Saturday, February 28, 2026
Saturday, February 28, 2026
Home Blog Page 292

Women and Child Development Department ಮಕ್ಕಳು ಅಬ್ದುಲ್ ಕಲಾಂ ಅವರನ್ನ ಮಾದರಿಯಾಗಿಟ್ಟುಕೊಳ್ಳಬೇಕು-ನ್ಯಾ.ಎಂ.ಎಸ್.ಸಂತೋಷ್

0

Women and Child Development Department ಮಕ್ಕಳು ತಮ್ಮ ಬೆಳವಣಿಗೆಗೆ ಪೂರಕವಾದ ಹೊಸ ವಿಷಯಗಳನ್ನು ತಿಳಿದುಕೊಳ್ಳುವುದು ಅತಿ ಅಗತ್ಯವಾಗಿದ್ದು, ಮಕ್ಕಳ ಬೆಳವಣಿಗೆಗೆ ಇಂತಹ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸಂತೋಷ್ ಹೇಳಿದರು.
ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಇವರ ಸಹಯೋಗದಲ್ಲಿ ಕಾಶಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಆಯೋಜಿಸಿದ್ದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಸೋಮವಾರ ಸರ್ಕಾರಿ ವೀಕ್ಷಣಾಲಯದಲ್ಲಿ ಚಂಡೆ ಬಾರಿಸುವ ಹಾಗೂ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು
ಮಕ್ಕಳು ತಮ್ಮ ದಿನಚರಿಯನ್ನು ಸರಿಯಾದ ಕ್ರಮದಲ್ಲಿ ನಿಭಾಯಿಸಬೇಕು. ಅದನ್ನು ಬದುಕಿಗೆ ಸೂತ್ರದಂತೆ ಅವಳಡಿಸಿಕೊಳ್ಳಬೇಕು. ಆಗ ಮಾತ್ರ ಬದುಕಿನಲ್ಲಿ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ. ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ಮಾದರಿಯಾಗಿ ತೆಗೆದುಕೊಳ್ಳಬೇಕು. ಅವರಂತೆ ನೀವೆಲ್ಲಾ ಉತ್ತ್ತುಂಗಕ್ಕೆ ಏರಬೇಕು ಎಂದರು.
ಜಿ.ಪA. ಉಪ ಕಾರ್ಯದರ್ಶಿಯಾದ ಶ್ರೀಮತಿ ಸುಜಾತ ಮಾತನಾಡಿ, ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಅತ್ಯಗತ್ಯ. ಮೊದಲೆಲ್ಲಾ ಬೇಸಿಗೆ ರಜೆ ಬಂದ ಕೂಡಲೇ ಅಜ್ಜಿ ಮನೆಗೆ ಹೋಗಿ ಅಲ್ಲಿನ ವಾತಾರಣದಲ್ಲಿದ್ದು, ಅಲ್ಲಿನ ದೇಸಿ ಆಟಗಳನ್ನು ಆಡುತ್ತಾ ಕಾಲ ಕಳೆಯುತ್ತಿದ್ದೆವು. ಆದರೆ ಇಂದಿನ ಮಕ್ಕಳು ಹೆಚ್ಚಾಗಿ ಮೊಬೈಲ್, ಟಿವಿಯ ಬಳಕೆಯಲ್ಲೆ ಮುಳುಗಿ ಹೋಗಿದ್ದಾರೆ. ಇದರಿಂದ ಸರಿಯಾಗಿ ಊಟ ಮತ್ತು ನಿದ್ರೆ ಮಾಡುವುದಿಲ್ಲ. ಮಕ್ಕಳಿಗೆ ಮಾನಸಿಕ ಸಮಸ್ಯೆಗಳು ಉಂಟಾಗುತ್ತಿವೆ ಎಂದರು.
ಬೇಸಿಗೆ ಶಿಬಿರದಲ್ಲಿ ಯೋಗ, ಧ್ಯಾನ, ಶ್ಲೋಕ, ಚಿತ್ರಕಲೆ, ಕರಕುಶಲತೆ, ಸಮೂಹ ನೃತ್ಯ, ಸಂಗೀತ, ರಂಗಕಲೆ, ಅಬಾಕಸ್‌ನಂತಹ ಸಕಾರಾತ್ಮಕ ಕಲಿಕೆಗಳು ಒಳಗೊಂಡಿದ್ದು, ಮಕ್ಕಳು ಇದರಲ್ಲಿ ಭಾಗವಹಿಸುವುದರಿಂದ ಮನೋವಿಕಾಸಕ್ಕೆ ಸಹಕಾರಿಯಾಗುತ್ತದೆ ಎಂದರು.
Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಬಿ.ಹೆಚ್.ಕೃಷ್ಣಪ್ಪ ಮಾತನಾಡಿ, ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಉಪಯೋಗವಾಗುವಂತಹ ಐದು ಚಟುವಟಿಕೆಗಳನ್ನು 15 ದಿನಗಳ ಕಾಲ ನಡೆಸಲಾಯಿತು. ಶಿಬಿರದಲ್ಲಿ 108 ಮಕ್ಕಳು ನೋಂದಣಿಯಾಗಿದ್ದು, ಚಿತ್ರಕಲೆ, ಕರಕುಶಲತೆ, ಸಮೂಹ ನೃತ್ಯ, ಸಂಗೀತ, ರಂಗ ಕಲೆ, ಫೈನ್ ಮೋಟಾರ್ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಸರ್ಕಾರಿ ಶಾಲೆಯ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಆ ಮೂಲಕ ಎಲ್ಲಾ ಮಕ್ಕಳಿಗೆ ಇದರ ಸದುಪಯೋಗ ಮಾಡಿಕೊಳ್ಳಲು ಸಹಾಯಕವಾಯಿತು ಎಂದರು.
ಜಿಲ್ಲಾ ಬಾಲ ಭವನ ಸಮಿತಿಯ ಕಾರ್ಯಕ್ರಮ ಸಂಯೋಜಕರಾದ ಆರ್. ಮಂಜುಳಾರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ ಮಕ್ಕಳು “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎನ್ನುವ ಕಿರು ನಾಟಕವನ್ನು ಪ್ರದರ್ಶಿಸಿದರು. ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಹೆಚ್. ಉಮೇಶ್ , ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರೇಖ್ಯಾ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈತ್ರಿಕುಮಾರಿ, ಮುಖ್ಯೋಪಾಧ್ಯಾರಾದ ಹಾಲ ನಾಯಕ್, ಚಿತ್ರಕಲಾ ಹಾಗೂ ಕರಕುಶಲ ಕಲೆ ಶಿಕ್ಷಕ ಕೆ.ಎ.ವಿಶಾಲ್, ಸಂಗೀತ ಶಿಕ್ಷಕ ಅರುಣ್ ಎಸ್ ಘಾಟೆ, ನೃತ್ಯ ಶಿಕ್ಷಕಿ ಜೆ.ಕವಿತಾ ರಾಣಿ, ರಂಗಕಲೆ ಶಿಕ್ಷಕ ಯೋಗೇಶ್ ಹಾಜರಿದ್ದರು.

