Tuesday, March 3, 2026
Tuesday, March 3, 2026
Home Blog Page 324

DC Shivamogga ಪ್ರತೀ ಮನೆಗೆ ಭೇಟಿ ಕೊಡಿ. ನಿಗದಿತ ಅವಧಿಯೊಳಗೆ ಒಳಮೀಸಲಾತಿ ಸಮೀಕ್ಷೆ ಪೂರ್ಣಮಾಡಿ- ಗುರುದತ್ತ ಹೆಗಡೆ

0

DC Shivamogga ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆಯು ಸರ್ಕಾರದ ಆದ್ಯತೆಯ ಸಮೀಕ್ಷೆಯಾಗಿದ್ದು ಸಮೀಕ್ಷೆದಾರರು ಇದನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿ ಮನೆ ಮನೆಗೆ ತೆರಳಿ ಕೈಗೊಂಡು ನಿಗದಿತ ವೇಳೆಯೊಳಗೆ ಈ ಸಮೀಕ್ಷೆಯನ್ನು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿ.ಪಂ ಸಭಾಂಗಣದಲ್ಲಿ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್‌ದಾಸ್ ರವರ ಏಕಸದಸ್ಯ ವಿಚಾರಣಾ ಆಯೋಗದ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ಸಮೀಕ್ಷೆ ನಡೆಸುವ ಕಾರ್ಯಕ್ಕೆ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್‌ಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ವಿಶ್ಲೇಷಣೆ ಮಾಡಿ ಒಳ ಮೀಸಲಾತಿ ವರ್ಗೀಕರಣ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುವ ಜವಾಬ್ದಾರಿಯನ್ನು ಆಯೋಗವು ಹೊಂದಿದ್ದು, ಈ ಉದ್ದೇಶಕ್ಕಾಗಿ ಸರ್ಕಾರ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕೈಗೊಳ್ಳುತ್ತಿದೆ.

ಈ ಸಮೀಕ್ಷೆಯು ಸೂಕ್ಷ್ಮತೆಯಿಂದ ಕೂಡಿದ್ದು ಒಂದೊಂದು ತಾಲ್ಲೂಕಿನಲ್ಲಿಯೂ ಸಮೀಕ್ಷೆ ಅನುಭವ ಭಿನ್ನವಾಗಿರಬಹುದು. ಯಾವುದೇ ಸಮಸ್ಯೆಗಳಿಗೆ ಎಡೆ ಮಾಡದಂತೆ ಸಮೀಕ್ಷೆ ನಡೆಸಬೇಕು. ತೀರ್ಥಹಳ್ಳಿ, ಹೊಸನಗರ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿ ಜನಸಂಖ್ಯೆ ಸಾಕಷ್ಟು ಇದ್ದು ಎಲ್ಲ ಮನೆ ಮನೆಗಳಿಗೆ ಭೇಟಿ ನೀಡಿ, ನಿಗದಿತ ನಮೂನೆಯಲ್ಲಿ ಕೇಳಲಾದ ಮಾಹಿತಿಯನ್ನು ಸಂಗ್ರಹಿಸಬೇಕು. ಗಂಭೀರವಾಗಿ ಈ ಕಾರ್ಯ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಇನ್ನೊಂದು ಹಂತದ ತರಬೇತಿ ಹಾಗೂ ಮಾಕ್ ಟ್ರಯಲ್ ಇದ್ದು ಅಲ್ಲಿ ಸಮೀಕ್ಷೆದಾರರು ಯಾವುದೇ ರೀತಿಯ ಸಂದೇಹಗಳಿದ್ದರೆ ಬಗೆಹರಿಸಿಕೊಳ್ಳಬಹುದು ಎಂದರು.

DC Shivamogga ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಅಶೋಕ್ ಪಾಟೀಲ್ ಎಂ ಇವರು, ಪಿಪಿಟಿ ಪ್ರದರ್ಶನದ ಮೂಲಕ ಸಮೀಕ್ಷೆ ನಡೆಸುವ ಬಗೆಯನ್ನು ವಿವರಿಸಿದರು. ಸಮೀಕ್ಷೆದಾರರು ಯಾವುದೇ ಮನೆಯನ್ನು ಬಿಡದಂತೆ ಸಮೀಕ್ಷೆ ನಡೆಸಬೇಕು. ಮೂರು ಹಂತದ ಸಮೀಕ್ಷೆ ಇದಾಗಿದ್ದು ಮೇ 5 ರಿಂದ 17 ರವರೆಗೆ ಮನೆ ಮನೆ ಭೇಟಿ ಮಾಡಿ ಪ್ರಶ್ನಾವಳಿಯನ್ನು ತುಂಬುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಎಸಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Information and Public Relations Department ಜಿಲ್ಲಾ ಡಿಜಿಟಲ್ ಪತ್ರಿಕೆಗಳ ಗಮನಕ್ಕೆ ಜಿಲ್ಲಾ ವಾರ್ತಾ ಇಲಾಖೆ ಪ್ರಕಟಣೆ

