Thursday, August 13, 2026
Thursday, August 13, 2026
Home Blog Page 243

Shivamogga District Commercial Tax Department ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ವಿಜಯಕುಮಾರ್ ಬತ್ತದ್ ನಿವೃತ್ತಿ: ಆತ್ಮೀಯ ಬೀಳ್ಕೊಡುಗೆ.

0

Shivamogga District Commercial Tax Department ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಜಂಟಿ ಆಯುಕ್ತರಾಗಿ ( ಜಾರಿ ) ಕಾರ್ಯನಿರ್ವಹಿಸಿ ಸೇವೆಯಿಂದ ನಿವೃತ್ತರಾದ ವಿಜಯಕುಮಾರ್ ಎಂ ಬತ್ತದ್ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಭೇಟಿ ಮಾಡಿ ನಿವೃತ್ತ ಜೀವನಕ್ಕೆ ಶುಭಕೋರಿ ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆಯ ಸಹ್ಯಾದ್ರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಿಳ್ಕೋಡುಗೆ ಸಮಾರಂಭದಲ್ಲಿ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕೆ ಸಂಘವ ಅಧ್ಯಕ್ಷ ಬಿ.ಗೋಪಿನಾಥ್ ಅವರು ವಿಜಯಕುಮಾರ್ ಬತ್ತದ್ ಅವರನ್ನು ಸನ್ಮಾನಿಸಿ ಶುಭಕೋರಿದರು.

Shivamogga District Commercial Tax Department ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಪ್ರದೀಪ್ ವಿ ಎಲಿ ಹಾಜರಿದ್ದರು.

Shimoga News ಜನವರಿ 5. ಖ್ಯಾತವಾಗ್ಮಿ ಡಾ.ಗುರುರಾಜ ಕರಜಗಿಕರ್ನಾಟಕ ಸಂಘದಲ್ಲಿ” ತಿಂಗಳ ಅತಿಥಿ” ಯಾಗಿ‌ ಭಾಗಿ.

0

Shimoga News ದಿನಾಂಕ 05ನೇ ಜನವರಿ 2026ರ ಸೋಮವಾರ, ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ತಿಂಗಳ ಅತಿಥಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Shimoga News ಡಾ. ಗುರುರಾಜ ಕರಜಗಿ, ಖ್ಯಾತ ಶಿಕ್ಷಣ ತಜ್ಞರು, ಬೆಂಗಳೂರು ಇವರು ‘ಸಾಹಿತ್ಯದಿಂದ ಏನು ಪ್ರಯೋಜನ?!’ ವಿಷಯದ ಕುರಿತು ಮಾತನಾಡಲಿದ್ದಾರೆ. ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ಕರ್ನಾಟಕ ಸಂಘದ ಕಾರ್ಯದರ್ಶಿ ವಿನಯ್ ಶಿವಮೊಗ್ಗ ವಿನಂತಿಸಿದ್ದಾರೆ..

Gurudutt Hegde ಪುರೆ, ನವಿಲೆ,ತ್ಯಾವರಚಟ್ನಳ್ಳಿ & ಗೋಪಶೆಟ್ಟಿಕೊಪ್ಪ ಕೆರೆಗಳಿಗೆ ಅಮೃತ- 2.0 ಯೋಜನೆಯಡಿ ಪುನಶ್ಚೇತನ- ಗುರುದತ್ತ ಹೆಗಡೆ.

0

Gurudutt Hegde ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಗೊಳಪಡುವ ಪುರಲೆ, ನವಿಲೆ, ಗೋಪಶೆಟ್ಟಿಕೊಪ್ಪ ಮತ್ತು ತ್ಯಾವರಚಟ್ನಳ್ಳಿಯ ಕೆರೆಗಳನ್ನು ಕೇಂದ್ರ ಪುರಸ್ಕೃತ ಅಮೃತ-2.0 ಯೋಜನೆಯಡಿ ಜಲಮೂಲಗಳ ಪುನಶ್ಚೇತನ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನಗರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಮತ್ತು ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿನ ಜಲಮೂಲಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಏರ್ಪಡಿಸಲಾಗಿದ್ದ ವಿಸ್ತೃತ ಯೋಜನಾ ವರದಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮುಂದಿನ ಎರಡು ದಶಕಗಳ ಅವಧಿಯಲ್ಲಿ ಏರುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸದರಿ ಪ್ರದೇಶದಲ್ಲಿ ಕೈಗೊಳ್ಳಬಹುದಾದ ಸಂಭಾವ್ಯ ಕಾಮಗಾರಿಗಳನ್ನು ಗಮನದಲ್ಲಿಟ್ಟುಕೊಂಡು ಕ್ರಿಯಾಯೋಜನೆಯನ್ನು ರೂಪಿಸುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು. ಪ್ರತಿ ಕೆರೆಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಕೆರೆಯ ಸುತ್ತಲು ಇರುವ ಒಳಚರಂಡಿ ಜಾಲ ಸಮರ್ವಕವಾಗಿ ಕಾರ್ಯನಿರ್ವಹಿಸುವಂತೆ ಅಭಿವೃದ್ಧಿಪಡಿಸಲು ಪಾಲಿಕೆಯ ಅಭಿಯಂತರರಿಗೆ ಸೂಚಿಸಿದರು. ಅಸ್ತಿತ್ವದಲ್ಲಿರುವ ಕೆರೆಗಳ ಏರಿ ಅಭಿವೃದ್ಧಿ ಕೈಗೊಳ್ಳುವ ಸಂದರ್ಭದಲ್ಲಿ ಸಾದ್ಯವಾದಷ್ಟು ಗ್ರಾವೆಲ್/ಮುದ್ರಮ್ ನ್ನು ಉಪಯೋಗಿಸುವಂತೆ ಸೂಚಿಸಿದ ಅವರು, ಸದರಿ 04ಕಾಮಗಾರಿಗಳ ಡಿಪಿಆರ್ ನ್ನು ಅನುಮೋದಿಸಿ ಮುಂದಿನ ಕ್ರಮಕ್ಕಾಗಿ ಪೌರಾಡಳಿತ ನಿರ್ದೇಶನಾಲಯಕ್ಕೆ ಸಲ್ಲಿಸಲು ಸಭೆಯಲ್ಲಿ ಶಿಫಾರಸ್ಸು ಮಾಡಿ ಆದೇಶಿಸಿದರು.