Sagar Social Welfare Department ಮೆಟ್ರಿಕ್ ಪೂರ್ವ/ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

0

Sagar Social Welfare Department ಸಾಗರ ಸಮಾಜ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ಪೂರ್ವ/ನಂತರದ ​ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಆನ್‌ಲೈನ್ www.sw.kar.nic.in ಮುಖಾಂತರ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಗಳನ್ನು ಆಯಾ ​ವಿದ್ಯಾರ್ಥಿ ನಿಲಯಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಳೆದ ಸಾಲಿನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ದೂರವಾಣಿ ಸಂಖ್ಯೆ, ಎಸ್‌ಎಟಿಎಸ್ ಐಡಿ (ಮೆ.ಪೂ.ವಿದ್ಯಾರ್ಥಿಯಾಗಿದ್ದಲ್ಲಿ), ಎಸ್‌ಎಸ್‌ಪಿ ಐಡಿ, ಯುನಿರ್ವಸಿಟಿ ಐಡಿ ನಂ. ಮತ್ತು ಯುನಿರ್ವಸಿಟಿ ರಿಜಿಸ್ಟ್ರೇಷನ್ ನಂ. (ಮೆ. ನಂ. ವಿದ್ಯಾರ್ಥಿಯಾಗಿದ್ದಲ್ಲಿ) ದಾಖಲೆಗಳೊಂದಿಗೆ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ¸ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Sagar Social Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9480843192 ಅಥವಾ ಸಹಾಯಕ ನಿರ್ದೇಶಕರು, ಸಾಗರ ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸುವುದು.

DC Shivamogga ನಗರ ಪಾಲಿಕೆ ವ್ಯಾಪ್ತಿಗೆ ಗ್ರಾಮಾಂತರ ಪ್ರದೇಶಗಳ ಸೇರ್ಪಡಗೆ ಮುನ್ನ ಆಯಾ ಕ್ಷೇತ್ರದ ಶಾಸಕರು, ಜನ ಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ- ಗುರುದತ್ತ ಹೆಗಡೆ

0

DC Shivamogga ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 09ಗ್ರಾಮ ಪಂಚಾಯಿತಿಗಳ 19ಹಳ್ಳಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಸೇರ್ಪಡೆಗೊಳಿಸುವ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಆಯಾ ಕ್ಷೇತ್ರಗಳ ಶಾಸಕರು ಹಾಗೂ ಆಯಾ ಗ್ರಾಮ ಪಂಚಾಯಿತಿಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಸಂಗ್ರಹಿಸಿ, ಮುಂದಿನ 15ದಿನಗಳೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗವು ಬೆಳೆಯುತ್ತಿರುವ ನಗರ, ಪಟ್ಟಣ ಪ್ರದೇಶಗಳನ್ನು ಪಾಲಿಕೆ, ಪುರಸಭೆ, ಪಟ್ಟನ ಪಂಚಾಯಿತಿಗಳ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದರ ಮೇರೆಗೆ ಸಭೆಯನ್ನು ಆಯೋಜಿಸಲಾಗಿತ್ತು ಎಂದರು. ಕಳೆದ 20ವರ್ಷಗಳಿಂದ ಸದರಿ ಮಹಾನಗರಪಾಲಿಕೆಯ ವ್ಯಾಪ್ತಿ ವಿಸ್ತರಿಸುವ ಕಾರ್ಯ ಆಗಿರುವುದಿಲ್ಲ. 1993ರಲ್ಲಿ ಪಾಲಿಕೆಯ ವ್ಯಾಪ್ತಿಯನ್ನು ಗುರುತಿಸುವ ಕಾರ್ಯ ನಡೆದಿತ್ತು. ಆದರೆ, ಇತ್ತೀಚಿನ ಒಂದು ದಶಕದಿಂದೀಚೆಗೆ ಕೃಷಿ ಪ್ರದೇಶದ ವ್ಯಾಪ್ತಿ ಕಡಿಮೆಯಾಗಿರುವ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಿರುವ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಬಗ್ಗೆ ಸರ್ಕಾರವು ಮಾರ್ಗದರ್ಶನ ನೀಡಿತ್ತು. ಆ ನಿರ್ದೇಶನದ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ವತಿಯಿಂದ 09ಸಮಿತಿಗಳನ್ನು ರಚಿಸಿ, ಸಮೀಕ್ಷೆ ನಡೆಸಿ, ಈ ಸಮಿತಿಗಳು ನೀಡಿದ ವರದಿಯ ಆಧಾರದ ಮೇಲೆ ಪಾಲಿಕೆಯ ವಿಸ್ತರಿಸಬಹುದಾದ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ಗುರುತಿಸಿ, ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಲಾಗಿತ್ತು.

