Tuesday, March 3, 2026
Tuesday, March 3, 2026
Home Blog Page 327

S.N.Chennabasappa ಇಡೀ ಶಿವಮೊಗ್ಗವೇ ಒಟ್ಟಾಗಿ ಮೃತ ಮಂಜುನಾಥ್ ರಾವ್ ಗೆ ಶ್ರದ್ಧಾಂಜಲಿ ಸಲ್ಲಿಸಿದೆ- ಶಾಸಕ ಚೆನ್ನಿ

0

S.N.Chennabasappa ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಸಂಭವಿಸಿದ ಹೇಡಿ ಭಯೋತ್ಪಾದಕರ ಭಯಾನಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಶಿವಮೊಗ್ಗದ ಪ್ರವಾಸಿಗ ಶ್ರೀ ಮಂಜುನಾಥ್ ರಾವ್ ಅವರ ಪಾರ್ಥಿವ ಶರೀರವು ಇಂದು ಶಿವಮೊಗ್ಗ ನಗರಕ್ಕೆ ಆಗಮನದ ಸಂದರ್ಭದಲ್ಲಿ ಸಕಲ ಗೌರವಗಳೊಂದಿಗೆ ನಮನ ಸಲ್ಲಿಸಲಾಯಿತು.

ಸಾಮಾನ್ಯ ನಾಗರಿಕನಾಗಿ ಪ್ರವಾಸಕ್ಕೆ ಹೊರಟಿದ್ದ ಮಂಜುನಾಥ್ ರಾವ್ ಅವರು, ಭಯೋತ್ಪಾದಕ ಮುಸಲ್ಮಾನರ ಇಂತಹ ಹೇಡಿತನದ ಕೃತ್ಯಕ್ಕೆ ಹತರಾಗಿರುವುದು ಇಡೀ ಶಿವಮೊಗ್ಗದಲ್ಲಿ ಆಘಾತದ ಛಾಯೆ ಹರಡಿದ್ದು, ಇಡೀ ಶಿವಮೊಗ್ಗ ಒಗ್ಗಟ್ಟಾಗಿ ದಾಳಿಯಲ್ಲಿ ಮಡಿದ ಮಂಜುನಾಥ್ ಅವರನ್ನು ಶ್ರದ್ಧಾಪೂರ್ವಕವಾಗಿ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದೆ.

ಅಂತಿಮ ದರ್ಶನದ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಂಸದರಾದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್ ಅರುಣ್, ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು, ಬಿಜೆಪಿ-ಪರಿವಾರ ಸಂಘಟನೆಗಳ ಪ್ರಮುಖರು, ಸಾವಿರಾರು ಕಾರ್ಯಕರ್ತರು ಹಾಗೂ ಶಿವಮೊಗ್ಗದ ನಾಗರಿಕರು ಭಾಗಿಯಾಗಿ ಗೌರವಪೂರ್ವಕವಾಗಿ ಅಂತಿಮ ನಮನವನ್ನು ಸಲ್ಲಿಸಿದ್ದಾರೆ.

ಇಡೀ ನಗರ ಶೋಕಾಚ್ಛನ್ನವಾಗಿದ್ದು, ಅವರ ಅಂತಿಮ ಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿ, ದೇಶಕ್ಕಾಗಿ ಬಲಿಯಾದ ಮಂಜುನಾಥ್ ಅವರ ತ್ಯಾಗವನ್ನು ಸ್ವರಿಸುತ್ತಾ, ರಸ್ತೆಗಳಲ್ಲಿ ಜನರು ದಾರಿಯುದ್ದಕ್ಕೂ ನಿಂತು, “ಮಂಜುನಾಥ್ ರಾವ್ ಅಮರ್ ರಹೇ” ಎಂಬ ಘೋಷಣೆಗಳೊಂದಿಗೆ ಶ್ರದ್ಧಾಪೂರ್ವಕವಾಗಿ ನಮನ ಸಲ್ಲಿಸಿದ್ದಾರೆ.

ಯಾವುದೇ ಅಡೆತಡೆಗಳಿಲ್ಲದೆ ಅವರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರುವಲ್ಲಿ ಸಹಕರಿಸಿದ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರಿಗೆ, ಅವರ ಕುಟುಂಬದವರ ಯೋಗ ಕ್ಷೇಮ ನೋಡಿಕೊಂಡು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತಂದ ಶ್ರೀ ತೇಜಸ್ವಿ ಸೂರ್ಯ ಅವರಿಗೆ, ರಾಜ್ಯ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರಿಗೆ ಹಾಗೂ ಕೇಂದ್ರ-ರಾಜ್ಯದ ನಾಯಕರಿಗೆ ಈ ಸಂದರ್ಭದಲ್ಲಿ ಶಿವಮೊಗ್ಗದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ.

ಅವರ ಕುಟುಂಬದವರೊಂದಿಗೆ ಈ ದುಃಖದ ಸಂದರ್ಭದಲ್ಲಿ ನಾವು ಸದಾ ಇದ್ದೇವೆ ಎಂಬ ಭರವಸೆಯನ್ನು ನೀಡುತ್ತಾ, ಭಗವಂತನು ಅವರಿಗೆ ಈ ದುಃಖವನ್ನು ಭರಿಸುವ ಆತ್ಮಸ್ಥೈರ್ಯ, ಶಕ್ತಿ ಮತ್ತು ಸಮಾಧಾನವನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.


