Thursday, August 13, 2026
Thursday, August 13, 2026
Home Blog Page 261

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

0

Hindustan Aeronautics Limited ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಬೆಂಗಳೂರು ಇಲ್ಲಿ ಸೆಕ್ಯೂರಿಟಿ ಗಾರ್ಡ್ ಮತ್ತು ಫೈಮೆನ್ ಹುದ್ದೆಗಳಿಗೆ ನಾಲ್ಕು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ನೇಮಕಾತಿಯು ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೆರಿಟ್ ಆಧಾರದಲ್ಲಿ ನಡೆಯುವುದು. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಯ್ಕೆಯಾದವರಿಗೆ 21000/- ರೂ.ಗಳ ಮೂಲ ವೇತನವಿದ್ದು, ತುಟ್ಟಿ ಭತ್ಯೆ ಹಾಗೂ ಇತರೆ ಭತ್ಯೆಗಳು ಕೂಡ ಲಭ್ಯವಿದೆ.
Hindustan Aeronautics Limited ಆಸಕ್ತ ಮಾಜಿಸೈನಿಕರು ನಿಗದಿತ ನಮೂನೆಯ ಅರ್ಜಿಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ 26 ರೊಳಗೆ ಸಲ್ಲಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

Karnataka Public Service Commission ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಎಸಿಎಫ್ ಗಳಿಗೆ ನಿಷ್ಠೆ, ದಕ್ಷತಾ ಪ್ರಮಾಣ ವಚನ ಬೋಧನೆ

0

Karnataka Public Service Commission ಕರ್ನಾಟಕ ಲೋಕಸೇವಾ ಆಯೋಗದಿಂದ ನೇರ ನೇಮಕಾತಿಗೊಂಡು ಯಶಸ್ವಿಯಾಗಿ ತರಬೇತಿ ಪೂರೈಸಿರುವ 21 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ನಿಷ್ಠೆ, ದಕ್ಷತೆಯ ಪ್ರತಿಜ್ಞಾವಿಧಿ ಬೋಧಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಲ್ಲ ಪದವೀಧರರಿಗೂ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುವ ಅವಕಾಶ ದೊರಕುವುದಿಲ್ಲ. ನೀವೆಲ್ಲರೂ ಪ್ರತಿಭಾವಂತರು ಮತ್ತು ಅದೃಷ್ಟವಂತರಾಗಿದ್ದೀರಿ. ಕೃಷಿ ವಿಜ್ಞಾನ, ಎಂಜಿನಿಯರಿಂಗ್ ಮತ್ತು ಅರಣ್ಯಶಾಸ್ತ್ರವನ್ನೇ ಅಭ್ಯಾಸ ಮಾಡಿ ಪದವಿ ಪಡೆದವರೂ ಇದ್ದೀರಿ. ನೀವೆಲ್ಲರೂ ಯಾವುದೇ ಆಮಿಷಕ್ಕೆ ಒಳಗಾಗದೆ ಅರಣ್ಯ ಮತ್ತು ಅರಣ್ಯ ಸಂಪನ್ಮೂಲ ಹಾಗೂ ವನ್ಯಜೀವಿ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.

ಇಂದು ಇಡೀ ವಿಶ್ವ ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಂತಹ ಬೃಹತ್ ಸವಾಲು ಎದುರಿಸುತ್ತಿದೆ. ಈ ಕಾಲಘಟ್ಟದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ನೀವು, ಅರಣ್ಯ ಸಂರಕ್ಷಾ ಕಾಯಿದೆ 1963, ಅರಣ್ಯ ಸಂರಕ್ಷಣಾ ಕಾಯಿದೆ 1980 ಮತ್ತು ವನ್ಯಜೀವಿ ಸಂರಕ್ಷಣಾ ಕಾಯಿದೆ 1972ಯ ಜಾರಿಗೆ ಶ್ರಮಿಸಬೇಕು, ನಿರ್ದಾಕ್ಷಿಣ್ಯವಾಗಿ ಒತ್ತುವರಿ ತೆರವು ಆದೇಶ ಮಾಡಬೇಕು ಎಂದು ಸೂಚಿಸಿದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅತ್ಯಂತ ಮಹತ್ವದ ಇಲಾಖೆಯಾಗಿದ್ದು, ಪ್ರಕೃತಿ, ಪರಿಸರ, ಪಕ್ಷಿ ಸಂಕುಲ, ಪ್ರಾಣಿ ಸಂಕುಲ ಮತ್ತು ಕೀಟ ಸಂಕುಲ ಉಳಿಸುವ ಅವಕಾಶ ನಿಮಗಿದೆ. ಕಾಡನ್ನು ಕಾಪಾಡಿ, ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಶ್ರಮಿಸಿ ಎಂದರು.

