Sunday, March 1, 2026
Sunday, March 1, 2026
Home Blog Page 299

DIET Shivamogga ಡಿಇಐ,ಇಡಿ/ಟಿಸಿಹೆಚ್ ಕೋರ್ಸ್ ಗಳಿಗೆ ಡಯಟ್ ನಿಂದ ಪ್ರವೇಶಾತಿಗೆ ಅರ್ಜಿ‌ ಆಹ್ವಾನ

0

DIET Shivamogga ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) 2025-26ನೇ ಸಾಲಿನ ಡಿ ಇಐ.ಇಡಿ/ ಟಿ.ಸಿ.ಹೆಚ್ ಕೋರ್ಸ್ಗಳಿಗೆ ಆರ್ಹರಿಂದ ಅರ್ಜಿ ಆಹ್ವಾನಿಸಿದೆ.
ಈ ಕೋರ್ಸ್ಗಳು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಅರ್ಹತೆಯನ್ನು ಪಡೆಯಲು ಉತ್ತಮ ಸರ್ಟಿಫಿಕೆಟ್ ಕೋರ್ಸ್ಗಳಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಬಿ.ಹೆಚ್.ರಸ್ತೆ, ಕರ್ನಾಟಕ ಸಂಘದ ಎದುರು, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂ. 02 ರೊಳಗಾಗಿ ಸಲ್ಲಿಸುವಂತೆ ಸಂಸ್ಥೆಯ ಉಪನಿರ್ದೇಶಕರು (ಅಭಿವೃದ್ಧಿ) ಹಾಗೂ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
DIET Shivamogga ಹೆಚ್ಚಿನ ಮಾಹಿತಿಗಾಗಿ ನೋಡೆಲ್ ಅಧಿಕಾರಿ ಶ್ರೀಮತಿ ಸುವರ್ಣ ಸಿ. ಕುರಂದವಾಡ – ದೂ.ಸಂ.: 8884881816 /08182-270597/228127 ಇವರನ್ನು ಸಂಪರ್ಕಿಸುವುದು.

Nidhi Apke Nikhat ಮೇ 27. ಶಿವಮೊಗ್ಗ ,ದಾವಣಗೆರೆ ಜಿಲ್ಲೆಗಳಲ್ಲಿ “ನಿಧಿ‌ ಆಪ್ ಕೆ ನಿಕಟ್”

0

Nidhi Apke Nikhat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮೇ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರದ ಆರ್.ಟಿ.ಓ.ರಸ್ತೆಯಲ್ಲಿರುವ ನಿವೃತ್ತ ನೌಕರರ ಸಂಘದ ಕಚೇರಿಯ ಮೊದಲ ಮಹಡಿಯ ಮೆ/ಎಸ್ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಹಾಗೂ ದಾವಣಗೆರೆ ಕೆ ಎಸ್ ಎಸ್ ಪಿ ಯು ಕಾಲೇಜು, #1382/5/6, 2ನೇ ಕ್ರಾಸ್ ಸರಸ್ವತಿ ನಗರದಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
Nidhi Apke Nikhat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

Excise Department Shimoga ಅಬಕಾರಿ ಇಲಾಖೆಯಿಂದ ಮುಟ್ಟುಗೋಲಾದ ವಾಹನಗಳ ಬಹಿರಂಗ ಹರಾಜು

0

Excise Department Shimoga ಅಬಕಾರಿ ನಿರೀಕ್ಷಕರು ಶಿವಮೊಗ್ಗ ವಲಯ-2ರ ವ್ಯಾಪ್ತಿಯಲ್ಲಿ ದಾಖಲಾದ ಅಬಕಾರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾಹನಗಳನ್ನು ಮೇ.26 ರ ಬೆಳಿಗ್ಗೆ 11 ಗಂಟೆಗೆ ನಗರದ ಅಬಕಾರಿ ಭವನದ ಆವರಣದಲ್ಲಿ ಬಹಿರಂಗ ಹರಾಜು/ಟೆಂಡರ್ ಮೂಲಕ ವಿಲೇವಾರಿ ಮಾಡಲಾಗುವುದು.
ಬಜಾಜ್ ಪಲ್ಸರ್ ಕೆಎ-14-ಇಸಿ-7965, ಟಿವಿಎಸ್ ಅಪಾಚಿ ಆರ್‌ಟಿಆರ್-160 ಕೆಎ-14-ಇಜಿ-5037, ಟಿವಿಎಸ್ ಎಕ್ಸ್ಎಲ್ ಸೂಪರ್ ಹೆವಿ ಡ್ಯೂಟಿ ಕೆಎ-14-ಇಡಿ-5883, ಡಿಯೋ ಕೆಎ-14-ಇಬಿ-2413, ಹೀರೋ ಸ್ಪೆ÷್ಲಂಡರ್ ಪ್ಲಸ್ ಕೆಎ-14-ಇಯು-1458, ಬಜಾಜ್ ಪಲ್ಸರ್ ಕೆಎ-14-ಇಎಕ್ಸ್-3876 ವಾಹನಗಳನ್ನು ಹರಾಜಿಗೆ ಇಡಲಾಗಿದ್ದು, ಷರತ್ತುಗಳು ಅನ್ವಯಿಸುತ್ತದೆ.
Excise Department Shimoga ವಾಹನಗಳನ್ನು ನೋಡಬಯಸುವ ಸಾರ್ವಜನಿಕರಿಗೆ ಕಛೇರಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವೆಗೂ ಅವಕಾಶ ನೀಡಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ಆಪ್ ಎಕ್ಸೆöÊಜ್ ತಿಳಿಸಿದ್ದಾರೆ.

