Wednesday, March 11, 2026
Wednesday, March 11, 2026
Home Blog Page 394

Madhu Bangarappa ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮ ಪಂಚಾಯತ್ ಸೇರಿ 2000 ಕೆಪಿಎಸ್ ಶಾಲೆಗಳ ನಿರ್ಮಾಣದ ಗುರಿ- ಮಧು ಬಂಗಾರಪ್ಪ

0

Madhu Bangarappa ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳು ಸೇರಿದಂತೆ ಸರ್ವಾಂಗೀಣ ಅಭಿವೃದ್ದಿಗೆ ಹಳೇ ವಿದ್ಯಾರ್ಥಿಗಳು, ಸಿಎಸ್‌ಆರ್ ಮತ್ತು ದಾನಿಗಳ ಸಹಕಾರ ಸದಾ ಇರಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಹಾಗೂ ಸಹಕಾರಿ ಸಂಸ್ಥೆಗಳು, ಕೈಗಾರಿಕಾ ಉದ್ಯಮಗಳು, ವ್ಯಾಪಾರ , ವಾಣಿಜ್ಯೋದ್ಯಮಿಗಳು, ರೌಂಡ್ ಟೇಬಲ್, ವಿವಿಧ ಸಂಸ್ಥೆಗಳು, ಹಳೇ ವಿದ್ಯಾರ್ಥಿಗಳ ಸಂಘಗಳ ಸಹಯೋಗದೊಂದಿಗೆ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ‘ ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಹಾಗೂ ಸಿಎಸ್‌ಆರ್ ಯೋಜನೆಗಳ ಅನುಷ್ಟಾನ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ 3 ವಿಭಾಗಗಳಿವೆ. ಒಂದು ಸಿಎಸ್‌ಆರ್ ನಿಧಿ, ದಾನಿಗಳು ಮತ್ತು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದ ದಾನಿಗಳಾಗಿದ್ದು, ರಾಜ್ಯದಲ್ಲಿ ಅನೇಕ ಶಾಲೆಗಳು ಅಭಿವೃದ್ದಿ ಕಾಣುತ್ತಿವೆ.
ಶಿಕ್ಷಣ ಇಲಾಖೆಯಲ್ಲಿ 46 ಸಾವಿರ ಸರ್ಕಾರಿ ಶಾಲೆಗಳು ಸೇರಿದಂತೆ 76 ಸಾವಿರ ಸರ್ಕಾರಿ ಅನುಸರ್ಕಾರಿ-ಅನುದಾನಿತ ಖಾಸಗಿ ಶಾಲೆ ಕಾಲೇಜು ಇವೆ. 1.8 ಕೋಟಿ ವಿದ್ಯಾರ್ಥಿಗಳು ಇದ್ದಾರೆ. 1.8 ತಿಂಗಳಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಹಳೇ ವಿದ್ಯಾರ್ಥಿಗಳ 36 ಸಾವಿರ ವಾಟ್ಸಾಪ್ ಗುಂಪುಗಳನ್ನು ರಚಿಸಲಾಗಿದೆ.
ಮಾನ್ಯ ಮುಖ್ಯಮಂತ್ರಿಗಳು ತಮ್ಮ ಸಂಬಳದಲ್ಲಿ ರೂ. 10 ಲಕ್ಷವನ್ನು ಅವರು ಓದಿದ ಶಾಲೆಗೆ ನೀಡಿದ್ದಾರೆ. ನನ್ ಸಂಬಳದಲ್ಲಿ ರೂ. 10 ಲಕ್ಷವನ್ನ ನನ್ನ ಊರಿನ ಶಾಲೆಯ ಪೀಠೋಪಕರಣಕ್ಕೆ ನೀಡಿದ್ದೇನೆ. ಸಿಎಸ್‌ಆರ್ ಅಡಿಯಲ್ಲಿ ಸಾಕಷ್ಟು ಶಾಲೆಗಳ ಅಭಿವೃದ್ದಿ ಆಗುತ್ತಿದ್ದು ಅದರಲ್ಲಿ ಗರಿಷ್ಟ ಹಣ ರೂ. 1591 ಕೋಟಿ ಅಜೀಂ ಪ್ರೇಂಜೀ ಫೌಂಡೇಶನ್‌ನಿAದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಮೊಟ್ಟೆಗಾಗಿ ನೀಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಸರ್ಕಾರದಿಂದ ಉಚಿತವಾಗಿ 57 ಲಕ್ಷ ಮಕ್ಕಳಿಗೆ ಹಾಲು, ರಾಗಿ ಮಾಲ್ಟ್, 2 ಜೊತೆ ಸಮವಸ್ತ್ರ, ಶೂ ಸಾಕ್ಸ್ ಉಚಿತ ಊಟ, ಮೊಟ್ಟೆ ಹಾಗೂ ಕಲಿಕೆಯಲ್ಲಿ ಮುಂದೆ ಬರಲು ಶಾಲೆಗಳಿಗೆ ಉಚಿತ ವಿದ್ಯುತ್, ನೀರು, ಗ್ರಂಥಾಲಯಕ್ಕೆ ಉಚಿತ ವಿದ್ಯುತ್ , ಸಂಜೆ ವಿಶೇಷ ಕ್ಲಾಸು, ಪರೀಕ್ಷಾ ಪಾವಿತ್ರ‍್ಯತೆ ಕಾಪಾಡಲು ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 42 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ಮಕ್ಕಳ ಓದಿಗೆ ಶಿಕ್ಷಕರು, ಅಧಿಕಾರಿಗಳಿಂದ ಉತ್ತಮ ಸಹಕಾರ ಸಿಗ್ತಿದೆ. ಇದೀಗ ಶಾಲೆಯಲ್ಲಿ ಕೌಶಲ್ಯ ಕಲಿಸಲಾಗುತ್ತಿದೆ. ಅದೇ ರೀತಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಸಹಕಾರ ಲಭಿಸುತ್ತಿದೆ. ಸಂಘ ಸಂಸ್ಥೆಗಳ ಸಹಕಾರ ಮುಂದೆಯೂ ಇನ್ನೂ ಹೆಚ್ಚಾಗಿ ಸಿಗಲಿ ಎಂದ ಅವರು ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಿಎಸ್‌ಆರ್ ನಿಧಿಯನ್ನು ವಿದ್ಯಾಭ್ಯಾಸ ಕ್ಕೆ ನೀಡಲು ಕೋರಿದ್ದಾರೆ. ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಸಿಎಸ್‌ಆರ್ ಹಾಗೂ ಹಳೇ ವಿದ್ಯಾರ್ಥಿಗಳು, ದಾನಿಗಳು ಅನುಕೂಲ ಮಾಡಿಕೊಡುತ್ತಾರೆಂಬ ವಿಶ್ವಾಸ ಇದೆ.
ಎಡಿಬಿ ಬ್ಯಾಂಕ್ ಕೆಪಿಎಸ್ ಶಾಲೆ ಮಾಡಲು ರೂ. 2 ಸಾವಿರ ಕೋಟಿ ನೀಡಿದೆ. ಗ್ರಾಮೀಣ ಭಾಗದ ಎಷ್ಟೋ ಜನರು ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ತರಕಾರಿ ಮಾರುವ ಸಂಜೀವ್ ಎಂಬುವವರು ಸಹ ತಾವು ಓದಿದ ಶಾಲೆಗೆ ರೂ. 2 ಲಕ್ಷ ವೆಚ್ಚದಲ್ಲಿ ಹೊಸ ಧ್ವಜ ನಿರ್ಮಿಸಿದ್ದಾರೆ. ಇದೊಂದು ಉದಾಹರಣೆ ಅಷ್ಟೇ. ಇದೇ ರೀತಿ ಅನೇಕರು ಸಹಾಯ ಮಾಡಿದ್ದಾರೆ. ಹಳೇ ವಿದ್ಯಾರ್ಥಿಗಳು, ರೌಂಡ್ ಟೇಬಲ್‌ನಂತಹ ಸಂಸ್ಥೆಗಳು, ಇತರೆ ಉದ್ಯಮಗಳು ಸಹರಿಸುತ್ತಿವೆ. ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲಾಗುತ್ತಿದ್ದು, ಇದೇ ರೀತಿಯಲ್ಲಿ ನಿಮ್ಮ ಸಹಕಾರ ಇರಲಿ ಎಂದರು.
ಮುಂದಿನ ದಿನಗಳಲ್ಲಿ ಪ್ರತಿ ಗ್ರಾ.ಪಂ ಗೆ ಎರಡರಂತೆ 2000 ಕೆಪಿಎಸ್ ಶಾಲೆಗಳನ್ನು ಮಾಡುವ ಗುರಿ ಹೊಂದಲಾಗಿದೆ ಎಂದ ಅವರು ಮೊಟ್ಟ ಮೊದಲ ಬಾರಿಗೆ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಕೋಚಿಂಗ್ ನೀಡಲಾಗಿವುದು ಎಂದರು.
ದಾನಿಗಳ ಆರ್ಥಿಕ ನೆರವಿನಿಂದ ಶಾಲೆಯ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳು ಸಹಕರಿಸಿದ ವ್ಯಕ್ತಿಗಳು, ಸಂಘಟನೆಗಳ ಹೆಸರನ್ನು ಶಾಲೆಗೆ ನಾಮಕರಣ ಮಾಡಲು ಶೀಘ್ರದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದರು.

