S. N. Channabasappa ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ, ಮನಸ್ಸಿಗೆ ಮುದ ನೀಡಲು ಬೇಸಿಗೆ ಶಿಬಿರದಂತಹ ಚಟುವಟಿಕೆಗಳು ಅವಶ್ಯಕವಾಗಿದ್ದು, ಮಕ್ಕಳು ತಪ್ಪದೇ ಇಂತಹ ಶಿಬಿರಗಳ ಸದುಪಯೋಗ ಪಡಿಯಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು
ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಕಾಶಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ೬ ರಿಂದ ೧೬ ವರ್ಷದೊಳಗಿನ ಮಕ್ಕಳಿಗೆ “ಸೃಜನಾತ್ಮಕ ಮತ್ತು ಕ್ರಿಯಾಶೀಲಾತ್ಮಕ” ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳೊಳಗಿನ ಕಲೆ, ಪ್ರತಿಭೆ ಹೊರ ತರಲು ಈ ತರಹದ ಚಟುವಟಿಕೆಗಳು ಅವಶ್ಯಕವಾಗಿದ್ದು, ಅದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸರ್ಕಾರಿ ಶಾಲೆಗಳು ಅವಕಾಶ ನೀಡುತ್ತಿರುವುದು ಸಂತಸವಾಗಿದೆ.
ಇಂತಹ ಶಿಬಿರಗಳು ಹೆಚ್ಚೆಚ್ಚು ಆಗಬೇಕು. ಅದಕ್ಕೆ ಸರ್ಕಾರದ ಮಟ್ಟದಲ್ಲಿ ನಾನು ಚರ್ಚೆ ಮಾಡಿ ೧೫ ದಿನಗಳ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಊಟದ ವ್ಯವಸ್ಥೆ ಮಾಡುವಂತೆ ಮನವಿ ಮಾಡುತ್ತೇನೆ. ಇದಕ್ಕೆ ಸಂಬAಧಪಟ್ಟ ಅಧಿಕಾರಗಳೊಂದಿಗೆ ಸಹ ಚರ್ಚೆ ಮಾಡಿ ಅದಕ್ಕೆ ಬೇಕಾದ ಸಹಕಾರ ಒದಗಿಸುತ್ತೇನೆ ಎಂದರು.
ನಮ್ಮ ಸುತ್ತಮುತ್ತ ಇಂತಹ ಚಟುವಟಿಕೆಗೆ ಪೂರಕವಾರ ಮನಸುಗಳು ಹಾಗೂ ಸಂಘ ಸಂಸ್ಥೆಗಳು ಇವೆ. ಇಲಾಖೆಯು ಅವರುಗಳ ಸಹಭಾಗಿತ್ವದೊಂದಿಗೆ ಶಿಬಿರಗಳನ್ನು ಮಾಡಬೇಕು. ಆಗ ಶಿಬಿರಗಳು ಇನ್ನಷ್ಟು ಯಶಸ್ವಿಯಾಗಿ ನಡೆಯುತ್ತದೆ ಎಂದು ಸಲಹೆ ನೀಡಿದರು.