ಶಿವಮೊಗ್ಗ ಮಹಾನಗರಪಾಲಿಕೆಗೆ 05 ಜಲಮೂಲಗಳ ಪುನಶ್ಚತನಕ್ಕೆ ರೂ.20.50ಕೋಟಿ ಅನುದಾನವನ್ನು ನಿಗಧಿಪಡಿಸಿ ಈಗಾಗಲೇ ಅನುಮೋದನೆ ನೀಡಿದೆ. PDMCಬೆಂಗಳೂರು ರವರಿಂದ ಪುರಲೆ ಕೆರೆ – 571.00ಲಕ್ಷ, ನವುಲೆ ಕೆರೆ-587.08ಲಕ್ಷ, ತಾವರೇ ಚಟ್ನಹಳ್ಳಿ(ರಾಗಿಗುಡ್ಡ) ಕೆರೆ-581.95ಲಕ್ಷ ಹಾಗೂ ಗೋಪಿಶೆಟ್ಟಿಕೊಪ್ಪ ಕೆರೆ-608.08ಲಕ್ಷ ರೂ.ಗಳನ್ನು ಕೆರೆಗಳ ಅಭಿವೃದ್ಧಿಗೆ ನಿಗಧಿಪಡಿಸಲಾಗಿದೆ. ನಗರ ವ್ಯಾಪ್ತಿಯಿಂದ ಹೊರಗುಳಿದ ಕಾರಣ ಹಾಗೂ ಮಂಜೂರಾದ ಮೊತ್ತ ಯೋಜನಾವೆಚ್ಚದಲ್ಲಿ ಭರಿಸಲು ಸಾಧ್ಯವಾಗದಿರುವುದರಿಂದ ಹರಿಗೆ ಕರೆಯನ್ನು ಕೈಬಿಟ್ಟಿರುವುದಾಗಿ ಅವರು ತಿಳಿಸಿದ ಅವರು, ಸದರಿ ಕೆರೆಗಳ ಸ್ಥಳಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ನಿರ್ವಹಿಸಬೇಕಾದ ಕಾರಣ ಡಿ.ಪಿ.ಆರ್ ಗಳ ಅಂದಾಜು ಮೊತ್ತವು ಅನುಮೋದಿತ ಕ್ರಿಯಾಯೋಜನೆ ಮೊತ್ತಕ್ಕಿಂತ ಹೆಚ್ಚಾಗಿದ್ದು, ಹೆಚ್ಚುವರಿ ಮೊತ್ತವನ್ನು ಮಹಾನಗರಪಾಲಿಕೆ ಅನುದಾನದಡಿ ಭರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರ ಸಲಹೆಯನ್ನು ಪರಿಗಣಿಸಲಾಗಿದೆ ಎಂದರು.

