Malenadu Development Foundation “ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ಕಳೆದ 6೦ ವರ್ಷಗಳಿಂದ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ದಾನಿಗಳು ನೀಡಿದ ಜಾಗದಲ್ಲಿ ಜನರ ಸಹಕಾರದಿಂದ ವಿದ್ಯಾಸಂಸ್ಥೆಯನ್ನು ಕಟ್ಟಿ ಗುಣಮಟ್ಟದ ಶಿಕ್ಷಣವನ್ನು ನೀಡಿ ಅವರ ಬದುಕನ್ನು ಕಟ್ಟಿಕೊಳ್ಳಲು ಸಹಾಯವಾಗಿದೆ. ನನ್ನಂತಹವರು ಸಹ ಈ ಸಂಸ್ಥೆಯಲ್ಲಿ ಓದಲು ಅವಕಾಶ ಸಿಕ್ಕಿರುವುದು ಒಂದು ಸುವರ್ಣ ಅವಕಾಶವಾಗಿರುತ್ತದೆ. ಈ ಸಾಲಿನಲ್ಲಿ ವಜ್ರ ಮಹೋತ್ಸವವನ್ನು ಆಚರಿಸುವ ಈ ಸಂಸ್ಥೆ ಇನ್ನೂ ಉತ್ತಮವಾಗಿ ವಿವಿಧ ತರದ ಉದ್ಯೋಗಾವಕಾಶವಿರುವ ಕೋರ್ಸ್ಗಳನ್ನು ಪ್ರಾರಂಭಿಸಿ, ಮಲೆನಾಡಿನ ಭಾಗಕ್ಕೆ ಉತ್ತಮ ಸೇವೆ ಸಲ್ಲಿಸಲಿ. ಇದಕ್ಕೆ ಬೇಕಾಗುವ ಸಹಕಾರವನ್ನು ನೀಡುವುದಾಗಿ ತಿಳಿಸಿ ತಾನು ಓದಿದ ಎಂ.ಡಿ.ಎಫ್. ಕಾಲೇಜಿಗೆ ಒಂದು ಲಕ್ಷ ರೂ.ಗಳ ದೇಣಿಗೆಯನ್ನು ನೀಡಿ, ಮುಂದೆ ಇನ್ನೂ ಹೆಚ್ಚಿನ ಆರ್ಥಿಕ ನೆರವನ್ನು ನೀಡುವ ಭರವಸೆಯನ್ನು ಶ್ರೀ ಟಿ.ಎಸ್. ಮಧುಸೂದನ್‌ರವರು ನೀಡಿದರು. ” ಅವರ ಈ ದೇಣಿಗೆಯನ್ನು ಸ್ವೀಕರಿಸಿ, ಅವರಿಗೆ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪರವಾಗಿ ಮಾನ್ಯ ಅಧ್ಯಕ್ಷರಾದ ಶ್ರೀ ಬಿ.ಆರ್. ಜಯಂತ್ ಇವರು ಹಾರ ಹಾಕಿ ಗೌರವಿಸಿದರು.
Malenadu Development Foundation ಶ್ರೀ ಟಿ.ಎಸ್. ಮಧುಸೂದನ್‌ರವರು ತಮ್ಮ ಪದವಿ ಪೂರ್ವ ಶಿಕ್ಷಣವನ್ನು ನಮ್ಮ ಕಾಲೇಜಿನಲ್ಲಿ ಮುಗಿಸಿ, ಇಂಜಿನಿಯರಿoಗ್ ಶಿಕ್ಷಣದ ನಂತರ ಇಸ್ರೋ ಸಂಸ್ಥೆಯಲ್ಲಿ ಕೆಲವು ಕಾಲ ಕೆಲಸ ಮಾಡಿ ಜೆ.ಇ. ಸಂಸ್ಥೆ ಯು.ಎಸ್.ಎ. ಇಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಸಮಾರಂಭದಲ್ಲಿ ಎಂ.ಡಿ.ಎಫ್.ನ ಪ್ರಧಾನ ಕಾರ್ಯದರ್ಶಿಯಾದ ಡಾ. ಹೆಚ್.ಎಂ. ಶಿವಕುಮಾರ್, ಉಪಾಧ್ಯಕ್ಷರಾದ ಶ್ರೀ ಹೆಚ್.ಎಂ. ರವಿಕುಮಾರ್, ಹುಣಾಲುಮಡಕಿ, ಪ್ರಗತಿ ಸಂಯುಕ್ತ ಶಾಲೆಯ ರೆಕ್ಟರ್ ಡಾ. ಟಿ.ಎಸ್. ರಾಘವೇಂದ್ರ, ಹಾಗೂ ವಿವಿಧ ಅಂಗಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.