ಆಹಾರ ಸಲಹಾ ತಜ್ಞರಾದ ಹೆಚ್.ನೇತ್ರಾವತಿ ಮಾತನಾಡಿ, ಮಕ್ಕಳಿಗೆ ಆರೋಗ್ಯಕವಾರದ ಆಹಾರವನ್ನು ನೀಡಬೇಕು. ಹೊರಗಡೆ ಕರೆದ ಅಡುಗೆ ಎಣ್ಣೆಯ ಪದಾರ್ಥಗಳು ಹಾಗೂ ಪ್ಲಾಸ್ಟಿಕ್‌ನಲ್ಲಿ ಇಟ್ಟಿರುವ ಆಹಾರವನ್ನು ಸೇವಿಸುವುದು ಕಡಿಮೆ ಮಾಡಬೇಕು. ಇದರಿಂದ ಮಕ್ಕಳ ಆರೋಗ್ಯ ಹದಗೆಡುತ್ತದೆ. ಮನೆಯಲ್ಲಾಗಲಿ ಅಥವಾ ಹೊರಗಡೆಯಾಗಲಿ ಒಂದು ಬಾರಿ ಬಳಸಿದ ಎಣ್ಣೆಯನ್ನು ಹೆಚ್ಚು ಬಾರಿ ಅಡುಗೆಗೆ ಬಳಸಬಾರದು. ಹಾಗೂ ಆ ರೀತಿ ಬಳಸಿದ ಎಣ್ಣೆಯ ಪದಾರ್ಥಗಳನ್ನು ತಿನ್ನಬಾರದು. ಇದರಿಂದ ಹೃದಯ ಸಂಬAಧಿತ ಕಾಯಿಲೆಗಳು ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಪೋಷಕರು ಮನೆಯಲ್ಲಿ ಮಕ್ಕಳನ್ನು ಅಡುಗೆಯ ಸಹಾಯಕ್ಕೆ ಬಳಸಿಕೊಳ್ಳಬೇಕು. ಅದರಿಂದ ಮಕ್ಕಳಿಗೆ ಆರೋಗ್ಯಕರ ಊಟದ ಮೇಲೆ ಆಸಕ್ತಿ ಹೆಚ್ಚಾಗುತ್ತದೆ. ಮಕ್ಕಳು ಆರೋಗ್ಯಕರವಾದ ತರಕಾರಿ ಹಾಗೂ ಹಣ್ಣುಗಳನ್ನು ಸೇವನೆ ಮಾಡಬೇಕು. ಇದರಿಂದ ರಕ್ತದ ಒತ್ತಡ, ಹೃದಯ ಸಂಬAಧಿತ ಕಾಯಿಲೆ , ಮೂಳೆಗಳಿಗೆ, ಕಣ್ಣುಗಳಿಗೆ, ಜೀರ್ಣ ಕ್ರಿಯೆಗೆ ಹಾಗೂ ಬುದ್ದಿ ಚುರುಕುತನಕ್ಕೆ ಸಹಾಯವಾಗುತ್ತದೆ ಎಂದರು.
S. N. Channabasappa ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್. ಕೃಷ್ಣಪ್ಪ ಮಾತನಾಡಿ, ಮಕ್ಕಳ ಮನಸ್ಸು ಜಡವಾಗಿ ಇರಲು ಬಿಡಬಾರದು ಅವರನ್ನು ಸದಾ ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ಕ್ರಿಯಾಶೀಲರನ್ನಾಗಿ ಮಾಡಬೇಕು. ಕಲೆ, ಸಾಹಿತ್ಯ, ನಾಟಕಗಳಿಂದ ಮಕ್ಕಳ ವ್ಯಕ್ತಿ ವಿಕಸನವಾಗುತ್ತದೆ. ಆ ದಿಸೆಯಿಂದಲೆ ಬೇಸಿಗೆ ಶಿಬಿರ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇತ್ತೀಚಿಗೆ ಮಕ್ಕಳು ಮೊಬೈಲ್ ಅನ್ನು ಅವಲಂಬಿಸಿದ್ದಾರೆ. ಊಟ ಮಾಡಲು, ಹೋಮ್ ವರ್ಕ್ ಮಾಡಲು ಮೊಬೈಲ್ ಇಲ್ಲದೆ ಆಗದು ಎನ್ನುವು ಸ್ಥಿತಿಗೆ ತಲುಪಿದ್ದಾರೆ. ಇಂತಹ ವಾತಾವರಣದಿಂದ ಪೋಷಕರು ಮಕ್ಕಳನ್ನು ದೂರ ಇಡಬೇಕು. ಇಲ್ಲದಿದ್ದರೆ ಮಕ್ಕಳಿಗೆ ಓದಿನಲ್ಲಿ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಆಸಕ್ತಿ ಕಡಿಮೆ ಆಗುತ್ತದೆ. ಒಂದು ಕಡೆ ಮನಸ್ಸನ್ನು ಕೇಂದ್ರಿಕರಿಸಲು ಆಗುವುದಿಲ್ಲ. ಇದರಿಂದ ದೇಹದಲ್ಲಿನ ಹಾರ್ಮೊನ್ ವ್ಯತ್ಯಾಸಕ್ಕೆ ಒಳಗಾಗಿ ಮಾನಸಿಕವಾಗಿ, ದೈಹಿಕವಾಗಿ ಕುಗ್ಗುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಲಿಂಗರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್. ಉಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಯ ಅಧಿಕಾರಿ ಶಶಿರೇಖಾ, ಮುಖ್ಯ ಶಿಕ್ಷಕ ಹಾಲ ನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಿಬ್ಬಂದಿಗಳು, ಅಧಿಕಾರಿಗಳು, ಶಾಲೆ ಸಿಬ್ಬಂದಿಗಳು ಹಾಗೂ ಪೋಷಕರು ಭಾಗಿಯಾಗಿದ್ದರು.
