Monday, March 2, 2026
Monday, March 2, 2026
Home Blog Page 316

Sri Lakshmi Narasimha Temple ಹೊಸಮನೆ ಶ್ರೀಲಕ್ಷ್ಮೀನರಸಿಂಹ ದೇಗುಲದಲ್ಲಿ ಶ್ರೀನರಸಿಂಹ ಜಯಂತ್ಯುತ್ಸವ

0

Sri Lakshmi Narasimha Temple ಶಿವಮೊಗ್ಗ ಹೊಸಮನೆ ನಾಲ್ಕನೇ ತಿರುವಿನ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಯಂತೋತ್ಸವ ಸಮಾರಂಭ ಮೇ 11ರ ಭಾನುವಾರದಂದು ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9:00ಗಂಟೆಗೆ ಶ್ರೀ ಸುಮುಖಭಟ್ಟ ಅವರ ನೇತೃತ್ವದಲ್ಲಿ ಗುರು ಪ್ರಾರ್ಥನೆ, ಪೂಜೆ ನಡೆಯಲಿದ್ದು ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವರ ಸಾಮೂಹಿಕ ಹೋಮ ನಡೆಯಲಿದೆ. ಮಧ್ಯಾಹ್ನ 12:30ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಿರುತ್ತದೆ ಎಂದಿದ್ದಾರೆ.
Sri Lakshmi Narasimha Temple ಸಂಜೆ 6ರಿಂದ ಶಿವಮೊಗ್ಗದ ಸಪ್ತ ಸ್ವರ ಟ್ರಸ್ಟ್ ತಂಡದಿಂದ ಭಕ್ತಿಗೀತೆಗಳ ಕಾರ್ಯಕ್ರಮ ಹಾಗೂ ದಾವಣಗೆರೆ ನಮನ ಅಕಾಡೆಮಿಯ ಕುಮಾರಿ ಹಂಸಿಕ ಅವರಿಂದ ಶ್ರೀ ನರಸಿಂಹ ಸ್ವಾಮಿ ದೇವರ ನವರೂಪದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.
ಈ ದಿನದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಸಂಸದ ಬಿ. ವೈ. ರಾಘವೇಂದ್ರ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಶಾಸಕರಾಧ ಕೆ ಬಿ ಪ್ರಸನ್ನ ಕುಮಾರ್, ಎಸ್ ರುದ್ರೇಗೌಡ, ಎಂ ಎ ಡಿ ಬಿ ಅಧ್ಯಕ್ಷ ಮಂಜುನಾಥಗೌಡ, ಶಾಸಕರಾದ ಚನ್ನಬಸಪ್ಪ, ಡಿಎಸ್ ಅರುಣ್, ಧನಂಜಯ ಸರ್ಜಿ, ಪ್ರಮುಖರಾದ ಆರ್. ಪ್ರಸನ್ನ ಕುಮಾರ್, ಪಿಐ ರವಿ ಪಾಟೀಲ್, ರೇಖಾ ರಂಗನಾಥ್ ಹಾಗೂ ಇತರರು ಆಗಮಿಸಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಲು ಕೋರಿದ್ದಾರೆ.

CM Siddharamaih ಕುಡಿಯುವ ನೀರಿನ ಬವಣೆ ತಪ್ಪಿಸಲು ಸಿದ್ಧರಾಮಯ್ಯನವರಿಂದ ‌ಜಿಲ್ಲಾಧಿಕಾರಿಗಳಿಗೆ ಸೂಚನೆಗಳು

0

CM Siddharamaih ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಡಿಯೋ ಸಂವಾದ ನಡೆಸಿದ್ದಾರೆ
ಜಿಲ್ಲಾಧಿಕಾರಗಳಿಗೆ ಒಂದಷ್ಟು ಸಲಹೆ, ಸೂಚನೆಗಳನ್ನು ನೀಡಿದರು. ಅವು ಈ ಕೆಳಗಿನಂತಿವೆ

  • ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.
  • ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು.
  • ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು.
  • ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‌ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್‌ವೆಲ್ ಕೊರೆದು ವೆಚ್ಚ ಮಾಡಬಾರದು.
  • ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇಕಡಾ 55ರಷ್ಟು ಮಾನ್ಸೂನ್ ಪೂರ್ವ ಮಳೆ ಹೆಚ್ಚಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ಕಡಿಮೆ ಮಳೆ ದಾಖಲಾಗಿಲ್ಲ.
  • 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ.
  • ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ.
  • ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ.