M. Govinda Rao ಸಾಕ್ಷರತೆ, ಕೃಷಿ & ತಲಾ ಆದಾಯದ ಮೇಲೆ ಸೂಚ್ಯಂಕದ ನಿರ್ಧಾರ- ಪ್ರೊ.ಎಂ.ಗೋವಿಂದರಾವ್

0

M. Govinda Rao ಜಿಲ್ಲೆಯಲ್ಲಿನ ಸಾಕ್ಷರತಾ ಪ್ರಮಾಣ, ಕೃಷಿ ಚಟುವಟಿಕೆ ಮತ್ತು ತಲಾ ಆದಾಯದ ಮೇಲೆ ಅಭಿವೃದ್ಧಿ ಸೂಚ್ಯಂಕ ನಿರ್ಧಾರಗೊಳಿಸಿ, ಹಿಂದುಳಿದ ಪ್ರದೇಶವನ್ನು ಗುರುತಿಸಿ, ಅಲ್ಲಿನ ಸರ್ವಾಂಗೀಣ ವಿಕಾಸಕ್ಕಾಗಿ ಹಾಗೂ ಮುಂದುವರೆದ ಜಿಲ್ಲೆಗಳಿಗೆ ಸಮನಾದ ಎಲ್ಲಾ ರೀತಿಯ ಪ್ರಾತಿನಿದ್ಯ ಕಲ್ಪಿಸುವ ನಿಟ್ಟನಲ್ಲಿ ಸೂಕ್ತ ಹಾಗೂ ಸಕಾಲಿಕ ಕ್ರಮಗಳಿಗಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷ ಹಾಗೂ ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದರಾವ್ಅವರು ಹೇಳಿದರು.
ಅವರು ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ನಜೀರ್ಸಾಬ್ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣ ಸಮಿತಿ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 2002ರಲ್ಲಿ ಡಾ. ಡಿ.ಎಂ.ನಂಜುಂಡಪ್ಪ ವರದಿಯನ್ವಯ ರಾಜ್ಯದ ಹಿಂದುಳಿದ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಶಿಫಾರಸ್ಸು ಮಾಡಿದ ಪ್ರಮಾಣದ ಮೊತ್ತ ಸಕಾಲದಲ್ಲಿ ಬಿಡುಗಡೆಯಾಗಲಿಲ್ಲ. ಅಲ್ಲದೇ ಬಿಡುಗಡೆಯಾದ ಮೊತ್ತದಲ್ಲಿ ನಿರೀಕ್ಷಿತ ಪ್ರಮಾಣದ ಅಭಿವೃದ್ಧಿ ಕಾರ್ಯಗಳು ನಡೆಯದಿರುವುದೂ ಕೂಡ ಅಭಿವೃದ್ಧಿ ಸೂಚ್ಯಂಕದಲ್ಲಿ ಏರಿಕೆ ಕಾಣುವುದು ಸಾಧ್ಯವಾಗಿಲ್ಲ ಎಂದವರು ನುಡಿದರು.
ಪ್ರಸ್ತುತ ಸರ್ಕಾರವು 2024ರ ಜನವರಿ ಮಾಹೆಯಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಐಎಉ ಜನರ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲಸೌಲಭ್ಯಗಳು, ಸಾಮಾಜಿಕ ಸೌಲಭ್ಯಗಳು, ಹಣಕಾಸಿನ ಮತ್ತು ತಾಂತ್ರಿಕ ಮೂಲಸೌಕರ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ, ಸೂಚ್ಯಂಕವನ್ನು ನಿಗಧಿಪಡಿಸಲಿದೆ ಎಂದವರು ನುಡಿದರು.
M. Govinda Rao ಇದರೊಂದಿಗೆ ಸ್ಥಳೀಯ ಜನರಲ್ಲಿನ ವಾಸ್ತವ ವಿಷಯಗಳ ಕುರಿತು ವಿಷಯಾಧಾರಿತ ಚರ್ಚೆ ನಡೆಸಿ,ಅವರ ಅನುಭವದ ಮಾತುಗಳನ್ನಾಲಿಸಿ, ಮಾಡಬಹುದಾದ ಅಭಿವೃಧ್ಧಿ ಚಟುವಟಿಕೆಗಳ ಬಗ್ಗೆಯೂ ಮಾಹಿತಿ ಪಡೆದುಕೊಳ್ಳಲಾಗುವುದು ಎಂದ ಅವರು, ಈಗಾಗಲೇ ಸಮಿತಿಯು ಗುರುತಿಸಿರುವ ವಿಷಯಗಳಲ್ಲದೇ ಇನ್ನೂ ಅನೇಕ ವಿಷಯಗಳನ್ನು ಈ ನಿಯೋಗವು ಗಮನಿಸಲಿದೆ ಎಂದರು.
ಪ್ರೊ.ಡಿ.ಎಂ. ನಂಜುಂಡಪ್ಪ ಅವರು ವರದಿ ಸಲ್ಲಿಸಿದ್ದ ಅವಧಿಯ ಅಂದಿನ ಮತ್ತು ಇಂದಿನ ಸ್ಥಿತಿಗತಿಗಳ ಕುರಿತೂ ಸಮಿತಿ ವಿಶೇಷ ಗಮನಹರಿಸಲಿದೆ ಅಲ್ಲದೇ ಆಗಿರಬಹುದಾದ ಲಾಭ-ನಷ್ಟಗಳ ಬಗ್ಗೆಯೂ ಬೆಳಕು ಚೆಲ್ಲಲಿದೆ ಎಂದ ಅವರು, ಈಗಾಗಲೇ ರಾಜ್ಯದಲ್ಲಿ ವಲಯಾಧಾರಿತವಾಗಿ ಅನೇಕ ನಿಗಮ ಮಂಡಳಿಗಳನ್ನು ರಚಿಸಿ, ಕೋಟ್ಯಂತರ ರೂಪಾಯಿಗಳ ಅನುದಾನ ಬಿಡುಗಡೆಗೊಳಿಸಲಾಗಿದೆ. ಇದರಿಂದ ಆಗಿರಬಹುದಾದ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆಯೂ ಗಮನಹರಿಸಲಿದೆ. ಇದರೊಂದಿಗೆ ದೇಶದ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯದ ಸ್ಥಾನಮಾನ, ವಿವಿಧ ಕ್ಷೇತ್ರಗಳ ಅಭಿವೃದ್ಧಿ ಮುಂತಾದವುಗಳ ಮಾಹಿತಿಯನ್ನು ಕಲೆಹಾಕಲಾಗುವುದು ಎಂದರು.
ಪ್ರಸ್ತುತ ಸಂದರ್ಭದಲ್ಲಿ ಕರ್ನಾಟಕವು ದೇಶದ ಪ್ರಗತಿ ಸೂಚ್ಯಂಕದಲ್ಲಿ ತೆಲಂಗಾಣದ ನಂತರದ ಸ್ಥಾನದಲ್ಲಿದೆ. ಬೆಳೆಯುತ್ತಿರುವ ದೇಶದ ಬೇರೆ-ಬೇರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಶೇ.67ರಷ್ಟು ಪ್ರಗತಿಯಲ್ಲಿದೆ. ಕೃಷಿಯಲ್ಲಿ ಶೇ.10ರಷ್ಟು ಮತ್ತು ಕೈಗಾರಿಕೆಯಲ್ಲಿ ಶೇ.20.05ರಷ್ಟು ಅಭಿವೃದ್ಧಿ ಹೊಂದಿದೆ. ಎಂದ ಅವರು ಶಿವಮೊಗ್ಗ ಜಿಲ್ಲೆ ತಲಾ ಆದಾಯ ಗಳಿಕೆಯಲ್ಲಿ ತಕ್ಕಮಟ್ಟಿನ ಪ್ರಗತಿಯಲ್ಲಿದೆ. ಆದರೆ, ಆರೋಗ್ಯದ ಕಾಳಜಿ ವಹಿಸುವಲ್ಲಿ ಹಾಗೂ ಶಿಕ್ಷಣ ಕ್ಷೇತ್ರದ ವಿಕಾಸದಲ್ಲಿ ನಿರೀಕ್ಷಿತ ಪ್ರಗತಿ ಆಗಿರುವುದಿಲ್ಲ. ಅಲ್ಲದೇ ಸುಧಾರಣೆಗೊಳ್ಳಬೇಕಾದ ಅಗತ್ಯವಿದೆ ಎಂದರು.