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ, ಪ್ರಮಾಣ ಮತ್ತು ಪ್ರವೇಶ ಮುಖ್ಯವಾಗಿದ್ದು, ಎಲ್ಲ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳು ದೊರಕುವಂತಾಗಿ, ಸರ್ವಾಂಗೀಣ ಅಭಿವೃದ್ದಿಗೆ ಸಹಕಾರ ಬೇಕು. ಇದಕ್ಕೆ ಎನ್‌ಜಿಓಗಳು ಸಹ ಮುಂದೆ ಬರಬೇಕು.
-ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು

Madhu Bangarappa ಜಿಲ್ಲಾ ವಾಣಿಜ್ಯ ಸಂಘ ದ ಅಧ್ಯಕ್ಷ ಗೋಪಿನಾಥ್ ಮಾತನಾಡಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಮತ್ತು ಸಿಎಸ್‌ಆರ್ ಅನುದಾನ ಬಳಕೆ ಉತ್ತಮ ಕ್ರಮವಾಗಿದೆ. ರೌಂಡ್ ಟೇಬಲ್ ಇತರೆ ಸಂಸ್ಥೆಗಳು ಉತ್ತಮ ಕಾರ್ಯಕ್ರಮ ಮಾಡುತ್ತಿವೆ. ಶಿವಮೊಗ್ಗದ ಮುಖ್ಯವಾದ 3 ಕೈಗಾರಿಕಾ ಪ್ರದೇಶಗಳು ಸಿಎಸ್‌ಆರ್ ಅಡಿ ಉತ್ತಮ ಕೆಲಸ ಮಾಡುತ್ತಿದ್ದು ಮುಂದೆಯೂ ಸಹಕರಿಸಲಿವೆ ಎಂದರು.
ಶಾಹಿ ಸಂಸ್ಥೆಯ ಪದಾಧಿಕಾರಿಗಳು ಮಾತನಾಡಿ, ಈ ವರ್ಷ ಶಾಹಿ ಸಂಸ್ಥೆಯಿAದ ಶಿಕ್ಷಣ ಕ್ಷೇತ್ರಕ್ಕೆ ರೂ. 1.2 ಕೋಟಿ ನೀಡಲಾಗಿದೆ. 19 ಶಾಲೆಗಳ ಅಭಿವೃದ್ದಿ ತೆಗೆದುಕೊಳ್ಳಲಾಗಿದೆ ಎಂದರು.
ಹರಮಘಟ್ಟ ಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರಕಾಶ್ ಮಾತನಾಡಿ ಗ್ರಾಮದಲ್ಲಿ ಹಾಗೂ ಹಳೇ ವಿದ್ಯಾರ್ಥಿಗಳಿಂದ ರೂ. 25 ಲಕ್ಷ ಸಂಗ್ರಹಿಸಿ ನಾವೇ ಸ್ವತಃ ಅಭಿವೃದ್ಧಿ ಕೇವಲ 4 ತಿಂಗಳಲ್ಲಿ ನಾವು ಓದಿದ ಸರ್ಕಾರಿ ಶಾಲೆಯನ್ನು ಉತ್ತಮವಾಗಿ ಅಭಿವೃದ್ದಿಪಡಿಸಿದ್ದೇವೆ. ಆದರೆ ಶಾಲೆಗೆ ಅಡುಗೆ ಕೊಠಡಿ, ಶೌಚಾಲಯ, ಮೈದಾನದ ಅವಶ್ಯಕತೆ ಇದೆ ಎಂದರು.
ರೌAಡ್ ಟೇಬಲ್ ಸಂಸ್ಥೆಯ ವಿಶ್ವಾಸ್ ಕಾಮತ್ ಮಾತನಾಡಿ ಶಿವಮೊಗ್ಗದಲ್ಲಿ 45 ಕ್ಲಾಸ್ ರೂಂ ಗಳನ್ನು ನಿರ್ಮಿಸಿದ್ದೇವೆ. ರೂ.1.35 ಕೋಟಿ ವೆಚ್ಚದಲ್ಲಿ ಶರತ್ ಭೂಪಾಳಂ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಉನ್ನತೀಕರಿಸಲಾಗುತ್ತಿದೆ. ಹಾಗೂ ದುರ್ಗಿಗುಡಿ ಶಾಲೆ ಅಭಿವೃದ್ದಿ ಮಾಡಲಾಗಿದೆ ಎಂದರು.
ಹೊಸನಗರ ಬಿಇಓ ಕೃಷ್ಣಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳ ಸಂಘ ರಚನೆ, ವಾಟ್ಸಾಪ್ ಗುಂಪು ರಚನೆ, ಕ್ರಿಯಾ ಯೋಜನೆ ಸಿದ್ದಪಡಿಸಿ ಶಾಲೆಗಳ ಅಭಿವೃದ್ದಿಯೇ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಉದ್ದೇಶವಾಗಿದೆ. ಮಾನ್ಯ ಶಿಕ್ಷಣ ಸಚಿವರು ರೂ. 10 ಲಕ್ಷವನ್ನು ತಮ್ಮ ಊರಿನ ಕುಬುಟೂರು ಶಾಲೆಗೆ ನೀಡಿದ್ದಾರೆ. ಸಿಎಸ್‌ಆರ್ ಅಡಿಯಲ್ಲಿ ರೂ. 30 ಕೋಟಿ, ನಮ್ಮ ಶಾಲೆ ನಮ್ಮ ಜಬಾಬ್ದಾರಿ ಕಾರ್ಯಕ್ರಮದಡಿ 50 ಕೋಟಿ ಹಣ ಬಂದಿದೆ. ಸರ್ಕಾರಿ ಶಾಲೆಗಳ ಕೊಠಡಿಗಳು, ಸ್ಮಾರ್ಟ್ ಕ್ಲಾಸ್, ಕಾಂಪೌAಡ್, ಗೋಡೆ ಬರಹ, ಶೌಚಾಲಯ, ಆಟದ ಮೈದಾನ, ಸಭಾ ಭವನ, ಸುಣ್ಣ ಬಣ್ಣ, ಸೇರಿಂತೆ ಶಾಲೆಗಳ ಮೂಲಭೂತ ಸೌಕರ್ಯಗಳು, ಸರ್ವಾಂಗೀಣ ಅಭಿವೃದ್ದಿ ಈ ಕಾರ್ಯಕ್ರಮದ ಮೂಲಮಂತ್ರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಅಲೆಮಾರಿಗಳ ನಿಗಮದ ಅಧ್ಯಕ್ಷೆ ಪಲ್ಲವಿ , ಕಾಡಾ ಅಧ್ಯಕ್ಷ ಡಾ.ಅಂಶುಮAತ್, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮAಜುನಾಥ್ ಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಹೇಮಂತ್ ಎನ್, ಡಿಡಿಪಿಐ , ಬ್ಯಾಂಕ್ ಅಧಿಕಾರಿಗಳು , ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ಇತರೆ ಅಧಿಕಾರಿಗಳು, ಎಸ್‌ಸಿಎಂಸಿ ಪದಾಧಿಕಾರಿಗಳು, ದಾನಿಗಳು ಹಾಜರಿದ್ದರು.

