Tuesday, August 11, 2026
Tuesday, August 11, 2026
Home Blog Page 220

Thawar Chand Gehlot ಜ್ಞಾನಾಧಾರಿತ ಆರ್ಥಿಕತೆಯಿಂದ ನಾವೀನ್ಯತೆ ಆಧಾರಿತ ಶಕ್ತಿಯಾಗಿ ಭಾರತ ರೂಪುಗೊಳ್ಳಬೇಕು: ಶ್ರೀ ಥಾವರ್ ಚಂದ್ ಗೆಹ್ಲೋಟ್

0

Thawar Chand Gehlot “ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಪರಿಸರ ಮತ್ತು ಡಿಜಿಟಲ್ ಸೇರ್ಪಡೆಯಂತಹ ಸವಾಲುಗಳಿಗೆ ಪರಿಹಾರಗಳನ್ನು ನೀಡುವ ನವೋದ್ಯಮಗಳನ್ನು ವಿಶ್ವವಿದ್ಯಾಲಯಗಳು ಪ್ರೋತ್ಸಾಹಿಸಬೇಕು” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ದಕ್ಷಿಣ ವಲಯದ ಕುಲಪತಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. “ವಿಶ್ವವಿದ್ಯಾಲಯಗಳು ಉದ್ಯಮಶೀಲತೆಯ ಕೇಂದ್ರಗಳಾದಾಗ ಮಾತ್ರ ಭಾರತವು ಜ್ಞಾನಾಧಾರಿತ ಆರ್ಥಿಕತೆಯಿಂದ ನಾವೀನ್ಯತೆ ಆಧಾರಿತ ಸೂಪರ್ ಪವರ್‌ಗೆ ಚಲಿಸುತ್ತದೆ. ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಭಾಗವಹಿಸುವಂತೆ ಮಾಡಲು, ಅವರಿಗೆ ಇತ್ತೀಚಿನ ಜ್ಞಾನ ಮತ್ತು ತಂತ್ರಜ್ಞಾನವನ್ನು ಪರಿಚಯಿಸುವ ಅವಶ್ಯಕತೆಯಿದೆ, ಇದರಿಂದ ಅವರು ತಮ್ಮ ಕೆಲಸದ ದಕ್ಷತೆಯನ್ನು ಬಳಸಿಕೊಳ್ಳಬಹುದು ಮತ್ತು ಸ್ವ-ಉದ್ಯೋಗದತ್ತ ಪ್ರೇರಣೆ ಪಡೆಯಬಹುದು ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬಹುದು” ಎಂದರು.

“ದಕ್ಷಿಣ ಭಾರತವು ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಯಾವಾಗಲೂ ನಾಯಕತ್ವವನ್ನು ಒದಗಿಸಿದೆ. ಬೆಂಗಳೂರಿನಂತಹ ನಗರಗಳು ಶಿಕ್ಷಣ, ಸಂಶೋಧನೆ ಮತ್ತು ಕೈಗಾರಿಕೆಗಳು ಒಟ್ಟಿಗೆ ಸೇರಿದಾಗ, ಜಾಗತಿಕ ಮಟ್ಟದ ನವೋದ್ಯಮಗಳು ಮತ್ತು ನಾವೀನ್ಯತೆಗಳು ಹುಟ್ಟುತ್ತವೆ ಎಂಬುದನ್ನು ಸಾಬೀತುಪಡಿಸಿವೆ. ನಾವು ಈ ಮಾದರಿಯನ್ನು ದೇಶದ ಇತರ ಭಾಗಗಳಿಗೂ ವಿಸ್ತರಿಸಬೇಕಾಗಿದೆ. “ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಚಿಂತನೆಯನ್ನು ಬೆಳೆಸಲು-ಶಿಕ್ಷಣ, ತಾಂತ್ರಿಕ-ರಾಷ್ಟ್ರೀಯತೆಯನ್ನು ಉತ್ತೇಜಿಸಲು ಇನ್ಕ್ಯುಬೇಷನ್ ಮತ್ತು ನಾವೀನ್ಯತೆ ಕೇಂದ್ರಗಳ ಸ್ಥಾಪನೆ, ನವೋದ್ಯಮ ಅಭಿವೃದ್ಧಿಗಾಗಿ ವಿಶ್ವವಿದ್ಯಾಲಯ-ಉದ್ಯಮ ಸಹಯೋಗ” ವಿಷಯಗಳ ಬಗ್ಗೆಯೂ ಚರ್ಚಿಸಲಾಗುವುದು. ಈ ಮೂರು ಉಪವಿಷಯಗಳು ಸಹ ಬಹಳ ಅರ್ಥಪೂರ್ಣವಾಗಿವೆ. ಉದ್ಯಮಶೀಲತೆಯು ಆರ್ಥಿಕ ಸಮೃದ್ಧಿಗೆ ಕೇವಲ ಒಂದು ಸಾಧನವಲ್ಲ, ಸಾಮಾಜಿಕ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಮತ್ತು ಎಲ್ಲರನ್ನೂ ಒಳಗೊಳ್ಳುವ ಪ್ರಗತಿಗೆ ಪ್ರಬಲ ಸಾಧನವಾಗಿದೆ” ಎಂದು ಹೇಳಿದರು.
“ಭಾರತವು ಜ್ಞಾನ, ನಾವೀನ್ಯತೆ ಮತ್ತು ಉದ್ಯಮಶೀಲತೆಯಿಂದ ನಡೆಸಲ್ಪಡುವ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಸ್ಟಾರ್ಟ್ಅಪ್ ಇಂಡಿಯಾ, ಆತ್ಮನಿರ್ಭರ ಭಾರತ್ ಮತ್ತು ಮೇಕ್ ಇನ್ ಇಂಡಿಯಾದಂತಹ ರಾಷ್ಟ್ರೀಯ ಅಭಿಯಾನಗಳು ದೇಶದ ಭವಿಷ್ಯವು ಪದವಿ ಪಡೆದ ಯುವಕರನ್ನು ಮತ್ತು ಉದ್ಯೋಗ ಸೃಷ್ಟಿಕರ್ತರನ್ನು ಸಿದ್ಧಪಡಿಸುವಲ್ಲಿದೆ ಎಂದು ಸ್ಪಷ್ಟಪಡಿಸಿವೆ. ಈ ದಿಕ್ಕಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ನಿರ್ಣಾಯಕವಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸ್ಟಾರ್ಟ್‌ಅಪ್ ಸಂಸ್ಕೃತಿಯನ್ನು ಬೆಳೆಸುವುದರಿಂದ ವಿದ್ಯಾರ್ಥಿಗಳಲ್ಲಿ ಸಮಸ್ಯೆ ಪರಿಹಾರ, ಅಪಾಯ-ತೆಗೆದುಕೊಳ್ಳುವಿಕೆ ಮತ್ತು ಸೃಜನಶೀಲ ಚಿಂತನೆ ಬೆಳೆಯುತ್ತದೆ. ಇನ್‌ಕ್ಯುಬೇಷನ್ ಕೇಂದ್ರಗಳು, ಸ್ಟಾರ್ಟ್‌ಅಪ್ ಲ್ಯಾಬ್‌ಗಳು, ಉದ್ಯಮ-ಶೈಕ್ಷಣಿಕ ಸಹಯೋಗಗಳು ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಕಾರ್ಯಸಾಧ್ಯವಾದ ಉತ್ಪನ್ನಗಳು ಮತ್ತು ಸೇವೆಗಳಾಗಿ ಪರಿವರ್ತಿಸಲು ವೇದಿಕೆಯನ್ನು ಒದಗಿಸುತ್ತವೆ” ಎಂದು ಅಭಿಪ್ರಾಯಪಟ್ಟರು.
“ಈ ಸಮ್ಮೇಳನದ ವಿಷಯವಾದ “ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯಮಶೀಲತೆ ಮತ್ತು ನವೋದ್ಯಮಗಳನ್ನು ಬೆಳೆಸುವುದು” ಅತ್ಯಂತ ಸೂಕ್ತವಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳು ಪದವಿ ಪ್ರದಾನ ಕೇಂದ್ರಗಳಷ್ಟೇ ಅಲ್ಲ, ನಾವೀನ್ಯತೆ, ನಾಯಕತ್ವ ಮತ್ತು ರಾಷ್ಟ್ರ ನಿರ್ಮಾಣದ ಕೇಂದ್ರಗಳೂ ಆಗಿವೆ. ಇಂದು ಉದ್ಯಮಶೀಲತೆ ಮತ್ತು ನವೋದ್ಯಮಗಳ ಯುಗ, ಇಲ್ಲಿ ಯುವಜನರ ಆಲೋಚನೆಗಳು ದೊಡ್ಡ ಆಸ್ತಿಯಾಗಿದೆ. ಈ ಆಲೋಚನೆಗಳಿಗೆ ಸರಿಯಾದ ಮಾರ್ಗದರ್ಶನ, ಸಂಪನ್ಮೂಲಗಳು ಮತ್ತು ಅವಕಾಶಗಳನ್ನು ನೀಡಿದರೆ, ಅವು ಸ್ವಾವಲಂಬಿಯಾಗುತ್ತವೆ ಮತ್ತು ಸಮಾಜ ಮತ್ತು ದೇಶಕ್ಕೆ ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಪ್ರಸ್ತುತ ಸನ್ನಿವೇಶಗಳು ಮತ್ತು ಭವಿಷ್ಯದ ನಿರೀಕ್ಷೆಗಳನ್ನು ಗಮನಿಸಿದರೆ, ಉನ್ನತ ಶಿಕ್ಷಣದ ಭವಿಷ್ಯವನ್ನು ರೂಪಿಸುವಲ್ಲಿ ಭಾರತದ ಪಾತ್ರದ ಬಗ್ಗೆ ಚಿಂತಿಸುವ ಸಮಯ ಬಂದಿದೆ” ಎಂದು ತಿಳಿಸಿದೆ.
Thawar Chand Gehlot “1925 ರಲ್ಲಿ ಸ್ಥಾಪನೆಯಾದ ಭಾರತೀಯ ವಿಶ್ವವಿದ್ಯಾಲಯಗಳ ಸಂಘವು ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯ ಪ್ರಮುಖ ಉನ್ನತ ಸಂಸ್ಥೆಯಾಗಿದೆ. ಪ್ರಾರಂಭದಿಂದಲೂ, ಈ ಸಂಸ್ಥೆಯು ದೇಶದ ವಿಶ್ವವಿದ್ಯಾಲಯಗಳಲ್ಲಿ ಸಮನ್ವಯ, ಗುಣಮಟ್ಟ ಹೆಚ್ಚಿಸುವಿಕೆ ಮತ್ತು ರಾಷ್ಟ್ರೀಯ ಏಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದು ಸಂಶೋಧನೆ, ನಾವೀನ್ಯತೆ, ಡಿಜಿಟಲ್ ಶಿಕ್ಷಣ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನವನ್ನು ಸಹ ಸಕ್ರಿಯವಾಗಿ ಬೆಂಬಲಿಸುತ್ತದೆ. AIU ಕ್ರೀಡೆಗಳಿಗೂ ಗಮನಾರ್ಹ ಕೊಡುಗೆಗಳನ್ನು ನೀಡುತ್ತದೆ. ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸ್ಪರ್ಧೆಗಳ ಮೂಲಕ, ಇದು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳನ್ನು ರೂಪಿಸಿದೆ” ಎಂದು ಶ್ಲಾಘಿಸಿದರು.