S. N. Channabasappa ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರದಂತಹ ಚಟುವಟಿಕೆ ಅಗತ್ಯ: ಎಸ್.ಎನ್.ಚನ್ನಬಸಪ್ಪ
Department of Collegiate Education ಪ್ರಥಮ ಪಿ.ಯು.ಸಿ. ದಾಖಲಾತಿಗೆ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ
Department of Collegiate Education 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ.
2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ತೆರಳಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್‌ಎಟಿಎಸ್ ನಂಬರ್ ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಮೇ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Department of Collegiate Education ಕಾಲೇಜುಗಳ ವಿವರ : ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365 ಲಭ್ಯವಿರುವ ಕೋರ್ಸ್ಗಳು ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908- ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್ ಕೋರ್ಸ್ಗಳು ಲಭ್ಯವಿರುತ್ತವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
MESCOM ಮೇ 18 ರಂದು ವಿದ್ಯುತ್ ವ್ಯತ್ಯಯ
MESCOM ಶಿವಮೊಗ್ಗ, ಮೇ-16 ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 18 ರಂದು ಬೆಳಗ್ಗೆ 09-00 ಗಂಟೆಯಿಂದ 06-00 ರವರೆಗೆ ಸಾಗರ ರಸ್ತೆ, ಎ.ಪಿ.ಎಂ.ಸಿ ಮಾರುಕಟ್ಟೆ, ಇಂಡಸ್ಟ್ರೀಯಲ್ ಏರಿಯಾ, ಗೋಪಾಳ ಎ, ಬಿ, ಸಿ, ಡಿ, ಇ, ಎಫ್, ಬಡಾವಣೆ, ಪ್ರೆಸ್ ಕಾಲೋನಿ, ರಂಗನಾಥ ಬಡಾವಣೆ, ಆನೇ ವೃತ್ತ, ಅಲ್‌ಹರೀಮ್ ಲೇಔಟ್, ಮಹೇಶ್ ಪಿ.ಯು. ಕಾಲೇಜು, ಅಂಧರ ವಿಕಾಸ ಶಾಲೆ, ವಿನಾಯಕ ವೃತ್ತ, ಸವಿ ಬೇಕರಿ ಕೆಳಭಾಗದ ರಸ್ತೆ, ವೆಟರಿನರಿ ಕಾಲೇಜು ಮುಖ್ಯ ರಸ್ತೆ, ಇಂದಿರಾ ಗಾಂಧಿಬಡಾವಣೆ, ಜಯದೇವ ಬಡಾವಣೆ, ಶಿವಪ್ಪ MESCOM ನಾಯಕ ಬಡಾವಣೆ, ಪ್ರಿಯದರ್ಶಿನಿ ಲ್ಭೆ಼ಟ್, ಕೆ.ಎಸ್.ಆರ್.ಟಿ.ಸಿ ಲೇಔಟ್, ಕೆ.ಹೆಚ್.ಬಿ ಎ, ಬಿ, ಸಿ, ಡಿ, ಇ, ಎಫ್, ಜಿ ಬ್ಲಾಕ್, ಕಾಶೀಪುರ, ಲಕ್ಕಪ್ಪ ಲೇಔಟ್, ರೇಣುಕಾಂಬ ಬಡಾವಣೆ, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಲ್ಲಹಳ್ಳಿ, ಕುವೆಂಪು ಬಡಾವಣೆ, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ದಾಮೋದರ ಕಾಲೋನಿ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Department of Horticulture ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ
Department of Horticulture – Index ಶಿವಮೊಗ್ಗ, ಮೇ 16 ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಮುಂದಿನ 3 ವರ್ಷಗಳವರೆಗೆ ನೆಟ್ಟ ಸಸಿಗಳ ನಿರ್ವಹಣೆಗಾಗಿ ಸಹಾಯಧವನ್ನು ನೀಡುತ್ತಿದ್ದು, ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಮೇ 31ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Department of Horticulture – Index ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ನಂ.: ಕಸಬಾ ಮತ್ತು ಉಡುಗಣಿ -9972777644, ಅಂಜನಾಪುರ-9902170900, ಹೊಸೂರು-7899942267, ತಾಳಗುಂದ-8217528884 ಗಳನ್ನು ಸಂಪರ್ಕಿಸುವುದು.
Rotary Club of Shimoga ಮೇ 17ಕ್ಕೆ ಹಣಕಾಸು ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಉಪನ್ಯಾಸ
Rotary Club of Shimoga ಶಿವಮೊಗ್ಗ ನಗರದ ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಮೇ 17ರಂದು ಬೆಳಗ್ಗೆ 9.30ಕ್ಕೆ “ಹಣಕಾಸು ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ – ಹಣಕಾಸು ಮತ್ತು ಲೆಕ್ಕಪತ್ರ ನಿರ್ವಹಣೆ ಕ್ಷೇತ್ರದಲ್ಲಿ ಸವಾಲುಗಳು ಮತ್ತು ಮುಂದಿನ ಹಾದಿ” ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಹಣಕಾಸು ಸೇವೆಗಳ ವಲಯದಲ್ಲಿ ಕೃತಕ ಬುದ್ಧಿಮತ್ತೆಗಳ ಅಳವಡಿಕೆ, ಕೃತಕ ಬುದ್ಧಿಮತ್ತೆಯ ಮೂಲಕ ಲೆಕ್ಕಪತ್ರಗಳ ಸೇವೆಯನ್ನು ವರ್ಧಿಸುವುದು, ಲೆಕ್ಕಪತ್ರಗಳ ಪರಿಶೀಲನೆಯಲ್ಲಿ ಕೃತಕ ಬುದ್ಧಿಮತ್ತೆಯ ಪ್ರಯೋಗಾತ್ಮಕ ವಿಶ್ಲೇಷಣೆ, ಆಡಿಟಿಂಗ್ ಕಾರ್ಯವಿಧಾನದಲ್ಲಿ ಕೃತಕ ಬುದ್ಧಿಮತ್ತೆಯ ಅಳವಡಿಕೆ ವಂಚನೆ ಪತ್ತೆ ಮತ್ತು ಅಸಂಗತತೆ ಗುರುತಿಸುವುದು, ಲೆಕ್ಕಪರಿಶೋಧಕರು, ಲೆಕ್ಕಪತ್ರ ಕಂಪನಿಗಳು ಮತ್ತು ಲೆಕ್ಕಪತ್ರ ನಿಯಂತ್ರಕರುಗಳ ಕಾರ್ಯವಿಧಾನದಲ್ಲಿ ಕೃತಕ ಬುದ್ಧಿಮತ್ತೆಯ ಅಳವಡಿಕೆಯಿಂದ ಉಂಟಾಗುವ ಸಂಭಾವ್ಯ ಪರಿಣಾಮಗಳು, ಕಂಪನಿಗಳು, ವ್ಯಾಪಾರ ಮಾಲೀಕರು ಮತ್ತು ಗ್ರಾಹಕರು ತಮ್ಮ ಹಣಕಾಸು ಕಾರ್ಯಾಚರಣೆಗಳು , ವ್ಯವಹಾರ ನಡೆಸುವ ವಿಧಾನದಲ್ಲಿನ ನಾವೀನ್ಯತೆ, ಡಿಜಿಟಲ್ ಹಣದ ಆವಿಷ್ಕಾರ ದಿಂದ,ಹಣಕಾಸು ತಂತ್ರಜ್ಞಾನವು ಹೇಗೆ ಸ್ಫೋಟಕವಾಗಿ ಬೆಳೆದಿದೆ ಎಂಬುದರ ಬಗ್ಗೆ ವಿಶ್ಲೇಷಣೆ ಬಗ್ಗೆ ಚರ್ಚಿಸಲಾಗುವುದು.