Malenadu Development Foundation ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ 6೦ ವರ್ಷಗಳ ಸಾರ್ಥಕ ಶಿಕ್ಷಣ ಸೇವೆ ವಿದ್ಯಾರ್ಥಿಗಳ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಯಿತು. – ಟಿ.ಎಸ್.ಮಧುಸೂದನ್
District Consumer Disputes Redressal Commission ಇನ್ಸೂರೆನ್ಸ್ ಕಂಪನಿಯಿಂದ ಸೇವಾ ನ್ಯೂನತೆ : ಪರಿಹಾರ ನೀಡಲು ಆಯೋಗ ಆದೇಶ
District Consumer Disputes Redressal Commission ಶಿವಮೊಗ್ಗದ ಇರ್ಶಾದ್ ಬಿನ್ ಅನ್ವರ್ ಎಂಬುವವರು ದಿ ಮ್ಯಾನೇಜರ್, ಯುನಿಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಶಿವಮೊಗ್ಗ ಇವರ ವಿರುದ್ದ ನಾಲ್ಕು ಚಕ್ರದ ವಾಹನದ ಇನ್ಸೂರೆನ್ಸ್ ಸಂಬಂಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವೂ ದೂರುದಾರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ಇರ್ಶಾದ್ ನಾಲ್ಕು ಚಕ್ರದ ವಾಹನವನ್ನು ಖರೀಸಿದ್ದು, ಎದುರುದಾರರ ಬಳಿ ಇನ್ಸೂರೆನ್ಸ್ ಅನ್ನು ಮಾಡಿಸಿದ್ದು, ಪಾಲಿಸಿಯು ದಿ:23/8/2023 ರಿಂದ 12/6/2024 ರವರೆಗೆ ಚಾಲ್ತಿಯಲ್ಲಿರುತ್ತದೆ. ದಿ:25/9/2023 ರಂದು ವಾಹನ ಚಲಿಸುವಾಗ ಬಾನೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾಹನವೂ ಸಂಪೂರ್ಣ ಹಾಳಾಗಿದೆ. ಈ ಸಂಬಂಧ ಕ್ರಿಮಿನಲ್ ಕೇಸ್ ದಾಖಲಾಗಿರುತ್ತದೆ. ವಾಹನದ ಬೆಲೆ ರೂ.9,74,378/- ಗಳಾಗಿದೆ ಎಂದು ದೂರುದಾರರು ಎದುರುದಾರರ ಬಳಿ ಎಲ್ಲಾ ದಾಖಾತಿಗಳನ್ನು ಸಲ್ಲಿಸಿ ಇನ್ಸೂರೆನ್ಸ್ ಕ್ಲೈಮ್ ಮಾಡಿಕೊಡಲು ಸೆಪ್ಟೆಂಬರ್-2023 ರಲ್ಲಿ ಕೋರಿರುತ್ತಾರೆ. ಆದರೆ, ದೂರುದಾರರು ಎದುರುದಾರರ ಬಳಿ ಹಲವಾರು ಬಾರಿ ಕೇಳಿಕೊಂಡರು ಕ್ಲೈಮ್ ಮೊತ್ತವನ್ನು ನೀಡದೆ ಇರುವುದರಿಂದ ವಕೀಲರ ಮೂಲಕ ನೋಟೀಸ್ ನೀಡಿದ್ದು, ಎದುರುದಾರರಿಗೆ ನೋಟೀಸ್ ತಲುಪಿದ್ದರು ಯಾವುದೇ ಪ್ರತ್ಯುತ್ತರವಾಗಲೀ ಕ್ಲೈಮಿನ ಮೊತ್ತವನ್ನಾಗಲಿ ನೀಡಿರುವುದಿಲ್ಲವೆಂದು ಮತ್ತು ಇದು ಸೇವಾ ನ್ಯೂನತೆಯಾಗಿರುತ್ತದೆಂದು ಎದುರುದಾರರ ವಿರುದ್ದ ಅಪಾದಿಸಿ ದೂರನ್ನು ಸಲ್ಲಿಸಿರುತ್ತಾರೆ.
