Monday, August 3, 2026
Monday, August 3, 2026
Home Blog Page 25

Inner Wheel Club Shivamogga ಮಹಿಳೆಯರ ಮತ್ತು ಮಕ್ಕಳ ಸಬಲೀಕರಣ ನಮ್ಮ ಸಮಾಜಮುಖಿ ಸೇವೆಯ ಅಂಶಗಳಾಗಿರಲಿ- ಹೆಚ್.ಪಿ.ಅಕ್ಷತಾ

0

Inner Wheel Club Shivamogga ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಪಿಡಿಸಿ ಹಾಗೂ ಎಫ್ಎಪಿಐ ಶಿವಮೊಗ್ಗದ ಅಧ್ಯಕ್ಷರಾದ ಭಾರತೀ ಚಂದ್ರಶೇಖರ್ ಹಾಗೂ ಮಾಜಿ ಅಧ್ಯಕ್ಷೆ ಲತಾ ಎಂ. ರಮೇಶ್ ಅವರು ನೂತನ ಅಧ್ಯಕ್ಷೆ ಸುನೀತಾ ಮೋಹನ್, ಕಾರ್ಯದರ್ಶಿ ಸುಮಲತಾ ರವಿ ಪಾಟೀಲ್, ಖಜಾಂಚಿ ಶ್ರುತಿ ರಾಕೇಶ್, ಐಎಸ್ಓ ಶ್ವೇತಾ ಗಿರೀಶ್ ಮತ್ತು ಎಡಿಟರ್ ಸೋಮಿಯ ರವರಿಗೆ ನೂತನ ಪದಗ್ರಹಣ ನೆರವೇರಿಸಿ ಅಧಿಕಾರ ಹಸ್ತಾಂತರ ಮಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೆಂಟರ್ ಅಡ್ಮಿನಿಸ್ಟ್ರೇಷನ್ ಒನ್ ಸ್ಟಾಪ್ ಸೆಂಟರ್ (ಸಖಿ) ಅಕ್ಷತಾ ಹೆಚ್.ಪಿ ಇವರು ಮಹಿಳಾ ಮತ್ತು ಮಕ್ಕಳ ಸಬಲೀಕರಣ, ದೌರ್ಜನ್ಯ ಮುಕ್ತ ಶಿವಮೊಗ್ಗ ಹಾಗೂ ಇತರ ಸಮಾಜ ಸೇವೆಯ ಮಹತ್ವಗಳನ್ನು ಒತ್ತಿ ಹೇಳಿ ಇನ್ನರ್ ವೀಲ್ ಸಂಸ್ಥೆಯ ಸೇವ ಕಾರ್ಯಗಳನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ಸುನೀತಾ ಮೋಹನ್ ಮಾತನಾಡಿ, ತಮ್ಮ ಅಧಿಕಾರವಾಧಿಯಲ್ಲಿ ಮಾಡಬೇಕಾದ ಸಮಾಜಮುಖಿ ಚಟುವಟಿಗಳ ಬಗ್ಗೆ ತಿಳಿಸಿದರು.

ಪದಗ್ರಹಣದ ಸಮಾರಂಭದ ಅಂಗವಾಗಿ ಕ್ಲಬ್ ವತಿಯಿಂದ ಸೇವಾ ಯೋಜನೆ ಕೈಗೊಳ್ಳಲಾಯಿತು. ಲಕ್ಷ್ಮಿ ಯವರ ಪುತ್ರನ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯಧನವನ್ನು ನೀಡಲಾಯಿತು.
ನೇತ್ರಾವತಿ ಯವರ ಪುತ್ರನಿಗೆ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

Inner Wheel Club Shivamogga ಕಾರ್ಯಕ್ರಮದಲ್ಲಿ ಮಾಜಿ ಪದಾಧಿಕಾರಿಗಳು, ವಿವಿಧ ಇನ್ನರ್ ವೀಲ್ ಕ್ಲಬ್ ಗಳ ಸದಸ್ಯೆಯರು, ಪಿಡಿಸಿ ಗಳು, ರೋಟರಿ ಕ್ಲಬ್ ಶಿವಮೊಗ್ಗ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಇತರ ಗಣ್ಯರ ಉಪಸ್ಥಿತಿಯಲ್ಲಿ ಕ್ಲಬ್ ಬುಲೆಟಿನ್ ಬಿಡುಗಡೆ ಮಾಡಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷೆ ಲತಾ ಎಂ. ರಮೇಶ್ ಸ್ವಾಗತಿಸಿದರು, ಶ್ರೀರಂಜಿನಿ ದತ್ತಾತ್ರಿ ನಿರೂಪಣೆ ಹಾಗೂ ಸೀಮಾ ಸದಾನಂದ್ ವಂದನಾರ್ಪಣೆ ಸಲ್ಲಿಸಿದರು.

ಹುಲಿಕಲ್ ಘಾಟ್ ವಿವಿಧ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಿ- ಸಚಿವ ಸತೀಶ್ ಜಾರಕಿಹೊಳಿ

0

ಹುಲಿಕಲ್ ಘಾಟ್ ನಲ್ಲಿ ರೂ. 4.35 ಕೋಟಿ ಮತ್ತು ರೂ. 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಮತ್ತು ಇತರೆ ರಸ್ತೆ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ತ್ವರಿತ ಮತ್ತು ಗುಣಮಟ್ಟದಿಂದ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ‌ ಎಂದು
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ತಿಳಿಸಿದರು.
ಅವರು ಮಂಗಳವಾರ ಸಂಜೆ ಹುಲಿಕಲ್ ಘಾಟ್ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿ ಪ್ರಗತಿಯಲ್ಲಿರುವ ರಿಟೇನಿಂಗ್ ವಾಲ್ (ರಕ್ಷಣಾ ಗೋಡೆ) ನಿರ್ಮಾಣ ಹಾಗೂ ಇತರೆ ರಸ್ತೆ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಿಸಿ ಪರಿಶೀಲನೆ ನಡೆಸಿ, ಮಾತನಾಡಿದರು.
ಘಾಟಿಯಲ್ಲಿ ಭಾರೀ ಪ್ರಮಾಣದ ವಾಹನ ಬಿಟ್ಟು ಬೇರೆ ಲಘು ವಾಹನಗಳ ಪ್ರಯಾಣಕ್ಕೆ ಈಗಾಗಲೇ ಅವಕಾಶ ಮಾಡಿಕೊಡಲಾಗಿದೆ.
ಇಲಾಖೆಯಡಿ ಸ್ಥಗಿತಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಸೂಚಿಸಿದ್ದೇನೆ.
ಶಿವಮೊಗ್ಗದ ತುಂಗಾ ಸೇತುವೆ ನಿರ್ಮಾಣಕ್ಕೆ ರೂ. ೫೦ ಕೋಟಿ ಮಂಜೂರಾಗಿದ್ದು, ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸದರಿ ಕಾಮಗಾರಿ ಆರಂಭಿಸಲಾಗುವುದು.
ಮಳೆಗಾಲದ ಹಿನ್ನೆಲೆಯಲ್ಲಿ ಘಾಟ್ ಪ್ರದೇಶದಲ್ಲಿ ಭೂಕುಸಿತವಾಗದಂತೆ ತಡೆಯಲು ಮತ್ತು ವಾಹನ ಸವಾರರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಕೈಗೊಳ್ಳಲಾಗುತ್ತಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.
ಕಾಮಗಾರಿ ನಡೆಯುತ್ತಿರುವ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಅಲ್ಲಿದ್ದ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆ
ಘಾಟ್ ರಸ್ತೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದರಿಂದ, ರಿಟೇನಿಂಗ್ ವಾಲ್ ನಿರ್ಮಾಣದಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದ ಕೊರತೆಯಾಗಬಾರದು ಎಂದು ಸೂಚನೆ ನೀಡಿದರು.
ಮಳೆಗಾಲದಲ್ಲಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ಯಾವುದೇ ವ್ಯತ್ಯಯ ಉಂಟಾಗದಂತೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು.
ಸುರಕ್ಷತಾ ಕ್ರಮಗಳು: ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಫಲಕಗಳು ಹಾಗೂ ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಕಾಣಿಸುವಂತಹ ಸೂಚಕಗಳನ್ನು ಅಳವಡಿಸಬೇಕು.
“ಘಾಟ್ ಪ್ರದೇಶಗಳಲ್ಲಿ ಸಂಚಾರ ಸುರಕ್ಷತೆ ನಮಗೆ ಅತ್ಯಂತ ಪ್ರಮುಖವಾಗಿದೆ. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಮತ್ತು ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ತಿಳಿಸಿದರು.

