Tuesday, March 3, 2026
Tuesday, March 3, 2026
Home Blog Page 332

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

0

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.

ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.

ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿರುವ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗ ಲಸಿಕೆ ಅಭಿಯಾನದ 7 ನೇ ಸುತ್ತಿನ ಪೋಸ್ಟರ್ ಅನ್ನು ಅನಾವರಣಗೊಳಿಸಿದ ನಂತರ, ಶ್ರೀ ಎಸ್. ಮಧು ಬಂಗಾರಪ್ಪ ಅವರು ಸಾರ್ವಜನಿಕರು ಉಚಿತ ಲಸಿಕೆ ಅಭಿಯಾನದ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗ ಎರಡರ ವಿರುದ್ಧ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಅಭಿಯಾನವನ್ನು ಬೆಂಬಲಿಸಬೇಕೆಂದು ಹೇಳಿದರು.

“ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗಕ್ಕೆ ಒಳಗಾಗುವ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಭೇಟಿ ಲಸಿಕೆ ಹಾಕುತ್ತಾರೆ. ಅವರೊಂದಿಗೆ ಸಹಕರಿಸಿ ಮತ್ತು ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಈ ರೋಗಗಳಿಂದ ಗೋವುಗಳನ್ನು ರಕ್ಷಿಸಿ” ಗೋಗಳ ಸಂರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Department of Animal Husbandry and Veterinary Services ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದೆ.

ಜಾನುವಾರು ಸಾಕಾಣಿಕೆ ದಾರರು ಎದುರಿಸಲು ಉಪಯೋಗಪಡಿಸಿಕೊಳ್ಳಿ ಎಂದರು
ಈ ಸಂದರ್ಭದಲ್ಲಿ ಪಶುಪಾಲನ ಇಲಾಖೆಯ ಉಪ ನಿರ್ದೇಶಕರಾದ ಡಾ. ಬಾಬು ರತ್ನ ಹಾಗೂ ಇತರರು ಉಪಸ್ಥಿತರಿದ್ದರು.

JCI Shivamogga Sahyadri ನಿಮ್ಮ ವೃತ್ತಿಕ್ಷೇತ್ರಗಳಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಲು ಸಂವಹನ ಅವಶ್ಯ-ಗೌರೀಶ್ ಭಾರ್ಗವ್

0

JCI Shivamogga Sahyadri ಸಂವಹನ ಕಲೆಯು ಉತ್ತಮವಾಗಿದ್ದಲ್ಲಿ ನಮ್ಮ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಜೆಸಿಐ ವಲಯಾಧ್ಯಕ್ಷ ಗೌರೀಶ್ ಭಾರ್ಗವ್ ಹೇಳಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಮತ್ತು ಜೆಸಿಐ ಶಿವಮೊಗ್ಗ ಕಾಮರ್ಸ್ ವತಿಯಿಂದ ಸಾನ್ವಿ ರೆಸಾರ್ಟ್ ನಲ್ಲಿ ಆಯೋಜಿಸಿದ್ದ ಎರಡು ದಿನಗಳ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಉದ್ಯಮ, ವ್ಯವಹಾರ ಸೇರಿದಂತೆ ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ಸಂವಹನ ಅತ್ಯಂತ ಅವಶ್ಯಕವಾಗಿರುತ್ತದೆ. ಉತ್ತಮ ಸಂವಹನ ಕಲೆ ಬಹಳ ಮುಖ್ಯ ಎಂದು ತಿಳಿಸಿದರು.

ಜೆಸಿಐ ರಾಷ್ಟ್ರೀಯ ತರಬೇತುದಾರ ವೇಣುಗೋಪಾಲ್ ಮಾತನಾಡಿ, ಜೀವನದಲ್ಲಿ ಯಶಸ್ಸು ಸಾಧಿಸಲು ಮಾತನಾಡುವ ಕಲೆಯು ಅತ್ಯಂತ ಮುಖ್ಯ. ಬಾಲ್ಯದಲ್ಲಿ ಜೆಸಿಐ ಆಯೋಜಿಸುವ ಇಂತಹ ಪರಿಣಾಮಕಾರಿ ಭಾಷಣ ಕಲೆ ಕಾರ್ಯಾಗಾರದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೆಪಿಸಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗುತ್ತದೆ ಎಂದು ಹೇಳಿದರು.

