ಶಿವಮೊಗ್ಗ ಜಿಲ್ಲೆಯ ರೈತ ಬಾಂಧವರಿಗಾಗಿ 2026-27ನೇ ಸಾಲಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ’ಯನ್ನು ಜಾರಿಗೊಳಿಸಲಾಗಿದ್ದು, ಸರ್ಕಾರದಿಂದ ಹೋಬಳಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಬೆಳೆಗಳ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್ ಇನ್‌ಶ್ಯೂರೆನ್ಸ್ ಕಂಪನಿಯ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಮುಂಗಾರು ಹಂಗಾಮಿಗೆ ಜಿಲ್ಲೆಯ ಆಯ್ದ ಭಾಗಗಳಲ್ಲಿ ಈ ಕೆಳಗಿನ ಬೆಳೆಗಳಿಗೆ ವಿಮೆ ಸೌಲಭ್ಯ ದೊರೆಯಲಿದೆ:
ಹೋಬಳಿ ಮಟ್ಟಕ್ಕೆ: ರಾಗಿ (ಮಳೆ ಆಶ್ರಿತ).
ಗ್ರಾಮ ಪಂಚಾಯತಿ ಮಟ್ಟಕ್ಕೆ: ಭತ್ತ (ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ).
ಬೆಳೆ ಸಾಲ ಪಡೆದ ಹಾಗೂ ಪಡೆಯದ ಉಭಯ ರೈತರೂ ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ ನೋಂದಾಯಿಸಬಹುದಾಗಿದೆ.
ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಜುಲೈ 31,ಭತ್ತ (ನೀರಾವರಿ/ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಆಗಸ್ಟ್ 14 ನೋಂದಾಯಿಸಿಕೊಳ್ಳಲು ಅಂತಿಮ ದಿನವಾಗಿರುತ್ತದೆ.
ಬೆಳೆ ಸಾಲ ಪಡೆದ ರೈತರಿಗೆ: ಸಾಲ ಪಡೆಯುವ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಒಂದು ವೇಳೆ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಇಲ್ಲದಿದ್ದರೆ, ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರ ನೀಡುವ ಮೂಲಕ ಯೋಜನೆಯಿಂದ ಹೊರಗುಳಿಯಬಹುದು.
ಬೆಳೆ ಸಾಲ ಪಡೆಯದ ರೈತರಿಗೆ: ಇಂತಹ ರೈತರು ತಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗಾಗಿ ರೈತರು ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಲ್ಲದೆ ಸರ್ಕಾರದ ಅಧಿಕೃತ ವೆಬ್‌ಸೈಟ್ samrkshane.karnataka.gov.in ಮೂಲಕವೂ ಮಾಹಿತಿ ಪಡೆಯಬಹುದೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಗಾರು ಹಂಗಾಮಿಗೆ ಜಿಲ್ಲೆಯ ಆಯ್ದ ಭಾಗಗಳಲ್ಲಿ ವಿವಿಧ ಬೆಳೆಗಳಿಗೆ ಲಭ್ಯವಿರುವ ವಿಮಾ ಸೌಲಭ್ಯದ ಬಗ್ಗೆ ಮಾಹಿತಿ
ಜುಲೈ 20 ರಿಂದ ಬೇಕರಿ ಉತ್ಪನ್ನಗಳ ತಯಾರಿಕೆ ಕೌಶಲ್ಯಾಭಿವೃದ್ಧಿ ತರಬೇತಿ ಆರಂಭ
ಶಿವಮೊಗ್ಗ ನಗರದ ನವುಲೆಯಲ್ಲಿರುವ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ರೀತಿಯ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದಿನಾಂಕ 20-07-2026 ರಿಂದ 18-08-2026 ರವರೆಗೆ ತರಬೇತಿ ನಡೆಯಲಿದ್ದು ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕೀಸ್, ಕೋಕೋನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕೀಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರಿ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಫ್ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ತರಬೇತಿಗೆ ಒಟ್ಟು ರೂ. 4,500/- ಶುಲ್ಕವಿದ್ದು
ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ.
