Thursday, February 26, 2026
Thursday, February 26, 2026
Home Blog Page 274

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

0

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಸದಸ್ಯರಾದ ಶ್ರೀಮತಿ ಕವಿತಾ ಸುಧೀಂದ್ರ ಹೇಳಿದರು.
ಶಿವಮೊಗ್ಗ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ವತಿಯಿಂದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಜಾನಪದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನತೆ ಜಾನಪದದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕು ಎಂದು ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಡಾ. ಎಂ.ವೆಂಕಟೇಶ್ ಮಾತನಾಡಿ, ಜಾನಪದ ಪರಿಷತ್‌ನಿಂದ ನಿರಂತರವಾಗಿ ಜಾನಪದದ ಬಗ್ಗೆ ಯುವಜನರಲ್ಲಿ ಆಸಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಕಾರ್ಯದರ್ಶಿ ಡಾ. ಡಿ.ಬಿ.ಶಿವರುದ್ರಪ್ಪ ಮಾತನಾಡಿ, ಪದವಿಪೂರ್ವ ಶಿಕ್ಷಣ ಹಂತ ಬಹಳ ಮುಖ್ಯ. ವಿದ್ಯಾರ್ಥಿಗಳ ಬದುಕನ್ನು ರೂಪಿಸಿಕೊಳ್ಳುವ ಮಹತ್ವದ ದಿನಗಳು ಆಗಿರುತ್ತವೆ. ಅದರ ಜತೆಗೆ ಇತರ ಒಳ್ಳೆಯ ಹವ್ಯಾಸಗಳು ಅಗತ್ಯ. ಜಾನಪದದ ಪ್ರಜ್ಞೆಯು ಮೊದಲು ಪ್ರಯತ್ನಶೀಲ ಆಗುವುದಕ್ಕಿಂತ ಸಹಜಶೀಲವಾಗಬೇಕು ಎಂದು ಹೇಳಿದರು. ಜಿಲ್ಲಾ ಘಟಕದ ಸದಸ್ಯರಾದ
ಪ್ರೊ. ಮಮತಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜಾನಪದ ಅರಿವು ಬದುಕಿನ ಪಥವನ್ನು ಬದಲಾಯಿಸುತ್ತದೆ ಎಂದರು. ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಹರ್ಷ ಅವರು ವಿದ್ಯಾರ್ಥಿಗಳಿಗೆ ಜಾನಪದ ಹಾಡುಗಳನ್ನು ಹೇಳಿ ಅದರ ಮಹತ್ವ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಈಶ್ವರಪ್ಪ ಅವರು, ಜಾನಪದ ಹಾಡು-ಹಸೆ, ಚಿತ್ತಾರ, ಗೀಗಿ ಪದ ಇತ್ಯಾದಿಗಳನ್ನು ಕಲಿತು ಅದರ ಮೌಲ್ಯವನ್ನು ತಿಳಿಯಬೇಕು ಎಂದರು.
ಕಾರ್ಯಕ್ರಮದಲ್ಲಿ ನಟರಾಜ್, ಶಿವಮೊಗ್ಗ ತಾಲೂಕು ಕನ್ನಡ ಜಾನಪದ ಪರಿಷತ್‌ನ ಅಧ್ಯಕ್ಷರಾದ ಶ್ರೀನಿವಾಸ್, ಡಾ. ಉದಯ್ ಕುಮಾರ್, ಡಾ. ಪ್ರೀತಮ್, ತಿಮ್ಮೆಶಪ್ಪ, ಗಜೇಂದ್ರ, ಸಂದೇಶ್, ರೋಹಿಣಿ, ನಾಗೇಶ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.

Information and Public Relations Department ಕ್ರಾಂತಿಕಾರಿ ಬದಲಾವಣೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳು : ಬಲ್ಕೀಶ್ ಬಾನು

