Saturday, February 28, 2026
Saturday, February 28, 2026
Home Blog Page 288

MESCOM ಆನವಟ್ಟಿ ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಮೆಸ್ಕಾಂ ಆನವಟ್ಟಿ ಉಪವಿಭಾಗ ಕಛೇರಿಯಲ್ಲಿ ಜೂ. 02 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಈ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

Shivamogga Police ಅನಾಮಧೇಯ ಮೃತ ಹೆಂಗಸ್ಸಿನ ವಾರಸುದಾರರ ಪತ್ತೆಗೆ ಮನವಿ

0

Shivamogga Police ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಹೋಗುವ ಮೆಟ್ಟಿಲು ಕೆಳಗೆ ಸುಸ್ತಾಗಿ ಮಲಗಿದ್ದ ಸುಮಾರು 55 -60 ವರ್ಷದ ಅನಾಮಧೇಯ ಮಹಿಳೆಯನ್ನು ಮುಂಜಾನೆ 3.30 ಕ್ಕೆ ಸಾರ್ವಜನಿಕರ ಸಹಾಯದಿಂದ ಅಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ವೈದ್ಯರು ಮಹಿಳೆಯನ್ನು ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತರು 5.3 ಅಡಿ ಉದ್ದ, ದುಂಡನೆಯ ಮುಖ, ಎಣ್ಣೆಗೆಂಪು ಮೈ ಬಣ್ಣ, ತಲೆಯಲ್ಲಿ 8 ಇಂಚು ಉದ್ದದ ಕಪ್ಪು ಮತ್ತು ಬಿಳಿ ಮಿಶ್ರಿತ ಕೂದಲು, ಹಣೆಯ ಮಧ್ಯದಲ್ಲಿ ಜೋಳದ ಕಾಳು ಗಾತ್ರದ ಹಚ್ಚೆ ಗುರುತು ಹಾಗೂ ಬಲಗೈನ ಒಳಭಾಗದಲ್ಲಿ ಸುಮಾರು 2.1 ಇಂಚು ಉದ್ದಗಲದ ಅಸ್ಪಷ್ಟವಾದ ಹಚ್ಚೆ ಗುರುತು ಇದ್ದು, ಮೃತರ ಮೈ ಮೇಲೆ ನೀಲಿ ಬಣ್ಣದ ಸೀರೆ, ಕೆಂಪು ಬಣ್ಣದ ರವಿಕೆ ಹೊಂದಿದೆ.
ಈ ಮೃತ ಹೆಂಗಸಿನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ.

Shivamogga Police ಈ ಮೃತರ ವಾರಸುದಾರರ ಬಗ್ಗೆ ಮಾಹಿತಿಯಿದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 ಅಥವಾ 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

Dinesh Gundu Rao ತೀರ್ಥಹಳ್ಳಿ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

0

Dinesh Gundu Rao ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಜಯಚಾಮರಾಜೇಂದ್ರ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಈಗಾಗಲೇ ಮಂಗನ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆ ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.. ತೀರ್ಥಹಳ್ಳಿಗೆ MCH ಆಸ್ಪತ್ರೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರ ಬಳಿ ಚರ್ಚಿಸಿದ್ದು, ಶೀಘ್ರದಲ್ಲೇ ಆಸ್ಪತ್ರೆ ಒದಗಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

Dinesh Gundu Rao ನಮ್ಮ‌ ಸರ್ಕಾರ ಬಂದ ಮೇಲೆ‌ ಡಯಾಲಿಸಿಸ್ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಜನರಿಗೆ ಉತ್ತಮ ಆರೋಗ್ಯ ಸೇವೆಗಳ ಒದಗಿಸಲಾಗುತ್ತಿದೆ. ಇದರ ಜೊತೆಗೆ ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

Health and Family Welfare ರಾಜ್ಯದ ಶಾಲೆಗಳಲ್ಲಿ ಕೋವಿಡ್ ನಿಯಂತ್ರಣ ಕುರಿತು‌ ಅನುಸರಿಸಬೇಕಾದ ಕ್ರಮಗಳು‌

0

Health and Family Welfare ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ
ಮುಂಜಾಗ್ರತಾ ಕ್ರಮಗಳ ಬಗ್ಗೆ. ಸನ್ಮಾನ್ಯ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ: 26.5.2025 ರಂದು ನಡೆದ
ಕೋವಿಡ್ – 19 ಪರಿಸ್ಥಿತಿ ಪರಿಶೀಲನಾ ಸಭೆಯಲ್ಲಿ ಈ ಕೆಳಕಂಡಂತೆ ಸೂಚಿಸಲಾಗಿದೆ.