Rotary Club Shimoga ಸಮಾಜದ ಬೆಳವಣಿಗೆಗೆ ರೋಟರಿಯಂತಹ ಸಂಸ್ಥೆಗಳು ತೋರುತ್ತಿರುವ ಕಾಳಜಿ ಪ್ರೇರಣೀಯ : ಜಿ.ಎಸ್.ನಾರಾಯಣ ರಾವ್

0

Rotary Club Shimoga ಯಾವುದೇ ಸಮಾಜಮುಖಿ ಯೋಜನೆಗಳ ಅನುಷ್ಟಾನ ಮತ್ತು ನಿರ್ವಹಣೆಯ ಯಶಸ್ಸಿಗೆ ಪ್ರಾದೇಶಿಕ ಶಕ್ತಿ ಕಾಳಜಿಯ ಸಹಭಾಗಿತ್ವ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ಶಿವಮೊಗ್ಗ ನಗರದ ಎನ್ಇಎಸ್ ಸಂಸ್ಥೆ ಹಾಗೂ ರೋಟರಿ ಕ್ಲಬ್ ವತಿಯಿಂದ ರೋಟರಿ ಜಾಗತಿಕ ಅನುದಾನದಲ್ಲಿ ನವೀಕರಣಗೊಂಡಿರುವ ಬಿ.ಆರ್.ಪ್ರಾಜೆಕ್ಟ್‌ ರಾಷ್ಟ್ರೀಯ ಸಂಯುಕ್ತ ಪದವಿಪೂರ್ವ ಕಾಲೇಜನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಸೇವಾ ಮನೋಭಾವ ಹೊಂದಿದ ಸಮಾನ ಮನಸ್ಕರರು ರೋಟರಿಯಂತಹ ಸಂಸ್ಥೆಗಳನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಸಮಾಜದ ಬೆಳವಣಿಗೆಗೆ ಅವರೆಲ್ಲ ತೋರುತ್ತಿರುವ ಕಾಳಜಿ ಪ್ರೇರಣೀಯ. ಅಂತಹ ಪ್ರೇರಣೆಯ ಸಹಭಾಗಿತ್ವಗಳು ಮತ್ತಷ್ಟು ಸಮಾಜದ ಅಭಿವೃದ್ಧಿಗೆ ಕಾರಣವಾಗುತ್ತದೆ. ಬಿ.ಆರ್.ಪಿ ವಿದ್ಯಾಸಂಸ್ಥೆಯು ಸೇರಿದಂತೆ ಮೂರು ಶಾಲಾ ಕಾಲೇಜುಗಳನ್ನು ರೋಟರಿಯ ಸಹಭಾಗಿತ್ವದ ಮೂಲಕ ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಹೇಳಿದರು.

ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಆರೋಗ್ಯ, ಸಹಕಾರ ಕ್ಷೇತ್ರಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ಅಭ್ಯುದಯ ಸಾಧ್ಯ. ಪುಸ್ತಕ ಮಾತ್ರ ಅಕ್ಷರವಲ್ಲ ನಮ್ಮ ಮಾತು ಕೂಡ ಅಕ್ಷರವೆ ಆಗಿದೆ. ಉತ್ತಮ ವ್ಯಕ್ತಿತ್ವ ಮಾತ್ರ ಜೀವನದಲ್ಲಿ ಅಗ್ರಸ್ಥಾನ ಪಡೆಯಲು ಸಾಧ್ಯವಾಗಲಿದ್ದು, ವ್ಯಕ್ತಿತ್ವಗಳ ನಿಜವಾದ ನಿರೂಪಣೆ ನಡೆಯುವುದು ಶಾಲೆಗಳಲ್ಲಿ ಮಾತ್ರ. ನಿಮ್ಮನ್ನು ಹಿಯಾಳಿಸಿದ ಜನಗಳಿಗೆ ಬೆರಳು ಮಾಡಿ ತೋರಿಸುವುದಕ್ಕಿಂತ, ಬದುಕಿನಲ್ಲಿ ಯಶಸ್ವಿಯಾಗಿ ಬೆಳೆದು ತೋರಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ ಮಾತನಾಡಿ, ಈ ವರ್ಷ ‘ಮ್ಯಾಜಿಕ್ ಆಫ್ ರೋಟರಿ’ ಎಂಬ ಧ್ಯೇಯ ವಾಕ್ಯದಲ್ಲಿ ಸಮಾಜದಲ್ಲಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕಾರ್ಯವನ್ನು ವಿಶ್ವದಾದ್ಯಂತ ರೋಟರಿ ಕ್ಲಬ್ ಗಳು ಕಾರ್ಯನಿರ್ವಹಿಸುತ್ತಿದೆ. ರೋಟರಿ ಅನುಷ್ಟಾನಗೊಳಿಸುತ್ತಿರುವ ಇಂತಹ ಯೋಜನೆಗಳನ್ನು ಯುವ ಸಮೂಹ ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ನಿಜವಾದ ಸಾರ್ಥಕತೆ ಸಾಧ್ಯ ಎಂದು ಹೇಳಿದರು.

