Wednesday, August 12, 2026
Wednesday, August 12, 2026
Home Blog Page 224

B.Y. Raghavendra ಕುಲಕಸುಬುಗಳನ್ನ ಆಧರಿಸಿದ ವಿಶ್ವಕರ್ಮ ಸಮುದಾಯದ ಸಬಲೀಕರಣಕ್ಕೆ ಪ್ರಧಾನಿಯವರ ಯೋಜನೆ ವರದಾನ- ಸಂಸದ ರಾಘವೇಂದ್ರ

0

B.Y. Raghavendra ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಪಿ.ಎಂ-ವಿಶ್ವಕರ್ಮ’ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳ ಕಿಟ್ (Toolkit) ವಿತರಿಸಿ, ಶುಭ ಕೋರಲಾಯಿತು.

ಕುಲಕಸುಬುಗಳನ್ನು ನಂಬಿ ಬದುಕುತ್ತಿರುವ ನಮ್ಮ ವಿಶ್ವಕರ್ಮ ಸಹೋದರ-ಸಹೋದರಿಯರ ಸಬಲೀಕರಣಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ಕ್ರಾಂತಿಕಾರಿಯಾದದ್ದು.

B.Y. Raghavendra ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಶ್ರೀ ಕೆ. ಬಿ. ಅಶೋಕ್ ನಾಯಕ್, ಅಂಚೆ ಅಧೀಕ್ಷರಾದ ಶ್ರೀ ಕುಮಾರಸ್ವಾಮಿ, ಪ್ರಮುಖರಾದ ಶ್ರೀ ಎನ್.ಕೆ. ಜಗದೀಶ್, ಶ್ರೀ ಜ್ಯೋತಿ ಪ್ರಕಾಶ್, ಶ್ರೀ ಕೆ. ದೇವರಾಜ್ ಹಾಗೂ ಇತರರು.

ನಿವೃತ್ತ ರಕ್ಷಣಾಧಿಕಾರಿಗಳಿಗೆ ಒಪ್ಪಂದದ ಮೇರೆಗೆ ಕ್ಯಾಂಟೀನ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

0

ಮಿಲಿಟರಿ ಕ್ಯಾಂಟೀನ್ ಮತ್ತು ಲೆಕ್ಕಪತ್ರಗಳ ಅನುಭವವುಳ್ಳ 64 ವರ್ಷ ವಯಸ್ಸಿನೊಳಗಿನ ನಿವೃತ್ತ ರಕ್ಷಣಾ ಅಧಿಕಾರಿ (ಡಿಫೆನ್ಸ್ ಆಫೀರ‍್ಸ್) ಗಳಿಂದ ಒಪ್ಪಂದದ ಮೇರೆಗೆ ವಿರಾಜಪೇಟೆ ಮತ್ತು ಕೋಲಾರ ಈ ಸ್ಥಳಗಳಲ್ಲಿ ಕ್ಯಾಂಟೀನ್ ಮೇನೇಜರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಜ.20 ರೊಳಗಾಗಿ Canteen Officer, Golden Palm Canteen cell, c/o HQ K&K Sub Area, Cubbon Road, Bengaluru – 560001”” ಎಂಬ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಮಿಂಚAಚೆ gpccellkksa@gmail.com ಮೂಲಕ ಕಳುಹಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಹತೆ, ಅರ್ಜಿ ನಮೂನೆಗಳಿಗಾಗಿ gpcscblr.co.in GPC ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.

ಕೀರ್ತಿಶೇಷ ಶಾಮನೂರು ಶಿವಶಂಕರಪ್ಪನವರ ಛಾಯಾಚಿತ್ರ ಸಂಕಲನ: ಡಾ.ಮಂಜುನಾಥ್ ಗೆ ಸನ್ಮಾನ

0

ಕೀರ್ತಿಶೇಷ ಡಾ. ಶಾಮನೂರು ಶಿವಶಂಕರಪ್ಪನವರ ಬಾಲ್ಯದಿಂದ ಅಂತ್ಯದವರೆಗಿನ ಅಮೂಲ್ಯ ಛಾಯಾಚಿತ್ರಗಳ ಸಂಗ್ರಹ ಮಾಡಿಕೊಟ್ಟ ಹಿರಿಯ ಪತ್ರಿಕಾ ಛಾಯಾಗ್ರಾಹಕ ಡಾ. ಎಚ್. ಬಿ. ಮಂಜುನಾಥರನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಮ್ಮ ನಿವಾಸದಲ್ಲಿ ಅಭಿನಂದಿಸಿದರು.

