Sunday, March 1, 2026
Sunday, March 1, 2026
Home Blog Page 300

Ayanur Manjunath ಶಿವಮೊಗ್ಗ ಆತಿಥ್ಯಕ್ಕೆ ಹೆಸರಾಗಿದೆ.ಕ್ರೀಡಾಕೂಟದಲ್ಲಿ ಪಾಲ್ಗೊಂಡವರೆಲ್ಲರೂ ಸದಾ ನೆನಪಲ್ಲಿರುವಂತೆ ಆಗಿದೆ- ಆಯನೂರು‌‌ ಮಂಜುನಾಥ್

0

Ayanur Manjunath ಮಲೆನಾಡು ರಾಜ್ಯದಲ್ಲಿಯೇ ಆತಿಥ್ಯಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕ್ರೀಡಾಕೂಟಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿರುವ ನೌಕರ ಕ್ರೀಡಾಪಟುಗಳು ಶಿವಮೊಗ್ಗದಲ್ಲಿ ಕಳೆದ ಅಲ್ಪ ಸಮಯ, ಇಲ್ಲಿನ ಆತಿಥ್ಯವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಜಿ ಸಂಸದ ಆಯನೂರು ಮಂಜುನಾಥ್‌ಅವರು ಹೇಳಿದರು.
ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಹಲವು ವೈಶಿಷ್ಟ್ಯಗಳ ತವರಾಗಿರುವ ಶಿವಮೊಗ್ಗ ಜಿಲ್ಲೆಗೆ ದೇಶದಲ್ಲಿಯೇ ವಿಶಿಷ್ಟಸ್ಥಾನವಿದೆ. ಇಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ಸ್ಪರ್ಧಿಗಳು ರಾಷ್ಟ್ರಮಟ್ಟದಲ್ಲಿಯೂ ಸ್ಥಾನ ಪಡೆದು, ರಾಜ್ಯಕ್ಕೆ ಕೀರ್ತಿ ತರುವಂತೆ ಆಶಿಸಿದ ಅವರು, ರಾಜ್ಯದ ಯಾವುದೇ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ-ಸಿಬ್ಬಂಧಿಗಳನ್ನು ಗೌರವಿಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್‌ಅವರು ಮಾತನಾಡಿ, ನೌಕರರು ತಮ್ಮ ಜವಾಬ್ದಾರಿಯರಿತು ಪ್ರಾಮಾಣಿಕವಾಗಿ ನಿರ್ವಹಿಸುವ ಕಾರ್ಯದಿಂದ ಸರ್ಕಾರದ ಗೌರವ ಹೆಚ್ಚಲಿದೆ. ಸರ್ಕಾರದ ಬೆನ್ನೆಲುಬಾಗಿರುವ ನೌಕರರಿಂದಾಗಿಯೇ ಸರ್ಕಾರದ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ವದ ಕಾರ್ಯವೂ ನಡೆಯಲಿದೆ ಎಂದರು.
Ayanur Manjunath ನೌಕರರು ತಮ್ಮ ದೈನಂದಿನ ಕೆಲಸಗಳ ಒತ್ತಡದ ಮದ್ಯೆ ಒಂದಷ್ಟು ಸಮಯ ಸಂತೋಷದಿಂದ ಲವಲವಿಕೆಯಿಂದಿರಲು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯವಾಗಿವೆ. ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಹಿಂದೆ ಪ್ರತಿ ಮೂರು ನಾಲ್ಕು ವರ್ಷಗಳಿಗೊಮ್ಮೆ ನಡೆಸಲಾಗುತ್ತಿದ್ದ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಕಳೆದ ಕೆಲವು ವರ್ಷಗಳಿಂದ ಪ್ರತಿವರ್ಷ ನಿರಂತರವಾಗಿ ವ್ಯವಸ್ಥಿತವಾಗಿ ನಡೆಸಿಕೊಂಡು ಬರಲಾಗುತ್ತಿದೆ. ರಾಜ್ಯಮಟ್ಟದ ಕ್ರೀಡೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಳುಗಳಿಗೆ ಏಕರೀತಿಯ ಟ್ರಾಕ್‌ಶೂಟನ್ನು ಒದಗಿಸಲಾಗುವುದು ಎಂದರು.
ಪ್ರತಿವರ್ಷಕ್ಕಿಂತ ಈ ಭಾರೀಯ ಅದರಲ್ಲೂ ಶಿವಮೊಗ್ಗದಲ್ಲಿ ಆಯೋಜಿಸಲಾಗಿರುವ ಕ್ರೀಡಾಕೂಟ ವಿಶಿಷ್ಟವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರಚನಾತ್ಮಕವಾಗಿ ಕ್ರೀಡಾಕೂಟವನ್ನು ಆಯೋಜಿಸಲು ವಿಶೇಷ ಗಮನಹರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕೆ.ಇ.ಕಾಂತೇಶ್‌, ಯೋಗೀಶ್‌, ಜಗದೀಶ್‌, ಗೋಪಿನಾಥ್‌, ಗುರುಮೂರ್ತಿ, ಆರ್.ಮೋಹನ್‌ಕುಮಾರ್‌, ರೇಖ್ಯಾನಾಯ್ಕ್‌ಸೇರಿದಂತೆ ಸರ್ಕಾರಿ ನೌಕರರ ಸಂಘದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಕೇಂದ್ರ ಸಂಘದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿಪತ್ರ, ಸ್ಮರಣಿಕೆ ಹಾಗೂ ಟ್ರಾಲಿಬ್ಯಾಗ್‌ನೀಡಿ ಗೌರವಿಸಲಾಯಿತು.

