Thursday, August 13, 2026
Thursday, August 13, 2026
Home Blog Page 264

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

0

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಸಭೆ ನಡೆಸಿದರು
ಈ ವೇಳೆ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಸನ್ಮಾನಿಸಿ, ಧನ್ಯವಾದ ಸಲ್ಲಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ಹೇಳಿದ ಮಾತುಗಳು:

  • ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು.
  • ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5 ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ.
  • ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಮಾಡುವ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
  • ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.
  • ನೀರಾವರಿಗೆ ವಿದ್ಯುತ್‌ ಸಮಸ್ಯೆಯಿದ್ದು, 12 ತಾಸು ನಿರಂತರ ವಿದ್ಯುತ್‌ ಪೂರೈಕೆ ಮಾಡಬೇಕು, ಅಕ್ರಮ – ಸಕ್ರಮ ಯೋಜನೆಯನ್ನು ಪುನಾರಂಭಿಸಬೇಕು, ಕಾಡುಪ್ರಾಣಿಗಳಿಂದ ಬೆಳೆ ಹಾನಿ ಪರಿಹಾರ ಧನ ಹೆಚ್ಚಿಸಬೇಕು. ರೈತರ ಉತ್ಪನ್ನಗಳ ಖರೀದಿಗೆ ಕಾರ್ಪಸ್‌ ಫಂಡ್‌ ಆರಂಭಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಪಶು ವೈದ್ಯರ ನೇಮಕ ಮಾಡಬೇಕು. ಬೆಳಗಾವಿಯಲ್ಲಿ ಆರಂಭಿಸಲಾಗಿರುವ ಸಕ್ಕರೆ ಆಯುಕ್ತರ ಕಚೇರಿಗೆ ಅಗತ್ಯ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ರೈತ ಪ್ರತಿನಿಧಿಗಳು ಮನವಿ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಲಾಗುವುದು.
  • ರೈತರಿಗೆ 7 ಗಂಟೆ ಕಾಲ ನಿರಂತರ ವಿದ್ಯುತ್‌ ಒದಗಿಸಲು ಸರ್ಕಾರ ಬದ್ಧವಾಗಿದೆ. ವಿದ್ಯುತ್‌ ಉತ್ಪಾದನೆ ಹೆಚ್ಚಾದಾಗ ವಿದ್ಯುತ್‌ ಪೂರೈಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.
  • ರೈತರ ವಿಷಯದಲ್ಲಿ ಸರ್ಕಾರ ಯಾವುದೇ ಆತ್ಮವಂಚನೆ ಮಾಡುವುದಿಲ್ಲ. ನಮ್ಮ ಸರ್ಕಾರ ರೈತ ಪರವಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳಿಗೂ ನ್ಯಾಯಯುತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

B.Y. Raghavendra ಕೇಂದ್ರ ಶಿಕ್ಷಣ ಸಚಿವರನ್ನ ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ

0

B.Y. Raghavendra ಕೇಂದ್ರ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಧರ್ಮೇಂದ್ರ ಪ್ರಧಾನ ಜೀ ಅವರನ್ನುಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಭೇಟಿ ಮಾಡಿ , ಶಿವಮೊಗ್ಗ ಮತ್ತು ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಸುಮಾರು 3,000 ಗ್ರಾಮೀಣ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ ಗಂಭೀರ ವಸತಿ ಸಮಸ್ಯೆ ಎದುರಾಗುತ್ತಿರುವುದರಿಂದ, ಓಬಿಸಿ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣಕ್ಕೆ ಯುಜಿಸಿ ವಿಶೇಷ ಅನುದಾನ ಮಂಜೂರು ಮಾಡುವಂತೆ ವಿನಂತಿಸಿದರು.