ಅವರ ಮಾರ್ಗದರ್ಶನದಂತೆ ಇಂದು ಸಮಿತಿ ಸಭೆ ಸೇರಿ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ವ್ಯಾಪ್ತಿ ವಿಸ್ತರಣೆಯ ಸಾಧಕ-ಬಾಧಕಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ ಎಂದವರು ತಿಳಿಸಿದರು. ಈಗಾಗಲೇ ಪಾಲಿಕೆ ವ್ಯಾಪ್ತಿಯನ್ನೂ ಮೀರಿ ಅನೇಕ ಬಡಾವಣೆಗಳು ಸೃಜನೆಗೊಂಡಿವೆ. ಇವುಗಳ ವ್ಯವಸ್ಥಿತ ನಿರ್ವಹಣೆ ಗ್ರಾಮ ಪಂಚಾಯಿತಿಗಳಿಂದ ಕಷ್ಟಸಾಧ್ಯ. ಅಲ್ಲದೇ ಅದಕ್ಕೆ ಪೂರಕವಾದ ಪರಿಕರಗಳು ಸಹ ಗ್ರಾಮ ಪಂಚಾಯಿತಿಗಳಲ್ಲಿ ಇಲ್ಲದಿರುವುದು ಕಾರಣವಾಗಿದೆ. ಅಲ್ಲದೇ ಪ್ರದೇಶ ಅಭಿವೃದ್ಧಿ ಹೊಂದಿದಂತೆ ಅಲ್ಲಿನ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಕೂಡ ಸರ್ಕಾರದ ಭಾಗವಾಗಿದೆ ಎಂದವರು ನುಡಿದರು.

2011ರ ಜನಗಣತಿಯಂತೆ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಟ 3ಲಕ್ಷ ಜನಸಂಖ್ಯೆ ಇತ್ತು. ಒಂದು ಅಂದಾಜಿನ ಪ್ರಕಾರ 2021ರ ಹೊತ್ತಿಗೆ 4.22ಲಕ್ಷ ಜನಸಂಖ್ಯೆ ಹಾಗೂ ಪಾಲಿಕೆ ಪ್ರದೇಶದ ವ್ಯಾಪ್ತಿಯಿಂದ ಕನಿಷ್ಟ 35000ಜನಸಂಖ್ಯೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದ ಅವರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಪರ-ವಿರೋಧದ ಅಭಿಪ್ರಾಯಗಳನ್ನು ಆಧರಿಸಿ, ಮುಂದಿನ 15ದಿನಗಳೊಳಗಾಗಿ ಮತ್ತೊಮ್ಮೆ ಸಭೆ ಕರೆದು ಅಂತಿಮ ಹಂತದ ಸಮಾಲೋಚನೆಯ ನಂತರ ಗಡಿ ಪ್ರದೇಶದ ನಕ್ಷೆಯನ್ನು ಗುರುತಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.


DC Shivamogga ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ,

ಆರ್.ಮೋಹನ್‌ಕುಮಾರ್‌ಸೇರಿದಂತೆ ಎಲ್ಲಾ ಸಂಬಂಧಿತ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಾಲಿಕೆಯ ಅಧಿಕಾರಿ-ಸಿಬ್ಬಂಧಿಗಳು ಮತ್ತಿತರರು ಉಪಸ್ಥಿತರಿದ್ದರು. ಈ ಪಾಲಿಕೆಯ ವ್ಯಾಪ್ತಿ ವಿಸ್ತರಣೆಯಿಂದ ನಗರ ನೀರು ಸರಬರಾಜು ಮತ್ತು ಒಳಚರಂಡಿಗಳ ವ್ಯವಸ್ಥಿತ ನಿರ್ವಹಣೆ, ಆರೋಗ್ಯ ಮತ್ತು ನೈರ್ಮಲ್ಯ, ಬೀದಿದೀಪ ಅಳವಡಿಕೆ, ಆಸ್ತಿ ತೆರಿಗೆ ವಸೂಲಾತಿ, ನೀರಿನ ತೆರಿಗೆ ವಸೂಲಾತಿ, ಮಾರುಕಟ್ಟೆ ಸ್ಥಳಗಳು, ಅಗ್ನಿಶಾಮಕ ದಳಗಳು, ರಸ್ತೆಗಳು, ಸೇತುವೆಗಳು, ಘನತ್ಯಾಜ್ಯ ವಿಲೇವಾರಿ, ಉದ್ಯಾನವನಗಳು, ಶಿಕ್ಷಣ, ಜನನ-ಮರಣ ದಾಖಲೆಗಳ ನಿರ್ವಹಣೆ, ಮಳಿಗೆಗಳ ತೆರಿಗೆ ವಸೂಲಾತಿ, ಉದ್ದಿಮೆ ಪರವಾನಗಿ ಶುಲ್ಕ ಮತ್ತಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ. ಪ್ರಸ್ತುತ ಮಹಾನಗರಪಾಲಿಕೆ ಆಯುಕ್ತರ ಮೂಲಕ ಸ್ಥಳೀಯ 35ವಾರ್ಡುಗಳ ಆಡಳಿತವನ್ನು ನಿರ್ವಹಿಸಲಾಗುತ್ತಿದೆ.