Karnataka State Commission for Protection of Child Rights ಮಕ್ಕಳಿಗಾಗುತ್ತಿರುವ ಅನಾಹುತಗಳನ್ನ ನಾವೆಲ್ಲಾ ಸೇರಿ ತಪ್ಪಿಸಬೇಕು- ಕೆ.ನಾಗಣ್ಣಗೌಡ

0

Karnataka State Commission for Protection of Child Rights ಎಲ್ಲ ಇಲಾಖೆಗಳು ಕಡ್ಡಾಯವಾಗಿ ಮಕ್ಕಳ ರಕ್ಷಣಾ ನೀತಿಯನ್ನು ಅನುಸರಿಸಿ ಕಾರ್ಯ ನಿರ್ವಹಿಸಬೇಕು ಹಾಗೂ ನಾವೆಲ್ಲ ಸೇರಿ ಮಕ್ಕಳಿಗೆ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ಜಿ.ಪಂ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ಅಂಗನವಾಡಿಯ ಮಕ್ಕಳನ್ನು ನಿಯಮಿತವಾಗಿ ಆರೋಗ್ಯ ತಪಾಸಣೆಗೊಳಪಡಿಸಿ, ಗಂಭೀರ ಮತ್ತು ಮಧ್ಯಮ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಎನ್‌ಆರ್‌ಸಿ ಗೆ ದಾಖಲು ಮಾಡಬೇಕು. ಜಿಲ್ಲೆಯಲ್ಲಿ ಅಂಗನವಾಡಿಯಿAದ ಮಕ್ಕಳನ್ನು ಗುರುತಿಸಿ ಎನ್‌ಆರ್‌ಸಿ ಗೆ ದಾಖಲಿಸುವ ಸಂಖ್ಯೆ ಕಡಿಮೆ ಇದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು, ಸಿಡಿಪಿಓ ಗಳು ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು. ತಾಲ್ಲೂಕುಗಳಲ್ಲಿ ಸಂಬAಧಿಸಿದ ಅಧಿಕಾರಿಗಳ ಸಮನ್ವಯ ಸಭೆ ನಡೆಸಿ ಈ ಯೋಜನೆ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಬೇಕು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. 2024-25 ರಲ್ಲಿ 79 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದೆ. ಇಷ್ಟೂ ಪ್ರಕರಣಗಳಿಗೆ ಎಫ್‌ಐಆರ್ ದಾಖಲಿಸಿ, ಅನುಸರಣೆ ಕೈಗೊಳ್ಳಬೇಕು. ಬಾಲ ಗರ್ಭಿಣಿಯರಿಗೆ ಪರಿಹಾರ, ಪುನರ್ವಸತಿ ನೀಡಬೇಕು. ಹೆಣ್ಣು ಮಕ್ಕಳ ರಕ್ಷಣಾ ನೀತಿ ಪ್ರಕಾರ ಎಲ್ಲರೂ ಕೆಲಸ ಮಾಡಬೇಕು.
ಮುಖ್ಯವಾಗಿ ಬಾಲ್ಯ ವಿವಾಹಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಕೇವಲ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖಾ ಅಧಿಕಾರಿಗಳು ಮಾತ್ರವಲ್ಲ, ತಹಶೀಲ್ದಾರ್, ಇಓ, ಡಿಸಿಎಂ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಅಧಿಕಾರಿ, ಶಾಲಾ ಮುಖ್ಯೋಪಾಧ್ಯಯರು, ಪೊಲೀಸ್ ಇಲಾಖೆ ಇತರೆ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು ಸಹ ಎಫ್‌ಐಆರ್ ಮಾಡಲು ಅವಕಾಶ ಇದ್ದು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕೆಲಸ ಮಾಡಬೇಕು.
ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರಿಗೆ ಮೊದಲ ಹಂತದಲ್ಲಿ ಬಾಲ್ಯ ವಿವಾಹದ ಬಗ್ಗೆ ತಿಳಿಯುವ ಸಂಭವ ಹೆಚ್ಚು ಇರುತ್ತದೆ. ಬಾಲ್ಯ ವಿವಾಹದ ಕುರಿತು ವಿವೇಕ ಹೇಳುವುದಕ್ಕಿಂತ ಶಿಕ್ಷೆಯ ತೀವ್ರತೆ, ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ಕುರಿತು ಮೊದಲೇ ಮಾಹಿತಿ ನೀಡುವವರಿಗೆ ಪ್ರೋತ್ಸಾಹ ಧನ ಸಹ ನೀಡಲಾಗುವುದು. ಈ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದರು.