D. K. Shivakumar ನಗರ ಪ್ರದೇಶ ವಾಸಿಗಳಿಗೆ ಆಸ್ತಿ & ಸ್ವತ್ತಿನ ಖಾತೆಗಳನ್ನ ಸರಿಪಡಿಸಿಉವ ಏಳನೆ ಗ್ಯಾರಂಟಿ ನೀಡಲು ಬದ್ಧರಾಗಿದ್ದೇವೆ- ಡಿಸಿಎಂ ಶಿವಕುಮಾರ್

0

D. K. Shivakumar ನಮ್ಮ ಮೇಲೆ ವಿಶ್ವಾಸ ಹಾಗೂ ನಂಬಿಕೆ ಇಟ್ಟು ರಾಜ್ಯದ ಜನತೆ 136 ಸೀಟು ಗೆಲ್ಲಿಸಿ, ಅಧಿಕಾರ ನೀಡಿದ್ದಿರಿ. 5 ಗ್ಯಾರಂಟಿಗಳನ್ನು ಈಗಾಗಲೇ ಜಾರಿ ಮಾಡಿದ್ದೇವೆ. 6ನೇಯದಾಗಿ ಭೂ ಗ್ಯಾರಂಟಿಯನ್ನು ಜಾರಿಗೊಳಿಸಿ ಬಡ ಜನರಿಗೆ ಅವರ ಸ್ವತ್ತಿನ ಹಕ್ಕುಪತ್ರಗಳನ್ನು ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಮಂಗಳವಾರ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ‘ಪ್ರಗತಿಯತ್ತ ಕರ್ನಾಟಕ-ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎರಡು ವರ್ಷ ಸಂಭ್ರಮ ಆಚರಣೆಗೆ ಈ ಕಾರ್ಯಕ್ರಮ ಆಯೋಜಿಸಿಲ್ಲ. ಬದಲಿಗೆ ರಾಜ್ಯದ ಜನತೆ ಋಣ ತೀರಿಸಲು ಬಂದಿದ್ದೇವೆ. ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿ ಇರುವರೆಗೂ 5 ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ. 6ನೇ ಗ್ಯಾರಂಟಿಯಾಗಿ ಆಸ್ತಿ, ಪಟ್ಟ ಇಲ್ಲದೇ, ಬಹುಕಾಲದಿಂದ ವಾಸವಿದ್ದ ಗ್ರಾಮೀಣ ಭಾಗದ ಬಡ ಜನರಿಗೆ ಅವರ ಹಕ್ಕುಪತ್ರಗಳನ್ನು ನೀಡುವ ಕಾರ್ಯ ಮಾಡಿದ್ದೇವೆ. ಮುಂದಿನಗಳಲ್ಲಿ ನಗರ ಪ್ರದೇಶದಲ್ಲಿ ವಾಸವಿರುವರಿಗೂ ಅವರ ಆಸ್ತಿ ಹಾಗೂ ಸ್ವತ್ತಿನ ಖಾತೆಗಳನ್ನು ಸರಿಪಡಿಸಿ ಸ್ವತ್ತನ್ನು ನೀಡುವ 7ನೇ ಗ್ಯಾರಂಟಿ ನೀಡಲು ಬದ್ದವಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ನಾವು ಅಧಿಕಾರ ಬಂದ ಮೇಲೆ ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಯೋಜನೆ ರೂಪಿಸಿದ್ದೇವೆ. ಭ್ರಷ್ಟಾಚಾರಕ್ಕೆ ಬೇಡಿ ಹಾಕಿದ್ದೇವೆ. ಆಡಳಿತದಲ್ಲಿ ಸುಧಾರಣೆ ತಂದಿದ್ದೇವೆ. ಇಂದಿರಾ ಗಾಂಧಿಯವರು ಈ ಜಿಲ್ಲೆಗೆ ಆಗಮಿಸಿ ವಿಜಯನಗರ ಸ್ಟೀಲ್ ಆರಂಭಿಸಿದರು. ಸೋನಿಯಾ ಗಾಂಧಿ ವಿದ್ಯುತ್ ಉತ್ಪಾದನೆ ಕಂಪನಿ ತೆರೆದು ಜಿಲ್ಲೆಗೆ ರೂ.10 ಸಾವಿರ ಕೋಟಿ ನೀಡಿದರು. ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಜ್ಯದಲ್ಲಿ ರಾಹುಲ್ ಗಾಂಧಿಯವರು ಪ್ರವಾಸ ಮಾಡಿದ ಎಲ್ಲ ಸ್ಥಳಗಳಲ್ಲೂ ಕಾಂಗ್ರೇಸ್ ಪಕ್ಷ ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಕಾಂಗ್ರೇಸ್ ಪಕ್ಷದ ಸಂಸದರು ಜಯಗಳಿಸಿದ್ದಾರೆ. ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ರೂ.5000 ವಿಶೇಷ ಅನುದಾನ ನೀಡುತ್ತಿದೆ. ವಿರೋಧ ಪಕ್ಷಗಳು ಆರೋಗ್ಯಕರ ಟೀಕೆ ಟಿಪ್ಪಣಿಗಳನ್ನು ಮಾಡಿದರೆ ಒಳ್ಳೆಯದು. ಟೀಕೆಗಳು ಸಾಯುತ್ತವೆ ಆದರೆ ನಾವು ಮಾಡಿದ ಕೆಲಸಗಳು ಉಳಿಯುತ್ತವೆ. ಇದಕ್ಕೆ ಗ್ಯಾರಂಟಿ ಯೋಜನೆಗಳೇ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
D. K. Shivakumar ತುಂಗಭದ್ರಾ ನದಿ ಭಾಗದಲ್ಲಿನ ಜನರ ನೀರಿನ ಬಣವೆ ತೀರಿಸಿ, ನೀರಾವರಿ ಯೋಜನೆಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ತುಂಗಭದ್ರಾ ಅಣೆಕಟ್ಟೆಗೆ ಸಮನಾಂತರವಾಗಿ ನವಿಲೆ ಬಳಿ ಅಣೆಕಟ್ಟು ನಿರ್ಮಿಸಿ, 24 ಟಿ.ಎಂ.ಸಿ ನೀರನ್ನು ರಾಜ್ಯಕ್ಕೆ ಉಳಿಸಿಕೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಆದರೆ ಇದಕ್ಕೆ ಆಂದ್ರ ಮತ್ತು ತೆಲಂಗಾಣ ಸರ್ಕಾರಗಳು ಅನುಮತಿ ನೀಡಿಲ್ಲ. ತುಂಗಭದ್ರಾ ಮಂಡಳಿಯಲ್ಲಿ ಯೋಜನೆ ಪ್ರಸ್ತಾವ ಇರಿಸಿಸಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಒತ್ತು ನೀಡಿದ್ದು, ಗ್ಲೋಬಲ್ ಇನ್ವೆಸ್ಟರ್ ಮೀಟ್‌ನಲ್ಲಿ ರೂ.10,000 ಕೋಟಿ ಬಂಡವಾಳ ಹೂಡಲು ಉದ್ದಿಮೆದಾರರು ಮುಂದೆ ಬಂದಿದ್ದಾರೆ. ಉದ್ಯೋಗ ಸೃಜನೆ ಆದ್ಯತೆ ನೀಡಿದ್ದೇವೆ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ‘ಗ್ರಾಮೀಣ ಫಥ’ ಎನ್ನುವ ಯೋಜನೆ ರೂಪಿಸಲಾಗಿದೆ. ಇದೇ ರೀತಿಯಲ್ಲಿ ಪ್ರವಾಸೋದ್ಯಮ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಜನರಿಗೆ ಒಳಿತಾಗುವ ಅಭಿವೃದ್ದಿ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ನುಡಿದಂತೆ ನಡೆದು ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಹಕ್ಕುಪತ್ರ ನೀಡಲು ಶ್ರಮಿಸಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಎಲ್ಲಾ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

