Thursday, August 13, 2026
Thursday, August 13, 2026
Home Blog Page 255

Rudranna Harthikote ಆತಂಕ ಬೇಡ. ಸಕಾಲದಲ್ಲಿ ಮಾಹಿತಿ ಒದಗಿಸಿ- ರುದ್ರಣ್ಣ ಹರ್ತಿಕೋಟೆ.

0

Rudranna Harthikote ಮಾಹಿತಿಹಕ್ಕು ಅಧಿನಿಯಮದಡಿ ಅರ್ಜಿದಾರರು ಮಾಹಿತಿ ಕೋರಿ ತಮ್ಮ ಕಚೇರಿಗಳಿಗೆ ಸಲ್ಲಿಸುವ ಅರ್ಜಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ನಿಯಮಾನುಸಾರ ಸಕಾಲದಲ್ಲಿ ವಿಲೇವಾರಿ ಮಾಡುವಂತೆ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅವರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯೋಜಿತ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಕರ್ನಾಟಕ ಮಾಹಿತಿ ಆಯೋಗವು ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರ ಜಾಗೃತಿ ಕಾರ್ಯಕ್ರಮ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ವಿವಿಧ ಇಲಾಖೆಗಳ ಜವಾಬ್ದಾರಿಯುತ ಅಧಿಕಾರಿಗಳು ತಮ್ಮ ಕಚೇರಿಯ ಅಧಿಕಾರಿ ಸಿಬ್ಬಂಧಿಗಳ ವಿವರಗಳನ್ನು 4-1ಎ ಮತ್ತು 4-1ಬಿ ನಮೂನೆಗಳನ್ನು ಭರ್ತಿ ಮಾಡಿ ಪ್ರತಿ ವರ್ಷ ಇಲಾಖೆಯ ಜಾಲತಾಣದಲ್ಲಿ ಉನ್ನತೀಕರಿಸಿ ಸಾರ್ವಜನಿಕ ಮಾಹಿತಿಗೆ ಲಭ್ಯವಿರುವಂತೆ ಗಮನಿಸಬೇಕು. ಇದರಿಂದಾಗಿ ಇಲಾಖೆಗೆ ಮಾಹಿತಿ ಕೋರಿ ಬರುವ ಅರ್ಜಿಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿವೆ ಎಂದ ಅವರು ಅರ್ಜಿದಾರರು ಅರ್ಜಿ ಸಲ್ಲಿಸಿದ 30 ದಿನಗಳೊಳಗಾಗಿ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿಯನ್ನು ಒದಗಿಸಬೇಕೆಂದವರು ಸೂಚಿಸಿದರು.

Rudranna Harthikote ಮಾಹಿತಿ ಹಕ್ಕು ಅಧಿನಿಯಮದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿರುವಂತೆಯೇ ಇಲಾಖೆಗಳಿಗೆ ಸಲ್ಲಿಕೆಯಾಗುವ ಅರ್ಜಿಗಳಿಗೆ ಮಾಹಿತಿ ಒದಗಿಸುವಲ್ಲಿ ಅಧಿಕಾರಿಗಳಿಗೆ ಆತಂಕವೂ ಇಲ್ಲದಿಲ್ಲ. ಕಚೇರಿಯಲ್ಲಿ ಇರುವ ಮಾಹಿತಿಯನ್ನು ಅರ್ಜಿದಾರರಿಗೆ ಯಾವುದೇ ಆತಂಕವಿಲ್ಲದೇ ನೀಡಬೇಕು ತಪ್ಪಿದಲ್ಲಿ ಮೇಲ್ಮನವಿ ಪ್ರಾಧಿಕಾರಗಳಲ್ಲಿ ದಂಡನೆಗೆ ಗುರಿಯಾಗುವ ಸಂಭವವಿದೆ ಎಂದವರು ಎಚ್ಚರಿಸಿದರು.

ಮಾಹಿತಿ ಹಕ್ಕು ಅಧಿನಿಯಮದ ವ್ಯವಸ್ಥಿತ ಅನುಷ್ಠಾನದಿಂದ ಆಡಳಿತದಲ್ಲಿ ಪಾರದರ್ಶಕತೆ, ಮುಕ್ತತೆ. ತ್ವರಿತ ಸೇವೆ ಹಾಗೂ ನೌಕರರಲ್ಲಿ ಹೊಣೆಗಾರಿಕೆ ಹೆಚ್ಚಲಿದೆ ಎಂದ ಅವರು, ಕಾಯ್ದೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವುದು ಸಾರ್ವಜನಿಕ ಪ್ರಾಧಿಕಾರಗಳ ಜವಾಬ್ದಾರಿಯಾಗಿದೆ ಎಂದವರು ನುಡಿದರು.

ವೈಯಕ್ತಿಕ ದ್ವೇಷ ಕ್ಷುಲ್ಲಕ ಕಾರಣಕ್ಕೆ ಮಾಹಿತಿಹಕ್ಕು ಅಧಿನಿಯಮವನ್ನು ಬಳಸಿಕೊಳ್ಳಬಾರದು ಅಗತ್ಯತೆಗಳಿಗಾಗಿ ನಿಯಮಾನುಸಾರ ಅರ್ಜಿಯನ್ನು ಸಲ್ಲಿಸಿ ಮಾಹಿತಿ ಪಡೆದುಕೊಳ್ಳುವ ಮೂಲಕ ಸಾರ್ವಜನಿಕರು ಅಧಿನಿಯಮದ ಲಾಭ ಪಡೆದುಕೊಳ್ಳುವಂತೆ ಸೂಚಿಸಿದ ಅವರು, ಕಾಯ್ದೆಯ ದುರ್ಬಳಕೆ, ಅಧಿಕಾರಿಗಳ ವಿರುದ್ಧದ ಕ್ರಮಗಳಿಗಾಗಿ ಕಾಯ್ದೆಯನ್ನು ಬಳಸಿಕೊಳ್ಳುವಂತಾಗಬಾರದು ಎಂದರು.