ಶಿವಶಂಕರಪ್ಪನವರ ಸೋದರ ಸೊಸೆ ಗಿರಿಜಮ್ಮನವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

Department of Soldiers Welfare and Rehabilitation ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ: ಅವಧಿ ವಿಸ್ತರಣೆ

0

Department of Soldiers Welfare and Rehabilitation 2025-26ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 31 ರವರೆಗೆ ವಿಸ್ತರಿಸಲಾಗಿದ್ದು, ಕೇಂದ್ರೀಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದುದಾಗಿರುತ್ತದೆ.
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ. 31 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಗೆ ಸಲ್ಲಿಸುವುದು.
Department of Soldiers Welfare and Rehabilitation ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

B.Y. Raghavendra ಕ್ರೀಡೆ ಮತ್ತು ಸಾಂಸ್ಕ್ರತಿಕ ಚಟುವಟಿಕೆಗಳಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ- ಬಿ.ವೈ.ರಾಘವೇಂದ್ರ

0

B.Y. Raghavendra ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ‘ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು-2026’ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದೆನು.

ದಿನನಿತ್ಯದ ಕೆಲಸದ ಒತ್ತಡದ ನಡುವೆಯೂ ಸರ್ಕಾರಿ ನೌಕರರು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯಗತ್ಯ

B.Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಶಿವಮೊಗ್ಗ ನಗರದ ಶಾಸಕರಾದ ಶ್ರೀ ಎಸ್. ಏನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ. ಎಸ್. ಅರುಣ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಷಡಕ್ಷರಿ, ಶಿವಮೊಗ್ಗ ಅಪಾರ ಜಿಲ್ಲಾಧಿಕಾರಿಗಳಾದ ಶ್ರೀ ಅಭಿಷೇಕ್ ಉಪಸ್ಥಿತರಿದ್ದರು.

CM Siddharamaiah ಅಜೀಂ ಪ್ರೇಮ್ ಜಿ ಪ್ರತಿಷ್ಠಾನ & ರಾಜ್ಯ ಸರ್ಕಾರದ ನಡುವೆ ಒಡಂಬಡಿಕೆಗೆ ಸಹಿ

0

CM Siddharamaiah ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ನಡುವೆ ಒಡಂಬಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಹಿ ಹಾಕಿಲಾಯಿತು.

CM Siddharamaiah ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್.ಪಾಟೀಲ್,
ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಗ್ ಬೆಹರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

S.N.Chennabasappa ಶಿವಮೊಗ್ಗ ನಗರದ 14 ನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ

0

S.N.Chennabasappa ಶಿವಮೊಗ್ಗ ನಗರದ 14ನೇ ವಾರ್ಡ್ ವ್ಯಾಪ್ತಿಯ ವಿದ್ಯಾನಗರ ಬಡಾವಣೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಅವರು ಪರಿಶೀಲಿಸಿದರು.

ಬಡಾವಣೆಯ ಪ್ರವೇಶ ದ್ವಾರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಹಾದ್ವಾರದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೆಲಸದ ವೇಗ ಹಾಗೂ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಸ್ಥಳೀಯ ಉದ್ಯಾನವನಕ್ಕೆ ಭೇಟಿ ನೀಡಿ, ಉದ್ಯಾನವನದ ನಿರ್ವಹಣೆ ಹಾಗೂ ಸ್ವಚ್ಛತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಓದುಗರಿಗೆ ಪುಸ್ತಕಗಳ ಲಭ್ಯತೆಯ ಬಗ್ಗೆ ಚರ್ಚಿಸಿದರು.