Krishna Byre Gowda ಇದುವರೆಗೆ ರಾಜ್ಯದ 5 ಕೋಟಿ ಜನರಿಗೆ ₹90,000 ಕೋಟಿ ಹಣವನ್ನ ಗ್ಯಾರಂಟಿ ಯೋಜನೆಗಳ ಮೂಲಕ ನೀಡಲಾಗಿದೆ- ಸಚಿವ ಕೃಷ್ಣಭೈರೇಗೌಡ

0

Krishna Byre Gowda ಲಂಬಾಣಿ, ಬೋವಿ, ಗೊಲ್ಲ, ಕಾವಲಿ, ಸೊಲಿಗ, ಕಾಡು ಕುರುಬ, ನಾಯಕ ಹಾಗೂ ಅಲೆಮಾರಿಗಳು ವಾಸಿಸುವ ತಾಂಡ, ಹಾಡಿ, ಹಟ್ಟಿ, ಬಜೆರೆ, ಕ್ಯಾಂಪ್ ಸೇರಿದಂತೆ ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ಸರ್ಕಾರದಿಂದ ಶಾಶ್ವತ ಪರಿಹಾರ ದೊರಕಿಸಲಾಗಿದೆ. 1,11,111 ಕುಟುಂಬಗಳಿಗೆ ಮನೆ ಹಕ್ಕುಪತ್ರ ನೀಡಲಾಗುತ್ತಿದ್ದು, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಮಂಗಳವಾರ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ ಹಾಗೂ ವಿಜಯನಗರ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ‘ಪ್ರಗತಿಯತ್ತ ಕರ್ನಾಟಕ-ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.
ದಾಖಲೆಗಳು ಇಲ್ಲದೆ ಇರುವ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನು ಪರಿವರ್ತಿಸಿ, ಅಲ್ಲಿ ವಾಸಿಸುವ ಕುಟುಂಬಗಳಿಗೆ ಮನೆಗಳಿಗೆ ಹಕ್ಕುಪತ್ರ ನೀಡಿ, ಊರಿಗೊಂದು ಗೌರವ, ಮನೆಗೊಂದು ವಿಳಾಸ, ಬದುಕಿಗೊಂದು ನೆಮ್ಮದಿಯನ್ನು ರಾಜ್ಯ ಸರ್ಕಾರ ನೀಡಿದೆ. ಶತಮಾನಗಳಿಂದ ಜನವಸತಿ ಇದ್ದರೂ, ಗ್ರಾಮ ಎನ್ನುವ ಮಾನ್ಯತೆ ಇಲ್ಲದೆ ಕಾರಣ ಈ ಊರುಗಳಿಗೆ ಸೌಕರ್ಯ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕುಟುಂಬಗಳು ಆಶ್ರಯ ಯೋಜನೆಯ ಲಾಭವನ್ನು ಸಹ ಪಡೆಯಲಾಗುತ್ತಿರಲಿಲ್ಲ. ಮನೆ ಆಸ್ತಿ ವರ್ಗಾವಣೆಯು ಸಾಧ್ಯವಿರಲಿಲ್ಲ. ಈ ಸಮಸ್ಯೆಗಳಿಗೆ ಸರ್ಕಾರ ಅಂತ್ಯ ಹಾಡಿದೆ. ಸರ್ಕಾರ ಬರಿ ಹಕ್ಕು ಪತ್ರಗಳನ್ನು ಮಾತ್ರ ನೀಡುತ್ತಿಲ್ಲ. ನೋಂದಣಿ ಕಚೇರಿಯಲ್ಲಿ ಸ್ವತಃ ತಹಶೀಲ್ದಾರರು ಮನೆ ಆಸ್ತಿಯನ್ನು ವಾರಸುದಾರರಿಗೆ ನೋಂದಣಿ ಮಾಡಿಕೊಡುತ್ತಾರೆ. ಗ್ರಾಮ ಪಂಚಾಯಿತಿಯಿAದ ಫಾರಂ-11ಇ ಸೇರಿದಂತೆ ಖಾತೆ ದಾಖಲೆಗಳನ್ನು ಸಹ ನೀಡಲಾಗುತ್ತದೆ. ಅನಿಶ್ಚಿತತೆಯ ಬದುಕಿಗೆ ನಿಶ್ಚಿತತೆಯ ಆಧಾರ ಕಲ್ಪಿಸಿ ಇಂದು ಜನರಿಗೆ ಸಮರ್ಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಸಂದಿದೆ. ಜನರು ನೀಡಿದ ಅಧಿಕಾರವನ್ನು ಜನರ ಸೇವೆಗಾಗಿಯೇ ಮುಡಿಪು ಇಟ್ಟಿದ್ದೇವೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಇದುವರೆಗೂ ರೂ.90 ಸಾವಿರ ಕೋಟಿಯಷ್ಟು ಹಣವನ್ನು, ರಾಜ್ಯದ 5 ಕೋಟಿ ಜನರಿಗೆ ನೇರವಾಗಿ ತಲುಪಿಸುವ ಮೂಲಕ ಜನರಿಗೆ ಶಕ್ತಿ ತುಂಬಲಾಗಿದೆ. ಕಂದಾಯ ಇಲಾಖೆಯ ದಶಕಗಳ ಸಮಸ್ಯೆಗಳಿಗೆ ಪರಿಹಾರ ನೀಡಿದ್ದೇವೆ. ಜನರನ್ನು ಕಚೇರಿಗೆ ಅಲೆದಾಡಿಸದೇ ಮನೆ ಬಾಗಿಲಿಗೆ ತೆರಳಿ ಸೇವೆ ನೀಡುತ್ತಿದ್ದೇವೆ. ತಂತ್ರಜ್ಞಾನ ಹಾಗೂ ಹೆಚ್ಚಿನ ಸಿಬ್ಬಂದಿ ಬಳಿಸಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದೇವೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಎಂದರು.