ಆಸಕ್ತರು ತರಬೇತಿ ಶುಲ್ಕವನ್ನು ಪಾವತಿಸಿ, ದಿನಾಂಕ: 18-07-2026 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಡಾ. ಜಯಶ್ರೀ ಎಸ್., ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ – 9449187763
ಶ್ರೀ ಜಯಶಂಕರ್ – 9686555897 ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ನವುಲೆ ಕೃಷಿ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮಕೈಗೊಳ್ಳಿ. ಶಾಸಕ ಚೆನ್ನಿ ಆದೇಶ
ಶಿವಮೊಗ್ಗ ನಗರದ ಕೆಲವು ವಾರ್ಡ್‌ಗಳಲ್ಲಿ ಕಳೆದ ಕೆಲ ದಿನಗಳಿಂದ ತಾಂತ್ರಿಕ ಕಾರಣಗಳಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲಿ ಉಂಟಾಗಿರುವ ವ್ಯತ್ಯಯವನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕರಾದ ಎಸ್.ಎನ್. ಚೆನ್ನಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ನಗರದ ನ್ಯೂ ಮಂಡ್ಲಿ ವಾಟರ್ ಪಂಪ್ ಹೌಸ್ ಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳದಲ್ಲಿದ್ದ ಜಲಮಂಡಳಿಯ ಇಂಜಿನಿಯರ್‌ಗಳು ಹಾಗೂ ತಾಂತ್ರಿಕ ಸಿಬ್ಬಂದಿಯಿಂದ ಪ್ರಸ್ತುತ ನಡೆಯುತ್ತಿರುವ ದುರಸ್ತಿ ಕಾರ್ಯದ ಪ್ರಗತಿಯ ಮಾಹಿತಿಯನ್ನು ಪಡೆದುಕೊಂಡ ಶಾಸಕರು, ನಗರದ ಜನತೆಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಲು ಆದೇಶಿಸಿದರು. ತಾಂತ್ರಿಕ ಅಡಚಣೆಯನ್ನು ಸಂಪೂರ್ಣವಾಗಿ ನಿವಾರಿಸಿ, ಎಂದಿನಂತೆ ವ್ಯವಸ್ಥಿತವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಗರದ ಜನತೆಗೆ ಕುಡಿಯುವ ನೀರಿನ ಕೊರತೆಯಾಗದಂತೆ ಪರ್ಯಾಯ ಕರಡು ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರಿಗೆ ಉಂಟಾಗಿರುವ ಈ ತಾತ್ಕಾಲಿಕ ತೊಂದರೆಯನ್ನು ಜಲಮಂಡಳಿಯು ಶೀಘ್ರದಲ್ಲೇ ಬಗೆಹರಿಸಲಿದ್ದು, ನಾಗರಿಕರು ಸಹಕರಿಸಬೇಕಾಗಿ ಕೋರಿದ್ದಾರೆ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಹಾಗೂ ಜಲ ಮಂಡಳಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ವಜ್ರೇಶ್ವರಿ ಕನ್ನಡ ಸಂಘದಿಂದ ಅಗಲಿದ ಗಾಯಕಿ ಎಸ್.ಜಾನಕಿ ಅವರಿಗೆ ಶ್ರದ್ಧಾಂಜಲಿ
ಕನ್ನಡ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಅಧಿಕ ಸುಮಧುರ ಗೀತೆಗಳಿಗೆ ಜೀವ ತುಂಬಿದ್ದ ದಂತಕಥೆ, ‘ಗಾನ ಕೋಗಿಲೆ’ ಎಸ್. ಜಾನಕಿ ಅಮ್ಮನವರ ನಿಧನ ಹಿನ್ನೆಲೆ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ವತಿಯಿಂದ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು
ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ವಿ ಶ್ರೀನಿವಾಸ್, ಕೆ ರಂಗನಾಥ್, ಸಿ ರವಿ, ಸೋಮೇಶ್, ಎಸ್ ಶಿವು, ಕೇಶವಮೂರ್ತಿ, ವಿ ಗೋಪಿ, ಎನ್ ದಿವಾಕರ್, ಕೆ ಸಿ ವೆಂಕಟೇಶ್, ಎಸ್ ಬಸವರಾಜ್, ಜಯ ಪ್ರಕಾಶ್, ಲೋಕೇಶ್ ಹಾಗು ಬಡಾವಣೆಯ ನಾಗರಿಕರು ಇದ್ದರು.