Karnataka Public Service Commission ನೂತನ ಎಸಿಎಫ್ ಗಳು ವೃಕ್ಷ ಸಂರಕ್ಷಣೆ, ವೃಕ್ಷ ಸಂವರ್ಧನೆಗೆ ಕಾಯ, ವಾಚಾ, ಮನಸಾ ಶ್ರದ್ಧೆ ಮತ್ತು ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತೇನೆ ಎಂದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಮನೋಜ್ ಕುಮಾರ್, ಶ್ರೀನಿವಾಸುಲು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚೌವ್ಹಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕ್ರಾಂತಿ ಮತ್ತಿತರರು ಪಾಲ್ಗೊಂಡಿದ್ದರು.

Food Safety and Standards Authority ಆಹಾರ ಇಲಾಖೆಯವರೆಂದು ನಕಲಿ ಅಧಿಕಾರಿಗಳಾಗಿ ವ್ಯಕ್ತಿಗಳ ಸೋಗು: ಸಾರ್ವಜನಿಕರು ಜಾಗೃತಿಯಿಂದಿರಲು ಇಲಾಖೆ ಪ್ರಕಟಣೆ

0

Food Safety and Standards Authority ಕೆಲವು ವ್ಯಕ್ತಿಗಳು ಕೇಂದ್ರ/ರಾಜ್ಯ ಸರ್ಕಾರದ ಆಹಾರ ಸುರಕ್ಷತಾಧಿಕಾರಿಗಳೆಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಚಿಹ್ನೆ, ಸೀಲ್, ಗುರುತುಗಳುಳ್ಳ ವಿಸಿಟಿಂಗ್ ಕಾರ್ಡ್ ಗಳನ್ನು ಬಳಸಿ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಲೈಸೆನ್ಸ್ ತೋರಿಸುವಂತೆ, ತಪಾಸಣೆ ಮಾಡುವುದಾಗಿ, ಆಹಾರ ಮಾದರಿಗಳನ್ನು ಸಂಗ್ರಹಿಸುವುದಾಗಿ ಬೆದರಿಸಿ ಆಹಾರ ಉದ್ದಿಮೆದಾರರಿಂದ ಹಣ ವಸೂಲಿ ಮಾಡುತ್ತಿರುವುದಾಗಿ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ, ಪತ್ರಿಕೆಗಳಲ್ಲಿ ಹಾಗೂ ಟಿ.ವಿ. ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿದ್ದು, ಈ ರೀತಿಯಾಗಿ ಹಣ ವಸೂಲಿ ಮಾಡುವವರು ಕಂಡು ಬಂದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಂಕಿತಾಧಿಕಾರಿ ಜಿ.ಹೆಚ್. ಸತ್ಯನಾರಾಯಣ-9008305426, ಆಹಾರ ಸುರಕ್ಷತಾ ಅಧಿಕಾರಿಗಳಾದ ಸೋಮೇಶ ಓಲೇಕಾರ-9901682320, ಶಶಿಕುಮಾರ್ ಟಿ. -9741505993 ಇವರುಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಅಂಕಿತಾಧಿಕಾರಿಗಳು ತಿಳಿಸಿದ್ದಾರೆ

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

0

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್ ಹೆಡ್ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 16 ಮತ್ತು 17 ರಂದು ಬೆಳಗ್ಗೆ 10.00 ರಿಂದ 6.00 ರವರೆಗೆ ರವೀಂದ್ರನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