“ಬೆಂಗಳೂರಿನ ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾನಿಲಯವು ತನ್ನ ದೂರದೃಷ್ಟಿಯ ಶೈಕ್ಷಣಿಕ ವಾತಾವರಣ, ಸಂಶೋಧನಾ ಚಟುವಟಿಕೆಗಳು, ನವೀನ ಬೋಧನಾ ವಿಧಾನಗಳು ಮತ್ತು ಸರ್ವತೋಮುಖ ಅಭಿವೃದ್ಧಿಗೆ ಬದ್ಧತೆಗೆ ಹೆಸರುವಾಸಿಯಾಗಿದೆ. ಆಧುನಿಕ ಮೂಲಸೌಕರ್ಯ, ಅಂತರಶಿಸ್ತೀಯ ವಿಧಾನ ಮತ್ತು ಬಲವಾದ ಕೈಗಾರಿಕಾ ಸಂಪರ್ಕಗಳ ಮೂಲಕ, ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಬೌದ್ಧಿಕವಾಗಿ ಮತ್ತು ವೈಯಕ್ತಿಕವಾಗಿ ಬೆಳೆಯಲು ಅವಕಾಶಗಳನ್ನು ಒದಗಿಸುತ್ತದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಎಂ.ಆರ್. ಜಯರಾಮ್, ಎಐಯು ಅಧ್ಯಕ್ಷ ಪ್ರೊಫೆಸರ್ ವಿನಯ್ ಕುಮಾರ್ ಪಾಠಕ್, ಪ್ರಧಾನ ಕಾರ್ಯದರ್ಶಿ ಡಾ. ಶ್ರೀಮತಿ ಪಂಕಜ್ ಮಿತ್ತಲ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

0

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಜ.24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಾಲ್ಕು ದಿನಗಳ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಜ.24 ರ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರು ನೆರವೇರಿಸುವರು.

ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.
ವಿಶೇಷತೆಗಳು : ಸುಮಾರು 2 ಲಕ್ಷ ಸಂಖ್ಯೆಯ ವಿವಿಧ ಬಣ್ಣದ ಹೂವುಗಳಾದ ಗುಲಾಬಿ, ಸೇವಂತಿಗೆ, ಆಂಥೋರಿಯA, ಕಾಮಿನಿ ಲೆ ಮತ್ತು ಫೋಲಿಯೇಜ್ ಗಿಡಗಳನ್ನು ಬಳಸಿ ವಿಶೇಷವಾದ ಹೂವಿನ ಕಲಾಕೃತಿಗಳನ್ನು ರಚನೆ ಇರುತ್ತದೆ.
ವಿವಿಧ ಜಾತಿಯ ಹೂವುಗಳಿಂದ 16 ಅಡಿ ಎತ್ತರದ ಕೋಟೆ ಹಾಗೂ ಕೆಳದಿ ಶಿವಪ್ಪ ನಾಯಕನ ಪ್ರತಿಮೆ ರಚನೆ, 15 ಅಡಿ ಎತ್ತರದ ಬಳ್ಳಿಗಾವಿ ಕೇದಾರೇಶ್ವರ ದೇವಸ್ಥಾನ ರಚನೆ. ಹೂವುಗಳು ಹಾಗೂ ಫೋಲಿಯೇಜ್‌ನಿಂದ 60 ಅಡಿ ಅಗಲ * 22 ಅಡಿ ಎತ್ತರದ ಜೋಗ ಜಲಪಾತದ ಕಲಾಕೃತಿಗಳು ಈ ಬಾರಿಯ ಆಕರ್ಷಣೆಗಳಾಗಿದ್ದು, ಹೂವಿನ ಐ ಲವ್ ಶಿವಮೊಗ್ಗ ಸೆಲ್ಫಿ ಪಾಯಿಂಟ್ ಕುಜ್ಬ ಗಿಡಗಳು(ಬೋನ್ಸಾಯ್) ಗಿಡಗಳ ಪ್ರದರ್ಶನ ಸಹ ಇರುತ್ತದೆ.
ಮಾರಾಟ ಮೇಳ –ಕ್ರಾಫ್ಟ್ಸ್ ಆಫ್ ಮಲ್ನಾಡ್ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಸ್ವ ಸಹಾಯ ಗುಂಪಿನ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದ್ದು 12163 ಮಹಿಳಾ ಸ್ವಸಹಾಯ ಸಂಘಗಳಡಿ 126456 ಕುಟುಂಬಗಳನ್ನು ಗ್ರಾಮೀಣ ಅಭಿಯಾನದಡಿ ಸಂಘಟಿಸಲಾಗಿದೆ.
ಕ್ರಾಫ್ಟ್÷್ಸ ಆಫ್ ಮಲ್ನಾಡ್ ಎಂಬ ಹೆಸರಿನಡಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಬ್ರಾಂಡಿಗ್ ಮಾಡಿದ್ದು, ಈಗಾಗಲೇ ಈ ಬ್ರಾಂಡ್ ಅಡಿಯಲ್ಲಿ ಮಹಿಳೆಯರು ತಯಾರಿಸಿದ ದೀಪಗಳು ಮತ್ತಿತರೆ ಉತ್ಪನ್ನಗಳ ಉತ್ತಮ ಮಾರಾಟವಾಗಿದೆ. ಇದೀಗ ವಿಶೇಷವಾಗಿ ಇ-ಕಾಮರ್ಸ್ ವೆಬ್‌ಸೈಟ್ ರಚನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯದ ವಿವಿಧ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ತಯಾರಿ ಮಾಡಿಕೊಳ್ಳಲಾಗಿದ್ದು ಮೇಳದ ಉದ್ಘಾಟನೆಯಂದು ಜಿಲ್ಲಾ ಉಸ್ತುವಾರಿ ಸಚಿವರು ವೆಬ್‌ಸೈಟ್‌ಗೆ ಚಾಲನೆ ನೀಡುವರು.
ಇದರೊಂದಿಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಜೀವನೋಪಾಯದೊಂದಿಗೆ ಸ್ವಾವಲಂಬನೆಯ ಜೀವನ ನಿರ್ವಹಿಸುವಲ್ಲಿ ಅವಶ್ಯಕ ಸಾಮರ್ಥ್ಯಾಭಿವೃದ್ದಿ ಕೌಶಲ್ಯ ತರಬೇತಿಗಳು, ಉತ್ಪನ್ನಗಳ ಬ್ರಾö್ಯಂಡಿAಗ್, ಪ್ಯಾಕಿಂಗ್ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ನಿರಂತರ ಬೆಂಬಲಿಸಲಾಗುತ್ತಿದೆ.
ಮೇಳದ ವೈಶಿಷ್ಟ್ಯಗಳು: ಮೇಳದ ಮಳಿಗೆಗಳಲ್ಲಿ ರಾಜ್ಯ, ಹೊರ ರಾಜ್ಯ ಮತ್ತು ವಿವಿಧ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳ ಸ್ವ ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಮಣ್ಣಿನ ಅಲಂಕಾರಿಕ ಉತ್ಪನ್ನಗಳು, ಮ್ಯಾಕ್ರನ್ ಉತ್ಪನ್ನಗಳು, ಹಸೆ ಚಿತ್ತಾರ ಮತ್ತು ಭತ್ತದ ತೋರಣ, ಈಚಲು ಚಾಪೆ, ಮಣ್ಣಿನ ಆಭರಣಗಳು, ಮರದ ಕೆತ್ತನೆಗಳು, ಖೌದಿ ಉತ್ಪನ್ನಗಳು, ಕೊಪ್ಪಳದ ಕಿನ್ನಾಳ ಉತ್ಪನ್ನಗಳು, ಕೊಪ್ಪಳದ ಬನಾನ ಫೈಬರ್ ಉತ್ಪನ್ನಗಳು, ಚಿಕ್ಕಬಳ್ಳಾಪುರ ಲೆದರ್ ಉತ್ಪನ್ನಗಳು, ನವಲಗುಂದ ದುರಿ, ಮೈಸೂರು ಮರದ ಕೆತ್ತನೆಯ ಉತ್ಪನ್ನಗಳು, ಬೀದರ್ ಜಿಲ್ಲೆಯ ಬಿದರಿ ಉತ್ಪನ್ನಗಳು ಹಾಗೂ ಅಕ್ಕ ಕೆಫೆಯ ಸದಸ್ಯರು, ಇತರೆ ಸ್ವ ಸಹಾಯ ಗುಂಪಿನ ಸದಸ್ಯರಿಂದ ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುತ್ತವೆ.
ಸಿರಿಧಾನ್ಯ ಮೇಳ: ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2026 ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳವನ್ನು ಈ ಮೇಳದಲ್ಲಿಯೇ ಹಮ್ಮಿಕೊಳ್ಳಲಾಗಿದ್ದು, ಸಿರಿಧಾನ್ಯ ಕುರಿತಾದ ಪ್ರತ್ಯೇಕ ಮಳಿಗೆಯನ್ನು ಸ್ಥಾಪಿಸಲಾಗುವುದು.
ಕೈ ಮಗ್ಗ ಜವಳಿ ಮೇಳ : ಜವಳಿ ಮತ್ತು ಕೈಮಗ್ಗ ಹಾಗೂ ರೇಷ್ಮೆ ಇಲಾಖೆಯ ಸಹಯೋಗದಲ್ಲಿ 11 ರಾಜ್ಯಗಳು 19ಜಿಐ ಟ್ಯಾಗ್ ಹೊಂದಿರುವ ವಿವಿಧ ರೀತಿಯ ಸೀರೆಗಳು, ಶಾಲುಗಳು, ಬೆಡ್ ಶೀಟ್‌ಗಳು ಮತ್ತ ಕೆಎಸ್‌ಐಸಿ ಸೀರೆಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ.
ವಿವಿಧ ಸ್ಪರ್ಧೆಗಳು : ರೈತರಿಗಾಗಿ – ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತರು ಬೆಳೆದ ವಿಶಿಷ್ಟ, ವಿಶೇಷ ರೀತಿಯ ಹೂ, ಹಣ್ಣು, ತರಕಾರಿ ಮತ್ತಿತರ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಜ.26 ರ ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿಗೆ ದೂ.ಸಂ 8495876466 ನ್ನು ಸಂಪರ್ಕಿಸಬಹುದು.
ಹೂ ರಂಗೋಲಿ ಸ್ಪರ್ಧೆ: ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಹೂ, ಹಣ್ಣು, ತರಕಾರಿ, ಬೇಳೆಕಾಳುಗಳ ಹಾಗೂ ದವಸ ಧಾನ್ಯಗಳನ್ನು ಬಳಸಿ ರಂಗೋಲಿ ರಚನೆ ಮಾಡಬೇಕು.
ಸಮಾರೋಪ ಸಮಾರಂಭದಲ್ಲಿ ಫಲ ಪುಷ್ಪ ಪ್ರದರ್ಶನದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿನಂದಿಸಲಾಗುವುದು. ಕಳೆದ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ ಸಾವಿರಾರು ಜನ ಭೇಟಿ ನೀಡಿ ಸುಮಾರು ರೂ.20 ಲಕ್ಷ ವಹಿವಾಟು ಆಗಿತ್ತು. ಈ ಬಾರಿಯೂ ಜಿಲ್ಲೆಯ ಜನತೆ ಉತ್ತಮವಾಗಿ ಸ್ಪಂದಿಸುವರೆAದು ಆಶಿಸಿದ ಅವರು ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮೇಳವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ಜಿ.ಪಂ ಯೋಜನಾ ನಿರ್ದೇಶಕಿ ನಂದಿನಿ, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ವೈ ಆರ್ ಮಲ್ಲಿಕಾರ್ಜುನ, ದುಮ್ಮಳ್ಳಿ ರಘು, ಚಂದ್ರಕಾಂತ ಹಸಗೋಡು ಹಾಜರಿದ್ದರು.

ಕಿರ್ಲೋಸ್ಕರ್ ಕಾರ್ಖಾನೆಯ ಆಫೀಸರ್ಸ್ ಲೇಡೀಸ್ ಕ್ಲಬ್ ನ ಸಂಕ್ರಾಂತಿ ಹಬ್ಬ ಹಳದಿ–ಕುಂಕುಮ ಕಾರ್ಯಕ್ರಮ ಯಶಸ್ವಿ

