Wednesday, November 4, 2026
Wednesday, November 4, 2026
Home Blog Page 2105

ರಾಜ್ಯದಲ್ಲಿ ಮಹಿಳೆ,ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಿದೆ

0

ನಮ್ಮ ರಾಜ್ಯದಲ್ಲಿ ರಕ್ತಹೀನತೆ ಮತ್ತು ಅದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಾಗಿ ಅನುಭವಿಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಗಣನೀಯವಾಗಿ ಏರಿಕೆ ಕಂಡಿದೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಮಹಿಳೆಯರಲ್ಲಿ ಶೇ. 48ರಷ್ಟು ರಕ್ತಹೀನತೆ ಸಮಸ್ಯೆ ಏರಿಕೆಯಾಗಿದೆ. ಆರು ತಿಂಗಳಿನಿಂದ ಸುಮಾರು ಐದು ವರ್ಷದವರೆಗಿನ ಮಕ್ಕಳಲ್ಲಿ ಈ ಪ್ರಮಾಣ ಶೇ. 66 ರಷ್ಟು ಹೆಚ್ಚಾಗಿದೆ.

2015-16 ವರ್ಷಕ್ಕೆ ಹೋಲಿಸಿದರೆ ರಕ್ತಹೀನತೆ ಎದುರಿಸುತ್ತಿರುವ ಮಕ್ಕಳ ಸಂಖ್ಯೆ ಶೇ.5ರಷ್ಟು ಹೆಚ್ಚಾಗಿದೆ. ಮತ್ತು ಮಹಿಳೆಯರ ಸಂಖ್ಯೆಯಲ್ಲಿ ಶೇ. 3 ರಷ್ಟು ಏರಿಕೆಯಾಗಿದೆ.

“ಅಪೌಷ್ಟಿಕತೆ ಹಾಗೂ ಕಬ್ಬಿಣ ಅಂಶ ದೇಹದಲ್ಲಿ ಕಡಿಮೆಯಾಗಿರುವುದರಿಂದ ರಕ್ತಹೀನತೆ ಉಂಟಾಗುತ್ತದೆ. ರಕ್ತಹೀನತೆ ಉಂಟಾದಾಗ ರಕ್ತದ ಮೂಲಕ ದೇಹದಾದ್ಯಂತ ಆಮ್ಲಜನಕದ ಪೂರೈಕೆ ಸಾಮರ್ಥ್ಯ ಕಡಿಮೆಯಾಗುತ್ತದೆ.
ಆರೋಗ್ಯವಂತ ಮಹಿಳೆಯಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಪ್ರತಿ ಡೆಸಿಲೀಟರ್ ಗೆ 12ಗ್ರಾಂ ಇರಬೇಕು. ಅರ್ಧ ವರ್ಷಕ್ಕಿಂತ ಕಡಿಮೆ ಪ್ರಾಯದ ಮಗುವಿಗೆ ಪ್ರತಿದಿನ 0. 27 ಮಿಲಿಗ್ರಾಂ ಕಬ್ಬಿಣಾಂಶ ಅಗತ್ಯವಾಗಿರುತ್ತದೆ ” ಎಂದು ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ಕೆ . ಪಿ ಬಾಲರಾಜ್ ಅವರು ಹೇಳಿದ್ದಾರೆ.

ನಗರ ಪ್ರದೇಶಗಳಲ್ಲಿ ಶೇ. 62. 8ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಶೇ. 67.1ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಸೂಕ್ತವಾದ ಚಿಕಿತ್ಸೆ ನೀಡಿದರಷ್ಟೇ ಈ ಸಮಸ್ಯೆಯಿಂದ ಸುಲಭವಾಗಿ ಪಾರಾಗಲು ಸಾಧ್ಯ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ರಕ್ತಹೀನತೆ ಪ್ರಸವಪೂರ್ವ ಅಥವಾ ಪ್ರಸವ ನಂತರದಲ್ಲಿ ತಾಯಂದಿರ ಸಾವಿಗೂ ಕಾರಣವಾಗಬಹುದು. ನಿಶ್ಯಕ್ತಿ, ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಕುಸಿತ, ಅವಧಿಗೂ ಮುನ್ನ ಪ್ರಸವ, ಕಡಿಮೆ ತೂಕದ ಶಿಶುಗಳ ಜನನಕ್ಕೆ ಕಾರಣವಾಗಬಹುದಾಗಿದೆ. ರಕ್ತಹೀನತೆಗೆ ಕಬ್ಬಿನ ವಿಷ ಕಡಿಮೆ ಇರುವುದೇ ಪ್ರಮುಖ ಕಾರಣ.