CM Siddharamaih ರಾಜ್ಯದ ಯಾವುದೇ ಒಂದು ಹಳ್ಳಿಯಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆಯನ್ನು ಈಗಲೇ ಮಾಡಬೇಕು.

ಈ ಎಲ್ಲಾ ಅಂಶಗಳನ್ನ ರಾಜ್ಯದ ಎಲ್ಲಾ ಜಿಲ್ಲಾಡಳಿತವು ಪಾಲಿಸಿದರೆ ನೀರಿನ ಬರದ ಬವಣೆ ತಪ್ಪಿಸ ಬಹುದಾಗಿದೆ.

Madhu Bangarappa ಜಾತಿ & ಜನಗಣತಿ ನಡೆಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಸ್ವಾಗತ- ಸಚಿವ ಮಧು‌ ಬಂಗಾರಪ್ಪ

0

Madhu Bangarappa ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ನಡೆಸಲು ಮುಂದಾಗಿರುವ
ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ‌ ಮಧು‌ಬಂಗಾರಪ್ಪ ಕೇಂದ್ರದ ನಿರ್ಧಾರವನ್ನ ಸ್ವಾಗತಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ
ಇದರಿಂದ ದೇಶದ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯುತ್ತದೆ ಎಂದು ಹೇಳಿದರು

ಇದನ್ನೇ ರಾಜ್ಯ ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದೆ
ವಿರೋಧ ಪಕ್ಷದವರು ಟೀಕೆಯ ನಂತರವೂ ಈ ನಿರ್ಧಾರ ತೆಗೆದುಕೊಂಡಿದ್ದಾರೆ
ರಾಜ್ಯ ಸರ್ಕಾರ ಅನುಸರಿಸಿದ ಮಾನದಂಡವನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು

Madhu Bangarappa ಬೇಕಾದರೆ ಇದಕ್ಕೆ ಇನ್ನಷ್ಟು ಅಂಶಗಳನ್ನು ಸೇರಿಸಿದರೆ ಒಳ್ಳೆಯದು
ಗಣತಿ ಮೂಲಕ ಜನರ ತೆರಿಗೆ ಹಣ ಯಾವ ರೀತಿ ಬಳಕೆಯಾಗುತ್ತಿದೆ ಎಂದು ಗೊತ್ತಾಗಬೇಕು ಎಂದೂ ಕೂಡ ಒತ್ತಿಹೇಳಿದರು.

ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ.
ಕೇಂದ್ರದ ಗಣತಿ ಮೂಲಕ ದೇಶದ ಜನರ ಜೀವನಮಟ್ಟದ ಮಾಹಿತಿ ಸಿಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರ ನೀಡಿದರು.

ಇಲಾಖೆಯಲ್ಲಿನ ನೂತನ ಕ್ರಮಗಳ ಬಗ್ಗೆ ಮಾತನಾಡಿ
ಈ ಬಾರಿ ಎಐ ಆಧಾರಿತ ಭಾಷಾ ಕಲಿಕೆಗೆ ಗಮನ ಹರಿಸಲಾಗುತ್ತದೆ ಎಂದು ಸಚಿವ‌ ಮಧು‌ಬಂಗಾರಪ್ಪ‌ ತಿಳಿಸಿದರು.

Siddaramaiah ಇಂದಿನಿಂದ ಮೂರು ಹಂತಗಳಲ್ಲಿ ಪರಿಶಿಷ್ಠಜಾತಿ ಒಳಮೀಸಲಾತಿ ಸಮೀಕ್ಷೆ ಆರಂಭ- ಸಿದ್ಧರಾಮಯ್ಯ.