ಪ್ರಸ್ತುತ ಅಬ್ಬಲಗೆರೆ, ಕೋಟೆಗಂಗೂರು, ಮುದ್ದಿನಕೊಪ್ಪ, ಮೇಲಿನಹನಸವಾಡಿ, ಗೋಂದಿಚಟ್ನಳ್ಳಿ, ನಿಧಿಗೆ, ಮಾಚೇನಹಳ್ಳಿ, ಸಂತೇಕಡೂರು, ಪುರದಾಳು, ಗುಡ್ಡದಅರೆಕೆರೆ, ತ್ಯಾವರೆಕೊಪ್ಪ. ಅಗಸವಳ್ಳಿ ಮುಂತಾದ ಗ್ರಾಮ ಪಂಚಾಯಿತಿಗಳ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಗ್ರಾಮಗಳು ಸೇರ್ಪಡೆಗೊಳ್ಳುವ ಸಂಭವವಿದೆ. ಅಂತಿಮ ಸಮಾಲೋಚನಾ ಸಭೆಯ ನಂತರ ವ್ಯಾಪ್ತಿಯ ಅಂತಿಮ ನಕ್ಷೆ ಸಿದ್ಧಗೊಳ್ಳಲಿದೆ.

Shivamogga Karnataka Sugama Sangeet Parishad ಭಾವಗೀತೆಗಳು ಸಂಗೀತದ ಅರಮನೆಯ ಹೆಬ್ಬಾಗಿಲು- ಕವಿ ಬಿ.ಆರ್.ಲಕ್ಷ್ಮಣರಾವ್

0

Shivamogga Karnataka Sugama Sangeet Parishad ಕವಿತೆಗಳ ಮೂಲಕ ಕವಿಯು ಸದಾ ಜೀವಂತವಾಗಿರುತ್ತಾನೆ. ಕವಿಯ, ಸಾಹಿತಿಗಳ ಪುಸ್ತಕಗಳನ್ನು ಕೊಂಡು ಓದಿದರೆ ಅದರಿಂದ ಒಬ್ಬ ಲೇಖಕರನ್ನು ಮನೆಗೆ ಕರೆದೊಯ್ಯುವ ಹಾಗೆ ಆಗುತ್ತದೆ.

ಹೀಗಾಗಿ ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕವಿ ಬಿ.ಆರ್.ಲಕ್ಷ್ಮಣ್‌ರಾವ್ ಹೇಳಿದರು.

ಶಿವಮೊಗ್ಗದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಮತ್ತು ಇತರ ಸಂಘ ಸಂಸ್ಥೆಗಳು ಸಹಯೋಗದಲ್ಲಿ ಏರ್ಪಡಿಸಿದ್ದ “ಅಮ್ಮಾ ನಿನ್ನ ಎದೆಯಾಳದಲ್ಲಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಭಾವಗೀತೆಗಳು ಸಂಗೀತದ ಅರಮನೆಯ ಹೆಬ್ಬಾಗಿಲು ಎಂದು ತಿಳಿಸಿದರು.

ಶಿವಮೊಗ್ಗದ ಅಳಿಯನಾದ ನನಗೆ ಐವತ್ತು ವರ್ಷದ ನಂಟಿದೆ. ನನ್ನ ಮಕ್ಕಳು ಸಹ ಇಲ್ಲಿಯೇ ಓದಿದ್ದಾರೆ. ನನಗೆ ಇಲ್ಲಿ ತುಂಬಾ ಗೆಳೆಯರು ಇದ್ದಾರೆ. ಹೀಗಾಗಿ ಶಿವಮೊಗ್ಗ ನನಗೆ ಅತ್ಯಂತ ಪ್ರಿಯವಾದ ಸ್ಥಳ ಎಂದು ಹೇಳಿದರು.

ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಶಾಂತಾ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸದಸ್ಯರು ಸಂವಾದದಲ್ಲಿ ಪಾಲ್ಗೊಂಡು ಅನೇಕ ಭಾವನೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಸುಗಮ ಸಂಗೀತ ಅಕಾಡೆಮಿ ಸದಸ್ಯರು ಲಕ್ಷ್ಮಣರಾಯರ ಗೀತೆಗಳನ್ನು ಹಾಡಿ ರಂಜಿಸಿದರು.

ವೇದಿಕೆಯಲ್ಲಿ ಜಿ.ವಿಜಯಕುಮಾರ್ ಮತ್ತು ಎಂ.ಎನ್.ಸುಂದರರಾಜ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬಿ.ಆರ್.ಲಕ್ಷ್ಮಣ ರಾವ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ನಾದಲೀಲೆ, ಅರ್ಪಿತಾ, ನಾದಶ್ರೀ, ತರಂಗಿಣಿ, ಚಿರಂತನ ಸಂಗೀತ ಸಂಸ್ಥೆಯವರು ಕವಿಗಳಿಗೆ ಗೌರವ ಸಲ್ಲಿಸಿದರು.

Shivamogga Karnataka Sugama Sangeet Parishad ಶೋಭಾ ಸತೀಶ್, ಉಮಾ ದಿಲೀಪ್, ಜಯಶ್ರೀ ಶ್ರೀಧರ್, ಲತಾ ಕೆದಿಲಾಯ, ಲಲಿತಮ್ಮ, ಹೇಮಾ, ಮಂಜುನಾಥ್, ಮಥುರಾ ನಾಗರಾಜ್, ಸುಶೀಲಾ ಷಣ್ಮುಗಂ, ಧನ್ಪಾಲ್ ಸಿಂಗ್, ದಿನೇಶ್ ಜಿ. ಕೆ., ರಾಘವೇಂದ್ರ ಪ್ರಭು, ಸರೋಜಾ ಭುಜಂಗಪ್ಪ, ರಾಜಕುಮಾರ್, ಭುಜಂಗಪ್ಪ, ದಾಕ್ಷಾಯಣಿ, ಶೀಲಾ ಸುರೇಶ್, ವಸಂತ ವೇಣುಗೋಪಾಲ್, ವಿನೋದಾ ಕೃಷ್ಣಮೂರ್ತಿ, ಬಿಂದು ವಿಜಯಕುಮಾರ್ ಇನ್ನೂ ಅನೇಕರು ಉಪಸ್ಥಿತರಿದ್ದರು.

