Friday, February 27, 2026
Friday, February 27, 2026
Home Blog Page 277

S.N. Chennabasappa ಎಸ್. ಎನ್. ಚನ್ನಬಸಪ್ಪ ಅವರ ನಿವಾಸಕ್ಕೆ ಕೆ. ಮಾಯಣ್ಣಗೌಡ ಭೇಟಿ

0

S.N. Chennabasappa ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಆಯ್ಕೆಯಾಗಿರುವ ಶ್ರೀ ಕೆ. ಮಾಯಣ್ಣಗೌಡ ಅವರು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ವಿವಿಧ ನಗರಾಭಿವೃದ್ಧಿ ವಿಚಾರಗಳಲ್ಲಿ ಫಲಪ್ರದ ಚರ್ಚೆ ನಡೆಸಿದರು.

S.N. Chennabasappa ಈ ಹಿಂದೆ ಕೂಡ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಅವರಿಗಿದ್ದು, ಅವರ ನವ ಚಿಂತನೆಗಳು ಮತ್ತು ಸ್ಪಷ್ಟ ಕಾರ್ಯಯೋಜನೆಗಳೊಂದಿಗೆ ಶಿವಮೊಗ್ಗ ನಗರದ ಮುಂದಿನ ಹಂತದ ಸಮಗ್ರ ಅಭಿವೃದ್ಧಿಗೆ ದಿಕ್ಕು ನೀಡಲಿ ಎಂದು ಶಾಸಕರು ಶುಭ ಕೋರಿದರು.

Rotary Shivamogga ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರ

0

Rotary Shivamogga ದೇಶ ಆರ್ಥಿಕವಾಗಿ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರವಾಗಿದೆ ಎಂದು ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಭಟ್ ಹೇಳಿದರು.

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಟ್ ಫಂಡ್ ಉದ್ಯಮದ ಕುರಿತು ಮಾತನಾಡಿ, ಜಿಎಸ್‌ಟಿ ತೆರಿಗೆ ರೂಪದಲ್ಲಿ ಹಾಗೂ ಆದಾಯ ತೆರಿಗೆ ರೂಪದಲ್ಲಿ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿಸುತ್ತಿದೆ. ಆರ್ಥಿಕ ದುರ್ಬಲರಿಗೆ, ಶ್ರೀಸಾಮಾನ್ಯರಿಗೆ, ನೌಕರರಿಗೆ ಹಾಗೂ ಉದ್ಯಮಿಗಳಿಗೆ ಚಿಟ್ ಫಂಡ್ ನಿಂದ ತುಂಬಾ ಅನುಕೂಲಕರವಾಗಿದೆ. ಲಕ್ಷಾಂತರ ಜನರಿಗೆ ಉದ್ಯೋಗ ಅವಕಾಶವನ್ನು ನೀಡಿದೆ ಎಂದು ತಿಳಿಸಿದರು.

ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ಮಾರುಕಟ್ಟೆ ನಿರ್ದೇಶಕ ಶಿವರಾಜ್ ಉಡುಗಣಿ ಮಾತನಾಡಿ, ಚಿಟ್ ಫಂಡ್ ಹೇಗೆ ನಡೆಯುತ್ತದೆ ಮತ್ತು ಇದರಿಂದ ಆಗುವ ಉಪಯೋಗಗಳ ಬಗ್ಗೆ ವಿವರವಾದ ಮಾಹಿತಿಯನ್ನು ಮತ್ತು ರಿಜಿಸ್ಟರ್ ಚಿಟ್ ಫಂಡ್ ಗಳಿಗೂ ಹಾಗೂ ಅನ್ ರಿಜಿಸ್ಟರ್ ಫಂಡ್ ಗಳಿಗೂ ಇರುವ ವ್ಯತ್ಯಾಸಗಳ ಬಗ್ಗೆ ವಿವರಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಸದಸ್ಯರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದರು. ಚಿಟ್ ಫಂಡ್ ಉಪಯೋಗಗಳ ಮಾಹಿತಿಯನ್ನು ಯುವ ಜನತೆಗೆ ಹಂಚಲು ಕೋರಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ನೋಂದಾಯಿತ ಚಿಟ್ ಫಂಡ್ ಸಂಸ್ಥೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕು. ಸರಿಯಾದ ಮಾಹಿತಿಯನ್ನು ಪರಿಣಿತರಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಾಗರಾಜ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸದಸ್ಯರು ಹಾಜರಿದ್ದರು.

