Thursday, August 13, 2026
Thursday, August 13, 2026
Home Blog Page 249

Bangalore International Film Festival 2026 ಜನವರಿ 29 ರಿಂದ ಬೆಂಗಳೂರಿನಲ್ಲಿ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ನಟ ಪ್ರಕಾಶ್ ರಾಜ್ “ಬ್ರಾಂಡ್ ಅಂಬಾಸಿಡರ್”

0

Bangalore International Film Festival 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ.

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ  *ಶ್ರೀ ಪ್ರಕಾಶ್ ರಾಜ್ ಅವರನ್ನು
17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದೆ.

ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ
ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ
ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ.

ರಾಜಾಜಿನಗರದ ಲುಲುಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕಿನ್‌ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ.

ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ.

ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ.

17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು  ಮಾಲ್, ಜೊತೆಗೆ
ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್‌ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್‌ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ.

ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

Bangalore International Film Festival ಪೋಲಿಷ್ ಕಲ್ಪರಲ್ ಸೆಂಟರ್, ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ, ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್‌ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ.

ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective), ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ.

ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ.

ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ.

ಅನುದಾನ
2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು  ರೂ.‌ 7ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ.

ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ,
ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ,
ವಾರ್ತಾ ಇಲಾಖೆಯ ಕಾರ್ಯದರ್ಶಿ ಬಿ ಬಿ ಕಾವೇರಿ, ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,
ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಅಕಾಡೆಮಿ ಸದಸ್ಯರು, ಸಂಘಟನಾ ಸಮಿತಿ ಸದಸ್ಯರು , ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು.

S.N.Chennabasappa ದ್ವೇ಼ಷ ಭಾಷಣ ಪ್ರತಿಬಂಧಕ ವಿಧೇಯಕವು ಸಂವಿಧಾನ ವಿರೋಧಿ- ಶಾಸಕ ಎಸ್.ಎನ್.ಚನ್ನಬಸಪ್ಪ

0

S.N.Chennabasappa ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ವಿರೋಧ ಪಕ್ಷಗಳ ಧ್ವನಿಯನ್ನು ಹತ್ತಿಕ್ಕಲು ತರುತ್ತಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿದೇಯಕ-2025’ ಕೇವಲ ಒಂದು ವರ್ಗದ ಓಲೈಕೆಗಾಗಿ ರೂಪಿಸಿರುವ ಕರಾಳ ಕಾನೂನಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಈ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ, ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಜನಾಗ್ರಹ ವ್ಯಕ್ತಪಡಿಸಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾನ್ಯ ರಾಜ್ಯಪಾಲರಿಗೆ ಈ ಕೂಡಲೇ ಈ ವಿದೇಯಕವನ್ನು ತಡೆಹಿಡಿಯುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.

S.N.Chennabasappa ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಜಗದೀಶ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಶ್ರೀ ಜ್ಞಾನೇಶ್ವರ, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಗ್ರಾಮಾಂತರ ಅಧ್ಯಕ್ಷರಾದ ಶ್ರೀ ಸಿಂಗನಹಳ್ಳಿ ಸುರೇಶ್, ಮಾಜಿ ಶಾಸಕರಾದ ಶ್ರೀ ಅಶೋಕ್ ನಾಯ್ಕ್ ಸೇರಿದಂತೆ ಜಿಲ್ಲಾ ಹಾಗೂ ನಗರದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಧ್ವನಿ ಎತ್ತಿದರು.

Rotary Shivamogga ಕ್ರೀಡೆಗಳಲ್ಲಿ ಪಾಲ್ಗೊಂಡರೆ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ- ಚಂದ್ರಶೇಖರ್

0

Rotary Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಚಂದ್ರಶೇಖರ್ ಹೇಳಿದರು.

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ರೋಟರಿ ಜಿಲ್ಲಾ ಮಲೆನಾಡು ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕ್ರೀಡೆ, ಫಿಟ್‌ನೆಸ್, ಆರೋಗ್ಯ ಹಾಗೂ ರೋಟರಿಯ ಸೇವಾ ಮೌಲ್ಯಗಳ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಸೊಗಾನೆ ಗ್ರಾಮದ ಬಾಸ್ಕೆಟ್‌ಬಾಲ್ ತಾರೆ ಸಹನಾ ಗೌಡ ಅವರನ್ನು ಎಲ್ಲ ಸ್ಪರ್ಧಾಳುಗಳ ಸಮ್ಮುಖದಲ್ಲಿ ವಿಶೇಷವಾಗಿ ಗೌರವಿಸಲಾಯಿತು. ಕ್ರೀಡೆಯನ್ನೇ ಜೀವನ ಗುರಿಯನ್ನಾಗಿ ಮಾಡಿಕೊಂಡಿರುವ ಸಹನಾ ಅವರು ಮಹಿಳಾ ಏಷ್ಯಾ ಕಪ್ 2021 ಹಾಗೂ 19ನೇ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ.