ವಿಶೇಷವಾಗಿ ವಿದ್ಯಾನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ವಾರ್ಡ್ ನ ಅಧ್ಯಕ್ಷರಾದ ಶ್ರೀ ರಾಜು, ಪ್ರಮುಖರಾದ ಶ್ರೀ ಮೋಹನ್, ಶ್ರೀ ಲಕ್ಷ್ಮಣ್ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

S.N. Channabasappa ಫಲಾನುಭವಿಗಳಿಗೆ ತಕ್ಷಣ ಹಕ್ಕುಪತ್ರ ವಿತರಿಸಿ – ಎಸ್.ಎನ್.ಚನ್ನಬಸಪ್ಪ.

0

S.N. Channabasappa “ನಗರದ ಶಾಂತಿನಗರ, ಟಿಪ್ಪು ನಗರ ಹಾಗೂ ಚಿಕ್ಕಮಟ್ಟಿ ಕ್ಯಾಂಪ್ (ತ್ರಿಮೂರ್ತಿ ನಗರ) ಬಡಾವಣೆಗಳಲ್ಲಿ ಈಗಾಗಲೇ ಹಕ್ಕುಪತ್ರಗಳು ತಯಾರಾಗಿದ್ದು, ಅವುಗಳನ್ನು ತಕ್ಷಣವೇ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು” ಎಂದು ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದು ನಗರದ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ (KSDB) ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿದ್ಧವಿರುವ ದಾಖಲೆಗಳನ್ನು ಹಸ್ತಾಂತರಿಸುವಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು.

S.N. Channabasappa ಜೊತೆಗೆ, ಸರ್ಕಾರಿ ಜಾಗಗಳಲ್ಲಿರುವ ನಿವಾಸಿಗಳಿಗೆ ಪಹಣಿಯಲ್ಲಿ ದಾಖಲೆಗಳನ್ನು ಸರಿಪಡಿಸಿ ಹಕ್ಕುಪತ್ರ ಒದಗಿಸುವುದು ಹಾಗೂ ಸರ್ಕಾರದ ಹಂತದಲ್ಲಿ ಬಾಕಿ ಇರುವ ಪ್ರದೇಶಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕಂದಾಯ ಮತ್ತು ಸರ್ವೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಹಕ್ಕುಪತ್ರ ವಿತರಣಾ ಪ್ರಕ್ರಿಯೆಯನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಡವರ ಹಕ್ಕುಗಳ ವಿಷಯದಲ್ಲಿ ವಿಳಂಬ ಧೋರಣೆ ಸಹಿಸುವುದಿಲ್ಲ. ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಹಕ್ಕುಪತ್ರ ವಿತರಣೆ ಕುಂಠಿತವಾಗಬಾರದು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು” ಎಂದು ಅವರು ತಿಳಿಸಿದರು.

B. Y. Raghavendra ನಾಣ್ಯಗಳು , ಅಂಚೆಚೀಟಿಗಳು ನಮ್ಮ ಇತಿಹಾಸ ಮತ್ತು ಪರಂಪರೆಗಳ ಪ್ರತೀಕ- ಬಿ.ವೈ.ರಾಘವೇಂದ್ರ.

0

B. Y. Raghavendra ಶಿವಮೊಗ್ಗ ನಗರದಲ್ಲಿ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಹಾಗೂ ಕರ್ನಾಟಕ ನ್ಯೂಮಿಸ್ಮ್ಯಾಟಿಕ್ ಸೊಸೈಟಿ ಸಹಯೋಗದಲ್ಲಿ ಆಯೋಜಿಸಲಾಗಿರುವ ‘ಶಿವಮೊಗ್ಗ ಕಾಯಿನ್ ಎಕ್ಸ್‌ಪೋ-2026’ (ನಾಣ್ಯ, ನೋಟು ಹಾಗೂ ಅಂಚೆ ಚೀಟಿ ಪ್ರದರ್ಶನ) ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಸಾರುವ ಅಪರೂಪದ ನಾಣ್ಯಗಳು ಮತ್ತು ಅಂಚೆ ಚೀಟಿಗಳ ಸಂಗ್ರಹವನ್ನು ಇಲ್ಲಿ ವೀಕ್ಷಿಸಬಹುದು ಎಂದು ಸಂಸದರು ನುಡಿದರು.