150ಪದಗಳಿಗಿಂತ ಹೆಚ್ಚಿನ ವಿವರಣೆ ಹೊಂದಿರುವ ಅರ್ಜಿಗಳನ್ನು, ಪ್ರಶನೋತ್ತರ ರೂಪದ ಮಾಹಿತಿ ಕೋರಿರುವ ಅರ್ಜಿಗಳನ್ನು, ಅನೇಕ ಪ್ರಶ್ನೆಗಳಿರುವ ಅರ್ಜಿಗಳನ್ನು ಹಿಂಬರಹ ನೀಡಿ, ಹಿಂದಿರುಗಿಸುವಂತೆಯೂ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು

ತಾವು ಅಧಿಕಾರ ವಹಿಸಿಕೊಂಡ ಅತ್ಯಲ್ಪ ಅವಧಿಯಲ್ಲಿ ಆಯೋಗದಲ್ಲಿ ಬಾಕಿ ಉಳಿದಿದ್ದ 55000ಅರ್ಜಿಗಳ ವಿಲೇವಾರಿಗೆ ವೇಗ ದೊರೆತಿದೆ. ಈವರೆಗೆ ಅಂದಾಜು 25000ಅರ್ಜಿಗಳನ್ನು ವಿಲೇಗೊಳಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಲೇಯಾಗದೆ ಉಳಿದಿರುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇ ಮಾಡಲು ಹಾಗೂ ಅಧಿಕಾರಿಗಳಿಗೆ ಅಧಿನಿಯಮದ ಕುರಿತು ಅರಿವು ಮೂಡಿಸುವಲ್ಲಿ ಆಯೋಗದ ಆಯುಕ್ತರೆಲ್ಲರೂ ನಿರ್ಣಯ ಕೈಗೊಂಡು ಈಗಾಗಲೇ ರಾಜ್ಯದ 19ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಅಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ನಿಯಮ ಪಾಲಿಸದ ಹಾಗೂ ಸಕಾಲದಲ್ಲಿ ಮಾಹಿತಿಯನ್ನು ಅರ್ಜಿದಾರರಿಗೆ ಒದಗಿಸದಿರುವ 10754 ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಂದ 10. 20ಕೋಟಿ ಮೊತ್ತದ ದಂಡ ವಿಧಿಸಲಾಗಿದೆ. ಈ ಪೈಕಿ 3080 ಅಧಿಕಾರಿಗಳಿಂದ 2.70ಕೋಟಿ ರೂ.ಗಳ ದಂಡ ವಸೂಲಿ ಮಾಡಲಾಗಿದೆ ಶಿವಮೊಗಜಿಲ್ಲೆಯಲ್ಲಿ ಸಕಾಲದಲ್ಲಿ ಮಾಹಿತಿ ಒದಗಿಸದಿರುವ 140ಮಂದಿ ಅಧಿಕಾರಿಗಳಿಗೆ 14.40ಲಕ್ಷ ರೂ.ಗಳ ಡಂಡ ವಿಧಿಸಲಾಗಿದ್ದು, ಆ ಪೈಕಿ 30ಅಧಿಕಾರಿಗಳಿಂದ 4.12ಲಕ್ಷ ರೂ.ಗಳ ಡಂಡ ವಸೂಲಿ ಮಾಡಲಾಗಿದೆ. ದಂಡ ಪಾವತಿ ಮಾಡದಿರುವ ಅಧಿಕಾರಿಗಳಿಗೆ ನಿವೃತ್ತಿಯ ನಂತರದ ಉಪಾಧಾನ ಪಡೆಯುವಲ್ಲಿ ತೀವ್ರ ತರಹದ ಅಡಚಣೆ ಉಂಟಾಗಲಿದೆ ಎಂದ ಅವರು ರಾಜ್ಯದಲ್ಲಿ ಬೆಂಗಳೂರುನಗರ, ಬೆಳಗಾವಿ, ರಾಯಚೂರು ನಂತರದಲ್ಲಿ ಶಿವಮೊಗ್ಗ ಜಿಲ್ಲೆ 22ನೇ ಸ್ಥಾನ ಪಡೆದಿದೆ ಎಂದರು.

ಮಾಹಿತಿಹಕ್ಕು ಅಧಿನಿಯಮದಡಿ ಅರ್ಜಿ ಸಲ್ಲಿಕೆಯಾಗುವ ಇಲಾಖೆಗಳಲ್ಲಿ ಗ್ರಾಮೀಣಾಭಿವೃದ್ಧಿ, ಕಂದಾಯ, ನಗರಾಭಿವೃದ್ಧಿ, ಶಿಕ್ಷಣ, ಲೋಕೋಪಯೋಗಿ ಮುಂತಾದ ಇಲಾಖೆಗಳು ಅಗ್ರಪಂಕ್ತಿಯಲ್ಲಿವೆಎಂದರು.

ಮುಂದಿನ ದಿನಗಳಲ್ಲಿ ಅರ್ಜಿ ವಿಲೇಯಾಗದೇ ಉಳಿದಿರುವ ಹಾಗೂ ಮೇಲ್ಮನವಿ ಪ್ರಾಧಿಕಾರಕ್ಕೆ ಬರುವ ಅರ್ಜಿಗಳನ್ನು ಆಯಾ ಜಿಲ್ಲಾ ಕೇಂದ್ರದಲ್ಲಿಯೇ ವಿಲೇವಾರಿ ಮಾಡಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಜನವರಿ ಮೊದಲ ವಾರದಲ್ಲಿ ಬೆಳಗಾವಿಗೆ ಭೇಟಿ ನೀಡಿ, ಅಲ್ಲಿನ ಆಯುಕ್ತರ ಕಚೇರಿ ವರದಿ ಪಡೆದು, ಕ್ರಮ ವಹಿಸಲಾಗುವುದು ಎಂದವರು ನುಡಿದರು.

