Tuesday, March 3, 2026
Tuesday, March 3, 2026
Home Blog Page 329

Shimoga District Fisheries Department ಮತ್ಸ್ಯ ಸಂಪದ ಸಹಾಯಧನಕ್ಕೆ ಅರ್ಜಿ, ಕೊನೆ ದಿನಾಂಕ ವಿಸ್ತರಣೆ

0

ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಯ್ಸ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

Shimoga District Fisheries Department ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ, ಸೈಕಲ್ ವಿತ್ ಐಸ್‌ಬಾಕ್ಸ್, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ (ಪ.ಜಾ) ಮತ್ತು ಹೊಸತಾದ ಮೀನುಮಾರಾಟದ ಕಿಯೋಸ್ಕ್ ನಿರ್ಮಾಣಕ್ಕಾಗಿ ಸಹಾಯ ಧನ ನೀಡಲಾಗುತ್ತಿದ್ದು, ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪೂರ್ಣ ದಾಖಲೆಗಳೊಂದಿಗೆ ಮೇ 13 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Shivaganga Yoga Center ಜೆಸಿಐ ಶಿವಮೊಗ್ಗ & ಶಿವಗಂಗಾ ಯೋಗ ಕೇಂದ್ರದಿಂದ ಉಚಿತ ಯೋಗ ಶಿಬಿರ

0

Shivaganga Yoga Center ಜೆ ಸಿ ಐ ಶಿವಮೊಗ್ಗ ವಿವೇಕ್ ಶ್ರೀ ಶಿವಗಂಗಾ ಯೋಗ ಕೇಂದ್ರ ಶಿವಮೊಗ್ಗ ಇವರ ಸಹಯೋಗದಲ್ಲಿ ಶಿವಶಕ್ತಿ ಯೋಗ ಮಂದಿರ ಸ್ವಾಮಿ ವಿವೇಕಾನಂದ ಪಾರ್ಕ್ ಅಶ್ವಥ್ ನಗರ 8ನೇ ತಿರುವು. ಇಲ್ಲಿ ದಿನಾಂಕ 24/04/ 2025 ರಿಂದ 04.05.2025 ವರೆಗೆ ಹತ್ತು ದಿನಗಳ ಕಾಲ ಉಚಿತ ಯೋಗ ಪ್ರಾಣಾಯಾಮ ಹಾಗೂ ಧ್ಯಾನ ಶಿಬಿರವನ್ನು ಆಯೋಜಿಸಲಾಗಿದೆ .

ಈ ಶಿಬಿರದಲ್ಲಿ ಮಧುಮೇಹ ರಕ್ತದೊತ್ತಡ ಥೈರಾಡ್ ಮೈಗ್ರೇನ್ ತಲೆನೋವು ಮಂಡಿ ನೋವು ಸೊಂಟ ನೋವು ಬೆನ್ನು ನೋವು ರಾತ್ರಿ ನಿದ್ದೆ ಬಾರದಿರುವುದು ಮಾನಸಿಕ ಒತ್ತಡ ಹಾಗೂ ಇನ್ನೂ ಅನೇಕ ಸಮಸ್ಯೆಗಳ ನಿವಾರಣೆಗಾಗಿ ಹಾಗೂ ಅವುಗಳು ಬಾರದಂತೆ ತಡೆಗಟ್ಟಲು ಈ ಯೋಗ ಶಿಬಿರದಲ್ಲಿ ಎಲ್ಲರೂ ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಸಾರ್ವಜನಿಕ ಸಂಪರ್ಕ ಅಧಿಕಾರಿ ಜಿ ವಿಜಯಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಶಿಬಿರವನ್ನು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್ ರುದ್ರಗೌಡರು ಉದ್ಘಾಟಿಸಲಿದ್ದು ಜೆ ಸಿ ಐ ಶಿವಮೊಗ್ಗ ವಿವೇಕ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಕೇಶವ. ಮುಖ್ಯ ಅತಿಥಿಗಳಾಗಿ ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಕೆಎಸ್ ಈಶ್ವರಪ್ಪ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಸಿ ವಿಶ್ವಾಸ ಜೆ ಸಿ ಐ ನ ಸಂಸ್ಥಾಪಕ ಅಧ್ಯಕ್ಷರಾದ ಜೋಸೆಫ್ ಬಾಲ್ರಾಜ್