0

Siddaramaiah ಒಳ‌ಮೀಸಲಾತಿ ಜಾರಿಗೆ ನಾವು ಬದ್ಧರಾಗಿದ್ದು, ಇಂದಿನಿಂದ ಮೂರು ಹಂತಗಳಲ್ಲಿ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ವರದಿ ನೀಡಿದೆ.

Siddaramaiah ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ ಎಂದು ಪತ್ರಿಕಾಗೋಷ್ಢಿಯಲ್ಲಿ ಸಿದ್ಧರಾಮಯ್ಯ ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಎಚ್.ಕೆ.ಮುನಿಯಪ್ಪ
ಸಮಾಜ ಕಲ್ಯಾಣ ಸಚಿವ
ಡಾ.ಮಹದೇವಪ್ಪ, ಮುಂತಾದ‌ಗಣ್ಯರು‌‌ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Karnataka Examination Results 2025 ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಮೂವರ ಸಾಧನೆಯಿಂದ ಜಿಲ್ಲೆಯ ಕೀರ್ತಿ ಹೆಚ್ಚಾಗಿದೆ- ಮಧು ಬಂಗಾರಪ್ಪ

0

Karnataka Examination Results 2025 ಇದೇ ವೇಳೆ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆ ರಾಜ್ಯದಲ್ಲಿ 4 ನೇ ಸ್ಥಾನ ಪಡೆದಿದ್ದು, ಜಿಲ್ಲೆಯ ಗೋಪಾಳದ ರಾಮಕೃಷ್ಣ ವಿದ್ಯಾಲಯದ ನಿತ್ಯ ಎಂ ಕುಲಕರ್ಣಿ, ಪ್ರಿಯದರ್ಶಿನಿ ಶಾಲೆಯ ನಮನ ಹಾಗೂ ಆದಿಚುಂಚನಗಿರಿ ವಿದ್ಯಾ ಸಂಸ್ಥೆಯ ಸಹಿಷ್ಣು ಎಂಬ ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
2024-25 ರ ಪರೀಕ್ಷೆ 1 ರ ಫಲಿತಾಂಶವು ಕಳೆದ ಸಾಲಿಗಿಂತ ಶೇ.8.5 ರಷ್ಟು ಅಧಿಕವಾಗಿದೆ. ಈ ವರ್ಷ ಶೇ.75 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ(ಶೇ.60) ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ್ದಾರೆ. ಕಳೆದ ವರ್ಷ ಶೇ.54 ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದಿದ್ದರು. ಈ ಬಾರಿ ಶೇ.75 ರಷ್ಟು ಆರ್‌ಟಿಇ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಉತ್ತಮ ಫಲಿತಾಂಶ ಬರಲು ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯನ್ನು ಈ ಬಾರಿ ತರಲಾಗಿತ್ತು. ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಸಂಜೆ ಹೊತ್ತು ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲಾಗಿತ್ತು. ಅಣಕು ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿತ್ತು. ಜಿಲ್ಲಾಡಳಿತ, ಜಿ.ಪಂ, ಇತರೆ ಇಲಾಖೆಗಳು ಹಾಗೂ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಬಂದಿದ್ದು, ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.
ಗ್ರಾಮೀಣ, ಹಿಂದುಳಿದ, ರೈತರು ಮತ್ತು ಬಡ ಮಕ್ಕಳಿಗೆ ಅನುಕೂಲವಾಗಲೆಂದು ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ ಕಟ್ಟಲು ಯಾವುದೇ ಶುಲ್ಕವನ್ನು ವಿಧಿಸಿಲ್ಲ. ಜೊತೆಗೆ ಆನ್‌ಲೈನ್ ನಲ್ಲೇ ತಕ್ಷಣ ಪರೀಕ್ಷೆ ತೆಗೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು ಇದು ಅತ್ಯಂತ ಯಶಸ್ಸು ಕಂಡಿದೆ.