0


Information and Public Relations Department ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್‌ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ – 2024 ಅನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 
ಕರ್ನಾಟಕ ಸರ್ಕಾರವು ಡಿಜಿಟಲ್‌ ಜಾಹೀರಾತಿಗಾಗಿ ಡಿಜಿಟಲ್‌ ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್‌ ಮಾಧ್ಯಮಗಳನ್ನು ಎಂಪ್ಯಾನಲ್‌ಮೆಂಟ್‌ ಮಾಡಿಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್‌ ಏಜೆನ್ಸಿ ಮತ್ತು ಮಾಧ್ಯಮಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಮತ್ತು ಸ್ವರೂಪ ಬದಲಾಗಿದೆ. ಅಂತರ್ಜಾಲ, ಖಾಸಗಿ ಕಂಪ್ಯೂಟರ್‌, ಸ್ಮಾರ್ಟ್‌ ಟಿವಿ ಹಾಗೂ ಸ್ಮಾರ್ಟ್‌ ಫೋನ್‌, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್‌ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಜೊತೆಗೆ, ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಮಾದರಿಯಲ್ಲಿ ಡಿಜಿಟಲ್‌ ಜಾಹೀರಾತು ನೀಡಲು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿಯನ್ನು ಸರ್ಕಾರ ಹೊರತಂದಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸ ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ ಅನ್ವಯ ಎಲ್ಲಾ ಇಲಾಖೆಗಳು, ನಿಗಮಗಳು, ಪ್ರಾಧಿಕಾರಗಳು, ಮಂಡಳಿಗಳು, ಸ್ಥಳೀಯಾಡಳಿತಗಳು, ಪುರಸಭೆಗಳು, ನಗರ ಪಾಲಿಕೆಗಳು ಮೊದಲಾದವುಗಳಲ್ಲಿ ಡಿಜಿಟಲ್‌ ಜಾಹೀರಾತುಗಳನ್ನು ಕಡ್ಡಾಯವಾಗಿ ಈ ಮಾರ್ಗಸೂಚಿಗೆ ಅನುಸಾರವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಬಿಡುಗಡೆ / ಪೂರೈಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Information and Public Relations Department ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ ಅನ್ವಯ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಾದ ಗೂಗಲ್‌ (ಯೂಟ್ಯೂಬ್‌), ಮೆಟಾ (ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್‌ ಬಿಸಿನೆಸ್‌, ವಾಟ್ಸಾಪ್‌ ಚಾನಲ್), ಸರ್ಚ್ ಇಂಜಿನ್‌ಗಳಾದ ಗೂಗಲ್‌, ಬಿಂಗ್‌, ಸಾಮಾಜಿಕ ಜಾಲತಾಣಗಳಾದ ಎಕ್ಸ್‌ (ಈ ಹಿಂದೆ ಟ್ವಿಟರ್‌), ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಲಿಂಕ್‌ಡ್‌ಇನ್‌, ವಾಟ್ಸಾಪ್‌, ಸ್ನಾಪ್‌ಚಾಟ್‌, ಟೆಲಿಗ್ರಾಂ, ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್‌, ಅಮೇಜಾನ್‌ ಫ್ರೈಮ್‌, ಡಿಸ್ನಿ ಹಾಟ್‌ಸ್ಟಾರ್‌ ಸೋನಿಲೈವ್‌, ಜಿಯೋ ಸಿನಿಮಾ, ಜೀ 5, ವೂಟ್‌, ಸನ್‌ ನೆಕ್ಸ್ಟ್‌ ಮತ್ತು ಟಾಕೀಸ್, ಫಿನ್‌ಟೆಕ್‌ ಪ್ಲಾಟ್‌ಫಾರ್ಮ್‌ಗಳಾದ ಪೇಟಿಎಂ, ಪೋನ್‌ಪೇ ಮತ್ತು ಜಿಪೇ ಸೇರಿದಂತೆ ಇನ್ನಿತರ ಡಿಜಿಟಲ್‌ ವೇದಿಕೆಗಳಡಿ ಜಾಹೀರಾತು ಅರ್ಹ ಏಜೆನ್ಸಿಗಳ ಮೂಲಕ ನೀಡಲು ಅವುಗಳನ್ನು ಎಂಪ್ಯಾನಲ್‌ ಮಾಡಿಕೊಳ್ಳಲು ವಾರ್ತಾ ಇಲಾಖೆಯು ಉದ್ದೇಶಿಸಿದೆ.
ಹಾಗೆಯೇ, ಅಪ್ಲಿಕೇಶನ್ ಡೌನ್‌ಲೋಡ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಬರುವ ವೀಡಿಯೊ, ಡಿಸ್‌ಪ್ಲೇ ಮತ್ತು ಸರ್ಚ್‌ ಸೇರಿದಂತೆ ವಿವಿಧ ವೇದಿಕೆಗಳಡಿ ಜಾಹೀರಾತು ನೀಡಿಕೆ, ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆಪಲ್‌ ಆಪ್‌ ಸ್ಟೋರ್‌ನಲ್ಲಿ ಕನಿಷ್ಠ 1 ಲಕ್ಷ ಡೌನ್‌ಲೋಡ್‌ ಹೊಂದಿರುವ ಯಾವುದೇ ಆಪ್‌ ಮತ್ತು ಸುದ್ದಿಗಳನ್ನು ಪ್ರಸಾರ ಮಾಡುವ ಯಾವುದೇ ಡಿಜಿಟಲ್ ಘಟಕ-ವೆಬ್ ಅಪ್ಲಿಕೇಶನ್ ಅಥವಾ ಮೊಬೈಲ್ ಅಪ್ಲಿಕೇಶನ್ ಸೇರಿದಂತೆ ವಿವಿಧ ಮೂಲಗಳಿಂದ ಸುದ್ದಿಗಳನ್ನು ಸಂಗ್ರಹಿಸಿ ಜನರಿಗೆ ನೀಡುವ ವೇದಿಕೆಗಳು. ಇನ್‌ಶಾರ್ಟ್‌ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಫಾಲೋವರ್‌ಗಳನ್ನು ಹೊಂದಿರುವ ಇನ್‌ಫ್ಲ್ಯುಯೆನ್ಸರ್‌ಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿಕೊಂಡು ಜಾಹೀರಾತು ಪಡೆಯಲು ಅರ್ಹತೆ ಹೊಂದುತ್ತವೆ. 
ಡಿಜಿಟಲ್ ಜಾಹೀರಾತಿಗಾಗಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಸಹಯೋಗ ಹೊಂದಲು ಬಯಸುವ ಏಜೆನ್ಸಿಗಳು ಭಾರತ ಸರ್ಕಾರದ ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ನಲ್ಲಿ ನೋಂದಣಿಯಾದ ಪ್ರೈವೇಟ್‌ ಲಿಮಿಟೆಡ್‌ ಕಂಪನಿ, ಪಬ್ಲಿಕ್‌ ಲಿಮಿಟೆಡ್‌ ಕಂಪನಿ, ಪಾಲುದಾರಿಕೆ, ಲಿಮಿಟೆಡ್‌ ಲಯಬಿಲಿಟಿ ಪಾಲುದಾರಿಕೆ ಹೊಂದಿರಬೇಕು. ಎಂಪ್ಯಾನೆಲಿಂಗ್‌ ಸಮಯದಲ್ಲಿ ಕನಿಷ್ಠ ಎರಡು ವರ್ಷವಾಗಿರಬೇಕು. ಜಿಎಸ್‌ಟಿ ನೋಂದಣಿ ಇರಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದ ಕಚೇರಿ ಇರಬೇಕು. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಾವೀಣ್ಯತೆ ಇರಬೇಕು. ಡಿಜಿಟಲ್ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣದ ಬಗ್ಗೆ ಆಳವಾದ ಜ್ಞಾನವಿರಬೇಕು. ಸರ್ಕಾರಗಳಿಗೆ ಪ್ಲಾಟ್‌ಫಾರ್ಮ್‌ಗಳಲ್ಲಿ ಡಿಜಿಟಲ್ ಜಾಹೀರಾತು ನೀಡಲು ಗೂಗಲ್‌ ಅಥವಾ ಮೆಟಾ ಜೊತೆಗೆ ಮಾನ್ಯವಾದ ಒಪ್ಪಂದ/ಒಡಂಬಡಿಕೆ ಹೊಂದಿರಬೇಕು. ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸರ್ಕಾರದ ಜಾಹೀರಾತು ನೀಡಲು ಗೂಗಲ್‌ ಅಥವಾ ಮೆಟಾದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಷರತ್ತುಗಳನ್ನು ನಿಗದಿ ಪಡಿಸಿದೆ.
ಡಿಜಿಟಲ್‌ ಮಾಧ್ಯಮ ಘಟಕಕ್ಕೆ ಅರ್ಹತೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಡಿಜಿಟಲ್‌ ಜಾಹೀರಾತು ನೀಡಲು ಎಂಪ್ಯಾನೆಲ್‌ಮೆಂಟ್‌ಗಾಗಿ ಡಿಜಿಟಲ್‌ ಮಾಧ್ಯಮ ಘಟಕವು ಭಾರತದ ಸರ್ಕಾರದ ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ನಲ್ಲಿ ನೋಂದಣಿಯಾದ ಕಾನೂನುಬದ್ಧ ಸಂಘಟಿತ ಘಟಕವಾಗಿರಬೇಕು. ಕನಿಷ್ಠ ಒಂದು ವರ್ಷ ಕಾಲ ಯಾವುದೇ ಸಮಯದ ಅಂತರವಿಲ್ಲದೆ ನಿರಂತರವಾಗಿ ಕಂಟೆಂಟ್‌ ಪ್ರಕಟಿಸಿರಬೇಕು. ಜಿಎಸ್‌ಟಿ ನೋಂದಣಿ ಇರಬೇಕು.
ರಾಜ್ಯ ಅಥವಾ ಕೇಂದ್ರ ಸರ್ಕಾರ ಅಥವಾ ಅದರ ಏಜೆನ್ಸಿಗಳ ಎಲ್ಲ ಶಾಸನಬದ್ಧ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರೆ ಎಂಪ್ಯಾನೆಲ್ಮೆಂಟ್ ರದ್ದುಗೊಳಿಸಲಾಗುತ್ತದೆ. ಭಾರತದ ಕಾನೂನನ್ನು ಉಲ್ಲಂಘಿಸುವ ಪದ, ದೃಶ್ಯಗಳು, ಆಡಿಯೋ ಅಥವಾ ಅಂತಹ ಯಾವುದೇ ವಿಷಯವನ್ನು ಪ್ರಕಟಿಸಿರಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. 
ಮೇಲ್ಕಂಡ ಅರ್ಹತೆಗಳನ್ನು ಹೊಂದಿರುವ ಡಿಜಿಟಲ್‌ ಮಾಧ್ಯಮ ಘಟಕಗಳು ಮತ್ತು ಡಿಜಿಟಲ್‌ ಜಾಹೀರಾತು ಏಜೆನ್ಸಿಗಳು sevasindhu.karnataka.gov.in ಗೆ ಭೇಟಿ ನೀಡಿ, ನಿಗದಿ ಪಡಿಸಿರುವ ದಾಖಲಾತಿಗಳೊಂದಿಗೆ ಶುಲ್ಕ ಪಾವತಿಸಿ, ಮೇ 15ರ ಒಳಗೆ ಅರ್ಜಿ ಸಲ್ಲಿಸಲು ಕೋರಿದೆ.