ರೈತರ ಜಮೀನು ಆರ್.ಟಿ.ಸಿಗಳಿಗೆ ಆಧಾರ ಜೋಡಣೆ ಕಾರ್ಯ ಮಾಡಲಾಗುತ್ತಿದೆ. ರಾಜ್ಯಾದ್ಯಾಂತ ಮೃತರ ಹೆಸರನಲ್ಲಿರುವ 52 ಲಕ್ಷ ಆಸ್ತಿಗಳನ್ನು ವಾರಸುದಾರರಿಗೆ ವರ್ಗಾಯಿಸಲಾಗುತ್ತಿದೆ. ಕೇವಲ 6 ತಿಂಗಳಲ್ಲಿ 30 ಸಾವಿರ ಆಸ್ತಿಗಳ ದರಕಾಸ್ತು ಮಾಡಿ ದಾಖಲೆ ನಿರ್ಮಿಸಲಾಗಿದೆ. ಈಗಾಗಲೇ 1.6 ಲಕ್ಷ ಪೋಡಿ ಮಾಡಲಾಗಿದ್ದು, ಮುಂಬರುವ ವರ್ಷದಲ್ಲಿ 2 ಲಕ್ಷ ಪೋಡಿ ಮಾಡುವ ಗುರಿ ಹೊಂದಲಾಗಿದೆ. ಆಸ್ತಿ ಹದ್ದುಬಸ್ತು ಕೋರಿಕೆ ಸಲ್ಲಿಕೆಯಾಗುವ ಅರ್ಜಿಗಳನ್ನು ಕೇವಲ 6 ದಿನದಲ್ಲಿ ಪರಿಹರಿಸಲಾಗುತ್ತದೆ. ಆಸ್ತಿ ವಿವಾದ ಸಂಬAಧಿಸಿದAತೆ ತಹಶೀಲ್ದಾರ್ ಹಂತದಲ್ಲಿದ್ದ 10,747 ಇದ್ದ ಬಾಕಿ ಕೇಸುಗಳ ಇಂದು 600ಕ್ಕೆ ಇಳಿದಿದೆ. ಭೂಸುರಕ್ಷಾ ಕಾರ್ಯಕ್ರಮದ ಮೂಲಕ ಸರ್ಕಾರಿ ಆಸ್ತಿ ರಕ್ಷಣೆ ಕ್ರಮ ಕೈಗೊಂಡಿದ್ದು, ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಈ ಸಂದರ್ಭದಲ್ಲಿ ಹೇಳಿದರು.
Krishna Byre Gowda ಬರಗಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾಲದಲ್ಲಿ ನೆರವು ನೀಡಿದೆ ತೊಂದರೆ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಕೇಂದ್ರ ಸರ್ಕಾರದಿಂದ ರೂ.3450 ಕೋಟಿ ಪರಿಹಾರ ಪಡೆದು, ರಾಜ್ಯ ರೈತರಿಗೆ ನೀಡಲಾಗಿದೆ. ಕಾಯಕವೇ ಕೈಲಾಸ ಎಂಬತೆ, ಜನರಿಗೆ ನೆಮ್ಮದಿ ಬದುಕು ನೀಡುವುದೇ ನಮ್ಮ ಸರ್ಕಾರ ಧ್ಯೇಯವಾಗಿದೆ. ಕಂದಾಯ ಇಲಾಖೆ ಸೇವೆಗಳಲ್ಲಿ ಸುಧಾರಣೆ ತಂದು ಭೂ ಗ್ಯಾರೆಂಟಿ ನೀಡುವುದು ಸರ್ಕಾರ ಅಂತಿಮ ಗುರಿಯಾಗಿದೆ. ಇದರಲ್ಲಿ ರಾಜ್ಯದ ಎಲ್ಲ ಕಂದಾಯ ಇಲಾಖೆ ಅಧಿಕಾರಿಗಳ ಶ್ರಮವಿದೆ. ಜನರು ನೀಡಿದ ಅಧಿಕಾರದಿಂದ ಸಾಧನೆಯ ಸಮರ್ಪಣೆ ಇಂದು ಸಾಧ್ಯವಾಗಿದೆ. ಬರುವ ವರ್ಷದಲ್ಲಿ ಇನ್ನಷ್ಟು ಸೇವೆ ಮಾಡಲು ಪ್ರತಿಜ್ಞೆ ಮಾಡುತ್ತಿದ್ದೇವೆ ಎಂದು ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದರು.
ಕಂದಾಯ ಗ್ರಾಮ ಘೋಷಿಸುವಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪ್ರೇರಣೆಯಾಗಿದ್ದನ್ನು ಸಚಿವ ಕೃಷ್ಣ ಭೈರೇಗೌಡ ಸ್ಮರಿಸಿದರು. 2015ರಲ್ಲಿ ರಾಹುಲ್ ಗಾಂಧಿ ಹಾವೇರಿಗೆ ಭೇಟಿ ನೀಡಿದ್ದಾಗ ತಾಂಡಾಗಳ ಜನರ ಕಷ್ಟ ಆಲಿಸಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಭರವಸೆ ನೀಡಿದ್ದರು. ಇದೇ ರೀತಿ 1990 ರಲ್ಲಿ ಅಂದು ರಾಜ್ಯದ ಕಂದಾಯ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರು ಸಹ ಈ ಯೋಜನೆಗೆ ಹಸ್ತಿಬಾರ ಹಾಕಿದ್ದರು. ಈ ಅಂಶಗಳನ್ನ ಮನದಲ್ಲಿ ಇಟ್ಟುಕೊಂಡು ರಾಜ್ಯ ಸರ್ಕಾರ ಇಂದು ದಾಖಲೆ ಇಲ್ಲದ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

