Friday, February 27, 2026
Friday, February 27, 2026
Home Blog Page 279

karnataka Sanga Shivamogga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ 2025ರ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಸಮಾರಂಭ

0

karnataka Sanga Shivamogga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಜೂನ್ 2025ರ ಭಾನುವಾರ, ‘2025ರ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಸಮಾರಂಭ’ ವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಸಂಜೆ 5:30 ಘಂಟೆಗೆ ನಾಡಿನ ಖ್ಯಾತ ಮಾನಸಿಕ ಆರೋಗ್ಯ ತಜ್ಞರು, ವಿಜ್ಞಾನಿ, ಸಾಹಿತಿಗಳಾದ ಬೆಂಗಳೂರಿನ ಡಾ. ಸಿ.ಆರ್. ಚಂದ್ರಶೇಖರ್ ಅವರಿಗೆ ‘ಡಾ. ಕೆ. ಶಿವರಾಮ ಕಾರಂತ ವಿಜ್ಞಾನ ಸಾಹಿತ್ಯ ಪ್ರಶಸ್ತಿ’ ಯನ್ನು ಮತ್ತು ಪ್ರಸಿದ್ಧ ಸಾಹಿತಿ, ಸಂಶೋಧಕರಾದ ಮೈಸೂರಿನ ಡಾ. ಟಿ.ಎನ್. ನಾಗರತ್ನ ಅವರಿಗೆ ‘ಡಾ. ಶಂಬಾ ಜೋಶಿ ಸಂಶೋಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು.

ಡಾ. ಸಿ.ಆರ್. ಚಂದ್ರಶೇಖರ್ ಅವರು ಕುರಿತು ಡಾ. ಕೆ.ಎಸ್. ಪವಿತ್ರ, ವೈದ್ಯೆ, ಸಾಹಿತಿ, ಶಿವಮೊಗ್ಗ ಮತ್ತು ಡಾ. ಟಿ.ಎನ್. ನಾಗರತ್ನ ಅವರ ಕುರಿತು ಪ್ರೊ. ಎನ್.ಎಂ. ತಳವಾರ್, ಲೇಖಕರು, ಸಂಶೋಧಕರು ಮೈಸೂರು ಇವರುಗಳು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಪ್ರಶಸ್ತಿಯು 25,000/- ರೂ. (ಇಪ್ಪತ್ತೈದು ಸಾವಿರ) ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿ ಅವರು ವಹಿಸಲಿದ್ದಾರೆ.

karnataka Sanga Shivamogga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ

Shivamogga Chamber of Commerce ಎನ್.ಗೋಪಿನಾಥ್‌ಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನ

0

Shivamogga Chamber of Commerce ಹೋಟೆಲ್ ಉದ್ಯಮದ ಜತೆಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಉದ್ಯಮಿ ಎನ್.ಗೋಪಿನಾಥ್ ಅವರ ಸೇವೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಕರ್ನಾಟಕ ಹೋಟೆಲ್‌ಗಳ ಸಂಘದಿಂದ ಆತಿಥ್ಯ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಎನ್.ಗೋಪಿನಾಥ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದಿಸಿ ಮಾತನಾಡಿದರು.

ಗೋಪಿನಾಥ್ ಅವರು ಮಥುರಾ ಗೋಪಿ ಎಂದೇ ಶಿವಮೊಗ್ಗದಲ್ಲಿ ಪ್ರಸಿದ್ಧರಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಸಂಘ ಸಂಸ್ಥೆಗಳಲ್ಲಿ ಮಹತ್ತರ ಜವಾಬ್ದಾರಿ ನಿರ್ವಹಿಸುವ ಸೇವಾ ಕಾರ್ಯಗಳಲ್ಲಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಕ್ಷೇತ್ರ, ಹೋಟೆಲ್ ಉದ್ಯಮ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ನಿರಂತರವಾಗಿ ಕಾರ್ಯಾಗಾರ, ತರಬೇತಿ, ಸಂವಾದ, ವಿಚಾರಗೋಷ್ಠಿಗಳನ್ನು ಆಯೋಜಿಸಿಕೊಂಡು ಹೊಸ ಚಿಂತನೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ರೋಟರಿ ಸಂಸ್ಥೆ, ಸುಗಮ ಸಂಗೀತ ಪರಿಷತ್, ಪ್ರವಾಸೋದ್ಯಮ ವೇದಿಕೆ, ಹೋಟೆಲ್ ಮಾಲೀಕರ ಸಂಘ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಯುವಜನರಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದ್ದಾರೆ. ಮಥುರಾ ಪ್ಯಾರಾಡೈಸ್ ಮೂಲಕ ನೂರಾರು ಜನರಿಗೆ ಉದ್ಯೋಗ ನೀಡಿದ್ದಾರೆ ಎಂದು ತಿಳಿಸಿದರು.