ಶಿವಮೊಗ್ಗದ ಕೇಂದ್ರ ವಿದ್ಯಾಲಯದಲ್ಲಿ ಎಲ್ಲಾ ತರಗತಿಗಳಿಗೆ ಎರಡು ಹೆಚ್ಚುವರಿ ಸೆಕ್ಷನ್‌ಗಳನ್ನು ಅನುಮೋದಿಸಲಾಗಿದೆ; ಇದಕ್ಕಾಗಿ ಶಾಶ್ವತ ಕಟ್ಟಡಗಳು ಮತ್ತು ಹೊಸ ಮೂಲಸೌಕರ್ಯ ಒದಗಿಸಲು ಸಹಕಾರ ಕೋರಿ ಮನವಿ ಮಾಡಿದರು.

ಕರ್ನಾಟಕದ ಏಕೈಕ ಸಂಸ್ಕೃತ ಭಾಷಾಭಿಮಾನಿ ಗ್ರಾಮವಾದ ಮತ್ತೂರು–ಹೊಸಳ್ಳಿಯಲ್ಲಿ ರಾಷ್ಟ್ರೀಯ ಆದರ್ಶ ವೇದ ವಿದ್ಯಾಲಯ ಸ್ಥಾಪನೆಗೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಸ್ತಾವನೆಯನ್ನು ಅನುಮೋದಿಸಲು ಬೇಡಿಕೆ ಇಟ್ಟು, 2009 ರ ಪೂರ್ವದಲ್ಲಿ ಎಂ.ಫಿಲ್ ಪದವಿ ಪಡೆದ, 10–25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ Guest Lecturers‌ರ ಪದವಿಯನ್ನು NET ಸಮಾನವಾಗಿ ಪರಿಗಣಿಸಲು, ಮಹಾರಾಷ್ಟ್ರ ಸರ್ಕಾರದ ಉದಾಹರಣೆಯನ್ನು ಅನುಸರಿಸಿ ಮಾನ್ಯತೆ ನೀಡುವಂತೆ ಕೇಳಿದರು.

PM POSHAN ಯೋಜನೆಯ ಅಡಿಯಲ್ಲಿ ಕೆಲಸ ಮಾಡುವ 25 ಲಕ್ಷಕ್ಕೂ ಹೆಚ್ಚು ಕುಕ್-ಕಮ್-ಹೆಲ್ಪರ್ಸ್‌ಗಳಿಗೆ 2009 ರಿಂದ ಬದಲಾಗದ ಕೇವಲ 600 ರೂ ಕೇಂದ್ರದ ಹಂಚಿಕೆ ದೊರೆಯುತ್ತಿರುವುದರಿಂದ, ಸಂಭಾವನೆ ಹೆಚ್ಚಿಸುವುದು, ಆರೋಗ್ಯ ವಿಮೆ, ಸಾಮಾಜಿಕ ಭದ್ರತೆ ಮತ್ತು ಕಾನೂನುಬದ್ಧ ಹುದ್ದೆ ನೀಡುವಂತೆ ವಿನಂತಿಸಿದರು.

B.Y. Raghavendra ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಸೇವೆಯಲ್ಲಿ ಇದ್ದ ಶಿಕ್ಷಕರಿಗೆ TET ಕಡ್ಡಾಯವಾಗಿರುವುದರಿಂದ ಉಂಟಾದ ಆತಂಕಕ್ಕೆ ಪರಿಹಾರವಾಗಿ, TET ನಿಯಮ ಜಾರಿಗಿಂತ ಮೊದಲೇ ನೇಮಕಗೊಂಡ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು..

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳ ಹಿತಕ್ಕಾಗಿ ತಿಳಿಸಿದ ಎಲ್ಲಾ ವಿಷಯಗಳನ್ನು ಸಂವೇದನಾಶೀಲವಾಗಿ ಆಲಿಸಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಮಾನ್ಯ ಧರ್ಮೇಂದ್ರ ಪ್ರಧಾನ ಜೀ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು.

ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

0

ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಎಂಆರ್.ಎಫ್ ಟೈರ್ ಶೋ ರೂಂ ಹತ್ತಿರ ವಾಸ ಮಾಡುತ್ತಿದ್ದ 65 ವರ್ಷ ಸಯ್ಯದ್ ಭಾಷಾ ಎಂಬ ವ್ಯಕ್ತಿಯು ಅನಾರೋಗ್ಯದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಡಿ. 10 ರಂದು ಮೃತಪಟ್ಟಿರುತ್ತಾರೆ. ಈ ವ್ಯಕ್ತಿಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ದೊರಕಿರುವುದಿಲ್ಲ. ಈ ವ್ಯಕ್ತಿಯ ಚಹರೆ 5 ಅಡಿ ಎತ್ತರವಿದ್ದು, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ತೆಳುವಾದ ಮೈಕಟ್ಟು ಹೊಂದಿರುತ್ತಾರೆ. ಎರಡು ಕೈಗಳ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ.
ಈ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಸಹಕಾರ ಸಂಘ/ಸೌಹಾರ್ದ ಸಹಕಾರಿಗಳ ವಾರ್ಷಿಕ ಮಹಾಸಭೆ ನಡಾವಳಿ ಸಲ್ಲಿಸಲು ಸೂಚನೆ

0

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಸಹಕಾರ ಸಂಘಗಳು/ ಸೌಹಾರ್ದ ಸಹಕಾರಿಗಳು ಕಾಯ್ದೆ ಹಾಗೂ ನಿಯಮಗಳನ್ವಯ 2025-26ನೇ ಸಾಲಿನ ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರ ಆಯ್ಕೆ ಸಂಬಂಧ ವಾರ್ಷಿಕ ಮಹಾಸಭೆ ಜರುಗಿದ ನಡಾವಳಿಯ ಯಥಾ ಪ್ರತಿಯನ್ನು ಮಹಾಸಭೆ ನಡೆದ 7 ದಿನಗಳೊಳಗಾಗಿ ಉಪನಿರ್ದೇಶಕರ ಕಚೇರಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಪಿ.ಜಿ.ಎಸ್. ಟವರ್, 2ನೇ ಮಹಡಿ, ಜ್ಯುವೆಲ್ ರಾಕ್ ಹೋಟೆಲ್ ರಸ್ತೆ, ಜಗನ್ನಾಥ ನರ್ಸಿಂಗ್ ಹೋಂ ಪಕ್ಕ, ಶಿವಮೊಗ್ಗ ಇವರ ಕಚೇರಿಗೆ ಕಡ್ಡಾಯವಾಗಿ ಒಂದು ಪ್ರತಿಯನ್ನು ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

MESCOM ಜೋಗ: ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 16 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;.9448289520.

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

0

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ.

ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 111 ಅನ್ನು ಅಳವಡಿಸಿ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ.

ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು ಮತ್ತಷ್ಟು ಬಲಪಡಿಸಲಾಗಿದೆ.

ಕಳವು ಪ್ರಕರಣಗಳನ್ನು ನಿಯಂತ್ರಿಸಲು ರಾತ್ರಿ ರೌಂಡ್ ಹಾಗೂ ರಸ್ತೆ ಗಸ್ತು ಕರ್ತವ್ಯವನ್ನು ಬಿಗಿಗೊಳಿಸಿ, ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು, ಕಂಡುಬಂದಲ್ಲಿ ಅಂತಹವರ ವಿಚಾರಣೆಯನ್ನು ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅಧಿಕಾರಿ ಸಿಬ್ಬಂದಿಯವರಿಗೆ ಸೂಚಿಸಲಾಗಿದೆ.