ಆಯೋಗವು ದೂರನ್ನು ದಾಖಲಿಸಿಕೊಂಡು ಎದುರುದಾರರಿಗೆ ನೋಟೀಸ್ ನೀಡಿದ್ದು, ಎದುರುದಾರರು ವಕೀಲರ ಮೂಲಕ ಹಾಜರಾಗಿ ತಕರಾರನ್ನು ಸಲ್ಲಿಸಿ ದೂರುದಾರರ ವಾಹನದ ಐಡಿವಿ ಮೊತ್ತ ರೂ.5 ಲಕ್ಷಗಳೆಂದು ಮತ್ತು ದೂರುದಾರರು ಮತ್ತು ವಾಹನದ ಚಾಲಕರು ಸರ್ವೇಯರ್ ನಡೆಸಿದ ತನಿಖೆಗೆ ಸಹಕರಿಸಿರುವುದಿಲ್ಲವಾದ್ದರಿಂದ ದೂರುದಾರರು ಸ್ವತಃ ಎದುರುದಾರರು ಕ್ಲೈಮ್ ಸೆಟ್ಲಮೆಂಟ್ ಮಾಡದಿರಲು ಹೊಣೆಯಾಗಿರುವ ಕಾರಣ ದೂರನ್ನು ವಜಾ ಮಾಡಲು ಕೋರಿರುತ್ತಾರೆ.
District Consumer Disputes Redressal Commission ದೂರುದಾರರ ಮತ್ತು ಎದುರುದಾರರ ಸಾಕ್ಷ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ದೂರುದಾರರು ಈ ಆಯೋಗದಲ್ಲಿ ದೂರನ್ನು ಸಲ್ಲಿಸಿದ 3 ತಿಂಗಳ ನಂತರ ದೂರುದಾರರ ಕ್ಲೈಮ್‌ನ್ನು ವಜಾ ಮಾಡಿರುವುದು ಎದುರುದಾರರ ನಡತೆಯನ್ನು ತೋರಿಸುತ್ತದೆ ಮತ್ತು ದೂರುದಾರರು ಸಲ್ಲಿಸಿರುವ ದಾಖಲೆಗಳ ಆಧಾರ ಮೇಲೆ ಎದುರುದಾರರ ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಿ ದೂರನ್ನು ಭಾಗಶಃ ಪುರಸ್ಕರಿಸಿದೆ ಹಾಗೂ ಈ ಆದೇಶವಾದ ದಿನಾಂಕದಿಂದ 45 ದಿನಗಳೊಳಗಾಗಿ ಎದುರುದಾರರು ದೂರುದಾರರಿಗೆ ವಾಹನದ ಐಡಿವಿ ಮೊತ್ತ ರೂ.5 ಲಕ್ಷಗಳನ್ನು ಶೇ.9ರ ಬಡ್ಡಿಯೊಂದಿಗೆ ದಿ;27/7/2024 ರಿಂದ ಪಾವತಿಸಬೇಕೆಂದು, ತಪ್ಪಿದಲ್ಲಿ ಆ ಮೊತ್ತಕ್ಕೆ ಶೇ.12 ರಂತೆ ಬಡ್ಡಿಯನ್ನು ಈ ಆದೇಶವಾದ ದಿನಾಂಕದಿಂದ ಪೂರಾ ಹಣ ಪಾವತಿಸುವವರೆಗೂ ನೀಡಬೇಕೆಂದು ಹಾಗೂ ರೂ.25,000/-ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ರೂ.10,000 ವನ್ನು ವ್ಯಾಜ್ಯದ ಖರ್ಚಾಗಿ ಎದುರುದಾರರು ದೂರುದಾರರಿಗೆ ನೀಡಬೇಕು. ತಪ್ಪಿದಲ್ಲಿ ಈ ಮೊತ್ತಗಳಿಗೆ ಶೇ.12 ರಂತೆ ಬಡ್ಡಿಯನ್ನು ಸೇರಿಸಿ ಈ ಆದೇಶವಾದ ದಿನಾಂಕದಿಂದ ಪೂರಾ ಹಣ ಪಾವತಿಸುವವರೆಗೂ ನೀಡಬೇಕೆಂದು ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಡಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಮೇ,23 ರಂದು ಆದೇಶಿಸಿದೆ.