. Shivaganga Yoga Center ಶಿವಗಂಗಾ ಯೋಗ ಕೇಂದ್ರದ ಕಾರ್ಯದರ್ಶಿಗಳಾದ ಶ್ರೀ ಚಂದ್ರಶೇಖರಯ್ಯ. ರಾಜ್ಯ ಹಾಗೂ ರಾಷ್ಟç ಪ್ರಶಸ್ತಿ ಪುರಸ್ಕೃತರಾದ ಯೋಗಾಚಾರ್ಯ ಶ್ರೀ ಸಿವಿ ರುದ್ರಾರಾಧ್ಯರು. ಹಾಗೂ ಯೋಗ ಶಿಕ್ಷಕರಾದ ಕಾಟನ್ ಜಗದೀಶ್ ಉಪಸ್ಥಿತರಿರುತ್ತಾರೆ

Achievers Coaching Center, Shivamogga ಶಿವಮೊಗ್ಗ ಅಚೀವರ್ಸ್ ನಿಂದ ವಿವಿಧ ವಿಷಯಗಳ ಬಗ್ಗೆ ಉಚಿತ ಕಾರ್ಯಾಗಾರ

0

Achievers Coaching Center, Shivamogga ಶಿವಮೊಗ್ಗ ನಗರದ ಅಚೀವರ್‍ಸ್ ಕೋಚಿಂಗ್ ಸೆಂಟರ್ ಇವರ ಆಶ್ರಯದಲ್ಲಿ ನಡೆಯುವ UPSC FOUNDATION, NAVODAYA / SAINIK SCHOOL, SPOKEN ENGLISH & Basic to Advanced Mathematics
ವಿಷಯಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ಕಾರ್ಯಗಾರವನ್ನು ಮೇ.೨೭ರಿಂದ ಬೆಳಿಗ್ಗೆ ೧೦.೩೦ ಗಂಟೆಗೆ ತಿಲಕ್‌ನಗರದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯ ಅಚೀವರ್‍ಸ್ ಕೋಚಿಂಗ್ ಸೆಂಟರ್, ಒಂದು ದಿನ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಇತರರು ಇದರ ಸದುಪಯೋಗವನ್ನು ಪಡೆಯಲು ಕೋರಲಾಗಿದೆ. ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ : ೭೮೧೨೯೨೬೭೦೨ ಗೆ ಸಂಪರ್ಕಿಸಬಹುದಾಗಿದೆ. ಇಲ್ಲವೇ ತಿಲಕ್‌ನಗರ, ೧ನೇ ಕ್ರಾಸ್‌ನಲ್ಲಿರುವ ಕಛೇರಿಗೆ ಖುದ್ದಾಗಿ ಭೇಟಿ ಮಾಡಬಹುದಾಗಿದೆ.

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

0


Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಏ. 26ರಿಂದ ಮೇ 5ರವರೆಗೆ ಪ್ರತಿದಿನ ಬೆಳಿಗ್ಗೆ 10ಕ್ಕೆ, 11;30, ಸಂಜೆ 4ಕ್ಕೆ ಮತ್ತು 5;30 ಗಂಟೆಗೆ ನಾಲ್ಕು ಬ್ಯಾಚ್‌ಗಳಾಗಿ ಬೇಸಿಗೆ ರಜೆಯ ಚೆಸ್ ತರಬೇತಿ ಶಿಬಿರ ಆಯೋಜಿಸಿದೆ. ಪ್ರತಿ ಬ್ಯಾಚ್‌ನಲ್ಲಿ 10 ಮಕ್ಕಳಿಗೆ ಮಾತ್ರ ಅವಕಾಶವಿದ್ದು, ಅಂತರರಾಷ್ಟ್ರೀಯ ಚೆಸ್ ತೀರ್ಪುಗಾರ ಮತ್ತು ಚೆಸ್ ತರಬೇತುದಾರರಾದ ಪ್ರಾಣೇಶ್ ಯಾದವ್ ಅವರು ಶಿಬಿರ ನಡೆಸಿಕೊಡಲಿದ್ದಾರೆ. ಮಾಹಿತಿಗೆ 9242401702, 97438 19678 ರಲ್ಲಿ ಸಂಪಕಸಲು ಕೋರಲಾಗಿದೆ.

