Wednesday, March 11, 2026
Wednesday, March 11, 2026
Home Blog Page 395

Sringeri Maha Samsthanam ಮಹಾಕುಂಭ ಮೇಳದಲ್ಲಿ ಕೂಡಲಿ ಶೃಂಗೇರಿ ಮಹಾಸಂಸ್ಥಾನಮ್ ಪೀಠಾಧಿಪತಿ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿ

0

Sringeri Maha Samsthanam ಕೂಡಲಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಮಹಾಸಂಸ್ಥಾನಮ್ ದಕ್ಷಿಣಾಮ್ನಾಯ ಮೂಲ ಶ್ರೀಶಾರದಾ ಪೀಠಮ್ ನ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿಗಳು ಉತ್ತರಪ್ರದೇಶದ ತ್ರಿವೇಣಿ ಸಂಗಮ ಪ್ರಯಾಗ್ ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಿದರು.
ಶನಿವಾರ ಪ್ರಯಾಗ್ ರಾಜ್‍ನ ತ್ರಿವೇಣಿ ಸಂಗಮದಲ್ಲಿ ಮಡಿಸ್ನಾನವನ್ನು ಮಾಡಿ, ಪೂಜಾ ವಿಧಿಗಳನ್ನು ನೆರವೇರಿಸಿದರು.
ಭಾನುವಾರ ಧರ್ಮಸಭೆಯಲ್ಲಿ ಪಾಲ್ಗೊಂಡರು. ಶ್ರೀ ಕಂಚಿ ಕಾಮಕೋಟಿ ಜಗದ್ಗುರು ಶ್ರೀ ಶಂಕರ ವಿಜೇಂದ್ರ ಸರಸ್ವತಿ ಸ್ವಾಮಿಗಳು ಮತ್ತು ಶ್ರೀ ಶಕಟಪುರಂನ ಶ್ರೀ ಮದ್ ಜಗದ್ಗುರು ಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರೊಂದಿಗೆ ವೇದಿಕೆ ಹಂಚಿಕೊಂಡು ಭಕ್ತರಿಗೆ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀ ಕಂಚಿ ಕಾಮಕೋಟಿ ಜಗದ್ಗುರು ಶ್ರೀ ಶಂಕರ ವಿಜೇಂದ್ರ ಸರಸ್ವತಿ ಸ್ವಾಮಿಗಳಿಂದ ರಚಿತವಾದ ಮಹಾಕುಂಭಮೇಳ ಕುರಿತ ಕೃತಿಯನ್ನು ಲೋಕಾರ್ಪಣೆ ಮಾಡಿದರು.

Department of School Education ದೇವಾಂಗ ಸಮಾಜದ ಸುವರ್ಣ ಮಹೋತ್ಸವ ಕಟ್ಟಡ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಂಭ್ರಮಾಚರಣೆ

0

Department of School Education ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪನವರು ಕುವೆಂಪು ರಂಗಮಂದಿರದಲ್ಲಿ ಮಲೆನಾಡು ದೇವಾಂಗ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ “ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಂಭ್ರಮಾಚರಣೆ” ಕಾರ್ಯಮವನ್ನು ದಿವ್ಯಸಾನಿಧ್ಯ ವಹಿಸಿದ್ದ ಪರಮಪೂಜ್ಯ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ಹಾಗೂ ಶ್ರೀ ಶ್ರೀ ಶ್ರೀ ಶಿವಾನಂದ ಸ್ವಾಮೀಜಿಯವರೊಂದಿಗೆ ಉದ್ಘಾಟಿಸಿದರು .

ಬಳಿಕ ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆನು. ಸ್ಮರಣ ಸಂಚಿಕೆ ಕೃತಿ ಬಿಡುಗಡೆಗೊಳಿಸಿ, ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

Department of School Education ಕಾರ್ಯಕ್ರಮದಲ್ಲಿ ಮಲೆನಾಡು ದೇವಾಂಗ ಸಮಾಜದ ಅಧ್ಯಕ್ಷರಾದ ಶ್ರೀ ಪಿ.ಆರ್ ಗಿರಿಯಪ್ಪ, ಸಂಸದರಾದ ಶ್ರೀ ಬಿ.ವೈ ರಾಘವೇಂದ್ರ, ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ಶ್ರೀನಿವಾಸ್ ಮೂರ್ತಿ ಸೇರಿದಂತೆ ಅನೇಕ ಗಣ್ಯರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

