Wednesday, August 12, 2026
Wednesday, August 12, 2026
Home Blog Page 226

S.N. Channabasappa “ವಿಷಮುಕ್ತ ತುಂಗಭದ್ರಾ ರೈತರ ಫಸಲು ಭದ್ರ” ಜನಜಾಗೃತಿಯಲ್ಲಿ ಪಾಲ್ಗೊಂಡ ಶಾಸಕ ಚೆನ್ನಿ

0

S.N. Channabasappa ಇಂದು ಪವಿತ್ರ ತುಂಗಭದ್ರಾ ಸಂಗಮ ಸ್ಥಳವಾದ ಕೂಡಲಿ ಪುಣ್ಯಕ್ಷೇತ್ರದಲ್ಲಿ, ‘ನಿರ್ಮಲಾ ತುಂಗಾ ಅಭಿಯಾನ’ದ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಷಮುಕ್ತ ತುಂಗಭದ್ರಾ, ರೈತರ ಫಸಲು ಸುಭದ್ರ” ಜಾಗೃತಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕ ಎಸ್.ಎನ್.ಚನ್ನಬಸಪ್ಪ ಭಾಗವಹಿಸಿದ್ದರು.

ನಮ್ಮ ಜೀವನದಿಯಾಗಿರುವ ತುಂಗಭದ್ರೆಯನ್ನು ಮಾಲಿನ್ಯಮುಕ್ತವಾಗಿಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ.
ಬನ್ನಿ, ನಮ್ಮ ನದಿಗಳನ್ನು ವಿಷಮುಕ್ತವಾಗಿಸೋಣ, ಮುಂದಿನ ಪೀಳಿಗೆಗೆ ಶುದ್ಧ ಜಲವನ್ನು ಉಳಿಸೋಣ.
ಈ ನಿಟ್ಟಿನಲ್ಲಿ, ಪುಣ್ಯಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ, ನದಿಯಲ್ಲಿ ಸ್ನಾನ ಮಾಡುವಾಗ ಸೋಪು, ಶ್ಯಾಂಪು ಹಾಗೂ ಇತರೆ ರಾಸಾಯನಿಕಯುಕ್ತ ವಸ್ತುಗಳನ್ನು ಬಳಸುವ ಬದಲಿಗೆ, ನೈಸರ್ಗಿಕವಾದ ಕಡ್ಲೆಹಿಟ್ಟನ್ನು ಬಳಸುವಂತೆ ಯಾತ್ರಿಗಳಿಗೆ ವಿನಂತಿಸಿದರು.
S.N. Channabasappa ನದಿಯ ಪಾವಿತ್ರ್ಯತೆ ಮತ್ತು ಪರಿಸರ ಸಮತೋಲನವನ್ನು ಕಾಪಾಡುವ ಉದ್ದೇಶದಿಂದ ಭಕ್ತಾದಿಗಳಿಗೆ ಕಡ್ಲೆಹಿಟ್ಟನ್ನು ವಿತರಿಸುವ ಮೂಲಕ ಈ ವಿಶೇಷ ಅಭಿಯಾನಕ್ಕೆ ಸಾಥ್ ನೀಡಲಾಯಿತು.

ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಗಿರೀಶ್ ಪಟೇಲ್, ಪ್ರಮುಖರಾದ ಶ್ರೀ ಪ್ರಭಾಕರ್, ಅಭಿಯಾನದ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Shivaganga Yoga Center ಮಾನವ ಸಂಬಂಧಗಳನ್ನ ಮಕರ ಸಂಕ್ರಾಂತಿ ಘಟ್ಟಿಗೊಳಿಸುತ್ತದೆ: ಎಸ್.ಎಸ್.ಜ್ಯೋತಿಪ್ರಕಾಶ್

0

Shivaganga Yoga Center ಶ್ರೀ ಶಿವಗಂಗಾ ಯೋಗ ಕೇಂದ್ರದ ವಿಶ್ವಸ್ಥ ಮಂಡಳಿ ಸದಸ್ಯರು, ಅಧ್ಯಕ್ಷರು ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವಾ ಸಂಘ, ಶಾಖೆಯ ಯೋಗ ಅಭ್ಯಾಸಿಯವರಾದ ಶ್ರೀಯುತರು ಯೋಗ ಶಿಕ್ಷಣಾರ್ಥಿಗಳಿಗೆ ಶುಭ ಹಾರೈಸುತ್ತಾ ಮಾನವ ಸಂಬಂಧಗಳನ್ನು ಗಟ್ಟಿಗೊಳಿಸುವ ಸಂಕ್ರಾಂತಿ ಹೊಸ ವರ್ಷದ ಪ್ರಥಮ ಹಬ್ಬವಾಗಿದೆ, ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡೋಣ ಹಾಗೆ ನಮ್ಮ ನಡೆನುಡಿಯಲ್ಲೂ ಸಹ ಶುದ್ಧವಾಗಿರಲು ಪ್ರಯತ್ನಿಸೋಣ ಎಂದು ನುಡಿದರು.

ಅವರು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಹಬ್ಬಗಳು ನಮಗೆ ಜೀವನೋತ್ಸಾಹವನ್ನು ಮೂಡಿಸುತ್ತದೆ ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪ್ರವೇಶ ಮಾಡುವುದರ ಜೊತೆಗೆ ಹೆಚ್ಚು ಬೆಳಕನ್ನ ನೀಡುತ್ತದೆ ಎಂದ ಅವರು ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತೀಕ ಹಾಗೆ ಸ್ತ್ರೀಯರಿಗೆ. ರೈತರಿಗೆ ಸಂಭ್ರಮದ ಹಬ್ಬವಾಗಿದೆ.

Shivaganga Yoga Center ಇದೇ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಜಿ.ಎಸ್.ಓಂಕಾರ್ ಅವರು ಮಾತನಾಡುತ್ತಾ ಸೂರ್ಯದೇವನು ಉತ್ತರಾಯಣಕ್ಕೆ ಪ್ರವೇಶ ನೀಡುವ ಶುಭದಿನ ನಮ್ಮ ಆಲೋಚನೆಗಳು ಒಳ್ಳೆಯ ದಿಕ್ಕಿನತ್ತ ತಿರುಗಲಿ ಬದುಕು ಎಳ್ಳು ಬೆಲ್ಲದಂತೆ ಮಿಶ್ರವಾಗಿರುವಂತೆ ನಮ್ಮ ನಡೆ-ನುಡಿಗಳು ಮಧುರ ಬಾಂಧವ್ಯವನ್ನ ಮೂಡಿಸಲಿ ಈ ಹಬ್ಬಕ್ಕೆ ಸಾಕಷ್ಟು ಆಧ್ಯಾತ್ಮಿಕ ಹಿನ್ನೆಲೆ ಇದೆ ಈ ಸುಗ್ಗಿ ಹಬ್ಬ ಎಲ್ಲರಲ್ಲೂ ಚೈತನ್ಯವನ್ನು ಮೂಡಿಸುತ್ತದೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಎಲ್ಲಾ ಶಿಬಿರಾರ್ಥಿಗಳಿಗೆ ಎಳ್ಳು ಬೆಲ್ಲ ಸಿಹಿ ಕಬ್ಬು ವಿತರಿಸಿ ಪರಸ್ಪರಲ್ಲಿ ಶುಭಾಶಯ ಕೋರಲಾಯಿತು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರ ವಿಜಯ ಕೃಷ್ಣ. ಹರೀಶ್ . ರೋಟರಿ ಜಿ ವಿಜಯಕುಮಾರ್. ಸುಬ್ರಮಣಿ. ಶ್ರೀನಿವಾಸ್. ನರಸೂಜಿ ರಾವ್. ಶಂಕರ್. ಸುಜಾತಾ. ಗಾಯಿತ್ರಿ. ಶೋಭಾ, ಗಾಯತ್ರಿ ರಮೇಶ್
ಉಪಸ್ಥಿತರಿದ್ದರು.

