Sunday, March 1, 2026
Sunday, March 1, 2026
Home Blog Page 302

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

0

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕ
ಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ. ರಾಜೇಶ್ ಕೀಳಂಬಿ ಅವರು ಡಾ.ಪುನೀತ್ ರಾಜ್ ಕುಮಾರ್ ಸ್ಮರಣೆಯಲ್ಲಿ‌ ನೀಡುವ ಚೊಚ್ಚಲ ನಿರ್ಮಾಪಕ ಪ್ರಶಸ್ತಿ‌ಗೆ ಭಾಜನರಾಗಿದ್ದಾರೆ. ಮುಂದಿನ ಅನಿಸಿಕೆಗಳನ್ನ ಅವರ ನಿರೂಪಣೇಯೇ ತಿಳಿಸಿದೆ ಕಳೆದ ಭಾನುವಾರ ಜೀವನದ ಅವಿಸ್ಮರಣೀಯ ದಿನ! ಸಿನೆಮಾ ಪತ್ರಕರ್ತರು ಕೊಡಮಾಡುವ ಚಂದನವನ ಕ್ರಿಟಿಕ್ಸ್ ಅವಾರ್ಡ್ಸ್ ಸಮಾರಂಭದಲ್ಲಿ ಅತ್ಯುತ್ತಮ ಚೊಚ್ಚಲ ನಿರ್ಮಾಪಕ ಪ್ರಶಸ್ತಿ ಪಡೆದಿರುವುದಕ್ಕೆ ಇಷ್ಟೆಲ್ಲ ಸಂಭ್ರಮ ಪಡಲು ಅನೇಕ ಕಾರಣಗಳಿವೆ!! ನನ್ನ ಪಾಲಿನ ಆದರ್ಶ ನಟ ಡಾ|| ಪುನೀತ್ ರಾಜ್ ಕುಮಾರ್ ಅವರ ಹೆಸರಿನಲ್ಲಿ ಈ ಪ್ರಶಸ್ತಿ ಇರುವುದು ನನ್ನ ಹೆಮ್ಮೆಗೆ ಪ್ರಮುಖ ಕಾರಣ.

Rajesh Keelambi ನನ್ನ ಮತ್ತೊಬ್ಬ ನೆಚ್ಚಿನ ನಟ ಗೋಪಾಲಕೃಷ್ಣ ದೇಶಪಾಂಡೆ ಸರ್ ಗೆ ನಮ್ಮ ಶಾಖಾಹಾರಿ ಸಿನಿಮಾದ ಅತ್ಯುತ್ತಮ ನಟನೆಗಾಗಿ ಪ್ರಶಸ್ತಿ ಸಿಕ್ಕಿರುವುದು Cherry on the cake! ನಮ್ಮ ಶಾಖಾಹಾರಿ ಸಿನಿಮಾ ಏಳು ವಿಭಾಗಗಳಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಂತೂ Over the moon ಅನುಭವ! ಪ್ರಶಸ್ತಿಯ ಸಮ ಭಾಗಿದಾರಳಾದ preetiya ತಂಗಿ Ranjini Prasanna ಗೆ ಕೂಡ hearty congratulations.. ಶಾಖಾಹಾರಿಯ ಈ ಎಲ್ಲ ಸಾಧನೆಗಾಗಿ Sandeep Sunkad ಮತ್ತು ಇಡೀ ಚಿತ್ರತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಈ ಪ್ರಶಸ್ತಿಗಳು ಚಿತ್ರತಂಡದ ಪರಿಶ್ರಮಕ್ಕೆ ಸಮರ್ಪಿತ! ಅಂದಹಾಗೆ ಇಡೀ ಪ್ರಶಸ್ತಿಪ್ರದಾನ ಸಮಾರಂಭವನ್ನು ಅಚ್ಚುಕಟ್ಟಾಗಿ ಆಯೋಜಿಸಿ, ನಿರ್ವಹಿಸಿದ Sharanu Hullur ಸರ್ ಮತ್ತು ತಂಡಕ್ಕೆ Hats off!!

ಶಾಖಾಹಾರಿಯ ಯಾತ್ರೆಯಲ್ಲಿ ಕೈಜೋಡಿಸಿದ ಸಮಸ್ತರಿಗೂ ಕೋಟಿ ನಮನಗಳನ್ನ ರಾಜೇಶ್ ಕೀಳಂಬಿ ಅರ್ಪಿಸಿದ್ದಾರೆ

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

0

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜರುಗಿದ ಶ್ರೀ ಹಿರಿಯೂರು ಕೃಷ್ಣಮೂರ್ತಿರವರ “ಕೃಷ್ಣ ಸ್ಮೃತಿ” ಎಂಬ ಸಂಸ್ಮರಣಾ ಕೃತಿಯ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು.

HK ಯಾವರು,ಮೇಷ್ಟ್ರು, ಎಂದೇ ಖ್ಯಾತರಾಗಿದ್ದದ ಶ್ರೀ ಹಿರಿಯೂರು ಕೃಷ್ಣಮೂರ್ತಿ ಅವರದು ವಿಬಿನ್ನವಾದ ವ್ಯಕ್ತಿತ್ವ ಅಂತಹ ಅಪರೂಪದ ಸಂಘಟಕರ ನೆನಪುಗಳನ್ನು ಚಿರವಾಗಿಸಲು, ಅವರ ಜೀವನದ ಸಾರ್ಥಕತೆಯ ನೆನಪಿಗಾಗಿ ಅವರೊಂದಿಗೆ ಒಡನಾಟವಿದ್ದ ಅನೇಕರು ಬರೆದಿರುವ ಲೇಖನಗಳನ್ನು ಒಳಗೊಂಡ ಕೃತಿ “ಕೃಷ್ಣಸ್ಮೃತಿ”

ಸಂಸ್ಮರಣಾ ಕೃತಿಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರ ಕಾರ್ಯವಾಹ ಶ್ರೀ ದತ್ತಾತ್ರೇಯ ಹೊಸಬಾಳೆ ಅವರು ಬಿಡುಗಡೆಗೊಳಿಸಿ, ಹಿರಿಯೂರು ಕೃಷ್ಣಮೂರ್ತಿರವರ ಕಾರ್ಯಶೈಲಿ ಮತ್ತು ವ್ಯಕ್ತಿತ್ವವನ್ನು ಸ್ಮರಿಸಿದರು.