ಮುಪ್ಪಾನೆ ಲಾಂಚ್ ಇಂದಿನಿಂದ ಪುನರಾರಂಭ: ಸುತ್ತಮುತ್ತಲ ಜನತೆಯಲ್ಲಿ ಮೂಡಿದ ಸಂತಸ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜನರಿಗೆ ಹಾಗೂ ಪ್ರವಾಸಿಗರಿಗೆ ಸಂತಸದ ಸುದ್ದಿ. ಲಿಂಗನಮಕ್ಕಿ ಡ್ಯಾಂ ಹಿನ್ನೀರಿನ ಮಟ್ಟ ಕುಸಿತದಿಂದ ಸ್ಥಗಿತಗೊಂಡಿದ್ದ ಮುಪ್ಪಾನೆ ಲಾಂಚ್ ಸೇವೆ ಇಂದಿನಿಂದ ಮತ್ತೆ ಪುನರಾರಂಭವಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಪ್ಪಾನೆ ಕಡವಿನಲ್ಲಿ ಇಂದಿನಿಂದ ಲಾಂಚ್ ಸೇವೆ ಮತ್ತೆ ಆರಂಭವಾಗಿದೆ.
ಲಿಂಗನಮಕ್ಕಿ ಡ್ಯಾಂ ಹಿನ್ನೀರಿನ ಮಟ್ಟ ತೀವ್ರವಾಗಿ ಇಳಿಕೆಯಾಗಿದ್ದ ಕಾರಣ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಕೆಲ ದಿನಗಳ ಹಿಂದೆ ಲಾಂಚ್ ಸಂಚಾರವನ್ನು ಸ್ಥಗಿತಗೊಳಿಸಿತ್ತು.
ಜೋಗ ಜಲಪಾತ ಹಾಗೂ ಸಿಗಂದೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಮುಪ್ಪಾನೆ ಲಾಂಚ್, ಕರೂರು ಮತ್ತು ಭಾರಂಗಿ ಹೋಬಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅತ್ಯಂತ ಅನುಕೂಲಕರ ಮಾರ್ಗವಾಗಿದೆ.
ಅಲ್ಲದೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ.
ಇತ್ತೀಚೆಗೆ ಸುರಿದ ಮಳೆಯಿಂದ ಲಿಂಗನಮಕ್ಕಿ ಡ್ಯಾಂ ಹಿನ್ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಲಾಂಚ್ ಸಂಚಾರಕ್ಕೆ ಅಗತ್ಯವಿರುವಷ್ಟು ನೀರು ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಎಂದಿನಂತೆ ಲಾಂಚ್ ಸೇವೆಯನ್ನು ಪುನರಾರಂಭಿಸಲಾಗಿದೆ.
ಮುಪ್ಪಾನೆ ಲಾಂಚ್ ಸೇವೆ ಪುನರಾರಂಭವಾಗಿರುವ ಕುರಿತು ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡಿದೆ.
B.Y. Raghavendra ಅರ್ಹ ಯುವ ಮತದಾರರು ನೋಂದಣಿ ಪ್ರಕ್ರಿಯೆಯಿಂದ ವಂಚಿತರಾಗದಂತೆ ಜಾಗ್ರತೆವಹಿಸಿ- ಬಿ.ವೈ.ರಾಘವೇಂದ್ರ
B.Y. Raghavendra ಹೊಸೂರು ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ನಿರಂತರ ಜನಸಂಪರ್ಕ ಹಾಗೂ ಪಕ್ಷದ ಸಂಘಟನಾತ್ಮಕ ಪ್ರವಾಸವು ಮಧ್ಯಾಹ್ನದ ಬಳಿಕವೂ ಯಶಸ್ವಿಯಾಗಿ ಮುಂದುವರಿಯಿತು.
ಪ್ರವಾಸದ ಭಾಗವಾಗಿ ಸಂಸದ ಬಿ.ವೈ. ರಾಘವೇಂದ್ರ ಅವರು ಮುದ್ದನಹಳ್ಳಿ, ಬೇಗೂರು, ಬಗನಕಟ್ಟೆ ಹಾಗೂ ಮಾರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿಕೇಂದ್ರಗಳಿಗೆ ಭೇಟಿ ನೀಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಸ್ತುತ ಜಾರಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 (SIR) ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದ ಅವರು, ಯಾವುದೇ ಅರ್ಹ ಯುವ ಮತದಾರರು ನೋಂದಣಿಯಿಂದ ವಂಚಿತರಾಗದಂತೆ ಜಾಗೃತಿ ಮೂಡಿಸಲು ಬೂತ್ ಮಟ್ಟದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಬಳಿಕ ವಿವಿಧ ಗ್ರಾಮಗಳಲ್ಲಿ ಸ್ಥಳೀಯ ನಾಗರಿಕರು ಹಾಗೂ ರೈತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳು ಮತ್ತು ಅಭಿಪ್ರಾಯಗಳನ್ನು ಆಲಿಸಿದರು. ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ, ನೀರಾವರಿ ಸೇರಿದಂತೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಸಲ್ಲಿಸಲಾದ ಅಹವಾಲುಗಳು ಮತ್ತು ಅರ್ಜಿಗಳನ್ನು ಸ್ವೀಕರಿಸಿದ ಅವರು, ಅವುಗಳ ಶೀಘ್ರ ಪರಿಹಾರಕ್ಕಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲೇ ಅಗತ್ಯ ಸೂಚನೆಗಳನ್ನು ನೀಡಿದರು.