Health and Family Welfare ಪ್ರಸ್ತುತ, ರಾಜ್ಯದ ಕೋವಿಡ್
19 ಪರಿಸ್ಥಿತಿ ಹಾಗೂ ಜೂನ್ ತಿಂಗಳಿನಲ್ಲಿ ಶಾಲೆಗಳು
ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ
ಕೆಳಕಂಡ ಸೂಚನೆಗಳನ್ನು ನೀಡಲಾಗಿದೆ.

  1. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ,
    ಮಕ್ಕಳನ್ನು ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ, ಸೂಕ್ತ ಚಿಕಿತ್ಸೆ ಹಾಗೂ ಆಫ್ರಿಕಾ
    ಕ್ರಮಗಳನ್ನು ಪಾಲಿಸುವುದು.
  2. ಸದರಿ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ
    ಕಳುಹಿಸುವುದು.
  3. ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಲ್ಲಿ, ಪೋಷಕರಿಗೆ
    ಮಾಹಿತಿಯನ್ನು ನೀಡಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸುವುದು.
  4. ಮುಂದುವರೆದು, ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಲ್ಲಿ ಜ್ವರ, ಕೆಮ್ಮು,
    ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು
    ಪಾಲಿಸುವಂತೆ ಸೂಚಿಸುವುದು.
  5. ಆದಾಗ್ಯೂ, ಮಂಜಾಗ್ರತಾ ಕ್ರಮಗಳಾದ ಕೈಗಳ ಸ್ವಚ್ಛತೆ, Cough Etiquette ಇತ್ಯಾದಿ Covid
    19 Appropriate Behaviour (CAB) ನ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು.
    ಒಟ್ಟಾರೆಯಾಗಿ, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ – 19
    ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ ಎಂದು
    ಆಯುಕ್ತರು
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪ್ರಕಟಣೆ ತಿಳಿಸಿದೆ.

Backward Classes Welfare Department ಉಚಿತ ಪೂರ್ವಭಾವಿ ಪರೀಕ್ಷಾ ತರಬೇತಿ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ

0

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಯುಪಿಎಸ್‌ಸಿ ನಾಗರೀಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಓ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 2025-26ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ -1 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

Backward Classes Welfare Department ಆಸಕ್ತರು ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ sevasindhuservices.karnataka.gov.in ರಲ್ಲಿ ಜೂನ್ 15 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಸಹಾಯವಾಣಿ 8050370006 ನ್ನು ಸಂಪರ್ಕಿಸುವುದು.

Shimoga Social Welfare Department ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿಗಳು ಒನ್ ಟೈಮ್ ರಿಜಿಷ್ಟ್ರೇಷನ್ ಪಡೆಯಲು ಮಾಹಿತಿ

0

Shimoga Social Welfare Department ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಮಿನಿಸ್ಟ್ರೀ ಆಫ್ ಎಲೆಕ್ಟ್ರಾನಿಕ್ಸ್ ಆಂಡ್ ಇನ್ಫರ್ಮಷನ್ ಟೆಕ್ನಾಲಜಿರವರು ಅಭಿವೃದ್ಧಿ ಪಡಿಸಿರುವ ನ್ಯಾಷನಲ್ ಸ್ಕಾಲರ್‌ಷಿಪ್ ಪೋರ್ಟಲ್‌ನಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆದು, ನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗಿದ್ದು, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವೆಬ್‌ಸೈಟ್ https://scholarships.gov.in ರಲ್ಲಿ ಒನ್ ಟೈಂ ರಿಜಿಸ್ಟ್ರೇಷನ್ ಸಂಖ್ಯೆಯನ್ನು ಪಡೆಯುವಂತೆ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Shimoga Social Welfare Department ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಹೆಚ್.ರಸ್ತೆ, ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂ.ಸಂ.: 08182-240512 ನ್ನು ಸಂಪರ್ಕಿಸುವುದು.