Basaveshwara Veerashaiva Lingayat Social Service Association ಬಸವ ಜಯಂತಿ ವಿಶೇಷ, ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೆಳದಿ ಚನ್ನಮ್ಮ ತಂಡಕ್ಕೆ ₹25,000 ನಗದು ಬಹುಮಾನ

0

Basaveshwara Veerashaiva Lingayat Social Service Association ಶಿವಮೊಗ್ಗ ನಗರದ ಬಿ.ಹೆಚ್ ರಸ್ತೆ ಸಹ್ಯಾದ್ರಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯಿತ ಸಮಾಜ ಸೇವ ಸಂಘದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಸಮಾ ಜದ ಬಾಂದವರಿಗೆ ಬಸವ ಕಪ್ ಪಂದ್ಯಾವಳಿ ನಡೆಯಿತು.
ಮೊದಲನೇ ಬಹುಮಾನ 25 ಸಾವಿರ ರೂ ಮತ್ತು ಕಪ್ ಅನ್ನು ಕೆಳದಿ ಚೆನ್ನಮ್ಮ ತಂಡ ಗೆದ್ದುಕೊಂಡರೆ ಎರಡನೇ ಬಹುಮಾನ ೧೫ ಸಾವಿರ ರೂ ಮತ್ತು ಕಪ್ ಅನ್ನು ಕೆಳದಿ ಶಿವಪ್ಪನಾಯಕ ತಂಡ ಗೆದ್ದಿದೆ.
ಬಹುಮಾನ ವಿತರಣೆ ಸಂದ ರ್ಭದಲ್ಲಿ ಆಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ , ಗೌರವ ಕಾರ್‍ಯದರ್ಶಿ ಎಸ್.ಪಿ ದಿನೇಶ್ , ಸಹ ಕಾರ್‍ಯದರ್ಶಿ ಬಳ್ಳೆಕೆರೆ ಸಂತೋಷ್ , ಬಸವೇಶ್ವರ ಸೊಸೈಟಿ ನಿರ್ದೇಶಕರಾದ ಕಾಯಕಯೋಗಿ ಚನ್ನಬಸಪ್ಪ , ಬಸವರಾಜ್ ಮತ್ತು ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Union Public Service Commission ಯುಪಿಎಸ್ ಸಿ ಪರೀಕ್ಷೆಯಲ್ಲಿ ದಯಾನಂದ ಸಾಗರ್ ಗೆ 615 ನೇ ರ್ಯಾಂಕ್