Shivamogga Chamber of Commerce ಇದೇ ಸಂದರ್ಭದಲ್ಲಿ ಎನ್.ಗೋಪಿನಾಥ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಸುಕುಮಾರ್, ಖಜಾಂಚಿ ಮನೋಹರ್, ಡಾ. ಲಕ್ಷ್ಮೀದೇವಿ ಗೋಪಿನಾಥ್ ಹಾಗೂ ಸಂಘದ ನಿರ್ದೇಶಕರು ಹಾಜರಿದ್ದರು.

Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿ ಬೆಳೆಸಿಕೊಳ್ಳಬೇಕು: ಕವಿತಾ

0

Shivamogga Multipurpose Social Service Society ವಿದ್ಯಾರ್ಥಿಗಳು ಪರಿಸರದ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಅಸಂಘಟಿತ ಕೂಲಿ ಕಾರ್ಮಿಕರ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಕವಿತಾ ಥೋರತ್ ಹೇಳಿದರು.
ಅವರು ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿಯಿಂದ ಆಯನೂರಿನ ಮಂಡಘಟ್ಟ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಚೈತ್ರದ ಚಿಗುರು ಮತ್ತು ಪರಿಸರ ದಿನಾಚರಣೆ ಕಾರ್ಯಕ್ರಮಲ್ಲಿ ಮಾತನಾಡಿದರು.
ಪರಿಸರವನ್ನು ಉಳಿಸಿದರೆ ನಾವು ಉಳಿಯುತ್ತೇವೆ. ಆದ್ದರಿಂದ ಪರಿಸರವನ್ನು ನಾಶಮಾಡದೇ ಪರಿಸರ ಉಳಿವಿಗಾಗಿ ಪ್ರತಿಯೊಬ್ಬರು ಜಾಗೃತರಾಗಬೇಕು. ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರ ನಾಶವಾಗುತ್ತದೆ. ಪ್ಲಾಸ್ಟಿಕ್‌ನಿಂದ ಪ್ರಾಣಿ ಸಂಕುಲದ ಮೇಲೂ ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಿರುವಂತೆ ಮಕ್ಕಳಲ್ಲಿ ಅರಿವು ಮೂಡಿಸಿದರು.
Shivamogga Multipurpose Social Service Society ಹಸರೀಕರಣಕ್ಕೆ ಆದ್ಯತೆ ಕೊಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮುಂದಿನ ಪೀಳಿಗೆಗೂ ಪರಿಸರ ಉಳಿಯಬೇಕು. ಪ್ರಾಣಿ, ಪಕ್ಷಿಗಳು ನಮ್ಮೊಂದಿಗೆ ಜೀವಿಸುತ್ತವೆ. ನಮ್ಮ ರಾಜ್ಯದಲ್ಲಿ ಪರಿಸರ ಎಂದರೆ ತಕ್ಷಣ ನೆನಪಾಗುವ ಹೆಸರು ಸಾಲುಮರದ ತಿಮ್ಮಕ್ಕ. ನೂರಾರು ಸಸಿಗಳನ್ನು ನೆಟ್ಟು ಪರಿಸರಕ್ಕೆ ಕೊಡುಗೆ ನೀಡಿರುವ ತಿಮ್ಮಕ್ಕ, ತಾವು ನೆಟ್ಟ ಸಾಲು ಸಸಿಗಳಿಂದಲೇ ಸಾಲು ಮರದ ತಿಮ್ಮಕ್ಕ ಎಂಬ ಹೆಸರು ಪಡೆದುಕೊಂಡರು ಎಂದರು.
ಕಾರ್ಯಕ್ರಮದಲ್ಲಿ ಫಾದರ್ ಡಿಸೋಜ, ಸೊಸೈಟಿಯ ಕುಮುದ, ಜಗದೀಶ್, ವಸೂದ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಗ್ರಾಮಸ್ಥರು ಉಪಸ್ಥಿತರಿದ್ದರು.