U. T. Khader ವ್ಯಾಪಕ ಮಳೆ.ಉಳ್ಳಾಲ ತಾಲ್ಲೂಕಿನಲ್ಲಿ ನೆರೆಹಾನಿ.ಪರಿಹಾರ ಕ್ರಮಕ್ಕೆ ಸ್ಪೀಕರ್ ಖಾದರ್ ಸೂಚನೆ

0

U. T. Khader ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು, ಮದೀನದಿಂದ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್,ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ ಗೊಳ್ಳಲು ಜಿಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉಳ್ಳಾಲ ತಾಲೂಕಿನ ಬೆಳ್ಮ ಹಾಗೂ ಮಂಜನಾಡಿ ಗ್ರಾಮದಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದ್ದು ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು ಸೋಮೇಶ್ವವರ ಕೋಟೆಕಾರು ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ನದಿ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದ್ದು ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ NDRF ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರ ಜೊತೆಯಲ್ಲಿ ಕೂಡಾ ಮಾತುಕತೆ ನಡೆಸಿ ಮುಖ್ಯಮಂತ್ರಿಗಳ ಗಮನಕ್ಕೂ ಕೂಡಾ ತರಲಾಗಿದ್ದು ಮೃತರ ಕುಟುಂಬಗಳಿಗೆ ಪರಿಹಾರ ಹಾಗೂ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದರ ವರದಿ ಆಧರಿಸಿ ಪರಿಹಾರ ನೀಡಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ಸೂಚನೆ ನೀಡಲಾಗಿದೆಯೆಂದು ಯು.ಟಿ.ಖಾದರ್ ತಿಳಿಸಿದ್ದಾರೆ.

U. T. Khader ಕ್ಷೇತ್ರದ ಪ್ರತೀ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವ ಯು.ಟಿ.ಖಾದರ್ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಂಡು ರಕ್ಷಣಾ ಕಾರ್ಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.ಆದಾಗ್ಯೂ ಸಾರ್ವಜನಿಕರು ಅಗತ್ಯ ಬಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ನನ್ನ ದೂರವಾಣಿ ಸಂಖ್ಯೆಯನ್ನು ಸಂಪರ್ಕ ಮಾಡಬಹುದು.

ತಾಲೂಕಿನ ಬೆಳ್ಮ ಗ್ರಾಮದ ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ,ತಡೆಗೋಡೆ ಕುಸಿದು ಬಿದ್ದು ನೌಶಾದ್ ರ ಪುತ್ರಿ ಫಾತಿಮ ನಈಮ (10), ಮಂಜನಾಡಿ ಗ್ರಾಮದ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ಗುಡ್ಡ ಜರಿದು ಐವರು ಮಣ್ಣಿನಡಿಯಲ್ಲಿ ಸಿಲುಕಿ ಪ್ರೇಮ ಪೂಜಾರಿ ರವರು ಮೃತರಾಗಿದ್ದು ಇತರರ ರಕ್ಷಣಾ ಕಾರ್ಯ ಮುಂದುವರಿದಿದೆ.ಸ್ಥಳದಲ್ಲಿ ಅಪರ ಜಿಲ್ಲಾಧಿಕಾರಿ ತಹಶೀಲ್ದಾರು ಹಾಗೂ ಇತರ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ, ಸಾರ್ವಜನಿಕರ ಸಂಪರ್ಕದಲ್ಲಿದ್ದುಕೊಂಡು ಸಹಕರಿಸುವಂತೆ ಸಭಾಧ್ಯಕ್ಷರು ಸೂಚನೆ ನೀಡಿದ್ದು ಜನ ಸಾಮಾನ್ಯರೂ ಕೂಡಾ ಎಚ್ಚರಿಕೆ ವಹಿಸುವಂತೆ ಸಭಾಧ್ಯಕ್ಷರು ಮನವಿ ಮಾಡಿದ್ದಾರೆ.

CM Siddaramaiah ರಾಜ್ಯದ ಪ್ರಗತಿ ಸಾಧನೆಗಳ ಪೋರ್ಟಲ್. ಮುಖ್ಯಮಂತ್ರಿಗಳಿಂದ ಬಿಡುಗಡೆ

0

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Dash Board ಬಿಡುಗಡೆಗೊಳಿಸಿದರು. ಕರ್ನಾಟಕ ಪ್ರಗತಿ ಪೋರ್ಟಲ್(DASH BOARD)

ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರ್ಕಾರದ ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಸರ್ಕಾರ ಯಶಸ್ವಿಯಾಗಿರುವ ಪಕ್ಷಿನೋಟವನ್ನು ಈ ಪೋರ್ಟಲ್‌ನಲ್ಲಿ ಪ್ರದರ್ಶಿಸಲಾಗಿದೆ.