Dr. Rajkumar ಡಾ.ರಾಜ್ ಅವರಿಗಿದ್ದಷ್ಟು ಅಭಿಮಾನಿಗಳು ಬೇರೆ ಯಾವ ನಟರಿಗೂ ಇಲ್ಲ: ವಿ.ಮೂರ್ತಿ

0

Dr. Rajkumar ವರನಟ ನಟಸಾರ್ವಭೌಮ ಕನ್ನಡದ ಮೇರು ನಟ ಡಾಕ್ಟರ್ ರಾಜಕುಮಾರ್ ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಕನ್ನಡ ನಾಡು ನುಡಿ ಭಾಷೆ ಹಾಗೂ ಕನ್ನಡಕ್ಕಾಗಿ ಹೋರಾಡಿದ ಏಕೈಕ ನಟ ಎಂದರೆ ಅವರೇ ರಾಜಕುಮಾರ್ ಎಂದು ಜ್ವಾಲಾಮುಖಿ ಡಾಕ್ಟರ್ ರಾಜಕುಮಾರ್ ಸಂಘ ನಗರ ಘಟಕ ಅಧ್ಯಕ್ಷರಾದ ವಿ.ಮೂರ್ತಿಯವರು ಅಭಿಮತ ವ್ಯಕ್ತಪಡಿಸಿದರು.

ಡಾಕ್ಟರ್ ರಾಜಕುಮಾರ್ ಅವರ 96ನೇಯ ಜನ್ಮದಿನದ ಅಂಗವಾಗಿ ಸೀನಪ್ಪ ಶೆಟ್ಟಿ ಸರ್ಕಲ್ ನಲ್ಲಿ ತಮ್ಮ ಅಭಿಮಾನಿ ಬಳಗದವರೊಂದಿಗೆ ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಚಿತ್ರರಂಗದಲ್ಲಿ ಎಂತಹ ಪಾತ್ರಕ್ಕೂ ಸೈ ಎನಿಸುವ ರಾಜ ಅವರು. ನಮಗೆ ತಿಳಿದ ಹಾಗೆ ಕನ್ನಡ ಚಿತ್ರರಂಗದಲ್ಲಿ ಇವರಷ್ಟು ಅಭಿಮಾನಿ ಬಳಗ ಬೇರೆ ಯಾವ ಚಿತ್ರರಂಗದಲ್ಲೂ ಇಲ್ಲ. ಗೋಕಾಕ್ ಚಳುವಳಿಯಲ್ಲಿ ಕನ್ನಡಿಗರ ಎದೆಯಲ್ಲಿ ಕನ್ನಡತನವನ್ನು ಉಳಿಸುವಲ್ಲಿ ಹೋರಾಟ ಮಾಡಿದ ಕನ್ನಡದ ಒಬ್ಬ ಸಂತ. ಅಪ್ರತಿಮ ಹಾಡುಗಾರ, ಯೋಗಪಟು ಹಾಗೂ ಸಮಾಜಮುಖಿಯಾಗಿ ಹಲವಾರು ಸೇವೆಗಳನ್ನು ಮಾಡಿದಂತಹ ಡಾಕ್ಟರ್ ರಾಜಕುಮಾರ್ ಅವರು ಇಂದಿಗೂ ಕನ್ನಡಿಗರ ಹೃದಯದಲ್ಲಿ ಅಚ್ಚರಿಯದೆ ಉಳಿದಿದ್ದಾರೆ ಎಂದು ನುಡಿದರು.

ಜ್ವಾಲಾಮುಖಿ ಡಾಕ್ಟರ್ ರಾಜಕುಮಾರ್ ನಗರ ಘಟಕ ಸಂಘದ ಗೌರವಾಧ್ಯಕ್ಷರಾದ ಟಿ.ಆರ್.ಅಶ್ವಥ್ ನಾರಾಯಣ್ ಶೆಟ್ಟಿ ಅವರು ಐವತ್ತು ಕೆಜಿ ಕೇಕ್ ಕಟ್ ಮಾಡಿ ಸಾರ್ವಜನಿಕರಿಗೆ ವಿತರಿಸಿ ಮಾತನಾಡಿದ ಅವರು, ರಾಜಕುಮಾರ ಅವರ ವ್ಯಕ್ತಿತ್ವಕ್ಕೆ ಅವರೇ ಸಾಟಿ. ಅವರಿಗೆ ಕನ್ನಡದ ಬಗ್ಗೆ ಇದ್ದಂತಹ ಅಭಿಮಾನ ಎಂದು ಮರೆಯಲು ಸಾಧ್ಯವಿಲ್ಲ. ಕನ್ನಡ ಚಿತ್ರರಂಗದ ಒಬ್ಬ ದೇವತಾ ಮನುಷ್ಯ. ಇಂತಹ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಸೊರಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

Dr. Rajkumar ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ದೇವರಾಜ್, ಕಾರ್ಯದರ್ಶಿ ಮಹೇಶ್, ನಿರ್ದೇಶಕರಗಳಾದ ದೇವೇಂದ್ರಪ್ಪ, ಗೋಪಿನಾಥ್, ನರಸಿಂಹ, ನಟೇಶ್ ಹಾಗೂ ಶ್ರೀನಿಧಿ ಸಂಸ್ಥೆಯ ಉದ್ಯಮಿಗಳು ಹಾಗೂ ಕೆಲಸಗಾರರು ಮತ್ತು ಸಾರ್ವಜನಿಕರು ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಜಕುಮಾರ್ ಅವರ ಗೀತೆಗಳು ಹೇಳುವುದರ ಜೊತೆಗೆ ಸಂಭ್ರಮಿಸಿದರು.


Department of Youth Empowerment and Sports ಶಿವಮೊಗ್ಗ ಕ್ರೀಡಾಸಂಕೀರ್ಣದಲ್ಲಿ ಈಜು, ಸ್ಕೇಟಿಂಗ್, ಲಾನ್ ಟೆನಿಸ್ ಬೇಸಿಗೆ ಶಿಬಿರ