0

ಪ್ರತಿ ವರ್ಷದಂತೆ ಈ ವರ್ಷವೂ ಕಿರ್ಲೋಸ್ಕರ್ ಕಾರ್ಖಾನೆಯ ಆಫೀಸರ್ಸ್ ಲೇಡೀಸ್ ಕ್ಲಬ್ ವತಿಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ಹಳದಿ–ಕುಂಕುಮ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ದಿನಾಂಕ 20-01-2026 ರಂದು ತಿಮ್ಲಾಪುರದಲ್ಲಿ ಆಯೋಜಿಸಲಾಗಿದ್ದು, ಸುಮಾರು 60 ಕ್ಕೂ ಹೆಚ್ಚು ಕ್ಲಬ್‌ನ ಮಹಿಳಾ ಸದಸ್ಯರು ಹಾಗೂ ಅವರ ಕುಟುಂಬದ ಸದಸ್ಯರು ಉತ್ಸಾಹ ಮತ್ತು ಸಂಭ್ರಮದಿಂದ ಭಾಗವಹಿಸಿದರು. ಮಹಿಳಾ ಸದಸ್ಯರಿಗಾಗಿ ಸಂಪ್ರದಾಯಬದ್ಧ ಹಳದಿ–ಕುಂಕುಮ ಕಾರ್ಯಕ್ರಮವನ್ನು ಸಂಕ್ರಾಂತಿಯ ಸಾಂಸ್ಕೃತಿಕ ಮೌಲ್ಯಗಳನ್ನು ಸಾರುವಂತೆ ಆತ್ಮೀಯ ವಾತಾವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಭಾಗವಾಗಿ ಸದಸ್ಯರು ಹೂಸಪೇಟೆ–ವಿಜಯನಗರ ಜಿಲ್ಲೆಯ ಎನ್‌ಎಚ್–13ರ ಬಳಿ ಇರುವ ತಿಮ್ಲಾಪುರದ ಐತಿಹಾಸಿಕ ದೇವಸ್ಥಾನಕ್ಕೆ ಭೇಟಿ ನೀಡಿ, ಅದರ ಇತಿಹಾಸ ಮತ್ತು ವಾಸ್ತುಶಿಲ್ಪದ ಕುರಿತು ಮಾಹಿತಿ ಪಡೆದುಕೊಂಡರು. ಈ ಪ್ರವಾಸವು ಮನರಂಜನೆಯ ಜೊತೆಗೆ ಜ್ಞಾನಾರ್ಜನೆಯ ಅನುಭವವನ್ನೂ ನೀಡಿತು.
ತಿಮ್ಲಾಪುರದ ಐತಿಹಾಸಿಕ ದೇವಸ್ಥಾನದ ಪೂರ್ಣ ಇತಿಹಾಸ
ತಿಮ್ಲಾಪುರ ಗ್ರಾಮದ ಈ ಐತಿಹಾಸಿಕ ದೇವಸ್ಥಾನ ಸಮೂಹವು ವಿಜಯನಗರ ಸಾಮ್ರಾಜ್ಯದ ಕಾಲಘಟ್ಟದ (ಸುಮಾರು ಕ್ರಿ.ಶ. 15ನೇ ಶತಮಾನ) ಅಮೂಲ್ಯ ಸಾಂಸ್ಕೃತಿಕ ಸ್ಮಾರಕವಾಗಿದ್ದು, ದಕ್ಷಿಣ ಭಾರತದ ದ್ರಾವಿಡ ಶೈಲಿಯ ಶಿಲ್ಪಕಲೆಗೆ ಅದ್ಭುತ ಉದಾಹರಣೆಯಾಗಿದೆ. ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ ಆಗಿನ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯ ಅವಧಿಯಲ್ಲಿ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಆಗ ಅದರ ಭಾಗವಾಗಿ ಈ ದೇವಸ್ಥಾನಗಳನ್ನು ನಿರ್ಮಿಸಲಾಗಿದೆ ಎಂದು ಇತಿಹಾಸಕಾರರು ಅಭಿಪ್ರಾಯಪಡುತ್ತಾರೆ.
ಇತಿಹಾಸದ ದಾಖಲೆಗಳ ಪ್ರಕಾರ, ಕ್ರಿ.ಶ. 1461ರ ಅವಧಿಯಲ್ಲಿ ಈ ದೇವಸ್ಥಾನಗಳ ನಿರ್ಮಾಣ ಅಥವಾ ವಿಸ್ತರಣೆ ನಡೆದಿರುವ ಸಾಧ್ಯತೆಗಳಿವೆ. ಈ ದೇವಾಲಯಗಳು ಧಾರ್ಮಿಕ ಆರಾಧನೆಯ ಕೇಂದ್ರಗಳಾಗಿದ್ದಷ್ಟೇ ಅಲ್ಲದೆ, ಆ ಕಾಲದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳ ಕೇಂದ್ರಗಳಾಗಿಯೂ ಕಾರ್ಯನಿರ್ವಹಿಸಿದ್ದವು.
ಈ ದೇವಸ್ಥಾನ ಸಮೂಹದಲ್ಲಿ ವಿಶಾಲ ನವರಂಗ, ಗರ್ಭಗುಡಿ, ಸುಂದರವಾಗಿ ಕೆತ್ತಿದ ಕಲ್ಲಿನ ಸ್ತಂಭಗಳು, ದ್ರಾವಿಡ ಶೈಲಿಯ ಶಿಖರಗಳು
ಇವೆಲ್ಲವೂ ವಿಜಯನಗರ ಯುಗದ ಶಿಲ್ಪಿಗಳ ಉನ್ನತ ಕೌಶಲ್ಯವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ. ದೇವತೆಗಳ ಮೂರ್ತಿಗಳು ಹಾಗೂ ಪೌರಾಣಿಕ ಕಥನಗಳನ್ನು ಒಳಗೊಂಡ ಶಿಲ್ಪಾಕೃತಿಗಳು ಆ ಕಾಲದ ಧಾರ್ಮಿಕ ನಂಬಿಕೆಗಳು ಮತ್ತು ಭಕ್ತಿಪರಂಪರೆಯನ್ನು ಜೀವಂತವಾಗಿ ಚಿತ್ರಿಸುತ್ತವೆ.
ಅಂದು ತಿಮ್ಲಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ಸಮೃದ್ಧವಾಗಿದ್ದುದಕ್ಕೆ ಈ ದೇವಸ್ಥಾನಗಳು ಸಾಕ್ಷಿಯಾಗಿವೆ. ಕಾಲಕ್ರಮೇಣ ನಿರ್ವಹಣೆಯ ಕೊರತೆಯಿಂದ ಕೆಲವು ಭಾಗಗಳು ಹಾನಿಗೊಳಗಾಗಿದ್ದರೂ, ಇಂದಿಗೂ ಈ ದೇವಸ್ಥಾನಗಳು ವಿಜಯನಗರ ಕಾಲದ ವೈಭವ ಮತ್ತು ಇತಿಹಾಸವನ್ನು ಜೀವಂತವಾಗಿ ಸಾರುತ್ತಿವೆ.
ಈ ಐತಿಹಾಸಿಕ ತಾಣದ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಮೂಲಕ ಸದಸ್ಯರು ನಮ್ಮ ಪರಂಪರೆ ಮತ್ತು ಇತಿಹಾಸವನ್ನು ಅರಿತುಕೊಳ್ಳುವ ಪ್ರಯತ್ನ ಮಾಡಿದರು.
ಈ ಸಂಪೂರ್ಣ ಕಾರ್ಯಕ್ರಮವು ಆಫೀಸರ್ಸ್ ಲೇಡೀಸ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಕಮಲಾ ಗುಮಾಸ್ತೆ ಅವರ ಮುಂದಾಳತ್ವದಲ್ಲಿ ಅತ್ಯಂತ ಸುವ್ಯವಸ್ಥಿತವಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಿಗೆ ಮಹಿಳೆಯರಿಂದ ಹೆಣ್ಣು ಎರೆದು ಆಶೀರ್ವದಿಸುವ ಸಂಪ್ರಾದಾಯ ಮುಂದುವರೆಯಿತು. ಕ್ಲಬ್‌ನ ಪದಾಧಿಕಾರಿಗಳು ಮತ್ತು ಸದಸ್ಯರ ಸಹಕಾರದಿಂದ ಕಾರ್ಯಕ್ರಮ ಸ್ಮರಣೀಯವಾಗಿ ರೂಪುಗೊಂಡಿತು.
ಈ ಸಂಕ್ರಾಂತಿ ಕಾರ್ಯಕ್ರಮವು ಸದಸ್ಯರ ನಡುವೆ ಒಗ್ಗಟ್ಟು, ಸೌಹಾರ್ದತೆ ಮತ್ತು ಸಂಸ್ಕೃತಿಯ ಮಹತ್ವವನ್ನು ಮತ್ತಷ್ಟು ಬಲಪಡಿಸಿತು.