Department of Skill Development ಫೆಬ್ರವರಿ 24 ರ ಉದ್ಯೋಗಮೇಳದ ಪ್ರಯೋಜನ ಪಡೆದುಕೊಳ್ಳಿ- ಸಿ.ಎಸ್.ಚಂದ್ರಭೂಪಾಲ್

0

Department of Skill Development ವಿದ್ಯಾರ್ಹತೆಗೆ ತಕ್ಕ ಉದ್ಯೋಗವನ್ನು ಪಡೆಯಲು ನಿರುದ್ಯೋಗ ಯುವಕ-ಯುವತಿಯರು ಮತ್ತು ಯುವನಿಧಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಎ.ಟಿ.ಎನ್.ಸಿ. ಕಾಲೇಜು, ಶಿವಮೊಗ್ಗ ಇಲ್ಲಿ ಫೆ.24 ರಂದು ಹಮ್ಮಿಕೊಂಡಿರುವ ” ಉದ್ಯೋಗ ಮೇಳ” ದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ರವರು ಕರೆ ನೀಡಿದ್ದಾರೆ.
ಕರ್ನಾಟಕ ಸರ್ಕಾರದ ಸರ್ವರಿಗೂ ಉದ್ಯೋಗ ಯೋಜನೆಯಡಿ ಕೌಶಲ್ಯಾಭಿವೃದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ದಿನಾಂಕ: 24-02-2025 ರಂದು ಸೋಮವಾರ ಎ.ಟಿ.ಎನ್.ಸಿ. ಕಾಲೇಜು ಶಿವಮೊಗ್ಗ ಇಲ್ಲಿ ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.
ಇಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ, ಎಲ್ಲಾ ಪದವಿ/ಡಿಪ್ಲೋಮ/ಐ.ಟಿ.ಐ/ಸೇರಿದಂತೆ ಪಿ.ಯು.ಸಿ. ಎಸ್.ಎಸ್.ಎಲ್.ಸಿ. ಹಾಗು 7ನೇ ತರಗತಿ ಉತ್ತೀರ್ಣ ಹೊಂದಿರುವ ನಿರುದ್ಯೋಗ ಯುವಕರು ಮತ್ತು ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಎಲ್ಲರಿಗೂ ಪ್ರವೇಶ ಉಚಿತವಾಗಿದ್ದು ನಿರುದ್ಯೋಗಸ್ಥರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.
ರಾಜ್ಯದಲ್ಲಿರುವ ಪ್ರತಿಷ್ಠಿತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ನೋಂದಾಯಿತ ನಿರುದ್ಯೋಗಸ್ಥರ ಜೊತೆಗೆ ನೇರ ಸಂದರ್ಶನವನ್ನು ನಡೆಸುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಗುವುದು. 18 ರಿಂದ 35 ವರ್ಷ ವಯೋಮಿತಿ ಹೊಂದಿರುವ ಉದ್ಯೋಗಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ತಮಗೆ ಸೂಕ್ತವಾದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಸಂದರ್ಶನ ನಡೆಸಲು ಪ್ರತಿಯೊಂದು ಕಂಪನಿಗಳಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.
ಉದ್ಯೋಗ ಮೇಳಕ್ಕೆ ಆಗಮಿಸುವ ಯುವಕ ಯುವತಿಯರು ಕಡ್ಡಾಯವಾಗಿ ಬೆಳಿಗ್ಗೆ 9 ಗಂಟೆಗೆ ಹಾಜರಿರತಕ್ಕದ್ದು ಜೊತೆಯಲ್ಲಿ ಅಗತ್ಯ ದಾಖಲಾತಿಗಳಾದ ತಮ್ಮ ವಿಧ್ಯಾಭ್ಯಾಸದ ಅಂಕಪಟ್ಟಿಯ ಪ್ರತಿ, ಆಧಾರ ಕಾರ್ಡ್, ಅನುಭವ ಪ್ರಮಾಣ ಪತ್ರ (ಇದ್ದರೆ), ಸಂಕ್ಷಿಪ್ತ ವ್ಯಕ್ತಿ ಪರಿಚಯ ಪತ್ರ (ರೆಸ್ಯುಮ್) ತರಬೇಕು.
ನೋಂದಾಯಿತ ನಿರುದ್ಯೋಗಿಗಗಳು ಎಷ್ಟು ಸಂದರ್ಶನಕ್ಕೆ ಹಾಜರಾಗುತ್ತಾರೋ ಉದಾಹರಣೆಗೆ 1 ರಿಂದ 10 ಕಂಪನಿಗಳಿಗೆ ಸಂದರ್ಶನ ನೀಡಿದಲ್ಲಿ 10 ಸೆಟ್ ಗಳಲ್ಲಿ ದಾಖಲಾತಿಯ ಜೆರಾಕ್ಸ್ ಪ್ರತಿಗಳನ್ನು ತರತಕ್ಕದ್ದು. ಉದ್ಯೋಗದಾತ ಸಂಸ್ಥೆಗಳ ಆಯ್ಕೆಯು ಅಂತಿಮವಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಮುಂಚಿತವಾಗಿ ಅಥವಾ ಸ್ಥಳದಲ್ಲಿ ಆನ್‌ಲೈನ್ ಲಿಂಕ್‌ನಲ್ಲಿ ನೋಂದಾಯಿಸಿಕೊAಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ ನಿರೋದ್ಯೋಗಿ ಯುವಕ ಯುವತಿಯರು ಉದ್ಯೋಗಸ್ಥರಾಗಿ ಹೊರಹೊಮ್ಮಲು ಈ ಸುವರ್ಣ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Adichunchanagiri Maha Sansthan Math ಕಾಲಭೈರವೇಶ್ವರ ದೇಗುಲದಲ್ಲಿ ಶಿವರಾತ್ರಿ‌ ವಿಶೇಷ ಪೂಜೆ