Karnataka State Commission for Protection of Child Rights ಆರೋಗ್ಯ ಇಲಾಖೆಯಲ್ಲಿ ಮಕ್ಕಳ ಸುರಕ್ಷತಾ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು. ಎನ್‌ಆರ್‌ಸಿ ಕೇಂದ್ರಕ್ಕೆ ಹೆಚ್ಚಿನ ಮಕ್ಕಳು ದಾಖಲಾಗಿರುವುದಿಲ್ಲ. ಈ ಬಗ್ಗೆ ಕ್ರಮ ವಹಿಸಬೇಕು. ಏಪ್ರಿಲ್ ಅಂತ್ಯದವರೆಗೆ 96 ಮಕ್ಕಳು ದಾಖಲಾಗಿರುತ್ತಾರೆ. ಎನ್‌ಆರ್‌ಸಿ ಗೆ ದಾಖಲಾದ ಮಕ್ಕಳ ತಾಯಂದಿರಿಗೆ ನೀಡಬೇಕಾದ ವೇತನ ಬಾಕಿ ಇದೆ. ಸುಮಾರು ರೂ.38,46,000 ಹಣ ಪಾವತಿ ಬಾಕಿ ಇದ್ದು, ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ವಹಿಸಬೇಕೆಂದರು.
ಜಿಲ್ಲಾಸ್ಪತ್ರೆಯ ಎನ್‌ಐಸಿಯು ಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ದಾಖಲಿಸಲಾಗಿದೆ. ಎನ್‌ಐಸಿಯು ಸಾಮರ್ಥ್ಯವನ್ನು ಮಕ್ಕಳ ಸಂಖ್ಯೆಗನುಗುಣವಾಗಿ ಹೆಚ್ಚಿಸಬೇಕಿದೆ. ಎನ್‌ಐಸಿಯು ಸೇರಿದಂತೆ ಯಾವುದೇ ವಿಭಾಗದಲ್ಲಿ ಮಕ್ಕಳ ವಿಷಯದಲ್ಲಿ ನಿರ್ಲಕ್ಷö್ಯ ತೋರಿದರೆ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅಧ್ಯಕ್ಷರು ಹಾಗೂ ಸದಸ್ಯರು ಎಚ್ಚರಿಕೆ ನೀಡಿದರು.
ಹಾಗೂ 10 ರಿಂದ 15 ವರ್ಷದೊಳಗಿನ ಮಕ್ಕಳ ಲಸಿಕಾರಣ ಕಡಿಮೆ ಪ್ರಮಾಣದಲ್ಲಿ ಆಗಿದೆ ಎಂದು ಆಯೋಗದ ಸದಸ್ಯರು ಸಭೆಯ ಗಮನಕ್ಕೆ ತಂದು, ಆರೋಗ್ಯ ಇಲಾಖೆ ಮಕ್ಕಳ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷö್ಯ ತೋರದೇ ಸರ್ಕಾರ ನೀಡುತ್ತಿರುವ ಯೋಜನೆಗಳು, ಹಣವನ್ನು ಸದುಪಯೋಗಪಡಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ 104 ಅಲ್ಟಾçö್ಯಸೌಂಡ್ ಸ್ಕಾö್ಯನಿಂಗ್ ಮಷೀನ್‌ಗಳಿದ್ದು, ಪಿಸಿಪಿಎನ್‌ಡಿಟಿ ಕಾಯ್ದೆ ಪ್ರಕಾರ ನಿಯಮಿತವಾಗಿ ಕ್ರಮ ವಹಿಸಬೇಕು. ತಂಡ ರಚಿಸಿ, ಸ್ಕಾö್ಯನಿಂಗ್ ಸೆಂಟರ್‌ಗಳಿಗೆ ದಿಢೀರ್ ಭೇಟಿ, ತಪಾಸಣೆ ಕೈಗೊಳ್ಳಬೇಕು. ಭ್ರೂಣ ಪತ್ತೆ ಮತ್ತು ಭ್ರೂಣ ಹತ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಡಿಡಿಪಿಐ, ಡಿಡಿಪಿಯು ಮತ್ತು ಬಿಇಓ ಗಳು ಸೇರಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಆರ್‌ಟಿಇ ಕಾಯ್ದೆ ಅನುಷ್ಟಾನಗೊಳಿಸಬೇಕು. ಈ ಕಾಯ್ದೆ ಕುರಿತು ಅಧ್ಯಯನ ಮಾಡಿ, ಈ ಕುರಿತು ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಕಾರ್ಯಾಗಾರ ಮಾಡಬೇಕು. ಯಾವುದೇ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದAತೆ ಕ್ರಮ ಕೈಗೊಳ್ಳಬೇಕು. ಆಯೋಗಕ್ಕೆ ಬರುವ ದೂರುಗಳ ಪೈಕಿ ಶೇ.30 ರಷ್ಟು ಆರ್‌ಟಿಇ ಗೆ ಸಂಬAಧಿಸಿದ್ದಾಗಿದ್ದು ಇನ್ನು ಮುಂದೆ ಈ ಕುರಿತು ದೂರು ಬಾರದಂತೆ ಈ ಕಾಯ್ದೆ ಅನುಷ್ಟಾನವಾಗಬೇಕು. ಖಾಸಗಿ ಶಾಲೆಗಳ ವೆಬ್‌ಸೈಟ್‌ನಲ್ಲಿ ಶಾಲಾ ಶುಲ್ಕದ ಕುರಿತು ಮಾಹಿತಿ ಹಾಕಬೇಕು. ಶಾಲೆಗಳ ಮಾನ್ಯತೆ ನವೀಕರಣ ವೇಳೆ ಎಲ್ಲ ಮಾರ್ಗಸೂಚಿಗಳನ್ನು ಪರಿಶೀಲಿಸಬೇಕು ಎಂದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಆರ್‌ಡಿಪಿಆರ್ ಮತ್ತು ಶಾಲಾ ಶಿಕ್ಷಣ ಇಲಾಖೆಗಳ ಅಂಕಿ ಅಂಶಗಳು ತಾಳೆಯಾಗುತ್ತಿಲ್ಲ. ಸಾಕಷ್ಟು ವ್ಯತ್ಯಾಸ ಇದೆ. ಇದನ್ನು ಸರಿಪಡಿಸಿಕೊಳ್ಳಬೇಕು. ಶಾಲೆಯಿಂದ ಮಕ್ಕಳು ಹೊರಗುಳಿದ ಕಾರಣ ಗುರುತಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕು. ಶಾಲೆಗೆ ಮರಳಿ ಬರಲು ಕೇವಲ ಮನವೊಲಿಸಿದರೆ ಸಾಲದು, ಮಕ್ಕಳು ಅನಾರೋಗ್ಯದಿಂದ ಇದ್ದಾರಾ, ವಿಕಲಚೇತನರಾ, ಏಕ ಪೋಷಕ, ಅಥವಾ ಅನಾಥರು ಹೀಗೆ ಗುರುತಿಸಿ ವರದಿ ನೀಡಿದಲ್ಲಿ ಸೂಕ್ತ ಪರಿಹಾರ ಸಾಧ್ಯವಾಗುತ್ತದೆ ಎಂದು ಸದಸ್ಯರು ತಿಳಿಸಿದರು.