Karnataka State Food Commission ಸಮರ್ಪಕ ಪಡಿತರ ವಿತರಣೆ ಮಾಡದ ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಸೂಚನೆ : ಡಾ.ಹೆಚ್.ಕೃಷ್ಣ

0

Karnataka State Food Commission ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಆಹಾರ ಆಯೋಗದ ಜಿಲ್ಲೆಯ ಭೇಟಿ ಮತ್ತು ಪರಿಶೀಲನೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಹಿಂದೆ ಆಹಾರದ ಕೊರತೆ ಇತ್ತು. ಇದೀಗ ಕೊರತೆ ಇಲ್ಲ, ಆಹಾರ ನಮ್ಮ ಹಕ್ಕಾಗಿದ್ದು ಆಹಾರ ಭದ್ರತೆ ಒದಗಿಸಲಾಗಿದೆ. ಆಹಾರ ಭದ್ರತಾ ಕಾಯ್ದೆಯು ಕಾನೂನಾತ್ಮಕ ಭದ್ರತೆ ನೀಡಿದ್ದು ಸರ್ಕಾರದ ವಿವಿಧ ಆಹಾರ ಯೋಜನೆಗಳ ಪರಿಣಾಮಕಾರಿ ಅನುಷ್ಟಾನದ ಕುರಿತು ಪರಿಶೀಲನೆ ನಡೆಸಲಾಗುವುದು. ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದ ವರೆಗೆ ಎಲ್ಲಾ ಹಂತದಲ್ಲಿಯೂ ಕಾಯ್ದೆಯು ಸಮರ್ಪಕವಾಗಿ ಅನುಷ್ಟಾನವಾಗಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ನ್ಯಾಯಬೆಲೆ ಅಂಗಡಿಗಳ ಕುರಿತು ಹೆಚ್ಚಿನ ದೂರುಗಳಿವೆ. ನ್ಯಾಯಬೆಲೆ ಅಂಗಡಿಗಳು ಸಮರ್ಪಕವಾಗಿ ಪಡಿತರ ವಿತರಣೆ ಮಾಡಬೇಕು. ತಿಂಗಳಲ್ಲಿ 26 ದಿನಗಳ ಕಾಲ ಅಥವಾ ಎಲ್ಲ ಪಡಿತರದಾರರಿಗೆ ಪಡಿತರ ವಿತರಣೆ ಆಗುವವರೆಗೆ ತೆರೆದಿರಬೇಕು.
75 ವರ್ಷ ತುಂಬಿದ ವೃದ್ದರಿಗೆ ಅವರ ಮನೆ ಬಾಗಿಲಿಗೆ ಪಡಿತರ ತಲುಪಿಸಬೇಕು. ಈ ಅನ್ನ ಸುವಿಧಾ ಯೋಜನೆ ಜಾರಿಗೆ ಬಂದು 3 ತಿಂಗಳು ಆಗಿದ್ದು ಜಿಲ್ಲೆಯಲ್ಲಿ ಇದನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು.
ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದಾರರಿಗೆ ಬಯೋಮೆಟ್ರಿಕ್ ಸಮಸ್ಯೆ ಹೇಳಬಾರದು. ಮ್ಯಾನುವಲ್ ಆಗಿ ಬರೆದು ಪಡಿತರ ನೀಡಬೇಕು. ಪಿಎಂ ಪೋಷಣ್ ಅಭಿಯಾನ, ಬಿಸಿಯೂಟ ಯೋಜನೆ, ವಸತಿ ನಿಲಯಗಳಲ್ಲಿ ಆಹಾರ, ಅಂಗನವಾಡಿಗಳಲ್ಲಿ ಗರ್ಭಿಣಿ, ಬಾಣಂತಿಯರಿಗೆ ನೀಡುವ ಪೌಷ್ಟಿಕಾಂಶ ಆಹಾರ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಸೇರಿದಂತೆ ಸರ್ಕಾರ ನೀಡುವ ಎಲ್ಲ ಆಹಾರ ಯೋಜನೆಗಳು ಸಮರ್ಪಕವಾಗಿ ಮತ್ತು ಗುಣಮಟ್ಟದೊಂದಿಗೆ ಫಲಾನುಭವಿಗಳಿಗೆ ತಲುಪಬೇಕು. ಈ ನಿಟ್ಟಿನಲ್ಲಿ ನಮ್ಮ ಭೇಟಿ ಮತ್ತು ಪರಿಶೀಲನೆ ನಡೆಸಲಾಗುವುದು ಎಂದರು.
ಜಿಲ್ಲೆಯಲ್ಲಿ ನಿನ್ನೆಯಿಂದ ಹಲವಾರು ಘಟಕಗಳಿಗೆ ಭೇಟಿ ನೀಡಲಾಗಿದೆ. ನ್ಯಾಯಬೆಲೆ ಅಂಗಡಿಗಳು, ಸರ್ಕಾರಿ ವಸತಿ ನಿಲಯಗಳಿಗೆ ಭೇಟಿ ನೀಡಿ ಸೂಕ್ತ ನಿರ್ದೇಶನ ನೀಡಲಾಗಿದೆ. ಎಫ್‌ಸಿಐ ಗ್ರಾಮಾಂತರ ಮತ್ತು ನಗರ ಗೋದಾಮಿಗೆ ಭೇಟಿ ನೀಡಿದ್ದು 32 ಕ್ವಿಂಟಾಲ್ 43 ಕೆಜಿ ಅಕ್ಕಿ ಹೆಚ್ಚುವರಿಯಾಗಿ ದಾಸ್ತಾನಿರುವುದು ಕಂಡು ಬಂದಿದ್ದು, ದಾಸ್ತಾನು ತೆಗೆದುಕೊಂಡು ಹೋಗದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಸೂಕ್ತ ನಿರ್ದೇಶನ ನಿಡಲಾಗಿದೆ. ನಾಳೆವರೆಗೂ ಜಿಲ್ಲೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
Karnataka State Food Commission ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಸೂಚನೆ : ಶಿವಮೊಗ್ಗ ನಗರದಲ್ಲಿ ಕೆಲವು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ವೇಳೆ ಹಲವಾರು ಲೋಪದೋಷಗಳು ಕಂಡು ಬಂದಿವೆ. ನ್ಯಾಯಬೆಲೆ ಅಂಗಡಿಗೆ ನಿಗದಿತ ವೇಳೆಯೊಳಗೆ ಪಡಿತರ ತಂದು ವಿತರಿಸದೇ ಇದ್ದ ಹಾಗೂ ಇತರೆ ಲೋಪದೋಷ ಕಂಡು ಬಂದ ಅಶೋಕ ನಗರದ ಮತ್ತು ಶೇಷಾದ್ರಿಪುರಂ ಹಾಗೂ ಅಣ್ಣಾನಗರದಲ್ಲಿರುವ ನ್ಯಾಯಬೆಲೆ ಅಂಗಡಿಗಳನ್ನು ರದ್ದುಪಡಿಸಲು ನಿರ್ದೇಶನ ನೀಡಿದ್ದು, ಗುತ್ಯಪ್ಪ ಕಾಲೋನಿ ಸೇರಿದಂತೆ ಎರಡು ನ್ಯಾಯಬೆಲೆ ಅಂಗಡಿಗಳಲ್ಲಿ ಲೋಪದೋಷ ಸರಿಪಡಿಸಿಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ ಎಂದ ಅವರು ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಪಡಿತರ ಕುರಿತು ಸಂಪೂರ್ಣವಾದ ಮಾಹಿತಿಯುಳ್ಳ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ ಎಂದರು.
ಭದ್ರಾವತಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ಗೆ ಭೇಟಿ ನೀಡಿದ ಸದಸ್ಯರು ಮಾತನಾಡಿ, ಒಂದೇ ಹಾಲಿನಲ್ಲಿ ನೂರಾರು ವಿದ್ಯಾರ್ಥಿಗಳು ಮಲಗುವ ವ್ಯವಸ್ಥೆ ಇದ್ದು, ವಸತಿ ಮತ್ತು ಆಹಾರದ ಬಗ್ಗೆ ವಿದ್ಯಾರ್ಥಿನಿಯರು ದೂರಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಮಾರುತಿ ಎಂ ದೊಡ್ಡಲಿಂಗಣ್ಣವರ, ಸುಮಂತ ರಾವ್, ಕೆ ಎಸ್ ವಿಜಯಲಕ್ಷಿö್ಮ ಹಾಜರಿದ್ದರು.