ರಾಷ್ಟ್ರೀಯ ಚಾಂಪಿಯನ್‌ಶಿಪ್, ಖೇಲೋ ಇಂಡಿಯಾ ಯೂತ್ ಗೇಮ್ಸ್ ಮತ್ತು ಆಲ್ ಇಂಡಿಯಾ ಟೂರ್ನಮೆಂಟ್‌ಗಳಲ್ಲಿ ಕರ್ನಾಟಕ ಪರವಾಗಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಶಿಸ್ತು ಮತ್ತು ಪರಿಶ್ರಮದ ಗೌರವವಾಗಿ ಭಾರತ ಸರ್ಕಾರ ಇನ್‌ಕಮ್ ಟ್ಯಾಕ್ಸ್ ಆಫೀಸರ್ ಆಗಿ ನೇಮಕ ನೀಡಿರುವುದು ವಿಶೇಷ.

Rotary Shivamogga ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ವಸಂತ್ ಹೋಬಳಿದಾರ್, ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ನಾಗರಾಜ್ ಎಸ್.ಆರ್, ಜಿಲ್ಲಾ ಸ್ಪೋರ್ಟ್ಸ್ ಚೇರ್ಮನ್ ರವಿ ಕೋಟೋಜಿ, ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ವಿಶ್ವನಾಥ ನಾಯಕ, ಇವೆಂಟ್ ಚೇರ್ಮನ್ ಸಿ.ಎನ್.ಮಲ್ಲೇಶ್, ಶಂಕರ್, ಆನಂದ್ ಮೂರ್ತಿ, ಸರ್ಜಾ ಜಗದೀಶ್ ಉಪಸ್ಥಿತರಿದ್ದರು.

Shivaganga Yoga Center ಮಾನಸಿಕ ನೆಮ್ಮದಿಗೆ ಪೂಜೆ ಪುನಸ್ಕಾರ ಅಗತ್ಯ- ಬಿಂದು ವಿಜಯ್ ಕುಮಾರ್

0

Shivaganga Yoga Center ಪ್ರತಿ ವರ್ಷ ಧನುರ್ಮಾಸ ಪೂಜೆಯ ವಿಷ್ಣುವಿನ ಆರಾಧನೆಗೆ ಶ್ರೇಷ್ಠವಾದ ಮಾಸ. ಮಾನಸಿಕ ನೆಮ್ಮದಿಗೆ ಪೂಜೆ ಪುನಸ್ಕಾರ ಅಗತ್ಯ ಎಂದು ಕೃಷಿ ಶಿವಮೊಗ್ಗ ನಗರದ ಶಿವಗಂಗಾ ಯೋಗ ಕೇಂದ್ರದ ಯೋಗ ಶಿಬಿರಾರ್ಥಿ ಬಿಂದು ವಿಜಯಕುಮಾರ್ ಹೇಳಿದರು.

ಕೃಷಿ ನಗರ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಧನುರ್ಮಾಸದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೂರ್ಯೋದಯಕ್ಕಿಂತ ಮುನ್ನ ಈ ಪವಿತ್ರವಾದ ಪೂಜೆಯನ್ನು ಮಾಡುವುದರಿಂದ ಇಷ್ಟಾರ್ಥಗಳು, ಸುಖ, ಸಮೃದ್ಧಿ.ಮುಕ್ತಿ ದೊರೆಯುತ್ತದೆ ಎಂದರು.

Shivaganga Yoga Center ಧನುರ್ಮಾಸ ಪೂಜೆಯ ಆಚರಣೆಯಿಂದ ಮನಕ್ಕೆ, ಮನೆತನಕ್ಕೆ ಒಳ್ಳೆಯದಾಗುವುದರ ಜೊತೆಗೆ ಈ ಪೂಜಾ ವಿಧಾನದಲ್ಲಿ ಪಾಲ್ಗೊಂಡವರಿಗೂ ಸಹ ಫಲಗಳು ಪ್ರಾಪ್ತಿಯಾಗುತ್ತದೆ ಎಂದ ಅವರು, ಪ್ರತಿದಿನ ಈ ಒಂದು ತಿಂಗಳ ಕಾಲ ಈ ಧನುರ್ಮಾಸದಲ್ಲಿ
ಕೃಷಿ ನಗರ ಹಾಗೂ ಬಸವೇಶ್ವರ ನಗರದ ನಿವಾಸಿಗಳು ಮಹಿಳಾ ಸಂಘದವರು ಮತ್ತು ಶಕ್ತಿ ಗಣಪತಿ ದೇವಸ್ಥಾನದ ಮಹಿಳಾ ಮಂಡಳಿಯವರು ಈ ಪೂಜಾ ಕಾರ್ಯಗಳಲ್ಲಿ ಪಾಲ್ಗೊಳ್ಳು ತ್ತಿರುವುದು, ಜೊತೆಗೆ ಪ್ರತಿ ದಿನ ವಿಷ್ಣುವಿಗೆ ಪ್ರಿಯವಾದ.ಕಾರ ಪೊಂಗಲ್ ಸಿಹಿ ಪೊಂಗಲ್ ಪ್ರಸಾದ ಮಾಡಿ ಎಲ್ಲರಿಗೂ ವಿತರಣೆ ಮಾಡುತ್ತಿರುವುದು ಅನುಕರಣೀಯ ಎಂದರು.