Rahul Gandhi ಕಂದಾಯ ಗ್ರಾಮಗಳ ರಚನೆ.ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ,ಆರನೇ ಗ್ಯಾರಂಟಿ- ರಾಹುಲ್ ಗಾಂಧಿ

0

Rahul Gandhi ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಸಮಾವೇಶ ಉದ್ಘಾಟಿಸಿ ಇದೇ ವೇಳೆ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ನಾವು ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಜನತೆಗೆ ನೀಡಿದ್ದ ಎಲ್ಲ ಪಂಚ ಗ್ಯಾರಂಟಿ ಯೋಜನೆಯ ಭರವಸೆಗಳನ್ನು ಈಡೇರಿಸಿದ್ದೇವೆ. ಪಂಚ ಗ್ಯಾರಂಟಿ ಯೋಜನೆಯಡಿ ನಾವು ನೀಡುತ್ತಿರುವ ಹಣ ಜನರ ಶಿಕ್ಷಣ, ಆರೋಗ್ಯ ಮುಂತಾದವುಗಳಿಗೆ ಸದ್ಬಳಕೆಯಾಗುತ್ತಿದೆ. ಬಡವರು, ಹಿಂದುಳಿದವರು, ಬುಡಕಟ್ಟು ಸಮುದಾಯದವರಿಗೆ ನೀಡುತ್ತಿರುವ ನಮ್ಮ ಸರ್ಕಾರದ ಹಣ ನೇರ ಖಾತೆ ಸೇರುತ್ತದೆ. ಅದೇ ಹಣ ಮಾರುಕಟ್ಟೆಯಲ್ಲಿ ಉತ್ಪಾದನೆ ಹೆಚ್ಚಿಸುತ್ತದೆ. ಸಾಮಾನ್ಯ ಜನರಿಗೆ ಕೊಂಡುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ. ಇದರಿಂದ ಪ್ರತಿ ಗ್ರಾಮದಲ್ಲೂ ಹಣದ ವಹಿವಾಟು ಹೆಚ್ಚಳವಾಗುತ್ತಿದ್ದು, ಸರ್ಕಾರದ ಆರ್ಥಿಕ ಸ್ಥಿತಿ ಸುಧಾರಣೆ ಆಗುತ್ತಿದೆ.
ವಿಧಾನಸಭೆ ಚುನಾವಣೆ ವೇಳೆಯಲ್ಲಿ ನಾನು ರಾಜ್ಯಕ್ಕೆ ಬಂದAತಹ ಸಂದರ್ಭದಲ್ಲಿ, ಇಲ್ಲಿನ ಹಟ್ಟಿ, ತಾಂಡಾ ಮುಂತಾದ ಜನವಸತಿ ಪ್ರದೇಶಗಳಲ್ಲಿನ ಲಕ್ಷಾಂತರ ಕುಟುಂಬಗಳು ಯಾವುದೇ ದಾಖಲೆಗಳಿಲ್ಲದೆ, ಭದ್ರತೆ ಇಲ್ಲದೆ ಬದುಕುತ್ತಿದ್ದಾರೆ ಎಂಬ ಮಾಹಿತಿ ಪಡೆದುಕೊಂಡಿದ್ದೆ. ಆಗಲೇ ನಾವು ಚರ್ಚಿಸಿ, ಅಂತಹ ಬಡ ಕುಟುಂಬಗಳು ವಾಸಿಸುವ ಮನೆಗಳಿಗೆ ಹಕ್ಕುಪತ್ರ ನೀಡಿ, ಅವರಿಗೆ ನೆಮ್ಮದಿ ಕಲ್ಪಿಸಲು ನಿರ್ಧರಿಸಿದ್ದೆವು. ಅದರಂತೆ ಈಗ ನಾವು 6 ನೇ ಗ್ಯಾರಂಟಿಯಾಗಿ ಕಂದಾಯ ಗ್ರಾಮಗಳನ್ನು ರಚಿಸಿ, ರಾಜ್ಯದ 1 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡಿ, ಬದುಕಿಗೆ ಭದ್ರತೆ ನೀಡಿದ್ದೇವೆ. ರಾಜ್ಯದ ಜನವಸತಿ ಪ್ರದೇಶಗಳಲ್ಲಿ ದಾಖಲೆಗಳಿಲ್ಲದೇ ವಾಸಿಸುತ್ತಿರುವ ಆಸ್ತಿಯ ಹಕ್ಕುಪತ್ರ ಕೊಟ್ಟು, ಅವರು ನೆಮ್ಮದಿಯಿಂದ ಬದುಕು ನಡೆಸಬೇಕು ಎಂಬುದು ನಮ್ಮ ಉದ್ದೇಶವಾಗಿದೆ.