ಕೆ.ಡಿ.ಪಿ ಸಭೆಗಳಲ್ಲಿ ಮಾಹಿತಿ ಕಾಯ್ದೆಯ ಪ್ರಗತಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಸೂಚಿಸಲಾಗಿದೆ. ಸರ್ಕಾರಿ ಪಠ್ಯಕ್ರಮದಲ್ಲಿ ಮಾಹಿತಿ ಕಾಯ್ದೆ ಪಠ್ಯವಿಷಯವನ್ನಾಗಿ ಅಳವಡಿಸಲು ಹಾಗೂ ಇಲಾಖಾ ಪರೀಕ್ಷೆಗಳಲ್ಲಿ ಮಾಹಿತಿಕಾಯ್ದೆಯ ವಿಷಯವನ್ನು ಅಳವಡಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದರು.

ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಮಾಹಿತಿ ಆಯೋಗದ ಆಯುಕ್ತ ಎನ್.ರಾಜಶೇಖರ್ ಅವರು ಮಾತನಾಡಿ, ಮಾಹಿತಿ ಕಾಯ್ದೆ ಪ್ರಬಲವಾದ ಮತ್ತು ಸರಳವಾದ ಕಾಯಿದೆಯಾಗಿದ್ದು ಜನಸ್ನೇಹಿಯಾಗಿದೆ. ಮಾತ್ರವಲ್ಲ ಇದೂ ಕೂಡ ಸಂವಿಧಾನದತ್ತವಾದ ಹಕ್ಕಾಗಿದೆ. ಅಧಿಕಾರಿಗಳು ಕೋರಿಕೆಯ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ಒದಗಿಸುವಂತೆ ಸೂಚಿಸಿದ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಅರ್ಜಿಗಳ ವಿಲೇವಾರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ತಮ್ಮ ಜಾಲತಾಣದಲ್ಲಿ ಪ್ರಕಟಿಸಿದಲ್ಲಿ ಇಲಾಖೆಗೆ ಬರುವ ಅರ್ಜಿಗಳ ಸಂಖ್ಯೆಯಲ್ಲಿ ಇಳಿಮುಖವಾಗಲಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಹುತೇಕ ಇಲಾಖಾ ಅಧಿಕಾರಿಗಳಿಗೆ ಮಾಹಿತಿ ಕಾಯ್ದೆಯ ಅರಿವಿನ ಕೊರತೆ ಇರುವುದನ್ನು ಗಮನಿಸಲಾಗಿದೆ. ಅದಕ್ಕಾಗಿ ಕಾರ್ಯಾಗಾರಗಳನ್ನು ಆಯೋಜಿಸುವ ಹಾಗೂ ಅವರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ ಸೇರಿದಂತೆ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಮೇಲ್ಮನವಿ ಪ್ರಾಧಿಕಾರಿಗಳು ಉಪಸ್ಥಿತರಿದ್ದರು

DC Office ಡಿಸೆಂಬರ್ 26. ವೆಬೆಕ್ಸ್ ಮೂಲಕ ಪಿಂಚಣಿ ಅದಾಲತ್.

0

DC Office ಡಿ. 26 ರಂದು ಬೆಳಗ್ಗೆ 11.11ಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಪಿಂಚಣೆ ಅದಾಲತ್ ಹಾಗೂ ಮಧ್ಯಾಹ್ನ ಜಿಪಿಎಫ್ ಅದಾಲತ್ ಕಾರ್ಯಕ್ರಮವನ್ನು ವೆಬೆಕ್ಸ್ ಮೂಲಕ ಹಮ್ಮಿಕೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಪಿಂಚಣಿದಾರರು ಡಿ.26 ರಂದ ಬೆಳಗ್ಗೆ 11.00ಕ್ಕೆ ಎ.ಸಿ.ಕಚೇರಿ, ಕೆ-ಸ್ವಾನ್ ವಿ.ಸಿ. ಸಭಾಂಗಣದಲ್ಲಿ ಹಾಜರಾಗಿ ರಾಜ್ಯ ಸೇವಾ ಹಾಗೂ ಕುಟುಂಬ ಪಿಂಚಣಿಗೆ ಸಂಬಂಧಿಸಿದ ತಮ್ಮ ಕುಂದು ಕೊರತೆಗಳನ್ನು ತಿಳಿಸಬಹುದಾಗಿದೆ. ಅಥವಾ ಜಿಲ್ಲಾ ಖಜಾನೆಯ ಉಪನಿರ್ದೇಶಕರಿಗೆ ಮುಂಚಿತವಾಗಿ ವಿವರಗಳನ್ನು ನೀಡಬಹುದಾಗಿದೆ ಎಂದು ಜಿಲ್ಲಾ ಖಜಾನೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Karnataka Rakshana Vedike  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಗೌರವ ಸನ್ಮಾನ