0

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ ಅವರು ಅಜಾತಶತ್ರು ಎನಿಸಿದ್ದರು. ದಾವಣಗೆರೆ ಜಿಲ್ಲೆಯನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಶಿವಶಂಕರಪ್ಪನವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸೋಮವಾರದ ವಿಧಾನ ಸಭೆ ಕಲಾಪದಲ್ಲಿ, ಸಭಾಧ್ಯಕ್ಷ ಯು.ಟಿ.ಖಾದರ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ ಸೂಚಿಸಿ ಮಂಡಿಸಿದ ನಿರ್ಣಯ ಬೆಂಬಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಎಲ್ಲರ ಜೊತೆ ಸ್ನೇಹದಿಂದ ಇರುತ್ತಿದ್ದ ಶಾಮನೂರು ಶಿವಶಂಕರಪ್ಪನವರು ರಾಜಯಕೀಯದಲ್ಲಿ ಅಜಾತ ಶತ್ರು ಎನಿಸಿದ್ದರು. ಪ್ರತಿ ಬಾರಿ ನಾನು ದಾವಣಗೆರೆ ನಗರಕ್ಕೆ ಆಗಮಿಸಿದರೆ ಶಾಮನೂರು ಶಿವಶಂಕರಪ್ಪನವರ ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಮಾಡುತ್ತಿದ್ದೆ. ಆತ್ಮೀಯವಾಗಿ ಅವರ ಮನಗೆ ಊಟಕ್ಕೆ ಕರೆಯುತ್ತಿದ್ದರು. ಅವರ ಅಗಲಿಕೆ ವೈಯಕ್ತಿವಾಗಿ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ.

ದೇಶದಲ್ಲಿಯೇ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು, ದೀರ್ಘ ಕಾಲ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ, ಕೊನೆಯ ಉಸಿರಿನವರೆಗೂ ಕೆಲಸ ಮಾಡಿದ್ದಾರೆ. 1969 ರಲ್ಲಿ ದಾವಣಗೆರೆಯಲ್ಲಿ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿ, ಬಳಿಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದರು. 1994 ರಲ್ಲಿ ತಮ್ಮ 63ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಅವರು 06 ಬಾರಿ ಶಾಸಕರಾಗಿ, ಒಂದು ಬಾರಿ ಸಂಸತ್ ಸದಸ್ಯರಾಗಿ ಸಮಾಜದ ಸೇವೆ ಸಲ್ಲಿಸಿದ್ದಾರೆ. ಬಹುದೀರ್ಘಕಾಲ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ದಾವಣಗೆರೆ ಜಿಲ್ಲೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಂದುವರೆದ್ದರೆ, ಅದಕ್ಕೆ ಶಾಮನೂರು ಶಿವಶಂಕರಪ್ಪನವರು ಕಾರಣ ಎಂದರು.

ದಾವಣಗೆರೆಯಲ್ಲಿ ಜವಳಿ ಉದ್ಯಮ ಅವನತಿಯತ್ತ ಸಾಗುತ್ತಿದ್ದ ಸಂದರ್ಭದಲ್ಲಿ, ಶೈಕ್ಷಣಿಕ ಕ್ಷೇತ್ರದಲ್ಲಿ ದಾವಣಗೆರೆಯನ್ನು ಮುಂಚೂಣಿಗೆ ತಂದು, ಇಂದು ಇಡೀ ಕರ್ನಾಟಕದಲ್ಲಿ ಹೆಸರುವಾಸಿಯಾಗುವಂತೆ ಮಾಡಿದರು. ಬಾಪೂಜಿ ವಿದ್ಯಾಸಂಸ್ಥೆಯನ್ನ ಸ್ಥಾಪಿಸಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅತಿ ದೀರ್ಘ ಕಾಲ ಕಾಂಗ್ರೆಸ್ ಪಕ್ಷದ ಖಜಾಂಜಿಯಾಗಿದ್ದರು. ಎಲ್ಲರೊಂದಿಗೂ ಸ್ನೇಹದಿಂದ ಇರುತ್ತಿದ್ದ ಇವರಿಗೆ ಯಾರೂ ವೈರಿ ಇರಲಿಲ್ಲ. ಅಜಾತಶತ್ರುವಿನಂತೆ ಇಡೀ ರಾಜಕೀಯ ಕ್ಷೇತ್ರದ ಹಿರಿಯ ಮುತ್ಸದ್ದಿಯಾಗಿ, ಯುವ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿದ್ದರು. ನಾನು ಮುಂದಿನ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಲು ಸಿದ್ಧ ಎಂದು ಹೇಳಿದ್ದ ಶಾಮನೂರು ಶಿವಶಂಕರಪ್ಪನವರು ಚೈತನ್ಯದ ಚಿಲುಮೆಯಾಗಿದ್ದರು ಎಂದರು.