CM Siddharamaih ಯುದ್ಧದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಸ್ಪಷ್ಟನೆ

0

CM Siddharamaih ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ.

ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.
ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು.

ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ.

ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ.

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ.

CM Siddharamaih ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮಗಮ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ

Scouts and Guides Shivamogga ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಮೃತ ಮಂಜುನಾಥ್ ರಾವ್ ಗೆ ಭಾವಪೂರ್ಣ ಶ್ರದ್ಧಾಂಜಲಿ

0

Scouts and Guides Shivamogga ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮಂಜುನಾಥ್ ರಾವ್ ರವರನ್ನು ಕೊಂದು ತಮ್ಮ ರಾಕ್ಷಸತನವನ್ನು ತೋರಿಸಿದ್ದಾರೆ ಎಂದು ಜಿಲ್ಲಾಮುಖ್ಯ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಹೇಳಿದರು.

ಸ್ಕೌಟ್ಸ್ ಅಂಡ್ ಗೈಡ್ಸ್, ಶಿವಮೊಗ್ಗ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ವತಿಯಿಂದ ನೇತಾಜಿ ವೃತ್ತದಿಂದ ಕ್ಯಾಂಡಲ್ ಮಾರ್ಚ್ ಮಾಡುವುದರೊಂದಿಗೆ ಅವರ ಮನೆಯವರೆಗೆ ತೆರಳಿ ಮೃತರಿಗೆ ಭಾವಪೂರ್ಣ ಸಲ್ಲಿಸುತ್ತ ಪತ್ನಿ ಪಲ್ಲವಿ ಹಾಗೂ ಮಗನಿಗೆ ಸಾಂತ್ವಾನದ ನುಡಿಗಳನ್ನು ಹೇಳಿ ಧೈರ್ಯ ತುಂಬಿದರು.

ಪತ್ನಿ ಪಲ್ಲವಿ ಮತ್ತು ಮಗ ಅಭಿಜಯ್ ಮುಂದೆಯೇ ಪತಿ ಮಂಜುನಾಥ್ ನನ್ನು ಕೊಂದು ಭಯೋತ್ಪಾದಕರ ವಿರುದ್ಧ ಧ್ಯೇರ್ಯ ತೋರಿ ಮಾತನಾಡಿದ್ದೀರಿ, ಮುಂಚಿನ ದಿನಗಳು ಸಂತೋಷದಿಂದ ಕಳೆದ ದಿನಗಳಾಗಿದ್ದವು, ನಿಮ್ಮ ಎದುರು ಗುಂಡಿಟ್ಟು ಕೊಲ್ಲುವಾಗ ಅಲ್ಲೆ ಇದ್ದೀರಿ, ಇಂತಹ ದಿನ ಬರುತ್ತದೆ ಎಂದು ನೀವು ಯಾರು ಊಹಿಸಿರಲಿಲ್ಲ, ದೇವರು ನಿಮ್ಮ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ನುಡಿದರು.