Bharat Scouts and Guides ಯುವ ಸಮುದಾಯದಲ್ಲಿಸ್ಕೌಟ್ಸ್ & ಗೈಡ್ಸ್ ಶಿಕ್ಷಣದಿಂದ ಆತ್ಮವಿಶ್ವಾಸ & ಭರವಸೆ – ಡಾ.ಧನಂಜಯ ಸರ್ಜಿ

0

Bharat Scouts and Guides ಆತ್ಮವಿಶ್ವಾಸ ಮತ್ತು ಭರವಸೆ ಮೂಡಿಸುವಲ್ಲಿ ಯುವ ಸಮುದಾಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಣ ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ಜಿಲ್ಲಾ ಸಂಸ್ಥೆ ಶಿವಮೊಗ್ಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ದಳಗಳ ರ‍್ಯಾಲಿಯಲ್ಲಿ ಮಾತನಾಡಿ, ಮಕ್ಕಳಿಗೆ ಶಿಸ್ತು, ಸಂಘಟನೆ ಮತ್ತು ಸೇವೆಯ ಮಹತ್ವವನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಅರಿವು ಮೂಡಿಸುತ್ತದೆ. ಮಕ್ಕಳಲ್ಲಿ ನಿಸರ್ಗದ ಒಲವು ಮೂಡಿಸಿ ಅವರು ಸದಾ ಉತ್ಸಾಹಿತರಾಗಿ ಇರುವಂತೆ ಮಾಡುವ ಒಂದು ವಿಶಿಷ್ಟ ಶಿಕ್ಷಣವೇ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.

ಪಾಠ ಪ್ರವಚನಗಳ ಜತೆಗೆ ನಿಸರ್ಗದ ಪರಿಸರದಲ್ಲಿ ಆಡಿ ನಲಿಯುವ, ನೋಡಿ ಕುಣಿಯುವ ಅವಕಾಶವನ್ನು ಕಲ್ಪಿಸುತ್ತದೆ. ಶಾಲೆ ಮತ್ತು ಮನೆ ಇವೆರಡೂ ಪೂರೈಸದ ಅನೇಕ ಅಗತ್ಯಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಣವು ಯುವ ಜನಾಂಗಕ್ಕೆ ಪೂರೈಸುವಲ್ಲಿ ಪರಿಣಾಮಕಾರಿಯಾಗಿದೆ.

ಈ ನಿಟ್ಟಿನಲ್ಲಿ ಇಂದು ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಇಂತಹ ರಾಜ್ಯ ಮಟ್ಟದ ರ‍್ಯಾಲಿಗಳು ಹೊಸ ಭರವಸೆ ಮೂಡಿಸುವುದರ ಜತೆಗೆ ಅವರಲ್ಲಿ ಜೀವನೋತ್ಸಾಹ ಹೆಚ್ಚಿಸುತ್ತದೆ ಎಂದು ಹೇಳಿದರು.

ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್ ಮಾತನಾಡಿ, ಬಾಲ್ಯದಲ್ಲಿ ದೈಹಿಕವಾಗಿ, ಬೌದ್ಧಿಕವಾಗಿ, ಸಾಮಾಜಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ವಿಕಸನಗೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿ ನೆರವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಶಾಲೆಗಳಲ್ಲೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಸ್ಥಾಪಿಸುವುದರ ಮುಖಾಂತರ ಪ್ರತಿಯೊಂದು ಮನೆ ಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಅವರು ವಹಿಸಿ ಮಾತನಾಡಿ, ನಮ್ಮ ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸ್ವಚ್ಛತಾ ಕಾರ್ಯಕ್ರಮ, ಆರೋಗ್ಯ ಸಾಕ್ಷರತೆ, ಸಸಿ ನೆಡುವುದು ಪರಿಸರ ಸಂರಕ್ಷಣೆ ಸೇರಿದಂತೆ ಅನೇಕ ಸಮುದಾಯ ಸೇವೆಗಳಲ್ಲಿ ತೊಡಗಿಸಿಕೊಂಡು ಮನುಕುಲದ ಸೇವೆಯನ್ನು ಮಾಡುತ್ತಿದ್ದಾರೆ. ಆದ್ದರಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ಇಂದಿಗೂ ತನ್ನ ಮೌಲ್ಯಗಳನ್ನು ಉಳಿಸಿಕೊಂಡಿದೆ ಎಂದು ನುಡಿದರು.

Bharat Scouts and Guides ಆಯುಕ್ತರಾದ ಎಸ್.ಜಿ.ಆನಂದ್, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ

ಕೆ.ವಿ.ಚಂದ್ರಶೇಖರ್, ಜಂಟಿ ಕಾರ್ಯದರ್ಶಿ ಲಕ್ಷ್ಮೀ ರವಿ, ಆಯುಕ್ತರಾದ ಕೆ.ರವಿ, ಸರಸ್ವತಿ ನಾಗರಾಜ್, ಶಿವಶಂಕರ್, ರಾಜೇಶ್ ಅವಲಕ್ಕಿ, ಮೀನಾಕ್ಷಮ್ಮ, ಗೀತಾ ಚಿಕ್ಕಮಠ, ವೈ ಆರ್ ವೀರೇಶಪ್ಪ, ಚೂಡಾಮಣಿ ಇ ಪವಾರ್, ಜ್ಯೋತಿ. ಕಾತ್ಯಾಯಿನಿ, ಮಲ್ಲಿಕಾರ್ಜುನ್, ವೇಣುಗೋಪಾಲ್, ದೀಪು, ಸ್ಕೌಟ್ಸ್ ಅಂಡ್ ಗೈಡ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Department of Agricultural Research and Education ಮೇ29 ರಿಂದ ಜೂನ್12 ವರೆಗೆ ಜಿಲ್ಲೆಯಾದ್ಯಂತ “ವಿಕಸಿತ ಕೃಷಿ ಸಂಕಲ್ಪ ಅಭಿಯಾನ”

0

Department of Agricultural Research and Education ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ, ಭಾರತೀಯ ಕೃಷಿ ಸಂಶೋಧನಾ ಮಂಡಳಿ, ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಮೇ 29 ರಿಂದ ಜೂನ್ 12 ರವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ವನ್ನು ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ.