ತಮ್ಮ 75 ನೇ ಜನ್ಮ ದಿನಾಚರಣೆಯನ್ನು ದಾವಣಗೆರೆಯಲ್ಲಿಯೇ ಆಚರಿಸಲು ಶಾಮನೂರು ಶಿವಶಂಕರಪ್ಪನವರೇ ಕಾರಣ ಎಂಬುದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಕಳೆದ 15 ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ, ಅವರನ್ನು ನೋಡಿಕೊಂಡು ಬಂದಿದ್ದೆ ಎಂದು ಹೇಳಿದರು. ಶಾಮನೂರು ಶಿವಶಂಕರಪ್ಪನವರ ಬಡವರಪರ ಸ್ನೇಹಹಸ್ತ ಚಾಚುವ ಅವರ ಕಾಳಜಿಯನ್ನು ವರ್ಣಿಸಿದರು. ಶಾಮನೂರು ಶಿವಶಂಕರಪ್ಪನವರು ತಮ್ಮ ದೊಡ್ಡ ಕುಟುಂಬ ಮಾತ್ರವಲ್ಲದೆ, ಲಕ್ಷಾಂತರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಹಾಗೂ ಅವರ ಅಗಲಿಕೆಯಿಂದ ಉಂಟಾಗಿರುವ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಮಾತನಾಡಿ, ಪ್ರಸ್ತುತ ವಿಧಾನಸಭೆಯ ಇಬ್ಬರು ಹಿರಿಯ ಶಾಸಕರನ್ನು ಕಳೆದುಕೊಂಡಿರುವುದು ದುಃಖದ ಸಂಗತಿಯಾಗಿದೆ. ತುಂಬಾ ಗಟ್ಟಿ ವ್ಯಕ್ತಿತ್ವ ಹೊಂದ್ದದ್ದ ಶಾಮನೂರು ಶಿವಶಂಕರಪ್ಪನವರು ನೇರ ನಿಷ್ಠರವಾಗಿ ಮಾತನಾಡುತ್ತಿದ್ದರು. ಧೀರ್ಘಕಾಲ ಅವರು ಸಮಾಜಕ್ಕೆ ಸಲ್ಲಿಸಿದ ಸೇವೆ ಅವರ ವ್ಯಕ್ತಿತ್ವದ ಘನತೆ ಹೆಚ್ಚಿಸಿತ್ತು. ದೇಶದಲ್ಲಿ ಹಿರಿಯ ವಯಸ್ಸಿನ ಶಾಸಕ ಎನಿಸಿದ್ದರು. ಕೊನೆಯ ಕಾಲದವರೆಗೂ ಸಕ್ರಿಯ ರಾಜಕಾರಣದಲ್ಲಿ ಇರುವುದಾಗಿ ಹೇಳುತ್ತಿದ್ದರು. ದಾವಣಗೆರೆ ನಗರ ವಿದ್ಯಾಕಾಶಿ ಎಂದು ಹೆಸರು ಗಳಿಸಲು ಶಾಮನೂರು ಶಿವಶಂಕರಪ್ಪನವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಕಾರಣವಾಗಿವೆ ಎಂದರು.

ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಶಾಮನೂರು ಶಿವಶಂಕರಪ್ಪನವರು ಬಸವಣ್ಣವರ ಚಿಂತನೆಯನ್ನು ಅಳವಡಿಸಿಕೊಂಡಿದ್ದರು. ಸರ್ವರನ್ನೂ ಸಮಾನವಾಗಿ ಕಾಣುತ್ತಿದ್ದ ಅವರು ಎಂದಿಗೂ ಭೇದಭಾವ ಮಾಡಲಿಲ್ಲ. ಆರ್ಥಿಕವಾಗಿ ಸಂಕಷ್ಟ ಎಂದು ಹೋದವರಿಗೆ ಸದಾಕಲಾ ನೆರವಾಗುತ್ತಿದ್ದರು. ಎಲ್ಲೆಡೆ ಕೋವಿಡ್ ಸಾಂಕ್ರಾಮಿಕ ರೋಗದಿಂದ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ 06 ಕೋಟಿ ರೂ. ಖರ್ಚು ಮಾಡಿ, ಮೆಡಿಕಲ್ ಆಕ್ಸಿಜನ್ ಅನ್ನು ಉಚಿತವಾಗಿ ಒದಗಿಸುವ ಕೆಲಸ ಮಾಡಿದರು ಎಂದರು.

Shamanur Shivashankarappa ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್‍ಖಾನ್ ಮಾತನಾಡಿ, ಬಹಳ ವರ್ಷದಿಂದ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪನವರು ನಮಗೆಲ್ಲಾ ಮಾದರಿಯಾಗಿದ್ದಾರೆ. ಕ್ಷೇತ್ರದ ಕೆಲಸಗಳಿಗಾಗಿ ಇಳಿ ವಯಸ್ಸಿನಲ್ಲಿಯೂ ನನ್ನನ್ನು ಕಾಣಲು ಬರುತ್ತಿದ್ದರು. ‘ಸರ್ ನೀವು ಬರುವುದು ಬೇಡ, ಫೋನ್‍ನಲ್ಲಿ ಹೇಳಿ ಸಾಕು, ನಾನು ನಿಮ್ಮ ಕೆಲಸ ಮಾಡಿಕೊಡುತ್ತೇನೆ ಎಂದರೂ ಕೇಳದೇ, ಅವರೇ ಬರುತ್ತಿದ್ದರು. ಅವರ ಮಗ ಎಸ್.ಎಸ್.ಮಲ್ಲಿಕಾರ್ಜುನ್ ಸಚಿವರಾದ್ದರಿಂದ, ನೀವು ಸಚಿವರಾಗುವಂತೆ ನಾನು ಕೇಳಿದರೆ, ಮುಖ್ಯಮಂತ್ರಿಯವರನ್ನು ಒಪ್ಪಿಸು ಈಗಲೂ ಸಚಿವನಾಗಿ ಕಾರ್ಯನಿರ್ವಹಿಸುತ್ತೇನೆ’ ಎನ್ನುವ ಉತ್ಸಾಹದ ಮಾತು ಅವರಿಂದ ಕೇಳಿಬರುತ್ತಿತ್ತು. ಇನ್ನಷ್ಟು ದಿನ ಅವರು ಬದುಕುತ್ತಾರೆ ಎಂದು ನಾನು ತಿಳಿದಿದ್ದೆ, ಅವರು ನಿಧನ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಹೇಳಿದರು.

ಶಾಸಕರಾದ ಎಸ್.ಸುರೇಶ್‍ಕುಮಾರ್, ಸಿ.ಎನ್.ಬಾಲಕೃಷ್ಣ, ಯು.ಬಿ.ಬಣಕಾರ್, ಸಿ.ಸಿ.ಪಾಟೀಲ್, ಶಿವಲಿಂಗೇಗೌಡ, ಅಪ್ಪಾಜಿ ಸಿ.ಎಸ್.ನಾಡಗೌಡರ್, ಡಾ.ಹೆಚ್.ಡಿ.ರಂಗನಾಥ್, ಸಿದ್ದುಸವದಿ, ಜೆ.ಟಿ.ಪಾಟೀಲ್, ಸಿಮೆಂಟ್ ಮಂಜು, ಅರಗಜ್ಞಾನೇಂದ್ರ, ಎನ್.ಟಿ.ಶ್ರೀನಿವಾಸ ಶಾಮನೂರು ಶಿವಶಂಕರಪ್ಪನವರಿಗೆ ನುಡಿ ನಮನ ಸಲ್ಲಿಸಿದರು. ಮೃತರ ಗೌರವಾರ್ಥ ಒಂದು ನಿಮಿಷಗಳ ಕಾಲ ಮೌನ ಆಚರಿಸಲಾಯಿತು. ವಿಧಾನಸಭೆ ಕಲಾಪವನ್ನು ಮೊಟಕುಗೊಳಿಸಿ ಮಂಗಳವಾರ ಬೆಳಿಗ್ಗೆ 9:30 ಕ್ಕೆ ಸಭಾಧ್ಯಕ್ಷ ಯು.ಟಿ.ಖಾದರ್ ಮುಂದೂಡಿದರು.

