Friday, March 6, 2026
Friday, March 6, 2026
Home Blog Page 358

DVS College of Arts, Science and Commerce ಯುವ ವಿದ್ಯಾರ್ಥಿಗಳು ಸಂಶೋಧಾನಸಕ್ತಿ ಬೆಳೆಸಿಕೊಳ್ಳಬೇಕು- ಡಾ.ಸತೀಶ್ ಕುಮಾರ್ ಶೆಟ್ಟಿ

0

DVS College of Arts, Science and Commerce ಯುವ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ, ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ “ಸಂಶೋಧನಾ ಕಿರುಪ್ರಬಂಧ ಬರೆಯುವ ಪರಿಕಲ್ಪನೆಗಳು ಮತ್ತು ವಿಧಾನಗಳು” ಕುರಿತ ವಿಶೇಷ ಉಪನ್ಯಾಸ ಉದ್ಘಾಟಿಸಿ ಮಾತನಾಡಿ, ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸಲು ಅವಕಾಶಗಳಿದ್ದು, ವಿದ್ಯಾರ್ಥಿಗಳು ಹೊಸ ಅವಕಾಶಗಳ ಬಗ್ಗೆ ಸದಾ ಪ್ರಯತ್ನ ನಡೆಸಬೇಕು ಎಂದು ತಿಳಿಸಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ವಿದ್ಯಾರ್ಥಿಗಳು ಸಂಶೋಧನೆ ನಡೆಸುವಾಗ ಸ್ಪಷ್ಟ ಮಾಹಿತಿ ಹೊಂದಿರಬೇಕು. ನೈಜ ಅಂಶಗಳನ್ನು ಒಳಗೊಂಡು ಸಂಶೋಧನೆ ಕೈಗೊಳ್ಳಬೇಕು. ವಸ್ತುನಿಷ್ಠವಾಗಿ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

DVS College of Arts, Science and Commerce ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಮಧು.ಜಿ. ಮಾತನಾಡಿ, ದೇಶದ ಪ್ರಗತಿಯಲ್ಲಿ ಸಂಶೋಧನಾ ಕ್ಷೇತ್ರದ ಪಾತ್ರ ಅಪಾರವಾಗಿರುತ್ತದೆ. ದೇಶದ ಪ್ರಗತಿ ಸಾಧಿಸಲು ಸಂಶೋಧನೆಯು ಮೂಲ ವಿಷಯ ಆಗಿರುತ್ತದೆ. ಆದ್ದರಿಂದ ಯುವ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಿ ಮುಂದುವರೆಯಬೇಕು. ನಿಮ್ಮ ಆಸಕ್ತ ಕ್ಷೇತ್ರದಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ಇತಿಹಾಸ ವಿಭಾಗದ ಮುಖ್ಯಸ್ಥೆ ರೂಪಾ.ಎಂ., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಆರ್.ಸುರೇಶ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪರಮೇಶ್.ಜಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

Red Cross Organization ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ಗಳನ್ನ ಕೊಡುಗೆ ನೀಡಿದ ರೆಡ್ ಕ್ರಾಸ್ ಸಂಸ್ಥೆ

0


Red Cross Organization ಪ್ರತಿನಿತ್ಯ ರಸ್ತೆಯಲ್ಲಿ ಹಾಗೂ ಬೇರೆ ಬೇರೆ ಕಾರ್ಯಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರಿಗೆ ಮತ್ತು ಟ್ರಾಫಿಕ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಸಿಬ್ಬಂದಿಯವರಿಗೆ ಶಿವಮೊಗ್ಗ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ 50 ಸಾವಿರ ಮಾಸ್ಕಗಳನ್ನು ಜಿಲ್ಲಾ ರಕ್ಷಣಾಧಿಕಾರಿಯಾದ ಶ್ರೀ ಮಿಥನ್ ಕುಮಾರ್ ಮತ್ತು ಹೆಚ್ಚುವರಿ ರಕ್ಷಣಾಧಿಕಾರಿಯಾದ ಅನಿಲ್ ಭೂಮರೆಡ್ಡಿ ಇವರ ಮುಖಾಂತರ ಹಸ್ತಾಂತರಿಸಲಾಯಿತು. Red Cross Organization ಈ ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಚೇರ್ಮನ್ ಎಸ್ಪಿ ದಿನೇಶ್ ಕಾರ್ಯದರ್ಶಿ ಡಾಕ್ಟರ್ ದಿನೇಶ್. ನಿರ್ದೇಶಕರಾದ ನವೀನ್ ಮತ್ತು ರೆಡ್ ಕ್ರಾಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು

MESCOM ಹೊನ್ನವಿಲೆ ಸುತ್ತಮುತ್ತ ಮಾರ್ಚ್ 28 ರಂದು ವಿದ್ಯುತ್ ಸರಬರಾಜು‌ ವ್ಯತ್ಯಯ

0

MESCOM ಮಾಚೇನಹಳ್ಳಿ 110/11 ಕೆವಿ ವಿ.ವಿ.ಕೇಂದ್ರದ ಎಂಸಿ.ಎಫ್-18 ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 28 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

MESCOM ಮಾರ್ಚ್ 28 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು‌ ವ್ಯತ್ಯಯ

0

MESCOM ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಎಪಿಎಂಸಿ ಮಾರುಕಟ್ಟೆ, ಆರ್.ಎಂ.ಸಿ. ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Karnataka German Technical Training Institute ಅಲೆಮಾರಿ/ ಆದಿವಾಸಿ ಅರ್ಹ ವಿದ್ಯಾವಂತ ‌ನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ಧಿ ‌ತರಬೇತಿಗೆ ಅರ್ಜಿ ಆಹ್ವಾನ

0

Karnataka German Technical Training Institute 2024-25 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ(ತಾಂತ್ರಿಕ ನೈಪುಣ್ಯತೆ) ತರಬೇತಿಯನ್ನು ನೀಡಲು ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಬೆಂಗಳೂರು ಇವರ ಪ್ರಾದೇಶಿಕ ಕೆಜಿಟಿಟಿಐ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ ತರಬೇತಿ ನೀಡಲಾಗುವುದು. ಅರ್ಹ ವಿದ್ಯಾವಂತ ನಿರುದ್ಯೋಗ ಯುವಕ/ಯುವತಿಯರು ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ಇಲ್ಲಿ ಮತ್ತು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮೂಲಕ ಆಫ್‌ಲೈನ್‌ನಲ್ಲಿ ಏ.5 ರೊಳಗೆ ಸಲ್ಲಿಸಬಹುದು.

Karnataka German Technical Training Institute ಸೆಲ್ಫ್ ಎಂಪ್ಲಾಯ್ಡ್ ಟೈಲರಿಂಗ್ 2 ತಿಂಗಳ ಅವಧಿಯ ತರಬೇತಿ, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ 2 ತಿಂಗಳು, ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ 2 ತಿಂಗಳು, ಫ್ಯಾಷನ್ ಡಿಸೈನರ್ 1 ತಿಂಗಳ ಅವಧಿಯ ತರಬೇತಿಯನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Prerana Associations in Shimoga ಶಿವಮೊಗ್ಗ ರವೀಂದ್ರ ನಗರ ಪ್ರೇರಣ ಮಹಿಳಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

0

Prerana Associations in Shimoga ಶಿವಮೊಗ್ಗ ರವೀಂದ್ರ ನಗರ ಪ್ರೇರಣ ಮಹಿಳಾ ಸಂಘದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ಶಕುಂತಲ ಹವಳದ, ಗೌರವಾಧ್ಯಕ್ಷರಾಗಿ ಶ್ರೀಮತಿ ಶಶಿ ಎಂ ಶಂಕರ, ಕಾರ್ಯದರ್ಶಿಯಾಗಿ ಶ್ರೀಮತಿ ಸೌಮ್ಯ ರಾಜಶೇಖರ್ ಜೋಗದ್, ಖಜಾಂಚಿಯಾಗಿ ಶ್ರೀಮತಿ ಗೌರಿ ಜೋಯಿಸ್ ಹಾಗೂ ಸಹ ಕಾರ್ಯದರ್ಶಿಯಾಗಿ ಕವಿತರಾಜು ಇವರುಗಳು ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷತೆಯನ್ನು ಸ್ವೀಕರಿಸಿ ಮಾತನಾಡಿದ ಶಕುಂತಲ ಹವಳದ ಅವರು, ನನ್ನ ಅಧಿಕಾರ ಅವಧಿಯಲ್ಲಿ ಮುಂದಿನ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು, ಮಹಿಳಾ ಸಬಲೀಕರಣ, ವ್ಯಕ್ತಿತ್ವ ವಿಕಸನ ಶಿಬಿರ, ಸಮಾಜ ಮುಖಿ ಸೇವಾ ಕಾರ್ಯಗಳು, ಹದಿಹರೆಯದ ಸಮಸ್ಯೆಗಳ ಬಗ್ಗೆ ಜಾಗೃತಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸದಸ್ಯರ ಸಹಕಾರದಿಂದ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

Information and Public Relations Department ವಿವಿಧ ಜಿಲ್ಲೆಗಳ‌ ಪ.ಜಾ/ ಪ.ಪಂಗಡಗಳ ಆಯ್ದ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ

0

Information and Public Relations Department 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.

ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ.

Information and Public Relations Department ಅರಣ್ಯ ಸಚಿವ ಈಶ್ವರ್ ಖಂಡ್ರೆ,ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್,ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ,ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಲವರು ಇದ್ದರು.

IIIDEM ದೇಶಾದ್ಯಂತ ಅಸೆಂಬ್ಲಿ ಮಟ್ಡದ ಒಂದು ತುಕಡಿ ರಚನೆ 100 ಕೊಟಿ ಮತದಾರರು & ಆಯೋಗದ ಸಂಪರ್ಕ ಸೇತು- ಜ್ಞಾನೇಶ್ ಕುಮಾರ್

0

IIIDEM ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ಮೆಂಟ್ (IIIDEM) ನಲ್ಲಿ EC ಡಾ. ವಿವೇಕ್ ಜೋಶಿ ಅವರೊಂದಿಗೆ BLO ಗಳ ಮೊದಲ ತರಬೇತಿಯನ್ನು CEC ಶ್ರೀ ಜ್ಞಾನೇಶ್ ಕುಮಾರ್ ಉದ್ಘಾಟಿಸಿದರು.ಮುಂದಿನ ಕೆಲವು ವರ್ಷಗಳಲ್ಲಿ 10 ಮತಗಟ್ಟೆಗಳಿಗೆ ಸರಾಸರಿ ಒಂದು BLO ಹೊಂದಿರುವ 1 ಲಕ್ಷಕ್ಕೂ ಹೆಚ್ಚು BLO ಗಳಿಗೆ ಅಂತಹ ತರಬೇತಿ ಕಾರ್ಯಕ್ರಮಗಳಲ್ಲಿ ತರಬೇತಿ ನೀಡಲಾಗುವುದು. ಈ ಉತ್ತಮ ತರಬೇತಿ ಪಡೆದ BLO ಗಳು ದೇಶಾದ್ಯಂತ ಅಸೆಂಬ್ಲಿ ಮಟ್ಟದ ಮಾಸ್ಟರ್ ತರಬೇತುದಾರರ (ALMT ಗಳು) ಒಂದು ತುಕಡಿಯನ್ನು ರಚಿಸಿ, 100 ಕೋಟಿ ಮತದಾರರು ಮತ್ತು ಆಯೋಗದ ನಡುವಿನ ಮೊದಲ ಮತ್ತು ಪ್ರಮುಖ ಸಂಪರ್ಕ ಸಾಧನವಾಗಿದೆ.

ಈ ವಿಶಿಷ್ಟ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮವು ಹಂತ ಹಂತವಾಗಿ ಮುಂದುವರಿಯಲಿದ್ದು, ಪ್ರಸ್ತುತ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ 109 ಬಿಎಲ್ಒಗಳು ಈ 2 ದಿನಗಳ ವಸತಿ ತರಬೇತಿ ಕಾರ್ಯಕ್ರಮದಲ್ಲಿ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನ 24 ಇಆರ್ಒಗಳು ಮತ್ತು 13 ಡಿಇಒಗಳೊಂದಿಗೆ ಭಾಗವಹಿಸುತ್ತಿದ್ದಾರೆ.

ಬಿಎಲ್ಒಗಳು ರಾಜ್ಯ ಸರ್ಕಾರಿ ಅಧಿಕಾರಿಗಳಾಗಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳ (ಡಿಇಒ) ಅನುಮೋದನೆಯ ನಂತರ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್ಒ) ನೇಮಕ ಮಾಡುತ್ತಾರೆ. ಮತದಾರರ ಪಟ್ಟಿಯ ದೋಷ-ಮುಕ್ತ ನವೀಕರಣದಲ್ಲಿ ಇಆರ್ಒಗಳು ಮತ್ತು ಬಿಎಲ್ಒಗಳ ನಿರ್ಣಾಯಕ ಪಾತ್ರವನ್ನು ಗುರುತಿಸಿದ ಸಿಇಸಿ ಶ್ರೀ ಜ್ಞಾನೇಶ್ ಕುಮಾರ್, ರಾಜ್ಯ ಸರ್ಕಾರಗಳು ಎಸ್ಡಿಎಂ ಮಟ್ಟದ ಅಥವಾ ಸಮಾನ ಅಧಿಕಾರಿಗಳನ್ನು ಇಆರ್ಒಗಳಾಗಿ ನಾಮನಿರ್ದೇಶನ ಮಾಡಬೇಕು, ನಂತರ ಅವರು ತಮ್ಮ ಜೇಷ್ಠತೆಯನ್ನು ಪರಿಗಣಿಸಿ ಬಿಎಲ್ಒಗಳನ್ನು ನೇಮಿಸಬೇಕು.ಸಂವಿಧಾನದ 326 ನೇ ವಿಧಿ ಮತ್ತು ಆರ್ಪಿ ಕಾಯ್ದೆ 1950 ರ ಸೆಕ್ಷನ್ 20 ರ ಪ್ರಕಾರ, 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಕ್ಷೇತ್ರದಲ್ಲಿ ಸಾಮಾನ್ಯವಾಗಿ ವಾಸಿಸುವ ಭಾರತದ ನಾಗರಿಕರನ್ನು ಮಾತ್ರ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಸಿಇಸಿ ಹೇಳಿದರು.

IIIDEM ಎಲ್ಲಾ ಸಿಇಒಗಳು, ಡಿಇಒಗಳು, ಇಆರ್ಒಗಳು ತಮ್ಮ ಮಟ್ಟದಲ್ಲಿ ಸರ್ವಪಕ್ಷ ಸಭೆಗಳನ್ನು ನಡೆಸಬೇಕು ಮತ್ತು ಮತದಾರರ ಪಟ್ಟಿಯ ಸರಿಯಾದ ನವೀಕರಣ ಸೇರಿದಂತೆ ಅವರ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅವರು ನಿರ್ದೇಶಿಸಿದರು.

ಇಆರ್ಒ ಅಥವಾ ಬಿಎಲ್ಒ ವಿರುದ್ಧದ ಯಾವುದೇ ದೂರುಗಳ ಮೇಲೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಮತದಾರರ ಪಟ್ಟಿಯ ನವೀಕರಣಕ್ಕಾಗಿ ಮನೆ-ಮನೆ ಪರಿಶೀಲನೆಯ ಸಮಯದಲ್ಲಿ ಎಲ್ಲಾ ಬಿಎಲ್ಒಗಳು ಮತದಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಅವರು ಹೇಳಿದರು.

ಆಯೋಗವು ಸುಮಾರು 100 ಕೋಟಿ ಮತದಾರರೊಂದಿಗೆ ಇದೆ ಮತ್ತು ಯಾವಾಗಲೂ ನಿಲ್ಲುತ್ತದೆ ಎಂದು ಅವರು ಹೇಳಿದರು.

Shree Durgaparameshwari Temple ಮಾರ್ಚ್ 28 ರಂದು ಶ್ರೀನವಚಂಡಿಕಾ ಯಾಗ

0

Shree Durgaparameshwari Temple ಶಿವಮೊಗ್ಗದ ಗ್ರಾಮದೇವತೆ ಕೋಟೆ ಶ್ರೀಚಂಡಿಕಾದುರ್ಗಾಪರಮೇಶ್ವರೀ ದೇವಾಲಯದಲ್ಲಿ ದಿನಾಂಕ 28/3/2025 ಶುಕ್ರವಾರ ಬೆ-9 ರಿಂದ 1 ರವರೆಗೆ ಲೋಕಕಲ್ಯಾಣಾರ್ಥ ಶ್ರೀನವಚಂಡಿಕಾಯಾಗವನ್ನು ದೇಶದ ಮತ್ತು ಆಸ್ತಿಕ ಭಕ್ತಮಹಾಜನರ ಶ್ರೇಯೋಭಿವೃದ್ಧಿಗಾಗಿ ಸಂಕಲ್ಪಿಸಿ ನೆರವೇರಿಸಲಾಗುತ್ತಿದೆ, ಈ ಮಹತ್ಕಾರ್ಯದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಧಾನ ಅರ್ಚಕರಾದ ಆಗಮಿಕ ವಿದ್ವಾನ್ ಶಂಕರಾನಂದ ಜೋಯ್ಸ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
Ph-9448525103, 7411317093

Gruha Jyothi Scheme  ವಿದ್ಯುತ್ ಬಳಕೆ ಸರಾಸರಿ ಅನುಸರಿಸಿ ಎಲ್ಲ ಗೃಹಬಳಕೆ ಗ್ರಾಹಕರಿಗೆ ‘ಗೃಹಜ್ಯೋತಿ‌’ ವಿಸ್ತರಿಸಲು ಪ್ರಸ್ತಾವನೆ- ಚಂದ್ರಭೂಪಾಲ್

0

Gruha Jyothi Scheme  ಗೃಹಜ್ಯೋತಿ ಯೋಜನೆಯ ಸೌಲಭ್ಯವನ್ನು 2023-24 ಮತ್ತು 2024-25 ನೇ ಸಾಲಿನ ವಿದ್ಯುತ್ ಬಳಕೆಯ ಸರಾಸರಿ ಪರಿಗಣಿಸಿ ಲೆಕ್ಕೀಕರಿಸುವ ನಿಯಮವನ್ನು ವಿಸ್ತರಿಸಿ ಎಲ್ಲ ಗೃಹ ಬಳಕೆಯ ಗ್ರಾಹಕರಿಗೆ ಗೃಹಜ್ಯೋತಿ ಸೌಲಭ್ಯ ದೊರಕಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಭೆಯು ಒಮ್ಮತದ ನಿರ್ಣಯ ಅಂಗೀಕರಿಸಿತು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ ಇವರ ಅಧ್ಯಕ್ಷತೆಯಲ್ಲಿ ಏರ್ಪಡಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಗೃಹಜ್ಯೋತಿ ಯೋಜನೆಯನ್ವಯ 2022-23 ನೇ ಸಾಲಿನ ಸರಾಸರಿ ವಿದ್ಯುತ್ ಬಳಕೆಯನ್ನು ಪರಿಗಣಿಸಿ ಲೆಕ್ಕೀಕರಿಸಿ 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸದೇ ಇರುವ ಕಾರಣ 2023-24 ನೇ ಸಾಲಿನ ವಿದ್ಯುತ್ ಬಳಕೆಯನ್ನು ಪರಿಗಣಿಸಲು ಗ್ರಾಹಕರು ಒಳಪಡುವುದಿಲ್ಲವೆಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಇವರಿಗೆ ಲಿಖಿತ ಪತ್ರ ಬರೆದು ಸ್ಪಷ್ಟಪಡಿಸಿದ್ದಾರೆ.

ಆದರೆ 2022-23 ನೇ ಸಾಲಿನಲ್ಲಿ ವಿದ್ಯುತ್ ಬಳಕೆದಾರರು ಅನಿವಾರ್ಯ ಕಾರಣಗಳಿಂದಾಗಿ 200 ಯುನಿಟ್‌ಗಿಂತ ಹೆಚ್ಚು ಬಳಕೆ ಮಾಡಿದವರು ಮತ್ತು ಬಾಡಿಗೆ ಮನೆಯನ್ನು ಬದಲಾವಣೆ ಮಾಡಿದರೂ ಪುನಃ 2023-24 ನೇ ಸಾಲಿನಲ್ಲಿ ವಿದ್ಯುತ್ ಬಳಕೆಯನ್ನು ಪರಿಗಣಿಸಿ ಸರಾಸರಿ ಲೆಕ್ಕೀಕರಿಸುವ ನಿಯಮ ಇಲ್ಲದೇ ಇರುವುದರಿಂದ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಅದಕ್ಕಾಗಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಬಹಳಷ್ಟು ಕುಟುಂಬದವರು ಪ್ರಾಧಿಕಾರದ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಿ 2023-24 ನೇ ಸಾಲಿಗೂ ವಿಸ್ತರಿಸಲು ಮನವಿ ಮಾಡಿಕೊಂಡಿದ್ದಾರೆ.

Gruha Jyothi Scheme  ಆದ್ದರಿಂದ 2023-24 ನೇ ಸಾಲಿನಲ್ಲಿ ಗೃಹಜ್ಯೋತಿ ಫಲಾನುಭವಿಗಳಿಗೆ ಅವಕಾಶ ಕಲ್ಪಿಸಿಕೊಟ್ಟು ಅವರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಲು 2023-24 ಮತ್ತು 2024-25 ನೇ ಸಾಲಿನಲ್ಲಿ ಗ್ರಾಹಕರ ವಿದ್ಯುತ್ ಬಳಕೆಯನ್ನು ಪರಿಗಣಿಸಿ ಸರಾಸರಿ ಲೆಕ್ಕೀಕರಿಸುವ ಪದ್ದತಿಯನ್ನು ವಿಸ್ತರಿಸಿ ಎಲ್ಲಾ ಗ್ರಾಹಕರಿಗೆ ಗೃಹಜ್ಯೋತಿ ಸೌಲಭ್ಯ ದೊರಕಿಸಲು ಅನುವು ಮಾಡಿಕೊಡಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ ಸರ್ಕಾರಕ್ಕೆ ಮನವಿ ಮಾಡಿದರು.

ಪಡಿತರ ತೆಗೆದುಕೊಳ್ಳುವ ವೇಳೆ ಕೆಲವರ ಬಯೋಮಟ್ರಿಕ್ ಕ್ಯಾಪ್ಚರ್ ಆಗುತ್ತಿಲ್ಲ ಇದಕ್ಕೆ ಏನು ಮಾಡಬೇಕೆಂದು ಸದಸ್ಯರು ಕೇಳಿದರು.

ಆಹಾರ ಇಲಾಖೆ ಉಪನಿರ್ದೇಶಕ ಅವಿನ್, ಏಕ ಮತ್ತು ದ್ವಿಸದಸ್ಯ ಇರುವ ಪಡಿತರ ಚೀಟಿದಾರರು ಬಯೋಮೆಟ್ರಿಕ್ ಬರುತ್ತಿಲ್ಲವೆಂದು ಅರ್ಜಿ ನೀಡಿ ಇದರಿಂದ ವಿನಾಯಿತಿ ಪಡೆಯಬಹುದು ಎಂದರು.

ಸದಸ್ಯರು, ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಕೆಲವರ ಎನ್‌ಪಿಸಿಐ ಫೇಲ್ ಯಾಕಾಗುತ್ತದೆ. ಇದನ್ನು ಸರಿಪಡಿಸಲು ಫಲಾನುಭವಿಗಳು ಏನು ಕ್ರಮ ಕೈಗೊಳ್ಳಬೇಕೆಂದು ಮಾಹಿತಿ ನೀಡಬೇಕೆಂದು ಕೋರಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಎನ್‌ಪಿಸಿಐ ಫೇಲ್‌ಗೆ ಕಾರಣವಾದ ಅಂಶಗಳ ಬಗ್ಗೆ ವಿವರಣೆ ನೀಡಿ, ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯು ಶೇ.94.12 ನೋಂದಣಿ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲೇ ಅಗ್ರಸ್ಥಾನ ಪಡೆದಿದೆ ಎಂದರು.

ಸದಸ್ಯರು, ಹೊಸನಗರ ತಾಲ್ಲೂಕಿಗೆ ಶಕ್ತಿ ಯೋಜನೆ ಸೌಲಭ್ಯ ಇಲ್ಲವಾಗಿದ್ದು ಮಹಿಳೆಯರು ಮತ್ತು ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿರುವುದರಿಂದ ಸರ್ಕಾರಿ ಬಸ್ ಬಿಡುವ ಮೂಲಕ ಶಕ್ತಿ ಯೋಜನೆಯನ್ನು ತಾಲ್ಲೂಕಿಗೆ ವಿಸ್ತರಿಸಬೇಕೆಂದು ಮನವಿ ಮಾಡಿದರು.

ಶಿವಮೊಗ್ಗ ನಗರದಲ್ಲಿ ಸಾರಿಗೆಯನ್ನು ಹೆಚ್ಚಿಸಬೇಕು. ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಅಧ್ಯಕ್ಷರು ಸಂಬಂಧಿಸಿದ ಅಧಿಕಾರಿಗೆ ತಿಳಿಸಿದರು.

ಸಭೆಯಲ್ಲಿ ಯೋಜನಾ ಸಮಿತಿಯ ನೂತನ ಸದಸ್ಯರಾದ ಶಿಕಾರಿಪುರ ತಾಲ್ಲೂಕಿನ ಜಕ್ಕಿನಕೊಪ್ಪ ಗ್ರಾಮದ ನವುಲೇಶಪ್ಪ ಅವರನ್ನು ಅಧ್ಯಕ್ಷರು ಸ್ವಾಗತಿಸಿದರು.

ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಮಾತನಾಡಿ, ಜಿಲ್ಲೆಯಲ್ಲಿ ಫೆ.24 ರಂದು ನಡೆದ ಉದ್ಯೋಗ ಮೇಳದಲ್ಲಿ 39 ಕಂಪೆನಿಗಳು ಪಾಲ್ಗೊಂಡಿದ್ದವು. 4132 ಅಭ್ಯರ್ಥಿಗಳು ಆನ್‌ಲೈನ್ ನೋಂದಣಿ ಮಾಡಿಕೊಂಡಿದ್ದು, 2775 ಅಭ್ಯರ್ಥಿಗಳು ಹಾಜರಾಗಿದ್ದರು. 683 ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಆಗಿದ್ದು, 324 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

15 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.