0

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಗರದ ಸ್ವಾಮಿ ವಿವೇಕಾನಂದ ಬಡಾವಣೆಯ ಕ್ರೀಡಾ ಸಂಕೀರ್ಣದಲ್ಲಿ ಮಕ್ಕಳಿಗಾಗಿ 3ನೇ ಹಂತದಲ್ಲಿ ಬೇಸಿಗೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಈ ಬೇಸಿಗೆ ಶಿಬಿರವು ಮೇ 02 ರಿಂದ 25 ರವರೆಗೆ 21 ದಿನಗಳು ನಡೆಯಲಿದ್ದು, ವಿಶೇಷವಾಗಿ ಈಜು, ಸ್ಕೇಟಿಂಗ್ ಮತ್ತು ಲಾನ್ ಟೆನ್ನಿಸ್ ಕ್ರೀಡೆಗಳಲ್ಲಿ ನುರಿತ ಕ್ರೀಡಾ ತರಬೇತುದಾರರಿಂದ ಬೆಳಿಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ತರಬೇತಿ ನೀಡಲಾಗುವುದು. ವಿಶೇಷವಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರೀಕರಿಗೆ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುವುದು. Department of Youth Empowerment and Sports ವಾರದ ಕೊನೆಯ ಶನಿವಾರ ಮತ್ತು ಭಾನುವಾರಗಳಂದು ಈಜು ತರಬೇತಿಯನ್ನು ಪಡೆಯುವ ಅವಕಾಶವಿದ್ದು, ಪ್ರತೀ ಭಾನುವಾರ ಸಹ ಈಜು ತರಬೇತಿಯನ್ನು ಪಡೆಯಬಹುದಾಗಿದೆ. ವಸತಿಶಾಲೆ/ ಪ್ರೌಢಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಿನಲ್ಲಿ ಅಂದರೆ ಜೂನ್ ತಿಂಗಳ ಪ್ರಾರಂಭದಲ್ಲಿ ವಾರಕ್ಕೆ ಒಂದು ದಿನ ಅಥವಾ ಎರಡು ದಿನದ ತರಬೇತಿಯನ್ನು ಪಡೆಯುವ ಅವಕಾಶವನ್ನು ನೀಡಲಾಗುತ್ತಿದ್ದು, ಆಸಕ್ತ ಶಾಲಾ/ಕಾಲೇಜುಗಳು ಹೆಚ್ಚಿನ ಮಾಹಿತಿಯನ್ನು ಪಡೆದು ಇದರ ಸದುಪಯೋಗವನ್ನು ಪಡೆದುಕೊಳ್ಳುವುದು.ಬೇಸಿಗೆ ಶಿಬಿರದಲ್ಲಿ ಪಾಲ್ಗೊಳ್ಳಲಿಚ್ಚಿಸುವ ಕ್ರೀಡಾಸಕ್ತರು ಮಾಹಿತಿಗಾಗಿ ಮೊ.9743820293, 6362200751 (ಈಜು), 7760921936 (ಸ್ಕೇಟಿಂಗ್), 8374335635 (ಟೆನ್ನಿಸ್) ಇವರನ್ನು ಸಂಪರ್ಕಿಸುವಂತೆ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

CM Siddharamaiah ಪಹಲ್ಗಾಂ ನಿಂದ ಉಳಿದ 180‌ ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ಕರೆತಂದ ಸಚಿವ‌ ಸಂತೋಷ್ ಲಾಡ್

0

CM Siddharamaiah ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಆದೇಶದ ಮೇರೆಗೆ
ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕಾರ್ಮಿಕ ಸಚಿವರುಕನ್ನಡಿಗರನ್ನು ಕರೆತಂದಿದ್ದಾರೆ.

ಸಿಎಂ ಸೂಚನೆ ಮೇರೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಅವರು ಪಹಲ್ಗಮ್ನಿಂದ ಸುಮಾರು 180 ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತಂದಿದ್ದಾರೆ.

ಬುಧವಾರ ಬೆಳಗಿನ ಜಾವ 3.00 ಕ್ಕೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಕನ್ನಡಿಗರನ್ನು ಕರೆತಂದಿದ್ದಾರೆ.

Klive Special Article ನೀಚ‌ರಿಗೆ ಸರಿಯಾಗಿ ಇಕ್ಕಬೇಕಿದೆ

0

Klive Special Article ನೀಚ‌ರಿಗೆ ಸರಿಯಾಗಿ ಇಕ್ಕಬೇಕಿದೆ ನಾವು ಮನುಜ ಕುಲ ತಾನೊಂದೇ ವಲಂ ಎನ್ನು ಕವಿವಾಣಿಯನ್ನ ಆಗಾಗ್ಗೆ ನೆನಪಿಸಿಕೊಳ್ಳುತ್ತೇವೆ.
ಆದರೆ ಇದೆಲ್ಲ ನಮ್ಮ ಭಾರತೀಯರು ಮಾತ್ರ ಅನುಸರಿಸುವ
ಆದರ್ಶಗಳಾಗಿಬಿಟ್ಟಿವೆ ಅನಿಸುತ್ತದೆ.

ಕಾಶ್ಮೀರದ ಪಹಲ್ಗಾಂ ನಲ್ಲಿ ನಡೆದ ನರಮೇಧ ಮನುಷ್ಯ‌ ಜನಾಂಗವೇ ತಲೆತಗ್ಗಿಸುವ ಘಟನೆ.
ಮುಸ್ಲೀಂ ಸಮುದಾಯದಲ್ಲಿ‌ ಎಲ್ಲರೂ ನೀತಿರಹಿತರು‌ ಎನ್ನಲಾಗದು. ಆ ಜನಾಂಗವೂ ಮನುಷ್ಯರದೆ. ಆದರೆ ಅದರಲ್ಲಿನ ವಿದ್ಯಾವಂತರು, ಆಧ್ಯಾತ್ಮಿ, ಬುದ್ಧಿಜೀವಿಗಳು ಈಗ
ಕಳೆದು ಹೋಗಿದ್ದಾರೆಯೆ?