Scouts and Guides Shivamogga ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ.ವಿಜಯಕುಮಾರ್ ಮಾತನಾಡಿ, ಕಾಶ್ಮೀರದಲ್ಲಿ ಭಯೋತ್ಪಾದಕರು ರಾಕ್ಷಸತನದಿಂದ ಅಟ್ಟ ಹಾಸ ಮೆರೆದಿದ್ದಾರೆ. ಶಿವಮೊಗ್ಗದ ಮಂಜುನಾಥ್ ನನ್ನು ಗುಂಡಿಟ್ಟು ಕೊಂದು ಹಾಕಿದ್ದಾರೆ. ಭಯೋತ್ಪಾದಕರ ವಿರುದ್ಧದ ಹೋರಾಟ ಇನ್ನಷ್ಟು ತೀವ್ರಗೊಳಿಸಿ ದೇಶದಲ್ಲಿ ಭಯೋತ್ಪಾದನೆಯನ್ನು ಬುಡ ಸಮೇತ ಕಿತ್ತು ಹಾಕುವ ಅವಶ್ಯಕತೆಯಿದೆ ಎಂದ ಅವರು, ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಮಗ ಅಭಿಜಯ್ ಗೆ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.ಈ ಸಮಯದಲ್ಲಿ ರೋವರ್ ವಿಭಾಗದ ಜಿಲ್ಲಾ ಆಯುಕ್ತರಾದ ಕೆ.ರವಿ, ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಶೇಖರಯ್ಯ.ಕೆ.ವಿ, ಮಲ್ಲಿಕಾರ್ಜುನ ಕಾನೂರು, ಲಕ್ಷ್ಮೀ ರವಿ, ಚಂದ್ರಶೇಖರ್, ಕೃಷ್ಣಸ್ವಾಮಿ, ಕಾತ್ಯಾಯಿನಿ, ಮೀನಾಕ್ಷಮ್ಮ, ನಾಗರಾಜ್, ಶಿವಮೊಗ್ಗ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಗಳಾದ ರಾಜೇಶ್.ಎ.ವಿ, ಸ್ಕೌಟ್ ಮತ್ತು ಗೈಡ್ಸ್, ಹಾಗೂ ರೋವರ್ಸ್ ಮತ್ತು ನಳಿನಿ ಐತಾಳ್. ರೆಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Chanakya Chess School ಮೇ 2 ರಿಂದ ಮುಕ್ತ ಚೆಸ್ ತರಬೇತಿ ಶಿಬಿರ

0

Chanakya Chess School ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ಶಿವಮೊಗ್ಗ ನಗರದ ಗೋಪಾಲ ಗೌಡ ಬಡಾವಣೆ ಲಾಸ್ಟ್ ಸಿಟಿ ಬಸ್ ಸ್ಟಾಪ್ ಎದುರು ಚಾಣಕ್ಯ ಚೆಸ್ ಸ್ಕೂಲ್ ನಲ್ಲಿ ದಿನಾಂಕ 02ಮೇ 2025 ರಿಂದ 11 ಮೇ ವರೆಗೆ, ಬೆಳಿಗ್ಗೆ 10.30ಯಿಂದ 1.00 ರ ವರೆಗೆ 6 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೂ ಚೆಸ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,9845830133, 9741591672

CM Siddaramaih ಪ್ರಸ್ತುತ ಜಾಗತಿಕ ರಾಷ್ಟ್ರಗಳು ಭಾರತದ ಪರವಾಗಿವೆ. ಭಯೋತ್ಪಾದನೆ ಖಂಡಿಸಿ ಪಾಕ್ ಗೆ ಪಾಠ ಕಲಿಸಬೇಕಿದೆ- ಸಿದ್ಧರಾಮಯ್ಯ

0

CM Siddaramaih ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ.

ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.
ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಿಳಿಸಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ.

ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ.

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ ಎಂದರು.

CM Siddaramaih ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ
ತಮ್ಮ ಹೇಳಿಕೆಗೆ ಜಾಲತಾಣದಲ್ಲಿ ಸಮರ್ಥನೆ ನೀಡಿದ್ದಾರೆ.

CM Siddharamaiah ರಾಜ್ಯದಲ್ಲಿನ ಪಾಕ್ ಪ್ರಜೆಗಳ ಮಾಹಿತಿ‌ ಕಲೆಹಾಕಿ ಅವರನ್ನ ವಾಪಸ್ ಕಳಿಸುವ ವ್ಯವಸ್ಥೆ ಮಾಡಲಾಗುವುದು- ಸಿದ್ಧರಾಮಯ್ಯ

0

CM Siddharamaiah ಕೇಂದ್ರ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ವಿವಿಧ ನಗರಗಳಲ್ಲಿರುವ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು.

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ?

ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ, ಜನರು ನೆಮ್ಮದಿಯಿಂದ ಬದುಕುವ ವಾತಾವರಣ ಸೃಷ್ಟಿಯಾಗಬೇಕಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು.

CM Siddharamaiah ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದು ನಾಚಿಕೆಗೇಡು. ಇದು ಮಹತ್ವದ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಪ್ರಧಾನಿ‌ನರೇಂದ್ರ ಮೋದಿ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಟೀಕಿಸಿದರು.
ರಾಜ್ಯದಲ್ಲಿನ ಪಾಕ್ ಪ್ರಜೆಗಳ ಮಾಹಿತಿ‌ ಕಲೆಹಾಕಿ ಅವರನ್ನ ವಾಪಸ್ ಕಳಿಸುವ ವ್ಯವಸ್ಥೆ ಮಾಡಲಾಗುವುದು- ಸಿದ್ಧರಾಮಯ್ಯ.

Bapuji Institute of Hi-Tech Education ಮೆದುಳಿನಲ್ಲಿ ನೆನಪುಗಳನ್ನ ದಾಖಲಿಸಿ.ಮೆಮೊರಿ ಕಾರ್ಡ್ ಮೇಲೆ ಅವಲಂಬಿತರಾಗಬೇಡಿ- ಪದ್ಮಣ್ಣ ಹಿರೇಗಿಡ್ಡಪ್ಪನವರ್

0

Bapuji Institute of Hi-Tech Education ಆಧುನಿಕ ತಂತ್ರಜ್ಞಾನದ ಯಾಂತ್ರೀಕೃತ ಬದುಕಿನಲ್ಲಿ ಭಾವನೆಗಳು ಸಾಯಬಾರದು. ವಿಚಾರಗಳು 0ಸಮೃದ್ಧವಾಗಿದ್ದು ಒಳ್ಳೆಯದನ್ನು ಹುಡುಕುವಲ್ಲಿ ಅಂತರ್ ದೃಷ್ಟಿ ಬೇಕು ಎಂದು ಬರಹಗಾರ ಪ್ರೊ. ಪದ್ಮಣ್ಣ ಹಿರೇಗಿಡ್ಡಪ್ಪನವರ್ ಹೇಳಿದರು.