Department of Food, Civil Supplies and Consumer Affairs ಶಿವಮೊಗ್ಗದಲ್ಲಿ “ಕಲಬೆರಕೆ ತಡೆಗೆ – ನಮ್ಮ ನಡಿಗೆ” ಆಹಾರ ಸುರಕ್ಷತಾ ಅಭಿಯಾನ

0

Department of Food, Civil Supplies and Consumer Affairs ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಇತ್ತೀಚಿನ ದಿನಗಳಲ್ಲಿ ಆಹಾರದಲ್ಲಿ ಕಲಬೆರಕೆ ಹೆಚ್ಚುತ್ತಿರುವುದು ಜನರ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿರುವ ಹಿನ್ನಲೆಯಲ್ಲಿ, ಸುರಕ್ಷಿತ, ಶುದ್ಧ ಹಾಗೂ ಗುಣಮಟ್ಟದ ಆಹಾರವನ್ನು ಜನರಿಗೆ ಒದಗಿಸುವ ಉದ್ದೇಶದಿಂದ “ಕಲಬೆರಕೆ ತಡೆಗೆ – ನಮ್ಮ ನಡಿಗೆ” ಆಹಾರ ಸುರಕ್ಷತಾ ಅಭಿಯಾನ – 2026 ಅನ್ನು ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದ ಮೂಲಕ ಆಹಾರ ಕಲಬೆರಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಆಹಾರ ಸುರಕ್ಷತಾ ಕಾಯ್ದೆ-2006ರ ಮಹತ್ವವನ್ನು ತಿಳಿಸುವುದರ ಜೊತೆಗೆ, ಸುರಕ್ಷಿತ ಆಹಾರದ ಬಳಕೆಯನ್ನು ಉತ್ತೇಜಿಸುವುದು ಮುಖ್ಯ ಗುರಿಯಾಗಿದೆ. ಜನಸಾಮಾನ್ಯರ ಸಹಕಾರದೊಂದಿಗೆ ಶುದ್ಧ ಆಹಾರ ಸಂಸ್ಕೃತಿಯನ್ನು ಬೆಳೆಸಿ, ಉತ್ತಮ ಆರೋಗ್ಯಯುತ ಸಮಾಜ ನಿರ್ಮಿಸುವುದೇ ಈ ಅಭಿಯಾನದ ಆಶಯವಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ಅನ್ವಯ ಆಹಾರ ವಸ್ತುಗಳ ಉತ್ಪಾದನೆ ಸಂಸ್ಕರಣೆ ಮತ್ತು ಮಾರಾಟ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಸಣ್ಣ ಮಧ್ಯಮ ಪರಮಾಣದ ಉತ್ಪಾದಕರು, ಬೀದಿ ಬದಿ ಆಹಾರ ವಸ್ತುಗಳ ವ್ಯಾಪಾರಿಗಳು, ಪಾಸ್ಟ್ ಫುಡ್ ಕೇಂದ್ರಗಳು, ಬೇಕರಿಗಳು, ಹೋಟೆಲ್ ಮತ್ತು ರೆಸ್ಟೋರೆಂಟ್, ಜ್ಯೂಸ್ ಸೆಂಟರ್, ಐಸ್ ಕ್ರೀಮ್ ಹಾಗೂ ಕಾಂಡಿಮೆಂಟ್ಸ್ ಮಾಲೀಕರುಗಳು ಇಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
ಆಹಾರ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮಾಡುವವರು ಕಡ್ಡಾಯವಾಗಿ FSSAI ನ ನೊಂದಣಿ/ಪರವಾನಿಗೆಯನ್ನು ಹೊಂದಿರಬೇಕಾಗಿರುವುದು ಕಡ್ಡಾಯ. ನಿಷೇಧಿತ ಕೃತಕ ಬಣ್ಣಗಳು ಮತ್ತು ಹಾನಿಕಾರಕ ರಸಾಯನಿಕ ವಸ್ತುಗಳನ್ನು ಆಹಾರ ತಯಾರಿಕೆಯಲ್ಲಿ ಬಳಸಬಾರದು. ಆಹಾರ ತಯಾರಿಕೆಯಲ್ಲಿ ಕೃತಕ ರುಚಿಕಾರಕಗಳನ್ನು (ಎಂಎಸ್‌ಜಿ/ಟೆಸ್ಟಿಂಗ್ ಪೌಂಡರ್) ಬಳಕೆ ಮಾಡಬಾರದು. ಕಳಪೆ ಗುಣಮಟ್ಟದ, ಕಲಬೆರಕೆಯಾಗಿರುವ, ಹಾನಿಕಾರಕ ಆಹಾರ ವಸ್ತುಗಳ ತಯಾರಿಕೆ ದಾಸ್ತಾನು ವಿತರಣೆ ಮತ್ತು ಮಾರಾಟ ಮಾಡುವಂತಿಲ್ಲ. ಅವಧಿ ಮೀರಿದ ಆಹಾರ ಪದಾರ್ಥಗಳು ಮತ್ತು ಅವಧಿ ಮುಗಿಯುವ ದಿನಾಂಕ ಹೊಂದಿರದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಬಾರದು. ತಪ್ಪುದಾರಿಗೆ ಎಳೆಯುವ ಜಾಹೀರಾತು ನೀಡುವ ಮೂಲಕ ಆಹಾರ ವಸ್ತುಗಳ ಉತ್ಪಾದನೆ, ಸಂಸ್ಕರಣೆ ಮತ್ತು ಮಾರಾಟ ಮಾಡಬಾರದು. ಆಹಾರ ಪದಾರ್ಥಗಳನ್ನು ಅನಾರೋಗ್ಯಕರ ಮತ್ತು ಅನೈರ್ಮಲ್ಯಕರ ವಾತಾವರಣದಲ್ಲಿ ಸಂಸ್ಕರಿಸುವುದು ಮತ್ತು ತಯಾರಿಸುವುದು ನಿಷೇಧಿಸಲಾಗಿದೆ. ಆಹಾರ ತಯಾರಿಕೆ ಸಂಸ್ಕರಣೆಯಲ್ಲಿ ಶುದ್ದಿಕರಿಸಿದ ನೀರುನ್ನು ಬಳಕೆ ಮಾಡಬೇಕು. ಕಲಬೆರಕೆ ಕಾರಕ ವಸ್ತುಗಳನ್ನು ಆಹಾರ ತಯಾರಿಕಾ ಸ್ಥಳದಲ್ಲಿ ಹೊಂದಿರಬಾರದು. ಆಹಾರ ತಯಾರಿಕೆ, ಸಂಸ್ಕರಣೆಯಲ್ಲಿ ಶುದ್ಧವಾದ ನೀರನ್ನು ಬಳಕೆ ಮಾಡಬೇಕು. ಮಹಾನಗರ ಪಾಲಿಕೆ/ನಗರಸಭೆ/ಪುರಸಭೆ/ಪಟ್ಟಣ ಅಥವಾ ಗ್ರಾಮ ಪಂಚಾಯಿತಿಯ ವ್ಯಾಪಾರೋಧ್ಯಮ ಪರವಾನಿಗೆ ಹೊಂದಿರಬೇಕಾಗಿರುವುದು ಕಡ್ಡಾಯ. ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ.
Department of Food, Civil Supplies and Consumer Affairs ಇವೇ ಮೊದಲಾದ ಉಪಬಂಧಗಳಿಗೆ ಸಂಬಂಧಪಟ್ಟಂತೆ ಆಹಾರ ವಸ್ತಗಳ ಉತ್ಪಾದನೆ, ಸಂಸ್ಕರಣ ಮತ್ತು ಮಾರಾಟ ವ್ಯವಹಾರದಲ್ಲಿ ತೊಡಗಿರುವ ವ್ಯಕ್ತಿ ಮತ್ತು ಸಂಸ್ಥೆಗಳು ಈ ಮೇಲ್ಕಂಡ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಅಂತಹ ಅಪರಾಧಗಳಿಗೆ ಗರಿಷ್ಟ 05 ಲಕ್ಷದವರೆಗೆ ದಂಡ ಮತ್ತು ಗರಿಷ್ಟ 03 ವರ್ಷಗಳವರೆಗೆ ಕಾರಗೃಹ ವಾಸ ಮತ್ತು ಈ ಎರಡು ದಂಡನೆಗಳಿಗೆ ಗುರಿಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರನ್ವಯ ಅವಕಾಶ ಕಲ್ಪಿಸಲಾಗಿದ್ದು, ಎಲ್ಲಾ ರೀತಿಯ ಆಹಾರ ವಸ್ತು ಪ್ರವರ್ತಕರುಗಳಿಗೆ ಈ ಮೂಲಕ ಸಾರ್ವಜನಿಕ ತಿಳುವಳಿಕೆ ನೀಡಲಾಗಿದೆ.
ಈ ಯಾವುದೇ ಉಲ್ಲಂಘನೆಗಳು ಕಂಡುಬಂದಲ್ಲಿ ಸಾರ್ವಜನಿಕರು, ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರದ ಕಛೇರಿ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳನ್ನು ಹಾಗೂ ಟೋಲ್ ಫ್ರೀ ನಂ.080-22270035 ಅನ್ನು ಅಥವಾ ಆರೋಗ್ಯ ನೀರಿಕ್ಷಕರು/ ಮಹಾನಗರ ಪಾಲಿಕೆ/ ಆಹಾರ ನೀರಿಕ್ಷಕರು/ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರನ್ನು ಸಂಪರ್ಕಿಸಲು ಕೋರಿದೆ.