ಕಾಶ್ಮೀರದ ಸಮಸ್ಯೆ ಬಗ್ಗೆ ‌ಕೊಲೆಯಾದ ಮಂಜುನಾಥ ರಾವ್ ಪತ್ನಿ‌ ಮೋದಿಯವರಿಗೆ ಏನು‌ ಹೇಳಬೇಕು?
ಇದು ಏನನ್ನ ಸೂಚಿಸುತ್ತದೆ? ವಿವೇಚಿಸಬೇಕಾದ ಸಂಗತಿ.
ಮೋದಿಯವರಿಗೆ ಹೇಳಬೆರಕಾದ್ದನ್ನ ತಿಳಿಸಲು ಇದು ಕ್ರಮವಲ್ಲ.‌ಪೈಶಾಚಿಕ ನಡೆ. ಒಂದು ರಾಜತಾಂತ್ರಿಕ ‌ವೇದಿಕೆಯಲ್ಲಿ ಕಾಶ್ಮೀರ್ ಸಮಸ್ಯೆ ಪರಸ್ಪರ ಇತ್ಯರ್ಥವಾಗಬೇಕು.
ಪ್ರವಾಸಿಗರಾಗಿ ಬಂದ
ಅಮಾಯಕರ ಕೊಲೆ ಇದಕ್ಕೆ ಉತ್ತರವಲ್ಲ.
ಇಂತಹ ಕೃತ್ಯಗಳಿಗೆ ಪ್ರಚೋದನೆ ನೀಡುವುದು ಮಹಾಪರಾಧ.
ಈ ಕುಕೃತ್ಯದ ಹಿಂದಿರುವ ಪಾತಕಿ
ಸೈಫುಲ್ಲಾ ಖಾಲೀದ್
2026 ರಲ್ಲೇ ಕಾಶ್ಮೀರಕ್ಕೆ ಸ್ವಾತಂತ್ರ್ಯ‌ ಕೊಡಿಸುವೆ ಎಂದು‌ ನೀಡಿದ ಹೇಳಿಕೆ ಮಾಧ್ಯಮಗಳಲ್ಲಿ‌ ಪ್ರಕಟವಾಗಿದೆ.
ಇದು ಹಾಸ್ಯಾಸ್ಪದ ಹೇಳಿಕೆಯೇ ಸರಿ. ಏಕೆಂದರೆ ಅಪರಾಧ,ಕೊಲೆಗಳ ಮೂಲಕ ಯಾವುದೇ ಸಮಸ್ಯೆಗೆ ಉತ್ತರ ಸಿಗದು. ಈತನ ಟೀಮ್ ಹೆಸರು, ಟಿ.ಆರ್.ಎಫ್.
( ದ ರೆಸಿಸ್ಟೆಂಟ್ ಫ್ರಂಟ್) .

ಭಾರತ, ಕೈಗೊಂಡ ಕ್ರಮ
ಗಂಭೀರ ಸ್ವರೂಪ. ಅಯ್ಯೋ ಪಾಪ, ಅನ್ನದೇ
ಪಾಕ್ ಪ್ರಜೆಗಳು ತಕ್ಷಣ ವಾಪಸ್ ತಮ್ಮ ದೇಶಕ್ಕೆ ತೆರಳಬೇಕು.
ರಾಜತಾಂತ್ರಿಕ ಬಾಂಧವ್ಯಕ್ಕೆ ವಿರಾಮ.
ಮುಖ್ಯವಾದ ಸಿಂಧು‌ನದು ಒಪ್ಪಂದಕ್ಕೆ ತಡೆ, ಸಲೀಸು‌‌ ದಾರಿಯಾಗಿರುವ ವಾಘಾ-ಅಟಾರಿ‌ ಗಡಿ ಮುಚ್ಚಿರುವುದು, ಇತ್ಯಾದಿ‌
ತೀವ್ರತರ ಪ್ರಕ್ರಿಯೆಗೆ ಮೊದಲಾಗಿದೆ. ಇಲ್ಲದಿದ್ದರೆ ಪಾಕಿಗಳು ಪಾಠ ಕಲಿಯುವುದಿಲ್ಲ.ಈಗಾಗಕೇ ದಾರಿದ್ರ್ಯದ. ಹರಿದ ಅರಿವೆಯಲ್ಲಿ ಹೊರಳಾಡುತ್ತಿರುವ ಪಾಕ್, ತನ್ನ ಮಂದಿ ಇಂತಹ‌‌ ನೀಚಕೃತ್ಯಗಳಿಗೆ
ಮುಂದಾಗಿ ಅಂತಾರಾಷ್ಟ್ರೀಯ ಕಳಂಕ ಹಚ್ಚುತ್ತಿದ್ದಾರೆ ಎಂಬ ಪರಿಜ್ಞಾನವನ್ನೇ ಹೊಂದಿಲ್ಲವೇ ? ಎಂಬ ಸಾಮಾನ್ಯ ಪ್ರಶ್ನೆ ನಮ್ಮನ್ನ ಕಾಡುತ್ತದೆ.

Information and Public Relations Department ರಾಜ್ಯ ಸರ್ಕಾರದಿಂದ ಡಿಜಿಟಲ್ ಜಾಹೀರಾತು & ಡಿಜಿಟಲ್ ಮಾಧ್ಯಮಗಳ ನೋಂದಾವಣೆಗೆ ಅರ್ಜಿ ಆಹ್ವಾನ

0

Information and Public Relations Department ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್‌ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ – 2024 ಅನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 

ಕರ್ನಾಟಕ ಸರ್ಕಾರವು ಡಿಜಿಟಲ್‌ ಜಾಹೀರಾತಿಗಾಗಿ ಡಿಜಿಟಲ್‌ ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್‌ ಮಾಧ್ಯಮಗಳನ್ನು ಎಂಪ್ಯಾನಲ್‌ಮೆಂಟ್‌ ಮಾಡಿಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್‌ ಏಜೆನ್ಸಿ ಮತ್ತು ಮಾಧ್ಯಮಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಮತ್ತು ಸ್ವರೂಪ ಬದಲಾಗಿದೆ. ಅಂತರ್ಜಾಲ, ಖಾಸಗಿ ಕಂಪ್ಯೂಟರ್‌, ಸ್ಮಾರ್ಟ್‌ ಟಿವಿ ಹಾಗೂ ಸ್ಮಾರ್ಟ್‌ ಫೋನ್‌, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ.

ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್‌ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಜೊತೆಗೆ, ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಮಾದರಿಯಲ್ಲಿ ಡಿಜಿಟಲ್‌ ಜಾಹೀರಾತು ನೀಡಲು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿಯನ್ನು ಸರ್ಕಾರ ಹೊರತಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಹೊಸ ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ ಅನ್ವಯ ಎಲ್ಲಾ ಇಲಾಖೆಗಳು, ನಿಗಮಗಳು, ಪ್ರಾಧಿಕಾರಗಳು, ಮಂಡಳಿಗಳು, ಸ್ಥಳೀಯಾಡಳಿತಗಳು, ಪುರಸಭೆಗಳು, ನಗರ ಪಾಲಿಕೆಗಳು ಮೊದಲಾದವುಗಳಲ್ಲಿ ಡಿಜಿಟಲ್‌ ಜಾಹೀರಾತುಗಳನ್ನು ಕಡ್ಡಾಯವಾಗಿ ಈ ಮಾರ್ಗಸೂಚಿಗೆ ಅನುಸಾರವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಬಿಡುಗಡೆ / ಪೂರೈಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ ಅನ್ವಯ ವೀಡಿಯೊ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಾದ ಗೂಗಲ್‌ (ಯೂಟ್ಯೂಬ್‌), ಮೆಟಾ (ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್‌ ಬಿಸಿನೆಸ್‌, ವಾಟ್ಸಾಪ್‌ ಚಾನಲ್), ಸರ್ಚ್ ಇಂಜಿನ್‌ಗಳಾದ ಗೂಗಲ್‌, ಬಿಂಗ್‌, ಸಾಮಾಜಿಕ ಜಾಲತಾಣಗಳಾದ ಎಕ್ಸ್‌ (ಈ ಹಿಂದೆ ಟ್ವಿಟರ್‌), ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಲಿಂಕ್‌ಡ್‌ಇನ್‌, ವಾಟ್ಸಾಪ್‌, ಸ್ನಾಪ್‌ಚಾಟ್‌, ಟೆಲಿಗ್ರಾಂ, ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್‌, ಅಮೇಜಾನ್‌ ಫ್ರೈಮ್‌, ಡಿಸ್ನಿ ಹಾಟ್‌ಸ್ಟಾರ್‌ ಸೋನಿಲೈವ್‌, ಜಿಯೋ ಸಿನಿಮಾ, ಜೀ 5, ವೂಟ್‌, ಸನ್‌ ನೆಕ್ಸ್ಟ್‌ ಮತ್ತು ಟಾಕೀಸ್, ಫಿನ್‌ಟೆಕ್‌ ಪ್ಲಾಟ್‌ಫಾರ್ಮ್‌ಗಳಾದ ಪೇಟಿಎಂ, ಪೋನ್‌ಪೇ ಮತ್ತು ಜಿಪೇ ಸೇರಿದಂತೆ ಇನ್ನಿತರ ಡಿಜಿಟಲ್‌ ವೇದಿಕೆಗಳಡಿ ಜಾಹೀರಾತು ಅರ್ಹ ಏಜೆನ್ಸಿಗಳ ಮೂಲಕ ನೀಡಲು ಅವುಗಳನ್ನು ಎಂಪ್ಯಾನಲ್‌ ಮಾಡಿಕೊಳ್ಳಲು ವಾರ್ತಾ ಇಲಾಖೆಯು ಉದ್ದೇಶಿಸಿದೆ.

Information and Public Relations Department ಹಾಗೆಯೇ, ಅಪ್ಲಿಕೇಶನ್ ಡೌನ್‌ಲೋಡ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಬರುವ ವೀಡಿಯೊ, ಡಿಸ್‌ಪ್ಲೇ ಮತ್ತು ಸರ್ಚ್‌ ಸೇರಿದಂತೆ ವಿವಿಧ ವೇದಿಕೆಗಳಡಿ ಜಾಹೀರಾತು ನೀಡಿಕೆ, ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆಪಲ್‌ ಆಪ್‌ ಸ್ಟೋರ್‌ನಲ್ಲಿ ಕನಿಷ್ಠ 1 ಲಕ್ಷ ಡೌನ್‌ಲೋಡ್‌ ಹೊಂದಿರುವ ಯಾವುದೇ ಆಪ್‌ ಮತ್ತು ಸುದ್ದಿಗಳನ್ನು ಪ್ರಸಾರ ಮಾಡುವ ಯಾವುದೇ ಡಿಜಿಟಲ್ ಘಟಕ-ವೆಬ್ ಅಪ್ಲಿಕೇಶನ್ ಅಥವಾ ಮೊಬೈಲ್ ಅಪ್ಲಿಕೇಶನ್ ಸೇರಿದಂತೆ ವಿವಿಧ ಮೂಲಗಳಿಂದ ಸುದ್ದಿಗಳನ್ನು ಸಂಗ್ರಹಿಸಿ ಜನರಿಗೆ ನೀಡುವ ವೇದಿಕೆಗಳು. ಇನ್‌ಶಾರ್ಟ್‌ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಫಾಲೋವರ್‌ಗಳನ್ನು ಹೊಂದಿರುವ ಇನ್‌ಫ್ಲ್ಯುಯೆನ್ಸರ್‌ಗಳು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಾಯಿಸಿಕೊಂಡು ಜಾಹೀರಾತು ಪಡೆಯಲು ಅರ್ಹತೆ ಹೊಂದುತ್ತವೆ. 
ಡಿಜಿಟಲ್ ಜಾಹೀರಾತಿಗಾಗಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಸಹಯೋಗ ಹೊಂದಲು ಬಯಸುವ ಏಜೆನ್ಸಿಗಳು ಭಾರತ ಸರ್ಕಾರದ ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ನಲ್ಲಿ ನೋಂದಣಿಯಾದ ಪ್ರೈವೇಟ್‌ ಲಿಮಿಟೆಡ್‌ ಕಂಪನಿ, ಪಬ್ಲಿಕ್‌ ಲಿಮಿಟೆಡ್‌ ಕಂಪನಿ, ಪಾಲುದಾರಿಕೆ, ಲಿಮಿಟೆಡ್‌ ಲಯಬಿಲಿಟಿ ಪಾಲುದಾರಿಕೆ ಹೊಂದಿರಬೇಕು. ಎಂಪ್ಯಾನೆಲಿಂಗ್‌ ಸಮಯದಲ್ಲಿ ಕನಿಷ್ಠ ಎರಡು ವರ್ಷವಾಗಿರಬೇಕು. ಜಿಎಸ್‌ಟಿ ನೋಂದಣಿ ಇರಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದ ಕಚೇರಿ ಇರಬೇಕು. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಾವೀಣ್ಯತೆ ಇರಬೇಕು. ಡಿಜಿಟಲ್ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣದ ಬಗ್ಗೆ ಆಳವಾದ ಜ್ಞಾನವಿರಬೇಕು.

