Thursday, February 26, 2026
Thursday, February 26, 2026
Home Blog Page 268

Navodaya vidyalaya Gajanur ಗಾಜನೂರು ನವೋದಯ ಶಾಲೆಯ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

0

Navodaya vidyalaya Gajanur ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದವು 2026-27 ನೇ ಸಾಲಿನ ಆರನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಅರ್ಜಿಯನ್ನು https://navodaya.gov.in ಇಲ್ಲಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kempe Gowda ಜೂನ್ 27. ನಾಡಪ್ರಭು ಕೆಂಪೇಗೌಡ ಜಯಂತಿ.ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

0

Kempe Gowda ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಿಗ್ಗೆ 10.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸವರು.
Kempe Gowda ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ಪ್ರಾಧಿಕಾರ, ನಿಗಮ, ಮಂಡಳಿಗಳ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗ ಸಂಘದ ಅಧ್ಯಕ್ಷರು, ತಾಲ್ಲೂಕು ಒಕ್ಕಲಿಗ ಸಂಘದ ಅಧ್ಯಕ್ಷರು ಪಾಲ್ಗೊಳ್ಳುವರು.
ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ನಿವೃತ್ತ ಕನ್ನಡ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರಾದ ಡಾ.ಎಚ್.ಟಿ.ಕೃಷ್ಣಮೂರ್ತಿ ವಿಶೇಷ ಉಪನ್ಯಾಸ ನೀಡುವರು.

Hosanagara News ಹೊಸನಗರ ತಾಲ್ಲೂಕಿನಲ್ಲಿನಲ್ಲಿ ಶಾಲಾಕಾಲೇಜುಗಳಿಗೆರಜೆ ಘೋಷಣೆ

0

Hosanagara News ಹೊಸನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ
ಹೊಸನಗರ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ತಹಶೀಲ್ದಾರ್ ರಶ್ಮಿಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಇದೇ ಜೂನ್ 25 ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ರಜೆ ಘೋಷಿಸಲಾಗಿದೆ

Madhu Bangarappa ಜಾತಿ ಗಣತಿಗೆ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನ ನಿಯೋಜಿಸುವುದಿಲ್ಲ- ಸಚಿವ ಮಧು ಬಂಗಾರಪ್ಪ

0

Madhu Bangarappa ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ – ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

CM Siddaramaiah ರಾಜ್ಯದ ಏಳು ಬಿಲ್ ಗಳಿಗೆ ಶೀಘ್ರ ಅನುಮೋದನೆ ನೀಡಲು ರಾಷ್ಟ್ರಪತಿಗಳಿಗೆ ಸಿದ್ಧರಾಮಯ್ಯ ಮನವಿ

0

CM Siddaramaiah ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳ ಬಗ್ಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್‌ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದು ಸೀಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು ₹80,000 ಕೋಟಿ ನಷ್ಟವಾಗಿದೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ. ರಾಜ್ಯಕ್ಕೆ ವಿಶೇಷ ಅನುದಾನ ₹5,495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ ₹3,000 ಕೋಟಿ, ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ ₹3,000 ಕೋಟಿ ಸೇರಿದಂತೆ ಒಟ್ಟು ₹11,495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ ₹80,000 ಕೋಟಿ ನಮಗೆ ಕಡಿಮೆಯಾಗಿದೆ. ಇದು ಬಹಳ ದೊಡ್ಡ ಮೊತ್ತವಾಗಿದೆ.

CM Siddaramaiah ದೇಶದ ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ 5% ರಷ್ಟಿದೆ. ಕರ್ನಾಟಕ 8.7% ಜಿಡಿಪಿಗೆ ಕೊಡುಗೆ ನೀಡುತ್ತಿದೆ. 2011-12ರಲ್ಲಿ 7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್‌ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ.

ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ.

ಬೆಂಗಳೂರು ಜಾಗತಿಕ ನಗರವಾಗಿದ್ದು, ನಗರದ ಬಂಡವಾಳ ಕಾರ್ಯಗಳಿಗೆ ₹1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.

ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

0

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ ಅನುಕೂಲವಾಗುವಂತೆ ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳನ್ನು ಹಾಗೂ ಅತ್ಯಾಧುನಿಕ ತಂತ್ರಾಂಶಗಳನ್ನು ಅರಿತು ಅಧಿಕಾರಿಗಳು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಅವರು ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಜಿಲ್ಲೆಯ ನೌಕರರಿಗಾಗಿ ಏರ್ಪಡಿಸಲಾಗಿದ್ದ ಹೆಚ್.ಆರ್.ಎಂ.ಎಸ್.-2.0 ಹಾಗೂ ಕೆ.ಎ.ಎಸ್.ಎಸ್.‌ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಹಿಂದೆ ಬಳಸುತ್ತಿದ್ದ ಹೆಚ್.ಆರ್.ಎಂ.ಎಸ್.‌ತಂತ್ರಾಂಶ ಬಹಳ ಚೆನ್ನಾಗಿ ವಿನ್ಯಾಸಗೊಳಿಸಲಾಗಿದೆ ಆದರೂ ಅದರ ಬಳಕೆ ಸ್ವಲ್ಪ ಕಷ್ಟಕರವೂ, ದಾಖಲೆಗಳ ನಿರ್ವಹಣೆ ಕಷ್ಟಕರವೂ ಆಗಿತ್ತು. ಅದನ್ನು ಇಲಾಖೆಗಳ ಪತ್ರಾಂಕಿತ ಅಧಿಕಾರಿಗಳು ಹಾಗೂ ವಿಷಯ ನಿರ್ವಾಹಕರು ಸರಳವಾಗಿ ಬಳಸಲು ಅನುಕೂಲವಾಗುವಂತೆ ಸರ್ಕಾರಿ ನೌಕರರ ಸಂಘವು ಹೆಚ್.ಆರ್.‌ಎಂ.ಎಸ್.‌ತಂತ್ರಾಂಶ ಮತ್ತು ಕೆ.ಎ.ಎಸ್.ಎಸ್.‌ಕುರಿತು ಕಾರ್ಯಾಗಾರ ಆಯೋಜಿಸಿರುವುದು ಅತ್ಯಂತ ಉಪಯುಕ್ತವಾಗಿದೆ. ಈ ತಂತ್ರಾಂಶವನ್ನು ಅರಿತು ಅಳವಡಿಸಿಕೊಂಡಲ್ಲಿ ಆಡಳಿತ ವ್ಯವಸ್ಥೆ ಸುಗಮವಾಗಲಿದೆ ಎಂದವರು ನುಡಿದರು.
ಪ್ರಸ್ತುತ ವಿನ್ಯಾಸಗೊಳಿಸಲಾಗಿರುವ ಹೆಚ್.‌ಆರ್.‌ಎಂ.ಎಸ್.‌ತಂತ್ರಾಂಶ-2.0ವನ್ನು ವಿಷಯ ನಿರ್ವಾಹಕರು ಸರಳವಾಗಿ ಅರಿತು ನಿರ್ವಹಿಸಲು ಅನುಕೂಲವಾಗುವಂತೆ ರೂಪಿಸಲಾಗಿದೆ. ಅದರಲ್ಲಿ ನೌಕರರ ಎಲ್ಲಾ ದಾಖಲೆಗಳನ್ನು ನಿರ್ವಹಿಸಲು ಹಾಗೂ ದಾಖಲಿಸಲು ವಿಶೇಷ ಗಮನಹರಿಸಲಾಗಿದೆ. ಈ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅಕ್ಟೋಬರ್‌ಮಾಸಾಂತ್ಯದವರೆಗೆ ನಡೆಯಲಿದೆ. ನಂತರದ ಕಾಲದಲ್ಲಿ ಎಲ್ಲರೂ ತಂತ್ರಾಂಶವನ್ನು ಸರಳವಾಗಿ ಬಳಸಿಕೊಳ್ಳಬಹುದಾಗಿದೆ. ತಂತ್ರಾಂಶದ ಬಳಕೆ ಕುರಿತು ತರಬೇತಿ ಪಡೆದವರು ತರಬೇತಿ ಪಡೆಯದ ಇತರೆ ಅಧಿಕಾರಿ-ಸಿಬ್ಬಂಧಿಗಳಿಗೂ ತಿಳಿಸುವಂತಾಗಬೇಕೆಂದವರು ನುಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ಈ ತಂತ್ರಾಂಶ ಬಳಕೆಯ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘವು ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನೌಕರರಿಗಾಗಿ ಕಾರ್ಯಾಗಾರವನ್ನು ಆಯೋಜಿಸಿದ್ದು, ನೌಕರರ ವಲಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ನೌಕರರು ಈ ಸದವಕಾಶದ ಲಾಭ ಪಡೆದುಕೊಳ್ಳಬೇಕೆಂದವರು ನುಡಿದರು.
ಈ ತಂತ್ರಾಂಶದ ಬಳಕೆಯಿಂದ ನೌಕರರ ದಾಖಲೆಗಳನ್ನು ನಿರ್ವಹಿಸಲು ಹಾಗೂ ವ್ಯವಸ್ಥಿತವಾಗಿ ದಾಖಲಿಸುವಲ್ಲಿ ಸಮಸ್ಯೆಗಳಿಂದ ಮುಕ್ತಗೊಂಡು ಸುಧಾರಣೆ ಕಾಣಬಹುದಾಗಿದೆ. ಉಪನ್ಯಾಸ, ಚರ್ಚೆ, ಸಂವಾದ ಮತ್ತು ಪ್ರಾತ್ಯಕ್ಷಿತೆಗಳ ಮೂಲಕ ನಡೆಯುವ ತರಬೇತಿ ಕಾರ್ಯಾಗಾರವು ಅತ್ಯುಪಯುಕ್ತವಾಗಿದೆ. ಅದಕ್ಕಾಗಿ ವಿಷಯಾಧಾರಿತ ಸಂಪನ್ಮೂಲ ವ್ಯಕ್ತಿಗಳೇ ಮಾಹಿತಿ ನೀಡುತ್ತಿರುವುದು ವಿಶೇಷವಾಗಿದೆ ಎಂದರು.
Gurudatta Hegde KASS ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳ ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಲಾಭ ಪಡೆದುಕೊಳ್ಳಬೇಕು. ಬಹುಸಂಖ್ಯಾತ ನೌಕರರು ಈವರೆಗೆ ಹೆಸರು ನೋಂದಾಯಿಸಿಕೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಆರೋಗ್ಯ ಸಂಜೀವಿನಿ ಯೋಜನೆಯ ಫಲಾನುಭವಿಗಳು ಮತ್ತು ಅವರ ಕುಟುಂಬದ ಅವಲಂಬಿತರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವಲ್ಲಿ ಜಿಲ್ಲೆಯ ಪ್ರತಿಷ್ಠಿತ ಆಸ್ಪತ್ರೆಗಳು ಹೆಸರು ನೋಂದಾಯಿಸಿಕೊಂಡಿವೆ