B.Y. Raghavendra ಈ ಸಂದರ್ಭದಲ್ಲಿ ಹಿರಿಯ ಮುಖಂಡ ಕೆ.ಎಸ್. ಗುರುಮೂರ್ತಿ, ತಾಲೂಕಿನ ಬಿಜೆಪಿ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಪಕ್ಷದ ವಿವಿಧ ಶಕ್ತಿಕೇಂದ್ರಗಳ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಳ್ಳಿಗಳ ಸಮಗ್ರ ಅಭಿವೃದ್ಧಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ತಮ್ಮ ನಿರಂತರ ಶ್ರಮ ಮುಂದುವರಿಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಎಟಿಎಮ್ ವಾಹನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ, ಸಿಬ್ಬಂದಿಗೆ ಸಣ್ಣಪುಟ್ಟ ಗಾಯ
ಶಿವಮೊಗ್ಗದ ಹೊನ್ನಾಳಿ ಮುಖ್ಯರಸ್ತೆಯಲ್ಲಿ ಸಂಚರಿಸುತ್ತಿದ್ದ ಎಟಿಎಂ ಹಣ ಸಾಗಣೆ ವಾಹನ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ವಾಹನದ ಚಾಲಕ ಸತೀಶ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯ ಮಾಹಿತಿ ತಿಳಿದು 112 ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಆದರೆ, ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಗಾಯಗೊಂಡಿದ್ದ ಚಾಲಕ ಸತೀಶ್ ಅಲ್ಲಿಂದ ಪರಾರಿಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಅಪಘಾತಕ್ಕೀಡಾದ ಎಟಿಎಂ ಕ್ಯಾಶ್ ವ್ಯಾನ್‌ನಲ್ಲಿ ಹಣ ಇತ್ತೇ ಅಥವಾ ಇಲ್ಲವೇ ಎಂಬುದರ ಕುರಿತು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಜೊತೆಗೆ, ಚಾಲಕ ಗಾಯದ ನಡುವೆಯೂ ಏಕೆ ಪರಾರಿಯಾದ ಎಂಬುದರ ಹಿಂದಿನ ಕಾರಣವನ್ನು ಪತ್ತೆಹಚ್ಚಲು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಜುಲೈ13. ಶಿವಮೊಗ್ಗದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಎಸ್ ಎಸ್ ಎಲ್ ಸಿ/ಪಿಯು/ಐಟಿಐ/ ಪದವಿಧರರಿಗೆನೇರ ಸಂದರ್ಶನ ನೇಮಕಾತಿ ವ್ಯವಸ್ಥೆ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಇದೇ ಜುಲೈ 13 ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ‘ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಭಾಗವಹಿಸುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ತೇರ್ಗಡೆ ಹೊಂದಿರುವ, 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಪ್ರವೇಶ ಉಚಿತವಾಗಿರುತ್ತದೆ.
ನೇರ ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆಗಳು: 9108235132, 9380663606 ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಗಳು ತಿಳಿಸಿದ್ದಾರೆ
.
B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ
B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ ಕ್ರಾಂತಿಕಾರಿ ಮೈಲಿಗಲ್ಲಾದ “ಉಡುಗಣಿ – ತಾಳಗುಂದ – ಹೊಸೂರು ಹೋಬಳಿಗಳ ಕೆರೆ ತುಂಬಿಸುವ ಏತನೀರಾವರಿ ಯೋಜನೆ” ಇಂದು ರೈತರ ಕಣ್ಣುಗಳಲ್ಲಿ ಆನಂದಭಾಷ್ಪ ತರಿಸಿದೆ ಎಂದು
ಸಂಸದರಾದ ಬಿ.ವೈರಾಘವೇಂದ್ರ ಅವರು ಈ ಆನಂದಕ್ಕೆ ಕಾರಣೀಭೂತರಾದ ಎಲ್ಲರಿಗೂ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದರು.