ಪಿಯುಸಿ ಯಲ್ಲಿ ಕಳೆದ ಬಾರಿ 36 ಸಾವಿರ ವಿದ್ಯಾರ್ಥಿಗಳು ಇಂಪ್ರೂವ್‌ಮೆAಟ್‌ಗೆ ನೋಂದಣಿ ಮಾಡಿಸಿದ್ದರೆ ಈ ಬಾರಿ 79 ಸಾವಿರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಈವರೆಗೆ 64,600 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಎರಡನೇ ಪರೀಕ್ಷೆಗೆ ದಾಖಲಾಗಿದ್ದು, ಮೂರು ಪರೀಕ್ಷೆಗಳ ಸೂತ್ರ ಯಶಸ್ಸು ಕಂಡಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದAದೇ ಪರೀಕ್ಷೆ-2 ಬರೆಯಲು ನೋಂದಣಿ ಆರಂಭಿಸಿದ್ದು ಅಂದೇ ಪರೀಕ್ಷೆ 2 ಮತ್ತು ಪರೀಕ್ಷೆ 3 ರ ದಿನಾಂಕಗಳನ್ನು ಪ್ರಕಟಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ದಿನಾಂಕ: 26-05-2025 ರಿಂದ 02-06-2025 ಹಾಗೂ ಪರೀಕ್ಷೆ-3
ದಿ: 23-06-2025 ರಿಂದ 30-06-2025 ರವರೆಗೆ ನಡೆಯಲಿದೆ ಎಂದು ತಿಳಿಸಿದರು.
Karnataka Examination Results 2025 ಸರ್ಕಾರಿ ಶಾಲೆಗಳಿಗೆ ಸುಮಾರು 11 ಸಾವಿರ ಹಾಗೂ ಅನುದಾನಿಕ ಶಾಲೆಗಳಿಗೆ 6500 ಸೇರಿದಂತೆ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಈ ವೇಳೆ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ತಾಲ್ಲೂಕು ಅಧ್ಯಕ್ಷ ಹೆಚ್.ಎಂ ಮಧು, ಮಾಜಿ ವಿಧಾನಪರಿಷತ್ ಶಾಸಕ ಆರ್.ಪ್ರಸನ್ನಕುಮಾರ್, ಮುಖಂಡರಾದ ಕಲಗೋಡು ರತ್ನಾಕರ ಸೇರಿದಂತೆ ಇತರೆ ಮುಖಂಡರು ಪಾಲ್ಗೊಂಡಿದ್ದರು.

Madhu Bangarappa ಜಿಪಿಎಸ್ & ಟ್ರ್ಯಾಕಿಂಗ್ ಉಪಕರಣ ಅಳವಡಿಕೆ ಆದೇಶ ರದ್ದುಪಡಿಸಲು ಸಚಿವರಲ್ಲಿ ಚಾಲಕರ ಸಂಘದ ಮನವಿ

0

Madhu Bangarappa ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.
ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರಾö್ಯಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಆದೇಶವಿರುತ್ತದೆ. ಈ ವ್ಯವಸ್ಥೆ ಇಲ್ಲದಿದ್ದಲ್ಲಿ ಆರ್‌ಟಿಓ ಕಚೇರಿಯಿಂದ ಎಫ್‌ಸಿ ಮಾಡಿಸಲು ಬರುವುದಿಲ್ಲ. ಆದರೆ ಈ ವ್ಯವಸ್ಥೆ ಅಳವಡಿಕೆಯಿಂದ ಟ್ಯಾಕ್ಸಿ ನಡೆಸುವವರಿಗೆ ಅಧಿಕ ಖರ್ಚು ಬರುತ್ತದೆ. ಹಾಗೂ ಈ ಟ್ಯಾಕ್ಸಿಗಳು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಮಾತ್ರ ಕಾರ್ಯಾಚರಣೆ ಮಾಡುತ್ತಿರುವ ಕಾರಣ ಮತ್ತು ಅಧಿಕ ಖರ್ಚು ಆಗುವುದರಿಂದ ಸದರಿ ವ್ಯವಸ್ಥೆಯನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದವರು ನಗರದ 27 ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಬೇಕೆಂದು ಕೋರಿದರು.
Madhu Bangarappa ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯವರು ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು. ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