ಅವರಿಂದು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ ನ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಾ ಹೃದಯ ಶ್ರೀಮಂತಿಕೆಯು ಅಂತರ್ಜನ್ಯವಾದದ್ದು, ಕಂಪ್ಯೂಟರ್ ಕ್ಷೇತ್ರವನ್ನು ಒಳಗೊಂಡಂತೆ ಇದು ಎಲ್ಲ ಕ್ಷೇತ್ರಗಳಲ್ಲಿ ದುಡಿಯುವವರಲ್ಲೂ ಬೇಕು, ಎಲ್ಲದಕ್ಕೂ ಕಂಪ್ಯೂಟರನ್ನೇ ಅವಲಂಬಿಸದೆ ಆಲೋಚನೆಯ ಲಹರಿಯಲ್ಲಿ ಬದುಕು ಕಟ್ಟಿಕೊಳ್ಳುವ ಹಾಗೂ ಕಟ್ಟಿ ಕೊಡುವ ಬಗೆಗೂ ಮುಂದಾಗಬೇಕು, ನೆನಪುಗಳನ್ನು ಮೆದುಳಿನಲ್ಲಿ ದಾಖಲಿಸಿಕೊಳ್ಳಬೇಕೇ ವಿನಹ ಮೆಮೊರಿ ಕಾರ್ಡಿನಲ್ಲಿ ಇದೆ ಎಂದು ಉಪೇಕ್ಷಿಸಬಾರದು ಎಂದರು.

ಅಧ್ಯಕ್ಷೀಯ ನುಡಿಗಳನ್ನಾಡಿದ ಕಾಲೇಜಿನ ಚೇರ್ಮನ್ ಅಥಣಿ ಎಸ್ ವೀರಣ್ಣನವರು ಆಧುನಿಕ ತಂತ್ರಜ್ಞಾನದ ಪದವೀಧರರು ಪಾರಂಪರಿಕ ಸಾಹಿತ್ಯ ವೈಭವವನ್ನು ಆಲಕ್ಷಿಸದೆ ಆಸಕ್ತಿ ತೋರಿಸಬೇಕು ಎಂದರು.

Bapuji Institute of Hi-Tech Education ಕಾಲೇಜಿನ ಪ್ರಾಂಶುಪಾಲ ಡಾ. ವೀರಪ್ಪನವರ ಉಪಸ್ಥಿತಿಯಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ರಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಮುದ್ಯತಾ ಮತ್ತು ತಂಡದವರು ಪ್ರಾರ್ಥನೆ ಹಾಡಿದರೆ ಪ್ರಶಾಂತಿನಿ ಬಿ ಎಂ ಸ್ವಾಗತ ಕೋರಿದರು. ನವೀನ್ ಹೆಚ್, ಜ್ಯೋತಿ ಎನ್ ಅತಿಥಿಗಳ ಪರಿಚಯ ಮಾಡಿದರೆ, ಕೆ ವೈ ವೀರೇಂದ್ರ ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕೆ ಸಿದ್ದಲಿಂಗಪ್ಪ ಅತಿಥಿಗಳನ್ನು ಸನ್ಮಾನಿಸಿದರು. ವಿದ್ಯಾ ಹಾಗೂ ಕಲ್ಯಾಣ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಎಂ ಎಸ್ ಪೂಜಾ ವಂದನೆ ಸಲ್ಲಿಸಿದರು.

-ಚಿತ್ರ ಹಾಗೂ ವರದಿ: ಡಾ. ಎಚ್ ಬಿ ಮಂಜುನಾಥ, ಹಿರಿಯ ಪತ್ರಕರ್ತರು-

Agricultural Science Centre ಹಣ್ಣು & ಆಹಾರ ಮೇಳ,ಕೃಷಿ ಕ್ಷೇತ್ರದದ ಪ್ರಗತಿಯಲ್ಲಿ ಕೃಷಿವಿಜ್ಞಾನ ಕೇಂದ್ರಗಳ ಪಾತ್ರ ಹಿರಿದು-ವಿ.ವೆಂಕಟಸುಬ್ರಮಣಿಯನ್