15-19 ವರ್ಷದ ಇವತ್ತು ಯರಲ್ಲಿ ರಕ್ತಹೀನತೆಯ ಪ್ರಮಾಣ 2015 ಕ್ಕೆ ಹೋಲಿಸಿದರೆ, ಶೇ.4 ರಷ್ಟು ಹೆಚ್ಚಾಗಿದೆ. ಈ ಸಮಯದಲ್ಲಿಯೇ ಪುರುಷರಲ್ಲಿವೂ ಕೂಡ ರಕ್ತಹೀನತೆ ಸಮಸ್ಯೆ ಹೆಚ್ಚಾಗಿರುವುದು ಕಂಡುಬಂದಿದೆ.

ರಕ್ತಹೀನತೆಗೆ ರಕ್ತದ ನಷ್ಟ ಅಥವಾ ಕೆಂಪು ಕಣಗಳನ್ನು ನಾಶ ಪ್ರಮುಖ ಕಾರಣವಾಗಿದೆ. ಮುಟ್ಟಿನ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ. ಜಂತುಹುಳುಗಳ ಕಾಣಿಸಿಕೊಳ್ಳುವುದು. ಮೂಲವ್ಯಾಧಿ, ಮಲೇರಿಯಾ, ಕುಕ್ಕೆ ಹುಳುಗಳು, ಪೌಷ್ಟಿಕಾಂಶದ ಕೊರತೆ ಸಹ ಕಾರಣವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿ ಕಬ್ಬಿಣಾಂಶ ಹೆಚ್ಚಿರುವ ಹಾಗೂ ವಿಟಮಿನ್ ಗಳು ಸಮೃದ್ಧವಾಗಿರುವ ಆಹಾರಗಳನ್ನು ಸೇವಿಸಬೇಕು. ಹಸಿರು ಸೊಪ್ಪುಗಳು, ಒಣ ಹಣ್ಣು, ಕಾಳುಗಳು ವಿಟಮಿನ್ ಬಿ-12 ಪೂರ್ವಕವಾದ ಆಹಾರವನ್ನು ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪದ್ಮಶ್ರೀ ತುಳಸಿ ಗೌಡ: ಮದರ್ ತೆರೆಸ ಪ್ರಶಸ್ತಿಯ ಗರಿ

0

ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವನದೇವತೆ ಹೊನ್ನಾಳಿಯ ತುಳಸಿ ಗೌಡ ಅವರಿಗೆ ಈಗ ಮತ್ತೊಂದು ಪ್ರತಿಷ್ಠಿತ ಮದರ್ ತೆರೇಸಾ ಪ್ರಶಸ್ತಿ ಒಲಿದು ಬಂದಿದೆ.

ಡಿಸೆಂಬರ್ 13ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಕೋಲ್ಕತ್ತದಲ್ಲಿ 2005ರಲ್ಲಿ ಮದರ್ ತೆರೇಸಾ ನೆನಪಿಗಾಗಿ ಹಾರ್ಮನಿ ಫೌಂಡೇಶನ್ ಹುಟ್ಟಿಕೊಂಡಿತ್ತು. ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಈ ಸಂಸ್ಥೆ, ಅಂತರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಂಡಿದೆ.

ಪ್ರತಿವರ್ಷ ಒಬ್ಬರಂತೆ ಶ್ರೇಷ್ಠ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಬೌದ್ಧ ಧರ್ಮದ ಗುರು ದಲೈ ಲಾಮಾ, ಮಲಲ ಯುಸೂಫ್, ಘಾನ ದೇಶದ ಅಧ್ಯಕ್ಷ ನಾನಾ ಅಕೂಪೋ- ಅಡ್ಡೋ ಹೀಗೆ ಹಲವಾರು ಗಣ್ಯರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.

ನಾನು ಅಕ್ಷರ ಕಲಿತವಳಲ್ಲ. ಆದರೆ ನನ್ನ ಕೆಲಸವನ್ನು ಗುರುತಿಸಿ, ಹಲವು ಪ್ರಶಸ್ತಿಗಳು ಬಂದಿವೆ. ಈಗ ಪ್ರಶಸ್ತಿ ಸ್ವೀಕರಿಸಿ ಕಾರಣಕ್ಕಾಗಿ ಮತ್ತೆ ವಿಮಾನಯಾನ ಮಾಡಲಿದ್ದೇನೆ ಎಂದು ವೃಕ್ಷ ದೇವತೆ ಆದಂತಹ ತುಳಸಿ ಗೌಡ ಅವರು ತಿಳಿಸಿದ್ದಾರೆ.