Labour Day ಮೇ 6. ರಾಜ್ಯ ಸರ್ಕಾರಿ ನೌಕರರ ದಿನಾಚರಣೆ.ಸರ್ವೋತ್ತಮ. ಪ್ರಶಸ್ತಿ ಪ್ರದಾನ ಸಮಾರಂಭ

0

Labour Day ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 06 ರ ಮಂಗಳವಾರದAದು ಡಿ.ಸಿ.ಕಾಂಪೌAಡ್‌ನಲ್ಲಿರುವ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ಸರ್ಕಾರಿ ನೌಕರರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ಸಮಾರಂಭದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ನೆರವೇರಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪನವರು ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಲಿದ್ದು, ಸಂಸದ ಬಿ.ವೈ.ರಾಘವೇಂದ್ರ, ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರು ಹಾಗೂ ಬಿ.ಕೆ.ಸಂಗಮೇಶ್ವರ, ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕ ಗೋಪಾಲಕೃಷ್ಣ ಬೇಳೂರು, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿರವರು ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಗಣ್ಯರು ಮತ್ತು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
Labour Day ಕರ್ನಾಟಕ ನಾಗರೀಕ ಸೇವೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ವಿಶೇಷ ಸಾಧನೆ ಮಾಡಿದ 10 ಜನ ಸರ್ಕಾರಿ ಅಧಿಕಾರಿ-ನೌಕರರಿಗೆ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಏಪ್ರಿಲ್ 05 ಮತ್ತು 06 ರಂದು ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಸರ್ಕಾರಿ ನೌಕರರಿಗೆ ಬಹುಮಾನ ವಿತರಣೆ ಮಾಡಲಾಗುವುದು. ವಿಜೇತರಾದ ಜಿಲ್ಲೆಯ ಸರ್ಕಾರಿ ನೌಕರರು ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಸರ್ಕಾರಿ ನೌಕರರ ಭವನದಲ್ಲಿ ಹಾಜರಿದ್ದು, ಪ್ರಮಾಣ ಪತ್ರಗಳನ್ನು ಸ್ವೀಕರಿಸುವುದು..
ಈ ಸಮಾರಂಭದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ನೌಕರರಿಗೆ ಓಓಡಿ ಸೌಲಭ್ಯವನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿರುತ್ತಾರೆ. ಜಿಲ್ಲೆಯ ಸರ್ಕಾರಿ ನೌಕರರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್‌ಕುಮಾರ್ ಕೋರಿರುತ್ತಾರೆ.

Sri Chowdeshwari Temple ರಾಜೇಂದ್ರ ನಗರ ಪಂಪಾವನ ಶ್ರೀಚೌಡೇಶ್ವರಿ ದೇವಾಲಯ ವರ್ಧಂತ್ಯೋತ್ಸವ

0

Sri Chowdeshwari Temple ರಾಜೇಂದ್ರ ನಗರ ಪಂಪಾವನ ಶ್ರೀಚೌಡೇಶ್ವರಿ ದೇವಾಲಯ ವರ್ಧಂತ್ಯೋತ್ಸವ ರಾಜೇಂದ್ರನಗರದ ಶ್ರೀ ರಾಮ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಪಂಪಾವನ ಶ್ರೀ ಚೌಡೇಶ್ವರಿ ಅಮ್ಮನವರ ಪ್ರಥಮ ವರ್ಷದ ವರ್ಧಂತ್ಯೋತ್ಸವವನ್ನು ಮೇ ೬ರ ನಾಳೆ ಹಮ್ಮಿಕೊಳ್ಳಲಾಗಿದೆ.
ಸನ್ನಿಧಿಯಲ್ಲಿ ಬೆಳಿಗ್ಗೆ ೬ರಿಂದ ಉಷಾ ಪೂಜೆ ನಂತರ ೮ಕ್ಕೆ ಕುಂಬಾಭಿಷೇಕ, ೮.೩೦ರಿಂದ ಶ್ರೀ ಬನ್ನಿ ಮಹಾಕಾಳಿ ವಿಗ್ರಹ ಪ್ರತಿಷ್ಠಾಪನೆ ೯.೩೦ರಿಂದ ಹೂವಿನ ಪೂಜೆ ಬೆಳಿಗ್ಗೆ ೧೦ರಿಂದ ಕಲಾಹೋಮ, ೧೨.೩೦ಕ್ಕೆ ಪೂರ್ಣಾ ಹುತಿ ಮಧ್ಯಾಹ್ನ ೧ರಿಂದ ಕಲೋಕ ಷೋಡಶಿ ಉಪಚಾರ ಪೂಜೆ, ಮಧ್ಯಾಹ್ನ ೧.೩೦ಕ್ಕೆ ತೀರ್ಥ ಪ್ರಸಾದ, ಮಧ್ಯಾಹ್ನ ೨ರಿಂದ ಮಹಾಪ್ರಸಾದ ವಿನಯೋಗ ಸಂಜೆ ೫ರಿಂದ ದುರ್ಗಾ ದೀಪ ನಮಸ್ಕಾರ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸಮಿತಿ ತಿಳಿಸಿದೆ.

Rovers Club Shimoga ಶಾಲೆಯ ಶಿಕ್ಷಕರ ಮಾರ್ಗದರ್ಶನ‌‌ ಮತ್ತು ಪರಿಶ್ರಮ,ಏಕಾಗ್ರತೆ ಬಲ ನೀಡಿದೆ- ವಿದ್ಯಾರ್ಥಿನಿ‌ ಆತ್ಮೀಯ ಮಿತ್ತಲ್

0

Rovers Club Shimoga ಸಾಧನೆಗೆ ತಂದೆ ತಾಯಿಗಳ ಆಶೀರ್ವಾದ ಸಹಕಾರ ಹಾಗೂ ನಮ್ಮ ಶಾಲೆಯ ಶಿಕ್ಷಕರ ಮಾರ್ಗದರ್ಶನ ಮತ್ತು ನನ್ನ ಪರಿಶ್ರಮ ಏಕಾಗ್ರತೆ ಬಲ ನೀಡಿದೆ ಎಂದು ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆತ್ಮೀಯ ಮಿತಲ್ ಹೇಳಿದರು.

