Saturday, February 28, 2026
Saturday, February 28, 2026
Home Blog Page 297

H. D. Kumaraswamy ಎರಡು ತಿಂಗಳಲ್ಲಿ‌₹ 10.000 ಕೋಟಿ‌ಗಳನ್ನ ವಿಐಎಸ್ಎಲ್ ಪುನಶ್ಚೇತನಕ್ಕೆ ನೀಡಿಕೆ- ಸಚಿವ‌‌ ಎಚ್.ಡಿ. ಕುಮಾರಸ್ವಾಮಿ

H. D. Kumaraswamy ಕರ್ನಾಟಕದ ರಾಜ್ಯದ ಪ್ರತಿಷ್ಠೆ, ಹೆಮ್ಮೆಯ ಪ್ರತೀಕವಾಗಿದ್ದ ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನ ಎಂದು‌ ಕೇಂದ್ರ ಉಕ್ಕು‌& ಭಾರಿ‌ ಕೈಗಾರಿಕಾ ಮಂತ್ರಿ‌‌ ಕುಮಾರಸ್ವಾಮಿ ಹೇಳಿದ್ದಾರೆ.

H. D. Kumaraswamy ಎರಡು ತಿಂಗಳಲ್ಲಿ ₹8,000-₹10,000 ಕೋಟಿ ಹೂಡಿಕೆ
ಉಕ್ಕು ಕ್ಷೇತ್ರದಲ್ಲಿ ಕರ್ನಾಟಕದ ಗತವೈಭವ ಪುನರುದ್ಧಾರಕ್ಕೆ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ
ಅವರ ಸರಕಾರ ಪಣ ತೊಟ್ಟಿದೆ ಎಂದು ಸಚಿವ ಕುಮಾರಸ್ವಾಮಿ‌ ಹೇಳಿದರು

CEO Hemanth ಅರಿವು ಕೇಂದ್ರಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ- ಎನ್.ಹೇಮಂತ್

0

CEO Hemanth ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಪ್ರೋತ್ಸಾಹಿಸಲು ಆರಂಭಿಸಲಾಗಿರುವ ‘ಅರಿವು’ ಕೇಂದ್ರಗಳು ಉತ್ತಮವಾಗಿ ನಡೆಯುತ್ತಿದ್ದು ಗ್ರಾಮಗಳ ಪ್ರತಿ ನಾಗರೀಕರು ಸಹ ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಇವರ ಸಹಯೋಗದಲ್ಲಿ ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚಿಣ್ಣರ ಚೆಲುವು-ಬೇಸಿಗೆ ಸಡಗರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾ.ಪಂ ವ್ಯಾಪ್ತಿಯ ಅರಿವು ಕೇಂದ್ರಗಳಲ್ಲಿ ನಡೆದ ಚಿಣ್ಣರ ಚೆಲುವು-ಬೇಸಿಗೆ ಸಡಗರ ಶಿಬಿರವು ನಾಲ್ಕು ವಾರಗಳ ಕಾಲ ಅತ್ಯುತ್ತಮವಾಗಿ ನಡೆದಿದ್ದು, ಉತ್ತಮವಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಯಶಸ್ವಿಗೊಳಿಸಿದ ಗ್ರಾ.ಪಂ ಅಧಿಕಾರಿ, ಸಿಬ್ಬಂದಿಗಳು, ತಾ.ಪಂ ಇಓ, ಸಹಾಯಕ ನಿರ್ದೇಶಕರು, ಗ್ರಂಥಾಲಯ ಮೇಲ್ವಿಚಾರಕರಿಗೆ ಧನ್ಯವಾದಗಳು ಎಂದು ಅಭಿನಂದಿಸಿದರು.
ಅರಿವು ಕೇಂದ್ರಗಳಲ್ಲಿ ಅಗತ್ಯವಾಗಿ ಬೇಕಿರುವ ಮೂಲಭೂತ ಸೌಕರ್ಯಗಳ ಕುರಿತು ಗ್ರಂಥಾಲಯ ಮೇಲ್ವಿಚಾರಕರು, ವಿದ್ಯಾರ್ಥಿಗಳು, ಇತರೆ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸವಿವರವಾಗಿ ತಿಳಿಸಿದ್ದು, ಅರಿವು ಕೇಂದ್ರಗಳಲ್ಲಿ ಮಕ್ಕಳಿಗೆ ಅಗತ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವೆಡೆ ಹಾಗೂ ಇವುಗಳ ಅಭಿವೃದ್ಧಿ ಕಡೆ ಗಮನ ಹರಿಸುತ್ತೇವೆ ಎಂದರು.
CEO Hemanth ಅರಿವು ಕೇಂದ್ರ ಕೇವಲ ಮಕ್ಕಳಿಗೆ ಮಾತ್ರವಲ್ಲ, ಗ್ರಾಮಗಳ ಪ್ರತಿ ನಾಗರೀಕರು ದಿನ ಪತ್ರಿಕೆ, ಇತರೆ ಪುಸ್ತಕಗಳನ್ನು ಓದುವ ಮೂಲಕ ಮಾಹಿತಿ ಪಡೆಯಲು ಒಂದು ಉತ್ತಮ ಸ್ಥಳವಾಗಿದೆ. ಓದುವ ಹವ್ಯಾಸ ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದ್ದು ಮಕ್ಕಳು, ನಾಗರೀಕರ ಸಬಲೀಕರಣಕ್ಕೆ ಈ ಓದು ಸಹಕಾರ ನೀಡಲಿದೆ. 80 ವರ್ಷ ಮೀರಿದ ವೃದ್ದರೂ ಅರಿವು ಕೇಂದ್ರಗಳಿಗೆ ಭೇಟಿ ನೀಡಿ, ದಿನಪತ್ರಿಕೆಗಳು, ಇತರೆ ಪುಸ್ತಕಗಳನ್ನು ಓದುತ್ತಿರುವುದನ್ನು ಕಾಣುತ್ತಿದ್ದೇವೆ. ಮಕ್ಕಳ ಜೊತೆ ಪೋಷಕರೂ ಅರಿವು ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದರು
ಅರಿವು ಕೇಂದ್ರಗಳಿಗೆ ಇನ್ನು ಮುಂದೆ ವೇಳಾಪಟ್ಟಿಯನ್ನು ನೀಡಲಾಗುವುದು. ಮಕ್ಕಳಿಗೆ ಪಠ್ಯೇತರ ಹಾಗೂ ವೈವಿಧ್ಯಮಯ ಚಟುವಟಿಕೆಗಳು ಇಷ್ಟವಾಗುತ್ತವೆ. ಈ ನಿಟ್ಟಿನಲ್ಲಿ ವೇಳಾಪಟ್ಟಿ ಸಿದ್ದಪಡಿಸಿ, ಪ್ರತಿದಿನ ವಿಭಿನ್ನ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ಇಂತಹ ಚಟುವಟಿಕೆಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದರು.

