Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಜಿಲ್ಲಾಡಳಿತದ ಸಹಯೋಗದೊಂದಿಗೆ ಏಪ್ರಿಲ್05 ಮತ್ತು 06 ರಂದು ನಗರದ ನೆಹರೂ ಕ್ರೀಡಾಂಗಣ ಮತ್ತು ನಗರದ ವಿವಿಧ ಸಮನಾಂತರ ವೇದಿಕೆಗಳಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಕ್ರೀಡಾಕೂಟಕ್ಕೆ ಜಿಲ್ಲೆಯ ಸುಮಾರು 4500ಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದ್ದು, ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.
ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯುವ 2ದಿನಗಳ ಕಾಲ ಆಹ್ವಾನಿತ ನೌಕರ ಕ್ರೀಡಾಪಟುಗಳಿಗೆ ವ್ಯವಸ್ಥಿತವಾಗಿ ಊಟೋಪಹಾರದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ ಅವರು ಕಾರ್ಯಕ್ರಮದ ಉದ್ಘಾಟನೆಗೆ ನಿಯಮಾನುಸಾರ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಿಗಮ-ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳನ್ನು ಆಹ್ವಾನಿಸಲಾಗುವುದ ಎಂದರು.
Department of Youth Empowerment and Sports ಕ್ರೀಡಾಕೂಟದಲ್ಲಿ ಎಲ್ಲಾ ಸ್ಪರ್ಧಾಳುಗಳು ಸ್ಪರ್ಧಾ ಮನೋಭಾವದಿಂದ ಕ್ರೀಡೆಯಲ್ಲಿ ಸ್ಪರ್ಧಿಸುವಂತೆ ಹಾಗೂ ವಿಜೇತರಾಗಿ ಸ್ಥಾನ ಪಡೆದ ಕ್ರೀಡಾಳುಗಳು ರಾಜ್ಯ ಮಟ್ಟದಲ್ಲಿ ನಡೆಯುವ ಸ್ಪರ್ಧೆಯಲ್ಲಿ ಜಿಲ್ಲೆಯ ಪ್ರತಿನಿಧಿಗಳಾಗಿ ಭಾಗವಹಿಸಿ, ಜಯಶಾಲಿಗಳಾಗಿ ಆಗಮಿಸುವಂತೆಯೂ ಅವರು ಆಶಿಸಿದ ಅವರು, ಕ್ರೀಡಾಕೂಟವು ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಸೂಕ್ತವಾದ ತೀರ್ಪುಗಾರರನ್ನು ನಿಯೋಜಿಸುವಂತೆಯೂ ಅವರು ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈಗಾಗಲೇ ನಡೆಸಲಾದ ಕ್ರೀಡೆಗಳಲ್ಲಿ ವಿಜೇತರಾದ ಅಭ್ಯರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ. ಈ ಅವಧಿಯಲ್ಲಿ ಕ್ರೀಡಾಳುಗಳಿಗೆ ಉತ್ತಮ ಉಟೋಪಚಾರ ಹಾಗೂ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಉತ್ತಮವಾದ ಸ್ಮರಣಿಕೆ ಮತ್ತು ಪ್ರಶಸ್ತಿಪ್ತತ್ರಗಳನ್ನು ಪ್ರದಾನ ಮಾಡುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಕಾರ್ಯದರ್ಶಿ ಆರ್.ಪಾಪಣ್ಣ, ಸಿದ್ಧಬಸಪ್ಪ, ಡಾ|| ಸಿ.ಎ.ಹಿರೇಮಠ್, ದಿನೇಶ್, ಮತ್ತಿತರರು ಉಪಸ್ಥಿತರಿದ್ದರು.
Department of Youth Empowerment and Sports ಏಪ್ರಿಲ್ 5 & 6 ರಂದು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ & ಸಾಂಸ್ಕೃತಿಕ ಸ್ಪರ್ಧೆಗಳು
National Science Day ನಾವು ವೈಜ್ಞಾನಿಕ ಮನೋಭಾವನೆ & ಮಾನವೀಯ ಮೌಲ್ಯಗಳನ್ನ ಬೆಳೆಸಿಕೋಳ್ಳೋಣ- ಶಾಲಿನಿ ರಜನೀಶ್
National Science Day ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಪ್ರತಿಜ್ಞಾವಿಧಿಯನ್ನು ಬೋಧಿಸಿದ ಬಳಿಕ ಮಾತನಾಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಪ್ರತಿ ದಿನದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ವಿಜ್ಞಾನ ದಿನದ ಪ್ರತಿಜ್ಞಾನ ವಿಧಿಯಲ್ಲಿ ತಿಳಿಸಿರುವಂತೆ, ನಾವು ಪ್ರಶ್ನೆಯನ್ನು ಮಾಡದೇ ಯಾವುದೇ ತರ್ಕವನ್ನು ಒಪ್ಪಬಾರದು ಹಾಗೂ ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡಿ ಜೀವ ಜಗತ್ತಿಗೆ ಪೂರಕವಾದ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
National Science Day ಈ ಸಂದರ್ಭದಲ್ಲಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಉಪಸ್ಥಿತರಿದ್ದರು.