ಡೋರ್ ಲಾಕ್ ಹೌಸ್‍ಗಳಿದ್ದಲ್ಲಿ ಅಂತಹ ಮನೆಗಳ ಕುರಿತು ಠಾಣೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಿ, ಠಾಣಾ ವ್ಯಾಪ್ತಿಯ ಮನೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ದಿನಗಳು ಮನೆಗೆ ಬೀಗ ಹಾಕಿ ಹೋಗುವ ಸಮಯದಲ್ಲಿ ಸ್ಥಳೀಯ ಪೆÇಲೀಸ್ ಠಾಣೆಗಳಿಗೆ ಮಾಹಿತಿಯನ್ನು ನೀಡುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಗಸ್ತು ವಾಹನಗಳ ಹಾಗೂ ಹೊಯ್ಸಳ ವಾಹನದ ಅಧಿಕಾರಿಗಳು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯದಲ್ಲಿ ಡೋರ್ ಲಾಕ್ ಹೌಸ್‍ಗಳ ಮೇಲೆ ನಿಗಾಯಿಟ್ಟು, ಸದರಿ ಪ್ರದೇಶದಲ್ಲಿ ಓಡಾಡುವ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನು ನಡೆಸಿ ಅಪರಾಧಗಳ ಪತ್ತೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ.

ವಾಹನ ಕಳವು ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಹಾಗೂ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಸಾರ್ವಜನಿಕರಲ್ಲಿ ವಾಹನಗಳನ್ನು ಪಾಕಿರ್ಂಗ್ ಸ್ಥಳಗಳಲ್ಲಿ ನಿಲ್ಲಿಸುವ ಸಮಯದಲ್ಲಿ ಸರಿಯಾಗಿ ಹ್ಯಾಂಡ್ ಲಾಕ್ ಮಾಡುವಂತೆ ಅರಿವು ಮೂಡಿಸುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

G. Parameshwara ಠಾಣಾ ವ್ಯಾಪ್ತಿಯಲ್ಲಿ ಸ್ವತ್ತು ಕಳವು ಪ್ರಕರಣವು ಹೆಚ್ಚಾಗಿ ವರದಿಯಾಗುವ ಸ್ಥಳಗಳನ್ನು ಗುರುತಿಸಿ ರಾತ್ರಿ ಪಾಳೆಯ ಕರ್ತವ್ಯದ ಅಧಿಕಾರಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗಳು ಪದೇ ಪದೇ ಭೇಟಿ ಮಾಡಿ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಠಾಣೆಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳನ್ನು ಕಳವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸ್ಥಳಗಳಲ್ಲಿ ರಾತ್ರಿ ತೆರಳಿ (ಲಾಕಿರ್ಂಗ್) ಗಸ್ತು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿವರವನ್ನ ಸದನದ ಗಮನಕ್ಕೆ ತಂದರು.

CM Siddaramaiah ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಸಮ್ಮತಿ: ಸಿಎಂ ಸಿದ್ದರಾಮಯ್ಯ