Gurudutt Hegde ಒಳಚರಂಡಿ ಸಂಸ್ಕರಣಾ ವ್ಯವಸ್ಥೆ ಅಸ್ತಿತ್ವದಲ್ಲಿಲ್ಲದ ಕಾರಣ ಬಹುತೇಕ ಕೆರೆಗಳಿಗೆ ಕಲುಷಿತ ನೀರು, ತ್ಯಾಜ್ಯ ಬಂದು ಸೇರುತ್ತಿದೆ. ಕೆರೆಯಲ್ಲಿ ಹೂಳಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಕೆರೆಗಳಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಬೆಳೆದು ನಿಂತಿರುವ ಗಿಡ-ಗಂಟೆಗಳನ್ನು ತೆರೆವುಗೊಳಿಸುವುದು, ಹೂಳು ತೆಗೆಯುವುದು, ಕೆರೆಗಳ ಅತಿಕ್ರಮಣ ನಿಯಂತ್ರಿಸಿ, ಅಚ್ಚುಕಟ್ಟು ಪ್ರದೇಶದಲ್ಲಿ ಉದ್ಯಾನವನಗಳ ನಿರ್ಮಾಣ, ಕೆರೆಗಳಲ್ಲಿ ತೇಲುವ ಉದ್ಯಾನವನಗಳ ನಿರ್ಮಾಣ, ಒಟ್ಟಾರೆ ಜಲಮೂಲಗಳನ್ನು ಜೀರ್ಣೋಭಿವೃದ್ಧಿಗೊಳಿಸಿ ನೀರಿನ ಗುಣಮಟ್ಟ ಸುಧಾರಿಸುವ ಸದುದ್ದೇಶ ಹೊಂದಲಾಗಿದೆ. -ಗುರುದತ್ತ ಹೆಗಡೆ, ಜಿಲ್ಲಾಧಿಕಾರಿಗಳು, ಶಿವಮೊಗ್ಗ.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿ ಹಾಗೂ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಪುರುಷೋತ್ತಮ, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕಿ ಶ್ರೀಮತಿ ಆಶಾ ಕುಮಾರಿ, ಮಹಾನಗರಪಾಲಿಕೆಯ ಅಭಿಯಂತರ ತೇಜೂಪ್ರಸಾದ್‌, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶ್ರೀಮತಿ ಶಿಲ್ಪಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Sharavati ಶರಾವತಿ ಪಂಪ್ಡ್ ಸ್ಟೊರೇಜ್ ಸಮಸ್ಯೆ: ಪರಿಸರ ಪ್ರಿಯರ ಆತಂಕಗಳಿಗೆ ಸ್ಪಂದಿಸಿದ ಕೇಂದ್ರ ತನಿಖಾ ತಂಡ.

0

Sharavati ದಿನಾಂಕ:27/12/2025ರಂದು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ಮಾಡಲು ಕೇಂದ್ರ ವನ್ಯಜೀವಿ ಮಂಡಳಿಯ ಸದಸ್ಯರಾದ ಡಾ:ಹರಿಶಂಕರ್ ಸಿಂಗ್ ಹಾಗೂ ಶ್ರೀ ರಮಣ್ ಸುಕುಮಾರ್ ಮತ್ತು ರಾಷ್ಟ್ರೀಯ ಹುಲಿ ಪ್ರಾಧಿಕಾರದ ಅಧಿಕಾರಿ ಶ್ರೀ ಶಿವಕುಮಾರ ಸಿ.ಎಂ. ಆಗಮಿಸಿದ್ದರು. ಈ ಸಮಯದಲ್ಲಿ ಸಾಗರದ ಪಿ.ಡಬ್ಲೂ.ಡಿ. ಐಬಿಯಲ್ಲಿ ಸಾರ್ವಜನಿಕರ ಅಹವಾಲನ್ನು ಕೇಳಲಾಯಿತು. ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ವತಿಯಿಂದ ಸಂಘಟನೆಯ ಸಂಚಾಲಕರು ಮತ್ತು ಜನಸಂಗ್ರಾಮ ಪರಿಷತ್ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಅಖಿಲೇಶ್ ಚಿಪ್ಪಳಿ ಇವರು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಆಗುವ ಭಾದಕಗಳನ್ನು ಕೇಂದ್ರ ತಂಡಕ್ಕೆ ಮನವರಿಕೆ ಮಾಡಿ ಮನವಿ ನೀಡಿದರು. ಶ್ರೀ ಮನೋಹರ್ ಕುಮಾರ್ ಸಿ.ಬಿ., ನಿವೃತ್ತ ನ್ಯಾಯಾದೀಶರು (ಬಾಲ ನ್ಯಾಯ ಮಂಡಳಿ ಮತ್ತು ಉಪನ್ಯಾಸಕರು ಶಿವಮೊಗ್ಗ) ಯೋಜನೆಯ ವಿರುದ್ಧ ತಮ್ಮ ಅಹವಾಲನ್ನು ಸಲ್ಲಿಸಿದರು ಸಭೆಯಲ್ಲಿ, ಸಾಗರದ ಶಾಸಕರು, ಶಂಕರ ಶರ್ಮಾ, ಉತ್ತರ ಕನ್ನಡ ಜಿಲ್ಲೆಯ ಚಂದ್ರಕಾಂತ್ ಕೊಚ್ರೇಕರ್, ಬಂಗಾರು ಮಕ್ಕಿಯ ವೀರಾಂಜನೆಯ ದೇವಸ್ಥಾನದ ಸಿ.ಇ.ಓ. ಅಜಿತ್ ಹೆಗಡೆ, ಶಿವಮೊಗ್ಗದ Sharavati ಫ್ರೋ: ಬಿ.ಎಂ.ಕುಮಾರಸ್ವಾಮಿ, ಡಾ:ಶ್ರೀಪತಿ, ಡಾ:ಗಿರೀಶ್ ಜನ್ನೆ, ಡಾ: ಸವಿನಯ ಮಾಲ್ವೆ, ಅನಂತ ಹೆಗಡೆ ಆಶೀಸರ, ವೆಂಕಟೇಶ್ , ರೈನ್ ಲ್ಯಾಂಡ್ ನ ಉದಯ ಸಾಗರ ಮತ್ತಿತರು ಇದ್ದರು.

ಇದಕ್ಕೂ ಮೊದಲು ಕೆಪಿಸಿಎಲ್ ತಮ್ಮ ಸುಳ್ಳಿನ ಕಂತೆಗಳ ಪಿಪಿಟಿ ಪ್ರದರ್ಶನ ಮಾಡಿದರು ಮತ್ತು ಕೇಂದ್ರ ತಂಡ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದರು ಎಂದು ಮುಖತಃ ಹಾಜರಿದ್ದ ಪರಿಸರ ಚಿಂತಕ ಅಖಿಲೇಶ್ ಚಿಪ್ಪಳಿ
ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ

Shimoga News ಸಾಕ್ಷ್ಯಚಿತ್ರಗಳ ನಿರ್ಮಾಣಕ್ಕೆ ಪಜಾ/ ಪಪಂ ವರ್ಗಗಳ ನಿರ್ದೇಶಕರಿಂದ ಅರ್ಜಿ ಆಹ್ವಾನ

0

Shimoga News ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಸ್‌ಸಿಎಸ್‌ಪಿ/ ಟಿಎಸ್‌ಪಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರ್ದೇಶಕರಿಂದ ರಾಜ್ಯದ ಕಲೆ, ಸಂಸ್ಕೃತಿ, ಜಾನಪದ ಕಲೆ, ವಿಶಿಷ್ಟ ಸಾಧನೆ ಮಾಡಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಿಗಳು, ಸಾಧಕರು ಮತ್ತು ಎಸ್.ಸಿ/ಎಸ್.ಟಿ ಜನರಿಗಾಗಿ ಸರ್ಕಾರ ರೂಪಿಸಿರುವ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಾಕ್ಷ್ಯಚಿತ್ರಗಳನ್ನು ನಿರ್ಮಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ನಿರ್ದೇಶಕರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

Shimoga News ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ದಿನಾಂಕ:29-12-2025 ರಿಂದ ದಿನಾಂಕ:12-01-2026ರ ಸಂಜೆ 4.30 ಗಂಟೆವರೆಗೆ ಛಾಯಾ ಮತ್ತು ಚಲನಚಿತ್ರ ಶಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, “ವಾರ್ತಾ ಸೌಧ”, # 17, ಭಗವಾನ ಮಹಾವೀರ ರಸ್ತೆ, ಬೆಂಗಳೂರು 560001 ಇಲ್ಲಿಂದ ಪಡೆಯಬಹುದಾಗಿದೆ. ಅರ್ಜಿದಾರರು ನಿಗದಿತ ಅರ್ಜಿಯೊಂದಿಗೆ ಅರ್ಜಿ ಶುಲ್ಕ ರೂ.1,000/-(ಒಂದು ಸಾವಿರ ರೂ.ಗಳು ಮಾತ್ರ)ಗಳ ಮೊತ್ತವನ್ನು ಕೆ2 ಚಲನ್ ಮೂಲಕ ಹಣ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ: 12-01-2026ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಅರ್ಹ ನಿರ್ದೇಶಕರು ಈಗಾಗಲೇ ನಿರ್ಮಿಸಿರುವ ಸಾಕ್ಷ್ಯಚಿತ್ರದ ವಿವರ. ಡಿವಿಡಿ ಪ್ರತಿ, ಕಾರ್ಯಾದೇಶದ ಪ್ರತಿ ಮತ್ತು ಇತ್ತೀಚೆಗೆ ಪಡೆದಿರುವ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ಉಪ ನಿರ್ದೇಶಕರು (ಛಾಯಾ ಮತ್ತು ಚಲನಚಿತ್ರ), ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು, ಇವರಿಂದ ಪಡೆಯಬಹುದಾಗಿದೆ.

S. N. Channabasappa ಶಿವಮೊಗ್ಗ ನಗರದ 2 ನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ. ಸಾರ್ವಜನಿಕ ಸಮಸ್ಯೆ ನೀಗಿಸಲು ಸೂಚನೆ

0

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 2ರ ಸಾನ್ವಿ ಲೇಔಟ್‌ನಲ್ಲಿರುವ ಮೂಲಭೂತ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಪ್ರಮುಖವಾಗಿ ಬಡಾವಣೆಯ ಯುಜಿಡಿ ಸಮಸ್ಯೆ, ಕುಡಿಯುವ ನೀರಿನ ವ್ಯತ್ಯಯ ಮತ್ತು ಹದಗೆಟ್ಟಿರುವ ರಸ್ತೆಗಳ ಬಗ್ಗೆ ನಿವಾಸಿಗಳು ಗಮನ ಸೆಳೆದರು. ಚರಂಡಿ ನೀರು ನೇರವಾಗಿ ಕೆರೆಗೆ ಸೇರುತ್ತಿರುವ ಗಂಭೀರ ಸಮಸ್ಯೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಕೆರೆಯ ಪಾವಿತ್ರ್ಯತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಈ ಸಮಸ್ಯೆಯನ್ನು ತಕ್ಷಣವೇ ನಿವಾರಿಸಲು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಆದೇಶಿಸಿದರು.

S. N. Channabasappa ಕ್ಷೇತ್ರದ ಪ್ರತಿ ಬಡಾವಣೆಯೂ ಉತ್ತಮ ಮೂಲಭೂತ ಸೌಕರ್ಯವನ್ನು ಹೊಂದಿರಬೇಕು ಎಂಬ ನಿಟ್ಟಿನಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಭೇಟಿಯ ವೇಳೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವೀಂದ್ರ, ವಾರ್ಡ್ ಅಧ್ಯಕ್ಷರಾದ ಶಿವಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರಾದ ಪಾರ್ವತಮ್ಮ, ಶಿವಶಂಕರ್, ಅಜಯ್, ಶ್ರೀನಾಗ್ ಹಾಗೂ ಸಾನ್ವಿ ಲೇಔಟ್ ನ ನಿವಾಸಿಗಳ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

National Legal Services Authority ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳ ಇತ್ಯರ್ಥಕ್ಕೆ14-3-26 ರಂದು ಲೋಕ ಅದಾಲತ್.

0

National Legal Services Authority ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ-ಬೆಂಗಳೂರು ಇವರುಗಳ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿರುವ ವೈವಾಹಿಕ ವ್ಯಾಜ್ಯಗಳು, ಅಪಘಾತಕ್ಕೆ ಸಂಬಂಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬಂಧಿಸಿದ ವ್ಯಾಜ್ಯಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರಾಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಜುಲೈ 2025 ರಿಂದ ಸೆಪ್ಟಂಬರ್ 2025ರವರೆಗೆ 90 ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ 236 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿರುತ್ತದೆ.
ದಿ:13/12/2025 ರಂದು ಕೈಗೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 14976 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು ರೂ. 24,59,94,492/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ. ಹಾಗೂ 1,33,977 ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು ರೂ. 16,32,67,510/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ.
ಜನವರಿ 2026 ರಿಂದ ಮಾರ್ಚ್ 2026 ರವರೆಗೆ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ 2.0ರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ದಿ:14/03/2026 ರಂದು ಈ ವರ್ಷದ ಮೊದಲ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ.
National Legal Services Authority ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ತಮಗೆ ಸೂಕ್ತಯೆನಿಸುವ ನ್ಯಾಯಯುತವಾದ ಪರಿಹಾರಗಳನ್ನು ಪಡೆದುಕೊಳ್ಳಲು ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ಅಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ನೇಮಿಸಲು ನೇರವಾಗಿ ಅಥವಾ ವಕೀಲರ ಮೂಲಕ ಮನವಿ ಮಾಡಕೊಂಡು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಯಲ್ಲಿ ಮಧ್ಯಸ್ಥಿಕೆದಾರರಾಗಿ ಸೇವೆ ಸಲ್ಲಿಸುತ್ತಿರುವ ನುರಿತ ಹಿರಿಯ ನ್ಯಾಯವಾದಿಗಳ ಸಹಾಯದಿಂದ ಪ್ರಕರಣಗಳಲ್ಲಿ ನ್ಯಾಯವನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಮತ್ತು ವಕೀಲರು ಈ ಅಭಿಯಾನದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

SHIMOGA CAKE MANE ಶಿವಮೊಗ್ಗ ರವೀಂದ್ರ ನಗರದಲ್ಲಿ ಕೇಕ್ ತಯಾರಿಕಾ ಘಟಕದಲ್ಲಿಗುಣಮಟ್ಟದಲ್ಲಿ ನ್ಯೂನತೆ: ನೋಟೀಸ್ ಜಾರಿ.

0

SHIMOGA CAKE MANE ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾ ಅಂಕಿತ ಅಧಿಕಾರಿಗಳಾದ ಸತ್ಯನಾರಾಯಣ್, ಆಹಾರ ಸುರಕ್ಷತಾ ಇಲಾಖೆ, ಉಪ ನಿರ್ದೇಶಕರಾದ ಅವಿನ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತು ತಾಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಒಳಗೊಂಡ ತಂಡವು ಇಂದು ಶಿವಮೊಗ್ಗ ನಗರದ ರವೀಂದ್ರನಗರದ ಕೇಕ್ ಮನೆ, ಕೇಕ್ ತಯಾರಿಕಾ ಕೇಂದ್ರದ ತಪಾಸಣೆ ನಡೆಸಿದ್ದು,ಈ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳನ್ನು ಪರಿಶೀಲಿಸಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಯಿತು.

Shimoga News ಸಮಾಜದ ಅಭಿವೃದ್ಧಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮರೆಯಬೇಕು- ಮರಿಯೋಜಿ ರಾವ್.

0

Shimoga News ಒಂದು ಸಮಾಜ ಅಭಿವೃದ್ಧಿ ಹೊಂದಬೇಕಾದರೆ ಆರೋಗ್ಯಕರ ಸಂಘಟನೆಯಿಂದ ಮಾತ್ರ ಸಾಧ್ಯ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗೂಡಿ ಸಮಾಜದ ಏಳ್ಗೆಗೆ ಅಣಿಯಾಗಬೇಕು ಎಂದು ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿ ರಾವ್ ಹೇಳಿದರು.
ಅವರು ಮರಾಠ ಸಮಾಜದ ಶ್ರೇಯೋಭಿವೃದ್ಧಿಗಾಗಿ ಕೈಗೊಂಡಿದ್ದ ಶಿವಮೊಗ್ಗ ಜಿಲ್ಲಾ ಪ್ರವಾಸದ ಸಮಯದಲ್ಲಿ ಆಯೋಜಿಸಿದ್ದ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡುತ್ತಾ, ಸಮಾಜದ ಮುಖಂಡರು ಪಕ್ಷಾತೀತವಾಗಿ ಒಂದಾದರೆ ಸಮಾಜ ಎಲ್ಲ ಕ್ಷೇತ್ರಗಳಲ್ಲೂ ಸದೃಢ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.

ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಾಗುತ್ತಿವೆ. ಶಿವಾಜಿ ಮಹಾರಾಜರ ಕಾಲದಿಂದಲೂ ಭಿನ್ನಾಭಿಪ್ರಾಯ ಕೊನೆಯಾಗಿಲ್ಲ. ಎಲ್ಲ ಕಡೆ ಪ್ರವಾಸ ಮಾಡಿ ಒಗ್ಗಟ್ಟಿಗೆ ಶ್ರಮಿಸಲಾಗುವುದು ಎಂದರು.
ಜೀಜಾಬಾಯಿ ಸಮಾಜಕ್ಕೆ ಪುಣ್ಯ ಪುರುಷರನ್ನು ಕೊಡುಗೆ ನೀಡಿದ ಸ್ಮರಣೆಗಾಗಿ ಜೀಜಾ ಉಜ್ವಲ ಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. ಸಮಾಜದ ಪೂರ್ವಿಕರನ್ನು ಎಂದಿಗೂ ಮರೆಯಬಾರದು. ವಿಧಾನಸಭೆಗೆ ೪೦-೫೦ ಶಾಸಕರನ್ನು ಕೊಡುಗೆ ನೀಡುವಷ್ಟು ಮರಾಠರು ಸಬಲರಾಗಿದ್ದೇವೆ. ೩೬ ತಾಲೂಕುಗಳಲ್ಲಿ ನಮ್ಮ ಸಮಾಜದ ಮತಗಳೇ ನಿರ್ಣಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.
ಯಾವುದೇ ಕಾರಣಕ್ಕೂ ಸಮಾಜ ನಿರ್ಮಾಣದಲ್ಲಿ ರಾಜಕೀಯ ತಲೆದೋರಬಾರದು.
ಸಮಾಜಗಳಲ್ಲಿ ಭಿನ್ನಾಭಿಪ್ರಾಯ ಗಣನೆಗೆ ತೆಗೆದುಕೊಳ್ಳದೆ, ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. ವೈಯಕ್ತಿಕ ಹಿತಾಸಕ್ತಿಗಳು ಸಮಾಜ ಒಡಕಿಗೆ ಕಾರಣವಾಗದಂತೆ ಎಚ್ಚರವಹಿಸಿ ಎಂದು ಸಲಹೆ ನೀಡಿದರು.

ಜಿಲ್ಲಾ ಕ್ಷತ್ರಿಯ ಮರಾಠ ಸಂಘದ ಜಿಲ್ಲಾಧ್ಯಕ್ಷ ಸಚಿನ್ ಸಿಂದ್ಯಾ ಮಾತನಾಡಿ, ಸಮಾಜಗಳು ಶೈಕ್ಷಣಿಕ ಸಾಮಾಜಿಕವಾಗಿ ಬೆಳವಣಿಗೆಯಾಗಬೇಕು. ಸರ್ಕಾರದ ಯೋಜನೆಯ ಫಲಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ನಮ್ಮ ಮಕ್ಕಳನ್ನು ಶೈಕ್ಷಣಿಕವಾಗಿ ಬಲಾಡ್ಯರನ್ನಾಗಿಸಬೇಕಿದೆ. ಪ್ರತಿಮೆ ಸ್ಥಾಪನೆ ಹಾಗೂ ಭವನಗಳ ನಿರ್ಮಾಣದಿಂದ ಮಾತ್ರ ಸಮಾಜ ಬಲಶಾಲಿಯಾಗುತ್ತದೆ ಎಂಬ ಕಲ್ಪನೆ ತಪ್ಪು. ಅಧಿಕಾರ ಇದ್ದಾಗ ನಾಲ್ಕಾರು ಜನರಿಗೆ ಸಹಾಯ ಮಾಡುವುದನ್ನು ಮರೆಯಬಾರದು ಎಂದು ತಿಳಿಸಿದರು.

Shimoga News ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿ ರಾವ್ ಅವರು ಶಿವಮೊಗ್ಗ ಜಿಲ್ಲಾಯಾದ್ಯಂತ ಪ್ರವಾಸ ಕೈಗೊಂಡು ಸಮಾಜದ ಮುಖಂಡರ ಸಭೆಗಳಲ್ಲಿ ಭಾಗವಹಿಸಿ ಸಮಾಜದ ಸಂಘಟನೆಯ ಬಗ್ಗೆ ಮಾಹಿತಿಗಳನ್ನು ನೀಡುವುದರ ಜೊತೆಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಮನವಿ ಮಾಡಿದರು.

ಮರಾಠ ಸಮಾಜದ ಜಿಲ್ಲಾ ಉಪಾಧ್ಯಕ್ಷ ಸತೀಶ್ ಸಾವಂತ್, ಭದ್ರಾವತಿ ಅಧ್ಯಕ್ಷ ಲೋಕೇಶ ರಾವ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಕವಿತಾ ಥೋರತ್, ದಿನೇಶ್ ರಾವ್, ಚಂದ್ರರಾವ್ ಗಾರ್ಗೆ, ಗೀತಾ ಬಾಯಿ, ಬಾಳೋಜಿ ಕೃಷ್ಣಜಿ ರಾವ್, ಎಲ್.ಕೆ.ಚಂದ್ರಪ್ಪ, ಶಾಂತಕುಮಾರ್, ಭೀಮರಾವ್, ಹಾಲೋಜಿ ರಾವ್, ರಮೇಶ ರಾವ್, ಮೋಹನ ರಾವ್, ಸತ್ಯನಾರಾಯಣ, ಯಶವಂತರಾವ್ ಘೋರ್ಪಡೆ, ದೇವರಾಜ್ ಸಿಂಧೆ, ಮಲ್ಲೇಶಪ್ಪ, ಬಸವರಾಜ್, ಅಶೋಕ ರಾವ್, ಕಿರಣ ಮೋರೆ ಇತರರಿದ್ದರು.

RM Manjunath Gowda ಮಲೆನಾಡು ಅಭಿವೃದ್ಧಿ ಮಂಡಳಿಗೆ ಕಳೆದ ಸಾಲಿಗಿಂತ ₹7 ರಿಂದ ₹8‌ ಕೋಟಿ ಹೆಚ್ಚು ಅನುದಾನ ಬಂದಿದೆ – ಆರ್.ಎಂ.ಮಂಜುನಾಥ ಗೌಡ.

0

RM Manjunath Gowda ಐತಿಹಾಸಿಕ, ಸಾಂಸ್ಕೃತಿಕ, ಶೈಕ್ಷಣಿಕ, ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕ ಉನ್ನತಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುತ್ತಾ ಬಂದಿರುವ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 26ನೇ ವರ್ಷದ ದಿನಚರಿಯನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ.ಮಂಜುನಾಥಗೌಡ ತಿಳಿಸಿದರು.

ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಮಂಡಳಿಯ 2026-27 ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಕಾರ್ಯಕ್ರಮದಲ್ಲಿ ದಿನಚರಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯು ಪ್ರಸ್ತುತ 10 ಜಿಲ್ಲೆಗಳನ್ನು, 54 ತಾಲ್ಲೂಕುಗಳ 64 ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯನ್ನು ಹೊಂದಿದೆ. 09 ಲೋಕಸಭಾ ಸದಸ್ಯರು, 46 ವಿಧಾನಸಭಾ ಸದಸ್ಯರು, 18 ವಿಧಾನ ಪರಿಷತ್ ಸದಸ್ಯರು, ತಲಾ 10 ಜಿ.ಪಂ ಅಧ್ಯಕ್ಷರು ಮತ್ತು ಸರ್ಕಾರದಿಂದ ನಾಮ ನಿರ್ದೇಶನಗೊಂಡ ಸದಸ್ಯರು, 01 ಕಾರ್ಯದರ್ಶಿ ಮತ್ತು 10 ಜಿಲ್ಲಾಧಿಕಾರಿಗಳು ಸೇರಿದಂತೆ 104 ಸದಸ್ಯರನ್ನು ಒಳಗೊಂಡಿದೆ.

2025-26 ನೇ ಸಾಲಿಗೆ ಮಂಡಳಿಗೆ ರೂ.33 ಕೋಟಿ ಅನುದಾನ ಬಂದಿದ್ದು, ಕಳೆದ ಬಾರಿಗಿಂತ 7 ರಿಂದ 8 ಕೋಟಿ ಹೆಚ್ಚು ಅನುದಾನ ಬಂದಿದೆ. ಈ ಅನುದಾನವನ್ನು ಪಿಡಬ್ಲುö್ಯಡಿ, ಜಿಲ್ಲಾ ಪಂಚಾಯತ್ ಕಾಮಗಾರಿಗಳನ್ನು ಹೊರತುಪಡಿಸಿ ವಿಶೇಷವಾಗಿ ಮಲೆನಾಡು ಭಾಗಕ್ಕೆ ಅಗತ್ಯವಿರುವ ರಸ್ತೆ, ಕಾಲುಸಂಕ, ಚೆಕ್‌ಡ್ಯಾಂ ಗಳಿಗೆ ಬಳಕೆ ಮಾಡಲಾಗುತ್ತಿದೆ.

ಈಗಾಗಲೇ 100 ಕಾಲುಸಂಕ ಕಾಮಗಾರಿ ಮುಗಿದಿದ್ದು ನಬಾರ್ಡ್ ವಿಶೇಷ ಅನುದಾನದಲ್ಲಿ 350 ರಿಂದ 400 ಕಾಲುಸಂಕ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಲಾಗಿದೆ.
ರೂ.33 ಕೋಟಿ ಅನುದಾನದಲ್ಲಿ ಶಾಸಕರುಗಳಿಗೆ ಹಾಗೂ ರಚನಾತ್ಮಕ ಕಾರ್ಯಕ್ರಮಗಳಿಗೆ ವಿನಿಯೋಗಿಸಲು ಹಂಚಿಕೆಯಾಗಿದ್ದು ತೀರ್ಥಹಳ್ಳಿಯ ಕುಡುಮಲ್ಲಿಗೆಯ ಶತಮಾನೋತ್ಸವ ಶಾಲೆಯ ಅಭಿವೃದ್ದಿಗೆ ರೂ.2.5 ಕೋಟಿ, ಸಾಗರ ಕ್ಷೇತ್ರಕ್ಕೆ 75 ಲಕ್ಷ, ತರೀಕೆರೆಗೆ ರೂ.1 ಕೋಟಿ, ತೀರ್ಥಹಳ್ಳಿಗೆ ಹೆಚ್ಚುವರಿ ರೂ.1 ಕೋಟಿ ಸೇರಿದಂತೆ ವಿವಿಧ ರಚನಾತ್ಮಕ ಕಾಮಗಾರಿ, ಕೆಲಸಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ.

RM Manjunath Gowda ಹೆಚ್ಚುವರಿ ಅನುದಾನಕ್ಕೆ ಬೇಡಿಕೆ : 2026-27 ನೇ ಸಾಲಿಗೆ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದು, ಮಂಜೂರು ಮಾಡುವುದಾಗಿ ಮಾನ್ಯ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಮಂಡಳಿಗೆ ರೂ.78.43 ಕೋಟಿ ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಹಂಚಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ನಬಾರ್ಡ್ ನೆರವು : ನಬಾರ್ಡ್ ಸಂಸ್ಥೆಯಿಂದ ಆರ್ಥಿಕ ನೆರವು ಪಡೆದು ರಚನಾತ್ಮಕ ಕಾರ್ಯಕ್ರಮಗಳಡಿ ತೂತು ಸೇತುವೆ, ಕಾಲುಸಂಕ ಮತ್ತು ಬೃಹತ್ ಸೇತುವೆ ಕಾಮಗಾರಿಗಳನ್ನು ಮಂಡಳಿಯಿಂದ ಅನುಷ್ಟಾನಗೊಳಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ.10 ಕೋಟಿಯಂತೆ ಕಾಮಗಾರಿ ಪ್ರಸ್ತಾವನೆ ಪಡೆದು ಕ್ರಿಯಾ ಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ಮಂಡಳಿ ಸಾಧನೆ :1993-94 ನೇ ಸಾಲಿನಿಂದ 2024-25 ರವರೆಗೆ ತೂಗು ಸೇತುವೆ, ಕಾಲು ಸೇತುವೆ, ಕಾಂಕ್ರಿಟ್ ಮತ್ತು ಡಾಂಬರು ರಸ್ತೆ, ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ, ಕುಡಿಯುವ ನೀರು ಸರಬರಾಜು ಯೋಜನೆ, ಸಣ್ಣ ನೀರಾವರಿ ಯೋಜನೆ, ಸಾರ್ವಜನಿಕ ಸಮುದಾಯ ಭವನ, ಬಸ್ ನಿಲ್ದಾಣ, ಇತರೆ ಕಟ್ಟಡಗಳನು ಸೇರಿದಂತೆ ಒಟ್ಟು 64,638.71 ಲಕ್ಷದ 20568 ಅಭಿವೃದ್ದಿ ಕಾಮಗಾರಿಗಳನ್ನು ಮಲೆನಾಡಿನ ಎಲ್ಲಾ ಭಾಗಗಳಲ್ಲೂ ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗಿದೆ ಎಂದರು.

ಸಭೆಯಲ್ಲಿ ಎಂಎಡಿಬಿ ಅಧೀನ ಕಾರ್ಯದರ್ಶಿ ಹನುಮನಾಯ್ಕ್, ಉಪನಿರ್ದೇಶಕ ಶಿವಾನಂದ್, ಅಕ್ಷತಾ ಹಾಜರಿದ್ದರು.