Shivamogga District Minority Welfare Department ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಕೌನ್ಸಲಿಂಗ್
Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ/ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪರೀಕ್ಷೆ ಬರೆದು ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ಜೂ.02 ರಂದು ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ, ಮೇಲಿನ ಹನಸವಾಡಿ, ಗೋಂಧಿಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಿವಮೊಗ್ಗ ಇಲ್ಲಿ ಕೌನ್ಸಲಿಂಗ್ ನಡೆಸಲಾಗುತ್ತಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಅಂದು ಬೆಳಗ್ಗೆ 10.00ಕ್ಕೆ ಹಾಜರಾಗಿ ದಾಖಲಾತಿ ಪಡೆಯುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Shivamogga District Minority Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-220203 ನ್ನು ಸಂಪರ್ಕಿಸುವುದು.
University of Mysore ಪ್ರಥಮ ಬಿ.ವಿ.ಎ. ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ.ಪದ್ಧತಿಯ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
University of Mysore ಆಸಕ್ತರು ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ 0821-2438931 ನ್ನು ಸಂಪರ್ಕಿಸುವುದು.
Karnataka State Road Transport Corporation ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ವಿತರಣೆ ಆರಂಭ
Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂನ್-02 ರಿಂದ ಆರಂಭಿಸಿದ್ದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದ ವಿರ್ಧ್ಯಾಥಿನಿಯರು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿ ಪಾಸುಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.
ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸ ಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಆ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‌ಕಾರ್ಡ್ / ಡೆಬಿಟ್ ಕಾರ್ಡ್/UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ. ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ಹಾಗೂ ಪಾಸಿನ ದರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ksrtc.karnataka.gov.in / student pass ನಲ್ಲಿ ಒದಗಿಸಲಾಗಿದೆ.
Karnataka State Road Transport Corporation ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ವಿಧ್ಯಾರ್ಥಿಗಳು ಆನ್‌ಲೈನ್ ಅಥವಾ ಗ್ರಾಮ ಒನ್/ಕರ್ನಾಟಕ ಒನ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್ (ಸ್ಮಾರ್ಟ್ ಕಾರ್ಡ್ ) ಪಡೆಯಲು ಶಿವಮೊಗ್ಗ ,-ಕರ್ನಾಟಕ ಒನ್, 01 ನೇ ಮಹಡಿ, ಖಾಸಗಿ ಬಸ್ ನಿಲ್ದಾಣ, ಶಿವಮೊಗ್ಗ-577201. ಶಿಕಾರಿಪುರ – ಕರ್ನಾಟಕ ಒನ್, ತಾಲೂಕು ಕಚೇರಿ ಹಿಂಭಾಗ, ಶಿಕಾರಿಪುರ-577427. ಭದ್ರಾವತಿ – ಕರ್ನಾಟಕ ಒನ್, ಅಜೀಜ್ ಡಿಜಿಟಲ್ ಸರ್ವಿಸ್, ಓಲ್ಡ್ ಟೌನ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಭದ್ರಾವತಿ. ಸಾಗರ -ಕರ್ನಾಟಕ ಒನ್, ಜ್ಯೋತಿ ಕಂಪ್ಯೂಟರ‍್ಸ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಸಾಗರ-577401. ಹೊನ್ನಾಳಿ -ಕರ್ನಾಟಕ ಒನ್, ಟಿ.ಎಸ್ ಕಾಂಪ್ಲೆಕ್ಸ್, ಟಿ.ಎಂ ರಸ್ತೆ, ತಾಲ್ಲೂಕು ಕಛೇರಿ ಎದುರು, ಹೊನ್ನಾಳಿ-577217. ಸೊರಬ -ಕರ್ನಾಟಕ ಒನ್, ಮೈಕಾ ಕಂಪ್ಯೂಟರ‍್ಸ್, ನೂರ್ ಕಾಂಪ್ಲೆಕ್ಸ್, ಎಸ್.ಎಸ್ ರಸ್ತೆ, ಸೊರಬ-577429. ಈ ಕರ್ನಾಟಕ ಒನ್ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದೆ.
