Friday, March 6, 2026
Friday, March 6, 2026
Home Blog Page 364

Kuvempu University ಶಿವಮೊಗ್ಗದ ನಿವೃತ್ತ ಪ್ರೊ.ಚಂದ್ರಕಾಂತ್ ನಿಧನ

0

Kuvempu University ಡಾಕ್ಟರ್ ಚಂದ್ರಕಾಂತ್ ನಿವೃತ್ತ ಪ್ರೋಫೆಸರ್ ಮತ್ತು ಭೂಅನ್ವಯಿಕ ವಿಜ್ಞಾನ ವಿಭಾಗ ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟ ಇವರು ಶಿವಮೊಗ್ಗ 22 ಮಾರ್ಚ್ ರಂದು ಮಧ್ಯಾಹ್ನ 3.0 ಕ್ಕೆ ಶಿವಮೊಗ್ಗದ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಇವರ ಅಂತ್ಯಕ್ರಿಯೆಯನ್ನು ದಿನಾಂಕ 24-03-2025 ರಂದು10ಘಂಟೆಗೆ ಶಿವಮೊಗ್ಗದ ಗುಡ್ಡೆ ಕಲ್ಲು ಭೂಮಿಯಲ್ಲಿ ನೆರವೇರಿಸಲಾಗುವುದು. ಮೃತರಿಗೆ ಪತ್ನಿ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

Department of Social Welfare ಸರ್ಕಾರಿ ಮೆಟ್ರಿಕ್ ಪೂರ್ವ & ನಂತರದ ಹಾಸ್ಟೆಲ್ ಗಳಲ್ಲಿ ಅವ್ಯವಸ್ಥೆ. ಉಪಲೋಕಾಯುಕ್ತರ ಖಡಕ್ ಸೂಚನೆ

0

Department of Social Welfare ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆ ಉಂಟಾಗಿದ್ದು, ಅಧಿಕಾರಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಸರಿಪಡಿಸಿಕೊಳ್ಳಲು ಸಮಯಾವಕಾಶ ನೀಡುತ್ತೇನೆ. ಆದಾಗ್ಯೂ ಸರಿಪಡಿಸದಿದ್ದರೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹೇಳಿದರು.

ಶಿವಮೊಗ್ಗ ನಗರದ ಸರ್ಕಾರಿ ಬಾಲಕರ ಬಾಲ ಮಂದಿರ, ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿ/ಎಸ್‌ಟಿ ಬಾಲಕಿಯರ ಮೆಟ್ರಿಕ್ ಪೂರ್ವ ಹಾಸ್ಟೆಲ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ಪರಿವೀಕ್ಷಣೆ ಮಾಡಿ ಮಾತನಾಡಿ, ಯಾವುದೇ ದುರುದ್ದೇಶದಿಂದ ಅಸಪರ್ಮಕತೆ, ಅವ್ಯವಸ್ಥೆ ಉಂಟಾಗಿಲ್ಲ. ಬದಲಾಗಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹೀಗಾಗಿದೆ. ಸರಿಪಡಿಸಿಕೊಳ್ಳಲು ಅವಕಾಶ ನೀಡಿ, ಸರಿಯಾಗದಿದ್ದರೆ ಕ್ರಮ ವಹಿಸುವುದಾಗಿ ತಿಳಿಸಿದರು.

ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಅವರು ಅಡುಗೆ ಮನೆಗೆ ತೆರಳಿ, ಮೇಲ್ಚಾವಣೆ ಹಾಗೂ ಆಹಾರದ ಸುರಕ್ಷತೆ ಬಗ್ಗೆ ತಪಾಸಣೆ ಮಾಡಿದರು. ಕೈ ತೊಳೆಯುವ ಸ್ಥಳ, ವಾಟರ್ ಫಿಲ್ಟರ್ , ಮಕ್ಕಳು ಮಲಗುವ ಕೊಠಡಿಯನ್ನು ಪರಿವೀಕ್ಷಿಸಿ ಹಾಳಾಗಿರುವ ಹಾಸಿಗೆಗಳನ್ನು ಹಾಗೂ ಮಂಚಗಳನ್ನು ಬದಲಾಯಿಸಬೇಕೆಂದು ನಿರ್ದೇಶನ ನೀಡಿದರು.