  • ಸಿ.ಎಸ್.ಷಡಾಕ್ಷರಿ, ರಾಜ್ಯಾಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು.
    ಕಾರ್ಯಾಗಾರದಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌, ಸಂಪನ್ಮೂಲ ವ್ಯಕ್ತಿಗಳಾಗಿದ್ದ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ, ತಾಂತ್ರಿಕ ತರಬೇತುದಾರ ಸುಮಂತ್‌ಮತ್ತು ಯೋಜನಾಧಿಕಾರಿ ಶ್ರೀಮತಿ ಸುಧಾರಾಣಿ, ನೌಕರರ ಸಂಘದ ಗೌರವಾಧ್ಯಕ್ಷ ಆರ್.ಪಾಪಣ್ಣ, ರಾಜ್ಯ ಪರಿಷತ್‌ಸದಸ್ಯ ಎನ್.ಎಂ.ರಂಗನಾಥ್‌ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ತಾಲೂಕು ಘಟಕಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

MESCOM ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289516.

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

0

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ವ್ಯಾಸಂಗ ಮಾಡುತ್ತಿರುವ ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್‌ಸಿ, ಎಸ್‌ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ, ಇತರೆ ವರ್ಗದವರಿಗೆ ರೂ.1 ಲಕ್ಷದವರೆಗೂ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು https://shp.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. https://bcwd.karnataka.gov.in ವೆಬ್‌ಸೈಟ್‌ನಿಂದ ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶದ ಕುರಿತು ಮಾಹಿತಿ ಪಡೆಯಬಹುದು.
Backward Classes Welfare Department ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಗಳೊಂದಿಗೆ ಅಥವಾ ಸಹಾಯವಾಣಿ ಸಂಖ್ಯೆ;8050770004 ಮತ್ತು 8050770005 ಕ್ಕೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

0

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳು ಮೆಣಸು, ಗೋಡಂಬಿ, ಹೂವಿನ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (weed Mat) , ಮಿನಿ ಟ್ರಾಕ್ಟರ್ (up to 20 pto hp), ಫಾರಂ ಗೇಟ್, ಪ್ರಾಥಮಿಕ ಸಂಸ್ಕರಣಾ ಘಟಕ, ಪ್ಯಾಕ್ ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ. ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕ್ಯೊಯಲು ಸಹಾಯ ಧನ. ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ, ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೈಲರ್ ಮತ್ತು ಇನ್ನಿತರ ಯಂತ್ರೋಪಕರಣಗಳಿಗೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್ ಸೇಟ್, ಲಘು ಪೋಷಕಾಂಶಗಳ ಮಿಶ್ರಣ / ಬೆಳೆ ಸ್ಪೇಷಲ್ ಸಹಾಯಧನ, ರಾಜ್ಯವಲಯ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಯೋಜನೆ ವತಿಯಿಂದ ಜೇನು ಪೆಟ್ಟಿಗೆ ಸ್ಟ್ಯಾಂಡ್ ಹಾಗೂ ಜೇನು ಕುಟುಂಬಕ್ಕೆ ಸಹಾಯಧನ ಪಡೆದುಕೊಳ್ಳುವುದು.
Department of Horticulture ಆಸಕ್ತ ರೈತರು ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 5 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ. ಭದ್ರಾವತಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಮತ್ತು ಭದ್ರಾವತಿ ತೋಟಗಾರಿಕೆ ಕಛೇರಿ ಹಾಗೂ ದೂ.ಸಂ. 08282-295029 ನ್ನು ಸಂಪರ್ಕಿಸಬಹುದು.

Shivamogga Scheduled Caste Welfare Department ಪರಿಶಿಷ್ಟ ವರ್ಗಗಳ ಇಂಜಿನಿಯರಿಂಗ್ ಪದವಿಧರರಿಂದ ತರಬೇತಿಗೆ ಅರ್ಜಿ ಆಹ್ವಾನ

0

Shivamogga Scheduled Caste Welfare Department ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Shivamogga Scheduled Caste Welfare Department ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಒಳಗೆ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08182-200266 ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.