ಕಾರ್ಯಕ್ರಮದಲ್ಲಿ ತೇಜಸ್ವಿನಿ, ವಾಣಿ, ಶೋಭಾ, ಕಲ್ಪನಾ, ಭುವನ, ದೀಪ, ಪೂರ್ಣಿಮಾ ಮತ್ತು ಮೀನ ಭಾಗವಹಿಸಿದ್ದರು.

Karnataka Sangha Shivamogga ದಿ. ರಂಗನಾಯಕಮ್ಮ ಗಣೇಶರಾವ್ ಸ್ಮಾರಕ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

0

Karnataka Sangha Shivamogga ದಿನಾಂಕ 27ನೇ ಡಿಸೆಂಬರ್ 2025ರ ಶುಕ್ರವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರೀ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ಡಾ. ಶಿವಮೊಗ್ಗ ಸುಬ್ಬಣ್ಣ ಅವರ ಸಹೋದರರು ಮತ್ತು ಸಹೋದರಿ ಸ್ಥಾಪಿಸಿರುವ ದಿ|| ರಂಗನಾಯಕಮ್ಮ ಗಣೇಶರಾವ್ ದತ್ತಿನಿಧಿ ಪ್ರಾಯೋಜಿತ ದಿ. 29-11-2025ರಂದು ನಡೆದ ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ವಿಜೇತರಿಗೆ ‘ಬಹುಮಾನ ವಿತರಣೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಶ್ರೀ ಪಂಚಮ ಹಳಿಬಂಡಿ, ಪ್ರಸಿದ್ಧ ಗಾಯಕರು, ಬೆಂಗಳೂರು ಇವರು ಭಾಗವಹಿಸಲಿದ್ದು, ಬಹುಮಾನ ವಿತರಣೆಯ ನಂತರ ‘ಭಾವ ಸಂಧ್ಯಾ’ ಆಯ್ದ ಭಾವಗೀತೆಗಳ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Department of Kannada and Culture ರಾಜ್ಯಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಶಿವಮೊಗ್ಗ ಜಿಲ್ಲೆಯ ಹಲವು ಕಲಾವಿದರ ಆಯ್ಕೆ-ಪ್ರಕಟಣೆ

0

Department of Kannada and Culture ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೇಂದ್ರ ಕಚೇರಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಡಿ. 22 ಮತ್ತು 23 ರಂದು ನಡೆದ ವಲಯ ಮಟ್ಟದ ಕಲಾ ಪ್ರತಿಭೋತ್ಸವದ ವಿವಿಧ ಸ್ಪರ್ಧೆಗಳ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಶಿವಮೊಗ್ಗ ಜಿಲ್ಲೆಯ ಕಲಾವಿದರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬಾಲಪ್ರತಿಭೆ ಸ್ಪರ್ಧೆಯ ಚಿತ್ರಕಲೆಯಲ್ಲಿ ಮೌಂಟ್ ಕಾರ್ಮೆಲ್ ಶಾಲೆಯ ದಿಶಾಂತ್ ಎಂ.ಕೆ, ಜಾನಪದ ಗೀತೆಯಲ್ಲಿ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯ ಹೊನಲು ಎಸ್., ಹಿಂದೂಸ್ತಾನಿ/ಕ.ವಾದ್ಯ ಸಂಗೀತದಲ್ಲಿ ಸುಮೇರು ವಿ. ಸಕಲೇಶಪುರ, ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಪಿ.ಇ.ಎಸ್. ಶಾಲೆಯ ಜೀವಿತ ಮೌನೇಶ್ ಆಯ್ಕೆಯಾದವರು.