0

Adichunchanagiri Maha Sansthan Math ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ,ಶಿವಮೊಗ್ಗ ಶಾಖೆಯಲ್ಲಿ ದಿನಾಂಕ: 26.2.2025 ರಂದು ಬುಧವಾರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಭಜನಾ ಪರಿಷತ್ ಶಿವಮೊಗ್ಗ, ಮತ್ತು ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಇವರುಗಳ ಸಹಯೋಗದಲ್ಲಿ 17ನೇ ವರ್ಷದ ಅಖಂಡ ಭಜನೆಯನ್ನು ಏರ್ಪಡಿಸಲಾಗಿದೆ.
ಶರಾವತಿ ನಗರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ರ ಬೆಳಿಗ್ಗೆ ದೇವರಿಗೆ ವಿಶೇಷ ಪೂಜೆ,ಮತ್ತು ಸಾಯಂಕಾಲ 6:00. ಗಂಟೆಗೆ ಜಲಾಭಿಷೇಕ, ಕ್ಷೀರಾಭಿಷೇಕ. ಪಂಚಾಮೃತ ಅಭಿಷೇಕ. ರುದ್ರಾಭಿಷೇಕ,ಪೂಜಾ ಕೈಂಕರ್ಯ ಗಳನ್ನು ಶ್ರೀಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ವಿಶೇಷ ಪೂಜಾ ಕೈಂಕರ್ಯಗಳು:
ಫೆಬ್ರವರಿ 26 ರಂದು ಬೆಳಿಗ್ಗೆ 5.30 ರಿಂದ ಏಕವಾರ ರುದ್ರಾಭಿಷೇಕ ಆರಂಭಿಸಲಾಗುವುದು, 6ಕ್ಕೆ ಅಖಂಡ ಭಜನೆ ಉದ್ಘಾಟನೆ,ಬೆಳಗ್ಗೆ 7 ಕ್ಕೆ ಮಹಾಮಂಗಳಾರತಿ ಮಾಡಲಾಗುವುದು.
ಸಂಜೆ 6 ಗಂಟೆಗೆ ರುದ್ರಾಭಿಷೇಕ, ರಾತ್ರಿ 7:30ಕ್ಕೆ ಮಹಾ ಮಂಗಳಾರತಿ ನಡೆಯುವುದು.
ರಾತ್ರಿ 10 ರಿಂದ ರುದ್ರಾಭಿಷೇಕ, ರಾತ್ರಿ 11:30 ಗಂಟೆಗೆ ಮಹಾಮಂಗಳಾರತಿ ನಡೆಯುವುದು.
ರಾತ್ರಿ 1 ಗಂಟೆಗೆ ರುದ್ರಾಭಿಷೇಕ,ರಾತ್ರಿ 2.30 ಗಂಟೆಗೆ ಮಹಾ ಮಂಗಳಾರತಿ ನಡೆಸಲಾಗುವುದು, ರಾತ್ರಿ 3:00ಗೆ ರುದ್ರಾಭಿಷೇಕ,ಬೆಳಿಗ್ಗೆ 4:30 ಗಂಟೆಗೆ ಮಹಾಮಂಗಳಾರತಿ ಮಾಡಲಾಗುವುದು.