Santosh Lad ಪುಣ್ಯಾಶ್ರಮದಲ್ಲಿ ಸಚಿವ ಸಂತೋಷ್ ಲಾಡ್ ಅಭಿಮಾನಿಗಳಿಂದ ಜನ್ಮದಿನಾಚರಣೆ
Santosh Lad ಯುವಕರ ಆಶಾಕಿರಣ, ಸ್ನೇಹಜೀವಿ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ *ಸಂತೋಷ್ ಲಾಡ್ ಫೌಂಡೇಶನ್ (ರಿ ), ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಅಂಧ ಮಕ್ಕಳ ಸಂಗೀತ ವಿದ್ಯಾಲಯ, ಶ್ರೀ ವೀರೇಶ್ವರ ಪುಣ್ಯಾಶ್ರಮ ಉಚಿತ ಸಂಸ್ಕೃತ ಪಾಠಶಾಲೆಯ ಮಕ್ಕಳಿಗೆ ಬಟ್ಟೆ, ದಿನಸಿ ಮತ್ತು ಅಗತ್ಯ ವಸ್ತುಗಳ ವಿತರಣೆ ಮಾಡುವ ಮುಖಾಂತರ ಆಚರಿಸಲಾಯಿತು
Santosh Lad ಈ ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಪ್ರಮುಖರಾದ ಹೆಚ್ ಪಿ ಗಿರೀಶ್, ಬಿ ಲೋಕೇಶ್, ಎಸ್ ಕುಮಾರೇಶ್ , ಎಂ ರಾಹುಲ್, ಕವಿತಾ, ಎಂ ರಾಕೇಶ್, ಕೆ ಎಲ್ ಪವನ್,ಗುರುಪ್ರಸಾದ್, ಸಚಿನ್ ಸಿಂದ್ಯಾ , ಮೋಹನ್ , ರಾಮ್ ಕುಮಾರ್, ರಾಜೇಶ್ , ಇರ್ಫಾನ್ , ರಾಹಿಲ್, ಸಚಿನ್, ಧನುಷ್ ಜಾದವ್, ಮಿಥುನ್, ಅಧ್ನನ್, ಕಿರಣ್, ವಿನಯ್ ಬಜಾರ್, ಗಣೇಶ್ , ಸಾಹಿಲ್ ಹಾಗೂ ಇತರರು ಇದ್ದರು
Skate Game ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆ.ಶಿವಮೊಗ್ಗದ ಅನೂಪ್ ಶೆಟ್ಟಿಗೆ ಪ್ರಥಮ ಸ್ಥಾನ
Skate Game ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಶಿಪ್ ನ ೨೦೦ ಮೀ. ಮತ್ತು ೪೦೦ ಮೀ. ನಲ್ಲಿ ಶಿವಮೊಗ್ಗ ನಗರದ ಪ್ರತಿಷ್ಟಿತ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಅನೂಪ್ ಶೆಟ್ಟಿ ಎ.ಎಸ್. ಪ್ರಥಮ ಸ್ಥಾನ ಪಡೆದಿದ್ದಾರೆ. ಜೊತೆಗೆ ಮಧುರೈ ನಲ್ಲಿ ನಡೆದ ಸ್ಕೇಟಿಂಗ್ ಸ್ಪರ್ಧೆಯಲ್ಲೂ ಕೂಡ ೩ನೇ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಅನೂಪ್ ಮಲೇಷಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಪ್ರತಿಭಾನ್ವಿತನ ಸಾಧನೆಗೆ ಶಿವಮೊಗ್ಗ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕ ಡಾ. ಎಸ್.ಬಿ. ಜಗದೀಶ್ ಗೌಡ, ಛೇರ್ಮನ್ ರಮ್ಯ ಜಗದೀಶ್ ಗೌಡ, ತರಬೇತುದಾರ ದೀಪಕ್ ಸಿಂಗ್ ಹಾಗೂ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.
Maha Shivratri 2025 ಶಿವರಾತ್ರಿ ಹಬ್ಬದಲ್ಲಿ ಸಿಗುವ ಜಾತ್ರಾ ಸಂತೋಷ- ಸಡಗರದ ಅನುಭೂತಿ- ಎಚ್.ಕೆ.ವಿವೇಕಾನಂದ.