0

Union Public Service Commission ಕೇಂದ್ರ ಲೋಕಸೇವಾ ಆಯೋಗದ 2024ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗದ ಸಮನ್ವಯ ಟ್ರಸ್ಟ್ ನಡೆಸುತ್ತಿರುವ ಕೆ.ಎ.ದಯಾನಂದ್ ಐಎಎಸ್ ಉಚಿತ ವಾಚನಾಲಯದಲ್ಲಿ ಅಧ್ಯಯನ ನಡೆಸಿದ ತರಬೇತಿ ವಿದ್ಯಾರ್ಥಿಯು ಯುಪಿಎಸ್‌ಸಿ ರ‍್ಯಾಂಕ್ ಗಳಿಸಿದ್ದಾರೆ.
ದಯಾನಂದ ಸಾಗರ್ ಅವರು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 615ನೇ ರ‍್ಯಾಂಕ್ ಗಳಿಸಿದ್ದಾರೆ. ದಯಾನಂದ್ ಸಾಗರ್ ಅವರು ಪ್ರಸ್ತುತ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿ ಜತೆಯಲ್ಲಿ ಕೆ.ಎ.ದಯಾನಂದ ಉಚಿತ ವಾಚನಾಲಯದಲ್ಲಿ ಅಧ್ಯಯನ ನಡೆಸುವ ಮೂಲಕ ಯುಪಿಎಸ್‌ಸಿ ಪರೀಕ್ಷೆಗೆ ತರಬೇತಿ ಪಡೆದಿದ್ದರು.
ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಅವರು ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಅನೇಕ ಮಾದರಿ ಕಾರ್ಯಕ್ರಮಗಳ ಅನುಷ್ಠಾನದ ಮೂಲಕ ಕೆ.ಎ.ದಯಾನಂದ ಅವರು ರಾಜ್ಯಾದ್ಯಂತ ಪ್ರಸಿದ್ಧಿಯಾಗಿದ್ದಾರೆ. ಸಮನ್ವಯ ಟ್ರಸ್ಟ್ ಕೆ.ಎ.ದಯಾನಂದ ಅವರ ಹೆಸರಿನಲ್ಲಿ 2023-24ನೇ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ಯುವಜನರಿಗೆ ಅನುಕೂಲವಾಗಲು ಉಚಿತ ವಾಚನಾಲಯ ಆರಂಭಿಸಿತ್ತು.
Union Public Service Commission ಸಮನ್ವಯ ಟ್ರಸ್ಟ್ ವತಿಯಿಂದ ಪ್ರಾರಂಭವಾಗಿರುವ ಕೆ.ಎ.ದಯಾನಂದ್ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಉಚಿತ ವಾಚನಾಲಯದಲ್ಲಿ ದಯಾನಂದ ಸಾಗರ್ ಅವರು ಅಧ್ಯಯನ ನಡೆಸಿದ್ದರು. ಸಾವಿರಾರು ಪುಸ್ತಕಗಳು ಉಚಿತ ವಾಚನಾಲಯದಲ್ಲಿ ಲಭ್ಯವಿದೆ. ಡಿಜಿಟಲ್ ಲೈಬ್ರರಿ ಸೌಲಭ್ಯ ಸಹ ಇದೆ. ಇದರ ಸದುಪಯೋಗ ಪಡಿಸಿಕೊಂಡ ದಯಾನಂದ ಸಾಗರ ಅವರು 615ನೇ ರ‍್ಯಾಂಕ್ ಗಳಿಸಿದ್ದಾರೆ. ಯುಪಿಎಸ್‌ಸಿ ಸಾಧಕ ವಿದ್ಯಾರ್ಥಿಗೆ ಸಮನ್ವಯ ಟ್ರಸ್ಟ್ ತಂಡ ಹಾಗೂ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ ಅಭಿನಂದನೆ ಸಲ್ಲಿಸಿದ್ದಾರೆ. ಉಚಿತ ವಾಚನಾಲಯದ ಸದುಪಯೋಗ ಪಡೆಯಲು ಇಚ್ಛಿಸುವ ಆಸಕ್ತರು ಮೊ.ಸಂ. 9945387650 ಗೆ ಸಂಪರ್ಕಿಸಬಹುದಾಗಿದೆ.

Union Public Service Commission ಶಿವಮೊಗ್ಗದ ಮೇಘನಾಗೆ ಯುಪಿಎಸ್ ಸಿ ಪರೀಕ್ಷೆಯಲ್ಲಿ 421 ನೇ ರ್ಯಾಂಕ್

0

Union Public Service Commission ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 421ನೇ ರ‍್ಯಾಂಕ್ ಗಳಿಸಿರುವ ಶ್ರೀ ಶಿವಗಂಗಾ ಯೋಗಕೇಂದ್ರದ ಯೋಗ ಶಿಬಿರಾರ್ಥಿ ಬಿ.ಎಂ.ಮೇಘನಾ ಅವರಿಗೆ ಶಿವಮೊಗ್ಗದ ಯೋಗ ತರಬೇತಿ ಕೇಂದ್ರದಲ್ಲಿ ಸನ್ಮಾನಿಸಲಾಯಿತು.

ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕಿ ಡಾ. ಎ.ಎಸ್.ವತ್ಸಲಾ ಮತ್ತು ವಕೀಲ ಬಿ.ಜಿ.ಮೋಹನ್ ಅವರ ಪುತ್ರಿ ಬಿ.ಎಂ.ಮೇಘನಾ. ಇವರು ಶ್ರೀ ಶಿವಗಂಗಾ ಯೋಗ ಕೇಂದ್ರದ ಕೃಷಿ ನಗರ ಶಕ್ತಿ ಗಣಪತಿ ಯೋಗ ಶಾಖೆಯ ಯೋಗ ಶಿಬಿರಾರ್ಥಿಯಾಗಿದ್ದಾರೆ.