Department of Youth Empowerment and Sports ಕ್ರೀಡಾ ವಸತಿ ಶಾಲೆ/ನಿಲಯಗಳ ಪ್ರವೇಶಕ್ಕೆ ವಿಶೇಷ ಟ್ರಯಲ್ಸ್ ಪಡೆಯಲು ಅವಕಾಶ
Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಕ್ರೀಡಾಶಾಲೆ/ವಸತಿ ನಿಲಯಗಳಿಗೆ 2025-26ನೇ ಸಾಲಿಗೆ 8ನೇ ತರಗತಿಗೆ ಮತ್ತು ಪ್ರಥಮ ಪಿ.ಯು.ಸಿ. ತರಗತಿಗಳಿಗೆ ಪ್ರವೇಶ ನೀಡಲು ಅವಕಾಶ ವಂಚಿತ ಮತ್ತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದ ಕ್ರೀಡಾಪಟುಗಳಿಗಾಗಿ ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ತೀರ್ಮಾನಿಸಿದ್ದು, ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಜೂ.06 ರಂದು ಬೆಳಗ್ಗೆ 9.30 ರಿಂದ ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್, ಕಬಡ್ಡಿ, ವಾಲಿಬಾಲ್ ಮತ್ತು ಬೆಂಗಳೂರು ನಗರ ಜಲ್ಲೆಯ ಅಕ್ಕಿತಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ. ವಿಜಯಪುರ ಜಿಲ್ಲೆ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್. ಬೆಳಗಾವಿ ಜಿಲ್ಲೆಯ ಯ.ಸ.& ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜುಡೋ ಮತ್ತು ಕುಸ್ತಿ. ಬೆಂಗಳೂರು ಉತ್ತರ ದ ಸರ್ಕಾರಿ ಕ್ರೀಡಾ ಪ್ರೌಢಶಾಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಖೋ-ಖೋ ಕ್ರೀಡೆಗಳನ್ನು ನಡೆಸಲಾಗುತ್ತಿದ್ದು, ಅವಕಾಶ ವಂಚಿತ ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Shivakumara Swamiji Employees Association ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Shivakumara Swamiji Employees Association ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ (ನೋಂ) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 75% ಕ್ಕಿಂತ ಹೆಚ್ಚಿನ ಅಂಕ ಪಡೆದ ಶಿವಮೊಗ್ಗ ನಗರದ ವೀರಶೈವ ಲಿಂಗಾಯಿತ ನೌಕರರ ಹಾಗೂ ವೀರಶೈವ ಲಿಂಗಾಯಿತ ಸಮಾಜ ಬಾಂಧವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು 2025ರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ಶಿವಮೊಗ್ಗ ನಗರದಲ್ಲಿ ವಾಸವಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನಗದು ಪುರಸ್ಕರವನ್ನು ನೀಡಿ ಗೌರವಿಸಲಾಗುವುದು.
ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ. ದೃಢೀಕೃತ ಅಂಕಪಟ್ಟಿ. ವಿದ್ಯಾರ್ಥಿ/ನಿಯ ತಂದೆ/ತಾಯಿಯ ವಾಸಸ್ಥಳದ ಪುರಾವೆ, ಜಾತಿ ಪ್ರಮಾಣ ಪತ್ರ/ಶಾಲಾ ದಾಖಲಾತಿ/ಶಾಲಾ ವರ್ಗವಣೆ ಪತ್ರ(ಖಿಅ) ನೀಡಬೇಕು. ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.
https://tinyurl.com/ppsmg2025 ಈ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು 25-06-2025 ಕೊನೆಯ ದಿನವಾಗಿರುತ್ತದೆ.
Shivakumara Swamiji Employees Association ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00 ವರೆಗೆ 9916278470, 9448231968 ನ್ನು ಸಂಪರ್ಕಿಸಬಹುದೆAದು ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
University of Mysore ಪ್ರಥಮ ಬಿ.ವಿ.ಎ. ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ.ಪದ್ಧತಿಯ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ 0821-2438931 ನ್ನು ಸಂಪರ್ಕಿಸುವುದು