0


Agricultural Science Centre ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೆವಿಕೆ
ಅಟಾರಿ ವಲಯ ೧೧ ರ ನಿರ್ದೇಶಕ ವಿ.ವೆಂಕಟ ಸುಬ್ರಮಣಿಯನ್ ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏ.26 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿರುವ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರ ಮೇಳವನ್ನು ರಜತ ಸಂಭ್ರಮ ಸ್ಮರಣಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಕೃಷಿ, ಹಣ್ಣು ಮೇಳಗಳ ಆಯೋಜನೆಯು ಕೃಷಿ‌ಕ್ಷೇತ್ರ ಸಬಲೀಕರಣಗೊಳಿಸುವಲ್ಲಿ ಉತ್ತಮ‌ ಕಾರ್ಯವಾಗಿದ್ದು‌, ಇದನ್ನು ಉತ್ತೇಜಿಸುತ್ತಿರುವ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಅಭ್ಯಾಸ ನಂದನೆಗಳು. ಕೃಷಿ ಕ್ಷೇತ್ರದಲ್ಲಿನ ಕ್ರಾಂತಿಕಾರಿಕ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಅತ್ಯುತ್ತಮ ಕೆಲಸ ಮಾಡುತ್ತಿವೆ.
ಕಿಸಾನ್ ಸಮೃದ್ದಿ ಯೋಜನೆಯಿಂದ ರೈತರಿಗೆ ಅನೇಕ ಲಾಭಗಳು ದೊರೆಯುತ್ತಿದ್ದು ದೇಶದಾದ್ಯಂತ ರೈತರ ಉತ್ಪನ್ನಗಳಿಗೆ ಬ್ರಾಂಡಿಂಗ್ ಲಭಿಸುತ್ತಿದ್ದಯ, ಆನ್ ಲೈನ್ ಮಾರುಕಟ್ಟೆಗೂ ಉತ್ತೇಜನ ದೊರೆಯುತ್ತಿದೆ.
ಸ್ವಾತಂತ್ರ್ಯದ ವೇಳೆ ದೇಶ ಆಹಾರ ಕೊರತೆಯಲ್ಲಿತ್ತು, ಇದೀಗ ಆಹಾರ ಉತ್ಪನ್ನಗಳಲ್ಲಿ ಸಮೃದ್ದಿ ಸಾಧಿಸಿದ್ದು ಆಹಾರ ಉತ್ಪನ್ನಗಳ ರಫ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ಕೃಷಿ ಸಮೃದ್ದಿ ಆಗುತ್ತಿದೆ.‌ಎಲ್ಲೆಡೆ ಕಿಸಾನ್ ಸಮೃದ್ದಿ ಕೇಂದ್ರಗಳಿವೆ .‌ರೈತರು ಆಹಾರ, ಪೋಷಕಾಂಶಗಳ ಭದ್ರತೆ ನೀಡುತ್ತಿದ್ದಾರೆ. ವಿಶ್ವಕ್ಕೇ ಆಹಾರ ನೀಡುತ್ತಿರುವ ನಾವು ಸೂಪರ್ ಪವರ್ ಆಗಿ ಹೊರಹೊಮ್ಮುತ್ತಿದ್ದೇವೆ.
ತರೀಕೆರೆ ಶಾಸಕರು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಜಿ.ಹೆಚ್. ಶ್ರೀನಿವಾಸ
ಮಾತನಾಡಿ, ಕೆವಿಕೆ ೨ ಲಕ್ಷ ಜನರಿಗೆ ನೇರ ತರಬೇತಿ ನೀಡಿತ್ತಿದಗದು, ಪರೋಕ್ಷವಾಗಿ ೩೫ ಲಕ್ಷ ಜನರಿಗೆ ಸಹಕಾರಿಯಾಗಿದೆ. ಬೀಜ ಉತ್ಪಾದನೆ , ತಾಂತ್ರಿಕತೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ರೈತರಿಗೆ ಬಹು ಉಪಯೋಗವಾಗುವ ಕೆಲಸ ಕೆವಿಕೆ ಮಾಡುತ್ತದೆ ಇದೆ. ಚಿಕ್ಕಮಗಳೂರು ಕೆವಿಕೆ ಸಂಸ್ಥೆಗಳಲ್ಲಿ ಸಹ ಉತ್ತಮ ಕೆಲಸ ಆಗುತ್ತದೆ.ಕೃಷಿ ವಿದ್ಯಾರ್ಥಿಗಳು ೩ ತಿಂಗಳು ರೈತರೊಂದಿಗೆ ಬೆರೆತು ಮಾಹಿತಿ‌ ನೀಡುತ್ತಾ ಉತ್ತಮ ಕೆಲಸ ಮಾಡುತ್ತಿದ್ದಾರೆ. ಜೇನು, ಮೀನುಗಾರಿಕೆ ಹೀಗೆ ಸಮಗ್ರ ಕೃಷಿ ಮೂಲಕ ರೈತರಿಗೆ ಸಹಕಾರಿಯಾದ ಕೆವಿಕೆ ಅಭಿವೃದ್ಧಿ ಆಗಲಿ ಎಂದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಕ್ರಾಂತಿಕಾರಿ ಬದಲಾವಣೆಗೆ ಕೃಷಿ ವಿವಿ‌ ಬೇಕೆಂಬ ಉದ್ದೇಶದಿಂದ ವಿವಿ ಸ್ಥಾಪನೆಯಾಗಿದ್ದು ರೈತರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಹಾಗೂ ಯುವಜನತೆಗೆ ತರಬೇತಿ, ಮಾಹಿತಿ ನೀಡುವಲ್ಲಿ ಬಹಳ ದೊಡ್ಡ ಪಾತ್ರ ವಹಿಸುತ್ತಿದೆ. ಕೃಷಿಯಿಂದ ಉದ್ಯೋಗಾವಕಾಶ ಕೂಡ ಹೆಚ್ಚಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರೈತ ಮುಖಂಡರಾದ ಕೆ.ಟಿ.ಗಂಗಾಧರ್,
ಕೃಷಿ ಸಮಾಜದ ಅಧ್ಯಕ್ಷ ನಾಗರಾಜ್ ಹೆಚ್ ಎನ್ , ಡಾ.ಪಿ.ಕೆ.ಬಸವರಾಜ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ,
ರಾಯಚೂರು ವಿಶ್ವವಿದ್ಯಾಲಯದ ಡಾ.ಎನ್ ಹನುಮಂತಪ್ಪ,ವಿಶ್ರಾಂತ ಕುಲಪತಿ ಡಾ.ಪಿ.ನಾರಾಯಣಸ್ವಾಮಿ, ಡಾ.ದಿನಕರ್, ಡಾ.ರವಿ ಭಟ್, ಇತರೆ ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು, ರೈತರು ಪಾಲ್ಗೊಂಡಿದ್ದರು.
ಕೆವಿಕೆ ಮುಖ್ಯಸ್ಥ ಡಾ. ಸುನೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಸ್ತರಣಾಧಿಕಾರಿ ಡಾ.ಜಿ.ಕೆ ಗಿರಿಜೇಶ್ ಸ್ವಾಗತಿಸಿದರು.

Agricultural Science Centre
ಹಣ್ಣು ಪ್ರಿಯರಿಗಾಗಿ ಹಣ್ಣುಗಳ ರಾಜನೆಂದೇ ಕರೆಯಲ್ಪಡುವ ಮಾವಿನ ಹಣ್ಣಿನ 30 ವಿಶಿಷ್ಟ ಮಾವಿನ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಕೇಸರ್, ಮಲಗೋವಾ, ಮಲ್ಲಿಕಾ, ನೀಲಂ, ರಸಪುರಿ, ಸಿಂಧೂರ, ತೋತಾಪುರಿ, ಅಪ್ಪೆ ಮಿಡಿ ತಳಿಗಳ ಪ್ರದರ್ಶನ ಮತ್ತು ಮಾರಾಟವಿದೆ. ಅಲ್ಲದೆ, 20 ವಿವಿಧ ಹಲಸಿನ ತಳಿಗಳಾದ ಸಿದ್ದು ಹಲಸು, ಶಂಕರ, ಸರ್ವಋತು, ರುದ್ರಾಕ್ಷಿ. ಕೆಂಪು, ಚಂದ್ರ ಹಲಸು, ಹೆಬ್ಬಾಳ ಸೇರಿದಂತೆ ಸಖರಾಯಪಟ್ಟಣದ ಸ್ಥಳೀಯ ವಿಶೇಷ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮತ್ತು ವಿವಿಧ ತಳಿಯ ಬಾಳೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವಿದೆ.
ಬಿಜಾಪುರ, ಬಾಗಲಕೋಟೆ ಮತ್ತಿತರ ಭಾಗಗಳಿಂದ ಥಾಮ್ಸನ್ ಸೀಡ್‌ಲೆಸ್, ಶರದ್, ಕೃಷ್ಣ ಶರದ್ ಇತ್ಯಾದಿ ತಳಿಯ ರುಚಿಕರ ದ್ರಾಕ್ಷಿ ಹಣ್ಣುಗಳು ಆಗಮಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಭಾಗದಿಂದ ಬೆಂಗಳೂರು ಬ್ಲೂ ದ್ರಾಕ್ಷಿ ಬರಲಿದೆ. ಹೀಗಾಗಿ ದ್ರಾಕ್ಷಿ ಪ್ರಿಯರಿಗೆ ಬಗೆ ಬಗೆಯ ಹಣ್ಣುಗಳು ಲಭಿಸಲಿವೆ. ಅಲ್ಲದೆ, ಗೆಡ್ಡೆ-ಗೆಣಸು ತಳಿಗಳ ಪ್ರದರ್ಶನ ಹಾಗೂ ಬೇಲದ ಹಣ್ಣು, ಅಂಜೂರ ಹಣ್ಣು, ಬಿಜಾಪುರದ ನಿಂಬೆ ಹಣ್ಣು, ಮತ್ತು ಇವುಗಳ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ ಮತ್ತು ರೈತರು ತಾವೇ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.

