Wednesday, March 4, 2026
Wednesday, March 4, 2026
Home Blog Page 334

Minor Irrigation Department ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗಳಿಗೆ‌ & ಗುತ್ತಿಗೆದಾರರಿಗೆ ಹಣ ಬಿಡುಗಡೆ.- ಸಚಿವ‌ ಬೋಸರಾಜು

0

Minor Irrigation Department ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದೆ.

ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ/ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪ ಹೇಗೆ ಸಾಧ್ಯ? ಈ ನಿಟ್ಟಿನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆಧಾರ ರಹಿತ ಆರೋಪ ಮಾಡಿದ್ದಾರೆ.

ನಿನ್ನೆ ನಡೆದ ಸಭೆಯಲ್ಲಿ, ರಾಜ್ಯ ಗುತ್ತಿಗೆದಾರರಲ್ಲಿ ಉಂಟಾಗಿದ್ದ ಗೊಂದಲಗಳನ್ನು ಪರಿಹರಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು.

ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

2023 – 24 ನೇ ಆರ್ಥಿಕ ವರ್ಷದಲ್ಲಿ ಬಿಡುಗಡೆಯಾದ ಅನುದಾನದ ವಿವರ:
2023-24 ನೇ ಆರ್ಥಿಕ ವರ್ಷದಲ್ಲಿ ನಾವು ಬಿಜೆಪಿ ಸರಕಾರ, ಹಣಕಾಸಿನ ಲಭ್ಯತೆ ಇಲ್ಲದೇ ಇದ್ದರೂ ಪ್ರಾರಂಭಿಸಿದ್ದ, 12,693 ಕೋಟಿ ರೂಪಾಯಿ ಮೌಲ್ಯದ 15,549 ಕಾಮಾಗಾರಿಗಳನ್ನು ಮುಂದುವರೆಸಿದ್ದೇವೆ.

ಈ ವರ್ಷದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸದೆ, ಹಳೆಯ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದೇವೆ.

ಬಿಜೆಪಿ ಸರಕಾರ ಬಿಟ್ಟು ಹೋಗಿದ್ದ ಅಗಾಧ ಪ್ರಮಾಣದ ಕಾಮಗಾರಿಗಳನ್ನು ನಿಭಾಯಿಸಲು ಹಾಗೂ ಹಣಕಾಸಿನ ಲಭ್ಯತೆ ಇಲ್ಲದೇ ತೊಂದರೆ ಅನುಭವಿಸುತ್ತಿದ್ದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮಾಡಿಕೊಂಡ ಮನವಿಯ ಮೇರೆಗೆ ನಮ್ಮ ಇಲಾಖೆಗೆ ಹೆಚ್ಚಿನ ಅನುದಾನ ಮಂಜೂರು ಮಾಡಲಾಯಿತು.

ಹಿಂದಿನ ಸರಕಾರ ಹಣಕಾಸಿನ ಲಭ್ಯತೆಯನ್ನು ತೋರಿಸದೇ, ಅವೈಜ್ಞಾನಿಕವಾಗಿ ಅನುಮತಿ ನೀಡಲಾಗಿದ್ದ ಕಾಮಗಾರಿಗಳನ್ನು ಮುಂದುವರೆಸಲು ಹಾಗೂ ತೊಂದರೆಯಲ್ಲಿದ್ದ ಗುತ್ತಿಗೆದಾರರನ್ನು ಕಾಪಾಡುವ ನಿಟ್ಟಿನಲ್ಲಿ 2000 ಗುತ್ತಿಗೆದಾರರಲ್ಲಿ, 639 ಗುತ್ತಿಗೆದಾರರಿಗೆ ಬಾಕಿ ಇದ್ದ ಸಂಪೂರ್ಣ ಹಣವನ್ನು ಬಿಡುಗೆಡೆ ಮಾಡಲಾಗಿದೆ.

ಉಳಿದ 1361 ಗುತ್ತಿಗೆದಾರರಿಗೆ ಭಾಗಶಃ ಹಣವನ್ನು ಬಿಡುಗಡೆ ಮಾಡಲಾಗಿದೆ.

ಪ್ರತಿಯೊಬ್ಬ ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪದ ಪ್ರಶ್ನೆ ಎಲ್ಲಿಂದ ಸಾಧ್ಯ ಎನ್ನುವುದರ ಬಗ್ಗೆ ಗುತ್ತಿಗೆದಾರರನ್ನು ಪ್ರಶ್ನಿಸಿದ್ದಾಗಿ ಸಚಿವರು ತಿಳಿಸಿದರು.

2024-25 ನೇ ಆರ್ಥಿಕ ವರ್ಷದಲ್ಲಿ ಅನುದಾನ ಬಿಡುಗಡೆ:
2024-25 ನೇ ಆರ್ಥಿಕ ವರ್ಷದಲ್ಲಿ 9,974.34 ಕೋಟಿ ರೂಪಾಯಿ ಮೌಲ್ಯದ 13,913 ಸ್ಪಿಲ್ ಓವರ್ (ಮುಂದುವರೆದ) ಕಾಮಗಾರಿಗಳು ಚಾಲ್ತಿಯಲ್ಲಿದ್ದವು.

ಕಾಮಗಾರಿಗಳ ಅಗಾಧದತೆ ಹಾಗೂ ಗುತ್ತಿಗೆದಾರರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚುವರಿ ಅನುದಾನ ಮಂಜೂರಾಯಿತು.

ಫೆಬ್ರವರಿ 2025 ಕ್ಕೆ ಬಾಕಿಯಿದ್ದ ಬಿಲ್ ಹಣ 3,352.06 ಕೋಟಿ ರೂಪಾಯಿಗಳು. ಒಟ್ಟಾರೆಯಾಗಿ ಕೈಗೊಳ್ಳಲಾಗಿದ್ದ ಕಾಮಗಾರಿಗಳು 3,176 ಇದರಲ್ಲಿ 267 ಗುತ್ತಿಗೆದಾರರಿಗೆ ಬಾಕಿಯಿದ್ದ ಸಂಪೂರ್ಣ ಹಣವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲಾಯಿತು.