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

0

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಡಾ.ಜಿ‌. ಎಸ್. ಶಿವರುದ್ರಪ್ಪ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಜಿಎಸ್ಎಸ್ ಗೀತೆಗಳ ರಾಷ್ಟ್ರಮಟ್ಟದ ಆನ್ಲೈನ್ ಗಾಯನ ಸ್ಪರ್ಧೆಯಿಂದ ಏರ್ಪಡಿಸಲಾಗಿದೆ. ಜನವರಿ 10ರ ಒಳಗಾಗಿ ಇ-ಮೇಲ್ ವಿಳಾಸ gsshivarudrappa100@gmail.com ge ಹಾಡುಗಳನ್ನ ಕಳುಹಿಸಿಕೊಡಬಹುದಾಗಿದೆ.

ವಿಜೇತರಿಗೆ ಬಹುಮಾನಗಳು ಇಂತಿವೆ:
ಪ್ರಥಮ ಬಹುಮಾನ 10,000
ದ್ವಿತೀಯ ಬಹುಮಾನ 7500
ತೃತಿಯ ಬಹುಮಾನ : 5000
ಸಮಾಧಾನಕರ ಬಹುಮಾನ ಇಬ್ಬರಿಗೆ :2000

Dr. G.S. Shivarudrappa ಸೂಚನೆಗಳು:
ಜಿ ಎಸ್ ಎಸ್ ಅವರ ಯಾವುದೇ ಪದ್ಯಗಳನ್ನು ಹಾಡಿ.
ರಾಗ ಸಂಯೋಜನೆ ಆಗದ ಪದ್ಯಗಳನ್ನು ಬಳಸಿ.
ಶೃತಿ ಮಾತ್ರ ಬಳಸಿ ರೆಕಾರ್ಡಿಂಗ್ ಮಾಡಿ ಕಳುಹಿಸಿ.
ವಯೋಮಿತಿ 18 ರಿಂದ 55 ವರ್ಷ

ಹೆಚ್ಚಿನ ಮಾಹಿತಿಗಾಗಿ 6361969164 ಗೆ ಸಂಪರ್ಕಿಸಬಹುದಾಗಿದೆ.

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

0

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ ಸಮಯ ಪ್ರಜ್ಞೆಯಿಂದ ಸದ್ಯ ಆ ವ್ಯಕ್ತಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಮೈಸೂರಿನ ಆಂಜನೇಯ (47) ಎಂಬುವವರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ರೆ ಮಾತ್ರೆಗಳನ್ನು ಸೇವಿಸಿದ್ದ ಆಂಜನೇಯ ಸೇತುವೆ ಮೇಲಿಂದ ಶರಾವತಿ ನದಿಗೆ ಜಿಗಿಯಲು ಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

JCI Shimoga ಜೀವನ ಮೌಲ್ಯಗಳನ್ನ ಅಳವಡಿಸಿಕೊಂಡಾಗ ಮಾತ್ರ ಸಾರ್ಥಕ ಬದುಕು- ಮಲ್ಲಿಕಾರ್ಜುನ ಕಾನೂರ್

0

JCI Shimoga ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮೌಲ್ಯಯುತ ಜೀವನಶೈಲಿ ಅಗತ್ಯ. ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾನವ ಸಂಪತ್ತು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜೆಸಿಐ ವಲಯ ಪೂವಾಧ್ಯಕ್ಷ ಮಲ್ಲಿಕಾರ್ಜುನ ಕಾನೂರ್ ಹೇಳಿದರು.