ಈ ಅಭಿಯಾನದ ಉದ್ಘಾಟನೆಯನ್ನು ಮೇ 29 ರಂದು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10.30 ಕ್ಕೆ ಆಯೋಜಿಸಲಾಗಿದೆ.
ಈ ಅಭಿಯಾನದ ಅಡಿಯಲ್ಲಿ ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗವು ಮೇ 29 ರಿಂದ ಜೂನ್ 12 ರವರೆಗೆ ಜಿಲ್ಲೆಯಾದ್ಯಂತ 15 ದಿನಗಳವರೆಗೆ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ಕಾರ್ಯಕ್ರಮವನ್ನು ಕೃಷಿ ಮುಂಗಾರು ಹಂಗಾಮಿನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ನಮ್ಮ ದೇಶದ ಶ್ರಮಜೀವಿ ರೈತ ಬಾಂಧವರಿಗಾಗಿ ಈ ಮುಂಗಾರು ಹಂಗಾಮಿನಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳ ಕುರಿತು ಮಾಹಿತಿ, ಸಮಗ್ರ ಕೃಷಿ ಪದ್ದತಿ, ಜಾನುವಾರು ಸಾಕಾಣಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ಜೇನು ಸಾಕಾಣಿಕೆ ಇತ್ಯಾದಿಗಳನ್ನು ಒಳಗೊಂಡಂತೆ ರೈತರಿಗೆ ಅರಿವು ಮೂಡಿಸುವುದು, ಮಣ್ಣಿನ ಆರೋಗ್ಯ ಕಾರ್ಡ್ ಆಧಾರಿತ ಸಮತೋಲಿತ ರಸಗೊಬ್ಬರಗಳ ಬಳಕೆ, ಬೆಳೆಗಳ ಆಯ್ಕೆ, ಸುಧಾರಿತ ತಳಿಗಳು, ಬೀಜೋಪಚಾರ ಮತ್ತು ಕೀಟ ಹಾಗೂ ರೋಗಗಳ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಅಯೋಜಿಸಲಾಗುವುದು.

Department of Agricultural Research and Education ಈ ಅಭಿಯಾನದಲ್ಲಿ ಕೃಷಿ ಬೆಳೆಗಳ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ರೈತ-ವಿಜ್ಞಾನಿಗಳ ನೇರ ಸಂವಾದವನ್ನು ಕೂಡ ಆಯೋಜಿಸಲಾಗುತ್ತಿದ್ದು, ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರ, ಸಂಶೋಧನಾ ಕೇಂದ್ರಗಳು, ಐಸಿಎಆರ್ ಕೇಂದ್ರೀಯ ಸಂಸ್ಥೆಗಳ ವಿಜ್ಞಾನಿಗಳು ನೇರವಾಗಿ ಭಾಗವಹಿಸುವರು. ಜಿಲ್ಲೆಯ ಎಲ್ಲಾ ಹೋಬಳಿಗಳ ರೈತ ಸಂಪರ್ಕ ಕೇಂದ್ರದ ಮೂಲಕ ಈ ಅಭಿಯಾನದ ತಂಡ ಭೇಟಿ ನೀಡುವುದನ್ನು ಆಯಾ ಗ್ರಾಮ ವ್ಯಾಪ್ತಿಯ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುವುದು. ತಂಡ ಗ್ರಾಮಕ್ಕೆ ಬಂದಾಗ ಕಾರ್ಯಕ್ರಮದಲ್ಲಿ ಹೆಚ್ಚಿನ ರೈತರು ಭಾಗವಹಿಸಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕೆಂದು ಐಸಿಎಆರ್-ಕೆವಿಕೆ ಹಿರಿಯ ವಿಜ್ಞಾನಿ ಮತ್ತು ಕೆವಿಕೆ ಮುಖ್ಯಸ್ಥರಾದ ಡಾ.ಸುನಿಲ್ ಸಿ ತಿಳಿಸಿದ್ದಾರೆ.

Sri Adichunchanagiri Mahasansthan Math ಮೇ29, ಶಿವಮೊಗ್ಗದಲ್ಲಿ ರಾಜ್ಯ ಹೋಟೆಲ್ ಉದ್ಯಮಿಗಳ ಸಂಘದ 70 ನೇ ವಾರ್ಷಿಕೋತ್ಸವ