ಅಧ್ಯಕ್ಷರು ಮಾತನಾಡಿ, ಶಾಲೆಗಳು ಮುಚ್ಚಲು ಮುಖ್ಯ ಕಾರಣ ಅಂಗನವಾಡಿಯೊAದಿಗೆ ಉತ್ತಮ ಸಂಬAಧ ಸಾಧಿಸದೇ ಇರುವುದು. ಅಂಗನವಾಡಿಗೆ ಶಾಲೆಯಿಂದ ಭೇಟಿ ನೀಡಿ, ಪೋಷಕರು, ಮಕ್ಕಳಿಗೆ ಸರ್ಕಾರಿ ಶಾಲೆಗೆ ಬರುವಂತೆ ಮನವೊಲಿಸಬೇಕು. ಅಂಗನವಾಡಿಗಳೊAದಿಗೆ ಶಾಲೆಗಳು ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕೆಂದರು.
ಸದಸ್ಯರು, ಡಿಡಿಪಿಐ ಮತ್ತು ಡಿಡಿಪಿಯು ಶಾಲಾ, ಕಾಲೇಜುಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಖಾತ್ರಿಪಡಿಸಬೇಕು. ಮಾರ್ಗಸೂಚಿಯನ್ವಯ ಕೋಚಿಂಗ್ ಸೆಂಟರ್‌ಗೆ ಅನುಮತಿ ನೀಡಬೇಕು. ಅನಧಿಕೃತ ಕೋಚಿಂಗ್ ಸೆಂಟರ್ ಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಬಿಸಿಎA, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ತಮ್ಮ ವ್ಯಾಪ್ತಿಯ ವಸತಿನಿಲಯಗಳಲ್ಲಿ ಮುಖ್ಯವಾಗಿ ಹೆಣ್ಣು ಮಕ್ಕಳು ಸೇರಿದಂತೆ ಮಕ್ಕಳ ರಕ್ಷಣಾ ನೀತಿಯನ್ನು ಖಾತ್ರಿಪಡಿಸಬೇಕು. ಹೆಣ್ಣು ಮಕ್ಕಳ ಹಾಸ್ಟೆಲ್‌ನಲ್ಲಿ ಮಹಿಳಾ ಅಧೀಕ್ಷಕರು ಮತ್ತು ಸಿಬ್ಬಂದಿಯನ್ನು ನೇಮಿಸಬೇಕು. ಭದ್ರತಾ ಸಿಬ್ಬಂದಿ ನಿಯೋಜನೆ, ಚಲನವಲನ ವಹಿ ನಿರ್ವಹಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಲಭಿಸಬೇಕಾದ ಎಲ್ಲ ಮೂಲಭೂತ ಸೌಕರ್ಯ, ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಬೇಕು. ದೌರ್ಜನ್ಯ, ಪೋಕ್ಸೋ ಪ್ರಕರಣಗಳು ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಆರ್‌ಡಿಪಿಆರ್ ಇಲಾಖೆಯಿಂದ ಪ್ರತಿ ಗ್ರಾ.ಪಂ ಯಲ್ಲಿ ಮಕ್ಕಳ ಸ್ನೇಹಿ ಅಭಿಯಾನ, ಚಟುವಟಿಕೆಗಳನ್ನು ಕೈಗೊಳ್ಳಬೇಕು. ಕಾರ್ಮಿಕ ಇಲಾಖೆ ವತಿಯಿಂದ ನಿಯಮಿತವಾಗಿ ದಾಳಿ ನಡೆಸಿ ಕಿಶೋರ ಮತ್ತು ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ, ಪರಿಹಾರ, ಪುನರ್ವಸತಿ, ಸೂಕ್ತ ಕ್ರಮ ವಹಿಸಬೇಕು. ಬಾಲಕಾರ್ಮಿಕತೆಯನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಎನ್.ಹೇಮಂತ್, ಆಯೋಗದ ಸದಸ್ಯರಾದ ವೆಂಕಟೇಶ್, ಡಾ.ಕೆ.ಟಿ.ತಿಪ್ಪೇಸ್ವಾಮಿ, ಶಶಿಧರ್ ಕೋಸಂಬೆ, ಶ್ರೀಮತಿ ಮಂಜು, ಅಪರ್ಣಾ ಎಂ ಕೊಳ್ಳ, ಶೇಖರೇಗೌಡ ಜಿ ರಾಮತ್ನಾಳ, ಜಿಲ್ಲಾ ಮಟ್ಟದ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಬಾಲ ನ್ಯಾಯ ಮಂಡಳಿ ಸದಸ್ಯರು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Keladi Shivappa Nayaka University ಬೇಕರಿ ಉತ್ಪನಗಳ ಬಗ್ಗೆ ಕೌಶಲ್ಯಾಭಿವೃದ್ಧಿ‌ ತರಬೇತಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದು

0

Keladi Shivappa Nayaka University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಮೇ 29 ರಿಂದ ಜೂನ್ 27 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.
Keladi Shivappa Nayaka University ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮೇ 28 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

Siddaramaiah ದೇಶದಲ್ಲಿಯೇ ಮಾದರಿಯಾಗಿ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನಗೊಳಿಸಲಾಗಿದೆ- ಸಿದ್ಧರಾಮಯ್ಯ.

Siddaramaiah ರಾಜ್ಯದಲ್ಲಿನ ಜನವಸತಿ ಪ್ರದೇಶಗಳಾದ ಹಟ್ಟಿ, ತಾಂಡಾ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ರಚಿಸಿ, 1,11,111 ಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸುವ ಮೂಲಕ ಸರ್ಕಾರದ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿದ್ದು, ಮುಂದಿನ ಆರು ತಿಂಗಳೊಳಗಾಗಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಆಸ್ತಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಕಂದಾಯ ಇಲಾಖೆಯಿಂದ ಮಂಗಳವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ ಸಾಂಕೇತಿಕವಾಗಿ ಫಲಾನುಭವಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಟ್ಟಿ, ತಾಂಡಾ, ಹಾಡಿ ಮುಂತಾದ ಜನವಸತಿ ಪ್ರದೇಶಗಳಲ್ಲಿನ ಬಡ ಕುಟುಂಬಗಳು ವಾಸಿಸುವ ಮನೆಗಳಿಗೆ ಯಾವುದೇ ಹಕ್ಕಾಗಲಿ, ದಾಖಲೆಗಳಾಗಲಿ ಇರಲಿಲ್ಲ, ಇಂತಹವರಿಗೆ ಹಕ್ಕುಪತ್ರಗಳನ್ನು ಕೊಟ್ಟು, ಅವರು ನೆಮ್ಮದಿಯಿಂದ ಬದುಕಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದೆ. ಹಲವು ದಶಕಗಳಿಂದಲೂ ಇದು ನೆನೆಗುದಿಗೆ ಬಿದ್ದಿತ್ತು. 2015 ರಲ್ಲಿ ಕಾಗೋಡು ತಿಮ್ಮಪ್ಪ ಅವರು ಕಂದಾಯ ಮಂತ್ರಿಯಾಗಿದ್ದಾಗ, ಈ ಕಾರ್ಯಕ್ಕೆ ವೇಗ ನೀಡಲಾಯಿತು. “ಉಳುವವನೇ ಭೂಮಿಯ ಒಡೆಯ” ಎಂದು ಈ ಹಿಂದೆ ನಮ್ಮ ಪಕ್ಷದ ಸರ್ಕಾರ ಇದ್ದಾಗ ಘೋಷಿಸಿ, ಕಾರ್ಯರೂಪಕ್ಕೆ ತಂದರೆ ನಾವು “ವಾಸಿಸುವವನೇ ಮನೆಯ ಒಡೆಯ” ಎಂದು ಘೋಷಿಸಿದ್ದೆವು. ಹಟ್ಟಿ, ಹಾಡಿ, ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿ ಇಲ್ಲಿ ವಾಸಿಸುತ್ತಿರುವ ಜನರಿಗೆ ಭದ್ರತೆ ಕೊಟ್ಟು, ಅವರ ಮನೆಯ ಆಸ್ತಿಗಳನ್ನು ಅವರ ಹೆಸರಿಗೆ ನೊಂದಾಣಿ ಮಾಡಿಸಿ, ಹಕ್ಕುಪತ್ರವನ್ನು ವಿತರಿಸುವಂತಹ ಬಹುದೊಡ್ಡ ಕಾರ್ಯವನ್ನು ನಾವು ಮಾಡಿದ್ದೇವೆ. ರಾಹುಲ್ ಗಾಂಧಿ ಅವರ ಆಶಯದಂತೆ, ರಾಜ್ಯದಲ್ಲಿನ ಎಲ್ಲಾ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ರಚಿಸಿ, ಬಾಕಿ ಉಳಿದಿರುವ 50 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೂ ಹಕ್ಕುಪತ್ರ ವಿತರಿಸಲಾಗುವುದು ಎಂದರು.
ಪAಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಮಾತು ಕೊಟ್ಟಿದ್ದೆವು, ಅದರಂತೆ ನಮ್ಮ ಸರ್ಕಾರ ಬಂದ ಒಂದು ವರ್ಷದೊಳಗೆ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ.
Siddaramaiah ದೇಶದಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಮಾದರಿಯಾಗಿ ಅನುಷ್ಟಾನಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ರಾಜ್ಯದ 3.5 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ರಾಜ್ಯದ 1.62 ಕೋಟಿ ಕುಟುಂಬಗಳಿಗೆ 200 ಯುನಿಟ್‌ವರಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. 1.22 ಕೋಟಿ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2 ಸಾವಿರ ರೂ.ಗಳ ಪ್ರೋತ್ಸಾಹ ಧನವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.42 ಕೋಟಿ ಬಿಪಿಎಲ್ ಪಡಿತರದಾರರ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ಪಡೆಯುತ್ತಿದ್ದಾರೆ. 2.67 ಲಕ್ಷ ಯುವಕ, ಯುವತಿಯರು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿದ್ದಾರೆ. ಈ ಎಲ್ಲ ಗ್ಯಾರಂಟಿ ಯೋಜನೆಗಳು ಯಾವುದೇ ಜಾತಿ, ಧರ್ಮ, ಪಕ್ಷ ಎನ್ನುವ ಭೇದವಿಲ್ಲದೆ ಎಲ್ಲರಿಗೂ ಸಾಮಾಜಿಕ, ಆರ್ಥಿಕ ಶಕ್ತಿ ಕೊಡುವ ಕಾರ್ಯಕ್ರಮಗಳಾಗಿವೆ. ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ. ಬಹುತ್ವ ಇರುವ ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಕಾಣುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.
ರಾಜ್ಯಕ್ಕೆ ಅನ್ಯಾಯ : ಕಳೆದ ಎರಡು ವರ್ಷಗಳಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬಹಳ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲಿ ನಮಗೆ ಬರಬೇಕಿದ್ದ ಪಾಲು ಬಂದಿಲ್ಲ. 4.5 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡುತ್ತಿದೆ. ಈ ಪೈಕಿ ನಮಗೆ ಕೇವಲ 65 ಸಾವಿರ ಕೋಟಿ ರೂ. ಮಾತ್ರ ಬರುತ್ತಿದೆ. 13 ಸಾವಿರ ಕೋಟಿ ರೂ. ನಮಗೆ ನಷ್ಟವಾಗುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳ ಮೊತ್ತವೂ ಕಡಿತವಾಗುತ್ತಿದ್ದು, 22 ಸಾವಿರ ಕೋಟಿ ರೂ.ಗಳ ಪೈಕಿ 18 ಸಾವಿರ ಕೋಟಿ ರೂ. ಮಾತ್ರ ಬಂದಿದೆ. ಇನ್ನೂ 4 ಸಾವಿರ ಕೋಟಿ ರೂ. ಬರಲಿಲ್ಲ. ಹಣಕಾಸು ಆಯೋಗ ಹೇಳಿದಂತೆ 5,495 ಕೋಟಿ ರೂ. ನಮಗೆ ಬಿಡುಗಡೆ ಆಗಬೇಕಿತ್ತು, ಈ ಪೈಕಿ ಯಾವುದೇ ಅನುದಾನ ಬರಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗಾಗಿ 5,300 ಕೋಟಿ ರೂ. ಗಳನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಯಿತು. ಆದರೆ ಈವರೆಗೂ ಹಣ ಬಿಡುಗಡೆ ಆಗಲೇ ಇಲ್ಲ. ನಮ್ಮ ರಾಜ್ಯದ ಲೋಕಸಭಾ ಸದಸ್ಯರು ಒಗ್ಗೂಡಿ, ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

MESCOM ಮೇ 22. ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ

0

MESCOM ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 09:00 ರಿಂದ 06:00 ಗಂಟೆಯವರೆಗೆ ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ, ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಪ್ರಿಯದರ್ಶಿನಿ ಲ್ಭೆ಼ಟ್, MESCOM ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