ಮಹಾತ್ಮ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ಸರ್ಕಾರ ಹಮ್ಮಿಕೊಂಡಿರುವ ಮಹತ್ವಕಾಂಕ್ಷೆಯ ಕಲ್ಯಾಣ ಯೋಜನೆಗಳಿಂದಾಗಿ ಪ್ರತಿಯೊಂದು ವಲಯದಲ್ಲಿಯೂ ರಾಜ್ಯವು ಉತ್ತಮವಾದ ಸಾಧನೆಗಳನ್ನು ದಾಖಲಿಸಿದೆ.

ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದ್ದು, ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ.

CM Siddaramaiah ಈ ಪೋರ್ಟಲ್ ಮೂಲಕ ರಾಜ್ಯದ ಜನತೆಗೆ ಪಾರದರ್ಶಕವಾಗಿ ಪ್ರತಿ ಕ್ಷಣ ಪ್ರಗತಿ ಸೂಚ್ಯಂಕಗಳನ್ನು ಪ್ರದರ್ಶಿಸಲಾಗಿದೆ. ಜನಸ್ನೇಹಿ ಆಡಳಿತವನ್ನು ಒದಗಿಸಲು ಸಮಯ ಬದ್ಧ ಸೇವೆಗಳು, ಸಾರ್ವಜನಿಕ ಕುಂದು-ಕೊರತೆಗಳ ನಿರ್ವಹಣೆ, ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ನೀಡಲಾಗುತ್ತಿರುವುದರೊಂದಿಗೆ ಉದ್ಯೋಗ ಸೃಷ್ಟಿ, ವಿವಿಧ ಕಲ್ಯಾಣ ಕಾರ್ಯಕ್ರಮಗಳ ಕೋಟ್ಯಾಂತರ ಫಲಾನುಭವಿಗಳ ಪೈಕಿ ವಿಶೇಷವಾಗಿ 5 ಗ್ಯಾರಂಟಿ ಯೋಜನೆಗಳ ಆರ್ಥಿಕ ಭೌತಿಕ ವಿವರಗಳನ್ನು ಈ ತಂತ್ರಾಂಶದ ಮೂಲಕ ಒಂದೇ ವೇದಿಕೆಯಲ್ಲಿ ಲೋಕಾರ್ಪಣೆ ಮಾಡಲಾಗಿದೆ.

ಅಲ್ಲದೆ, ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ವೇಗವಾಗಿ ವಿಲೇವಾರಿ ಮಾಡುವ ಮೂಲಕ ನಾಗರಿಕರಿಗೆ ತುರ್ತು ಕಾನೂನಾತ್ಮಕ ಪರಿಹಾರಗಳನ್ನು ಸಹ ಒದಗಿಸುವಲ್ಲಿ ರಾಜ್ಯ ಅಗ್ರಗಣ್ಯ ಸ್ಥಾನದಲ್ಲಿದೆ.

Human Rights and Society ಜನಸಾಮಾನ್ಯರಲ್ಲಿ ಮಾನವೀಯ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು- ಐಡಿಯಲ್ ಗೋಪಿ

0

Human Rights and Society ಮಾನವ ಹಕ್ಕುಗಳು ಕುರಿತಾಗಿ ಜನಸಾಮಾನ್ಯರಲ್ಲಿ ಜಾಗೃತಿಯ ಅರಿವು ಮೂಡಿಸಬೇಕಿದೆ ಇದರಿಂದ ಸಾಂವಿಧಾನಿಕವಾಗಿ ಮೂಲಭೂತ ಸೌಲಭ್ಯಗಳ ಬಗ್ಗೆ ಆಡಳಿತ ವ್ಯವಸ್ಥೆಯೊಂದಿಗೆ ಪ್ರಶ್ನಿಸಬಹುದಾಗಿದೆ ಎಂದು ಮಾಜೀ ಪಾಲಿಕೆ ಸದಸ್ಯರಾದ ಐಡಿಯಲ್ ಗೋಪಿಯವರು ತಿಳಿಸಿದರು.