0

Sri Adichunchanagiri Mahasansthan Math ರಾಜ್ಯದ ಆರ್ಥಿಕತೆಯ ಮೂಲಾಧಾರಗಳಲ್ಲಿ ಒಂದಾಗಿರುವ ಹೋಟೆಲ್ ಉದ್ಯಮದ ಪ್ರಾತಿನಿಧಿಕ ಸಂಸ್ಥೆ ರಾಜ್ಯ ಹೋಟೆಲುಗಳ ಸಂಘದ ೭೦ನೇ ವಾರ್ಷಿಕೋತ್ಸವವ ಗುರುವಾರ ಮೇ ೨೯ರಂದು ಬೆಳಗ್ಗೆ ೧೦ಗಂಟೆಗೆ ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಎಫ್‌ಕೆಸಿಸಿಐ ಶತಮಾನೋತ್ಸವ ಭವನದ ಸರ್‌ಎಂವಿ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಹೋಟೆಲ್ ಉದ್ಯಮ ಎದುರಿಸುತ್ತಿರುವ ಸವಾಲುಗಳು ಅದರಲ್ಲೂ ಮುಖ್ಯವಾಗಿ ಹಾಲು, ಹಾಲಿನ ಉತ್ಪನ್ನಗಳು ಹಾಗು ಇತರ ವಸ್ತುಗಳ ಬೆಲೆ ಏರಿಕೆ, ತೆರಿಗೆ ಬರೆ ಬಗ್ಗೆ ಚರ್ಚೆ ನಡೆಯಲಿದೆ. ಇದರ ಜೊತೆಗೆ ಹೋಟೆಲ್ ಉದ್ಯಮದಲ್ಲಿನ ಇತ್ತೀಚಿನ ಟ್ರೆಂಡ್ ಗಳು, ಸವಾಲುಗಳು-ಅವಕಾಶಗಳ ಬಗ್ಗೆ ಈ ಸಮಾರಂಭದಲ್ಲಿ ಧ್ವನಿ ಎತ್ತಲಾಗುವುದು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ (ಡಾ.) ನಿರ್ಮಲಾನಂದನಾಥ ಸ್ವಾಮೀಜಿ ಅವರ ಪೂಜನೀಯ ಉಪಸ್ಥಿತಿಯಲ್ಲಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ರಾಜ್ಯದ ಮಾಜಿ ಉಪಮುಖ್ಯಮಂತ್ರಿ, ಮಲ್ಲೇಶ್ವರಂ ಕ್ಷೇತ್ರದ ಶಾಸಕ ಶ್ರೀ ಅಶ್ವಥ್ ನಾರಾಯಣ್ ಸಮಾರಂಭದ ಗೌರವ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಹೋಟೆಲುಗಳ ಸಂಘದ ಅಧ್ಯಕ್ಷ ಶ್ರೀ ಜಿ ಕೆ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಎಂಆರ್‌ಜಿ ಗ್ರೂಪ್ ಅಧ್ಯಕ್ಷ ಡಾ. ಪ್ರಕಾಶ್ ಶೆಟ್ಟಿ, ಎಫ್‌ಎಚ್‌ಆರ್‌ಎಐ ಅಧ್ಯಕ್ಷ ಶ್ರೀ ಕೆ ಶ್ಯಾಮರಾಜು, ಕೆ ಎಸ್ ಎಚ್ ಎ ಗೌರವ ಅಧ್ಯಕ್ಷ ಶ್ರೀ ಬಿ ಚಂದ್ರಶೇಖರ ಹೆಬ್ಬಾರ್, ಕೆಎಸ್‌ಎಚ್‌ಎ ಮಾಜಿ ಅಧ್ಯಕ್ಷ ಶ್ರೀ ಸಿ ವಿ ಮಹದೇವಯ್ಯ, ನಂದನ ಪ್ಯಾಲೇಸ್ ಗ್ರೂಪ್ ಸಿಎಂಡಿ ಡಾ. ಆರ್ ರವಿಚಂದರ್, ಕರ್ನಾಟಕ ಸರಕಾರದ ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ಈ ಸಮಾರಂಭದಲ್ಲಿ ಸಾಧಕ ಹೋಟೆಲ್ ಉದ್ಯಮಿಗಳನ್ನು ಆತಿಥ್ಯ ರತ್ನ ಹಾಗು ಉದ್ಯಮ ರತ್ನ ಪ್ರಶಸ್ತಿ ಮೂಲಕ ಗೌರವಿಸಲಾಗುವುದು.

Sri Adichunchanagiri Mahasansthan Math ಇದರ ಜೊತೆಗೆ, ಹೋಟೆಲ್ ಉದ್ಯಮ ಎದುರಿಸುತ್ತಿರುವ ಸವಾಲುಗಳು, ಬೆಲೆ ಹಾಗು ತೆರಿಗೆ ಏರಿಕೆ ಬಿಸಿ, ನುರಿತ ಕಾರ್ಮಿಕರ ಕೊರತೆ, ಹೀಗೆ ನಾನಾ ವಿಷಯಗಳ ಬಗ್ಗೆ ತಜ್ಞರು, ಹಿರಿಯ ಹೋಟೆಲ್ ಉದ್ಯಮಿಗಳು ತಮ್ಮ ಅನುಭವ ಹಂಚಿಕೊAಡು, ಇವುಗಳಿಗೆ ಪರಿಹಾರ ಕಂಡು ಹುಡುಕುವ ನಿಟ್ಟಿನಲ್ಲಿ ಈ ಸಮಾರಂಭದಲ್ಲಿ ಬೆಳಕು ಚೆಲ್ಲಲಾಗುವುದು. ರಾಜ್ಯ-ಹೊರ ರಾಜ್ಯಗಳ ಹಿರಿಯ ಹೋಟೆಲ್ ಉದ್ಯಮಿಗಳು, ನೀತಿ ನಿರೂಪಕರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

CM Siddharamaiah ಕೋವಿಡ್ ನಿಯಂತ್ರಣ ಸೀಎಂ ಸಿದ್ಧರಾಮಯ್ಯ ಉನ್ನತ ಮಟ್ಟದ ಸಭೆ. ಅಧಿಕಾರಿಗಳಿಗೆ ಸೂಚನೆ

0

CM Siddharamaiah ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಾ.26-5-25 ರಂದು ಸಭೆ ನಡೆಸಿ, ನೀಡಿದ ಸೂಚನೆಗಳು..
ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು
ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ
62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ
ಸಂಖ್ಯೆ ಒಂದು ಮಾತ್ರ ಇದೆ.