0

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಜನಮನ ಸಂಘಟನೆ ಇಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪದ ಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಹೆಚ್, ಯು, ವೈದ್ಯನಾಥ್ ಹಾಗೂ ಪ್ರಧಾನ ಕಾರ್ಯದರ್ಶಿ ಆದ ಆರ್, ಎಸ್ ಹಾಲಸ್ವಾಮಿ ಮತ್ತು ಉಪಾಧ್ಯಕ್ಷರು ಕೆ ,ಎಸ್, ಹುಚ್ರಾಯಪ್ಪ, ಕೆ, ಸತ್ಯನಾರಾಯಣಪ್ಪ ದೇಶಾದ್ರಿ ಹೊಸ್ಮನಿ ಕಾರ್ಯದರ್ಶಿಗಳು ದೀಪಕ್ ಸಾಗರ್, ರಾಜೇಶ್ ಕಾಮತ್, ಕೆ, ಆರ್ ,ಸೋಮನಾಥ್ ಖಜಾಂಚಿ, ಎಸ್ ,ಆರ್, ರೋಹಿತ್ ರಾಜ್ಯ ಕಾರ್ಯಕಾರಣಿ ಸದಸ್ಯರು ಕೆ, ವಿ, ಶಿವಕುಮಾರ್ ಸಂಘಟನಾ ಕಾರ್ಯದರ್ಶಿಗಳು ಗಾ,ರಾ ಶ್ರೀನಿವಾಸ್, ರಾಘವೇಂದ್ರ ಶೆಟ್ಟಿ ರಾಷ್ಟ್ರೀಯ ಮಂಡಳಿ ಸದಸ್ಯರು ಬಂಡಿಗಡಿ ಆರ್, ನಂಜುಂಡಪ್ಪ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳು ಹಾಗೂ ತಾಲೂಕು ಪ್ರತಿನಿಧಿಗಳು ಎಲ್ಲಾ ಪದಾಧಿಕಾರಿಗಳಿಗೂ ಗೌರವಿಸಿ ಸನ್ಮಾನಿಸಲಾಯಿತು ಶುಭ ಕೋರುವರು ಕರ್ನಾಟಕ ರಕ್ಷಣಾ ವೇದಿಕೆ ಜನಮನ ಸಂಘಟನೆ ಯ ರಾಜ್ಯಾಧ್ಯಕ್ಷರು ಕೆ, ಜನಾರ್ಧನ Karnataka Rakshana Vedike ಸಾಲಿಯಾನ್, ಉಪಾಧ್ಯಕ್ಷರು ಯಶವಂತ್ ಖಜಾಂಚಿ ಸಿದ್ದಣ್ಣಯ್ಯ, ಪ್ರಧಾನ ಕಾರ್ಯದರ್ಶಿ ಎನ್, ಮಾಲತೇಶ್ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಪ್ರಪುಲ್ಲ ಚಂದ್ರು ಮಹಿಳಾ ಸಂಘದ ಜಿಲ್ಲಾ ಗೌರವ ಅಧ್ಯಕ್ಷರು ಡಾಕ್ಟರ್ ವೀಣಾ ಅಧ್ಯಕ್ಷರು ಸುಮಾ ನಗರ ಅಧ್ಯಕ್ಷರು ರಾಮಣ್ಣ ಪದಾಧಿಕಾರಿಗಳಾದ ವಸಂತ, ಪುಷ್ಪ, ಶೋಭಾ, ಅರುಣ್ ಕುಮಾರ್, ಮಲ್ಲಯ್ಯ ಹಿರೇಮಠ್, ಮಂಜು ನಾಯ್ಕ, ಅಶೋಕ್, ರಾಮು ಜಿ, ಮಂಜುನಾಥ್, ಧನ ಶೇಖರ್, ಮನು ಕುಮಾರ್, ರಾಮು ವಿ, ಗಣೇಶ್ ನಾಯಕ, ರಾಮಣ್ಣ ಎ, ಪುಷ್ಪ ಒಡೆಯರ್, ರಾಮು ಹೆಚ್, ಸಂಗಮೇಶ್, ಇನ್ನು ಮುಂತಾದವರು ಭಾಗವಹಿಸಿದ್ದರು

KFDV Virus ಮಂಗನ ಕಾಯಿಲೆ ಶಾಶ್ವತ ಪರಿಹಾರಕ್ಕೆ ಕೇಂದ್ರ ಆರೋಗ್ಯ ಸಚಿವರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮನವಿ.

0

KFDV Virus ಮಲೆನಾಡು ಪ್ರದೇಶದ ರೈತರು, ಅರಣ್ಯವಾಸಿಗಳು ಹಾಗೂ ಗ್ರಾಮೀಣ ಸಮುದಾಯಗಳು ವರ್ಷಗಳಿಂದ ಎದುರಿಸುತ್ತಿರುವ “ಮಂಗನ ಕಾಯಿಲೆ (KFD)” ಎಂಬ ಗಂಭೀರ ಕಾಯಿಲೆಗೆ ಶಾಶ್ವತ ಮತ್ತು ವೈಜ್ಞಾನಿಕ ಪರಿಹಾರ ದೊರಕಬೇಕೆಂಬ ದೃಢ ನಿಲುವಿನೊಂದಿಗೆ, ಕೇಂದ್ರ ಆರೋಗ್ಯ ಸಚಿವರಾದ ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಸಮಗ್ರ ಚರ್ಚೆ ನಡೆಸಲಾಯಿತು.

ಮಂಗನ ಕಾಯಿಲೆಯಿಂದ ಆಗುತ್ತಿರುವ ಜೀವ ಹಾನಿ ಹಾಗೂ ಜನಜೀವನದ ಮೇಲೆ ಬೀರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಿ,
ಪರಿಣಾಮಕಾರಿ ಲಸಿಕೆ ಅಭಿವೃದ್ಧಿಗೆ ತ್ವರಿತ ಕ್ರಮ, ICMR ಹಾಗೂ NIV ಮೂಲಕ ಸಂಶೋಧನೆಗೆ ವೇಗ, ಶಿವಮೊಗ್ಗದಲ್ಲಿ NIV ಉಪ-ಕೇಂದ್ರ ಸ್ಥಾಪನೆ ಮತ್ತು ಪ್ರಾದೇಶಿಕ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವಿಕೆ ಕುರಿತು ಕೇಂದ್ರ ಸಚಿವರ ಗಮನಕ್ಕೆ ತರಲಾಗಿದೆ.