0

Information and Public Relations Department ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದ್ದು, ಇದರಿಂದ ಜನ ಸಾಮಾನ್ಯರ ಜೀವನದ ಗುಣಮಟ್ಟ ಉತ್ತಮ ರೀತಿಯಲ್ಲಿ ಸುಧಾರಣೆಯಾಗಿದೆ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ 2 ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ಕುರಿತು ಶುಕ್ರವಾರದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಯಾವುದೇ ದೇಶ ಪ್ರಗತಿಯಾಗಬೇಕಾದರೆ ಎಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಈ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುವ ‘ಶಕ್ತಿ ಯೋಜನೆ ಮತ್ತು ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ. 2000 ಹಣ ನೀಡುವ ಗೃಹಲಕ್ಷ್ಮೀ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ನೇರವಾಗಿ ಡಿಬಿಟಿ ಮೂಲಕ ಮನೆ ಯಜಮಾನಿಗೆ ಹಣ ತಲುಪುತ್ತಿದ್ದು ಈ ಯೋಜನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ. ಹಾಗೂ ನಮ್ಮ ದೇಶದ ಇತರೆ ರಾಜ್ಯಗಳೂ ಸಹ ಈ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯದ ಗ್ಯಾರಂಟಿ ಯೋಜನೆಗಳು ಹೆಗ್ಗಳಿಕೆಗೆ ಪಾತ್ರವಾಗಿವೆ.
ಈ ಯೋಜನೆಗಳ ಮೂಲಕ ರಾಜ್ಯದಲ್ಲಿ ಆರ್ಥಿಕ ಸಬಲೀಕರಣ ಮತ್ತು ಸಾಮಾಜಿಕ ಬದಲಾವಣೆಗೆ ಕಾರಣಕರ್ತರಾದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಈ ಯೋಜನೆಗಳು ಜನ ಸಾಮಾನ್ಯರ ಬದುಕಿನ ಗುಣಮಟ್ಟ ಹೆಚ್ಚಿಸಿದೆ. ಗ್ರಾಮೀಣ ಭಾಗದಲ್ಲಿ ಉತ್ತಮ ಅಭಿವೃದ್ದಿ ಸಾಧ್ಯವಾಗಿದ್ದು, ಜೀವನ ಮಟ್ಟ ಸುಧಾರಿಸಿದೆ. ಉಚಿತ ಪ್ರಯಾಣದಿಂದ ಸರ್ಕಾರಕ್ಕೆ ಯಾವುದೇ ರೀತಿ ನಷ್ಟ ಇಲ್ಲ, ಬದಲಾಗಿ ಸಾರಿಗೆ ಇಲಾಖೆಗೆ ಲಾಭವೇ ಆಗುತ್ತಿದೆ. ಸರ್ಕಾರದ ಯಾವುದೇ ಯೋಜನೆಗೆ ಅನುದಾನದ ಕೊರತೆ ಇಲ್ಲ. ಯುವನಿಧಿ ಯೋಜನೆಗೆ ಹೆಚ್ಚೆಚ್ಚು ಯುವಜನತೆ ನೋಂದಣಿ ಮಾಡಿಕೊಂಡು ಈ ಯೋಜನೆಯ ಸದುಪಯೋಗ ಪಡೆಯಬೇಕು. ಜನರು ತಮಗಾಗಿಯೇ ಇರುವ ವಿವಿಧ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು. ವಾರ್ತಾ ಇಲಾಖೆ ವತಿಯಿಂದ ಇಲ್ಲಿ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಕುರಿತು ಏರ್ಪಡಿಸಿರುವ ವಸ್ತುಪ್ರದರ್ಶನವನ್ನು ಎಲ್ಲರೂ ವೀಕ್ಷಿಸಬೇಕು ಎಂದರು.
Information and Public Relations Department ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಚಂದ್ರಭೂಪಾಲ್ ಮಾತನಾಡಿ, ರಾಜ್ಯದ ಬಡ, ಹಿಂದುಳಿದ ಮತ್ತು ಸಾಮಾನ್ಯ ಜನರ ಜೀವನ ಸುಗಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅತಿ ಮಹಾತ್ವಾಕಾಂಕ್ಷೆಯುಳ್ಳ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ಸು ಕಾಣುತ್ತಿದೆ.
ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು ‘ಶಕ್ತಿ’ ಯೋಜನೆ, ರಾಜ್ಯದ ಬಡ, ಹಿಂದುಳಿದ ಸೇರಿದಂತೆ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ರೂ. 2000 ಹಣ ನೀಡುವ ಗೃಹಲಕ್ಷ್ಮಿ, ಹಸಿವುಮುಕ್ತ ಕರ್ನಾಟಕದತ್ತ ದಾಪುಗಾಲಿಡುತ್ತಿರುವ ಅನ್ನಭಾಗ್ಯ, ಪದವಿ ಪೂರ್ಣಗೊಳಿಸಿದ ಯುವಜನತೆಗೆ ಉದ್ಯೋಗ ಪಡೆಯಲು ಅನುವಾಗಲು ಪ್ರತಿ ತಿಂಗಳು ಪದವೀಧರರಿಗೆ ರೂ. 3000, ಹಾಗೂ ಡಿಪ್ಲೋಮಾದಾರರಿಗೆ ರೂ. 1500 ನೀಡುವ ಯುವನಿಧಿ, ಪ್ರತಿಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗಳು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಜನಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳ ಹಾಗೂ ರಾಜ್ಯ ಸರ್ಕಾರದ ಇತರೆ ಯೋಜನೆಗಳ ಕುರಿತಾದ ಈ ವಸ್ತುಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿದೆ ಎಂದರು.