  • CM Siddharamaiah ಎಸ್‌ಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ.
    ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ
    56 ಪ್ರಕರಣಗಳು ವರದಿಯಾಗಿವೆ.
  • ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
  • ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
  • ಜನರಿಗೆ ಅನುಕೂಲವಾಗುವಂತೆ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು.
  • ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ
    ಹೊರಗಡೆಯಿ೦ದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು
    ಪ್ರಾರಂಭಿಸಬೇಕು.
  • ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ
    ಅನುಸರಿಸಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
    ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು
    ಕಾರ್ಯ ನಿರ್ವಹಿಸಬೇಕು.
    ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ
    ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
  • ಸಾಮಾಜಿಕ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.
    ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ,
    ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು
    ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು
    ಸಜ್ಜುಗೊಳಿಸಿಟ್ಟುಕೊಳ್ಳಬೇಕು.
  • ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್,
    ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.
  • ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ
    ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು
    ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
    ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ
    ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
    ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು
    ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ,
    ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
  • ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ
    ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ,
    ನೆಗಡಿ ಇರುವ ಮಕ್ಕಳನ್ನು ವಾಪಾಸ್‌ ಪೋಷಕರ ಮೂಲಕ ಮನೆಗೆ
    ಕಳುಹಿಸಬೇಕು.
  • ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.

Sri Adichunchanagiri Independent Pre-University College ಆದಿಚುಂಚನಗಿರಿ ಕಾಲೇಜಿನ ತೇಜಸ್.ಕೆಸಿಇಟಿ ಯಲ್ಲಿ‌ ಟಾಪರ್

0

Sri Adichunchanagiri Independent Pre-University College ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎಸ್. ಎನ್. ತೇಜಸ್ ದಾನೆಗೌಡ ಅವರು ಕೆ. ಸಿಇಟಿಯಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಯಲ್ಲಿ 587 ಅಂಕಗಳಿಸಿದ್ದ ತೇಜಸ್ ಅವರು ಕೃಷಿ ವಿಶ್ವವಿದ್ಯಾಲಯ ಪ್ರವೇಶಾತಿ ಕೆಸಿಇಟಿಯಲ್ಲಿ 115ನೇ ರ‍್ಯಾಂಕ್ ಪಡೆದಿದ್ದು, ಎಂಜಿನಿಯರಿಂಗ್ ಕೆಸಿಇಟಿಯ ರ‍್ಯಾಂಕ್ ನಲ್ಲಿ 649ನೇ ಸ್ಥಾನ ಪಡೆದಿದ್ದಾರೆ. ಬಿ ಎನ್ ವೈ ನಲ್ಲಿ 499ನೇ ರ‍್ಯಾಂಕ್ ಪಡೆದಿದ್ದು, ಪಶುವೈದ್ಯಕೀಯದಲ್ಲಿ 936ನೇ ರ‍್ಯಾಂಕ್ ಗಳಿಸಿದ್ದಾರೆ.

Sri Adichunchanagiri Independent Pre-University College ಶಿವಮೊಗ್ಗ ವಿದ್ಯಾನಗರದ ಹೆಚ್. ಬಿ. ನಾಗರಾಜ್ ಹಾಗು ಸಂಧ್ಯಾ ಎಚ್. ಎಂ. ಅವರ ಪುತ್ರ ಎಸ್. ಎನ್. ತೇಜಸ್ ಅವರ ಸಾಧನೆಗೆ ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗುರುರಾಜ್, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Shivamogga Sahyadri College of Commerce and Management ಭರತನಾಟ್ಯ ಪರೀಕ್ಷೆಗಳು ಯಾವ ಗೊಂದಲವಿಲ್ಲದೇ ಯಶಸ್ವಿಯಾಗಿ ಪೂರ್ಣ- ಡಾ.ನಾಗೇಶ್

0

Shivamogga Sahyadri College of Commerce and Management ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯುತ್ತಿರುವ ಭರತನಾಟ್ಯ ವಿದ್ವತ್ ಪೂರ್ವ ಮತ್ತು ವಿದ್ವತ್ ಅಂತಿಮ ಪ್ರಾಯೋಗಿಕ ಪರೀಕ್ಷೆಯ ಕೇಂದ್ರಕ್ಕೆ ಭೇಟಿ ನೀಡಿದ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ನಾಗೇಶ್ ಬೆಟಕೋಟೆ ಇವರು ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳು ನಮ್ಮ ಮಕ್ಕಳು ಎಂಬ ಭಾವನೆ ಪರೀಕ್ಷಕರಿಗೆ ಇದ್ದರೆ ಯಾವ ಗೊಂದಲಗಳಿಗೂ ಅವಕಾಶ ಇರದೆ ಪರೀಕ್ಷೆಗಳು ಯಶಸ್ವಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಡಾ ಮಂಜುನಾಥ್, ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಅವಿನಾಶ್, ಡಾ. ಪ್ರಕಾಶ್ ಮರ್ಗನಹಳ್ಳಿ, ಪರೀಕ್ಷಾ ಸಂಯೋಜಕ ಡಾ. ಗಣೇಶ್ ಆರ್ ಕೆಂಚನಾಲ್. ವಿಶ್ವವಿದ್ಯಾಲಯದಿಂದ ಆಗಮಿಸಿದ ಡಾ. ಭುವನೇಶ್ವರಿ ಸೇರಿದಂತೆ ಡಾ ಕೇಶವಕುಮಾರ್ ಪಿಳೈ, ಡಾ.ಶುಭ್ರತಾ ಹಾಗೂ ರಾಜ್ಯದ ನಾನಾ ಭಾಗಗಳಿಂದ ಪರೀಕ್ಷಕರು ಆಗಮಿಸಿದ್ದರು.

Shivamogga Sahyadri College of Commerce and Management ಹಾಗೂ ಇದೇ ಕಾಲೇಜಿನಲ್ಲಿ ಮೇ 17 ಮತ್ತು 18 ರಂದು ರಾಜ್ಯ ಮಟ್ಟದ ನೃತ್ಯ, ಸಂಗೀತ, ತಾಳವಾದ್ಯ, ಜೂನಿಯರ್ ಹಾಗೂ ಸೀನಿಯರ್ ಪ್ರಾಯೋಗಿಕ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದ್ದವು