Shivamogga District Health and Family Welfare Department ನೇತ್ರ ಸಹಾಯಕರ ಹುದ್ದೆಗೆ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸುವವರಿಗೆ ಅವಕಾಶ

0

Shivamogga District Health and Family Welfare Department ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ನೇತ್ರ ಸಹಾಯಕರ 5 ಹುದ್ದೆಗೆ 2ನೇ ಹಂತದಲ್ಲಿ ಅಂತಿಮವಾಗಿ ಆಯ್ಕೆಯಾದವರ ಹಾಗೂ ಆಯ್ಕೆಯಾಗದವರ ಪಟ್ಟಿಯನ್ನು ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಜ. 21 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿಗಳು ತಿಳಿಸಿರುತ್ತಾರೆ.
Shivamogga District Health and Family Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ , ದೂ.ಸಂ.: 8197094440/ 9481691580/ 08182-222382 ಗಳನ್ನು ಸಂಪರ್ಕಿಸಬಹುದಾಗಿದೆ.

Azim Premji Foundation ಪದವಿ ಮೊದಲ ವರ್ಷದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ

0

Azim Premji Foundation ಅಜೀಂ ಪ್ರೇಂ ಜೀ ಫೌಂಡೇಶನ್‌ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯನ್ನು ಸರ್ಕಾರಿ ಶಾಲೆಯಲ್ಲಿ ಓದಿ ಪ್ರಸ್ತುತ ಪದವಿಯನ್ನು ಖಾಸಗಿ ಅಥವಾ ಸರ್ಕಾರಿ ಯಾವುದಾದರೂ ಕಾಲೇಜಿನಲ್ಲಿ ಓದುತ್ತಿರುವಂತಹ ಪದವಿ ಮೊದಲನೇ ವರ್ಷದ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಜ.31 ಕಡೆಯ ದಿನವಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಇತರೆ ಹೆಚ್ಚಿನ ಮಾಹಿತಿಗಾಗಿ ಈ https://www.youtube.com/watch?v=dR0q9nozo-4, https://www.youtube.com/@azimpremjischolarship ಯೂಟ್ಯೂಬ್ ಲಿಂಕನ್ನು ಸಂಪರ್ಕಿಸಬಹುದೆಂದು ಜಿ.ಪಂ.ಸಿಇಓ ಎನ್ ಹೇಮಂತ್ ತಿಳಿಸಿದ್ದಾರೆ.

Dinesh Gundu Rao ನರಮಂಡಲ ಕಾಯಿಲೆ “ಗಿಲೆನ್ ಬಾರಿ” ಗೆ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆ ವ್ಯಾಪ್ತಿಗೆ- ಸಚಿವ ದಿನೇಶ್ ಗುಂಡೂರಾವ್.

0

Dinesh Gundu Rao ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ನಮ್ಮ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಂತೆ,

  • ದುಬಾರಿ ಚಿಕಿತ್ಸೆಗೆ ಸರ್ಕಾರಿ ಸವಲತ್ತು: ಈ ಹಿಂದೆ ಜಿ.ಬಿ.ಎಸ್ ಕಾಯಿಲೆಗೆ ನೀಡಲಾಗುತ್ತಿದ್ದ ಮೂಲ ಚಿಕಿತ್ಸೆಯ ಜೊತೆಗೆ, ಈಗ ಅತ್ಯಗತ್ಯವಾದ IVIG ಥೆರಪಿಯನ್ನೂ ಯೋಜನೆಯಡಿ ತರಲಾಗಿದೆ. ಇದಕ್ಕಾಗಿ ವಿಶೇಷ ಪ್ರೊಸೀಜರ್ ಕೋಡ್‌ಗಳನ್ನು (2B.M1.00061D ಮತ್ತು 2B.M1.00061E) ನಿಗದಿಪಡಿಸಲಾಗಿದೆ.
  • ಚಿಕಿತ್ಸಾ ವೆಚ್ಚ ಮತ್ತು ಮಿತಿ: ಪ್ರತಿ ರೋಗಿಗೆ ಗರಿಷ್ಠ 2 ಲಕ್ಷ ರೂಪಾಯಿಗಳವರೆಗೆ ಈ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಔಷಧಿಯ ದರವನ್ನು ಪ್ರತಿ ಗ್ರಾಂಗೆ 2,000 ರೂಪಾಯಿಗಳಂತೆ ನಿಗದಿಪಡಿಸಲಾಗಿದ್ದು, ರೋಗಿಯ ತೂಕದ ಆಧಾರದ ಮೇಲೆ ಡೋಸೇಜ್ ನೀಡಲು ಸೂಚಿಸಲಾಗಿದೆ.
  • ಪಾರದರ್ಶಕತೆಗೆ ಆದ್ಯತೆ: ಯೋಜನೆಯ ದುರುಪಯೋಗ ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆಸ್ಪತ್ರೆಗಳು ಚಿಕಿತ್ಸೆ ನೀಡುವಾಗ ಔಷಧದ ಬಾಟಲಿ (Vial), ಅದರ ಬ್ಯಾಚ್ ಸಂಖ್ಯೆ, ರೋಗಿಯ ಹೆಸರಿರುವ ಫೋಟೋ ಹಾಗೂ ವೈದ್ಯರು ದೃಢೀಕರಿಸಿದ ಡೋಸೇಜ್ ಪಟ್ಟಿಯನ್ನು ಕಡ್ಡಾಯವಾಗಿ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕೆಂದು ಸೂಚಿಸಲಾಗಿದೆ.
  • ಎಲ್ಲಾ ಆಸ್ಪತ್ರೆಗಳಿಗೆ ಅನ್ವಯ: ಈ ಸೌಲಭ್ಯವು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಯೋಜನೆಯಡಿ ನೋಂದಾಯಿತವಾಗಿರುವ (Empanelled) ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರಲಿದೆ.
    ಬಡ ಮತ್ತು ಸಾಮಾನ್ಯ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ನರರೋಗಕ್ಕೆ ಸಂಬಂಧಿಸಿದ ಈ ಕಠಿಣ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸುವುದರಿಂದ ಸಾವಿರಾರು ರೋಗಿಗಳಿಗೆ ಅನುಕೂಲವಾಗಲಿದೆ.

