Friday, February 27, 2026
Friday, February 27, 2026
Home Blog Page 276

H. S. Venkateshamurthy ಕನ್ನಡ ಸಾಹಿತ್ಯ ಲೋಕಕ್ಕೆ ಹೆಚ್. ಎಸ್. ವೆಂಕಟೇಶಮೂರ್ತಿ ಅಗಲಿಕೆ ತುಂಬಲಾರದ ನಷ್ಟ : ಶಾಂತಾರಾಮ ಪ್ರಭು

0

H. S. Venkateshamurthy ಕನ್ನಡ ಸಾಹಿತ್ಯ ಲೋಕಕ್ಕೆ ಹೆಚ್. ಎಸ್. ವೆಂಕಟೇಶಮೂರ್ತಿ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದು ಅವರ ಸೇವೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ, ಲೇಖಕ ಡಾ. ಶಾಂತಾರಾಮ ಪ್ರಭು ಹೇಳಿದರು.

ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ಗ್ರಾಮಭಾರತಿ ಟ್ರಸ್ಟ್, ರಾಷ್ಟ್ರೋತ್ಥಾನ ಬಳಗದ ಆಶ್ರಯದಲ್ಲಿ ನಡೆದ ಹೆಚ್. ಎಸ್. ವೆಂಕಟೇಶ ಮೂರ್ತಿ ಸ್ಮರಣೆಗಾಗಿ ಭಾವನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

H. S. Venkateshamurthy ಇದೇ ಸಂದರ್ಭದಲ್ಲಿ ವಿವಿಧ ಕಲಾವಿದರಿಂದ ಹೆಚ್ಎಸ್ ವಿ ಅವರು ರಚಿಸಿದ ಹಾಡುಗಳ ಗಾಯನ ಕಾರ್ಯಕ್ರಮ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಣೇಶಮೂರ್ತಿ ನಾಗರ್ಕೊಡಿಗೆ, ರಾಷ್ಟ್ರೋತ್ಥಾನ ಬಳಗದ ಅಧ್ಯಕ್ಷ ನಳಿನಚಂದ್ರ, ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಹನಿಯ ರವಿ, ಮತ್ತಿತರರು ಉಪಸ್ಥಿತರಿದ್ದರು.
ಪಕ್ಕ ವಾದ್ಯದಲ್ಲಿ ಸಾಗರದ ಪುಟ್ಟು, ಸುನಿಲ್ ಉಡುಪ ಸಹಕರಿಸಿದರು.

Chamber of Commerce Shivamogga ಟ್ರೇಡ್ ಲೈಸೆನ್ಸ್ ಮೇಳ ಆಯೋಜಿಸಲು ಮನವಿ

0

Chamber of Commerce Shivamogga ಟ್ರೇಡ್ ಲೈಸೆನ್ಸ್ ಮೇಳ ಆಯೋಜನೆ ಸೇರಿದಂತೆ ಶಿವಮೊಗ್ಗ ನಗರದ ಸಮಗ್ರ ಅಭಿವೃದ್ಧಿ ಕುರಿತಂತೆ ಮಹಾನಗರ ಪಾಲಿಕೆ ನೂತನ ಆಯುಕ್ತ ಮಾಯಣ್ಣಗೌಡ ಅವರೊಂದಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಚರ್ಚಿಸಿದರು.

ಮಹಾನಗರ ಪಾಲಿಕೆಗೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಮಾಯಣ್ಣ ಗೌಡ ಅವರಿಗೆ ಸಂಘದ ಪರವಾಗಿ ಶುಭಕೋರಿ ಮಾತನಾಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ನಗರಕ್ಕೆ ನೀರಿನ ಪೂರೈಕೆ, ಆಸ್ತಿ ತೆರಿಗೆ, ಕಸ ಸಂಗ್ರಹ, ಪ್ರವಾಹ ಮುನ್ನೆಚ್ಚರಿಕೆ ಕ್ರಮಗಳು, ಯುಜಿಡಿ ಸಂಪರ್ಕದ ನಿರ್ವಹಣೆ, ಚರಂಡಿಗಳ ಸ್ವಚ್ಛತೆ, ನಗರದ ಪಾರ್ಕ್ಗಳ ನಿರ್ವಹಣೆ, ಇ-ಖಾತಾ ಗೊಂದಲದ ಪರಿಹಾರ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಪರಿಸರ ರಕ್ಷಣೆ, ಕೈಗಾರಿಕಾ ಪ್ರದೇಶಗಳಲ್ಲಿ ಸ್ವಚ್ಛತೆ, ನಿರ್ವಹಣೆ, ಜನಸಂದಣಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಶೌಚಾಲಯ ನಿರ್ಮಾಣ, ಬೀದಿದೀಪಗಳ ನಿರ್ವಹಣೆ, ವಾಚನಲಯಗಳನ್ನು ಅಭಿವೃದ್ಧಿಪಡಿಸುವುದು, ಬೀದಿ ನಾಯಿಗಳು ಮತ್ತು ಹಂದಿಗಳನ್ನು ನಿಯಂತ್ರಿಸುವುದು, ಪರಿಸರ ಮಾಲಿನ್ಯ ತಡೆಗಟ್ಟುವುದು, ನಗರದ ಸೌಂದರ್ಯ ಹೆಚ್ಚಿಸುವುದು, ನಗರದಲ್ಲಿ ಸಾಧ್ಯವಿರುವ ಕಡೆ ಹೆಚ್ಚು ಹೆಚ್ಚು ಗಿಡಮರಗಳನ್ನು ಬೆಳೆಸುವುದು, ಬೀದಿ ಬದಿ ವ್ಯಾಪಾರಗಳನ್ನು ನಿಯಂತ್ರಿಸುವುದು, ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಆದ್ಯತೆ ಮೇರೆಗೆ ಮಾಡುವುದು ಇನ್ನೂ ಮುಂತಾದ ವಿಷಯಗಳನ್ನು ಆಯುಕ್ತರ ಗಮನಕ್ಕೆ ತರಲಾಯಿತು.

ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಟ್ರೇಡ್ ಲೈಸೆನ್ಸ್ ಮೇಳ ಆಯೋಜಿಸಬೇಕು. ಆದಷ್ಟು ಬೇಗ ಇ ಖಾತಾ ಗೊಂದಲ ಬಗೆಹರಿಸಬೇಕು. ಶಿವಮೊಗ್ಗ ನಗರದ ಸಾಗರ ರಸ್ತೆ, ಆಟೋ ಕಾಂಪ್ಲೆಕ್ಸ್ ಹಾಗೂ ಕಲ್ಲೂರ್ – ಮಂಡಳಿ ಕೈಗಾರಿಕಾ ಪ್ರದೇಶಗಳ ನಿರ್ವಹಣೆ ಮತ್ತು ಸ್ವಚ್ಛತೆಯನ್ನು ನಿಯಮಿತವಾಗಿ ನಿರ್ವಹಿಸಬೇಕು ಎಂದು ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗಳ ಅನುಕೂಲಕರ ವಾತಾವರಣ ಮುಂದುವರಿಯಲು ಹಾಗೂ ನಗರದ ಅಭಿವೃದ್ಧಿಗೆ ಸ್ಥಳೀಯ ಆಡಳಿತದೊಂದಿಗೆ ಸಹಕರಿಸಲು ಸಂಘ ಸದಾ ಸಿದ್ಧವಾಗಿದೆ ಎಂದು ತಿಳಿಸಿದರು.

Chamber of Commerce Shivamogga ನೂತನ ಆಯುಕ್ತ ಮಾಯಣ್ಣಗೌಡ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದೆ ಕೆಲಸ ಮಾಡಿದ ಅನುಭವ ಇದ್ದು, ನಗರದ ಎಲ್ಲಾ ಸಮಸ್ಯೆಗಳ ಅರಿವು ಇದೆ. ಇವುಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್ ಮನೋಹರ್, ನಿರ್ದೇಶಕರಾದ ಪ್ರದೀಪ್ ವಿ ಯೆಲಿ, ಗಣೇಶ್ ಅಂಗಡಿ, ಲಕ್ಷ್ಮೀದೇವಿ ಗೋಪಿನಾಥ್ ಹಾಜರಿದ್ದರು.