JCI Shivamogga Sahyadri ಜೆಸಿಐ ವಲಯ ತರಬೇತುದಾರ ಚಂದ್ರಶೇಖರ್ ಮಾತನಾಡಿ, ಸಂವಹನ ಕಲೆಯನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳುವುದರಿಂದ ಸಾಕಷ್ಟು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಎಂತಹ ಕಠಿಣ ಸಂದರ್ಭಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಿದೆ ಎಂದು ತಿಳಿಸಿದರು.
ಎರಡು ದಿನದ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕದ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಮಾತಿನ ಕಲೆ ಇದ್ದರೆ ಪ್ರಪಂಚದ ಯಾವ ಮೂಲೆಯಲ್ಲಾದರೂ ಧೈರ್ಯದಿಂದ ಬದುಕಬಹುದು. ಆರ್ಥಿಕ ಪ್ರಗತಿ ಸಾಧಿಸಲು ಸಹ ಸಂವಹನ ನೆರವಾಗುತ್ತದೆ. ಇಂತಹ ಕಾರ್ಯಾಗಾರಗಳು ಬದುಕಿನಲ್ಲಿ ಮಹತ್ತರ ಸಕಾರಾತ್ಮಕ ಬದಲಾವಣೆ ತರುತ್ತವೆ ಎಂದರು.

ಜೆಸಿ ಪ್ರಮೋದ್ ಶಾಸ್ತ್ರಿ, ಶೇಷಗಿರಿ, ಜೆಸಿಐ ಶಿವಮೊಗ್ಗ ಕಾಮರ್ಸ್ ಅಧ್ಯಕ್ಷ ನಿವೇದಿತಾ ವಿಕಾಸ್, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಜೆಸಿಐ ಪದಾಧಿಕಾರಿಗಳು ಹಾಜರಿದ್ದರು.

Shivamogga Police ಅಪರಿಚಿತ ವ್ಯಕ್ತಿಯ ಸಾವು, ದೊಡ್ಡಪೇಟೆ ಪೊಲೀಸ್ ಠಾಣೆ ಮಾಹಿತಿ

0

Shivamogga Police ಏ.08 ರಂದು ನಗರದ ಬಿ.ಹೆಚ್.ರಸ್ತೆಯಲ್ಲಿರುವ ವಿನಾಯಕ ಚಿತ್ರಮಂದಿರದ ಹತ್ತಿರ ಅನಾರೋಗದಿಂದ ಬಳಲುತ್ತಿರುವ ಸುಮಾರು 40-45 ವರ್ಷದ ವ್ಯಕ್ತಿಯೊಬ್ಬರನ್ನು ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಏ.18 ರಂದು ಮೃತಪಟ್ಟಿರುತ್ತಾನೆ.
ಈ ಮೃತ ವ್ಯಕ್ತಿಯ ಚಹರೆ 5.05 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಗೈನ ಒಳಭಾಗದಲ್ಲಿ ಹಾವಿನ ಚಿತ್ರದ ಹಚ್ಚೆ ಇರುತ್ತದೆ. ಮೈಮೇಲೆ ಬೂದು ಬಣ್ಣದ ಅರ್ಧ ತೋಳಿನ ಟೀಶರ್ಟ್, ಕಪ್ಪು ಬಣ್ಣದ ಚಡ್ಡಿ ಧರಿಸಿರುತ್ತಾನೆ.
ಈ ವ್ಯಕ್ತಿಯ ವಾರಸ್ಸುದಾರರ ಬಗ್ಗೆ ತಿಳಿದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 / 9916882544 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

Madhu Bangarappa ಬೈಕ್ ಅಪಘಾತ, ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ

0

Madhu Bangarappa ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದ ಘಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿ, ಗಾಯಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು.

Madhu Bangarappa ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ತಮ್ಮ ಆಪ್ತ ಸಹಾಯಕನನ್ನು ಆಸ್ಪತ್ರೆಗೆ ಕಳುಹಿಸಿ ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದರು.

CM Siddaramaiah ರೈತರು, ಶಿಕ್ಷಕರು,ಸೈನಿಕರ ಪರ ನಿಲ್ಲುವುದು ನಮ್ಮ ಬದ್ದತೆ- ಸಿದ್ಧರಾಮಯ್ಯ

0

CM Siddaramaiah ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು. ಅವರ ಜೊತೆ ನಿಲ್ಲುವುದು ನಮ್ಮ ಬದ್ಧತೆಯಾಗಿದೆ.

