಟು ಜನ 38 ಕೇಂದ್ರಗಳಲ್ಲಿ ಉಚಿತವಾಗಿ ಯೋಗಭ್ಯಾಸ ನಡೆಸುತ್ತಿರುವುದು ತುಂಬಾ ವಿಶೇಷವಾಗಿದೆ ರಾಜ್ಯಕ್ಕೆ ಒಂದು ಮಾದರಿ ಸಂಸ್ಥೆಯಾಗಿದೆ. ಪ್ರತಿಯೊಬ್ಬರೂ ನಿರಂತರವಾಗಿ ಶಾಖೆಗೆ ತಪ್ಪದೇ ಬಂದು ಯೋಗಭ್ಯಾಸ ಮಾಡಬೇಕೆಂದು ನುಡಿದರು. Shivaganga Yoga Center ರಾಘವ ಶಾಖೆಯ ಮುಖ್ಯ ಶಿಕ್ಷಕರಾದ ಜಿ ಎಸ್ ಓಂಕಾರ್ ಅವರು ಇಂದಿನ ಒತ್ತಡದ ಪರಿಸ್ಥಿತಿಯಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಯೋಗ, ಪ್ರಾಣಾಯಾಮ ಹಾಗೂ ಧ್ಯಾನದ ಅವಶ್ಯಕತೆಯನ್ನು ತಿಳಿಹೇಳಿದರು. ಯೋಗ ಶಿಕ್ಷಕರಾದ ವಿಜಯ ಕೃಷ್ಣ. ಎಚ್ ಕೆ ಹರೀಶ್. ಜಿ ವಿಜಯಕುಮಾರ್. ಶಂಕರ್, ಸುಜಾತಾ..ಗಾಯತ್ರಿ ಲತಾ. ಶೈಲಾ. ಶೋಭಾ.. ಶ್ರೀನಿವಾಸ್. ಸುಬ್ರಮಣ್ಯ. . ಹಾಗೂ ಯೋಗ ಬಂದು ಗಳು ಉಪಸ್ಥಿತರಿದ್ದರು

Reserve Bank of India ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿರುವ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

0

Reserve Bank of India ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರು ಶಾಖೆಯಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು https//rbi.org.in/ ಎಂಬ ಬ್ಯಾಂಕಿನ ಜಾಲತಾಣದಲ್ಲಿ Recruitment for the post of office Attendant – PY 2025 ರ ಮೂಲಕ ಫೆ. 04 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ https//rbi.org.in/ ಎಂಬ ಬ್ಯಾಂಕಿನ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

DC Shivamogga ಅಂಗನವಾಡಿಗಳ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ, ಕ್ರಮ ಜರುಗಿಸಿ- ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಿವೇಶನ ಗುರುತಿಸುವಂತೆ ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮನ್ವಯ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕದ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 2563 ಅಂಗನವಾಡಿ ಕೇಂದ್ರಗಳಿದ್ದು 2065 ಸ್ವಂತ ಕಟ್ಟಡದಲ್ಲಿ, 106 ಶಾಲಾ ಕಟ್ಟಡದಲ್ಲಿ, 96 ಇತರೆ ಕಟ್ಟಡದಲ್ಲಿ ಮತ್ತು 296 ಬಾಡಿಗೆ ಕಟ್ಟಡದಲ್ಲಿವೆ. ನಗರದಲ್ಲಿ 180 ಮತ್ತು ಗ್ರಾಮೀಣ ಭಾಗದಲ್ಲಿ 70 ನಿವೇಶನಗಳ ಅವಶ್ಯಕತೆ ಇದ್ದು, ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಗುರುತಿಸಿ, ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ವಹಿಸಬೇಕು. ಶಿವಮೊಗ್ಗ ನಗರದಲ್ಲಿ ಆದ್ಯತೆ ಮೇಲೆ ನಿವೇಶನ ಗುರುತಿಸುವ ಕೆಲಸವಾಗಬೇಕು ಎಂದು ಸಿಡಿಪಿಓ ಗಳಿಗೆ ಸೂಚಿಸಿದರು.
ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ ಏಳು ತಾಲ್ಲೂಕಿಗಳಿಗೆ ಮಂಜೂರಾಗಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ವಿವಿಧ ಹಂತದಲ್ಲಿದ್ದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005 ನಿಯಮ 2006 ರಡಿ ಕಳೆದ ತ್ರೆöÊಮಾಸಿಕದಲ್ಲಿ 83 ಪ್ರಕರಣ ದಾಖಲಾಗಿದ್ದು ಹಿಂದಿನ ಬಾಕಿ ಸೇರಿದಂತೆ 123 ಪ್ರಕರಣಗಳ ಪೈಕಿ 61 ಇತ್ಯರ್ಥಗೊಂಡಿವೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿ 34 ಮತ್ತು ನ್ಯಾಯಾಲಯದಲ್ಲಿ 28 ಪ್ರಕರಣ ಬಾಕಿ ಇದ್ದು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆ ಸೂಚಿಸಿದ ಅವರು ಆಪ್ತಸಮಾಲೋಚನೆ ಮತ್ತಿತರೆ ಸೌಲಭ್ಯಗಳನ್ನು ಸಮರ್ಪಕವಾಗಿ ಸಂತ್ರಸ್ತರಿಗೆ ನೀಡಬೇಕೆಂದು ತಿಳಿಸಿದರು.
ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಖಿ ಒನ್ ಸ್ಟಾಪ್ ಸೆಂಟರ್‌ನಡಿ ಸಂತ್ರಸ್ತರಿಗೆ ವೈದ್ಯಕೀಯ ಚಿಕಿತ್ಸೆ ಮತ್ತು ನೆರವು, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ತಾತ್ಕಾಲಿಕ ಆಶ್ರಯ ವ್ಯವಸ್ಥೆ ನೀಡಲಾಗುತ್ತದೆ. ಪ್ರಸ್ತುತ 177 ಪ್ರಕರಣಗಳಿದ್ದು ಕೇಂದ್ರದಲ್ಲಿ ನೀಡಬೇಕಾದ ಸೇವೆಗಳನ್ನು ಸಕಾಲದಲ್ಲಿ ಒದಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ತಿಳಿಸಿದರು.
ರಾಜ್ಯ ಮಹಿಳಾ ನಿಲಯದಲ್ಲಿ ಪ್ರಸ್ತುತ 59 ಮಾನಸಿಕ ಅಸ್ವಸ್ಥ ಮತ್ತು 14 ಬುದ್ದಿಮಾಂದ್ಯ ನಿವಾಸಿ ಒಟ್ಟು 73 ನಿವಾಸಿಗಳಿದ್ದು ಅವರಿಗೆ ಆರೈಕೆ, ಆಹಾರ, ಸಮಾಲೋಚನೆ, ವೈದ್ಯಕೀಯ ನೆರವಿನೊಂದಿಗೆ ಕೌಶಲ್ಯ ತರಬೇತಿಯನ್ನು ಸಮರ್ಪಕವಾಗಿ ನೀಡುವಂತೆ ಸೂಚಿಸಿದರು.
ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ, ಗೃಹಲಕ್ಷಿö್ಮ ಯೋಜನೆ ಇತರೆ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.
DC Shivamogga ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ ಸಮೀಕ್ಷೆ ಕೈಗೊಂಡು ಗುರುತಿಸಿ, ಪುನರ್ವಸತಿ ನೀಡುವಂತೆ ಸೂಚಿಸಿದ ಅವರು ಈ ಹಿಂದೆ 24 ಮಾಜಿ ದೇವದಾಸಿಯರು ಇದ್ದು 6 ಜನ ಮರಣ ಹೊಂದಿರುತ್ತಾರೆ. ಪ್ರಸ್ತುತ 18 ಮಾಜಿ ದೇವದಾಸಿಯರಿಗೆ ಸೌಲಭ್ಯ ನೀಡಲಾಗುತ್ತಿದೆ, ಹೊಸ ಸಮೀಕ್ಷೆಗೆ 4 ಅರ್ಜಿಗಳು ಬಂದಿವೆ ಎಂದರು.
ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ(ತಡೆಗಟ್ಟುವಿಕೆ, ರಕ್ಷಣೆ & ಪುನರ್ವಸತಿ) 2006 ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಇದಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ 262, ತಾಲ್ಲೂಕು ಮಟ್ಟದಲ್ಲಿ 07 ಮತ್ತು ಜಿಲ್ಲಾ ಮಟ್ಟದಲ್ಲಿ 01 ಕಾವಲು ಸಮಿತಿಗಳನ್ನು ರಚಿಸಲಾಗಿದೆ. ಪರಿಣಾಮಕಾರಿಯಾಗಿ ಸಮಿತಿ ಸಭೆಗಳನ್ನು ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಉದ್ಯೋಗಿನಿ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಸಹಾಯಧನ ಯೋಜನೆಯಡಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅವರಿಗೆ ಸೌಲಭ್ಯವನ್ನು ಒದಗಿಸುವಂತೆ ತಿಳಿಸಿದರು.