ಹಾಸಿಗೆ, ಮಂಚಗಳ ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು. ಹಾಳಾದ ಮಂಚಗಳನ್ನು ದುರಸ್ತಿಪಡಿಸಿ, ಹಾಗೂ ಹರಿದು ಹೋದ ಹಾಸಿಗೆಗಳನ್ನು ತೆಗೆದುಹಾಕಿ ಹೊಸದನ್ನು ಹಾಕಿಸುವಂತೆ ಸೂಚಿಸಿದ ಅವರು ಕಿಟಕಿ ಗಾಜು, ಮೆಶ್ ಸರಿಪಡಿಸಬೇಕು. ಸ್ವಚ್ಚತೆ ಕಡೆ ಹೆಚ್ಚಿನ ನಿಗಾ ವಹಿಸಬೇಕು. ಒಡೆದ ಗಾಜು ಮತ್ತು ಅಸಮರ್ಪಕ ಮೆಶ್‌ನಿಂದ ಸೊಳ್ಳೆಗಳು ಒಳಬಂದು ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುತ್ತದೆ. ಇನ್ನು ಒಂದು ವಾರದೊಳಗೆ ಈ ಎಲ್ಲ ಕೆಲಸ ಆಗಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹಾಸ್ಟೆಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಲ ಮಂದಿರದ ಆವರಣದೊಳಗೆ ಹಂದಿಗಳ ಹಾವಳಿ ಇದ್ದು ಇದನ್ನು ತಪ್ಪಿಸಬೇಕು. ಹಾಗೂ ಸ್ವಚ್ಚತೆ ಕಾಪಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

Department of Social Welfare ಶೌಚಾಲಯ ವೀಕ್ಷಿಸಿದ ಅವರು, ಒಡೆದು ಹೋಗಿರುವ ಟೈಲ್ಸ್ಗಳನ್ನು ತೆಗೆದು ಹೊಸದಾಗಿ ಹಾಕಿಸಿ, ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕೆಂದ ಅವರು ಅನುದಾನದ ಅವಶ್ಯಕತೆ ಇದ್ದರೆ ಕೇಳಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ತಮ್ಮ ಮನೆಯಂತೆ ಬಾಲಮಂದಿರವನ್ನು ನೋಡಿಕೊಳ್ಳಬೇಕೆಂದು ತಿಳಿಸಿದರು.

ನಂತರ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಭೇಟಿ ನೀಡಿ, ಶಿವರಾತ್ರಿ ಹಬ್ಬದಂದು ಕೇಂದ್ರಕ್ಕೆ ದಾಖಲಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದರು. ಇದೇ ವೇಳೆ ರಾಜ್ಯ ಮಹಿಳಾ ನಿಲಯಕ್ಕೆ ಭೇಟಿ ನೀಡಿ, ನಿವಾಸಿಗಳೊಂದಿಗೆ ಮಾತನಾಡಿ, ಕುಂದು ಕೊರತೆಗಳನ್ನು ಆಲಿಸಿದರು.
ನಂತರ, ಎಂಆರ್‌ಎಸ್ ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಅಡುಗೆ ಮನೆ, ದಾಸ್ತಾನು ಕೊಠಡಿ, ಮಕ್ಕಳು ಮಲಗುವ ಕೊಠಡಿಗಳನ್ನು ವೀಕ್ಷಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.

ಹಾಸ್ಟೆಲ್ ಉತ್ತಮವಾಗಿದೆ ಆದರೆ ಹಾಸ್ಟೆಲ್ ಹಿಂಭಾಗ ಕಸ, ಕೊಳಚೆ ನೀರು ನಿಂತಿದೆ. ಮಳೆಯಲ್ಲಿ ರಾಡಿಯಾಗಿ ಸೊಳ್ಳೆ ಹೆಚ್ಚುತ್ತವೆ. ಯುಜಿಡಿ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಯುಕ್ತರೊಂದಿಗೆ ಹಣ ಮಂಜೂರಾತಿ ಬಗ್ಗೆ ಮಾತನಾಡುತ್ತೇನೆ ಎಂದರು.

ವಿದ್ಯಾರ್ಥಿಗಳೊಂದಿಗೆ ಸಂವಾದ : ಸರ್ಕಾರಿ ಬಾಲಕಿಯರ ಬಾಲ ಮಂದಿರ, ಎಸ್‌ಸಿ/ಎಸ್‌ಟಿ ಬಾಲಕಿಯರ ಮೆಟ್ರಿಕ್ ಪೂರ್ವ ಹಾಸ್ಟೆಲ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾಥಿಗಳೊಂದಿಗೆ ಸಂವಾದ ನಡೆಸಿದ ಅವರು, ಊಟ, ತಿಂಡಿ ಇತರೆ ಸೌಲಭ್ಯಗಳು ಸರಿಯಾಗಿ ನೀಡುತ್ತಿದ್ದಾರಾ, ಕುಡಿಯುವ ನೀರಿನ ಸೌಲಭ್ಯ, ಬಿಸಿನೀರು, ಹೊಟ್ಟೆ ತುಂಬ ಗುಣಮಟ್ಟದ ಊಟ ಕೊಡುತ್ತಿದ್ದಾರಾ? ಎಂದು ಕೇಳಿದರು.

ಹಾಗೂ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್‌ನಲ್ಲಿ ಗ್ರಂಥಾಲಯ ವ್ಯವಸ್ಥೆ, ಕಂಪ್ಯೂಟರ್‌ಗಳು ಲಭ್ಯವಿದೆಯೇ, ವೈದ್ಯರು ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸುತ್ತಾರಾ, ಸ್ಯಾನಿಟರಿ ಪ್ಯಾಡ್‌ಗಳನ್ನು ನೀಡಲಾಗುತ್ತಿದೆಯೇ ಎಂದು ವಿಚಾರಿಸಿದರು.

ಗ್ರಂಥಾಲಯಕ್ಕೆ ಬೇಕಾದ ಅಗತ್ಯ ಪುಸ್ತಕಗಳು, ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಕಂಪ್ಯೂಟರ್ ಒದಗಿಸುವಂತೆ ಸೂಚನೆ ನೀಡಿದ ಅವರು ವಿದ್ಯಾರ್ಥಿನಿಲಯಗಳಲ್ಲಿ ನೀಡಬೇಕಾದ ಎಲ್ಲ ಸೌಲಭ್ಯಗಳನ್ನು ಗುಣಮಟ್ಟದೊಂದಿಗೆ ನೀಡಬೇಕು. ಸ್ವಚ್ಚತೆಗೆ ಹೆಚ್ಚಿನ ಗಮನ ನೀಡಬೇಕೆಂದರು.
ಸರ್ಕಾರ ನೀಡುವ ಸೌಲಭ್ಯಗಳ ಸದ್ಬಳಕೆ ಆಗಬೇಕು. ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು. ಸತ್ಪ್ರಜೆಗಳಾಗಬೇಕು. ಸೇವಾ ಮನೋಭಾವ ಬೆಳೆಸಿಕೊಂಡು, ಉತ್ತಮ ಉದ್ಯೋಗ ಪಡೆದು, ದೇಶ ಸೇವೆ ಮಾಡಬೇಕು. ಸಮಾಜಕ್ಕೆ ಏನಾದರೊಂದು ಉತ್ತಮ ಕೊಡುಗೆ ನೀಡಬೇಕು. ನಿಮ್ಮ ಪೀಳಿಗೆ ಚೆನ್ನಾಗಿದ್ದರೆ ದೇಶ ಅಭಿವೃದ್ಧಿ ಸಾಧ್ಯ. ಚೆನ್ನಾಗಿ ಓದಿರಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.

ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ, ಅದನ್ನು ಉತ್ತೇಜಿಸುವುದಿಲ್ಲ. ಮತ್ತು ಇದನ್ನು ನಿಯಂತ್ರಿಸುತ್ತೇನೆ ಎಂಬ ಮನೊಭಾವ ಇಟ್ಟುಕೊಂಡು ಮುಂದೆ ಬರಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.

ಈ ವೇಳೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಾದ ನ್ಯಾ.ಲೋಕಪ್ಪ ಎನ್ ಆರ್. ನ್ಯಾ.ವಿಜಯಾನಂದ ಜೆ ವಿ, ನ್ಯಾ.ಕಿರಣ್ ಪಿ.ಎಂ ಪಾಟೀಲ್, ಜಿ.ಪಂ ಸಿಇಓ ಎನ್.ಹೇಮಂತ್, ಎಸ್‌ಪಿ ಮಿಥುನ್ ಕುಮಾರ್, ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್, ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್ ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

0

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ 2025 ನೇ ಸಾಲಿನ ಪ್ರಧಾನ ಮಂತ್ರಿಗಳ ಯೋಗ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಮಾ.31 ರ ಒಳಗೆ https:// nnovateindia.mygov./in/pm-yoga-awards-2025 ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಮಟ್ಟ ಅಥವಾ ಅಂತರರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಯೋಗ ಕ್ರೀಡಾಪಟುಗಳು ಹಾಗೂ ಯೋಗ ಸಂಸ್ಥೆಗಳು ರಾಷ್ಟಿçÃಯ ಮಟ್ಟ÷ ಅಥವಾ ಅಂತರರಾಷ್ಟ್ರೀಯ ಮಟ್ಟದ ಅತ್ಯುನ್ನತ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Department of Tourism ಕೌಶಲ್ಯಾಭಿವೃದ್ಧಿಗೆ ಪ.ಜಾ/ ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

0

Department of Tourism ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
Department of Tourism 8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್ ಕುರಿತು 4 ತಿಂಗಳ ತರಬೇತಿ ನೀಡಲಾಗುತ್ತಿದ್ದು, ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 03/04/2025 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಗುರುದತ್ತ ಹೆಗಡೆರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-251444 ನ್ನು ಸಂಪರ್ಕಿಸುವುದು.

Shivamogga News ವಹಿಸಿರುವ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ನಿರ್ವಹಿಸುವೆ- ವಸಂತ ಹೋಬಳಿದಾರ್

0

Shivamogga News ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ರೋಟರಿಯಂತಹ ಸಂಸ್ಥೆಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಡಾ. ಕಡಿದಾಳ್ ಗೋಪಾಲ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ಆಗಿ ನಿಯೋಜಿತರಾಗಿರುವ ವಸಂತ್ ಹೋಬಳಿದಾರ್ ಅವರಿಗೆ ಸನ್ಮಾನಿಸಿ ಮಾತನಾಡಿ, ರೋಟರಿ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರಂದ ಹೆಚ್ಚಿನ ಅನುಕೂಲಗಳಿದ್ದು, ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿದ ವಸಂತ್ ಹೋಬಳಿದಾರ್ ಮಾತನಾಡಿ, ರೋಟರಿ ಜಿಲ್ಲೆಯ ಸದಸ್ಯರು ಅಪಾರ ಪ್ರೀತಿ, ವಿಶ್ವಾಸ ಹೊಂದಿದ್ದು, ದೊರೆತಿರುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೇನೆ. ರೋಟರಿ ಸಂಸ್ಥೆ ಪ್ರಪಂಚದಲ್ಲಿ ಅತಿ ದೊಡ್ಡ ಸೇವಾ ಸಂಸ್ಥೆಯಾಗಿದೆ. ನೂರು ವರ್ಷಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಸ್ಥೆ ಮುನ್ನಡೆಯುತ್ತಿರುವುದು ಸಾಧನೆಯಾಗಿದೆ ಎಂದು ತಿಳಿಸಿದರು.
Shivamogga News ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ಜಿಲ್ಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಮಹತ್ತರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ರೋಟರಿ ಶಾಲೆ, ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ, ಆರೋಗ್ಯ ಶಿಬಿರ, ಚಿತಾಗಾರ ನಿರ್ವಹಣೆ ಸೇರಿದಂತೆ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.
ಇನ್ನರ್‌ವ್ಹೀಲ್ ನಿಯೋಜಿತ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಮುಂದಿನ ದಿನಗಳಲ್ಲಿ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶವಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಗುಡದಪ್ಪ ಕಸಬಿ, ಚಂದ್ರಹಾಸ ಪಿ ರಾಯ್ಕರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಎಚ್.ಬಿ.ಆದಿಮೂರ್ತಿ, ಎ.ಟಿ.ಸುಬ್ಬೇಗೌಡ, ಎನ್.ಎಚ್.ಶ್ರೀಕಾಂತ್, ಕಿಶೋರ್, ಡಾ. ಧನಂಜಯ, ಅನೂಪ್, ಅನಿತಾ ರವಿಶಂಕರ್, ಕೆ.ಜಿ.ರಾಮಚಂದ್ರ, ಇನ್ನರ್‌ವ್ಹೀಲ್ ಸದಸ್ಯರು ಇದ್ದರು.

Rotary Club Shivamogga ಸಮಾಜದಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯಮಾಡುವುದು ರೋಟರಿಸಂಸ್ಥೆಯ ಗುರಿ-ಸಿ.ಎ.ದೇವ್ ಆನಂದ್

0

Rotary Club Shivamogga ವಿಶ್ವದ ಎಲ್ಲ ದೇಶಗಳಲ್ಲಿ ಹೆಚ್ಚು ಸೇವಾ ಕಾರ್ಯಗಳನ್ನು ನಡೆಸಲು ರೋಟರಿ ದತ್ತಿನಿಧಿ ಸಹಕಾರಿಯಾಗಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸಮಾಜದಲ್ಲಿ ಅಸಹಾಯಕ, ದುರ್ಬಲ ವ್ಯಕ್ತಿಗಳನ್ನು ಗುರುತಿಸಿ ನಿಸ್ವಾರ್ಥ ಭಾವನೆಯಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸಹಾಯ ಮಾಡುವುದು ಹಾಗೂ ಸಮಾಜದಲ್ಲಿ ಶಾಂತಿ ಕಾಪಾಡಿ ಸಕಾರಾತ್ಮಕ ವಾತಾವರಣ ಸೃಷ್ಟಿ ಮಾಡುವುದು ರೋಟರಿ ಸಂಸ್ಥೆಯ ಮೂಲ ಧ್ಯೇಯವಾಗಿದೆ. ಸಾಮಾಜಿಕ ಸೇವೆಗಾಗಿ ರೋಟರಿ ಸಂಸ್ಥೆಯು ಬದ್ಧವಾಗಿದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವ್ ಆನಂದ್, ರೇಖಾ ದೇವ್ ಆನಂದ್ ಹಾಗೂ ಸಹಾಯಕ ಗವರ್ನರ್ ಸುರೇಶ್ ಅವರನ್ನು ಸನ್ಮಾನಿಸಲಾಯಿತು.
Rotary Club Shivamogga ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಗವರ್ನರ್ ಅವರಿಗೆ ಸೆಂಟ್ರಲ್ ನಿಂದ ಅದ್ದೂರಿ ಸ್ವಾಗತ ಮಾಡಲಾಯಿತು. ಸ್ವಾಗತದಲ್ಲಿ ಚಂಡೆ ಮಹಿಳಾ ತಂಡದವರಿಂದ ಮತ್ತು ಕ್ಲಬ್ ಮಹಿಳಾ ಸದಸ್ಯರಿಂದ ಪೂರ್ಣ ಕುಂಭ ಮತ್ತು ಹೂವಿನಿಂದ ಸ್ವಾಗತಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ. ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ರೋಟರಿ ಸಹಾಯಕ ಗವರ್ನರ್ ಸುರೇಶ್ ಎಚ್.ಎಂ., ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್, ಪಿಡಿಜಿ ಪ್ರಕಾಶ್, ಚಂದ್ರಶೇಖರ್, ವಲಯ 10 ಸಹಾಯಕ ಗವರ್ನರ್ ನಾಗರಾಜ ಹಾಗೂ ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಆನಂದ್ ಮತ್ತು ವಲಯದ ಮತ್ತು ಜಿಲ್ಲಾ ನಾಯಕರುಗಳು ಉಪಸ್ಥಿತರಿದ್ದರು

MESCOM ಮಾರ್ಚ್ 25. ಹೊನ್ನವಿಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಮಾ.23 ರಂದು ಬೆಳಿಗ್ಗೆ 10.00 ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಭಾನುವಾರ & ಸರ್ಕಾರಿ ರಜಾದಿನಗಳಲ್ಲೂ ಪ್ರವೇಶಾತಿ‌ ಪ್ರಕ್ರಿಯೆ

0

Karnataka State Open University ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕಾ ಕೇಂದ್ರ ಶಿವಮೊಗ್ಗ ಇಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದೆ. ಆಲ್ಕೊಳ ವೃತ್ತ ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗದಲ್ಲಿ ಪ್ರತಿ ಭಾನುವಾರ ಹಾಗೂ ಎಲ್ಲಾ ಹಬ್ಬಗಳು ಸೇರಿದಂತೆ ಹಾಗೂ ಸರ್ಕಾರಿ ರಜೆ ದಿನಗಳಂದು ಕಛೇರಿ ತೆರೆದಿದ್ದು ಪ್ರವೇಶಾತಿಯನ್ನು ಪಡೆದುಕೊಳ್ಳಲಾಗುವುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

Dr. KP Anshumanth ನೀರಾವರಿ ನೀರನ್ನ ಮಿತವಾಗಿ ಬಳಸಿ-ಡಾ.ಕೆ.ಪಿ.ಅಂಶುಮಂತ್

0

Dr. KP Anshumanth  ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಕಚೇರಿಯ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ತರಬೇತಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮತ್ತು ಅಚ್ಚುಕಟ್ಟು ಭಾಗದ ರೈತರುಗಳು ಉಪಸ್ಥಿತರಿದ್ದರು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿಗಳ ಬಗ್ಗೆ ವಿವರಿಸುತ್ತಾ.ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಬೇಕು ಹಾಗೂ ನೀರನ್ನು ಮಿತವಾಗಿ ಬಳಸಬೇಕು ರೈತರು ಒಗ್ಗಟ್ಟಿನಿಂದ ಬೆಳೆಯನ್ನು ಬೆಳೆಯಬೇಕು ಎಂದು ತಿಳಿಸಿದರುಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ.ಸುದೀಪ್ ಎಚ್ ಪಿ ಹಿರಿಯ ಸಂಶೋಧಕರು ಅಡಿಕೆ ಸಂಶೋಧನಾ ಕೇಂದ್ರ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ Dr. KP Anshumanth ಶಿವಮೊಗ್ಗ ಇವರು ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ ಪ್ರತಿ ಬೆಳೆಗೂ ಕೂಡ ಇರಬೇಕಾದ ಅಂತರ, ಮಿಶ್ರ ಕೃಷಿ, ಕೃಷಿ ಮಾಡುವ ಪದ್ಧತಿ, ನೀರಿನ ಸಮರ್ಥ ಬಳಕೆ, ಗೊಬ್ಬರದ ಉಪಯೋಗ ಮತ್ತು ರೈತರು ಈ ವಿಷಯದಲ್ಲಿ ಸಾಮಾನ್ಯವಾಗಿ ಮಾಡುವ ತಪ್ಪುಗಳ ಕುರಿತು ವಿಶದವಾಗಿ ವಿವರಿಸಿ ಜಾಗೃತಿ ಮೂಡಿಸಿದರು ಹಾಗೂ ಅಚ್ಚುಕಟ್ಟುದಾರರೊಂದಿಗೆ ಸಂವಾದವನ್ನು ನಡೆಸಿ ಅವರ ಅನುಮಾನಗಳನ್ನು ಬಗೆಹರಿಸಿದರು. ಟಿ. ಎಸ್. ಮಹದೇವಸ್ವಾಮಿ .ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪೈಪ್ ಕಾಂಪೋಸ್ಟ್ ತಜ್ಞರು,ನೀರಿನ ಮಿತವ್ಯಯ ಮತ್ತು ನೀರಿನ ಅತಿಯಾದ ಬಳಕೆಯಿಂದ ಸೀಮಿತ ಸಂಪನ್ಮೂಲವಾದ ನೀರನ್ನು ಅಚ್ಚುಕಟ್ಟಾಗಿ ನಗರ, ಪಟ್ಟಣ ಮತ್ತು ಕೃಷಿಗೆ ಸಂಬಂಧಿಸಿದಂತೆ ಯಾವ ರೀತಿಯಲ್ಲಿ ಬಳಸಬೇಕೆಂದು ತಮ್ಮ ಅನುಭವದ ಮೂಲಕ ತಿಳಿಸಿದರು ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ), ಶ್ರೀಮತಿ ರಾಜಸುಲೋಚನಾ (ಕೃಷಿ), ಹಾಗೂ ಡಾ. ನಾಗೇಶ್ ಎಸ್, ಡೋಂಗರೆ (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

S.N Channabasappa ಶಾಸಕರ ಅಮಾನತು, ವಿಪಕ್ಷಗಳ ಧ್ವನಿ ಹತ್ತಿಕ್ಕುವ ಹುನ್ನಾರ- ಅಮಾನಾತಾದ ಶಾಸಕ ಚೆನ್ನಿ ಹೇಳಿಕೆ

0

S.N Channabasappa ಪ್ರಜಾಪ್ರಭುತ್ವದ ಹೆಸರಿನಲ್ಲಿ ‘ತುಘಲಕ್‌’ ಸರ್ಕಾರ ನಡೆಯುತ್ತಿರುವ ದಬ್ಬಾಳಿಕೆಗೆ ನಮ್ಮ ಧಿಕ್ಕಾರ!!! ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂಬುದು ಭಾರತ ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಪಷ್ಟ ನಿಲುವು. ಆದರೂ, ಕಾಂಗ್ರೆಸ್ ಸರ್ಕಾರ ತನ್ನ ಮತ ಬ್ಯಾಂಕ್‌ ರಾಜಕೀಯದ ಅನುಕೂಲಕ್ಕಾಗಿ ತುಷ್ಟೀಕರಣ ರಾಜಕಾರಣ ನಡೆಸುತ್ತಾ, ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಹಂತದಲ್ಲೂ ಮೀಸಲಾತಿ ನೀಡುವ ಅಸಂವಿಧಾನಿಕ ನಡೆ ಕೈಗೊಂಡಿರುವುದು ತೀವ್ರ ಖಂಡನೀಯ! ಇದು ದೇಶದ ಸಮಾನತೆ ತತ್ವದ ವಿರುದ್ಧವಾಗಿದ್ದು, ಸಮಾಜದಲ್ಲಿ ಭಿನ್ನತೆ ಉಂಟುಮಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ದಿಕ್ಕಿನ ಹೆಜ್ಜೆಯಾಗಿದೆ.

ಇದೆಲ್ಲದರ ಜೊತೆಗೆ, 40ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಮೇಲೆ ಹನಿಟ್ರ್ಯಾಪ್ ಪ್ರಕರಣಗಳ ಆರೋಪಗಳು ಕೇಳಿ ಬಂದಿದ್ದು, ಇಂತಹ ಗಂಭೀರ ಪ್ರಕರಣಗಳ ತನಿಖೆಗೆ ಆದ್ಯತೆ ನೀಡದೆ, ಕಾಂಗ್ರೆಸ್ ಸರ್ಕಾರ ಜನರ ಗಮನವನ್ನು ಬೇರೆಡೆ ಹರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ನೀತಿಯನ್ನು ಎತ್ತಿ ತೋರುತ್ತಿದೆ.

ಸಿದ್ಧರಾಮಯ್ಯ ಸರ್ಕಾರ ನಡೆಸುತ್ತಿರುವ ಅನ್ಯಾಯ ಮತ್ತು ಅಕ್ರಮಗಳನ್ನು ವಿರೋಧಿಸಿ, ಸಿಬಿಐ ತನಿಖೆಗೆ ಒತ್ತಾಯಿಸಿದ್ದ ವಿರೋಧಪಕ್ಷದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಕೇವಲ ವಿರೋಧ ಪಕ್ಷದ ಧ್ವನಿಯನ್ನು ಅಡಗಿಸುತ್ತಿರುವುದಲ್ಲದೆ, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನೇ ತುಳಿಯುತ್ತಿದೆ. ಈ ಕ್ರಮ ಟಿಪ್ಪು ಸರ್ಕಾರದ ಸರ್ವಾಧಿಕಾರಿ ನಿಲುವನ್ನು ನೆನಪಿಸುತ್ತಿದೆ.

S.N Channabasappa ಈ ಅಮಾನತನ್ನು ಪಕ್ಷಪಾತಿ ವಿಧಾನಸಭೆಯ ಸ್ಪೀಕರ್, ಶ್ರೀ ಯು.ಟಿ. ಖಾದರ್ ತಕ್ಷಣವೇ ಹಿಂಪಡೆಯಬೇಕು, ಇಲ್ಲದಿದ್ದರೆ ಸೋ ಕಾಲ್ಡ್ ಬಂಧುಗಳ ಬಕೆಟ್ ಹಿಡಿಯುತ್ತಿರುವ ಸರ್ಕಾರದ ವಿರುದ್ಧ ಹಾಗೂ ಸಮಾಜದ ನ್ಯಾಯ ಮತ್ತು ಶಾಸಕರ-ವಿಧಾನಸಭೆಯ ಘನತೆಯನ್ನು ಮತ್ತು ರಾಜ್ಯದ ಮರ್ಯಾದೆಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಸದಾ ಮುಂದುವರಿಯುತ್ತದೆ…!

ಎಸ್ ಎನ್ ಚನ್ನಬಸಪ್ಪ (ಚೆನ್ನಿ)
ಶಾಸಕರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