Internal reservation ಒಳಮೀಸಲಾತಿ ಸಮೀಕ್ಷೆ ಮೇ 29 ವರೆಗೆ ಮತ್ತು ಆನ್ ಲೈನ್ ಸ್ವಯಂ ಘೋಷಣೆ ಜೂನ್ 1 ವರೆಗೆ ವಿಸ್ತರಣೆ

0

Internal reservation ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸಲು ಹೊಸದಾದ ಸಮೀಕ್ಷೆಯನ್ನು ನಡೆಸಲು ದಿನಾಂಕ: 27-03-2025 ರ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ದಿನಾಂಕ: 05-05-2025 ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದರ ಮೂಲಕ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

Internal reservation ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು ದಿನಾಂಕ:26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – 03 ದಿನಗಳ ಕಾಲ – ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ: 01-06-2025 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Siddaramaiah ಕಿಮೋಥೆರಪಿ ಇಲ್ಲದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಶೀಘ್ರ‌ಈ ಸೌಲಭ್ಯ ಕಲ್ಪಿಸಲಾಗುತ್ತದೆ- ಸಿದ್ಧರಾಮಯ್ಯ

0

Siddaramaiah ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ
ಎಂದು ಸೀಎಂ ಸಿದ್ಧರಾಮಯ್ಯ ಹೇಳಿದ್ದಾರೆ ಮೈಸೂರು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿಯಲ್ಲಿ ಸಿದ್ಧರಾಮಯ್ಯನವರು “ಡೇ ಕೇರ್ ಕಿಮೋಥೇರಪಿ” ಕೇಂದ್ರವನ್ನು ವಿಡಿಯೋ ಸಂವಾದದ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ಕ್ಯಾನ್ಸರ್ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ ದುಬಾರಿಯಾಗಿದೆ.

ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿಲ್ಲದಾಗಿದೆ.
2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಬಾರಿ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದ್ದೇವೆ.

240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ನೆರವು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ.

ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಈ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ.

Siddaramaiah ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದು ಗಮನಿಸಿದ್ದೆ. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು.

ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು. ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ. ನಾನೂ ಕೂಡ 25 ವರ್ಷಗಳ ಹಿಂದೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದೆ. ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂಬ ಭರವಸೆಯಿದೆ. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳಬಾರದು.

ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂಬುದು ನನ್ನ ಸಲಹೆ ಎಂದು‌ಮುಖ್ಯಮಂತ್ರಿಗಳು‌‌ ತಿಳಿಸಿದ್ದಾರೆ

N Gopinath ಹಿಮಾಲಯ ದರ್ಶಿಸುವ,ಪ್ರಕೃತಿ ಸೌಂದರ್ಯ‌ ಅನುಭವಿಸುವ ಅವಕಾಶವೇ ಒಂದು ಅದೃಷ್ಟ-‌ಬಿ.ಗೋಪಿನಾಥ್

0

N Gopinath ದೇವ ಭೂಮಿ ಹಿಮಾಲಯದ ಚಾರಣ ಒಂದು ಅನಿರ್ವಚನೀಯ ಅನುಭವ. ಅದೊಂದು ಅನುಭೂತಿ ಎಂದು ಎನ್. ಗೋಪಿನಾಥ್ ಬಣ್ಣಿಸಿದರು.

