Saturday, March 7, 2026
Saturday, March 7, 2026
Home Blog Page 366

Karnataka Sahitya Academy ಏಪ್ರಿಲ್ 21 ರಿಂದ 23 ವರೆಗೆ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯ ಕುರಿತು ಕಮ್ಮಟ

0

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಕುರಿತು ಏ. 21 ರಿಂದ 23 ರವರೆಗೆ 3 ದಿನಗಳ ಕಮ್ಮಟವನ್ನು ಹಾವೇರಿ ಜಿಲ್ಲೆ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದ 20-45 ವಯೋಮಿತಿಯ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಅಕಾಡೆಮಿಯ ವೆಬ್‌ಸೈಟ್ ರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಏ.05 ರೊಳಗಾಗಿ ಸಲ್ಲಿಸುವುವಂತೆ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ತಿಳಿಸಿದ್ದಾರೆ.

Nidhi Aapke Nikat ಮಾರ್ಚ್ 27 ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿ “ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ

0

Nidhi Aapke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ರಿಪ್ಪನ್‌ಪೇಟೆಯ ಮೆಸ್ಕಾಂ ಹತ್ತಿರದ ಓಂ ಎಲೆಕ್ಟ್ರಿಕಲ್ಸ್ ನಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಪ್ಪನಹಳ್ಳಿ ರಸ್ತೆಯಲ್ಲಿನ ಎಂಕೆಈಟಿ, ಎಲ್‌ಕೆ ಆಂಗ್ಲ ಮಾಧ್ಯಮ ಸಿಬಿಎಸ್‌ಸಿ ವಿದ್ಯಾಲಯದಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
Nidhi Aapke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

Adichunchanagiri Shikshana Trust ಮಕ್ಕಳಲ್ಲಿ ಸಂಸ್ಕೃತಿ & ಸಂಸ್ಕಾರಗಳನ್ನ ಪೋಷಕರು ಹುಟ್ಟು ಹಾಕಬೇಕಿದೆ- ಶ್ರೀ ಸಾಯಿನಾಥಶ್ರೀ

0

Adichunchanagiri Shikshana Trust ಸಂಸ್ಕೃತಿ ಹಾಗೂ ಸಂಸ್ಕಾರವಿಲ್ಲದ ಬದುಕು ಅರ್ಥವಿಲ್ಲದ್ದು, ಮಕ್ಕಳಲ್ಲಿ ನಾವು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಹುಟ್ಟು ಹಾಕಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರು ನಿತ್ಯ ಶ್ರಮ ವಹಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಶಾಖಾಮಠದ ಪೂಜ್ಯ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಯುಕೆಜಿ ವಿದ್ಯಾರ್ಥಿಗಳ ವಿದ್ಯಾ ಸನ್ಮಾನ್ ದಿನವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಬೆಳೆಯುವ ಕುಡಿ ಮೊಳಕೆಯಲ್ಲಿ ಎಂಬ ನಾನ್ನುಡಿಯಂತೆ, ಪೋಷಕರು ಮಕ್ಕಳಿಗೆ ರಾಮಾಯಣ ಮಹಾಭಾರತದಲ್ಲಿ ಬರುವ ಆದರ್ಶ ಗುಣಗಳನ್ನು ಮಕ್ಕಳಲ್ಲಿ ಅಳವಡಿಸಿದಾಗ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಋದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.
Adichunchanagiri Shikshana Trust ಶಾಲೆಯಲ್ಲಿ ಶಿಕ್ಷಕರ ಪಾತ್ರ ಎಷ್ಟಿರುತ್ತದೆಯೋ, ಅದರ ಎರಡರಷ್ಟು ಜವಾಬ್ದಾರಿಯನ್ನು ಪೋಷಕರು ತೆಗೆದುಕೊಳ್ಳಬೇಕು. ಮಕ್ಕಳ ಎದುರಿನಲ್ಲಿ ದೊಡ್ಡವರಾದ ನಾವು ಸುಸಂಸ್ಕೃತರಾಗಿದ್ದಾಗ ಮಾತ್ರ, ನಾವು ಮಕ್ಕಳಲ್ಲಿಯೂ ಸಂಸ್ಕಾರವನ್ನು ಕಾಣಬಹುದು,ಆಗ ಮಾತ್ರ ಮಕ್ಕಳ ಭವಿಷ್ಯ ಅಮೃತವಾಗುತ್ತದೆ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.
ಸಂಸ್ಕೃತಿ, ಸಂಸ್ಕಾರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ , ಶಿಕ್ಷಕರು ಕೇವಲ ಪಾಠ ಪ್ರವಚನಕ್ಕೆ ಮಾತ್ರ ಸೀಮಿತವಾಗದೆ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರಗೆಳೆಯಬೇಕು. ಅದರ ಜೊತೆಗೆ ಪಾಲಕರು ಹಾಗೂ ಶಿಕ್ಷಕರು, ಮಕ್ಕಳು ಅನಗತ್ಯವಾಗಿ ಮೊಬೈಲ್ ಬಳಕೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಭದ್ರಾವತಿಯ ಬುಳ್ಳಾಪುರದ ಬಿಜಿಎಸ್ ನರ್ಸರಿ ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಶಾರದಾ ಬಿ.ಹೆಚ್. ಗುರುಪುರದ ಬಿಜಿಎಸ್ ಶಾಲಾ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು, ಪೋಷಕರು ಮತ್ತು ಪುಟಾಣಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

District Legal Services Authority ನ್ಯಾಯಾಂಗದ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ, ವಿಶ್ವಾಸವಿದೆ- ನ್ಯಾ.ಕೆ.ಎನ್.ಫಣೀಂದ್ರ

0

District Legal Services Authority ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಹಕಾರ, ಸಲಹೆ ನೀಡುವ ಹಾಗೂ ಸಾರ್ವಜನಿಕ ಆಡಳಿತ ಸುಗಮಗೊಳಿಸುವಲ್ಲಿ ವಕೀಲ ಸಮುದಾಯ ಸದಾ ಮುಂದಿರುತ್ತದೆ ಎಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಘಟಕ ಮತ್ತು ಜಿಲ್ಲಾ ವಕೀಲರ ಸಂಘ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರ ಕುರಿತು ಏರ್ಪಡಿಸಲಾಗಿದ್ದ ವಕೀಲರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟು ಮಾತನಾಡಿದರು.
ಹಿಂದೆ ರಾಷ್ಟ್ರ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದಾಗಿತ್ತು. ಬಹುತೇಕ ಸ್ವಾತಂತ್ರ್ಯಹೋರಾಟಗಾರರೆಲ್ಲ ವಕೀಲರಾಗಿದ್ದರು. ಮೇಲ್ಪಂಕ್ತಿಯ ಸಮುದಾಯ ಇದು. ಸರ್ಕಾರದ ಇತರೆ ಅಂಗಗಳಿಗಿಂತ ನ್ಯಾಯಾಂಗದ ಮೇಲೆ ಜನರಿಗೆ ಹೆಚ್ಚಿನ ನಂಬಿಕೆ, ವಿಶ್ವಾಸ ಇದೆ.
ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಹೆಚ್ಚಿದೆ. ನಮ್ಮ ದೇಶದಲ್ಲಿ ವಕೀಲರು, ನ್ಯಾಯಾಧೀಶ ಸಂಖ್ಯೆ ಕಡಿಮೆ ಇದೆ. ಆದರೂ ವ್ಯವಸ್ಥೆ ಕುಸಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಈ ಮೂರು ಅಂಗಗಳು ಸೇರಿದರೆ ಮಾತ್ರ ಸಾರ್ವಜನಿಕ ಆಡಳಿತ ಸಾಧ್ಯ.
District Legal Services Authority ಇಡೀ ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ಸಾಮಾನ್ಯವಾಗಿ ಯಾವಾಗಲೂ ವಕೀಲರು ಧ್ವನಿ ಎತ್ತುವ ಕೆಲಸ ಮಾಡುತ್ತಾ ಬಂದಿದ್ದಾರೆ. ಕಾರಣ ಅವರು ಕಾನೂನು, ವಿಶ್ಲೇಷಣೆಯಲ್ಲಿ ತರಬೇತಿ ಹೊಂದಿದ ಸಮುದಾಯವಾಗಿರುವುದು. ಈ ಪರಿಣಿತಿ, ಜ್ಞಾನದ ಜೊತೆ ಸಾಮಾಜಿಕ ಪ್ರವೃತ್ತಿಯನ್ನೂ ಬೆಳೆಸಿಕೊಂಡರೆ ಇತರೆ ಅಂಗಗಳಿಗೆ ಒತ್ತಾಸೆಯಾಗಿ ನಿಲ್ಲಬಹುದಾಗಿದೆ. ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಲಹೆ ನೀಡಿ, ಸಹಕರಿಸುವ, ಲೋಪಗಳನ್ನು ಸರಿಪಡಿಸುವ ಅವಕಾಶ ಈ ಸಮುದಾಯಕ್ಕಿದೆ. ಆಗ ಮೂರು ಅಂಗಗಳನ್ನು ಬಲಗೊಳಿಸಬಹುದು ಎಂದ ಅವರು ಜಿಲ್ಲೆಯ ವಕೀಲರು ಮನಸ್ಸು ಮಾಡಿದರೆ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದರು.
ಶಾಸಕಾಂಗ ಕಾನೂನು ರಚಿಸಿದರೆ, ಕಾರ್ಯಾಂಗ ಕಾನೂನು, ಸರ್ಕಾರ ರೂಪಿಸುವ ಯೋಜನೆಗಳು, ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತದೆ. ಆದರೆ ನ್ಯಾಯಾಂಗಕ್ಕೆ ಈ ಎಲ್ಲವನ್ನೂ ವಿಶ್ಲೇಷಣೆ ಮಾಡುವ ಶಕ್ತಿ ಇದೆ. ಯಾವ ಹೊಸ ಕಾನೂನು ಬೇಕು, ಯಾವುದು ಬೇಡ ಎಂಬ ಸಲಹೆಗಳನ್ನು ನೀಡುವ ಶಕ್ತಿ ವಕೀಲ ಸಮುದಾಯಕ್ಕಿದೆ. ವ್ಯಾಖ್ಯಾನ, ವಿಶ್ಲೇಷಣೆ ಮತ್ತು ಉತ್ತಮ ತೀರ್ಪುಗಳಿಗೆ ಮುಖ್ಯ ಕಾರಣಕರ್ತರು ವಕೀಲರು.
ಸರ್ಕಾರದ ನಿಯಮಾವಳಿಗಳು, ನಿರ್ದೇಶನ, ಒಟ್ಟಾರೆ ಚಟುವಟಿಕೆಗಳನ್ನು ಪ್ರಶ್ನೆ ಮಾಡುತ್ತಿರುವುದು ವಕೀಲ ಸಮುದಾಯ. ಶಾಸಕಾಂಗ ಪ್ರಕ್ರಿಯೆಯಲ್ಲಿ ವಕೀಲರ ಕೊಡುಗೆ ಮಹತ್ವದ್ದಾಗಿದ್ದು, ಕಾರ್ಯಾಂಗದ ಲೋಪಗಳನ್ನೂ ಪ್ರಶ್ನಿಸುವ ಮೂಲಕ ಸರಿಪಡಿಸುವ ಕೆಲಸವನ್ನು ಈ ಸಮುದಾಯ ಮಾಡುತ್ತಿದೆ.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-05ರ ಜಿ.ವಿ. ವಿಜಯನಂದ, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದ ಕಿರಣ್ ಪಿ.ಎಂ. ಪಾಟೀಲ್ ಪಾಲ್ಗೊಂಡಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ವಿಶೇಷ ಸಾರ್ವಜನಿಕ ಅಭಿಯೋಜಕರಾದ ಸುಂದರರಾಜ್ ಎಂ.ಡಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಎಸ್ ಎ, ನ್ಯಾಯಾಧೀಶರು, ವಕೀಲರು ಪಾಲ್ಗೊಂಡಿದ್ದರು.

Karnataka Newspaper Distributors Federation ಮೃತರ ಕುಟುಂಬಕ್ಕೆ ಪರಿಹಾರ ನೀಡದ ವಾಯುವ್ಯ ಸಾರಿಗೆ ಸಂಸ್ಥೆ ಬಸ್ ಜಪ್ತಿ. ಪತ್ರಿಕಾ ವಿತರಕರ ಸಂಘದ ಪ್ರತಿಕ್ರಿಯೆ

0

Karnataka Newspaper Distributors Federation ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ 2022 ಜುಲೈ 7ರಂದು ಪ್ರವಾಸಿ ಮಂದಿರದ ಸಮೀಪದಲ್ಲಿ ಪತ್ರಿಕೆ ವಿತರಣೆ ಮಾಡುತ್ತಿದ್ದ ಗಣೇಶ್ ಎಂಬಾತನಿಗೆ ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ ಪರಿಹಾರ ನೀಡದ ಬಸ್ಸನ್ನು ವಶಪಡಿಸಲು ಆದೇಶ ನೀಡಿದ ನ್ಯಾಯಾಲಯಕ್ಕೆ ಧನ್ಯವಾದ ತಿಳಿಸುತ್ತಿರುವ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಇಡೀ ದೇಶದಲ್ಲಿ ಇದು ಒಂದು ಮಹತ್ತರವಾದ ಆದೇಶವಾಗಿದ್ದು ಒಬ್ಬ ಸಾಮಾನ್ಯ ಪತ್ರಿಕೆ ವಿತರಕನಿಗೂ ನ್ಯಾಯ ದೊರಕುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ .
ಈತನ ಕುಟುಂಬಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರು ಒಕ್ಕೂಟ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅಂದಿನ ಕಾರ್ಮಿಕ ಸಚಿವರ ಗಮನ ಸೆಳೆದು ಬಡ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದು ಇಡೀ ದೇಶದಲ್ಲಿ ಪ್ರಥಮ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾದ ರಾಜ್ಯ ಒಕ್ಕೂಟ ಹಾಗೂ ಕಾನಿಪ ಸಂಘ ಹಾಗೂ ಇದೇ ಸಂದರ್ಭದಲ್ಲಿ ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತಾ ಶೀಘ್ರವೇ ಕುಟುಂಬಕ್ಕೆ ಪರಿಹಾರ ಸಿಗಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ವಿನಂತಿಸುತ್ತದೆ.

Department of Entrepreneurship and Livelihoods ಮಹಿಳೆಯರು ತಯಾರಿಸಿರುವ ಕರಕುಶಲ ಉತ್ಪನ್ನಗಳನ್ನ ಖರೀದಿಸಿ ಬೆಂಬಲಿಸಿ- ಡಾ.ಶಾಲಿನಿ ರಜನೀಶ್

0

Department of Entrepreneurship and Livelihoods ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಈ ವಿಶೇಷ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ‌ ರಜನೀಶ್ ಅವರು ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನ ಮಾರಾಟ ಹಾಗೂ ಪ್ರದರ್ಶನ ಮೇಳ ಉದ್ಘಾಟಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ಮೇಳದಲ್ಲಿ ಮಹಿಳೆಯರು ತಯಾರಿಸಿರುವ ಅನೇಕ ಕರಕುಶಲ ಹಾಗೂ ಕಸೂತಿ ಉತ್ಪನ್ನಗಳನ್ನು ನೋಡೋದಷ್ಟೇ ಅಲ್ಲದೇ ಅವುಗಳನ್ನು ಖರೀದಿಸಿ ಸ್ವ-ಸಹಾಯ ಗುಂಪುಗಳ ಮಹಿಳೆಯರನ್ನು ಬೆಂಬಲಿಸಬೇಕು ಎಂದು ಹೇಳಿದರು.

ಈ ಮಾರಾಟ ಹಾಗೂ ಪ್ರದರ್ಶನ ಮೇಳದಲ್ಲಿ ರಾಜ್ಯದ ವಿವಿಧ ಮಹಿಳಾ ಸ್ವ-ಸಹಾಯ ಗುಂಪುಗಳ ಕೌಶಲ್ಯದಿಂದ ತಯಾರಿಸಲ್ಪಟ್ಟ ಉತ್ಪನ್ನಗಳ 60 ಮಳಿಗೆಗಳಿದ್ದು, ಪ್ರಮುಖವಾಗಿ ವಿವಿಧ ಬಗೆಯ ಹ್ಯಾಂಡ್‌ಲೂಮ್ ಸೀರೆಗಳು, ಆಹಾರ ಉತ್ಪನ್ನಗಳು, ಕಿನ್ನಾಳ ಆಟಿಕೆ, ಚನ್ನಪಟ್ಟಣ ಬೊಂಬೆಗಳು, ಇಳಕಲ್ ಸೀರೆ, ಬಿದರಿ ಕಲೆ, ಮನೆ ಅಲಂಕಾರಿಕ ಗಿಡಗಳು, ವಸ್ತುಗಳು ಮೇಳದ ಪ್ರಮುಖ ಆಕರ್ಷಣೆಯಾಗಿವೆ ಎಂದು ತಿಳಿಸಿದರು.

Department of Entrepreneurship and Livelihoods ಕರ್ನಾಟಕ ರಾಜ್ಯದಲ್ಲಿ 1964 ರಿಂದ 2024ರ ವರೆಗೆ ಸೇವೆ ಸಲ್ಲಿಸಿರುವ ಹಾಗೂ ಸೇವೆಯಲ್ಲಿರುವ ಭಾರತೀಯ ಆಡಳಿತ ಸೇವೆಯ ಮಹಿಳಾ ಅಧಿಕಾರಿಗಳ ವಿವರಗಳನ್ನೊಳಗೊಂಡ ಡೈರೆಕ್ಟರಿಯನ್ನೂ ಬಿಡುಗಡೆಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಏಕರೂಪ್ ಕೌರ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sunita Williams ಧರೆಗಿಳಿದ ಭಾರತ ಪುತ್ರಿ ಗಗನಯಾನಿ ಸುನೀತಾ ವಿಲಿಯಮ್ಸ್ ಸೊರಬದಲ್ಲಿ ಸಂಭ್ರಮಾಚರಣೆ

0

Sunita Williams ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಶ್ರೀ ಭೂತೇಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಶ್ರೀ ಮಾರಿಕಾಂಬ ಲಗೇಜ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ನೇತೃತ್ವ ವಹಿಸಿದ್ದ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಹೆಸರಾಂತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಸುಮಾರು 284 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಉಳಿದಿದ್ದರು.

ಜಗತ್ತಿನಲ್ಲಿಯೇ ಅತಿ ಹೆಚ್ಚು ದಿನ ಬಾಹ್ಯಾಕಾಶದಲ್ಲಿ ಉಳಿದ ಮಹಿಳೆ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ. ಅವರು ಸುರಕ್ಷಿತವಾಗಿ ಮರಳಿ ಭೂಮಿಗೆ ತಲುಪಲಿ ಎಂದು ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂಘಟನೆ ವತಿಯಿಂದ ನದಿಕಟ್ಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಲಾಗಿತ್ತು.

ಪೂಜಾ ಫಲ ತಲುಪಿದಂತಾಗಿದೆ. ಅವರು ಮತ್ತು ಇನ್ನೋರ್ವ ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಸುರಕ್ಷಿತವಾಗಿ ಭೂಮಿಗೆ ತಲುಪಿದ್ದಾರೆ. ಈ ನಿಟ್ಟಿನಲ್ಲಿ ಸಂಭ್ರಮಿಸಲಾಗುತ್ತಿದೆ. ಸುನಿತಾ ಅವರ ಆರೋಗ್ಯ ಚೇತರಿಸಲಿ ಮತ್ತು ಅವರು ಮತ್ತಷ್ಟು ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಗುತ್ತಿದೆ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಎಂ.ಡಿ. ಉಮೇಶ್ ಮಾತನಾಡಿ, ಭಾರತ ಮೂಲದ ಹೆಮ್ಮೆಯ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಅಂತರಾತ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು.

ಆದರೆ, ನೌಕೆಯ ತಾಂತ್ರಿಕ ದೋಷದಿಂದ ಸಕಾಲದಲ್ಲಿ ಹಿಂತಿರುಗಲು ಸಾಧ್ಯವಾಗಲಿಲ್ಲ. ಆದರೆ, ದೇಶದ ಪ್ರತಿಯೊಬ್ಬ ನಾಗರೀಕರು ಅವರು ಸುರಕ್ಷಿತವಾಗಿ ಭೂಮಿಗೆ ವಾಪಾಸಾಗಲಿ ಎಂದು ಪ್ರಾರ್ಥಿಸಿದ್ದರು.

ದೇಶದ ಶ್ರೇಷ್ಠ ಹೆಣ್ಣು ಮಕ್ಕಳಲ್ಲಿ ಒಬ್ಬರಾಗಿ ಭಾರತದ ಹೆಸರನ್ನು ಜಗತ್ತಿನಲ್ಲಿ ಮತ್ತಷ್ಟು ಗೌರವಿಸುವಂತೆ ಮಾಡಿದ್ದಾರೆ. ಅವರ ಭವಿಷ್ಯವು ಉತ್ತಮವಾಗಿರಲಿ ಎಂದು ಆಶಿಸಿದರು.

ಇದಕ್ಕೂ ಮೊದಲು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯಿಂದ ನದಿಕಟ್ಟೆ ಶ್ರೀ ಆಂಜನೇಯ ದೇವಸ್ಥಾನ, ಚಂದ್ರಮೌಳೇಶ್ವರ ದೇವಸ್ಥಾನ, ಚಿಕ್ಕಪೇಟೆಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಮತ್ತು ಅಂಬೇಡ್ಕರ್ ಬಡಾವಣೆಯ ಶ್ರೀ ದುರ್ಗಾಂಬ ದೇವಸ್ಥಾನ, ಹಿರೇಶಕುನದ ಶ್ರೀ ಮಾರಿಕಾಂಬ ದೇವರಿಗೆ ನಮನ ಸಲ್ಲಿಸಲಾಯಿತು.

Sunita Williams ಶ್ರೀ ಭೂತೇಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಬಿ. ಹಾಲೇಶ್, ಅರುಣ್‌ಕುಮಾರ್ ಕುಮ್ಮೂರು, ನವೀನ್ ಹಳೇಸೊರಬ, ಚಂದ್ರಪ್ಪ ಚಿಕ್ಕಶಕುನ, ಮಾತಲೇಶ್ ಹಿರೇಶಕುನ, ತೇಜಪ್ಪ ಹಿರೇಶಕುನ, ಮಾರುತಿ, ವೆಂಕಟೇಶ್ ಕೊಡಕಣಿ, ಶ್ರೀ ಮಾರಿಕಾಂಬ ಲಗೇಜ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ರಾಜು, ಮುನ್ನಾ, ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯ ಉಪಾಧ್ಯಕ್ಷ ದತ್ತಾ ಸೊರಬ, ಪ್ರಧಾನ ಕಾರ್ಯದರ್ಶಿ ವೀರೇಂದ್ರಗೌಡ ಜೇಡಗೇರಿ, ಕಾರ್ಯದರ್ಶಿ ಶರತ್ ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಸುಮನಾ ಚಿದಾನಂದಗೌಡ, ಪ್ರಮುಖರಾದ ಅರುಣ್‌ಕುಮಾರ್, ಮೆಹಬೂಬ್ ಬಾಷಾ, ರಂಗನಾಥ ಮೊಗವೀರ್ ಸೇರಿದಂತೆ ಇತರರಿದ್ದರು.

Shivamogga District Legal Services Authority ಸರ್ಕಾರಿ ಸಿಬ್ಬಂದಿ ಗಳೆಲ್ಲರೂ ತಮಗೆ ಅನ್ವಯಿಸುವ ಕಾನೂನನ್ನ ತಿಳಿದು ಕೊಂಡಿರಬೇಕು- ನ್ಯಾ.ಕೆ.ಎನ್.ಫಣೀಂದ್ರ

0

Shivamogga District Legal Services Authority ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ. ಆದ್ದರಿಂದ ತಮಗೆ ಅನ್ವಯಿಸುವ ಕಾನೂನುಗಳನ್ನು ಎಲ್ಲ ಸರ್ಕಾರಿ ಅಧಿಕಾರಿ/ನೌಕರರು ತಿಳಿದುಕೊಂಡಿರಬೇಕು. ಕಠಿಣವಾದ ಕಾಯ್ದೆಯಡಿ ರಕ್ಷಣಾತ್ಮಕ ಕಾನೂನುಗಳೂ ಇದ್ದು ಅವುಗಳನ್ನು ತಿಳಿದುಕೊಳ್ಳಬೇಕೆಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ನ್ಯಾಯಾಂಗ ಘಟಕ, ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ನ್ಯಾಯಾಂಗ ನೌಕರರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ‘ಲೋಕಾಯುಕ್ತ ಕಾಯ್ದೆಯ ಕಾನೂನು ಅರಿವು ಕಾರ್ಯಕ್ರಮವನ್ನು’ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಲೋಕಾಯುಕ್ತ ಕಾಯ್ದೆಯಲ್ಲಿ ಸಾರ್ವಜನಿಕರ ಹಕ್ಕುಗಳು, ಬಾಧ್ಯತೆಗಳು ಜೊತೆಗೆ ಅಧಿಕಾರಿಗಳಿಗೆ ಯಾವ ಯಾವ ರಕ್ಷಣೆ ಇದೆ ಎಂಬುದನ್ನೂ ತಿಳಿಸಲಾಗಿದೆ. ಎಲ್ಲ ಸಾಧಕ ಬಾಧಕಗಳನ್ನು ನೋಡಿಯೇ ಕಾನೂನು ರೂಪುಗೊಂಡಿರುತ್ತದೆ. ತನಗೆ ಕಾನೂನು ಗೊತ್ತಿಲ್ಲ ಎಂದು ಹೇಳಲು ಬರುವುದಿಲ್ಲ. ಗೊತ್ತಿದೆ ಎನ್ನುವ ಪೂರ್ವ ಭಾವನೆ ಇದ್ದೇ ಕಾನೂನಿನ ಅನುಷ್ಟಾನ ಆಗಿರುತ್ತದೆ. ಆದ್ದರಿಂದ ಸರ್ಕಾರಿ ಅಧಿಕಾರಿ/ನೌಕರರು ತಮಗೆ ಅನ್ವಯವಾಗುವ ಕಾಯ್ದೆ, ಕಾನೂನಿನ ಬಗ್ಗೆ ತಿಳಿದುಕೊಂಡಿರಬೇಕು. ಎಷ್ಟೇ ಕಠಿಣವಾದ ಕಾನೂನು ಇದ್ದರೂ ರಕ್ಷಣಾತ್ಮಕ ಕಲಂ ಗಳು ಇರುತ್ತವೆ. ಅದನ್ನು ತಿಳಿಯಬೇಕು.

ಕೇಂದ್ರ ಸರ್ಕಾರದ ಅಧಿಕಾರಿ/ನೌಕರರು, ಬ್ಯಾಂಕಿಂಗ್ ಪ್ರಾಧಿಕಾರ, ಕಡಿಮೆ ಷೇರು ಇರುವ ಕಂಪೆನಿ, ಖಾಸಗಿ ವ್ಯಕ್ತಿಗಳು ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಅಡಿಯಲ್ಲಿ ಕ್ರಮ ವಹಿಸಲು ಬರುವುದಿಲ್ಲ.
ಈ ಕಾಯ್ದೆಯಡಿ ಮೂರು ಬಗೆ ದೂರು ತೆಗೆದುಕೊಳ್ಳಲಾಗುತ್ತದೆ.

ದೂರುದಾರರಿಂದ ನೇರವಾಗಿ, ಸ್ವಯಂ ಪ್ರೇರಿತವಾಗಿ ಹಾಘೂ ಸರ್ಕಾರ ವಹಿಸಿಕೊಟ್ಟ ದೂರನ್ನು ಸ್ವೀಕರಿಸಿ ಕ್ರಮ ವಹಿಸಲಾಗುತ್ತದೆ.
ಲೋಕಾಯುಕ್ತ ಆರೋಪಿತರಿಗೆ ನೋಟಿಸ್ ನೀಡಿದ ನಂತರ ಅಧಿಕಾರಿ/ನೌಕರರು ಶೀಘ್ರವಾಗಿ ಕ್ರಮ ತೆಗೆದುಕೊಳ್ಳುವಲ್ಲಿ ವಿಳಂಬ ತೋರುತ್ತಾರೆ. ಅದು ಮಾಡದೇ ವಿವರಣಾತ್ಮಕ ಉತ್ತರ ನೀಡಬೇಕು. ಸೆಕ್ಷನ್ 8, 9 ಓದಿಕೊಳ್ಳಬೇಕು. ಪರ್ಯಾಯ ವ್ಯವಸ್ಥೆ, ಲಿಮಿಟೇಷನ್ ಬಗ್ಗೆ ತಿಳಿದುಕೊಳ್ಳಬೇಕು.
ಆರೋಪಗಳನ್ನು ತನಿಖೆಗೆ ಒಳಪಡಿಸಿ, ವರದಿ ತಯಾರಿಸಿ, ಸರ್ಕಾರಕ್ಕೆ ಹಾಗೂ ಆರೋಪಿಗೆ ಸಲ್ಲಿಸಲಾಗುವುದು. ಪ್ರತಿ ಹಂತದಲ್ಲಿ ಆರೋಪಿಗಳಿಗೆ ಅವಕಾಶಗಳನ್ನು ನೀಡಲಾಗುತ್ತದೆ ಎಂದ ಅವರು ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12(1)(3) ಬಗ್ಗೆ ವಿವರಣೆ ನೀಡಿದರು.

Shivamogga District Legal Services Authority ಆರೋಪಿತರು ದಾಖಲೆಗಳನ್ನು, ಸತ್ಯ ವರದಿ ಸಲ್ಲಿಸುವ ಬಗ್ಗೆ ತಿಳಿಸಿದರು. ಗಂಭೀರ ಕರ್ತವ್ಯ ಲೋಪವಾಗಿದ್ದರೆ ಸೆಕ್ಷನ್ 13 ರಡಿ ಉಗ್ರ ಶಿಕ್ಷೆಗೆ ಅವಕಾಶವಿದೆ. ಕರ್ತವ್ಯ ಲೋಪದ ಪ್ರಮಾಣದ ಆಧಾರದ ಮೇಲೆ ಶಿಕ್ಷೆ ನೀಡಲಾಗುವುದು. ಸೆಕ್ಷನ್ 17, 19 ನಿಂದನೆ ಪ್ರಕ್ರಿಯೆ ಜರುಗಿಸುವ ಬಗ್ಗೆ ತಿಳಿಸಿದ ಅವರು ಕಾಯ್ದೆಯಡಿ ರಕ್ಷಣೆಯೂ ಇದೆ. ಎಚ್ಚರಿಕೆಯೂ ಇದೆ ಎಂದರು.

ಒಂದು ವೇಳೆ ಸಾರ್ವಜನಿಕ ದೂರುದಾರರು ಮಾನಹಾನಿ ಮಾಡಿದ್ದಾರೆಂದು ಮನವರಿಕೆ ಆದ ಸಂದರ್ಭದಲ್ಲಿ ನ್ಯಾಯಾಲಯ ದಲ್ಲಿ ದಾವೆ ಹೂಡಬಹುದು ಎಂದು ತಿಳಿಸಿದ ಅವರು ಕಾಯ್ದೆಯ ಮುಖ್ಯವಾದ ಸೆಕ್ಷನ್‌ಗಳ ಬಗ್ಗೆ ತಿಳಿಸಿಕೊಟ್ಟರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಎನ್. ಹೇಮಂತ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ. ಮಿಥುನ್ ಕುಮಾರ್ ಆಗಮಿಸಲಿದ್ದು, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-05ರ ಜಿ.ವಿ. ವಿಜಯನಂದ, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದ ಕಿರಣ್ ಪಿ.ಎಂ. ಪಾಟೀಲ್, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ ಪಾಲ್ಗೊಂಡಿದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಎಂ.ಎಸ್ ಸಂತೋಷ್ ಸ್ವಾಗತಿಸಿದರು

District Health and Family Welfare Association ಮಾರ್ಚ್ 24. ಶಿವಮೊಗ್ಗದಲ್ಲಿ ಕ್ಷಯರೋಗದ ಅರಿವು ಮೂಡಿಸಲು‌ ಸೈಕಲ್ & ನಡಿಗೆ ಜಾಥಾ

0

District Health and Family Welfare Association ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಜಿಲ್ಲಾ ಕ್ಷಯರೋಗ ವಿಭಾಗದ ವತಿಯಿಂದ ಮಾ. 24 ರಂದು ಬೆಳಗ್ಗೆ 7.00ಕ್ಕೆ ಸಾರ್ವಜನಿಕರಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸೈಕಲ್ ಹಾಗೂ ಕಾಲು ನಡಿಗೆ ಜಾಥಾ ಏರ್ಪಡಿಸಿದೆ.

ಈ ಜಾಥವು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಆರಂಭಗೊಂಡು ಬಿ.ಹೆಚ್.ರಸ್ತೆ ಮುಖಾಂತರ ಬಸ್ ನಿಲ್ದಾಣ, ಪ್ರವಾಸಿ ಮಂದಿರ, ಕುವೆಂಪು ರಸ್ತೆ, ಶಿವಮೂರ್ತಿ ಸರ್ಕಲ್, ಡಿ.ವಿ.ಎಸ್. ಸರ್ಕಲ್, ಗೋಪಿ ಸರ್ಕಲ್ ಮೂಲಕ ಐ.ಎಂ.ಎ. ಸಭಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Department of Tourism ಪ.ಜಾ/ಪ.ಪಂಗಡಗಳ ಅಭ್ಯರ್ಥಿಗಳಿಗೆ 2 ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ‌ ಆಹ್ವಾನ

0

Department of Tourism ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಮತ್ತು ಬೆಂಗಳೂರಿನ ಇನ್ಸಿಟ್ಯೂಟ್ ಆಪ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪ.ಜಾ/ ಪ.ಪಂ.ಗಳ ಅಭ್ಯರ್ಥಿಗಳಿಗೆ 2ನೇ ಹಂತದ ಕೌಶಲ್ಯಾಭಿವೃದ್ಧಿ ತರಬೇತಿ ಆಯೋಜಿಸಲಾಗಿದ್ದು, 20-45 ವರ್ಷದೊಳಗಿನ ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

8ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಗೆ ಮಲ್ಟಿ ಕುಸಿನ್ ಕುಕ್ ಕುರಿತು 5 ತಿಂಗಳ ತರಬೇತಿ ಹಾಗೂ ಫುಡ್ ಆಂಡ್ ಬೆವರೇಜ್ ಸರ್ವಿಸ್ ಸ್ಟೀವರ್ಡ್ ಕುರಿತು 4 ತಿಂಗಳ ತರಬೇತಿ ನೀಡಲಾಗುತ್ತಿದ್ದು, ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 03/04/2025 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Department of Tourism ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-251444 ನ್ನು ಸಂಪರ್ಕಿಸುವುದು.