Chamber of Commerce Shivamogga ರಕ್ತದಾನಕ್ಕಿಂತ ಬೇರೆ ಶ್ರೇಷ್ಠ ದಾನ ಮತ್ತೊಂದಿಲ್ಲ: ಜಿ ವಿಜಯಕುಮಾರ್

0

Chamber of Commerce Shivamogga ಮಾನವೀಯ ಸೇವೆಗಳಲ್ಲಿ ರಕ್ತದಾನವು ಒಂದು ಪವಿತ್ರವಾದ ದಾನ ರಕ್ತದಾನಕ್ಕಿಂತ ಶ್ರೇಷ್ಠವಾದ ದಾನ ಮತ್ತೊಂದಿಲ್ಲ ಎಂದು ಸ್ವಯಂ ಪ್ರೇರಿತ ರಕ್ತದಾನಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ ವಿಜಯಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದರು. ರಕ್ತದಾನ ಮಾಡುವುದರಿಂದ ಆಯಸ್ಸು ವೃದ್ಧಿ ಜೊತೆಗೆ ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆ ವರದಿ ಪ್ರಕಾರ ರಕ್ತದಾನದಿಂದ ಶೇಕಡ 80 ಪರ್ಸೆಂಟ್ ಹೃದಯ ಘಾತ ಕಡಿಮೆಯಾಗುತ್ತದೆ ಹಾಗೂ ದೇಹದಲ್ಲಿರುವ ಕೊಬ್ಬಿನ ಅಂಶ ಹೊರ ಹೋಗುವುದರಿಂದ ನಾವು ಸದಾ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತದೆ ಬಿಎಸ್ಎ ಹರ್ಕ್ಯುಲಸ್ ಸೈಕಲ್ ಸಂಸ್ಥೆ ಹಾಗೂ ಮೂರ್ತಿ ಸೈಕಲ್ ಅಂಡ್ ಫಿಟ್ನೆಸ್ ಸೆಂಟರ್ ವತಿಯಿಂದ ಮತ್ತು ವಂದನ ಬೇಕರಿಯವರ ಸಹಕಾರದೊಂದಿಗೆ ಆಯೋಜಿಸಲಾದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. Chamber of Commerce Shivamogga ಮೂಢನಂಬಿಕೆಯಿಂದ ಹೊರ ಬಂದು ರಕ್ತದಾನ ಮಾಡುವುದರ ಜೊತೆಗೆ ಬೇರೆಯವರನ್ನು ಸಹ ಪ್ರೇರೇಪಿಸಬೇಕು ಎಷ್ಟೋ ಬಾರಿ ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನ ಕಳೆದುಕೊಳ್ಳುತ್ತಿದ್ದಾರೆ ಶಿವಮೊಗ್ಗ ಸೈಕಲ್ ಕ್ಲಬ್ ಸಂಸ್ಥೆ ಕರ್ನಾಟಕ ರಾಜ್ಯದಲ್ಲಿ ಒಂದು ಮಾದರಿ ಸಂಸ್ಥೆಯಾಗಿದೆ ಸಾಕಷ್ಟು ಜನ ಗಿನ್ನಿಸ್ ಲಿಮ್ಕಾ ದಾಖಲೆ ಪ್ರಶಸ್ತಿ ಪುರಸ್ಕೃತರು ಈ ಸಂಸ್ಥೆಯಲ್ಲಿ ದ್ದಾರೆ ತಮ್ಮ ವೃತ್ತಿಯ ಜೊತೆಗೆ ರಕ್ತದಾನ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡಿರುವುದು ನಿಜಕ್ಕೂ ಹೆಮ್ಮೆ ಎಂದು ನುಡಿದರು. ಡಾ. ಶೇಖರ್ ಗೌಳೆರ್ ಮಾತನಾಡುತ್ತಾ ದಾನ ಮಾಡಿದ ರಕ್ತ ದುರುಪಯೋಗವಾಗಬಾರದು ನಾವು ಮಾಡಿದ ರಕ್ತದಾನದಿಂದ ಇಂದು ಮೂರು ಜನರ ಪ್ರಾಣವನ್ನು ಉಳಿಸಬಹುದಾಗಿದೆ ಮನುಕುಲದ ಒಂದು ಶ್ರೇಷ್ಠವಾದ ದಾನ ರಕ್ತದಾನ ಎಲ್ಲರೂ ರಕ್ತದಾನ ಮಾಡುವುದರ ಮುಖಾಂತರ ಸದೃಢವಾದ ಸಮಾಜವನ್ನು ನಿರ್ಮಾಣ ಮಾಡೋಣ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ತಿ ಸೈಕಲ್ ಅಂಡ್ ಫಿಟ್ನೆಸ್ ಸೆಂಟರ್ ನ. ಮಾಲೀಕರು ಶಿವಮೊಗ್ಗ ಸೈಕಲ್ ಕ್ಲಬ್ಬಿನ ನಿರ್ದೇಶಕರಾದ ನರಸಿಂಹ ಮೂರ್ತಿ ಅವರ ವಹಿಸಿ ಮಾತನಾಡುತ್ತ ಪ್ರತಿ ವರ್ಷ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ನಮ್ಮ ಸೈಕಲ್ ಕ್ಲಬ್ ವತಿಯಿಂದ ರಕ್ತದಾನ ಶಿಬಿರವನ್ನು ಹಲವಾರು ವರ್ಷಗಳಿಂದ ಆಯೋಜಿಸುತ್ತಾ ಬಂದಿದ್ದೇವೆ. ನಾವು ರಕ್ತದಾನ ಮಾಡುವುದರ ಜೊತೆಗೆ ನಮ್ಮ ಸ್ನೇಹಿತರನ್ನು ಕರೆತಂದು ರಕ್ತದಾನ ಮಾಡೋಣ ಎಂದು ರಕ್ತದಾನ ಮಾಡಿದ ಎಲ್ಲಾ ಸೈಕಲ್ ಸವಾರರಿಗೆ ಪ್ರಮಾಣ ಪತ್ರ ನೆನಪಿನ ಕಾಣಿಕೆ ಹಾಗೂ ಸಿಹಿ ತಿಂಡಿಯ ಪ್ಯಾಕೆಟ್ ಅನ್ನು ನೀಡಿ ಗೌರವಿಸಿದರು. ವಂದನಾ ಬೇಕರಿಯ ಸಿಬ್ಬಂದಿ ವರ್ಗದವರು ಸುಮಾರು ಹತ್ತು ಜನರ ತಂಡ ರಕ್ತದಾನ ಮಾಡಿ ಮಾನವೀಯತೆಯನ್ನು ಮೆರೆದರು ರಕ್ತದಾನ ಶಿಬಿರದಲ್ಲಿ ಸೈಕಲ್ ಕ್ಲಬ್ಬಿನ ಹರೀಶ್ ಪಟೇಲ್. ನರಸಿಂಹಮೂರ್ತಿ. ಭಾಸ್ಕರ್. ಚಂದ್ರಶೇಖರ್ ಏಕೆ ನಾಗರಾಜ್ ನೇಹಾ ಮಂಜು
ರಜನಿಕಾಂತ್. ವಾಗೀಶ್ ವಿಜಯಕುಮಾರ್ ಗಿರೀಶ್ ಕಾಮತ್ ಹಾಗೂ ಸದಸ್ಯರು ಉಪಸ್ಥಿತರಿದ್ದರು 40ಕ್ಕೂ ಹೆಚ್ಚು ಜನ ಸೈಕಲ್ ಸವಾರರು ರಕ್ತದಾನ ಮಾಡಿದರು.