ಶುಭಂ ಹೋಟೆಲ್‌ನಲ್ಲಿ ಜೆಸಿಐ ಶಿವಮೊಗ್ಗ ವಿವೇಕ್ ಆಯೋಜಿಸಿದ್ದ ಜಡ್‌ಒಟಿಎಸ್ 2026 ಕಾರ್ಯಕ್ರಮದಲ್ಲಿ ಮಾತನಾಡಿ, ಮೌಲ್ಯ ಕೇವಲ ಹಣ ಪ್ರಧಾನವಾದ ಶಿಕ್ಷಣವಾಗದೆ ಗುಣಪ್ರಧಾನವಾದ ವ್ಯವಸ್ಥೆಯಾಗಬೇಕು. ಜೀವನದಲ್ಲಿ ಮೌಲ್ಯಗಳನ್ನು ರೂಢಿಸಿಕೊಂಡಾಗ ಮಾತ್ರ ಸಾರ್ಥಕ ಬದುಕನ್ನು ಕಾಣಲು ಸಾಧ್ಯ ಎಂದು ತಿಳಿಸಿದರು.

ಒಬ್ಬ ವ್ಯಕ್ತಿಗೆ ವ್ಯಕ್ತಿತ್ವ ಅತಿ ಮುಖ್ಯ, ಆ ವ್ಯಕ್ತಿತ್ವದ ಕಳಸಕ್ಕೆ ಜೀವನದ ಮೌಲ್ಯಗಳು ಶೋಭೆಯಂತಿವೆ. ನಿಸರ್ಗ ಮನುಷ್ಯ ಸಂತೋಷದಿಂದ ಬದುಕಬೇಕು ಅಂತ ಕಲಿಸುತ್ತದೆ. ನಿಸರ್ಗ ಮನುಷ್ಯನಿಗೆ ಪದೇಪದೇ ಕ್ಷಣ ಕ್ಷಣಕ್ಕೂ ಸಂತೋಷವಾಗಿರುವುದನ್ನೇ ಮಾಡಿದೆ. ತಾನು ತಮ್ಮದೆಂಬ ಮನೋಭಾವನೆಯಿಂದ ಹೊರ ಬಂದು ಪ್ರತಿಯೊಬ್ಬರು ಜೀವನ ಸಾಗಿಸಬೇಕು ಎಂದರು.

ಪ್ರಸ್ತುತ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕಾರ ಹಾಗೂ ಸಂಪತ್ತುಗಳೆಂಬ ಮೋಹದಲ್ಲಿ ಸಿಲುಕಿದ್ದು, ಜೀವನದಲ್ಲಿ ತೃಪ್ತಿ ಹಾಗೂ ಮಾನವೀಯತೆಯ ಮೌಲ್ಯಗಳನ್ನು ಮರೆಯುತ್ತಿದ್ದಾರೆ. ಇಂದಿನ ವಿದ್ಯಮಾನಗಳನ್ನು ಗುರುತಿಸಿದರೆ ಮನುಷ್ಯನ ಆಸೆಗಳು ಮಿತಿಮೀರಿವೆ. ಪೂರ್ವಿಕರು ಬಳುವಳಿಯಾಗಿ ನೀಡಿದ ಮಾನವೀಯ ಮೌಲ್ಯಗಳನ್ನು ಮರೆತು ಕೇವಲ ಸ್ವಾರ್ಥ ಮನೋಭಾವ ಮನೆ ಮಾಡಿದೆ. ಇದರಿಂದ ಸಮಾಜದ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತಿರುವುದು ದುರಂತ ಎಂದು ಹೇಳಿದರು.

JCI Shimoga ಭ್ರಷ್ಟಾಚಾರವನ್ನು ಯಾರಿಂದಲೂ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಆದರೆ ಪ್ರಯತ್ನ ನಡೆಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ದೇಶದ ಭವಿಷ್ಯ ಯುವಜನರು. ಅವರ ಪಾತ್ರ ಮಹತ್ವವಾದದ್ದು ಎಂದು ತಿಳಿಸಿದರು.