World Blood Donor Day ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನ

0

World Blood Donor Day ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಿತರಕರ ಸಂಘವು ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಜೂನ್ 14ರಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರವರೆಗೆ ರಕ್ತದಾನ ಶಿಬಿರ ಆಯೋಜಿಸಿದೆ.
ಸ್ವಯಂಪ್ರೇರಿತ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ನಾಗರಿಕರು ಜೀವ ಉಳಿಸಲು ಕೊಡುಗೆ ನೀಡುವಂತೆ ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಶಿಬಿರದ ಸಮಯದಲ್ಲಿ ಸಂಗ್ರಹಿಸಿದ ರಕ್ತವನ್ನು ತುರ್ತು ಅಗತ್ಯಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳನ್ನು ಬೆಂಬಲಿಸಲು ಸ್ಥಳೀಯ ಆಸ್ಪತ್ರೆಗಳು ಮತ್ತು ರಕ್ತನಿಧಿಗಳಿಗೆ ಸರಬರಾಜು ಮಾಡಲಾಗುತ್ತದೆ.
World Blood Donor Day ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಸಂಘದ ಸಭಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಉದ್ಘಾಟಿಸುವರು. ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್ ಭಾಗವಹಿಸುವರು ಎಂದು ಶಿವಮೊಗ್ಗ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಎಂ.ಸಿ.ದೇವರಾಜ್ ಮತ್ತು ಕಾರ್ಯದರ್ಶಿ ಗಿರೀಶ್ ಒಡೆಯರ್ ತಿಳಿಸಿದ್ದಾರೆ.

Dhiksoochi adventure ದಿಕ್ಸೂಚಿ ಅಡ್ವೆಂಚರ್ಸ್‌ ವತಿಯಿಂದ ಜೂನ್ 22ಕ್ಕೆ ಕುರಿಂಜಲ್ ಟ್ರೆಕ್

0

Dhiksoochi adventure ಶಿವಮೊಗ್ಗ ನಗರದ ದಿಕ್ಸೂಚಿ ಅಡ್ವೆಂಚರ್ಸ್‌ ವತಿಯಿಂದ ಜೂನ್ 22ರಂದು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುರಿಂಜಲ್ ಟ್ರೆಕ್ ಪ್ರದೇಶಕ್ಕೆ ಚಾರಣ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗದಿಂದ ಜೂನ್ 22ರಂದು ಬೆಳಗ್ಗೆ 4ಕ್ಕೆ ಚಾರಣ ಪ್ರವಾಸ ಆರಂಭಗೊಳ್ಳಲಿದ್ದು, ಬೆಳಗ್ಗೆ 7ಕ್ಕೆ ಸ್ಥಳ ತಲುಪಿದ ನಂತರ ಬೆಳಗಿನ ಉಪಾಹಾರ ವ್ಯವಸ್ಥೆ ಇರಲಿದೆ. ನಂತರ ಫಾರೆಸ್ಟ್ ಚೆಕ್‌ಪೋಸ್ಟ್ ನಿಂದ 12 ಕೀಮಿ ಚಾರಣ ಆರಂಭಗೊಳ್ಳಲಿದೆ. ಕುರಿಂಜಲ್ ಪೀಕ್ ತಲುಪಿ ಕೆಲ ಸಮಯದ ಬಳಿಕ ಮತ್ತೆ ಚೆಕ್ ಪೋಸ್ಟ್ ಸ್ಥಳಕ್ಕೆ ಹಿಂದಿರುಗುವುದು. ಸಂಜೆ 6 ಗಂಟೆ ನಂತರ ಚಾರಣ ಸ್ಥಳದಿಂದ ರಾತ್ರಿ ವೇಳೆಗೆ ಶಿವಮೊಗ್ಗಕ್ಕೆ ಹಿಂದಿರುಗಲಾಗುವುದು.

Dhiksoochi adventure ಚಾರಣದಲ್ಲಿ ಉಪಾಹಾರ, ಊಟ, ಬಸ್ ಸೌಲಭ್ಯ, ಅರಣ್ಯ ಪ್ರವೇಶದ ಅನುಮತಿ ವ್ಯವಸ್ಥೆ ಮಾಡಲಾಗುತ್ತದೆ. ಗೈಡ್ ಕೂಡ ಇರಲಿದ್ದಾರೆ. ಚಾರಣದಲ್ಲಿ ಭಾಗಿಯಾಗಲು ಆಸಕ್ತ ಇರುವವರು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8277314779 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga Lokayukta Department ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ

0

Shivamogga Lokayukta Department ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

Shivamogga Lokayukta Department ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ, ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದರೇ, ಕೆಲಸ ಮಾಡಲು ಲಂಚ ಕೇಳುತ್ತಿದ್ದರೇ, ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದರೇ, ಕಳಪೆ ಕಾಮಗಾರಿ ನಡೆಯುತ್ತಿದ್ದರೇ ಮತ್ತು ಕಂಡುಬಂದರೇ, ಸರ್ಕಾರಿ ನೌಕರ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದರೇ, ಸರ್ಕಾರಿ ನೌಕರ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೇ, ಈ ಬಗ್ಗೆ ದೂರಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಲಿಖಿತ ಅಹವಾಲು ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Minority Welfare Department ಜೈನ ಬಸದಿಗಳ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

0

Minority Welfare Department ಶಿವಮೊಗ್ಗ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬಸದಿ ನೋಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಅರ್ಚಕರುಗಳ ಭಾವಚಿತ್ರ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ದಾಖಲೆ, ಅರ್ಚಕರ ಬ್ಯಾಂಕ್ ಖಾತೆ ವಿವರ, ಅರ್ಚಕರುಗಳ ಆಧಾರ್ ಕಾರ್ಡ್ ಪ್ರತಿ, ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ದೃಢೀಕರಣ ಪತ್ರ, ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆ, 200/- ರೂ.ಗಳ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಜೂ. 16 ರಿಂದ 30ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Minority Welfare Department ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 1 ನೆ ಮಹಡಿ, ಸತ್ಯ ಶ್ರೀ ಆರ್ಕೆಡ್, 5ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ ದೂ.ಸಂ.08182-220206, ಅಲ್ಪಸಂಖ್ಯಾತರ ಇಲಾಖೆಯ ಮಾಹಿತಿ ಕೇಂದ್ರಗಳ ಸಂಪರ್ಕ ಸಂಖ್ಯೆಗಳು ಶಿವಮೊಗ್ಗ – 7676888388, ಭದ್ರಾವತಿ- 9538853680, ತೀರ್ಥಹಳ್ಳಿ -.8861982835, ಸೊರಬ – 9513815513, ಶಿಕಾರಿಪುರ – 7829136724, ಹೊಸನಗರ – 9008447029, ಸಾಗರ -7338222907 ಇವರುಗಳನ್ನು ಸಂಪರ್ಕಿಸುವುದು.

International level abacus competition ಅಂತರ ರಾಷ್ಟ್ರೀಯ ಮಟ್ಟದ ಅಬಕಸ್ ಸ್ಪರ್ಧೆಯಲ್ಲಿ ಆಕಾಂಕ್ಷ ಎಂ.ಎ. ಪ್ರಥಮ ಬಹುಮಾನ

0

International level abacus competition ಸಿಂಗಾಪುರದಲ್ಲಿ ಆಯೋಜಿಸಿದ್ದ ಅಂತರ ರಾಷ್ಟ್ರೀಯ ಮಟ್ಟದ ಅಬಕಸ್ ಸ್ಪರ್ಧೆಯಲ್ಲಿ ಶಿವಮೊಗ್ಗ ಗೋಪಾಳದ ಗೆಲಾಕ್ಸಿ ಸೆಂಟರ್‌ನ ವಿದ್ಯಾರ್ಥಿನಿ ಆಕಾಂಕ್ಷ ಎಂ.ಎ. ಪ್ರಥಮ ಬಹುಮಾನ ಪಡೆದಿದ್ದಾಳೆ. ಈ ಪ್ರತಿಭಾನ್ವಿತೆಯನ್ನು ಶಕ್ಷಕ ಕುಶ ರಾಜು ಸ್ವಾಮಿ, ನಿರ್ಧೇಶಕರಾದ ರಚನಾ ಮೆಹತಾ, ಸ್ವಪ್ನಿಲ್ ಮೆಹತಾ, ಶೈಲಜಾ ಒಡೆಯರ್ ಹಾಗೂ ಪ್ರಕಾಶ್ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.

District Legal Services Authority ಬಾಲಕಾರ್ಮಿಕ ಪದ್ಧತಿ ನಾಗರಿಕ ಸಮಾಜದ ಕಳಂಕ : ನ್ಯಾ. ಸಂತೋಷ್‌ಎಂ.ಎಸ್.