0

CM Siddaramaiah ಒಳ ಮೀಸಲಾತಿ ನೀಡುವ ಬಗ್ಗೆ ಈಗಾಗಲೇ ತೀರ್ಮಾನವಾಗಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು.
ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, 2025-26ನೇ ಸಾಲಿನಲ್ಲಿ ಇಲಾಖಾವಾರು ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ವಿವಿಧ ನಿಗಮ ಮತ್ತು ಮಂಡಳಿಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಸೇರಿ 1,01,420 ಹುದ್ದೆಗಳು ಖಾಲಿ ಇವೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಖಾಲಿ ಇವೆ.
ಖಾಲಿ ಇರುವ ಒಟ್ಟು 2,84,881 ಹುದ್ದೆಗಳ ಪೈಕಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಎರಡೂ ಸೇರಿ 96,844 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಿದ್ದು, ಇನ್ನುಳಿದ 1,88,037 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು. ಈ ಪೈಕಿ 2023-24 ರಿಂದ 2024-25ರವರೆಗೆ ಗ್ರೂಪ್ ಎ 562, ಗ್ರೂಪ್ ಬಿ 619, ಗ್ರೂಪ್ ಸಿ 23,119 ಸೇರಿ ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಮಂಜೂರಾತಿ ಸಿಕ್ಕಿದೆ ಎಂದು ತಿಳಿಸಿದರು.
CM Siddaramaiah ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತ 24,300 ಹುದ್ದೆಗಳು ಮತ್ತು 371(ಜೆ) ಮೀಸಲು ಸೌಕರ್ಯ ಇರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ತಿಯಾಗಬೇಕಾದ 32,132 ಹುದ್ದೆಗಳು ಸೇರಿ ಒಟ್ಟು 56,132 ಹುದ್ದೆಗಳ ಭರ್ತಿ ಪ್ರಕ್ರಿಯೆ ಈಗ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡ ಸೇರಿದಂತೆ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿದ್ದು, ಖಾಲಿ ಹುದ್ದೆಗಳ ಭರ್ತಿಗೆ ಮೊದಲ ಆದ್ಯತೆ ನೀಡಿ ವಿದ್ಯಾರ್ಥಿ ಯುವಜನರಿಗೆ ನ್ಯಾಯ ಒದಗಿಸಬೇಕು ಎಂದು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮನವಿ ಮಾಡಿದರು.

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದಲ್ಲಿ “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ

0

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು “ಸಾಂಬಾರು ಬೆಳೆಗಳ ಕೃಷಿ: ಕಾಳು ಮೆಣಸು ಮತ್ತು ಲವಂಗ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ನೆಲ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 16.12.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 8618715599 / 9448312978

Keladi Shivappa Nayak University of Agricultural and Horticultural Sciences ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಬಹುದು.

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

0

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಿಂದ ಪ್ರತಿ ವರುಷದಂತೆ ಈ ಬಾರಿಯು ಡಿಸೆಂಬರ್ 16 ರಿಂದ 26 ರವರಗೆ 18 ನೇ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಈ ಶಿಬಿರವು ಎಲ್ಲಾ ಜಾತಿ, ಧರ್ಮ ಮತ್ತು ಲಿಂಗಗಳ ಬೇಧವಿಲ್ಲದೆ ಸಂಪೂರ್ಣ ಉಚಿತವಾಗಿ ಜನರಿಗೆ ಕ್ಷೇತ್ರದ ಬಿಜಿಎಸ್ ಸಭಾ ಮಂಟಪದಲ್ಲಿ ನಡೆಯಲಿದೆ ಎಂದು ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಕಾರ್ಯದರ್ಶಿಗಳು ಆದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.
ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳವರ ಆಶಯದಂತೆ 17 ವರ್ಷಗಳಿಂದ ರಾಜ್ಯ ಮಟ್ಟದ ಅರ್ಚಕ ವೃತ್ತಿ ಶಿಕ್ಷಣ ತರಬೇತಿಯನ್ನು ಆಯೋಜಿಸಿದ್ದು,ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಆಶಿಸುತ್ತೇವೆ.
ಅಂದು ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರ ಸಾನಿಧ್ಯದಲ್ಲಿ,ಮಠದ ಪ್ರಧಾನ ಕಾರ್ಯದರ್ಶಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಶಾಖಾಮಠಗಳ ಶ್ರೀಗಳು ಪಾಲ್ಗೊಳ್ಳಲಿದ್ದಾರೆ.
ಯಾರು ಭಾಗವಹಿಸಬಹುದು:
14 ರಿಂದ 60 ವರ್ಷದೊಳಗಿನ ಯಾರಾದರೂ ಈ ಶಿಬಿರದಲ್ಲಿ ಭಾಗವಹಿಸಬಹುದು.
ಏನು ಒದಗಿಸಲಾಗುತ್ತದೆ:
ಉಚಿತ ಊಟ ಮತ್ತು ವಸತಿ,ಉಚಿತ ಸಮವಸ್ತ್ರ, ಪೂಜಾ ಪುಸ್ತಕಗಳು ಮತ್ತು ನೋಟ್‌ಬುಕ್‌ಗಳನ್ನು ವಿತರಿಸಲಾಗುವುದು.
ಏನು ತರಬೇಕು:
ತಟ್ಟೆ, ಲೋಟ, ಚಾಪೆ, ದಿಂಬು ಮತ್ತು ಹೊದಿಕೆ, ಉಡುಪು, ದಿನ ನಿತ್ಯ ಬಳಕೆ ವಸ್ತುಗಳು ಮತ್ತು ಲಘು ಹೊದಿಕೆಯನ್ನು ತರಬೇಕು.