Dinesh Gundu Rao ಬಡ ಮತ್ತು ಸಾಮಾನ್ಯ ವರ್ಗದ ರೋಗಿಗಳಿಗೆ ಸಾವಿರಾರು ರೂಪಾಯಿ ವೆಚ್ಚದ ಈ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸುವ ಮೂಲಕ ಅವರ ಬದುಕಿಗೆ ಆಸರೆಯಾಗುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ.

Klive Special Article ಲೇಖನಮಾಲೆ: ಶ್ರೀಮದ್ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ

0

ಲೇ : ಡಾ.ರಾಮಕೃಷ್ಣ ಮುದ್ದೇಪಾಲ

ಭಾಗ – 1

ಅಪರಾಧ ,ಪರಿಕಲ್ಪನೆ

ಭಗವದ್ಗೀತೆ ಭಾರತೀಯರಿಗೆ ಪವಿತ್ರ ಗ್ರಂಥ. ಅದರಲ್ಲಿನ ಸಂದೇಶಗಳು ಪ್ರಸ್ತುತವಾಗಿರುವ ಬಗ್ಗೆ ವಿದ್ವಾಂಸರು ತಮ್ಮ ಪ್ರವಚನ, ಬರವಣಿಗೆ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
ಇಂಥದೊಂದು ಪ್ರಯತ್ನವನ್ನ ಸೋಂದಾ – ಸ್ವರ್ಣವಲ್ಲಿ ಮಹಾಸಂಸ್ಥಾನದ ಪೂಜ್ಯ ಶ್ರೀಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು
ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡಿದ್ದರು.
ಭಗವದ್ಗೀತಾ ಅಭಿಯಾನದ ವಿಶೇಷವಾಗಿ ” ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರವಾಗಿ ವಿಚಾರ ಸಂಕಿರಣವನ್ನ ಕುವೆಂಪು ವಿವಿಯಲ್ಲಿ ಏರ್ಪಡಿಸಲಾಗಿತ್ತು.
ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಡಾ.ರಾಮಕೃಷ್ಣ ಮುದ್ದೇಪಾಲ ಅವರು
ಅಪರಾಧ ನಿಯಂತ್ರಣದಲ್ಲಿ ಭಗವದ್ಗೀತೆಯ ಅಂಶಗಳು ಹೇಗೆ ಸಹಕಾರಿ ಎಂಬುದನ್ನ ಸೋದಾಹರಣ ಪ್ರಸ್ತುತಪಡಿಸಿದರು.
ಉಪನ್ಯಾಸ ಮಾಲಿಕೆಯಲ್ಲಿ ನಾಲ್ಕು ಭಾಗಗಳಿವೆ. ಮೊದಲ ಭಾಗ ಇಲ್ಲಿದೆ.

Klive Special Article ಅಪರಾಧಶಾಸ್ತ್ರದ ದೃಷ್ಟಿಯಿಂದ ಭಗವದ್ಗೀತೆಯನ್ನು ಅಪರಾಧ ನಿಯಂತ್ರಣಕ್ಕೆ ಹೇಗೆ ಉಪಯೋಗಿಸಬಹುದು?

“ಅಪರಾಧ” ಎನ್ನುವ ಪರಿಕಲ್ಪನೆ ಮಾನವ ನಾಗರಿಕತೆಯಷ್ಟೇ ಪುರಾತನವಾದುದು. ನಮ್ಮ ಸ್ಮೃತಿಕಾರರು ವಿವಿಧ ರೀತಿಯ ಅಪರಾಧಗಳನ್ನು ಮತ್ತು ಅವುಗಳಿಗೆ ವಿಧಿಸಬಹುದಾದ ಶಿಕ್ಷೆಗಳನ್ನು ಉಲ್ಲೇಖಿಸಿದ್ದಾರೆ. ಆದರೆ ಆಧುನಿಕ ಅಪರಾಧಶಾಸ್ತ್ರವು 19ನೇ ಶತಮಾನದಿಂದೀಚೆಗೆ ಬೆಳೆದು ಬಂದಿರುತ್ತದೆ. ಅಪರಾಧಶಾಸ್ತ್ರವನ್ನು ಸಮಾಜಶಾಸ್ತ್ರದ ಭಾಗವಾಗಿಯೇ ಪರಿಗಣಿಸಲಾಗುತ್ತದೆ. ಅಪರಾಧಶಾಸ್ತ್ರವು ಮಾನವನ ಅಪರಾಧ ವರ್ತನೆಯ ವೈಜ್ಞಾನಿಕ ಅಧ್ಯಯನವಾಗಿದ್ದರೂ ಕೂಡ ಅದು ಸ್ವತಃ ವಿಜ್ಞಾನವಲ್ಲ. ಯಾಕೆಂದರೆ ಅದು ಸಂಕೀರ್ಣ ಮತ್ತು ಸಾಪೇಕ್ಷ ವಿಷಯವಾಗಿದ್ದು ದೇಶ ಮತ್ತು ಕಾಲಮಿತಿಗೆ ಒಳಪಟ್ಟಿದೆ. ಅಪರಾಧಶಾಸ್ತ್ರವು ಸಮಾಜಶಾಸ್ತ್ರ, ಮನಃಶಾಸ್ತ್ರ, ಮಾನವ ಶಾಸ್ತ್ರ, ಕಾನೂನು, ಶಿಕ್ಷಾಶಾಸ್ತ್ರ, ಅಪರಾಧ ಸಂತ್ರಸ್ತಶಾಸ್ತ್ರ ಮತ್ತು ವಿಧಿವಿಜ್ಞಾನ ಈ ವಿಷಯಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದು ಅದು ಅಪರಾಧಗಳ ಕಾರಣ, ನಿಗ್ರಹ ಮತ್ತು ಪರಿಹಾರವನ್ನು ಒಳಗೊಂಡಿರುತ್ತದೆ. ಅಪರಾಧಶಾಸ್ತ್ರ ಮತ್ತು ಅಪರಾಧಕ್ಕೆ ಹಲವಾರು ವ್ಯಾಖ್ಯೆಗಳನ್ನು ಕೊಟ್ಟಿದ್ದರೂ ಸಹ ಅವೆಲ್ಲವೂ ಅಪೂರ್ಣವಾಗಿವೆ ಕಾರಣ, ಅಪರಾಧಕ್ಕಿರುವ ಸಂಕೀರ್ಣತೆ ಮತ್ತು ಸಾಪೇಕ್ಷತೆ. ಆಧುನಿಕ ಮನುಷ್ಯನ ಜೀವನ ಸಂಕೀರ್ಣವಾದ ಹಾಗೆ ಅಪರಾಧಗಳು ಸಂಕೀರ್ಣವಾಗುತ್ತಿವೆ.
Klive Special Article ಅಪರಾಧಶಾಸ್ತ್ರದ ಪ್ರಕಾರ ಅಪರಾಧ ಒಂದು ಸಮಾಜವಿರೋಧಿ ಕೃತ್ಯ. ಯಾವುದೇ ಕೃತ್ಯವು ಸರ್ಕಾರದಿಂದ ಕಾನೂನುಬಾಹಿರವೆಂದು ಪರಿಗಣಿಸಲ್ಪಟ್ಟು ಅದಕ್ಕೆ ಶಿಕ್ಷೆ ವಿಧಿಸಲ್ಪಟ್ಟಿದ್ದರೆ ಆ ಕೃತ್ಯವನ್ನು ಅಪರಾಧವೆಂದು ಪರಿಗಣಿಸಬಹುದು. ಯಾವುದೇ ಕೃತ್ಯವು ಅಪರಾಧವೆಂದೆನಿಸಲು ಆ ಕೃತ್ಯದ ಹಿಂದೆ ಅಪರಾಧೀ ಮನಸ್ಸಿರಬೇಕು. ಅಪರಾಧವೆಸಗುವ ಮನಸ್ಸು, ಯೋಚನೆ ಅಥವಾ ಯೋಜನೆಯಿಲ್ಲದಿದ್ದರೆ ಆ ಕೃತ್ಯವನ್ನು ” ಸಾಮಾನ್ಯ ಅಪವಾದ ” ವೆಂದು ಪರಿಗಣಿಸಿ ಕಾನೂನಿನಲ್ಲಿ ಯಾವುದೇ ಶಿಕ್ಷೆಯನ್ನು ವಿಧಿಸಲಾಗುವುದಿಲ್ಲ. ಅಂದರೆ ಅಪರಾಧಿಗೆ ಕರ್ತೃತ್ವದ ಭಾವವಿರುತ್ತದೆ ಮತ್ತು ಅಪರಾಧದ ಉದ್ದೇಶ ಮುಖ್ಯವಾಗುತ್ತದೆ. ಕರ್ಮಫಲದ ಕುರಿತು ಭಗವದ್ಗೀತೆಯಲ್ಲಿ ಶ್ರೀಕೃಷ್ಣನ ಮಾತು ಗಮನಾರ್ಹ.
ಯಸ್ಯ ನಾಹಂಕೃತೋ ಭಾವೋ ಬುದ್ಧಿರ್ಯಸ್ಯ ನ ಲಿಪ್ಯತೇI
‌ ಹತ್ವಾsಪಿ ಸ ಇಮಾಂಲ್ಲೋಕಾನ್ನ ಹಂತಿ ನ ನಿಬಧ್ಯತೇII18.17II
ಯಾವನಿಗೆ ನಾನು ʼಕರ್ತೃʼ ಎಂಬ ಭಾವವಿರುವುದಿಲ್ಲವೋ, ಯಾವನ ಬುದ್ಧಿಯು ಲಿಪ್ತವಾಗುವುದಿಲ್ಲವೋ ಅಂಥವನು ಈ ಲೋಕಗಳನ್ನು ಕೊಂದರೂ ಕೊಲ್ಲುವುದಿಲ್ಲ, ಬಂಧಿಸಲ್ಪಡುವುದಿಲ್ಲ.