ಗೋಮಾತೆಯ ಪೂಜೆಯಿಂದ ಸಕಲ ಇಷ್ಟಾರ್ಥಗಳು ಸಿದ್ದಿ

0

ಗೋಮಾತೆಯ ಪೂಜೆಯಿಂದ ಸಕಲ ಇಷ್ಟಾರ್ಥಗಳು ಸಿದ್ಧಿ ಗೋಮಾತೆಯಲ್ಲಿ 33 ಕೋಟಿ ದೇವತೆಗಳು ವಾಸ ಮಾಡುತ್ತವೆ ಎಂದು ಪುರಾಣ ಕಾಲದಿಂದಲೂ ಮಾಹಿತಿ ಇದೆ ಗೋವು ನಮ್ಮ ಧರ್ಮದ ಸಂಕೇತ ಸನಾತನ ಕಾಲದಿಂದಲೂ ಗೋ ಪೂಜೆಯನ್ನು ಎಲ್ಲಾ ಶುಭ ಕಾರ್ಯಗಳಲ್ಲಿ ಮಾಡುತ್ತಾ ಬಂದಿದ್ದಾರೆ. ಗೋವಿನ ಇತಿಹಾಸ ತುಂಬಾ ವಿಸ್ತಾರವಾಗಿದೆ ಗೋಪೂಜೆಯಿಂದ ಮನಃಶಾಂತಿ ಲಭಿಸುತ್ತದೆ. ಎಂದು ದೈವಜ್ಞ ಪ್ರತಿಭಾರಂಗ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷರಾದ ವೆಂಕಟೇಶ್ ರಾಯ್ಕರ್ ನುಡಿದರು. ದೈವಜ್ಞ ಪ್ರತಿಭಾರಂಗ ಶಿವಮೊಗ್ಗ ಸಂಸ್ಥೆಗೆ 25 ನೇ ವರ್ಷಕ್ಕೆ ಪಾದರ್ಪಣೆ ಮಾಡಿದ ಸಂದರ್ಭದಲ್ಲಿ ಹುಣಸೂಡಿನಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ತಮ್ಮ ಕುಟುಂಬ ಹಾಗೂ ಪರಿವಾರ ಮತ್ತು ಎಲ್ಲಾ ನಿರ್ದೇಶಕರು ಪದಾಧಿಕಾರಿಗಳೊಂದಿಗೆ ಆಗಮಿಸಿ ಗೋಪೂಜೆ ನೆರವೇರಿಸಿ ಗೋಶಾಲೆಗೆ ದೇಣಿಗೆ ನೀಡಿ ಗೋಮಾತೆಯ ಕೃಪೆಗೆ ಪಾತ್ರರಾದರು. ಶ್ರೀ ಜ್ಞಾನೇಶ್ವರಿ ಗೋಶಾಲೆ ಅಧ್ಯಕ್ಷರಾದ ಚಂದ್ರಹಾಸ್ ರಾಯ್ಕರ್ ರವರು ದೇಣಿಗೆ ಸ್ವೀಕರಿಸಿ ಮಾತನಾಡಿ ನಮ್ಮ ಗೋಶಾಲೆ ಇಂದು ಬಹಳ ಉತ್ತಮ ಮಟ್ಟದಲ್ಲಿ ನಡೆಯುತ್ತಿದೆ ಸಾರ್ವಜನಿಕರು ಹಾಗೂ ಗೋಮಾತೆಯ ಭಕ್ತರು ದೇಣಿಗೆ ನೀಡುವುದರ ಮುಖಾಂತರ ಇಲ್ಲಿ ಕಾರ್ಯಕ್ರಮಗಳು ತುಂಬಾ ಸುಗಮವಾಗಿ ನೆರವೇರುತ್ತವೆ ಸಾರ್ವಜನಿಕರು ಒಮ್ಮೆ ನಮ್ಮ ಘೋಶಾಲೆಗೆ ಭೇಟಿ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಜನಾರ್ಧನ್ ಶೇಟ್. ಕಾರ್ಯದರ್ಶಿ ಪ್ರಶಾಂತ ರಾಯ್ಕರ್. ದೇವಿದಾಸ್ ಶೇಟ್. ವಿ ಸುಧಾಕರ್. ರಾಘವೇಂದ್ರ ಕೆ. ಮತ್ತು ಪ್ರತಿಭಾರಂಗದ ಮಾಜಿ ಅಧ್ಯಕ್ಷರಾದ ಸತೀಶ್ ಶೇಟ್. ಸಂತೋಷ್ ಜಿ. ಅಶೋಕ್ ರಾಯ್ಕರ್. ರಾಘವೇಂದ್ರ. ಪಾಂಡುರಂಗ ಶೇಟ್ ಉಪಸ್ಥಿತರಿದ್ದರು

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

0

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು ಪಂಚಕರ್ಮ ಚಿಕಿತ್ಸಾಲಯ ಮತ್ತು ಔಷಧಾಲಯ, ಫ್ರೆಂಡ್ಸ್ ಸೆಂಟರ್ ನೇತ್ರ ಹಾಗೂ ರಕ್ತ ಬಂಡಾರದ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಮಧುಮೇಹ ಮತ್ತು ಬಿಪಿ ತಪಾಸಣೆ ಶಿಬಿರವನ್ನು ಜೂ.18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಏರ್ಪಡಿಸಲಾಗಿದೆ.

Friends Health Care Center ಗೋಪಾಲಗೌಡ ಬಡಾವಣೆ, 100 ಅಡಿ ರಸ್ತೆ, ವಿಶಾಲ್ ಮಾರ್ಟ್ ಎದುರುಗಡೆ ಇರುವ ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ನ ಸುದೇನು ಪಂಚಕರ್ಮ ಚಿಕಿತ್ಸಾಲಯ ಮತ್ತು ಔಷಧಾಲಯದಲ್ಲಿ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ. ಆಸಕ್ತರು ಹೆಸರನ್ನು ನೋಂದಾಯಿಸಲು ದೂರವಾಣಿ ಸಂಖ್ಯೆ : 8792322627 ಹಾಗೂ 9448763818 ನ್ನು ಸಂಪರ್ಕಿಸಬಹುದಾಗಿದೆ.

CM Siddharamaih ವಿಧಾನ ಸೌಧದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಕುರಿತು ಚರ್ಚಿಸಲು ವಿಶೇಷ ಸಂಪುಟ ಸಭೆ

0

CM Siddharamaih ವಿಧಾನ ಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಕುರಿತು ಚರ್ಚಿಸಲು ನಡೆದ ವಿಶೇಷ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು.

CM Siddharamaih ಈ ಸಂದರ್ಭದಲ್ಲಿ, ಉಪ‌ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಕೆ.ಪಾಟೀಲ್, ಡಾ. ಹೆಚ್.ಸಿ.ಮಹದೇವಪ್ಪ, ಶಿವರಾಜು ಎಸ್.ತಂಗಡಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Karnataka State Commission for Protection of Child Rights ಮೊಬೈಲ್ ಬಳಕೆಗಳಿಂದ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತ ಅಧ್ಯಯನ ವರದಿ ಬಿಡುಗಡೆ ಕಾರ್ಯಕ್ರಮ

0

Karnataka State Commission for Protection of Child Rights ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಚೈಲ್ಡ್ ಫಂಡ್ ಇಂಡಿಯಾದ ಸಹಯೋಗದಲ್ಲಿ ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಕುರಿತ ವಿಶೇಷ ಅಧ್ಯಯನದ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ್ ಹೊರಟ್ಡಿ ಅವರು ಭಾಗವಹಿಸಿದರು.

Karnataka State Commission for Protection of Child Rights ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎನ್.ಹೆಚ್. ಕೋನರೆಡ್ಡಿ,
ಸದಸ್ಯ ಚಂದ್ರಕಾಂತ ಪಾಟೀಲ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Infrastructure and Industrial Development Department ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಾಧನೆಗಳ ಕಿರು ಹೊತ್ತಿಗೆ ಬಿಡುಗಡೆ

0

Infrastructure & Industrial Development Department ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಎರಡು ವರ್ಷಗಳ ಸಾಧನೆ ಕುರಿತ ಪ್ರಗತಿ ಪಥದ ಮುಂದಣ ಹೆಜ್ಜೆ ಕಿರು ಹೊತ್ತಿಗೆಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. Infrastructure & Industrial Development Department ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಮನೋಜ ಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ, ಕೆಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ, ಕೆಎಸ್ ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬು ಗೋಯಲ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

JCI Shivamogga ಉದ್ಯಮದ ಯಶಸ್ಸಿಗೆ ಕೌಶಲ್ಯ ಹಾಗೂ ತರಬೇತಿ ಅವಶ್ಯ : ಅಧ್ಯಕ್ಷ ಜಿ.ಗಣೇಶ್

0

JCI Shivamogga ಪ್ರತಿಯೊಂದು ವ್ಯವಹಾರ ಸಂಸ್ಥೆಗಳು ಯಶಸ್ವಿಯಾಗಿ ಮುನ್ನಡೆಯಲು ಕೌಶಲ್ಯದ ಜತೆಗೆ ಪರಿಣಾಮಕಾರಿ ತರಬೇತಿ ತುಂಬಾ ಸಹಕಾರಿಯಾಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಅಧ್ಯಕ್ಷ ಜಿ.ಗಣೇಶ್ ಹೇಳಿದರು.

ಸಹ್ಯಾದ್ರಿ ಚಿಟ್ಸ್ ಸಂಸ್ಥೆಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ವಿವಿಧ ಸಂಸ್ಥೆಯ ಉದ್ಯೋಗಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ವ್ಯಾಪಾರದ ಕೌಶಲ್ಯ, ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು.

ಜೆಸಿಐ ಸಂಸ್ಥೆಯು ಪ್ರತಿಯೊಂದು ಕ್ಷೇತ್ರದಲ್ಲಿ ತರಬೇತಿ ಕಾರ್ಯಕ್ರಮಗಳನ್ನು ನೀಡುವುದರ ಜತೆಗೆ ಸಂಸ್ಥೆಯ ಕಾರ್ಯಕ್ಷಮತೆ ಹೆಚ್ಚಿಸಲು ಸಹಕರಿಸುತ್ತದೆ. ಆಸ್ಪತ್ರೆ, ಕಾರ್ಖಾನೆ, ಕೈಗಾರಿಕಾ ಹಾಗೂ ಐಟಿ ಕ್ಷೇತ್ರದ ಸಂಸ್ಥೆಗಳಲ್ಲಿ ಜೆಸಿಐ ಸಂಸ್ಥೆಯು ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದು ಹೇಳಿದರು.