Rotary Club Shimoga ಭದ್ರಾವತಿ ಬಿಇಓ ನಾಗೇಂದ್ರಪ್ಪ ಮಾತನಾಡಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದರು ಕೂಡ, ಅಂತಹ ಶಾಲೆಗಳನ್ನು ಉನ್ನತಿಕರಣಗೊಳಿಸುವಲ್ಲಿ ರೋಟರಿ ಹಾಗೂ ಎನ್ಇಎಸ್ ನಂತಹ ಅನೇಕ ಸಂಘ ಸಂಸ್ಥೆಗಳ ಕಾಳಜಿ ಕಾರಣ. ಸ್ವಾತಂತ್ರ್ಯ ಪೂರ್ವದಲ್ಲಿಯೆ ಎನ್ಇಎಸ್ ಸಂಸ್ಥೆ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಿ, ಇಂದಿನವರೆಗೂ ಮುನ್ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಬಿ.ಆರ್.ಪಿ ಕಾಲೇಜನ್ನು ನವೀಕರಣಗೊಳಿಸಲು ರೋಟರಿಯಿಂದ ಬಂದಿರುವ ಜಾಗತಿಕ ಅನುದಾನವು ಅಮೇರಿಕಾದ ವೆಸ್ಟ್ ಸ್ಪ್ರಿಂಗ್ ಫೀಲ್ಡ್ ರೋಟರಿ ಕ್ಲಬ್ ನಿಂದ ಬಂದಿದ್ದು, ಶಿವಮೊಗ್ಗ ರೋಟರಿಯ ಮೂಲಕ ಜಿಲ್ಲೆಯ ಬಿ.ಆರ್.ಪ್ರಾಜೆಕ್ಟ್ ತಲುಪಿದೆ. ರೋಟರಿಯ ಜಾಗತಿಕ ಅನುದಾನದ ಜೊತೆಗೆ ಎನ್ಇಎಸ್ ಸಂಸ್ಥೆ ಜಂಟಿಯಾಗಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸಂಯುಕ್ತ ಕಾಲೇಜನ್ನು ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ತಿಳಿಸಿದರು.

ವಿದ್ಯಾಸಂಸ್ಥೆಯ ಕಟ್ಟಡವನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ನವೀಕೃತ ಶೌಚಾಲಯಗಳು, ಪೀಠೋಪಕರಣಗಳು ಹಾಗೂ ಕಂಪ್ಯೂಟರ್‌ ಲ್ಯಾಬ್‌ ರೂಪಿಸಲಾಗಿದೆ. ಅಂದಿನ ಕೆಪಿಟಿಸಿಎಲ್ ಅಧಿಕಾರಿಗಳ ಮನವಿ ಮೇರೆಗೆ ಎನ್ಇಎಸ್ ಸಂಸ್ಥೆಯಿಂದ 1962 ರಲ್ಲಿ ಪ್ರಾರಂಭಗೊಂಡ ಶಾಲೆಯು ನಂತರ 1983 ರಲ್ಲಿ ಪಿಯು ಕಾಲೇಜಿನೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಈ ಭಾಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಪ್ರೇರಣೀಯ ವಾತಾವರಣ ನಿರ್ಮಾಣ ಮಾಡಿಕೊಟ್ಟಿದೆ ಎಂದು ಹೇಳಿದರು.

ಶಿವಮೊಗ್ಗ ರೋಟರಿ ಕ್ಲಬ್‌ ಅಧ್ಯಕ್ಷರಾದ ಸೂರ್ಯನಾರಾಯಣ ಉಡುಪ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ಎನ್.ಜಿ.ಉಷಾ, ಯೋಜನಾ ಸಂಪರ್ಕಾಧಿಕಾರಿ ಎನ್‌.ವಿ.ಭಟ್, ವಸಂತ್ ಹೋಬಳಿಕರ್, ರಾಮದೇವ್ ಕಾರಂತ್, ಎನ್‌ಇಎಸ್‌ ಕಾರ್ಯದರ್ಶಿ ಎಸ್.‌ಎನ್‌. ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್‌, ಕಾಲೇಜಿನ ಪ್ರಾಂಶುಪಾಲರಾದ ಅಂಜನಾಮೂರ್ತಿ, ಮುಖ್ಯೋಪಾಧ್ಯಾಯ ಭೈರಪ್ಪ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು

Acharya Tulsi National Commerce College ಶಿವಮೊಗ್ಗದಲ್ಲಿ ಉದ್ಯೋಗ ಮೇಳ-2025 ಕಾರ್ಯಕ್ರಮ ಉದ್ಘಾಟನಾ ಸಮಾರಂಭ

0

Acharya Tulsi National Commerce College ಶಿವಮೊಗ್ಗ ನಗರದ ಎ.ಟಿ.ಎನ್.ಸಿ.ಸಿ ಕಾಲೇಜು ಆವರಣದಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಚಾರ್ಯ ತುಳಸಿ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ‘ಉದ್ಯೋಗ ಮೇಳ-2025’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಸೇರಿದಂತೆ ಇಲಾಖೆವಾರು ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಳುಮೆಣಸು ಬೆಳೆಗಾರರಿಗೆ ನೆಮ್ಮದಿ ತಾರದ ಜಿಎಸ್‌ಟಿ ರದ್ದು

0

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಕಾಫಿ ಹಾಗೂ ಅಡಿಕೆ ತೋಟಗಳ ಮಧ್ಯೆ ಬೆಳೆಯುವ ಕಾಳು ಮೆಣಸಿಗೆ ಜಿಎಸ್‌ಟಿ ರದ್ದು ಮಾಡದ್ದು,
ಕಾಳುಮೆಣಸು ಬೆಳೆಗಾರರಿಗೆ ನೆಮ್ಮದಿ ಇಲ್ಲದಂತಾಗಿದೆ.