ರಾಜ್ಯದಲ್ಲಿ ಎರಡು ಸಾವಿರ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುತ್ತಿದ್ದೇವೆ. ತಂತ್ರಜ್ಞಾನವನ್ನು ಬಳಸಿಕೊಂಡು ಬಡಕುಟುಂಬಗಳ ಜನರ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ನೀಡುತ್ತಿದ್ದೇವೆ. ಇದರಿಂದ ಜನರು ಶಾಶ್ವತ ನೆಮ್ಮದಿ ಕಾಣಲು ಸಾಧ್ಯ. ಬಡಕುಟುಂಬಗಳಿಗೆ ಡಿಜಿಟಲೀಕರಣಗೊಳಿಸಿದ ಆಸ್ತಿ ದಾಖಲೆ ಹಕ್ಕುಪತ್ರಗಳನ್ನು ನೀಡುವ ಮೂಲಕ ಎಲ್ಲಾ ದಾಖಲೆಗಳನ್ನು ನಿಖರವಾಗಿ ನೀಡುವುದಾಗಿದೆ. ರಾಜ್ಯದಲ್ಲಿ ಬಾಕಿಯಿರುವ ಇನ್ನೂ 50 ಸಾವಿರ ಕುಟುಂಬಗಳಿಗೆ ಬರುವ 06 ತಿಂಗಳಿನಲ್ಲಿ ಹಕ್ಕುಪತ್ರಗಳನ್ನು ನೀಡುತ್ತೇವೆ. ಯಾವುದೇ ಗ್ರಾಮ, ಕುಟುಂಬಗಳು ಆಸ್ತಿ ದಾಖಲೆಗಳಿಲ್ಲದೇ ಇರಬಾರದು ಎನ್ನುವುದು ನಮ್ಮ ಉದ್ದೇಶವಾಗಿದೆ. ರಾಜ್ಯದಲ್ಲಿ ರಚಿಸಲಾಗಿರುವ ಗ್ಯಾರಂಟಿ ಅನುಷ್ಠಾನ ಸಮಿತಿಯವರು ಇಂತಹ ಕುಟುಂಬಗಳನ್ನು ಗುರುತಿಸಿ, ಅವರಿಗೆ ದಾಖಲೆ ನೀಡುವ ಮೂಲಕ ಇಡೀ ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯವಾಗಲಿದೆ.
Rahul Gandhi ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ನಮ್ಮ ಪಕ್ಷದ ಸರ್ಕಾರ ಅಧಿಕಾರಕ್ಕೆ ಬರುವಾಗ ಏನೇನು ಭರವಸೆಗಳನ್ನು ನೀಡಿದ್ದೆವೋ, ಅವೆಲ್ಲವುಗಳನ್ನು ಈಡೇರಿಸಿ, ಜನರಿಗೆ ಸವಲತ್ತುಗಳನ್ನು ಕೊಟ್ಟಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರ ಅತ್ಯುತ್ತಮವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಪರಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಪಡೆಯುತ್ತಿರುವ ಬಗ್ಗೆ ಪ್ರಸ್ತಾಪಿಸಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಮೀಸಲಾತಿ ವರ್ಗೀಕರಣದ ಸಮೀಕ್ಷೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇದನ್ನು ಹೆಚ್ಚು ನಿಖರವಾಗಿ ನಡೆಸಲು ಅಗತ್ಯ ಕ್ರಮ ಕೈಗೊಂಡು ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.
ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಘಟನೆಯಲ್ಲಿ ಕೇಂದ್ರ ಸರ್ಕಾರದ ರಕ್ಷಣಾ ವೈಫಲ್ಯವೇ ಕಾರಣವಾಗಿದೆ. ಘಟನೆ ನಡೆದ ಸ್ಥಳದಲ್ಲಿ ಯಾವುದೇ ತರದ ಭದ್ರತೆ ಇರಲಿಲ್ಲ. ದೇಶದ ದೃಷ್ಟಿಯಿಂದ ಕೇಂದ್ರ ಸರ್ಕಾರ ಕೈಗೊಂಡ ಎಲ್ಲ ನಿರ್ಧಾರಗಳಿಗೆ ಬೆಂಬಲ ನೀಡಿ, ಒಗ್ಗಟ್ಟು ಪ್ರದರ್ಶಿಸಿದ್ದೇವೆ. ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ಕುಮ್ಮುಕ್ಕು ನೀಡಿ ಭಾರತದಲ್ಲಿ ಉಗ್ರ ಕೃತ್ಯಗಳನ್ನು ನಡೆಸುತ್ತಿದೆ. ಈ ಸಂಗತಿಯನ್ನು ಜಗತ್ತಿನ ಮುಂದೆ ತೆರೆದಿಡಲು ಭಾರತ ಸರ್ಕಾರ ಕಳುಹಿಸುತ್ತಿರುವ ಸರ್ವಪಕ್ಷ ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರು ಭಾಗಿಯಾಗುವರು ಎಂದರು.