B. Z. Zameer Ahmed Khan ಎರಡು ತಿಂಗಳ ಒಳಗೆ ಹೊಸಪೇಟೆ ಸಕ್ಕರೆ ಕಾರ್ಖಾನೆಗೆ ಭೂಮಿ ಪೂಜೆ- ಸಚಿವ ಜಮೀರ್ ಖಾನ್

0

B. Z. Zameer Ahmed Khan ವಸತಿ, ವಕ್ಫ್, ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಸಮರ್ಪಣೆ ಸಂಕಲ್ಪ ಕಾರ್ಯಕ್ರಮದಲ್ಲಿ ಪ್ರಾಸ್ತೌವಿಕವಾಗಿ ಮಾತನಾಡಿ, ಸಮರ್ಪಣಾ ಸಂಕಲ್ಪ ಸಮಾವೇಶಕ್ಕೆ ಅಂದಾಜು 1.5 ಲಕ್ಷ ಜನ ಸೇರುವ ನಿರೀಕ್ಷೆ ಇತ್ತು, ಆದರೆ ಇಂದು ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಸೇರಿರುವುದು ನಮ್ಮ ಸರ್ಕಾರದ ಸಾಧನೆ ಆಗಿದೆ. ಆಗಮಿಸಿದ ಎಲ್ಲಾ ಮಹಾಜನತೆಗೆ ಕೈಮುಗಿದು ನಮಸ್ಕಾರಗಳನ್ನು ತಿಳಿಸುತ್ತೇನೆ. ವಿಜಯನಗರ ಜಿಲ್ಲೆಗೆ ಅನೇಕ ಅಭಿವೃದ್ಧಿಗಳ ಬೇಡಿಕೆ ಇದೆ. 100 ಕೋಟಿ ವೆಚ್ಚದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಆಗಬೇಕಿದೆ. 40 ಕೋಟಿ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆಗೆ ಹೈಟೆಕ್ ಹಾಸ್ಪಿಟಲ್ ಆರಂಭಿಸಬೇಕಿದೆ. ಈಚೇಗೆ ತುಂಗಭದ್ರಾ ಜಲಾಶಯದ 19 ನೇ ಗೇಟ್ ದುರಸ್ಥಿಯಿಂದಾಗಿ ಬಹುದೊಡ್ಡ ಅನಾಹುತ ಸಂಭವಿಸಬೇಕಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದಂತೆ ಶೀಘ್ರ ಕಾಮಗಾರಿ ಕೈಗೆತ್ತಿಕೊಂಡು ತಾತ್ಕಾಲಿಕ ಗೇಟ್ ಅಳವಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ಶಾಶ್ವತ ಗೇಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರ ಅನುದಾನ ನೀಡಬೇಕಿದೆ. ಈ ಭಾಗದ ರೈತರ ಬಹುದಿನದ ಬೇಡಿಕೆ ಸಕ್ಕರೆ ಕಾರ್ಖಾನೆ ಆರಂಭಿಸುವುದಾಗಿದೆ. ಈಗಾಗಲೇ ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಸೂಕ್ತ ನಿವೇಶನ ಗುರುತಿಸಿ ಭೂಮಿಪೂಜೆ ನೆರವೇರಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಹಕರಿಸಬೇಕಿದೆ ಎಂದರು.
B. Z. Zameer Ahmed Khan ವೇದಿಕೆಯಲ್ಲಿ ರಾಜ್ಯ ಸಭೆ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ, ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಇಂಧನ ಸಚಿವ ಕೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ, ಜೀವಶಾಸ್ತç ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಹಜ್ ಹಾಗೂ ಪೌರಾಡಳಿತ ಸಚಿವ ರಹೀಂಖಾನ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವಿ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ.ಎಸ್.ತಂಗಡಗಿ, ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್.ಬಿ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷಿö್ಮ.ಆರ್ ಹೆಬ್ಬಾಳ್ಕರ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಲೋಕಸಭಾ ಸಂಸದರಾದ ಈ.ತುಕಾರಾಮ್, ವಿಜಯನಗರ ಕ್ಷೇತ್ರ ಶಾಸಕ ಹೆಚ್.ಆರ್.ಗವಿಯಪ್ಪ ಕೂಡ್ಲಿಗಿ ಶಾಸಕ ಡಾ.ಶ್ರೀನಿವಾಸ.ಎನ್.ಟಿ., ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್.ಎನ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಭೀಮಾನಾಯ್ಕ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಸೇರಿದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ವಸತಿ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕಂದಾಯ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಣ ಹಾಗೂ ಸಾಮಾಜಿಕ ಭದ್ರತೆ ವಿಭಾಗದ ಸರ್ಕಾರ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್, ಕಂದಾಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಜೆ.ಮಂಜುನಾಥ, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿ.ಪಂ. ಸಿಇಓ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್.ಶ್ರೀಹರಿಬಾಬು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Santosh Lad ಪತ್ರಿಕಾ ವಿತರಕರ ವಿಮಾ ಯೋಜನೆ. ಕೆಲ ಷರತ್ತುಗಳ ಸಡಿಲಿಕೆಗೆ ಮನವಿ

0

Santosh Lad ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಕಾರ್ಮಿಕ ಸಚಿವರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.
Santosh Lad ಮನವಿ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜೊತೆಗೆ ಚರ್ಚಿಸಿದ ಪ್ರಭಾಕರ್ ಅವರು ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು. ಈ ಬಗ್ಗೆ ಪರಿಶೀಲಿಸಿ ಪತ್ರಿಕಾ ವಿತರಕರ ಒಕ್ಕೂಟ ಸೇರಿದಂತೆ ಸಮಿತಿ ರಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಸಂತೋಷ್ ಲಾಡ್ ಅವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಐದನೇ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು.