Karnataka Raitha Suraksha Pradhan Mantri Fasal Bima Yojana ಕೃಷಿ ಇಲಾಖೆ ಪ್ರಕಟಣೆ, ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಸೌಲಭ್ಯ ಸಿಗಲಿದೆ? ಕೃಷಿಕರಿಗೆ ಮಾಹಿತಿ ಇಲ್ಲಿದೆ!

0

Karnataka Raitha Suraksha Pradhan Mantri Fasal Bima Yojana ಶಿವಮೊಗ್ಗ ಜಿಲ್ಲೆಯ ರೈತ ಬಾಂಧವರಿಗಾಗಿ 2026-27ನೇ ಸಾಲಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ’ಯನ್ನು ಜಾರಿಗೊಳಿಸಲಾಗಿದ್ದು, ಸರ್ಕಾರದಿಂದ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್‌ಶ್ಯೂರೆನ್ಸ್ ಕಂಪನಿಯ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಮುಂಗಾರು ಹಂಗಾಮಿಗೆ ಜಿಲ್ಲೆಯ ಆಯ್ದ ಭಾಗಗಳಲ್ಲಿ ಈ ಕೆಳಗಿನ ಬೆಳೆಗಳಿಗೆ ವಿಮೆ ಸೌಲಭ್ಯ ದೊರೆಯಲಿದೆ:
ಹೋಬಳಿ ಮಟ್ಟಕ್ಕೆ: ರಾಗಿ (ಮಳೆ ಆಶ್ರಿತ).
ಗ್ರಾಮ ಪಂಚಾಯತಿ ಮಟ್ಟಕ್ಕೆ: ಭತ್ತ (ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ).
ಬೆಳೆ ಸಾಲ ಪಡೆದ ಹಾಗೂ ಪಡೆಯದ ಉಭಯ ರೈತರೂ ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಬಹುದಾಗಿದೆ.
ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಜುಲೈ 31,ಭತ್ತ (ನೀರಾವರಿ/ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಆಗಸ್ಟ್ 14 ನೋಂದಾಯಿಸಿಕೊಳ್ಳಲು ಅಂತಿಮ ದಿನವಾಗಿರುತ್ತದೆ.
ಬೆಳೆ ಸಾಲ ಪಡೆದ ರೈತರಿಗೆ: ಸಾಲ ಪಡೆಯುವ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಒಂದು ವೇಳೆ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಇಲ್ಲದಿದ್ದರೆ, ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರ ನೀಡುವ ಮೂಲಕ ಯೋಜನೆಯಿಂದ ಹೊರಗುಳಿಯಬಹುದು.
Karnataka Raitha Suraksha Pradhan Mantri Fasal Bima Yojana ಬೆಳೆ ಸಾಲ ಪಡೆಯದ ರೈತರಿಗೆ: ಇಂತಹ ರೈತರು ತಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ರೈತರು ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಲ್ಲದೆ ಸರ್ಕಾರದ ಅಧಿಕೃತ ವೆಬ್‌ಸೈಟ್ samrkshane.karnataka.gov.in ಮೂಲಕವೂ ಮಾಹಿತಿ ಪಡೆಯಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

“ಭವಿಷ್ಯಕ್ಕಾಗಿ ಸೈಬರ್ ಸನ್ನದ್ಧ ಕರ್ನಾಟಕ…” ದತ್ತಾಂಶಕ್ಕಾಗಿ ಸೈಬರ್ ಭದ್ರತೆ ಬಗ್ಗೆ ಯಶಸ್ವಿಯಾದ ಕಾರ್ಯಾಗಾರ

0

ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ ಕೇಂದ್ರ (CeG), ಕರ್ನಾಟಕದ ಸೈಬರ್ ಭದ್ರತಾ ಉತ್ಕೃಷ್ಟತಾ ಕೇಂದ್ರ (CySecK) ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ರಾಜ್ಯ ದತ್ತಾಂಶಕ್ಕಾಗಿ ಸೈಬರ್ ಭದ್ರತಾ ಚೌಕಟ್ಟನ್ನು ಬಲಪಡಿಸುವುದು ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಮಹತ್ವದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

​ಕರ್ನಾಟಕದ ಡಿಜಿಟಲ್ ಆಡಳಿತ ವ್ಯವಸ್ಥೆಯಲ್ಲಿ ಸೈಬ‌ರ್ ಭದ್ರತೆಯನ್ನು ಬಲಪಡಿಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು 30ಕ್ಕೂ ಹೆಚ್ಚು ಇಲಾಖೆಗಳು, ನಿಗಮಗಳು, ಮಂಡಳಿಗಳು ಮತ್ತು ರಾಜ್ಯ ಸಂಸ್ಥೆಗಳ 80ಕ್ಕೂ ಹೆಚ್ಚು ಹಿರಿಯ ಸರ್ಕಾರಿ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

CySecK ಸಂಸ್ಥೆಯ ಕೇಂದ್ರ ಮುಖ್ಯಸ್ಥರಾದ ರಂಜಿತ್ ಮಿಶ್ರಾ ಅವರ ಸ್ವಾಗತ ಭಾಷಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಪಂಕಜ್ ಕುಮಾ‌ರ್ ಪಾಂಡೆ (IAS), ಕರ್ನಾಟಕ ಇನ್ನೋವೇಶನ್‌ ಆಂಡ್‌ ಟೆಕ್ನಾಲಜಿ ಸೊಸೈಟಿಯ (KITS) ವ್ಯವಸ್ಥಾಪಕ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ (IAS) ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮವನ್ನು ಜಂಟಿಯಾಗಿ ಉದ್ಘಾಟಿಸಿದರು.