ʼಅಪರಾಧʼ ಕಾನೂನಿನ ವಿಷಯವಾದರೆ ʼಪಾಪʼವನ್ನು ನೈತಿಕ ಮತ್ತು ಧಾರ್ಮಿಕ ನೆಲೆಯಲ್ಲಿ ನೋಡಬೇಕಾಗುತ್ತದೆ. ಉದಾಹರಣೆಗೆ ಸುಳ್ಳು ಹೇಳುವುದು ನೈತಿಕ ದೃಷ್ಟಿಯಿಂದ ಪಾಪವಾದರೂ ಕಾನೂನಿನ ದೃಷ್ಟಿಯಲ್ಲಿ ಅಪರಾಧವೆನಿಸುವುದಿಲ್ಲ. ಸಾಮಾನ್ಯವಾಗಿ ಎಲ್ಲ ಅಪರಾಧಗಳು ಪಾಪಕೃತ್ಯಗಳಾಗುತ್ತವೆ. ಆದರೆ ಎಲ್ಲ ಪಾಪಕೃತ್ಯಗಳು ಅಪರಾಧಗಳಾಗುವುದಿಲ್ಲ.
ಕೇವಲ ಮಾನಸಿಕ ಕ್ರಿಯೆ ಪಾಪವಾಗಬಹುದು ಆದರೆ ಅಪರಾಧವಾಗುವುದಿಲ್ಲ.
ಕರ್ಮೇಂದ್ರಿಯಾಣಿ ಸಂಯಮ್ಯ ಯ ಆಸ್ತೇ ಮನಸಾ ಸ್ಮರನ್‌I
ಇಂದ್ರಿಯಾರ್ಥಾನ್‌ ವಿಮೂಢಾತ್ಮಾ ಮಿಥ್ಯಾಚಾರಃ ಸ ಉಚ್ಯತೇII3.6II
ಯಾವನು ಕರ್ಮೇಂದ್ರಿಯಗಳನ್ನು ನಿಗ್ರಹಿಸಿ ಇಂದ್ರಿಯವಿಷಯಗಳನ್ನು ಮನಸ್ಸಿನಿಂದ ಸ್ಮರಿಸುತ್ತಿರುವನೋ ಅವನು ವಿಮೂಢಾತ್ಮನೆಂದೂ ಮಿಥ್ಯಾಚಾರನೆಂದೂ ಹೇಳಲ್ಪಡುತ್ತಾನೆ.
ಅಪರಾಧ ಮತ್ತು ಪಾಪ ಇವೆರಡೂ ಸ್ಥಳದಿಂದ ಸ್ಥಳಕ್ಕೆ ಮತ್ತು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಹೋಗುವುದನ್ನು ಗಮನಿಸಬಹುದು.

DC Shivamogga ಯೋಜನೆ ಸಿದ್ಧಪಡಿಸುವ ಮುನ್ನ ಜನರ ಶಿಕ್ಷಣ, ಪರಿಸರ, ಆರೋಗ್ಯ ಮತ್ತಿತರ ಲಭ್ಯವಿರುವ ದತ್ತಾಂಶಗಳನ್ನ ಅವಲೋಕಿಸಿ- ಪ್ರಭುಲಿಂಗ ಕವಳಿಕಟ್ಟಿ

0

DC Shivamogga ಭೌತಿಕ ಪ್ರಗತಿ ಮಾತ್ರವೇ ದೇಶದ ಪ್ರಗತಿ ಎನ್ನಲಾಗುವುದಿಲ್ಲ. ಶಿಕ್ಷಣ, ಆರೋಗ್ಯ, ಪರಿಸರ, ಸಾರ್ವಜನಿಕರ ಸಹಭಾಗಿತ್ವ ಇಂತಹ ಹತ್ತುಹಲವು ಮಹತ್ವದ ಸಂಗತಿಗಳು, ಸಮಸ್ಯೆ-ಸವಾಲುಗಳು ಹಾಗೂ ಪರಿಹಾರ ಕ್ರಮಗಳನ್ನು ಸ್ಥಳೀಯವಾಗಿ ಕ್ರೋಢೀಕರಿಸಿ, ಅದಕ್ಕೆ ಪೂರಕವಾಗಿ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದಲ್ಲಿ ಇದರ ವರದಿಯ ಆಧಾರದ ಮೇಲೆ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.