ಅವರು ಇಂದು ಬೆಳಿಗ್ಗೆ ರೋವರ್ಸ್ ಕ್ಲಬ್ಬಿನ ಶಟ್ಟಲ್ ಕೋರ್ಟ್ ಆವರಣದಲ್ಲಿ ಶಟಲ್ ಆಟಗಾರರು ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪರೀಕ್ಷಾ ಸಮಯದಲ್ಲಿ ದಿನವಿಡೀ ಅಭ್ಯಾಸ ಮಾಡುತ್ತಿದ್ದೆ. ಹಾಗೆ ತಂದೆ ತಾಯಿಗಳಿಗೆ ಗೌರವ ಹಾಗೂ ಕಲಿತ ಶಾಲೆಗೆ ಮತ್ತು ಶಿಕ್ಷಣ ನೀಡಿದ ಗುರುಗಳಿಗೆ ಧನ್ಯವಾದವನ್ನು ತಿಳಿಸುತ್ತಿದ್ದೇನೆ. ಬರುವ ದಿನದಲ್ಲಿ ಐಎಎಸ್ ಅಧಿಕಾರಿಯಬೇಕೆಂಬ ಮಹಾದಾಸೆ ಇದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ರೋವರ್ಸ್ ಕ್ಲಬ್ ನ ನಿರ್ದೇಶಕರಾದ ಜಿ.ವಿಜಯ್ ಕುಮಾರ್ ಮಾತನಾಡಿ, ಮಕ್ಕಳ ಸಾಧನೆ ಮತ್ತು ಪ್ರತಿಭೆಯನ್ನು ಗುರುತಿಸಿ ಗೌರವಿಸಿದಾಗ ಸಂಸ್ಥೆಯ ಗೌರವ ಹೆಚ್ಚುವುದರ ಜೊತೆಗೆ ಅವರ ಪ್ರತಿಭೆ ಇನ್ನಷ್ಟು ಅನಾವರಣಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಮಕ್ಕಳ ಅಭಿರುಚಿಯನ್ನು ಪೋಷಕರೂ ಅರಿತುಕೊಂಡು ಅಗತ್ಯ ಸಹಕಾರ ನೀಡಬೇಕು. ಪ್ರತಿಯೊಬ್ಬ ಮಗುವಿನ ಪ್ರತಿಭೆಯನ್ನು ಗುರುತಿಸುವುದರ ಜೊತೆಗೆ ಅವರಿಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಕೆಲಸ ಆಗಬೇಕಿದೆ ಎಂದು ಕರೆ ನೀಡಿದರು.

Rovers Club Shimoga ಮತ್ತೋರ್ವ ರೋವರ್ಸ್ ಕ್ಲಬ್ ನ ನಿರ್ದೇಶಕರಾದ ವಿನಾಯಕ್, ಅಗಡಿ ಮಹೇಶ್, ವಿದ್ಯಾರ್ಥಿನಿಗೆ ಸನ್ಮಾನಿಸಿ ಗೌರವಿಸಿದರು.

ಆತ್ಮೀಯ ಮಿತಲ್ ರವರು ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ರೋವರ್ಸ್ ಕ್ಲಬ್ ನ ಸದಸ್ಯರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪ್ರದೀಪ್, ಸುಜಾತ ಪ್ರದೀಪ್ ಇವರ ಪುತ್ರಿಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ರೋವರ್ಸ್ ಕ್ಲಬ್ ನ ನೂತನ ಸದಸ್ಯರಾದ ಆಡಿಟರ್ ಸುರೇಶ್, ಈಶ್ವರ್, ಎಸ್.ಎ.ಸತ್ಯನಾರಾಯಣ ಹಾಗೂ ಶಟಲ್ ಆಟಗಾರರು ಉಪಸ್ಥಿತರಿದ್ದರು. ಇವರಿಗೆ ಕ್ಲಬ್ ನ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ನಿರ್ದೇಶಕರು ಅಭಿನಂದಿಸಿದರು.

Dinesh Gundu Rao ನಿಮ್ಮ ಆರೋಗ್ಯ ಸಮಸ್ಯೆಗೆ ತಜ್ಞರ ” ಸೆಕೆಂಡ್ ಒಪೀನಿಯನ್” ಬೇಕೆ? ಸರ್ಕಾರದ‌ ಉಚಿತ ಸಹಾಯವಾಣಿ ಸಿದ್ಧ.

0

Dinesh Gundu Rao ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದೀರಾ? ತಜ್ಞ ವೈದ್ಯರಿಂದ ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ’ ಪಡೆಯಿರಿ!
24×7 ಉಚಿತ ಸಹಾಯವಾಣಿಗೆ ಕರೆ ಮಾಡಿ: 1800 425 8330
ವಾಟ್ಸಾಪ್‌ ಮೂಲಕದಾಖಲೆಗಳನ್ನು ಹಂಚಿಕೊಳ್ಳಿ.
ನಿಮ್ಮ ಆರೋಗ್ಯ, ನಮ್ಮ ಆದ್ಯತೆ!
ಇದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆ.

ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ಈ ವಿನೂತನ ಸಹಾಯವಾಣಿಯ ನೆರವನ್ನ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.