Department of Kannada and Culture ಕಿಶೋರ ಪ್ರತಿಭೆ ಸ್ಪರ್ದೆಯ ಶಾಸ್ತ್ರೀಯ ನೃತ್ಯದಲ್ಲಿ ತೀರ್ಥಹಳ್ಳಿ ವಾಗ್ದೇವಿ ಪ್ರೌಢಶಾಲೆಯ ದಿತಿ ಹೆಚ್.ಎಸ್., ಸುಗಮ ಸಂಗೀತದಲ್ಲಿ ಪಿ.ಇ.ಎಸ್. ಶಾಲೆಯ ನವನೀತ ರಾಜ್ ಆಯ್ಕೆಯಾದವರು ಯುವಪ್ರತಿಭೆ ಸ್ಪರ್ಧೆಯ ಸುಗಮ ಸಂಗೀತ ದಲ್ಲಿ ಸೊರಬದ ಭುವನ್, ಆಶುಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗದ ವಿಸ್ಮಿತ ವಿ., ಹಿಂದೂಸ್ತಾನಿ/ಕ. ಸಂಗೀತ ಹಾಡುಗಾರಿಕೆಯಲ್ಲಿ ಶಿವಮೊಗ್ಗದ ಚಿನ್ಮಯಿ ನಾಗೇಂದ್ರ ಆಯ್ಕೆಯಾದವರು.

Dr. Dhananjaya Sarji ಒತ್ತಡ ನಿವಾರಣೆಗೆ ಒಳ್ಳೆಯ ಸ್ನೇಹಿತರೇ ದಿವ್ಯೌಷಧ- ಡಾ.ಧನಂಜಯ ಸರ್ಜಿ

0

Dr. Dhananjaya Sarji ಒತ್ತಡ ನಿವಾರಣೆಗೆ ಒಳ್ಳೆಯ ಸ್ನೇಹಿತರೆ ನಿಜವಾದ ಔಷಧ ಎಂದು ಬಣ್ಣಿಸಿದರು ವಿಧಾನ ಪರಿಷತ್ ಸದಸ್ಯ ಡಾ. ಧನಜಂಯ ಸರ್ಜಿ.
ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಗುರುವಾರ ಆಯೋಜಿಸಿದ್ದ ಎಂಸಿಸಿ ಕಪ್ ಸೀಸನ್-೩ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹಸಿವಾಗ್ತಿಲ್ಲ, ನಿದ್ದೆ ಬರ್‍ತಿಲ್ಲ, ಜೀರ್ಣ ಆಗ್ತಿಲ್ಲ… ಎಂದು ಹೀಗೆ ಪ್ರತಿಯೊಂದಕ್ಕೂ ಮಾತ್ರೆ ಕೊಡಿ ಎಂದು ವೈದ್ಯರನ್ನು ಎಡತಾಕುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಸ್ನೇಹಿತರು, ಕುಟುಂಬದ ಸದಸ್ಯರೊಂದಿಗೆ ಒಳ್ಳೆಯ ಸಮಯ ಕಳೆಯುವುದೇ ಇಂತಹ ಸಮಸ್ಯೆಗಳಿಗೆ ದಿವ್ಯೌಷಧ. ಪ್ರತಿಯೊಂದಕ್ಕೂ ಔಷಧಗಳನ್ನು ಅವಲಂಬಿಸುವುದು ಸೂಕ್ತವಲ್ಲ ಎಂದು ಕಿವಿಮಾತು ಹೇಳಿದರು.
ಇತ್ತೀಚೆಗೆ ಹೃದಯಾಘಾತ ಹೆಚ್ಚಾಗುತ್ತಿದೆ. ಸಣ್ಣ ಸಣ್ಣ ವಯಸ್ಸಿನವರು ಉಸಿರು ಚೆಲ್ಲುತ್ತಿದ್ದಾರೆ. ಆದಕಾರಣ ವ್ಯಾಂiiಲ್ಲಿ, ವಾಕಿಂಗ್, ಧ್ಯಾನದತ್ತ ಗಮನ ಹರಿಸಬೇಕು. ನಿತ್ಯ ವಾಕಿಂಗ್ ಮಾಡಬೇಕು. ಬೆಳಿಗ್ಗೆ ಎದ್ದ ಬಳಿಕ ಒಂದು ತಾಸು ಆಗುವವರೆಗೂ, ಮಲಗುವ ಒಂದು ತಾಸು ಮೊದಲು, ಊಟ ಮಾಡುವಾಗ ಮೊಬೈಲ್ ನೋಡಬಾರದು ಎಂದರು.
Dr. Dhananjaya Sarji ನಮ್ಮ ಆಲೋಚನೆಗಳು ಸದಾ ಉತ್ತುಂಗದಲ್ಲಿರಬೇಕು. ಒಳ್ಳೆಯ ಆಲೋಚನೆಗಳು ದೇಶ ಕಟ್ಟಲು ಪೂರಕ. ನಮ್ಮ ಹೆಜ್ಜೆಗಳು ಸದಾ ಗೆಲುವಿನೆಡೆಗೆ ಇರಬೇಕು ಎಂದು ಉತ್ಸಾಹದ ನುಡಿಗಳನ್ನಾಡಿದರು ಶಾಸಕ ಎಸ್.ಎನ್.ಚೆನ್ನಬಸಪ್ಪ.
ಕ್ರೀಡೆಗಳು ಜೀವನದ ಪಾಠ ಕಲಿಸುತ್ತವೆ. ಇಂದಿನಗಳಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು ಜಿಲ್ಲಾ ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೇಖ್ಯಾ ನಾಯ್ಕ್.
ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ಡಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಸಂಯೋಜಕ ಜಿ.ಡಿ.ಮಂಜುನಾಥ್, ಉದ್ಯಮಿ ಟಿ.ಎಸ್.ಸಿದ್ದೇಶ್, ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಎಸ್.ಕುಮಾರ್, ಸಂಘದ ಹಿರಿಯ ಸದಸ್ಯರಾದ ಮೋಹನ್ ಶೆಟ್ಟಿ, ಚಂದ್ರಣ್ಣ, ಎಂ.ಗೋವಿಂದರಾಜು ಸೇರಿದಂತೆ ಅನೇಕುರು ಉಪಸ್ಥಿತರಿದ್ದರು.