ಅವರು ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮಾನವ ಅಭಿವೃದ್ಧಿ-2025ರ ವರದಿ ಮತ್ತು ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ತಯಾರಿಕೆ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ರಾಜ್ಯದ ಪ್ರತಿ ಜಿಲ್ಲೆಗಳ ಅಭಿವೃದ್ಧಿ ಸೂಚ್ಯಂಕದಲ್ಲಿ ಸಾಮಾನ್ಯದಿಂದ ತೀವ್ರಪ್ರಮಾಣದ ಅಸಮತೋಲನವಿದೆ. ಕೆಲವು ಜಿಲ್ಲೆಗಳು ಸರಾಸರಿಗಿಂತ ಮುಂಚೂಣಿಯಲ್ಲಿದ್ದರೆ ಇನ್ನೂ ಕೆಲವು ಜಿಲ್ಲೆಗಳು ಹಿಂದುಳಿದಿವೆ. ಈ ಅಸಮತೋಲನವನ್ನು ಸರಿಪಡಿಸುವಲ್ಲಿ ಸಮಗ್ರ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿದಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸಲು ಹಾಗೂ ವಾರ್ಷಿಕ ಆಯವ್ಯಯದಲ್ಲಿ ಸೇರ್ಪಡೆಗೊಳಿಸಿ ರಾಜ್ಯದ ಅಭಿವೃದ್ಧಿಪಡಿಸಲು ಸಹಕಾರಿಯಾಗಲಿದೆ ಎಂದರು. ಈ ಯೋಜನೆಗಳನ್ನು ಸಿದ್ಧಪಡಿಸುವ ಮುನ್ನ, ಅಲ್ಲಿನ ಜನರ ಶಿಕ್ಷಣ, ಪರಿಸರ, ಆರೋಗ್ಯ, ನೈರ್ಮಲ್ಯ ಮತ್ತಿತರ ಅಗತ್ಯಗಳನ್ನು ಗುರುತಿಸುವುದರ ಜೊತೆಗೆ ಸ್ಥಳೀಯವಾಗಿರುವ ವಿವಿಧ ಇಲಾಖೆಗಳ ಇರಬಹುದಾದ ಚರಂಡಿ, ಬೀದಿದೀಪ ಮತ್ತಿತರ ಕೋರಿಕೆ ಮತ್ತು ಅಗತ್ಯ ಬೇಡಿಕೆಗಳನ್ನು ಕ್ರೋಡೀಕರಿಸಿ, ವರದಿ ಸಿದ್ಧಪಡಿಸಬೇಕಾಗುವುದು. ಅಲ್ಲದೇ ಕಳೆದ ದಶಕಗಳಿಂದೀಚೆಗೆ ಇಲಾಖಾ ಪ್ರಗತಿಯ ದತ್ತಾಂಶಗಳನ್ನು ಅವಲೋಕಿಸಿ, ಸಾಧಕ-ಬಾದಕಗಳನ್ನು ಪರಿಶೀಲಿಸಿ, ವರದಿ ಸಿದ್ಧಪಡಿಸುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.


ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ಅವರು ಮಾತನಾಡಿ, ಈ ಸಂಬಂಧ ಈಗಾಗಲೇ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಮಾರ್ಚ್‌ಮಾಸಾಂತ್ಯದೊಳಗಾಗಿ ಇಲಾಖಾವಾರು ಮಾಹಿತಿಯನ್ನು ಸಂಗ್ರಹಿಸಿ, ದತ್ತಾಂಶ ಕ್ರೋಢೀಕರಿಸಿಬೇಕು. ಅಲ್ಲದೇ ಪ್ರಸ್ತುತ ಸ್ಥಿತಿಯ ವಿಶ್ಲೇಷಣೆ ಹಾಗೂ ಮುಂದಿನ ಗುರಿಗಳನ್ನು ಅಂತಿಮಗೊಳಿಸಿ, ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯಲ್ಲಿ ಅನುಮೋದನೆ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳು ಹಾಗೂ ಸಾಧನೆಗಳ ಕುರಿತು ಏಪ್ರಿಲ್‌ಮಾಹೆಯೊಳಗಾಗಿ ಅಧ್ಯಯನ ಕೈಗೊಳ್ಳಬೇಕು. ಜಿಲ್ಲಾ ಅಭಿವೃದ್ಧಿ ಯೋಜನೆ-2031ರ ವಲಯವಾರು ಅಧ್ಯಾಯಗಳನ್ನು ಸಿದ್ದಪಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ ಅವರು, ಈ ವರದಿಯನ್ನು ಅಂತಿಮವಾಗಿ ಜೂನ್‌ಮಾಹೆಯಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕಾಗುವುದು. ಈ ವರದಿಯಲ್ಲಿ ಹಣಕಾಸು, ಅಪೌಷ್ಟಿಕತೆ ಮತ್ತು ಬಾಣಂತಿಯರ ಮರಣದಂತಹ ಸಮಸ್ಯೆಗಳು ಮಾತ್ರವಲ್ಲ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ವಿಷಯವನ್ನು ಪ್ರಮುಖವಾಗಿ ಪರಿಗಣಿಸಲಾಗುವುದು ಎಂದವರು ನುಡಿದರು.


ಮಾನವ ಅಭಿವೃದ್ಧಿ ಸೂಚ್ಯಂಕ ದೇಶದ ಅಭಿವೃದ್ಧಿಯನ್ನು ಕೇವಲ ಆರ್ಥಿಕತೆಯಿಂದಷ್ಟೇ ಅಲ್ಲದೆ, ಜನರ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಆಧಾರದ ಮೇಲೆ ಅಳೆಯುವ ಸಾಧನವಾಗಿದೆ. ಇದು ದೀರ್ಘಾಯುಷ್ಯ, ಶಿಕ್ಷಣ ಮತ್ತು ಆದಾಯದ ಸರಾಸರಿ ಸಾಧನೆಯನ್ನು ತೋರಿಸುತ್ತದೆ. ರಾಷ್ಟ್ರಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ನಿರ್ಣಯಿಸಲು ಸಹಾಯ ಮಾಡುತ್ತದೆ ಹಾಗೂ ಸುಧಾರಣೆಗಾಗಿ ನೀತಿ ನಿರೂಪಣೆಗಳಿಗೆ ಪ್ರೇರಣೆ ನೀಡುತ್ತದೆ ಎಂದರು.