Karnataka State Open University ಕೆಎಸ್‌ಓಯುನಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

0

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕ ಕೇಂದ್ರ ಶಿವಮೊಗ್ಗದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಜ. 09 ರಂದು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಕರಾಮುವಿ, ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಿ, ಆಲ್ಕೋಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900667916/ 9480765905/ 9739803295/7338069870/7353886706/7760620811 ಗಳನ್ನು ಸಂಪರ್ಕಿಸುವುದು.

Siddaganga Mutt ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

0

ಬೆಂಗಳೂರು ಪ್ರತಿನಿಧಿಯಿಂದ

Siddaganga Mutt ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮ ಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ಉಪರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಮಯದಲ್ಲಿ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ‌. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Siddaganga Mutt ನಂತರ ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಹೆಚ್‌ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ಪ್ರಯಾಣಿಸಿದರು.

ಶಿಕ್ಷಣ ಸಂಸ್ಥೆ ಮತ್ತು ಕೈಗಾರಿಕೆ ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ನಾವೀನ್ಯತೆ ಹೆಚ್ಚು, ಫಲಪ್ರದವಾಗಲು ಸಾಧ್ಯ : ಡಾ.ಮೈಲಸ್ವಾಮಿ ಅಣ್ಣಾದೊರೈ

0

ಬೆಂಗಳೂರು ಪ್ರತಿನಿಧಿಯಿಂದ

ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ನಾವೀನ್ಯತೆ ಹೆಚ್ಚು, ಫಲಪ್ರದವಾಗಲು ಸಾಧ್ಯ. ಆ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಾಧ್ಯ ಎಂದು ಇಸ್ರೋ ಮಾಜಿ ನಿರ್ದೇಶಕ ಡಾ.ಮೈಲಸ್ವಾಮಿ ಅಣ್ಣಾದೊರೈ ಹೇಳಿದರು.

ಬೆಂಗಳೂರು ಜೈವಿಕ ನಾವೀನ್ಯತಾ ಕೇಂದ್ರ. ಕೆ-ಟೆಕ್‌ ಸಹಯೋಗದೊಂದಿಗೆ ಕನೆಕ್ಟ್‌- ಕೌಶಲ್ಯದ ಅಭಿವೃದ್ಧಿ ಜತೆಗೆ ಆವೀಷ್ಕಾರ ಮತ್ತು ಸ್ವಯಂ ಉದ್ಯಮ ಉತ್ತೇಜಿಸುವ ಕುರಿತು ಆಯೋಜಿಸಿದ್ದ ಬಿಬಿಸಿ 2.0 ಕ್ಯಾಟಲಿಸ್ಟ್‌ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ಸೌಲಭ್ಯಗಳು ಲಭ್ಯವಿದ್ದರೂ, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ ಸುಧಾರಿತ ತಂತ್ರಜ್ಞಾನ ಮತ್ತು ನವೀನ ಪರಿಹಾರಗಳನ್ನು ನಿರೀಕ್ಷಿಸುತ್ತಿವೆ.

ಇಂಧನ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಇಲ್ಲಿ ಜವಾಬ್ದಾರಿಯುತವಾಗಿ ಪಾತ್ರವಹಿಸಿದ್ದೇ ಆದಲ್ಲಿ, ಸಾಕಷ್ಟು ಸಮಸ್ಯೆಗಳನ್ನು ಅವಕಾಶಗಳಾಗಿ ಮಾರ್ಪಾಡು ಮಾಡಿಕೊಳ್ಳಬಹುದು.

ಬೆಂಗಳೂರು ವಿಶೇಷವಾಗಿ ಐಟಿ ಮತ್ತು ಬಿಟಿ ಕ್ಷೇತ್ರಗಳ ಮೂಲಕ, ಜಾಗತಿಕವಾಗಿ ಹೆಸರು ಮಾಡಲು ಮತ್ತು ನಾವೀನತೆ ಆಧಾರಿತ ಅಭಿವೃದ್ಧಿಯ ಕೇಂದ್ರವಾಗಲು ಸಾಮರ್ಥ್ಯ ಹೊಂದಿದೆ. ಭಾರತವು ಮುಖ್ಯವಾಗಿ ಕೃಷಿ ದೇಶವಾಗಿದ್ದು, ಜಾಗತಿಕವಾಗಿ ಬಾಳೆ ಬೆಳೆಗಾರಿಕೆಯಲ್ಲಿ ಮೊದಲ ಸ್ಥಾನದಲ್ಲಿದೆ.

ಬಾಳೆ ಹಣ್ಣು ಕಟಾವು ನಂತರ ಉಳಿಯುವ ತೊಗಟೆಯನ್ನು ಸಾಮಾನ್ಯವಾಗಿ ತ್ಯಜಿಸಲಾಗುತ್ತದೆ, ಇದು ರೈತರಿಗೆ ತ್ಯಾಜ್ಯ ನಿರ್ವಹಣಾ ಸವಾಲುಗಳನ್ನು ಉಂಟುಮಾಡುತ್ತದೆ. ಸಂಶೋಧನೆ ಆಧಾರಿತ ಪರಿಹಾರಗಳನ್ನು ಅನ್ವಯಿಸುವ ಮೂಲಕ, ಬಾಳೆ ತೊಗಟೆಯ ಘನ ತ್ಯಾಜ್ಯವನ್ನು ಮರುಪ್ರಕ್ರಿಯೆಗೊಳಿಸಿ ಮರುಬಳಕೆ ಮಾಡಬಹುದು, ಇದರಿಂದ ತ್ಯಾಜ್ಯ ಬದಲು ಮೌಲ್ಯ ಸೃಷ್ಟಿಯಾಗುತ್ತದೆ ಎಂದರು.

ಚಂದ್ರನ ಅನ್ವೇಷಣೆಗೆ ಸುಮಾರು 100 ಮಿಷನ್‌ಗಳು ಪ್ರಯತ್ನಿಸಿದರೂ, ಚಂದ್ರಯಾನವು ಚಂದ್ರನನ್ನು ವಿಶಿಷ್ಟ ಮತ್ತು ಸಮಗ್ರವಾಗಿ ವಿಶ್ಲೇಷಿಸಿದ ಮೊದಲ ಮಿಷನ್ ಆಗಿ ಜಾಗತಿಕ ಮಾನ್ಯತೆ ಪಡೆದಿತು. ಚಂದ್ರನು ಎಲ್ಲರಿಗೂ ಒಂದೇ. ವ್ಯತ್ಯಾಸವು ದೃಷ್ಟಿಕೋನದಲ್ಲಿ ಇದೆ. ಭಾರತವು ಜಾಗತಿಕ ನವೀನತೆ ಪರಿಸರ ವ್ಯವಸ್ಥೆಯ ಶೃಂಗಕ್ಕೆ ಸಾಗುತ್ತಿದೆ. ಸರಿಯಾದ ಪ್ರತಿಭೆ, ತಂತ್ರಜ್ಞಾನ ಮತ್ತು ಸಹಕಾರದ ಸಂಯೋಜನೆಯೊಂದಿಗೆ, ಭಾರತವು ಪರಿವರ್ತನಾ ಮಿಷನ್‌ಗಳನ್ನು ನೀಡುವ ಸಾಮರ್ಥವನ್ನು ಹೊಂದಿದೆ ಎಂದರು.

ರಾಜ್ಯ ಸರಕಾರದ ಐಟಿ-ಬಿಟಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ರಾಹುಲ್‌ ಶರಣಪ್ಪ ಸಂಕನೂರು ಮಾತನಾಡಿ*, ನಾಬಾರ್ಡ್ ನ ಸಹಕಾರದೊಂದಿಗೆ ಕೃಷಿಯಲ್ಲಿ ನವೀನತೆಯ ಆಧಾರಿತ ಪರಿಹಾರಗಳನ್ನು ಉತ್ತೇಜಿಸುವಲ್ಲಿ ಮಹತ್ವದ ಮತ್ತು ಪರಿಣಾಮಕಾರಿ ಪಾತ್ರ ವಹಿಸುತ್ತಿದೆ. ಪೋಷಣೆಯ ಮೇಲೆ, ಮೌಲ್ಯವರ್ಧನೆ ಮತ್ತು ಶಾಶ್ವತ ಆಹಾರ ವ್ಯವಸ್ಥೆಗಳ ಮೇಲೆ ಕೇಂದ್ರೀಕರಿಸುವುದು ಕರ್ನಾಟಕದ ದೀರ್ಘಕಾಲೀನ ಅಭಿವೃದ್ಧಿಗೆ ಅತ್ಯಂತ ಅಗತ್ಯವೆಂದರು.