ವಿಶಿಷ್ಟ ಖಾದ್ಯಗಳು : ಮಲೆನಾಡಿನ ವಿಶಿಷ್ಟ ಸಿಹಿ ಖಾದ್ಯಗಳಾದ ತೊಡೆದೇವು, ಅಪ್ಪೆಮಿಡಿ, ಹಲಸು, ಬಾಳೆ, ಅನಾನಸ್, ಅಂಜೂರ, ಗೇರು, ಮುರುಗಲು, ಪುನರ್ಪುಳಿ ಇತ್ಯಾದಿಗಳ ಮೌಲ್ಯವರ್ಧಿತ ಉತ್ಪನ್ನಗಳೊಂದಿಗೆ ಸಿರಿಧಾನ್ಯಗಳ ಉತ್ಪನ್ನಗಳು ಮತ್ತು ಸ್ಥಳೀಯ ವಿಶಿಷ್ಟ ಖಾದ್ಯಗಳು, ಜೇನುತುಪ್ಪದ ಮೌಲ್ಯವರ್ಧಿತ ಉತ್ಪನ್ನಗಳು ಮತ್ತು ಈ ಮೇಳದ ಅಂಗವಾಗಿ ಬೇಸಿಗೆಯ ಸವಿರುಚಿಗಳಾದ ದಾವಣಗೆರೆ ಬೆಣ್ಣೆದೋಸೆ, ಹುಬ್ಬಳ್ಳಿ ಮಿರ್ಚಿ ಮಂಡಕ್ಕಿ, ಆಲೂ ಟ್ವಿಸ್ಟರ್ ಇತ್ಯಾದಿ ಖಾದ್ಯಗಳು ಈ ಮೇಳದ ಪ್ರಮುಖ


ಆಕರ್ಷಣೆಗಳಾಗಿವೆ.
8 ಲಕ್ಷ ಸಸಿಗಳು ಲಭ್ಯ : ಕರಿಮೆಣಸು, ಕೋಕಂ, ಏಲಕ್ಕಿ, ದಾಲ್ಚಿನಿ, ಬಿದಿರು, ಕಾಫಿ, ಪುನರ್ಪುಳಿ, ಗೋಡಂಬಿ ಸೇರಿದಂತೆ ವಿವಿಧ ತಳಿಯ 8 ಲಕ್ಷ ಸಸಿಗಳು ರಿಯಾಯ್ತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದೆ. ಹಣ್ಣುಗಳ ಉತ್ಪನ್ನಗಳಾದ ಜ್ಯೂಸ್, ಜ್ಯಾಮ್, ಜೇನು, ಇತರೆ ಉತ್ಪನ್ನಗಳು, ಸಿರಿಧಾನ್ಯದ ತೊಡೆದೇವು ಈ ರೀತಿಯ ಖಾದ್ಯಗಳು ಲಭ್ಯವಿದ್ದು, ಸಾರ್ವಜನಿಕರು ಕೊಂಡುಕೊಳ್ಳುತ್ತಿದ್ದರು.

ಈ ಮೇಳದಲ್ಲಿ ಹಣ್ಣಿನ ಸಸಿಗಳ ನರ್ಸರಿ, ಅಲಂಕಾರಿಕ ಗಿಡಗಳು, ತರಕಾರಿ ಮತ್ತು ಹೂವಿನ ಬೀಜಗಳು, ತಾರಸಿ / ಕೈತೋಟದ ಪರಿಕರಗಳ ಮಾರಾಟ ಮಳಿಗೆಗಳು, ಅಲಂಕಾರಿಕ ಮೀನುಗಳು, ಬಾಳೆಯ ನಾರು, ಬಿದರಿನ ನಾರು ಮತ್ತು ಮಣ್ಣಿನಿಂದ ತಯಾರಿಸಿದ ಹಲವು ಸ್ವಸಹಾಯ ಸಂಘಗಳ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟವಿದೆ
150 ಮಳಿಗೆ ಸ್ಥಾಪನೆ : 150 ಕ್ಕೂ ಹೆಚ್ಚಿನ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದ್ದು, ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ, ರುಚಿಕರ ಹಣ್ಣು ಹಾಗೂ ರೈತರಿಗೆ, ಸ್ವಸಹಾಯ ಗುಂಪುಗಳಿಗೆ, ಉದ್ದಿಮೆದಾರರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವುದು ಈ ಮೇಳದ ಉದ್ದೇಶವಾಗಿದೆ. ಮುಖ್ಯವಾಗಿ ಈ ಮೇಳವು ರೈತರು, ವ್ಯಾಪಾರಿಗಳು, ರಫ್ತುದಾರರು, ಸರ್ಕಾರಿ ಅಧಿಕಾರಿಗಳು ಮತ್ತು ಇನ್ನಿತರ ಸಂಸ್ಥೆಗಳ ಮುಖ್ಯಸ್ಥರನ್ನು ಭೇಟಿ ಆಗಲು, ಸಂಪರ್ಕ ಹೊಂದಲು ಒಳ್ಳೆಯ ವೇದಿಕೆಯಾಗಿದೆ.
ಅಲ್ಲದೆ, ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಆವರಣದ ಪ್ರಾತ್ಯಕ್ಷಿಕೆಯ ತಾಕುಗಳಾದ ಸಮಗ್ರ ಕೃಷಿ ಪದ್ಧತಿ. ಜೇನು ಸಾಕಾಣಿಕೆ ಘಟಕ, ಕುರಿ ಮತ್ತು ಕೋಳಿ ಸಾಕಾಣಿಕೆ ಘಟಕ, ಜಲ ಕೃಷಿ (ಹೈಡೋಫೋನಿಕ್ಸ್), ಎರೆಹುಳು ಗೊಬ್ಬರ ತಯಾರಿಕೆ ಘಟಕ, ಕೊಳವೆ ಬಾವಿ ಜಲ ಮರುಪೂರಣ ಮಾದರಿ, ತಾರಸಿ ತೋಟ, ಅಲಂಕಾರಿಕ ಮೀನು ಘಟಕಗಳನ್ನು ಜನರು‌ ಸಂದರ್ಶಿಸುತ್ತಿದ್ದರು.