DC Shivamogga ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯದ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಬಸವರಾಜ ಎಸ್.ಅವರು ಮಾತನಾಡಿ, ದಶಕಗಳ ಹಿಂದೆ ಜಿಲ್ಲಾ ಮಾನವ ಅಭಿವೃದ್ಧಿ ವರದಿಗಳನ್ನು ಸಿದ್ಧಪಡಿಸಲಾಗಿತ್ತು. ಪ್ರಸ್ತುತ ವಿವಿಧ ವಲಯಗಳಡಿ ಉಂಟಾಗಿರುವ ಬದಲಾವಣೆಗಳು, ನೈಸರ್ಗಿಕ ಸಂಪನ್ಮೂಲಗಳ ಬಳಕೆ, ಜಿಲ್ಲೆಗಳ ಸಮಸ್ಯೆಗಳು ಮತ್ತು ನಿವಾರಣಾ ಕ್ರಮಗಳು ಹಾಗೂ ಯಶೋಗಾಥೆಗಳನ್ನು ಒಳಗೊಂಡಂತೆ ಮಾನವ ಅಭಿವೃದ್ಧಿ ವರದಿ ತಯಾರಿಸುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕ್ರೋಡೀಕೃತ ವರದಿಯನ್ನು ಸಿದ್ಧಪಡಿಸಲು ತಾಂತ್ರಿಕ ಬೆಂಬಲ ಸಂಸ್ಥೆಯಾಗಿ ಕುವೆಂಪು ವಿಶ್ವವಿದ್ಯಾಲಯವನ್ನು ನೇಮಿಸಿ ಆದೇಶ ಹೊರಡಿಸಿದೆ ಎಂದವರು ನುಡಿದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Karnataka and Goa NCC Directorate ಒಪ್ಪಂದದ ಮೇರೆಗೆ ಕೆಲವು ಹುದ್ದೆಗಳಿಗೆ ಎನ್ ಸಿಸಿ ನಿರ್ದೇಶನಾಲಯದಿಂದ ಅರ್ಜಿಗೆ ಕರೆ

0

Karnataka and Goa NCC Directorate ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27ನೇ ಸಾಲಿಗಾಗಿ ಓರ್ವ ನಿವೃತ್ತ ಸೈನ್ಯಾಧಿಕಾರಿಯನ್ನು ಒಪ್ಪಂದದ ಮೇರೆಗೆ ಶಿಸ್ತು ಮತ್ತು ಜಾಗೃತ ಹುದ್ದೆಗೆ ಹಾಗೂ ಮಾಜಿ ಸೈನಿಕರನ್ನು 30 ಎನ್.ಸಿ.ಸಿ. ಬೋಧಕರ ಹುದ್ದೆಗಳಿಗೆ ಕೆಲವು ಷರತ್ತುಗಳೊಂದಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿಯನ್ನು ಇಮೇಲ್ “adperskardte@gmail.com“ ಮೂಲಕ ಮತ್ತು ಅಂಚೆ ವಿಳಾಸ NCC Dte (Karnataka and Goa), KSCMF Building, 4th Floor, No-8, Cunningham Road, Bengaluru – 560001 ಮೂಲಕ ಜ.25 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Karnataka and Goa NCC Directorate ಹೆಚ್ಚಿನ ಮಾಹಿತಿಗಾಗಿ “https://nccindia.gov.in“ ಜಾಲತಾಣವನ್ನು ಅಥವಾ ಮೊಬೈಲ್ ಸಂಖ್ಯೆ 9481405092 ನ್ನು ಸಂಪರ್ಕಿಸುವುದು.

ಸಾರಿಗೆ ಬಸ್ ಗಳ ನಿರ್ವಹಣೆ ಬಗ್ಗೆ ನಿಯಂತ್ರಣಾಧಿಕಾರಿಗಳೇ ಮುತುವರ್ಜಿವಹಿಸಿ, ಗ್ರಾಮೀಣರಿಗೆ ಅನುಕೂಲಮಾಡಿ- ದಿನೇಶ್ ಗೊಳಿಗೌಡ

0

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿನ ವಿದ್ಯಾರ್ಥಿಗಳು ಪಟ್ಟಣಗಳಿಗೆ ತೆರಳಲು, ಅನಾರೋಗ್ಯ ಪೀಡಿತರಾಗಿರುವ ವಯೋವೃದ್ಧರು ಚಿಕಿತ್ಸೆಗಾಗಿ ತೆರಳಲು ಸಕಾಲದಲ್ಲಿ ಬಸ್ಸುಗಳಿಲ್ಲದೆ ಜನಸಾಮಾನ್ಯರು ತೀವ್ರ ತರಹದ ಸಮಸ್ಯೆ ಎದುರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ನಿಗಮದ ವತಿಯಿಂದ ಸಾರ್ವಜನಿಕ ಸೇವೆ ಬಿಡಲಾಗಿರುವ ಬಸ್ಸುಗಳು, ಅವುಗಳ ನಿಲುಗಡೆ, ಹೊಸಮಾರ್ಗಗಳು, ಅಲ್ಲಿನ ಸಮಸ್ಯೆಗಳ ಕುರಿತು ನಿಯಂತ್ರಣಾಧಿಕಾರಿಗಳು ತಮ್ಮ ಹಂತದಲ್ಲಿಯೇ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ತಕ್ಷಣದ ಪರಿಹಾರವನ್ನು ಕಂಡುಕೊಳ್ಳುವಂತೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್‌ಗೊಳಿಗೌಡ ಅವರು ಹೇಳಿದರು.

ಅವರು ಜಿಲ್ಲಾ ಪಂಚಾಯಿತಿ ಅಬ್ದುಲ್‌ನಜೀರ್‌ಸಾಬ್‌ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಗ್ಯಾರಂಟಿ ಯೋಜನೆಗಳ ವ್ಯವಸ್ಥಿತ ಅನುಷ್ಟಾನಕ್ಕಾಗಿ ರಾಜ್ಯ ಸರ್ಕಾರ ಇದುವರೆಗೂ 1 ಲಕ್ಷದ 10 ಸಾವಿರ ಕೋಟಿ ರೂ. ಹಣ ವ್ಯಯಿಸಿದೆ. ಇದರಿಂದ ರಾಜ್ಯದ ತಲಾದಾಯ ಕೂಡ ಹೆಚ್ಚಲು ಸಹಕಾರಿಯಾಗಿದೆ. ಶಿವಮೊಗ್ಗ ಜಿಲ್ಲೆಗೆ 3023.95 ಕೋಟಿ ರೂ.ಹಣವನ್ನು ವೆಚ್ಚ ಮಾಡುವ ಮುಖಾಂತರ ಜಿಲ್ಲೆಯ ಜನತೆಗೆ ಬದುಕಿನ ಗ್ಯಾರಂಟಿಯನ್ನು ನೀಡಿದೆ ಎಂದರು.

2013-14ರಲ್ಲಿ ರಾಜ್ಯದ ತಲಾದಾಯ 1,05,000 ರೂ.ಗಳಷ್ಟಿತ್ತು. ಕಳೆದ ಮೂರು ತಿಂಗಳ ಹಿಂದೆ ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ರಾಜ್ಯದ ತಲಾದಾಯ 2,04,485 ರೂ.ಗಳಿಗೆ ಏರಿಕೆಯಾಗಿದೆ.