ಕಾಳು ಮೆಣಸು ಕೊಯ್ಲಿಗೆ ಬೆಳೆಗಾರರು ಹರಸಾಹಸ ಪಡುತ್ತಿದ್ದಾರೆ. ಕಾಳು ಮನಸಿಗೆ ಜಿಎಸ್‌ಟಿ ರದ್ದಾಗಿದ್ದರೂ ಕೂಡ ತೆರಿಗೆ ಪಾವತಿಯಿಂದ ಬಚಾವ್ ಆಗಿಲ್ಲ ಎನ್ನುತ್ತಾರೆ ರೈತರು.

ಇಷ್ಟು ದಿನ ರೈತರೇ ತಾವು ಬೆಳೆದ ಕಾಳುಮೆಣಸಿಗೆ ಶೇ.5 ರಷ್ಟು ಜಿಎಸ್ ಟಿ ಪಾವತಿಸ ಬೇಕಿತ್ತು.ಕಾಳುಮೆಣಸು ಬೆಳೆಗಾರರು ತಮ್ಮ ಬೆಳೆಯನ್ನು ಗುತ್ತಿಗೆದಾರರಿಗೆ ಗುತ್ತಿಗೆ ನೀಡುತ್ತಿದ್ದರು.

ಕೇಂದ್ರ ಸರ್ಕಾರ ಕಾಳುಮೆಣಸಿನ ಮೇಲೆ ಜಿಎಸ್ ಟಿ ತೆಗೆದಿದೆಇದರಿಂದ ಯಾವುದೇ ಬದಲಾವಣೆ ಆಗೋದಿಲ್ಲವೆಂದು ರೈತರು ಹೇಳುತ್ತಿದ್ದಾರೆ. ಜಿಎಸ್ಟಿ ಕಡಿಮೆ ಮಾಡಿರುವುದು ಕೊಳ್ಳುವವನಿಗೆ ಲಾಭ ಆಗುತ್ತಿದೆ.ಬೆಳೆಗಾರರಿಗೆ ಯಾವುದೇ ಪ್ರಯೋಜನ ಇಲ್ಲ.
ರಾಜಕಾರಣಿಗಳ ಮಕ್ಕಳು ಕಾಳು ಮೆಣಸಿನನ್ನು ಬೇರೆ ದೇಶದಿಂದ ಆಮದು ಮಾಡುತ್ತಿದ್ದಾರೆ.ಸರ್ಕಾರ ಅದರ ಬಗ್ಗೆ ಚಿಂತಿಸ ಬೇಕು.

ಬೆಳೆಗಳಿಗೆ ಬರುತ್ತಿರುವ ರೋಗಗಳ ಬಗ್ಗೆ ಸರ್ಕಾರ ಗಮನಹರಿಸಬೇಕು.
ಸ್ಪೈಸ್ ಬೋರ್ಡ್ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲಿ ಎಂದಿದ್ದಾರೆ.

ಸತ್ತುಹೋಗಿರುವ ಸ್ಪೈಸ್ ಬೋರ್ಡ್ ಗೆ ಅಧಿಕಾರಿಗಳನ್ನು ನೇಮಿಸುವಂತೆ ಒತ್ತಾಯಿಸಿರುವ ರೈತರು ಕೇವಲ ಎಸಿ ರೂಮ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Rotary Club Shimoga ಆರೋಗ್ಯದ ಬಗ್ಗೆ ಜಾಗೃತಿ ಅಗತ್ಯ: ರೊ. ರೂಪ ಪುಣ್ಯಕೋಟಿ

0

Rotary Club Shimoga ಇಂದು ಆರೋಗ್ಯವೆ ಭಾಗ್ಯ. ಪ್ರತಿನಿತ್ಯದ ಜಂಜಾಟದಿಂದ, ಆಹಾರದ ವ್ಯತ್ಯಾಸದಿಂದಾಗಿ ಮಧ್ಯವಯಸ್ಕರಿಗೆ ಹಲವಾರು ತೊಂದರೆ ಉಂಟಾಗುತ್ತಿದ್ದು, ಅದರ ನಿವಾರಣೆಗೆ ಆಗಿಂದಾಗೆ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ರೋಗ ಉಲ್ಬಣ ಆಗುವ ಮುಂಚಿತವಾಗಿ ಪರಿಹಾರ ಕಂಡು ಕೊಳ್ಳಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಅಧ್ಯಕ್ಷರಾದ ರೊ. ರೂಪ ಪುಣ್ಯಕೋಟೆ ಹೇಳಿದರು.

ಕೃತ್ವಿ ಆಯುರ್ವೇದ ಮೊದಲನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಂಧಿ ಮತ್ತು ಮೂಳೆ ನೋವುಗಳ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಯಿಲೆ ಬರುವುದನ್ನು ತಡೆಗಟ್ಟಲು ಅನುಕೂಲವಾಗುವಂತೆ ರೋಟರಿ ಹಲವಾರು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಈ ಬಾರಿ ಮೂಳೆ ಸಾಂಧ್ರತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಎಲ್ಲರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದರು.

ಡಾ. ಪ್ರಕೃತಿ ಮಂಚಾಲೆ ಮಾತನಾಡಿ, ನಮ್ಮ ಕೃತ್ವಿ ಆಯುರ್ವೇದ ಪ್ರಾರಂಭವಾಗಿ ಒಂದು ವರ್ಷವಾಯಿತು. ಈ ಸಂದರ್ಭದಲ್ಲಿ ನಾಗರೀಕರಿಗೆ ಅನುಕೂಲವಾಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಿ, ಗುಫಿಕ್ ಬಯೋ ಸೈನ್ಸ್ ರವರ ಪ್ರಯೋಜಕತ್ವದಲ್ಲಿ ಉಚಿತವಾಗಿ ಬಿ.ಎಂ.ಡಿ.ಪರೀಕ್ಷೆ ಮೂಲಕ ಮಂಡಿ, ಭುಜ, ಕೈ-ಕಾಲು, ಕುತ್ತಿಗೆ, ಕೀಲು ನೋವುಗಳ ತಪಾಸಣೆ ಮಾಡಲಾಗುತ್ತಿದೆ ಎಂದರು.