ಲಭ್ಯವಿದ್ದ ಅನುದಾನದಲ್ಲಿ 2,909 ಕಾಮಾಗಾರಿಗಳಿಗೆ ಭಾಗಶಃ ಹಣ ಬಿಡುಗಡೆ ಮಾಡಲಾಗಿದೆ. ಒಟ್ಟಾರೆಯಾಗಿ 3,176 ಕಾಮಗಾರಿಗಳಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ.

ಮಾರ್ಚ್ 2025 ರಲ್ಲಿ ಬಿಡುಗಡೆಯಾದ ಹಣಕಾಸಿನ ವಿವರ:
ಒಟ್ಟಾರೆಯಾಗಿ 2637 (211 ಗುತ್ತಿಗೆದಾರರು ಹಾಗೂ 2426 ಕಾಮಗಾರಿ) ಕೆಲಸಗಳಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 660 (603 ಕಾಮಗಾರಿ ಹಾಗೂ 57 ಗುತ್ತಿಗೆದಾರರಿಗೆ) ಬಾಕಿಯಿದ್ದ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದೆ. 1977 (1823 ಕಾಮಗಾರಿ ಹಾಗೂ 154 ಗುತ್ತಿಗೆದಾರರಿಗೆ) ಭಾಗಶಃ ಹಣ ಬಿಡುಗಡೆ ಮಾಡಲಾಗಿದೆ. 2637 ಕಾಮಾಗಾರಿಗಳಿಗೂ ಹಣ ಬಿಡುಗಡೆ ಮಾಡಲಾಗಿದೆ.

ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಹೆಚ್ಚಿನ ಆದ್ಯತೆ:
ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹೆಚ್ಚಾಗಿ ಕಾಮಗಾರಿಗಳನ್ನ ಕೈಗೊಳ್ಳುವಂತಹ ಎಂಓಟಿ (ಕೆರೆಗಳ ಅಧುನಿಕರಣ) ಮತ್ತು ಏಪಿಬಿ (ಅಣೆಕಟ್ಟು ಪಿಕ್ಅಪ್) ಯ ಹೆಡ್ ಆಫ್ ಅಕೌಂಟ್ಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಎಂಓಟಿ (ಕೆರೆಗಳ ಅಧುನಿಕರಣ) ಲೆಕ್ಕಶೀರ್ಷಿಕೆಗೆ ಆಯವ್ಯದಲ್ಲಿ ಹಂಚಿಕೆ ಮಾಡಲಾದ ಹಣ 100 ಕೋಟಿ ರೂಪಾಯಿಗಳು ಹೆಚ್ಚುವರಿಯಾಗಿ 210 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಲಾಗಿದೆ.

ಏಪಿಬಿ (ಅಣೆಕಟ್ಟು ಪಿಕ್ಅಪ್) ಲೆಕ್ಕಶೀರ್ಷಿಕೆಗೆ ಆಯವ್ಯಯದಲ್ಲಿ ಹಂಚಿಕೆ ಮಾಡಲಾದ ಹಣ 120 ಕೋಟಿ ರೂಪಾಯಿಗಳು ಹೆಚ್ಚುವರಿಯಾಗಿ 335 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಲಾಗಿದೆ.

ಎಲ್ಐಎಸ್ – ಏತನೀರಾವರಿ ಲೆಕ್ಕಶೀರ್ಷಿಕೆಗೆ ಆಯವ್ಯಯದಲ್ಲಿ 650 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 252.50 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.

ಪಶ್ಚಿಮವಾಹಿನಿ ಲೆಕ್ಕಶೀರ್ಷಿಕೆಗೆ ಆಯವ್ಯಯದಲ್ಲಿ 100 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 100 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.

ಇದನ್ನ ಗಮನಿಸಿದರೆ, ಸಣ್ಣ ಹಾಗೂ ಮಧ್ಯಮ ಗುತ್ತಿಗೆದಾರರು ಹೆಚ್ಚಾಗಿರುವಂತಹ ಲೆಕ್ಕಶೀರ್ಷಿಕೆಗಳಿಗೆ ಹೆಚ್ಚುವರಿಯಾಗಿ ಲಭ್ಯವಾದ ಹಣದಲ್ಲಿ ಶೇಕಡಾ 55 ಕ್ಕೂ ಹೆಚ್ಚು ಭಾಗವನ್ನು ಮೀಸಲಿಡಲಾಗಿದೆ.

ಅಲ್ಲದೇ, ಎಂಓಟಿ (ಕೆರೆಗಳ ಆಧುನೀಕರಣ) ಲೆಕ್ಕಶೀರ್ಷಿಕೆಯಲ್ಲಿ ಇರುವ ಎಲ್ಲಾ ಕಾಮಗಾರಿಗಳ/ಗುತ್ತಿಗೆದಾರರಿಗೆ ಡಿಸೆಂಬರ್ ಮತ್ತು ಮಾರ್ಚ್ ತಿಂಗಳಲ್ಲಿ ಒಟ್ಟಾರೆಯಾಗಿ ಶೇಕಡಾ 25 ರಷ್ಟು, ಏಪಿಬಿ – ಅಣೆಕಟ್ಟು ಪಿಕಪ್ ಲೆಕ್ಕಶೀರ್ಷಿಕೆಯಲ್ಲಿ ಇರುವ ಎಲ್ಲಾ ಕಾಮಗಾರಿಗಳ/ಗುತ್ತಿಗೆದಾರರಿಗೆ ಡಿಸೇಂಬರ್ ಮತ್ತು ಮಾರ್ಚ್ ತಿಂಗಳಲ್ಲಿ ಶೇಡಕಾ 31 ರಷ್ಟು, ಎಸ್ಸಿಪಿ, ಟಿಎಸ್ಪಿ ಹಾಗೂ ನಬಾರ್ಡ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವಂತಹ ಕಾಮಗಾರಿಗಳ ಬಾಕಿ ಬಿಲ್ಲಿನ ಶೇಕಡಾ 100 ರಷ್ಟು ಹಣವನ್ನು ನೀಡಲಾಗಿದೆ.