ಹಾರ್ಮನಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಬ್ರಹಾಂ ಮಥಾಯಿ ನೇತೃತ್ವದಲ್ಲಿ ನಡೆಯಲಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಮೊಮ್ಮಗ ತುಷಾರ ಗಾಂಧಿ, ಚಿತ್ರ ನಿರ್ಮಾಪಕ ಮಹೇಶ್ ಭಟ್ , ಭಾರತೀಯ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಪ್ಲಾನಿಯಾ ಅಗ್ನೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜೀವವೈವಿಧ್ಯ ರಕ್ಷಣೆ : ಸರ್ಕಾರಕ್ಕೆ ಮನವಿ ಅರ್ಪಣೆ

0

ಕರ್ನಾಟಕ ಜೀವವೈವಿಧ್ಯ ಮಂಡಳಿಯು ಪಶ್ಚಿಮಘಟ್ಟ ಉಳಿವಿಗಾಗಿ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಹಾಗೂ ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಜೆಟ್ ಮೀಸಲಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.

ಇತ್ತೀಚಿನ ವರ್ಷಗಳಲ್ಲಿಪ್ರಕೃತಿ ವಿಕೋಪಕ್ಕೆ ಪಶ್ಚಿಮ ಘಟ್ಟಗಳು ಭೂಕುಸಿತಕ್ಕೆ ಒಳಪಡುತ್ತಿದೆ. ನಾಶವಾಗುತ್ತಿರುವ ಮೀಸಲು ಅರಣ್ಯಗಳ ರಕ್ಷಣೆಗೆ ಅರಣ್ಯ ಮತ್ತು ಕಂದಾಯ ಇಲಾಖೆಗಳು ಕೈಜೋಡಿಸಬೇಕು. ಜೀವ ವೈವಿಧ್ಯತೆಗೆ ಧಕ್ಕೆ ತಂದಿರುವ ಏಕಬೆಳೆ ನೀಡುವಿಕೆಯನ್ನು ಕೊನೆಗೊಳಿಸಬೇಕು. ಗ್ರಾಮೀಣ ಅಭಿವೃದ್ಧಿ ಮತ್ತು ಅರಣ್ಯ ಇಲಾಖೆಗಳು ಸ್ಥಳೀಯ ಅರಣ್ಯಗಳು ಮತ್ತು ಜೀವವೈವಿದ್ಯಗಳ ರಕ್ಷಣೆಗಾಗಿ ಗ್ರಾಮ ಸಮಿತಿಗಳನ್ನು ಬಲಪಡಿಸಬೇಕು ಎಂಬ 22 ಅಂಶಗಳನ್ನು ಒಳಗೊಂಡ ಮನವಿ ಪತ್ರವನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ‘ಅನಂತ ಹೆಗಡೆ ಅಶೀಸರ’ ಅವರ ನೇತೃತ್ವದ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕರ್ನಾಟಕ ಕೋವಿಡ್ ಸೋಂಕಿನ ಪಟ್ಟಿಯಲ್ಲಿ ಟಾಪ್ 3

0

ಕರ್ನಾಟಕದಲ್ಲಿ ಇದುವರೆಗೂ 30 ಲಕ್ಷ ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಡಿ. 11ರಂದು ಸುಮಾರು 317 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 29,54,513 ಕ್ಕೆ ಏರಿಕೆಯಾಗಿರುವುದು ಕಂಡುಬಂದಿದೆ.

ರಾಜ್ಯದಲ್ಲಿ ಪ್ರಸ್ತುತ 7,306 ಒಟ್ಟು ಪ್ರಕರಣಗಳಿವೆ. ಕೋವಿಡ್ ಸೋಂಕಿನ ಪ್ರಮಾಣ ಶೇ. 0.30 ರಷ್ಟಿದೆ. ಸಾವಿನ ಪ್ರಮಾಣ ರಷ್ಟಿದೆ.

1,05,978 ಜನರಿಗೆ ಕೋವಿಡ್ ಪರೀಕ್ಷೆ 320 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 30,00,105ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣದಲ್ಲೂ ಸಹ ಏರಿಕೆಯಾಗಿದೆ.

ಸೋಂಕು ಪೀಡಿತ ಟಾಪ್ ಫೈವ್ ರಾಜ್ಯಗಳೆಂದರೆ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶವಾಗಿದೆ.

ಬೆಂಗಳೂರಿನಲ್ಲಿ 190 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹೀಗೆ ಹಲವಾರು ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ.

ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಇದನ್ನು ಬಿಟ್ಟರೆ ಉಳಿದ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ಎಲ್ಲೂ ವರದಿಯಾಗಿಲ್ಲ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕನ್ನಡಶಾಸ್ತ್ರೀಯ ಭಾಷೆ : ಕೇವಲ ಹೆಸರಿಗಷ್ಟೆ

0

ಕೇಂದ್ರ ಸರ್ಕಾರ ಮಾತೃಭಾಷಾ ಶಿಕ್ಷಣಕ್ಕೆ ಮಾನ್ಯತೆ ಕೊಡಬೇಕು ಎಂದು ಆಗಾಗ ಹೇಳುತ್ತಲೇ ಇರುತ್ತದೆ. ಆದರೆ ಪ್ರಾದೇಶಿಕ ಭಾಷೆಗಳ ಅಭಿವೃದ್ಧಿಗೆ ಅತ್ಯಂತ ಕಡಿಮೆ ಅನುದಾನ ನೀಡುತ್ತಿದೆ. ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಕನ್ನಡಭಾಷೆಗೆ ವರ್ಷಕ್ಕೆ ಕೇವಲ 1 ಕೋಟಿ ರೂ. ನೀಡುತ್ತಿರುವುದು ಬೇಸರ ತಂದಿದೆ.

ಕಳೆದ ಏಳು ವರ್ಷದಲ್ಲಿ ಕನ್ನಡಭಾಷೆಗೆ ಕೇವಲ 8.39 ಕೋಟಿ ರೂ. ಅನುದಾನ ನೀಡಿದೆ. ಆದರೆ ತಮಿಳು ಭಾಷೆಗೆ ಕಳೆದ ಏಳು ವರ್ಷಗಳಲ್ಲಿ 50 ಕೋಟಿ ರೂ ಅನುದಾನ ನೀಡಿರುವುದು ಭಾಷೆಗಳ ಮಧ್ಯೆ ತಾರತಮ್ಯದ ವಿಚಾರದಲ್ಲೂ ನೋವು ತಂದಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಅವರು ಕನ್ನಡ ಭಾಷೆಗೆ ನೀಡುತ್ತಿರುವ ಕನಿಷ್ಠ ಅನುದಾನದ ಬಗ್ಗೆ ಪ್ರಸ್ತಾಪಿಸಿದ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಯುತ್ತಿದೆ. ಅಲ್ಲದೆ ಸಂಸ್ಕೃತ ಭಾಷೆಗೆ ಅದೇ ಅವಧಿಯಲ್ಲಿ ಸಯ1200 ಕೋಟಿ ರೂ. ಇರುವುದು ಕೂಡ ಚರ್ಚೆಯ ಒಂದು ಭಾಗವಾಗಿದೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್ ಅವರು “ಕನ್ನಡದ ಪ್ರಾಚೀನ ಗ್ರಂಥಗಳ ಉಳಿವಷ್ಟೇ ಅಲ್ಲ, ಮುಂದಿನ ಭವಿಷ್ಯಕ್ಕಾಗಿ ಕನ್ನಡವನ್ನು ತಂತ್ರಜ್ಞಾನ ಶಕ್ತ ಭಾಷೆಯಾಗಿ ಉಳಿಸುವ ಅಗತ್ಯ ಹೆಚ್ಚಿದೆ. ಈ ನಿಟ್ಟಿನಲ್ಲಿ ಅನುವಾದ ಮತ್ತಿತರ ನೂರಾರು ಕೆಲಸಗಳು ಆಗಬೇಕಿದೆ. ಇದಕ್ಕೆಲ್ಲಾ ಅನುದಾನ ಬೇಕು. ರಾಜ್ಯದಿಂದ ವರ್ಷಕ್ಕೆ 2.5 ಲಕ್ಷ ಕೋಟಿಯಷ್ಟು ತೆರಿಗೆ ಪಡೆಯುವ ಕೇಂದ್ರ ಜುಜುಬಿ 1 ಕೋಟಿ ನೀಡಿ ಕೈತೊಳೆದುಕೊಳ್ಳುತ್ತಿದೆ. ಈ ಬಗ್ಗೆ ಯಾವ ಜನಪ್ರತಿನಿಧಿಗಳು ಪ್ರಶ್ನೆ ಮಾಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ

0

ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವಂತಹ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ.

ರಾಜ್ಯದ ಗ್ರಾಮಾಂತರ ಪ್ರದೇಶಗಳ ಶಾಲೆಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಯೆಂದರೆ ಶಿಕ್ಷಕರ ಕೊರತೆ ಈ ಕೊರತೆಯಿಂದಾಗಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸದೆ ಖಾಸಗಿ ಶಾಲೆಗೆ ಸೇರಿಸಲು ಮುಂದಾಗುತ್ತಿದ್ದಾರೆ. ಈ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 10 ಸಾವಿರ ಮಂದಿ ಹಾಗೂ ಕಲ್ಯಾಣ ಕರ್ನಾಟಕ ವೃಂದದ 5 ಸಾವಿರ ಮಂದಿ ಪದವೀಧರರ ಶಾಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ.