ಸೊರಬದಲ್ಲಿ ಸಡಗರ ಸಂಭ್ರಮದ ಕ್ರಿಸ್ ಮಸ್ ಆಚರಣೆ

0

ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಗುರುವಾರ ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಏಸುಕ್ರಿಸ್ತನ ಜನ್ಮದಿನ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತರು ಸಡಗರ-ಸಂಭ್ರಮದಿಂದ ಆಚರಿಸಿದರು.

ಬೆಳಗ್ಗೆಯಿಂದಲೇ ಮಕ್ಕಳು ಹೊಸ ಉಡುಪುಗಳು ತೊಟ್ಟು ಸಂಭ್ರಮಿಸಿದರೆ, ಮನೆಗಳಲ್ಲಿ ಕ್ರಿಸ್‌ಮಸ್ ಟ್ರೀ ರಚಿಸಿ ವಿದ್ಯುತ್ ದೀಪ ಮತ್ತು ವಿವಿಧ ಬಣ್ಣಗಳ ಹಾಳೆಗಳಿಂದ ಶೃಂಗರಿಸಿದ ದೃಶ್ಯ ಕಂಡುಬಂದಿತು.

ಪಟ್ಟಣದ ಹೊಸಪೇಟೆ ಬಡಾವಣೆಯ ಸಂತ ಸೆಬಾಸ್ಟಿಯನ್ ಚರ್ಚ್‌ನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಿ, ಚರ್ಚ್‌ನ ಮುಂಭಾಗದಲ್ಲಿ ನಿರ್ಮಿಸಿದ ಏಸುವಿನ ಜನ್ಮವೃತ್ತಾಂತ ಸಾರುವ ಗೋದಲಿ ಎಲ್ಲರ ಗಮನ ಸೆಳೆಯಿತು. ಕ್ರೈಸ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿ, ಕೇಕ್ ಮತ್ತು ಸಿಸಿ ಹಂಚುವ ಮೂಲಕ ಸಂತಸ ಹಂಚಿಕೊಂಡರು

