Tuesday, March 10, 2026
Tuesday, March 10, 2026
Home Blog Page 387

CM Siddharamaih ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ- ಕೆ.ವಿ.ಪ್ರಭಾಕರ್

0

CM Siddharamaih ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು.

ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ ಎಂದು ತಿಳಿಸಿದರು.

CM Siddharamaih ಕಾರ್ಮಿಕ ಇಲಾಖೆಯಿಂದ ಈಗಾಗಲೇ ಸಾಕಷ್ಟು ಸವಲತ್ತುಗಳು ಸಿಗುತ್ತಿವೆ. ಈಗ ಆರೋಗ್ಯ ವಿಮೆಯ ಬೇಡಿಕೆ ಕೂಡ ಈಡೇರಿದೆ. ವಿತರಕರು ಹೆಚ್ಚೆಚ್ಚು ಸಂಘಟಿತರಾದಷ್ಟೂ ತಮ್ಮ ಬೇಡಿಕೆಗಳಿಗೆ ಶಕ್ತಿ ಬರುತ್ತದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್. ಮಾಲತೇಶ್ ಭದ್ರಾವತಿ ತಾಲೂಕ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಪ್ರಧಾನ ಕಾರ್ಯದರ್ಶಿಯಾದ ಪರಶುರಾಮ್ ರಾವ್ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು

Bharat Scouts and Guides ವಿದ್ಯಾರ್ಥಿಗಳಲ್ಲಿ ಸ್ಕೌಟ್ಸ್ ನಾಯಕತ್ವ ಗುಣ ಬೆಳೆಸುತ್ತದೆ- ಮಂಜುನಾಥ್

0

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಪಾಲ್ಗೊಳ್ಳುವುದರಿಂದ ಸೇವಾ ಮನೋಭಾವನೆ ವೃದ್ಧಿಗೊಳ್ಳುವ ಜತೆಯಲ್ಲಿ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ವತಿಯಿಂದ ಶಿವಮೊಗ್ಗ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಮಹತ್ತರ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಪರೀಕ್ಷೆ ಸಂದರ್ಭಗಳಲ್ಲಿ ಮತ್ತು ಕೋವಿಡ್ ಸಂದರ್ಭದಲ್ಲಿ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆಯುಕ್ತೆ ಗೈಡ್ ಶಕುಂತಲಾ ಚಂದ್ರಶೇಖರ ಮಾತನಾಡಿ, ಸ್ಕೌಟ್ ಗೈಡ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಚಟುವಟಿಕೆಯಲ್ಲಿ ಭಾಗವಹಿಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪ್ರಶಸ್ತಿ ಪಡೆದಿದ್ದೀರಿ, ಮುಂದಿನ ಹಂತವಾದ ರಾಜ್ಯ ಪುರಸ್ಕಾರಕ್ಕೆ ಈಗಿನಿಂದಲೇ ತಯಾರಿ ಶುರುಮಾಡಬೇಕು. ಅದಕ್ಕೆ ಬೇಕಾದ ಮಾರ್ಗದರ್ಶನ ಜಿಲ್ಲಾ ಸಂಸ್ಥೆಯ ವತಿಯಿಂದ ನೀಡುತ್ತೇವೆ ಎಂದು ಶುಭಹಾರೈಸಿದರು.

ಸಮಾರಂಭವು ಸ್ಕೌಟ್ ಗೈಡ್ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಇದೇ ಸಂದರ್ಭದಲ್ಲಿ ಇತ್ತೀಚಿಗೆ ನಿಧನರಾದ ಜಿಲ್ಲಾ ಮುಖ್ಯ ಆಯುಕ್ತ ಕೆ.ಪಿ.ಬಿಂದುಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಸ್ಕೌಟ್ ಆಯುಕ್ತ ಎಸ್.ಜಿ.ಆನಂದ್ ಸರ್ವರನ್ನು ಸ್ವಾಗತಿಸಿದರು.

ಸ್ಕೌಟ್ ಗೈಡ್ ಸಂಸ್ಥಾಪಕರಾದ ಬೇಡನ್ ಪೋವೆಲ್ ಮತ್ತು ಬೇಡನ್ ಪೋವೆಲ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಜಿಲ್ಲಾ ಆಯುಕ್ತ ರೋವರ್ ಕೆ.ರವಿ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಮತ್ತು ಸಂಸ್ಥಾಪಕರ ಬಗ್ಗೆ ಮಾಹಿತಿ ನೀಡಿದರು.

Bharat Scouts and Guides ಜಿಲ್ಲಾ ಸಹ ಕಾರ್ಯದರ್ಶಿ ವೈ.ಆರ್.ವೀರೇಶಪ್ಪ ಮತ್ತು ಜಿಲ್ಲಾ ತರಬೇತಿ ಆಯುಕ್ತ ಸ್ಕೌಟ್ ಶಿವಶಂಕರ ಅವರು ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು.
ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್ ಕುಮಾರ್ ಸರ್ವರಿಗೂ ವಂದಿಸಿದರು. ಶಿವಮೊಗ್ಗ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ವಿ ಅವಲಕ್ಕಿ ನಿರೂಪಿಸಿದರು.

ಸಮಾರಂಭದಲ್ಲಿ ಜಂಟಿ ಕಾರ್ಯದರ್ಶಿ ಲಕ್ಷ್ಮೀ ರವಿ, ಶಿಕಾರಿಪುರ ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಸಿ.ಎಂ.ಪರಮೇಶ್ವರಯ್ಯ, ಕೃಷ್ಣ ಸ್ವಾಮಿ, ಎ.ಎಸ್.ಮಂಜುನಾಥ್, ಗೀತಾ ಚಿಕ್ಕಮಠ, ಕಾತ್ಯಾಯಿನಿ, ಮೀನಾಕ್ಷಮ್ಮ, ಚೂಡಾಮಣಿ ಈ ಪವಾರ್, ಮಲ್ಲಿಕಾರ್ಜುನ್ ಕಾನೂರು, ಜಿಲ್ಲೆಯ ವಿವಿಧೆಡೆಯಿಂದ ಬಂದಂತಹ ದಳ ನಾಯಕ, ನಾಯಕಿ, ಪದಾಧಿಕಾರಿಗಳು ಮತ್ತು ಏಳು ತಾಲೂಕಿನ 400 ಮಕ್ಕಳು ಭಾಗವಹಿಸಿದ್ದರು.

Rotary Club Shimoga ರಾಜಕೀಯ ಸೇವೆಗೆ ರೋಟರಿ ಸಂಸ್ಥೆಯಲ್ಲಿ ಕಲಿತ ನಾಯಕತ್ವ ಗುಣ ಸಹಕಾರಿಯಾಗಿದೆ- ಶಾಸಕ ಡಿ‌.ಎಸ್.ಅರುಣ್

0

Rotary Club Shimoga ಫಲಾಪೇಕ್ಷೆ ಇಲ್ಲದೆ ಸೇವಾ ಮನೋಭಾವನೆ ಹಾಗೂ ನಾಯಕತ್ವದ ಗುಣಗಳನ್ನು ವೃದ್ಧಿಸುವಲ್ಲಿ ರೋಟರಿ ಸಂಸ್ಥೆ ಪ್ರಮುಖ ಪಾತ್ರ ವಹಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ರೋಟರಿ ನಾಯಕತ್ವ ಪ್ರಶಸ್ತಿ ಪ್ರಧಾನ, ರೋಟರಿ ಅಕಾಡೆಮಿ ಫಾರ್ ಹೈಯರ್ ಲೀಡರ್ಶಿಪ್ ಅವಾರ್ಡ್ (ರಹಲಾ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ಗಳಿಸಲು, ಸಾಧನೆ ಮಾಡಲು ನಾಯಕತ್ವ ಗುಣ ಬಹಳ ಮುಖ್ಯ. ರಾಜಕಾರಣದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ರೋಟರಿ ಸಂಸ್ಥೆಯಲ್ಲಿ ಕಲಿತ ಸೇವಾ ಮನೋಭಾವ, ನಾಯಕತ್ವದ ಗುಣ ತುಂಬಾ ಸಹಕಾರಿಯಾಗಿದೆ ಎಂದು ತಿಳಿಸಿದರು.

ಎಲ್ಲ ಸಂಘ ಸಂಸ್ಥೆಗಳಿಂದ ರೋಟರಿ ಸಂಸ್ಥೆ ತುಂಬಾ ಭಿನ್ನವಾಗಿದೆ. ಸ್ನೇಹ, ಸೇವೆ ಹಾಗೂ ಓಡನಾಟಕ್ಕಾಗಿ ಸ್ಥಾಪಿತವಾದ ರೋಟರಿ ಸಂಸ್ಥೆ ಪ್ರಪಂಚಾದ್ಯಂತ ನೂರಾರು ದೇಶಗಳಲ್ಲಿ ಅತ್ಯಂತ ಪ್ರಮುಖವಾದ ಸೇವೆಯ ಮುಖಾಂತರ ಜನ ಮಾನಸ ತಲುಪಿದೆ ಎಂದು ನುಡಿದರು.

ರೋಟರಿ ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಶೆಟ್ಟಿ ಮಾತನಾಡಿ, ಸಂಘ ಸಂಸ್ಥೆಗಳು ಯಶಸ್ವಿಯಾಗಿ, ಭದ್ರವಾಗಿ ನೂರಾರು ವರ್ಷಗಳ ಕಾಲ ನಡೆಯಬೇಕಾದರೆ ಒಳ್ಳೆಯ ನಾಯಕತ್ವದ ಗುಣ ಇರಬೇಕು. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳು ರೋಟರಿ ಸದಸ್ಯರಲ್ಲಿ ಬೆಳಕು ಚೆಲ್ಲಿ ಅವರನ್ನು ರೋಟೆರಿಯನ್ ಆಗಿ ಪರಿವರ್ತನೆ ಮಾಡಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್ ಮಾತನಾಡಿ, ಬಹಳ ವರ್ಷಗಳ ನಂತರ ರಹಲ ಕಾರ್ಯಕ್ರಮ ಅತ್ಯಂತ ಹೆಚ್ಚು ಜನ ಸದಸ್ಯರ ನೋಂದಣಿಯೊಂದಿಗೆ ಶಿವಮೊಗ್ಗದಲ್ಲಿ ದಾಖಲೆ ಮಾಡಿದೆ. ಶಿವಮೊಗ್ಗ ಸೆಂಟ್ರಲ್ ಕ್ಲಬ್ ಪದಾಧಿಕಾರಿಗಳು ಹಾಗೂ ಅಧ್ಯಕ್ಷರ ಪರಿಶ್ರಮದಿಂದ ಕಾರ್ಯಕ್ರಮ ಯಶಸ್ವಿಗೊಂಡಿವೆ ಎಂದು ಹೇಳಿದರು.

Rotary Club Shimoga ಕಾರ್ಯಕ್ರಮಕ್ಕೆ ಸಂಘಟನೆ ಹಾಗೂ ಬದ್ಧತೆ ಮುಖ್ಯ. ಸದಸ್ಯರ ಪ್ರಾಮಾಣಿಕ ಸಹಕಾರವು ಸಹ ಸಹಕಾರಿಯಾಗಿದೆ. ಆದ್ದರಿಂದ ಹೆಚ್ಚು ಹೆಚ್ಚು ಜನರು ರೋಟರಿ ಸಂಸ್ಥೆ ಸೇರಿಕೊಳ್ಳುವುದರ ಮುಖಾಂತರ ಸೇವೆ ಮಾಡುವ ಕೈಗಳನ್ನು ಬಲಪಡಿಸಿಬೇಕು ಮತ್ತು ನಾಯಕತ್ವ ಹಾಗೂ ಸಂಸ್ಕಾರದ ಗುಣಗಳನ್ನು ವೃದ್ಧಿಸಿಕೊಳ್ಳಬೇಕು ಎಂದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಮಾತನಾಡಿ, ಕ್ಲಬ್ ಮಾಜಿ ಅಧ್ಯಕ್ಷರು, ಪಿಡಿಜಿ ಹಾಗೂ ವಲಯದ ಸಹಾಯಕ ಗವರ್ನರ್‌ಗಳ ಸಹಕಾರ ಕಾರ್ಯಕ್ರಮದ ಯಶಸ್ಸಿಗೆ ಕಾರಣ ಎಂದು ತಿಳಿಸಿದರು.

ಜಿಲ್ಲಾ ಮಾಜಿ ಗವರ್ನರ್ ರಾಜಾರಾಮ್ ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ರಹಲಾ ಚೇರ್ಮನ್ ಚಂದ್ರಶೇಖರ್ ಮೆಂಡನ್, ವೈಸ್ ಚೇರ್ಮನ್ ಸಿಸಿ ಸಾವಿನ್, ವಲಯ ಹನ್ನೊಂದರ ಸಹಾಯಕ ಗವರ್ನರ್ ಸುರೇಶ್ ಎಚ್.ಎಂ., ಇವೆಂಟ್ ಚೇರ್ಮನ್ ರವಿ ಕೊಟೋಜಿ, ಜಿ.ಎನ್.ಪ್ರಕಾಶ್, ಈಶ್ವರ್, ಇವೆಂಟ್ ಕಾರ್ಯದರ್ಶಿ ರಮೇಶ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹಾಗೂ ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು. ಮುಖ್ಯ ಪ್ರಧಾನ ಭಾಷಣಕಾರರಾಗಿ ಸಿಸಿ ಪಾವಟೇ, ಡಾ ಕೆ ಶ್ರೀಪತಿ ಹಲಗುಂದ, ಎನ್.ಜಿ.ಉಷಾ, ನಾಯಕತ್ವ ಸಾಮರಸ್ಯ ಹಾಗೂ ಸಂಘ ಸಂಸ್ಥೆಗಳ ಓಡನಾಟ ಅಭಿವೃದ್ಧಿ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು, ಹಾಸನ, ಉಡುಪಿ ಹಾಗು ಶಿವಮೊಗ್ಗದಿಂದ 450ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು.

MESCOM ಮಾರ್ಚ್5 . ಪುರಲೆ ಫೀಡರ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

MESCOM ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಕಂಬ ಸ್ಥಳಾಂತರ ಕಾಮಗಾರಿ ಇರುವುದರಿಂದ ಎಂಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದ ಪುರಲೆ ಫೀಡರ್-3 11 ಕೆವಿ ಮಾರ್ಗ ಮುಕ್ತತೆ ನೀಡಲು ಮಾ.5 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗು ವಿದ್ಯುತ್ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.

MESCOM ಶಿವಮೊಗ್ಗ ನಗರದ ಗುರುಪುರ, ಪುರಲೆ, ಸುಬ್ಬಯ್ಯ ಆಸ್ಪತ್ರೆ, ಮಂಜುನಾಥ ಬಡಾವಣೆ, ವೆಂಕಟೇಶ ನಗರ, ಹಸೂಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾವಾಗಲಿದ್ದು, ಈ ಪ್ರದೇಶದ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಗರ ಉಪವಿಭಾಗ-1 ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

CM Siddaramaiah ಡಾ.ರಾಜ್ ಕುಮಾರ್ ಅಭಿನಯದ ಸಿನಿಮಾಗಳ ಮೌಲ್ಯ,ಘನತೆ ಇಂದಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ- ಸಿದ್ಧರಾಮಯ್ಯ.

0

CM Siddaramaiah ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ.
ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆಕೊಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ, ಮಾತನಾಡುತ್ತಿದ್ದರು.

ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು.
ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇರಿಕೊಂಡಿದೆ. ಇದಕ್ಕೆ ಕಲಾ ಮಾಧ್ಯಮ ಆಗಿರುವ ಸಿನಿಮಾಗಳು ಪರಿಹಾರ ಹುಡುಕಬೇಕು. ಸಮಾಜವನ್ನು ಕಲಾ ಮಾಧ್ಯಮದ ಮೂಲಕ ಬೆಸೆಯಬೇಕು.

ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿದ್ದ ಮೌಲ್ಯಗಳು ಮತ್ತು ಘನತೆ ಈಗಿನ ಸಿನಿಮಾಗಳಲ್ಲಿ ಕಾಣುತ್ತಿಲ್ಲ. ರಾಜ್ ಕುಮಾರ್ ಸಿನಿಮಾಗಳಲ್ಲಿ ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳು ತುಂಬಿರುತ್ತಿದ್ದವು. ಹೀಗಾಗಿ ಸರ್ವರಿಗೂ ಅವರ ಸಿನಿಮಾಗಳು ಇಷ್ಟ ಆಗುತ್ತಿದ್ದವು.

CM Siddaramaiah ಮೌಡ್ಯಗಳನ್ನು ಬಿತ್ತುವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾದ ಸಿನಿಮಾಗಳು ಸಮಾಜಕ್ಕೆ ಒಳ್ಳೆಯದಲ್ಲ. ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸಿನಿಮಾಗಳು ಮತ್ತೆ ಮೌಡ್ಯಗಳನ್ನು ಬಿತ್ತುವುದಕ್ಕೆ ಹೋಗಬಾರದು.
ಈಗ ತಂತ್ರಜ್ಞಾನ ಬೆಳೆದು ಕೃತಕ ಬುದ್ದಿಮತ್ತೆವರೆಗೂ ಬೆಳೆದು ಬಂದಿದೆ. ನಮ್ಮ ಬದುಕನ್ನು ಪ್ರತಿಬಿಂಬಿಸುವ, ನಮ್ಮ ತಳಮಳಗಳಿಗೆ ಪರಿಹಾರ ಹುಡುಕುವ ಸಿನಿಮಾಗಳು ಬಂದಾಗ ಅಂತಹ ಸಿನಿಮಾಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುತ್ತವೆ.

ಬೆಂಗಳೂರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲವೂ ಇದೆ. ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಂಡು ಉತ್ತಮ‌ ಸಿನಿಮಾಗಳನ್ನು ಮಾಡಿದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಿನಿಮಾ ಕ್ಷೇತ್ರವೂ ಪ್ರಗತಿ ಕಾಣುತ್ತದೆ. ಈ ದಿಕ್ಕಿನಲ್ಲಿ ಸಿನಿಮಾ ಜಗತ್ತು ಮಾನವೀಯಗೊಳ್ಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

State Health Departments ಮಾದಕ ಔಷಧ ದುರ್ಬಳಕೆ 3 ಮಳಿಗೆಗಳ ಪರವಾನಗಿ ರದ್ದು- ಸಚಿವ ದಿನೇಶ್ ಗುಂಡೂರಾವ್

0

State Health Departments ಮಾದಕ ಔಷಧಿಗಳ ದುರ್ಬಳಕೆ ತಡೆಯುವ ನಿಟ್ಟಿನಲ್ಲಿ ₹17 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ. ನಿಯಮ ಉಲ್ಲಂಘನೆ ಕಂಡು ಬಂದ 75 ಸಂಸ್ಥೆಗಳ ವಿರುದ್ಧ ಮೊಕದ್ದಮೆಗೆ ಸೂಚಿಸಲಾಗಿದೆ. 400 ಔಷಧ ಮಳಿಗೆಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಲಾಗಿದೆ. 213 ಸಂಸ್ಥೆಗಳ ಪರವಾನಗಿ ಅಮಾನತು ಪಡಿಸಿ, 3 ಔಷಧ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ತಿಳಿಸಿದ್ದಾರೆ.

Bhadravathi Surveyor Lokayukta ಭದ್ರಾವತಿ ಭೂಮಾಪನಾ ಪರಿವೀಕ್ಷಕ ಲೋಕಾಯುಕ್ತ ಬಲೆಗೆ!

0

Bhadravathi Surveyor Lokayukta ಬಸವರಾಜಪ್ಪ.ಎಂ.ಹೆಚ್ ಬಿನ್ ಲೇಟ್ ಹನುಮಂತಪ್ಪ, ಮತ್ತಿಘಟ್ಟ ಗ್ರಾಮ. ಭದ್ರಾವತಿ ತಾಲ್ಲೂಕು ರವರ ಹೆಸರಿನಲ್ಲಿದ್ದ ಸ.ನಂ.56/10 ರಲ್ಲಿನ 1 ಎಕರೆ 20 ಗುಂಟೆ ಜಮೀನಿನ ಪಕ್ಕ ಪೋಡಿ ದುರಸ್ಥಿ ಮಾಡಿಕೊಡುವ ಬಗ್ಗೆ ಭದ್ರಾವತಿ ತಾಲ್ಲೂಕು ಎ.ಡಿ.ಎಲ್.ಆರ್ ಕಛೇರಿಯ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಎಂಬುವವರು ಲಂಚದ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.

ದಿನಾಂಕ:23/07/2013 ರಂದು ಸದರಿ ಅಪಾದಿತ ಅಧಿಕಾರಿ ಪಿರ್ಯಾದುದಾರರಿಂದ 15,000/- ರೂ ಲಂಚದ ಹಣವನ್ನು ಶಿವಮೊಗ್ಗ ನಗರ ವಿನೋಬನಗರ ಬಡಾವಣೆಯ ಕೆಂಚಪ್ಪ ಲೇಔಟ್ ನ ಆಪಾದಿತರ ವಾಸದ ಮನೆಯಲ್ಲಿ ಕೇಳಿ ಪಡೆದುಕೊಳ್ಳುವಾಗ ಟ್ರ‍್ಯಾಪ್ ಮಾಡಲಾಗಿರುತ್ತದೆ. ಕೆ.ಸಿ.ಪುರುಷೋತ್ತಮ, ಪೊಲೀಸ್ ಇನ್ಸ್ಪೆಕ್ಟರ್, ಕ.ಲೋ.ಶಿವಮೊಗ್ಗ ರವರು ಪ್ರಕರಣವನ್ನು ತನಿಖೆ ಕೈಗೊಂಡು ಆಪಾದಿತರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ.

ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆದು ದಿನಾಂಕ:28/02/2025 ರಂದು ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮರುಳಸಿದ್ದಾರಾದ್ಯ ಹೆಚ್.ಜೆ. ರವರು ಆರೋಪಿ ಟಿ.ಮಲ್ಲಿಕಾರ್ಜುನಯ್ಯ ಇವರಿಗೆ ಒಂದು ವರ್ಷ ಆರು ತಿಂಗಳು ಕಾರಾಗೃಹ ಶಿಕ್ಷೆ ಮತ್ತು 30,000/- ರೂ ದಂಡ ವಿಧಿಸಿ ಆದೇಶಿಸಿರುತ್ತಾರೆ.
ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎಂ.ಡಿ.ಸುಂದರ್ ರಾಜ್ ರವರು ವಾದ ಮಂಡಿಸಿರುತ್ತಾರೆ.

Shivamogga Union Of Working Journalists Association ವಾರ್ಷಿಕ ದತ್ತಿ ಪುರಸ್ಕಾರ ಪುರಸ್ಕೃತ ಜಿಲ್ಲಾ ಪತ್ರಕರ್ತರಿಗೆ ಅಭಿನಂದನೆ

0

Shivamogga Union Of Working Journalists Association ಶಿವಮೊಗ್ಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿಯ ಮಿಂಚು ಶ್ರೀನಿವಾಸ್ ಪ್ರಶಸ್ತಿ ಪುರಸ್ಕೃತರಾದ ಶಿವಮೊಗ್ಗೆಯ ಹಿರಿಯ ಪತ್ರಕರ್ತರು, ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಚಂದ್ರಶೇಖರ್ ಶೃಂಗೇರಿಯವರಿಗೆ, ಎಸ್. ಹೆಚ್. ರಂಗಸ್ವಾಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಗಿರೀಶ್ ಉಮ್ರಾಯ್ ಹಾಗೂ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ ಪುರಸ್ಕೃತರಾದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ್ತಿ ಕವಿತಾರವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಭಿನಂದಿಸಿದೆ.

ಈ ಸಂಬಂಧವಾಗಿ ಹೇಳಿಕೆ ನೀಡಿರುವ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಶುಭ ಕೋರಿದ್ದಾರೆ.
ಅ. ರಾ. ಶ್ರೀನಿವಾಸ್‌ರಿಗೆ ಅಭಿನಂದನೆ

ಇದೇ ಸಂದರ್ಭದಲ್ಲಿ ಸಾಗರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹಿರಿಯ ಪತ್ರಕರ್ತ ಅ. ರಾ. ಶ್ರೀನಿವಾಸ್‌ರವರನ್ನು ಅಭಿನಂದಿಸಿರುವ ಅವರು, ಇದು ಪತ್ರಿಕಾ ಕ್ಷೇತ್ರಕ್ಕೆ ಸಂದ ಗೌರವ ಎಂದು ಶುಭ ಹಾರೈಸಿದ್ದಾರೆ. ಸುದೀರ್ಘ ಕಾಲದವರೆಗೆ ಪತ್ರಕರ್ತರಾಗಿ, ಕತೆ, ಕಾದಂಬರಿ, ರಂಗ ವಿಮರ್ಶಕರಾಗಿ ತಮ್ಮದೇ ಆದ ಛಾಪು ಮೂಡಿಸಿರುವ ಶ್ರೀನಿವಾಸ್‌ರವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗುವುದರ ಜೊತೆಗೆ ಮಾದರಿಯಾಗಿ ನಡೆಯಲಿ ಎಂದು ಆಶಿಸಿದ್ದಾರೆ.

World Wildlife Day ತ್ಯಾವರೆಕೊಪ್ಪದಲ್ಲಿ ವಿಶ್ವ ವನ್ಯಜೀವಿ‌ ದಿನಾಚರಣೆ

0

World Wildlife Day ಮಾ.3 ರ ಬೆಳಗ್ಗೆ 10 ಗಂಟೆಗೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ‘ವೈಲ್ಡ್ಲೈಫ್ ಕನ್ಸರ್ವೇಷನ್ ಫೈನಾನ್ಸ್ : ಇನ್ವೆಸ್ಟಿಂಗ್ ಇನ್ ಪೀಪಲ್ & ಪ್ಲಾನೆಟ್’ ಎಂಬ ಶೀರ್ಷಿಕೆಯಡಿಯಲ್ಲಿ ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇದೇ ದಿನದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ಸಹಭಾಗಿತ್ವದಲ್ಲಿ ‘ನಮ್ಮ ಕಾಡು ನಮ್ಮ ಕೆರೆ’ ಕಾರ್ಯಕ್ರಮದಡಿಯಲ್ಲಿ ಹುಲಿ-ಸಿಂಹಧಾಮದ ಆವರಣದೊಳಗಿರುವ 10 ಕೆರೆಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಇದರಿಂದ ಅರಣ್ಯ ಹಾಗೂ ಮೃಗಾಲಯದ ಪ್ರಾಣಿಗಳಿಗೆ ನೀರಿನ ಅನುಕೂಲಕರವಾಗಲಿದೆ. ಇದರ ಜೊತೆಗೆ Zoo Vista Project (3ಡಿ ವರ್ಚುವಲ್ ಝೂ) ದತ್ತು ಕಾರ್ಯಕ್ರಮವನ್ನು ಉತ್ತೇಜಿಸುವ ಯೋಜನೆಯ ಉದ್ಘಾಟನೆಯನ್ನೂ ಸಹ ಹಮ್ಮಿಕೊಳ್ಳಲಾಗಿದೆ ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Bhadravati Police ಭದ್ರಾವತಿಯಿಂದ ನಾಪತ್ತೆಯಾಗಿರುವ ವ್ಯಕ್ತಿಯ ಬಗ್ಗೆ ಪೊಲೀಸ್ ಪ್ರಕಟಣೆ

0

Bhadravati Police ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿರುವ ಸುಮಾರು 40 ವರ್ಷ ವಯಸ್ಸಿನ ಸಿರಾಜ್ ಎಂಬ ವ್ಯಕ್ತಿಯು ಫೆ.15 ರ ಸಂಜೆ 5 ಗಂಟೆಯಿಂದ ಕಾಣೆಯಾಗಿದ್ದಾರೆ.

ಕಾಣೆಯಾದ ಸಿರಾಜ್ ಸಾಧಾರಣ ಮೈಕಟ್ಟು, ಕೋಲು ಮುಖ, ಕಪ್ಪು ಮೈಬಣ್ಣ, ಸುಮಾರು 5.6 ಅಡಿ ಎತ್ತರ ಇದ್ದು, ಪ್ಯಾಂಟು ಶರ್ಟ್ ಧರಿಸಿರುತ್ತಾರೆ. ಕುಡಿದ ಅಮಲಿನಲ್ಲಿ ಇದ್ದಂತೆ ನಡೆಯುತ್ತಿರುತ್ತಾರೆ.

Bhadravati Police ಈ ರೀತಿಯ ವ್ಯಕ್ತಿಯು ಪತ್ತೆಯಾದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಹಳೇನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.