Shimoga News ವ್ಯಾಪಾರದ ಜೊತೆ ಸಾರ್ವಜನಿಕ ಸೇವೆಯೂ‌ ಮುಖ್ಯ- ಹೆಚ್.ವೈ.ಸತೀಶ್

0

Shimoga News ವ್ಯಾಪಾರದ ಜತೆಯಲ್ಲಿ ಸಾರ್ವಜನಿಕ ಸೇವೆಯು ಮುಖ್ಯ. ಹಲವಾರು ಎಪಿಎಂಸಿಗಳಲ್ಲಿ ನಾನು ಸೇವೆ ಮಾಡಿದ್ದೇನೆ. ಆದರೆ ಶಿವಮೊಗ್ಗ ಎಪಿಎಂಸಿ ಒಂದು ಮಾದರಿಯಾಗಿದೆ ಎಂದು ಎಪಿಎಂಸಿ ಶಿವಮೊಗ್ಗ ಮಾರುಕಟ್ಟೆಯ ಸಹಾಯಕ ನಿರ್ದೇಶಕ ಎಚ್.ವೈ.ಸತೀಶ್ ಹೇಳಿದರು.
ದಿನಸಿ ವರ್ತಕರ ಸಂಘದ ವತಿಯಿಂದ ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಬೆಳದಿಂಗಳ ಭೋಜನ ಕಾರ್ಯಕ್ರಮದಲ್ಲಿ ಮಾತನಾಡಿ, ಕುಟುಂಬ ಸಮೇತ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಪರಸ್ಪರರಲ್ಲಿ ಒಡನಾಟ ಹೆಚ್ಚುತ್ತದೆ. ಬೆಳದಿಂಗಳ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರವನ್ನು ವ್ಯವಸ್ಥಿತವಾಗಿ ಮಾಡಿದ ವರ್ತಕ ಸಂಘದವರಿಗೆ ವಿಶೇಷ ಅಭಿನಂದನೆಗಳು. ಇದೇ ರೀತಿ ನಿಮ್ಮ ಕಾಯಕ ಮುಂದುವರೆಯಲಿ ಎಂದು ಆಶಿಸಿದರು.
ದಿನಸಿ ವರ್ತಕರ ಸಂಘದ ಅಧ್ಯಕ್ಷ ಪಿ.ಎಸ್.ಹಾಲಸ್ವಾಮಿ ಮಾತನಾಡಿ, ವೃತ್ತಿ ಕ್ಷೇತ್ರದ ಕಾರ್ಯಗಳ ಜತೆಯಲ್ಲಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುವುದು ಹಾಗೂ ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವುದು ಸಂಘ ಸಂಸ್ಥೆಗಳ ಕರ್ತವ್ಯ ಎಂದು ಹೇಳಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಲ್ಲಿ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು. ಸಮಾಜದ ಪ್ರಗತಿಯಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು. ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Shimoga News ದಿನಸಿ ವರ್ತಕರ ಸಂಘದ ಪದಾಧಿಕಾರಿಗಳು, ಕುಟುಂಬ ಸದಸ್ಯರು ಭಾಗವಹಿಸಿದ್ದರು. ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದ ಜಿ. ವಿಜಯಕುಮಾರ್ ಹಾಗೂ ಆದ್ಯ ಹೊಸನಗರ ಅವರ ಸಂಗೀತ ರಸಮಂಜರಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ದಿನಸಿ ವರ್ತಕರ ಸಂಘದ ಮಾಜಿ ಅಧ್ಯಕ್ಷ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎನ್.ಬಿ.ಜಯದೇವಪ್ಪ, ರಮೇಶಪ್ಪ, ಶಿವಮೊಗ್ಗ ದಿನಸಿ ವರ್ತಕ ಸಂಘದ ಅಧ್ಯಕ್ಷ ಪಿ.ಎಸ್.ಹಾಲಸ್ವಾಮಿ, ಕಾರ್ಯದರ್ಶಿ ಎಂ.ಪಿ.ನಾಗರಾಜ್, ಉಪಾಧ್ಯಕ್ಷ ರೇಣುಕಾ ಬಣಕಾರ್, ನಿರ್ದೇಶಕರಾದ ಟಿ.ಜೆ.ದೇವರಾಜ್, ಎಸ್ಎನ್ಟಿ ಆನಂದ್, ವೈ.ಎ.ಅಶೋಕ್, ಶ್ರೀಕಾಂತ್, ಬಿ.ಎನ್.ನಂದನ್ ಕುಮಾರ್, ಸಿದ್ದಪ್ಪ, ಎ.ಬಿ.ಪ್ರಸನ್ನ, ಎ.ಎಸ್.ರವಿ, ಎಚ್.ಎನ್.ರಘು ಪ್ರಸಾದ್, ರಮೇಶ್, ನಟರಾಜ್, ಶಿವಕುಮಾರ್, ಅರಸೀಕೆರೆ ಶಂಕರ್ ಇಂಡಸ್ಟ್ರೀಸ್ ಕೆ.ಪಿ.ನಾಗೇಂದ್ರ ಮತ್ತಿತರರು ಭಾಗವಹಿಸಿದ್ದರು.