Nivedan Nempe ಅಡಿಕೆ ಹಾಳೆಯ ಅಮೇರಿಕಾ ಕ್ಯಾತೆಗೆ ಸಿಕ್ತು ಪರಿಹಾರ, ಸಂಶೋಧನಾಕಾರನಿಂದ ಹೊಸ ಆವಿಷ್ಕಾರ

0

Nivedan Nempe ಅಡಿಕೆ ಹಾಳೆಯ ಅಮೇರಿಕಾ ಕ್ಯಾತೆಗೆ ಸಿಕ್ತು ಪರಿಹಾರ ದೊರೆತಿದ್ದು, ಶಿವಮೊಗ್ಗದ ಯುವ ಉದ್ಯಮಿ ಹಾಗೂ ಸಂಶೋಧನಾಕಾರನಿಂದ ಹೊಸ ಆವಿಷ್ಕಾರ ನಡೆದಿದೆ.

ಶಿವಮೊಗ್ಗ ಯುವಕನ ಹೊಸ ಸಂಶೋಧನೆಯಿಂದ ಅಡಿಕೆ ಹಾಳೆಯನ್ನು ಅಮೆರಿಕಕ್ಕೂ ಸೇರಿದಂತೆ ಹಲವು ದೇಶಗಳಿಗೆ ಇನ್ಮುಂದೆ ಕಳುಹಿಸಬಹುದಾಗಿದೆ.

ಅಡಿಕೆ ಹಾಳೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಎಂದು ಅಮೇರಿಕಾ ಹಾಗೂ ಇತರೆ ರಾಷ್ಟ್ರಗಳು ಆಮದು ನಿಲ್ಲಿಸಿದ್ದವು. ಅಡಿಕೆ ಬ್ಯಾನ್ ನಿಂದ ಭಾರತಕ್ಕೆ ವಾರ್ಷಿಕ ನಾಲ್ಕು ಸಾವಿರ ಕೋಟಿ ರೂ. ನಷ್ಟ ಉಂಟಾಗಿತ್ತು.

ಹಾಳೆ ತಟ್ಟೆ ಮೇಲ್ಮೈಗೆ ಫುಡ್ ಗ್ರೇಡ್ ಪೇಪರ್ ಬಳಸಿ ಶಿವಮೊಗ್ಗದ ಯುವಕ ಅರೆಕಾ ಟೀ ಸಂಶೋಧಕ ನಿವೇದನ್ ನಿಂಪೆ ಪರಿಹಾರ ಹುಡುಕಿದ್ದಾರೆ.

ನಿವೇದನ್ ನೆಂಪೆಯ ಹೊಸ ಈ ಆವಿಷ್ಕಾರ ಅಡಿಕೆ ಹಾಳೆ ತಯಾರಿಕರಲ್ಲಿ ಹೊಸ ಸಂಚಲನ ಮೂಡಿಸಿದೆ.
ಅಡಿಕೆ ಹಾಳೆ ಮಾರಾಟದ ಜೊತೆಗೆ ಪ್ಲಾಸ್ಟಿಕ್ ಬಳಕೆಗೂ ಪರ್ಯಾಯ ಮಾರ್ಗ ಕಂಡು ಹಿಡಿಯಲಾಗಿದೆ.

ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿ ಆಹಾರ ಪಾರ್ಸೆಲ್ ಗೆ ಕಡಿವಾಣ ಹಾಕಲು ಹೊಸ ಮಾರ್ಗ ಇದಾಗಿದ್ದು,
ಎರಡು ಮೂರು ಗಂಟೆಗಳವರೆಗೂ ಆಹಾರಗಳನ್ನು ಭದ್ರವಾಗಿ ಹಿಡಿಯುವ ಪೇಪರ್ ಕಂಡು ಹಿಡಿಯಲಾಗಿದೆ.