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

0

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26 ಸಾಲಿನಲ್ಲಿ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ (ಪಿಯುಸಿ, ಐ.ಟಿ.ಐ., ಡಿಪ್ಲೋಮೋ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ) ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂ. 28ರವರೆಗೆ ವಿಸ್ತರಿಸಿದೆ.
ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಜೂನ್ 28 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. Shivamogga District Minority Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ – 08182-220206, ಶಿವಮೊಗ್ಗ ವಿಸ್ತರಣಾಧಿಕಾರಿಗಳು- 9731979131, ಸಾಗರ ವಿಸ್ತರಣಾಧಿಕಾರಿಗಳು-9036866642, ಶಿವಮೊಗ್ಗ ಜಿಲ್ಲಾ ಮಾಹಿತಿ ಕೇಂದ್ರ-7676888388, ತಾಲೂಕು ಮಾಹಿತಿ ಕೇಂದ್ರಗಳಾದ ಭದ್ರಾವತಿ-9538853680, ತೀರ್ಥಹಳ್ಳಿ-8861982835, ಶಿಕಾರಿಪುರ-7829136724, ಸಾಗರ-7338222907, ಸೊರಬ-9513815513, ಹೊಸನಗರ-9008447029 ಗಳನ್ನು ಸಂಪರ್ಕಿಸುವುದು.