KFDV Virus ಮಲೆನಾಡಿನ ಜನರು ಇನ್ನು ಮುಂದೆ ಭಯದಲ್ಲಿ ಬದುಕುವ ಪರಿಸ್ಥಿತಿ ಬಾರದಂತೆ, “ಒಂದು ಆರೋಗ್ಯ” (One Health) ದೃಷ್ಟಿಕೋನದ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಶಾಶ್ವತ ಪರಿಹಾರ ದೊರಕಿಸುವಂತೆ ಮನವಿ‌ ಸಲ್ಲಿಸಲಾಯಿತು.

ಮಂಗನ ಕಾಯಿಲೆ ನಿರ್ಮೂಲನೆಗೆ ಅಗತ್ಯವಾದ ವೈಜ್ಞಾನಿಕ ನೆರವು, ಆರ್ಥಿಕ ಬೆಂಬಲ ಹಾಗೂ ಎಲ್ಲಾ ಅಗತ್ಯ ಕ್ರಮಗಳನ್ನು ಅತ್ಯಂತ ಶೀಘ್ರವಾಗಿ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರದಿಂದ ಖಚಿತ ಭರವಸೆ ನೀಡಲಾಗಿದೆ. ಈ ಮಹತ್ವದ ವಿಷಯಕ್ಕೆ ತಕ್ಷಣ ಸ್ಪಂದಿಸಿ, ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ಆರೋಗ್ಯ ಸಚಿವರಾದ ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರಿಗೆ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳು.

Dist Health & Family welfare ಹಿರಿಯ ಕ್ಷಯರೋಗ ಲ್ಯಾಬ್ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

0

Dist Health & Family welfare ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯ ರೋಗ ವಿಭಾಗವು ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಮತ್ತು ಹೊಸನಗರ ತಾಲೂಕುಗಳಲ್ಲಿ ಒಳಗುತ್ತಿಗೆ ಆಧಾರದಲ್ಲಿ ಒಂದು ವರ್ಷ ಅವಧಿಗೆ ಹಿರಿಯ ಕ್ಷಯರೋಗ ಪ್ರಯೋಗ ಶಾಲಾ ಮೇಲ್ವಿಚಾರಕರ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪದವಿ ಅಥವಾ ಮೆಡಿಕಲ್ ಲ್ಯಾಬರೋಟರಿ ಟೆಕ್ನಾಲಜಿಯಲ್ಲಿ ಡಿಪ್ಲಮೊ ಹೊಂದಿರುವ, ಕಂಪ್ಯೂಟರ್ ಬೆಸಿಕ್ ಜ್ಞಾನ ಹಾಗೂ ಪ್ರಮಾಣ ಪತ್ರ ಹೊಂದಿರುವ, ದ್ವಿಚಕ್ರ ವಾಹನ ಚಾಲನೆ ಬರುವ, ಕನಿಷ್ಠ ಒಂದು ವರ್ಷ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೆಲಸ ಮಾಡಿದ ಅನುಭವವಿರುವವರಿಗೆ ಹಾಗೂ ಸ್ಥಳೀಯ ಅಬ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮಾಸಿಕ ವೇತನ ರೂ. 21 ಸಾವಿರಗಳನ್ನು ನೀಡಲಾಗುವುದು.
Dist Health & Family welfare ನಿಗದಿತ ನಮೂನ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಜಿಲ್ಲಾ ಕ್ಷಯರೋಗ ವಿಭಾಗ, ಮೆಗ್ಗಾನ್ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿ ಡಿ.30 ರೊಳಗೆ ಪಡೆದು, ಭರ್ತಿಮಾಡಿದ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಲಗತ್ತಿಸಿ ದಿ:02/01/2026 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ, ಮುಕುಂದ ಎಸ್.ಎನ್. ದೂ.ಸಂ.: 9448320005 ಇವರನ್ನು ಸಂಪರ್ಕಿಸುವುದು.

B. Y. Raghavendra ಎಲ್ಲರೂ ಧ್ಯಾನವನ್ನು ನಿತ್ಯದ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳೋಣ- ಬಿ.ವೈ.ರಾಘವೇಂದ್ರ.

0

B. Y. Raghavendra ಶಿವಮೊಗ್ಗದ ಪಿಇಎಸ್‌ ಕ್ಯಾಂಪಸ್‌ನ ಪ್ರೇರಣಾ ಕನ್ವೆನ್ನನ್ ಹಾಲ್‌ನಲ್ಲಿ ಪಿಎಸ್‌ಎಸ್‌ಎಂ ಪಿರಮಿಡ್ ವಲ್ಡ್ ಫೌಂಡೇಷನ್ ಬೆಂಗಳೂರು, ಪ್ರೇರಣಾ ಎಜುಕೇಷನಲ್ ಅಂಡ್ ಸೋಶಿಯಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವಧ್ಯಾನ ದಿನದ ಅಂಗವಾಗಿ ಆಯೋಜಿಸಲಾದ “ಶಿವಮೊಗ್ಗ ನಾದ ಧ್ಯಾನ ಚಕ್ರ – 7” ಕಾರ್ಯಕ್ರಮವನ್ನು ಸಂಧ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಧ್ಯಾನ ತರಬೇತಿದಾರರಾದ ಡಾ.ಅಯ್ಯಪ್ಪ ಪಿಂಡಿ ಅವರು, ಯೋಗ ಹಾಗೂ ಧ್ಯಾನ ಶಿಕ್ಷಕರು, ಸಮಾಜಸೇವಕರು, ಸ್ಥಳೀಯ ನಾಯಕರು, ಯುವಜನರು ಮತ್ತು ನಾಗರಿಕರು ಉಪಸ್ಥಿತರಿದ್ದರು.

B. Y. Raghavendra ಧ್ಯಾನವು ಮಾನಸಿಕ ಆರೋಗ್ಯ, ಶಾಂತಿ ಮತ್ತು ಜೀವನದಲ್ಲಿ ಸಮತೋಲನವನ್ನು ತರುವ ಮಹತ್ವದ ಸಾಧನ. ವಿಶ್ವ ಧ್ಯಾನ ದಿನದ ಅಂಗವಾಗಿ ಎಲ್ಲರೂ ಧ್ಯಾನವನ್ನು ದಿನನಿತ್ಯದ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳೋಣ ಎಂದು ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಆತ್ಮೀಯ ಕರೆಕೊಟ್ಟರು.

B.Y.Raghavendra “ಜಡ್ಕಲ್ ಗ್ರಾಮೋತ್ಸವ”ಕ್ಕೆ ಸಂಸದ ರಾಘವೇಂದ್ರರಿಂದ ಚಾಲನೆ

0

B.Y.Raghavendra ಬೈಂದೂರು ಉತ್ಸವ – 2026 ಇದರ ಅಂಗವಾಗಿ ಗ್ರಾಮ ಪಂಚಾಯತ್‌ ಜಡ್ಕಲ್‌ ಇದರ ನೇತೃತ್ವದಲ್ಲಿ ನಡೆದ “ಜಡ್ಕಲ್‌ ಗ್ರಾಮೋತ್ಸವ – ಆರೋಗ್ಯ ಮೇಳ, ಉಚಿತ ಆರೋಗ್ಯ ತಪಾಸಣಾ ಶಿಬಿರ” ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದ ಬಿ.ವೈ‌.ರಾಘವೇಂದ್ರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು

DC Shivamogga ಜನಹಿತ ಯೋಜನೆಗಳ ಅನುಷ್ಠಾನ: ಕಂದಾಯ & ಅರಣ್ಯ ಇಲಾಖೆಗಳ ಸಮನ್ವಯತೆ ಮುಖ್ಯ- ಡೀಸಿ ಗುರುದತ್ತ ಹೆಗಡೆ

0

DC Shivamogga ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ರೂಪಿಸಲಾಗಿರುವ ಅನೇಕ ಜನಹಿತ ಯೋಜನೆಗಳ ವ್ಯವಸ್ಥಿತ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಕಂದಾಯ ಮತ್ತು ಅರಣ್ಯ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಅರಣ್ಯಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೆಲವು ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗಿದ್ದು, ಸಕಾಲದಲ್ಲಿ ಯೋಜನೆಗಳು ಪೂರ್ಣಗೊಳ್ಳದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಆಯಾ ಇಲಾಖೆಗಳ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಲು ಹಾಗೂ ಎದುರಾಗಬಹುದಾದ ಸಮಸ್ಯೆಗಳ ಇತ್ಯರ್ಥಕ್ಕೆ ಪರಸ್ಪರರ ನಡುವೆ ಸಮನ್ವಯತೆ ಸಾಧಿಸಿಕೊಳ್ಳುವುದಲ್ಲದೆ ಕಾಲಕಾಲಕ್ಕೆ ಸಭೆಗಳನ್ನು ನಡೆಸುವಂತೆ ಅವರು ಸಲಹೆ ನೀಡಿದರು. ವಿಶೇಷವಾಗಿ ಹಲವು ದಶಕಗಳಿಂದ ಇತ್ಯರ್ಥಗೊಳ್ಳದೇ ಉಳಿದಿರುವ ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವವರಿಗೆ ನಿಯಮಾನುಸಾರ ದಾಖಲೆಗಳನ್ನು ಪರಿಶೀಲಿಸಿ, ಭೂಮಂಜೂರಾತಿಗೆ ಕ್ರಮ ವಹಿಸಬೇಕಾದ ತುರ್ತು ಅಗತ್ಯವಿರುವುದನ್ನು ತಿಳಿಸಿದ ಅವರು, ಈಗಾಗಲೇ ನಿಯಮಾನುಸಾರ ಗುರುತಿಸಲಾಗಿರುವ ಅರಣ್ಯ ಪ್ರದೇಶದಲ್ಲಿನ ಸಾಗುವಳಿದಾರರ ಸಮಸ್ಯೆಗೆ ನಿರ್ಣಾಯಕ ತೀರ್ಮಾನ ಕೈಗೊಳ್ಳುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಸಂಬಂಧಿಸಿದಂತೆ 9129ಎಕರೆಗೆ ಜಂಟಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಅದಕ್ಕೆ ಸಂಬಂಧಿಸಿದಂತೆ ಸರ್ವೇಕಾರ್ಯದಿಂದ ಕೈಬಿಟ್ಟು ಹೋಗಿರುವ ಸಂತ್ರಸ್ಥರು ಆಯಾ ತಾಲೂಕಿನ ತಹಶೀಲ್ದಾರರು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಿಗೆ ನೀಡಿರುವ ಅರ್ಜಿಗಳನ್ನು ಕ್ರಮಕ್ಕಾಗಿ ತಹಶೀಲ್ದಾರರಿಗೆ ಈ ಹಿಂದೆಯೇ ಸೂಚಿಸಲಾಗಿತ್ತು.

ಅದಕ್ಕಾಗಿ ವಿನ್ಯಾಸಗೊಳಿಸಲಾದ ಮಾದರಿ ನಮೂನೆಯನ್ನು ಸಹ ಈಗಾಗಲೇ ನೀಡಲಾಗಿದೆ. ಅವರ ವರದಿಯನ್ನು ಸೋಮವಾರದೊಳಗಾಗಿ ಪಡೆದು ಪರಿಶೀಲಿಸಿ, ಕ್ರಮಕ್ಕಾಗಿ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು. ಹಲವು ಯೋಜನೆಗಳ ಅನುಷ್ಠಾನದಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸಮಸ್ಯಾತ್ಮಕ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲಿಸಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ಮೊಬೈಲ್‌ಸ್ಥಾವರ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಜಲಜೀವನ ಮಿಷನ್‌, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ, ರಸ್ತೆ ಅಗಲೀಕರಣ, ಅರಣ್ಯೇತರ ಪ್ರದೇಶಗಳಲ್ಲಿನ ಮರಗಳ ಕಟಾವಣೆ, ಮೇಲ್ಸೇತುವೆಗಳ ನಿರ್ಮಾಣ ಮುಂತಾದ ಕಾಮಗಾರಿಗಳಲ್ಲಿ ವಿಳಂಬವಾಗಿದ್ದು, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