ಸರ್ಕಾರಗಳಿಗೆ ಪ್ಲಾಟ್‌ಫಾರ್ಮ್‌ಗಳಲ್ಲಿ ಡಿಜಿಟಲ್ ಜಾಹೀರಾತು ನೀಡಲು ಗೂಗಲ್‌ ಅಥವಾ ಮೆಟಾ ಜೊತೆಗೆ ಮಾನ್ಯವಾದ ಒಪ್ಪಂದ/ಒಡಂಬಡಿಕೆ ಹೊಂದಿರಬೇಕು. ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸರ್ಕಾರದ ಜಾಹೀರಾತು ನೀಡಲು ಗೂಗಲ್‌ ಅಥವಾ ಮೆಟಾದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಷರತ್ತುಗಳನ್ನು ನಿಗದಿ ಪಡಿಸಿದೆ.

ಡಿಜಿಟಲ್‌ ಮಾಧ್ಯಮ ಘಟಕಕ್ಕೆ ಅರ್ಹತೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಡಿಜಿಟಲ್‌ ಜಾಹೀರಾತು ನೀಡಲು ಎಂಪ್ಯಾನೆಲ್‌ಮೆಂಟ್‌ಗಾಗಿ ಡಿಜಿಟಲ್‌ ಮಾಧ್ಯಮ ಘಟಕವು ಭಾರತದ ಸರ್ಕಾರದ ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ನಲ್ಲಿ ನೋಂದಣಿಯಾದ ಕಾನೂನುಬದ್ಧ ಸಂಘಟಿತ ಘಟಕವಾಗಿರಬೇಕು. ಕನಿಷ್ಠ ಒಂದು ವರ್ಷ ಕಾಲ ಯಾವುದೇ ಸಮಯದ ಅಂತರವಿಲ್ಲದೆ ನಿರಂತರವಾಗಿ ಕಂಟೆಂಟ್‌ ಪ್ರಕಟಿಸಿರಬೇಕು. ಜಿಎಸ್‌ಟಿ ನೋಂದಣಿ ಇರಬೇಕು.
ರಾಜ್ಯ ಅಥವಾ ಕೇಂದ್ರ ಸರ್ಕಾರ ಅಥವಾ ಅದರ ಏಜೆನ್ಸಿಗಳ ಎಲ್ಲ ಶಾಸನಬದ್ಧ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರೆ ಎಂಪ್ಯಾನೆಲ್ಮೆಂಟ್ ರದ್ದುಗೊಳಿಸಲಾಗುತ್ತದೆ. ಭಾರತದ ಕಾನೂನನ್ನು ಉಲ್ಲಂಘಿಸುವ ಪದ, ದೃಶ್ಯಗಳು, ಆಡಿಯೋ ಅಥವಾ ಅಂತಹ ಯಾವುದೇ ವಿಷಯವನ್ನು ಪ್ರಕಟಿಸಿರಬಾರದು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. 
ಮೇಲ್ಕಂಡ ಅರ್ಹತೆಗಳನ್ನು ಹೊಂದಿರುವ ಡಿಜಿಟಲ್‌ ಮಾಧ್ಯಮ ಘಟಕಗಳು ಮತ್ತು ಡಿಜಿಟಲ್‌ ಜಾಹೀರಾತು ಏಜೆನ್ಸಿಗಳು sevasindhu.karnataka.gov.in ಗೆ ಭೇಟಿ ನೀಡಿ, ನಿಗದಿ ಪಡಿಸಿರುವ ದಾಖಲಾತಿಗಳೊಂದಿಗೆ ಶುಲ್ಕ ಪಾವತಿಸಿ, ಮೇ 15ರ ಒಳಗೆ ಅರ್ಜಿ ಸಲ್ಲಿಸಲು ಕೋರಿದೆ.

DC Shivamogga ರೈತರಿಂದ ಹಸಿ ಶುಂಠಿ ಖರೀದಿಸಲು ಕೇಂದ್ರಗಳನ್ನ ತೆರೆಯಲಾಗುವುದು- ಗುರುದತ್ತ ಹೆಗಡೆ