ಫೆಬ್ರವರಿ 27ರ ಗುರುವಾರದಂದು ಬೆಳಿಗ್ಗೆ 5:00 ಗಂಟೆಗೆ ರುದ್ರಾಭಿಷೇಕ, ಬೆಳಗೆ 6 ಗಂಟೆಗೆ ಅಖಂಡ ಭಜನೆ ಸಮಾರೋಪ, 6:15 ಗಂಟೆಗೆ ಮಹಾಮಂಗಳಾರತಿ ನಡೆಯುವುದು. ದೇವರಿಗೆ ರುದ್ರಾಭಿಷೇಕ, ಬಿಲ್ವಪತ್ರೆ, ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗುವುದು.
Adichunchanagiri Maha Sansthan Math ವಿಶೇಷವೆಂದರೆ ಫೆಬ್ರವರಿ 26 ರ ಬೆಳಿಗ್ಗೆ 6 ರಿಂದ ನಗರದ ವಿವಿಧ ಭಜನಾ ತಂಡಗಳಿಂದ ಗುರುವಾರ ಬೆಳಿಗ್ಗೆ 6:00 ಗಂಟೆಯ ವರೆಗೆ ಅಖಂಡ ಭಜನೆ ಮತ್ತು ಶಿವ ಸಂಕೀರ್ತನೆಗಳನ್ನು ಭಜನಾ ತಂಡಗಳಿಂದ ಏರ್ಪಡಿಸಲಾಗಿದೆ.
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಹೊರವಲಯ ಗುರುಪುರದ “ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಬುಧವಾರ ಬೆಳಿಗ್ಗೆ 6:30ಕ್ಕೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜೆ ಅಲಂಕಾರಗಳನ್ನು ಮತ್ತು ಜಾಗರಣೆ ಮತ್ತು ಶಿವ ಸಂಕೀರ್ತನೆಗಳನ್ನು,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕಾಗಿ,ಶ್ರೀಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಗ್ಯಾರಂಟಿ ಬಗ್ಗೆ ಬಿಜೆಪಿ ಟೀಕೆಗೆ ಸಿದ್ಧರಾಮಯ್ಯ ತಿರುಗೇಟು

0

ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಿ.ಎಸ್. ಬೊಮ್ಮಾಯಿ ಯವರು ಹಾಗೂ ಇತರೆ ವಿರೋಧ ಪಕ್ಷದ ಮುಖಂಡರುಗಳು ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ, ಹಣಕಾಸಿನ ವ್ಯವಸ್ಥೆ ನೆಲ ಕಚ್ಚಿದೆ ಎಂದೆಲ್ಲ ಆರೋಪಿಸಿ ಮಾತನಾಡಿದ್ದಾರೆ. ಆ ಮೂಲಕ ಜನರನ್ನು ಸಶಕ್ತಗೊಳಿಸುತ್ತಿರುವ ನಮ್ಮ ಗ್ಯಾರಂಟಿ ಹಾಗೂ ಇನ್ನಿತರೆ ಯೋಜನೆಗಳನ್ನು ಟೀಕಿಸಿದ್ದಾರೆ.

ವಾಸ್ತವವೇನೆಂದರೆ, ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸುತ್ತಿದ್ದಾಗ ನಮ್ಮ ಆರ್ಥಿಕ ವ್ಯವಸ್ಥೆಯನ್ನು ಪಾತಾಳಕ್ಕೆ ಕುಸಿಯುವಂತೆ ಮಾಡಿದ್ದರು. ಆದರೆ ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ. ಬಿಜೆಪಿಯವರ ಅರಾಜಕ ಆರ್ಥಿಕ ನಿರ್ವಹಣೆಗಳಿಂದಾಗಿ ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದನ್ನು ಸಹಿಸಿಕೊಳ್ಳಲಾಗದೆ ಅಥವಾ ಅರಿತುಕೊಳ್ಳಲಾರದೆ ಬಿಜೆಪಿಯವರು ಮಾತಾಡುತ್ತಿರುವುದು ದುರಂತ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತ್ಯುತ್ತರಿಸಿದ್ದಾರೆ.

ಬಿಜೆಪಿಯವರು ತಾವು ಮಾಡಿದ್ದ ಅವಾಂತರಗಳ ಕೆಲವು ಉದಾಹರಣೆಗಳಿವು;
ಬಿಜೆಪಿ ಸರ್ಕಾರವು ಆಡಳಿತ ನಡೆಸುತ್ತಿದ್ದಾಗ ಬಜೆಟ್‌ಗಳಲ್ಲಿ ನಿಗದಿ ಮಾಡಿದ್ದಕ್ಕಿಂತ ಏಳು ಪಟ್ಟು ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ತೆಗೆದುಕೊಂಡಿದ್ದರು. 31-3-2023 ಕ್ಕೆ ಬಂಡವಾಳ ವೆಚ್ಚ ಮಾಡುವ ಪ್ರಮುಖ ಇಲಾಖೆಗಳಾದ ಲೋಕೋಪಯೋಗಿ, ಸಣ್ಣ ನೀರಾವರಿ, ಜಲ ಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ವಸತಿ ಇಲಾಖೆಗಳಲ್ಲಿ 2,70,695 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತದ ಕಾಮಗಾರಿಗಳನ್ನು ಬೇಕಾಬಿಟ್ಟಿ ತೆಗೆದುಕೊಂಡು ಅನುದಾನ ಒದಗಿಸದೆ ಬಿಟ್ಟು ಹೋಗಿದ್ದಾರೆ. ಮುಖ್ಯಮಂತ್ರಿಗಳ ವಿವೇಚನಾ ಕೋಟಾದ ಕೆಳಗೆ 1,66,426 ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಈ ಆರ್ಥಿಕ ದುರಾಡಳಿತ, ಬೇಜವಾಬ್ದಾರಿತನ, ಭ್ರಷ್ಟಾಚಾರಯುತ ಕಾಮಗಾರಿಗಳ ನಿರ್ವಹಣೆಯನ್ನು ಕೇವಲ ಒಂದೆರಡು ವರ್ಷಗಳಲ್ಲಿ ದುರಸ್ತಿ ಮಾಡಲು ಸಾಧ್ಯವೆ?
ಎಂದು ಸಿದ್ಧರಾಮಯ್ಯನವರು ಬಿಜೆಪಿ ಆಕ್ಷೇಪಣೆಗಳಿಗೆ ತಿರುಗೇಟು ನೀಡಿದ್ದಾರೆ

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

0

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು ಕೂಡ ಭದ್ರಾವತಿ ನಗರವನ್ನು ಅಶಾಂತಿಯತ್ತ ಕೊಂಡೋಯ್ಯುತ್ತಿದ್ದಾರೆ ಎಂದು ಭದ್ರಾವತಿ ಹಿತರಕ್ಷಣಾ ವೇದಿಕೆಯ ಮುಖ್ಯಸ್ಥ ಸುರೇಶ್ ಆರೋಪಿಸಿದರು.

ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಭದ್ರಾವತಿಯಲ್ಲಿ ಗಾಂಜಾ, ಇಸ್ಪೇಟ್, ಓಸಿ, ಮುಂತಾದ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಇದರ ಜೊತೆಗೆ ದಲಿತರ ಮೇಲೆ ಹಲ್ಲೆ ಕೂಡ ನಡೆಯುತ್ತಿರುವುದು ಆತಂಕದ ವಿಷಯವಾಗಿದೆ. ಭದ್ರಾವತಿಯಲ್ಲಿ ದಲಿತ ಯುವಕರಿಬ್ಬರನ್ನು ಹೊಸಮನೆಯ ಪೊಲೀಸ್ ಸಬ್‍ಇನ್ಸ್‍ಫೆಕ್ಟರ್‍ರೊಬ್ಬರು ಚಿತ್ರ ಹಿಂಸೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ದಲಿತ ಯುವಕರಾದ ದೀಪಕ್ ಮತ್ತು ಅನಿಲ್ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‍ಇನ್ಸ್‍ಫೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು. ಇಲ್ಲದಿದ್ದರೆ ಜಾಗೃತ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತೀರ್ಥೇಶ್, ಅನಿಲ್‍ಕುಮಾರ್ ಇದ್ದರು.