ಯುವಜನ ಚಾರಣ ಸಂಸ್ಥೆಯ ತರುಣೋದಯ ಘಟಕ ಆಯೋಜಿಸಿರುವ ಹಿಮಾಚಲ ಪ್ರದೇಶದ ರಮ್ಯ ತಾಣ ‘ರೋಲಿ ಕೋಲಿ’ ಚಾರಣಕ್ಕೆ ತೆರಳುತ್ತಿರುವ ಚಾರಣಿಗರನ್ನು ಬೀಳ್ಕೊಟ್ಟು ಮಾತನಾಡಿದ ಅವರು, ಹಿಮಾಲಯವನ್ನು ದರ್ಶಿಸುವ, ಅಲ್ಲಿಯ ಪ್ರಕೃತಿ ಸೌಂದರ್ಯವನ್ನು ಅನುಭವಿಸುವ ಅವಕಾಶ ಹಾಗೂ ಅದೃಷ್ಟ ತಮಗೆ ಒಲೆದಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಅನುಭವ ಪಡೆಯಿರಿ ಎಂದರು.

ಹಿಮಾಲಯ ಚಾರಣ ಸಾಹಸದ ಕೆಲಸ. ಅದರಲ್ಲಿ ತೊಡಗಿಸಿ ಕೊಳ್ಳಲು ನಮ್ಮ ನಗರದ ಉತ್ಸಾಹಿ ಚಾರಣಿಗರಿಗೆ ಅವಕಾಶ ಮಾಡಿ ಕೊಡುತ್ತಿರುವ ಯೂತ್ ಹಾಸ್ಟೆಲ್ಸ್ ಉತ್ತಮ ಕಾರ್ಯ ಮಾಡುತ್ತಿದೆ ಎಂದ ಅವರು, ಅ.ನಾ.ವಿಜಯೇಂದ್ರ ರವರು ಈ ನಿಟ್ಟಿನಲ್ಲಿ ಭಾರತದಲ್ಲಿಯೇ ಅತೀ ಹೆಚ್ಚು ಸದಸ್ಯರನ್ನು ಚಾರಣಕ್ಕೆ ಕಳುಹಿಸಿ ಕೊಡುತ್ತಿದ್ದಾರೆ ಎಂದರು.

ಪ್ರಾಸ್ಥಾವಿಕವಾಗಿ ಮಾತನಾಡಿದ ಅ.ನ.ವಿಜಯೇಂದ್ರರವರು ತಮ್ಮೆಲ್ಲರ ಅದೃಷ್ಟ, ಯುದ್ಧದ ಕಾರ್ಮೋಡ ಸರಿದು ನಾವು ಹೋಗುವ ಸಮಯಕ್ಕೆ ಯಾವುದೆ ಅಡೆ ತಡೆ ಇಲ್ಲದೆ, ಅವಕಾಶ ದೊರಕಿದೆ. ಈ ಬಾರಿಯ ಚಾರಣದಲ್ಲಿ ಹೊಸಬರು ಬಹಳಷ್ಟು ಸದಸ್ಯರು ಇದ್ದೀರಿ, ಹಿರಿಯ ಸದಸ್ಯರಾದ ವೈದ್ಯನಾಥ್, ಡಾ. ನಾಗಭೂಷಣ್, ವೆಂಕಟೇಶ್ ಮುಂತಾದ ಅನುಭವಿ ಚಾರಣಿಗರು ಜೊತೆಗಿದ್ದಾರೆ. ಯಾವುದೇ ಅಂಜಿಕೆ ಬೇಡ. ಯಶಸ್ವಿಯಾಗಿ ಚಾರಣ ಪೂರೈಸಿ ಬರುತ್ತೀರಿ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಚಾರಣದಲ್ಲಿ ನಾವು ಸಂತೋಷ ಪಡುವುದರೊಂದಿಗೆ ಇತರರೂ ಖುಷಿ ಪಡಲು ಅವಕಾಶ ಮಾಡಿ ಕೊಡಬೇಕು ಎಂದ ಅವರು, ಚಾರಣ ಒಂದು ಸ್ಪರ್ಧೆ ಅಲ್ಲ, ಅದು ಪ್ರಕೃತಿ ಅಧ್ಯಯನ ಎಂದರು.

N Gopinath ಸಂಸ್ಥೆಯ ಜಿಲ್ಲಾ ಛೇರ್ಮನ್ ಎಸ್.ಎಸ್.ವಾಗೇಶ್ ಮಾತನಾಡಿ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಾರಣಿಗರನ್ನು ಕಲಿಸಿಕೊಡುವ ನಿಟ್ಟಿನಲ್ಲಿ ತರುಣೋದಯ ಘಟಕ ಮುಂಚೋಣೆಯಲ್ಲಿದೆ. ಉತ್ಸಾಹಿಗಳು ಸಂಸ್ಥೆಯ ಆಜೀವ ಸದಸ್ಯತ್ವ ಪಡೆದು ಪ್ರತೀ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಚಾರಣಗಳಲ್ಲಿ ಭಾಗವಹಿಸುತ್ತಿರುವುದರಿಂದ ಇಂದು ಭಾರತದಲ್ಲಿಯೇ ಶಿವಮೊಗ್ಗ ಘಟಕ ಅತೀ ಹೆಚ್ಚು ಸದಸ್ಯರನ್ನು ಹಿಮಾಲಯ ಚಾರಣಕ್ಕೆ ಕಳುಹಿಸಿರುವ ದಾಖಲೆ ಮಾಡಿದೆ ಎಂದರು.