2025 ರ ಅಕ್ಟೋಬರ್ ನಿಂದ ಡಿಸೆಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ ನಡೆದ 19 ಬಾಲ್ಯ ವಿವಾಹಗಳಿಗೆ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಲಾಗಿದೆ. ಹಾಗೂ 16 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. 73 ಪೋಕ್ಸೋ ಪ್ರಕರಣ ದಾಖಲಿಸಲಾಗಿದ್ದು ಜಿಲ್ಲೆಯಾದ್ಯಂತ ಮಿಷನ್ ಸುರಕ್ಷಾ ಅಭಿಯಾನವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ಜೊತೆಗೆ ಅರಿವು ಕಾರ್ಯಕ್ರಮಗಳನ್ನು ಪರಿಣಾಮಕಾರಿಗೊಳಿಸಿ, ಈ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿ ಎಲ್ಲರೂ ಶ್ರಮಿಸಬೇಕೆಂದರು.
ಬಾಲ ಗರ್ಭಿಣಿ/ಬಾಲತಾಯಂದಿರಿಗೆ ಆರ್ಥಿಕ ಪರಿಹಾರ ಕಲ್ಪಿಸುವ ಹೊಸ ಯೋಜನೆಯಡಿ ಅಕ್ಟೋಬರ್ ರಿಂದ ಡಿಸೆಂಬರ್‌ವರೆಗೆ 28 ಸಂತ್ರಸ್ತರಿಗೆ ರೂ.6000 ದಂತೆ ಪರಿಹಾರ ಸೌಲಭ್ಯ ನೀಡಲಾಗಿದೆ. ಈ ಪ್ರಕರಣಗಳು ಕಡಿಮೆ ಆಗುವ ನಿಟ್ಟಿನಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಜಿ.ಪಂ. ಸಿಇಓ ಹೇಮಂತ್ ಎನ್ ಮಾತನಾಡಿ, ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 50 ಮಕ್ಕಳಿದ್ದು ಈ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಎನ್‌ಆರ್‌ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ಗಳಿಗೆ ದಾಖಲಿಸಿ ಚಿಕಿತ್ಸೆ ನೀಡಬೇಕು. ಎನ್‌ಆರ್‌ಸಿಗಳಲ್ಲಿ ತೀವ್ರ ಅಪೌಷ್ಟಿಕ ಮಕ್ಕಳಿಗೆ 14 ದಿನಗಳ ಕಾಲ ನಿಗದಿತ ಪೌಷ್ಟಿಕ ಆಹಾರದೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಜೊತೆಗೆ ತಾಯಿಗೆ ಈ ಕುರಿತು ತರಬೇತಿ ನೀಡಲಾಗುತ್ತದೆ. ಹಲವಾರು ಪೋಷಕರು 14 ದಿನಗಳ ಕಾಲ ಕೇಂದ್ರದಲ್ಲಿ ಇರಲಾರದೇ ಚಿಕಿತ್ಸೆಯನ್ನು ಅಲ್ಲಗಳೆಯುತ್ತಿರುವುದು ಸರಿಯಲ್ಲ. ಸಂಬಂಧಿಸಿದ ಅಧಿಕಾರಿಗಳು ಪೋಷಕರ ಮನವೊಲಿಸಿ ಕಡ್ಡಾಯವಾಗಿ ಚಿಕಿತ್ಸೆ ಕೊಡಿಸಬೇಕೆಂದು ಸೂಚನೆ ನೀಡಿದರು.
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲೆಯಲ್ಲಿ ಮೊದಲ ಪ್ರಸವದ ಗರ್ಭಿಣಿಯರಿಗೆ ನೀಡುವ ರೂ.5000 ಯೋಜನೆಯಡಿ 2025 ರ ಅಂತ್ಯಕ್ಕೆ ಶೇ.114.70 ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದರೆ ನೀಡುವ ರೂ.6000 ಯೋಜನೆಯಡಿ ಶೇ.98.77 ಪ್ರಗತಿ ಸಾಧಿಸಲಾಗಿದೆ ಎಂದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಸಿಪಿಓ ಮಂಜುನಾಥ್, ಸಿಡಬ್ಲ್ಯೂಸಿ ಅಧ್ಯಕ್ಷ ತಾಜುದ್ದೀನ್ ಖಾನ್, ಸಾಂತ್ವನ ಕೇಂದ್ರಗಳ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.