Monday, March 2, 2026
Monday, March 2, 2026
Home Blog Page 311

DC Shivamogga ಒಳಮೀಸಲಾತಿ ಸಮೀಕ್ಷೆ ಕಾರ್ಯದ ಯಶಸ್ಸಿಗೆ ನಾಗರೀಕರೆಲ್ಲರೂ ಸಹಕರಿಸಿ- ಗುರುದತ್ತ ಹೆಗಡೆ

0

DC Shivamogga ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ್ ದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ (ಶೈಕ್ಷಣಿಕ, ಆರ್ಥಿಕ) ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಅದರಂತೆ ಸಮೀಕ್ಷಾ ಕಾರ್ಯವು ಮೇ.05 ರಂದು ಪ್ರಾರಂಭವಾಗಿದ್ದು, ಗಣತಿದಾರರು ಮೇ.5 ರಿಂದ 17 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ದಾಖಲಿಸಿಕೊಳ್ಳಲ್ಲಿದ್ದಾರೆ. ನಂತರ ಮೇ.19 ರಿಂದ 21 ರವರೆಗೆ ಮತಗಟ್ಟೆಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜನೆ ಮಾಡಲಾಗಿದ್ದು, ಮೇ.19 ರಿಂದ 23 ರವರೆಗೆ ಪರಿಶಿಷ್ಟ ಜಾತಿಯ ಕುಟುಂಬಗಳು ಆನ್‌ಲೈನ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ಅದರಂತೆ ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯವನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರ್‌ಗಳನ್ನಾಗಿ 3 ಸಿಬ್ಬಂದಿಗಳನ್ನು ಮತ್ತು ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೈನರ್‌ಗಳಾಗಿ ಪ್ರತೀ ತಾಲ್ಲೂಕಿಗೆ 5 ರಂತೆ ಒಟ್ಟು 35 ಸಿಬ್ಬಂದಿಗಳನ್ನು ನೇಮಿಸಿ ಮೇ.02 ರಂದು ತರಬೇತಿಯನ್ನು ನೀಡಲಾಗಿದೆ. ಸಮೀಕ್ಷೆ ನಡೆಸಲು 1793 ಮತಗಟ್ಟೆವಾರು ಶಿಕ್ಷಕರನ್ನು ಗಣತಿದಾರರನ್ನಾಗಿ ಹಾಗೂ 10 ರಿಂದ 12 ಮತಗಟ್ಟೆಗೆ ಒಬ್ಬರಂತೆ ಒಟ್ಟು 175 ಮುಖ್ಯ ಶಿಕ್ಷಕರುಗಳನ್ನು ಮೇಲ್ವಿಚಾರಕರನ್ನಾಗಿ ನೇಮಿಸಲಾಗಿದೆ.
ಸಮೀಕ್ಷಾ ಕಾರ್ಯವು ಸಕ್ರಿಯವಾಗಿ ಪ್ರಾರಂಭಗೊಂಡು ಇಂದಿಗೆ 5 ದಿನಗಳು ಪೂರೈಸಲಾಗಿದ್ದು, ಸಮೀಕ್ಷಾ ಕಾರ್ಯದಲ್ಲಿ ಎದುರಾಗಬಹುದಾದಂತಹ ಕುಂದುಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಕಛೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಹಾಗೂ ಮತಗಟ್ಟೆಯಲ್ಲಿ 200 ಕ್ಕಿಂತ ಹೆಚ್ಚಿನ ಕುಟುಂಬಗಳು ಇದ್ದಲ್ಲಿ ಹೆಚ್ಚುವರಿ ಗಣತಿದಾರರನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
DC Shivamogga ಸಮೀಕ್ಷೆ ಸಮಯದಲ್ಲಿ ಗಣತಿದಾರರು ಪರಿಶಿಷ್ಟ ಜಾತಿ ಅಲ್ಲದವರ ಮನೆಗೂ ಕೂಡ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಮನೆಯ ಮುಖ್ಯಸ್ಥರು ತಾವು ಯಾವ ಜಾತಿಗೆ ಸೇರಿರುತ್ತಾರೆ ಎಂಬ ಬಗ್ಗೆ ಮಾಹಿತಿ ನೀಡಿದರೆ ಸಾಕು, ಆದರೆ ಪರಿಶಿಷ್ಟ ಜಾತಿ ಸಮುದಾಯದವರಾಗಿದ್ದಲ್ಲಿ ಪೂರ್ಣ ಪ್ರಮಾಣದ ಮಾಹಿತಿಯನ್ನು ಗಣತಿದಾರರಿಗೆ ನೀಡಬೇಕಾಗಿರುತ್ತದೆ. ಆದರಿಂದ ಒಳ ಮೀಸಲಾತಿಯ ಸಮೀಕ್ಷಾ ಕಾರ್ಯಕ್ಕೆ ಜಿಲ್ಲೆಯ ಎಲ್ಲಾ ನಾಗರೀಕರುಗಳು ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Karnataka State Road Transport Corporation ಶಿವಮೊಗ್ಗ- ಭದ್ರಾವತಿ ವಯಾ ಸಿದ್ಧಾಪುರ ಸಾರಿಗೆ ಬಸ್ ಸೇವೆ ಆರಂಭ

0

Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲಿಟರಿಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ ಪ್ರಯೋಜನವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

SSLC Exam ಎಸ್ಎಸ್ಎಲ್ ಸಿ ಪರೀಕ್ಷೆ- 2 ಗೆ ನೋಂದಾಯಿಸಿಕೊಳ್ಳಲು ಅವಕಾಶ

0

SSLC Exam 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ನೊಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ/ ಪೂರ್ಣಗೊಳಿಸದ/ ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2 ಕ್ಕೆ ನೊಂದಾಯಿಸಿಕೊಳ್ಳುವಂತೆ ಪೋಷಕರು ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ನ್ನು ಮೇ 26 ರಿಂದ ಜೂನ್ 02ರ ವರೆಗೆ ನಡೆಸಲಾಗುವುದು. ಪ್ರಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು, ಹಾಜರಾತಿ ಕೊರತೆಯಿಂದಾಗಿ ಪರೀಕ್ಷೆಯಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆಯಲು ನೋಂದಣಿಗೆ ಅವಕಾಶ ನೀಡಲಾಗಿದೆ.

SSLC Exam ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸುವ ವಿಷಯಗಳ ಪರೀಕ್ಷೆ ಬರೆಯಲು ವಿಷಯಗಳನ್ನು ಆಯ್ಕೆ ಮಾಡಿಕೊಳ್ಳು ಅವಕಾಶವಿರುತ್ತದೆ.
2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ವಿದ್ಯಾರ್ಥಿಗಳು ಮೇ 10ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಹಾಗೂ ಅರ್ಹ ವಿದ್ಯಾರ್ಥಿಗಳು ತಪ್ಪದೆ ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Karnataka Lokayukta Police ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ -ಮಾಹಿತಿ

0

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇ-2025ರ ಮಾಹೆಯ. ವಿವಿಧ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

Karnataka Lokayukta Police ಮೇ 13 ರಂದು ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಮೇ 20 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಹಾಗೂ ಮೇ 27 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣಗಳಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

JSS Polytechnic for the Differently Abled ಜೆಎಸ್ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಗೆ 2025-26 ನೇ ಸಾಲಿಗೆ ಪ್ರವೇಶಾತಿ ಪ್ರಕಟಣೆ

0

JSS Polytechnic for the Differently Abled ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ 2025-26 ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಅಖಿಲ ಭಾರತ ಮಟ್ಟದಲ್ಲಿ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸ್ಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟಿಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸ್ಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್(ಫಾರ್ ವಿಜ್ಯುವಲಿ ಇಂರ‍್ಡ್), ಅಪಾರೇಲ್ ಡಿಸೈನ್ ಅಂಡ್ ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಂಡ್ ಎಲೆಕ್ಟ್ರಿಕ್ ವಿಹಿಕಲ್ ಟೆಕ್ನಾಲಜಿ ಕೋರ್ಸ್ಗಳು ಲಭ್ಯವಿದೆ.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರ ಮೂಲಕ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ.40 ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ ಶೇ.60 ಡಿಬಿ ಮತ್ತು ಮೇಲ್ಪಟ್ಟು ಹಾಗೂ ಅಂಧತ್ವ 6/60 ಅಥವಾ 20/200 ಸ್ನೆಲೆನ್ ಕಂಪ್ಯೂಟರ್ ಅಪ್ಲಿಕೇಶನ್ಸ್ (ಫಾರ್ ವಿಜ್ಯುವಲಿ ಇಂಪರ‍್ಡ್) ರ ಕೋರ್ಸಿಗೆ ಮೇಲಿನ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಪ್ರವೇಶ ಅರ್ಜಿಯು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಹಾಗೂ ಎಸ್‌ಸಿ/ಎಸ್‌ಟಿ/ಸಿ-1 ವರ್ಗದವರಿಗೆ ರೂ.50 ಒಳಗೊಂಡಿದೆ.

JSS Polytechnic for the Differently Abled ಅರ್ಜಿಯನ್ನು ಜೆಎಸ್‌ಎಸ್ ಮಹಾವಿದ್ಯಾಪೀಠ ಜೆಎಸ್‌ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ವಿಳಾಸದಿಂದ ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 16 ರೊಳಗೆ ಕಛೇರಿಗೆ ತಲುಪುವಂತೆ ಜಿಎಸ್‌ಎಸ್ ವಿಶೇಷಚೇತನ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ www.jsspda.org/ ಇ-ಮೇಲ್ jsspda@gmail.com / ಮೊ. ಸಂ:9844644937 ಮೂಲಕ ಸಂಪರ್ಕಿಸಬಹುದು.

Shivamogga Minority Welfare Department ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ/ ಕಾಲೇಜುಗಳಿಗೆ ತಾತ್ಕಾಲಿಕ ಹುದ್ದೆಗಳ ನೇಮಕಾತಿ ಪ್ರಕಟಣೆ

0

Shivamogga Minority Welfare Department ಶಿವಮೊಗ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ/ ಕಾಲೇಜುಗಳಿಗೆ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ವಿವರ; ಕನ್ನಡ ಭಾಷಾ ಶಿಕ್ಷಕರು-7, ಇಂಗ್ಲೀಷ್ ಭಾಷಾ ಶಿಕ್ಷಕರು-9, ಹಿಂದಿ ಭಾಷಾ ಶಿಕ್ಷಕರು-4, ಉರ್ದು ಭಾಷಾ ಶಿಕ್ಷಕರು-2, ಗಣಿತ ಶಿಕ್ಷಕರು-4, ಸಾಮಾನ್ಯ ವಿಜ್ಞಾನ ಶಿಕ್ಷಕರು-4, ಸಮಾಜ ವಿಜ್ಞಾನ ಶಿಕ್ಷಕರು-8, ಗಣಕಯಂತ್ರ ಶಿಕ್ಷಕರು-2, ದೈಹಿಕ ಶಿಕ್ಷಣ ಶಿಕ್ಷಕರು-2 ಒಟ್ಟು-42 ಅತಿಥಿ ಶಿಕ್ಷಕರು.
ವಸತಿ ಶಾಲೆ/ಮೌಲಾನಾ ಆಜಾದ್ ಮಾದರಿ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ವಿವರ; ಕನ್ನಡ ಭಾಷಾ ಶಿಕ್ಷಕರು-3, ಇಂಗ್ಲೀಷ್ ಭಾಷಾ ಶಿಕ್ಷಕರು-3, ಉರ್ದು ಭಾಷಾ ಶಿಕ್ಷಕರು-3, ಗಣಿತ ಶಿಕ್ಷಕರು-3, ಭೌತಶಾಸ್ತ್ರ ಉಪನ್ಯಾಸಕರು-3, ರಸಾಯನಶಾಸ್ತ್ರ ಉಪನ್ಯಾಸಕರು-3, ಜೀವಶಾಸ್ತ್ರ ಉಪನ್ಯಾಸಕರು-3, ವ್ಯವಹಾರ ಅಧ್ಯಯನ ಉಪನ್ಯಾಸಕರು-1, ಲೆಕ್ಕಶಾಸ್ತ್ರ ಉಪನ್ಯಾಸಕರು -2, ಕಂಪ್ಯೂಟರ್ ಸೈನ್ಸ್ ಉಪನ್ಯಾಸಕರು-1, ಅರ್ಥಶಾಸ್ತ್ರ ಉಪನ್ಯಾಸಕರು-1, ಇತಿಹಾಸ ಉಪನ್ಯಾಸಕರು-1 ಒಟ್ಟು 27 ಉಪನ್ಯಾಸಕರು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಮೊಗ್ಗ ಹಾಗೂ ಎಲ್ಲಾ ತಾಲೂಕು ಮಾಹಿತಿ ಕೇಂದ್ರ ಕಚೇರಿಗಳಲ್ಲಿ ಅಥವಾ ವೆಬ್‌ಸೈಟ್ https://dom.karnataka.gov.in ರಿಂದ ಪಡೆದು, ಮೇ 19 ರೊಳಗಾಗಿ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Shivamogga Minority Welfare Department ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ-9538853680, ತೀರ್ಥಹಳ್ಳಿ-8861982835, ಸೊರಬ-9513815513, ಶಿಕಾರಿಪುರ-7829136724, ಹೊಸನಗರ-9008447029 ಹಾಗೂ ಸಾಗರ-7338222907 ಗಳನ್ನು ಸಂಪರ್ಕಿಸುವುದು.

Bhadra Reservoir ಭದ್ರಾ ಎಡದಂಡೆ ನಾಲೆಯಲ್ಲಿ ಮೇ10 ರಿಂದ ಮೇ18 ವರೆಗೆ ನೀರು‌ ಬಿಡುಗಡೆ, ಕಾಲುವೆ ಸುತ್ತಮುತ್ತ ಗ್ರಾಮಸ್ಥರು ಎಚ್ಚರವಹಿಸಲು‌ ಪ್ರಕಟಣೆ

0

Bhadra Reservoir ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಮತ್ತು ಸಂಬಂಧಪಟ್ಟವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯ ಮೇರೆಗೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆ ರವರು ಅದೇಶದಂತೆ, ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ದಿ:10.05.2025ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ದಿ:18.05.2025ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Bhadra Reservoir ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. 2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.

District Consumer Disputes Redressal Commission ಲ್ಯಾಪ್ ಟಾಪ್ ರಿಪೇರಿ ಸೇವಾ ನ್ಯೂನತೆ. ದೂರುದಾರ ಗ್ರಾಹಕರಿಗೆ₹ 45,625 ಬಡ್ಡಿ ಸಹಿತ ನೀಡಲು ತೀರ್ಪು

0

District Consumer Disputes Redressal Commission ದೂರುದಾರರಾದ ಕಾಶಿಪುರದ ಎಸ್.ಮನೋಜ್ ಇವರು ಬ್ರ್ಯಾಂಚ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಶಿವಮೊಗ್ಗ ಹಾಗೂ ರೀಜನಲ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಬೆಂಗಳೂರು ಇವರುಗಳ ವಿರುದ್ಧ ಲ್ಯಾಪ್‌ಟಾಪ್ ರಿಪೇರಿಗೆ ಸಂಬಂಧಿಸಿದ ಸೇವಾನ್ಯೂನ್ಯತೆ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಿದ ದೂರನ್ನು ಆಲಿಸಿದ ಆಯೋಗ 45 ದಿನಗಳ ಒಳಗೆ ರಿಪೇರಿ ಮಾಡಿಕೊಡುವಂತೆ ಇಲ್ಲವಾದಲ್ಲಿ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ದೂರುದಾರರು ತಮ್ಮ ಮಗನ ವಿದ್ಯಾಭ್ಯಾಸಕ್ಕಾಗಿ 1ನೇ ಎದುರುದಾರರಿಂದ ದಿನಾಂಕ:12/05/2022 ರಂದು ಒಂದು ಹೆಚ್‌ಪಿ ಲ್ಯಾಪ್‌ಟಾಪ್‌ನ್ನು ರೂ. 61,397 ಗಳನ್ನು ಪಾವತಿಸಿ ಖರೀದಿಸಿದ್ದು, ಒಂದು ವರ್ಷದ ವಾರಂಟಿ ಮತ್ತು ರೆಸ್‌ಕ್ಯೂ ಕೇರ್ ಪ್ಲಾನ್‌ನಡಿಯಲ್ಲೂ ಸಹ ವಾರಂಟಿ ನೀಡಿರುತ್ತಾರೆ.

ರೆಸ್‌ಕ್ಯೂ ಪ್ಲಾನ್‌ನಡಿಯಲ್ಲಿ ಲ್ಯಾಪ್‌ಟಾಪ್ ರಿಪೇರಿ ಆಗದಿದ್ದ ಪಕ್ಷದಲ್ಲಿ ಲ್ಯಾಪ್‌ಟಾಪ್ ಶೇ.80 ರಷ್ಟು ಬೆಲೆಯನ್ನು ಎದುರುದಾರರು ನೀಡಬೇಕಾಗಿರುತ್ತದೆ.

ದಿನಾಂಕ:13/03/2024 ರಂದು ಲ್ಯಾಪ್‌ಟಾಪ್ ಕೆಲಸ ನಿರ್ವಹಿಸದೇ ಡೆಡ್ ಆಗಿರುವ ವಿಷಯವನ್ನು 1 ನೇ ಎದುರುದಾರರ ಬಳಿ ತಿಳಿಸಿದಾಗ, 1 ನೇ ಎದುರುದಾರರು ಲ್ಯಾಪ್‌ಟಾಪ್ ರಿಪೇರಿಗಾಗಿ ಜಾಬ್‌ಶೀಟ್ ಸಂಖ್ಯೆ;6004300005ನ್ನು ದಿ:13/03/2024 ರಂದು ನೀಡಿರುತ್ತಾರೆ. ಸದರಿ ಲ್ಯಾಪ್‌ಟಾಪ್‌ನ್ನು ರಿಪೇರಿ ಮಾಡದೇ ತಡ ಮಾಡಿದಾಗ, ದೂರುದಾರರು ಎದುರುದಾರರಿಗೆ ಅನೇಕ ಬಾರಿ ದೂರವಾಣಿ ಮೂಲಕ ಮತ್ತು ಇ-ಮೇಲ್ ಮೂಲಕ ಕೇಳಿಕೊಂಡರೂ ಎದುರುದಾರರು ಲ್ಯಾಪ್‌ಟಾಪನ್ನು ರಿಪೇರಿ ಮಾಡಿಕೊಡದೆ ಇರುವ ಕಾರಣ, ರೆಸ್‌ಕ್ಯೂ ಕೇರ್ ಪ್ಲಾನ್‌ನಂತೆ ಲ್ಯಾಪ್‌ಟಾಪ್‌ನ ಶೇ.80ರಷ್ಟು ಹಣ ಕೊಡಿಸಲು ಹಾಗೂ ಇತರೆ ಪರಿಹಾರಗಳನ್ನು ಕೋರಿ ದೂರನ್ನು ಸಲ್ಲಿಸಿರುತ್ತಾರೆ.

ಆಯೋಗವು ದೂರುದಾರರು ಮತ್ತು ಎದುರುದಾರರು ಸಾಕ್ಷ್ಯ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ ಉಭಯ ಪಕ್ಷಗಾರರ ವಾದ- ವಿವಾದಗಳನ್ನು ಆಲಿಸಿ ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಿ ಈ ಆದೇಶವಾದ ದಿನಾಂಕದಿಂದ 45 ದಿನಗಳ ಒಳಗಾಗಿ ಎದುರುದಾರರು ದೂರುದಾರರ ಲ್ಯಾಪ್‌ಟಾಪ್‌ನ್ನು ಸರಿಯಾದ ರೀತಿಯಲ್ಲಿ ರಿಪೇರಿ ಮಾಡಿಕೊಡಬೇಕಾಗಿ ಅಥವಾ ಈ ಆದೇಶವಾದ 45 ದಿನಗಳೊಗಾಗಿ ರೂ.41,625 ಗಳನ್ನು ಶೇ.90 ರಂತೆ ಬಡ್ಡಿಯನ್ನು ಸೇರಿಸಿ ದಿನಾಂಕ;13/3/2024 ರಿಂದ ಪಾವತಿಸಬೇಕೆಂದು ತಿಳಿಸಿದೆ.

ತಪ್ಪಿದ್ದಲ್ಲಿ ಸದರಿ ಮೊತ್ತಕ್ಕೆ ಶೇ.11 ರಂತೆ ಬಡ್ಡಿಯನ್ನು ಪೂರ್ಣ ಹಣ ನೀಡುವವರೆಗೆ ನೀಡಬೇಕಾಗಿ ಹಾಗೂ ರೂ. 10,000 ಗಳನ್ನು ಮಾಸಿಕ ಹಾನಿಗೆ ಮತ್ತು ರೂ. 10,000 ಗಳನ್ನು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತಾಗಿ ಪಾವತಿಸಬೇಕೆಂದು ನಿರ್ದೇಶಿಸಿ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ದಿನಾಂಕ;25/04/2025 ರಂದು ಆದೇಶಿಸಿದೆ.

S.N. Chennabasappa ಆಪರೇಷನ್ ಸಿಂಧೂರ ಯಶಸ್ವಿ, ಕೋಟೆ ದೇಗುಲದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿದ‌ ಶಾಸಕ ಚೆನ್ನಿ

0

S.N. Channabasappa ಕಾಶ್ಮೀರ ಕಣಿವೆ ಪೆಹಲ್ಗಮ್ ನಲ್ಲಿ ಉಗ್ರರ ಹೇಡಿ ಕೃತ್ಯಕ್ಕೆ ಪ್ರತೀಕಾರವಾಗಿ ಸತತ ಮೂರು ದಿನಗಳಿಂದ ನಡೆಯುತ್ತಿರುವ ‘ಆಪರೇಷನ್ ಸಿಂಧೂರ್’ ಯಶಸ್ಸಿಗೆ ಹಾಗೂ ಮುಸಲ್ಮಾನ್ ಭಯೋತ್ಪಾದಕರನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನು ನಿದ್ದೆಗೆಡಿಸುತ್ತಿರುವ ನಮ್ಮ ಹೆಮ್ಮೆಯ ಪಡೆಗಳ ಸುರಕ್ಷತೆಗಾಗಿ ಇಂದು ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಬಿಜೆಪಿ ಶಿವಮೊಗ್ಗ ನಗರದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್ ಕೆ, ನಗರಾಧ್ಯಕ್ಷರಾದ, ಮೋಹನ್ ರೆಡ್ಡಿ, ಜಿಲ್ಲಾ ಹಾಗೂ ನಗರದ ಪ್ರಮುಖರು, ಮೋರ್ಚಾಗಳ ಪದಾಧಿಕಾರಿಗಳು ಸೇರಿದಂತೆ ನಮ್ಮ ಕಾರ್ಯಕರ್ತರು ಉಪಸ್ಥಿತರಿದ್ದರು.

Department of Kannada and Culture ಮೇ 12. ಶಿವಮೊಗ್ಗದಲ್ಲಿ ಭಗವಾನ್ ಬುದ್ಧ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ

0

Department of Kannada and Culture ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೇ 12 ರ ಬೆಳಗ್ಗೆ 11.00 ಕ್ಕೆ ಕುವೆಂಪು ರಂಗಮಂದಿರದಲ್ಲಿ ಭಗವಾನ್ ಶ್ರೀ ಬುದ್ಧರ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Department of Kannada and Culture ಶಿಕಾರಿಪುರ ತಾಲೂಕು ಹೊಸೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಘು ಆರ್. ಮಲ್ಲಣ್ಣರ್‌ರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