ಮಾಜಿ ರಾಜ್ಯ ಉಪಾಧ್ಯಕ್ಷ ಜಿ. ವಿಜಯಕುಮಾರ್ ಮಾತನಾಡಿ, ಪ್ರಕೃತಿಯನ್ನು ಆಸ್ವಾದಿಸಲು ಅದೃಷ್ಟ ಬೇಕು. ಯಾವುದೇ ವಾಹನ ಹೋಗಲಾರದ ಸ್ಥಳಕ್ಕೆ ಚಾರಣಿಗ ಸುಲಭವಾಗಿ ಹೋಗಿ ತಲುಪುತ್ತಾನೆ. ಹಿಮಾಲಯದ ಪ್ರಕೃತಿ ಸವಿ, ಸವಿದವನೆ ಬಲ್ಲ, ಅಂತಹ ಅವಕಾಶವನ್ನು ನಮ್ಮ ತರುಣೋದಯ ಘಟಕ ಹಲವಾರು ವರ್ಷದಿಂದ ಆಯೋಜಿಸುತ್ತಿದೆ ಎಂದರು.

ಆಗಮಿಸಿದ ಎಲ್ಲರನ್ನೂ ರವೀಂದ್ರ ಸ್ವಾಗತಿಸಿದರು, ಕಾರ್ಯದರ್ಶಿ ಸುರೇಶ್ ಕುಮಾರ್ ವಂದಿಸಿದರು, ರಮೇಶ್, ಮಲ್ಲಿಕಾರ್ಜುನ ಕಾನೂರು, ದಿಲೀಪ್ ನಾಡಿಗ್, ರಾಜು, ಮಂಜುನಾಥ್ ಇತರರು ಇದ್ದರು.

Shivamogga City Corporation ಸರ್ಕಾರದ ಪ್ರತಿಕ್ರಿಯೆ ಬಂದ ಕೂಡಲೇ ನಗರಪಾಲಿಕೆ ಚುನಾವಣೆಗೆ ದಿನಾಂಕ ಘೋಷಣೆ- ಜಿ.ಎಸ್ .ಸಂಗ್ರೇಶಿ