ಬಿಬಿಸಿ 2.0 ಇದು ಯಶಸ್ಸನ್ನು ತೋರಿಸಿದ್ದು ಮಾತ್ರವಲ್ಲದೆ, ಹೆಚ್ಚಿನ ಹಿತಾಸಕ್ತಿದಾರರನ್ನು ತಲುಪಲು ಮತ್ತು ಗರಿಷ್ಠ ಬೆಂಬಲವನ್ನು ಆಕರ್ಷಿಸಲು ಬಲವಾದ ಸಾಮರ್ಥ್ಯವನ್ನು ಹೊಂದಿದೆ. ಶೈಕ್ಷಣಿಕ, ಸರ್ಕಾರ ಮತ್ತು ಕೈಗಾರಿಕೆಗಳ ನಿರಂತರ ಸಹಕಾರದೊಂದಿಗೆ ಬಿಬಿಸಿ 2.0 ರಾಜ್ಯದಲ್ಲಿ ಶಾಶ್ವತ ನವೀನತೆಯ ಮಾದರಿ ವೇದಿಕೆಯಾಗಬಹುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಿಬಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಮೊಹಮದ್‌ ಅದಿಲ್‌, ಕಾವೇರಿ ಆಸ್ಪತ್ರೆಯ ಕಾರ್ಯಕಾರಿ ನಿರ್ದೇಶಕ ಡಾ.ವಿಜಯ ಬಾಸ್ಕರನ್‌ ಸುಂದರರಾಜು, ಐಐಎಸ್ಸಿ ಮೆಡಿಕಲ್ ಪೌಂಡೇಶನ್ ನಿರ್ದೇಶಕರಾದ ಡಾ. ಉಮಾ ನಂಬಿಯಾರ್ ಇತರರು ಇದ್ದರು.

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

0

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ ರಾಮ್‌ಜಿ ಕಾಯ್ದೆಯನ್ನು ನಾವು ವಿರೋಧಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮನರೇಗಾ ಹೆಸರು ಬದಲಾವಣೆಯನ್ನು ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ 5 ಕಿ.ಮೀ ಪಾದಯಾತ್ರೆ ಹಾಗೂ ಜನವರಿ 22ರಿಂದ ಜನವರಿ 31ರವರೆಗೆ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

0

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು ಚಾಲುಕ್ಯ ಉತ್ಸವ ಹೊಂದಿದೆ. ಬಾದಾಮಿ, ಐಹೊಳೆ, ಪಟ್ಟದಕಲ್ಲುಗಳ ವೈಭವವನ್ನು ವೀಕ್ಷಿಸಲು ದೇಶವಿದೇಶಗಳಿಂದ ಜನರು ಬರುತ್ತಾರೆ. ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರವೂ ಸರ್ವಧರ್ಮಗಳ ಸಮನ್ವಯತೆಯನ್ನು ಪಾಲಿಸುತ್ತದೆ.

ನಾನು ಮುಖ್ಯಮಂತ್ರಿಯಾಗಿ ಈ ಎರಡು ವರ್ಷದಲ್ಲಿ ಬಾದಾಮಿ ಕ್ಷೇತ್ರಕ್ಕೆ ಸುಮಾರು 2 ಸಾವಿರ ಕೋಟಿ ರೂ.ಗಳ ಅನುದಾನವನ್ನು ನೀಡಿದ್ದೇನೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಉದ್ಘಾಟಿಸಿ ಅವರು ಬಾದಾಮಿಯ ಸಮಾರಂಭದಲ್ಲಿ ಮಾತನಾಡಿದರು.

ಬದಾಮಿ ಕ್ಷೇತ್ರದಲ್ಲಿ 1,400 ಕೋಟಿ ರೂ.ಗಳ ಏತನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಅಲ್ಲದೇ 400 ಕೋಟಿ ರೂ.ಗಳಲ್ಲಿ ಬಾದಾಮಿಗೆ ಕುಡಿಯುವ ನೀರಿನ ಯೋಜನೆ, 50 ಕೋಟಿ ರೂ.ಗಳಲ್ಲಿ ರಸ್ತೆ ಯೋಜನೆ ಸೇರಿದಂತೆ ಹಲವು ಅಭಿವೃದ್ದಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ.

ಐದು ವರ್ಷಗಳ ಕಾಲ ಬಾದಾಮಿ ಕ್ಷೇತ್ರದ ಶಾಸಕನಾಗಿದ್ದೆ, 2018ರಲ್ಲಿ ಎರಡು ಕ್ಷೇತ್ರಗಳಲ್ಲಿ ನಾನು ಸ್ಪರ್ಧಿಸಿದ್ದೆ, ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲಾಯಿತು. ಆದರೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಗೆಲ್ಲಿಸಿದ್ದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಬಾದಾಮಿ ಕ್ಷೇತ್ರಕ್ಕೆ ಬಂದು ಎರಡು ಅಥವಾ ಮೂರು ಬಾರಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿ ಜನರ ಆಶೀರ್ವಾದ ಬೇಡಿರಬಹುದು. ಇಲ್ಲಿನ ಜನರು ದೊಡ್ಡ ಮನಸ್ಸು ಮಾಡಿ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದರಿಂದ ಈಗ ವರುಣಾ ಕ್ಷೇತ್ರದಲ್ಲಿ ಗೆದ್ದು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನಿಮ್ಮ ಉಪಕಾರವನ್ನು ನಾನೆಂದಿಗೂ ಮರೆಯುವುದಿಲ್ಲ.

ಬಾದಾಮಿ ಶಾಸಕನಾಗಿದ್ದ ಸಂದರ್ಭದಲ್ಲಿ ಚಾಲುಕ್ಯ ಉತ್ಸವ ನಡೆಯಲಿಲ್ಲ ಹಾಗೂ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಯಾಗಲಿಲ್ಲ ಎನ್ನುವುದು ನೋವಿನ ಸಂಗತಿ. ಇಂದು ಭೀಮಸೇನಾ ಚಿಮ್ಮನಕಟ್ಟಿಯವರ ಒತ್ತಾಸೆಯಿಂದ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.

CM Siddharamaiah ಈ ವರ್ಷ ಚಾಲುಕ್ಯ ಉತ್ಸವ ನಡೆಯಲೇಬೇಕೆಂದು ಈ ಭಾಗದ ಶಾಸಕರ ಒತ್ತಾಸೆಯಾಗಿತ್ತು. ಇದರ ಮೇರೆಗೆ ಬಜೆಟ್ ನಲ್ಲಿಯೇ ಚಾಲುಕ್ಯ ಉತ್ಸವವನ್ನು ಘೋಷಣೆ ಮಾಡಲಾಯಿತು. ಮೂರು ಕೋಟಿ ರೂ.ಗಳನ್ನೂ ಇದಕ್ಕಾಗಿ ಒದಗಿಸಲಾಗಿದೆ. ಉತ್ಸವಕ್ಕೆ ಒಂದು ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಇಮ್ಮಡಿ ಪುಲಕೇಶಿ ಪ್ರತಿಮೆ ಅನಾವರಣಕ್ಕೆ ಸರ್ಕಾರ ನೆರವು ಒದಗಿಸಲಿದೆ.

ಕೇಂದ್ರ ಸರ್ಕಾರದಿಂದ ನೆರವು ಒದಗಿಸುವುದಾಗಿ ಸಂಸದರು ತಿಳಿಸಿದ್ದು, ಇದಕ್ಕೆ ಮನವಿ ಪತ್ರವನ್ನು ನಾಳೆಯೇ ಕೊಡಲಾಗುವುದು. ಕೇಂದ್ರ ಸರ್ಕಾರ ನಮ್ಮ ಮನವಿಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವ ಕಾರಣದಿಂದ ಇವರಿಗೆ ಮನವಿಯನ್ನು ನೀಡಿರಲಿಲ್ಲ. ಇದೇ ವೇಳೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಅನುದಾನವನ್ನು ಕೊಡಿಸಲು ಬಿಜೆಪಿ ಸಂಸದರು ಪ್ರಯತ್ನಿಸಬೇಕು
ಎಂದು ಸಿದ್ಧರಾಮಯ್ಯನವರು ಆಗ್ರಹಿಸಿದರು.