Friday, March 6, 2026
Friday, March 6, 2026
Home Blog Page 365

International Women’s Day ಮಹಿಳೆಯರು ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ- ಡಾ.ಚಂದುಶ್ರೀ

0

International Women’s Day ಮಹಿಳೆಯರು ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಸೂಕ್ತ ಎಂದು ಸರ್ಜಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಚಂದುಶ್ರೀ ಹೇಳಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಫ್ರೆಂಡ್ ಸೆಂಟರ್ ಮಹಿಳಾ ವಿಭಾಗ ಹಾಗೂ ಫ್ರೆಂಡ್ ಸೆಂಟರ್ ವತಿಯಿಂದ ಸತ್ಯ ಶ್ರೀ ಆರ್ಕೆಡ್ ನಲ್ಲಿ ಆಯೋಜಿಸಿದ್ದ ಸಂಪೂರ್ಣ ಆರೋಗ್ಯ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿ, ಮಧುಮೇಹಿಗಳು ಹಾಗೂ ರಕ್ತ ಒತ್ತಡ ಇರುವವರು ವರ್ಷಕ್ಕೆ ಒಂದು ಬಾರಿಯಾದರೂ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಮುಂಬರುವ ಕಾಯಿಲೆಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

ಐಎಂಎ ಕಾರ್ಯದರ್ಶಿ ಡಾ. ವಿನಯಾ ಶ್ರೀನಿವಾಸ್ ಮಾತನಾಡಿ, ಮಹಿಳೆಯರು ಮನೆ ಕೆಲಸದಲ್ಲೇ ಹೆಚ್ಚು ಗಮನ ಹರಿಸುವುದರಿಂದ ಆರೋಗ್ಯದ ಕಡೆ ನಿರ್ಲಕ್ಷ್ಯ ತಾಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹಾಗೂ ಪುರುಷರಲ್ಲಿ ಕ್ಯಾನ್ಸರ್ ರೋಗ ಹೆಚ್ಚಾಗಿ ಕಂಡುಬರುತ್ತಿದ್ದು, ಸಕಾಲದಲ್ಲಿ ತಪಾಸಣೆಗೆ ಒಳಗಾಗಿ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ ತೆಗೆದುಕೊಂಡರೆ ಗುಣಪಡಿಸಬಹುದು ಎಂದರು.

ಉತ್ತಮ ಜೀವನ ಶೈಲಿ, ಪ್ರತಿನಿತ್ಯ ಯೋಗ, ಧ್ಯಾನ, ಪ್ರಾಣಾಯಾಮ ಜೊತೆಗೆ ವಾಕಿಂಗ್ ಹಾಗೂ ಸಕಾರಾತ್ಮಕ ಭಾವನೆಗಳನ್ನು ರೂಡಿಸಿಕೊಳ್ಳಬೇಕು. ಎಂದು ನುಡಿದರು.

International Women’s Day ಮ್ಯಾಕ್ಸ್ ಆಸ್ಪತ್ರೆಯ ವೈದ್ಯ ಡಾ. ಹೆಚ್.ಸಿ.ಶಿವಕುಮಾರ್ ಮಾತನಾಡಿ, ಮನುಷ್ಯನ ದೇಹ ಸದೃಢವಾಗಿ ಇರಬೇಕಾದರೆ ಮೂಳೆ ಸಾಂದ್ರತೆ ಹಾಗೂ ಕೀಲುಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು. ಆದ್ದರಿಂದ ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳುವುದರ ಮುಖಾಂತರ ಪರೀಕ್ಷಿಸಿಕೊಂಡು ಉತ್ತಮ ಆರೋಗ್ಯ ಹೊಂದಬೇಕು ಎಂದು ತಿಳಿಸಿದರು.
ಫ್ರೆಂಡ್ ಸೆಂಟರ್ ಮಹಿಳಾ ವಿಭಾಗದ ಅಧ್ಯಕ್ಷೆ ಸಪ್ನಾ ಬದರಿನಾಥ ಮಾತನಾಡಿ, ಈಗಾಗಲೇ ನಮ್ಮ ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದಿಂದ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಮ್ಯಾಕ್ಸ್ ಆಸ್ಪತ್ರೆ ಹಾಗೂ ವಾಸನ್ ಐ ಕೇರ್. ಹಾಗೂ ಸರ್ಜಿ ಆಸ್ಪತ್ರೆ ಸಹಕಾರದೊಂದಿಗೆ ಉಚಿತವಾಗಿ ಕಣ್ಣಿನ ತಪಾಸಣೆ, ಮಹಿಳೆಯರ ಆರೋಗ್ಯ ಮತ್ತು ಮಧುಮೇಹ ರಕ್ತ ಪರೀಕ್ಷೆ, ಮೂಳೆ ಸಾಂದ್ರತೆ ಪರೀಕ್ಷೆ ಹಮ್ಮಿಕೊಂಡಿದ್ದೇವೆ ಎಂದರು.

300ಕ್ಕೂ ಹೆಚ್ಚು ಜನ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಯಾಯಿತು.
ಫ್ರೆಂಡ್ ಸೆಂಟರ್ ಅಧ್ಯಕ್ಷ ಬಿ.ಜಿ.ಧನರಾಜ್ ಮಾತನಾಡಿ, ಫ್ರೆಂಡ್ ಸೆಂಟರ್ ಸಂಸ್ಥೆ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಇಂತಹ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ಫ್ರೆಂಡ್ಸ್ ಸೆಂಟರ್ ಮಾಜಿ ಅಧ್ಯಕ್ಷ ಜಿ.ವಿಜಯಕುಮಾರ್, ವಿ ನಾಗರಾಜ್, ಬಿಂದು ವಿಜಯ ಕುಮಾರ್, ಶ್ರೀ ರಂಜಿನಿ ದತ್ತಾತ್ರಿ, ಕಾರ್ಯದರ್ಶಿ ಸ್ಮಿತಾ ನವೀನ್, ಟಿಎಸ್ ಬದರಿನಾಥ್. ಸೆಂತಿಲ್ವೇಲಂ, ಅಶ್ವಥ್ ನಾರಾಯಣ್, ವೀಣಾ ಗುರುನಾಥ್, ಲಕ್ಷ್ಮೀ ಸತ್ಯಂ ಹಾಗೂ ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ನಿರ್ದೇಶಕರು, ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Madhu Bangarappa ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭದ ದಿನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

0

Madhu Bangarappa ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು…

ಬಳಿಕ ಪರೀಕ್ಷಾ ಸಿದ್ದತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಠಡಿಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

Madhu Bangarappa ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ನನ್ನೆಲ್ಲಾ ಆತ್ಮೀಯ ವಿದ್ಯಾರ್ಥಿಗಳು ಭಯ, ಆತಂಕ ಬಿಟ್ಟು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಯಶಸ್ಸು ನಿಮ್ಮದಾಗಲಿ ಎಂದು ಈ ಸಂದರ್ಭದಲ್ಲಿ ಮತ್ತೊಮ್ಮೆ ಶುಭ ಹಾರೈಸಿದರು..

Chamber Of Commerce ಪ್ರಕೃತಿಗೆ ಹಾನಿ ಮಾಡದ ಹಾಗೆ ಶಿವಮೊಗ್ಗ ಜಿಲ್ಲೆಯನ್ನು ಅಭಿವೃದ್ಧಿಪಡಿಸಬೇಕಿದೆ- ಗುರುದತ್ತ ಹೆಗಡೆ

0

Chamber Of Commerce ಶಿವಮೊಗ್ಗ ಜಿಲ್ಲೆಯು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ರೈಸಿಂಗ್ ಶಿವಮೊಗ್ಗ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಕೃತಿಗೆ ಹಾನಿಯಾಗದ ರೀತಿ ಜಿಲ್ಲೆಯನ್ನು ಅಭಿವೃದ್ಧಿ ಮಾಡಬೇಕಾಗಿದೆ. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕೈಗಾರಿಕಾ ಭೂಮಿ ಕೊರತೆ ಇದೆ. ಇದನ್ನು ನಿಮಿಸುವುದಕ್ಕೆ ಜಿಲ್ಲಾ ಆಡಳಿತವು ಕೆ ಐ ಎ ಡಿ ಬಿ ಮತ್ತು ಸರ್ಕಾರದ ಕೈಜೋಡಿಸಿದೆ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಮಾತನಾಡಿ, ಸಾರ್ವಜನಿಕರ ಭದ್ರತೆ ಮತ್ತು ಸುರಕ್ಷತೆ ವಿಚಾರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಮಿತಿಮೀರಿರುವ ಡ್ರಗ್ಸ್ ಹಾವಳಿ ತಡೆಯಲು ಪೊಲೀಸ್ ಇಲಾಖೆಯು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.
Chamber Of Commerce ನಗರದ ಬಡಾವಣೆಗಳಲ್ಲಿರುವ ಸಮಾಜಘಾತಕ ಶಕ್ತಿಗಳ ನಿಗ್ರಹಕ್ಕೆ ಇಲಾಖೆ ಶ್ರಮಿಸುತ್ತಿದೆ. ಸೈಬರ್ ಕ್ರೈಂನಲ್ಲಿ ವಿದ್ಯಾವಂತರು ಅತಿ ಹೆಚ್ಚು ಹಣ ಕಳೆದುಕೊಳ್ಳುತ್ತಿದ್ದು, ಜಾಗೃತಿ ವಹಿಸಬೇಕು. 1930 ಸಹಾಯವಾಣಿಗೆ ಕರೆ ಮಾಡಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಜಿಲ್ಲಾ ಕೈಗಾರಿಕಾ ಅಭಿವೃದ್ಧಿಯಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪಾತ್ರ ಗಣನೀಯವಾಗಿದೆ. ಶಿವಮೊಗ್ಗದಲ್ಲಿ ರಫ್ತು ಆಧಾರಿತ ಕೈಗಾರಿಕಾ ಉತ್ಪನ್ನದ ಅನೇಕ ಕೈಗಾರಿಕೆಗಳಿದ್ದು, ಕೈಗಾರಿಕಾ ವಸಾಹತು ಪ್ರದೇಶಗಳಿಗೆ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರ ಗಮನ ಹರಿಸಬೇಕು ಎಂದರು.
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಶೀಘ್ರ ಪುನರಾರಂಭಿಸಬೇಕು. ಭದ್ರಾವತಿಯ ಮೈಸೂರು ಪೇಪರ್ ಮಿಲ್ ನ ಆಧುನಿಕರಣಕ್ಕೆ ಸರ್ಕಾರ ಬಂಡವಾಳವನ್ನು ಹೂಡಬೇಕು. ಸಕ್ಕರೆ ಕಾರ್ಖಾನೆ, ಪಾಮ್ ಆಯಿಲ್ ಕಾರ್ಖಾನೆ ಮತ್ತು ಮೈಸೂರು ಮಹಾರಾಜರು ಹಿಂದೆ ಪ್ರಾರಂಭಿಸಿದ್ದ ಅನೇಕ ಕೈಗಾರಿಕೆಗಳನ್ನು ಹೊಸದಾಗಿ ಬಂಡವಾಳ ಹೂಡುವುದರ ಮೂಲಕ ಅವುಗಳ ಪುನರಾರಂಭಕ್ಕೆ ಸರ್ಕಾರ ಪ್ರಯತ್ನಿಸಬೇಕು ಎಂದರು.
ಶಿವಮೊಗ್ಗ ತುಮಕೂರು ರಸ್ತೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಕೈಗಾರಿಕಾ ಅಭಿವೃದ್ಧಿಗಾಗಿ ಪ್ರಮುಖವಾಗಿ ಲ್ಯಾಂಡ್ ಸಮಸ್ಯೆ ಇದ್ದು, ಕೆಐಎಡಿಬಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಬೇಕು. ದೇವಕಾತಿ ಕೈಗಾರಿಕಾ ವಸಹಾತು ಪ್ರದೇಶದ ಸಮಸ್ಯೆಯನ್ನು ಬಗೆಹರಿಸಬೇಕು. ಬ್ರ್ಯಾಂಡ್ ಶಿವಮೊಗ್ಗವಾಗಿ ರೂಪುಗೊಳ್ಳಲು ಎಲ್ಲರೂ ಸಹ ಜಿಲ್ಲಾಡಳಿತದ ಜೊತೆಗೆ ಸಹಕರಿಸಬೇಕು ಎಂದರು.
ಪರಿಸರವಾದಿ ಅಖಿಲೇಶ್ ಚಿಪ್ಲಿ, ಆರ್ ಟಿ ಒ ಕಚೇರಿಯ ಅಧೀಕ್ಷಕ ರಾಮಚಂದ್ರಪ್ಪ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಅಂಗಡಿ, ಪ್ರದೀಪ್ ಎಲಿ, ವಿ.ಕೆ.ಜೈನ್, ಎಸ್.ಪಿ.ಶಂಕರ್, ಲಕ್ಷ್ಮೀದೇವಿ ಗೋಪಿನಾಥ್, ಮಾಜಿ ಅಧ್ಯಕ್ಷರಾದ ಡಿ.ಎಂ.ಶಂಕರಪ್ಪ, ಕೆ.ವಿ.ವಸಂತ್ ಕುಮಾರ್, ಅಶ್ವಥ್ ನಾರಾಯಣ್ ಶೆಟ್ಟಿ, ಸಾರ್ವಜನಿಕರು, ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರುಗಳು, ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳು ಇದ್ದರು.

World Smile Day  ರಕ್ತದಾನದಿಂದ ದೈಹಿಕ,ಮಾನಸಿಕ ಆರೋಗ್ಯ ವೃದ್ಧಿ- ಕಮಾಂಡೆಂಟ್ ಯುವಕುಮಾರ್

0

World Smile Day  ವೃತ್ತಿಯ ಜೊತೆಗೆ ಸಮಾಜ ಸೇವೆಯು ಅತ್ಯಂತ ಮುಖ್ಯ ಅದರಲ್ಲೂ ರಕ್ತದಾನದಂತಹ ಬಹಳ ಶ್ರೇಷ್ಠವಾದ ದಾನ. ಮತ್ತೊಂದಿಲ್ಲ ರಕ್ತದಾನ ಮಾಡುವುದ ರಿಂದ. ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಮತ್ತೊಬ್ಬರ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ ಎಂದು ಮಾಚೇನಹಳ್ಳಿಯ ಪೊಲೀಸ್ ಸಶಸ್ತ್ರ ಪಡೆಯ ಮುಖ್ಯ ಕಮಾಂಡೆಂಟ್ ಯುವಕುಮಾರ್ ಅಭಿಮತ ವ್ಯಕ್ತಪಡಿಸಿದರು. ಅವರು ಮಾಚೇನಹಳ್ಳಿಯ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ವತಿಯಿಂದ ವಿಶ್ವ ನಗು ದಿನದ ಅಂಗವಾಗಿ ತಮ್ಮ ಪೊಲೀಸ್ ಪಡೆಯ ಸಹಕಾರದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿ ಕೊಂಡು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ದಿನಕರ್ ಪಾಲ್ಗೊಂಡು ಸುರಕ್ಷಿತ ರಕ್ತದಾನದ ಬಗ್ಗೆ ಸರ್ವರನ್ನು ಪ್ರೇರೇಪಿಸಿದರು ಮತ್ತು ರಕ್ತದಾನದ ಮಹತ್ವವನ್ನು ತಿಳಿಸಿದರು ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಜಿ.ಪಿ ನವೀನ್ ಹಾಗೂ ಸಿಬ್ಬಂದಿಗಳಾದ ಶ್ರುತಿ ,ಧರಣೇಂದ್ರ ದಿನಕರ್ ,ತಾರಾನಾಥ್ ,ಲಕ್ಷ್ಮಿ ಪಾಲ್ಗೊಂಡಿದ್ದರು, ಪೊಲೀಸ್ ಸಿಬ್ಬಂದಿ ವರ್ಗದವರು ರಕ್ತ ಗುಂಪು ತಪಾಸಣೆ ಹಾಗೂ ರಕ್ತದಾನ ಮಾಡಿದರು

Agricultural University ಒಗ್ಗಟ್ಟಿನಿಂದ ಕಾರ್ಯಶೀಲರಾದಲ್ಲಿ ಅಧಿಕ ಫಲ – ಡಾ.ಕೆ.ಪಿ.ಅಂಶುಮಂತ್

0

Agricultural University ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಕಾರ್ಯಗಳನ್ನು ಕೈಗೊಂಡಲ್ಲಿ ಅಧಿಕ ಫಲ ಶ್ರುತಿಯನ್ನು ಕಾಣಲು ಸಾಧ್ಯ ಎಂದು ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು ತಿಳಿಸಿದರು.
ಅವರು ಇತ್ತೀಚೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಕಚೇರಿಯ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗಾಗಿ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೃಷಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಶಶಿಧರ್ ರವರು ಮಾತನಡುತ್ತಾ, ಕೃಷಿಯಲ್ಲಿ ತಾಂತ್ರಿಕತೆಯನ್ನು ಸಮರ್ಥವಾಗಿ ಬಳಸುವಂತೆ ತಿಳಿಸಿದರು. ಸಂಪನ್ಮೂಲಗಳನ್ನು ಬಳಸುವ ಮುನ್ನ ತಮ್ಮ ಕೃಷಿ ಕ್ಷೇತ್ರದ ಕುರಿತು ಅಂದರೆ ಮಣ್ಣಿನ ಗುಣ ಮತ್ತು ಆರೋಗ್ಯ. ಬೆಳೆಗೆಬೇಕಾದ ನೀರಿನ ಅಗತ್ಯ ಇವುಗಳನ್ನು ಮೊದಲು ತಿಳಿದುಕೊಂಡು ತಂತ್ರಜ್ಞಾನವನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಬಳಸಿಕೊಳ್ಳುವುದನ್ನು ಉದಾಹರಣೆ ಸಹಿತವಾಗಿ ವಿವರಿಸಿದರು.
Agricultural University ಸಹಾಯಕ ಕೃಷಿ ನಿರ್ದೇಶಕರು ಕಾಶಿನಾಥ್ ರವರು ಮಾತನಾಡುತ್ತಾ, ಇಲಾಖೆಯಿಂದ ನೀಡುವ ಸೌಲಭ್ಯಗಳಾದ ಬಿತ್ತನೆಬೀಜ, ಪೈಪ್ ಗಳು, ಕೃಷಿಯಂತ್ರೋಪಕರಣಗಳು, ಕೃಷಿ ಮತ್ತು ತೋಟಗಾರಿಕೆಗೆ ಸಂಬAಧಿಸಿದ ವಿವಿಧ ಯೋಜನೆಗಳು, ಪಶುಸಂಗೋಪನೆ ಯೋಜನೆಗಳ ಕುರಿತಾದ ಮಾಹಿತಿಯನ್ನು ತಿಳಿಸಿ ಇವುಗಳ ಸದುಪಯೋಗವನ್ನು ಸಂಘಗಳ ಮೂಲಕ ಪಡೆಯುವಂತೆ ತಿಳಿಸಿದರು.
ಈ ತರಬೇತಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮತ್ತು ಅಚ್ಚುಕಟ್ಟು ಭಾಗದ ರೈತರುಗಳು ಹಾಗೂ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ), ಶ್ರೀಮತಿ ರಾಜಸುಲೋಚನಾ (ಕೃಷಿ), ಹಾಗೂ ಡಾ. ನಾಗೇಶ್ ಎಸ್, ಡೋಂಗರೆ (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

K.N.Phanindra ಬಾಲಕಿಯರ ಬಾಲಮಂದಿರಕ್ಕೆ ನ್ಯಾ.ಕೆ.ಎನ್.ಫಣೀಂದ್ರ ಅನಿರೀಕ್ಷಿತ ಭೇಟಿ. ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ

0

K.N.Phanindra ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ಶುಕ್ರವಾರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಸೂಕ್ತ ಸಲಹೆ ಸೂಚನೆಗಳನ್ನು‌ನೀಡಿದರು.
ಅಡುಗೆ ಮನೆಗೆ ತೆರಳಿ, ಅಡುಗು ಮನೆ ಮೇಲ್ಚಾವಣೆ ಹಾಗೂ ಆಹಾರದ ಸುರಕ್ಷಿತ ತಪಾಸಣೆ ಮಾಡಿದರು.
ಕೈ ತೊಳೆಯುವ ಸ್ಥಳ, ವಾಟರ್ ಫಿಲ್ಟರ್ , ಮಕ್ಕಳ ಮಲಗುವ ಕೊಠಡಿಯನ್ನು ಪರಿವೀಕ್ಷಿಸಿ ಹಾಳಾಗಿರುವ ಹಾಸಿಯನ್ನು ಹಾಗೂ ಮಂಚಗಳನ್ನು ಬದಲಾಯಿಸಬೇಕೆಂದು ನಿರ್ದೇಶನ ನೀಡಿದರು.
ಹಾಸಿಗೆ, ಮಂಚಗಳ ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು. ಹಾಳಾದ ಮಂಚಗಳನ್ನು ದುರಸ್ತಿಪಡಿಸಿ, ಹಾಳಾದ ಹಾಸಿಗೆಗಳನ್ನು ತೆಗೆದುಹಾಕಿ ಹೊಸದನ್ನು ಹಾಕಿಸುವಂತೆ ಸೂಷಿಸಿದರು. ಕಿಟಕಿ‌ ಗಾಜು, ಮೆಶ್ ಸರಿಪಡಿಸಿ ಸ್ವಚ್ಚತೆಯನ್ನು ಇನ್ನು ಒಂದು ವಾರದೊಳಗೆ ಮಾಡಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಆವರಣದೊಳಗೆ ಹಂದಿಗಳ ಹಾವಳಿ ತಪ್ಪಿಸಿ, ಸ್ವಚ್ಚತೆ ಕಾಪಾಡಿ ಸೂಕ್ತ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ಶೌಚಾಲಯ ವೀಕ್ಷಿಸಿದ ಅವರು ಒಡೆದ ಹಳ ಊಟ, ತಿಂಡಿ ಇತರೆ ಸೌಲಭ್ಯಗಳು ಸರಿಯಾಗಿ ನೀಡುತ್ತಿದ್ದಾರಾ, ಕುಡಿಯುವ ನೀರಿನ ಸೌಲಭ್ಯ, ಬಿಸಿನೀರು, ಹೊಟ್ಟೆ ತುಂಬ ಗುಣಮಟ್ಟದ ಊಟ ಕೊಡುತ್ತಿದ್ದಾರಾ? ಎಂದು ಕೇಳಿದರು. ಗ್ರಂಥಾಲಯಕ್ಕೆ ಬೇಕಾದ ಪುಸ್ತಕ ಗಳನ್ನು ಕೇಳಿರಿ.
ಏನು ಸೌಕರ್ಯ, ಸೌಲಭ್ಯಗಳು ಬೇಕೆಂದು ಕೇಳಿದರು. K.N.Phanindra ಸತ್ಪ್ರಜೆಗಳಾಗಬೇಕು. ಸೇವಾ ಮನೋಭಾವ ಬೆಳೆಸಿಕೊಂಡು, ಉತ್ತಮ‌ ಉದ್ಯೋಗ ಪಡೆದು‌, ದೇಶ ಸೇವೆ ಮಾಡುವಂತೆ ತಿಳಿಸಿದರು. ನಿಮ್ಮ ಪೀಳಿಗೆ ಚೆನ್ನಾಗಿದ್ದರೆ ದೇಶ ಅಭಿವೃದ್ಧಿ ಸಾಧ್ಯ. ಚೆನ್ನಾಗಿ ಓದಿರಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಅನುದಾನದ ಅವಶ್ಯಕತೆ ಇದ್ದರೆ ಕೇಳಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ತಮ್ಮ ಮನೆಯಂತೆ ಬಾಲಮಂದಿರವನ್ನು‌ ನೋಡಿಕೊಳ್ಳಬೇಕೆಂದು ತಿಳಿಸಿದರು.
ನಂತರ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಭೇಟಿಗೆ ನೀಡಿ, ಶಿವರಾತ್ರಿ ಹಬ್ಬದಂದು ಕೇಂದ್ರಕ್ಕೆ ದಾಖಲಾದ ಹೆಣ್ಣು ಮಗುವಿಗೆ ಉಪ ಲೋಕಾಯುಕ್ತರು ನಾಮಕರಣ ಮಾಡಿದರು.
ರಾಜ್ಯ ಮಹಿಳಾ‌ ನಿಲಯಕ್ಕೆ ಭೇಟಿ ನೀಡಿ, ನಿವಾಸಿಗಳೊಂದಿಗೆ ಮಾತನಾಡಿ, ಕುಂದು ಕೊರತೆಗಳನ್ನು ಆಲಿಸಿದರು.ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ಶುಕ್ರವಾರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಸೂಕ್ತ ಸಲಹೆ ಸೂಚನೆಗಳನ್ನು‌ನೀಡಿದರು.
ಅಡುಗೆ ಮನೆಗೆ ತೆರಳಿ, ಅಡುಗು ಮನೆ ಮೇಲ್ಚಾವಣೆ ಹಾಗೂ ಆಹಾರದ ಸುರಕ್ಷಿತ ತಪಾಸಣೆ ಮಾಡಿದರು.
ಕೈ ತೊಳೆಯುವ ಸ್ಥಳ, ವಾಟರ್ ಫಿಲ್ಟರ್ , ಮಕ್ಕಳ ಮಲಗುವ ಕೊಠಡಿಯನ್ನು ಪರಿವೀಕ್ಷಿಸಿ ಹಾಳಾಗಿರುವ ಹಾಸಿಯನ್ನು ಹಾಗೂ ಮಂಚಗಳನ್ನು ಬದಲಾಯಿಸಬೇಕೆಂದು ನಿರ್ದೇಶನ ನೀಡಿದರು.
ಹಾಸಿಗೆ, ಮಂಚಗಳ ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು. ಹಾಳಾದ ಮಂಚಗಳನ್ನು ದುರಸ್ತಿಪಡಿಸಿ, ಹಾಳಾದ ಹಾಸಿಗೆಗಳನ್ನು ತೆಗೆದುಹಾಕಿ ಹೊಸದನ್ನು ಹಾಕಿಸುವಂತೆ ಸೂಷಿಸಿದರು. ಕಿಟಕಿ‌ ಗಾಜು, ಮೆಶ್ ಸರಿಪಡಿಸಿ ಸ್ವಚ್ಚತೆಯನ್ನು ಇನ್ನು ಒಂದು ವಾರದೊಳಗೆ ಮಾಡಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಆವರಣದೊಳಗೆ ಹಂದಿಗಳ ಹಾವಳಿ ತಪ್ಪಿಸಿ, ಸ್ವಚ್ಚತೆ ಕಾಪಾಡಿ ಸೂಕ್ತ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ಶೌಚಾಲಯ ವೀಕ್ಷಿಸಿದ ಅವರು ಒಡೆದ ಹಳ
ಊಟ, ತಿಂಡಿ ಇತರೆ ಸೌಲಭ್ಯಗಳು ಸರಿಯಾಗಿ ನೀಡುತ್ತಿದ್ದಾರಾ, ಕುಡಿಯುವ ನೀರಿನ ಸೌಲಭ್ಯ, ಬಿಸಿನೀರು, ಹೊಟ್ಟೆ ತುಂಬ ಗುಣಮಟ್ಟದ ಊಟ ಕೊಡುತ್ತಿದ್ದಾರಾ? ಎಂದು ಕೇಳಿದರು. ಗ್ರಂಥಾಲಯಕ್ಕೆ ಬೇಕಾದ ಪುಸ್ತಕ ಗಳನ್ನು ಕೇಳಿರಿ.
ಏನು ಸೌಕರ್ಯ, ಸೌಲಭ್ಯಗಳು ಬೇಕೆಂದು ಕೇಳಿದೆಉ.

ಸತ್ಪ್ರಜೆಗಳಾಗಬೇಕು. ಸೇವಾ ಮನೋಭಾವ ಬೆಳೆಸಿಕೊಂಡು, ಉತ್ತಮ‌ ಉದ್ಯೋಗ ಪಡೆದು‌, ದೇಶ ಸೇವೆ ಮಾಡುವಂತೆ ತಿಳಿಸಿದರು. ನಿಮ್ಮ ಪೀಳಿಗೆ ಚೆನ್ನಾಗಿದ್ದರೆ ದೇಶ ಅಭಿವೃದ್ಧಿ ಸಾಧ್ಯ. ಚೆನ್ನಾಗಿ ಓದಿರಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಅನುದಾನದ ಅವಶ್ಯಕತೆ ಇದ್ದರೆ ಕೇಳಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ತಮ್ಮ ಮನೆಯಂತೆ ಬಾಲಮಂದಿರವನ್ನು‌ ನೋಡಿಕೊಳ್ಳಬೇಕೆಂದು ತಿಳಿಸಿದರು.
ನಂತರ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಭೇಟಿಗೆ ನೀಡಿ, ಶಿವರಾತ್ರಿ ಹಬ್ಬದಂದು ಕೇಂದ್ರಕ್ಕೆ ದಾಖಲಾದ ಹೆಣ್ಣು ಮಗುವಿಗೆ ಉಪ ಲೋಕಾಯುಕ್ತರು ನಾಮಕರಣ ಮಾಡಿದರು.
ರಾಜ್ಯ ಮಹಿಳಾ‌ ನಿಲಯಕ್ಕೆ ಭೇಟಿ ನೀಡಿ, ನಿವಾಸಿಗಳೊಂದಿಗೆ ಮಾತನಾಡಿ, ಕುಂದು ಕೊರತೆಗಳನ್ನು ಆಲಿಸಿದರು. ನಂತರ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ‌ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಅಡುಗೆ ಮನೆ, ದಾಸ್ತಾನು‌ ಕೊಠಡಿ, ಮಕ್ಕಳು ಮಲಗುವ ಕೊಠಡಿಗಳನ್ನು‌ ವೀಕ್ಷಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.

ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಆಗಬೇಕು. ಏನಾದರೂ ತೊಂದರೆ ಇದ್ದರೆ ಹೇಳಿ, ಗ್ರಂಥಾಲಯ ಇದೆಯಾ? ಎಂದು‌ಕೇಳಿದರು. ವೈದ್ಯರು ಬಂಸು ತಪಾಸಣೆ ಮಾಡುತ್ತಾರೆ. ಸ್ಯಾನಿಟರಿ ಪ್ಯಾಡ್ ನೀಡುತ್ತಾರಾ ಎಂದು ಪ್ರಶ್ನಿಸಿದರು.‌ ಕಂಪ್ಯೂಟರ್ ಇದೆಯಾ, ೨೫೦ ಕ್ಕೂ ಹೆಚ್ಚು ಜನ ಇರುವ ಕಾರಣ ೫ ೬ ಕಂಪ್ಯೂಟರ್ ನೀಡಿರಿ. ಬಿಸಿ ನೀರು ನೀಡಿರಿ‌, ಮಕ್ಕಳಿಗೆ ನೀಡಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು.‌ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ, ಉತ್ತೇಜಿಸುವುದಿಲ್ಲ. ನಿಯಂತ್ರಿಸುತ್ತೇನೆ ಎಂಬ ಮನೊಭಾವ ಇಟ್ಟುಕೊಂಡು ಮುಂದೆ ಬರಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳ ಬೇಕು ಎಂದರು.
ಹಾಸ್ಟೆಲ್ ಆವರಣದಲ್ಲಿರುವ ಯುಜಿಡಿ ಸಂಪರ್ಕ ವೀಕ್ಷಿಸಿ , ಸೂಕ್ತವಾದ ಯುಜಿಡಿ ವ್ಯವಸ್ಥೆ ಮಾಡುವಂತೆ ಪಾಲಿಕೆ ಆಯುಕ್ತ ರಿಗೆ ಸೂಚನೆ ನೀಡಿದರು.
ಈ ವೇಳೆ ಅವರು ಮಾತನಾಡಿ, ಎಸ್ ಸಿ ಎಸ್ ಟಿ ಹಾಸ್ಟೆಲ್ ನಲ್ಲಿ‌ ನಿರ್ಲಕ್ಷ್ಯ ವಹಿಸಿ ಕೊಡಬೇಕಾದ ಸೌಲಭ್ಯ ನೀಡದ, ಸ್ವಚ್ಚತೆ ಕಾಪಾಡದ ಅಧಿಕಾರಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಸರಿಪಡಿಸಿಕೊಳ್ಳಲು ಕಾಲಾವಕಾಶ ನೀಡಿ, ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದರು.

Karnataka Lokayukta ಉಪ ಲೋಕಾಯುಕ್ತರಿಂದ ಸ್ಥಳದಲ್ಲೇ 41 ಪ್ರಕರಣಗಳ ಇತ್ಯರ್ಥ. ಸಾರ್ವಜನಿಕರ ಸಮಾಧಾನ

0

Karnataka Lokayukta ಕರ್ನಾಟಕ ಲೋಕಾಯುಕ್ತದಲ್ಲಿ ದಾಖಲಾದ ಶಿವಮೊಗ್ಗ ಜಿಲ್ಲೆಯ ಒಟ್ಟು ಪ್ರಕರಣಗಳಲ್ಲಿ ಆಯ್ದ 64ಪ್ರಕರಗಳಿಗೆ ಸಂಬಂಧಿಸಿದಂತೆ ದೂರುದಾರರು ಮತ್ತು ಎದಿರುದಾರರಿಗೆ ನೋಟಿಸ್ ನೀಡಿ ನೀಡಿ, ವಿಚಾರಣೆಗೆ ಬರುವಂತೆ ಸೂಚಿಸಲಾಗಿತ್ತು.

ಅದರಂತೆ 64ಪ್ರಕರಣಗಳ ಪೈಕಿ ವಿಚಾರಣೆಯಲ್ಲಿ ಭಾಗವಹಿಸಿದ್ದ 54 ಮೊಕದ್ದಮೆಗಳ ವಿಚಾರಣೆ ನಡೆಸಿ, 41ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗಿದೆ. ಇದರಿಂದಾಗಿ ದೂರುದಾರರಿಗೆ ಸಮಾಧಾನ ದೊರೆತಿದೆ ಮಾತ್ರವಲ್ಲ ಪ್ರಕರಣಗಳಲ್ಲಿ ಎದುರುದಾರಾರಾಗಿದ್ದ ಅಧಿಕಾರಿ – ನೌಕರರು ಪ್ರಕರಣ ಪೂರ್ಣಗೊಂಡಿದ್ದರಿಂದಾಗಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ ಎಂದರು.

ಭೇಟಿಯ ಮೊದಲ ದಿನದಂದು ದಾಖಲಾದ ಒಟ್ಟು ಪ್ರಕರಣಗಳಲ್ಲಿ 40 ಅರ್ಜಿದಾರರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಗಿದೆ ಎಂದ ಅವರು, ಇಂದು 292ಜನರಿಗೆ ಟೋಕನ್ ನೀಡಲಾಗಿತ್ತು. ಅವುಗಳಲ್ಲಿ 191ಅರ್ಜಿಗಳನ್ನು ಸ್ವೀಕರಿಸಿ, 120 ಅರ್ಜಿಗಳ ಮೇಲೆ ಮೊಕದ್ದಮೆ ದಾಖಳಿಸಿಕೊಳ್ಳಲಾಗಿದೆ. ಇಂದು ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಉಳಿದ ದೂರುದಾರರು ಸೋಮವಾರದ ನಂತರ ಸ್ಥಳೀಯ ಲೋಕಾಯುಕ್ತ ಉಪಾದೀಕ್ಷಕರಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದರು.

ಜಿಲ್ಲೆಯ್ ವಿವಿಧ ಇಲಾಖೆಗಳಲ್ಲೂ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ, ಅರ್ಹರಿಗೆ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿದ ಅವರು ಸೌಲಭ್ಯ ಕೋರಿ ಕಚೇರಿಗೆ ಬರುವ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡಬೇಕು. ಪ್ರಸ್ತುತ ದಾಖಲಾಗಿರುವ ಪ್ರಕರಣಗಳ ಹೆಚ್ಚಿನ ಮಾಹಿತಿ ಹಾಗೂ ಕ್ರಮಕ್ಕಾಗಿ ಪುನಃ ತಮಗೆ ಕಳುಹಿಸಿಕೊಡಲಾಗುವುದು ಎಂದರು.

ಭೇಟಿಯ ಅವಧಿಯಲ್ಲಿ ಜಿಲ್ಲಾಡಳಿತದ ಸ್ಪಂದನೆ ಬಗ್ಗೆ ಉಪಲೋಕಾಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದರು.

Karnataka Lokayukta ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮಾತನಾಡಿ, ಎರಡು ದಿನಗಳ ಅವಧಿಯಲ್ಲಿ ಉಪಲೋಕಾಯುಕ್ತರು ತೋರಿದ ಉತ್ಸಾಹ, ಶ್ರದ್ಧೆ, ನಿಷ್ಠೆ ಮತ್ತು ಆಸಕ್ತಿ ಎಲ್ಲರಿಗೂ ಮಾದರಿಯಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕರು ಮಾತ್ರವಲ್ಲದೆ ಪ್ರಮಾಣಿಕವಾಗಿ ಸೇವೆ ಸಲ್ಲಿಸುವ ನೌಕರರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ನಿರ್ಲಕ್ಷ ಮಾಡುವವರನ್ನು ಸಂರಕ್ಷಿಸುವುದು ಸಾಧ್ಯವಿಲ್ಲ ಎಂಬುದನ್ನು ತಿಳಿಸಿದ್ದಾರೆ. ಲೋಕಾಯುಕ್ತಡಾ ಬಗ್ಗೆ ನೌಕರರಿಗೆ ನೀಡಿದ ಮಾಹಿತಿ ಉಪಯುಕ್ತವಾಗಿದೆ ಎಂದರು.

ದೂರು ಸ್ವೀಕಾರ, ವಿಚಾರಣೆಯ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಸಿ.ಇ.ಒ. ಎನ್. ಹೇಮಂತ್, ನ್ಯಾ. ವಿಜಯಾನಂದ್, ನ್ಯಾ. ಲೋಕಪ್ಪ, ಕಿರಣ್ ಪಾಟೀಲ್, ಎಂ. ಎಸ್. ಸಂತೋಷ್, ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.

District Legal Services Authority ಕಾನೂನಿನ ವ್ಯಾಖ್ಯಾನ,ವಿಶ್ಲೇಷಣೆ & ಉತ್ತಮ ತೀರ್ಪುಗಳಿಗೆ ವಕೀಲರು ಕಾರಣಕರ್ತರು- ನ್ಯಾ.ಕೆ.ಎನ್.ಫಣೀಂದ್ರ.

0

District Legal Services Authority ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಹಕಾರ, ಸಲಹೆ ನೀಡುವ ಹಾಗೂ ಸಾರ್ವಜನಿಕ ಆಡಳಿತ ಸುಗಮಗೊಳಿಸುವಲ್ಲಿ ವಕೀಲ ಸಮುದಾಯ ಸದಾ ಮುಂದಿರುತ್ತದೆ ಎಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಘಟಕ ಮತ್ತು ಜಿಲ್ಲಾ ವಕೀಲರ ಸಂಘ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತು ಏರ್ಪಡಿಸಲಾಗಿದ್ದ ವಕೀಲರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟು ಮಾತನಾಡಿದರು.
ಹಿಂದೆ ರಾಷ್ಟ್ರ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದಾಗಿತ್ತು. ಬಹುತೇಕ ಸ್ವಾತಂತ್ರö್ಯ ಹೋರಾಟಗಾರರೆಲ್ಲ ವಕೀಲರಾಗಿದ್ದರು. ಮೇಲ್ಪಂಕ್ತಿಯ ಸಮುದಾಯ ಇದು. ಸರ್ಕಾರದ ಇತರೆ ಅಂಗಗಳಿಗಿAತ ನ್ಯಾಯಾಂಗದ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ, ವಿಶ್ವಾಸ ಇದೆ.
ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಹೆಚ್ಚಿದೆ. ನಮ್ಮ ದೇಶದಲ್ಲಿ ವಕೀಲರು, ನ್ಯಾಯಾಧೀಶ ಸಂಖ್ಯೆ ಕಡಿಮೆ ಇದೆ. ಆದರೂ ವ್ಯವಸ್ಥೆ ಕುಸಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಈ ಮೂರು ಅಂಗಗಳು ಸೇರಿದರೆ ಮಾತ್ರ ಸಾರ್ವಜನಿಕ ಆಡಳಿತ ಸಾಧ್ಯ.
District Legal Services Authority ಇಡೀ ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಸಾಮಾನ್ಯವಾಗಿ ಯಾವಾಗಲೂ ವಕೀಲರು ಧ್ವನಿ ಎತ್ತುವ ಕೆಲಸ ಮಾಡುತ್ತಾ ಬಂದಿದ್ದಾರೆ. ಕಾರಣ ಅವರು ಕಾನೂನು, ವಿಶ್ಲೇಷಣೆಯಲ್ಲಿ ತರಬೇತಿ ಹೊಂದಿದ ಸಮುದಾಯವಾಗಿರುವುದು. ಈ ಪರಿಣಿತಿ, ಜ್ಞಾನದ ಜೊತೆ ಸಾಮಾಜಿಕ ಪ್ರವೃತ್ತಿಯನ್ನೂ ಬೆಳೆಸಿಕೊಂಡರೆ ಇತರೆ ಅಂಗಗಳಿಗೆ ಒತ್ತಾಸೆಯಾಗಿ ನಿಲ್ಲಬಹುದಾಗಿದೆ. ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಲಹೆ ನೀಡಿ, ಸಹಕರಿಸುವ, ಲೋಪಗಳನ್ನು ಸರಿಪಡಿಸುವ ಅವಕಾಶ ಈ ಸಮುದಾಯಕ್ಕಿದೆ. ಆಗ ಮೂರು ಅಂಗಗಳನ್ನು ಬಲಗೊಳಿಸಬಹುದು ಎಂದ ಅವರು ಜಿಲ್ಲೆಯ ವಕೀಲರು ಮನಸ್ಸು ಮಾಡಿದರೆ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದರು.
ಶಾಸಕಾಂಗ ಕಾನೂನು ರಚಿಸಿದರೆ, ಕಾರ್ಯಾಂಗ ಕಾನೂನು, ಸರ್ಕಾರ ರೂಪಿಸುವ ಯೋಜನೆಗಳು, ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತದೆ. ಆದರೆ ನ್ಯಾಯಾಂಗಕ್ಕೆ ಈ ಎಲ್ಲವನ್ನೂ ವಿಶ್ಲೇಷಣೆ ಮಾಡುವ ಶಕ್ತಿ ಇದೆ. ಯಾವ ಹೊಸ ಕಾನೂನು ಬೇಕು, ಯಾವುದು ಬೇಡ ಎಂಬ ಸಲಹೆಗಳನ್ನು ನೀಡುವ ಶಕ್ತಿ ವಕೀಲ ಸಮುದಾಯಕ್ಕಿದೆ. ವ್ಯಾಖ್ಯಾನ, ವಿಶ್ಲೇಷಣೆ ಮತ್ತು ಉತ್ತಮ ತೀರ್ಪುಗಳಿಗೆ ಮುಖ್ಯ ಕಾರಣಕರ್ತರು ವಕೀಲರು.
ಸರ್ಕಾರದ ನಿಯಮಾವಳಿಗಳು, ನಿರ್ದೇಶನ, ಒಟ್ಟಾರೆ ಚಟುವಟಿಕೆಗಳನ್ನು ಪ್ರಶ್ನೆ ಮಾಡುತ್ತಿರುವುದು ವಕೀಲ ಸಮುದಾಯ. ಶಾಸಕಾಂಗ ಪ್ರಕ್ರಿಯೆಯಲ್ಲಿ ವಕೀಲರ ಕೊಡುಗೆ ಮಹತ್ವದ್ದಾಗಿದ್ದು, ಕಾರ್ಯಾಂಗದ ಲೋಪಗಳನ್ನೂ ಪ್ರಶ್ನಿಸುವ ಮೂಲಕ ಸರಿಪಡಿಸುವ ಕೆಲಸವನ್ನು ಈ ಸಮುದಾಯ ಮಾಡುತ್ತಿದೆ.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-05ರ ಜಿ.ವಿ. ವಿಜಯನಂದ, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದÀ ಕಿರಣ್ ಪಿ.ಎಂ. ಪಾಟೀಲ್ ಪಾಲ್ಗೊಂಡಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರರಾಜ್ ಎಂ.ಡಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಎಸ್ ಎ, ನ್ಯಾಯಾಧೀಶರು, ವಕೀಲರು ಪಾಲ್ಗೊಂಡಿದ್ದರು.

Rotary Club Shimoga ಸಾಧಕರನ್ನ ಗುರುತಿಸಿ ಸನ್ಮಾನಿಸುವುದು ಅನನ್ಯ ಮತ್ತು ಅರ್ಥಪೂರ್ಣ- ದೇವ್ ಆನಂದ್

0

Rotary Club Shimoga ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಸಮಾಜದ ಇತರರಿಗೂ ಪ್ರೇರಣೆ ದೊರಕುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ದೇವ್ ಆನಂದ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಿಂದ ಆಯೋಜಿಸಿದ್ದ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಾಧಕರನ್ನು ಗುರುತಸಿ ಸನ್ಮಾನ ಮಾಡುವುದು ನಿಜವಾಗಿಯೂ ಅನನ್ಯ ಮತ್ತು ಅರ್ಥಪೂರ್ಣ. ನಾವು ಯಾವುದೇ ಒಂದು ಕಾರ್ಯಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ನಿರಂತರ ಪರಿಶ್ರಮ ಮತ್ತು ಪ್ರಯತ್ನ ಬಹಳ ಮುಖ್ಯ. ಈ ಸಾಧಕರನ್ನು ನಾವು ಸಮಾಜಕ್ಕೆ ಪರಿಚಯಿಸುವುದರ ಮೂಲಕ ಲಕ್ಷಾಂತರ ಜನಕ್ಕೆ ಪ್ರೇರಣೆ ಸಿಗುತ್ತದೆ. ಒಳ್ಳೆಯ ಸಮಾಜಮುಖಿ ಕಾರ್ಯಕ್ರಮ. ಸಾಧಕರನ್ನು ಗುರುತಿಸಿ ಗೌರವಿಸಿ ಮೂಲಕ ಅವರ ಸೇವೆ ಹೆಚ್ಚಾಗುವಂತೆ ಮಾಡುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಲ್ಲಿ ಜಿಲ್ಲಾ ಗವರ್ನರ್ ಅವರ ಸಾರ್ವಜನಿಕ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಶಿಮೊಗ್ಗ ಸೆಂಟ್ರಲ್ ಹೆಮ್ಮೆಯ ಸದಸ್ಯೆ, ಮಾಜಿ ಉಪಮೇಯರ್ ಸುರೇಖಾ ಮುರುಳಿಧರ್ ಅವರು ಸೀನಿಯರ್ ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಮತ್ತು ಅವರ ಸಾಮಾಜಿಕ ಸೇವೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು.
Rotary Club Shimoga ಸಾಧಕ ಅಂತರರಾಷ್ಟ್ರೀಯ ಈಜುಗಾರ ಮೋತಿನಾಯಕ್ ಅವರನ್ನು ಸನ್ಮಾನಿಸಲಾಯಿತು. ಮುಖ್ಯಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದು ಅನೇಕ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಇನ್ನೋರ್ವ ಸಾಧಕಿ ಕವಿನಾ ಅವರು ರಾಷ್ಟ್ರೀಯ ಕುಸ್ತಿ ಪಟು, ರಾಜ್ಯ ಮಟ್ಟದಲ್ಲಿ ಚಿನ್ನ ಗೆದ್ದ ಸಾಧನೆ ಹಾಗೂ ನಮ್ಮ ಶಿವಮೊಗ್ಗದ ಹೆಮ್ಮೆಯ ಮಗಳು ಅವರನ್ನು ಸನ್ಮಾನಿಸಲಾಯಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ವಹಿಸಿದ್ದರು. ವಲಯ ಸಹಾಯಕ ಗವರ್ನರ್ ಸುರೇಶ್ ಎಚ್.ಎಂ. ಮತ್ತು ಕಾರ್ಯದರ್ಶಿ ಈಶ್ವರ್ ಉಪಸ್ಥಿತರಿದ್ದರು. ಮಾಜಿ ಜಿಲ್ಲಾ ಗವರ್ನರ್ ಜೆ ಎನ್ ಪ್ರಕಾಶ್ ಮತ್ತು ಚಂದ್ರಶೇಖರ್, ಮಾಜಿ ಸಹಾಯಕ ಗವರ್ನರ್ ರವಿ ಕೊಟೋಜಿ, ಚೂಡಾಮಣಿ ಪವಾರ್, ಆನಂದ್ ಎಸ್ ಜಿ , ವಿಜಯಕುಮಾರ್ ಜಿ, ವಲಯ ಮತ್ತು ಜಿಲ್ಲಾ ಎಲ್ಲಾ ನಾಯಕರು, ಎಲ್ಲಾ ಕ್ಲಬ್ಬಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರಿದ್ದರು.

World Sparrow Day ಗುಬ್ಬಚ್ಚಿಗೊಂದು ಕವಿಗುಟುಕು

0

World Sparrow Day ಎಲ್ಲಿ ಹಾರಿಹೋದೆ ಗುಬ್ಬಚ್ಚಿ? ಅಂಗಳದ ಕಾಳುಗಳ ಪುಟ್ಟ ಕೀಟಗಳ ಕೊಕ್ಕಿನಿಂದ ಹೆಕ್ಕಿ ತಿನ್ನುವ ಹಕ್ಕಿ ಮರೆಯಾದೆ ಎಲ್ಲಿ?

ಬ್ರಹ್ಮಾಸ್ತ್ರಗಳೇ ಇಲ್ಲ ಈಗ.

ಭಯವೇಕೆ? ಕಾಳುಗಳ ಹರಡಿ ಕಾದಿರುವೆ ಕಳವಳವೇ ಹೊದ್ದಿದೆ ಅಂಗಳದ ತುಂಬಾ.

ಅಪ್ಪಚ್ಚಿಗಳ ತಿನ್ನೆ. ಪಾಪಚ್ಚಿಗಳ ಮನದನ್ನೆ. ಹಾರಿ ಹೋದೆ ಎಲ್ಲಿ?

ನಾನಂತೂ ಕಟ್ಟಿರುವೆ ನಿನಗೊಂದು ಗೂಡು. ನೀರಿಟ್ಟು,ಕಾಳಿಟ್ಟು
ನನ್ನೆಲ್ಲ ಸಮಯ ನಿನಗಿಟ್ಟು. ಬಾ ಭಯ ಬಿಟ್ಟು.