DC Shivamogga
ಮೊಬೈಲ್‌ಸ್ಥಾವರಗಳ ನಿರ್ಮಾಣ ಕಾರ್ಯದಲ್ಲಿ ಸಮಸ್ಯೆ ಎದುರಾಗಿರುವ ಸ್ಥಳಗಳು ಮತ್ತು ಅಲ್ಲಿನ ತಾಂತ್ರಿಕ ಸಮಸ್ಯೆಗಳ ಕುರಿತು ಭಾರತ ಸಂಚಾರ ನಿಗಮದ ಅಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಚರ್ಚಿಸಿ, ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಕಂದಾಯ ಮತ್ತು ಅರಣ್ಯ ಇಲಾಖಾಧಿಕಾರಿಗಳು ಬಿ.ಎಸ್.ಎನ್.ಎಲ್‌.ನ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದ ಅವರು, ಸ್ಥಾವರಗಳ ನಿರ್ಮಾಣ ಕಾರ್ಯಕ್ಕೆ ಅಡ್ಡಿಪಡಿಸುವ ಸ್ಥಳಗಳಿದ್ದಲ್ಲಿ ಸ್ಥಳೀಯ ತಹಶೀಲ್ದಾರರು ಹಾಗೂ ಪೊಲೀಸ್‌ಸಹಕಾರ ಪಡೆದು, ಸ್ಥಾವರಗಳನ್ನು ನಿರ್ಮಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯ ಹಲವು ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅರಣ್ಯ ಭೂಮಿ ಇರುವ ಕೆಲವು ಕಡೆಗಳಲ್ಲಿ ಹೆದ್ದಾರಿ ಕಾಮಗಾರಿ ಕೈಗೊಳ್ಳುವಲ್ಲಿ ತೀವ್ರ ತರಹದ ಅಡಚಣೆ ಉಂಟಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಹೊಸೂರು ಸಮೀಪ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ, ಮೈಸೂರು ಕಾಗದ ಕಾರ್ಖಾನೆಯ ವ್ಯಾಪ್ತಿಗೊಳಪಡುವ ಮರಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಅವುಗಳ ಕಟಾವಿಗೆ ಅನುಮತಿ, ರಾಷ್ಟ್ರೀಯ ಹೆದ್ದಾರಿ-69ರ ನಿರ್ಮಾಣ ಕಾರ್ಯ ಹಾಗೂ 69ರ ಅರಣ್ಯೇತರ ಪ್ರದೇಶದಲ್ಲಿನ ಮರಗಳ ಕಟಾವಿಗೆ ಇಲಾಖೆಗೆ ಶುಲ್ಕವನ್ನು ಪಾವತಿಸಲಾಗಿದ್ದು, ಅವುಗಳ ಕಟಾವಿಗೆ ಅನುಮತಿ ನೀಡುವಂತೆ ಮುಖ್ಯ ಅರಣ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಜಿಲ್ಲೆಯ ಹೊಸನಗರ ತಾಲೂಕು ಸೇರಿದಂತೆ ಆಯ್ದ ವಿವಿಧ ಗ್ರಾಮೀಣ ಅರಣ್ಯ ಪ್ರದೇಶಗಳಲ್ಲಿ ಶುದ್ಧಕುಡಿಯುವ ನೀರನ್ನು ಪೂರೈಸಲು ಕುಡಿಯುವ ನೀರಿನ ಸ್ಥಾವರಗಳ ನಿರ್ಮಾಣಕ್ಕೆ, ಶುದ್ಧ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ, ಘನ ತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ಮಾಣಕ್ಕೆ ಹಾಗೂ ಗ್ರಾಮಠಾಣ ಪ್ರದೇಶಗಳಲ್ಲಿ ಬೆಳೆದು ನಿಂತ ಮರಗಳ ಕಟಾವಿಗೆ ಅರಣ್ಯ ಇಲಾಖೆಯು ಅನುಮತಿ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್.ಹೇಮಂತ್‌ ಅವರು ತಿಳಿಸಿದ್ದಾರೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಟಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದ್ದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಕಾಲದಲ್ಲಿ ಅನುಮತಿ ಪಡೆದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು ಶಿವಮೊಗ್ಗ ಬಿಸಿಎಫ್ ಹನುಮಂತಪ್ಪ ನವರು ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಅವರು ಮಾತನಾಡಿ, ಹುಲಿಕಲ್‌ಘಾಟಿಯಲ್ಲಿ ರಸ್ತೆ ಕಾಮಗಾರಿ ಕಾರ್ಯಾರಂಭಗೊಳಿಸಲು ಅಗತ್ಯ ದಾಖಲೆಗಳೊಂದಿಗೆ ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸಿದಲ್ಲಿ ಪರಿಶೀಲಿಸಿ ಅನುಮತಿ ನೀಡಲು ಕ್ರಮವಹಿಸಲಾಗುವುದು ಎಂದರು. ಕಂದಾಯ ಮತ್ತು ಅರಣ್ಯ ಭೂಮಿಯ ವೆತ್ಯಾಸಗಳನ್ನು ಗುರುತಿಸಲು ನ್ಯಾಯಾಲಯದ ಮಾರ್ಗದರ್ಶನದಂತೆ ನೂತನ ತಂತ್ರಾಂಶವನ್ನು ರೂಪಿಸಿ, ಜಂಟಿ ಸರ್ವೇ ಕಾರ್ಯಕ್ಕೆ ಸರ್ಕಾರವು ಅನುಮತಿ ನೀಡಿದೆ. ಇಂತಹ ಸ್ಥಳಗಳಲ್ಲಿ ಕಂಡುಬರುವ ಮನೆ, ರಸ್ತೆ, ಶಾಲೆ, ಕಾಲೇಜು ಇತ್ಯಾದಿಗಳಿದ್ದಲ್ಲಿ ಅವುಗಳನ್ನು ಸರ್ವೇ ಕಾರ್ಯದಿಂದ ಕೈಬಿಡಲು ಅವಕಾಶ ನೀಡಿದೆ. ಈ ತಂತ್ರಾಂಶವನ್ನು ಕೆಳಹಂತ, ತಹಶೀಲ್ದಾರರ ಹಂತ ಹಾಗೂ ಹಿರಿಯ ಅಧಿಕಾರಿಗಳ ಹಂತದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗಿದೆ ಎಂದರು.