0

‌District Legal Services Authority ಬಾಲಕಾರ್ಮಿಕ ಪದ್ದತಿ ಈ ಸಮಾಜದ ಅನಿಷ್ಠ ಹಾಗೂ ಕಳಂಕವಾಗಿದ್ದು, ಅದನ್ನು ಬೇರುಸಹಿತ ಕಿತ್ತುಹಾಕುವಲ್ಲಿ ಸಮಾಜದ ಎಲ್ಲಾ ಸ್ಥರದ ನಾಗರೀಕರು ಸಹಕರಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್‌ಎಂ.ಎಸ್.‌ಅವರು ಹೇಳಿದರು.
ಜಿಲ್ಲಾ ಕಾರ್ಮಿಕ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಿಕ್ಷಣ ಇಲಾಖೆ, ಜಿಲ್ಲಾ ವಕೀಲರ ಸಂಘ ಮತ್ತು ಶಿವಮೊಗ್ಗ ಹಾಲು ಒಕ್ಕೂಟ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮೇಲು-ಕೀಳು, ಜಾತಿ-ಮತ-ಪಂಥಗಳೆಲ್ಲವನ್ನು ಮೀರಿ, ಈ ಸಮಾಜದ ಪ್ರತಿ ವ್ಯಕ್ತಿಯೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಶಿಕ್ಷಣ ಪಡೆದ ಎಲ್ಲರೂ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಮಾತ್ರವಲ್ಲ ಅವರು ಭವಿಷ್ಯದಲ್ಲಿ ನೆಮ್ಮದಿಯ ಜೀವನ ನಿರ್ವಹಣೆಗೆ ಸೂಕ್ತ ವಾತಾವರಣ ಕಲ್ಪಿಸುವಲ್ಲಿ ಮಾರ್ಗದರ್ಶಿಗಳಾಗಬೇಕೆಂದವರು ನುಡಿದರು.
ಅನೇಕ ಕಡೆಗಳಲ್ಲಿ ಇಂದಿಗೂ ಅಸಂಖ್ಯಾತ ಬಾಲಕರನ್ನು ಅತ್ಯಂತ ಕಡಿಮೆ ಕೂಲಿಗೆ ಬಳಸಿಕೊಂಡು ಅವರು ಬಾಲ್ಯವನ್ನು ಕಿತ್ತುಕೊಳ್ಳುತ್ತಿದ್ದಾರೆ. ಅಲ್ಲದೇ ಅವರ ಭವಿಷ್ಯಕ್ಕೆ ಪೆಟ್ಟುಕೊಡುತ್ತಿದ್ದಾರೆ. ಇದರಿಂದಾಗಿ ಅನೇಕ ಸಂದರ್ಭಗಳಲ್ಲಿ ಮಾನವ ಕಳ್ಳಸಾಗಾಣೆ ಪ್ರಕರಣಗಳೂ ಗೋಚರಿಸುತ್ತಿವೆ. ಮಕ್ಕಳು ಬಾಲಕಾರ್ಮಿಕರಾಗಿ ತಮ್ಮ ಅಮೂಲ್ಯ ಬಾಲ್ಯವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸರ್ಕಾರಗಳು ಈ ನಿಟ್ಟಿನಲ್ಲಿ ಅನೇಕ ಕಾಯ್ದೆ-ಕಾನೂನುಗಳನ್ನು ಜಾರಿಗೊಳಿಸಿದ್ದಾಗ್ಯೂ ಈ ಅನಿಷ್ಟ ಇನ್ನೂ ಜೀವಂತವಾಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ ಎಂದರು.
District Legal Services Authority ಬಾಲಕಾರ್ಮಿಕರನ್ನು ಕೆಲಸ-ಕಾರ್ಯದಿಂದ ಮುಕ್ತಿಗೊಳಿಸಿ, ಅವರಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು. ಬಾಲಕಾರ್ಮಿಕರನ್ನು ಬಳಸಿ ಉತ್ಪಾದಿಸುವ ಯಾವುದೇ ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸುವುದನ್ನು ತಕ್ಷಣದಿಂದ ನಿಲ್ಲಿಸುವಂತೆ ಸೂಚಿಸಿದ ಅವರು ಉಚಿತ ಮತ್ತು ಕಡ್ಡಾಯ ಶಿಕ್ಷಣ ಮಗುವಿನ ಹಕ್ಕು. ಅದನ್ನು ಪ್ರತಿ ಮಗುವಿಗೆ ದೊರಕಿಸಿಕೊಡುವುದು ಪ್ರತಿ ನಾಗರೀಕರ ಕರ್ತವ್ಯವಾಗಿದೆ ಎಂದರು.
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು, ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳವುದು ಶಿಕ್ಷಾರ್ಹ ಅಪರಾಧ. ಕಾರ್ಮಿಕ ಪದ್ದತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಕಾನೂನಿನಲ್ಲಿ ಶಿಕ್ಷೆಗೆ ಅವಕಾಶವಿರುವುದನ್ನು ಮರೆಯಬಾರದು. ಸಾರ್ವಜನಿಕರು ಅಂತಹ ಮಕ್ಕಳ ಶಿಕ್ಷಣ ಮತ್ತು ಪುನರ್ವಸತಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಮಕ್ಕಳನ್ನು ಕೇವಲ ಬಾಲಕಾರ್ಮಿಕ ಕಾನೂನು ದೃಷ್ಠಿಯಿಂದ ನೋಡದೆ ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಪೋಷಿಸಬೇಕು. ಪ್ರತಿ ಮಕ್ಕಳೂ ದೇಶದ ಭವಿಷ್ಯದ ಪ್ರತೀಕ. ಮಕ್ಕಳನ್ನು ಶೈಕ್ಷಣಿಕ ಚಟುವಟಿಕೆಗಳಿಂದ ವಿಮುಖರನ್ನಾಗಿ, ಅನ್ಯ ಕೆಲಸಗಳಲ್ಲಿ ತೊಡಗಿಸಿಕೊಂಡು ಶೋಷಿಸುವುದು ಆರೋಗ್ಯವಂತ ನಾಗರೀಕ ಸಮಾಜಕ್ಕೆ ಕಳಂಕವಾಗಿದೆ. – ಎಂ.ಪಿ.ವೇಣುಗೋಪಾಲ್‌, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಇಲಾಖೆ, ಶಿವಮೊಗ್ಗ.