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

0

ಶಿವಮೊಗ್ಗ ನಗರದ ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ (ಶಾರ್ಟ್ ಫಿಲಂ) ಸ್ಪರ್ಧೆಯ ವಿಜೇತರಿಗೆ ಜೂ. 21ರ ಶನಿವಾರದಂದು ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಸಿನಿಮೊಗೆ ಶಿವಮೊಗ್ಗ ಚಿತ್ರ ಸಮಾಜದ ಕಾರ್ಯಧ್ಯಕ್ಷರು ಹಾಗೂ ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕರಾದ ಡಿ. ಎಸ್. ಅರುಣ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಐದು ವರ್ಷಗಳಲ್ಲಿ ನಡೆದ ಅಂಬೆಗಾಲು ಕಿರುಚಿತ್ರ ಸ್ಪರ್ಧೆಗಳಲ್ಲಿ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಕ್ರಿಯಾಶೀಲ ನಿರ್ದೇಶಕರು, ತಂತ್ರಜ್ಞರು ಪಾಲ್ಗೊಂಡು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಹೆಮ್ಮೆಯ ಸಂಗತಿ. ಯುವಜನತೆಯಲ್ಲಿ ಚಲನಚಿತ್ರ ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೊತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು, ಕನ್ನಡ ಚಿತ್ರರಂಗದ ಹೆಸರಾಂತ ತಂತ್ರಜ್ಞರು ಪಾಲ್ಗೊಂಡು ಈ ಚಿತ್ರಗಳನ್ನು ವೀಕ್ಷಿಸಿ ವಿಜೇತರನ್ನು ಆಯ್ಕೆ ಮಾಡಿದ್ದಾರೆ ಎಂದಿದ್ದಾರೆ.
ವಿಜೇತರಿಗೆ ಮೊದಲ ಬಹುಮಾನವಾಗಿ 50,000, ದ್ವಿತೀಯ ಬಹುಮಾನವಾಗಿ 25,000 ನಗದು ಪುರಸ್ಕಾರದ ಜೊತೆಗೆ ವಿವಿಧ ವಿಭಾಗಗಳಲ್ಲಿ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು ಎಂದಿರುವ ಅವರು, ಅಂಬೆಗಾಲು ಸರಣಿಯಲ್ಲಿ ಇದು ಕೊನೆಯ ಸ್ಪರ್ಧೆಯಾಗಿದ್ದು, ಮುಂದಿನ ದಿನಗಳಲ್ಲಿ ಚಿತ್ರೋತ್ಸವಗಳ ಮೂಲಕ ಶ್ರೇಷ್ಟ ಚಿತ್ರಗಳನ್ನು ಆಯ್ಕೆ ಮಾಡಲಾಗುವುದು ಎಂದಿದ್ದಾರೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಚಾಲಕ ವೈದ್ಯನಾಥ್ ಕೋರಿದ್ದಾರೆ.
ಜೂ. 21ರಂದು ನಗರದ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10:30 ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಆಯ್ಕೆಯಾದ 10 ಕಿರು ಚಿತ್ರಗಳ ಪ್ರದರ್ಶನ ಹಾಗೂ ನಂತರ ಬಹುಮಾನ ವಿತರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗೆಯ ಕಲಾವಿದ, ಅಮರಪ್ರೇಮಿ ಅರುಣ್ ಖ್ಯಾತಿಯ ನಾಯಕ ನಟ ಹರಿ ಶರ್ವಾ, ಶಾಸಕರಾದ ಎಸ್. ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಖ್ಯಾತ ವೈದ್ಯರಾದ ಡಾ. ರಜನಿ ಪೈ, ಡಾ. ಕೆ. ಆರ್. ಶ್ರೀಧರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಈ ಬಾರಿ ವಿಶೇಷವಾಗಿ, ರಾಮಾ ರಾಮಾ ರೇ ಖ್ಯಾತಿಯ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಡಿ. ಸತ್ಯಪ್ರಕಾಶ್‌ರವರ ಹೊಸ ಪ್ರಯೋಗ ಎಕ್ಸ್ ಅಂಡ್ ವೈ ಚಿತ್ರದ ಟೀಸರ್ ಹಾಗೂ ಹಾಡುಗಳ ಅನಾವರಣಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಈ ಚಿತ್ರ ತಂಡದ ನಿರ್ದೇಶಕ ಡಿ. ಸತ್ಯಪ್ರಕಾಶ್, ತಾರೆಯರಾದ ಬೃಂದಾ ಆಚಾರ್ಯ, ಆಯನಾ, ಅಥರ್ವ ಪ್ರಕಾಶ್ ಪಾಲ್ಗೊಳ್ಳಲಿದ್ದಾರೆ.

Department of Posts ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ ಅಳವಡಿಕೆ : ವ್ಯವಹಾರ ವಹಿವಾಟು ತಾತ್ಕಾಲಿಕ ಸ್ಥಗಿತ

0

Department of Posts ಭಾರತೀಯ ಅಂಚೆ ಇಲಾಖೆ ಆದೇಶದಂತೆ ಜೂನ್ 23 ರಂದು ಶಿವಮೊಗ್ಗ ಪ್ರಧಾನ ಅಂಚೆ ಕಚೇರಿ, ಜೂ.26 ರಂದು ಭದ್ರಾವತಿ ಮತ್ತು ಸಾಗರ ಪ್ರಧಾನ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ.
ಈ ಸಂಬಂಧ ಪೂರ್ವಸಿದ್ಧತೆಗಾಗಿ ಜೂ. 21 ರಂದು ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ.
ಜೂ. 25 ರಂದು ಭದ್ರಾವತಿ, ಸಾಗರ, ಸೊರಬ, ಹೊಸನಗರ ಹಾಗೂ ಶಿಕಾರಿಪುರ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ. ಸಾರ್ವಜನಿಕರು ಸಹಕರಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ. ಅವರು ತಿಳಿಸಿದ್ದಾರೆ.

MESCOM ಜೂ.21 ರಂದು ವಿದ್ಯುತ್ ವ್ಯತ್ಯಯ

0

MESCOM ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ 21 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ‍್ನಳಿ, ರಾಮನಗರ, ಮುದುವಾಲ, ಯಡವಾಲ, MESCOM ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟಿಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

MESCOM ಭದ್ರಾವತಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಜೂ. 23 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289454.