ಇದಕ್ಕೆ ಗ್ಯಾರಂಟಿಗಳೇ ಪ್ರಮುಖ ಕಾರಣ. ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಭರವಸೆ, ಭದ್ರತೆ ಮತ್ತು ಗೌರವವನ್ನು ತರಲು ನೆರವಾಗಿವೆ. ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಇದು ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ದಿನನಿತ್ಯದ ಬದುಕಿಗೆ ನೇರ ಸ್ಪರ್ಶ ನೀಡಿವೆ. 1,24,10,685 ಮಹಿಳೆಯರಿಗೆ ಪ್ರತಿ ತಿಂಗಳು 2500 ಕೋಟಿ ರೂ. ಹಣವನ್ನು ನೇರವಾಗಿ ಅವರ ಖಾತೆಗೆ ಹಾಕಲಾಗುತ್ತಿದೆ. ಇದುವರೆಗೆ ಗೃಹಲಕ್ಷ್ಮಿ ಯೋಜನೆಯಡಿ 57,381 ಕೋಟಿ ರೂ. ಹಣವನ್ನು ಸರ್ಕಾರ ಪಾವತಿಸುವ ಮೂಲಕ ಪ್ರತಿ ಮಹಿಳೆಗೆ 48 ಸಾವಿರ ಗೃಹಲಕ್ಷ್ಮಿ ಹಣ ತಲುಪಿದೆ ಎಂದು ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಯಡಿ 21,500 ಕೋಟಿ, ಅನ್ನಭಾಗ್ಯ ಯೋಜನೆಯಡಿ 18 ಸಾವಿರ ಕೋಟಿ ರೂ., ಯುವನಿಧಿ ಯೋಜನೆಯಡಿ 800 ಕೋಟಿ ರೂ.ಹಣವನ್ನು ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ 656 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು ಇದರ ಟಿಕೆಟ್ ಮೌಲ್ಯ 17 ಸಾವಿರ ಕೋಟಿ ರೂ.ಗಳನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಭರಿಸಿದೆ. ದರ ಏರಿಕೆ, ಉದ್ಯೋಗ ಅಸ್ಥಿರತೆ ಮತ್ತು ಆದಾಯ ಅಸಮಾನತೆಗಳ ನಡುವೆ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ಈ ಯೋಜನೆಗಳು ಆರ್ಥಿಕ ಭರವಸೆಯಾಗಿ ಪರಿಣಮಿಸಿವೆ. ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಹಾವಳಿ ಹೆಚ್ಚಾಗಿದ್ದು ಸರ್ಕಾರಿ ಬಸ್ ಗಳು ಸಕಾಲಕ್ಕೆ ಬರುತ್ತಿಲ್ಲ. ಇದರಿಂದ ಶಕ್ತಿ ಯೋಜನೆಗೆ ಹಿನ್ನಡೆಯಾಗಿದೆ ಎಂಬ ಮಾತುಗಳು ಕೇಳಿಬಂದಿದೆ. ಅಧಿಕಾರಿಗಳು ಕೂಡಲೇ ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ಡಿಫೋಗಳ ಸ್ಥಾಪನೆ ಸಂಬಂಧ ಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಜನತೆಗೆ 3023.95 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಜಿಲ್ಲೆಯ 3,88,029 ಮಹಿಳೆಯರಿಗೆ ತಲಾ 2 ಸಾವಿರದಂತೆ 48 ಸಾವಿರ ಹಣ ಪಾವತಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ 1805.56 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ದಿನೇಶ್ ಗೂಳಿಗೌಡ.
.ಗ್ಯಾರಂಟಿಗಳ ಜಿಲ್ಲಾ ಚಿತ್ರಣ : ಗೃಹಲಕ್ಷ್ಮಿ ಯೋಜನೆಯಡಿ 3,88,029 ಮನೆಯ ಯಜಮಾನಿಯರ ಬ್ಯಾಂಕ್ ಖಾತೆಗೆ 1805.56 ಕೋಟಿ ರೂ. ಹಣವನ್ನು ಜಮೆ ಮಾಡಲಾಗಿದೆ. ಪ್ರತಿ ಫಲಾನುಭವಿಗಳಿಗೆ ತಲಾ 2000ದಂತೆ ಒಟ್ಟು 48 ಸಾವಿರ ರೂ.ಗಳನ್ನು ಸರ್ಕಾರದ ನೀಡಿದೆ. ಈ ಯೋಜನೆಯಡಿ ನೋಂದಾಯಿತರಲ್ಲಿ 4717 ಮಂದಿ ಮೃತಪಟ್ಟಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 4,82,276 ಕುಟುಂಬಗಳಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗಿದೆ. ಇದಕ್ಕಾಗಿ 588.44 ಕೋಟಿ ಹಣ ವೆಚ್ಚವಾಗಿದ್ದು ಇದನ್ನು ರಾಜ್ಯ ಸರ್ಕಾರ ವಿದ್ಯುತ್ ನಿಗಮ ಕಂಪನಿಗೆ ಪಾವತಿಸಿದೆ. ಅನ್ನಭಾಗ್ಯ ಯೋಜನೆಯಡಿ 3,76,954 ಕಾರ್ಡ್ ಗಳು ನೋಂದಣಿಯಾಗಿದ್ದು 2,23,13,229 ಸದಸ್ಯರು ಫಲಾನುಭವಿಗಳಿದ್ದಾರೆ. ಅವರಿಗೆ ಉಚಿತ ಪಡಿತರ ವಿತರಣೆ ಮಾಡಲಾಗುತ್ತಿದ್ದು 360.55 ಕೋಟಿ ರೂ. ಹಣವನ್ನು ಸರ್ಕಾರ ವ್ಯಯಿಸಿದೆ. ಶಕ್ತಿ ಯೋಜನೆಯಡಿ 6,50,07,631 ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ.

ಇದರ ಟಿಕೆಟ್ ಮೌಲ್ಯ 244.98 ಕೋಟಿ ರೂ.ಹಣವನ್ನು ಸಾರಿಗೆ ನಿಗಮಕ್ಕೆ ಪಾವತಿ ಮಾಡಲಾಗಿದೆ. ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ 64.1% ಹೆಚ್ಚಳವಾಗಿದೆ. ಪ್ರಯಾಣಿಕರ ಅವಶ್ಯಕತೆಗೆ ಅನುಗುಣವಾಗಿ 50 ಬಸ್ ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗಿದೆ.

ಒಟ್ಟು ಪ್ರಯಾಣಿಕರಲ್ಲಿ 20.10% ಮಹಿಳೆಯರು‌ ಉದ್ಯೋಗ‌ ನಿಮಿತ್ತ ಸಂಚರಿಸಿದರೆ, 28.58% ಹೆಣ್ಣುಮಕ್ಕಳು ಶಾಲಾ ಕಾಲೇಜುಗಳಿಗೆ ಶಾಲೆ ಕಾಲೇಜುಗಳಿಗೆ, 10.75% ಮಂದಿ ಧಾರ್ಮಿಕ ಕ್ಷೇತ್ರಗಳಿಗೆ 5.15% ಮಹಿಳೆಯರು ಪ್ರವಾಸಿ ತಾಣಗಳಿಗೆ ಪ್ರಯಾಣಿಸಿದ್ದಾರೆ.