Maha Shivratri 2025 ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ, ಜೀವನೋತ್ಸಾಹ ತುಂಬುವ ನಮ್ಮೂರ ಜಾತ್ರೆ, ಬದುಕಲು ಕಲಿಸುವ ನಮ್ಮೂರ ಜಾತ್ರೆ, ಅಗೋ ಅಲ್ಲಿ ನೋಡಿ ಸುಂಕದವನೊಬ್ಬ ಬೆಳಗ್ಗೆಯೇ ಚೀಲ ಹಿಡಿದು ನಿಂತಿದ್ದಾನೆ. ಎಷ್ಟೊಂದು ಲವಲವಿಕೆ ಅವನ ಮುಖದಲ್ಲಿ, ಬಂದಳು ನೋಡಿ ಸೊಪ್ಪಿನ ಅಜ್ಜಿ. ನೆಲದ ಮೇಲೆ ಗೋಣಿಚೀಲ ಹಾಸಿ ವಿವಿಧ ಸೊಪ್ಪಿನ ಕಟ್ಟುಗಳನ್ನು ಕಟ್ಟಿ ಅದರ ಮೇಲೆ ನೀರು ಚಿಮುಕಿಸಿ ಗಿರಾಕಿಗಳಿಗಾಗಿ ಕಾಯುತ್ತಾ ಕುಳಿತಿದ್ದಾಳೆ.. ಬಂದಾ ನೋಡಿ ತರಕಾರಿಯಾತ. ಟೊಮ್ಯಾಟೋ ಈರುಳ್ಳಿ ಆಲೂಗಡ್ಡೆ ಸೌತೆ ಮೂಟೆಗಳನ್ನು ಬಿಡಿಸಿ ಜೋಡಿಸುತ್ತಿದ್ದಾನೆ. ಎಷ್ಟೊಂದು ಏಕಾಗ್ರತೆ ಅವನಲ್ಲಿ, ಅರೆ ಅಲ್ಲಿ ನೋಡಿ ಸಿಹಿತಿಂಡಿ ಮಾರುವವನೊಬ್ಬ ತಟ್ಟೆಗಳಲ್ಲಿ ಮೈಸೂರು ಪಾಕ್, ಲಡ್ಡು , ಜಿಲೇಬಿ, ಚೌ ಚೌಗಳನ್ನು ಇಟ್ಟಿದ್ದಾನೆ. ಇಲ್ಲೊಬ್ಬ ಆಗಲೇ ಕಡ್ಡಿ ಕರ್ಪೂರ ಅರಿಶಿನ ಕುಂಕುಮ ಜೋಡಿಸಿಟ್ಟು ಒಂದು ಕಟ್ಟು ಗಂಧದ ಕಡ್ಡಿ ಹಚ್ಚಿ ಅದರ ಘಮ್ಮನೆ ಸುವಾಸನೆಯಿಂದ ಗ್ರಾಹಕರನ್ನು ಆಕರ್ಷಿಸುತ್ತಿದ್ದಾನೆ. ಹೊತ್ತು ಕಳೆದಂತೆ ಸಂತೆ ಕಳೆ ಕಟ್ಟುತ್ತಿದೆ. ಬಟ್ಟೆ ಮಾರುವವನೊಬ್ಬ ಸೀರೆ ಪಂಚೆ ರವಿಕೆಗಳನ್ನು ದಾರವೊಂದಕ್ಕೆ ನೇತಾಕಿ ಟವೆಲ್ ಗಳನ್ನು ನೀಟಾಗಿ ಮಡಿಸುತ್ತಿದ್ದಾನೆ. ಚಪ್ಪಲಿ ಮಾರುವವನೊಬ್ಬ ಪಾಲಿಷ್ ಮಾಡಿದ ಥಳಥಳ ಹೊಳೆಯುವ ಶೂಗಳನ್ನು ಜೋಡಿಸುತ್ತಿದ್ದಾನೆ. ಎಲೆ ಅಡಿಕೆ ತೆಂಗಿನಕಾಯಿಯ ಅಂಗಡಿಯವನು ಲಗುಬುಗೆಯಿಂದ ಎಲ್ಲವನ್ನೂ ಪೇಪರ್ ನಲ್ಲಿ ಸುತ್ತಿ ಕೊಡುತ್ತಿದ್ದಾನೆ. ಅರೆ ಬಂದ ನೋಡಿ ಬಲೂನು ಮಾಮ. ಪೂಂ ಪೂಂ ಎಂದು ಸದ್ದು ಮಾಡುತ್ತಾ ಮಕ್ಕಳಿರುವ ಜಾಗಕ್ಕೆ ಹೋಗಿ ಜೋರಾಗಿ ಊದುತ್ತಿದ್ದಾನೆ. ಬಳೆ ಟೇಪು ಮಾರುವ ಹೆಂಗಸು ಮದುವೆ ಹೆಣ್ಣಿಗೆ ನಗುನಗುತ್ತಾ ರೇಗಿಸುತ್ತಾ ಬಳೆ ತೊಡಿಸುತ್ತಿದ್ದಾಳೆ.
ಕೆಲವರು ಇದನ್ನು ನಿಂತು ನೋಡುತ್ತಿದ್ದಾರೆ. ಅಲ್ಲಿ ಮರದ ಕೆಳಗೆ ಗಿಣಿ ಶಾಸ್ತ್ರದವನೊಬ್ಬ ಯಾರಿಗೋ ಭವಿಷ್ಯ ಹೇಳುತ್ತಿದ್ದಾನೆ. ಕುಕ್ಕರಗಾಲಿನಲ್ಲಿ ಕುಳಿತವನೊಬ್ಬ ಭಯಭಕ್ತಿಯಿಂದ ಅವನು ಹೇಳಿದ್ದನ್ನು ಕೇಳಿಸಿಕೊಳ್ಳುತ್ತಿದ್ದಾನೆ. ಅಗೋ ಬಂದಾ ನೋಡಿ ಹುಲಿ ವೇಷದ ಹುಲಿರಾಯ. ಜಗ್ಗಜಗ್ಗನೆ ಕುಣಿಯುತ್ತಿದ್ದಾನೆ. ಮಕ್ಕಳು ಗಾಬರಿಯಿಂದ ಅಳುತ್ತಿವೆ. ಪಕ್ಕದಲ್ಲೇ ಪುಂಗಿ ಊದುತ್ತಾ ಹಾವಾಡಿಗನೊಬ್ಬ ಜನಗಳನ್ನು ಕರೆಯುತ್ತಿದ್ದಾನೆ. ಆ ಗುಂಪಿನಲ್ಲಿ ಕೆಲವು ಪುಂಡ ಹುಡುಗರು ಹುಡುಗಿಯರನ್ನು ಕೆಣಕಿ ಉಗಿಸಿಕೊಳ್ಳುತ್ತಿದ್ದಾರೆ. ಓ, ಆಗಲೇ ಚರ್ಮ ಸುಲಿದ ಕುರಿ ಮೇಕೆಯ ಮಾಂಸವನ್ನು ನೇತಾಕಿದ್ದಾರೆ. ಅಲ್ಲಿಯೇ ಕೋಳಿಗಳ ಕೊಕ್ಕಕ್ಕೋ ಸದ್ದು ಕೇಳಿಸುತ್ತಿದೆ. ಪಕ್ಕದಲ್ಲೇ ಮೀನಿನ ವಾಸನೆ.ಹೆಗಲ ಮೇಲೆ ಮಗುವನ್ನು ಕೂರಿಸಿಕೊಂಡು ರೈತನೊಬ್ಬ ಬರುತ್ತಿದ್ದರೆ, ಗೃಹಿಣಿಯೊಬ್ಬಳು ಕಂಕುಳಲ್ಲಿ ಮಗುವನ್ನು, ಕೈಯಲ್ಲಿ ಬ್ಯಾಗನ್ನು ಹಿಡಿದು ಬರುತ್ತಿದ್ದಾಳೆ. ಅಲ್ಲೊಬ್ಬ ಟೀ ಕಾಫಿ ಎಂದು ಜೋರಾಗಿ ಕೂಗುತ್ತಾ ಬಂದ. ಬಿಸಿಬಿಸಿ ಬೊಂಡ ಬಜ್ಜಿ ತಟ್ಟೆಯಲ್ಲಿ ತಂದಿದ್ದಾನೆ.
ಚುರುಮುರಿಯವನೊಬ್ಬನು ಅಲ್ಲಿಯೇ ಸುತ್ತಾಡುತ್ತಿದ್ದಾನೆ. ಅಗೋ ಅಲ್ಲಿ ಮರದ ಕೆಳಗೆ ಕುಡುಕರ ಗುಂಪೊಂದು ಇಸ್ಪೀಟ್ ಆಡುತ್ತಿದೆ. ಅದರ ಸುತ್ತಲೇ ವೇಶ್ಯೆಯೊಬ್ಬಳು ಗಾಡ ನೀಲಿ ಬಣ್ಣದ ಸೀರೆಯುಟ್ಟು ಕೆಂಪನೆಯ ತುಟಿಯಲ್ಲಿ ನಸುನಗುತ್ತಿದ್ದಾಳೆ. ಒಳಗಡೆ ದ್ವಿಲಿಂಗಿಗಳು ಜೋರಾಗಿ ಚಪ್ಪಾಳೆ ತಟ್ಟುತ್ತಾ ತಮಗೆ ಇಷ್ಟಬಂದತೆ ಡ್ಯಾನ್ಸ್ ಮಾಡುತ್ತಾ ಹಣ ಕೇಳುತ್ತಿದ್ದಾರೆ. ಇನ್ನೊಂದು ಗುಂಪಿನಲ್ಲಿ ಇದ್ದಕ್ಕಿದ್ದಂತೆ ಜಗಳ. ಎಲ್ಲೋ ದೂರದಲ್ಲಿ ಕಲ್ಲಂಗಡಿ ಹಣ್ಣು ತಿನ್ನುತ್ತಿದ್ದ ಪೋಲೀಸಪ್ಪ ಇದನ್ನು ಗಮನಿಸಿ ಲಾಠಿ ಹಿಡಿದು ಬಂದ. ಪುಟ್ಟ ಮಗುವೊಂದು ಪೀಪಿ ಊದುತ್ತಾ ಸಂಭ್ರಮ ಪಡುತ್ತಿದೆ. ಅಬ್ಬಬ್ಬಾ,
ಎಷ್ಟೊಂದು ಸುಂದರ ನಮ್ಮೂರ ಜಾತ್ರೆ. ಜೀವನೋತ್ಸಾಹ ತುಂಬುವ ಬದುಕಲು ಕಲಿಸುವ ನಮ್ಮೂರ ಜಾತ್ರೆ ಒಮ್ಮೆ ನೋಡ ಬನ್ನಿ. ನಿಮ್ಮ ಮಾಲ್ ಗಳ ಜಗಮಗಿಸುವ ಕೃತಕ ಅಲಂಕಾರದ ನಿರ್ಜೀವ ಶೋಕಿಯಲ್ಲ. ಸಂಬಂಧ ಬೆಸೆಯುವ ಜೀವಂತ ಜಾತ್ರೆ ನಮ್ಮೂರ ಜಾತ್ರೆ. ಒಮ್ಮೆ ನೋಡ ಬನ್ನಿ.
Maha Shivratri 2025 ಶಿವರಾತ್ರಿಯ ಶುಭಾಶಯಗಳೊಂದಿಗೆ….. ಸಂಪ್ರದಾಯ ಮತ್ತು ಆಚರಣೆಗಳಲ್ಲಿ ಒಂದಷ್ಟು ಮೌಡ್ಯ ತುಂಬಿದ್ದರೂ ಹಬ್ಬಗಳು ನಮ್ಮ ಸಮಾಜದ ಬಹುಮುಖ್ಯ ಸಂಭ್ರಮಗಳು. ಸ್ವಲ್ಪ ಹಿಂದಿನವರೆಗೂ ಹಬ್ಬಗಳು ರುಚಿಯಾದ ಊಟ ಮತ್ತು ಹೊಸ ಬಟ್ಟೆಗಳಿಗೆ
ಆಕರ್ಷಕ ಸಮಯವಾಗಿತ್ತು. ಆದರೆ ಆಧುನಿಕತೆಯ ಭರದಲ್ಲಿ ಅದು ಇಂದು ಶಿಥಿಲವಾಗಿ ತನ್ನ ಪ್ರಾಮುಖ್ಯತೆ ಕಳೆದುಕೊಳ್ಳುವ ಹಂತದಲ್ಲಿದೆ. ಕೇವಲ ಕಾಟಾಚಾರದ, ತೋರಿಕೆಯ ಪ್ರದರ್ಶನವಾಗಿದೆ. ಎಲ್ಲದರಲ್ಲಿಯೂ ಬದಲಾವಣೆಗಳಾಗುತ್ತಿರುವ ಈ ಘಟ್ಟದಲ್ಲಿ ಹಬ್ಬಗಳಲ್ಲಿಯೂ ಒಂದಿಷ್ಟು ಆಧುನಿಕತೆಯ ಆಚರಣೆಗಳನ್ನು ಅಳವಡಿಸಿಕೊಂಡರೆ ನಿಜಕ್ಕೂ ಮತ್ತೆ ಅದು ತನ್ನ ನಿಜ ಅರ್ಥದ ಸಂತೋಷ ಸಂಭ್ರಮಗಳ ಕೂಟಗಳಾಗಿ ಮಾರ್ಪಡಬಹುದು. ಬಹುತೇಕರಲ್ಲಿ ಈಗ ಊಟ, ಬಟ್ಟೆಗಳ ಸಂಭ್ರಮ ಅಷ್ಟಾಗಿ ಉಳಿದಿಲ್ಲ. ಎಲ್ಲಾ ರೀತಿಯ ಊಟ ಬಟ್ಟೆಗಳು ಎಲ್ಲಾ ಸಂದರ್ಭದಲ್ಲಿಯೂ ಲಭ್ಯವಿದೆ. ಅದಕ್ಕಾಗಿ ಹಬ್ಬಗಳಿಗಾಗಿ ಕಾಯುವ ಸ್ಥಿತಿ ಇಲ್ಲ. ಆದರೆ ನಿಜವಾಗಿ ಕಾಣೆಯಾಗಿರುವುದು ಸ್ನೇಹ ಸಂಬಂಧಗಳು, ಆತ್ಮೀಯ ವಾತಾವರಣ ಮತ್ತು ಮಾನವೀಯ ಮೌಲ್ಯಗಳು.
ಅದನ್ನು ಪುನರ್ ಸ್ಥಾಪಿಸಲು ಹಬ್ಬಗಳನ್ನು ವೇದಿಕೆ ಮಾಡಿಕೊಳ್ಳಬಹುದು. ಹೇಗೆ ವಿವಿಧ ಕಾರಣಗಳಿಗಾಗಿ
MODERN PARTY ಗಳನ್ನು ಆಯೋಜಿಸಲಾಗುತ್ತದೋ ಹಾಗೆ ಹಬ್ಬಗಳನ್ನು ಆತ್ಮೀಯರ, ಗೆಳೆಯರ,ಬಂಧುಗಳ ಸ್ನೇಹಕೂಟಗಳಾಗಿ ಮಾರ್ಪಡಿಸಿ ಮನಸ್ಸಿಗೆ ಮುದ ನೀಡುವಂತೆ ಮಾಡಿಕೊಳ್ಳಬಹುದು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆ ದಿನ ಹಿರಿಯರೊಂದಿಗೆ ಚಿಂತನ – ಮಂಥನ, ಮಕ್ಕಳಿಗೆ ಒಂದಿಷ್ಟು ಆಟಗಳು, ಭವಿಷ್ಯದ ಯೋಜನೆಗಳನ್ನು ಮನೆಯ ಒಳಗೇ ಚರ್ಚಿಸುವ ಒಂದು ವೇದಿಕೆ ಸೃಷ್ಟಿಸಬಹುದು. ಅಲ್ಲದೆ ತೀರಾ ಕೆಳಸ್ತರದ, ಹಬ್ಬದ ಊಟಕ್ಕೆ ಆಸೆಪಡುವ ಒಂದಷ್ಟು ನಮ್ಮ ಸುತ್ತಮುತ್ತಲ ಬಡವರಿಗೆ ಒಳ್ಳೆಯ ಹಬ್ಬದೂಟ ಹಾಕುವ ಸ್ವಯಂ ತೃಪ್ತಿಯ ಕೆಲಸವನ್ನು ಮಾಡಬಹುದು. ಆಗ ಹಬ್ಬಗಳ ಮಹತ್ವ ಹೆಚ್ಚಾಗಿ ಆತ್ಮತೃಪ್ತಿಯ ಜೊತೆಗೆ ಮುಂದಿನ ಹಬ್ಬಕ್ಕೆ ಕಾಯುವ ಸಂತಸ ಉಳಿಯುತ್ತದೆ. ಇಲ್ಲದಿದ್ದರೆ ಹಬ್ಬಗಳು ಒಣ ಆಚರಣೆಗಳಿಂದ ತಮ್ಮ ಪ್ರಾಮುಖ್ಯತೆ ಕಳೆದುಕೊಳ್ಳಬಹುದು. ಟಿವಿ ಜ್ಯೋತಿಷಿಗಳ ಎಡಬಿಡಂಗಿತನದಿಂದ ತೀರಾ ಜೊಳ್ಳಾಗಬಹುದು ಮತ್ತು ಕುಟುಂಬ ವ್ಯವಸ್ಥೆ ಒಂದು ವ್ಯಾಪಾರಿ ಸಂಸ್ಥೆಯಾಗಿ ಬದಲಾಗಬಹುದು.
ಇದು ಅವರವರ ಅನುಕೂಲಗಳನ್ನು ಅವಲಂಬಿಸಿರುತ್ತವೆ. ನನ್ನ ಆಶಯ ಮತ್ತು ಅನಿಸಿಕೆ ಅಷ್ಟೆ……..
Shimoga News ಆನವಟ್ಟಿ ಪಟ್ಟಣ ಪಂಚಾಯತಿಯಲ್ಲಿ ಎ ಮತ್ತು ಬಿ ಖಾತಾಪಡೆಯಲು ಅವಕಾಶ
Shimoga News ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವಂತೆ ಆನವಟ್ಟಿ ಪಟ್ಟಣ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.
Shimoga News ಆನವಟ್ಟಿ ಪಟ್ಟಣ ಪಂಚಾಯತಿಯಲ್ಲಿ ಎ ಮತ್ತು ಬಿ ಖಾತಾಪಡೆಯಲು ಅವಕಾಶ ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.
Election Commission of India ಮಾರ್ಚ್ 4 & 5 ರಂದು ಚುನಾವಣಾ ಅಧಿಕಾರಿಗಳ ಸಮ್ಮೇಳನ.ನಾಮ ನಿರ್ದೇಶನಕ್ಕೆ ಸೂಚನೆ
Election Commission of India ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.
Election Commission of India ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ / ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ. ಅಲ್ಲದೆ ಎರಡು ದಿನಗಳ ಈ ಸಮ್ಮೇಳನವು ಪರಸ್ಪರರ ಅನುಭವಗಳಿಂದ ಬುದ್ದಿಮತ್ತೆ ಮತ್ತು ಪರಸ್ಪರ ಕಲಿಕೆಗೆ ರಾಜ್ಯಗಳು / ಕೇಂದ್ರಾಡಳಿತ ಚುನಾವಣಾ ಅಧಿಕಾರಿಗಳಿಗೆ ಒಂದು ವೇದಿಕೆಯನ್ನು ನೀಡುತ್ತದೆ.
ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.
ಎರಡನೇ ದಿನ, ರಾಜ್ಯಗಳು/ಕೇಂದ್ರಾಡಳಿತದ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು ಭಾರತ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.
D S Arun ಪ್ರತೀವರ್ಷವೂ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿ- ಡಿ.ಎಸ್.ಅರುಣ್
D S Arun ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಅವಶ್ಯಕ. ಇಂತಹ ಕ್ರೀಡಾಕೂಟಗಳನ್ನು ಹೆಚ್ಚು ಆಯೋಜಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಪ್ರಥಮ ಬಾರಿಗೆ ಐಪಿಎಲ್ ಮಾದರಿಯಲ್ಲಿ ಶಿವಮೊಗ್ಗದಲ್ಲಿ ಮಾ. 2ರಂದು ಆಯೋಜನೆಯಾಗಲಿರುವ ಶಿವಮೊಗ್ಗ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಆರ್ ಆರ್ ಸ್ಮಾಷರ್ಸ್ ನ ಜರ್ಸಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಐಪಿಎಲ್ ಮಾದರಿಯ ಷಟಲ್ ಬ್ಯಾಡ್ಮಿಂಟನ್ ಅವಶ್ಯಕತೆ ಇತ್ತು. ಇಂತಹ ಒಂದು ಪ್ರಯತ್ನಕ್ಕೆ ಸದಾ ಬೆಂಬಲ ಇರುತ್ತದೆ. ಪ್ರತಿ ವರ್ಷವೂ ಕೂಡ ಪಂದ್ಯಾವಳಿ ಆಯೋಜಿಸಬೇಕು ಎಂದು ತಿಳಿಸಿದರು.
ಆರ್ ಆರ್ ಸ್ಮಾಷರ್ಸ್ ನ ತಂಡದ ಮಾಲೀಕ ಎನ್.ರಮೇಶ್ ಮಾತನಾಡಿ, ಐಪಿಎಲ್ ಮಾದರಿಯಲ್ಲಿ ಷಟಲ್ ಬ್ಯಾಡ್ಮಿಂಟನ್‌ಗಳನ್ನು ನಿರಂತರವಾಗಿ ಮುಂದುವರೆಸಿಕೊಂಡು ಹೋಗುತ್ತೇನೆ. ಈ ಒಂದು ಪ್ರಯತ್ನಕ್ಕೆ ಶಿವಮೊಗ್ಗದ ಎಲ್ಲ ಆಟಗಾರರು ಬೆಂಬಲ ನೀಡಬೇಕು ಎಂದರು.
D S Arun ಕಾರ್ಯಕ್ರಮದ ಸಂಯೋಜಕ ದೀಪಕ್ ಮಾತನಾಡಿ, ಐಪಿಎಲ್ ಮಾದರಿಯ ಷಟಲ್ ಬ್ಯಾಡ್ಮಿಂಟನ್‌ನಿಂದ ಅನೇಕ ಆಟಗಾರರು ಮುಂಚೂಣಿಗೆ ಬರಬೇಕು. ಇಂತಹ ಪ್ರಯತ್ನಗಳು ಇನ್ನೂ ಹೆಚ್ಚಾಗಬೇಕು ಎಂದು ತಿಳಿಸಿದರು.
ಮಾ.2ರಂದು ಐಪಿಎಲ್ ಮಾದರಿಯಲ್ಲಿ ರಾವ್ ಅರೇನಾದಲ್ಲಿ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಡೆಯಲಿದೆ. ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ರಾವ್ ಅರೆನಾದ ಮಾಲೀಕ ಆದಿತ್ಯ ಎಸ್ ರಾವ್ ಮತ್ತು ಮತ್ತೋರ್ವ ತಂಡದ ಮಾಲೀಕರಾದ ಮಹಾರುದ್ರಪ್ಪ ಮತ್ತು ತಂಡದ ಎಲ್ಲ ಆಟಗಾರರು ಹಾಗೂ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷ ಸಂತೋಷ್.ಬಿ.ಎ. ಪಾಲ್ಗೊಂಡಿದ್ದರು.
B.S Yediyurappa ಜಿಲ್ಲಾಮಟ್ಟದ “ಬಿಎಸ್ ವೈ ಕಪ್” ಥ್ರೋಬಾಲ್ ಪಂದ್ಯಾವಳಿಗೆ ಚಾಲನೆ
B. S. Yediyurappa ಶಿವಮೊಗ್ಗ ಜಿಲ್ಲೆಯ ಥ್ರೋಬಾಲ್ ಸಂಸ್ಥೆ,ಇವರ ಆಶ್ರಯದಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಮಾನ್ಯ, ಶ್ರೀಯುತ ಬಿ.ಎಸ್. ಯಡಿಯೂರಪ್ಪ ಅವರ 81 ನೆ ಹುಟ್ಟು ಹಬ್ಬದ ಪ್ರಯುಕ್ತ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿಯನ್ನು ಮಹಿಳೆಯರು ಮತ್ತು ಪುರುಷರಿಗಾಗಿ “ಬಿ.ಎಸ್.ವೈ ಕಪ್ ಥ್ರೋಬಾಲ್ “ಪಂದ್ಯಾವಳಿಯನ್ನು ಇಂದು ಶಾಸಕರಾದ ಚನ್ನಬಸಪ್ಪ ಎಸ್.ಎನ್. ಕ್ರೀಡಾ ಕೂಟಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು, ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯರು, ಥ್ರೋಬಾಲ್ ಸಂಸ್ಥೆಯ ಜಿಲ್ಲಾಧ್ಯಕ್ಷರಾದ ಅರುಣ್ ಡಿ.ಎಸ್., ವಿಧಾನ ಪರಿಷತ್ ಶಾಸಕರಾದ ಡಾ|| ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷ ಜಗದೀಶ್,ಸಂತೋಷ್ ಬಳ್ಳೇಕೆರೆ, ರಾಜೇಶ್ ಕಾಮತ್,ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಶಿSri Shivaganga Yoga Kendra ವನೇ ಆದಿಯೋಗಿ.ದಿವ್ಯ ಯೋಗಜ್ಞಾನ ಬೋಧಿಸಿದ ಪ್ರಥಮ- ಸಿ.ವಿ.ರುದ್ರಾರಾಧ್ಯ
Sri Shivaganga Yoga Kendra ಶಿವಮೊಗ್ಗ ನಗರದ ಶ್ರೀ ಶಿವಗಂಗಾ ಯೋಗ ಕೇಂದ್ರ ಕಲ್ಲಹಳ್ಳಿಯಲ್ಲಿ ಯೋಗಾಚಾರ್ಯ ಡಾ. ಸಿ.ವಿ.ರುದ್ರಾರಾಧ್ಯ ಅವರ ನೇತೃತ್ವದಲ್ಲಿ ಮಹಾಶಿವರಾತ್ರಿ ಆಚರಣೆ ನೆರವೇರಿತು.
ಯೋಗಾಚಾರ್ಯ ಡಾ. ಸಿ.ವಿ.ರುದ್ರಾರಾಧ್ಯ ಮಾತನಾಡಿ, ಸಾವಿರಾರು ವರ್ಷಗಳ ಹಿಂದೆ ಆದಿಯೋಗಿ ಶಿವನು ಹಿಮಾಲಯದ ತಪ್ಪಲಿನಲ್ಲಿರುವ ಕಾಂತಿ ಸರೋವರದ ಬಳಿ ಯೋಗದ ದಿವ್ಯ ಜ್ಞಾನವನ್ನುಪ್ರಥಮವಾಗಿ ಸಪ್ತಋಷಿಗಳಿಗೆ ಬೋಧಿಸಿದಂನೆಂದು ನಂಬಿಕೆ ಎಂದು ತಿಳಿಸಿದರು.
ಶಿವರಾತ್ರಿಯನ್ನು ವೈವಿಧ್ಯಮಯವಾಗಿ ಆಚರಿಸಲಾಯಿತು. ಕರ್ಮ ಯೋಗ ಪೂರ್ವಭಾವಿ ಸಿದ್ಧತೆಯಾಗಿ ಹಿಂದಿನ ದಿನವೇ ಯೋಗ ಶಿಕ್ಷಣಾರ್ಥಿಗಳಿಂದ ಕರ್ಮ ಯೋಗ ಆಚರಿಸಲಾಯಿತು. ಸಂಪೂರ್ಣ ಯೋಗ ಕೇಂದ್ರದ ಆವರಣ ಕಟ್ಟಡವನ್ನು ಐದು ವರ್ಷದ ಮಕ್ಕಳಿಂದ ಆರಂಭವಾಗಿ 84ರ ಪ್ರಾಯದ ಯೋಗಭ್ಯಾಸಿಗಳೆಲ್ಲರೂ ಸೇರಿ ಶುಚಿಗೊಳಿಸಿ ತಳಿರು ತೋರಣ ಹೂವಿನ ಅಲಂಕಾರ, ರಂಗವಲ್ಲಿ, ಆಸನ ವ್ಯವಸ್ಥೆ ಎಲ್ಲದರಲ್ಲೂ ಭಾಗಿಯಾದರು. ಶಿವನ ಹೆಸರಿನಲ್ಲಿ ಜವಾಬ್ದಾರಿ ವಹಿಸಿದ ಕಾಯಕದಲ್ಲಿ ನಿಷ್ಠೆ ಪ್ರಾಮಾಣಿಕತೆಯಿಂದ ಶಿವ ಭಕ್ತಿಯ ಪಥದಲ್ಲಿ ನಡಿಗೆ ಎಂದು ಭಾವಿಸಿ ಸಿದ್ಧತೆಯಲ್ಲಿ ಭಾಗವಹಿಸಿದ್ದರು.
ಪ್ರತಿಯೊಂದು ಶಾಖೆಯ ಶಿಕ್ಷಣಾರ್ಥಿಗಳು ಶಿವನ ಪೂಜೆಗೆ ಫಲಪ್ರಸಾದಕ್ಕೆ ಹಣ್ಣುಗಳು, ತ್ರಿವೇಣಿ ಸಂಗಮದಿಂದ ತಂದ ಗಂಗಾಜಲ, ಎಳನೀರು ಹೂವು ಬಿಲ್ವಪತ್ರೆ ಭಕ್ತಿಯಿಂದ ಸಮರ್ಪಿಸಿದರು. ಭಕ್ತಿಯಲ್ಲಿ ಎಲ್ಲರೂ ಒಂದಾಗಿ ಆಚರಿಸುವ ಹಬ್ಬ ಶಿವರಾತ್ರಿ. ಆದಿ ಯೋಗಿ ಶಿವನಿಗೆ ತೈಲ ಮಜ್ಜನ, ರುದ್ರಾಭಿಷೇಕ, ಅಭಿಷೇಕ, ಜಲಾಭಿಷೇಕ, ಭಸ್ಮ ಧಾರಣೆ, ಆಭರಣ ಪ್ರಿಯನಲ್ಲದ ಶಿವನಿಗೆ ಸರಳವಾದ, ಬಿಲ್ವಪತ್ರೆ ಎಕ್ಕದ ಹೂವು ನಾನಾ ಪುಷ್ಪಗಳ ಸಮರ್ಪಿಸಿ ಅಷ್ಟೋತ್ತರ ಶತನಾಮಾವಳಿಗಳಿಂದ ಪೂಜಾಭಿಷೇಕ ನೆರವೇರಿತು.
Sri Shivaganga Yoga Kendra ವೈದ್ಯ ವೃತ್ತಿಯೊಂದಿಗೆ ಯೋಗವನ್ನು ಪ್ರವೃತ್ತಿಯಾಗಿಸಿಕೊಂಡು ರೋಗಿಗಳಿಗೆ ಆರೋಗ್ಯ ಸಲಹೆಯೊಂದಿಗೆ ಸರಳ ವ್ಯಾಯಾಮ, ಯೋಗ, ಪ್ರಾಣಾಯಾಮಗಳಿಂದ ನಿಶುಲ್ಕ ಅಥವಾ ಕನಿಷ್ಠ ಶುಲ್ಕ ಪಡೆದು ನಗರದಲ್ಲಿ ಬಡವರ ಬಂಧು ಎಂದು ಹೆಸರಾಗಿರುವ ಡಾ. ಎನ್.ಎಲ್.ನಾಯಕ್ ಮತ್ತು ಜಯಂತಿ ನಾಯಕ್ ಅವರಿಂದ ದೀಪ ಪ್ರಜ್ವಲನೆ ಮೂಲಕ ಭಜನೆ ಕಾರ್ಯಕ್ರಮ ಉದ್ಘಾಟನೆಯಾಯಿತು.
ಎಲ್ಲ ಶಾಖೆಗಳಿಂದ ಆಗಮಿಸಿದ ಯೋಗಿಗಳಿಂದ ಯೋಗ ಶಿಕ್ಷಣಾರ್ಥಿಗಳು ಶಿವನಿಗೆ ತಾವು ಅಭ್ಯಾಸಿಸಿದ ಭಜನೆಯ ಮೂಲಕ ಭಕ್ತಿ ಸಮರ್ಪಿಸುವಲ್ಲಿ ಆರೋಗ್ಯ ಪೂರ್ಣ ಸ್ಪರ್ಧೆ ತಡ ರಾತ್ರಿವರೆಗೆ ನೆರೆವೇರಿತು.
ಆಗಮಿಸಿದ ಎಲ್ಲ ಭಕ್ತರಿಗೆ ಮಹಾಪ್ರಸಾದವಾಗಿ ಫಲ ನೀಡಲಾಯಿತು. ನಗರದ ಪ್ರಮುಖರಾದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕೆ.ಇ.ಕಾಂತೇಶ್, ಕಲಗೋಡು ರತ್ನಾಕರ್, ಜಿ.ವಿಜಯಕುಮಾರ್, ಓಂಕಾರ್, ವಿಜಯ ಕೃಷ್ಣ. ಹರೀಶ್ , ಯೋಗಪಟುಗಳು ಉಪಸ್ಥಿತರಿದ್ದರು.