ಕೃಷಿಕರಿಗೆ ಶೇ.40, ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ.50 ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು ₹400 ಕೋಟಿ ವೆಚ್ಚದ ಕೃಷಿ ಯಂತ್ರಗಳು ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ‌ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡುತ್ತಿದ್ದರು.

ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗಾಗಿ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ.

ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಕೊಡಲು ಶುರು ಮಾಡಿದೆವು.

CM Siddaramaiah ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ ₹23,000 ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ
ಎಂದು ಸಿದ್ಧರಾಮಯ್ಯನವರು ತಿಳಿಸಿದರು.

eAsset ಇ-ಸ್ವತ್ತು ದಾಖಲೀಕರಣ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ- ಪ್ರಿಯಾಂಕ ಖರ್ಗೆ

0

eAsset ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳನ್ನು ಒಳಗೊಂಡ ಇ – ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

0

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು ಸ್ಥಾಪಿಸಿದ ಮಹಾನುಭಾವರು . ಶ್ರೀ ಚಿದಂಬರಾಶ್ರಮವು ಸುಮಾರು 90 ವರ್ಷಗಳ ಇತಿಹಾಸ ಹೊಂದಿರುವಂತಹ ಪುಣ್ಯಕ್ಷೇತ್ರವಾಗಿದೆ. ಶ್ರೀ ಚಿದಂಬರ ಗುರುಗಳು ಮಕ್ಕಳಿಗೆ ಸಾಂಪ್ರದಾಯಿಕ ಸಂಸ್ಕೃತಿಯನ್ನು, ಅಕ್ಷರ ಜ್ಞಾನವನ್ನು, ಜೀವನ ಕೌಶಲ್ಯಗಳನ್ನು ಕಲಿಸುವ ಸಮಗ್ರ ಶಿಕ್ಷಗಣದ ಪ್ರವರ್ತಕರು .
ಪ್ರಸ್ತುತ ಸೇವಾ ಸದನ ಶಿಕ್ಷಣ ಸಂಸ್ಥೆ, ಶ್ರೀ ಚಿದಂಬರಾಶ್ರಮ , ಗುಬ್ಬಿ ಇದರ ಅಡಿಯಲ್ಲಿ 4 ಶಾಲೆಗಳಿದ್ದು ಸುಮಾರು 600 ಜನ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಪ್ರಸ್ತುತ 2025 – 26 ನೇ ಸಾಲಿನಲ್ಲಿ ಸೇವಾ ಸದನ ಶಿಕ್ಷಣ ಸಂಸ್ಥೆಯ / ಚಿದಂಬರ ರಿಸರ್ಚ್ ವತಿಯಿಂದ ವಿಶೇಷವಾಗಿ “ಎಲೆಕ್ಟ್ರಿಷಿಯನ್ ಉಚಿತ ತರಬೇತಿ ಕಾರ್ಯಾಗಾರ “ವನ್ನು ಆಯೋಜಿಸಲಾಗಿದೆ . ಈ ಕಾರ್ಯಾಗಾರಕ್ಕೆ S S L C ಉತ್ತೀರ್ಣ ಹಾಗು ಅನುತ್ತೀರ್ಣ ವಿದ್ಯಾರ್ಥಿಗಳು , P U C ಉತ್ತೀರ್ಣ ಹಾಗು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಎಲೆಕ್ಟ್ರಿಕಲ್ ಕ್ಷೇತ್ರದಲ್ಲಿ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕಾರ್ಯಾಗಾರದ ಉದ್ದೇಶ ಯುವಕರು ಎಲೆಕ್ಟ್ರಿಕ್ ಟ್ರೇಡ್ ಅನ್ನು ಕಲಿತು ಸ್ವಯಂ ವೃತ್ತಿ ಕೈಗೊಳ್ಳಲು ಸಸಹಾಯ ಮಾಡುವುದು. ಈ ಕಾರ್ಯಾಗಾರವನ್ನು ಮೇ 1 . 2025 ರಿಂದ May ಕೊನೆಯವರಿಗೆ . ರವರೆಗೆ ನಡೆಸಲಾಗುತ್ತದೆ. ಈ ಎಲೆಕ್ಟ್ರೀಷಿಯನ್ ವೃತ್ತಿ ತರಬೇತಿಯನ್ನು ಕಲಿಕಾರ್ಥಿಗಳಿಗೆ ಅನುಭವವುಳ್ಳ ತಜ್ಞರಿಂದ ಬೋಧನೆ ಮತ್ತು ಎಲೆಕ್ಟ್ರಿಕಲ್ ಸಾಧನಗಳಿಂದ ಪ್ರಾಯೋಗಿಕವಾಗಿ ಕಲಿಸಲಾಗುತ್ತದೆ.
ಈ ಕಾರ್ಯಾಗಾರದಲ್ಲಿ ಎಲೆಕ್ಟ್ರಿಕಲ್ ವೈರಿಂಗ್ ಮತ್ತು ಸರ್ಕ್ಯೂಟುಗಳ ಮೂಲಗಳು,ಪ್ರಾಯೋಗಿಕ ಕೌಶಲ್ಯಗಳ ಅಭಿವೃದ್ಧಿ ಸುಧಾರಿತ ವೈರಿಂಗ್ ಮತ್ತು ಅನುಸ್ಥಾಪನ ತಂತ್ರಗಳು , ಉದ್ಯೋಗದ ಸಿದ್ಧತೆ ಇನ್ನಿತರ ವಿಷಯಗಳನ್ನು ಕಲಿಸಲಾಗುತ್ತದೆ.
ಇಂತಹ ಉಚಿತ ತರಬೇತಿಯ ಅವಕಾಶ ಸಿಗುವುದು ಅಪರೂಪ . ಹಾಗಾಗಿ ಈ ಸದವಕಾಶದ ಬಗ್ಗೆ ಸರ್ವರಿಗೂ ಮಾಹಿತಿ
ನೀಡಬೇಕಾಗಿ ಪ್ರಾರ್ಥನೆ.
ಡಾ|| ಸಚ್ಚಿದಾನಂದ ಶರ್ಮ Sri Chidambara Mahaswami ನೋಂದಣಿ ಉಚಿತವಾಗಿರುತ್ತದೆ. ಹೆಚ್ಚಿನ ವಿವರಗಳನ್ನು ಈ ಕೆಳಕಂಡ ವಿಳಾಸಕ್ಕೆ ಭೇಟಿ ನೀಡಿ ಪಡೆಯಬಹುದು.
ಸೇವಾ ಸದನ ಶಿಕ್ಷಣ ಸಂಸ್ಥೆ, ಶ್ರೀ ಚಿದಂಬರಾಶ್ರಮ, ಗುಬ್ಬಿ ಮತ್ತು ಈ ಕಾರ್ಯಕ್ರಮದ ಸಂಯೋಜಕರಾದ ಸೇವಾ ಸದನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ಎ. ಬಿ . ಜಗದೀಶ್ ರವರನ್ನು ಸಂಪರ್ಕಿಸಬಹುದು.
Ph No : 9740234225
Email : abjkallumane@gmail.com