5 ಸಾವಿರ ಪದವೀಧರ ಶಿಕ್ಷಕರ ನೇಮಕಕ್ಕೆ ನವೆಂಬರ್ ತಿಂಗಳ ಮೊದಲನೇ ವಾರ ಮತ್ತು 10 ಸಾವಿರ ಪದವೀಧರ ಶಿಕ್ಷಕರ ನೇಮಕಕ್ಕೆ ಡಿಸೆಂಬರ್. 10 ರಂದು ಹಣಕಾಸು ಇಲಾಖೆ ಅನುಮತಿ ನೀಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವುದಾಗಿ ಹೇಳಿದೆ. ಇದರೊಂದಿಗೆ 4 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೂ ಅನುಮತಿ ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 23 ಸಾವಿರ ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ.

ಈ ಬಾರಿ ಪದವಿ, ಬಿ.ಎಡ್ ಮತ್ತು ಟಿಇಟಿ ಪರೀಕ್ಷೆ ಉತ್ತೀರ್ಣರಾದ ಎಲ್ಲಾ ಅಭ್ಯರ್ಥಿಗಳ ಜೊತೆಗೆ ಎಂಜಿನಿಯರಿಂಗ್ ಪದವೀಧರರಿಗೂ ಅರ್ಜಿಸಲ್ಲಿಸಲು ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಎಂಜಿನಿಯರಿಂಗ್ ಪದವೀಧರರು ಗಣಿತ, ವಿಜ್ಞಾನ, ಇಂಗ್ಲಿಷ್, ಪರಿಸರ ಅಧ್ಯಯನ ಸೇರಿದಂತೆ ಇತರೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು “ರಾಜ್ಯದ ಸರ್ಕಾರಿ ಶಾಲೆಗಳಿಗೆ ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಹಣಕಾಸು ಇಲಾಖೆ ಕೂಡ ಅನುಮತಿ ನೀಡಿದೆ. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಿ, ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮತ್ತೆ, ವಿದ್ಯುತ್ ದರ ಏರಿಕೆಯ ಶಾಕ್!

0

ಪ್ರತಿ ವರ್ಷದಂತೆ ಈ ಬಾರಿಯೂ ವಿದ್ಯುತ್ ದರ ಹೆಚ್ಚಿಸಲು ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಬೆಸ್ಕಾಂ ವ್ಯಾಪ್ತಿಯಲ್ಲಿ 1.50 ರೂ., ಹೆಸ್ಕಾಂ ವ್ಯಾಪ್ತಿ ಯಲ್ಲಿ 1.97 ರೂ. ಪ್ರತಿ ಯೂನಿಟ್ ಗೆ ಹೆಚ್ಚಿಸಲು ಮನವಿ ಮಾಡಲಾಗಿದೆ. ಇನ್ನುಳಿದ ಚೆಸ್ಕಾಂ, ಜೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಯೂನಿಟ್ ಗೆ 1.10ರೂ. ಗಳವರೆಗೆ ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪರಿಷ್ಕೃತ ದರ ಮುಂದಿನ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಜಾರಿಗೆ ಬರಲಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಿರುವ ಕೆಇಆರ್ ಸಿ ನಂತರ ದರಗಳನ್ನು ನಿಗದಿ ಪಡಿಸಲಿದೆ. ದರ ನಿಗದಿಗೆ ಮುನ್ನಾ ನಿಯಂತ್ರಣ ಆಯೋಗವು ಸರಬರಾಜು ಕಂಪನಿಗಳಿಂದ ಸ್ಪಷ್ಟೀಕರಣ ಪಡೆಯಲಿದೆ.

ಫೆಬ್ರವರಿಯಲ್ಲಿ ಸಾರ್ವಜನಿಕ ಹಾಗೂ ಕೈಗಾರಿಕೆಗಳಿಂದ ಆಯೋಗವು ದರ ನಿಗದಿ ಬಗ್ಗೆ ಆಕ್ಷೇಪಣೆ ಸ್ವೀಕರಿಸಲಿದೆ. ಏಪ್ರಿಲ್ ತಿಂಗಳಿನಲ್ಲಿ ಅಂತಿಮ ಪರಿಷ್ಕೃತ ದರ ಜಾರಿಗೆ ಬರಲಿದೆ.

ಕಳೆದ ಕೋವಿಡ್ ಸಂದರ್ಭದಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ವಿದ್ಯುತ್ ಶುಲ್ಕ ಹೆಚ್ಚಿಸಿ ಜೂನ್ ನಲ್ಲಿ ಆದೇಶಿಸಿತ್ತು.

