Friday, February 27, 2026
Friday, February 27, 2026
Home Blog Page 280

Shivamogga Police ಮುಟ್ಟುಗೋಲು ವಾಹನಗಳ ವಿಲೆವಾರಿ

0

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾರಸುದಾರರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಜೂನ್ 16 ರಂದು ಬೆಳಗ್ಗೆ 9.00ಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗದಿತ ಅವಧಿಯಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ದೊಡ್ಡಪೇಟೆ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

Fishing Department ಜೂನ್ ನಿಂದ ಜುಲೈವರೆಗೆ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ

0

Fishing Department ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ದಿ ಚಟುವಟಿಕೆಗಳು ನಡೆಸುವುದರಿಂದ ಪ್ರತೀ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು/ಜಲಾಶಯಗಳು/ತೊರೆಗಳು/ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ತಿಳಿಸಿದ್ದಾರೆ.

Karnataka State Uppara Development Corporation ಉಪ್ಪಾರ ಅಭಿವೃದ್ದಿ ನಿಗಮದಿಂದ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ

0

Karnataka State Uppara Development Corporation ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ನವೀಕರಣ), ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು.
ಸ್ವಯಂ ಉದ್ಯೋಗ ನೇರಸಾಲ( ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ( ವಾರ್ಷಿಕ ವರಮಾನ ರೂ.15 ಲಕ್ಷ ಮಿತಿಯಲ್ಲಿರಬೇಕು. ವಿದ್ಯಾರ್ಥಿಯ ವಯಸ್ಸು 25( ಸ್ನಾತಕೋತ್ತರ ಪದವೀಧರರಿಗೆ) ಮತ್ತು ಪಿಎಚ್‌ಡಿ ಪದವೀಧರರಿಗೆ 27 ವರ್ಷಗಳ ನಿಗದಿಪಡಿಸಲಾಗಿದೆ) ಹಾಗೂ ಸ್ವತಂತ್ರ ಅಮೃತ ಮುನ್ನಡೆ ಯೋಜನೆಗೂ www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ಉಪ್ಪಾರ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು, ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು, ನಿಗಮದ/ಸರ್ಕಾರದ ಯಾವುದಾರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು, ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತದೆ.
Karnataka State Uppara Development Corporation ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ ಒಳಗೊಂಡಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು, ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು, ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರವೇಶದವರಿಗೆ ರೂ.1.20 ಲಕ್ಷ ಮಿತಿಯೊಳಗಿರಬೇಕು ಹಾಗೂ ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಲಾಗಿದೆ.
ಜು.3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಿರಬೇಕು, ಬೆಂಗಳೂರು-ಒನ್/ ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://upparadevelopment.karnataka. gov.in ರಲ್ಲಿ ಅಥವಾ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಗಾಂಧಿನಗರ ಇಲ್ಲಿ ಪಡೆಯಬಹುದು ಅಥವಾ ಕಛೇರಿ ದೂ.ಸಂ: 08182229634 ಗೆ ಅಥವಾ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ. 12 ರಂದು ಬೆಳಿಗ್ಗೆ 10.30 ರಿಂದ 12.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;9480841340.

S.N.Chennabasappa ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರಕ್ಕೆ ಶಾಸಕ ಚನ್ನಬಸಪ್ಪ ಭೇಟಿ

0

S.N.Chennabasappa ಗೋಪಾಳದ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರಕ್ಕೆ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದರು. ರೂ. 10 ಲಕ್ಷ ವೆಚ್ಚದಲ್ಲಿ ಟಾರ್ ರಸ್ತೆಯ ಗುದ್ದಲಿ ಪೂಜೆ ಸಮಾರಂಭದಲ್ಲಿ ಶಾಸಕರು ಭಾಗವಹಿಸಿದ್ದರು.
ಟಾರ್ ರಸ್ತೆಯ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

Mangalore Institute of Oncology Super Specialty Cancer Hospital ಕ್ಯಾನ್ಸರ್ ತಡೆಗಟ್ಟಲು ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರ

0

Mangalore Institute of Oncology Super Specialty Cancer Hospital ಮಂಗಳೂರು ಇನಸ್ಟಿಟ್ಯೂಟ್ ಆಫ್ ಆಂಕಾಲಜಿ ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಅಸ್ಪತ್ರೆ ತೀರ್ಥಹಳ್ಳಿ ಇವರ ಸಹಯೋಗದಲ್ಲಿ ಕ್ಯಾನ್ಸರ್ ತಡೆಗಟ್ಟುವ ಅಭಿಯಾನದ ಪ್ರಯುಕ್ತ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ “ಸ್ವಯಂ ಸೇವಕ”ರಾಗಿ ಸೇವೆ ಸಲ್ಲಿಸುವವರಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವನ್ನು 28.06.2025 ರ‌ ಶನಿವಾರ ಬೆಳಿಗ್ಗೆ 8.30 ರಿಂದ 4.30 ರ ವರೆಗೆ ತೀರ್ಥಹಳ್ಳಿಯ ಆರಗ ಗ್ರಾಮದಲ್ಲಿ ಇರುವ MIO ಕ್ಯಾನ್ಸರ್ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿದೆ.