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

0

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.
ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ

ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ಬೆಳಗಾವಿಯ ಟಿಳಕವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡುತ್ತಿದ್ದರು

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ₹6,928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ.

Madhu Bangarappa ಬಿಸಿಯೂಟಕ್ಕೆ‌ ಅಲ್ಯುಮಿನಿಯಂ ಪಾತ್ರೆಗಳ ಬಳಕೆ ನಿಲ್ಲಿಸಲು ಕ್ರಮ- ಮಧು ಬಂಗಾರಪ್ಪ

0

Madhu Bangarappa ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬೀಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಮ್ಮ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದರು.

ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು:
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪತ್ರಗಳನ್ನ ಬದಲಾಯಿಸಲಾಗುವುದು.

ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ಪ್ರಯತ್ನ:

ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಮನೋಭಾವವನ್ನು ಹೆಚ್ಚಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ದೇವಸ್ಥಾನಗಳಲ್ಲಿ ಪ್ರಾರಂಭವಾದ ಶಾಲೆಗಳಲ್ಲಿ ಓದಿದ ಅನೇಕ ಮಹಾನ್ ವ್ಯಕ್ತಿಗಳು ರಾಜ್ಯದ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ತಮ್ಮ ತಂದೆ ಶ್ರೀ ಬಂಗಾರಪ್ಪನವರು ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಸಹ ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಎಂದು ಅವರು ಸ್ಮರಿಸಿದರು.