Shimog News ಕಾರ್ಯಕ್ರಮದಲ್ಲಿ ಶ್ರೀಮತಿ ಉಮಾ ಹಿರಿಯೂರು ಕೃಷ್ಣಮೂರ್ತಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೇಷ್ಠ ಪ್ರಚಾರಕರಾದ ಶ್ರೀ ಸು. ರಾಮಣ್ಣ, ಜೇಷ್ಠ ಕಾರ್ಯಕರ್ತರಾದ ಭ.ಮ ಶ್ರೀಕಂಠ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ, ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಡಿ.ಎಚ್ ಶಂಕರಮೂರ್ತಿ, ಕೇಂದ್ರೀಯ ವಿಶ್ವವಿದ್ಯಾಲಯ ಒರಿಸ್ಸಾದ ಕುಲಪತಿಗಳಾದ ಶ್ರೀ ಪಿ.ವಿ ಕೃಷ್ಣ ಭಟ್, ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಕೆಎಸ್ ಈಶ್ವರಪ್ಪ, ಪ್ರಾಂತ್ಯ ಸಹ ಕಾರ್ಯವಾಹರಾದ ಶ್ರೀ ಪಟ್ಟಾಭಿರಾಂ ರವರು ಮಾತನಾಡಿ ಹಿರಿಯೂರು ಕೃಷ್ಣಮೂರ್ತಿಯವರ ಕಾರ್ಯವೈಕರಿ ಮತ್ತು ಸಂಘಟನಾ ಚತುರತೆ ಬಗ್ಗೆ ಮಾತನಾಡಿ ಅವರ ಈ ಗುಣ ಸ್ವಭಾವಗಳನ್ನು ಮುಂದಿನ ಪೀಳಿಗೆಯು ಕೂಡ ಅನುಸರಿಸುವಂತೆ ಸಭಿಕರಲ್ಲಿ

. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು, ಸಾಹಿತಿಗಳು, ವಿದ್ವಾಂಸರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು

ವರದಿ ಸೌಜನ್ಯ: ಎಸ್.ದತ್ತಾತ್ರಿ
ರಾಜ್ಯ ಬಿಜೆಪಿ ವಿವಿಧ ಪ್ರಕೋಷ್ಟಗಳ ಅಧ್ಯಕ್ಷರು

Rotary Club Shimoga Midtown ನವೀನ ತಂತ್ರಜ್ಞಾನ & ಕೃತಕ ಬುದ್ಧಿಮತ್ತೆ ಅಳವಡಿಕೆ. ಹಣಕಾಸು ಕ್ಷೇತ್ರದಲ್ಲಿ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಅವಶ್ಯ- ಎಸ್.ರುದ್ರೇಗೌಡ

0

Rotary Club Shimoga Midtown ಉದ್ಯಮ ಮತ್ತು ಕೈಗಾರಿಕೆಯ ಆಡಳಿತದಲ್ಲಿ ನವೀನ ಹಣಕಾಸು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಅಳವಡಿಕೆಯಿಂದ ಹಣಕಾಸು ಮತ್ತು ಲೆಕ್ಕಪತ್ರ ನಿರ್ವಹಣೆ ಕ್ಷೇತ್ರದಲ್ಲಿ ಉಂಟಾಗುತ್ತಿರುವ ವ್ಯಾಪಕ ಪರಿಣಾಮದ ಬಗ್ಗೆ ಹೆಚ್ಚಿನ ಅರಿವು ಹೊಂದಿರುವುದು ಅವಶ್ಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ಆಯೋಜಿಸಿದ್ದ ಹಣಕಾಸು ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ನಿರಂತರ ನವೀಕರಣಗೊಳ್ಳುತ್ತಿರುವ ತಂತ್ರಜ್ಞಾನವನ್ನು ವ್ಯವಹಾರಗಳಲ್ಲಿ ಅಳವಡಿಸಿಕೊಂಡು ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು ಎಂದು ತಿಳಿಸಿದರು.

50 ವರ್ಷದಲ್ಲಿ ತಂತ್ರಜ್ಞಾನವು ಸಾಕಷ್ಟು ಬದಲಾವಣೆಗೆ ಒಳಗಾಗಿದ್ದು, ನವೀನ ತಂತ್ರಜ್ಞಾನವನ್ನು ಅಳವಡಿಸಿ ಅದಕ್ಕೆ ಹೊಂದಿಕೊಳ್ಳುವವರು ಉದ್ಯಮದಲ್ಲಿ ಯಶಸ್ಸು ಸಾಧಿಸುತ್ತಾರೆ. ಈ ರೀತಿಯ ಸೆಮಿನಾರ್ ಉದ್ಯಮಿಗಳಿಗೆ ಸಹಕಾರಿಯಾಗುತ್ತದೆ ಎಂದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಸರ್ಕಾರದ ಆಡಳಿತದಲ್ಲಿ ಹಣಕಾಸು ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ವ್ಯಾಪಕ ಅಳವಡಿಕೆಯಿಂದ ವಾಣಿಜ್ಯ ಮತ್ತು ಕೈಗಾರಿಕೋದ್ಯಮಗಳು, ಗ್ರಾಹಕರಲ್ಲಿನ ಹಣಕಾಸು ಕಾರ್ಯಚರಣೆ, ಲೆಕ್ಕಪತ್ರ ನಿರ್ವಹಣೆ ಹಾಗೂ ವ್ಯವಹಾರ ನಡೆಸುವ ವಿಧಾನದಲ್ಲಿನ ಧನಾತ್ಮಕ ಬದಲಾವಣೆ ಆಗುತ್ತದೆ. ಹಣಕಾಸು ತಂತ್ರಜ್ಞಾನ ಹಾಗೂ ಡಿಜಿಟಲ್ ಹಣದ ಆವಿಷ್ಕಾರದಿಂದ ಬ್ಯಾಂಕಿಂಗ್ ವ್ಯವಹಾರವು ವೇಗಗತಿಯಲ್ಲಿ ಬೆಳೆಯುತ್ತಿದೆ ಎಂದರು.

Rotary Club Shimoga Midtown ಸನ್ನದು ಲೆಕ್ಕಪರಿಶೋಧಕ ಎನ್.ಎಲ್.ಪ್ರಸಾದ್ ಮಾತನಾಡಿ, ನವೀನ ತಂತ್ರಜ್ಞಾನಕ್ಕೆ ಹೊಂದಿಕೊಳ್ಳದೆ ಇರುವವರಿಗೆ ಮಾತ್ರ ವೃತ್ತಿಯಲ್ಲಿ ಮುಂದುವರಿಯುವುದು ಕಷ್ಟವಾಗಲಿದೆ ಎಂದರು. ಎಸ್‌ಐಆರ್‌ಸಿ ಮಾಜಿ ಚೇರ್ಮನ್ ಎಸ್.ರಮೇಶ್ ಮತ್ತು ಐಸಿಎಂಎ ಮೈಸೂರು ಚೇರ್ಮನ್ ಪುರುಷೋತ್ತಮ್ ಮಾತನಾಡಿದರು.

ವಿಷಯ ತಜ್ಞ ವಿ.ಗುರುಪ್ರಸಾದ್ ಮಾತನಾಡಿ, ಹಣಕಾಸು ಮತ್ತು ಕೃತಕ ಬುದ್ಧಿಮತ್ತೆಯ ನಿಯಂತ್ರಕ ತಂತ್ರಜ್ಞಾನದ ಹತೋಟಿಯನ್ನು ಸರ್ಕಾರವು ಆಡಳಿತದಲ್ಲಿ ಹೇಗೆ ವ್ಯಾಪಕವಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿನ ಲೆಕ್ಕಪತ್ರ ನಿರ್ವಹಣೆ ಹಾಗೂ ಹಣಕಾಸು ವಲಯದಲ್ಲಿ ಹೇಗೆ ಬದಲಾವಣೆ ಆಗುತ್ತಿದೆ ಎಂಬುದನ್ನು ಪಿಪಿಟಿ ಮೂಲಕ ವಿಶ್ಲೇಷಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಪ್ರೋಗ್ರಾಮ್ ಕಮಿಟಿ ಚೇರ್ಮನ್ ಶರತ್, ನಿರ್ದೇಶಕರಾದ ಜಿ.ವಿ.ಕಿರಣ್ ಕುಮಾರ್, ವಸಂತ್ ಹೋಬಳಿದಾರ್, ಪ್ರದೀಪ್ ವಿ ಎಲಿ, ಲಕ್ಷ್ಮೀದೇವಿ ಗೋಪಿನಾಥ್, ವಿ.ಕೆ.ಜೈನ್, ಕೆ.ಬಿ.ಶಿವಕುಮಾರ್, ರವಿ ಪ್ರಕಾಶ್ ಜನ್ನಿ, ವಿನೋದ್ ಕೆ. ಜಿ, ಬಿ.ಸುರೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ಕೆ.ವಿ.ವಸಂತ್ ಕುಮಾರ್, ಅಶ್ವಥ್ ನಾರಾಯಣ್ ಶೆಟ್ಟಿ, ಡಿ.ಎಂ.ಶಂಕ್ರಪ್ಪ, ಎನ್.ಗೋಪಿನಾಥ್, ಹಾಗೂ ಎಂ.ರಾಜು, ಕಮಲಾಕ್ಷರಪ್ಪ, ಸನ್ನದು ಲೆಕ್ಕ ಪರಿಶೋಧಕರು, ಲೆಕ್ಕ ಪರಿಶೋಧಕರು, ತೆರಿಗೆ ಸಲಹೆಗಾರರು, ಲೆಕ್ಕಿಗರು, ಕೈಗಾರಿಕಾ ಸಂಘಗಳ ಪದಾಧಿಕಾರಿಗಳು, ಸಂಘದ ಸಂಯೋಜಿತ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಜೆ ಎನ್ ಎನ್ ಸಿ ಇ ಸಿಬ್ಬಂದಿ ಭಾಗವಹಿಸಿದ್ದರು.

Madhu Bangarappa ಓಪಿಎಸ್ ಬಗ್ಗೆ ಶೀಘ್ರದಲ್ಲೇ ಸೀಎಂ & ಡಿಸಿಎಂ ಅವರಿಂದ ನಿರ್ಧಾರ ಘೋಷಣೆಯಾಗಲಿದೆ- ಮಧು ಬಂಗಾರಪ್ಪ

0

Madhu Bangarappa ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( ಓಪಿಎಸ್)ಯನ್ನು ಆದಷ್ಟು ಬೇಗ ಅನುಷ್ಟಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು‌ ಬಂಗಾರಪ್ಪ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಜಿಲ್ಲಾ ಶಾಖೆ ಶಿವಮೊಗ್ಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ನೆಹರು ಕ್ರೀಡಾಂಗಣ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿದರು.
ಸರ್ಕಾರದ ಕಾನೂನುಗಳು, ಯೋಜನೆಗಳು, ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವ ಸರ್ಕಾರಿ ನೌಕಕರಾದ ನೀವು ಆರೋಗ್ಯದಿಂದ, ಚೈತನ್ಯದಿಂದ ಇರಬೇಕು. ಇದಕ್ಕೆ ಇಂತಹ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ.
ಮಾಜಿ‌ ಮುಖ್ಯಮಂತ್ರಿಗಳಾದ ಬಂಗಾರಪ್ಪನವರು ಜಾರಿಗೊಳಿಸಿದ ಗ್ರಾಮೀಣ ಕೃಪಾಂಕದಿಂದ ಹೆಚ್ಚು ಜನ ಸರ್ಕಾರಿ ನೌಕರಿಯನ್ನು ಪಡೆಯುವಂತಾಯಿತು. ಹಾಗೂ ಅವರು ಸಂಘಕ್ಕೆ ಬುನಾದಿ ಹಾಕಿಕೊಟ್ಟರು ಎಂದು ಸ್ಮರಿಸಿದ ಅವರು 2017 ರಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇದೇ ಸ್ಥಳಕ್ಕೆ ಬಂದಿದ್ದು ಕ್ರೀಡಾಕೂಟವನ್ನು ಉದ್ಘಾಟಿಸಿದ್ದರು. ಹವಾಮಾನ ವೈಪರೀತ್ಯಗಳಿಂದ ಇಂದು ಬರಲು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಬಂದು ನೌಕರರನ್ನು ಉದ್ದೇಶಿಸಿ ಮಾತನಾಡುವರು.
ಗ್ಯಾರಂಟಿ ಯೋಜನೆಗಳ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದಂತಹ ಎನ್ ಪಿ ಎಸ್ ಬದಲು ಓಪಿಸ್ ನ್ನು ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಜಾರಿಗೊಳಿಸುವ ಬಗ್ಗೆ ನಿರ್ಧಾರ ಪ್ರಕಟಿಸುವರು ಎಂದು ತಿಳಿಸಿದರು.
೬ ನೇ ವೇತನ ಮತ್ತು ೭ ನೇ ವೇತನ ಆಯೋಗವನ್ನು ಸಹ ಮಾನ್ಯ ಮುಖ್ಯ ಮಂತ್ರಿಗಳು ಜಾರಿಗೊಳಿಸಿರುವುದು ಹೆಮ್ಮೆಯ ವಿಷಯ ಎಂದರು.
Madhu Bangarappa ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಮಾಜಿ‌ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ನೌಕರರ ಪರವಾಗಿ ಸುಮಾರು ೨೪ ಆದೇಶ ಜಾರಿ ಮಾಡಿದ್ದರು, ನೌಕರರ ಭವನಕ್ಕೆ ಒತ್ತು ನೀಡಿದ್ದರು. ನೌಕರರು ಒತ್ತಡರಹಿತರಾಗಿ, ಉತ್ತಮ ಸೇವೆ ನೀಡಬೇಕು. ನಿಮ್ಮಲ್ಲೂ ಅನೇಕ ಪ್ರತಿಭೆ ಇದ್ದು ಅದು ಹೊರಹೊಮ್ಮಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದ ಅವರು ಇ- ಆಡಳಿತ ನಂ. ೧ ಸ್ಥಾನ ಪಡೆಯಲು ನೀವು ಕಾರಣ ಎಂದು ಶ್ಲಾಘಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ‌ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ನೌಕರರು ಒತ್ತಡ ರಹಿತವಾಗಿ ಗುಣಮಟ್ಟದ ಸೇವೆ ಸಲ್ಲಿಸಬೇಕು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರ ಸಂಘವು ಕ್ರೀಡಾ,ಸಾಂಸ್ಕೃತಿಕ ಚಟುವಟಿಕೆಗಳನ್ನು ಸಕ್ರಿಯವಾಗಿ ಮಾಡುತ್ತಾ ಬಂದಿದೆ.
ಈ ಕ್ರೀಡಾಕೂಟಕ್ಕೆ ರೂ. ೩ ಕೋಟಿ ಅನುದಾನವನ್ನು ಸರ್ಕಾರ ನೀಡುವ ಭರವಸೆ ನೀಡಿದೆ. ಸಂಘಟನೆ ಸದೃಢವಾಗಿದೆ. ಪ್ರಸ್ತುತ ರೂ. 25 ಕೋಟಿ ಹಣ ಇದೆ.ಕಳೆದ ೫ ವರ್ಷದಲ್ಲಿ ೨೫ ಆದೇಶವಾಗಿದ್ದು, ನೌಕರರು ಸಂಘದ ಮೇಲೆ ನಂಬಿಕೆ, ವಿಶ್ವಾಸವನ್ನು ಇಟ್ಟುಕೊಂಡಿದ್ದಾರೆ.
ಆರೋಗ್ಯವೇ ಭಾಗ್ಯ. ಕ್ರೀಡೆಯಿಂದ ಉತ್ತಮ ಆರೋಗ್ಯ ಸಾಧ್ಯ. ಸಹಕಾರ, ಹೊಂದಾಣಿಕೆ, ಒಗ್ಗಟ್ಟು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಿಂದ ಸಾಧ್ಯ ಎಂದರು.
ರಾಜ್ಯ ಸರ್ಕಾರ ೭ ನೇ ವೇತನ ಜಾರಿ ಮಾಡಿರುವುದಕ್ಕೆ ಅಭಿನಂದನೆಗಳು. ಜೂನ್ ನಿಂದ ನೌಕರರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆ ಜಾರಿಗೆ ಬರಲಿದ್ದು ಅದಕ್ಕೂ ಸಹ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕರ್ತವ್ಯನಿರತ ನೌಕರನ ಸಾವು ಸಂಭವಿಸಿದರೆ ರೂ. ೧ ಕೋಟಿ ಕುಟುಂಬಕ್ಕೆ ನೀಡುವ ಯೋಜನೆಯನ್ನು ಸಂಘದಿಂದ ಜಾರಿ ಮಾಡಲಾಗುತ್ತಿದೆ. ಸರ್ಕಾರಿ ನೌಕರರಿಗೆ ಎನ್ ಪಿ ಎಸ್ ಬದಲು ಓಪಿಎಸ್ ಜಾರಿ ಮಾಡಿದಲ್ಲಿ ನೌಕರರು ಸರ್ಕಾರಕ್ಕೆ ಋಣಿಯಾಗಿರುತ್ತಾರೆ. ನಾವು ಅಭಿವೃದ್ದಿಯಲ್ಲಿ ಮುಂದಿದ್ದೇವೆ. ಆದರೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಇನ್ನೂ ಜಾರಿ ಆಗಿಲ್ಲ. ೨೦೨೬-೨೭ ನೇ ಸಾಲಿನಲ್ಲಿ ಕೇಂದ್ರ ಮಾದರಿ‌ ವೇತನ ಆಗಬೇಕು ಎಂದು ಕೋರುತ್ತಾ ಹಿಂದಿನ ಹಾಗೂ ಪ್ರಸ್ತುತದ ಮುಖ್ಯಮಂತ್ರಿಗಳು ನೌಕರರ ಅಭ್ಯುದಯಕ್ಕೆ ವೇತನ ಆಯೋಗಗಳನ್ನು‌ ಜಾರಿ ಮಾಡಿದ್ದು, ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಸಕರಾದ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ, ಬಿ.ಕೆ.ಸಂಗಮೇಶ್,
ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್, ಭಾರತಿ ಶೆಟ್ಟಿ, ಬಲ್ಕೀಶ್ ಬಾನು ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಮಾತನಾಡಿ, ೫.೫ ಲಕ್ಷ ಜನ ರಾಜ್ಯ ಸರ್ಕಾರಿ ನೌಕರರಿದ್ದು ೧೧ ಸಾವಿರ ಜನರು ರಾಜ್ಯ ಮಟ್ಟದ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಜಯ ಗಳಿಸಿದವರು ರಾಷ್ಟ್ರ ಮಟ್ಟದಲ್ಲಿ‌ ಸ್ಪರ್ಧಿಸಲಿದ್ದಾರೆ. ನೌಕರರು ಮುಖ್ಯವಾಗಿ ತಾಲ್ಲೂಕು ಮಟ್ಟದಲ್ಲಿ ಸಕ್ರಿಯವಾಗಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಎಲ್ಲ ನೌಕರರು ಒಂದಿಲ್ಲೊಂದು ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು. ಸಂಘ ಸಹ ಇದಕ್ಕೆ ಸಹಕಾರಿಯಾಗಿದ್ದು ನೌಕರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ
ಶ್ರೇಷ್ಠ ಸಾಧನೆ ಮಾಡಿದ ರಾಜ್ಯ ಸರ್ಕಾರಿ ನೌಕರರನ್ನು ಸನ್ಮಾನಿಸಿ , ಅಭಿನಂದಿಸಲಾಯಿತು.
ರಾಜ್ಯ ಭೋವಿ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಸೂಡಾ ಅಧ್ಯಕ್ಷ ಸುಂದರೇಶ್, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಹೇಮಂತ್, ಎಸ್ ಪಿ ಮಿಥುನ್ ಕುಮಾರ್, ಇತರೆ ಅಧಿಕಾರಿಗಳು, ಮುಖಂಡರು
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ, ತಾಲ್ಲೂಕು
ಪದಾಧಿಕಾರಿಗಳು ಪಾಲ್ಗೊಂಡಿದ್ದರು.

S N Channabasappa ಮಥುರಾ ಪ್ಯಾರಡೈಸ್ ಎಂದರೆ ಶಿವಮೊಗ್ಗದ ಅಭಿವೃದ್ದಿಗೆ ಪೂರಕ ಸಂಸ್ಥೆ- ಎಸ್.ಎನ್.ಚನ್ನಬಸಪ್ಪ

0

S N Channabasappa ಮಥುರಾ ಪ್ಯಾರಡೈಸ್ ಎಂದರೆ ಶಿವಮೊಗ್ಗದ ಅಭಿವೃದ್ಧಿಗೆ ಪೂರಕ ಸಂಸ್ಥೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾನುವಾರ ಸಂಜೆ ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಥುರಾ ರಜತೋತ್ಸವ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಥುರಾ ಎಂದರೆ ಗೋಪಿ, ಗೋಪಿ ಎಂದರೆ ಅದು ಮಥುರಾವಾಗಿದೆ. ಇದು ಅನ್ವರ್ಥ ನಾಮ ಎಂಬಂತಾಗಿದೆ‌‌. ಸಂಸ್ಥೆ ಹೆಸರಿನ ಜೊತೆಗೆ ರೂಪಿತವಾದ ವ್ಯಕ್ತಿ ಎಂದರೆ, ಅದು ಮಥುರಾ ಗೋಪಿನಾಥ್ ಎಂದು ಅಭಿಪ್ರಯಿಸಿದರು. ಶಿವಮೊಗ್ಗದ ಮುಖಂಡರು ಹಾಗೂ ನಾಗರೀಕರಿಗೆ ಮಥುರಾ ಪ್ಯಾರಡೈಸ್ ಅವಿನಾಭಾವ ಸಂಬಂಧವಿದ್ದು, ಕಳೆದ 25 ವರ್ಷಗಳಿಂದ ಮಥುರಾ ಕೇವಲ ಉದ್ಯಮವಾಗಿ ಬೆಳೆದು ನಿಲ್ಲದೇ, ಸಾರ್ವಜನಿಕವಾಗಿ ಮೈಗೂಡಿಸಿಕೊಂಡು ಮುಂದುವರೆದಿದೆ ಎಂದರು. 25 ನೇ ವರ್ಷಕ್ಕೆ 36 ಕಾರ್ಯಕ್ರಮಗಳು ರೂಪಿಸಿದ್ದು, ಅರ್ಥಗರ್ಭಿತವಾಗಿದೆ. ಬಹಳ ಸಂಸ್ಥೆಗಳಿಗೆ ಮಥುರಾ ಗೋಪಿ ನೆರವಾಗಿರುವುದು ಸ್ಮರಣೀಯ ಎಂದರು.

ಕಾರ್ಯಕ್ರಮದಲ್ಲಿ ಶುಭ ಕೋರಿದ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಗೋಪಿಯವರ ಮಥುರಾ ಸಂಸ್ಥೆ 25 ವರ್ಷಗಳಾಗಿದ್ದು, ಮರೆತೇ ಹೋಗಿದೆ. ಮೊನ್ನೆ ಮೊನ್ನೆ ಆರಂಭವಾದಂತಿದೆ. ಮಥುರಾ ಸಂಸ್ಥೆ ಸಾಕಷ್ಟು ಚಟುವಟಿಕೆ ಮಾಡುತ್ತಿದೆ. ಗೋಪಿಯವರ ಈ ಸಂಸ್ಥೆ ಚಟುವಟಿಕೆಗಳ ಕೇಂದ್ರವಿದ್ದಂತೆ. ತಮ್ಮ ಸ್ನೇಹಿತರನ್ನು ಜೋಡಿಸಿಕೊಂಡು ಹಲವಾರು ಚಟುವಟಿಕೆಗಳನ್ನು ಮಾಡುತ್ತಾ ಬಂದಿದ್ದಾರೆ. ಶಿವಮೊಗ್ಗದ ಅಭಿವೃದ್ಧಿ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಎಂದರು. ಗೋಪಿ ಹಾಗೂ ಲಕ್ಷ್ಮಿದೇವಿ ಗೋಪಿನಾಥ್ ಅವರು, ಆದರ್ಶ ದಂಪತಿ ಇದ್ದಂತೆ. ಇಬ್ಬರೂ ಕೂಡ ಉತ್ತಮವಾಗಿ ಹಲವಾರು ಕಾರ್ಯಕ್ರಮ ರೂಪಿಸಿದ್ದಾರೆ. ಅನೇಕ ಸಂಸ್ಥೆಗಳಿಗೆ ಇವರಿಬ್ಬರೂ ನೆರವಾಗಿದ್ದಾರೆ ಎಂದರು.

S N Channabasappa ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಡಿ.ಎಸ್. ಅರುಣ್, ಮಥುರಾ ಸಂಸ್ಥೆ ಬೆಳೆದು ಬಂದ ಹಾದಿ ಸ್ಮರಿಸಿದರು. ಮೊಟ್ಟ ಮೊದಲ ಬಾರಿಗೆ ಮಥುರಾ ಪ್ಯಾರಡೈಸ್ ಸಂಸ್ಥೆಯಲ್ಲಿ ಹೊಸ, ಹೊಸ ಚಿಂತನೆಗಳು, ಹೋರಾಟದ ರೂಪು, ರೇಷೆ ಸಾಕಾರಗೊಂಡಿವೆ. ಮಥುರಾ ಹಲವರಿಗೆ ಆಶ್ರಯ ನೀಡಿದ ಸ್ಥಳವಾಗಿದೆ. ಕೇವಲ ವ್ಯವಹಾರದ ದೃಷ್ಟಿಯಿಂದ ಮಾತ್ರ ನೋಡದೇ ಸಾಮಾಜಿಕವಾಗಿ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಮಥುರಾ ಪ್ಯಾರಡೈಸ್ ನಲ್ಲಿ ಉಚಿತ ಕಾಫಿ, ಟೀ, ಉಚಿತ ಸಭೆಗಳು ನಡೆದಿದ್ದು, ಇವುಗಳು ಕೂಡ ಶಿವಮೊಗ್ಗಕ್ಕೆ ಅನೇಕ ಕೊಡುಗೆ ನೀಡಿದೆ ಎಂದು ಸ್ಮರಿಸಿದರು. ಅಲ್ಲದೇ, ಶಿವಮೊಗ್ಗದ ಬೆಳವಣಿಗೆಗೆ ಮಥುರಾ ಪ್ಯಾರಡೈಸ್ ಪ್ರಮುಖ ಪಾತ್ರ ವಹಿಸಿದೆ ಎಂದರು.

ಈ ವೇಳೆ ಸಂಸ್ಥೆ ಪರವಾಗಿ ಧನ್ಯವಾದ ಅರ್ಪಿಸಿದ ಎನ್. ಗೋಪಿನಾಥ್, ನನಗೆ ಗೌರವ ನೀಡಿರುವುದಕ್ಕೆ ಧನ್ಯವಾದ ಅರ್ಪಿಸಿದರು. ನಮ್ಮ ಕನಸಿನ ಶಿವಮೊಗ್ಗ ಸಂಸದಥೆ ಮೂಲಕ ಶಿವಮೊಗ್ಗದ ಮೆಡಿಕಲ್ ಕಾಲೇಜು ಹೋರಾಟ ಆರಂಭವಾಗಿದ್ದೆ ಇಲ್ಲಿಂದ. ನಮ್ಮ ಕನಸಿನ ಶಿವಮೊಗ್ಗದಿಂದಲೇ ಅನೇಕ ಕನಸುಗಳು ಸಾಕಾರಗೊಂಡಿವೆ. ರಾಜಕಾರಣಿಗಳು, ನಮ್ಮ ಪದಾಧಿಕಾರಿಗಳ ವಿಶೇಷ ಪ್ರಯತ್ನದಿಂದ ಅನೇಕ ಕಾರ್ಯಕ್ರಮಗಳು ಯಶಸ್ವಿಯಾಗಿವೆ ಎಂದು ಸ್ಮರಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮಥುರಾ ಸಂಸ್ಥೆಯ ಲಕ್ಷ್ಮಿದೇವಿ ಗೋಪಿನಾಥ್, ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ಆ.ನಾ. ವಿಜೇಂದ್ರ, ಜಿ. ವಿಜಯಕುಮಾರ್ ಸೇರಿದಂತೆ ಹಲವರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಜತೋತ್ಸವ ಸಮಿತಿ ಅಧ್ಯಕ್ಷ ವಸಂತಕುಮಾರ್ ಹೋಬ್ಳಿದಾರ್ ವಹಿಸಿದ್ದರು.

Sri Venkataramana Temple Rathotsava ಮೇ19. ಪಿಳ್ಳಂಗಿರಿ ಶ್ರೀ ವೆಂಕಟರಮಣ ರಥೋತ್ಸವ

0

Sri Venkataramana Temple Rathotsava ನಗರದ ಸಮೀಪ ಹೊಳೆಹೊನ್ನೂರು ರಸ್ತೆಯಲ್ಲಿರುವ ಪಿಳ್ಳಯ್ಯನಗಿರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವರ ಬ್ರಹ್ಮ ರಥೋತ್ಸವ ಮೇ.೧೯ ೨೦೨೫ರಂದು ಸೋಮವಾರ ನಡೆಯಲಿದೆ.
ಮೇ.೧೮ರಿಂದ ೨೧ರಿಂದ ಶ್ರೀ ಲಕ್ಷ್ಮಿ ವೆಂಕಟರಮಣ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆಯಲಿದ್ದು, ನಾಳೆ ಮೇ೧೮ರ ಭಾನುವಾರ ಬೆಳಗ್ಗೆ ೯ಗಂಟೆಗೆ ನಿತ್ಯಸೇವೆ, ದ್ವಾರತೋರಣ, ಕುಂಭಾರಾಧನೆ ಹೋಮ, ಧ್ವಜಾರೋಹಣ, ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಾಗಲಿದೆ. ಅಂದು ಸಂಜೆ ೬ಗಂಟೆಗೆ ಗರುಡೋತ್ಸವ, ವಸಂತ ಸೇವೆ, ಶ್ರೀನಿವಾಸ ಕಲ್ಯಾಣೋತ್ಸವ ನಂತರ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಿದೆ.
ಮೇ ೧೯ರ ಸೋಮವಾರದಂದು ಬೆಳಗ್ಗೆ ೭.೩೦ಕ್ಕೆ ನಿತ್ಯಸೇವೆ,
Sri Venkataramana Temple Rathotsava ಯಾಗ ಶಾಲೆಯಲ್ಲಿ ರಥಾಂಗ ಹೋಮಾದಿಗಳು ಜರುಗಲಿದ್ದು ೯ಗಂಟೆಯಿಂದ ಮಂಟಪೋತ್ಸವದ ನಂತರ ಅಭಿಜಿನ್ ಮಹೂರ್ತದಲ್ಲಿ ೧೨ಗಂಟೆಗೆ ಶ್ರೀಯವರ ರಥಾರೋಹಣ ಮತ್ತು ರಥೋತ್ಸವ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀನಿವಾಸ ಕಲ್ಯಾಣ ಹಾಗು ರಥೋತ್ಸವದಲ್ಲಿ ಪಾಲ್ಗೊಂಡು
ಶ್ರೀಲಕ್ಷ್ಮಿ ವೆಂಕಟರಮಣ ದೇವರ ಕೃಪೆಗೆ ಪಾತ್ರರಾಗಬೇಕೆಂದು ಉಪವಿಭಾಗಾಧಿಕಾರಿಗಳು ಮತ್ತು ತಹಶಿಲ್ದಾರ್ ಮತ್ತು ಮುಜರಾಯಿ ಅಧಿಕಾರಿಗಳು ಅರ್ಚಕರು ಮತ್ತು ಗ್ರಾಮಸ್ಥರು ಸ್ವಾಗತ ಕೋರಿದ್ದಾರೆ.

S. N. Channabasappa ಕ್ಷೇತ್ರದ ಬೇಡಿಕೆಗಳ ಬಗ್ಗೆ ಪಶುವೈದ್ಯಕೀಯ ಇಲಾಖಾ ಸಚಿವರೊಂದಿಗೆ ಶಾಸಕ ಚೆನ್ನಿ‌ ಚರ್ಚೆ

0

S. N. Channabasappa ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಮಾನ್ಯ ಸಚಿವರಾದ ಶ್ರೀ ವೆಂಕಟೇಶ್ ಕೆ ಅವರನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗದ ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳ ಕುರಿತ ಮನವಿಗಳನ್ನು ಅವರ ಗಮನಕ್ಕೆ ತಂದರು.

ಸಲ್ಲಿಸಲಾದ ಪ್ರಮುಖ ಮನವಿಗಳ ವಿವರಗಳು ಹೀಗಿವೆ:
1. ನಿಗೂಢ ಕಾಯಿಲೆಗಳ ಅಧ್ಯಯನಕ್ಕಾಗಿ ಸಂಶೋಧನಾ ಕೇಂದ್ರ
ಜಾನುವಾರುಗಳಲ್ಲಿ ಕಾಣಿಸಿಕೊಳ್ಳುವ ನಿಗೂಢ ಹಾಗೂ ಅಪರೂಪದ ಕಾಯಿಲೆಗಳ ಅಧ್ಯಯನಕ್ಕಾಗಿ ಶಿವಮೊಗ್ಗದಲ್ಲಿಯೇ ವಿಶೇಷ ಸಂಶೋಧನಾ ಕೇಂದ್ರವೊಂದನ್ನು ಸ್ಥಾಪಿಸುವಂತೆ ಮನವಿ ಮಾಡಿದರು.
2. ಪಶು ವಿಶ್ವವಿದ್ಯಾನಿಲಯ ಅಭಿವೃದ್ಧಿಗೆ ಅನುದಾನ
ಪಶು ವಿಶ್ವವಿದ್ಯಾನಿಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳ ನಿರ್ಮಾಣ ಹಾಗೂ ಅಭಿವೃದ್ಧಿಗಾಗಿ ₹10 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡುವಂತೆ ಕೋರಿದರು.
3. ತಾಲೂಕು ಪಶುವೈದ್ಯಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣ
ಪ್ರಸ್ತುತ ತಾಲ್ಲೂಕು ಮಟ್ಟದ ಪಶುವೈದ್ಯಕೀಯ ಸೇವೆಗಳ ಬಲವರ್ಧನೆಗಾಗಿ, ಹೊಸ ಕಚೇರಿ ಕಟ್ಟಡ ನಿರ್ಮಿಸಲು ಬೇಕಾದ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
4. ಪುರಲೆಯಲ್ಲಿ ಪಶು ಕ್ಲಿನಿಕ್ ಸ್ಥಾಪನೆ
S. N. Channabasappa ಪುರಲೆಯ ಜನರಿಗೆ ಸುಲಭವಾಗಿ ಪಶು ಆರೋಗ್ಯ ಸೇವೆಗಳು ಲಭ್ಯವಾಗುವಂತೆ ಅಲ್ಲಿಗೆ ಹೊಸ ಪಶು ಕ್ಲಿನಿಕ್ ಅನ್ನು ಸ್ಥಾಪಿಸುವ ಕುರಿತು ಮನವಿ ಸಲ್ಲಿಸಿದರು.

S. N. Channabasappa ಶಾಸಕರಿಂದ ನೆಹರು ರಸ್ತೆ ಕಾಮಗಾರಿ,ಪಾರ್ಕಿಂಗ್ ವ್ಯವಸ್ಥೆ, ಬೀದಿದೀಪ ಇತ್ಯಾದಿ ಕುಂದುಕೊರತೆ ನಿವಾರಣೆ ಚರ್ಚಾ ಸಭೆ

0

S. N. Channabasappa ಇಂದು ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನೆಹರು ರಸ್ತೆ ವರ್ತಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿ,

1. ಯುಜಿಡಿ ಕಾಮಗಾರಿಗಳು: ನೆಹರು ರಸ್ತೆಯಲ್ಲಿ ಯುಜಿಡಿ ಕಾಮಗಾರಿಗಳ ಪ್ರಗತಿ ಹಾಗೂ ಪ್ರಸ್ತುತ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
2. ಟ್ರಾನ್ಸ್‌ಫಾರ್ಮರ್ ಸ್ಥಳಾಂತರ: ರಸ್ತೆಯಲ್ಲಿ ಸ್ಥಾಪಿತ ಎಲೆಕ್ಟ್ರಿಕಲ್ ಟ್ರಾನ್ಸ್‌ಫಾರ್ಮರ್‌ಗಳಿಂದ ಉಂಟಾಗುತ್ತಿರುವ ಅಡಚಣೆಗಳನ್ನು ಪರಿಹರಿಸಲು ಅವುಗಳನ್ನು ಸುರಕ್ಷಿತ ಸ್ಥಳಗಳಿಗೆ ತುರ್ತು ಆಧಾರದ ಮೇಲೆ ಸ್ಥಳಾಂತರಗೊಳಿಸಲು ತಿಳಿಸಿದರು.
3. ಪಾರ್ಕಿಂಗ್ ವ್ಯವಸ್ಥೆ: ನೆಹರು ರಸ್ತೆಗೆ ಹೊಂದಿಕೊಂಡಿರುವ ಕನ್ಸರ್ವೆನ್ಸಿ ರಸ್ತೆಗಳಲ್ಲಿ ಪಾರ್ಕಿಂಗ್ ಸೌಲಭ್ಯ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಈ ಯೋಜನೆ ಮುಂದಿನ ಕೆಲ ದಿನಗಳಲ್ಲಿ ಜಾರಿಗೊಳಿಸಲು ಬೇಕಾಗಿರುವಂತಹ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.
4. ಬೀದಿ ದೀಪಗಳ ಅಳವಡಿಕೆ: ಕನ್ಸರ್ವೆನ್ಸಿ ರಸ್ತೆಗಳ ಬೆಳಕಿನ ಕೊರತೆಯನ್ನು ನಿವಾರಣೆಗೆ ಬೀದಿ ದೀಪಗಳ ಅಳವಡಿಕೆಗೆ ಸಂಬಂಧಿಸಿದ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಆದೇಶ ಆದೇಶಿಸಿದರು.

S. N. Channabasappa ಸಭೆಯಲ್ಲಿ ಪಾಲಿಕೆ ಮತ್ತು ಮೆಸ್ಕಾಂನ ಅಧಿಕಾರಿಗಳು, ನೆಹರೂ ರಸ್ತೆ ವರ್ತಕ ಸಂಘದ ಅಧ್ಯಕ್ಷರಾದ ಬಿ.ಎ.ರಂಗನಾಥ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

CM Siddaramaiah ಈ ವರ್ಷ ₹1.20.0000 ಕೋಟಿ‌ ತೆರಿಗೆ ಸಂಗ್ರಹ ಗುರಿ‌ ಸಾಧಿಸಬೇಕು – ಸಿದ್ಧರಾಮಯ್ಯ

CM Siddaramaiah ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಅವರು
ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ.

ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ.

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿ ನಿಗದಿಪಡಿಸಲಾಗಿದ್ದು, ಹೆಚ್ಚುವರಿ 17,000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ.

CM Siddaramaiah ಈ ವರ್ಷ 4,09,000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ ನಾವು ಈ ಸವಾಲನ್ನು ಯಶಸ್ವಿಯಾಗಿ ಗೆದ್ದಿದ್ದೇವೆ. ಸರ್ಕಾರದ ಈ ಯಶಸ್ಸಿನ ಹಿಂದೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ.

ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ.

ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Dinesh Gundu Rao ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರೆಯುವ‌ ಪ್ರಸ್ತಾವನೆ ತಿರಸ್ಕೃತ. – ಸಚಿವ ದಿನೇಶ್ ಗುಂಡೂರಾವ್

0

Dinesh Gundu Rao ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ಖಾಸಗಿ ಮೆಡಿಕಲ್ ಶಾಪ್ ಗಳಿಂದ ಔಷಧಿ ಖರೀಧಿಸುವಂತೆ ಚೀಟಿ ಬರೆದುಕೊಡುವ ಸಂಸ್ಕೃತಿ ಕೈಬಿಡಬೇಕು.. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ರೋಗಿಗಳಿಗೆ ಉಚಿತವಾಗಿ ಔಷಧಿಗಳು ಸಮರ್ಪಕವಾಗಿ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸಲಾಗಿದೆ. ಎಂದು ರಾಜ್ಯದ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ

Dinesh Gundu Rao ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನ ತೆರೆಯಲು ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ. ಜೆನರಿಕ್ ಔಷಧಿಗಳ ಖರೀದಿಗೆ BPPI ಯೊಂದಿಗೆ KSMSCL ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಲಾಗಿದ್ದು, ಪರ್ಯಾಯವಾಗಿ ಆಸ್ಪತ್ರೆಗಳು BPPI ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಬಹುದು. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಔಷಧಿ ಕೇಂದ್ರಗಳಲ್ಲಿಯೇ ಔಷಧಿಗಳನ್ನು ಉಚಿತವಾಗಿ ಪಡೆಯುವಂತೆ ನಾನು ಮನವಿ ಮಾಡುತ್ತೇನೆ ಎಂದು ಸಚಿವರು ತಮ್ಮ ಜಾಲತಾಣ x ಖಾತೆಯಲ್ಲಿ‌ ಅನಿಸಿಕೆ ಹಂಚಿಕೊಂಡಿದ್ದಾರೆ