ಬುದ್ದಿಜೀವಿಗಳನ್ನೇ ಹೊಂದಿರುವ ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿಹೆಚ್ಚು ಬಾಲ್ಯವಿವಾಹ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಮಕ್ಕಳಿಗೆ ಕಳೆದು ಹೋದ ಅಮೂಲ್ಯ ಬಾಲ್ಯವನ್ನು ಮತ್ತೆ ದೊರಕಿಸಿಕೊಡುವುದು ಸಾಧ್ಯವಿಲ್ಲ. ಮಕ್ಕಳು ತಮ್ಮ ಬಾಲ್ಯವನ್ನು ಸಂಭ್ರಮಿಸುವಂತಾಗಬೇಕು. – ತಾಜುದ್ದೀನ್‌ಖಾನ್‌, ಅಧ್ಯಕ್ಷರು, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಶಿವಮೊಗ್ಗ.
ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9.30ಕ್ಕೆ ನಗರದ ಶಿವಪ್ಪನಾಯಕ ವರ್ತುಲದಿಂದ ಬಿ.ಹೆಚ್.‌ರಸ್ತೆಯ ಸರ್ಕಾರಿ ಪ್ರೌಢಶಾಲೆಯವರೆಗೆ ಸ್ಥಬ್ಧ ಚಿತ್ರದ ವಾಹನದ ಮೆರವಣಿ ಹಾಗೂ ಕರಪತ್ರಗಳ ಮೂಲಕ ಕಾನೂನು ಅರಿವು ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ.ಮಂಜುನಾಥ ನಾಯಕ್‌ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರಸ್ವಾಮಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್‌ಖಾನ್‌, ಕಾರ್ಮಿಕ ನಿರೀಕ್ಷಕಿ ಶ್ರೀಮತಿ ಸುಖಿತಾ ಕೆ.ಸಿ., ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಘುನಾಥ್‌ಎ.ಎಸ್.‌ಮತ್ತಿತರರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ದಾದಾಪೀರ್‌ಮತ್ತಿತರರು ಉಪಸ್ಥಿತರಿದ್ದರು.