ಐಎಎಸ್ ಪರೀಕ್ಷೆಯಲ್ಲಿ 421 ರ‍್ಯಾಂಕ್ ಗಳಿಸಿರುವ ಮೇಘನಾ ಪ್ರವೃತ್ತಿಯಲ್ಲಿ ಭರತನಾಟ್ಯ, ಸಂಗೀತ ಹಾಗೂ ಗಮಕಿ ಆಗಿದ್ದಾರೆ. ಯೋಗ ಹಾಗೂ ಕಲಾ ಸೇವೆಯಲ್ಲಿ ಸದಾ ನಿರತರಾಗಿದ್ದಾರೆ. ಇವರಿಗೆ ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್ ರುದ್ರೇಗೌಡ, ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ, ಕಾರ್ಯದರ್ಶಿ ಚಂದ್ರಶೇಖರಯ್ಯ ಮತ್ತು ಟ್ರಸ್ಟಿನ ಪದಾಧಿಕಾರಿಗಳು, ಪೋಷಕ ಸದಸ್ಯರು ಅಭಿನಂದಿಸಿದ್ದಾರೆ.

ಬುಧವಾರ ಬೆಳಗ್ಗೆ ಕೃಷಿ ನಗರದ ಶಕ್ತಿ ಗಣಪತಿ ಯೋಗ ಕೇಂದ್ರದಲ್ಲಿ ಮೇಘನಾ ಅವರನ್ನು ಸನ್ಮಾನಿಸಲಾಯಿತು. ಮೇಘನಾ ಅವರು ಮಾತನಾಡಿ, ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯ ಮೂರನೇ ಪ್ರಯತ್ನ ಇದಾಗಿದ್ದು, ಸಾಧನೆಗೆ ಪಾಲಕರು ಮೂಲಕಾರಣ. ಆರು ತಿಂಗಳು ದೆಹಲಿಯಲ್ಲಿ ವಾಸ ಮಾಡಿ ಪ್ರತಿ ದಿನ 12 ಗಂಟೆ ಅಭ್ಯಾಸ ಮಾಡಿದ ಫಲ ಪರೀಕ್ಷೆಯಲ್ಲಿ ಪಾಸಾಗಲು ಸಹಕಾರಿಯಾಗಿದೆ. ಯೋಗ ಶಿಬಿರಾರ್ಥಿಗಳು ಮತ್ತು ಯೋಗ ಕೇಂದ್ರದ ಗುರುಗಳು ಸಹ ಮಾರ್ಗದರ್ಶನ ನೀಡಿದ್ದಾರೆ ಎಂದರು.

Union Public Service Commission ಯೋಗ ಶಿಕ್ಷಕ ನೀಲಕಂಠ ರಾವ್ ಮಾತನಾಡಿ ಮೇಘನಾ ಅವರಿಗೆ ಶುಭಕೋರಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ವಿಜಯಕುಮಾರ್ ಮಾತನಾಡಿ, ಮೇಘನಾ ಅವರಿಗೆ ಎಲ್ಲರಿಗೂ ಮಾದರಿ. ಮುಂದಿನ ವೃತ್ತಿ ಜೀವನದಲ್ಲಿ ಯಶಸ್ಸು ಕಾಣಲಿ ಎಂದು ಶುಭಹಾರೈಸಿದರು.


University of Mysore ಬಿ.ವಿ.ಎ.( ದೃಶ್ಯಕಲೆ)ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

0

University of Mysore ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ https://uucms.karnataka.gov.in ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 0821-2438931 ನ್ನು ಸಂಪರ್ಕಿಸುವುದು.

Madhu Bangarappa ಸೊರಬ ತಾಲ್ಲೂಕಿನಲ್ಲಿನ ಕಾಮಗಾರಿಗಳನ್ನ ತ್ವರಿತ ಪೂರ್ಣಗೊಳಿಸಿ- ಮಧು ಬಂಗಾರಪ್ಪ