Pradhan Mantri Rashtriya Bal Puraskar ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

0

Pradhan Mantri Rashtriya Bal Puraskar ಭಾರತ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2025 ನೇ ಸಾಲಿನ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2025 ರ ಜುಲೈ 31 ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳು ಈ ಕ್ಷೇತ್ರಗಳ ಸಾಧಕರಾದ ಮಕ್ಕಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜುಲೈ 31 ರಂದು ಕೊನೆಯ ದಿನವಾಗಿದ್ದು, https://awards.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿ ರಸ್ತೆ, ಆಲ್ಕೋಳ ಶಿವಮೊಗ್ಗ ಅಥವಾ ದೂ.ಸಂ: 08182-295709 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ. ಆರ್ ತಿಳಿಸಿದ್ದಾರೆ.

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

0

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ 19 ರಿಂದ 25 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ಮಾತ್ರ ವಿತರಿಸಲಾಗುವುದು. ಸರ್ಕಾರದ ನಿಯಾಮವಳಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು ಮತ್ತು ಹುದ್ದೆಗಳನ್ನು ಹೆಚ್ಚಿಸುವುದು ಹಾಗೂ ಅರ್ಜಿಗಳನ್ನು ತಿರಸ್ಕರಿಸುವುದು ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ. ಮಾರ್ಗ ಸೂಚಿಯಂತೆ ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಕಂ ಅನುಭವ ಕಂ ಅರ್ಹತೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಂಬAಧ ಪಟ್ಟ÷ ಹುದ್ದೆಗಳಿಗೆ ಸ್ವಯಂ ದೃಢೀಕೃರಿಸಿದ ದಾಖಲೆಗಳ ನಕಲು ಪ್ರತಿಗಳೊಂದಿಗೆ ಇತ್ತೀಚಿನ ಭಾವಚಿತ್ರ, ಗುರುತ್ತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಮತ್ತು ಸ್ವವಿವರದೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಜೂನ್ 26 ರಂದು ಮಧ್ಯಾಹ್ನ 10.00 ರೊಳಗಾಗಿ ಸಲ್ಲಿಸುವುದು. District Health and Family Welfare Department ಜೂನ್ 27 ರಂದು ಸ್ವೀಕರಿಸಿದ ಅರ್ಜಿಗಳ ನೇರ ಸಂದರ್ಶನ ನಡೆಸಲಾಗುವುದು. ಸಂದರ್ಶನ ನಡೆಯುವ ಸ್ಥಳ ಮತ್ತು ವಿಳಾಸ ಮಿಮಿಂಚೆ ಮತ್ತು ದೂರವಾಣಿ ಮೂಲಕ ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೂ. ಸಂ. 08182-222382, 08182-200337, ಮೊ.ಸಂ. 9481691580, 9108155703 ಗಳನ್ನು ಸಂಪರ್ಕಿಸುವುದು.

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

0

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ವನಮಹೋತ್ಸವ ಕಾಂಗ್ರೆಸ್ ಪಕ್ಷದ ಅಧಿನಾಯಕರು, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು. Rahul Gandhi ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋನಿಯಾ ಎಂ, ಜಿಲ್ಲಾ ಯುವ ಕಾಂಗ್ರೆಸ್ ನ ಹೆಚ್‌.ಪಿ. ಗಿರೀಶ್, ಶಿವಮೊಗ್ಗ ವಿಧಾನಸಭಾ ಯುವ ಕಾಂಗ್ರೆಸ್ ಬಿ ಲೋಕೇಶ್ ,ಪಕ್ಷದ ಮುಖಂಡರಾದ ಡಾ.ಶರತ್ ಮರಿಯಪ್ಪ,ಆರ್ ಕಿರಣ್ , ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್,ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಜಿಲ್ಲಾ ಪದಾಧಿಕಾರಿಗಳಾದ ಎಂ ರಾಕೇಶ್ , ಕೆ .ಎಲ್. ಪವನ್, ಗುರುಪ್ರಸಾದ್, ರಾಹಿಲ್, ಸಚಿನ್ ಈಡಿಗ, ರಾಜೇಶ್ ಮಂದಾರ, ಸೈಯದ್ ಸಾಯಿಲ್ ,ಮಿಥುನ್ ಎಸ್ ಜೆ, ವಿನಯ್ ಬಜಾರ್, ಕಿರಣ್, ಶಬರೀಶ್ ಆರ್ಯ, ಎಸ್ ಶರತ್ ಇತರರು ಇದ್ದರು.