International Booker Prize 2025 Winner Banu Mushtaq ಲೇಖಕಿ ಬಾನು ಮುಷ್ತಾಕ್ ಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ.ಅಭಿನಂದನೆ ಸುರಿಮಳೆ

0

International Booker Prize 2025 Winner Banu Mushtaq ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಅಂತರಾಷ್ಟ್ರೀಯ ಪ್ರತಿಷ್ಟಿತ ಬೂಕರ್ ಪ್ರಶಸ್ತಿ ಪಡೆದ ಕತೆಗಾರ್ತಿ, ಪತ್ರಕರ್ತೆ ಬಾನು ಮುಸ್ತಾಕ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್‌ರವರು, ಇದು ಕನ್ನಡದ ಹೆಮ್ಮೆ. ಇದು ಕನ್ನಡ, ಪ್ರತೀ ಕನ್ನಡಿಗ ಮತ್ತು ಇಡೀ ಕರ್ನಾಟಕ ಸಂಭ್ರಮಿಸುವ ಹೊತ್ತು. ಮುಸ್ತಾಕ್‌ರವರು ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿದ್ದಾರೆ. ಲಂಕೇಶ್ ಪತ್ರಿಕೆ ಮೂಲಕ ಪತ್ರಕರ್ತೆಯಾಗಿಯೂ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಕನ್ನಡದ ಹಿರಿಮೆಯ ಬಾವುಟವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ಗೌರವ ತಂದುಕೊಟ್ಟಿದ್ದಾರೆ ಎಂದಿದ್ದಾರೆ.
International Booker Prize 2025 Winner Banu Mushtaq ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಇದೇ ಅನುವಾದಿತ ಕೃತಿಗೆ `ಪೆನ್ ಟ್ರಾನ್ಸ್ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು ಎಂದು ಸ್ಮರಿಸಿ, ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಬಾನು ಮುಸ್ಥಾಕ್‌ರವರ ಕೃತಿಯನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿರವರನ್ನೂ ಅಭಿನಂದಿಸಿದ್ದಾರೆ.

Shimoga News ನೀರು,ಗಾಳಿ ಬೆಂಕಿಯೊಂದಿಗೆ ಸರಸ ಬೇಡ. ತರಬೇತಿದಾರರ ಮಾರ್ಗದರ್ಶನದಲ್ಲಿಚಾರಣ ಮಾಡಿ- ಎಸ್.ಎಸ್.ವಾಗೇಶ್

0

Shimoga News ನೀರನ್ನು ಗೌರವಿಸಿ, ಭಯ ಬೇಡ ಪ್ರಕೃತಿದತ್ತ ಕೊಡುಗೆಗಳನ್ನು ನಾವೆಲ್ಲರೂ ಪೂಜಿಸಬೇಕು ಎಂದು ಶರಾವತಿ ಹಿನ್ನಿರ ಸಮೀಪ ಇರುವ ಹಕ್ಲು ಹೆರಿಟೇಜ್ ಹೋಂಗೆ ಪ್ರವಾಸ ಹೊರಟ ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕ ಆಯೋಜಿಸಿದ ನೀರಿನಲ್ಲಿ ಕ್ರೀಡೆಗೆ ಹೊರಟ ಸದಸ್ಯರಿಗೆ ಬೀಳ್ಕೋಡುತ್ತ ಛೇರ್ಮನ್ ಎಸ್.ಎಸ್.ವಾಗೇಶ್ ಮಾತನಾಡುತ್ತಿದ್ದರು.
ನೀರು, ಗಾಳಿ, ಬೆಂಕಿ ಯೊಂದಿಗೆ ಸರಸ ಬೇಡ, ಪ್ರಕೃತಿ ವಿರುದ್ಧ ಯಾರು ಹೋಗಬಾರದು, ಅಲ್ಲಿ ಅನುಭವ ಪಡೆದ ತರಬೇತುದಾರರು ಇದ್ದಾರೆ ಅವರು ಹೇಳಿದಂತೆ ಎಲ್ಲರೂ ಚಾಚುತ್ತಪ್ಪದೆ ನಡೆದು ಕೊಳ್ಳಬೇಕು ಎಂದರು.
Shimoga News ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡುತ್ತ ತರುಣೋದಯ ಘಟಕ ಸದಸ್ಯರ ಭಾವನೆಗೆ ತಕ್ಕಂತೆ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಯಾಗಿ ನಡೆಸಿ ಕೊಡಲಾಗುತ್ತದೆ. ಮಳೆಗಾಲ ಪ್ರಾರಂಭ ವಾಗುತ್ತಿದೆ. ಎಲ್ಲರೂ ತಮ್ಮ ಶಕ್ತಾನುಸಾರ ಸೂಕ್ತ ಸ್ಥಳಗಳಲ್ಲಿ ಸಸಿ ನೆಟ್ಟು ಅದರ ಪೋಷಣೆಯನ್ನು ಮಾಡುವ ದೃಡಸಂಕಲ್ಪ ಮಾಡಿ, ಪ್ರಕೃತಿಗೆ ಅಲ್ಪಕೊಡುಗೆ ನೀಡಬೇಕಾಗಿ ಕೋರಿದರು.
ಕಾರ್ಯದರ್ಶಿ ಸುರೇಶ್ ಕುಮಾರ್ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು, ಮಲ್ಲಿಕಾರ್ಜುನ ಕಾನೂರ್ ವಂದಿಸಿದರು. ಡಾ.ಶ್ರೀಧರ್, ಭದ್ರಾವತಿ ಸುರೇಶ್, ಬಸವಪ್ಪ, ಶಾಂತರಾಜ್ ಮುಂತಾದವರು ಇದ್ದರು.

DAP Fertilizer ಡಿಎಪಿ ರಸಗೊಬ್ಬರಕ್ಕೆ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಲು ಕೃಷಿ‌ ಇಲಾಖೆ ಪ್ರಕಟಣೆ

0

DAP Fertilizer ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರೆವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

DAP Fertilizer ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ. ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಆಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಛವಾಗಿ ಬಳಸುತ್ತಿರುವ ಈ ರಸಗೊಬ್ಬರಗಳ ಅನುಪಾತವು 5.08:2.89:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಆಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26. 22:32:16, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದೆ.