Thursday, March 5, 2026
Thursday, March 5, 2026
Home Blog Page 350

ಜಂಟಿ ಪರಿಶೀಲನೆ ವೇಳೆ ಅಗತ್ಯ ಮಾಹಿತಿ ನೀಡಿ ಸಹಕರಿಸಿ- ಶಿವಮೊಗ್ಗ‌ ತಹಶೀಲ್ದಾರ್ ‌ಮನವಿ

0

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಡಿ ರಿಸರ್ವ್ ಸಂಬಂಧ ಜಂಟಿ ಸ್ಥಳ ಪರಿಶೀಲನೆಗೆ ಬಂದ ವೇಳೆ ನಿಯೋಜಿತ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ/ದಾಖಲೆ ಒದಗಿಸುವಂತೆ ಶಿವಮೊಗ್ಗ ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಳ ಪತ್ರದನ್ವಯ ಶರಾವತಿ ಮುಳಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಬಿಡುಗಡೆಗಾಗಿ ಅನುಮತಿ ಕೋರಿ ಕೇಂದ್ರ ಸರ್ಕಾರ ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಜಂಟಿ ತನಿಖೆ ಮತ್ತು ಸರ್ವೇ ವರದಿಗೆ ಸೂಚಿಸಿದ್ದು, ಈ ಪೈಕಿ ಶಿವಮೊಗ್ಗ ತಾಲ್ಲೂಕಿನ ಕೆಳಕಂಡ ಗ್ರಾಮ ಹಾಗೂ ಸರ್ವೇ ನಂ ಗಳು ಒಳಗೊಂಡಿರುತ್ತವೆ.
ಚೋರಡಿ ಸ.ನಂ 117, ಕೋಣೆಹೊಸೂರು 23, 22, ತುಪ್ಪೂರು 45, 44, 19, ಕುಂಸಿ 201, ಸಿಂಗನಹಳ್ಳಿ 61, ಕೊರಗಿ 30, ಶಾಂತಿಕೆರೆ 1, ವಡೇರಕೊಪ್ಪ 1, ಶೆಟ್ಟಿಕೆರೆ 1, ಮಂಜರಿಕೊಪ್ಪ 26, 27, 28, 37, 7, ಅನುಪಿನಕಟ್ಟೆ 127, ಹನುಮಂತಾಪುರ 6, ಸೂಡೂರು 16, ದೊಡ್ಡಮತ್ಲಿ 16, ಆಡಿನಕೊಟ್ಟಿಗೆ 17, ಕೂಡಿ 31, 32, 33, 34, ತಾವರೆಕೊಪ್ಪ 24, ಪುರದಾಳು 1, ಮಲೆಶಂಕರ ಎಸ್ ಎಫ್ 1, ಶೆಟ್ಟಿಹಳ್ಳಿ 24, ಚೇತ್ರಶೆಟ್ಟಿಹಳ್ಳಿ 1, 7, 8, 24, 8 ಈ ಗ್ರಾಮಗಳ ಬಾಬ್ತು ಶರಾವತಿ ಪನರ್ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಅರಣ್ಯ ಭೂಮಿಯನ್ನು ಡಿ ರಿಸರ್ವ್ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜಸ್ವ ನಿರೀಕ್ಷಕರ ನೇತೃತ್ವದಲ್ಲಿ ಗ್ರಾಮ ಆಡಳಿತಾಧಿಕಾರಿಗಳು, ಭೂಮಾಪಕರುಗಳು, ಉಪ ವಲಯ ಅರಣ್ಯಾಧಿಕಾರಿಗಳನ್ನೊಳಗೊಂಡ ತಂಡವು ಜಂಟಿ ಸ್ಥಳ ಪರಿಶೀಲನಾ ಕಾರ್ಯವನ್ನು ನಡೆಸುವುದು.
ಈ ವೇಳೆ ಪ್ರಸ್ತಾವನೆಯಲ್ಲಿನ ದಾಖಲೆ, ಸ್ಕೆಚ್, ಜಿಪಿಎಸ್ ದತ್ತಾಂಶಗಳನ್ನು ಆಧರಿಸಿ ಪ್ರಸ್ತಾಪಿತ ಬ್ಲಾಕ್ ಹಾಗೂ ಸ.ನಂ ನಲ್ಲಿರುವ ಬ್ಲಾಕ್‌ನ ಗಡಿ ಹಾಗೂ ವಿಸ್ತೀರ್ಣವನ್ನು ಭೂಮಾಪಕರುಗಳು ಮೋಜಣಿ ಮಾಡಿ ಡಿಜಿಪಿಎಸ್ ದತ್ತಾಂಶಗಳನ್ನು ಸಂಗ್ರಹಿಸಿ ನಂತರ ಬ್ಲಾಕ್ ಗಡಿಯ ಒಳಗಿರುವ ಪ್ರದೇಶದಲ್ಲಿನ ಭೂ ಅನುಭೋಗದಾರರು/ಇವರ ಪರವಾಗಿ ವಾರಸುದಾರರು ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತಾಧಿಕಾರಿಗಳವರ ಸಮ್ಮುಖದಲ್ಲಿ ಸ್ಥಳದಲ್ಲಿ ಹಾಜರಾಗಿ ಭೂ ಅನುಭೋಗದಾರರು ಅನುಭೋಗದಲ್ಲಿರುವ ಪ್ರದೇಶವನ್ನು ತೋರಿಸಿದ ಆಧಾರದ ಮೇಲೆ ಸದರಿಯವರ ಅನುಭೋಗದಲ್ಲಿರುವ ಪ್ರದೇಶದ ಹಾಗೂ ವಿಸ್ತೀರ್ಣವನ್ನು ಮೋಜಣಿ ಮಾಡಿಕೊಂಡು ಡಿಜಿಪಿಎಸ್ ದತ್ತಾಂಶಗಳು ಹಾಗೂ ವಿಸ್ತೀರ್ಣದ ವಿವರಗಳನ್ನು ಸಂಗ್ರಹಿಸಿಕೊಂಡು ನಿಯಮಾನುಸಾರ ಕ್ರಮ ವಹಿಸಲಾಗುವುದು. ಈ ಸಂದರ್ಭದಲ್ಲಿ ನಿಯೋಜಿತ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ/ದಾಖಲೆ ಒದಗಿಸಬೇಕೆಂದು ಅವರು ತಿಳಿಸಿದ್ದಾರೆ.

MESCOM Shivamogga ಏಪ್ರಿಲ್ 5 ರಂದು ಹರಕೆರೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM Shivamogga ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯ ಎನ್.ಟಿ.ರಸ್ತೆಯಲ್ಲಿ ನ್ಯಾಷನಲ್ ಹೈವೆ ಕಾಮಗಾರಿ ನಡೆಯುತ್ತಿರುವುದರಿಂದ 11 ಕೆವಿ. ವಿದ್ಯುತ್ ಮಾರ್ಗ ಸ್ಥಳಾಂತರಿಸುತ್ತಿದ್ದು, ಏ.05 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಜಾನನ ಗ್ಯಾರೇಜ್, ಪೀಲೆ ಫ್ಯಾಕ್ಟರಿ, ಶ್ರೀನಿವಾಸ ಲೇಔಟ್, ಇಲಿಯಾಜ್‌ನಗರ 1 ರಿಂದ 4ನೇ ಅಡ್ಡರಸ್ತೆ, ಹೊಸಹಳ್ಳಿ, ಲಕ್ಷ್ಮೀಪುರ, ರಾಮಿನಕೊಪ್ಪ, ಹೊಸೂರು, ಐಹೊಳೆ, ಭಾರತಿನಗರ, ಶಾರದನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

CM Siddharamaiah ರಾಜ್ಯದಲ್ಲಿ ನಕ್ಸಲ್ ಶರಣಾಗತಿ‌ಗೆ ಪ್ರಮುಖ ಪಾತ್ರವಹಿಸಿದ ನಿರ್ದೇಶಕ ಹೇಮಂತ್ ನಿಂಬಾಳ್ಕರ್ ಅವರಿಗೆ ಪ್ರಶಸ್ತಿ

0

CM Siddharamaiah ರಾಜ್ಯದಲ್ಲಿ ನಕ್ಸಲ್ ಶರಣಾಗತಿ‌ಗೆ ಪ್ರಮುಖ ಪಾತ್ರವಹಿಸಿದ ನಿರ್ದೇಶಕ ಹೇಮಂತ್ ನಿಂಬಾಳ್ಕರ್ ಅವರಿಗೆ ಪ್ರಶಸ್ತಿ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು.

CM Siddharamaiah ರಾಜ್ಯದಲ್ಲಿ ನಕ್ಸಲ್ ಶರಣಾಗತಿ‌ಗೆ ಪ್ರಮುಖ ಪಾತ್ರವಹಿಸಿದ ನಿರ್ದೇಶಕ ಹೇಮಂತ್ ನಿಂಬಾಳ್ಕರ್ ಅವರಿಗೆ ಪ್ರಶಸ್ತಿ 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Rotary Shimoga ಶಿಕ್ಷಕಿ ಜಯಶೀಲಾ ಬಾಯಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

0

Rotary Shimoga ಶಿವಮೊಗ್ಗದ ರಾಜೇಂದ್ರನಗರದಲ್ಲಿರುವ ರೋಟರಿ ಪೂರ್ವ ವಿದ್ಯಾ ಸಂಸ್ಥೆಯು ತನ್ನ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತನಗೆ ಕರೆದು ಕೆಲಸವನ್ನು ಕೊಟ್ಟು, ಮಕ್ಕಳಿಗೆ ಉತ್ತಮ ಬೋಧನೆ ಮಾಡುವ ವಾತಾವರಣವನ್ನು ಒದಗಿಸಿಕೊಟ್ಟು, ತನ್ನ ಜೀವನ ನಿರ್ವಹಣೆಗೆ ಶಾಶ್ವತ ಆಸರೆಯನ್ನು ಕಲ್ಪಿಸಿ, ಶಿಷ್ಯ ಕೋಟಿಯ ಅಚ್ಚುಮೆಚ್ಚಿನ ಶಿಕ್ಷಕಿಯಾಗಿ ಬೆಳೆಯಲು ಅವಕಾಶ ಮಾಡಿಕೊಡುವುದರ ಜೊತೆಗೆ ತನ್ನಲ್ಲಿರುವ ಎಲ್ಲಾ ಪ್ರತಿಭೆಗಳನ್ನು ಗುರುತಿಸಿ ಅದನ್ನು ವೃದ್ಧಿಸಿಕೊಳ್ಳಲು ಅನುವು ಮಾಡಿಕೊಟ್ಟು ಶಿಕ್ಷಕ ವೃತ್ತಿಯಲ್ಲಿ ಸುಮಾರು ೩೭ ವರ್ಷಗಳ ಕಾಲ ಶಿವಮೊಗ್ಗ ನಗರದಲ್ಲಿಯೇ ಕಾರ್ಯನಿರ್ವಹಿಸಲು ಅವಕಾಶ ಕೊಟ್ಟಿರುವುದು ತನಗೆ ಅತ್ಯಂತ ನೆಮ್ಮದಿ ತಂದಿದೆ ಎಂದು ಸೇವೆಯಿಂದ ನಿವೃತ್ತರಾದ ಶ್ರೀಮತಿ ಜಯಶೀಲಾ ಬಾಯಿ ಎಸ್., ಇವರು ಅಭಿಪ್ರಾಯ ಪಟ್ಟರು.

ಅವರು ರೋಟರಿ ಪೂರ್ವ ಎಜುಕೇಷನಲ್ & ಛಾರಿಟಬಲ್ ಟ್ರಸ್ಟ್ (ರಿ.,), ರಾಜೇಂದ್ರನಗರ ಶಿವಮೊಗ್ಗ ಇವರು ತನ್ನ ನಿವೃತ್ತಿ ಸಲುವಾಗಿ ಏರ್ಪಡಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಟ್ರಸ್ಟ್ ವತಿಯಿಂದ ಹಾಗೂ ಇತರ ಸಂಘ ಸಂಸ್ಥೆ, ಸಹದ್ಯೋಗಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರೋಟರಿ ಪೂರ್ವ ವಿದ್ಯಾ ಸಂಸ್ಥೆಯ ಮಾಜಿ ಕಾರ್ಯದರ್ಶಿಯಾಗಿದ್ದ, ರೊ. ಎಂ.ಎನ್. ಸುಂದರ್‌ರಾಜ್ ಇವರು ಮಾತನಾಡಿ, ರೋಟರಿ ಪೂರ್ವ ಕನ್ನಡ ಶಾಲೆಯನ್ನು ಅನುದಾನಕ್ಕೆ ಒಳಪಡಿಸುವಾಗ ತಾನು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಆಗಿದ್ದು, ವಿದ್ಯಾ ಸಂಸ್ಥೆಗೆ ಶಿಕ್ಷಕರಿಂದ ಯಾವ ದೇಣಿಗೆಯನ್ನು ನಿರೀಕ್ಷಿಸದೆ ಶಾಲೆಯನ್ನು ಅನುದಾನಕ್ಕೆ ಒಳಪಡಿಸಿ, ಶ್ರೀಮತಿ ಜಯಶೀಲಾ ಬಾಯಿ ಎಸ್., ಇವರು ಸೇರಿದಂತೆ ಸುಮಾರು ೭ ಮಂದಿ ಶಿಕ್ಷಕರಿಗೆ ಜೀವನ ಮಾರ್ಗ ಕಲ್ಪಿಸಿದ ತೃಪ್ತಿ ತಮಗಿದೆ ಎಂದರು. ಸಮಾರಂಭದಲ್ಲಿ ಪಾಲ್ಗೊಂಡ ಪೇಟ್ರನ್ ಟ್ರಸ್ಟಿ ರೊ. ಕಡಿದಾಳ್ ಗೋಪಾಲ್, ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಅಧ್ಯಕ್ಷ ರೊ. ಅರುಣ್ ದೀಕ್ಷಿತ್, ಕ್ಲಬ್ ಕಾರ್ಯದರ್ಶಿ ರೊ. ಶಶಿಕಾಂತ್ ನಾಡಿಗ್, ಟ್ರಸ್ಟ್ನ ಉಪಾಧ್ಯಕ್ಷರಾದ ರೊ. ಡಾ|| ಪರಮೇಶ್ವರ್ ಡಿ. ಶಿಗ್ಗಾಂವ್, ಟ್ರಸ್ಟ್ನ ಕಾರ್ಯದರ್ಶಿ ರೊ. ರಾಮಚಂದ್ರ ಎಸ್.ಸಿ., ಖಜಾಂಚಿ ರೊ. ವಿಜಯ್ ಕುಮಾರ್, ಜಂಟಿ ಕಾರ್ಯದರ್ಶಿ ರೊ. ನಾಗವೇಣಿ ಎಸ್.ಆರ್., ಬೋಡ್ ಆಫ್ ಟ್ರಸ್ಟಿ ರೊ. ರವಿಶಂಕರ್ ಕೆ.ಬಿ., ಟ್ರಸ್ಟಿ ರೊ. ಆದಿಮೂರ್ತಿ ಹೆಚ್.ಬಿ., ಹಾಗೂ ಹಲವಾರು ರೋಟರಿ ಮುಖಂಡರು ಶ್ರೀಮತಿ ಜಯಶೀಲಾ ಬಾಯಿ ಎಸ್., ಇವರ ಕಾರ್ಯಧಕ್ಷತೆಯನ್ನು ಪ್ರಶಂಶಿಸಿದರು.

ಜೊತೆಗೆ ಅವರ ಸಹದ್ಯೋಗಿಗಳಾಗಿದ್ದ, ಶ್ರೀಮತಿ ಸುಲೋಚನ, ಶ್ರೀಮತಿ ವಿಶಾಲಾಕ್ಷಮ್ಮ, ಶ್ರೀಮತಿ ಮೀನಾಕ್ಷಮ್ಮ, ಶ್ರೀ ಮಹಾಬಲೇಶ್ವರ್ ಎ.ಎಸ್., ಶ್ರೀ ಬಸವರಾಜ್ ಸಿ., ಶ್ರೀ ಸೂರ್ಯನಾರಾಯಣ್ ಆರ್. ಮುಂತಾದವರು ಸನ್ಮಾನಿತರ ಗುಣಗಾನ ಮಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ನಿವೃತ್ತ ಡಿ.ಪಿ.ಐ. ರೊ. ಚಂದ್ರಶೇಖರಯ್ಯ ಎಂ., ಇವರು ಮಾತನಾಡುತ್ತಾ, ಆರೋಗ್ಯ ಸಂಸ್ಥೆಗಳನ್ನು ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ರೋಟರಿ ಸಂಸ್ಥೆಯು ತನ್ನ ದಾಪುಗಾಲುಗಳನ್ನು ಇಟ್ಟಿದ್ದು, ಅಂತರರಾಷ್ಟ್ರೀಯ ರೋಟರಿ ಜಿಲ್ಲೆಯಾದ್ಯಂತ ಅನೇಕ ಆರೋಗ್ಯ ಕೇಂದ್ರಗಳನ್ನು ಹಾಗೂ ಶಾಲೆಗಳನ್ನು ನಡೆಸುತ್ತಿದೆ. ಅಂತೆಯೇ ರೋಟರಿ ಶಿವಮೊಗ್ಗ ಪೂರ್ವದಲ್ಲಿಯೂ ಸುಮಾರು ೪೦ ವರ್ಷಗಳಿಂದ ರೋಟರಿ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಗಳನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುತ್ತಿದೆ. ಇತರ ಎಲ್ಲಾ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಂತೆ ಈ ಶಾಲೆಯಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗಿದ್ದರಿಂದ ಅದನ್ನು ಮುಚ್ಚಬೇಕಾಗಿ ಬಂದಿದ್ದರೂ ಶಿಕ್ಷಕರಿಗೆ ತೊಂದರೆಯಾಗದಂತೆ ಪರಿಯಾಯ ವ್ಯವಸ್ಥೆಯನ್ನು ಇಲಾಖೆಯಿಂದ ಮಾಡಿಸಲಾಗಿದೆ. ಶ್ರೀಮತಿ ಜಯಶೀಲಾ ಬಾಯಿ ಇವರು ಉತ್ತಮ ಶಿಕ್ಷಕಿಯಾಗಿದ್ದು, ಶಾಲೆಯ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣಕರ್ತರಾಗಿರುವುದರ ಜೊತೆಗೆ ತನ್ನ ಸ್ವಂತ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸಿರುವುದು ಸಂತೋಷದ ವಿಷಯ ಎಂದು ಶ್ಲಾಘಿಸಿದರು. ಜೊತೆಗೆ ಅವರ ಅನೇಕ ಸಹದ್ಯೋಗಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭಕ್ಕೆ ಆಗಮಿಸಿ ಅವರ ಬಗ್ಗೆ ಮೆಚ್ಚುಗೆ ಮಾತನಾಡಿರುವುದರ ಜೊತೆಗೆ ಅವರಿಗೆ ಸ್ಮರಣಿಕೆಗಳನ್ನು ನೀಡಿರುವುದು ಸ್ತುತ್ಯಾರ್ಹ ಸಂಗತಿ ಎಂದರು.

ಆಡಳಿತ ಮಂಡಳಿ ಹಾಗೂ ನೆರೆದ ಎಲ್ಲಾ ಸಭಿಕರಿಗೆ ಭೋಜನ ವ್ಯವಸ್ಥೆ ಮಾಡಿರುವ ಶ್ರೀಮತಿ ಜಯಶೀಲಾ ಬಾಯಿ ಎಸ್. & ಮಕ್ಕಳಿಗೆ ಟ್ರಸ್ಟ್ ವತಿಯಿಂದ ಕೃತಜ್ಞತೆ ಸಲ್ಲಿಸಿದರು.

CM Siddharamaiah ನವದೆಹಲಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಂದ ನೂತನ ಕಟ್ಟಡ ಕರ್ನಾಟಕ ಭವನ -1 (ಕಾವೇರಿ) ಉದ್ಘಾಟನೆ

0

CM Siddharamaiah ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತಾಶ್ರಯಯದಲ್ಲಿ ಆಯೋಜಿಸಿರುವ ನವದೆಹಲಿಯಲ್ಲಿ ನಿರ್ಮಿಸಿರುವ ಕರ್ನಾಟಕ ಭವನ -1 (ಕಾವೇರಿ) ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಆಹ್ವಾನಿತರಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸಿದ್ದರು.

ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಾನ್ಯ ಸಮಾಜಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು, ಮಾನ್ಯ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳಾದ-I ಟಿ.ಬಿ.ಜಯಚಂದ್ರ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಗಳಾದ-II ಪ್ರಕಾಶ ಬಾಬಣ್ಣ ಹುಕ್ಕೇರಿ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದರು.

CM Siddharamaiah ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಾರ್ಯಕ್ರಮದಲ್ಲಿ ಗಣ್ಯರನ್ನು ಸ್ವಾಗತಿಸಿದರು .
ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿ, ಸಕಾರದ ಪ್ರಧಾನ ಕಾರ್ಯದರ್ಶಿಗಳು, ಸರ್ಕಾರದ ಕಾರ್ಯದರ್ಶಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು.

S.N. Chennabasappa ಶಾಸಕ ಚೆನ್ನಿ ಅವರಿಂದ ಶಿವಮೊಗ್ಗ ವಾರ್ಡ್‌ 21 ಕ್ಕೆ ಭೇಟಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನ

0

S.N. Chennabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಮಹಾನಗರ ಪಾಲಿಕೆ, ಜಲ ಮಂಡಳಿ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇಂಜಿನಿಯರ್‌ಗಳೊಂದಿಗೆ ವಾರ್ಡ್ ನಂ. 21 ತಿಲಕ್ ನಗರ ಬಡಾವಣೆಗೆ ಭೇಟಿ ನೀಡಿ, ಅಲ್ಲಿನ ನೀರಿನ ಸಮಸ್ಯೆ ಕುರಿತು ಸ್ಥಳೀಯ ನಿವಾಸಿಗಳಿಂದ ನೇರವಾಗಿ ಮಾಹಿತಿ ಪಡೆದರು.

ಬೇಸಿಗೆಯಲ್ಲಿ ನೀರಿನ ಸೊರಬರಾಜು ಅತ್ಯಂತ ಅವಶ್ಯಕವಾಗಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಸ್ಥಳೀಯ ನಿವಾಸಿಗಳಿಗೆ ಸ್ಪಂದಿಸಿ, ಶೀಘ್ರದಲ್ಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N. Chennabasappa ಈ ಸಂದರ್ಭದಲ್ಲಿ ಪರ್ಫೆಕ್ಟ್ ಅಲಾಯ್ ನ ಮಾಲೀಕರಾದ ವಸಂತ ಕೃಷ್ಣ ದಿವೇಕರ್, ಪಕ್ಷದ ಮುಖಂಡರು, ವಾರ್ಡ್ ನ ಪ್ರಮುಖರು ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Shivamogga Municipal Corporation ಹಂದಿ ತೆರವು ಮಾಡಲು ಸಾಕಾಣಿಕೆ ಮಾಲೀಕರಿಗೆ ನಗರಪಾಲಿಕೆ ನೋಟೀಸ್

0

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀಡಾಡಿ ಹಂದಿಗಳು ಹೆಚ್ಚಾಗಿದ್ದು, ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಸಾರ್ವಜನಿಕರು ಹಂದಿ ಸಾಕಾಣಿಕೆ ಮಾಲೀಕರ ವಿರುದ್ಧ ಉಪಲೋಕಾಯುಕ್ತರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ದೂರು ನೀಡಿರುತ್ತಾರೆ.

Shivamogga Municipal Corporation ಹಂದಿ ಸಾಕಾಣಿಕೆ ಮಾಡಬಾರದೆಂದು ನಿರ್ದೇಶಿಸಿ ಪಾಲಿಕೆಯು ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಂದಿ ಮಾಲೀಕರು ಯಾವುದೇ ರೀತಿಯ ಕ್ರಮವಹಿಸಿರುವುದಿಲ್ಲ. ಪಾಲಿಕೆ ಆಯುಕ್ತರ ಅನುಮತಿ ಇಲ್ಲದೆ ಹಂದಿಗಳನ್ನು ಸಾಕುತ್ತಿರುವುದು ಕ.ಪೌ.ನಿ.ಅಧಿನಿಯಮ 1976 ಕಲಂ 344 ಮತ್ತು 345ರನ್ವಯ ಕಾನೂನು ಬಾಹಿರವಾಗಿದ್ದು, ನಗರ ವ್ಯಾಪ್ತಿಯಲ್ಲಿ ಹಂದಿಗಳನ್ನು ಸಾಕಿದ್ದಲ್ಲಿ ತಮ್ಮ ಎಲ್ಲಾ ಹಂದಿಗಳನ್ನು 3 ದಿನಗಳೊಳಗೆ ಖಾಲಿ ಮಾಡತಕ್ಕದ್ದು, ತಪ್ಪಿದ್ದಲ್ಲಿ ನಗರ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಬೀಡಾಡಿ ಹಂದಿಗಳೆAದು ಪರಿಗಣಿಸಿ ಸಾರ್ವಜನಿಕರ ಹಿತಾಸಕ್ತಿಯ ಮೇರೆಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇದರಿಂದ ಆಗುವ ಯಾವುದೇ ನಷ್ಟಕ್ಕೆ ಪಾಲಿಕೆ ಜವಾಬ್ದಾರರಲ್ಲ ಎಂದು ಪಾಲಿಕೆ ಆಯುಕ್ತರು ಹಂದಿ ಸಾಕಾಣಿಕೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

Shivaganga Yoga Center ಯೋಗ ಪ್ರಾಣಾಯಾಮ ಧ್ಯಾನ ಆರೋಗ್ಯ‌ ರಕ್ಷಣೆಯಲ್ಲಿ ಅತ್ಯಂತ ಪರಿಣಾಮಕಾರಿ- ಡಾ.ಸಿ.ವಿ. ರುದ್ರಾರಾಧ್ಯ

0

Shivaganga Yoga Center ನಮ್ಮ ಒತ್ತಡದ ಬದುಕಿನಲ್ಲಿ ನಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಲು ಉತ್ತಮ ಜೀವನ ಶೈಲಿ ಆರೋಗ್ಯ ಪದ್ಧತಿ ಜೊತೆಗೆ ಯೋಗ ಪ್ರಾಣಾಯಾಮ ಧ್ಯಾನ ಅತ್ಯಂತ ಪರಿಣಾಮಕಾರಿಯಾಗಿ ನಮ್ಮ ಆರೋಗ್ಯವನ್ನು ಸಂರಕ್ಷಿಸುತ್ತದೆ ಎಂದು ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾ. ಸಿ. ವಿ. ರುದ್ರಾರಾಧ್ಯ ರವರು ಅಭಿಮತ ವ್ಯಕ್ತಪಡಿಸಿದರು.

ಅವರು ಶಿವಗಂಗಾ ಯೋಗ ಕೇಂದ್ರದ ರಾಘವ ಶಾಖೆಗೆ ಭೇಟಿ ನೀಡಿ ಶಿಬಿರಾರ್ಥಿಗಳನ್ನ ಕುರಿತು ಮಾತನಾಡಿದರು ಯೋಗ ಹಾಗೂ ಪ್ರಾಣಾಯಾಮ ಧ್ಯಾನದಿಂದ ಮನುಷ್ಯನಿಗೆ ದೈಹಿಕ ಮಾನಸಿಕ ಹಾಗೂ ಆಧ್ಯಾತ್ಮಿಕ ಮತ್ತು ಬೌದ್ಧಿಕ ಜೊತೆಗೆ ಮನಃಶಾಂತಿ ಲಭಿಸುತ್ತದೆ ಎಂದು ನುಡಿದರು.

ಪ್ರತಿನಿತ್ಯ ಒಂದು ಗಂಟೆಗಳ ಕಾಲ ನಾವು ಯೋಗವನ್ನು ಮಾಡುವುದರಿಂದ ನೂರಾರು ಲಾಭಗಳಿವೆ. ನಮ್ಮ ದೈಹಿಕ ಚಟುವಟಿಕೆಗಳಲ್ಲಿ ಸದಾ ಉತ್ಸಾಹ ಲವಲವಿಕೆ ಹಾಗೂ ಮುಖದಲ್ಲಿ ಕಾಂತಿ ಹೆಚ್ಚಿಸುತ್ತದೆ. ಪ್ರತಿಯೊಬ್ಬರು ಯೋಗವನ್ನು ಮಾಡುವುದರ ಮುಖಾಂತರ ರೋಗವನ್ನು ಮುಂದೂಡಬಹುದು. ಶಿವಮೊಗ್ಗ ನಗರದಲ್ಲಿ 34 ಕಡೆ ಉಚಿತವಾಗಿ ಯೋಗ ಪ್ರಾಣಯಾಮ ಧ್ಯಾನದ ತರಗತಿಗಳು ನಡೆಯುತ್ತಲಿದ್ದು ವಿಶೇಷವಾಗಿ ಈ ಬೇಸಿಗೆಯಲ್ಲಿ 21 ದಿನಗಳ ಶಿಬಿರಗಳನ್ನು ಸಹ ಆಯೋಜನೆ ಮಾಡುತ್ತಿದ್ದೇವೆ. ಇದರ ಸದುಪಯೋಗವನ್ನು ಸಾರ್ವಜನಿಕರು ಹಾಗೂ ನಮ್ಮ ಶಿಬಿರಾರ್ಥಿಗಳು ಪಡೆದುಕೊಳ್ಳಬೇಕು ಎಂದು ನುಡಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕೆ ವಿಶೇಷವಾದ ಸ್ಥಾನಮಾನವಿದೆ ಔಷಧಿಯಿಂದ ಗುಣಪಡಿಸಲಾಗದ ಕಾಯಿಲೆಗಳಿಗೆ ಯೋಗದಿಂದ ಪರಿಹಾರವನ್ನು ಕಂಡುಕೊಳ್ಳಬಹುದು. ಬ್ರಾಹ್ಮಿ ಮುಹೂರ್ತದಲ್ಲಿ ಮಾಡುವ ಈ ಯೋಗ ನಮ್ಮಲ್ಲಿ ಸಕಾರಾತ್ಮಕ ಭಾವನೆಯನ್ನು ಮೂಡಿಸುತ್ತದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಟ್ರಸ್ಟಿಗಳಾದ ಹೆಚ್. ಎಂ. ಚಂದ್ರಶೇಖರಯ್ಯನವರು ಮಾತನಾಡುತ್ತಾ ಯೋಗ ಮಾಡುವುದರಿಂದ ದೇಹದಲ್ಲಿ ರಕ್ತ ಸಂಚಲನೆ ಚೆನ್ನಾಗಿ ಆಗುವುದರಿಂದ ಹೃದಯಘಾತದ ಪ್ರಮಾಣ ಕಡಿಮೆ ಇದರಿಂದ ಖಿನ್ನತೆ ಹಾಗೂ ಬೇಸರ ದೂರವಾಗುತ್ತದೆ ಆದ್ದರಿಂದ ಯೋಗವನ್ನು ಮನೆ ಮನೆಗೆ ಎಲ್ಲಾ ಮನಸ್ಸುಗಳಿಗೆ ತಲುಪಿಸುವಂತಹ ಕೆಲಸ ನಮ್ಮಿಂದ ಆಗಬೇಕು ಎಂದು ಕರೆ ನೀಡಿದರು.

ರಾಘವ ಶಾಖೆಯ ಯೋಗ ಶಿಕ್ಷಕರಾದ ಜಿ.ಎಸ್. ಓಂಕಾರ್ ವರು ಮಾತನಾಡುತ್ತಾ. ನಗರದಲ್ಲಿ ಉಚಿತವಾಗಿ ನಡೆಸುತ್ತಿರುವ ತರಗತಿಗಳಲ್ಲಿ ಯೋಗ ಪ್ರಾಣಯಾಮ ಸಾವಿರಾರು ಜನರು ಪ್ರತಿನಿತ್ಯ ಅಭ್ಯಾಸ ಮಾಡುತ್ತಿರುವುದು ನಮ್ಮ ಸಂಸ್ಥೆಗೆ ಒಂದು ಹೆಮ್ಮೆ ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕರಾಗ ವಿಜಯ ಕೃಷ್ಣ, ಸುಜಾತಾ ಮಧುಕೇಶ್ವರ್, ಹರೀಶ್, ಆನಂದ್ ಗಾಯತ್ರಿ ಅಶೋಕ್, ವಿಜಯಕುಮಾರ್, ಜಿ ನರಸೋಜಿ ರಾವ್, ಶಂಕರ್, ಶ್ರೀನಿವಾಸ್, ಸತೀಶ್ ಸುಬ್ರಮಣಿ,ಮಹೇಶ್, ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Government First Grade College ಹೊಳೆ ಹೊನ್ನೂರಿನಲ್ಲಿ ಏಪ್ರಿಲ್ 4 ರಂದು “ಬೌದ್ದಿಕ ಆಸ್ತಿ‌ ಹಕ್ಕು” ಕಾರ್ಯಾಗಾರ

0

Government First Grade College ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಳೆಹೊನ್ನೂರು, ಭದ್ರಾವತಿ ತಾಲ್ಲೂಕು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಆಯೋಜಿಸುವ ‘ಬೌದ್ದಿಕ ಆಸ್ತಿ ಹಕ್ಕು : ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರ’ವನ್ನು ಏ.04 ರ ಬೆಳಿಗ್ಗೆ 10 ಕ್ಕೆ ಹೊಳೆಹೊನ್ನೂರಿನ ಸರ್ಕಾರಿ ಪ್ರ.ದ.ಕಾಲೇಜಿನ ಹೊನ್ನಸಿರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಇವರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ಸಿಡಿಸಿ ಅಧ್ಯಕ್ಷರಾದ ಶಾರದಾ ಪರ‍್ಯಾನಾಯ್ಕ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿಯ ಜಂಟಿ ನಿರ್ದೇಶಕ ಪ್ರೊ.ಕೇಶವ ಹೆಚ್, ಪರಿಸರ ತಜ್ಞರಾದ ಪ್ರೊ.ಬಿ.ಎಂ ಕುಮಾರಸ್ವಾಮಿ, ಬಂಧನ್ ಬ್ಯಾಂಕ್‌ನ ವ್ಯವಸ್ಥಾಪಕ ಪ್ರಕಾಶ್ ಎಂ ಪಾಲ್ಗೊಳ್ಳುವರು.

Government First Grade College ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರತಿಭಾ ಕೆ ಆರ್ ಅಧ್ಯಕ್ಷತೆ ವಹಿಸುವರು.
ಹಾಸನದ ಸರ್ಕಾರಿ ಕಾನೂನು ಕಾಲೇಜಿನ ಸಹ ಪ್ರಾಧ್ಯಾಪಕರಾದ ಅರುಂಧತಿ ಭಾರತದಲ್ಲಿ ಬೌದ್ದಿಕ ಆಸ್ತಿ ಹಕ್ಕು ಕುರಿತು ಹಾಗೂ ಎಸ್‌ಸಿಕೆ ಅಸೋಸಿಯೇಟ್ಸ್ನ ಐಪಿ ಅಟಾರ್ನಿ ಸಾಧ್ವಿ ಸಿ ಕಾಂತ್ ಬೌದ್ದಿಕ ಆಸ್ತಿ ಹಕ್ಕು ಮತ್ತು ಸಂಶೋಧನೆಗಳ ಕುರಿತು ಮಾತನಾಡುವರು. ಐಕ್ಯುಸಿ ಸಂಚಾಲಕರಾದ ಡಾ.ಭಾರತಿ ದೇವಿ ಪಿ, ಡಾ ಆಸ್ಮಾ ಮೇಲಿನಮನಿ, ಸಂಘಟನಾ ಸಮಿತಿ ಸದಸ್ಯರು, ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಪಾಲ್ಗೊಳ್ಳುವರು.

CM Siddharamaiah ರಾಜ್ಯಕ್ಕೆ ರಾಷ್ಡ್ರೀಯ ಹೆದ್ದಾರಿ ಸಂಪರ್ಕ ಜಾಲ‌ ವೃದ್ಧಿಗೆ ಸಹಕಾರ ನೀಡಿದ ಸಚಿವ‌‌ ಗಡ್ಕರಿ ಅವರಿಗೆ‌ ಸಿದ್ಧರಾಮಯ್ಯ ಅಭಿನಂದನೆ

0

CM Siddharamaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು.

ಪತ್ರದ ವಿವರ:

ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ ರಾಜ್ಯದ ಪರವಾಗಿ ಅಭಿನಂದಿಸುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಮಂಜೂರಾಗಿರುವ ಕೆಳಕಂಡ ಪ್ರಮುಖ ಯೋಜನೆಗಳ ವಿವರ ಇಂತಿದೆ.

  1. ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಮೈಸೂರು ನಗರ)ದಲ್ಲಿ ಫ್ಲೈಓವರ್ ನಿರ್ಮಾಣ.
  2. 30.35 ಕಿ.ಮೀ. ಉದ್ದದ ಹುಬ್ಬಳ್ಳಿ ಧಾರವಾಡ ಷ್ಟಪಥ ಬೈಪಾಸ್ ನಿರ್ಮಾಣ
  3. ರಾ.ಹೆ 369 ಇ( ಸಿಗಂದೂರು ಸೇತುವೆ) ರಲ್ಲಿ ಶರಾವತಿ ಹಿನ್ನೀರಿನ ಮೇಲೆ ಪ್ರಮುಖ ಸೇತುವೆ ನಿರ್ಮಾಣ.
  4. ರಾ.ಹೆ.167 ಹಗರಿ-ಜೆಡ್ಚೆರ್ಲಾ ಸೆಕ್ಷನ್ ನಲ್ಲಿ ಕೃಷ್ಣಾ ನದಿ ಮೇಲೆ 180.865 ಕಿ.ಮೀ.ನಲ್ಲಿ ಪ್ರಮುಖ ಸೇತುವೆ ನಿರ್ಮಾಣ.
  5. ಹೊಸಪೇಟೆ ಯಿಂದ ಬಳ್ಳಾರಿ ಸೆಕ್ಷನ್ ನ ಹಳೆಯ ರಾ.ಹೆ-63(ಹೊಸ ರಾ.ಹೆ-67) ನ ಕಿ.ಮಿ.340+640 (ಬಳ್ಳಾರಿ ನಗರ ಮಿತಿಯಲ್ಲಿನ ಸುಧಾ ಕ್ರಾಸ್) ನಲ್ಲಿ LC-110E ಬದಲಿಗೆ 2-ಲೇನ್ ROB ನಿರ್ಮಾಣ.
  6. ರಾ.ಹೆ.150ಎ ರಲ್ಲಿನ ಸಿಂದಿಗೆರಿ-ಬಳ್ಳಾರಿ ಸೆಕ್ಷನ್ನ ಕಿ.ಮೀ.235.00 ರಿಂದ 254.800ವರೆಗೆ Two Lane with Paved Shoulders ಗೆ ಅಗಲೀಕರಣ ಯೋಜನೆ.

CM Siddharamaiah ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ.

10,000 ಪಿ.ಯು.ಸಿ ಗಿಂತಲೂ ಸಂಚಾರ ತೀವ್ರತೆ ಹೆಚ್ಚಿರುವ ಇರುವ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಾಜ್ಯದ ಸಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಈ ಕೆಳಕಂಡ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವರಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

  1. ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ -275ರಲ್ಲಿ 9 ಗ್ರೇಡ್ ಸಪರೇಟರ್ಗಳ ನಿರ್ಮಾಣ.
  2. ರಾಷ್ಟ್ರೀಯ ಹೆದ್ದಾರಿ -75 ( ಹಳೆಯ ರಾ.ಹೆ 48) ರ ಶಿರಾಡಿ ಘಾಟ್ ನ 237+000 ರಿಂದ 263+000 ( ಮಾರನಹಳ್ಳಿಯಿಂದ ಅಡ್ಡಹೊಳೆ ಸೆಕ್ಷನ್) ವರೆಗೆ ಸುರಂಗ ನಿರ್ಮಾಣ ಮಾಡುವ ಮೂಲಕ ಮಂಗಳೂರು ಬಂದರು (ದೇಶದ 7 ನೇ ಅತಿ ದೊಡ್ಡ ಬಂದರು) ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ ಸಂಪರ್ಕವನ್ನು ಸುಧಾರಿಸುವುದು.
  3. ಪುಣೆ- ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ನ್ನು ಶೀಘ್ರವಾಗಿ ಮಂಜೂರು ಮಾಡುವುದು.
  4. ಮುಂಬರಲಿರುವ ವಾರ್ಷಿಕ ಯೋಜನೆ 20205-26 ರಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು 24000 ಕೋಟಿಗಳಿಗೆ ಹೆಚ್ಚಿಸಿ ಇಮಂಜೂರು ಮಾಡುವುದು.
  5. ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ.
  6. ತಾತ್ವಿಕವಾಗಿ ಘೋಷಿತವಾಗಿರುವ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಆದ್ಯತೆ ಮೇಲೆ ಮೇಲ್ದರ್ಜೆಗೇರಿಸುವುದು.
  7. ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗದ ನಿರ್ಮಾಣ ( ರಾ.ಹೆ- 275) ಮತ್ತು ಹೊಸೂರು ರಸ್ತೆ ( ರಾ.ಹೆ-48 ಮತ್ತು ರಾ.ಹೆ-75) ( ಎಲೆಕ್ಟ್ರಾನಿಕ್ ಸಿಟಿ) ಮಾರ್ಗವಾಗಿ ತುಮಕೂರು ರಸ್ತೆ (ರಾ.ಹೆ-48), ಬಳ್ಳಾರಿ ರಸ್ತೆ ( ರಾ.ಹೆ-44) ಮತ್ತು ಹಳೆ ಮದ್ರಾಸು ರಸ್ತೆ ( ಹಳೆ ರಾ.ಹೆ -4)
  8. ಬೆಳಗಾವಿ ನಗರ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಬೆಳಗಾವಿ ನಗರದ ರಾ.ಹೆ-4 ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ
  9. ಕಲಬುರ್ಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವುದು.
  10. ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ರಾ.ಹೆ 150ಎ ( ಜೇವರ್ಗಿ- ಚಾಮರಾಜನಗರ ವಿಭಾಗ) ರಲ್ಲಿ ಭೀಮರಾಯನಗುಡಿ ಮತ್ತು ಶಹಪುರ ಪಟ್ಟಣ ಕ್ಕೆ 2 ಎಲ್+ ಪಿಎಸ್ ಗ್ರೀನ್ ಫೀಲ್ಡ್ ಸಂಯೋಜಿತ ಬೈಪಾಸ್ ನಿರ್ಮಾಣ
  11. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ರಾ.ಹೆ-752ಕೆ ನಿಂದ ರಾ.ಹೆ -65 ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು
  12. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ದೇವಲ್ ಗಾಣಗಾಪುರದಿಂದ ಪಂಡರಾಪುರವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು ಈ ಎಲ್ಲಾ ಪ್ರಸ್ತಾವನೆಗಳನ್ನು ಪರಿಗಣಿಸಿ ಮಂಜೂರಾತಿಗಳನ್ನು ನೀಡಲು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಪತ್ರದಲ್ಲಿ ಕೋರಿದ್ದಾರೆ.