0

DC Shivamogga ಶುಂಠಿ ಬೆಲೆ ಕುಸಿತದ ಹಿನ್ನೆಲೆ 2024-25 ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ರೂ.2445 ರಂತೆ ರೈತರಿಂದ ಹಸಿಶುಂಠಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಹಸಿಶುಂಠಿ ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತು ಚರ್ಚಿಸಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಸೊರಬ, ಸಾಗರ, ಶಿಕಾರಿಪುರ, ಹೊಸನಗರ ತೀರ್ಥಹಳ್ಳಿಯಲ್ಲಿ ಶುಂಠಿ ಬೆಳೆಯಲಾಗಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ರೈತರಿಗೆ ಅನುಕೂಲವಾಗುವಂತಹ ಸ್ಥಳಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಯೋಜನೆಯ ಮಾರ್ಗಸೂಚಿಯನ್ವಯ ಮೈಸೂರು, ಹಾಸನ, ಹಾವೇರಿ, ಶಿವಮೊಗ್ಗ, ಬೀದರ್, ಚಿಕ್ಕಮಗಳೂರು, ಮಂಡ್ಯ, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ರೈತರಿಂದ ಗರಿಷ್ಟ 59,948 ಮೆಟ್ರಿಕ್ ಟನ್ ಎಫ್‌ಎಕ್ಯು ಗುಣಮಟ್ಟದ ಹಸಿಶುಂಠಿ ಖರೀದಿಸಲಾಗುವುದು.
ರಾಜ್ಯ ಸರ್ಕಾರದ ವತಿಯಿಂದ ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳವನ್ನು ಖರೀದಿ ಸಂಸ್ಥೆಯನ್ನಾಗಿ ನೇಮಕ ಮಾಡಲಾಗಿದೆ. ರೈತರ ನೋಂದಣಿ ಕಾರ್ಯದ ಜೊತೆ ಖರೀದಿ ಪ್ರಕ್ರಿಯೆಯನ್ನೂ ಪ್ರಾರಂಭಿಸಲಾಗುವುದು. ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಟ 60 ಕ್ವಿಂಟಾಲ್ ಪ್ರಮಾಣದ ಎಫ್‌ಎಕ್ಯು ಗುಣಮಟ್ಟದ ಹಸಿಶುಂಠಿ ಖರೀದಿಸಲಾಗುವುದು. ಈ ಕೂಡಲೇ ರೈತರು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದರು.
ಕೇಂದ್ರ ಸರ್ಕಾರ ಕ್ವಿಂಟಾಲ್‌ಗೆ ಗರಿಷ್ಟ ರೂ.611.25 ನ್ನು ನಿರ್ವಹಣಾ ವೆಚ್ಚ ನಿಗದಿಪಡಿಸಿದ್ದು, ಈ ಮಿತಿಗೊಳಪಟ್ಟು ನಿರ್ವಹಣಾ ವೆಚ್ಚದಲ್ಲಿಯೇ ಕೈಗೊಳ್ಳಬೇಕು. ಖರೀದಿ ಸಂಸ್ಥೆಯು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಮಧ್ಯಪ್ರವೇಶ ಮಾರ್ಗಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸದೃಢ ಪಿಎಸಿಎಸ್/ವಿಎಸ್‌ಎಸ್‌ಎನ್/ಎಫ್‌ಪಿಓ/ಎಪಿಸಿಎಂಎಸ್ ಸಂಸ್ಥೆಗಳ ಮುಖಾಂತರ ಒಡಂಬಡಿಕೆ ಮಾಡಿಕೊಂಡು ಅಗತ್ಯಕ್ಕನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ಕ್ರಮ ವಹಿಸುವಂತೆ ಸೂಚನೆ ನೀಡಿದ ಅವರು ಗ್ರಾ.ಪಂ ಗಳ ಮೂಲಕ ಹಾಗೂ ಇತರೆ ಮಾಧ್ಯಮಗಳ ಮೂಲಕ ರೈತರಿಗೆ ಈ ಕುರಿತು ಪ್ರಚಾರ ನೀಡಬೇಕು ಎಂದರು.
ಹಸಿಶುಂಠಿ ಶೇಖರಣೆ ಮಾಡಲು ಆಯಾ ತಾಲ್ಲೂಕು ಅಥವಾ ಜಿಲ್ಲೆಯಲ್ಲಿ ಲಭ್ಯವಿರುವ ಶೀತಲಗೃಹವನ್ನು ಪರಿಶೀಲಿಸಿ ಖರೀದಿ ಪೂರ್ವದಲ್ಲಿಯದೇ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಎಫ್‌ಎಕ್ಯು ಗುಣಮಟ್ಟ ಖಾತ್ರಿಪಡಿಸಲು ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಾಂಬಾರ ಪದಾರ್ಥಗಳ ಮಂಡಳಿಯ ಪರಿಣಿತ ಅಧಿಕಾರಿಗಳನ್ನು ನಿಯೋಜಿಸಿ ಎಫ್‌ಎಕ್ಯು ಗುಣಮಟ್ಟವನ್ನು ದೃಢೀಕರಿಸಿಕೊಳ್ಳಬೇಕು.
DC Shivamogga ಹಸಿಶುಂಠಿ ಖರೀದಿ ಪೂರ್ವದಲ್ಲಿ ರೈತರ ನೋಂದಣಿಯನ್ನು ನಿಯಮಾನುಸಾರ ಕೈಗೊಂಡು ಪಹಣಿಯಲ್ಲಿ 2024-25 ನೇ ಸಾಲಿಗೆ ಬೆಳೆ ಸಮೀಕ್ಷೆ ದೃಢೀಕರಿಸಿ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಕೈಗೊಳ್ಳಬೇಕು. ಹಾಗೂ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಉತ್ಪನ್ನದ ಮೌಲ್ಯವು ಡಿಬಿಟಿ/ಎನ್‌ಇಎಫ್‌ಟಿ/ಆರ್‌ಟಿಜಿಎಸ್ ಮೂಲಕ ಜಮಾ ಆಗುವಂತೆ ಪಾವತಿ ಮಾಡಬೇಕು ಎಂದು ತಿಳಿಸಿದರು.
ಎಪಿಎಂಸಿ ಹೆಚ್ಚುವರಿ ನಿರ್ದೇಶಕರಾದ ಹೆಚ್ ವೈ ಸತೀಶ್, ತೋಟಗಾರಿಕೆ ಉಪ ನಿರ್ದೇಶಕಿ ಸವಿತಾ, ಕೃಷಿ ಇಲಾಖೆ, ಸಹಕಾರ ಇಲಾಖೆ, ಸಹಕಾರ ಮಾರಾಟ ಮಹಾಮಂಡಳದ ಅಧಿಕಾರಿಗಳು ಉಪಸ್ಥಿತರಿದ್ದರು.

Food, Civil Supplies and Consumer Affairs ಒಂದು ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಜೋಳ ಖರೀದಿಸಲು ಸರ್ಕಾರದ ತೀರ್ಮಾನ- ಕೆ.ಹೆಚ್.ಮುನಿಯಪ್ಪ

0

Food, Civil Supplies and Consumer Affairs ಬೆಂಗಳೂರು, ಏಪ್ರಿಲ್ 22, ಆಹಾರ ನಾಗರಿಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.

ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ಧರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421 ಧರವನ್ನು ನಿಗಧಿಪಡಿಸಲಾಗಿದೆ.

ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀಧಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.

ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.

Food, Civil Supplies and Consumer Affairs ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವರೆಡ್ಡಿ ಕರೂರ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Mathura paradise ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಶಿವಮೊಗ್ಗ ಮಂಜುನಾಥ್ ರಾವ್ ಗೆ ಶ್ರದ್ಧಾಂಜಲಿ

0

Mathura paradise ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಸಾವನ್ನಪ್ಪಿದ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಅವರಿಗೆ ಮಥುರಾ ಪ್ಯಾರಾಡೈಸ್ ಹೋಟೆಲ್ ಆವರಣದಲ್ಲಿ ಸಿಬ್ಬಂದಿ ಶ್ರದ್ಧಾಂಜಲಿ ಸಲ್ಲಿಸಿದರು.
ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಲಾಯಿತು. ಶಿವಮೊಗ್ಗ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಶಂಕರನಾರಾಯಣ ಹೊಳ್ಳ, ಕಾರ್ಯದರ್ಶಿ ಎನ್.ಗೋಪಿನಾಥ್, ಹೋಟೆಲ್ ಮಾಲೀಕರ ಸಂಘದ ನಿರ್ದೇಶಕರು, ಪುಷ್ಪರಾಜ್, ಗಣೇಶ್, ದ್ವಾರಕನಾಥ್ ಇತರರಿದ್ದರು.

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

0

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ ತುಂಬಾ ಶ್ರೇಷ್ಠವಾದ ದಾನ. ರಕ್ತದಾನಕ್ಕಿಂತ ಅನ್ಯದಾನ ಬೇರೊಂದಿಲ್ಲ. ರಕ್ತದಾನದಿಂದ ಸದಾ ಲವವಲವಿಕೆಯಿಂದ ಇರುವುದರ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ.ನಾರಾಯಣ್ ಕರೆ ನೀಡಿದರು.

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಸಭಾಂಗಣದಲ್ಲಿ ಡಾಕ್ಟರ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ರಕ್ತದಾನದಿಂದ ಶೇ.80 ರಷ್ಟು ಹೃದಯಘಾತ ಕಡಿಮೆಯಾಗುತ್ತದೆ. ರಕ್ತದಾನಿಗಳು ಸಮಾಜದ ನಿಜವಾದ ಹೀರೋಗಳು. ಇಂದು ರಕ್ತದ ಕೊರತೆ ಸಾಕಷ್ಟು ಇದೆ. ಸಕಾಲದಲ್ಲಿ ರಕ್ತ ಸಿಗದೇ ಸಾಕಷ್ಟು ಜನ ಪ್ರಾಣವನ್ನು ಬಿಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಯುವಕರು ಯುವತಿಯರು ರಕ್ತದಾನ ಮಾಡಿ ಸದೃಢವಾದ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ನಿರ್ದೇಶಕರಾದ ಟಿ.ಆರ್.ಅಶ್ವಥ್ ನಾರಾಯಣ ಶೆಟ್ಟಿ ಮಾತನಾಡಿ, ಮೂಢನಂಬಿಕೆಯಿಂದ ಹೊರ ಬಂದು ರಕ್ತದಾನ ಮಾಡಿ ಇನ್ನೊಬ್ಬರ ಪ್ರಾಣ ಉಳಿಸುವ ಪುಣ್ಯದ ಕೆಲಸದಲ್ಲಿ ನಾವು ನೀವೆಲ್ಲರೂ ಪಾಲ್ಗೊಳ್ಳೋಣ. ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠದಾನ ಎಂದು ನುಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್ ಮಾತನಾಡಿ, ನಿಜವಾದ ಮನುಕುಲದ ಸೇವೆಯನ್ನು ಇಂದು ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಮಾಡುತ್ತಿದೆ. ಡಾಕ್ಟರ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದ ಆಸ್ತಿ. ಅವರ ಹೋರಾಟಗಳು ಇಂದಿಗೂ ಜನಮಾನಸದಲ್ಲಿ ಇವೆ. ಅವರ ಹುಟ್ಟುಹಬ್ಬವನ್ನು ರಕ್ತದಾನದ ಮುಖಾಂತರ ಮಾಡುತ್ತಿರುವುದು ಪ್ರಶಂಸನೀಯ ಸಂಗತಿ ಎಂದು ಶ್ಲಾಘಿಸಿದರು.

Acharya Tulsi National College of Commerce ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಮಮತಾ.ಪಿ.ಆರ್ ಮಾತನಾಡಿ, ಇಂದು ರಕ್ತದಾನ ಹಾಗೂ ನೇತ್ರ ತಪಾಸಣಾ ಶಿಬಿರವನ್ನು ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ಇಂತಹ ಪವಿತ್ರ ಕಾರ್ಯದಲ್ಲಿ ನಮ್ಮ ಮಕ್ಕಳು ಪಾಲ್ಗೊಳ್ಳುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಕಾಲೇಜಿನಲ್ಲಿ ಇರುವ ಎಲ್ಲಾ ವಿದ್ಯಾರ್ಥಿಗಳು ಸಹ ರಕ್ತದಾನ ಮಾಡುವಂತೆ ಅವರಿಗೆ ಮನವರಿಸಲಾಗುವುದು ಎಂದು ನುಡಿದರು.

ವೇದಿಕೆಯಲ್ಲಿ ಪ್ರೊ. ಕೆ.ಎಂ.ನಾಗರಾಜ್ ಹಾಗೂ ಮೆಗ್ಗಾನ್ ಆಸ್ಪತ್ರೆಯ ವೈದ್ಯರಾದ ಪ್ರದೀಪ್, ಡಾ. ಪ್ರದೀಮ್ಯ, ಶೃತಿ.ಕೆ, ಸೌಪರ್ಣಿಕ ಉಮೇಶ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.