ಫೋರಂ ವಿನೋಬಾನಗರದ ವಿಧಾತ್ರಿ ಭವನದಲ್ಲಿ ಆಯೋಜಿಸಲಾಗಿದ್ದ ಮಾನವ ಹಕ್ಕುಗಳು ಮತ್ತು ಸಮಾಜ ಎನ್ನುವ ವಿಷಯ ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾನೂನು ಸಲಹೆಗಾರರಾದ ಗೀತಾ ಮಾನೆ ಅವರು ಮಾತನಾಡಿ ರಾಷ್ಟ್ರ ಸಂವಿಧಾನವು ಇ ನೆಲದ ವಾಸಿಗಳಿಗೆ ಸ್ವತಂತ್ರವಾಗಿ, ಸಾಮಾಜಿವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಬದುಕುವ ಹಕ್ಕುಗಳನ್ನು ನೀಡಿದೆ, ಇದೊಂದು ಡೆಮಾಕ್ರಸಿ ಎಂದು ಹೇಳಿದರಲ್ಲದೆ, ಎಲ್ಲಿ ಆಡಳಿತರೂಢರಿಂದ ತಾತ್ವಿಕವಾಗಿ ನ್ಯಾಯ ಎನ್ನುವುದು ಮರಿಚಿಕೆ ಆಗುವುದೋ ಅಲ್ಲಿ ನ್ಯಾಯಕ್ಕಾಗಿ ಸರಳೀಕರಣವಾಗಿ ಮಾನವ ಹಕ್ಕುಗಳ ಕಾನೂನು ಸಹಾಯವನ್ನು ಮಾಡುತ್ತದೆ ಈ ಕಾರಣಕ್ಕಾಗಿಯೇ ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗಗಳು ರಚನೆ ಆಗಿದೆ, ಇದಕ್ಕೆ ಹೊಂದಿಕೊಂಡಂತೆ ಸಾಮಾಜಿಕವಾಗಿ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಅಂತಹ ಸಂಸ್ಥೆಗಳು ನಾಗರೀಕ ನ್ಯಾಯಕ್ಕಾಗಿ ದನಿಯಾಗುತ್ತಿರುವುದು ನಾವು ನೋಡಬಹುದಾಗಿದೆ ಎಂದು ತಿಳಿಸಿದರು.

ಈ ಸಂಸ್ಥೆಯಲ್ಲಿ ಕಾನೂನು ಸಲಹೆಗಾರರಾಗಿ ಕೆಲಸ ಮಾಡುವುದಕ್ಕೆ ಸಂತಸ ತಂದಿದೆ ಎಂದು ವಿವರಿಸಿದರು,

Human Rights and Society ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಯಾನಂದ್ ಎಸ್.ವಿ ಅವರು ಮಾತನಾಡಿ ಎಷ್ಟೋ ಪ್ರಕರಣಗಳಲ್ಲಿ ಸರ್ಕಾರದ ಭೂಮಿ ಸರ್ಕಾರಕ್ಕೆ ಉಳಿಸುವುದಕ್ಕೆ ಹೋರಾಟಗಳು ನಡೆಸಬೇಕಾದ ದನಿಯಾಗಬೇಕಾದ ಸಂದರ್ಭಗಳಿವೆ, ಅಧಿಕಾರಿಗಳೇ ಇದಕ್ಕೆ ತಾತ್ಸಾರತೆ ಹೊಂದಿದರೆ ಜನ ನ್ಯಾಯಗಳು ಸಿಗುವುದು ವಿಳಂಬವಾಗುತ್ತದೆ, ಈ ನಿಟ್ಟಿನಲ್ಲಿ ಪಶು ಸಂಗೋಪನಾ ಇಲಾಖೆಗೆ ಭೂ ಪ್ರದೇಶವನ್ನು ಉಳಿಸುವುದಕ್ಕೆ ರೈತರೊಂದಿಗೆ ನಾವುಗಳು ಹೋರಾಟ ನಡೆಸಿ ಸರ್ಕಾರಕ್ಕೆ ಉಳಿಸಿದ ಉದಾಹರಣೆಗಳಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನೂತನ ಕಾರ್ಯಕಾರಿ ಮಂಡಳಿಗೆ ಗುರುತಿನ ಚೀಟಿ, ಜವಾಬ್ದಾರಿ ಪತ್ರ ಸೇರಿದಂತೆ, ಪುಸ್ತಕಗಳನ್ನು ವಿತರಿಸಲಾಯಿತು ಕಾರ್ಯಕ್ರಮದ ನಿರೂಪಣೆಯನ್ನು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ ನಿರೂಪಿಸಿದರು ವೇದಿಕೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಎಲ್.ಕೆ ಪರಮೇಶ್ವರ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಫೋರಂ ನ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಹಲವರು ಭಾಗವಹಿಸಿದ್ದರು.