ತರಬೇತಿಯನ್ನು ಪಡೆದ ನಂತರ ವರ್ಷದಲ್ಲಿ ಕನಿಷ್ಟಪಕ್ಷ ಎರಡು ಬಾರಿಯಾದರೂ ಜಿಲ್ಲೆಯ ಶಾಲಾ ಕಾಲೇಜು ಅಥವಾ ಇನ್ನಿತರ ಸಂಘ ಸಂಸ್ಥೆಗಳಿಗೆ ಹೋಗಿ ಕ್ಯಾನ್ಸರ್ ಅರಿವು ಮೂಡಿಸುವ ಉಪನ್ಯಾಸವನ್ನು ಕಡ್ಡಾಯವಾಗಿ ನೀಡಬೇಕಿದೆ.

ಈ ಮಹತ್ವದ ವಿಷಯದ ಆಸಕ್ತರಿಗೆ ಆಸಕ್ತ ಶಾಲಾ ಕಾಲೇಜುಗಳು ಮತ್ತು ಸಂಘ ಸಂಸ್ಥೆಗಳಲ್ಲಿ ತರಬೇತಿ ತರಗತಿಗಳನ್ನು ವ್ಯವಸ್ಥೆ ಮಾಡಿಕೊಡಲಾಗುವುದು.

Mangalore Institute of Oncology Super Specialty Cancer Hospital ತಮ್ಮ ಆಗಮನದ ಬಗ್ಗೆ ಕ್ಯಾನ್ಸರ್ ಅರಿವು ಮೂಡಿಸುವ ಯೋಜನೆಯ ಮುಖ್ಯ ಸಂಯೋಜಕರಾದ ಅ.ನಾ.ವಿಜಯೇಂದ್ರ ರಾವ್ (9448790127) ಇವರಲ್ಲಿ ತಿಳಿಸಬೇಕಾಗಿ ಕೋರಲಾಗಿದೆ.

Dinesh Gundu Rao ಮುಂದಿನ ಪೀಳಿಗೆಯ ಪಾಕ ವೈವಿಧ್ಯ ಮಾಹಿತಿಗೋಸ್ಕರ ಪಾಕ ವಿಧಾನ ಸ್ಪರ್ಧೆ

0

Dinesh Gundu Rao ವರ್ಲ್ಡ್ ಆಫ್ ಹಾಸ್ಪಿಟಾಲಿಟಿ ಇನ್ ಕ್ರೆಡಿಬಲ್ ಚೆಫ್ ಚಾಲೇಂಜ್ ವತಿಯಿಂದ ಐತಿಹಾಸಿಕ ಪಾಕ ಪದ್ದತಿಗಳನ್ನು ಪುನರ್ಜೀವನಗೊಳಿಸುವ ಸ್ಪರ್ಧೆಯನ್ನು ದಿನಾಂಕ 12-06-2025 ಕಟ್ಟೆ 11:30 ಬೆಳಿಗ್ಗೆ ತೃಪುರ ವಾಸಿನಿ, ಪ್ಯಾಲೆಸ್ ಗ್ರೌಂಡ್ಸ್ ನಲ್ಲಿ ಆಯೋಜಿಸಲಾಗಿದೆ.

ಗೌರವಾನ್ವಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ
ಶ್ರೀ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Dinesh Gundu Rao ಸ್ಪರ್ಧೆಯಲ್ಲಿ ಮಾಸ್ಟರ್ ಶೆಫ್ ಜೊತೆ ಅಡುಗೆ ಕಲಿಯುವ ಅವಕಾಶ , ಲೈವ್ ಶೆಫ್ಸ್ ಸ್ಪರ್ಧೆ, ಅಡುಗೆ ಕಲೆ ಸ್ಪರ್ಧೆ, ಪಾರಂಪರಿಕ ಅಡುಗೆಗಳ ಮೇಲೆ ಒತ್ತು, ಶೆಫ್ ಕೌಶಲ್ಯ ಸವಾಲು, ಅಡುಗೆ ತಂತ್ರಗಳು, ನೆಕ್ಸ್‌ಟ್ ಲೆವಲ್ ಶೆಫ್, 3 ಹಂತದ ಮದುವೆ ಕೇಕ್‌ಗಳು, ಪ್ಲೇಟು ಮಾಡಿದ ಆಪೆಟೈಜರ್‌ಗಳು, ಕಲಾತ್ಮಕ ಬೇಕರಿ ಶೋಪೀಸ್, ಕಲಾತ್ಮಕ ಪೇಸ್ಟ್ರಿ ಶೋಪೀಸ್, ಹಣ್ಣು ಮತ್ತು ತರಕಾರಿಗಳ ನಕಲು ಕಲೆ,
ಸ್ಥಳೀಯ ಶೆಫ್‌ಗಳ ಜೊತೆ ಅಡುಗೆ, ಹೀಗೆ ವಿವಿಧ ಸ್ಪರ್ಧೆಗಳಿವೆ. 250+ ಶೆಫ್‌ಗಳು ಅಡುಗೆ ಕಲೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9844006736 ಅನ್ನು ಸಂಪರ್ಕಿಸಬಹುದು.