ಯುವನಿಧಿ ಯೋಜನೆಯಡಿ ನೋಂದಾಯಿತ 8233 ಯುವಕ ಯುವತಿಯರಿಗೆ, 24.41 ಕೋಟಿ ರೂ.ನಷ್ಟು ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌ ಅವರು ಮಾತನಾಡಿ, ರಾಜ್ಯ ರಸ್ತೆ ಸಾರಿಗೆ ನಿಲ್ದಾಣಗಳ ಶೌಚಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಚತಾ ಕೆಲಸಗಾರರು ಸೇವಾ ಅವಧಿಯಲ್ಲಿ ಸಮವಸ್ತ್ರಗಳನ್ನು ಧರಿಸಿರುವಂತೆ ಹಾಗೂ ಮೊಬೈಲ್‌ಗಳನ್ನು ಬಳಸದಂತೆ ನೋಡಿಕೊಳ್ಳಬೇಕು. ಅಂತೆಯೇ ದೂರು ಪೆಟ್ಟಿಗೆಯನ್ನು ಇರಿಸಬೇಕು. ಬಸ್ಸುಗಳ ಓಡಾಟದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಸೊರಬ, ತೀರ್ಥಹಳ್ಳಿ, ಹೊಸನಗರ, ಸಾಗರದಲ್ಲಿ ಬಸ್ ಗಳು ಸಕಾಲದಲ್ಲಿ ಸಂಚರಿಸುತ್ತಿಲ್ಲ ಎಂಬ ದೂರುಗಳು ವ್ಯಕ್ತವಾಗುತ್ತಿವೆ.

ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು, ಸಮಿತಿ ಸಭೆಗೆ ಅಧಿಕಾರಿಗಳು ತಪ್ಪದೆ ಹಾಜರಾಗುವಂತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಮನೆ ಬಳಕೆಗೆ ಮಾತ್ರ ವಿದ್ಯುತ್ ಬಳಕೆ ಮಾಡಬೇಕು. ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಂಡುಬಂದರೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದ ಅವರು ವಿವಿಧ ಕಾರಣಗಳಿಂದಾಗಿ ಜಿಲ್ಲೆಯ 276ಜನರಿಗೆ ಗೃಹಲಕ್ಷ್ಮೀ ಸೌಲಭ್ಯ ದೊರೆಯುತ್ತಿಲ್ಲ.. ಸೌಲಭ್ಯ ವಂಚಿತ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯವನ್ನು ಅರ್ಹರಿಗೆ ತಲುಪಿಸುವ ಕಾರ್ಯ ತುರ್ತಾಗಿ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಅವೈಜ್ಞಾನಿಕ ಮಾನದಂಡವನ್ನು ಅನುಸರಿಸಿ ಪಡಿತರ ಚೀಟಿ ರದ್ದುಗೊಳಿಸುವುದು ತರವಲ್ಲ. ಪಡಿತರ ಚೀಟಿ ರದ್ದುಗೊಳಿಸಿರುವುದನ್ನು ಪುನರ್‌ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. -ಅನ್ವರ್‌ಪಾಷಾ, ಗ್ಯಾರಂಟಿ ಸಮಿತಿ ಸದಸ್ಯರು.

ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ತಾಲೂಕು ಮಟ್ಟದ ಸಮಿತಿಗಳಿಂದ ವರದಿ ಪಡೆದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಯೋಜನೆಯ ಅನುಷ್ಟಾನದಲ್ಲಿ ಇನ್ನಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿಗಳು, ಶಿವಮೊಗ್ಗ.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ತಾಲೂಕು ಅಧ್ಯಕ್ಷ ಮಧು, ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜಪ್ಪ, ಶಿವಣ್ಣ, ಇಕ್ಕೇರಿ ರಮೇಶ್, ಹಾಗೂ ಜಿಲ್ಲಾ, ತಾಲೂಕು ಮಟ್ಟದ ಸದಸ್ಯರು, ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Bharat Scouts and Guides ಸ್ಕೌಟ್ಸ್ & ಗೈಡ್ಸ್ ಚಟುವಟಿಕೆಗಳಲ್ಲಿ ಶಿವಮೊಗ್ಗ ಜಿಲ್ಲೆಯು ಭಾರತಕ್ಕೇ ಮಾದರಿ: ಶಾಸಕ ಡಿ.ಎಸ್.ಅರುಣ್

0

Bharat Scouts and Guides ಜೀವನ ಹಾಗೂ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕೌಶಲ್ಯಗಳು ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಇಂದು ಕೌಶಲ್ಯದ ಕೊರತೆ ಎದ್ದು ಕಾಣಿಸುತ್ತಿದೆ. ಶಿಕ್ಷಣದ ಜತೆಗೆ ಮಕ್ಕಳಿಗೆ ಕೌಶಲ್ಯವನ್ನು ಕಲಿಸಬೇಕಿದೆ. ತಂತ್ರಜ್ಞಾನ ಮುಂದುವರೆದ ಹಾಗೆ ಉದ್ಯೋಗ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ವಿಫುಲವಾದ ಅವಕಾಶಗಳಿವೆ. ಪ್ರತಿಯೊಂದು ಹಂತದಲ್ಲೂ ಕೌಶಲ್ಯ ತುಂಬಾ ಮುಖ್ಯ ಎಂದು ತಿಳಿಸಿದರು.

ಮಕ್ಕಳಿಗೆ ಮಾನವೀಯ ಗುಣಗಳ ಜೊತೆಗೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರೇರೇಪಣೆ ಆಗಿದೆ. ಪ್ರಪಂಚಾದ್ಯಂತ ನೂರಾರು ದೇಶಗಳಲ್ಲಿ ವಿಶೇಷ ಕಾರ್ಯಗಳನ್ನು ಮಾಡುತ್ತ ತನ್ನದೇ ಆದ ಛಾಪು ಮೂಡಿಸಿದೆ. ಸಾಂಸ್ಕೃತಿಕ ಹಾಗೂ ಕ್ರೀಡೆಯ ಬಗ್ಗೆ ಮಕ್ಕಳು ಆಸಕ್ತಿ ವಹಿಸುವಂತೆ ಪೋಷಕರು, ಶಿಕ್ಷಕರು ಗಮನಹರಿಸಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಗೆ ಅನೇಕರು ವಿಶೇಷವಾದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಶಿವಮೊಗ್ಗ ಭಾರತಕ್ಕೆ ಮಾದರಿಯಾಗಿದೆ ಎಂದರು.

ಶತಮಾನೋತ್ಸವದ ಅಂಗವಾಗಿ ಕಟ್ಟಡ ನಿರ್ಮಿಸಲು ಆರ್ಥಿಕ ನೆರವು ನೀಡುತ್ತೇನೆ ಎಂದು ಭರವಸೆ ನೀಡಿದರು.

Bharat Scouts and Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತೆ ಶಕುಂತಲಾ ಚಂದ್ರಶೇಖರ್, ಭಾರತಿ ಚಂದ್ರಶೇಖರ್, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಲಕ್ಷ್ಮೀ ರವಿ, ಮಲ್ಲಿಕಾರ್ಜುನ್ ಕಾನೂರು, ದೀಪು, ರೇಣುಕಾ, ಶಿವಶಂಕರ್, ಕೆ.ರವಿ, ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ, ಪರಮೇಶ್ವರಯ್ಯ ಉಪಸ್ಥಿತರಿದ್ದರು.