ಜಂಟಿ ಸರ್ವೇಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಕಂದಾಯಾಧಿಕಾರಿಗಳು, ಸರ್ವೇಯರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಡಿಸೆಂಬರ್‌ಮತ್ತು 26ರಂದು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ತರಬೇತಿಯ ನಂತರ ಸರ್ವೇ ಕಾರ್ಯ ಆರಂಭಗೊಳ್ಳಲಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ
ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಪ್ರೊಬೇಷನರ್‌ಅಧಿಕಾರಿ ಬಾಬು ರಾಜೇಂದ್ರಕುಮಾರ್‌, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಜ್ಜಯ್ಯ, ಪ್ರಸನ್ನ ಪಟಗಾರ್(ವನ್ಯಜೀವಿ), ಮೋಹನ್‌ಕುಮಾರ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು, ಎಲ್ಲಾ ತಾಲೂಕುಗಳ ತಹಶೀಲ್ದಾರರು ಸೇರಿದಂತೆ ಕಂದಾಯ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

“Deemed Forest” (ಡೀಮ್ಡ್ ಫಾರೆಸ್ಟ್) ಎಂದರೆ, ಅಧಿಕೃತವಾಗಿ ಅರಣ್ಯ ಎಂದು ಘೋಷಿಸದಿದ್ದರೂ, ಅರಣ್ಯದ ಗುಣಲಕ್ಷಣಗಳನ್ನು ಹೊಂದಿರುವ ಭೂಮಿ; ಇದು 1996ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಬಂದ ಪರಿಕಲ್ಪನೆಯಾಗಿದೆ.

ಪರಿಭಾಷೆ: ಕಾನೂನುಬದ್ಧವಾಗಿ ಅರಣ್ಯವೆಂದು ಗುರುತಿಸದಿದ್ದರೂ, ದಟ್ಟವಾದ ಮರಗಳಿಂದ ಕೂಡಿರುವ, ಅರಣ್ಯದಂತೆ ಕಾಣುವ ಭೂಮಿಯನ್ನು ‘ಡೀಮ್ಡ್ ಫಾರೆಸ್ಟ್’ ಎನ್ನುತ್ತಾರೆ.

ಪ್ರಸ್ತುತ ಕರ್ನಾಟಕದಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸದ ದಟ್ಟ ಅರಣ್ಯ ಪ್ರದೇಶಗಳು, ಅನುದಾನಿತರಿಗೆ ಹಂಚಿದರೂ ಸಾಗುವಳಿ ಮಾಡದ ಭೂಮಿ ಇತ್ಯಾದಿಗಳನ್ನು ‘ಡೀಮ್ಡ್ ಫಾರೆಸ್ಟ್’ ಎಂದು ಗುರುತಿಸಲಾಯಿತು.

‘ಡೀಮ್ಡ್ ಫಾರೆಸ್ಟ್’ ಎಂದರೆ, ದಾಖಲೆಗಳಲ್ಲಿ ‘ಅರಣ್ಯ’ ಎಂದು ನಮೂದಾಗದಿದ್ದರೂ, ವಾಸ್ತವವಾಗಿ ಅರಣ್ಯದಂತೆ ಇರುವ ಭೂಮಿ, ಇದನ್ನು 1996ರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಗುರುತಿಸಲಾಗಿತ್ತು.

B.Y.Raghavendra ಡಿಸೆಂಬರ್ 24.ಶಿವಮೊಗ್ಗದಲ್ಲಿ ಸಂಸದ್ ಕ್ರೀಡೋತ್ಸವ-2025 ಭಾಗವಹಿಸಲು ಸಂಸದ ರಾಘವೇಂದ್ರ ಕರೆ

0

B.Y.Raghavendra ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ದೇಶದ ಯುವಕರಲ್ಲಿ ಕ್ರೀಡೆ, ಶಿಸ್ತು ಮತ್ತು ನಾಯಕತ್ವವನ್ನು ಉತ್ತೇಜಿಸುವ ಉದ್ದೇಶದಿಂದ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ “ಸಂಸದ್ ಕ್ರೀಡಾ ಮಹೋತ್ಸವ” ಆರಂಭಿಸಲಾಗಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

ಈ ಅಭಿಯಾನದ ಅಂಗವಾಗಿ ಇದೇ ಡಿಸೆಂಬರ್ 24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ನಮ್ಮ ಕ್ಷೇತ್ರದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಂಡು ಭಾಗವಹಿಸಿ, ಈ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.

Madhu Bangarappa ಮುಂದಿನ ಶೈಕ್ಷಣಿಕ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕಾತಿ- ಮಧು ಬಂಗಾರಪ್ಪ

0

Madhu Bangarappa ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಉತ್ತರಿಸಿದರು.

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ.

ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

Madhu Bangarappa ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ₹83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ₹80.66 ಕೋಟಿ ಲಭ್ಯವಿರುತ್ತದೆ ಎಂದು ತಿಳಿಸಿದರು.