Rotary Club of Shimoga ಉದ್ಯಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಎಸ್‌ಐಆರ್‌ಸಿ ಮಾಜಿ ಚೇರ್ಮನ್ ಎಸ್.ರಮೇಶ್, ಐಸಿಎಂಎ ಮೈಸೂರು ಚೇರ್ಮನ್ ಆರ್.ಪುರುಷೋತ್ತಮ್, ಶಿವಮೊಗ್ಗ ಜಿಲ್ಲಾ ಸಿಎ ಅಸೋಸಿಯೇಷನ್ ಅಧ್ಯಕ್ಷ ಎನ್.ಎಲ್.ಪ್ರಸಾದ್ ಪಾಲ್ಗೊಳ್ಳುವರು. ವಿ.ಗುರುಪ್ರಸಾದ್ ಹಾಗೂ ಡಾ. ಚಿದಂಬರ ಗಣಪಯ್ಯ ಅವರು ವಿಶೇಷ ಉಪನ್ಯಾಸ ನೀಡುವರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು. ಉಪನ್ಯಾಸ ಕಾರ್ಯಕ್ರಮದ ಮಾಹಿತಿ ಹಾಗೂ ನೋಂದಣಿಗೆ ಮೊಬೈಲ್ ಸಂಖ್ಯೆ 7019663300 ಸಂಪರ್ಕಿಸಬಹುದಾಗಿದೆ.
cite.karnataka.gov.in ಐಟಿಐ ಪ್ರವೇಶ ಪಡೆಯಲು ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನ
cite.karnataka.gov.in ಶಿವಮೊಗ್ಗದ ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಎರಡು ವರ್ಷಗಳ ಕೋರ್ಸ್ಗಳಾದ ಎಲೆಕ್ಟ್ರಿಷಿಯನ್, ಎಲೆಕ್ಟಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ವರ್ಚುವಲ್ ಅನಾಲಿಸಿಸ್ ಆಂಡ್ ಡಿಸೆನರ್, ಸಿಎನ್‌ಸಿ ಮೆಷಿನಿಂಗ್ ಟೆಕ್ನಿಷಿಯನ್, ಇಂಡಸ್ಟ್ರೀಯಲ್ ರೋಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಟರಿಂಗ್ ಹಾಗೂ ಮ್ಯಾನುಫ್ಯಾಕ್ಚರಿಂಗ್ ಪ್ರೋಸಸ್ ಕಂಟ್ರೊಲ್ ಅಂಡ್ ಆಟೋಮೇಷನ್ ಕೋರ್ಸ್ಗಳಿಗೆ ಹಾಗೂ ಒಂದು ವರ್ಷದ ಕೋರ್ಸ್ಗಳಾದ ಸಿಓಪಿಎ ಮತ್ತು ಇಂಜನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸುವುದು.
cite.karnataka.gov.in ಆಸಕ್ತರು ಸಂಸ್ಥೆಯ ವೆಬ್‌ಸೈಟ್ www.cite.karnataka.gov.in ಮೂಲಕ ಮೇ 28 ರೊಳಗಾಗಿ ಅರ್ಜಿ ಸಲ್ಲಿಸಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣಪತ್ರ, ಆಧಾರ್ ಕಾರ್ಡ್, ಇತ್ತೀಚಿನ 2 ಪಾಸ್‌ಪೋರ್ಟ್ ಸೈಜ್ ಭಾವಚಿತ್ರ ಹಾಗೂ ಮೂಲ ದಾಖಲಾತಿಗಳನ್ನು ನಿಗಧಿತ ದಿನಾಂಕಗಳೊಳಗೆ ಪರಿಶೀಲನೆ ಮಾಡಿಕೊಳ್ಳುವಂತೆ ಶಿವಮೊಗ್ಗ ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು, ಗಾಜನೂರು, ಶಿವಮೊಗ್ಗ ತಾಲೂಕು ಹಾಗೂ ದೂ.ಸಂ.: 9448722232 ನ್ನು ಸಂಪರ್ಕಿಸುವುದು.
Rotary Club Shivamogga ಮನುಕುಲದ ಸೇವೆಯಲ್ಲಿ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ವಾಗ್ಗೇವಿ ಬಸವರಾಜ್.
Rotary Club Shivamogga ಮನುಕುಲದ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಆಗುವುದಿಲ್ಲ ಎಂದು ಇನ್ನರ್ವಿಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅವರು ನುಡಿದರು ಅವರು ನಗರದ ಹೊರವಲಯದಲ್ಲಿ ಇರುವ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಇರುವ ಕ್ಯಾನ್ಸರ್ ಪೀಡಿತ ಮಹಿಳೆ ಗಿರಿಜಮ್ಮನವರ ಮನೆ ಮಳೆಯಿಂದ ಹಾಳಾಗಿದ್ದು ಅದಕ್ಕೆ ಬೇಕಾಗಿರುವ ಅಗತ್ಯ ವಸ್ತುಗಳು ಹಾಗೂ ಟಾರ್ಪಲ್ ಗಳನ್ನು ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ನಿಜವಾದ ಫಲಾನುಭವಿಗಳನ್ನು ಗುರುತಿಸಿ ಸೇವೆ ಮಾಡಿದಾಗ ಆ ಸೇವೆ ನಮಗೆ ಸಂತೃಪ್ತಿಯನ್ನು ಕೊಡುತ್ತದೆ ಗಿರಿಜನಮ್ಮನವರು ತುಂಬಾ ಸಂಕಷ್ಟದಲ್ಲಿ ಇದ್ದು ಇವರಿಗೆ ನೆರವು ನೀಡುವವರು ಕೈಜೋಡಿಸಬಹುದು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗೌರ್ನರ್ ಜಿ ವಿಜಯಕುಮಾರ್ ಅವರು ಮಾತನಾಡುತ್ತ ಗಿರಿಜಮ್ಮನವರಿಗೆ ಕಾಯಿಲೆಯಿಂದ ಬಳಲುವಾಗ ರೋಟರಿ ಸಂಸ್ಥೆ ಹಾಗೂ ಇನ್ನರ್ ವೀಲ್ ಸಂಸ್ಥೆಗಳ ವತಿಯಿಂದ ಆರ್ಥಿಕ ನೆರವನ್ನು ನೀಡಿ ಸಹಕರಿಸಿದ್ದೇವೆ ಈಗ ಆರೋಗ್ಯದಲ್ಲಿ ತುಂಬಾ ಗುಣಮಟ್ಟ ಕಂಡು ಬರುತ್ತಿದೆ ಇದೇ ರೀತಿ ಹಲವಾರು ಸಂಘ ಸಂಸ್ಥೆಯವರು ನೆರವು ನೀಡಿದ್ದನ್ನು ಸ್ಮರಿಸಿದರು.
Rotary Club Shivamogga ಇದೇ ಸಂದರ್ಭದಲ್ಲಿ ಫಲಾನುಭವಿಗಳಾದ ಗಿರಿಜಮ್ಮನವರು ಮಾತನಾಡುತ್ತಾ ನಮಗೆ ಇಂತಹ ಸಂಘ ಸಂಸ್ಥೆಯವರು ಸಹಕಾರ ನೀಡದೆ ಇದ್ದರೆ ನನ್ನ ಜೀವ ಯಾವಾಗೋ ಹೋಗಬೇಕಾಗಿತ್ತು. ನಿಮಗೆ ಸದಾ ಚಿರಋಣಿಯಾಗಿರುತ್ತೇನೆ ಎಂದು ಕಂಬನಿ ಮಿಡಿದರು.
ಕಾರ್ಯಕ್ರಮದಲ್ಲಿ ಇನ್ನರ ವೀಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಅವರು ಮಾತನಾಡುತ್ತಾ ನಮ್ಮ ಇನ್ನರ್ ವೀಲ್ ಸಂಸ್ಥೆ ವತಿಯಿಂದ ಈಗಾಗಲೇ ಆರ್ಥಿಕವಾಗಿ ಹಿಂದುಳಿದ ಬಡ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹೊಲಿಗೆ ಯಂತ್ರ ಮತ್ತು ಅಂಗವಿಕಲರಿಗೆ ಸಾಧನಗಳನ್ನು ನೀಡುವುದರ ಮುಖಾಂತರ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಅನಾಥಾಶ್ರಮಗಳಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಿ ನಮ್ಮ ಸಂಸ್ಥೆ ಮಾನವೀಯತೆಯನ್ನು ಮೆರೆದಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು
B. Y. Raghavendra ಭದ್ರಾವತಿ- ಚಿಕ್ಕಜಾಜೂರು ರೈಲ್ವೆ ಮಾರ್ಗ ಅಂತಿಮ ಸರ್ವೆ- ಬಿ.ವೈ.ರಾಘವೇಂದ್ರ
B. Y. Raghavendra ಭದ್ರಾವತಿಯಿಂದ ಚಿಕ್ಕಜಾಜೂರುವರೆಗೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯನ್ನು ಶೀಘ್ರವೇ ಆರಂಭಿಸುವ ದೃಷ್ಠಿಯಿಂದ, ಈ ರೈಲ್ವೆ ಮಾರ್ಗದ ಅಂತಿಮ ಸರ್ವೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.
ಈ ಒಂದು ಹೊಸ ಮೈಲಿಗಲ್ಲು ಸ್ಥಾಪಿತವಾದ ನಂತರ ನಮ್ಮ ಮಲೆನಾಡು ಭಾಗಕ್ಕೆ ಬಯಲು ಸೀಮೆ ಹಾಗೂ ಅರೆ ಮಲೆನಾಡು ಭಾಗಗಳ ಸಂಪರ್ಕ ಸಾಧ್ಯತೆಯಿಂದ ವ್ಯಾಪಾರ, ವ್ಯವಹಾರ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ವಾಣಿಜ್ಯೋದ್ಯಮಕ್ಕೆ ಹೆಚ್ಚಿನ ಬಲ ದೊರೆಯುತ್ತದೆ ಇದರೊಂದಿಗೆ ಮಲೆನಾಡಿನ ಆರ್ಥಿಕ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ ಎಂದಿದ್ದಾರೆ.
ಜೊತೆಗೆ ಮಲೆನಾಡಿಗೆ ರಾಜ್ಯದ ಎಲ್ಲಾ ಮೂಲೆಗಳಿಗೆ ಉತ್ತಮ ಸಂಪರ್ಕ ದೊರೆಯುವ ಮೂಲಕ ಜನಸಾಮಾನ್ಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪೂರಕವಾಗುತ್ತದೆ. ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ಕೂಡ ನಿರ್ಮಾಣವಾಗುತ್ತದೆ.
B. Y. Raghavendra ಈ ಎಲ್ಲ ದೂರದೃಷ್ಟಿ ಇಟ್ಟುಕೊಂಡು ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯಗಳ ಹೆಚ್ಚಳ ಹಾಗೂ ನೂತನ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಬೆಂಬಲವಾಗಿ ನಿಂತಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಶಿವಮೊಗ್ಗ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.
DVS College of Arts, Science and Commerce ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ಹಂತದಿಂದಲೇ ಸಿದ್ಧರಾಗಿ- ಡಾ.ದಯಾನಂದ ಸಾಗರ್
DVS College of Arts, Science and Commerce ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ಹಂತದಿಂದಲೇ ಸಿದ್ಧತೆ ಆರಂಭಿಸಿ ಯಶಸ್ಸು ಗಳಿಸಬೇಕು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಮನೋವೈದ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ದಯಾನಂದ ಸಾಗರ್ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶ ಮತ್ತು ಸಂಸ್ಥೆಯು ಉತ್ತಮವಾಗಿ ಅಭಿವೃದ್ಧಿ ಹೊಂದಲು ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ನಡೆಸಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಜೀವನದಲ್ಲಿ ಗುರಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿರಬೇಕು. ಹಂತ ಹಂತವಾಗಿ ಗುರಿ ಕಡೆಗೆ ಹೆಜ್ಜೆ ಇಡಬೇಕು. ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ. ಸಾಧನೆಯ ಜತೆಯಲ್ಲಿ ಸಮಾಜದ ಪ್ರಗತಿಗೆ ಕೈಜೋಡಿಸಬೇಕು ಎಂದರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಮಾತನಾಡಿ, ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವದಿಂದ ಕಾಣಬೇಕು. ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವೆಂಕಟೇಶ್ ಮಾತನಾಡಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಡಾ. ದಯಾನಂದ ಸಾಗರ್ ಅವರು ವಿದ್ಯಾರ್ಥಿಗಳಿಗೆ ಮಾದರಿ. ಸಾಧಕರ ಜೀವನಶೈಲಿ ಅರಿತುಕೊಂಡು ನಿಮ್ಮ ಜೀವನದಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
DVS College of Arts, Science and Commerce ಡಾ. ದಯಾನಂದ ಸಾಗರ್ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಬರಲು ನಡೆಸಿದ ಸಿದ್ಧತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಸಚಿನ್ ಕೆ, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಕೇತನಾ ಆರ್ತಿ, ವಿದ್ಯಾರ್ಥಿ ಕ್ಷೇಮ ಪಾಲಕಿ ಪ್ರೊ. ಎಸ್.ಕೆ.ಸಾವಿತ್ರಿ ಉಪಸ್ಥಿತರಿದ್ದರು.
CM Siddharamaiah ಕೇಂದ್ರ ಪುರಸ್ಕೃತ ಯೋಜನೆಗಳ ಬಾಬ್ತು₹4,195 ಕೋಟಿ ಬಿಡುಗಡೆ ಆಗಿಲ್ಲ, ರಾಜ್ಯದ ಸಂಸದರು ಈ ಬಗ್ಗೆ ಕೇಂದ್ರಕ್ಕೆ ಒತ್ತಾಯ ಮಾಡಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ
CM Siddharamaiah ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅವರು ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಿದ್ದರು.
ಈ ಬಾಕಿ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50, 60:40, 70:30 ರಷ್ಟಿರುತ್ತದೆ. ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ₹46,859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ ₹24,960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ ₹22,758 ಕೋಟಿಗಳಿದ್ದು ಕೇಂದ್ರದಿಂದ ₹18,561ಕೋಟಿ ಮಾತ್ರ ಬಿಡುಗಡೆ ಆಗಿದೆ. ₹4,195 ಕೋಟಿ ರೂಪಾಯಿಗಳು ಬಿಡುಗಡೆ ಆಗಿರುವುದಿಲ್ಲ.
ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ. 83 ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಆದ್ದರಿಂದ 2025-26 ರ ಸಾಲಿನಿಂದ ಶೇ.100 ರಷ್ಟು ಅನುದಾನವನ್ನು ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ.
CM Siddharamaiah ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರ ತನ್ನ ಪಾಲನ್ನು ನೀಡಲೇಬೇಕು. ಕೇಂದ್ರದ ಪಾಲು ನೀಡಲು ಪತ್ರ ಬರೆದಿದ್ದೇವೆ ಎಂದು ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.