ಸಂತ ಸೆಬಾಸ್ಟಿಯನ್ ಚರ್ಚ್‌ನ ಧರ್ಮಗುರು ಫಾದರ್ ರಾಬರ್ಟ್ ಡಿ’ಮೆಲ್ಲೊ ಧರ್ಮ ಸಂದೇಶ ನೀಡಿ, ಕ್ರಿಸ್‌ಮಸ್ ಹಬ್ಬ ಪ್ರೀತಿಯ ಸಂಕೇತವಾಗಿದೆ. ಜಾತಿ-ಮತ ತಾರತಮ್ಯವಿಲ್ಲದೇ ಸುಖ ಶಾಂತಿಯಿಂದ ದೇಶೀಯ ಸಂಸ್ಕೃತಿಯಲ್ಲಿ ಬೆರೆತು ರಾಷ್ಟ್ರೀಯ ಏಕತೆಯನ್ನು ಉಂಟು ಮಾಡುತ್ತದೆ. ಕ್ರಿಸ್ತಜಯಂತಿಯ ಮಹೋತ್ಸವವನ್ನು ಸಂತ ಸೆಬಾಸ್ಟಿಯಾನರ ದೇವಾಲಯದಲ್ಲಿ ನಡುರಾತ್ರಿಯಲ್ಲಿ ಸಾಂಭ್ರಮಿಕ ದಿವ್ಯ ಬಲಿಪೂಜೆಯಲ್ಲಿ ಆಚರಿಸಲಾಗಿದೆ. ಕ್ರಿಸ್ತಜಯಂತಿ ದೇವನ ಪ್ರೀತಿಯ ಹೃದಯದ ಒಂದು ಮಿಡಿತ. ಮನುಜನ ಮೇಲಿನ ಪ್ರೀತಿಯ ತುಡಿತ. ತನ್ನ ಮಗನನ್ನೇ ಜಗತ್ತಿಗೆ ಧಾರೆ ಎರೆದ ಅಪರಿಮಿತ ಪ್ರೀತಿ, ಕ್ರಿಸ್ತ ಜಯಂತಿ ಮಮಕಾರದ ಆಗರವಾಗಿರುವ ದೇವರ ಪ್ರೀತಿಯನ್ನು ಅನುಭವಿಸಿ ನಾನದರ ನೆರಳಾದಾಗ, ನಮ್ಮ ಹೃದಯ ಪ್ರೇಮದಿಂದ ಕ್ರಿಸ್ತನನ್ನು ನೀಡಲು ಮುಂದಾದಾಗ ನೈಜ ಕ್ರಿಸ್ತಜಯಂತಿಯ ಆಚರಣೆಯಾಗುತ್ತದೆ ಎಂದರು.

ಸೂರ್ಯ ಮುಳುಗಿ ಕತ್ತಲು ಜಗತ್ತನ್ನು ಆವರಿಸಿದಾಗ, ಕತ್ತಲು ಆವರಿಸಿದ್ದರೂ, ಕ್ರಿಸ್‌ಮಸ್‌ ನಡುರಾತ್ರಿಯಲ್ಲಿ ಬೆಳಕಿನ ಆಗಮನವಾಯಿತು. ಬೆಳಕಿನಲ್ಲಿ ನಡೆಯಲು, ಬೆಳಕಿನ ರಾಜ್ಯದ ಸದಸ್ಯರಾಗಲು ಕ್ರಿಸ್ತ ಜಯಂತಿ ಪ್ರೇರಣೆಯಾಯಿತು. ಚೈತನ್ಯದ ಸೆಲೆ ಮೂಡಿತು. ನಿಸ್ತೇಜ ಜೀವನಕ್ಕೆ ಜೀವದ ಸಂಚಾರವಾಯಿತು. ಪ್ರಭುಯೇಸು ಜಗಜ್ಯೋತಿಯಾಗಿ ಭುವಿಯ ಅಂಧಕಾರ ನೀಗಿಸಿದರು. ಕ್ರಿಸ್‌ಮಸ್‌ ಮನುಜನ ಬದುಕನ್ನು ಜ್ಯೋತಿಯಾಗಿ ಆಲಂಗಿಸಿ ಪ್ರೀತಿಯ ಸಿಂಚನವೆರೆದ ಹಬ್ಬ. ಕ್ರಿಸ್‌ಮಸ್ ನಮ್ಮ ಬದುಕಿನ ಬೆಳಕಿನ ಹಬ್ಬ ಎಂಬುವುದಾಗಿ ಸಾರಿದರು ಎಂದರು.

ಪಟ್ಟಣದ ಸಮಸ್ತ ಕ್ರೈಸ್ತ ಭಕ್ತಾದಿಗಳು, ಧಾರ್ಮಿಕ ಸಹೋದರಿಯರು ಬಲಿಪೂಜೆಯಲ್ಲಿ ಭಾಗಿಯಾಗಿ ಕ್ರಿಸ್ತಜಯಂತಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಬಲಿಪೂಜೆಯ ಬಳಿಕ ಶುಭಾಶಯ ವಿನಿಮಯ ಮತ್ತು ಕೇಕ್ ನೀಡಲಾಯಿತು.

ಆನವಟ್ಟಿಯ ಕ್ರಿಸ್ತುರಾಜ ಆಶ್ರಮ, ಇಂಡುವಳ್ಳಿಯ ಚರ್ಚ್ ಸೇರಿದಂತೆ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲೂ ವಿಶೇಷ ಪ್ರಾರ್ಥನೆಗಳು ಜರುಗಿದವು. ಕ್ರೈಸ್ತರ ಮನೆ ಮುಂಭಾಗದಲ್ಲಿ ಏಸುವಿನ ಜನ್ಮ ವೃತ್ತಾಂತ ಸಾರುವ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಕ್ರೈಸ್ತರು ಮಾತ್ರವಲ್ಲದೇ ಸರ್ವ ಧರ್ಮಿಯರು ಕ್ರಿಸ್‌ಮಸ್ ಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.

Madhu Bangarappa ಎಲೆಚುಕ್ಕೆ ರೋಗ: ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ- ಮಧು ಬಂಗಾರಪ್ಪ

0

Madhu Bangarappa ಮಲೆನಾಡು ಪ್ರದೇಶದಲ್ಲಿ ತೀವ್ರತರವಾಗಿರುವ ಅಡಿಕೆ ಎಲೆಚುಕ್ಕೆ ರೋಗದಿಂದಾಗಿ ಸಣ್ಣ ರೈತರಿಗೆ ತುಂಬಾ ತೊಂದರೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ವಿಜ್ಞಾನಿಗಳಿಂದ ಮಾರ್ಗದರ್ಶನ ಪಡೆದು ಹತೋಟಿ ಕ್ರಮ ಕೈಗೊಳ್ಳುತ್ತಿದ್ದು ರೈತರಿಗೆ ಈ ಬಗ್ಗೆ ಹೆಚ್ಚಿನ ತಿಳುವಳಿಕೆ ನೀಡುವುದು ಅತಿ ಅವಶ್ಯಕವಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಎಲೆ ಚುಕ್ಕೆ ರೋಗ ನಿಯಂತ್ರಣ ಮತ್ತು ಇತರೆ ವಿಷಯ ಕುರಿತು ಚರ್ಚಿಸಲು ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಹೆಚ್ಚಾಗಿ ಹರಡುವ ಎಲೆ ಚುಕ್ಕೆ ರೋಗ ನಿಯಂತ್ರಣ ದುಬಾರಿಯಾಗಿದೆ. ರೋಗ ನಿಯಂತ್ರಣ ಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಕ್ರಮವಾಗಿ ಶೇ.60 ಮತ್ತು 40 ಹಣ ನೀಡಲು ಸಿದ್ದವಿದ್ದು, ಮುಖ್ಯವಾಗಿ ರೋಗ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ವಿಜ್ಞಾನಿಗಳ ಅಭಿಪ್ರಾಯ ಮತ್ತು ಮಾರ್ಗದರ್ಶನದ ಮೇಲೆ ಮಾರ್ಗಸೂಚಿಯನ್ನು ತಯಾರಿಸಲಾಗುತ್ತಿದೆ.

ಇಲಾಖೆಗಳು, ಗ್ರಾ.ಪಂ, ಸಹಕಾರ ಸಂಘಗಳು, ಅಡಿಕೆ ಮಾರಾಟ ಸಹಕಾರ ಸಂಘಗಳ ಮೂಲಕ ರೈತರಿಗೆ ಈ ರೋಗ ನಿಯಂತ್ರಣ ಮತ್ತು ವಿಜ್ಞಾನಿಗಳು ತಯಾರಿಸಿದ ಮಾರ್ಗಸೂಚಿಗಳನ್ನು ಅನುಸರಿಸುವ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ.

ಅರ್ಧ, ಮುಕ್ಕಾಲು ಎಕರೆ ಹೊಂದಿರುವ ಸಣ್ಣ ಸಣ್ಣ ರೈತರಿಗೆ ಈ ರೋಗದಿಂದಾಗಿ ತುಂಬಾ ತೊಂದರೆಯಾಗುತ್ತಿದ್ದು ರೋಗ ನಿಯಂತ್ರಣಕ್ಕಾಗಿ ಎಲ್ಲರೂ ಸೇರಿ ಒಂದು ತಂಡವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಹಕರಿಸಬೇಕೆಂದರು.

ಅತಿ ಹೆಚ್ಚು ಕೆಪಿಎಸ್ ಶಾಲೆ : ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ 900 ಕೆಪಿಎಸ್ ಶಾಲೆಗಳನ್ನು ಸುಮಾರು ರೂ.3500 ಕೋಟಿ ಅನುದಾನದಲ್ಲಿ ತೆರೆಯಲಾಗುತ್ತಿದ್ದು, ಇದೊಂದು ದೊಡ್ಡ ಮತ್ತು ಶೈಕ್ಷಣಿಕ ಕ್ಷೇತ್ರದ ಅತ್ಯುತ್ತಮ ಯೋಜನೆಯಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 11 ಕೆಪಿಎಸ್ ಶಾಲೆಗಳಿದ್ದು, ಹೊಸದಾಗಿ 19 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಲಾಗಿದೆ.