0

Shivamogga City Corporation ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್.ಸಂಗ್ರೇಶಿ ತಿಳಿಸಿದರು.
ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ ಮಹಾನಗರಪಾಲಿಕೆ ಚುನಾವಣೆ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಮೊಗ್ಗ ಪಾಲಿಕೆಯಲ್ಲಿ ನಿಕಾಯ (ಬಾಡಿ) ಇಲ್ಲದೇ ಒಂದೂವರೆ ವರ್ಷ ಆಗಿದೆ. ಚುನಾವಣೆ ನಡೆಸಲು ಮೀಸಲಾತಿ ಪಟ್ಟಿ ನೀಡುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ವ್ಯವಹಾರ ಮಾಡಲಾಗಿದೆ. ಸಂಬAಧಿಸಿದ ಮಂತ್ರಿಗಳು, ಮಾನ್ಯ ಮುಖ್ಯಮಂತ್ರಿಗಳಿಗೆ ಸಹ ಕೋರಲಾಗಿದೆ. ಸರ್ಕಾರದಿಂದ ಈ ಕುರಿತು ಸ್ಪಂದನೆ ಬಾರದ ಕಾರಣ ಸುಪ್ರೀಂ ಕೋರ್ಟ್ ಆದೇಶದನ್ವಯ ಉಚ್ಛ ನ್ಯಾಯಾಲಯಕ್ಕೆ ರಿಟ್ ಸಲ್ಲಿಸಿ ಪಾಲಿಕೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ಜೂನ್ ವೇಳೆಗೆ ಉಚ್ಛ ನ್ಯಾಯಾಲಯದಲ್ಲಿ ಈ ರಿಟ್‌ಗೆ ಸಂಬಂಧಿಸಿದಂತೆ ವಿಚಾರಣೆ ನಡೆಯಲಿದೆ. ಚುನಾವಣೆ ಕುರಿತು ಸರ್ಕಾರದಿಂದ ಸ್ಪಂದನೆ ಬಂದ ತಕ್ಷಣ ದಿನಾಂಕ ನಿಗದಿಗೊಳಿಸಲಾಗುವುದು.
ಕಳೆದ ಆಗಸ್ಟ್ ಮಾಹೆಯಲ್ಲಿಯೇ ಚುನಾವಣೆಗೆ ಸಂಬಂಧಿಸಿದಂತೆ ಮತದಾತರರ ಪಟ್ಟಿ ತಯಾರಿಸುವ ವೇಳಾಪಟ್ಟಿ ಹೊರಡಿಸಲಾಗಿತ್ತು. ಕಾರಣಾಂತರದಿAದ ಅದರ ಪ್ರಕಾರ ಅಂತಿಮ ಮತದಾರರ ಪಟ್ಟಿ ಸಿದ್ದವಾಗಿಲ್ಲ. ಕರಡು ಮತದಾರರ ಪಟ್ಟಿ ಮಾತ್ರ ಸಿದ್ದವಾಗಿದೆ.
ಚುನಾವಣೆಗೆ ಸಂಬಂಧಿಸಿದಂತೆಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ವಿಶೇಷವಾಗಿ ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಸಿದ್ದ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ ಅವರು ನ್ಯಾಯ ಮತ್ತು ಮುಕ್ತ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಸಹಕರಿಸಬೇಕೆಂದು ತಿಳಿಸಿದರು.
Shivamogga City Corporation ಮಹಾನಗರಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್ ಮಾತನಾಡಿ, ಆಗಸ್ಟ್ ಮಾಹೆಯಲ್ಲಿ ಮತದಾರರ ಪಟ್ಟಿಗೆ ಸಂಬAಧಿಸಿದ ವೇಳಾಪಟ್ಟಿ ಹೊರಡಿಸಲಾಗಿದ್ದು, ದಿನಾಂಕ: 19-08-2024 ರಿಂದ 24-08-2024 ರವರೆಗೆ ವಾರ್ಡುಗಳ ವಿಂಗಡಣೆ ಅಧಿಸೂಚನೆಯಂತೆ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮತದಾರರನ್ನು ಗುರುತಿಸುವಿಕೆ. 25-08-2024 ರಿಂದ 31-08-2024 ರವರಗೆ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಗುರುತಿಸಿದ ನಂತರ ಫ್ರಂ ಟು ಮ್ಯಾಟ್ರಿಕ್ಸ್ ತಯಾರಿಸಿ ಮುದ್ರಕರಿಗೆ ನೀಡುವುದು. 01-09-2024 ರಿಂದ 04-9-2024 ರವರೆಗೆ ಫ್ರಂ ಟು ಮ್ಯಾಟ್ರಿಕ್ಸ್ ರಂತೆ ಪ್ರಥಮ ಚೆಕ್ ಲಿಸ್ಟ್ ಮುದ್ರಣ. 05-09-2024 ರಿಂದ 10-09-2024 ರವರೆಗೆ ಮುದ್ರಕರಿಂದ ಪ್ರಥಮ ಚೆಕ್‌ಲಿಸ್ಟ್ ಪಡೆದುಕೊಂಡು ವಾರ್ಡ್ವಾರು ಮತ್ತೊಮ್ಮೆ ಪರಿಶೀಲಿಸಿ ಆಗಬೇಕಾಗಿರುವ ಬದಲಾವಣೆಗಳನ್ನು ಮತದಾರರ ಪಟ್ಟಿಯಲ್ಲಿ ಅಳವಡಿಸುವುದು. 17-09-2024 ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸುವುದು. 24-09-2024 ಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನ. 30-09-2024 ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕೊನೆಯ ದಿನ. 06-10-2024 ಕ್ಕೆ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿದ ನಂತರ ಮುದ್ರಕರಿಂದ ಅಗತ್ಯ ಬದಲಾವಣೆಗಳನ್ನು ಮಾಡಿಸಿ ಅಂತಿಮ ಚೆಕ್‌ಲಿಸ್ಟ್ ಪಡೆದುಕೊಂಡು ವಾರ್ಡುವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಲು ಅಂತಿಮ ದಿನಾಂಕ. ದಿ: 09-10-2024 ಅಂತಿಮ ಮತದಾರರ ಪಟ್ಟಿ ಪ್ರಕಟಣೆ.
ಮೇಲ್ಕಂಡ ವೇಳಾ ಪಟ್ಟಿಯಂತೆ ಅಂತಿಮ ಮತದಾರರ ಪಟ್ಟಿಯನ್ನು ಕಾರಣಾಂತರಗಳಿAದ ಪ್ರಕಟಿಸಲಾಗಿಲ್ಲ.
ಪಾಲಿಕೆ ವ್ಯಾಪ್ತಿಯಲ್ಲಿ 35 ವಾರ್ಡುಗಳಿದ್ದು 2011 ರ ಜನಗಣತಿ ಪ್ರಕಾರ 3.22 ಲಕ್ಷ ಜನಸಂಖ್ಯೆ ಇದೆ. ಒಟ್ಟು 288 ಮತಗಟ್ಟೆಗಳಿವೆ. 2024-2025 ರಂತೆ 133479 ಪುರುಷ, 141480 ಮಹಿಳೆ, 17 ಇತರೆ ಸೇರಿದಂತೆ 274976 ಮತದಾರರು ಇದ್ದಾರೆ. ಇದರಲ್ಲಿ 85 ವರ್ಷ ಮೀರಿದ 2583 ಹಾಗೂ ವಿಕಲಚೇತನ 1465 ಮತದಾರರು ಇದ್ದಾರೆ.
ಕರಡು ಮತದಾರರ ಪಟ್ಟಿ ಸಿದ್ದವಾಗಿದೆ. ಚುನಾವಣೆ ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಪಾಲಿಕೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