B. Y. Raghavendra ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ‘ಶಿವಮೊಗ್ಗ ಟೈಮ್ಸ್’ ಸಂಪಾದಕರಾದ ಶ್ರೀನಿವಾಸ ಚಂದ್ರಕಾಂತ್, ಸೂಡಾ ಅಧ್ಯಕ್ಷರಾದ ಶ್ರೀ ಎಚ್.ಎಸ್. ಸುಂದರೇಶ್, ಶ್ರೀ ದೇವದಾಸ್ ನಾಯ್ಕ್, ಹಾಗೂ ಶ್ರೀ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು.

Shimoga News ಮಾರ್ಗಸೂಚಿ ಆಧರಿತ ಕನ್ನಡ ನಾಮಫಲಕ ಅಳವಡಿಕೆ& ರಸ್ತೆ ತಿರುವುಗಳಲ್ಲಿ ಫ್ಲೆಕ್ಸಿ‌ ಪ್ರದರ್ಶನ ನಿಷೇಧಿಸಲು ಮನವಿ ಅರ್ಪಣೆ.

0

Shimoga News ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಮಾಲ್‌ಗಳು ಮತ್ತು ಶೋರೂಂಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು 100ಕ್ಕೆ 60 ಭಾಗ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆಯಲ್ಲಿ ನಡೆದ 2026-27ನೇ ಸಾಲಿನ ಆಯ-ವ್ಯಯ ಒಂದನೇ ಪೂರ್ವ ಭಾವಿ ಸಭೆಯಲ್ಲಿ ಕರುನಾಡು ಸಂರಕ್ಷಣಾ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

Shimoga News ನಗರದ ಖಾಸಗಿ ಆಸ್ಪತ್ರೆಗಳಲ್ಲಿ, ವಾಹನ ಪಾರ್ಕಿಂಗ್ ಆಸ್ಪತ್ರೆಯ ಜಾಗದಲ್ಲಿಯೇ ನಿರ್ಮಿಸಿಕೊಳ್ಳಲು ಮತ್ತು ನಗರದಲ್ಲಿ ಅಳವಡಿಸುವ ಪ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು 3 ದಿವಸಗಳ ಅವಧಿ ಮೀರದಂತೆ ಕ್ರಮ ಕೈಗೊಳ್ಳಬೇಕು. ನಗರದ ಮುಖ್ಯ ರಸ್ತೆಗಳ ಯುಟರ್ನ್, ಎಡ ಮತ್ತು ಬಲಭಾಗದಲ್ಲಿ ಯಾವುದೇ ಪ್ಲೆಕ್ಸಿಗಳನ್ನಾಗಲೀ ಮತ್ತು ಜಾಹಿರಾತು ಫಲಕಗಳನ್ನು ಹಾಕದಂತೆ ಕ್ರಮ ಕೈಗೊಳ್ಳಬೇಕು ಮತ್ತು ಮಹಾನಗರಪಾಲಿಕೆಯಲ್ಲಿ ಖಾತೆ ಬದಲಾವಣೆಯ ನೂರಾರು ಅರ್ಜಿಗಳು ಮತ್ತು ಇ ಸ್ವತ್ತು ಮಾಡಿಸಿಕೊಳ್ಳಲು ನೂರಾರು ಅರ್ಜಿಗಳನ್ನು ವಿಲೇ ಇಟ್ಟಿರುವುದನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಿವಮೂರ್ತಿ ಎಸ್.ಪಿ., ಪ್ರಧಾನ ಕಾರ್ಯದರ್ಶಿ ಮೂರ್ತಿ ಸಿ, ಪದಾಧಿಕಾರಿಗಳಾದ ಅರುಣ್, ನಿರಂಜನ್, ಶ್ರೀನಿವಾಸ ಶಿವಣ್ಣ ಇತರರಿದ್ದರು.