ಇಂತಹ ದೊಡ್ಡ ಯೋಜನೆಗೆ ಶಿವಮೊಗ್ಗದಲ್ಲಿಯೇ ಮಾನ್ಯ ಮುಖ್ಯಮಂತ್ರಿಗಳಿAದ ಚಾಲನೆ ಕೊಡಿಸುವ ಯೋಜನೆ ಇದೆ. ಇದೇ ವೇಳೆ ಆಡಳಿತ ಭವನ, ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡುವುದು, ಅರಣ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಸೇರಿದಂತೆ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಚಾಲನೆ ಕೊಡಿಸುವ ಬಗ್ಗೆ ಯೋಜಿಸಲಾಗುತ್ತಿದೆ ಎಂದರು.

ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ : ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Madhu Bangarappa ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸುವಂತೆ ಡಿಯುಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು 15 ದಿನಗಳ ಒಳಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ಲಂ ಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಜಿಲ್ಲೆಯನ್ನು ಕೊಳಚೆ ಪ್ರದೇಶಮುಕ್ತ ಜಿಲ್ಲೆಯನ್ನಾಗಿ ಮಾಡುವ ಮೂಲಕ ಮಾದರಿ ಜಿಲ್ಲೆಯಾಗಿಸಲು ಎಲ್ಲರೂ ಸಹಕರಿಸಬೇಕು ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಜಿ.ಪಂ ಸಿಇಓ ಹೇಮಂತ್ ಎನ್, ಸಿಸಿಎಫ್ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಮಾಜಿ ವಿಧಾನ ಪರಿಷತ್ ಶಾಸಕರಾದ ಪ್ರಸನ್ನಕುಮಾರ್, ಕೃಷಿ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಎಸಿ ಸತ್ಯನಾರಾಯಣ, ಡಿಯುಡಿಸಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು, ಸ್ಲಂ ಬೋರ್ಡ್ ಅಧಿಕಾರಿಗಳು, ಡಿಡಿಪಿಐ, ಇತರೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಹೊಸಮನೆ ಶ್ರೀನರಸಿಂಹ ದೇಗುಲದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ

0

ಶಿವಮೊಗ್ಗ ಹೊಸಮನೆ ನಾಲ್ಕನೇ ತಿರುವಿನ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ದೇವಸ್ಥಾನ ಸಮಿತಿ ವತಿಯಿಂದ ಡಿ. 30ರಂದು ಇಡೀ ದಿನ ವೈಕುಂಠ ಏಕಾದಶಿಯ ವಿಶೇಷ ಪೂಜೆ, ಆರಾಧನೆ, ಭರತನಾಟ್ಯ, ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ ಪ್ರಮುಖರ ಧಾರ್ಮಿಕ ಸಭೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಡಿಸೆಂಬರ್ 30ರ ಮಂಗಳವಾರ ಬೆಳಿಗ್ಗೆ 9:00 ಗಂಟೆಯಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ನಡೆಯಲಿದೆ.
ಸಂಜೆ 6 ರಿಂದ ಸಪ್ತಸ್ವರ ಟ್ರಸ್ಟ್ ನ ಸಂಗೀತ ಕಲಾವಿದರಿಂದ ಸಂಗೀತ ಲಹರಿ ಭಕ್ತಿಗೀತೆಗಳ ಪ್ರಸ್ತುತತೆ ನಡೆಯಲಿದೆ.
ತದನಂತರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ನವರೂಪದ ಭರತನಾಟ್ಯ ಕಾರ್ಯಕ್ರಮವನ್ನು ಪ್ರತಿಭಾವಂತ ಪುಟಾಣಿ ಕಲಾವಿದರು ನಡೆಸಿಕೊಡಲಿದ್ದಾರೆ.
ಮಧ್ಯಾಹ್ನ ಪೂಜೆಯ ನಂತರ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ,ಈಶ್ವರಪ್ಪ, ಸಚಿವ ಮಧು ಬಂಗಾರಪ್ಪ, ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ ಡಿಎಸ್ ಅರುಣ್, ರುದ್ರೆಗೌಡ, ಮಂಜುನಾಥಗೌಡ, ಸೂಡಾಧ್ಯಕ್ಷ ಸುಂದರೇಶ್ ಸೇರಿದಂತೆ ವಿವಿಧ ಗಣ್ಯರು ಆಗಮಿಸಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವರನ್ನು ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಸುರೇಶ್ ಬಾಳೆಗುಂಡಿ, ಅಧ್ಯಕ್ಷ ಗಣೇಶ್ ಎಲ್, ಉಪಾಧ್ಯಕ್ಷ ಬಸವರಾಜ್ ಎಂ.ಆರ್., ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಧಾನ ಅರ್ಚಕರಾದ ಶ್ರೀನಿವಾಸ ಮೂರ್ತಿ ಹಾಗೂ ಪದಾಧಿಕಾರಿಗಳು ಸ್ವಾಗತಿಸಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಲು ಕೋರಲಾಗಿದೆ.