The Bharat Scouts and Guides Karnataka ಮೇ.27 ರಿಂದ 29 ವರೆಗೆ ಶಿವಮೊಗ್ಗದಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್ ರಾಜ್ಯಮಟ್ಟದ ರ್ಯಾಲಿ

0

The Bharat Scouts and Guides Karnataka ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಸಂಸ್ಥೆ ಹಾಗೂ ಶಿವಮೊಗ್ಗ ಜಿಲ್ಲಾ ಸಂಸ್ಥೆ ಸಹಯೋಗದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕಬ್ಸ್, ಬುಲ್ ಬುಲ್ಸ್, ಸ್ಕೌಟ್ಸ್, ರೋವರ‍್ಸ್, ರೇಂಜರ್ಸ್ ಮುಕ್ತದಳಗಳ ರ‍್ಯಾಲಿಯನ್ನು ನಗರದ ಬಿಎಚ್ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಆವರಣದಲ್ಲಿ ಮೇ 27, 28 ಮತ್ತು 29ರಂದು ಹಮ್ಮಿಕೊಳ್ಳಲಾಗಿದೆ.

ರಾಜ್ಯಮಟ್ಟದ ರ‍್ಯಾಲಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಭಾಗವಹಿಸುವರು. ಮೂರು ದಿನಗಳ ರ‍್ಯಾಲಿಯ ನೇತೃತ್ವವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿಜಿಆರ್ ಸಿಂಧ್ಯಾ ವಹಿಸುವರು. ಜಿಲ್ಲಾ ಸಂಸ್ಥೆಯ ಅಧ್ಯಕ್ಷ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ನೇರವೇರಲಿದೆ.

The Bharat Scouts and Guides Karnataka ಮೂರು ದಿನಗಳ ರ‍್ಯಾಲಿಯಲ್ಲಿ ಆಕರ್ಷಕ ಚಟುವಟಿಕೆಗಳಾದ ಚಾರಣ, ಪರಿಸರ ಪ್ರಜ್ಞೆ, ಸಾಹಸ ಹಾಗೂ ವಿನೋದ ಚಟುವಟಿಕೆಗಳು, ಅಡುಗೆ ತಯಾರಿಸುವುದು, ಕರಕುಶಲತೆ, ವಸ್ತು ಪ್ರದರ್ಶನ, ಪಥ ಸಂಚಲನ, ಗ್ರಾಮೀಣ ಕ್ರೀಡೆಗಳು, ಯುವಧ್ವನಿ, ಜಾನಪದ ನೃತ್ಯ ಪ್ರದರ್ಶನ, ರಸಪ್ರಶ್ನೆ, ಧ್ವಜಸ್ತಂಭ, ರಚನೆ, ಚಿತ್ರಕಲೆ, ದೇಶಭಕ್ತಿ ಗೀತೆ, ಭಾವೈಕ್ಯತೆ ಗೀತೆಗಳು, ಮುಕ್ತದಳಗಳ ಯಶೋಗಾಥೆ ನೆರವೇರಲಿದೆ ಎಂದು ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ತಿಳಿಸಿದ್ದಾರೆ.

S. N. Channabasappa ಮಹಾನಗರ ಪಾಲಿಕೆಗೆ ಚುನಾವಣೆ ಅಗತ್ಯವಿದೆ.ಶಾಸಕ ಚನ್ನಬಸಪ್ಪ ಮನವಿ

0

S. N. Channabasappa ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಆಯುಕ್ತರನ್ನು ಭೇಟಿ ಮಾಡಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದ್ಯದ ಪರಿಸ್ಥಿತಿ ಕುರಿತು
ಶಾಸಕ ಚನ್ನಬಸಪ್ಪ ಚರ್ಚೆ ನಡೆಸಿದರು ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾಯಿತ ಸಮಿತಿ ಅವಧಿ 2023ರ ನವೆಂಬರ್ ನಲ್ಲಿ ಪೂರ್ಣಗೊಂಡಿದೆ ಒಂದೂವರೆ ವರ್ಷದಿಂದ ಚುನಾಯಿತ ಸಮಿತಿ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ನಾಗರೀಕರ ಸಮಸ್ಯೆಗಳಿಗೆ ಪರಿಹಾರ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಹಾಗೂ ಜನರ ಆಶಯಗಳನ್ನು ಬಿಂಬಿಸುವ ನಾಯಕತ್ವದ ಅಗತ್ಯ ಇದೆ ಇದಕ್ಕಾಗಿ ಪ್ರತಿ ವಾರ್ಡ್ ಗೆ S. N. Channabasappa ಪಾಲಿಕೆಯ ಚುನಾಯಿತ ಸದಸ್ಯರ ಅಗತ್ಯ ಇದೆ ಅದಕ್ಕಾಗಿ ಚುನಾವಣೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಶಾಸಕ ಚನ್ನಬಸಪ್ಪ ಮನವಿ ಮಾಡಿದರು ಎಂಎಲ್ಸಿ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಹಾಗೂ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು
ಶಾಸಕ ಚನ್ನಬಸಪ್ಪಗೆ ಸಾತ್ ನೀಡಿದರು.