ಜೆಸಿಐ ಸಂಸ್ಥೆ ಧಾರವಾಡ ವಲಯ ತರಬೇತುದಾರ ಪ್ರವೀಣ್ ದೇಶಪಾಂಡೆ ಮಾತನಾಡಿ, ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯಲು ಪ್ರಾಮಾಣಿಕ ಕೆಲಸ, ಸಮಯ ಪರಿಪಾಲನೆ ಹಾಗೂ ಗ್ರಾಹಕರಿಗೆ ಸೌಜನ್ಯದ ಸೇವೆಯು ಮುಖ್ಯವಾಗುತ್ತದೆ. ಸಂವಹನ ಕೌಶಲ್ಯವೂ ಉತ್ತಮ ಸೇವೆ ಒದಗಿಸಲು ಸಹಕಾರಿಯಾಗುತ್ತದೆ. ಈ ರೀತಿ ತರಬೇತಿ ಪಡೆದ ಸಂಸ್ಥೆಗಳು ಯಶಸ್ಸಿನತ್ತ ಸಾಗುತ್ತವೆ ಎಂದು ತಿಳಿಸಿದರು.

JCI Shivamogga ಸಹ್ಯಾದ್ರಿ ಚಿಟ್ಸ್ ಮಾರುಕಟ್ಟೆ ವಿಭಾಗದ ಯು.ಎಂ.ಶಿವರಾಜ್ ಮಾತನಾಡಿ, ಗ್ರಾಹಕರು ಮತ್ತು ಸಂಸ್ಥೆಯ ಪ್ರಾಮಾಣಿಕ ಸೇವೆಯು ಉದ್ಯಮದ ಯಶಸ್ಸಿಗೆ ಕಾರಣವಾಗುತ್ತವೆ ಎಂದು ತಿಳಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ಸಹ್ಯಾದ್ರಿ ಚಿಟ್ಸ್ ನೌಕರರು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಇತರ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Chamber Of Commerce Shivamogga ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯ : ಬಿ.ಗೋಪಿನಾಥ್

0

Chamber Of Commerce Shivamogga ರಕ್ತದಾನ ಜೀವ ಉಳಿಸುವ ಶ್ರೇಷ್ಠ ಕಾರ್ಯವಾಗಿದ್ದು, ರಕ್ತದಾನದಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ರಕ್ತದ ಬೇಡಿಕೆ ಹೆಚ್ಚಿದ್ದು, ಯುವಕರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರವಾದ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ದಾನಿಗಳ ದೇಹದಿಂದ ಸಂಗ್ರಹಿಸಿ ಅದನ್ನು ಪರೀಕ್ಷಿಸಿ ಇನ್ನೊಬ್ಬರಿಗೆ ದಾನ ಮಾಡುವ ಪ್ರಕ್ರಿಯೆ ಆಗಿದೆ. ಯುವಜನರು ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡುವುದರ ಜೊತೆಗೆ ಮತ್ತೊಬ್ಬರನ್ನು ಸಹ ಪ್ರೇರೇಪಿಸಿ ರಕ್ತದಾನಿಗಳನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ, ರಕ್ತದಾನಿ ಜಿ.ವಿಜಯ್ ಕುಮಾರ್ ಮಾತನಾಡಿ, ಪ್ರತಿಯೊಬ್ಬ ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಮೂರು ಬಾರಿ ರಕ್ತದಾನ ಮಾಡಬೇಕು. ಸಮಾಜದಲ್ಲಿ ನಿಜವಾದ ಹೀರೋಗಳು ಎಂದರೆ ರಕ್ತದಾನಿಗಳು ಎಂದರು.

ಶಿವಮೊಗ್ಗ ಜಿಲ್ಲೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ, 80 ಬಾರಿ ರಕ್ತದಾನ ಮಾಡಿದ ಎ.ಎಂ. ಸುರೇಶ್ ರಕ್ತದಾನದ ಅನುಭವವನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಸಿಎಂ ದೇವರಾಜ್ ಮಾತನಾಡಿ, ನಮ್ಮ ಸಂಸ್ಥೆ ಈಗಾಗಲೇ ತಮ್ಮ ವೃತ್ತಿಯ ಜೊತೆಗೆ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುವುದರ ಮುಖಾಂತರ ಇಂತಹ ಪವಿತ್ರ ಕಾರ್ಯಗಳನ್ನು ಸಹ ಮಾಡುತ್ತಿದೆ. ಸದಸ್ಯರು ರಕ್ತದಾನ ಮಾಡುವುದರ ಮುಖಾಂತರ ಪವಿತ್ರವಾದ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ ಎಂದರು.

Chamber Of Commerce Shivamogga ವೇದಿಕೆಯಲ್ಲಿ ವಿತರಕರ ಸಂಘದ ಉಪಾಧ್ಯಕ್ಷ ಬದ್ರಿನಾಥ್, ಕಾರ್ಯದರ್ಶಿ ಗಿರೀಶ್, ಪ್ರಶಾಂತ್, ಶಿವರಾಜ್ ಉಡುಗಣಿ, ಖಜಾಂಚಿ ಚಂದ್ರು, ಸಂಘದ ಎಲ್ಲಾ ನಿರ್ದೇಶಕರು ಸದಸ್ಯರು ಉಪಸ್ಥಿತರಿದ್ದರು.

Madhu Bangarappa ಕ್ಯಾನ್ಸರ್‌ ಬಾದಿತ ಮಕ್ಕಳ ಶಿಕ್ಷಣ ಮತ್ತು ಸಕಾಲಿಕ ಚಿಕಿತ್ಸೆಗೆ ವಿಶೇಷ ವಸತಿ ಶಾಲೆ : ಎಸ್.ಮಧು ಬಂಗಾರಪ್ಪ

0

Madhu Bangarappa ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವಸತಿ ಶಾಲೆಯೊಂದನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಶಿವಮೊಗ್ಗದ ತಮ್ಮ ಕಚೇರಿ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ವಿವರ ನೀಡಿ ಮಾತನಾಡುತ್ತಿದ್ದರು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಪೂರಕ ಮಾಹಿತಿಯನ್ನು ಸಂಗ್ರಹಿಸಿ, ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ, ಸಲ್ಲಿಸುವಂತೆ ಸೂಚಿಸಲಾಗಿತ್ತು. ಈಗಾಗಲೇ ಪಡೆದುಕೊಳ್ಳಲಾಗಿರುವ ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ರಾಜ್ಯದಲ್ಲಿ ಕ್ಯಾನ್ಸರ್‌ ಖಾಯಿಲೆಯಿಂದ ಬಾಧಿತರಾಗಿರುವ ಸುಮಾರು 3500ಮಕ್ಕಳು ಇರಬಹುದೆಂದು ಅಂದಾಜಿಸಲಾಗಿದೆ. ಕ್ಯಾನ್ಸರ್‌ ಗುಣಪಡಿಸಬಹುದಾದ ಕಾಯಿಲೆ ಆಗಿರುವುದರಿಂದ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಸರ್ಕಾರದ ವತಿಯಿಂದಲೇ ಚಿಕಿತ್ಸೆ ಕೊಡಿಸಲು ಉದ್ದೇಶಿಸಲಾಗಿದೆ. ಇದೇ ಸಂದರ್ಭದಲ್ಲಿ ಕ್ಯಾನ್ಸರ್‌ ಬಾದಿತ ಮಕ್ಕಳ ಲಾಲನೆ, ಪಾಲನೆ ದೃಷ್ಠಿಯಿಂದ ಪೋಷಕರಿಗೂ ವಸತಿ ಸೌಲಭ್ಯ ಕೊಡಿಸಲು ಗಮನಹರಿಸಲಾಗಿದೆ. Madhu Bangarappa ಆರಂಭಿಸಲು ಉದ್ದೇಶಿಸಲಾಗಿರುವ ಕ್ಯಾನ್ಸರ್‌ ಬಾದಿತ ಮಕ್ಕಳ ಶಾಲೆಗೆ ಆರಂಭದ ಹಂತದಲ್ಲಿ ಸುಮಾರು 1500ಮಕ್ಕಳು ದಾಖಲಾಗಬಹುದಾದ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ ಎಂದರು.
ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದ ಆರುದಿನಗಳ ಕಾಲ ಮೊಟ್ಟೆ ನೀಡಲು ಈ ಹಿಂದೆ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ವತಿಯಿಂದ ಆರ್ಥಿಕ ಸಹಕಾರ ಪಡೆದುಕೊಳ್ಳಲಾಗಿತ್ತು. ಅಲ್ಲದೇ ಅದಕ್ಕೆ ಪೂರಕವಾಗಿ ಸರ್ಕಾರದಿಂದಲೂ ಪೂರಕ ಅನುದಾನ ಬಿಡುಗಡೆಗೊಳಿಸಲಾಗುತ್ತಿತ್ತು. ಅದರಂತೆಯೇ ಈಗಾಗಲೇ ಇನ್‌ಫೋಸಿಸ್‌ ಸಂಸ್ಥೆಯ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ರಾಜ್ಯದ ಸುಮಾರು 50,000 ಶಿಕ್ಷಕರಿಗೆ ಕಲಿಕೆಯಲ್ಲಿ ಕೌಶಲ್ಯವನ್ನು ಬಳಸಿಕೊಂಡು ಬೋದಿಸಲು ಹಾಗೂ ದ್ವಿಭಾಷಾ ನೀತಿಗನುಗುಣವಾಗಿ ಬೋಧನಾ ಕ್ರಮವನ್ನು ಅಳವಡಿಸಿಕೊಳ್ಳಲು ಅನುಕೂಲವಾಗುವಂತೆ ತರಬೇತಿ ಕೊಡಿಸಲು ಕೋರಲಾಗಿದೆ. ಇನ್‌ಫೋಸಿಸ್‌ ಫೌಂಡೇಶನ್‌ ವತಿಯಿಂದ ಈಗಾಗಲೇ ರಾಜ್ಯದ 15000 ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದಾರೆ ಎಂದವರು ತಿಳಿಸಿದರು.
ಅಲ್ಲದೇ ಇನ್‌ಫೋಸಿಸ್‌ ಸಂಸ್ಥೆಯ ವತಿಯಿಂದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಹಾಗೂ ಅತ್ಯಾಧುನಿಕ ಪಾಠೋಪಕರಣಗಳನ್ನು ಒದಗಿಸುವ ನಿಟ್ಟಿನಲ್ಲಿ 200ಕೋಟಿ ರೂ.ಗಳ ಸಹಾಯಧನವನ್ನು ಪಡೆದು ಅಭಿವೃದ್ಧಿಪಡಿಸಲಾಗುತ್ತಿದೆ. ಅಲ್ಲದೇ ಇನ್ನಷ್ಟು ಅನುದಾನವನ್ನು ಸಿ.ಎಸ್.ಆರ್.ನಿಧಿಯಿಂದ ಪಡೆದು, ಜಿಲ್ಲೆಯ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿರುವ ಡಯಟ್‌ ಶಿಕ್ಷಕರ ತರಬೇತಿ ಕೇಂದ್ರಗಳನ್ನು ಸಂಶೋಧನಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಕೇಂದ್ರದಲ್ಲಿನ ಉಪನ್ಯಾಸಕರಿಗೆ ಆಯಾ ಜಿಲ್ಲೆಯಲ್ಲಿ ಅತ್ಯಂತ ಕನಿಷ್ಟ ಫಲಿತಾಂಶ ಪಡೆದ ಸರ್ಕಾರಿ ಅಥವಾ ಅನುದಾನಿತ ಶಾಲೆಗಳ ಉಸ್ತುವಾರಿ ಹೊಣೆಯನ್ನು ನೀಡಲಾಗುವುದು. ಇದರೊಂದಿಗೆ ಕೇಂದ್ರಗಳಲ್ಲಿ ಆಹ್ವಾನಿತ ಹಾಗೂ ವಿಷಯಾಧಾರಿತ ಶಿಕ್ಷಕರನ್ನು ಆಹ್ವಾನಿಸಿ ಅವರಿಂದ ವಿಶೇಷ ತರಗತಿಗಳನ್ನು ಆನ್‌ಲೈನ್‌ ಮೂಲಕ ನಡೆಸಲಾಗುವುದು. ಅದಕ್ಕಾಗಿ ರಾಜ್ಯದ ಆಯ್ದ 08ಸ್ಥಳಗಳಲ್ಲಿ ಸ್ಟುಡಿಯೋಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುವುದನ್ನು ನಿಯಂತ್ರಿಸಲು ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಬೋಧನಾ ತರಗತಿಗಳನ್ನು ನಡೆಸಲು ಅಳವಡಿಸಿಕೊಳ್ಳಲು ಸೂಚಿಸಲಾಗಿದ್ದು, ಪ್ರಥಮ ಹಂತದ ಕಾರ್ಯ ಪ್ರಗತಿಯಲ್ಲಿದೆ. ಇದು ಮಕ್ಕಳ ಕಲಿಕೆಗೆ ಸಹಕಾರಿಯಾಗಲಿದೆ ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚುವಲ್ಲಿಯೂ ಸಹಕಾರಿಯಾಗಲಿದೆ ಎಂದರು.
ಜಿಲ್ಲೆಯ ಸೊರಬ, ಸಾಗರ, ಶಿಕಾರಿಪುರ, ಭದ್ರಾವತಿ ಮತ್ತು ಶಿವಮೊಗ್ಗ ತಾಲೂಕುಗಳಲ್ಲಿ ಇತರೆ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಹೊಸದಾದ 05ಹಾಸ್ಟೆಲ್‌ಗಳನ್ನು ಆರಂಭಿಸಲು ಮಂಜೂರಾತಿ ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಸಂಖ್ಯೆಯ ಶಾಲೆಗಳ ಮಕ್ಕಳನ್ನು ಒಂದೆಡೆ ಸೇರಿಸಿ, ಅವರಿಗೆ ತರಗತಿಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ ಎಂದರು.
ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಸಿಮ್ಸ್‌ನ ಆಡಳಿತ ಮತ್ತು ಉಸ್ತುವಾರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯ ನಿರ್ವಹಣೆ ಮತ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳ ಅಳಲನ್ನು ಆಲಿಸಲಾಗಿದ್ದು, ಸಿಮ್ಸ್‌ನ ವೈದ್ಯಕೀಯ ಪ್ರಶಿಕ್ಷಣಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಗ್ಗಾನ್‌ ಆಸ್ಪತ್ರೆಯನ್ನು ಇರುವಂತೆಯೇ ಬಿಟ್ಟು ಪ್ರತ್ಯೇಕವಾದ ಜಿಲ್ಲಾ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಿಕೊಳ್ಳಲಾಗಿದ್ದು, ಪ್ರತ್ಯೇಕ ಕಟ್ಟಡ ನಿರ್ಮಿಸುವ ಉದ್ದೇಶ ಈಡೇರಲಿದೆ ಎಂದರು.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೊರತೆ ಇರುವ ಶಿಕ್ಷರನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು, ಸುಮಾರು 18000ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ 87,330ವಿದ್ಯಾರ್ಥಿಗಳು ಅದರಲ್ಲಿಯೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ದೂರದೃಷ್ಠಿಯೊಂದಿಗೆ ಅನೇಕ ಮಹತ್ವದ ಬದಲಾವಣೆಗಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದ ಅವರು, ಅತ್ಯಂತ ದೊಡ್ಡದಾಗಿರುವ ಶಿಕ್ಷಣ ಇಲಾಖೆಗೆ ಹೆಚ್ಚು ಪ್ರಮಾಣದ ಹಣ ಬಳಸಿಕೊಳ್ಳಲಾಗುತ್ತಿದೆ ಎಂದರು.
ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಉತ್ತೀರ್ಣರಾಗದ ಮಕ್ಕಳು ತಮ್ಮ ಶಿಕ್ಷಣವನ್ನು ಮೊಟಕುಗೊಳಿಸದೇ ಮುಂದವರೆಸಲು ಅನುಕೂಲವಾಗುವಂತೆ ಮೂರು ಹಂತದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಲ್ಕರಹಿತವಾಗಿ ಪರೀಕ್ಷೆಗಳಲ್ಲಿ ಪ್ರವೇಶಾವಕಾಶ ನೀಡಲಾಗುತ್ತಿರುವುದು ದೇಶದಲ್ಲಿಯೇ ಕರ್ನಾಟಕ ಮೊದಲು ಎಂದವರು ನುಡಿದರು.
ಒಟ್ಟಾರೆಯಾಗಿ ಶಿಕ್ಷಣ ಸಚಿವನಾಗಿ ಎರಡು ವರ್ಷಗಳ ಅವಧಿಯಲ್ಲಿ ಸಲ್ಲಿಸಿರುವ ಸೇವೆ ತೃಪ್ತಿಕರವಾಗಿದೆ. ಉಳಿದ ಅವಧಿಯಲ್ಲಿ ಇನ್ನಷ್ಟು ರಚನಾತ್ಮಕ ಬದಲಾವಣೆಗಳೊಂದಿಗೆ ಶಿಕ್ಷಣ ಕ್ಷೇತ್ರವನ್ನು ಮುನ್ನಡೆಸುವ ಉದ್ದೇಶ ಹೊಂದಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆರ್.ಪ್ರಸನ್ನಕುಮಾರ್‌, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ ಮತ್ತಿತರರು ಉಪಸ್ಥಿತರಿದ್ದರು.
ಛಾಯಾಚಿತ್ರ ವಿವರ : ನಗರದ ಹೊರವಲಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ನಿವಾಸಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಭದ್ರಾವತಿ-ಶಿವಮೊಗ್ಗ-ಬೊಮ್ಮನಕಟ್ಟೆ ಮಾರ್ಗವಾಗಿ ಸಂಚರಿಸುವ ಹೊಸ ಮಾರ್ಗಕ್ಕೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಬೊಮ್ಮನಕಟ್ಟೆಯಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೋವಿ ನಿಗಮದ ರಾಜ್ಯ ಅಧ್ಯಕ್ಷ ಎಸ್.ರವಿಕುಮಾರ್, ಯೋಗೀಶ್‌, ಆರ್.ಪ್ರಸನ್ನಕುಮಾರ್‌, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿ ದಿನೇಶ್‌, ರಾಮಚಂದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.