300 ಡಿಗ್ರಿ ಸೆಲ್ಸಿಯಸ್ ಬಿಸಿ ಆಹಾರ ಪದಾರ್ಥ ಹಾಕಿದರೂ ಫುಡ್ ಗ್ರೇಡ್ ಪೇಪರ್ ಹಾಳಾಗುವುದಿಲ್ಲ ಎನ್ನಲಾಗಿದೆ.
ಮಗಚಿ ಬಿದ್ದ ಅಡಿಕೆ ಹಾಳೆ ತಟ್ಟೆ ಉದ್ಯಮಕ್ಕೆ ಹೊಸ ಸ್ಪೂರ್ತಿಯಾಗಿ ಫುಡ್ ಗ್ರೇಡ್ ಪೇಪರ್ ಮಾರ್ಪಟ್ಟಿದೆ.

Nivedan Nempe ಪರಿಸರಸ್ನೇಹಿ ಪೇಪರ್ ನಿಂದಾಗಿ ಅಡಿಕೆ ಹಾಳೆ ತಟ್ಟೆ ತಯಾರಿಕೆ ಹಾಗೂ ಹೋಟೆಲ್ ಉದ್ಯಮಕ್ಕೂ ನೆರವಾಗಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಸಂಬಂಧ ಮಧ್ಯ ಪ್ರವೇಶಿಸಬೇಕೆಂದು ಸಂಶೋಧಕ ನಿವೇದನ್ ನಿಂಪೆಯವರು ಕೋರಿದ್ದಾರೆ.

Chamber of Commerce Shivamogga ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಆತ್ಮವಿಶ್ವಾಸ ತುಂಬಾ ಮುಖ್ಯ : ಬಿ.ಎಂ.ಮೇಘನಾ ಬೆಳವಾಡಿ

0

Chamber of Commerce Shivamogga ಜೀವನದಲ್ಲಿ ಯಶಸ್ಸು ಸಾಧಿಸಲು ಛಲ, ನಿರಂತರ ಪರಿಶ್ರಮದ ಜತೆಯಲ್ಲಿ ಕುಟುಂಬದ ಸಹಕಾರ ಅತ್ಯಂತ ಮುಖ್ಯ ಎಂದು ಯುಪಿಎಸ್‌ಸಿ ಪರೀಕ್ಷೆಯಲ್ಲಿ 421ನೇ ರ‍್ಯಾಂಕ್ ಪಡೆದಿರುವ ಬಿ.ಎಂ.ಮೇಘನಾ ಬೆಳವಾಡಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದ ನಮ್ಮ ಟಿವಿ ಕಚೇರಿಯಲ್ಲಿ ಆಯೋಜಿಸಿದ್ದ ಸಂದರ್ಶನದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಆತ್ಮವಿಶ್ವಾಸ ತುಂಬಾ ಮುಖ್ಯ. ಸಾಧನೆಗೆ ಪೂರಕವಾದ ವಾತಾವರಣವನ್ನು ರೂಪಿಸಿಕೊಳ್ಳಬೇಕು. ನನ್ನ ಸಾಧನೆಗೆ ಎಲ್ಲರ ಸಹಕಾರವು ತುಂಬಾ ನೆರವಾಗಿದೆ ಎಂದು ತಿಳಿಸಿದರು.
ನನಗೆ ಭರತನಾಟ್ಯ, ಸಂಗೀತ, ಗಮಕ ಕಲೆಯಲ್ಲಿ ಹೆಚ್ಚಿನ ಆಸಕ್ತಿ ಇದ್ದು, ನನ್ನ ಬೆಳವಣಿಗೆಯಲ್ಲಿ ಪ್ರಮುಖವಾದ ಪಾತ್ರ ವಹಿಸಿವೆ. ಪ್ರತಿ ದಿನ 10-12 ಗಂಟೆಗಳ ಕಾಲ ಅಭ್ಯಾಸ ಮಾಡಿ ಏಕಾಗ್ರತೆಯಿಂದ ಪ್ರಯತ್ನಪಟ್ಟ ಪರಿಣಾಮ ರ‍್ಯಾಂಕ್ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಮೇಘನಾ ಅವರ ಸಾಧನೆಗೆ ಯೋಗ, ಪ್ರಾಣಾಯಾಮ, ಧ್ಯಾನವೂ ಸಹಕಾರಿಯಾಗಿದೆ. ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮೇಘನಾ ಸಾಧನೆ ನಿಜಕ್ಕೂ ತುಂಬಾ ಸಂತೋಷ ತಂದಿದೆ ಎಂದು ತಿಳಿಸಿದರು.
Chamber of Commerce Shivamogga ನಂತರ ನಮ್ಮ ಟಿವಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಮೇಘನಾ ಅವರು ದೆಹಲಿಯಲ್ಲಿ ಯುಪಿಎಸ್‌ಸಿ ಪರೀಕ್ಷೆ ಬಗ್ಗೆ ನಡೆಸಿದ ಪ್ರಯತ್ನಗಳ ಬಗ್ಗ ವಿವರಣೆ ನೀಡಿದರು. ಮೇಘನಾ ಅವರ ತಾಯಿ ವಾತ್ಸಲ್ಯ ಮಗಳ ಪರಿಶ್ರಮದ ಬಗ್ಗೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಬಿ.ಜಿ.ಮೋಹನಕುಮಾರ್, ಡಾ. ಎ.ಎಸ್.ವತ್ಸಲಾ, ಕೆ.ವಿ.ಕೌಶಿಕ್, ನಮ್ಮ ಟಿವಿಯ ಶ್ರೀಕಾಂತ್, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್ ಉಪಸ್ಥಿತರಿದ್ದರು.