2025ರ ವಲಯಧ್ಯಕ್ಷ ಜೆಸಿಐ ಸೆನೆಟರ್ ಗೌರೀಶ್ ಭಾರ್ಗವ್ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ನಿರ್ದೇಶಕ ಅನುಷ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ತರಬೇತುದರ ಜಿ.ಸೂರ್ಯನಾರಾಯಣ ವರ್ಮಾ, 2026ರ ನಿಯೋಜಿತ ವಲಯಧ್ಯಕ್ಷ ಮಧುಸೂದನ ನಾವಡ, ನಿಯೋಜಿತ ಉಪಾಧ್ಯಕ್ಷ ಗಣೇಶ್, ರಮೇಶ್ ಪೈ, ಜೆಸಿಐ ಶಿವಮೊಗ್ಗ ವಿವೇಕ್ ಘಟಕದ ನಿಯೋಜಿತ ಅಧ್ಯಕ್ಷೆ ಮಂಜುಳಾ ಕೇಶವ್, ಕಾರ್ಯದರ್ಶಿ ವಿಜಯಲಕ್ಷ್ಮೀಕದಂಬ, ಗಣೇಶ್ ವಿಜಯಕುಮಾರ್, ವಲಯ ಪದಾಧಿಕಾರಿಗಳು ಮತ್ತು ಜೆಸಿಐ ಶಿವಮೊಗ್ಗ ವಿವೇಕ್ ಘಟಕದ ಸದಸ್ಯರು ಇದ್ದರು.

Chamber of Commerce Shivamogga ಡಿಸೆಂಬರ್ 16. ಧ್ಯಾನದಿಂದ ಒತ್ತಡ ನಿರ್ವಹಣೆ, ಮಾನಸಿಕ ಆರೋಗ್ಯ ರಕ್ಷಣೆ ಬಗ್ಗೆ ಕಾರ್ಯಾಗಾರ

0

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಆರ್ಟ್ ಆಫ್ ಲಿವಿಂಗ್ ಅಂತರಾಷ್ಟ್ರೀಯ ಕೇಂದ್ರದ ಸಹಯೋಗದಲ್ಲಿ ಡಿಸೆಂಬರ್ 16ರಂದು ಸಂಜೆ 5ಕ್ಕೆ ಸಂಘದ ಸಭಾಂಗಣದಲ್ಲಿ ಧ್ಯಾನ, ಒತ್ತಡ ನಿರ್ವಹಣೆ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ವಾಣಿಜ್ಯ ಮತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು. ಕಾರ್ತಿಕ್ ಕೃಷ್ಣಜೀ ಅವರು ಉಪನ್ಯಾಸ ನೀಡುವರು.

Chamber of Commerce Shivamogga ಲಯಬದ್ಧ ಉಸಿರಾಟದ ಮಹತ್ವ ಕಾರ್ಯಗಾರವನ್ನು ನಡೆಸಿಕೊಡುವರು. ಲಯ ಬದ್ಧ ಉಸಿರಾಟದಿಂದ ಶ್ವಾಸಕೋಶದ ಮೂಲಕ ಒತ್ತಡವನ್ನು ಹೇಗೆ ನಿರ್ವಹಿಸಬಹುದು. ದೈಹಿಕ ಮತ್ತು ಮಾನಸಿಕ ಮಟ್ಟದಲ್ಲಿ ನಾವು ಪಡೆಯುವ ಲಾಭಗಳು, ವಿಶೇಷವಾಗಿ ವ್ಯಾಪಾರಸ್ಥರು, ಉದ್ಯೋಗಸ್ಥರು, ಕೈಗಾರಿಕೋದ್ಯಮಿಗಳು, ಮಹಿಳಾ ಉದ್ಯಮಿಗಳು, ವೃತ್ತಿಪರರು, ಕಾರ್ಮಿಕರು, ದಿನನಿತ್ಯದ ಒತ್ತಡ, ಜವಾಬ್ದಾರಿಗಳು ಮತ್ತು ಒದ್ದಾಟದ ಜೀವನದಲ್ಲಿ ತಂತ್ರಗಳು ಹೇಗೆ ಸಹಾಯಕವಾಗುತ್ತವೆ ಎಂಬುದನ್ನು ವಿವರಿಸುವರು ಎಂದು ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್ ತಿಳಿಸಿದ್ದಾರೆ

CM Siddharamaiah ಹಿರಿಯ ನಾಯಕನ ಯುಗಾಂತ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

0

CM Siddharamaiah ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.

ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ ಎಂದಿದ್ದಾರೆ.

ಶಿಕ್ಷಣ, ಅರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ. ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

CM Siddharamaiah ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಓಂ ಶಾಂತಿ ಎಂದಿದ್ದಾರೆ.