Drinking water supply ಮೇ 25 & 26 . ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ವ್ಯತ್ಯಯ

0

Drinking water supply ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದ್ದು, ಮೇ 25 ಮತ್ತು 26 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

JCI Shimoga Sahyadri ಹೊಸ ಆವಿಷ್ಕಾರಗಳೊಂದಿಗೆ ನಾವೂ ಸಹ ಬದಲಾಗಬೇಕು- ಜೆಸಿಐ ಗಣೇಶ್

0

JCI Shimoga Sahyadri ಪ್ರತಿಯೊಂದು ಕ್ಷೇತ್ರಗಳಲ್ಲೂ ನಾವು ಎಷ್ಟೇ ಪರಿಣಿತರಾದರು ಸಹ ಬದಲಾದ ಕಾಲಮಾನದಲ್ಲಿ ಹೊಸ ಹೊಸ ಆವಿಷ್ಕಾರಗಳೊಂದಿಗೆ ನಾವು ಸಹ ಬದಲಾಗಬೇಕು ಆ ನಿಟ್ಟಿನಲ್ಲಿ ಹೊಸ ಹೊಸ ತರಬೇತಿಗಳು ಅತಿ ಮುಖ್ಯ ಎಂದು ಜೆ ಸಿ ಐ ಶಿವಮೊಗ್ಗ ಸಹ್ಯಾದ್ರಿ ಘಟಕದ ಅಧ್ಯಕ್ಷರಾದ ಜೆಸಿ ಗಣೇಶ್ ಅವರು ಅಬಿಮತ ವ್ಯಕ್ತಪಡಿಸಿದರು ಅವರು ಇಂದು ಬೆಳಿಗ್ಗೆ ನಗರದ ರಾಜೇಂದ್ರ ನಗರದಲ್ಲಿ ಇರುವ ರೋಟರಿ ಸಭಾಂಗಣದಲ್ಲಿ ಸಹ್ಯಾದ್ರಿ ಪ್ರೌಢಶಾಲೆ ಹಾಗೂ ರೋಟರಿ ಪ್ರೌಢಶಾಲೆಯ ಶಿಕ್ಷಕರುಗಳಿಗಾಗಿ ಹಮ್ಮಿಕೊಳ್ಳಲಾದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು ರಾಷ್ಟ್ರೀಯ ತರಬೇತಿ ದಿನದ ಅಂಗವಾಗಿ ಇಂದು ಪ್ರಪಂಚಾದ್ಯಂತ ಎಲ್ಲಾ ಜೆಸಿಐ ಘಟಕಗಳ ವತಿಯಿಂದ ವಿವಿಧ ಸಮುದಾಯ ಶಾಲೆ, ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಅವರಿಗೆ ಅವಶ್ಯಕತೆ ಇರುವ ಪರಿಣಾಮಕಾರಿ ತರಬೇತಿ ಶಿವರಗಳನ್ನು ನಡೆಸಲಾಗುತ್ತಿದೆ ಇಂದು ನಮ್ಮ ಘಟಕಗಳಿಂದ ಈ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಇದರಿಂದ ಶಿಕ್ಷಕರ ಜ್ಞಾನ ಇನ್ನಷ್ಟು ವೃದ್ಧಿಯಾಗುತ್ತದೆ ಜೆಸಿಐ ವತಿಯಿಂದ ನಿರಂತರವಾಗಿ ಹಲವಾರು ಮಾನವೀಯ ಸೇವೆಗಳನ್ನು ಮಾಡುವುದರ ಜೊತೆಗೆ ತರಬೇತಿಯನ್ನು ಮುಖ್ಯವಾಗಿ ಗುರಿಯನ್ನಾಗಿರಿಸಿಕೊಂಡು ಪ್ರತಿಯೊಂದು ಹಂತದಲ್ಲಿ ನೀಡುತ್ತಾ ಬರುತ್ತಿದ್ದೇವೆ ಹಾಗೆ ಬರುವ ದಿನಗಳಲ್ಲಿ ಶಿಕ್ಷಕರು ಸಹ ನಮ್ಮ ಜೆ ಸಿ ಐ ಸಂಸ್ಥೆಗೆ ಸೇರುವುದರ ಮುಖಾಂತರ ಉತ್ತಮ ತರಬೇತುರರಾಗಿ ಹೊರಹೊಮ್ಮುವುದರ ಜೊತೆಗೆ ಮಕ್ಕಳಿಗೆ ಒಳ್ಳೆಯ ಕೌಶಲ್ಯಗಳನ್ನು ಹಾಗೂ ವಿಷಯಗಳನ್ನು ತಿಳಿಸುವುದರ ಮುಖಾಂತರ ಮಕ್ಕಳು ಪರಿಪೂರ್ಣರಾಗುತ್ತಾರೆ ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ರೋಟರಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ನಿವೃತ್ತ ಕಾರ್ಮಿಕ ಅಧಿಕಾರಿಗಳಾದ. ಎಸ್ ಸಿ ರಾಮಚಂದ್ರ ಅವರು ಮಾತನಾಡುತ್ತಾ ಜೆ ಸಿ ಐ.