ಕಾರ್ಯಾಗಾರದಲ್ಲಿ ಭವಿಷ್ಯಕ್ಕಾಗಿ ಸೈಬರ್ ಸನ್ನದ್ಧ ಕರ್ನಾಟಕ ಮತ್ತು ಇ-ಆಡಳಿತಕ್ಕಾಗಿ ಸೈಬ‌ರ್ ಸ್ಥಿತಿಸ್ಥಾಪಕತ್ವ ಎಂಬ ಪ್ರಮುಖ ವಿಷಯಗಳ ಕುರಿತು ದಿಕ್ಸೂಚಿ ಭಾಷಣಗಳು ನಡೆದವು. ಇದೇ ಸಮಯದಲ್ಲಿ ನಾಗರಿಕರ ದತ್ತಾಂಶವನ್ನು ರಕ್ಷಿಸುವುದು, ಸೈಬರ್ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು ಮತ್ತು ಸರ್ಕಾರದ ಡಿಜಿಟಲ್ ಮೂಲಸೌಕರ್ಯದ ಭದ್ರತೆಯನ್ನು ಹೆಚ್ಚಿಸಲು ಸಂಘಟಿತ ಕ್ರಮಗಳ ಅಗತ್ಯತೆಯನ್ನು ಈ ವೇಳೆ ಪ್ರಮುಖವಾಗಿ ಒತ್ತಿಹೇಳಲಾಯಿತು.

ತಾಂತ್ರಿಕ ಅವಧಿಗಳಲ್ಲಿ ರಾಜ್ಯ ದತ್ತಾಂಶ ಕೇಂದ್ರದ (State Data Centre) ಸೈಬರ್ ಭದ್ರತೆಯ ಅತ್ಯುತ್ತಮ ಅಭ್ಯಾಸಗಳು ಹಾಗೂ ಕರ್ನಾಟಕದ ಏಕೀಕೃತ ಸೈಬರ್ ಭದ್ರತಾ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಜೊತೆಗೆ, ಪಾಲ್ಗೊಂಡಿದ್ದ ವಿವಿಧ ಇಲಾಖೆಗಳು ತಮ್ಮ ಪ್ರಸ್ತುತ ಸೈಬರ್ ಭದ್ರತಾ ಉಪಕ್ರಮಗಳು ಮತ್ತು ಎದುರಿಸುತ್ತಿರುವ ಕಾರ್ಯಾಚರಣೆಯ ಸವಾಲುಗಳ ಕುರಿತು ಪ್ರಸ್ತುತಿಗಳನ್ನು ನೀಡಿದವು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆರು ವಿಶೇಷ ವಿಷಯಾಧಾರಿತ ಚರ್ಚಾಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ಅಪಾಯ-ಆಧಾರಿತ ಭದ್ರತಾ ಮೇಲ್ವಿಚಾರಣೆ,
SDC ಮತ್ತು KSWAN ಭದ್ರತೆ
ಸೆಕ್ಯುರಿಟಿ ಆಪರೇಷನ್ಸ್‌ ಸೆಂಟರ್‌ (SOC) ಮತ್ತು ರಾಜ್ಯ CSIRT, ಸುರಕ್ಷಿತ ವಿನ್ಯಾಸ ಮತ್ತು ಶೂನ್ಯ ನಂಬಿಕೆ (Zero Trust) ತತ್ವಗಳು, ದತ್ತಾಂಶ ವರ್ಗೀಕರಣ ಹಾಗೂ DPDP ಸನ್ನದ್ಧತೆ ಮತ್ತು ಸೈಬರ್ ಭದ್ರತಾ ಸಾಮರ್ಥ್ಯ ವೃದ್ಧಿ ವಿಷಯಗಳ ಕುರಿತು ವಿಸ್ತ್ರತವಾಗಿ ಚರ್ಚಿಸಲಾಯಿತು.

ಈ ಎಲ್ಲಾ ಚರ್ಚೆಗಳ ಮುಕ್ತಾಯದಲ್ಲಿ, ಸರ್ಕಾರಿ ಇಲಾಖೆಗಳಲ್ಲಿ ಸೈಬರ್ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಆದ್ಯತೆಯ ಶಿಫಾರಸುಗಳು ಮತ್ತು ಅನುಷ್ಠಾನ ಕ್ರಮಗಳನ್ನು ಒಳಗೊಂಡ ಮಹತ್ವದ “ಜಂಟಿ ಕ್ರಿಯಾ ಯೋಜನೆ”ಯನ್ನು (Joint Action Plan) ಸಿದ್ಧಪಡಿಸಲಾಯಿತು.
ಸಹಯೋಗ, ಜ್ಞಾನ ಹಂಚಿಕೆ ಮತ್ತು ನಿರಂತರ ಸಾಮರ್ಥ್ಯ ವೃದ್ಧಿಯ ಮೂಲಕ ಸುರಕ್ಷಿತ, ಸ್ಥಿತಿಸ್ಥಾಪಕ ಹಾಗೂ ಭವಿಷ್ಯಕ್ಕೆ ಸನ್ನದ್ಧವಾದ ಡಿಜಿಟಲ್ ಆಡಳಿತ ವ್ಯವಸ್ಥೆಯನ್ನು ನಿರ್ಮಿಸಲು ಕರ್ನಾಟಕ ಸರ್ಕಾರವು ಸಂಪೂರ್ಣ ಬದ್ಧವಾಗಿದೆ ಎಂದು ಕಾರ್ಯಾಗಾರದಲ್ಲಿ ಪುನರುಚ್ಚರಿಸಲಾಯಿತು.

Shivamogga Rotary ಪರಿಸರ ರಕ್ಷಣೆಯಿಂದ ಉತ್ತಮ ಆರೋಗ್ಯ : ಎ.ಆರ್.ಪ್ರಸನ್ನ ಕುಮಾರ್

0

Shivamogga Rotary ವಿಪ್ರ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ವತಿಯಿಂದ ಶಿವಮೊಗ್ಗ ರೋಟರಿ ಬಯೋ ಡೈವರ್ಸಿಟಿ ಪಾರ್ಕ್ ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿದರು.

ಇತ್ತೀಚೆಗೆ 104ನೇ ಅಂತರರಾಷ್ಟ್ರೀಯ ಸಹಕಾರ ದಿನ ಮತ್ತು 32ನೇ ವಿಶ್ವಸಂಸ್ಥೆ ಸಹಕಾರ ದಿನದ ಆಚರಣೆಯ ಸಂದರ್ಭದಲ್ಲಿ ವಿಪ್ರ ವಿವಿಧೋದ್ದೇಶ ಸಹಕಾರಿ ಸಂಘವು, ಶಿವಮೊಗ್ಗ ಬಯೋ ಡೈವರ್ಸಿಟಿ ಪಾರ್ಕ್ ನಲ್ಲಿ ವನಮಹೋತ್ಸವ ಆಚರಣೆ ಮಾಡುವುದರ ಮೂಲಕ ಕಾರ್ಯಕ್ರಮಗಳಿಗೆ ಮೆರಗು ಕೊಟ್ಟಿದೆ. ಸುಮಾರು 25 ಗಿಡಗಳ ನೆಡುವಿಕೆಯಿಂದ ಕಾರ್ಯಕ್ರಮವು ಯಶಸ್ವಿಯಾಯಿತು.

ಸಂಘದ ಅಧ್ಯಕ್ಷರಾದ ಎ.ಆರ್.ಪ್ರಸನ್ನ ಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಆದರೆ ಪ್ರಸ್ತುತ ಪರಿಸರ ಸಂರಕ್ಷಣೆಗೆ ಹೆಚ್ಚು ಒತ್ತು ನೀಡುವುದು ನಮಗೆ ಅನಿವಾರ್ಯ ಕೂಡಾ. ಹಾಗಾಗಿ ಪರಿಸರವನ್ನು ಸಂರಕ್ಷಿಸಬೇಕು. ಇದರಿಂದ ಉತ್ತಮ ಆರೋಗ್ಯ ಸಿಗುತ್ತದೆ ಎಂದ ಅವರು,

Shivamogga Rotary ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮಂಜುನಾಥ, ಡೈರೆಕ್ಟರ್ ನಾರಾಯಣ ಮೂರ್ತಿ, ವಾರಿಜಾ ಜಗದೀಶ್, ಹರಿಕೃಷ್ಣ ಎಸ್., ಗುರುರಾಜ್, ಶ್ರೀನಿವಾಸಮೂರ್ತಿ, ಎನ್.ವಿ.ರತ್ನಾವತಿ, ಡಾ. ಗೀತಾ ರಾಣಿ, ತಿಮ್ಮಪ್ಪ ಕಾಕಲ್, ಪ್ರಭಾಕರ, ಜಗದೀಶ್ ಗೋಖಲೆ ಮತ್ತು ಸಿಇಓ ಮಾಲತಿ ಮತ್ತು ಇತರೆ ಸದಸ್ಯರು ಪಾಲ್ಗೊಂಡಿದ್ದರು. ರೋಟರಿ ಪಾರ್ಕ್ ಸಹ ಕಾರ್ಯದರ್ಶಿ ರೊ. ವೀರಣ್ಣ ಹುಗ್ಗಿ ಮತ್ತು ಖಜಾಂಚಿ ರೊ. ಜಗದೀಶ್ ರವರು ಉಪಸ್ಥಿತರಿದ್ದರು.

ಸಂಶೋಧಕರು ನವೀನ ಆಲೋಚನೆಗಳು ಮತ್ತು ವೈಜ್ಞಾನಿಕ ಮನೋಭಾವದೊಂದಿಗೆ ಸಮಾಜಮುಖಿ ಸಂಶೋಧನೆ ಕೈಗೊಳ್ಳಿ : ಪ್ರೊ.ಶರತ್ ಅನಂತಮೂರ್ತಿ

0

ಆರೋಗ್ಯ ವಿಜ್ಞಾನ ಮತ್ತು ಜೀನೋಮಿಕ್ಸ್ ಕ್ಷೇತ್ರಗಳಲ್ಲಿನ ಸಂಶೋಧನೆಗಳು ಮಾನವ ಜೀವನದ ಗುಣಮಟ್ಟ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ ಆಯೋಜಿಸಿದ್ದ “ಆರೋಗ್ಯ ಮತ್ತು ರೋಗಗಳಲ್ಲಿ ಆಣ್ವಿಕ ಕಾರ್ಯವಿಧಾನಗಳು ಹಾಗೂ ಜೀನೋಮಿಕ್ ಒಳನೋಟಗಳು” ವಿಷಯ ಕುರಿತ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಸಾಂಪ್ರದಾಯಿಕ ಪಠ್ಯಕ್ರಮ, ಕೇಂದ್ರಿತ ಕಲಿಕಾ ವಿಧಾನದಿಂದ ಹೊರಬಂದು ಆಧುನಿಕ ಹಾಗೂ ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯವಿದೆ. ಸಂಶೋಧಕರು ನವೀನ ಆಲೋಚನೆಗಳು ಮತ್ತು ವೈಜ್ಞಾನಿಕ ಮನೋಭಾವದೊಂದಿಗೆ ಸಮಾಜಮುಖಿ ಸಂಶೋಧನೆ ಕೈಗೊಳ್ಳಬೇಕು ಹಾಗೂ ಪ್ರಮಾಣಪತ್ರ ಕೋರ್ಸ್ಗಳ ಮೂಲಕ ಹೊಸ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ಪ್ರೊ. ಕೆ. ಕೇಶವ್ ಮಾತನಾಡಿ, ಅಣು ಜೀವಶಾಸ್ತ್ರ ಮತ್ತು ಜೀನೋಮಿಕ್ಸ್ ಕ್ಷೇತ್ರಗಳಲ್ಲಿನ ಇತ್ತೀಚಿನ ಬೆಳವಣಿಗೆಗಳು ರೋಗ-ನಿರ್ದಿಷ್ಟ ಚಿಕಿತ್ಸಾ ವಿಧಾನಗಳ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ತೆರೆದಿವೆ ಎಂದು ಹೇಳಿದರು. ವೈಯಕ್ತಿಕ ವೈದ್ಯಕೀಯ ಮತ್ತು ನಿಖರ ಚಿಕಿತ್ಸಾ ವಿಧಾನಗಳ ಅಭಿವೃದ್ಧಿಯಲ್ಲಿ ಕ್ಷೇತ್ರಗಳ ಮಹತ್ವವನ್ನು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ವೆಂಕಟೇಶ್ ಮಾತನಾಡಿ, ಆರೋಗ್ಯ ಮತ್ತು ರೋಗಗಳಲ್ಲಿ ಆಣ್ವಿಕ ಕಾರ್ಯವಿಧಾನಗಳು ಹಾಗೂ ಜೀನೋಮಿಕ್ಸ್ ಕ್ಷೇತ್ರದ ಇತ್ತೀಚಿನ ಸಂಶೋಧನೆಗಳ ಕುರಿತು ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಂತಹ ಕಾರ್ಯಕ್ರಮಗಳು ಜ್ಞಾನ ವಿನಿಮಯ ಹಾಗೂ ಸಂಶೋಧನಾ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಡಿವಿಎಸ್ ಸಮಿತಿ ಅಧ್ಯಕ್ಷ ಬಸಪ್ಪ ಗೌಡ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಸಂಶೋಧನೆ, ನಾವೀನ್ಯತೆ ಮತ್ತು ಸಮಾಜಮುಖಿ ಚಿಂತನೆಗೆ ಉತ್ತೇಜನ ನೀಡುವ ವೇದಿಕೆಗಳಾಗಬೇಕು. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ ಮಾತನಾಡಿ ವಿಚಾರ ಸಂಕಿರಣದ ಉದ್ದೇಶ ಮತ್ತು ಮಹತ್ವ ವಿವರಿಸಿದರು.
ವಿಚಾರ ಸಂಕಿರಣದಲ್ಲಿ ದೇಶ ವಿದೇಶಗಳ ತಜ್ಞರು, ಸಂಶೋಧಕರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆರೋಗ್ಯ ವಿಜ್ಞಾನ, ಆಣ್ವಿಕ ಜೀವಶಾಸ್ತ್ರ ಮತ್ತು ಜೀನೋಮಿಕ್ಸ್ ಕ್ಷೇತ್ರಗಳಲ್ಲಿನ ಇತ್ತೀಚಿನ ಸಂಶೋಧನೆಗಳು ಹಾಗೂ ತಾಂತ್ರಿಕ ಬೆಳವಣಿಗೆಗಳ ಕುರಿತು ಉಪನ್ಯಾಸಗಳು ಮತ್ತು ವೈಜ್ಞಾನಿಕ ಚರ್ಚೆಗಳು ನಡೆದವು. ಡಿವಿಎಸ್ ಉಪಾಧ್ಯಕ್ಷ ಜಿ.ಮಧುಸೂದನ್, ಡಾ. ಎ.ಸತೀಶ್‌ಕುಮಾರ್ ಶೆಟ್ಟಿ, ನಿರ್ದೇಶಕ ಕೆ.ಎನ್.ರುದ್ರಪ್ಪ ಕೊಳಲೆ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಆಹ್ವಾನಿತ ಗಣ್ಯರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಣಿಶಾಸ್ತ್ರ ವಿಭಾಗದ ಪ್ರಿಯಾಂಕ ಎಂ.ಬಿ. ವಂದನಾರ್ಪಣೆ ಸಲ್ಲಿಸಿದರು. ಇಂಗ್ಲಿಷ್ ವಿಭಾಗದ ಚೈತ್ರಾ ಕಾರ್ಯಕ್ರಮ ನಿರೂಪಿಸಿದರು.

ಭಾರತದ ಸಾಫ್ಟ್ ವೇರ್ ರಫ್ತಿನಲ್ಲಿ ಕರ್ನಾಟಕದ್ದು ಶೇ.40 ಪಾಲು- ಡಿ.ಕೆ.ಶಿವಕುಮಾರ್

0

ಕರ್ನಾಟಕವನ್ನು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿಶ್ವವಿದ್ಯಾಲಯ ಹಾಗೂ ವಿಶೇಷ AI ಹಬ್ ಸ್ಥಾಪನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

ಬೆಂಗಳೂರು ಬಿಐಇಸಿ‌ನಲ್ಲಿ ನಡೆದ ‘ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026’ ಕಾರ್ಯಕ್ರಮವನ್ನು ಉದ್ಘಾಟಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು.

ಜಾಗತಿಕ ಮಟ್ಟದ AI ಪ್ರತಿಭೆಗಳನ್ನು ರೂಪಿಸುವುದು, ಉನ್ನತ ಮಟ್ಟದ ಸಂಶೋಧನೆಗೆ ಉತ್ತೇಜನ ನೀಡುವುದು ಹಾಗೂ ಶಿಕ್ಷಣ ಸಂಸ್ಥೆಗಳು, ಉದ್ಯಮ ಮತ್ತು ಸರ್ಕಾರದ ನಡುವೆ ಸಮನ್ವಯವನ್ನು ಬಲಪಡಿಸುವ ಉದ್ದೇಶದಿಂದ ಈ ವಿಶ್ವವಿದ್ಯಾಲಯವನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದರ ಜೊತೆಗೆ, ಸ್ಟಾರ್ಟ್‌ಅಪ್‌ಗಳು, ತಂತ್ರಜ್ಞಾನ ಕಂಪನಿಗಳು ಮತ್ತು ಸಂಶೋಧಕರಿಗಾಗಿ ಅತ್ಯಾಧುನಿಕ ‘AI ಹಬ್’ ಅನ್ನು ಇನ್‌ಕ್ಯುಬೇಶನ್ ಕೇಂದ್ರವಾಗಿ ಸ್ಥಾಪಿಸಲಾಗುವುದು ಎಂದರು. ಈ ಕೇಂದ್ರವು AI ಆಧಾರಿತ ಸಂಶೋಧನೆ ಮತ್ತು ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ವೇದಿಕೆಯಾಗಲಿದೆ.

ರಾಜ್ಯವನ್ನು ‘AI-Native’ ರಾಜ್ಯವನ್ನಾಗಿ ರೂಪಿಸುವ ಗುರಿಯೊಂದಿಗೆ ಶಿಕ್ಷಣ, ಆರೋಗ್ಯ, ಕೃಷಿ, ಸಾರ್ವಜನಿಕ ಸೇವೆಗಳು ಮತ್ತು ಸಣ್ಣ ಉದ್ಯಮಗಳಲ್ಲಿ AI ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಿಗೆ AI ಆಧಾರಿತ ಬೋಧನಾ ಸಹಾಯಕ ಸಾಧನಗಳು, ಆರೋಗ್ಯ ಕ್ಷೇತ್ರದಲ್ಲಿ ಕಾಯಿಲೆಗಳ ಆರಂಭಿಕ ಪತ್ತೆ ಹಾಗೂ ಚಿಕಿತ್ಸೆಗೆ ತಾಂತ್ರಿಕ ನೆರವು, ಕೃಷಿಯಲ್ಲಿ ರೈತರಿಗೆ ನೈಜ ಸಮಯದ ಸಲಹೆಗಳು ಮತ್ತು ಸಾರ್ವಜನಿಕ ಸೇವೆಗಳಲ್ಲಿ ವೇಗ ಹಾಗೂ ಪಾರದರ್ಶಕತೆ ಹೆಚ್ಚಿಸಲು AI ಬಳಕೆಗೆ ಸರ್ಕಾರ ಒತ್ತು ನೀಡಲಿದೆ ಎಂದರು.

ಈ ವೇಳೆ ಗೂಗಲ್ ಸಂಸ್ಥೆಯೊಂದಿಗೆ ದೀರ್ಘಕಾಲೀನ ಪಾಲುದಾರಿಕೆಗೆ ಆಹ್ವಾನ ನೀಡಿದ ಅವರು, ಶಿಕ್ಷಣ, ಆರೋಗ್ಯ, ಕೃಷಿ, ಸ್ಟಾರ್ಟ್‌ಅಪ್ ಬೆಂಬಲ, ವಿದ್ಯಾರ್ಥಿಗಳ AI ತರಬೇತಿ, ಜವಾಬ್ದಾರಿಯುತ AI ಅಭಿವೃದ್ಧಿ ಹಾಗೂ ತಂತ್ರಜ್ಞಾನ ಮೂಲಸೌಕರ್ಯ ಹೂಡಿಕೆ ಸೇರಿದಂತೆ ಐದು ಪ್ರಮುಖ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಿದರು.

ಭಾರತದ ಸಾಫ್ಟ್‌ವೇರ್ ರಫ್ತಿನಲ್ಲಿ ಕರ್ನಾಟಕವು ಸುಮಾರು 40 ಶೇಕಡಾ ಕೊಡುಗೆ ನೀಡುತ್ತಿದ್ದು, ಬೆಂಗಳೂರು 17 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು ಹಾಗೂ ಸಾವಿರಾರು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ ನೆಲೆಯಾಗಿದೆ ಎಂದು ಅವರು ಹೇಳಿದರು. ಸುಧಾರಿತ ಕಂಪ್ಯೂಟಿಂಗ್, ಡೇಟಾ ಸೆಂಟರ್‌ಗಳು ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದೂ ಭರವಸೆ ನೀಡಿದರು.

ಡೆವಲಪರ್‌ಗಳು ಧೈರ್ಯವಾಗಿ ಹೊಸದನ್ನು ನಿರ್ಮಿಸಲಿ, ಉದ್ಯಮಿಗಳು ದೊಡ್ಡ ಕನಸು ಕಾಣಲಿ, ಸಂಶೋಧಕರು ಆವಿಷ್ಕಾರವನ್ನು ಮುಂದುವರಿಸಲಿ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಕಲಿಯುತ್ತಿರಲಿ. ಕೃತಕ ಬುದ್ಧಿಮತ್ತೆಯು ನಾವೀನ್ಯತೆ, ಒಳಗೊಳ್ಳುವಿಕೆ ಮತ್ತು ವಿಶ್ವಾಸಾರ್ಹತೆಯಿಂದ ಕೂಡಿರುವುದನ್ನು ಕರ್ನಾಟಕ ಸರ್ಕಾರ ಖಚಿತಪಡಿಸಲಿದೆ ಎಂದರು.

ದೇಶದ ಒಳಗಿನ ಅರಣ್ಯ ಸಂಪತ್ತು ರಕ್ಷಿಸಲು ಪ್ರತೀ ನಾಗರಿಕನೂ ” “ಊರೊಳಗಿನ ಸೈನಿಕನಾಗಬೇಕು- ನ್ಯಾ.ಜಿ.ಎ.ಮಂಜುನಾಥ್