ತಾಂತ್ರಿಕ ಯುಗದಲ್ಲಿ ಮನುಷ್ಯ ಚಟುವಟಿಕೆಯಿಂದ ದೂರವಾಗುತ್ತಿದ್ದು, ಪೌಷ್ಟಿಕ ಆಹಾರ ಉಪಯೋಗಿಸದಿರುವುದು, ಎಲ್ಲಾ ಕೆಲಸಗಳಿಗೂ ಯಂತ್ರಗಳನ್ನು ಉಪಯೋಗಿಸುತ್ತಿರುವುದರಿಂದ ದೇಹ ದಂಡಿಸುವುದು ಕಡಿಮೆಯಾಗಿ, ಹಲವಾರು ಕೀಲು ನೋವುಗಳು ಚಿಕ್ಕ ವಯಸ್ಸಿನಲ್ಲೆ ಬರುತ್ತಿದೆ. ಅದನ್ನು ತಡೆಗಟ್ಟಲು ಆಗಿಂದಾಗೆ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳಬೇಕು. ಮೂಳೆ ಸವಕಳಿ ತಡೆಗಟ್ಟಲು ಸೊಪ್ಪು, ತರಕಾರಿ, ಮೊಟ್ಟೆ ಯಥೇಚ್ಛವಾಗಿ ಬಳಸಬೇಕು. ಜಂಕ್ ಫುಡ್ ಕಡಿಮೆ ಬಳಸುವುದರೊಂದಿಗೆ, ದೇಹ ದಂಡಿಸಲು ವ್ಯಾಯಾಮ, ಕನಿಷ್ಟ ವಾಯು ವಿಹಾರ ಪ್ರತಿ ನಿತ್ಯ ಒಂದು ಗಂಟೆ ನಡಿಗೆಯನ್ನು ಅಭ್ಯಾಸ ಮಾಡಿಕೊಳ್ಳುವ ಮೂಲಕ ಉತ್ತಮ ಜೀವನ ಶೈಲಿಯಿಂದ ರೋಗ ಮುಕ್ತರಾಗಿ ಬಾಳಬಹುದು ಎಂದು ಸಲಹೆ ನೀಡಿದರು.

Rotary Club Shimoga ರೋಟರಿ ಮಾಜಿ ಸಹಾಯಕ ಗವರ್ನರ ಜಿ.ವಿಜಯಕುಮಾರ್, ಆರೋಗ್ಯ ಎಲ್ಲರಿಗೂ ಅತಿಮುಖ್ಯ. ಪ್ರಸ್ತುತ ದಿನದಲ್ಲಿ ಯಾರ ಬಳಿಯೂ ಸಮಯ ಇಲ್ಲದಂತಾಗಿದೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಆಗಿಂದಾಗ್ಗೆ ವೈದ್ಯರ ಬಳಿ ಹೋಗಿ ಸಲಹೆ ಪಡೆದುಕೊಳ್ಳದೇ, ಆರೋಗ್ಯದ ಮೇಲೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪೌಷ್ಟಿಕಾಂಶಯುಕ್ತ ಆಹಾರದ ಸೇವನೆ ಜೊತೆಗೆ ದೈಹಿಕ ವ್ಯಾಯಾಮಗಳನ್ನು ಪ್ರತಿನಿತ್ಯ ಮಾಡುವುದರಿಂದ ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಬಹುದು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಸುಶ್ಮಿತ ಪ್ರಾರ್ಥನೆ ನೆರವೇರಿಸಿಕೊಟ್ಟರು. ಶ್ರೀಕಾಂತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಿತ ಸ್ವಾಗತಿಸಿ, ಸುರೇಶ್ ನಿರೂಪಿಸಿದರು. ಭಾರದ್ವಾಜ್, ಸತ್ಯನಾರಾಯಣ, ರೇಣುಕಾರಾದ್ಯ, ವಾಗೇಶ್, ವೆಂಕಟೇಶ್ ನಾಯಕ್, ಪದ್ಮಾವತಿ ಮುಂತಾದವರು ಇದ್ದರು. ಸುಮಾರು ಇನ್ನೂರೈವತ್ತು ಮಂದಿ ಈ ಶಿಬಿರದ ಸದುಪಯೋಗ ಪಡೆದುಕೊಂಡರು.

Maha Shivaratri ಶ್ರೀ ಶಿವಗಂಗಾ ಯೋಗ ಕೇಂದ್ರದಲ್ಲಿ ಶಿವರಾತ್ರಿ ಸಂಭ್ರಮ

0

Maha Shivaratri ಯೋಗ ಕೇಂದ್ರದ ಆವರಣದಲ್ಲಿರುವ ಧ್ಯಾನಸ್ಥ ಆದಿ ಯೋಗಿ ಶಿವನ ಸಾನಿಧ್ಯದಲ್ಲಿ ಶಿವರಾತ್ರಿಯಂದು ಶಿವನ ಆರಾಧನೆ ನಡೆಯಲಿದೆ. ದಿನಾಂಕ 26.03.2025 ಬುಧವಾರ ಬೆಳಗ್ಗೆ 07.00 ರಿಂದ ರುದ್ರಾಭಿಷೇಕ, ಹೂವು ಬಿಲ್ವಪತ್ರೆಗಳಿಂದ ಅಲಂಕಾರ. 08.30 ಕ್ಕೆ ಮಹಾ ಮಂಗಳಾರತಿ. ಸಂಜೆ 4:30 ರಿಂದ ರಾತ್ರಿ 11 ರವರೆಗೆ ಶ್ರೀ ಶಿವಗಂಗಾಯೋಗ ಶಾಖೆಗಳ ಶಿಕ್ಷಣಾರ್ಥಿಗಳಿಂದ ಸಾಮೂಹಿಕ ಭಜನೆ ಇರುತ್ತದೆ. ಕೇಂದ್ರದಲ್ಲಿ ಸ್ಥಾಪಿತವಾಗಿರುವ ಪಿರಮಿಡ್ ನಲ್ಲಿ ಶಿವನ ಸ್ಮರಣೆಯ ಧ್ಯಾನ ಜಾಗರಣೆ ನಡೆಯಲಿದೆ. ಶ್ರೀ ಎಸ್ ಎಸ್ ಜ್ಯೋತಿ ಪ್ರಕಾಶ್, ಕಾರ್ಯದರ್ಶಿ ಮತ್ತು ಯೋಗಾಚಾರ್ಯ ಸಿ.ವಿ. ರುದ್ರಾರಾಧ್ಯ, ಕಾರ್ಯಾಧ್ಯಕ್ಷರು, ಮತ್ತು ಸದಸ್ಯರು, ಶ್ರೀ ಶಿವಗಂಗಾ ಯೋಗ ಟ್ರಸ್ಟ್, ಕಲ್ಲಹಳ್ಳಿ ಇವರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿವನ ಕೃಪೆಗೆ ಪಾತ್ರರಾಗಲು ಆಹ್ವಾನಿಸಿದ್ದಾರೆ.

Department of Industrial Training and Employment ಮಾ.3 ರಂದು ಉದ್ದಿಮೆದಾರರು ಮತ್ತು ತರಬೇತಿದಾರರಿಗೆ ಕಾರ್ಯಾಗಾರ

0

Department of Industrial Training and Employment ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಶಿಕಾರಿಪುರ ವತಿಯಿಂದ ಮಾ.3 ಪೂರ್ವಾಹ್ನ 10.30 ರಿಂದ 1.30 ರವೆಗೆ ಗಾಜನೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ ಸ್ಕೀಮ್ ಹಾಗೂ ಪ್ರೆöÊಮ್ ಮಿನಿಸ್ಟರ್ ಇಂಟರ್ನ್ಶಿಪ್ ಸ್ಕೀಮ್ ಯೋಜನೆಯ ಬಗ್ಗೆ ಉದ್ದಿಮೆದಾರರಿಗೆ ಹಾಗೂ ತರಬೇತಿದಾರರಿಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಕಾರ್ಯಾಗಾರದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು, 21 ರಿಂದ 24 ವರ್ಷದವರಾಗಿರಬೇಕು, ಸೆಕೆಂಡರಿ ಸ್ಕೂಲ್ ಸರ್ಟಿಫಿಕೆಟ್ ಅಥವಾ ಸಮಾನ/ಹೈಯರ್ ಸ್ಕೂಲ್ ಸರ್ಟೀಫಿಕೆಟ್ ಅಥವಾ ಸಮಾನ/ಐಟಿಐ ಕಂಪ್ಲಿಟೆಡ್ ಕ್ಯಾಂಡಿಡೇಟ್/ಡಿಪ್ಲೋಮಾ/ಗ್ರಾಜುಯೇಷನ್ ಡಿಗ್ರಿ ಬಿಎ, ಬಿಎಸ್‌ಸಿ, ಬಿ.ಕಾಂ, ಬಿಸಿಎ, ಬಿಬಿಎ, ಬಿ ಫಾರ್ಮ ಈ ಅರ್ಹತೆಗಳನ್ನು ಹೊಂದಿರುವವರು https://pminternship.mca.gov.in/login/ ಲಿಂಕ್ ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ಅರಿವು ಕಾರ್ಯಾಗಾರದಲ್ಲಿ ಭಾಗವಹಿಸಬಹುದು ಎಂದು ಶಿಕಾರಿಪುರ ನೋಡಲ್ ಅಧಿಕಾರಿ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ವಿಜಯಕುಮಾರ್ ಸಪಲಿ ತಿಳಿಸಿದ್ದಾರೆ.

Veterinary College ಫೆ.28 ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ

0

Veterinary College ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಫೆ.28 ರ ಬೆಳಿಗ್ಗೆ 10 ಗಂಟೆಗೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.
ಪಶುವೈದ್ಯಕೀಯ ಔಷಧ ಹಾಗೂ ವಿಷ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ(ಕುಕ್ಕುಟಶಾಸ್ತ್ರ ಪ್ರಾಣಿ ಆಹಾರ ಶಾಸ್ತ್ರ/ ಜಾನುವಾರು ನಿರ್ವಹಣೆ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700 ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನವನ್ನು ಪಾವತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-200872 ಹಾಗೂ ವಿಶ್ವವಿದ್ಯಾಲಯಯ ಜಾಲತಾಣ www.kvafsu.edu.in ಗೆ ಸಂಪರ್ಕಿಸಬಹುದು ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.

Karnataka Rakshana Vedike ಕರವೇ ಸ್ವಾಭಿಮಾನಿ ಬಣದಿಂದ ಅಶೋಕ ವೃತ್ತದಲ್ಲಿ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ

0

Karnataka Rakshana Vedike ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹನ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ನಗರದ ಅಶೋಕ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಂಡಕ್ಟರ್ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಜೊತೆಗೆ ಪೋಕ್ಸೋ ಪ್ರಕರಣ ದಾಖಲು ಮಾಡಿ ಗಲಾಟೆ ಪ್ರಕರಣವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು ಹಾಗೂ ದಾಳಿ ನಡೆಸಿದವರ ಪ್ರತಿ ಕೃತಿಯನ್ನು ದಹಿಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಲ್ಲೇ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು ರಾಜ್ಯ ಸರ್ಕಾರ ಈ ಪುಂಡರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಬಸ್ಸಿನ ಮೇಲೆ ಕನ್ನಡದ ಬಾವುಟವನ್ನು ಕಟ್ಟಿ ಚಾಲಕ ಮತ್ತು ನಿರ್ವಾಹಕರಿಗೆ ಮಸಿ ಬೆಳೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು. Karnataka Rakshana Vedike ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಜಿಲ್ಲಾ ಖಜಾಂಚಿ ಗಣೇಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಕಾರ್ಯದರ್ಶಿ ರಾಮು ಪತ್ರಿಕಾ ಪ್ರಚಾರ ಸಮಿತಿ ಅಧ್ಯಕ್ಷ ಮಾಲತೇಶ್. ಕನ್ನಡ ಅಭಿಮಾನಿ ಮುಜೀಬ್ ಸತೀಶ್. ಪರಮೇಶ್. ಟಾಟಾ ಏಸ್ ರಾಮಣ್ಣ.ಪುಟ್ಟ .ಸಾಧಿಕ್ ಮಹಿಳಾ ಘಟಕದ ರೇಷ್ಮಾ ಹಾಗೂ ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಿದ್ದರು

Chamber Of Commerce Shivamogga ಕೇಂದ್ರ ಮುಂಗಡ ಪತ್ರ 2025 ರಲ್ಲಿ ತೆರಿಗೆ ಸುಧಾರಣಾ ಕ್ರಮ, ವಾಣಿಜ್ಯ ಕೈಗಾರಿಕೋದ್ಯಮಿ ಗಳಿಗೆ ಅನುಕೂಲವಾಗುವ ನಿರೀಕ್ಷೆ

0

Chamber Of Commerce Shivamogga ಕೇಂದ್ರ ಸರ್ಕಾರವು ಮಂಡಿಸಿದ ಮುಂಗಡಪತ್ರ 2025ರಲ್ಲಿ ಘೋಷಿಸಿರುವ ತೆರಿಗೆ ಸುಧಾರಣ ಕ್ರಮ ಮತ್ತು ತೆರಿಗೆ ವಿನಾಯತಿ ಗಳಿಂದ ಜಿಲ್ಲೆಯ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಕೇಂದ್ರ ಮುಂಗಡಪತ್ರ 2025 ರಲ್ಲಿ ಆದಾಯ ತೆರಿಗೆ ಮತ್ತು ಸರಕು ಮತ್ತು ಸೇವೆ ಕಾಯ್ದೆಗೆ ಆದ ತಿದ್ದುಪಡಿಗಳ ಬಗ್ಗೆ ಆಯೋಜಿಸಿದ್ದ ಸೆಮಿನಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರವು ಕಳೆದ ಹತ್ತು ವರ್ಷಗಳಿಂದ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆ ಗೆ ಸಂಬಂಧಿಸಿದಂತೆ ಕೈಗೊಂಡಿರುವ ವ್ಯಾಪಕ ಸುಧಾರಣೆ ಕ್ರಮಗಳಿಂದ ನೇರ ತೆರಿಗೆ ಮತ್ತು ಪರೋಕ್ಷ ತೆರಿಗೆ ಸಂಗ್ರಹದಲ್ಲಿ ವ್ಯಾಪಕವಾಗಿ ಹೆಚ್ಚಳಗೊಂಡಿದೆ ಹಾಗೂ ಮುಂಬರುವ ಹೊಸ ಆದಾಯ ತೆರಿಗೆ 2025 ಕಾಯ್ದೆಯ ಸರಳಿಕೃತ ವ್ಯವಸ್ಥೆಯಿಂದ ಜಿಲ್ಲೆಯ ವಾಣಿಜ್ಯ ಮತ್ತು ಕೈಗಾರಿಕಾ ಬೆಳವಣಿಗೆಗೆ ಸಹಕಾರಿಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು ಮುಂದುವರೆದು ಸರಕು ಮತ್ತು ಸೇವಾ ತೆರಿಗೆ ಮತ್ತು ಆದಾಯ ತೆರಿಗೆಯ ತೆರಿಗೆ ಸಂಗ್ರಹಣೆಯಲ್ಲಿ ದಾಖಲೆ ಪ್ರಮಾಣದಲ್ಲಿ ಸಂಗ್ರಹವಾಗಿ ಕರ್ನಾಟಕ ವು ದೇಶದಲ್ಲಿಯೇ ಎರಡನೇ ಸ್ಥಾನಕ್ಕೆ ಬರಲು ತೆರಿಗೆ ಸಲಹೆಗಾರರು ಹಾಗೂ ಸನ್ನದು ಲೆಕ್ಕ ಪರಿಶೋಧಕರ ಮತ್ತು ಪ್ರಾಮಾಣಿಕ ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಹಕಾರ ಮತ್ತು ಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ದರು.

12 ಲಕ್ಷದವರೆಗೆ ತೆರಿಗೆ ವಿನಾಯಿತಿಯನ್ನು ಘೋಷಿಸಿರುವುದು ಮಧ್ಯಮ ವರ್ಗಕ್ಕೆ ತುಂಬಾ ಅನುಕೂಲವಾಗಲಿದೆ ಎಂದರು ಹಾಗೂ ಎಂ ಎಸ್ ಎಂ ಇ ಗಳನ್ನ ಬಲಪಡಿಸಲು , ಸ್ಟಾರ್ಟ್ ಅಪ್ ಗಳನ್ನು ಉತ್ತೇಜಿಸಲು, ಸಣ್ಣ ವ್ಯಾಪಾರಸ್ಥರಿಗೆ ಅನುಕೂಲವಾಗಲು ಆದಾಯ ತೆರಿಗೆಯಲ್ಲಿ ಅನೇಕ ತೆರಿಗೆ ವಿನಾಯಿತಿಗಳನ್ನು ನೀಡಿರುವುದು ಸಮಂಜಸವಾಗಿದೆ ಎಂದು ತಿಳಿಸಿದರು

ವಾಣಿಜ್ಯ ಮತ್ತು ಕೈಗಾರಿಕೆ ಉದ್ಯಮಿಗಳಿಗೆ ಅನುಕೂಲವಾಗುವ ಇಂತಹ ಸೆಮಿನಾರ್ ಕಾರ್ಯಕ್ರಮ ಗಳಿಗೆ ಸಂಘವು ಕೈಜೋಡಿ ಸುತ್ತದೆ ಎಂದರು

Chamber Of Commerce Shivamogga ಈ ಸಂದರ್ಭದಲ್ಲಿ ಸೆಮಿನಾರ್ ನ ವಿಷಯದ ಬಗ್ಗೆ ಸನ್ನದು ಲೆಕ್ಕ ಪರಿಶೋಧಕರು ಹಾಗೂ ಸಂಘದ ತೆರಿಗೆ ಸಲ ಸಮಿತಿಯ ಕಾರ್ಯದರ್ಶಿಯಾದ ಮಧುಸೂದನ್ ನಾವಡ ಯವರು ಮುಂಗಡಪತ್ರದಲ್ಲಿ ಆದಾಯ ತೆರಿಗೆ ಕಾಯ್ದೆಗೆ ಆದ ಬದಲಾವಣೆಗಳು ಹಾಗೂ ತೆರಿಗೆ ದರದ ಕಡಿತದಿಂದ ಉಳಿತಾಯವಾಗುವ ಮೊತ್ತದಿಂದ ಮಧ್ಯಮ ವರ್ಗದವರಿಗೆ ಮತ್ತು ವಾಣಿಜ್ಯೋದ್ಯಮಗಳಿಗೆ ಆಗುವ ಆರ್ಥಿಕ ಅನುಕೂಲತೆ ಬಗ್ಗೆ ವಿವರಿಸಿದರು ಮತ್ತೋರ್ವ ಸನ್ನದು ಲೆಕ್ಕ ಪರಿಶೋಧಕರಾದ ಎಸ್. ಎಸ್. ಶ್ರೀ ರಾಮ್ ರವರು ಕೇಂದ್ರ ಮುಂಗಡಪತ್ರದಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಗೆ ಆದ ತಿದ್ದುಪಡಿಗಳ ಬಗ್ಗೆ ವಿವರವಾಗಿ ಉಪನ್ಯಾಸವನ್ನು ನೀಡಿದರು. ಶ್ರೀಯುತರುಗಳು ತಮ್ಮ ಉಪನ್ಯಾಸದ ಕೊನೆಯಲ್ಲಿ ವ್ಯಾಪಾರಸ್ಥರು ಕೈಗಾರಿಕೋದ್ಯಮಿಗಳು, ಸನ್ನದು ಲೆಕ್ಕ ಪರಿಶೋಧಕರು ಹಾಗೂ ತೆರಿಗೆ ಸಲಹೆ ಗಾರರ ಎಲ್ಲಾ ಸಂದೇಹದ ಪ್ರಶ್ನೆಗಳಿಗೆ ಸಮರ್ಪಕವಾಗಿ ಮಾಹಿತಿಯನ್ನು ನೀಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ತೆರಿಗೆ ಸಲಹ ಸಮಿತಿ ಅಧ್ಯಕ್ಷರಾದ CA ಶರತ್, ಎಲ್ಲಾ ಸದಸ್ಯರುಗಳು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ G.ವಿಜಯ್ ಕುಮಾರ್, ಖಜಾಂಚಿ ಆರ್ ಮನೋಹರ, ನಿರ್ದೇಶಕರುಗಳಾದ ವಸಂತ್ ಹೋಬಳಿ ದಾರ್, ಗಣೇಶ್ ಎಂ ಅಂಗಡಿ, ಲಕ್ಷ್ಮೀದೇವಿ ಗೋಪಿನಾಥ್,ಬಿ ಸುರೇಶ್ ಕುಮಾರ್, ರವಿಪ್ರಕಾಶ್ ಜನ್ನಿ , ಹಾಗೂ ಅನೇಕ ಸನ್ನದು ಲೆಕ್ಕ ಪರಿಶೋಧಕರುಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ತೆರಿಗೆ ಸಲಹೆಗಾರರು, ಸಂಯೋಜಿತ ಸಂಸ್ಥೆಗಳ ಪದಾಧಿಕಾರಿಗಳು,ಅನೇಕ ವಾಣಿಜ್ಯೋದ್ಯಮಿಗಳು ಕೈಗಾರಿಕೋದ್ಯಮಿಗಳು, ಸದಸ್ಯರುಗಳು ಭಾಗವಹಿಸಿದ್ದರು