ಎಲ್.ಕೆ.ಜಿ. ಶಾಲೆಗಳ ಪ್ರಾರಂಭ:

ಮುಂದಿನ ದಿನಗಳಲ್ಲಿ ಎಲ್.ಕೆ.ಜಿ. ಶಾಲೆಗಳನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ಅಂಗನವಾಡಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಈ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ವಿದ್ಯುತ್ ಸೌಲಭ್ಯ:

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಟಿವಿಗಳ ಬಳಕೆಯನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸುಮಾರು 46,000 ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ.

ಇದರಿಂದ ಮಕ್ಕಳು ಸ್ಮಾರ್ಟ್ ಕ್ಲಾಸ್ ಗಳ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಸಚಿವರು ಹೇಳಿದರು.

ತಂದೆಯವರ ಶಾಲೆಗೆ ನೆರವು:

ತಮ್ಮ ತಂದೆ ಶ್ರೀ ಬಂಗಾರಪ್ಪನವರು ಓದಿದ ಸರ್ಕಾರಿ ಶಾಲೆಗೆ ತಮ್ಮ ಸಂಬಳದಿಂದ 10 ಲಕ್ಷ ರೂಪಾಯಿಗಳನ್ನು ನೀಡಿದ್ದಾಗಿ ಸಚಿವರು ತಿಳಿಸಿದರು.

ಅದೇ ರೀತಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಓದಿದ ಎರಡು ಸರ್ಕಾರಿ ಶಾಲೆಗಳಿಗೂ ತಲಾ 10 ಲಕ್ಷ ರೂಪಾಯಿಗಳನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ:

Madhu Bangarappa ಜನರಿಗೆ ಅನುಕೂಲವಾಗುವಂತೆ ಈ ವರ್ಷ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಈಗಾಗಲೇ 300 ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ತಿಳಿಸಿದರು.

ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ:

ಈ ಬಾರಿ ಪರೀಕ್ಷೆಗಳಲ್ಲಿ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರಿಂದ ಉತ್ತೀರ್ಣ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಆದರೆ ಮಕ್ಕಳ ಗುಣಮಟ್ಟ ಹೆಚ್ಚಾಗಬೇಕು ಎಂಬುದು ಸರ್ಕಾರದ ಉದ್ದೇಶ.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಮಾದರಿಯನ್ನು ದೇಶದ ಹಲವು ರಾಜ್ಯಗಳು ಅನುಸರಿಸುತ್ತಿವೆ ಎಂದು ಸಚಿವರು ಹೇಳಿದರು.

ಪೋಷಕರಿಗೆ ಕರೆ:

ಪೋಷಕರು ತಮ್ಮ ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕಳುಹಿಸಬೇಕು ಮತ್ತು ಅವರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು. ಒಂದು ದಿನ ಶಾಲೆಗೆ ಗೈರು ಹಾಜರಾದರೆ, ಆ ದಿನವನ್ನು ಮಗು ಮತ್ತೆ ಪಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸರ್ಕಾರಿ ಶಾಲಾ ಶಿಕ್ಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪ್ರೇರೇಪಿಸಬೇಕು ಮತ್ತು ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿಸಬೇಕು ಎಂದು ಸಚಿವರು ತಿಳಿಸಿದರು.

Cow protection movement ಸಜ್ಜನಿಕೆಯ ವರದಿಗಾರ ‘ ಸ್ವಾಮಿ’ಗೆ ಪ್ರಶಸ್ತಿ‌, ತಾಲ್ಲೂಕಿಗೇ ಹೆಮ್ಮೆ- ಜಿ.ಎಸ್.ಚಿದಾನಂದಗೌಡ

0

Cow protection movement ಸರಳತೆ ಮತ್ತು ಸಜ್ಜನಿಕೆಯೊಂದಿಗೆ ವಸ್ತುನಿಷ್ಠ ವರದಿಗಾರಿಕೆಯಲ್ಲಿ ಗುರುತಿಸಿಕೊಂಡ ಪತ್ರಕರ್ತ ಎಚ್.ಕೆ.ಬಿ. ಸ್ವಾಮಿ ಅವರಿಗೆ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿ ಲಭಿಸಿರುವುದು ತಾಲೂಕಿಗೆ ಹೆಮ್ಮೆಯಾಗಿದೆ ಎಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಹೇಳಿದರು.
ಸೊರಬ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿಯಿಂದ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ನೀಡಲಾಗುವ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿಗೆ ಭಾಜನರಾದ ಎಚ್.ಕೆ.ಬಿ. ಸ್ವಾಮಿ ಅವರಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಚ್.ಕೆ.ಬಿ. ಸ್ವಾಮಿ ಅವರು ಯಾವುದೇ ಆಸೆ, ಆಮೀಷಗಳಿಗೆ ಒಳಗಾಗದೇ ಸದಾ ಸತ್ಯದ ಹಾದಿಯಲ್ಲಿ, ನೈಜ ವರದಿಗಾರಿಕೆಯಲ್ಲಿ ತೊಡಗಿದ್ದಾರೆ. ಅವರು ಯುವ ಪತ್ರಕರ್ತರಿಗೆ ಮಾದರಿಯಾಗಿದ್ದಾರೆ. ಅವರಿಗೆ ಪ್ರಶಸ್ತಿ ಲಭಿಸಿರುವುದು ಅತ್ಯಂತ ಸಂತೋಷದ ವಿಷಯ. ಪತ್ರಿಕೋದ್ಯಮದಲ್ಲಿ ಸ್ವಾಮಿ ಅವರು ಸುಮಾರು ಇಪ್ಪತೈದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಆರೋಪ ಮತ್ತು ಆಪಾದನೆಗಳನ್ನು ಹೊಂದಿಲ್ಲ. ಸಮಾಜದ ಕನ್ನಡಿಯಂತೆ ಕಾರ್ಯನಿರ್ವಹಿಸುತ್ತಿರುವ ಸ್ವಾಮಿ ಅವರಿಗೆ ಮತ್ತಷ್ಟು ಪ್ರಶಸ್ತಿಗಳು ಲಭಿಸಲಿ ಮತ್ತು ಅವರಿಂದ ಯುವ ಪತ್ರಕರ್ತರು ಪ್ರೇರೇಪಿತರಾಗಲಿ ಎಂದು ಆಶಿಸಿದರು.
ಅಭಿನಂದನೆ ಸ್ವೀಕರಿಸಿದ ಪತ್ರಕರ್ತ ಎಚ್.ಕೆ.ಬಿ. ಸ್ವಾಮಿ ಮಾತನಾಡಿ, ತಮಗೆ ಪ್ರಶಸ್ತಿ ಲಭಿಸಿರುವುದಕ್ಕೆ ಪ್ರೆಸ್ ಟ್ರಸ್ಟ್ಗೆ ಅಭಾರಿಯಾಗಿದ್ದೇನೆ ಜೊತೆಗೆ ಅನೇಕ ಪತ್ರಕರ್ತರು ಸಲಹೆ ನೀಡುತ್ತಾ, ಸಹಕಾರವನ್ನು ನೀಡಿದ್ದಾರೆ. ಪ್ರಶಸ್ತಿ ಲಭಿಸಿರುವುದರಿಂದ ಮತ್ತಷ್ಟು ಜವಾಬ್ದಾರಿ ಹೆಚ್ಚಿದಂತಾಗಿದೆ. ಪ್ರಶಸ್ತಿ ಲಭಿಸಿದ ತರುವಾಯ ಸಂಘ-ಸAಸ್ಥೆಯವರು ಗೌರವಿಸುತ್ತಿರುವುದು ಸಂತಸವಾಗುತ್ತಿದೆ ಎಂದರು.
ಗೋ ಸಂರಕ್ಷಣಾ ಹೋರಾಟ ಸಮಿತಿಯ ಉಪಾಧ್ಯಕ್ಷ ದತ್ತಾ ಸೊರಬ, ಪ್ರಧಾನ ಕಾರ್ಯದರ್ಶಿ ವೀರೇಂದ್ರ ಗೌಡ, ಕಾರ್ಯದರ್ಶಿ ಶರತ್ ಸ್ವಾಮಿ, ನಾಮದೇವ ಸಿಂಪಿ ಸಮಾಜದ ಉಪಾಧ್ಯಕ್ಷ ಅನಿಲ್ ಕುಮಾರ್ ಬಾಂಬೋರೆ, ಪತ್ರಕರ್ತ ನೋಂಪಿ ಶಂಕರ್, ಪ್ರವೀಣ್ ಕುಮಾರ್, ಯುವರಾಜ್ ಕಾನುಗೋಡು ಸೇರಿದಂತೆ ಇತರರಿದ್ದರು.