International Skating Competition ಅಂತರ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಕ್ಕಳ ಸಾಧನೆ

0

International Skating Competition ಇಂಡೋನೇಷ್ಯಾದಲ್ಲಿ ನಡೆದ ಅಂತರ ರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಭಾಗವಹಿಸಿದ್ದ 34 ಸ್ಪರ್ಧಿಗಳ ಪೈಕಿ ಶಿವಮೊಗ್ಗ ಡಿಸ್ಟಿಕ್ ರೋಲರ್ ಸ್ಕೇಟಿಂಗ್ ಸಂಸ್ಥೆಯ ದೇಶ್ನ ಡಿ. ಗೆ ಬಂಗಾರದ ಪದಕ, ಎಂ.ಎಸ್. ಹರ್ಷಿತಗೆ ಕಂಚಿನ ಪದಕ ಹಾಗೂ ರೋಶನ್ ಎಂ. ಎರಡು ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತರಬೇತುದಾರ ಶೇಖರ್ ಬಾಬು ಅವರಲ್ಲಿ ಸ್ಕೇಟಿಂಗ್ ಕಲಿತು ಮಕ್ಕಳು ಈ ಅದ್ಭುತ ಸಾಧನೆ ಮಾಡಿದ್ದಾರೆ. ಇದಕ್ಕೆಲ್ಲ ಕಾರಣರಾದ ಪೋಷಕರಿಗೆ ಹಾಗೂ ತರಬೇತಿದಾರರಿಗೆ ಸಂಸ್ಥೆ ಅಭಿನಂದಿಸಿದೆ.

Karnataka State Kadugolla Development Corporation Limited ಕಾಡುಗೊಲ್ಲ ಅಭಿವೃದ್ದಿ ನಿಗಮದಿಂದ ಸಹಾಯಧನ – ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

0

Karnataka State Kadugolla Development Corporation Limited ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು), ಗಂಗಾ ಕಲ್ಯಾಣ ಯೋಜನೆ(ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೆ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರಸಾಲ( ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ( ವಾರ್ಷಿಕ ವರಮಾನ ರೂ.15 ಲಕ್ಷ ಮಿತಿಯಲ್ಲಿರಬೇಕು) ಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ನಿಗಮದ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಸರ್ಕಾರದ ಆದೇಶದನ್ವಯ ಕಾಡುಗೊಲ್ಲ ಜಾತಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರಬೇಕು, ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು, ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತದೆ.
ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷ. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು, ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು, ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ರೂ.98 ಸಾವಿರ ಮತ್ತು ನಗರ ಪ್ರವೇಶದವರಿಗೆ ರೂ.1,20 ಲಕ್ಷ ಮಿತಿಯೊಳಗಿರಬೇಕು ಹಾಗೂ ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಲಾಗಿದೆ.
Karnataka State Kadugolla Development Corporation Limited ಜು.2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಿರಬೇಕು, ಬೆಂಗಳೂರು-ಒನ್/ ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848/7899899039 ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಕಛೇರಿಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Department of Social Welfare ವಸತಿ ಶಾಲೆಗಳ ಮಧ್ಯಂತರ ದಾಖಲಾತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

0

Department of Social Welfare ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ಹಾಗೂ ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ 2025-26 ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8 ನೇ ತರಗತಿಗಳಿಗೆ ಮಧ್ಯಂತರ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಯನ್ನು ತಾಲ್ಲೂಕುವಾರು ಕೇಂದ್ರಗಳಲ್ಲಿ ಪಡೆಯಬಹುದು. ಜೂ.09 ರಿಂದ ಅರ್ಜಿ ವಿತರಣೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಜೂ 16 ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ತಾಲ್ಲೂಕುವಾರು ಕೇಂದ್ರಗಳಲ್ಲಿ ಸಲ್ಲಿಸಬೇಕು.
ಶಿವಮೊಗ್ಗ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕಸಬಾ, ಭದ್ರಾವತಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವರನರಸೀಪುರ, ಸಾಗರ ತಾಲ್ಲೂಕಿನ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಎಡೆಹಳ್ಳಿ, ತೀರ್ಥಹಳ್ಳಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆನಂದಗಿರಿ, ಹೊಸನಗರ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಹುಂಚ, ಸೊರಬ ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹುಣಸವಳ್ಳಿ, ಶಿಕಾರಿಪುರ ತಾಲ್ಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಅಂಬಾರಗೊಪ್ಪ ಇವುಗಳು ಅರ್ಜಿ ಸ್ವೀಕೃತಿ ಕೇಂದ್ರವಾಗಿದೆ.
Department of Social Welfare ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಗಳನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ತಿಳಿಸಿದ್ದಾರೆ.