Ashakirana School ಆಶಾಕಿರಣ ಶಾಲೆಗೆ 2025-26 ನೇ ಸಾಲಿಗೆ ಪ್ರವೇಶಾತಿಗೆ ಪ್ರಕಟಣೆ

0

Ashakirana School ಮಧ್ಯಮ ದರ್ಜೆಯ ಬುದ್ಧಿಮಾಂದ್ಯ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಉಚಿತವಾಗಿ ತರಬೇತಿ ಹಾಗೂ ಪುನಶ್ಚೇತನ ಕಾರ್ಯಕ್ರಮವನ್ನು ಕಳೆದ 38 ವರ್ಷಗಳಿಂದಲೂ ಅರ್ಥಪೂರ್ಣವಾಗಿ ತೊಡಗಿಸಿಕೊಂಡು ಬಂದಿರುವ ರೋಟರಿ 75ನೇ ವಾರ್ಷಿಕ ದತ್ತಿ ನಿದಿ,ರೋಟರಿ ಕ್ಲಬ್, ಶಿವಮೊಗ್ಗ ಇವರ ಪ್ರಾಯೋಜಕತ್ವ ಹಾಗೂ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದೊಂದಿಗೆ ನಡೆಸುತ್ತಿರುವ “ ಆಶಾಕಿರಣ” ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ವಿದ್ಯಾನಗರ, ಶಿವಮೊಗ್ಗ. ಈ ವಸತಿ ಶಾಲೆಯಲ್ಲಿ ಇಲ್ಲಿಯವರೆಗೆ ಸುಮಾರು 1,700 ಕ್ಕೂ ಹೆಚ್ಚು ಬುದ್ಧಿಮಾಂದ್ಯ ವಿದ್ಯಾರ್ಥಿಗಳು ತಮ್ಮ ಸ್ವಂತಿಗೆಯಿಂದ ಮತ್ತೊಬ್ಬರಿಗೆ ಹೊರೆಯಾಗದಂತೆ ಸಮಾಜದಲ್ಲಿ ಭಾಳ್ವೆ ಮಾಡುತ್ತಿದ್ದಾರೆ.

Ashakirana School 2025-2026 ನೇ ಸಾಲಿಗೆ ಬುದ್ಧಿಮಾಂದ್ಯ ಮಕ್ಕಳ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರವೇಶಕ್ಕೆ 06 ರಿಂದ 18 ವರ್ಷದ ಒಳಗಿನ ಬುದ್ಧಿಮಾಂದ್ಯ ಮಕ್ಕಳು ಅರ್ಹರಾಗಿದ್ದು, ದಾಖಲಾತಿ ಪ್ರಾರಂಭವಾಗಿದ್ದು, ಅರ್ಜಿಯನ್ನು ಶಾಲೆಯ ಕಛೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ :-
ಶ್ರೀಮತಿ.ಡಾ|| ರಜನಿ.ಎ.ಪೈ, ಅಧ್ಯಕ್ಷರು, ಆಶಾಕಿರಣ ಶಾಲೆ, ಶಿವಮೊಗ್ಗ.
94482 88487 , 273236, 223864
ಶ್ರೀಯುತ.ಎ.ಮಂಜುನಾಥ್, ಕಾರ್ಯದರ್ಶಿ ಹಾಗೂ ಗೌ.ಪ್ರಾಂಶುಪಾಲರು 98440 55267
ಮುಖ್ಯೋಪಾಧ್ಯಾಯರು, ಆಶಾಕಿರಣ ಶಾಲೆ, 99457 97120 ಈ ಸಂಖ್ಯೆಗೆ ಫೋನ್ ಮಾಡಬಹುದು.