Guarantee scheme ಕಾಲೇಜಿಗೆ ಹೋಗಿಬರಲು “ಶಕ್ತಿ” ನೀಡಿದ ಪಾಸ್ ನಿಂದನಾನೀಗ ನಿರಾಳ- ದೀಕ್ಷಾ

0

Guarantee scheme ನಾನು ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದೇನೆ. ಮಾಚೇನಹಳ್ಳಿಯಿಂದ ಗೋಪಾಳಕ್ಕೆ ಪ್ರತಿ ದಿನ ಓಡಾಡಲು ಮೊದಲು ಕಾಲೇಜು ಪಾಸ್ ಮಾಡಿಸಿದ್ದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ಅತ್ಯಂತ ಅನುಕೂಲವಾಗಿದೆ. ಮೊದಲು ವಿದ್ಯಾರ್ಥಿ ಪಾಸ್ ಪಡೆದು ಕಾಲೇಜಿಗೆ ಹೋಗಿ ಬರುತ್ತಿದ್ದೆ. ಆ ಪಾಸ್‌ನಿಂದ ನಿಗದಿತ ಮಾರ್ಗದಲ್ಲಿ ಅಂದರೆ ಮನೆಯಿಂದ ಕಾಲೇಜಿಗೆ ಮಾತ್ರ ಸಂಚರಿಸಬೇಕಿತ್ತು. ಬೇರೆ ಮಾರ್ಗಕ್ಕೆ ಸಂಚರಿಸಲು ಹಣ ನೀಡಿ ಟಿಕೆಟ್ ಪಡೆಯಬೇಕಿತ್ತು. ಪ್ರಸ್ತುತ ಶಕ್ತಿ ಯೋಜನೆಯಿಂದ ಕಾಲೇಜು ಸೇರಿದಂತೆ ಬೇರೆ ಬೇರೆ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸುತ್ತೇನೆ. ಪ್ರಯಾಣಕ್ಕೆಂದು ಖರ್ಚು ಮಾಡುತ್ತಿದ್ದ ಹಣ ಉಳಿತಾಯವಾಗಿದ್ದು ಈ ಹಣವನ್ನು ವಿದ್ಯಾಭ್ಯಾಸಕ್ಕೆ ಉಪಯೋಗಿಸಿಕೊಳ್ಳುತ್ತಿದ್ದೇನೆ. ಹಾಗೂ ನಾನು ಮತ್ತು ನನ್ನ ಅಮ್ಮ, ತಂಗಿ ಎಲ್ಲರೂ ಪ್ರವಾಸಿ ತಾಣಗಳು, ದೇವಸ್ಥಾನಗಳಿಗೆ Guarantee scheme ಹೋಗಬೇಕೆಂಬ ಹಂಬಲ ಹೊಂದಿದ್ದೆವು. ಆದರೆ ಅದು ನಮಗೆ ದುಬಾರಿಯಾದ ಕಾರಣ ಹೋಗಿರಲಿಲ್ಲ. ಆದರೆ ಶಕ್ತಿ ಯೋಜನೆ ಬಂದ ಮೇಲೆ ನಾವೆಲ್ಲ ಅನೇಕ ಪ್ರವಾಸಿ ಸ್ಥಳಗಳು ಮತ್ತು ದೇವಸ್ಥಾನಗಳಿಗೆ ಹೋಗಿ ಬಂದೆವು. ಇದರಿಂದ ಖುಷಿಯಾಗಿದೆ. ಈಗ ನಾವು ಮುಕ್ತವಾಗಿ ಓಡಾಡಲು ಸಾಧ್ಯವಾಗಿದೆ. ಶಕ್ತಿ ಯೋಜನೆಯಿಂದ ನಿಜವಾಗಿ ಮಹಿಳೆಯರಲ್ಲಿ ಬಲ ಬಂದAತಾಗಿದ್ದು, ಸ್ವತಂತ್ರವಾಗಿ ರಾಜ್ಯಾದ್ಯಂತ ಸಂಚಾರ ಮಾಡಿ ವಿವಿಧ ಸ್ಥಳಗಳನ್ನು ನೋಡಲು ಸಾಧ್ಯವಾಗಿಸಿದ ಸರ್ಕಾರಕ್ಕೆ ಧನ್ಯವಾದಗಳು.
– ದೀಕ್ಷಾ ಮಹಿಳಾ ಪಾಲಿಟೆಕ್ನಿಕ್ ಕಾಲೇಜು, ಗೋಪಾಳ, ಶಿವಮೊಗ್ಗ

Gruha Lakshmi Scheme ಸಮಾಜಸೇವೆಗೆ ಮನಸ್ಸು ಮಾಡಿದ “ಗೃಹ ಲಕ್ಷ್ಮಿ” ಫಲಾನುಭವಿ ಅನುಪಮಾ

0

Gruha Lakshmi Scheme ಸಾಕಷ್ಟು ಓದಿಕೊಂಡಿರುವ ನಾನು ಬಡವರಿಗೆ ಸಹಾಯ ಮಾಡುವ, ಸಮಾಜ ಸೇವೆ ಮಾಡುವ ಕನಸನ್ನು ಹೊತ್ತಿದ್ದೆ. ಆದರೆ ಅದು ಅಷ್ಟರ ಮಟ್ಟಿಗೆ ಸಾಕಾರ ಆಗಿರಲಿಲ್ಲ. ಕಾರಣ ನನ್ನ ಬಳಿ ಅಷ್ಟು ಹಣ ಇರಲಿಲ್ಲ. ಇದೀಗ ಗೃಹಲಕ್ಷ್ಮಿ ಯೋಜನೆಯಿಂದ ಇದು ಸಾಕಾರಗೊಂಡಿದೆ. ನಾನು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಡವರಿಗೆ ವಿನಿಯೋಗಿಸಬೇಕೆಂದು ನಿರ್ಧರಿಸಿದೆ. ನಂತರ ಯೋಜನೆಯ ಹಣದಲ್ಲಿ ಬಡ ಹೆಣ್ಣುಮಕ್ಕಳಿಗಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ಖರೀದಿಸಿ, ಸ್ಲಂ ನಲ್ಲಿ ವಾಸವಿರುವ Gruha Lakshmi Scheme ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಗಳನ್ನು ಹಂಚುತ್ತಾ ಬಂದೆ. ಹಾಗೂ ಬೀದಿ ಬದಿ ವ್ಯಾಪಾರ ಮಾಡುವ ವೃದ್ಧ ಮಹಿಳೆಯರಿಗೆ ಬಿಸಿಲು, ಮಳೆಗೆ ನೆರವಾಗಲು ಕೊಡೆಗಳನ್ನು ನೀಡಿದೆ ಮತ್ತು ಅಂಧರ ಶಾಲೆಯ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನು ನೀಡಿದ್ದು ಯೋಜನೆಯ ಹಣವನ್ನು ಸಮಾಜ ಸೇವೆಗೆಂದು ಮೀಸಲಿಟ್ಟಿದ್ದೇನೆ. ಈ ರೀತಿಯಾದ ಸಮಾಜ ಸೇವೆಯಿಂದಾಗಿ ನನ್ನಲ್ಲಿ ಒಂದು ರೀತಿಯ ಸಮಾಧಾನ ಮತ್ತು ಸಾರ್ಥಕ ಭಾವ ಮೂಡಿದೆ. ಇಂತಹ ಉತ್ತಮ ಯೋಜನೆ ನೀಡಿದ ಸರ್ಕಾರಕ್ಕೆ ನನ್ನ ಧನ್ಯವಾದಗಳು.
-ಅನುಪಮಾ ಎಸ್, ವಿನೋಬನಗರ, ಶಿವಮೊಗ್ಗ ದೂರವಾಣಿ ಸಂಖ್ಯೆ:9901594441