Keladi Shivappa Nayak University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತುತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಅಡಿಕೆ ಸಂಶೋಧನಾ ಕೇಂದ್ರ, ನವಿಲೆ, ಶಿವಮೊಗ್ಗ, ಅಡಿಕೆ ಮತ್ತು ಸಾಂಬಾರ ಪದಾರ್ಥಗಳ ಅಭಿವೃದ್ಧಿ ನಿರ್ದೇಶನಾಲಯ, ಕೋಜಿಕೋಡ್, ಐ.ಸಿ.ಎ.ಆರ್. – ಭಾರತೀಯ ಸಾಂಬಾರು ಬೆಳೆ ಸಂಶೋಧನಾ ಸಂಸ್ಥೆ, ಕೋಜಿಕೋಡ್, ಐ.ಸಿ.ಎ.ಆರ್. – ಅಖಿಲ ಭಾರತ ಸಂಯೋಜಿತ ಸಂಶೋಧನಾ ಯೋಜನೆ (ಸಾಂಬಾರು ಬೆಳೆ), ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತುರಫ್ತು ನಿಗಮ ಲಿಮಿಟೆಡ್, ಬೆಂಗಳೂರು, ಮಲ್ನಾಡ್ ಅಡಿಕೆ ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಲಿಮಿಟೆಡ್, ಶಿವಮೊಗ್ಗ, ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತ, ಚನ್ನಗಿರಿ ಮತ್ತು ಇಂಡಿಯನ್ ಸೊಸೈಟಿ ಆಫ್ ಸ್ಪೈಸಸ್, ಕೋಜಿಕೋಡ್‌ರವರ ಸಹಯೋಗದೊಂದಿಗೆ ಜ. 28 ಮತ್ತು 29 ರಂದು “ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ” (An Intercrop in Arecanut for prosperity) ಎಂಬ ವಿಷಯದ ಬಗ್ಗೆ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಭಾರತದ ಬೇರೆ ಬೇರೆ ರಾಜ್ಯಗಳಿಂದ 500ಕ್ಕೂ ಹೆಚ್ಚು ಅಧಿಕಾರಿಗಳು, ವಿಜ್ಞಾನಿಗಳು, ರೈತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಎರಡು ದಿನದ ಕಾರ್ಯಕ್ರಮದಲ್ಲಿ ಮೊದಲನೆಯ ದಿನ ನಾಲ್ಕು ತಾಂತ್ರಿಕ ಅಧಿವೇಶನವಿದ್ದು, ಮೊದಲ ತಾಂತ್ರಿಕ ಅಧಿವೇಶನದಲ್ಲಿ ‘ಸಂಶೋಧನೆ ಮತ್ತು ಪ್ರಚಲಿತ ಸಮಸ್ಯೆಗಳು’ ಎಂಬ ವಿಷಯದ ಬಗ್ಗೆ ಆಹ್ವಾನಿತ ಮೂರು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಎರಡನೆಯ ಅಧಿವೇಶನದಲ್ಲಿ ‘ಅಡಿಕೆ ಮತ್ತು ಕಾಳುಮೆಣಸಿನ ಸಸ್ಯೋತ್ಪಾದನೆ ಮತ್ತು ಸಾಗುವಳಿ’ ಎಂಬ ವಿಷಯದ ಬಗ್ಗೆ ಆಹ್ವಾನಿತ ನಾಲ್ಕು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಮೂರನೇ ಅಧಿವೇಶನದಲ್ಲಿ ‘ಕಾಳುಮೆಣಸಿನಲ್ಲಿ ಜೈವಿಕ ತಂತ್ರಜ್ಞಾನ, ನ್ಯಾನೋ ತಂತ್ರಜ್ಞಾನ ಮತ್ತು ಜೀನೋಮಿಕ್ಸ್’ ಎಂಬ ವಿಷಯದ ಬಗ್ಗೆ ಆಹ್ವಾನಿತ ಐದು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಕೊನೆಯ ಮತ್ತು ನಾಲ್ಕನೇ ಅಧಿವೇಶನದಲ್ಲಿ ‘ಕಾಳುಮೆಣಸಿನಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ’ ಕುರಿತು ಆಹ್ವಾನಿತ ಇಬ್ಬರು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ.
ರಾಷ್ಟ್ರೀಯ ವಿಚಾರ ಸಂಕಿರಣದ ಎರಡನೇ ದಿನದ ಕಾರ್ಯಕ್ರಮದಲ್ಲಿ ಎರಡು ತಾಂತ್ರಿಕ ಅಧಿವೇಶನವಿದ್ದು, ಮೊದಲ ತಾಂತ್ರಿಕ ಅಧಿವೇಶನದಲ್ಲಿ ‘ಕಾಳುಮೆಣಸು ಬೆಳೆಯಲ್ಲಿ ನೂತನ ಉತ್ಪಾದನಾ ತಾಂತ್ರಿಕತೆ ಮತ್ತು ಸಸ್ಯ ಸಂರಕ್ಷಣೆ’ ಕುರಿತು ಆಹ್ವಾನಿತ ಇಬ್ಬರು ಸಂಪನ್ಮೂಲ ವಿಜ್ಞಾನಿಗಳು ಮಾಹಿತಿ ನೀಡಲಿದ್ದಾರೆ. ಎರಡನೇ ತಾಂತ್ರಿಕ ಅಧಿವೇಶನದಲ್ಲಿ ‘ಕಾಳುಮೆಣಸಿನ ಬೆಳೆಯಲ್ಲಿ ಉತ್ಪಾದನೆ, ಸಂಸ್ಕರಣೆ ಮತ್ತು ಮಾರುಕಟ್ಟೆಯ ಕ್ಷೇತ್ರದಲ್ಲಿ ನಾವೀನ್ಯತೆ’ ಬಗ್ಗೆ ಸಂಪನ್ಮೂಲ ವಿಜ್ಞಾನಿಗಳು ಚರ್ಚೆ ನಡೆಸಲಿದ್ದಾರೆ. ನಂತರ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಗೆ ಸೇರುವ ಕಾಳುಮೆಣಸು ಬೆಳೆಯುವ ಪ್ರಗತಿಪರ ರೈತರು ಹಾಗೂ “ಅಂತರಾಷ್ಟಿçಯ ಕಾಳುಮೆಣಸು ಪ್ರಶಸ್ತಿ” ಪಡೆದಿರುವ ರೈತರು ತಮ್ಮ ಅನಿಸಿಕೆ ಹಂಚಿಕೊಳ್ಳಲ್ಲಿದ್ದಾರೆ. 30ಕ್ಕೂ ಹೆಚ್ಚು ಕಾಳುಮಣಸಿನ ತಳಿಗಳ ಪ್ರದರ್ಶನ ಹಾಗೂ 20ಕ್ಕೂ ಹೆಚ್ಚು ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ವಿಚಾರ ಸಂಕಿರಣದಲ್ಲಿ ಮಂಡಿಸಿದ ‘ವಿಷಯದ ಪುಸ್ತಕ’, ‘ಅಡಿಕೆಯಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸು’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸುವುದು ಹಾಗೂ ಸಸ್ಯ ತಳಿ ಸಂರಕ್ಷಣೆ ಹಾಗೂ ರೈತರ ಹಕ್ಕುಗಳ ಪ್ರಾಧಿಕಾರದಲ್ಲಿ ನೋಂದಾಯಿಸಿದ ನಾಲ್ಕು ಕಾಳುಮೆಣಸಿನ ತಳಿಗಳ ನೋಂದಣಿ ಪ್ರಮಾಣಪತ್ರವನ್ನು ರೈತರಿಗೆ ಕೊಡಲಾಗುವುದು.
Keladi Shivappa Nayak University of Agricultural ಈ ಕಾರ್ಯಕ್ರಮದಲ್ಲಿ ಡಾ. ಹೋಮಿ ಚೆರಿಯನ್, ನಿರ್ದೇಶಕರು, ಅಡಿಕೆ ಮತ್ತು ಸಾಂಬಾರ ಪದಾರ್ಥಗಳ ಅಭಿವೃದ್ಧಿ ನಿರ್ದೇಶನಾಲಯ ಕೋಜಿಕೋಡ್, ಡಾ. ಆರ್ ದಿನೇಶ್, ನಿರ್ದೇಶಕರು, ಐ.ಸಿ.ಎ.ಆರ್. ಭಾರತೀಯ ಸಾಂಬಾರು ಬೆಳೆ ಸಂಶೋಧನಾ ಸಂಸ್ಥೆ, ಅಖಿಲ ಭಾರತ ಸಂಯೋಜಿತ ಸಂಶೋಧನಾಯೋಜನೆ (ಸಾಂಬಾರು), ಡಾ. ಡಿ ಪ್ರಸಾತ್, ಯೋಜನಾ ಸಂಯೋಜಕರು, ಸಿ.ಎನ್ ಶಿವಪ್ರಕಾಶ್, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಲಿಮಿಟೆಡ್, ಬೆಂಗಳೂರು, ಮಹೇಶ್ ಹೆಚ್.ಎ¸.ï ಹುಲ್ಕುಳಿ, ಉಪಾಧ್ಯಕ್ಷರು, ಮಲ್ನಾಡ್ ಅಡಿಕೆ ಕೋ-ಆಪರೇಟಿವ್ ಮಾರ್ಕೆಟಿಂಗ್ ಸೊಸೈಟಿ ಲಿಮಿಟೆಡ್, ಶಿವಮೊಗ್ಗ, ಹೆಚ್.ಎಸ್ ಶಿವಕುಮಾರ್, ಅಧ್ಯಕ್ಷರು, ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ ನಿಯಮಿತ, ಚನ್ನಗಿರಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಡಾ. ಆರ್.ಸಿಜಗದೀಶ್, ಕುಲಪತಿಗಳು, ವಿಶ್ವವಿದ್ಯಾಲಯದ ಎಲ್ಲಾ ವಿಜ್ಞಾನಿಗಳು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಯವರು ತಮ್ಮ ಸಂಶೋಧನೆಯ ಫಲಿತಾಂಶದ ಬಗ್ಗೆಯೂ ಸಹ ಪ್ರಸ್ತುತ ಪಡಿಸಲಾಗುವುದು ಎಂದು ಡಾ. ಆರ್.ಸಿ ಜಗದೀಶ್, ಗೌರವಾನ್ವಿತ ಕುಲಪತಿಗಳು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ನವಿಲೆ, ಶಿವಮೊಗ್ಗರವರು ತಿಳಿಸಿದ್ದಾರೆ.
Keladi Shivappa Nayak University of Agricultural ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ”; ರಾಷ್ಟ್ರೀಯ ವಿಚಾರ ಸಂಕಿರಣ
Chamber Of Commerce Shivamogga ಎಂ.ಎಸ್.ಎಂ.ಇ.: ಒಂದು ದಿನನದ ಅರಿವು ಮೂಡಿಸುವ ಕಾರ್ಯಾಗಾರ
Chamber Of Commerce Shivamogga ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಹಾಗೂ ಅವೇಕ್-ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರುಗಳ ಸಹಯೋಗದಲ್ಲಿ ಜ.30 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣ, ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ “One Day Awarness workshop on BDSP” ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
Chamber Of Commerce Shivamogga ಕಾರ್ಯಕ್ರಮವನ್ನು ಬೆಂಗಳೂರಿನ ಅವೇಕ್ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಸಿ. ರವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅವೇಕ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಹೇಮಮಾಲಿನ, ಖಜಾಂಚಿ ಶ್ರೀಮತಿ ಶ್ಯಾಮಲ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಶರತ್ ಗೌಡ ಪಿ. ಹಾಗೂ ಜಿಲ್ಲಾ ಲೀಡ್ ಬ್ಯಾಂಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ. ಇವರುಗಳು ಉಪಸ್ಥಿತರಿರಲಿದ್ದಾರೆ.
MESCOM ಜ. 30 ರಿಂದ ಫೆ. 01 ರವರೆಗೆ ವಿದ್ಯುತ್ ವ್ಯತ್ಯಯ
MESCOM ಶಿವಮೊಗ್ಗ ನಗರ ಉಪವಿಭಾಗ 2, ಘಟಕ -5ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಜ. 30, 31 ಮತ್ತು ಫೆ. 01 ರಂದು 3 ದಿನಗಳು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜ. 30 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಮಿಳಗಟ್ಟ, ಬುದ್ಧನಗರ, ಕಿಣಿ ಲೇಔಟ್, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಜ. 31 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಟಿಪ್ಪುನಗರ 1 ರಿಂದ 7ನೇ ಕ್ರಾಸ್‌ವರೆಗೆ ಎಡಭಾಗ, ಕೆ.ಕೆ.ಶೆಡ್, ಪದ್ಮಾ ಟಾಕೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಫೆ. 01 ರಂದು ಬೆ. 10 ರಿಂದ ಸಂ. 04 ರವರೆಗೆ ಪಿಯರ್‌ಲೈಟ್ ಫ್ಯಾಕ್ಟರಿ, ಎನ್.ಟಿ.ರಸ್ತೆ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
Karnataka State Commission for Protection of Child Rights ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಮರಳಿ ಶಾಲೆಗೆ ಕರೆತರಲು ಸೂಚನೆ: ಅಪರ್ಣಾ ಕೊಳ್ಳ
Karnataka State Commission for Protection of Child Rights ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಣ ಬಹು ಮುಖ್ಯವಾಗಿದ್ದು ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಶಿಕ್ಷಕರು ಹಾಗೂ ಅಧಿಕಾರಿಗಳು ಮಕ್ಕಳನ್ನು ಶಾಲೆಗೆ ಮರಳಿ ಕರೆ ತರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಅಪರ್ಣಾ ಕೊಳ್ಳ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಜಿಲ್ಲಾ ಡಯಟ್ ತರಬೇತಿ ಸಂಸ್ಥೆಯಲ್ಲಿ “ ಬಾಲನ್ಯಾಯ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೊಕ್ಸೋ ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ” ಕುರಿತು ಭಾಗೀದಾರ ಇಲಾಖೆಯ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರವು ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ, ಪೌಷ್ಟಿಕ ಆಹಾರ, ವಸತಿ ಸೌಲಭ್ಯ, ಪಠ್ಯ ಪುಸ್ತಕಗಳನ್ನು ನೀಡುತ್ತಿದೆ. ಆದರೂ ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ. ಇದನ್ನು ಅಧಿಕಾರಿಗಳು ಹಾಗೂ ಶಿಕ್ಷಕರು ಗಂಭೀರವಾಗಿ ಪರಿಗಣಿಸಿ ಮಕ್ಕಳು ಹಾಗೂ ಅವರ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿ ಶಾಲೆಗೆ ಮಕ್ಕಳನ್ನು ಕರೆತರಬೇಕು. ಸರ್ಕಾರಿ ಸೌಲಭ್ಯಗಳನ್ನು ಮಕ್ಕಳು ಪಡೆದು ಶಾಲೆಯಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಬಗ್ಗೆ ಮಕ್ಕಳಿಗೆ ಶಾಲೆಯಲ್ಲಿ ಶಿಕ್ಷಕರು ಅರಿವು ಮೂಡಿಸಬೇಕು. ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಪೊಲೀಸ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿಸಬೇಕು. ಶಿಕ್ಷಕರು ಹಾಗೂ ಅಧಿಕಾರಿಗಳು ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ಬಾಲ್ಯ ವಿವಾಹ ಹಾಗೂ ಪೊಕ್ಸೋದಂತಹ ಅನಿಷ್ಟ ಪದ್ದತಿ ಕುರಿತು ಜಾಗೃತಿ ಮೂಡಿಸಿ ಅದನ್ನು ತಡೆಯಬೇಕು, ರಜೆ ದಿನಗಳಲ್ಲಿ ಶಾಲಾ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯದಂತೆ ಪೊಲೀಸ್ ವ್ಯವಸ್ಥೆ ಬಿಗಿಗೊಳಿಸಬೇಕು ಎಂದರು.
Karnataka State Commission for Protection of Child Rights ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ಹಾಗೂ ಶಾಲೆಗಳಲ್ಲಿ ಸರ್ಕಾರ ನೀಡುವ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸದಿದ್ದಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ಮಕ್ಕಳು ತಮ್ಮ ಅಹವಾಲು ನೀಡಬಹುದು ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್.ಆರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಮಕ್ಕಳ ರಕ್ಷಣೆಗೋಸ್ಕರ ಮಿಷನ್ ಸುರಕ್ಷಾ ವೆಬ್‌ಸೈಟ್‌ನ್ನು ಒಂದು ವಾರದಲ್ಲಿ ಬಿಡುಗಡೆ ಮಾಡಲಿದ್ದು, ಇದು ಬಾಲ್ಯವಿವಾಹ ಹಾಗೂ ಪೋಕ್ಸೋ ಪ್ರಕರಣ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ 214 ಪೋಕ್ಸೋ ಹಾಗೂ 54 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಇಲಾಖೆಯು ಏಪ್ರಿಲ್‌ನಿಂದ ಡಿಸೆಂಬರ್ ವರೆಗೂ 60 ಬಾಲ್ಯವಿವಾಹಗಳನ್ನು ತಡೆಗಟ್ಟಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ‘ಒಂದು ಬಾಲ್ಯ ವಿವಾಹ ತಡೆಗಟ್ಟಿದರೆ ಒಂದು ಕುಟುಂಬದ ಜೀವ ಉಳಿಸಿದಂತೆ’ ಈ ನಿಟ್ಟಿನಲ್ಲಿ ಮಕ್ಕಳಿಗೆ ರಕ್ಷಣೆ ನೀಡಲು ಸರ್ಕಾರ ಅನೇಕ ಕಾಯ್ದೆಗಳನ್ನು ಜಾರಿ ಮಾಡಿದ್ದು ಇದನ್ನು ನಾವೆಲ್ಲರೂ ಚಾಚೂ ತಪ್ಪದೆ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿ ಬಾಲ್ಯವಿವಾಹ ಮುಕ್ತ ಸಮಾಜವನ್ನು ನಿರ್ಮಿಸಬೇಕು. ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮಕ್ಕಳು ಸೇರಿದಂತೆ ಶಿಕ್ಷಕರೂ ಸಹ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಜಿ.ಕಾರ್ಯಪ್ಪ, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ.ಜಿ.ಎಂ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ರತ್ನ, ಡಯಟ್ ಪ್ರಾಂಶುಪಾಲರಾದ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
B.Y.Raghavendra ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ : ಬಿ.ವೈ.ರಾಘವೇಂದ್ರ
B.Y.Raghavendra ಹವಾಮಾನ ಆಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಜಿಲ್ಲೆಯ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಕಳೆದ ಸಾಲಿನಲ್ಲಿ ರೂ. 70-80 ಕೋಟಿಯಷ್ಟು ವಿಮಾ ಮೊತ್ತ ನಷ್ಟವಾಗಿದೆ. ಆದ್ದರಿಂದ ಬೆಳೆ ನಷ್ಟವನ್ನು ನಿರ್ಧರಿಸುವ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು.
ಜಿಲ್ಲೆಯಲ್ಲಿ ಒಟ್ಟು 280 ಮಳೆ ಮಾಪನ ಕೇಂದ್ರಗಳಿದ್ದು ಇದರಲ್ಲಿ 112 ಅಂದರೆ ಕೇವಲ ಶೇ.40 ರಷ್ಟು ಮಾತ್ರ ಕೆಲಸ ಮಾಡುತ್ತಿವೆ ಎಂದು ವರದಿ ನೀಡಲಾಗಿದೆ. ಈ ಕೇಂದ್ರಗಳ ಬ್ಯಾಕ್ ಅಪ್ ಸ್ಟೇಷನ್‌ಗಳು ಸಹ ಸರಿ ಇಲ್ಲ. ಈ ಬಗ್ಗೆ ಅಧಿಕಾರಿಗಳು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಹಾಗೂ ರೈತರಿಗೆ ವಿಮೆ ನೀಡುವಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಳೆದ ಬಾರಿ ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದರು.
ಹಾಗೂ ವಿಮೆ ನಿರ್ಧರಿಸುವ ಟರ್ಮ್ ಶೀಟ್ ಮಾನದಂಡವನ್ನು ಪಾರದರ್ಶಕಗೊಳಿಸಬೇಕು. ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ ರೈತರ ಪರವಾಗಿ, ಅವರಿಗೆ ಅನುಕೂಲವಾಗುವಂತೆ ಟರ್ಮ್ ಶೀಟ್ ನ್ನು ಸಿದ್ದಪಡಿಸಬೇಕೆಂದು ತಿಳಿಸಿದರು.
ದಿಶಾ ಸಮಿತಿ ಸದಸ್ಯರಾದ ಗುರುಮೂರ್ತಿ, ಮಲೆನಾಡಿನಲ್ಲಿ ಎಲೆ ಚುಕ್ಕಿ ರೋಗದಿಂದ 40% ಬೆಳೆ ಇಲ್ಲವಾಗಿದೆ. ಮಧ್ಯಮ ವರ್ಗದ ರೈತರಿಗೆ ತೊಂದರೆಯಾಗುತ್ತಿದ್ದು, ಹವಾಮಾನ ಆಧಾರಿತ ವಿಮೆ ಕುರಿತು ತಕ್ಷಣ ಪರಿಶೀಲಿಸಿ ನಷ್ಟ ಭರಿಸುವಂತೆ ಮನವಿ ಮಾಡಿದರು. ಹಾಗೂ ಅಂಗನವಾಡಿ, ಶಾಲೆ, ಕಚೇರಿಗಳ ಮೇಲ್ಛಾವಣಿ ಸೋರಿಕೆ ಸಾಮಾನ್ಯವಾಗಿದ್ದು, ಈ ಕಟ್ಟಡಗಳ ಕಾಮಗಾರಿ ನಿರ್ವಹಿಸಿದ ಏಜೆನ್ಸಿಗಳನ್ನು ಪರಿಶೀಲಿಸಿ ಬ್ಲಾಕ್ ಲಿಸ್ಟ್ಗೆ ಸೇರಿಸುವ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದರು.
ಸAಸದರು, ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಎಸ್ ಸಿ ಜನಸಂಖ್ಯೆ ಶೇ.40 ಕ್ಕಿಂತ ಹೆಚ್ಚಿರುವ ಗ್ರಾಮಗಳಿಗೆ ಸಮಗ್ರ ಅಭಿವೃದ್ದಿ ಕೈಗೊಳ್ಳಲು ಪ್ರಸಕ್ತ ವರ್ಷ 16 ಗ್ರಾಮಗಳು ಆಯ್ಕೆಯಾಗಿದ್ದು ಸರ್ಕಾರ ಇಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.
ಶಿವಮೊಗ್ಗ -ತುಮಕೂರು ರಾಷ್ಟಿçÃಯ ಹೆದ್ದಾರಿ ಕಾಮಗಾರಿಗೆ ಸಂಬAಧಿಸಿದAತೆ ಕೆಲಸಗಳನ್ನು ಚುರುಕುಗೊಳಿಸಿ, ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಮುಗಿಸಬೇಕು. ಈ ಯೋಜನೆ ಮಂಜೂರಾಗಿ 4-5 ವರ್ಷಗಳಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಕುರಿತು ಸ್ಪಷ್ಟತೆ ನೀಡಬೇಕು. ಹಾಲಿನ ಡೈರಿ ಬಳಿಯ ಅಂಡರ್ ಪಾಸ್ ಕೆಲಸವನ್ನು ತ್ವರಿತ ಗತಿಯಲ್ಲಿ ಮಾಡಬೇಕು. ಇಲ್ಲಿ ಜನರು ಮಕ್ಕಳು ಓಡಾಡುವುದು ತುಂಬಾ ಕಷ್ಟವಾಗಿದೆ ಹಾಗೂ ಶಿವನಿ ಮತ್ತು ಬೆಲೇನಹಳ್ಳಿಯಲ್ಲಿಯೂ ಓಡಾಟ ಕಷ್ಟ ಆಗುತ್ತಿದೆ. ಆದ್ದರಿಂದ ಎನ್‌ಹೆಚ್ ಅಧಿಕಾರಿಗಳು ಕೆಲಸಗಳನ್ನು ಶೀಘ್ರದಲ್ಲಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ಶಿಕಾರಿಪುರ ತಾಲ್ಲೂಕಿನ ಕಲ್ಲಾಪುರ ಗೇಟ್ ಯಿಂದ ಕುಟ್ರಳ್ಳಿವರೆಗೆ ಕೇವಲ 30 ಕಿ ಮೀ ಇದ್ದರೂ ಇಲ್ಲಿ ಟೋಲ್ ನಿರ್ಮಿಸಿದ್ದು ಈ ಟೋಲ್ ಗೇಟಿನಿಂದಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ನಿಯಮಾವಳಿ ಪ್ರಕಾರ 60 ಕಿ.ಮೀ ಗೆ ಟೋಲ್ ನಿರ್ಮಿಸಬಹುದು ಎಂದಿದೆ. ಆದ್ದರಿಂದ ಈ ಟೋಲ್‌ನ್ನು ಬೇರೆಡೆ ಶಿಫ್ಟ್ ಮಾಡಬೇಕೆಂದು ಸದಸ್ಯರು, ಸಂಸದರು ತಿಳಿಸಿದರು.
ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ಅಂಡರ್ ಬ್ರಿಡ್ಜ್ಗೆ ಅನುಮೋದನೆ ದೊರೆತು ಒಂದು ವರ್ಷವಾಗಿದ್ದು ಶೀಘ್ರ ಕಾರ್ಯಾರಂಭ ಮಾಡಬೇಕು ಹಾಗೂ ರೂ.73 ಕೋಟಿ ವೆಚ್ಚದಲ್ಲಿ ಮಂಜೂರಾಗಿರುವ ಫ್ರೀಡಂ ಪಾರ್ಕ್ ಹಿಂದಿನ ಆರ್‌ಓಬಿ ಕಾಮಗಾರಿಯನ್ನು ಸಹ ಶೀಘ್ರದಲ್ಲಿ ಆರಂಭಿಸಬೇಕೆAದು ರೈಲ್ವೆ ಅಧಿಕಾರಿಗಳು ಮತ್ತು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಸಾಗರ ತಾಲ್ಲೂಕಿನ ಮೇಘಾನೆಯಲ್ಲಿ ಬಿಎಸ್ ಎನ್ ಎಲ್ ಟವರ್ ಆಗಬೇಕು. ಪ್ರಸ್ತುತ ಅಳವಡಿಸಲಾಗಿರುವ ಟವರ್‌ಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಸರಪಡಿಸಬೇಕು. ಹಳೆಯ ಟವರ್ ಗಳನ್ನು ಪರಿಶೀಲಿಸಿ ದುರಸ್ತಿಪಡಿಸಬೇಕು ಹಾಗೂ ಇದಕ್ಕೆ ಸಂಬAಧಿಸಿದ ಬಾಕಿ ಕಡತಗಳನ್ನು ವಿಲೇ ಮಾಡಬೇಕೆಂದು ಬಿಎಸ್‌ಎನ್‌ಎಲ್ ಎಜಿಎಂ ರಿಗೆ ಸೂಚನೆ ನೀಡಿದರು.
ಪಿಎಂಜಿಎಸ್‌ವೈ ಯೋಜನೆಯಡಿ ರಾಜ್ಯಕ್ಕೆ ಒಟ್ಟು 53 ಕಾಮಗಾರಿಗಳು ಮಂಜೂರಾಗಿದ್ದು ಅದರಲ್ಲಿ ಶೇ.50 ರಷ್ಟು ಅಂದರೆ 25 ಕಾಮಗಾರಿಗಳು ಶಿವಮೊಗ್ಗ ಜಿಲ್ಲೆಗೆ ಮಂಜೂರಾಗಿದ್ದು, ಹೊಸನಗರ 14, ಸಾಗರ 06, ತೀರ್ಥಹಳ್ಳಿ 01 ಸೊರಬ 04 ಕಾಮಗಾರಿಗಳು ಮಂಜೂರಾಗಿದ್ದು ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.
ರಸ್ತೆ ಡಾಂಬರೀಕರಣ ಹಾಳಾಗಿರುವೆಡೆ ಜಿ.ಪಂ ಸಿಇಓ ಅವರು ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಬೇಕು ಎಂದ ಅವರು ಪಿಎಂಜಿಎಸ್‌ವೈ ಯೋಜನೆಯ ಕಾಮಗಾರಿಗಳನ್ನು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದು ಇತರೆ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯವೆಸಗಬೇಕೆಂದರು.
B.Y.Raghavendra ದಿಶಾ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ್ ಮಾತನಾಡಿ, ರಸ್ತೆಗಳಲ್ಲಿ ಶಾರ್ಟ್ ಕರ್ವ್ಗಳಿಂದಾಗಿ ರಸ್ತೆ ಅಪಘಾತಗಳು ಹೆಚ್ಚುತ್ತಿವೆ ಆದ್ದರಿಂದ ಎನ್ ಹೆಚ್ ಸೇರಿದಂತೆ ಎಲ್ಲ ರಸ್ತೆ ಗಳಲ್ಲಿ ಬ್ಲಾಕ್ ಸ್ಪಾಟ್ಸ್ಗಳನ್ನು ಗುರುತಿಸಿ ಪಟ್ಟಿ ಮಾಡಿ, ಸೂಕ್ತ ಕ್ರಮ ವಹಿಸಬೇಕೆಂದು ಹಾಗೂ ಜನರಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜನರಿಗೆ ನ್ಯಾಯ ಒದಗಿಸಬೇಕು ಹಾಗೂ ಜಲಶಕ್ತಿ ಯೋಜನೆಯನ್ನು ಸರಿಪಡಿಸಬೇಕೆಂದು ಮನವಿ ಮಾಡಿದರು.
ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರರು ಮಾತನಾಡಿ ಜೆಜೆಎಂ ಯೋಜನೆಯಡಿ ಜಿಲ್ಲೆಗೆ ಓವರ್‌ಹೆಡ್, ಬೋರ್‌ವೆಲ್, ನಳ ಸಂಪರ್ಕ ಸೇರಿ 2528 ಕಾಮಗಾರಿಗಳು ಮಂಜುರಾಗಿದ್ದು 2023 ಪೂರ್ಣಗೊಂಡಿವೆ, 494 ಚಾಲ್ತಿಯಲ್ಲಿದ್ದು ಶೇ.86 ಕೆಲಸ ಆಗಿದೆ. ರೂ 728 ಕೋಟಿ ಮಂಜೂರಾಗಿದ್ದು 628 ಕೋಟಿ ವೆಚ್ಚವಾಗಿದೆ ಎಂದರು.
ದಿಶಾ ಸಮಿತಿ ಸದಸ್ಯರಾದ ಗಿರೀಶ್ ಭದ್ರಾಪುರ ಮಾತನಾಡಿ 70 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕೊಳಚೆ ನೀರು ನದಿಗೆ ಸೇರ್ಪಡೆಯಾಗುತ್ತಿರುವ ಕಾರಣ ಆ ನೀರು ತಮಗೆ ಬೇಡವೆಂದು ಪಿಳ್ಳಂಗಿರಿ, ಬುಳ್ಳಾಪುರ ಇತರೆ ಗ್ರಾಮಸ್ಥರು ಈ ನೀರನ್ನು ಬಳಕೆ ಮಾಡಲು ಒಪ್ಪುತ್ತಿಲ್ಲ. ಗುಂಡಪ್ಪ ಶೆಡ್, ರಾಮಣ್ಣಶೆಟ್ಡಿ ಪಾರ್ಕ್ ಮತ್ತು ಚಟ್ನಹಳ್ಳಿಯಲ್ಲಿ ಕೊಳಚೆ ನೀರು ನದಿಗೆ ಸೇರ್ಪಡೆಯಾಗುತ್ತಿದ್ದು ಇದನ್ನು ಕೂಡಲೇ ಪರಿಶೀಲಿಸಿ ಕ್ರಮ ವಹಿಸಬೇಕೆಂದರು.
ಸAಸದರು, ಶಿವಮೊಗ್ಗ ಸೇರಿದಂತೆ ಭದ್ರಾವತಿ ಮತ್ತು ಇತರ ನಗರ ಪ್ರದೇಶದಲ್ಲಿ ಕೊಳಚೆ ನೀರು ನದಿಗೆ ಸೇರುತ್ತಿರುವ ಬಗ್ಗೆ ಪರಿಶೀಲಿಸಿ ಆದ್ಯತೆ ಮೇಲೆ ಇದನ್ನು ತಡೆ ಹಿಡಿಯಬೇಕು ಎಂದು ಸೂಚಿಸಿದರು.
ಕೋಟೆಗಂಗೂರು ಮತ್ತು ಶಿಕಾರಿಪುರ ಬ್ರಾಡ್‌ಗೇಜ್ ಯೋಜನೆಗೆ ಸಂಬಂಧಿಸಿದಂತೆ ಇಲ್ಲಿಗೆ ಕರ್ನಾಟಕ ನಗರ ನೀರು ಮಂಡಳಿ ವತಿಯಿಂದ ನೀರು ಸರಬರಾಜು ಮಾಡಲು ಕ್ರಮ ವಹಿಸುವಂತೆ ತಿಳಿಸಿದರು. ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ: 2024–25ನೇ ಸಾಲಿನ ಸಂಸತ್ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ,ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಮಾಡಿ, ವಿಕಲಚೇತನರು ಸ್ವಾವಲಂಬಿಗಳಾಗಿ, ಆತ್ಮಗೌರವದೊಂದಿಗೆ ಬದುಕು ಕಟ್ಟಿಕೊಳ್ಳಲು ಚಲನೆಯ ಸ್ವಾತಂತ್ರ‍್ಯ ಅತ್ಯಂತ ಅವಶ್ಯಕ. ಈ ದ್ವಿಚಕ್ರವಾಹನಗಳು ಅವರ ಶಿಕ್ಷಣ, ಉದ್ಯೋಗ ಹಾಗೂ ದಿನನಿತ್ಯದ ಜೀವನವನ್ನು ಸುಲಭಗೊಳಿಸಿ, ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.
ಜಿಲ್ಲೆಯಲ್ಲಿ ಚಡ್ಡಿ ಗ್ಯಾಂಗ್ ಸೇರಿದಂತೆ ಕಳ್ಳತನ ಹೆಚ್ಚಾಗಿದ್ದು, ಶೇ.10 ರಿಂದ 12 ಮಾತ್ರ ರಿಕವರಿ ಆಗುತ್ತಿದೆ. ಹಾಗೂ ಜಿಲ್ಲೆಯಲ್ಲಿ ಗಾಂಜಾ, ಓಸಿ, ಮಟ್ಕಾ, ಗ್ರಾಮಗಳಲ್ಲಿ ಸೆಕೆಂಡ್ಸ್ ಮದ್ಯ ಮಾರಾಟ ಹೆಚ್ಚಿದ್ದು, ಇದನ್ನು ನಿಯಂತ್ರಿಸಲು ಮತ್ತು ತಡೆಯಲು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿ.ವೈ.ರಾಘವೇಂದ್ರ ಹೇಳಿದರು.
ಸಭೆಯಲ್ಲಿ ದಿಶಾ ಸಮಿತಿ ಸದಸ್ಯರಾದ ದೇವೇಂದ್ರಪ್ಪ, ಮಹಾದೇವಪ್ಪ, ಸುವರ್ಣ, ಗುರುಮೂರ್ತಿ, ಗಿರೀಶ್ ಭದ್ರಾಪುರ, ಆನಂದ್ , ನಗರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾ ಪಂ ಅಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ವಸತಿ ಶಾಲೆಯ 14 ಮಕ್ಕಳಲ್ಲಿ ಒಟ್ಟಿಗೆ ಕೆಮ್ಮು ಆಸ್ಪತ್ರೆಗೆ ದಾಖಲು
ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳಲ್ಲಿ ಒಟ್ಟಿಗೆ ಕೆಮ್ಮು ಕಾಣಿಸಿಕೊಂಡಿದೆ.
ಕಳೆದ 3 ದಿನಗಳಿಂದ 14 ಮಕ್ಕಳು ನಿರಂತರ ಕೆಮ್ಮುತ್ತಿದ್ದ ಹಿನ್ನೆಲೆ ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿ.ಇ.ಓ., ಟಿ ಹೆಚ್ ಓ, ಆರೋಗ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು
ಶಿವಮೊಗ್ಗ ಭದ್ರಾವತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ವಾಂತಿ ಬೇದಿಯಾಗಿ , ಅಸ್ವಸ್ಥ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಊಟ ಆದ ಮೇಲೆ ನೀಡಿದ ರಕ್ತ ಅಭಿವೃದ್ಧಿಗೆ ನೀಡುವ ಟಾನಿಕ್ ನಿಂದ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಸರ್ಕಾರಿ ಆದೇಶದ ಹಿನ್ನಲೆಯಲ್ಲಿ ಟಾನಿಕ್ ನೀಡಿದ ಮೇಲೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಚಲನ ಚಿತ್ರನಟ ಸೂರಜ್
ಕುಂಭಾಶಿ ಕ್ರಿಯೇಷನ್ ಲಾಂಛನದಲ್ಲಿ ಮೂಡಿ ಬರುತ್ತಿರುವ “ಪ್ರಣಯ “” ಕನ್ನಡ ಚಲನಚಿತ್ರದ ನಟ ಸೂರಜ್ ರವರು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ತಾಲೂಕು ಮಟ್ಟದ ವಿತರಕರ ಕ್ಯಾಲೆಂಡರನ್ನು ವಿಶೇಷ ಪೂಜೆ ವಿಧಿ ವಿಧಾನದೊಂದಿಗೆ ಕ್ಷೇತ್ರ ದೇವತೆ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿತರಕ ಹಿರಿಯ ಪತ್ರಕರ್ತ ಜಿಕೆ ಹೆಬ್ಬಾರ್ ಮಾತನಾಡಿ ಪತ್ರಕರ್ತರು ಹಾಗೂ ವಿತರಕರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸಂಪಾದಕರು ಬಂಡವಾಳ ಹಾಕಿ ಶ್ರಮಿಸಿದರೆ ವರದಿಗಾರರು ಮುಂದಿನ ಸವಾಲುಗಳನ್ನು ಎದುರಿಸಿ ಸುದ್ದಿಗಳನ್ನು ತರುತ್ತಾರೆ. ಸಿಬ್ಬಂದಿಗಳು ಅದನ್ನು ಮುದ್ರಿಸಿ ಓದುಗರ ಮನ ಮುಟ್ಟಿಸಲು ಪ್ರಯತ್ನ ಪಡುತ್ತಾರೆ ಆದರೆ ವಿತರಕರು ಚಳಿ ಗಾಳಿ ಬಿಸಿಲು ಎನ್ನದೆ ಬೆಳಿಗ್ಗೆ ನಸುಕಿನಲ್ಲಿ ಎದ್ದು ಇವರೆಲ್ಲರ ಶ್ರಮದ ಫಲವನ್ನು ಮನೆ ಮನೆಗೆ ತಲುಪಿಸುವ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುತ್ತಾರೆ ಇವರ ಈ ಉತ್ತಮ ಸೇವೆ ಪತ್ರಿಕೆ ಅಭಿವೃದ್ಧಿಗೆ ಪೂರಕ ಹಾಗಾಗಿ ವರದಿಗಾರರು ಹಾಗು ವಿತರಕರು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುತ್ತಾರೆ ಎಂದು ಹಿರಿಯ ಪತ್ರಕರ್ತ ಜಿಕೆ ಹೆಬ್ಬಾರ್ ಅಭಿಪ್ರಾಯೆಸಿದರು. ಸರ್ಕಾರ ವಿತರಕರ ಗೋಳನ್ನ ಅರಿತು ಅವರಿಗೆ ಸೇವಾ ಭದ್ರತೆ ಆರೋಗ್ಯ ವಿಮೆಯಂತಹ ಸೌಲಭ್ಯಗಳನ್ನು ನೀಡುವುದು ಸೂಕ್ತ ಪತ್ರಿಕೆ ಅಭಿವೃದ್ಧಿಗೆ ವಿತರಕನ ಶ್ರಮ ಅನನ್ಯ ಹಾಗಾಗಿ ವಿತರಕರಿಗೆ ಯಾವುದೇ ಸರ್ಕಾರ ಬಂದರೂ ಆರ್ಥಿಕ ಭದ್ರತೆಯ ಯೋಜನೆಗಳನ್ನು ನೀಡಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು. ಹಿರಿಯ ಅರ್ಚಕರಾದ ಪಾಂಡುರಂಗ ಹಾಗೂ ಹಿಮಾಲಯ ರವರು ಇತರರು ಉಪಸ್ಥಿತರಿದ್ದು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಸಂಭ್ರಮಿಸಿದರು
ಸಂಪೂರ್ಣ ಸುಟ್ಟು ಭಸ್ಮವಾದ ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್
ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ ಘಟನೆ ನಡೆದಿದೆ.
ಶ್ರೀ ಅನ್ನಪೂರ್ಣೇಶ್ವರಿ ಎಂಬ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ನಡೆದ ಈ ಘಟನೆ ಸಂಭವಿಸಿದೆ.
ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಸ್ಲೀಪರ್ ಬಸ್ ಇದಾಗಿದ್ದು,
ಚಾಲಕ ಸೇರಿದಂತೆ 40 ಜನ ಪ್ರಯಾಣಿಸುತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಎಂಟು ಜನರಿಗೆ ಗಾಯಯಳಾಗಿವೆ.ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾದ ನಂತರ ಚಾಲಕ ಬಸ್ ನಿಲ್ಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ, ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಫೆಬ್ರವರಿ 01 ರಂದು ಶಿವಮೊಗ್ಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ನಾಮ ನಿರ್ದೇಶಕರು,ಜಿಲ್ಲಾ ಮಡಿವಾಳ ಸಮಾಜದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು, ತ್ಯಾಗರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಳೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ನಾಗರಾಜ ಎ.ಎಂ.ರವರು ವಿಶೇಷ ಉಪನ್ಯಾಸ ನೀಡುವರು.