0

ಅರಣ್ಯ ಸಂಪತ್ತನ್ನು ಉಳಿಸುವುದು ಮತ್ತು ಬೆಳೆಸುವುದು ಇಂದಿನ ತುರ್ತಾಗಿದ್ದು, ದೇಶದ ಗಡಿಯನ್ನು ಕಾಯಲು ಸೈನಿಕರು ಎಷ್ಟು ಮುಖ್ಯವೋ, ದೇಶದ ಒಳಗಿರುವ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರತಿಯೊಬ್ಬ ನಾಗರಿಕನೂ “ಊರ ಒಳಗಿನ ಸೈನಿಕ”ನಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ ಎ ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿ.ಪಂ, ಅರಣ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಶಿವಮೊಗ್ಗ ಇವರ ಸಹಯೋಗದಲ್ಲಿ ಮಂಗಳವಾರ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅರಣ್ಯೀಕರಣ ಹಾಗೂ ಕೆರೆಗಳ ಪುನಶ್ಚೇತನ ಅಭಿಯಾನ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಪರಿಸರ ಸಮತೋಲನವನ್ನು ಕಾಯ್ದುಕೊಳ್ಳಲು ಅರಣ್ಯ ಸಂಪತ್ತನ್ನು ಉಳಿಸಲೇಬೇಕಿದೆ ಎಂದರು.
ಪ್ರಕೃತಿಯಲ್ಲಿ ಅರಣ್ಯ ಮತ್ತು ಜಲ ಸಂರಕ್ಷಣೆ ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಶುದ್ಧವಾದ ಗಾಳಿ ಮತ್ತು ನೀರು ಸಿಗುವುದು ಕಷ್ಟಸಾಧ್ಯ. ಆದ್ದರಿಂದ ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ”
ದೇಶದ ಗಡಿ ರಕ್ಷಣೆಗಾಗಿ ನಾವು ಸೈನ್ಯವನ್ನು ನಿಯೋಜಿಸುತ್ತೇವೆ. ಆ ಗಡಿ ಭದ್ರತೆ ಎಷ್ಟು ಮುಖ್ಯವೋ, ದೇಶದ ಒಳಗಿನ ಅರಣ್ಯ ಪ್ರದೇಶಗಳನ್ನು ಕಾಪಾಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ.ಗಡಿಯಾಚೆಗಿನ ಆಕ್ರಮಣ ತಡೆಯಲು ಸೈನಿಕರಿದ್ದರೆ, ನಮ್ಮ ಒಳಗಿನ ಪರಿಸರವನ್ನು ರಕ್ಷಿಸಲು ನಾವೇ ಸೈನಿಕರಂತೆ ಕೆಲಸ ಮಾಡಬೇಕಾಗಿದೆ ಎಂದರು.
ನಮ್ಮ ನಗರ ಮತ್ತು ಪರಿಸರವನ್ನು ನಾವೇ ಸಂರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇಂದಿನ ದಿನಗಳಲ್ಲಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಬಾಲ್ಯದಿಂದಲೇ ಅರಣ್ಯ ಬೆಳೆಸುವ ಮತ್ತು ಪರಿಸರ ಉಳಿಸುವ ಬಗ್ಗೆ ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಜ್ಞಾನದ ಪ್ರಕಾರ ಮನುಷ್ಯನಿಗೆ ಯೋಗ್ಯವಾದ ಗಾಳಿ ಮತ್ತು ನೀರು ಸಿಕ್ಕರೆ ಆತ 80 ರಿಂದ 90 ವರ್ಷಗಳ ಕಾಲ ಆರೋಗ್ಯವಾಗಿ ಬದುಕಬಲ್ಲ. ಆದರೆ ಪ್ರಸ್ತುತ ದಿನಗಳಲ್ಲಿ ಮಾಲಿನ್ಯದಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯನ್ನು ಬದಲಾಯಿಸಬೇಕಾದ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ‘ಇದು ನನ್ನ ದೇಶ, ಇದು ನನ್ನ ಮರ, ಇದು ನನ್ನ ಕಾಡು, ನಮ್ಮ ನದಿಗಳು’ ಎಂಬ ಸಾಮಾಜಿಕ ಪ್ರಜ್ಞೆ ಮತ್ತು ಜವಾಬ್ದಾರಿ ಪ್ರತಿಯೊಬ್ಬ ಸಾರ್ವಜನಿಕರಲ್ಲೂ ಮೂಡಬೇಕಿದೆ. ಪರಿಸರ ಮತ್ತು ಜಲಮೂಲಗಳ ಪೋಷಣೆ ಹಾಗೂ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಬೃಹತ್ ಪರಿಸರ ಅಭಿಯಾನ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಗಳ ಸಮನ್ವಯದೊಂದಿಗೆ ರಾಜ್ಯಾದ್ಯಂತ ಅತ್ಯಂತ ವ್ಯವಸ್ಥಿತವಾಗಿ ಬೃಹತ್ ಪ್ರಮಾಣದಲ್ಲಿ ಸಸಿ ನೆಡುವ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕೆ ಅರಣ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಕೈಜೋಡಿಸಿರುವುದು ಶ್ಲಾಘನೀಯ ಎಂದರು.
ಐದು ವರ್ಷಗಳ ಕಾಲ ನಿರಂತರ ಪೋಷಣೆ: ಸಸಿಗಳನ್ನು ಕೇವಲ ನೆಟ್ಟು ಬಿಡುವುದಷ್ಟೇ ನಮ್ಮ ಜವಾಬ್ದಾರಿಯಲ್ಲ. ನೆಟ್ಟ ಸಸಿಗಳನ್ನು ಮುಂದಿನ 5 ವರ್ಷಗಳ ಕಾಲ ನಿರಂತರವಾಗಿ ಕಾಪಾಡಿ, ಪೋಷಿಸಿ ಮರಗಳನ್ನಾಗಿ ಬೆಳೆಸುವ ಜವಾಬ್ದಾರಿಯನ್ನು ಪ್ರಾಧಿಕಾರ ಹೊತ್ತುಕೊಂಡಿದೆ. ಈ ಮಹತ್ಕಾರ್ಯದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಡಾ.ಕೆ.ಟಿ. ಹನುಮಂತಪ್ಪ ಮಾತನಾಡಿ, ಕೆರೆಗಳು ಮತ್ತು ಹಸಿರೀಕರಣಕ್ಕೆ ಆದ್ಯತೆ ನೀಡಲೇಬೇಕಿದೆ. “ಕೆರೆಗಳು ಹಾಗೂ ಹಸಿರೀಕರಣ” ಎಂಬ ಶೀರ್ಷಿಕೆಯಡಿಯಲ್ಲಿ ಇಂದಿನ ಕಾರ್ಯಕ್ರಮ ನಡೆದಿದ್ದು, ಪ್ರಸ್ತುತ ದಿನಗಳಲ್ಲಿ ಇದು ಅತ್ಯಂತ ಅಗತ್ಯವಾದ ವಿಷಯವಾಗಿದೆ. ಮಾನವನ ಬದುಕಿಗೆ ಮುಖ್ಯವಾಗಿ ಬೇಕಾಗಿರುವ ಅಂಶಗಳೆAದರೆ ಶುದ್ಧವಾದ ನೀರು, ಮಾಲಿನ್ಯಮುಕ್ತ ಗಾಳಿ ಮತ್ತು ಉತ್ತಮ ಪರಿಸರ.
ತಾವು ದೆಹಲಿಯಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಅಲ್ಲಿನ ಪರಿಸರ ಮಾಲಿನ್ಯಕ್ಕೆ ಹೋಲಿಸಿದರೆ ನಮ್ಮ ಭಾಗದ ಪರಿಸರ ಉತ್ತಮವಾಗಿದ್ದು ಇದನ್ನು ನಾವು ಹಸಿರಾಗಿಡುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.
ಜಿಲ್ಲೆಯಲ್ಲಿ ಇಂತಹ ಸುಸ್ಥಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪರಿಸರ ಪ್ರಜ್ಞೆ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಪ್ರತಿ ವರ್ಷ ಅರಣ್ಯ ಇಲಾಖೆಯಿಂದ ಸಾಕಷ್ಟು ಇಂತಹ ಚಟುವಟಿಕೆಗಳನ್ನು ಮಾಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದ್ದು, ಪರಿಸರ ಸಂರಕ್ಷಣೆ ನಮ್ಮ ಹೊಣೆಗಾರಿಕೆ ಎಂದು ಯುವ ಪೀಳಿಗೆ ಅರಿತುಕೊಳ್ಳಬೇಕು. ಈ ಬದ್ದತೆ ಒಂದು ಗಿಡದಿಂದ ಆರಂಭವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಅಧಿಕಾರಿಗಳು, ವಿವಿಧ ಇಲಾಖೆಯ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಸಿಗಳನ್ನು ನೆಡುವ ಮೂಲಕ ಹಸಿರು ಆಂದೋಲನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು
ವೇದಿಕೆ ಕಾರ್ಯಕ್ರಮ :
ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ಸಂತೋಷ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಮಾತನಾಡಿ, ಅರಣ್ಯ ಇಲಾಖೆ ಸಹಯೋಗದಲ್ಲಿ 25 ಲಕ್ಷ ಗಿಡಗಳನ್ನು ನೆಡುವ ಮಹೋನ್ನತ ಕಾರ್ಯ ಆಗುತ್ತಿದೆ. ಅರಣ್ಯ ಇಲಾಖೆಯ ಇಂತಹ ಉತ್ತಮ ಕಾರ್ಯಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಮಾನವ-ವನ್ಯಜೀವಿ ಸಂಘರ್ಷ ಇತ್ತೀಚಿಗೆ ಹೆಚ್ಚುತ್ತಿದೆ. ಇದಕ್ಕೆ ಕಾರಣ ತಿಳಿದು ನಾವೆಲ್ಲ ಎಚ್ಚೆತ್ತುಕೊಳ್ಳಬೇಕಿದೆ. ಪರಿಸರ, ನೀರು ಒಟ್ಟಾರೆ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಮಾಡಬೇಕಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ಮುಖ್ಯವಾಗಿ ಕೆರೆಗಳ ಸಂರಕ್ಷಣೆ ಮಾಡಬೇಕು.
ರೋಗ ನಿರೋಧಕ ಶಕ್ತಿ ಕಡಿಮೆಯಾದರೆ ಸಾಕು ಕ್ಯಾನ್ಸರ್ ಬರುತ್ತದೆ. ಚಿಕ್ಕ ವಯಸ್ಸಿನವರಲ್ಲಿಯೇ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆ ಕಾರಣ ಮಲಿನವಾದ ಆಹಾರ. ಬಾಯಿ ರುಚಿ, ಇತರೆ ಕಾರಣಗಳಿಗಾಗಿ ಆಹಾರವನ್ನು ಮಲಿನ ಮಾಡುತ್ತಿದ್ದೇವೆ. ಇಂತಹ ಮಾಲಿನ್ಯ ಸೇರಿದಂತೆ ಒಟ್ಟಾರೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬೇಕಿದೆ. ಹಾಗೂ ನಾವಲ್ಲರೂ ಸೇರಿ ಹಸಿರೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ, ಒತ್ತು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸತ್ವನಿಧಿ ಪ್ರೆöÊ.ಲಿ ನಿರ್ದೇಶಕ ಪ್ರಕಾಶ್ ಎ ಎನ್ ಮಾತನಾಡಿ, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ಬದಲು ಬಳಸಬಹುದಾದ ಪೂರಕವಾದ ವಸ್ತುಗಳ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ್, ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ ಮಾತನಾಡಿದರು, ಎಸಿಎಫ್ ವಿಜಯಕುಮಾರ್, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ರಘುರಾಜ್, ವಿಭಾಗದ ಮುಖ್ಯಸ್ಥರು, ಇತರೆ ಅಧಿಕಾರಿ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು

S.N. Channabasappa ಸ್ವಚ್ಛತಾ ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಿ- ಎಸ್.ಎನ್.ಚನ್ನಬಸಪ್ಪ

0

S.N. Channabasappa ಶಿವಮೊಗ್ಗ “ನಗರದ ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಪಾತ್ರ ಅತ್ಯಂತ ಹಿರಿದಾಗಿದ್ದು, ಅವರ ಸುರಕ್ಷತೆ, ಉತ್ತಮ ಆರೋಗ್ಯ ಮತ್ತು ಯಾಂತ್ರಿಕೃತ ತರಬೇತಿಗೆ ಸರ್ಕಾರ ಹಾಗೂ ಜಿಲ್ಲಾಡಳಿತವು ವಿಶೇಷ ಆದ್ಯತೆ ನೀಡಿದೆ” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಆಯೋಜಿಸಲಾಗಿದ್ದ ‘ನಮಸ್ತೆ ದಿನಾಚರಣೆ – ೨೦೨೬’ ವಿಶೇಷ ಜಾಗೃತಿ ಅಭಿಯಾನ ಮತ್ತು ಸ್ವಚ್ಛತಾ ಸಿಬ್ಬಂದಿಗಳ ಆರೋಗ್ಯ ಹಾಗೂ ಕಾರ್ಯನಿರ್ವಹಣೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

S.N. Channabasappa ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ನಮಸ್ತೆ’ (NAMASTE) ಯೋಜನೆಯಡಿ ಸ್ವಚ್ಛತಾ ಕಾರ್ಯದಲ್ಲಿ ಮಾನವ ಶ್ರಮದ ಜೊತೆಗೆ ಆಧುನಿಕ ಯಂತ್ರೋಪಕರಣಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಸಿಬ್ಬಂದಿಗಳ ಸುರಕ್ಷತೆಯನ್ನು ಕಾಯ್ದುಕೊಳ್ಳುವ ವಿಧಾನಗಳ ಕುರಿತು ಈ ಕಾರ್ಯಾಗಾರದಲ್ಲಿ ವಿಸ್ತೃತ ಮಾಹಿತಿ ನೀಡಲಾಯಿತು. ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ, ಪಾಲಿಕೆಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

B.Y. Raghavendra ಸಿಗಂದೂರು ಸೇತುವೆಗೆ ಒಂದು ವರ್ಷ: ಜನತೆಗೆ ಕನಸು ನನಸಾದ ಹರ್ಷ : ಬಿ.ವೈ.ರಾಘವೇಂದ್ರ

0

B.Y. Raghavendra ಐತಿಹಾಸಿಕ ಸಿಗಂದೂರು ಚೌಡೇಶ್ವರಿ ಸೇತುವೆ ರಾಷ್ಟ್ರಕ್ಕೆ ಸಮರ್ಪಣೆಯಾಗಿ ಒಂದು ವರ್ಷ ಪೂರ್ಣಗೊಂಡಿದೆ.

ಶರಾವತಿ ಹಿನ್ನೀರಿನ ಮೇಲೆ ನಿರ್ಮಾಣಗೊಂಡ ಈ ಮಹತ್ವಾಕಾಂಕ್ಷಿ ಸೇತುವೆ ಕೇವಲ ಎರಡು ದಡಗಳನ್ನು ಸಂಪರ್ಕಿಸಿಲ್ಲ; ಬದಲಾಗಿ ದಶಕಗಳ ಕನಸನ್ನು ನನಸಾಗಿಸಿ, ಸಾಗರ, ಹೊಸನಗರ ಸೇರಿದಂತೆ ಮಲೆನಾಡಿನ ಜನರ ಬದುಕಿಗೆ ಹೊಸ ಚೈತನ್ಯ ತುಂಬಿದೆ. ಪ್ರವಾಸೋದ್ಯಮ, ವ್ಯಾಪಾರ, ಶಿಕ್ಷಣ ಹಾಗೂ ತುರ್ತು ಸೇವೆಗಳಿಗೂ ಈ ಸೇತುವೆ ಹೊಸ ದಿಕ್ಕು ನೀಡಿದೆ.

ಈ ಕನಸಿನ ಯೋಜನೆಗೆ ದೂರದೃಷ್ಟಿಯ ನಾಯಕತ್ವ ನೀಡಿ ಸಾಕಾರಗೊಳಿಸಿದ ಮಾನ್ಯ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಜಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರ ಹೃದಯತುಂಬಿ ಧನ್ಯತೆ ಅರ್ಪಿಸಿದ್ದಾರೆ.

ಈ ಯೋಜನೆಯನ್ನು ನಿರಂತರವಾಗಿ ಮುಂದಿಟ್ಟುಕೊಂಡು, ಜನರ ದಶಕಗಳ ಬೇಡಿಕೆಗೆ ಧ್ವನಿಯಾಗಿ ನಿಂತು, ಇದರ ಸಾಕಾರಕ್ಕೆ ಅಪಾರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೂ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳು ಎಂದು ಸ್ಮರಿಸಿದ್ದಾರೆ.

B.Y. Raghavendra ಈ ಸೇತುವೆಯ ನಿರ್ಮಾಣಕ್ಕಾಗಿ ಶ್ರಮಿಸಿದ ಎಲ್ಲ ಇಂಜಿನಿಯರ್‌ಗಳು, ಅಧಿಕಾರಿಗಳು, ಗುತ್ತಿಗೆದಾರರು, ಕಾರ್ಮಿಕರು ಹಾಗೂ ನೇರ-ಪರೋಕ್ಷವಾಗಿ ಕೈಜೋಡಿಸಿದ ಪ್ರತಿಯೊಬ್ಬರನ್ನೂ ಈ ಸಂದರ್ಭದಲ್ಲಿ ಗೌರವದಿಂದ ಸ್ಮರಿಸುತ್ತೇನೆ ಎಂದು ಕಾರಣರಾದ ಎಲ್ಲರಿಗೂ
ಆಭಾರಿಯಾಗಿದ್ದಾರೆ.

ಸಿಗಂದೂರು ಸೇತುವೆ ಮಲೆನಾಡಿನ ಅಭಿವೃದ್ಧಿಯ ಹೊಸ ಅಧ್ಯಾಯ. ಈ ಅಭಿವೃದ್ಧಿಯ ಪಯಣ ಇದೇ ಉತ್ಸಾಹದೊಂದಿಗೆ ಮುಂದುವರಿಯಲಿ ಎಂಬುದು ನಮ್ಮ ಸಂಕಲ್ಪ ಎಂದು ಮನದಾಳದ ಸಂತಸವನ್ನ ಸಂಸದ ರಾಘವೇಂದ್ರ ಸಾಮಾಜಿಕ ಮಾದ್ಯಮಗಳಲ್ಲಿ ಹಂಚಿಕೊಂಡಿದ್ದಾರೆ