ಹಿರೇಕೆರೂರು ತಾಲೂಕಿನ ಚಟ್ನಹಳ್ಳಿ ಗ್ರಾಮದ ಬಳಿ ಹರಿಯುವ ಪವಿತ್ರ ತುಂಗಭದ್ರಾ ನದಿಯಿಂದ ಏತನೀರಾವರಿ ಮೂಲಕ ನೀರನ್ನು ಎತ್ತಿ, ಶಿಕಾರಿಪುರ ತಾಲೂಕಿನ 281 ಕೆರೆಗಳು ಹಾಗೂ ಹಿರೇಕೆರೂರು ತಾಲೂಕಿನ 9 ಕೆರೆಗಳು ಸೇರಿದಂತೆ ಒಟ್ಟು 290 ಕೆರೆಗಳಿಗೆ ನೀರು ತುಂಬಿಸುವ ಈ ₹850 ಕೋಟಿ ವೆಚ್ಚದ ಬೃಹತ್ ಯೋಜನೆ ಇಂದು ಸಾಕಾರಗೊಳ್ಳುತ್ತಿದೆ.
ಈ ಮಹತ್ವಾಕಾಂಕ್ಷಿ ಯೋಜನೆಯ ಯಶಸ್ವಿ ಅನುಷ್ಠಾನದ ಹಿನ್ನೆಲೆಯಲ್ಲಿ, ಇಂದು ಕಡೆನಂದಿಹಳ್ಳಿ ಗ್ರಾಮದ ಕೆರೆಗೆ ಭೇಟಿ ನೀಡಿ, ನದಿಯ ನೀರು ಧುಮ್ಮಿಕ್ಕಿ ಹರಿಯುತ್ತಿರುವುದನ್ನು ಹೆಮ್ಮೆಯ ಅನ್ನದಾತರೊಂದಿಗೆ ಬಿ.ವೈ.ರಾಘವೇಂದ್ರ ಅವರು ವೀಕ್ಷಿಸಿದರು.
ಲಿಫ್ಟ್ ಇರಿಗೇಷನ್ (Lift Irrigation) ವ್ಯವಸ್ಥೆಯನ್ನು ಪರಿಶೀಲಿಸಿದರು.
ಒಣಗಿಹೋಗಿದ್ದ ಕಡೆನಂದಿಹಳ್ಳಿ ಕೆರೆಗೆ ನದಿಯ ನೀರು ಹರಿದುಬಂದು ಭರ್ತಿಯಾಗುತ್ತಿರುವ ಈ ಭವ್ಯ ದೃಶ್ಯವು ಇಡೀ ಭಾಗದ ರೈತ ಬಾಂಧವರಲ್ಲಿ ಹೊಸ ಚೈತನ್ಯ ಹಾಗೂ ಹರ್ಷದ ಅಲೆಯನ್ನು ಮೂಡಿಸಿದೆ.
B. Y. Raghavendra ಸ್ಥಳದಲ್ಲಿದ್ದ ಮುಗ್ಧ ರೈತರು ಈ ಅಪೂರ್ವ ಕ್ಷಣವನ್ನು ಕಣ್ಣುಂಬಿಕೊಂಡು, ನಮ್ಮ ನೆಚ್ಚಿನ ನಾಯಕರಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ಅವರನ್ನು “ಆಧುನಿಕ ಭಗೀರಥ” ಎಂದು ಕೊಂಡಾಡಿ, ಅವರ ದೂರದೃಷ್ಟಿಯ ಜನಪರ ನಾಯಕತ್ವವನ್ನು ಕೃತಜ್ಞತೆಯಿಂದ ಸ್ಮರಿಸಿದರು.
ನೀರು – ಕೇವಲ ಸಂಪನ್ಮೂಲವಲ್ಲ, ಅದು ನಮ್ಮ ರೈತರ ಬದುಕಿನ ಆಶಾಕಿರಣ ಮತ್ತು ಮಲೆನಾಡಿನ ಅಭಿವೃದ್ಧಿಯ ಹೊಸ ಅಧ್ಯಾಯ! ಎಂದು ಸಾರ್ಜನಿಕರಿಂದ ಮೆಚ್ಚುಗೆಯ ಮಾತು ಕೇಳಿಬಂದಿದೆ ಎಂದರು.
U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ
U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮೂಲಸೌಕರ್ಯ, ವೈದ್ಯಕೀಯ ಸೇವೆಗಳು ಹಾಗೂ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಆಸ್ಪತ್ರೆಯ ಪ್ರತಿಯೊಂದು ವಾರ್ಡ್‌ಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವರು, ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ವಿಶೇಷವಾಗಿ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳು, ವೈದ್ಯಕೀಯ ಉಪಕರಣಗಳು ಹಾಗೂ ಸೇವೆಗಳ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
U.T. Khader ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