Yadav School of Chess ಯಾದವ ಸ್ಕೂಲ್ ಆಪ್ ಚೆಸ್ ರವೀಂದ್ರನಗರದಲ್ಲಿ ಚೆಸ್ ತರಬೇತಿ

0

Yadav School of Chess ರವೀಂದ್ರನಗರದ ಯಾದವ ಸ್ಕೂಲ್ ಆಪ್ ಚೆಸ್ ವತಿಯಿಂದ ಜೂ. 16ರಿಂದ ಫೆ. 2026 ರವರೆಗೆ ವಿಶೇಷ ಚೆಸ್ ತರಬೇತಿ ಶಿಬಿರ ನಡೆಯಲಿದೆ.
ಚೆಸ್ ಆಟವು ಮಾನಸಿಕವಾಗಿ ಹಾಗೂ ಬೌದ್ಧಿಕವಾಗಿ ವಿಧ್ಯಾರ್ಥಿಗಳನ್ನು ಸಬಲಗೊಳಿಸುವಲ್ಲಿ ಪ್ರಪಂದಲ್ಲಿರುವ ಎಲ್ಲಾ ಆಟಗಳಿಗಿಂತ ಪ್ರಮುಖ ಪಾತ್ರ ವಹಿಸುತ್ತದೆ. ವಿಧ್ಯಾರ್ಥಿಗಳಿಗೆ ಅತ್ಯಗತ್ಯವಾದ ಜ್ಞಾಪಕ, ಏಕಾಗ್ರತೆ, ತರ್ಕ, ತಾಳ್ಮೆ, ಆಲೋಚನೆ, ಊಹಾಶಕ್ತಿಗಳಂತಹ ಅದ್ಬುತ ಗುಣಗಳನ್ನು ನಿಯಮಿತವಾಗಿ ಹಾಗೂ ಕ್ರಮಭದ್ದವಾಗಿ ಚೆಸ್ ಆಟ ಆಡುವುದರಿಂದ ಮತ್ತು ಅಬ್ಯಾಸಿಸುವುದರಿಂದ ಪಡೆಯಬಹುದು ಎಂದು ತರಬೇತುದಾರ ಪ್ರಾಣೇಶ ಯಾದವ್ ತಿಳಿಸಿದ್ದಾರೆ.
Yadav School of Chess ಚೆಸ್ ತರಬೇತಿಯು ಶ್ರೀನಿವಾಸ ಕೃಪ , ರವೀಂದ್ರನಗರ , 2ನೇ ತಿರುವು, ಶಿವಮೊಗ್ಗದಲ್ಲಿ ನಡೆಯಲಿದ್ದುö, 1ನೇ ಬ್ಯಾಚ್ ಸೋಮವಾರ-ಮಂಗಳವಾರ ಸಂಜೆ 6 ರಿಂದ 7 ರವರೆಗೆ, 2ನೇ ಬ್ಯಾಚ್ ಬುಧವಾರ-ಗುರುವಾರ ಸಂಜೆ 6 ರಿಂದ 7 ರವರೆಗೆ ನಡೆಯಲಿದೆ. ಪ್ರತಿ ಬ್ಯಾಚ್‌ನಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ. ಆಸಕ್ತರು ಪ್ರಾಣೇಶ ಯಾದವ್ ಮೊ. 9242401702, 9743819678ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

Nijasharana Ambigara Chowdaiah Development Corporation ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

0

Nijasharana Ambigara Chowdaiah Development Corporation ನಿಜಶರಣ ಅಂಬಿಗರ ಚೌಡಯ್ಯ ಅಭಿವೃಧ್ಧಿ ನಿಗಮದಿಂದ 2025-26 ನೇ ಸಾಲಿಗೆ ವಿವಿಧ ಯೋಜನೆಗಳಾದ ಅರಿವು ಶೈಕ್ಷಣಿಕ ಸಾಲ ಯೋಜನೆ, (ಅರಿವು ಶೈಕ್ಷಣಿಕ ಸಾಲ ಯೋಜನೆ) (ರಿನಿವಲ್) ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, (ಹೊಸ ವಿದ್ಯಾರ್ಥಿಗಳಿಗೆ) ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆಗಳಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ,(ಅAಬಿ) ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪ ಜಾತಿಗಳ (ವಿಶ್ವಕರ್ಮ, ಉಪ್ಪಾರ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತು ಪಡಿಸಿ) ಆಸಕ್ತರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
Nijasharana Ambigara Chowdaiah Development Corporation ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆಯಾಗಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ ಅಥವಾ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ನಿಗಮವು ಅನುಷ್ಟಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ಮತ್ತು ನಿರ್ದೇಶಕರ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಅಗತ್ಯವಾಗಿರುತ್ತದೆ.
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಜುಲೈ 4 ರೊಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೋಜನೆ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://ambigaradevelopment.karnataka.gov.in ಅಥವಾ ನಿಗಮದ ದೂ. ಸಂ.08182-229634 ಅಥವಾ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಸಂಪರ್ಕಿಸುವುದು.