ಸಂಸ್ಥೆ ಸಂಸ್ಕಾರದ ಜೊತೆಗೆ ವ್ಯಕ್ತಿತ್ವ ವಿಕಸನ ಹಾಗೂ ಪರಿಣಾಮಕಾರಿ ಭಾಷಣದ ಕಲೆ ವಿದ್ಯಾರ್ಥಿಗಳಿಗೆ ಗೋಲ್ ಸೆಟ್ಟಿಂಗ್ ಹಾಗೂ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸ್ತಾ ಬಂದಿದ್ದು ಇಂದಿಗೂ ಸಹ ಪ್ರಚಲಿತವಾಗಿದೆ ಎಂದು ನುಡಿದರು ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗೌರ್ನರಾದ ಜಿ ವಿಜಯಕುಮಾರ್ ಮಾತನಾಡುತ್ತಾ ಜೆಸಿಐ ನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳಿರಬಹುದು JCI Shimoga Sahyadri ಶಿಕ್ಷಕರಿರಬಹುದು ಹಾಗೂ ಯಾವುದೇ ವ್ಯಕ್ತಿ ಆಗಿರಬಹುದು ಸಮಾಜಕ್ಕೆ ಒಂದು ಆಸ್ತಿಯಾಗುತ್ತಾರೆ ಅವರಲ್ಲಿ ಸೇವಾ ಮನೋಭಾವನೆ ಹಾಗೂ ಸಮಾಜದ ಓರೆ ಕೋರೆಗಳನ್ನು ತಿದ್ದುವ ದರ ಜೊತೆಗೆ ಒಳ್ಳೆಯ ಆಕಾಂಕ್ಷೆ ವೃದ್ಧಿಯಾಗುತ್ತದೆ ಜೆಸಿಐ ನಲ್ಲಿ ಮಕ್ಕಳಿಂದ ಹಿರಿಯ ವಯಸ್ಸಿನವರಿಗೂ ಸಹ ಬೇರೆ ಬೇರೆ ಹಂತದಲ್ಲಿ ತರಬೇತಿ ನೀಡಲಾಗುವುದು ಇದರಿಂದ ಅವರಲ್ಲಿ ಆತ್ಮವಿಶ್ವಾಸ ವೃದ್ಧಿಯಾಗಿ ಎಂತಹ ಕಷ್ಟಗಳನ್ನು ಸಹ ನಿಭಾಯಿಸುವ ಧೈರ್ಯ ಬರುತ್ತದೆ ಎಂದು ನುಡಿದರು ಜೆ ಸಿಐ ನ ವಲಯ ತರಬೇತುದಾರರಾದ ನಿವೇದಿತಾ ವಿಕಾಸ್ ಅವರು ಮಾತನಾಡುತ್ತಾ ತರಬೇತಿಯಿಂದ ನಾವು ಪರಿಪೂರ್ಣರಾದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಣದಲ್ಲಿ ಹೊಸ ಹೊಸ ಬದಲಾವಣೆಗಳನ್ನು ತರಬಹುದು ಆದ್ದರಿಂದ ಪರಿಪೂರ್ಣ ಶಿಕ್ಷಕರಾಗಲು ಮಕ್ಕಳಲ್ಲಿ ಮಕ್ಕಳಾಗಿ. ದೊಡ್ಡವರಲ್ಲಿ ದೊಡ್ಡವರಾಗಿ ಕಲಿಯಬೇಕು ಕಲಿಕೆ ನಿರಂತರ ಹಾಗೆ ಕಲಿಕೆಯಲ್ಲಿ ಆಸಕ್ತಿಯು ಕೂಡ ತುಂಬಾ ಅವಶ್ಯಕ ಈ ನಿಟ್ಟಿನಲ್ಲಿ ಜೆಸಿಐ ಸಂಸ್ಥೆ ಮಾತ್ರ ಪ್ರಪಂಚಾದ್ಯಂತ ತರಬೇತಿ ನೀಡುವುದರಲ್ಲಿ ಮುಂಚೂಣಿಯಲ್ಲಿದೆ ಎಂದು ನೋಡಿದರು ಈ ತರಬೇತಿ ಕಾರ್ಯಗಾರದಲ್ಲಿ ಪ್ರಾಂಶುಪಾಲರಾದ ಸೂರ್ಯನಾರಾಯಣ್. ಸಹ್ಯಾದ್ರಿ ಪ್ರೌಢಶಾಲೆಯ ಆಡಳಿತ ಅಧಿಕಾರಿ ಟಿಪಿ ನಾಗರಾಜ್. ರೋಟರಿ ಚಾರಿಟೇಬಲ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಕೆ ಬಿ ರವಿಶಂಕರ್ ಜೆ ಸಿ ಐ ಸಂಸ್ಥೆಯ ಸುಪ್ರಿಯಾ ವಿಜಯಕುಮಾರ್ ರಕ್ಷಾ. ಮಂಜುನಾಥ್ ರಾವ್ ಕದಂ. ರಕ್ಷಿತಾ ಜಿ ಕೆ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು