Monday, March 2, 2026
Monday, March 2, 2026
Home Blog Page 313

HPR Institute of Paramedical Science ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಮನಸ್ಸು ಕೇಂದ್ರೀಕರಿಸಿ ಅಧ್ಯಯನ ಮಾಡಬೇಕು- ಹರಿ ಪ್ರಸಾದ ರೈ

0

HPR Institute of Paramedical Science ವಿದ್ಯಾರ್ಥಿಗಳು ಶಿಕ್ಷಣದ ಅವಧಿಯಲ್ಲಿ ಮನಸ್ಸನ್ನು ಕೇಂದ್ರೀಕರಿಸಿಕೊಂಡು ಅಧ್ಯಯನದಕಡೆ ಹೆಚ್ಚಿನ ಗಮನ ನೀಡಬೇಕು ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಚ್‌ಪಿಆರ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಹೇಳಿದರು.

ಶಿವಮೊಗ್ಗ ಪಟ್ಟಣದ ರಂಗಮಂದಿರದಲ್ಲಿ ಎಚ್‌ಪಿಆರ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ವತಿಯಿಂದ ಹಮ್ಮಿಕೊಂಡ ಪ್ರಥಮ ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ದೀಪ ಬೆಳಗಿಸುವುದು ಮತ್ತು ಪ್ರಮಾಣ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಅಂಕಗಳಿಸುವ ಮೂಲಕ ಸಂಸ್ಥೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕು. ವೈಯುಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಮುಂದಿನ ಮೂರು ವರ್ಷ ಶಿಕ್ಷಣದ ಕಡೆ ಮನಸ್ಸನ್ನು ಕೇಂದ್ರೀಕರಿಸಬೇಕು. ನರ್ಸಿಂಗ್ ಶಿಕ್ಷಣ ಪಡೆದವರಿಗೆ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಉತ್ತಮ ಅವಕಾಶಗಳಿವೆ. ಮೆಡಿಕಲ್ ಕಾಲೇಜುಗಳಲ್ಲಿಯೂ ಸಹ ದಾದಿಯರ ಅವಶ್ಯಕತೆ ಇರುತ್ತದೆ. ನರ್ಸಿಂಗ್ ಶಿಕ್ಷಣ ಪಡೆದವರಿಗೆ ಉದ್ಯೋಗವಕಾಶಗಳು ಸಾಕಷ್ಟು ದೊರೆಯುತ್ತದೆ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಗೌರವಯುತ ಬದುಕುಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ನಾಗೇಂದ್ರಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವುದು ಸವಾಲಿನ ಕೆಲಸವಾಗಿದೆ. ಆದರೂ ಸಹ ಪಟ್ಟಣದಲ್ಲಿ ನರ್ಸಿಂಗ್ ಕಾಲೇಜ್ ಆರಂಭದಿಂದಾಗಿ ಅನೇಕರ ಬದುಕು ಹಸನಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಬಿಎಸ್ಸಿ ನರ್ಸಿಂಗ್ ಕಾಲೇಜ್ ಆರಂಭ ಮಾಡುವ ಉದ್ದೇಶ ಹೊಂದಲಾಗಿದೆ ಹಾಗೂ ಸರ್ಕಾರಿ ನರ್ಸಿಂಗ್ ಹಾಸ್ಟೆಲ್ ಪ್ರಾರಂಭಿಸಲಾಗುವುದು ಎಂದ ಅವರು, ವಿದ್ಯಾರ್ಥಿಗಳು ಹೊರಗಿನ ಶಕ್ತಿಗಳ ಯಾವುದೇ ಗೊಂದಲಗಳಿಗೆ ಕಿವಿಗೊಡದೇ ಸಾಧನೆಯಡೆ ಗಮನ ನೀಡಬೇಕು ಹಾಗೂ ಪೋಷಕರ ಇಟ್ಟ ಆಕಾಂಕ್ಷೆಯನ್ನು ಹುಸಿಗೊಳಿಸಬಾರದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ನೂತನ ನಾಯ್ಕ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಎಸ್. ನಾಗರಾಜ್ ಜೈನ್, ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿಗಳಾದ ಅನಿತಾ ಕುಮಾರಿ ಹಾಗೂ ರೋಹಿಣಿ ಅವರನ್ನು ಸನ್ಮಾನಿಸಲಾಯಿತು.

HPR Institute of Paramedical Science ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪ್ರಭು ಕೆ. ಸಾಹುಕಾರ್, ದಂತ ವೈದ್ಯ ಡಾ. ಎಚ್.ಇ. ಜ್ಞಾನೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸಿ.ಕೆ. ಬಲೀಂದ್ರಪ್ಪ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್, ಎಚ್‌ಪಿಆರ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ ಆಡಳಿತಾಧಿಕಾರಿ ಶಿವಾನಂದ ಎಸ್. ನಾಯ್ಕ್, ಪ್ರಾಂಶುಪಾಲೆ ಎಂ. ಮೇಘಶ್ರೀ, ಸಾರ್ವಜನಿಕ ಆಸ್ಪತ್ರೆಯ ನರ್ಸಿಂಗ್ ಸೂಪರಿಡೆಂಟ್ ಗ್ರೇಡ್-2 ಎಚ್.ಆರ್. ಸರೋಜಾದೇವಿ, ನರ್ಸಿಂಗ್ ಅಧಿಕಾರಿಗಳಾದ ಶಿಲ್ಪಾ ಎಂ. ಬೋರ್ಕರ್, ಎಚ್.ಕೆ. ಜ್ಯೋತಿ, ಜಿ. ಭಾಗ್ಯ ಸೇರಿದಂತೆ ಇತರರಿದ್ದರು.

Bhadra Project Irrigation ಭದ್ರಾ ಎಡದಂಡೆ ನಾಲೆಯಲ್ಲಿ ಮೇ 10 ರಿಂದ 18 ವರೆಗೆ ನೀರು ಬಿಡುಗಡೆ. ಮುಂಜಾಗ್ರತೆ ವಹಿಸಲು ಸಾರ್ವಜನಿಕ ಪ್ರಕಟಣೆ

0

Bhadra Project Irrigation ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.

Bhadra Project Irrigation 2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್‌ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರ್. ರವಿಚಂದ್ರ, ಸದಸ್ಯ ಕಾರ್ಯದರ್ಶಿಗಳು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕ ಅಭಿಯಂತರರು, ಕವೀ ನಿ ನಿ ಭದ್ರಾ ಯೋಜನಾ ವೃತ್ತ, ಇವರು ತಿಳಿಸಿದ್ದಾರೆ.

Karnataka Hindu Religious Institutions ರಾಜ್ಯದ “ಬಿ & ಸಿ ” ಪ್ರವರ್ಗ ಮುಜರಾಯಿ ದೇಗುಲಗಳ ವ್ಯವಸ್ಥಾಪನಾ ಸಮಿತಿ ರಚನೆ ಬಗ್ಗೆ ಇಲಾಖೆ ಪ್ರಕಟಣೆ

0

Karnataka Hindu Religious Institutions ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ‘ಬಿ’ ಮತ್ತು ‘ಸಿ’ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರ ವ್ಯವಸ್ಥಾಪನ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ 25 ವರ್ಷ ವಯಸ್ಸಾಗಿರುವ ಭಕ್ತಾದಿಗಳು/ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಎಲ್ಲಾ ತಾಲೂಕು ತಹಶೀಲ್ದಾರ್ ಕಚೇರಿಯಿಂದ ಪಡೆದು, ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗಧಿತ ನಮೂನೆ -1 (ಬಿ) (22ನೇ ನಿಯಮ)ರಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂ. 05 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Institute of Petrochemicals Engineering and Technology ಪಾಲಿಮರ್/ ಪೆಟ್ರೋ ಕೆಮಿಕಲ್ಸ್ ವಲಯದಲ್ಲಿ ಉದ್ಯೋಗಾವಕಾಶ, ಸಿಪೆಟ್ ನಿಂದ ” ಓಪನ್ ಹೌಸ್” ಕಾರ್ಯಕ್ರಮ

0

Institute of Petrochemicals Engineering and Technology ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್)ಯಲ್ಲಿ ದಿನಾಂಕ 09.05.2025 ರಿಂದ 11.05.2025 ರವರೆಗೆ ಬೆಳಗ್ಗೆ 10 ರಿಂದ ಸಂಜೆ 6 ತನಕ ‘ಓಪನ್ ಹೌಸ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು, ಈ ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ಪ್ಲಾಸ್ಟಿಕ್ಸ್ ಉದ್ಯಮ ಕ್ಷೇತ್ರಕ್ಕೆ ಅಗತ್ಯವಾದ ಮಾನವ ಸಂಪನ್ಮೂಲಕ್ಕೆ ತಾಂತ್ರಿಕ ಶಿಕ್ಷಣ ಹಾಗೂ ಬೆಂಬಲ ನೀಡುವ ಉದ್ದೇಶದೊಂದಿಗೆ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಅಂಡ್ ಟೆಕ್ನಾಲಜಿ(ಸಿಪೆಟ್) ಕಾರ್ಯ ನಿರ್ವಹಿಸುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್ ಕೈಗಾರಿಕಾ ವಲಯದಲ್ಲಿ ಉದ್ಯಮಿಗಳಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ.

ದಿನಾಂಕ 09.05.2025 ರಿಂದ 11.05.2025 ರವರೆಗೆ ಸಿಪೆಟ್ ಸಂಸ್ಥೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ತನಕ ‘ಓಪನ್ ಹೌಸ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Institute of Petrochemicals Engineering and Technology ವಿದ್ಯಾರ್ಥಿಗಳು, ಸಾರ್ವಜನಿಕರು ಸಂಸ್ಥೆಗೆ ಭೇಟಿ ನೀಡಿ ಸಿಪೆಟ್‌ನಲ್ಲಿ ಲಭ್ಯವಿರುವ ಶಿಕ್ಷಣ ಸೌಲಭ್ಯ ಮತ್ತು ಉದ್ಯೋಗಾವಕಾಶಗಳ ಕುರಿತು ಮಾಹಿತಿಯನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ
ದೂ: 9480253024 / 9791431827 ಸಂಪರ್ಕಿಸಬಹುದೆಂದು ಸಿಪೆಟ್ ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಶ್ರೀಕಾಂತ್ ಶಿರಾಲಿ ತಿಳಿಸಿದ್ದಾರೆ.

Aesthetic International Clinic ಕಿರುತೆರೆ ಕಲಾವಿದರಾದ ದಾಮಿನಿ & ನಿಶಿತಾಗೆ ಸನ್ಮಾನ

0

Aesthetic International Clinic ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ವಯಸ್ಸಿನ ಅಗತ್ಯತೆ ಇಲ್ಲ. ಸಾಧನೆ ಮಾಡುವ ಛಲ ಹಾಗೂ ಆತ್ಮವಿಶ್ವಾಸದ ಜೊತೆಗೆ ಪರಿಶ್ರಮವಿರಬೇಕು ಎಂದು ಪದವೀಧರ ಸಹಕಾರ ಸಂಘದ ಅಧ್ಯಕ್ಷರಾದ ಎಸ್.ಪಿ.ದಿನೇಶ್ ಅಭಿಮತ ವ್ಯಕ್ತಪಡಿಸಿದರು.

ಶಿವಮೊಗ್ಗ ನಗರದ ಪ್ರಾಯ ಎಸ್ಥೆಟಿಕ್ ಇಂಟರ್ನ್ಯಾಷನಲ್ ಕ್ಲಿನಿಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಈಗಾಗಲೇ ಬೃಂದಾವನ, ಲಕ್ಷ್ಮಿ ನಿವಾಸ
ಹಾಗೂ ಬೇರೆ ಬೇರೆ ಭಾಷೆಗಳಲ್ಲಿ 500ಕ್ಕೂ ಹೆಚ್ಚು ಎಪಿಸೋಡ್ ಗಳಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳುವ ಜೊತೆಗೆ ತನ್ನ ಅಮೋಘವಾದ ನಟನೆಯಿಂದ ಅಪಾರ ಜನರ ವೀಕ್ಷಕರ ಮನ ಗೆದ್ದಿರುವ ಪುಟ್ಟ ಕಲಾವಿದೆ ನಿಶಿತ, ಈಗಾಗಲೇ ಯೂಟ್ಯೂಬ್ ನಲ್ಲಿ ಮೂರು ಮಿಲಿಯನ್ ಸಬ್ ಸ್ಕ್ರೈಬರ್ ಹೊಂದಿದ್ದಾರೆ. ಇದು ನಮ್ಮ ನಾಡಿಗೆ ಒಂದು ಹೆಮ್ಮೆಯ ಸಂಗತಿ. ಹಾಗೆ ಮತ್ತೊಬ್ಬ ಕಿರುತೆರೆ ಕಲಾವಿದೆ ಅವರು ಸಹ ಬೃಂದಾವನ, ಧರಣಿ, ಯಜಮಾನ ಹಾಗೂ ಹಲವಾರು ಕಿರುತೆರೆಗಳಲ್ಲಿ ನಟಿಸಿ ಜೊತೆಗೆ ಮಾಡಲಿಂಗ್ ಆಗಿರುವ ದಾಮಿನಿ ದಂದಲ್ಲಿ ಕೂಡ ವಿಶೇಷ ಸಾಧನೆ ಮಾಡಿದ್ದಾರೆ.

ಇವರುಗಳಿಗೆ ಗುರುತಿಸಿ ಗೌರವಿಸಿ ಸನ್ಮಾನಿಸಿದಾಗ ನಮ್ಮ ಸಂಸ್ಥೆಗಳ ಕೀರ್ತಿ ಹೆಚ್ಚುತ್ತದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಪ್ರಾಯ ಆಸ್ಪತ್ರೆಯ ಮಾಲೀಕರು ಹಾಗೂ ವೈದ್ಯರಾದ ಡಾ. ಪ್ರಜ್ವಲ್ ಮಾತನಾಡಿ, ನಮ್ಮ ಆಸ್ಪತ್ರೆ ವೃತ್ತಿಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಸಮಾಜಮುಖಿ ಸೇವೆ ಸಲ್ಲಿಸಿದ ಗಣ್ಯರನ್ನು ಗೌರವಿಸುವ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಂಡಿದ್ದೇವೆ. ವೃತ್ತಿ ಹಾಗೂ ಪ್ರವೃತ್ತಿಯನ್ನು ಗೌರವಿಸುತ್ತೇವೆ ಹಾಗೆ ಈ ಎರಡು ಜನ ಕಲಾವಿದರು ಕಿರುತೆರೆ ಹಾಗೂ ಹಿರಿಯ ತೆರೆ ಮೇಲೆ ವಿಶೇಷವಾದ ಸಾಧನೆ ಮಾಡಿ ಅಪಾರ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂತಹ ಕಲಾವಿದರನ್ನು ಪ್ರೋತ್ಸಾಹಿಸಿ ಬೆಂಬಲಿಸಿದಾಗ ಅವರ ಪ್ರತಿಭೆಗಳು ಇನ್ನಷ್ಟು ಅನಾವರಣಗೊಳ್ಳುತ್ತವೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಮನುಷ್ಯನಿಗೆ ತುಂಬಾ ಅಗತ್ಯ. ಅವಕಾಶಗಳು ನಮ್ಮನ್ನು ತುಂಬಾ ಎತ್ತರಕ್ಕೆ ಕೊಂಡೊಯ್ಯುತ್ತವೆ. ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ದಾಮಿನಿ ಹಾಗೂ ನಿಶಿತ ರವರು ಇನ್ನು ಹೆಚ್ಚು ಹೆಚ್ಚು ಕಲಾ ಸೇವೆಗಳ ಮುಖಾಂತರ ಜನಮಾನಸವನ್ನು ತಲುಪಲಿ, ಜೊತೆಗೆ ಅವರಿಂದ ಉತ್ತಮವಾದ ಸಮಾಜ ಸೇವೆಯು ಸಹ ನೆರವೇರಲಿ ಎಂದು ಹಾರೈಸಿದರು.

Aesthetic International Clinic ಈ ವೇಳೆ ವೈದ್ಯರಾದ ಐಶ್ವರ್ಯ ಘಟದ್ ರವರು ಇಬ್ಬರೂ ಕಲಾವಿದರಿಗೆ ಗೌರವ ಸಮರ್ಪಣೆ ಮಾಡಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಇಬ್ಬರೂ ಕಲಾವಿದರು ತಮ್ಮ ಕಿರುತೆರೆ ಹಾಗೂ ಹಿರೀತರೆ ಅನುಭವಗಳು ಏಳು
-ಬೀಳುವಗಳನ್ನು, ಸಾಧನೆಗಳನ್ನು ಹಂಚಿಕೊಂಡರು. ಹಾಗೂ ಹೊಸ ಹೊಸ ಕಲಾವಿದರಿಗೆ ಟಿಪ್ಸ್ ಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.

Department of Social Welfare ಸಮಾಜ ಕಲ್ಯಾಣ ಇಲಾಖೆಯ ವಿವಿಧ ಪಿಯು ಕಾಲೇಜಿಗಳಿಗೆ ಪ್ರವೇಶಾತಿ ಪ್ರಕಟಣೆ

0

Department of Social Welfare 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.

2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮೇ 6 ರಿಂದ 12 ರವರೆಗೆ ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ತೆರಳಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಆಸಕ್ತರು ಮೇ 12 ರೊಳಗೆ ಆಯಾ ವಸತಿ ಕಾಲೇಜುಗಳಲ್ಲಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್‌ಎಟಿಎಸ್ ನಂಬರ್ ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Department of Social Welfare ಕಾಲೇಜುಗಳ ವಿವರ : ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಗಾಜನೂರು-56 ಶಿವಮೊಗ್ಗ ತಾಲ್ಲೂಕು ಮೊ.ಸಂ.9739977365 ಲಭ್ಯವಿರುವ ಕೋರ್ಸ್ಗಳು ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಹೊಸೂರು-908 ಶಿಕಾರಿಪುರ ತಾಲ್ಲೂಕು ಮೊ. ಸಂ. 8971701958, ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್. ಅಟಲ್ ಬಿಹಾರಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಆವಿನಹಳ್ಳಿ-584 ಸಾಗರ ತಾಲ್ಲೂಕು ಮೊ.ಸಂ.9480767164/6363184683, ಪಿ.ಸಿ.ಎಂ.ಬಿ. ಮತ್ತು ಪಿ.ಸಿ.ಎಂ.ಸಿಎಸ್ ಕೋರ್ಸ್ಗಳು ಲಭ್ಯವಿರುತ್ತವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

District Consumer Disputes Redressal Commission ಕಾರು ಸೂಕ್ತ ರಿಪೇರಿಯಲ್ಲಿ ಸೇವಾ ನ್ಯೂನತೆ. ಗ್ರಾಹಕರ ಪರ ತೀರ್ಪು ನೀಡಿದ ಜಿಲ್ಲಾ ಆಯೋಗ

0

District Consumer Disputes Redressal Commission ಶ್ರೀ ಗುರುವ ಭೋವಿ ಇವರು ಎದುರುದಾರರಾದ ದಿ ಮ್ಯಾನೇಜರ್ ಕಾವೇರಿ ಮೋಟರ‍್ಸ್ ಪ್ರೈ.ಲಿ, ಶಿವಮೊಗ್ಗ ಹಾಗೂ ಸುನೀಲ್ ಎ ವಿ, ಸರ್ವೀಸ್ ಅಡ್ವೆಂಸರ್, ಕಾವೇರಿ ಮೋಟರ‍್ಸ್ ಪ್ರೈ.ಲಿ, ಶಿವಮೊಗ್ಗ ಇವರುಗಳ ವಿರುದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರನ್ನು ಆಲಿಸಿದ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ದೂರುದಾರರು 2015 ನೇ ಇಸವಿಯಲ್ಲಿ ತಾವು ಫೋರ್ಡ್ ಕಾರನ್ನು ಖರೀದಿಸಿದ್ದು, ಕಾರನ್ನು ಯಾವುದೇ ರಿಪೇರಿ ಇಲ್ಲದೇ ಓಡಿಸುತ್ತಿದ್ದು, ದಿ: 11-03-2024 ರಂದು ಕಾರಿನ ರಿಪೇರಿಗಾಗಿ ಎದುರುದಾರರ ಶೋ ರೂಮ್‌ನಲ್ಲಿ ಬಿಟ್ಟಿರುತ್ತಾರೆ. ಎದುರುದಾರರು ರೂ.1,67,532/- ಗಳ ಅಂದಾಜು ರಿಪೇರಿ ವೆಚ್ಚವನ್ನು ನೀಡಿದ್ದು ತದನಂತರ ಸರ್ವಿಸ್ ಚಾರ್ಜಸ್ ರೂ.1,17,935/- ಆಗುತ್ತದೆ ಎಂದು ಹೇಳಿರುತ್ತಾರೆ.

ಆದರೆ ಹಲವು ಬಾರಿ ವಿನಂತಿಸಿದರೂ ರಿಪೇರಿ ಮಾಡಿರುವುದಿಲ್ಲ.
ನಂತರ ಎದುರುದಾರರು ಕಾರ್ ರಿಪೇರಿಯಾಗಿದ್ದಾಗಿ ತಿಳಿಸಿದ್ದರ ಮೇರೆಗೆ ದಿ: 24-04-2024 ರಂದು ಕಾರನ್ನು ತೆಗೆದುಕೊಳ್ಳಲು ಹೋದಾಗ ಟೆಸ್ಟ್ ಡ್ರೈವ್ ಮಾಡಿ ನಂತರ ತೆಗೆದುಕೊಳ್ಳಲು ತಿಳಿಸಿದ್ದು, ಟೆಸ್ಟ್ ಡ್ರೆöÊವ್ ಮಾಡುವ ಸಮಯದಲ್ಲಿ ಕಾರಿನ ಮುಂಭಾಗದಲ್ಲಿ ಹೊಗೆ ಬರಲು ಶುರುವಾಗಿ, ಇಂಜಿನ್‌ಗೆ ಬೆಂಕಿ ತಗುಲಿರುತ್ತದೆ. ನಂತರ ಹಲವಾರು ಬಾರಿ ಕಾರನ್ನು ರಿಪೇರಿ ಮಾಡಿ ಕೊಡಲು ವಿನಂತಿಸಿದರೂ ಎದುರುದಾರರು ಕಾರನ್ನು ರಿಪೇರಿ ಮಾಡಿ ಕೊಡಲು ರೂ.2,00,000/- ಗಳಾಗುತ್ತದೆಂದು ತಿಳಿಸುತ್ತಾರೆ. ಆದರೆ ಕಾರನ್ನು ರಿಪೇರಿ ಮಾಡಿಕೊಟ್ಟಿರುವುದಿಲ್ಲ.

ಆದ ಕಾರಣ ದೂರುದಾರರು ಎದುರುದಾರರಿಗೆ ಲೀಗಲ್ ನೋಟಿಸ್ ಕಳುಹಿಸಿ ಕಾರನ್ನು ಸರಿಯಾದ ರೀತಿಯಲ್ಲಿ ರಿಪೇರಿ ಮಾಡಿಕೊಡಲು ಕೋರಿದ್ದರು. ಎದುರುದಾರರು ಅಸಮರ್ಥನೀಯವಾದ ಉತ್ತರವನ್ನು ನೀಡಿದ್ದು, ಕಾರನ್ನು ಸಹ ರಿಪೇರಿ ಮಾಡಿಕೊಟ್ಟಿರುವುದಿಲ್ಲವೆಂದು ಆಯೋಗದ ಮೂದೆ ದೂರನ್ನು ಸಲ್ಲಿಸಿರುತ್ತಾರೆ.

District Consumer Disputes Redressal Commission ದೂರುದಾರರು ಮತ್ತು ಎದುರುದಾರರ ಸಾಕ್ಷಿ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ ಎದುರುದಾರರು ದೂರುದಾರರ ವಾಹನವನ್ನು ಸರಿಯಾದ ರೀತಿಯಲ್ಲಿ ರಿಪೇರಿ ಮಾಡದೇ ಇರುವುದು ಘಟನೆಗೆ ಕಾರಣವೆಂದು ಆಯೋಗ ತೀರ್ಮಾನಿಸಿ, ದೂರುದಾರರು ಹಿಂದಿನ ರಿಪೇರಿ ಮೊತ್ತ ರೂ.1,17,000/- ಗಳನ್ನು ಈ ಆದೇಶವಾದ 15 ದಿನಗಳ ಒಳಗೆ ಎದುರುದಾರರಿಗೆ ನೀಡಲು ಮತ್ತು ಎದುರುದಾರರು ದೂರುದಾರರಿಂದ ಹಣ ಪಡೆದ 45 ದಿನಗಳ ಒಳಗೆ ದೂರುದಾರರ ವಾಹನವನ್ನು ಸರಿಯಾದ ರೀತಿಯಲ್ಲಿ ತೃಪ್ತಿಕರವಾಗಿ ರಿಪೇರಿ ಮಾಡಿಕೊಡಬೇಕಾಗಿ, ತಪ್ಪಿದಲ್ಲಿ ಎದುರುದಾರರು ದೂರುದಾರರಿಗೆ ಪರಿಹಾರವಾಗಿ ಮಾಸಿಕ ರೂ.10,000/- ಗಳನ್ನು ಕಾರನ್ನು ರಿಪೇರಿ ಮಾಡಿ ವಾಪಸ್ ನೀಡುವವರೆಗೂ ಪಾವತಿಸಲು ಹಾಗೂ ರೂ.10,000/- ಗಳನ್ನು ಮಾನಸಿಕ ಹಾನಿಗೆ ಮತ್ತು ರೂ.10,000/- ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ಎಂದು ದೂರುದಾರರಿಗೆ ನೀಡಬೇಕೆಂದು ನಿರ್ದೇಶಿಸಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಪ್ಪ ಮತ್ತು ಸದಸ್ಯರಾದ ಬಿ.ಡಿಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಏ.25 ರಂದು ಆದೇಶಿಸಿದೆ.

Narega Scheme ನರೇಗಾ ಯೋಜನೆ ಕಾಮಗಾರಿ ದುರುಪಯೋಗ ಬೇಡ. ಜೆಜೆಎಂ ಯೋಜನೆ ಅರ್ಹರಿಗೆ ತಲುಪಿಸಿ- ಸಂಸದ ಬಿ.ವೈ.ರಾಘವೇಂದ್ರ

0

Narega Scheme ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜೆಜೆಎಂ ಯೋಜನೆಯಡಿ ಜಿಲ್ಲೆಯಲ್ಲಿ ಅಧ್ಯಯನ ಕೈಗೊಂಡು ಯೋಜನೆಯನ್ನು ಎಲ್ಲ ಅರ್ಹರಿಗೆ ತಲುಪಿಸುವ ಮೂಲಕ ಯಶಸ್ವಿಗೊಳಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೆಜೆಎಂ ಅಡಿಯಲ್ಲಿ ಅಂದಾಜು ರೂ.10.75 ಕೋಟಿ ಮೊತ್ತದಲ್ಲಿ ಒಟ್ಟು 2528 ಕಾಮಗಾರಿ ಮಂಜೂರಾಗಿದ್ದು 2507 ಕಾಮಗಾರಿ ಪ್ರಾರಂಭಗೊಂಡಿವೆ. 699 ಪ್ರಗತಿಯಲ್ಲಿದ್ದು 1808 ಪೂರ್ಣಗೊಂಡಿವೆ. ಯಾವುದೇ ಹೊಸ ಕಾಮಗಾರಿ ಕೈಗೊಳ್ಳುವ ಮುನ್ನ ಅಧಿಕಾರಿಗಳು ಯೋಜನಾ ಪೂರ್ವ ಪರಿಶೀಲನೆ ಕೈಗೊಳ್ಳಬೇಕು. ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಪಡೆದು ಮುನ್ನಡೆಯಬೇಕು ಎಂದು ತಿಳಿಸಿದರು.
Narega Scheme ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಕಟ್ಟಲು ರೂ.1.20 ಲಕ್ಷ ಘಟಕ ವೆಚ್ಚ ನೀಡಲಾಗುತ್ತಿದ್ದು, ಕೆಲ ಫಲಾನುಭವಿಗಳು ಘಟಕ ವೆಚ್ಚ ಸಾಲುತ್ತಿಲ್ಲವೆಂದು ಈ ಹಣವನ್ನು ಹಿಂದಿರುಗಿಸಿದ್ದಾರೆ. ಕೆಲವೆಡೆ ಹಕ್ಕುಪತ್ರ ಇದ್ದವರಿಗೆ ಮಾತ್ರ ನೀಡಲಾಗುತ್ತಿದೆ. ಅನಧಿಕೃತ ಜಾಗಗಳನ್ನು ಸಕ್ರಮಗೊಳಿಸುವ ಹಾಗೂ ಅರ್ಹರಿಗೆ ಈ ಯೋಜನೆಯನ್ನು ತಲುಪಿಸಬೇಕೆಂದು ಸಂಸದರು ತಿಳಿಸಿದರು.
ಅಮೃತ್-1 ಯೋಜನೆಯಡಿ ಕುಡಿಯುವ ನೀರು ಯೋಜನೆ ಪೂರ್ಣಗೊಂಡಿದೆ. ಅಮೃತ್ 2 ಯೋಜನೆಯಡಿ 7 ಪಟ್ಟಣಗಳಲ್ಲಿ ಟೆಂಡರ್ ಆಗಿದ್ದು ಸರ್ವೇ ಕಾರ್ಯ ನಡೆಯುತ್ತಿದೆ ಎಂದು ಕರ್ನಾಟಕ ನಗರ ಕುಡಿಯುವ ನೀರು ಸರಬರಾಜು ಮಂಡಳಿ ಎಇಇ ತಿಳಿಸಿದರು. ಈ ವೇಳೆ ಭದ್ರಾವತಿ ತಾಲ್ಲೂಕು ದಿಶಾ ಸಮಿತಿ ಸದಸ್ಯರು, ಭದ್ರಾವತಿಯಲ್ಲಿ ಹೊಸದಾಗಿ ನೀಡಿರುವ ಕುಡಿಯುವ ನೀರಿನ ಸಂಪರ್ಕದಲ್ಲಿ ನೀರು ಬರುತ್ತಿಲ್ಲ ಬದಲಾಗಿ ಹಳೆಯ ಪೈಪ್‌ನಲ್ಲೇ ನೀರು ಬರುತ್ತಿದ್ದು ಇದನ್ನು ಪರಿಶೀಲಿಸಬೇಕೆಂದರು.
ದಿಶಾ ಸಮಿತಿ ಸದಸ್ಯರಾದ ಗುರುಮೂರ್ತಿ ಮಾತನಾಡಿ, ಜಿಲ್ಲೆಯ ಮೊರಾರ್ಜಿ ಶಾಲೆಗಳ ರಿಪೇರಿಗೆ 2024 ರಲ್ಲೇ ರೂ.3.96 ಕೋಟಿ ಹಣ ಶಿವಮೊಗ್ಗ ಜಿಲ್ಲೆಯ ಲ್ಯಾಂಡ್ ಆರ್ಮಿಗೆ ಮಂಜೂರಾಗಿದ್ದು ಈವೆರೆಗೆ ಜಿಲ್ಲೆಗೆ ಹಣ ಬಿಡುಗಡೆಯಾಗಿಲ್ಲ. ಕೇಂದ್ರ ಕಚೇರಿಯಲ್ಲೇ ಇಟ್ಟುಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದರು.
ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಪ್ರಗತಿ ಕಡಿಮೆ ಇದ್ದಂತಿದೆ. ಶಿವಮೊಗ್ಗ ನಗರದಲ್ಲೇ 12 ಸಾವಿರ ಹೆರಿಗೆ ಆಗುತ್ತದೆ. ಆದರೆ ಜಿಲ್ಲಾ ಯೋಜನೆ ಗುರಿ ಕೇವಲ 8524 ಇದ್ದು 2024 ರ ಏಪ್ರಿಲ್ ನಿಂದ 2025 ರ ಮಾರ್ಚ್ವರೆಗೆ 7395 ಫಲಾನುಭವಿ ಶೇ.87 ಪ್ರಗತಿ ಸಾಧಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆ ಹೆಚ್ಚಾಗಿ ಆಗುತ್ತಿಲ್ಲ. ಈ ಬಗ್ಗೆ ಗಮನ ಹರಿಸಬೇಕು ಎಂದರು.
ಶಾಸಕರಾದ ಆರಗ ಜ್ಞಾನೇಂದ್ರ ಮಾತನಾಡಿ, ಮಲೆನಾಡು ಭಾಗದಲ್ಲಿ ಇಂಗ್ಲಿಷ್ ಮಾಧ್ಯಮವನ್ನು ನೀಡದ ಕಾರಣ ಮಕ್ಕಳನ್ನು ನಗರಕ್ಕೆ ಕಳುಹಿಸಲಾಗುತ್ತಿದೆ. ಎಸ್‌ಸಿ/ಎಸ್‌ಟಿ, ಬಡವರ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಇಂತಹ ಗ್ರಾಮೀಣ ಭಾಗ ಶಾಲೆಗಳಿಗೆ ಇಂಗ್ಲಿಷ್ ಮಾಧ್ಯಮ ನೀಡಿದರೆ ಬದುಕುತ್ತವೆ. ಕಳೆದ ಸಾಲಿಗೆ ಹೋಲಿಸಿದರೆ ಈ ವರ್ಷ 11 ಶಾಲೆಗಳು ಬಂದ್ ಆಗಿವೆ. ಇಂಗ್ಲಿಷ್ ಮಾಧ್ಯಮಗಳ ಆರಂಭಕ್ಕೆ ನೀಡಿದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಕಳುಹಿಸುವಂತೆ ಕೋರಿದರು.
ಡಿಡಿಪಿಐ ಮಂಜುನಾಥ್, ಜಿಲ್ಲೆಯಿಂದ ಇಂಗ್ಲಿಷ್/ಕನ್ನಡ ಮಾಧ್ಯಮ-ದ್ವಿಭಾಷೆ ಮಾಧ್ಯಮಕ್ಕಾಗಿ 32 ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಪ್ರತಿ ತರಗತಿಗೆ ಕನಿಷ್ಟ 25 ವಿದ್ಯಾರ್ಥಿಗಳಿರಬೇಕೆಂಬ ನಿಯಮವಿದ್ದರೂ ತಾಲ್ಲೂಕುಗಳಿಂದ ಬಂದAತಹ ಎಲ್ಲ 32 ಪ್ರಸ್ತಾವನೆಯನ್ನು ಕಳುಸಹಿಲಾಗಿದೆ. ಜಿಲ್ಲೆಯಲ್ಲಿ 10 ಕೆಪಿಎಸ್ ಶಾಲೆಗಳು ಚಾಲ್ತಿಯಲ್ಲಿದ್ದು 19 ಕೆಪಿಎಸ್ ಶಾಲೆ ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸಂಸದರು, ಶಾಸಕರು ಹಾಗೂ ದಿಶಾ ಸಮಿತಿ ಸದಸ್ಯರು, ಮಲೆನಾಡು ಭಾಗದಲ್ಲಿ ಪ್ರತಿ ತರಗತಿಯಲ್ಲಿ 25 ವಿದ್ಯಾರ್ಥಿಗಳು ದಾಖಲಾಗುವುದು ಕಷ್ಟ. ಆದ್ದರಿಂದ ಮಲೆನಾಡು ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕೆಂದು ದಿಶಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕಳುಹಿಸಲು ನಿರ್ಧರಿಸಿದರು.
ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಶಾಲೆಗಳಿಗೆ ಅಡುಗೆ ಸಿಲಿಂಡರ್ ವಿತರಣೆ ವೇಳೆ 6 ಕಿ.ಮೀ ನಂತರ ಪ್ರತಿ ಕಿ.ಮೀ ಗೆ ರೂ.1.60 ಪೈಸೆ ಯನ್ನು ಏಜೆನ್ಸಿಗಳು ವಸೂಲಿ ಮಾಡುತ್ತಿದ್ದಾರೆ. ಮತ್ತು ಗೃಹಬಳಕೆಯ ಸಿಲಿಂಡರ್‌ಗೆ ರೂ. 40 ರಿಂದ 60 ವಸೂಲಿ ಮಾಡುತ್ತಿದ್ದು ಈ ವಸೂಲಾತಿಗೆ ರಶೀದಿ ನೀಡುವಂತೆ ತಿಳಿಸಿದ ಅವರು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಶಾಸಕ ಆರಗ ಜ್ಞಾನೇಂದ್ರ ಸರ್ಕಾರದ ಆದೇಶದಂತೆ ವಿತರಣೆ ಸಂಪೂರ್ಣ ಉಚಿತವಾಗಿದ್ದರೂ ವಿತರಕರು ಮನಸೋ ಇಚ್ಚೆ ಹಣ ವಸೂಲು ಮಾಡುತ್ತಿದ್ದು ಈವರೆಗೆ ವಸೂಲು ಮಾಡಲಾದ ಹಣವನ್ನು ಹಿಂಪಡೆಯಬೇಕು ಆಗ್ರಹಿಸಿದ ಅವರು ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ಗ್ರಾಹಕರಿಗೆ ಅನುಕೂಲ ಮಾಡಿಕೊಡಬೇಕೆಂದರು.
ಸಂಸದರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಗಳನ್ನು ನಿಗದಿತ ವೇಳೆಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಗಮಾರಿ ಕೈಗೊಳ್ಳಬೇಕು. ಹೊಳೆಹೊನ್ನೂರು ಬೈಪಾಸ್ ರಸ್ತೆಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೆ ಅನುವು ಮಾಡಿಕೊಡಬೇಕು ಹಾಗೂ ಸಿಗಂದೂರು ಸೇತುವೆಯನ್ನು ಜೂನ್ ಅಂತ್ಯದೊಳಗೆ ಮುಗಿಸಬೇಕೆಂದು ಸೂಚನೆ ನೀಡಿದರು. ಬಹು ಗ್ರಾಮ ನೀರಿನ ಯೋಜನೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಕಾಮಗಾರಿಗಳನ್ನು ಕ್ಷಿಪ್ರಗೊಳಿಸಬೇಕು ಎಂದರು.
ದಿಶಾ ಸಮಿತಿ ಸದಸ್ಯರಾದ ಗಿರೀಶ್ ಭದ್ರಾಪುರ, ಬುಳ್ಳಾಪುರ-ಹೊಳೆಬೆನವಳ್ಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ರೂ.40 ಕೋಟಿಯಲ್ಲಿ ಕೈಗೊಂಡಿದ್ದು ಕಾಮಗಾರಿ ಪೂರ್ಣಗೊಂಡಿದ್ದರೂ ನೀರು ಬಂದಿಲ್ಲ. ಚರಂಡಿ ಮತ್ತು ವಿಷಪೂರಿತ ನೀರು ನದಿಗೆ ಸೇರುತ್ತಿರುವ ಕಾರಣ ಫಲಾನುಭವಿಗಳು ಬಳಸಲು ನಿರಾಕರಿಸುತ್ತಿದ್ದಾರೆ ಎಂದು ಇಲಾಖೆಯವರು ತಿಳಿಸಿದ್ದಾರೆ. ಯಾವುದೇ ಹೊಸ ಯೋಜನೆ ಕೈಗೊಳ್ಳುವ ಮೊದಲು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಅಭಿಪ್ರಾಯ ಪಡೆಯಬೇಕು. ಆಗ ಈ ರೀತಿ ಸಮಸ್ಯೆ ಬರುವುದಿಲ್ಲವೆಂದರು. ಹಾಗೂ ಬಿ.ಬೀರನಹಳ್ಳಿ ಕ್ರಾಸ್‌ನಿಂದ ರಸ್ತೆ ನಿರ್ವಹಣೆಯಾಗುತ್ತಿಲ್ಲ ವೆಂದು ದೂರಿದರು.
ಸಂಧ್ಯಾ ಸುರಕ್ಷಾ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಸಲ್ಲಿಸಿದಾಗ ಅರ್ಜಿದಾರರಿಗೆ ತಮಗೆ ಗಂಡು ಮಕ್ಕಳಿದ್ದಾರೆ ಈ ಯೋಜನೆ ಸೌಲಭ್ಯ ಸಿಗವುದಿಲ್ಲವೆಂದು ಅರ್ಜಿ ತಿರಸ್ಕರಿಸಲಾಗುತ್ತಿದೆ. ಈ ಕುರಿತು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕೆಂದರು.
ದಿಶಾ ಸಮಿತಿ ಸದಸ್ಯರು, ವಿಧವಾ ವೇತನ ಪಡೆಯಲು ಅರ್ಜಿ ಸಲ್ಲಿಸಿದ ವೇಳೆ ಮಕ್ಕಳಿಗೆ 18 ವರ್ಷ ತುಂಬಿದರೆ ಈ ಸೌಲಭ್ಯ ಬರುವುದಿಲ್ಲವೆಂದು ಹೇಳಲಾಗುತ್ತಿದೆ ಈ ಬಗ್ಗೆ ಪರಿಶೀಲಿಸಬೇಕೆಂದರು.
ಸದಸ್ಯರಾದ ಮಲ್ಲಿಕಾರ್ಜುನ ಹಕ್ರೆ ನರೇಗಾ ಯೋಜನೆಯಡಿ ಗ್ರಾ.ಪಂ ಗಳಿಗೆ ರೂ.3.70 ಕೋಟಿ ಕಾಮಗಾರಿಯನ್ನು ಕಾನೂನುಬದ್ದವಾಗಿ ಕ್ರಿಯಾ ಯೋಜನೆ ಮೂಲಕ ಅನುಮೋದಿಸುವ ಅವಕಾಶವಿದ್ದು ಅನೇಕ ಗ್ರಾ.ಪಂಗಳಲ್ಲಿ ಕೇವಲ 30 ರಿಂದ 40 ಲಕ್ಷಕ್ಕೆ ಮಿತಗೊಳಿಸುತ್ತಿರುವುದು ಕಂಡು ಬಂದಿದ್ದು ಈ ರೀತಿ ಮಿತಿಗೊಳಿಸದೇ ಅನುಮೋದನೆ ನೀಡಬೇಕೆಂದರು. ಹಾಗೂ ಫಾರಂ 16 ನೀಡಿದ 15 ದಿಗನಳ ಒಳಗೆ ನರೇಗಾ ಅಡಿಯಲ್ಲಿ ಕೆಲಸ ನೀಡಬೇಕು. ನರೇಗಾ ಕೆಲಸಕ್ಕೆ ಬೇಡಿಕೆ ಇದೆ.
ಸಂಸದರು, ನರೇಗಾದಡಿ ಆಸ್ತಿ ಸೃಷ್ಟಿಯಾಗುವಂತಹ ಕಾಮಗಾರಿಗಳನ್ನು ಕೈಗೊಳ್ಳಬೇಕು. ಬೇಡಿಕೆಗನುಗುಣವಾಗಿ ಜಾಬ್ ಕಾರ್ಡ್ಗಳನ್ನು ಹೆಚ್ಚಿಸಿರಿ ಎಂದ ಅವರು ಯಾವುದೇ ಕಾಮಗಾರಿ ದುರುಪಯೋಗವಾಗದಂತೆ ಆನ್‌ಲೈನ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ಜನ ಪ್ರತಿನಿಧಿಗಳು, ದಿಶಾ ಸಮಿತಿ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡಿದ್ದರು.

B.Y. Raghavendra ಶರಾವತಿ ಸಂತ್ರಸ್ತರ ಸಮಸ್ಯೆ.ರಾಜ್ಯ ಮತ್ತು ಕೇಂದ್ರದ ಮಾತುಕತೆಗೆ ಅವಕಾಶ ನೀಡಿದೆ. ಇದನ್ನು ಸದುಪಯೋಗ ಮಾಡಿ- ಬಿ.ವೈ.ರಾಘವೇಂದ್ರ

0

B.Y. Raghavendra ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಹೆಜ್ಜೆ ಇಡಲಾಗುತ್ತಿದ್ದು, ಈ ಸಮಸ್ಯೆಯ ಪ್ರಾಯೋಗಿಕ ಪರಿಹಾರಕ್ಕೆ ಅಧಿಕಾರಿಗಳು ಹಾಗೂ ರೈತರು ಸಹಕರಿಸಬೇಕು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿ ಕುರಿತು ಅಧಿಕಾರಿಗಳು ಮತ್ತು ಸಂತ್ರಸ್ತರೊAದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಳುಗಡೆ ಸಂತ್ರಸ್ತರಿಗೆ ಸಂಬAಧಿಸಿದAತೆ ಅರಣ್ಯ ಮತ್ತು ಕಂದಾಯ ಇಲಾಖೆಗಳು ಸೇರಿ 9129 ಎಕರೆಯನ್ನು ಸರ್ವೇಗೆ ಗುರುತಿಸಲಾಗಿದ್ದು ಸರ್ವೇ ಕಾರ್ಯ ಪ್ರಗತಿಯಲ್ಲಿದೆ. ಈ ವಿಷಯದಲ್ಲಿ ರೈತರಲ್ಲಿ ಹಾಗೂ ಅಧಿಕಾರಿಗಳಲ್ಲಿ ಅನೇಕ ಗೊಂದಲಗಳಿವೆ. ಗುರುತಿಸಿರುವುದಕ್ಕಿಂತ ಹೆಚ್ಚಿನ ಭೂಮಿಯಲ್ಲಿ ರೈತರು ಅನುಭೋಗದಲ್ಲಿದ್ದು, ಈ ಬಗ್ಗೆಯೂ ಗಮನ ಹರಿಸಬೇಕಿದೆ.
ಸುಪ್ರೀಂ ಕೋರ್ಟ್, ರಾಜ್ಯ ಮತ್ತು ಕೇಂದ್ರದ ಕಾರ್ಯದರ್ಶಿಗಳು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಅವಕಾಶ ನೀಡಿದ್ದು, ಜಿಲ್ಲಾಧಿಕಾರಿಗಳು, ಸಿಸಿಎಫ್ ಮತ್ತು ಸಿಎಸ್ ರವರು ಇದನ್ನು ಗಂಭೀರವಾಗಿ ಪರಿಗಣಿಸಿ ಈ ಸದವಕಾಶವನ್ನು ಬಳಸಿಕೊಳ್ಳಬೇಕೆಂದು ತಿಳಿಸಿದರು.
B.Y. Raghavendra ಮಾಜಿ ಶಾಸಕರಾದ ಹರತಾಳು ಹಾಲಪ್ಪ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸುಪ್ರೀಂ ಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳು ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ಫಾರೆಸ್ಟ್ ಸೆಟ್ಲಮೆಂಟ್ ಆಫೀಸರ್‌ನ್ನು ನೇಮಿಸಿ ನಿಜವಾದ ಮುಳಗಡೆ ಸಂತ್ರಸ್ತರನ್ನು ಗುರುತಿಸಿ ಸಮಸ್ಯೆ ಬಗೆಹರಿಸಬೇಕೆಂದರು.
ಸAತ್ರಸ್ತರಾದ ತಿಮ್ಮಪ್ಪ ಮಾತನಾಡಿ, ಈ ಹಿಂದೆ ಕಳುಹಿಸಲಾಗಿದ್ದ ಸುಮಾರು 6000 ಎಕರೆ ಬ್ಲಾಕ್ ವಿವರ ಸಂಪೂರ್ಣ ತಪ್ಪಾಗಿತ್ತು. ಅದನ್ನೇ ಮುಂದುವರೆಸಿಕೊAಡು ಹೋದರೆ ಸಮಸ್ಯೆಗೆ ಪರಿಹಾರ ಒದಗುವುದು ಕಷ್ಟ. ಆದ್ದರಿಂದ ಹೊಸದಾಗಿ ಸರ್ವೇ ಮಾಡಿ ಬ್ಲಾಕ್ ಸಿದ್ದಪಡಿಸಿದರೆ ಒಳಿತು. ಸರ್ವೇ ನಂತರ ಗೊಂದಲ ಹೆಚ್ಚಾಗಿದ್ದು ಸರ್ವೇ ನಂ.ಗಳೂ ಬದಲಾಗಿ ಕಂದಾಯ ಭೂಮಿಯನ್ನು ಅರಣ್ಯ ಭೂಮಿ ಎಂದು ತೋರಿಸಲಾಗುತ್ತಿದೆ ಎಂದರು.
ತೀ.ನಾ.ಶ್ರೀನಿವಾಸ್ ಮಾತನಾಡಿ, ಇದೊಂದು ಗಂಭೀರ ವಿಚಾರ. ರಾಜ್ಯ ಮತ್ತು ಕೇಂದ್ರದ ಕಾರ್ಯದರ್ಶಿಗಳು ಸೌಹಾರ್ಧಯುತವಾಗಿ ಚರ್ಚಿಸಿ ಬಗೆಹರಿಸಲು ಸುಪ್ರೀಂ ಕೋರ್ಟ್ ನೀಡಿರುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು ಈ ಸಮಸ್ಯೆಗೆ ಪರಿಹಾರ ನೀಡಬೇಕು. ಹಕ್ಕು ಪತ್ರ ಇರುವವರಿಗಾದರೂ ನ್ಯಾಯ ಒದಗಬೇಕು ಎಂದರು.
ಸAತ್ರಸ್ತರು ಮಾತನಾಡಿ, ಹಿಂದಿಗಿAತ ಪ್ರಸ್ತುತ ಸರ್ವೇ ಕಾರ್ಯ ಶುರುವಾದಾಗಿನಿಂದ ಗೊಂದಲ ಹೆಚ್ಚಾಗಿದೆ. ಹಲವಾರು ಗ್ರಾಮಗಳಲ್ಲಿ ಅನೇಕ ವರ್ಷಗಳಿಂದ ಅನುಭೋಗದಲ್ಲಿರುವ ಜಮೀನು ಅರಣ್ಯವೆಂದು ತೋರಿಸಲಾಗುತ್ತಿದ್ದು, ಅರಣ್ಯ ಭೂಮಿಯನ್ನು ನಮ್ಮ ಭೂಮಿ ಎಂದು ತೋರಿಸಲಾಗುತ್ತಿದೆ. ಮತ್ತೆ ಕೆಲವು ಗ್ರಾಮದಲ್ಲಿ ನಿಜವಾದ ಸಂತ್ರಸ್ತರ ಹೆಸರನ್ನೇ ಸೇರಿಸಿಲ್ಲ. ಆದ್ದರಿಂದ ನಾವಿರುವ ಜಾಗವನ್ನು ಗುರುತಿಸಿ ಡಿನೋಟಿಫೈ ಮಾಡಿಸಿರಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರ ಸುಮಾರು 9129 ಎಕರೆ ವಿಸ್ತೀರ್ಣ ಗುರುತಿಸಲಾಗಿದೆ. 4879 ಎಕರೆ ಅಳತೆಯಾಗಿದ್ದು 4249 ಎಕರೆ ಬಾಕಿಇದೆ. 97 ಸ್ಥಳ ಮತ್ತು 400 ಬ್ಲಾಕ್ ಗುರುತಿಸಲಾಗಿದೆ. ರಾಜ್ಯ ಸರ್ಕಾರದ ಆದೇಶದಂತೆ ಸರ್ವೇ ಕಾರ್ಯ ನಡೆಯುತ್ತಿದೆ. ಆದರೆ ಸುಮಾರು 25 ಸಾವಿರ ಎಕರೆ ಭೂಮಿಯಲ್ಲಿ ಉಳುಮೆ ಮಾಡಲಾಗುತ್ತಿದ್ದು, ಸದ್ಯಕ್ಕೆ 9129 ಎಕರೆ ಮಾತ್ರ ಗುರುತಿಸಲಾಗಿದೆ. ಹೆಚ್ಚುವರಿಯಾಗಿರುವ ಜಮೀನಿನ ಕುರಿತು ಮನವಿ ನೀಡಿದಲ್ಲಿ ಈ ಕುರಿತು ಕಾನೂನಾತ್ಮಕವಾಗಿ ಸಹಾಯ ಮಾಡಲು ಸಹಕರಿಸಲಾಗುವುದು ಎಂದು ತಿಳಿಸಿದರು.
ಸಿಸಿಎಫ್ ಹನುಮಂತಪ್ಪ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸಂಬAಧಿಸಿದAತೆ ಪ್ರಸ್ತುತ 27 ಜಿಓ ಲಭ್ಯವಿದೆ. 9129 ಎಕರೆಯನ್ನು ಗುರುತಿಸಲಾಗಿದೆ. ಸರ್ಕಾರ ಭೂ ಅನುಭೋಗದಾರರ ಮತ್ತು ಡಿಜಿಪಿಎಸ್ ದಾಖಲಾತಿ ನೀಡುವಂತೆ ಕೇಳಿದ್ದು ಪ್ರಸ್ತುತ ಈ ದಾಖಲಾತಿ ಸಿದ್ದವಿರುವ ವಿವರವನ್ನು ಸಲ್ಲಿಸಬಹುದು ಎಂದರು.
ಶಾಸಕರಾದ ಶಾರದಾ ಪರ‍್ಯಾನಾಯ್ಕ, ಆರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಅಶೋಕ್ ನಾಯ್ಕ್, ದಿಶಾ ಸಮಿತಿ ಸದಸ್ಯರು, ಡಿಸಿಎಫ್, ಎಸಿ, ತಹಶೀಲ್ದಾರರು, ಡಿಡಿಎಲ್‌ಆರ್, ಇತರೆ ಅಧಿಕಾರಿಗಳು, ಸಂತ್ರಸ್ತರು ಹಾಜರಿದ್ದರು.

Keladi Shivappa Nayak University of Agriculture and Horticulture ಬೇಕರಿ ವಿವಿಧ ಉತ್ಪನ್ನಗಳ ತಯಾರಿಕಾ ಕೌಶಲ್ಯ‌ ತರಬೇತಿ ನೋಂದಾವಣೆಗೆ ಆಹ್ವಾನ

0

Keladi Shivappa Nayak University of Agriculture and Horticulture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಮೇ 20 ರಿಂದ ಜೂನ್ 18 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್‌ಪೇಸ್ಟಿç, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.
ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮೇ 19 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.