ಈ ಬಾರಿ 40 ಪೈಸೆ ಹೆಚ್ಚಿಸುವ ಸಂಭವ ಇದೆ. ಎಚ್ ಟಿ ಲೈನ್ ಬಳಸುವ ಕೋವಿಡ್ ಬಾಧಿತ ಕೈಗಾರಿಕೆಗಳಿಗೆ ಮಾಸಿಕ ಪಾವತಿಯಲ್ಲಿ ವಿನಾಯಿತಿ ನೀಡಬಹುದಾದ ನಿರೀಕ್ಷೆಯಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಓಮಿಕ್ರಾನ್ ಸೋಂಕು: ವಿಶೇಷ ಮಾರ್ಗಸೂಚಿ

0

ಕೋವಿಡ್ ರೂಪಾಂತರ ತಳಿ ಓಮಿಕ್ರಾನ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವಾಗ ಯಾವೆಲ್ಲ ಅಂಶಗಳನ್ನು ಪಾಲಿಸಬೇಕು ಎಂಬುದರ ಬಗ್ಗೆ ಕರ್ನಾಟಕ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಈ ಮಾರ್ಗಸೂಚಿಯ ಪ್ರಕಾರ ಯಾವುದೇ ರೋಗ ಲಕ್ಷಣಗಳು ರೋಗಿಯಲ್ಲಿ ಕಂಡು ಬರದೇ ಹೋದರೆ ಹತ್ತು ದಿನಕ್ಕೆ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದಾಗಿದೆ.

ಬಿಡುಗಡೆಗೊಳ್ಳುವ ಮೂರು ದಿನದ ಮುಂಚೆ ಯಾವುದೇ ರೀತಿಯ ಜ್ವರ ಅಥವಾ ಯಾವುದೇ ರೋಗ ಲಕ್ಷಣಗಳು ಇರಬಾರದು. ಆಕ್ಸಿಜನ್ ಬೆಂಬಲ ಇಲ್ಲದೆ ನಾಲ್ಕು ದಿನಗಳ ಕಾಲ ಶೇ.95ರಷ್ಟು ಆಕ್ಸಿಜನ್ ಲೆವೆಲ್ ಇದ್ದರೆ ಡಿಸ್ಚಾರ್ಜ್ ಮಾಡಬಹುದು ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

24 ಗಂಟೆ ಅವಧಿಯಲ್ಲಿ ಈ ಎರಡು ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದರೆ ಅಂತವರನ್ನು ಮಾತ್ರ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದಾಗಿದೆ. ಬಿಡುಗಡೆಗೊಂಡ ವ್ಯಕ್ತಿ, ಒಂದು ವಾರದ ಅವಧಿಗೆ ಹೋಂ ಕ್ವಾರಂಟೈನ್ ನಲ್ಲಿ ಇರಬೇಕು.

ನಂತರ ರೋಗ ಲಕ್ಷಣಗಳ ಬಗ್ಗೆ ತಾವೇ ನಿಗಾವಹಿಸಿಕೊಳ್ಳಬೇಕು. ಅದಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ. ಹೋಂ ಕ್ವಾರಂಟೈನ್ ನಲ್ಲಿದ್ದು ಆರು ದಿನ ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದರೆ ಅಂತವರ ಕ್ವಾರಂಟೈನ್ ಅನ್ನು ಕೊನೆಗೊಳಿಸ ಬಹುದು ಎಂದು ಸೂಚಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕೆಎಸ್ ಡಿಸಿ ಮತ್ತು ಮಾನ್ಸ್ಟರ್ ಕಂಪನಿ ಒಡಂಬಡಿಕೆ

0

ರಾಜ್ಯದಲ್ಲಿರುವ ಕೌಶಲ್ಯಪೂರ್ಣ ಉದ್ಯೋಗಾಕಾಂಕ್ಷಿಗಳಿಗೆ ಲಭ್ಯ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ಜತೆಗೆ ಉದ್ಯೋಗ ಗಿಟ್ಟಿಸಿಕೊಳ್ಳಲು ನೆರವು ನೀಡುವ ಗುರಿಯೊಂದಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆಎಸ್ಡಿಸಿ) ಮತ್ತು ಮಾನ್ಸ್ಟರ್.ಕಾಂ ಕಂಪನಿಗಳು ಶುಕ್ರವಾರ ಒಡಂಬಡಿಕೆಗೆ ಸಹಿ ಹಾಕಿದವು.

ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ‌’ಉದ್ಯೋಗ ಸೃಷ್ಟಿಗೆ ರಾಜ್ಯ ಸರಕಾರವು ಸಾಕಷ್ಟು ಹಣವನ್ನು ವಿನಿಯೋಗಿಸುತ್ತಿದ್ದು, ನಿರುದ್ಯೋಗ ನಿವಾರಣೆಯೇ ಆದ್ಯತೆಯಾಗಿದೆ. ದೇಶದ ಸಂಘಟಿತ ವಲಯದಲ್ಲಿ 6 ಲಕ್ಷಕ್ಕೂ ಹೆಚ್ಚು ಮತ್ತು ರಾಜ್ಯವೊಂದರಲ್ಲೇ 2.30 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳಿವೆ. ಉದ್ಯೋಗ ಸೃಷ್ಟಿಯ ಮೂಲಕ ಪ್ರತಿಭಾವಂತರು ವಿದೇಶಗಳಿಗೆ ವಲಸೆ ಹೋಗುವುದನ್ನು ತಡೆಯುವುದು ನಮ್ಮ ಗುರಿಗಳಲ್ಲಿ ಒಂದಾಗಿದೆ’ ಎಂದರು.

ಒಪ್ಪಂದದಂತೆ ಕೆಎಸ್ಡಿಸಿ ಮತ್ತು ಮಾನ್ಸ್ಟರ್ ಕಂಪನಿ ಪರಸ್ಪರ ಲಿಂಕ್ ಗಳನ್ನು ಹಂಚಿಕೊಳ್ಳಲಿವೆ. ಮಿಗಿಲಾಗಿ ಮಾನ್ಸ್ಟರ್ ಕಂಪನಿಯು ಪ್ರತೀ ತಿಂಗಳು ಸಮೀಕ್ಷೆ ನಡೆಸುವ ಮೂಲಕ ಯಾವ್ಯಾವ ಕ್ಷೇತ್ರಗಳಲ್ಲಿ ಎಷ್ಟೆಷ್ಟು ಉದ್ಯೋಗಗಳಿವೆ ಎನ್ನುವುದನ್ನು ಪಟ್ಟಿ ಮಾಡುತ್ತದೆ. ಇದರ ಆಧಾರದ ಮೇಲೆ ಕೌಶಲ್ಯಾಭಿವೃದ್ಧಿ ನಿಗಮವು ತರಬೇತಿಯ ಸ್ವರೂಪವನ್ನು ನಿರ್ಧರಿಸುತ್ತದೆ ಎಂದು ಅವರು ವಿವರಿಸಿದರು.

ಈ ಒಡಂಬಡಿಕೆಯ ಮೂಲಕ 1.86 ಲಕ್ಷಕ್ಕೂ ಹೆಚ್ಚು ಕೌಶಲ್ಯಪೂರ್ಣ ಉದ್ಯೋಗಾಕಾಂಕ್ಷಿಗಳಿಗೆ ನೆರವು ಸಿಗಲಿದೆ. ಅಲ್ಲದೆ, ಈ ಅಭ್ಯರ್ಥಿಗಳಿಗೆ ಮಾನ್ಸ್ಟರ್.ಕಾಂ ಕಂಪನಿಯು ವಿವಿಧೆಡೆಗಳಲ್ಲಿ ನಡೆಸುವ ಟ್ರಯಂಫ್, ಆಸ್ಪೈರ್, ವೆಲಾಸಿಟಿ ಮುಂತಾದ ನೇಮಕಾತಿ ಮೇಳಗಳಲ್ಲಿ ವಿಶೇಷ ಪ್ರವೇಶಾವಕಾಶ ಲಭ್ಯವಾಗಲಿದೆ. ಅಲ್ಲದೆ, ಮಾನ್ಸ್ಟರ್ ಕಂಪನಿಯ ಜ್ಞಾನ ಸಂಪನ್ಮೂಲಗಳಾದ ವೆಬಿನಾರ್, ಉದ್ಯೋಗ ಸೂಚ್ಯಂಕ ಮತ್ತು ಜ್ಞಾನ ಕೇಂದ್ರಗಳ ನೆರವೂ ದೊರೆಯಲಿದೆ ಅವರು ತಿಳಿಸಿದರು.