0


Madhu Bangarappa ಶಿವಮೊಗ್ಗ ತಾಲೂಕಿನಲ್ಲಿ ವಿವಿಧ ಇಲಾಖೆಗಳ ಮೂಲಕ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವರ ಉದ್ಘಾಟನೆಗಾಗಿ ತಡಮಾಡದೆ ತ್ವರಿತವಾಗಿ ಆರಂಭಿಸಿ, ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆಗೆ ಸಜ್ಜುಗೊಳಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಸೊರಬದ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಈ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಉಚಿತವಾಗಿ ನಡೆಸಲಾಗುವುದು. ವಿಶೇಷವಾಗಿ ಮೂಲಭೂತ ಸೌಕರ್ಯ ಹೊಂದಿರುವ ಶಾಲೆಗಳಲ್ಲಿ ತರಗತಿಗಳ ಆರಂಭಕ್ಕೆ ಆದ್ಯತೆ ನೀಡಲಾಗುವುದು ಎಂದರು.
Madhu Bangarappa ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಶಾಲಾ ಫಲಿತಾಂಶ ಸುಧಾರಣಗೆ ವಿಶೇಷ ಕಾಳಜಿ ವಹಿಸಬೇಕು. ಯಾವುದೇ ಮಗು ಶಾಲಾ ದಾಖಲಾತಿಯಿಂದ ಹೊರಗುಳಿಯದಂತೆ ಗಮನಿಸಬೇಕು ಅಲ್ಲದೆ ದಾಖಲಾತಿಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬರಬೇಕು ಎಂದವರು ಸೂಚಿಸಿದರು.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು, ಮಕ್ಕಳು ಅವರಿಂದ ಬೋಧನೆಯ ಲಾಭ ಪಡೆದು, ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲಾರಂಭದ ಮೊದಲ ದಿನ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳನ್ನು ಸ್ವಾಗತಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮೀಪದ ಶಾಲೆಯಲ್ಲಿ ಹಾಜರಿರುವಂತೆ ಸೂಚಿಸಿದ ಅವರು, ಶಿಕ್ಷಕರು ಗುಣಮಟ್ಟದ ಬೋಧನೆಗೆ ಗಮನಹರಿಸುವಂತೆ ಸೂಚಿಸಿದರು.
ಪ್ರಸ್ತುತ ಪ್ರಕಟಿಸಲಾಗಿರುವ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಶೇ.94ರಷ್ಟು ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಉತ್ತೀರ್ಣರಾದ ಸುಮಾರು 70,000ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳಿಕೆಯ ಕಾರಣದಿಂದ ಪರೀಕ್ಷೆ ಬರೆಯುತ್ತಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳು ಬರೆಯುವ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದಿರುವುದನ್ನು ನಮೂದಿಸಿ, ಪ್ರಮಾಣಪತ್ರ ವಿತರಿಸಲು ಕ್ರಮವಹಿಸಲಾಗುವುದು ಎಂದರು.
ಬಿಸಿಯೂಟ ತಯಾರಿಕೆಯಲ್ಲಿ ಅಲ್ಯುಮಿನಿಯಮ್‌ ಪಾತ್ರೆಗಳ ಬಳಕೆ ಮಾಡುತ್ತಿರುವುದನ್ನು ಗಮನಿಸಲಾಗಿದೆ. ಅಲ್ಯುಮಿನಿಯಂ ಪಾತ್ರೆಗಳ ಬಳಕೆ ಆರೋಗ್ಯದ ದೃಷ್ಟಿಯಿಂದ ಉತ್ತಮವಲ್ಲ ಎಂಬ ಕಾರಣಕ್ಕೆ ಅಲ್ಯುಮಿನಿಯಮ್‌ಗೆ ಪರ್ಯಾಯವಾಗಿ ರಾಜ್ಯದ ಸುಮಾರು 65000ಸರ್ಕಾರಿ ಶಾಲೆಗಳಿಗೆ ಗುಣಮಟ್ಟದ ಪಾತ್ರೆಗಳನ್ನು ಒದಗಿಸಲು ಉದ್ದೇಶಿಸಲಾಗಿದೆ. ನೆಲದ ಮೇಲೆ ಕುಳಿತುಕೊಳ್ಳುವ ಶಾಲೆಗಳಿಗೆ ಬೆಂಚ್‌ಗಳನ್ನು ಪೂರೈಸಲು ಉದ್ದೇಶಿಸಲಾಗಿದ್ದು, ಅಂತಹ ಶಾಲೆಗಳ ಯಾದಿಯನ್ನು ಸಲ್ಲಿಸುವಂತೆ ಸೂಚಿಸಿದ ಅವರು, ಶಿಥಿಲಗೊಂಡಿರುವ ಅಡುಗೆ ಕೋಣೆಗಳ ದುರಸ್ತಿ ಹಾಗೂ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಲು ಸೂಚಿಸಲಾಗಿದೆ. ದಿನೇದಿನೇ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೋಲಾರ್‌ ವಿದ್ಯುತ್‌ ಉತ್ಪಾದಿಸಿ ಬಳಸಲು ಪ್ರೇರೇಪಿಸಲಾಗುತ್ತಿದೆ. ಒಂದು ಬಾರಿಯ ಹೂಡಿಕೆಯಿಂದ ವಿದ್ಯುತ್‌ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.
ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ರೈತರ ಅಗತ್ಯಗಳಿಗಾಗಿ ರಸಗೊಬ್ಬರ, ಬಿತ್ತನೆಬೀಜ ಹಾಗೂ ರಸಾಯನಿಕಗಳನ್ನು ದಾಸ್ತಾನು ಮಾಡಿಟ್ಟುಕೊಂಡು ಅಗತ್ಯಕ್ಕೆ ತಕ್ಕಂತೆ ರೈತರಿಗೆ ಒದಗಿಸಲು ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಲಜೀವನ ಮಿಷನ್‌ ಯೋಜನೆಯಡಿ ಹೆಚ್ಚುವರಿ ಕಾಮಗಾರಿಗಾಗಿ ಅಗತ್ಯವಿರುವ 2.00ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಜನಪ್ರಿಯವಾಗಿರುವ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನದ ಕುರಿತು ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ಮಾಧ್ಯಮಗಳಿಗೆ ವಿವರಿಸುವಂತೆ ತಹಶೀಲ್ದಾರರಿಗೆ ಸೂಚಿಸಿದ ಸಚಿವರು, ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ವಾಸ್ತವ ಸಂಗತಿಗಳ ಕುರಿತು ಮನವರಿಕೆ ಮಾಡಿಕೊಡಬೇಕು. ಅಲ್ಲದೇ ತಮ್ಮ ತೆರಿಗೆ ಹಣ ಸದ್ಭಳಕೆಯಾಗುತ್ತಿರುವ ಬಗ್ಗೆ ಜನರಿಗೆ ತಿಳಿಸಬೇಕು ಎಂದವರು ನುಡಿದರು.
ತಾಲೂಕಿನ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ವಿದ್ಯಾರ್ಥಿಗಳಿಂದ ಆಗಾಗ್ಗೆ ದೂರುಗಳು ಬರುತ್ತಿವೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ವಸತಿ ನಿಲಯಗಳಿಗೆ ಅಗತ್ಯ ಸೌಕರ್ಯ ಕಲ್ಪಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದರು.
2015ರ ಹಿಂದೆ ಅರಣ್ಯ ಅಥವಾ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಹಾಗೂ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಶೀಘ್ರದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಈ ನಿರ್ಧಾರ ಬರುವವರೆಗೆ ಅಧಿಕಾರಿಗಳು ಒಕ್ಕಲೆಬ್ಬಿಸದಂತೆ ಸೂಚಿಸಿದ ಅವರು, 2015ರಿಂದೀಚೆಗೆ ಸಾಗುವಳಿ ಮಾಡುತ್ತಿರುವವರ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಅವರು, ಬೆಳೆದ ಪೈರು ಅಥವಾ ಬೆಳೆಯನ್ನು ನಾಶಪಡಿಸದಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ ಅವರು ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ವ್ಯವಹರಿಸುವಂತೆ ಸೂಚಿಸಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಗುತ್ತಿಗೆದಾರರು ಸಕಾಲದಲ್ಲಿ ವೇತನ ಪಾವತಿಸಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರ್ಪಡೆಗೊಳಿಸಬೇಕು. ನೇಮಕಾತಿಯಲ್ಲಿಯೂ ಸ್ಥಳೀಯರಿಗೆ ಪ್ರಾಧಾನ್ಯತೆ ನೀಡುವಂತೆ ಅವರು ಸೂಚಿಸಿದರು.
ನರೇಗಾ ಯೋಜನೆಯಡಿ ಮಾನವದಿನಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಕಾಂಪೌಂಡ್‌ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳು ಪ್ರಸ್ತಾವನೆ ಸಿದ್ದಪಡಿಸಿ, ಅನುಮೋದನೆ ಪಡೆದು ಕಾಮಗಾರಿಗಳನ್ನು ನಡೆಸಬೇಕು. ಇದರಿಂದಾಗಿ ಹೆಚ್ಚಿನ ಜನರಿಗೆ ಕೂಲಿ ಕೆಲಸ ದೊರೆಯಲಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಸಿಕೊಡುವ ಕಾರ್ಯ ಪೂರ್ಣಗೊಂಡಿಲ್ಲ. ಈ ಬಗ್ಗೆ ಸಂಬಂಧಿಸಿದ ನಿಗಮದ ಆಯುಕ್ತರೊಂದಿಗೆ ಚರ್ಚಿಸಲಾಗುವುದು ಎಂದರು.
ಅಲ್ಲದೇ ಇದೇ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಪರಿಸರ, ಕೃಷಿ ಸಂಬಂಧಿತ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ ತಹಶೀಲ್ದಾರ್‌ ಶ್ರೀಮತಿ ಮಂಜುಳಾ ಹೆಗಡಾಳ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಜಿ.ಶಶಿಧರ್‌, ಸೇರಿದಂತೆ ಕೆ.ಡಿ.ಪಿ.ಸಲಹಾ ಸಮಿತಿಯ ಸದಸ್ಯರು ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Department of Soldiers Welfare and Rehabilitation ಸಾಮಾಜಿಕ ಜಾಲತಾಣಗಳಲ್ಲಿ ಹಣಹೂಡಲು ಮಾಜಿ ಸೈನಿಕರಿಗೆ ಆಮಿಷ, ಎಚ್ಚರಿಕೆ ವಹಿಸಲು ಇಲಾಖೆ ಪ್ರಕಟಣೆ

0

Department of Soldiers Welfare and Rehabilitation ಇತ್ತಿಚೀನ ದಿನಗಳಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಕೆಲವು ಖಾಸಗಿ ವ್ಯಕ್ತಿಗಳು ಮತ್ತು ಕೆಲವೊಂದು ಸಂಘ-ಸಂಸ್ಥೆಗಳು ಆಮಿಷಗಳನ್ನು ನೀಡಿ ನಮ್ಮ ಸಂಘಕ್ಕೆ ನೋಂದಣಿಯಾದರೆ ನಿಮ್ಮ ಎಲ್ಲ ಕುಂದುಕೊರತೆಗಳನ್ನು ಬಗೆಹರಿಸಿ ಕೊಡುತ್ತೇವೆ, ಜಮೀನು ಮಂಜೂರಾತಿ ಮಾಡಿಸಿಕೊಡುತ್ತೇವೆ ಎಂಬಿತ್ಯಾದಿ ಸುಳ್ಳು ಭರವಸೆಗಳನ್ನು ನೀಡುತ್ತಿರುವುದಾಗಿ ಹಾಗೂ ಚೀಟಿ ಮತ್ತು ಫೈನಾನ್ಸ್ ಯೋಜನೆಗಳಲ್ಲಿ ಹಣವನ್ನು ಹೂಡಿಕೆ ಮಾಡುವಂತೆ ಒತ್ತಡವನ್ನು ಹಾಕುತ್ತಿದ್ದಾರೆಂಬ ಮಾಹಿತಿಯು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಯ ಗಮನಕ್ಕೆ ಬಂದಿರುತ್ತದೆ. Department of Soldiers Welfare and Rehabilitation ಇಂತಹ ಅಮಿಷಗಳಿಗೆ ಕಿವಿಗೊಡಬಾರದೆಂದು ಹಾಗೂ ಖಾಸಗೀ ಯೂಟ್ಯೂಬ್, ಇನ್ ಸ್ಟಾಗ್ರಾಮ್, ವಾಟ್ಸಪ್ ಗ್ರೂಪ್, ಫೇಸ್‌ಬುಕ್ ಪೇಜ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ಮಾಜಿ ಸೈನಿಕರ ಪಾಲಿಸಿಗಳ ಹೆಚ್ಚಿನ ಪತ್ರಗಳು ಕೂಡ ನಕಲಿಯಾಗಿರುತ್ತವೆಯೆಂದು ಹಾಗೂ ಮಾಜಿ ಸೈನಿಕರುಗಳಿಗೆ ಪಾಲಿಸಿ/ದಾಖಲೆಗಳ ಯಾವುದೇ ರೀತಿಯ ಅನುಮಾನಗಳಿದ್ದರೆ ನೇರವಾಗಿ ಸೈನಿಕ ಕಛೇರಿಗೆ ಸಂಪರ್ಕಿಸಿ ಸ್ಪಷ್ಟಿಕರಣವನ್ನು ಪಡೆಯಬೇಕೆಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.