World Day Against Child Labor ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

0

World Day Against Child Labor ಶಿವಮೊಗ್ಗ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಜಿಲ್ಲಾ ವಕೀಲರ ಸಂಘ, ಶಿವಮೊಗ್ಗ ಹಾಲು ಒಕ್ಕೂಟ, ಇವರ ಸಂಯುಕ್ತಾಶ್ರದಲ್ಲಿ ಜೂನ್ 12 ರಂದು ಬೆಳಿಗ್ಗೆ 9.30 ಕ್ಕೆ ಶಿವಪ್ಪ ನಾಯಕ ಸರ್ಕಲ್ ನಲ್ಲಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2025” ಕುರಿತು ಸ್ಥಬ್ಧ ಚಿತ್ರದ ವಾಹನ ಹಾಗೂ ಕರಪತ್ರ ಮೂಲಕ ಕಾನೂನು ಅರಿವು ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವೇದಿಕೆ ಕಾರ್ಯಕ್ರಮವನ್ನು ಬೆಳಿಗ್ಗೆ 11 ಗಂಟೆಗೆ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು. World Day Against Child Labor ಜಿಲ್ಲಾ ಪಂಚಾಯಿತಿ ಸಿ.ಇ.ಒ. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ಎಸ್.ಆರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಂಜುನಾಥ್ ಆರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಸ್ವಾಮಿ, ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಮಿಕ ನಿರೀಕ್ಷಕರಾದ ಕೃಷ್ಣ ಎಂ. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಹಾಗೂ ತಿದ್ದುಪಡಿ 2016 ಕುರಿತು ಮಾಹಿತಿ ನೀಡುವರು.

Karnataka Janapada Academy 2024 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

0

Karnataka Janapada Academy ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ದಿನಾಂಕ:01.01.2024 ರಿಂದ 31.12.2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ ಪ್ರಕಾರ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ ಹಾಗೂ ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು/ ಪ್ರಕಾಶಕರು/ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಜೂನ್ 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 03 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು.
Karnataka Janapada Academy ವಿ.ಸೂ. ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು / ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸುವಂತಿಲ್ಲ.

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

0

Karnataka Media Academy ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.

Karnataka Media Academy ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. Shall I add ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Samanvaya Trust ಓಮಾಕ್ಷಿ ಅವರಿಗೆ ಸಮನ್ವಯ ಪರಿಸರ ಕುಟುಂಬ ಪ್ರಶಸ್ತಿ