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

0

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ, ಏಪ್ರಿಲ್ 25, 2025 ರಂದು ಹೆಚ್ಚು ಮಾಹಿತಿಯುಕ್ತ ವೃತ್ತಿ ಸಮಾಲೋಚನೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ನಿರೀಕ್ಷಿತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಆಕರ್ಷಿಸಲಾಯ್ತು. ಈ ಕಾರ್ಯಕ್ರಮವು ವಿಶ್ವವಿದ್ಯಾಲಯದ ವೈವಿಧ್ಯಮಯ ಶೈಕ್ಷಣಿಕ ಕೊಡುಗೆಗಳು ಮತ್ತು ವೃತ್ತಿ ನಿರೀಕ್ಷೆಗಳ ಬಗ್ಗೆ ವಿವರವಾದ ಒಳನೋಟಗಳನ್ನು ನೀಡುವ ಗುರಿಯನ್ನು ಹೊಂದಿತು.

ಪೊಲೀಸ್ ಆಡಳಿತ, ಕ್ಲಿನಿಕಲ್ ಸೈಕಾಲಜಿ, ಕ್ರಿಮಿನಾಲಜಿ ಫೋರೆನ್ಸಿಕ್ ಸೈನ್ಸ್, ಡಿಫೆನ್ಸ್ & ಸ್ಟ್ರಾಟೆಜಿಕ್ ಸ್ಟಡೀಸ್ ಮತ್ತು ಲಾ ಮುಂತಾದ ವಿವಿಧ ಕ್ಷೇತ್ರಗಳ ವಿಷಯ ತಜ್ಞರು ಆರ್‌ಆರ್‌ಯುನಲ್ಲಿ ಲಭ್ಯವಿರುವ ಪದವಿಪೂರ್ವ ಮತ್ತು ಸ್ನಾತಕೋತ್ತರ ಕಾರ್ಯಕ್ರಮಗಳಾದ ಬಿಎ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್, ಬಿಎ/ಬಿಎಸ್‌ಸಿ ಮತ್ತು ಎಂಎ/ಎಂಎಸ್‌ಸಿ ಡಿಫೆನ್ಸ್ & ಸ್ಟ್ರಾಟೆಜಿಕ್ ಸ್ಟಡೀಸ್, ಎಂಎ/ಎಂಎಸ್‌ಸಿ ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಮತ್ತು ಎಂಎಸ್‌ಸಿ ಕ್ಲಿನಿಕಲ್ ಸೈಕಾಲಜಿಗಳನ್ನು ಪರಿಚಯಿಸಿದರು, ಪಠ್ಯಕ್ರಮದ ರಚನೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೇಲಿನ ಬಲವಾದ ಒತ್ತು ವಿವರಿಸಿದರು.

ಆರ್‌ಆರ್‌ಯು ಪದವೀಧರರು ಅನುಸರಿಸಬಹುದಾದ ವೃತ್ತಿ ಅವಕಾಶಗಳ ಕುರಿತು, ಪ್ರಸ್ತುತ ಉದ್ಯಮ ಪ್ರವೃತ್ತಿಗಳು ಮತ್ತು ಉದಯೋನ್ಮುಖ ಉದ್ಯೋಗ ಮಾರುಕಟ್ಟೆಗಳನ್ನು ಪರಿಹರಿಸುವ ಕುರಿತು ಆಳವಾದ ಚರ್ಚೆಗಳನ್ನು ನಡೆಸಲಾಯಿತು.

ಕೋರ್ಸ್ ರಚನೆಗಳು ಮತ್ತು ವೃತ್ತಿ ಮಾರ್ಗಗಳ ಕುರಿತು ಸ್ಪಷ್ಟತೆ ಪಡೆಯಲು ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರು.

ಅನೇಕರು ತಮ್ಮ ಪ್ರಶ್ನೆಗಳಿಗೆ ಸಮಗ್ರ ಉತ್ತರಗಳನ್ನು ಪಡೆದ ನಂತರ ವಿಶ್ವವಿದ್ಯಾಲಯಕ್ಕೆ ಸೇರಲು ತಮ್ಮ ತೀವ್ರ ಆಸಕ್ತಿಯನ್ನು ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಆರ್‌ಆರ್‌ಯುನ ಶೈಕ್ಷಣಿಕ ಶ್ರೇಷ್ಠತೆ ಮತ್ತು ವೃತ್ತಿ ಸಿದ್ಧತೆಗೆ ಬದ್ಧತೆಯನ್ನು ಎತ್ತಿ ತೋರಿಸಿತು, ವಿಶ್ವವಿದ್ಯಾನಿಲಯವು ಒದಗಿಸುವ ಅವಕಾಶಗಳ ಬಗ್ಗೆ ಹಾಜರಿದ್ದವರನ್ನು ಉತ್ಸುಕರನ್ನಾಗಿ ಮಾಡಿತು.

National Defense University ಈ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರಿಂದ ಸಕಾರಾತ್ಮಕ ಪ್ರತಿಕ್ರಿಯೆಯೊಂದಿಗೆ ಮುಕ್ತಾಯವಾಯಿತು‌.

ಭವಿಷ್ಯದ ವೃತ್ತಿಪರರನ್ನು ರೂಪಿಸುವಲ್ಲಿ ಪ್ರಮುಖ ಸಂಸ್ಥೆಯಾಗಿ RRU ನ ಖ್ಯಾತಿಯನ್ನು ಬಲಪಡಿಸಿತು.

ಹೆಚ್ಚಿನ ವಿವರಗಳಿಗಾಗಿ, ಕಾರ್ಯಕ್ರಮಗಳ ಮತ್ತು ಪ್ರವೇಶದ ಅವಶ್ಯಕತೆಗಳ ಕುರಿತು, ದಯವಿಟ್ಟು ನಮ್ಮನ್ನು ಇಲ್ಲಿ ಸಂಪರ್ಕಿಸಿ:
ಇಮೇಲ್: admissions.karnataka@rru.ac.in
ದೂರವಾಣಿ: +91 9036899360/57
ವೆಬ್‌ಸೈಟ್: https://rru.ac.in/shivamogga-campus-karnataka/

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ, ಶಿವಮೊಗ್ಗ ಕ್ಯಾಂಪಸ್‌ನಲ್ಲಿ ನಮ್ಮನ್ನು ಭೇಟಿ ಮಾಡಿ: ಹಳೆಯ ಕೇಂದ್ರೀಯ ವಿದ್ಯಾಲಯ ಶಾಲಾ ಕಟ್ಟಡ, ವಾರ್ಡ್ ಸಂಖ್ಯೆ 03, ಶಾಂತಿನಗರ, ರಾಗಿಗುಡ್ಡ, ಶಿವಮೊಗ್ಗ-577204