Adichunchanagiri Mutt
ಶಿಬಿರದಲ್ಲಿ ಏನು ಕಲಿಸಲಾಗುತ್ತದೆ:
ಪೂಜಾ ವಿಧಾನಗಳು,ಸಂಕಲ್ಪ ಹೇಗೆ ಮಾಡುವುದು,ವೇದ ಮಂತ್ರಗಳನ್ನು ಹೇಗೆ ಪಠಿಸುವುದು,ಗಾಯತ್ರಿ ಮಂತ್ರ, ಧ್ಯಾನ ಶ್ಲೋಕಗಳು, ಪಂಚಾಂಗ (ಹಿಂದೂ ಕ್ಯಾಲೆಂಡರ್) ಅಧ್ಯಯನ, ನುರಿತ ಅಧ್ಯಾಪಕರಿಂದ ಭೋಧನೆ ಮತ್ತು ಉತ್ತಮ ವಾಗ್ಮಿಗಳಿಂದ ಉಪನ್ಯಾಸವಿರುವುದು ವಿಶೇಷ.
ಬಾಕ್ಸ್:
ಮುಖ್ಯ ಅಂಶಗಳು:

ಮೊದಲ ದಿನ ನೋಂದಣಿ ಕಡ್ಡಾಯ,
ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಎರಡು ಪಾಸ್‌ಪೋರ್ಟ್ ಸೈಜ್ ಫೋಟೋಗಳನ್ನು ತರಬೇಕು.
ಪೂರ್ಣ ಕಾಲದಲ್ಲಿ ಶಿಬಿರದಲ್ಲಿ ಭಾಗವಹಿಸಬೇಕು.
ಪೂರ್ಣ ಕಾಲದಲ್ಲಿ ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: 9481492311,9886958585,9448124141,9535601859

ಶಿವಮೊಗ್ಗದಲ್ಲಿ ವ್ಯಕ್ತಿ ಕಾಣೆ : ಪತ್ತೆಗೆ ಮನವಿ

0

ಮಂಜುನಾಥ ಹೂಗಾರ್, 36 ವರ್ಷ ಮಂಜುನಾಥ ಬಡಾವಣೆ, ಶಿವಮೊಗ್ಗ ಇವರು ಅ.27 ರಂದು ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್‌ನಲ್ಲಿ ಊಟ ಮಾಡಿ ಹಿಂದಿರುಗುವಾಗ ಕಾಣೆಯಾಗಿರುತ್ತಾರೆ.
ಕಾಣೆಯಾದ ಮಂಜುನಾಥ್ ಸುಮಾರು 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು, ಮುಂಭಾಗದ ತಲೆಯು ಭಾಗಶಃ ಬೋಳಾಗಿರುತ್ತದೆ. ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ ವೇಳೆ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಕೇಸರಿ ಬಣ್ಣದ ಶರ್ಟ್ನ್ನು ಧರಿಸಿರುತ್ತಾರೆ.
ಈ ವ್ಯಕ್ತಿಯ ಸುಳಿವು ಯಾರಿಗಾದರೂ ಕಂಡು ಬಂದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದೆಂದು ಪ್ರಕಟಣೆ ತಿಳಿಸಿದೆ.