0

Samanvaya Trust ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ವಿನೋಬನಗರ ವ್ಯಾಪ್ತಿಯ ಹುಚ್ಚರಾಯ ಕಾಲನಿ ನಿವಾಸಿ ಓಮಾಕ್ಷಿ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಸಮನ್ವಯ ಟ್ರಸ್ಟ್ ನೇತೃತ್ವದಲ್ಲಿ ಹಾಗೂ ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಮಾರ್ಗದರ್ಶನದಲ್ಲಿ ಶಿವಮೊಗ್ಗದಲ್ಲಿನ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಪರಿಸರ ಪ್ರಶಸ್ತಿ ನೀಡುವ ಮೂಲಕ ಗೌರವಿಸುವ ಕೆಲಸವನ್ನು ಟ್ರಸ್ಟ್ ವತಿಯಿಂದ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಟ್ರಸ್ಟ್ ವತಿಯಿಂದ ನೀಡುತ್ತಿರುವ 51ನೇ ಪರಿಸರ ಕುಟುಂಬ ಪ್ರಶಸ್ತಿ ಇದಾಗಿದೆ.
ಓಮಾಕ್ಷಿ ಅವರು ಕೊಳಚೆ ಪ್ರದೇಶದ ಬಡಾವಣೆಯಲ್ಲಿ ಪುಟ್ಟ ಮನೆ ಹೊಂದ್ದಿದ್ದು, ಮನೆಯ ಮುಂಭಾಗ ಹಾಗೂ ಹಿಂಭಾಗದಲ್ಲಿ ಇರುವ ಸಣ್ಣ ಪ್ರದೇಶದಲ್ಲಿ ಉತ್ತಮ ಪರಿಸರ ಇರುವ ವಾತಾವರಣ ನಿರ್ಮಾಣ ಮಾಡಿದ್ದಾರೆ. ಒಡೆದ ಕೊಡಪಾನ ಇತರ ವಸ್ತುಗಳಲ್ಲಿಯೂ ಸಹ ಮಣ್ಣು ಹಾಕಿ ಸಸಿಗಳನ್ನು ಪೋಷಿಸುತ್ತ ಸುಂದರ ಪರಿಸರ ನಿರ್ಮಾಣ ಮಾಡಿದ್ದಾರೆ. ಪ್ರತಿಯೊಂದು ಮನೆಯ ಸದಸ್ಯರು ಪರಿಸರ ಕಾಳಜಿ ಹೊಂದುವುದು ಅವಶ್ಯ. ಓಮಾಕ್ಷಿ ಅವರ ಪರಿಸರ ಕಾಳಜಿ ಗುರುತಿಸಿ ಸಮನ್ವಯ ಟ್ರಸ್ಟ್ ಪರಿಸರ ಪ್ರಶಸ್ತಿ ನೀಡಿ ಅಭಿನಂದಿಸಿದೆ.
Samanvaya Trust ಸಮನ್ವಯ ಟ್ರಸ್ಟ್ ಕಾರ್ಯ ನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ನೇತೃತ್ವದ ತಂಡವು ಶಿವಮೊಗ್ಗದ ಪರಿಸರ ಸ್ನೇಹಿ ಕುಟುಂಬಗಳನ್ನು ಗುರುತಿಸಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದೆ. ಪರಿಸರದ ಕಾಳಜಿಯನ್ನು ಮನೆ ಮನೆಗೆ ತಲುಪಿಸುವ ಆಶಯದಿಂದ ರಾಜ್ಯದಲ್ಲಿಯೇ ನಡೆಸುತ್ತಿರುವ ವಿಶೇಷ ಪ್ರಯತ್ನ ಇದಾಗಿದೆ.
ವೈಟ್‌ಫೀಲ್ಡ್ ಹಾಲಿಡೇಸ್ ಶಿವಮೊಗ್ಗ ಶಾಖೆ ಮುಖ್ಯಸ್ಥೆ ಸ್ಮಿತಾ ಅವರು ಪರಿಸರ ಕುಟುಂಬ ಪ್ರಶಸ್ತಿಯನ್ನು ನೀಡಿದರು. ಸಮನ್ವಯ ಟ್ರಸ್ಟ್ ನ ಸಮನ್ವಯ ಕಾಶಿ, ಸಲಹಾ ಸಮಿತಿ ಸದಸ್ಯ ಯತೀಶ್, ಮಲ್ಲಿಕಾರ್ಜುನ ಜಿ.ಪಿ., ವಿಜಯಕುಮಾರ್ ಕೆ.ಎಂ. ಮತ್ತಿತರರು ಇದ್ದರು.