ನಮ್ಮ ಇಲಾಖೆಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿರುವಂತಹ ಎಲ್ಲಾ ಅಂದರೆ ಶೇಕಡಾ 100 ರಷ್ಟು ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಯಾವುದೇ ಒಬ್ಬ ಗುತ್ತಿಗೆದಾರರು/ಕಾಮಗಾರಿಗೆ ಹಣ ಬಿಡುಗಡೆ ಆಗಿಲ್ಲ ಎನ್ನುವುದನ್ನ ತೋರಿಸಲಿ ಎಂದು ಸಚಿವರು ಸವಾಲ್ ಹಾಕಿದರು.

ನಮ್ಮ ಇಲಾಖೆಯಲ್ಲಿ ಹಸ್ತಕ್ಷೇಪದ ಸಾಧ್ಯತೆಯೇ ಇಲ್ಲ. ಕಾಮಗಾರಿಗಳು ಸಕಾಲದಲ್ಲಿ ಮುಗಿಯಬೇಕು ಹಾಗೂ ಗುತ್ತಿಗೆದಾರರು ಗುಣಮಟ್ಟದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎನ್ನುವ ಉದ್ದೇಶದಿಂದ ನಾವು ಅನುದಾನದ ಲಭ್ಯತೆಯನ್ನು ನೋಡಿಕೊಂಡು ಹಣ ಬಿಡುಗಡೆ ಮಾಡುತ್ತಿದ್ದೇವೆ.

ಬಾಕಿ ಇರುವ ಎಲ್ಲಾ ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಜೇಷ್ಠತೆಯ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಜೇಷ್ಠತೆಯ ಆಧಾರದಲ್ಲಿ ಹಣ ಬಿಡುಗಡೆ ಮಾಡಿದ್ದಲ್ಲಿ ಇದುವರೆಗೂ ಲಭ್ಯವಾದಂತಹ ಹಣಕಾಸಿನ ಲಭ್ಯತೆಯಲ್ಲಿ ಕೇವಲ ಕೆಲವೇ ಗುತ್ತಿಗೆದಾರರು/ಕಾಮಗಾರಿಗೆ ಮಾತ್ರ ಹಣ ನೀಡಲು ಸಾಧ್ಯವಾಗುತ್ತಿತ್ತು. ಯಾವುದೇ ತಾರತಮ್ಯ ವಿಲ್ಲದೇ ಪಾರದರ್ಶಕತೆಯಿಂದ, ನಮ್ಮನ್ನು ಭೇಟಿಯಾದ ಹಾಗೂ ಭೇಟಿಯಾಗದೇ ಇರುವಂತಹ ಎಲ್ಲಾ ಗುತ್ತಿಗೆದಾರರಿಗೂ ಸಮಾನವಾಗಿ ಹಣ ಬಿಡುಗಡೆ ಆಗಿದೆ.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮಾಡಿರುವಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಅಂತಹ ಘಟನೆಗಳು ಇದ್ದಲ್ಲಿ ಸಕ್ಷಮ ಪ್ರಾಧಿಕಾರದಲ್ಲಿ ದೂರು ಸಲ್ಲಿಸುವಂತೆಯೂ ತಿಳಿಸಲಾಗಿದೆ ಎಂದರು.

ನಿನ್ನೆ ನಡೆದ ಸಭೆಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಲ್ಲಿ ಇದ್ದಂತಹ ಎಲ್ಲಾ ಗೊಂದಲಗಳನ್ನು ನಿವಾರಿಸಲಾಗಿದೆ. ಜೇಷ್ಠತೆ ಆಧಾರದಲ್ಲಿ ಬಾಕಿ ಇರುವಂತಹ ಎಲ್ಲಾ ಬಿಲ್ ಗಳನ್ನು ಪಾವತಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿಕೊಂಡರು. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಟೆಂಡರ್‌ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಲಾಗಿದೆ.

ನನ್ನ ಇಲಾಖೆಯಲ್ಲಿ ಯಾರದ್ದೂ ಹಸ್ತಕ್ಷೇಪ ಇಲ್ಲ, ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರ ಹಿತರಕ್ಷಣೆಯ ಜೊತೆಯಲ್ಲಿಯೇ ಕಾಮಗಾರಿಗಳು ಸುಗಮವಾಗಿ ಮುಂದುವರೆಯುಂತಹ ಕ್ರಮಗಳನ್ನು ಅಳವಡಿಸಿಕೊಂಡಿದ್ದೇವೆ. ಇದರ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಗುತ್ತಿಗೆದಾರರು ಈ ಸಣ್ಣ ನೀರಾವರಿ ಇಲಾಖೆಯಲ್ಲಿ ಹಣಕಾಸಿನ ಬಿಡುಗಡೆಯ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಸಹಮತಿ ವ್ಯಕ್ತಪಡಿಸಿದ್ದಾರೆ. ಮಾಹಿತಿ ಇಲ್ಲದೇ ಅನಗತ್ಯ ಹೇಳಿಕೆ ನೀಡುವ ಮೂಲಕ ಗೊಂದಲ ಉಂಟುಮಾಡುವುದನ್ನು ಕೈಬಿಡುವಂತೆಯೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿಗಳಾದ ರಾಘವನ್ ಉಪಸ್ಥಿತರಿದ್ದರು.

Visvesvaraya Iron and Steel Plant ಭದ್ರಾವತಿ ವಿಐಎಸ್ ಎಲ್ ನಲ್ಲಿ”ಪರಿಣಾಮಕಾರಿತ್ವ ಅಭಿವೃದ್ಧಿ” ತರಬೇತಿ‌ ಕಾರ್ಯಾಗಾರ

0

Visvesvaraya Iron and Steel Plant ವಿಐಎಸ್ ಎಲ್ ನಲ್ಲಿ ಐಇಂಪಿ ಮೂಲಕ ವೈಯಕ್ತಿಕ ಪರಿಣಾಮಕಾರಿತ್ವ ಅಭಿವೃದ್ಧಿ’ ತರಬೇತಿ ಕಾರ್ಯಕ್ರಮ
ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ “ಕಲಿಕೆ, ತೊಡಗಿಸಿಕೊಳ್ಳಿವಿಕೆ, ವರ್ತನೆ ಮತ್ತು ಕಾರ್ಯಕ್ಷಮತೆ (ಐಇಂP) ಮೂಲಕ ವೈಯಕ್ತಿಕ ಪರಿಣಾಮಕಾರಿತ್ವ ಅಭಿವೃದ್ಧಿ” ಎಂಬ ವಿಷಯದ ಕುರಿತು ಎರಡು ತರಬೇತಿ ಕಾರ್ಯಕ್ರಮಗಳನ್ನು ವಿಐಎಸ್ ಎಲ್ ನಲ್ಲಿ ಏಪ್ರಿಲ್ 15 ರಿಂದ 16ರವರೆಗೆ ಮತ್ತು ಏಪ್ರಿಲ್ 17 ರಿಂದ 18ರವರೆಗೆ ಕ್ರಮವಾಗಿ 43 ಮತ್ತು 36 ಉದ್ಯೋಗಿಗಳನ್ನು ಒಳಗೊಂಡಂತೆ ವಿಐಎಸ್‌ಎಲ್‌ನ ಭದ್ರಾ ಅತಿಥಿಗೃಹದಲ್ಲಿ ಆಯೋಜಿಸಲಾಗಿತ್ತು.

ಮೊದಲ ಕಾರ್ಯಕ್ರಮವನ್ನು ಕಾರ್ಯಪಾಲಕ ನಿರ್ದೇಶಕ ಶ್ರೀ ಬಿ.ಎಲ್. ಚಂದ್ವಾನಿ ಮತ್ತು ಎರಡನೇ ಕಾರ್ಯಕ್ರಮವನ್ನು ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಉದ್ಟಾಟಿಸಿದರು.
ರಾಂಚಿಯ ಮ್ಯಾನೇಜ್‌ಮೆಂಟ್ ಟ್ರೈನಿಂಗ್ ಇನ್ಸ್ಟಿಟ್ಯೂಟಿನ ಜನರಲ್ ಮ್ಯಾನೇಜರ್ (ಶೈಕ್ಷಣಿಕ ಮತ್ತು ಹಿರಿಯ ಬೋಧಕ ಸದಸ್ಯರು) ಡಾ|| ಪ್ರಣವ್ ಕುಮಾರ್, ತರಬೇತಿಯನ್ನು ಪರಿಣಾಮಕಾರಿಯಾಗಿ ನಡೆಸಿಕೊಟ್ಟರು.

ತರಬೇತಿಯಲ್ಲಿ ಗುಂಪು ಚಟುವಟಿಕೆಗಳು, ಮನಶ್ಯಾಸ್ತçದ ಪರೀಕ್ಷೆಗಳು, ಗುಂಪು ಚರ್ಚೆ ಮತ್ತು ವಿಷಯ ಮಂಡನೆಗಳು ಒಳಗೊಂಡಿದ್ದವು.

ಈ ಕಾರ್ಯಕ್ರಮವನ್ನು ವಿಐಎಸ್ ಎಲ್ & ಆ ಇಲಾಖೆ ಸಂಯೋಜಿಸಿತ್ತು. ಕಿರಿಯ ಪ್ರಬಂಧಕರು ಶ್ರೀ ಎಮ್.ಎಲ್. ಯೋಗೀಶ್ ಪ್ರೋಟೋಕಾಲ್ ಅಧಿಕಾರಿಯಾಗಿದ್ದರು.

ಭಾಗವಹಿಸಿದ ಎಲ್ಲಾ ಅಭ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರವನ್ನು ತೆಗೆಸಿದ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಶಾಲಾಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

Madhu Bangarappa ಮಾಧ್ಯಮ ವರದಿಗಳಲ್ಲಿ ನಾವು ಗಮನಿಸಿದಂತೆ, ಅಂತಹ ನಿರ್ದೇಶನಗಳನ್ನು ನೀಡಲು ಯಾವುದೇ ಕಾನೂನಿನಲ್ಲಿ ಅವಕಾಶ ಇಲ್ಲ ಮತ್ತು ಈ ಕ್ರಮವನ್ನು ಅನುಮತಿಸುವ ಕಾನೂನಿನಡಿಯಲ್ಲಿ ಯಾವುದೇ ನಿಯಮಗಳಿಲ್ಲ ಎಂದು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

CM Siddharamaiah ಜಾತಿ ಗಣತಿ ಸಭೆ ಅಪೂರ್ಣ, ಮತ್ತಷ್ಟು ಮಾಹಿತಿ, ತಾಂತ್ರಿಕ ವಿವರ ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ- ಸಿದ್ಧರಾಮಯ್ಯ

0

CM Siddharamaiah ಸೀಎಂ ಸಿದ್ಧರಾಮಯ್ಯ ನವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತ ವಿಶೇಷ ಸಂಪುಟ ಸಭೆಯ ಪ್ರಮುಖ ಅಂಶಗಳಿವು;

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ಮಾಡಿದ್ದು ಇನ್ನಷ್ಟು ಮಾಹಿತಿ, ತಾಂತ್ರಿಕ ವಿವರಗಳು ಚರ್ಚೆಗೆ ಅಗತ್ಯ ಎನಿಸಿ, ಅವುಗಳನ್ನು ಒದಗಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂದಿನ ಚರ್ಚೆ ಅಪೂರ್ಣವಾಗಿದೆ. ಅತ್ಯಂತ ಸೌಹಾರ್ದಯುತವಾಗಿ ನಡೆದ ಚರ್ಚೆಯಲ್ಲಿ ಜನಸಂಖ್ಯೆ ಹಿಂದುಳಿದಿರುವಿಕೆ, ಅಧ್ಯಯನ ಮಾಡುವ ಸಂದರ್ಭದಲ್ಲಿ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಕೈಗೊಂಡ ಮಾನದಂಡಗಳ ವಿವರಗಳನ್ನು ಸ್ವಲ್ಪ ಮಟ್ಟಿಗೆ ಚರ್ಚಿಸಲಾಗಿದ್ದು, ಚರ್ಚೆ ಅಪೂರ್ಣವಾಗಿರುವುದರಿಂದ ಮುಂದಿನ ಸಚಿವ ಸಂಪುಟ ಸಭೆ ಏಪ್ರಿಲ್ 24 ರಂದು ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿದ್ದು, ಆಯಾ ಭಾಗದ ವಿಷಯಗಳು ಹೆಚ್ಚಾಗಿ ಚರ್ಚೆಗೆ ಬರುತ್ತದೆ ಎಂದು ಸೀಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಮೇ 2 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲು ಸಚಿವ ಸಂಪುಟ ನಿರ್ಧರಿಸಿದೆ.

CM Siddharamaiah ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಉತ್ಪನ್ನದ ಮೂಲ ಹಾಗೂ ಕೈಗೊಂಡ ಮಾನದಂಡಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕೆಲವು ಹಿರಿಯ ಸಚಿವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಸಚಿವ ಸಂಪುಟದಲ್ಲಿ ಅಧಿಕಾರಿಗಳು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ.

ಜಾತಿ ಸಂಖ್ಯಾಬಲದ ಬಗ್ಗೆ ತಪ್ಪು ಗ್ರಹಿಕೆಗಳು ಹೊರಬೀಳುತ್ತಿದ್ದು, ಅವುಗಳು ಸರಿಯಾದ ವಿವರಗಳಲ್ಲ. 94.17% ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ವರದಿ ಮಂಡನೆಯಾಗಿ ಚರ್ಚೆ ನಡೆಸಲಾಗಿದೆ ಎಂದು ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Kyasanur Forest disease ಕೆ ಎಫ್ ಡಿ ಕಾಯಿಲೆ ಕ್ಯಾಸನೂರು ಅರಣ್ಯ‌ಕಾಯಿಲೆಗೆ ಮತ್ತೊಂದು ಜೀವ‌ಬಲಿ!

0

Kyasanur Forest disease ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದತ್ತರಾಜಾಪುರ ಗ್ರಾಮದ 8 ವರ್ಷದ ಬಾಲಕ ರಚಿತ್ ಕೆ ಎಫ್ ಡಿ ಕಾಯಿಲೆಯಿಂದ ನಿನ್ನೆ ದಿ.17-04-2025 ರಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

ಏಪ್ರಿಲ್ 4ನೇ ತಾರೀಕು ರಚಿತ್ ರವರ ಅಕ್ಕ ರಮ್ಯಾ ಇವರಿಗೆ ಜ್ವರ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆ ತೀರ್ಥಹಳ್ಳಿ ಯಲ್ಲಿ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಕೆಎಫ್ ಡಿ ಪಾಸಿಟಿವ್ ಬಂದಿರುತ್ತದೆ.

ಹಾಗೂ ರಚಿತ್ ಗೆ ಏಪ್ರಿಲ್ 5ನೇ ತಾರೀಕು ಸುಸ್ತು ಮತ್ತು ವಾಂತಿ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆಗೆ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದ್ದು ರಮ್ಯಾ ಮತ್ತು ರಚಿತ್ ಇಬ್ಬರಿಗೂ 6ನೇ ತಾರೀಕು ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿ ಎಬಿಎಆರ್ ಕೆ ಅಡಿ ಉಚಿತ ಚಿಕಿತ್ಸೆ ನೀಡಲಾಗಿದ್ದು ರಮ್ಯಾ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿರುತ್ತಾರೆ.

ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿಯೇ ಇರಿಸಿ ತೀವ್ರ ನಿಘಾ ಘಟಕ ದಲ್ಲಿರಿಸಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ರಚಿತ್ ಮರಣ ಹೊಂದಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿರುತ್ತಾರೆ .

ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪ ನವರು ಈ ಹಿಂದೆ ಜಿಲ್ಲಾಧಿಕಾರಿಗಳ ಕಛೇರಿ ಯಲ್ಲಿ ಸಭೆ ನಡೆಸಿ ಕೆಎಫ್ ಡಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿರುತ್ತಾರೆ. ಹಾಗೂ ರಚಿತ್ ಚಿಕಿತ್ಸೆ ಕುರಿತು ಮಣಿಪಾಲ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದರು.

Kyasanur Forest disease ತೀರ್ಥಹಳ್ಳಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಯಲ್ಲಿ ಅಧಿಕಾರಿಗಳ ಸಭೆ ಕರೆದು ಕೆಎಫ್ ಡಿ ನಿಯಂತ್ರಣದ ಕುರಿತು ಸಲಹೆ ನೀಡಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ಸೂಚನೆ ನೀಡಿರುತ್ತಾರೆ ಹಾಗೂ ರಚಿತ್ ಚಿಕಿತ್ಸೆ ಕುರಿತು ಮಣಿಪಾಲ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಉತ್ತಮ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದರು.

ಇದರ ಹೊರತಾಗಿಯೂ ರಚಿತ್ ಸಾವು ಎಲ್ಲರಿಗೂ ತುಂಬಾ ನೋವನ್ನುಂಟು ಮಾಡಿದೆ .
ಈ ಮರಣ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾನ್ಯ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿರುತ್ತಾರೆ.

Department of School Education and Literacy ಏಪ್ರಿಲ್ 19 ರಿಂದ 21 ವರೆಗೆ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸದ ಮಾಹಿತಿ

0

Department of School Education and Literacy ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ಏ.19 ರಿಂದ 21 ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.

ಏ. 19 ರಂದು ಬೆ.10.30ಕ್ಕೆ ಸೊರಬ ತಾ. ಬಿಳಾಗಿ ಗ್ರಾಮದ ಸ.ಕಿ.ಪ್ರಾ.ಶಾಲಾ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

11.30ಕ್ಕೆ ಕೋಟಿಪುರ ಸಂತ ಸೇವಾಲಾಲ್‌ರವರ 285ನೇ ಜಯಂತೋತ್ಸವ ಆನವಟ್ಟಿ ಶ್ರೀ ಸೇವಾಲಾಲ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ. 7.00ಕ್ಕೆ ಸೊರಬ ಹಿರೇಮಾಗಡಿಯ ಪೂಜ್ಯ ಶ್ರೀ ಮ.ನಿ.ಪ್ರ ಶಿವಮೂರ್ತಿ ಮಹಾಸ್ವಾಮಿಗಳ 75ನೇ ವರ್ಷದ ಅಮೃತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಂದು ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಏ. 20 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Department of School Education and Literacy ಏ. 21 ರಂದು ಬೆ. 10.30ಕ್ಕೆ ಹೊಸನಗರ ಈಡಿಗರ ಸಭಾಭವನದಲ್ಲಿ ಹೊಸನಗರ ತಾಲೂಕಿನ ಜನಸ್ಪಂದನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.00ಕ್ಕೆ ಆಯನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಯನೂರು ಕಾಲೇಜು ಕಟ್ಟಡ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಹಾಗೂ ಅಂದು ಸೊರಬದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Yuva Nidhi Scheme ಯುವನಿಧಿ, ಉದ್ಯೋಗ ಪಡೆಯಲು ಆರ್ಥಿಕ ಸಹಾಯ ಒದಗಿಸುವ ಉತ್ತಮ ಯೋಜನೆ- ಸಿ.ಎಸ್.ಚಂದ್ರಭೂಪಾಲ್

0

Yuva Nidhi Scheme ಯುವನಿಧಿ, ಉದ್ಯೋಗ ಪಡೆಯಲು ಆರ್ಥಿಕ ಸಹಾಯ ಒದಗಿಸುವ ಉತ್ತಮ ಯೋಜನೆ- ಸಿ.ಎಸ್.ಚಂದ್ರಭೂಪಾಲ್ ‘ಯುವನಿಧಿ’ ಯುವಜನತೆ ಉದ್ಯೋಗ ಪಡೆಯಲು ಆರ್ಥಿಕ ಸಹಕಾರ ಒದಗಿಸುವ ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಯಾವುದೇ ಪದವಿ-ಡಿಪ್ಲೊಮಾ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಈ ಯೋಜನೆಗೆ ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಗುರುವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಯುವಜನ ನೋಂದಣಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವನಿಧಿ ವಿದ್ಯಾರ್ಥಿಗಳು ಪದವಿ, ಡಿಪ್ಲೊಮಾ ಮುಗಿಸಿದ ಮೇಲೆ ಕೆಲಸ ಹುಡುಕಲು, ಇತರೆ ಪರೀಕ್ಷೆಗಳನ್ನು ಬರೆಯಲು ಆರ್ಥಿಕವಾಗಿ ಸಹಕಾರ ನೀಡುವ ಒಂದು ಯೋಜನೆಯಾಗಿದೆ. ಪದವಿ ಮುಗಿದ ನಂತರ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಅಥವಾ ಉತ್ತಮ ಉದ್ಯೋಗ ಪಡೆಯಬೇಕೆಂದು ಅನೇಕ ಕನಸುಗಳನ್ನು ಕಾಣುತ್ತಾರೆ. ಆದರೆ ಮನೆಯಲ್ಲಿ ಕೆಲಸ ಹುಡುಕಲು, ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಹಣ ಕೇಳಲು ಕಷ್ಟವಾಗುತ್ತದೆ. ಯುವಜನತೆಯ ಈ ಭಾರ ಕಡಿಮೆ ಮಾಡಲೆಂದೇ ರಾಜ್ಯ ಸರ್ಕಾರ ಇವರಲ್ಲಿ ಆರ್ಥಿಕ ಸ್ವಾವಲಂಬನೆ ತರಲು ಈ ಯೋಜನೆಯನ್ನು ಜಾರಿಗೊಳಿಸಿದೆ.
ರಾಜ್ಯ ಸರ್ಕಾರ ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು ಯುವನಿಧಿ ಯೋಜನೆ ಯುವಜನರ ಆಶಾಕಿರಣವಾಗಿದೆ. ನಿರುದ್ಯೋಗಿ ಪದವೀಧರರಿಗೆ ಕೇವಲ ನಿರುದ್ಯೋಗ ಭತ್ಯೆ ನೀಡುವುದು ಮಾತ್ರ ಸರ್ಕಾರದ ಉದ್ದೇಶವಲ್ಲ, ಹಲವಾರು ಆರ್ಥಿಕ, ಕೌಟುಂಬಿಕ ಸಮಸ್ಯೆಗಳಿಂದ ಬಳಲುತ್ತಿರುವ ಯುವ ಜನರಿಗೆ ಆತ್ಮವಿಶ್ವಾಸ ತುಂಬುವುದಲ್ಲದೇ ತಮ್ಮ ವಿದ್ಯಾರ್ಹತೆಗೆ ತಕ್ಕ ಕೌಶಲ್ಯವನ್ನು ಪಡೆದುಕೊಳ್ಳಲು ಸಹ ಸರ್ಕಾರ ನೆರವಾಗುತ್ತಿದೆ.
ಯಾವುದೇ ಪದವಿ ಮುಗಿಸಿ ನೋಂದಣಿಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.3 ಸಾವಿರ ಹಾಗೂ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳಿಗೆ ರೂ.1500 ಗಳನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ. ಎಲ್ಲ ಅರ್ಹ ಅಭ್ಯರ್ಥಿಗಳು ನೋಂದಣಿಯಾಗುವ ಮೂಲಕ ಇದರ ಸದುಪಯೋಗ ಪಡೆಯಬೇಕು. ಏಕಾಗ್ರತೆಯಿಂದ ವಿದ್ಯಾರ್ಥಿಗಳು ಓದಿ, ಉತ್ತಮ ಅಂಕ ಪಡೆದು ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದು ಹಾರೈಸಿದರು.
Yuva Nidhi Scheme ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರಾದ ಹೆಚ್ ಎಂ ಮಧು ಮಾತನಾಡಿ, ಯುವಜನತೆಯ ಭವಿಷ್ಯಕ್ಕೊಂದು ಉತ್ತಮ ಯೋಜನೆಯೇ ಯುವನಿಧಿ. ಯಾವುದೇ ಪದವಿ, ಡಿಪ್ಲೊಮಾ ಮುಗಿದ ಮೇಲೆ ಪೋಷಕರ ಮೇಲೆ ಅವಲಂಬಿತರಾಗುವುದನ್ನು ತಪ್ಪಿಸಲು, ಉದ್ಯೋಗ ಪಡೆಯಲು ಸಹಕರಿಸಲು ಸರ್ಕಾರ ಯುವನಿಧಿ ಯೋಜನೆ ಜಾರಿಗೊಳಿಸಿದೆ. ಪದವಿ ಮುಗಿದ ಕೂಡಲೇ ಈ ಯೋಜನೆಗೆ ನೋಂದಾಯಿತರಾಗುವ ಮೂಲಕ ಈ ಯೋಜನೆಯ ಸದುಪಯೋಗ ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾ ಉದ್ಯೋಗಾಧಿಕಾರಿ ಕಲಂದರ್ ಖಾನ್ ಮಾತನಾಡಿ, ಪದವಿ ಹಾಗೂ ಡಿಪ್ಲೊಮಾ ವಿದ್ಯಾಭ್ಯಾಸ ಪೂರ್ಣಗೊಳಿಸಿ ಉದ್ಯೋಗದ ಹುಡುಕಾಟದಲ್ಲಿ ತೊಡಗುವ ಯುವ ಜನರಿಗೆ ನಿರುದ್ಯೋಗ ಭತ್ಯೆಯ ಭದ್ರತೆ ಒದಗಿಸುವ ಯುವನಿಧಿ ಯೋಜನೆಗೆ ಜನವರಿ 12 ರಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಚಾಲನೆ ನೀಡಿದರು.
ಎಂಬಿಬಿಎಸ್, ಇಂಜಿನಿಯರಿಂಗ್, ಬಿಡಿಎಸ್ ಸೇರಿದಂತೆ ಯಾವುದೇ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳು ಫಲಿತಾಂಶ ಬಂದ ತಕ್ಷಣ ಯುವನಿಧಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಯಾಗಬೇಕು. ಇದಕ್ಕೆ ಆದಾಯ ಮಿತಿ, ಜಾತಿ, ಧರ್ಮದ ಮಿತಿ ಇರುವುದಿಲ್ಲ. . ಬದಲಾಗಿ ತಮ್ಮ ಡಿಜಿ ಲಾಕರ್‌ನಲ್ಲಿರುವ ದಾಖಲೆಗಳಿಗೆ ಲಿಂಕ್ ಮಾಡಿದರೆ ಸಾಕು. ಗ್ರಾಮ ಒನ್, ಶಿವಮೊಗ್ಗ ಒನ್ ನಲ್ಲಿ ಸಹ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮೊದಲು ಒಂದು ತಿಂಗಳಿಗೊಮ್ಮೆ ತಮ್ಮ ಸ್ಥಿತಿಗತಿ ಬಗ್ಗೆ ಸ್ವಯಂ ಘೋಷಣೆ ಮಾಡಬೇಕಿತ್ತು. ಇದೀಗ ಈ ಅವಧಿಯನ್ನು ಮೂರು ತಿಂಗಳಿಗೆ ವಿಸ್ತರಿಸಲಾಗಿದೆ. ಸ್ನಾತಕೋತ್ತರ ಪದವಿ ಮುಗಿಸಿದವರು ಸಹ ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು. ನೋಂದಣಿಗೆ ಸಂಬಂಧಿಸಿದ ಯಾವುದೇ ತಾಂತ್ರಿಕ ಸಮಸ್ಯೆ, ಇತರೆ ಮಾಹಿತಿ ಬೇಕಿದ್ದಲ್ಲಿ ಟೋಲ್‌ಫ್ರೀ ಸಹಾಯವಾಣಿ ಸಂಖ್ಯೆ 1800 599 7154 ಗೆ ಕರೆ ಮಾಡಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಬಿ.ಚೆನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ಶಾಸ್ತç ವಿಭಾಗದ ಸಹ ಪ್ರಾಧ್ಯಾಪಕ ಪಾಂಡುರಂಗ ಸ್ವಾಗತಿಸಿದರು.

Shivamogga MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಏಪ್ರಿಲ್ 21 ರಂದು ಜನಸಂಪರ್ಕ ಸಭೆ

0

Shivamogga MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ ಏ. 21 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

Shivamogga MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;9480841339.

Madhu Bangarappa ಹೊಸನಗರ ಈಡಿಗರ ಭವನದಲ್ಲಿ ಏಪ್ರಿಲ್ 21, ಸಚಿವ ಮಧು ಬಂಗಾರಪ್ಪ”ಜನ ಸ್ಪಂದನ” ಕಾರ್ಯಕ್ರಮ

0

Madhu Bangarappa ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.

Madhu Bangarappa ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‌ಗಳನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

JCI and Cultural Club ಕ್ರೀಡೆಯಿಂದ ದೈಹಿಕ & ಮಾನಸಿಕ ಆರೋಗ್ಯ ವೃದ್ಧಿ- ಹೆಚ್.ಎಸ್.ಸುಂದರೇಶ್

0

JCI and Cultural Club ಜೆಸಿಐ ಅಂಡ್ ಕಲ್ಚರಲ್ ಕ್ಲಬ್ ವಲಯ 24ರ ಬಾಕ್ಸ್ ಕ್ರಿಕೆಟ್ ಚಾಂಪಿಯನ್ ಶಿಪ್ ಪಟ್ಟ ಹಾಗೂ 15,000 ನಗದು ಬಹುಮಾನವನ್ನು ಪಡೆದು ಜಿಲ್ಲೆಗೆ ಗೌರವ ತಂದಿದೆ. ಈ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಜಿಲ್ಲೆಗಳಿಂದ ಇಪ್ಪತ್ತು ಹೆಚ್ಚು ತಂಡಗಳು ಭಾಗವಹಿಸಿದ್ದು ಶಿವಮೊಗ್ಗ ಜೆಸಿಐ ಸಹ್ಯಾದ್ರಿ ತಂಡ ಅತ್ಯುತ್ತಮ ಆಟದ ಪ್ರದರ್ಶನ ನೀಡಿ ಅಪಾರ ಜನ ಮೆಚ್ಚಿಗೆ ಪಾತ್ರರಾಗಿ ಚಾಂಪಿಯ ಶಿಪ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಇದೇ ಸಂದರ್ಭದಲ್ಲಿ ಸೂಡಾ ಅಧ್ಯಕ್ಷರಾದ ಸುಂದರೇಶ್ ಅವರು ಮಾತನಾಡುತ್ತಾ ಕ್ರೀಡೆಯಿಂದ ದೈಹಿಕ ಹಾಗು ಮಾನಸಿಕ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಪರಸ್ಪರ ಒಡನಾಟ ಹಾಗೂ ಕ್ರೀಡಾಮನೋಭಾವನೆ ವೃದ್ಧಿಯಾಗುತ್ತದೆ. ಶಿವಮೊಗ್ಗ ಜಿಲ್ಲೆ ಕ್ರೀಡೆಗಳಿಗೆ ಒಂದು ತವರೂರು ಇಲ್ಲಿ ಸಾಕಷ್ಟು ಜನ ರಾಜ್ಯ ರಾಷ್ಟ್ರ ಮಟ್ಟದಲ್ಲಿ ತನ್ನದೇ ಆದ ಚಾಪು ಮೂಡಿಸಿದ್ದಾರೆ ಎಂದು ನುಡಿದರು. JCI and Cultural Club ಇದೇ ಸಂದರ್ಭದಲ್ಲಿ ನಾಗರಿಕ ಹಿತ ರಕ್ಷಣಾ ವೇದಿಕೆಯ ಕೆ ವಿ ವಸಂತ್ ಕುಮಾರ್ ಅವರು ಮಾತನಾಡುತ್ತ ಜೆಸಿಐ ಸಂಸ್ಥೆ ಸಮಾಜ ಮುಖಿಯಾಗಿ ಹಲವಾರು ಗುರುತರ ಸೇವಾ ಯೋಜನೆಗಳನ್ನು ಮಾಡುವುದರ ಮುಖಾಂತರ ಪ್ರಪಂಚಾದ್ಯಂತ ತನ್ನದೇ ಆದ ಹೆಸರು ಗಳಿಸಿದೆ ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಹಾಗು ಕ್ರೀಡೆಗೆ ಒಳ್ಳೆಯ ವಾತಾವರಣವನ್ನು ಕಲ್ಪಿಸಿದೆ ಎಂದು ನುಡಿದರು. ಜೆಸಿಐ ಸಹ್ಯಾದ್ರಿ ಘಟಕದ ಅಧ್ಯಕ್ಷರಾದ ಜೀವಿ ಗಣೇಶ್ ತಮ್ಮ ತಂಡದೊಂದಿಗೆ ಟ್ರೋಫಿ ಹಾಗೂ ನಗದು ಬಹುಮಾನವನ್ನು ಸ್ವೀಕರಿಸಿ ಸಂಭ್ರಮಿಸಿದರು ಸಮಾರಂಭದಲ್ಲಿ ಜೆಸಿ ವಲಯ ಅಧ್ಯಕ್ಷ ಭಾರ್ಗವ್. ಅನುಶ್ ಗೌಡ. ಅಂಜಲಿ ಕಾತರಕಿ ಜೆ ಸಿ ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಉಪಾಧ್ಯಕ್ಷ ಕಿಶೋರ್ ಕುಮಾರ್ ಡಿ.ಶ್ರೀನಾಗ್. ಮೋಹನ್ ಕಲ್ಪತರು. ನವೀನ್ ತಲಾರಿ. ಗಾರಾ ಶ್ರೀನಿವಾಸ್. ಪರಮೇಶ್ವರ್. ಸುದರ್ಶನ್ ತಾಯಿ ಮನೆ. ಸುಗುಣ ಸತೀಶ್. ಪೂರ್ಣಿಮಾ ಸುನಿಲ್
ಉಪಸ್ಥಿತರಿದ್ದರು. ಸಂತೋಷ್ ಕುಮಾರ್ ಬಿಎನ್. ಮ್ಯಾನ್ ಆಫ್ ದಿ ಮ್ಯಾಚ್. ಜೆಸಿಎ ಉಮಾಮಣಿ ಮ್ಯಾನ್ ಆಫ್ ದಿ ಸೀರೀಸ್ ಪ್ರಶಸ್ತಿಗೆ ಬಾಜನರಾಗಿದ್ದಾರೆ.ಜೆಸಿ ಹರ್ಷ. ಜೆಸಿ ಈಶ್ವರ್ ಬೂದಾಳ್ ಜೆಸಿ ಸಿ ಕೆ ವಿಜಯಕುಮಾರ್ . ಜೆಸಿ ಸಿಂಚನ. ಜೆಸಿ ಚಂದ್ರ. ಪ್ರಕಾಶ್ ಬೆಸ್ಟ್ ಬ್ಯಾಟ್ಸ್ಮನ್ ಬೆಸ್ಟ್ ಫೀಲ್ಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.