ರಾಜ್ಯದಲ್ಲಿ ಸದ್ಯಕ್ಕೆ 11.74 ಲಕ್ಷಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಸೂಕ್ತ ಉದ್ಯೋಗಾವಕಾಶಗಳನ್ನು ಅರಸುತ್ತಿದ್ದು, ನೋಂದಾಯಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಇನ್ನುಮುಂದೆ ಮಾನ್ಸ್ಟರ್ ಕಂಪನಿಯ ವೃತ್ತಿಸಂಬಂಧಿ ಸೇವೆಗಳು ಸಿಕ್ಕಲಿವೆ. ಈ ಸೇವೆಗಳಲ್ಲಿ ಉದ್ಯೋಗ ಅಂದಾಜು ಪರೀಕ್ಷೆಗಳು ಮುಂತಾದವು ಲಭ್ಯವಿವೆ ಎಂದು ಸಚಿವರು ನುಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಕಂಪನಿಯ ಸಿಇಒ ಶೇಖರ್ ಗರೀಸಾ, ಈ ಒಡಂಬಡಿಕೆಯಿಂದಾಗಿ ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ನೀಡುವುದರ ಜತೆಗೆ ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ಅವರಿಗೆ ಕೌಶಲ್ಯಗಳನ್ನು ಪೂರೈಸಬಹುದು; ಅಲ್ಲದೆ, ಶಿಕ್ಷಣ ಸಂಸ್ಥೆಗಳನ್ನು ನೇರವಾಗಿ ಉದ್ದಿಮೆಗಳೊಂದಿಗೆ ಬೆಸೆಯಲಾಗುವುದು ಎಂದು ನುಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜಯಲಲಿತಾ ಅಧಿಕೃತ ನಿವಾಸ: ಸಹೋದರನ ಮಕ್ಕಳಿಗೆ

0

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ನಿವಾಸವನ್ನು ಸ್ವಾಧೀನಕ್ಕೆ ಜಯ ಅವರ ಸಹೋದರನ ಮಕ್ಕಳು ತೆಗೆದುಕೊಂಡಿದ್ದಾರೆ.

ಸುದೀರ್ಘವಾಗಿ ಜಯಾ ಅವರ ಆಸ್ತಿ ವಿವಾದ ನಡೆಯುತ್ತಿತ್ತು. ಪ್ರಸ್ತುತ ಈ ಕಾನೂನು ಹೋರಾಟಕ್ಕೆ ತೆರೆಬಿದ್ದಿದೆ. ಪೊಯೆಸ್ ಗಾರ್ಡನ್ ನಲ್ಲಿರುವ ನಿವಾಸ ‘ವೇದ ನಿಲಯಂ’ ಅನ್ನು ಜಯಾ ಅವರ ಸಹೋದರ ಜಯಕುಮಾರ್ ಅವರ ಮಕ್ಕಳಾದ ದೀಪ ಹಾಗೂ ದೀಪಕ್ ಅವರು ತಮ್ಮ ಸ್ವಾಧೀನಕ್ಕೆ ಪಡೆದು ಕೊಂಡಿದ್ದಾರೆ.

ಚೆನ್ನೈನ ಜಿಲ್ಲಾಧಿಕಾರಿ ಜೆ. ವಿಜಯ್ ರಾಣಿ ಅವರು
ಅಧಿಕೃತವಾಗಿ ಬಂಗಲೆಯ ಕೀಲಿಕೈ ಅನ್ನು ದೀಪಾ ಮತ್ತು ದೀಪಕ್ ಅವರಿಗೆ ಒಪ್ಪಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನ ಏಕಸದಸ್ಯ ಪೀಠವು ನ.24ರಂದು ನೀಡಿದ ಆದೇಶ ಅನ್ವಯ ಕಾನೂನುಬದ್ಧ ವಾರಸುದಾರರಿಗೆ ಜಯಲಲಿತಾ ಅವರ ಆಸ್ತಿಯ ಒಡೆತನ ನೀಡಲಾಗಿದೆ. ಈ ನಿವಾಸ ಜಯಕುಮಾರ್ ಅವರ ಮಕ್ಕಳಿಗೆ ಸೇರಬೇಕೆಂದು ಕೋರ್ಟ್ ಹೇಳಿತ್ತು. ಆ ಮೂಲಕ ಈ ಮನೆಯನ್ನು ವಶಕ್ಕೆ ಪಡೆಯುವ ಎಐಎಡಿಎಂಕೆ ಪ್ರಯತ್ನಕ್ಕೆ ನ್ಯಾಯಾಲಯ ತಡೆ ನೀಡಿತ್ತು.

ಇದು ಸಾಧಾರಣ ಗೆಲುವಲ್ಲ, ಅಸಾಧಾರಣ ಗೆಲುವು. ನಮ್ಮ ಬಾಲ್ಯದ ನೆನಪುಗಳು ಮತ್ತು ಜಯಲಲಿತಾ ಅವರೊಂದಿಗೆ ಕಳೆದ ಕ್ಷಣಗಳ ನೆನಪುಗಳನ್ನು ಹೊಂದಿರುವ ಮನೆ ಕೊನೆಗೂ ನಮಗೆ ಸೇರಿದೆ ಎಂದು ದೀಪಾ ಹಾಗೂ ದೀಪಕ್ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.