Ambedkar Bhavan ದೇಶದ ಸಂವಿಧಾನಕ್ಕೆ ಗೌರವ ಕೊಟ್ಟರೆ ನಾವು ನಮ್ಮ ಹೆತ್ತ ತಂದೆ ತಾಯಿಗೆ ಗೌರವ ಕೊಟ್ಟಂತೆ: ಎಸ್‌ ಮಧು ಬಂಗಾರಪ್ಪ

0

Ambedkar Bhavan ದೇಶದ ಸಂವಿಧಾನಕ್ಕೆ ಗೌರವ ಕೊಟ್ಟರೆ ನಾವು ನಮ್ಮ ಹೆತ್ತ ತಂದೆ ತಾಯಿಗೆ ಗೌರವ ಕೊಟ್ಟಂತೆ, ಈಗ ನಮ್ಮ ದೇಶದಲ್ಲಿ ನಮ್ಮ ಸಂವಿಧಾನ ಉಳಿಸಿ ಎನ್ನುವ ಹೋರಾಟ ಮಾಡಬೇಕಿದೆ ಎಂದು ಶಿಕ್ಷಣ ಸಚಿವರಾದ ಎಸ್‌ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗ ನಗರದ ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿರುವ ಸಂವಿಧಾನಕ್ಕೆ ಶ್ರೀಮಂತರು ಬಡವರು ಎಂಬ ಬೇಧವಿಲ್ಲ. ಈ ಹಿಂದೆ ಬ್ರಿಟಿಷರಿಂದ ಸ್ವಾತಂತ್ರ್ಯ ಬೇಕೆಂದು ಅನೇಕ ಹೋರಾಟಗಾರರು ಹೋರಾಟ ಮಾಡಿ ಸ್ವಾತಂತ್ರ್ಯವನ್ನು ನಮಗೆ ತಂದುಕೊಟ್ಟರು. ನಂತರ ಬಾಬಾ ಸಾಹೇಬ್‌ ಅಂಬೇಡ್ಕರ್‌ರವರು ವಿವಿಧ ದೇಶಗಳಿಂದ ಅಧ್ಯಯನ ಮಾಡಿ ಉತ್ತಮವಾದ ಸಂವಿಧಾನವನ್ನು ರಚನೆ ಮಾಡಿ ನಮಗೆ ನೀಡಿದರು. ಈಗ ದೇಶದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ನಮ್ಮ ದೇಶದ ಸಾತಂತ್ರ್ಯವನ್ನು ನಾವು ರಕ್ಷಣೆ ಮಾಡಬೇಕಿದೆ. ಈಗ ನಮ್ಮ ದೇಶದಲ್ಲಿ ನಮ್ಮ ಸಂವಿಧಾನ ಉಳಿಸಿ ಎನ್ನುವ ಹೋರಾಟ ಮಾಡಬೇಕಿದೆ. ನಾವು ಸಂವಿಧಾನಕ್ಕೆ ಗೌರವ ಕೊಟ್ಟರೆ ನಮ್ಮ ತಂದೆ ತಾಯಿಗೆ ಗೌರವ ಕೊಟ್ಟಂತೆ ಎಂದರು. ಈ ಹಿಂದೆ ಪಠ್ಯ ಪುಸ್ತಕ ಕೇಸರಿಕರಣದಿಂದ ತುಂಬಿ ಹೋಗಿತ್ತು. ನಾನು ಅಧಿಕಾರಕ್ಕೆ ಬಂದ ಮೊದಲು ಪಠ್ಯ ಪುಸ್ತಕದಲ್ಲಿದ್ದ ಕೇಸರಿಕರಣ ತೆಗೆದು ಪಠ್ಯ ಪುಸ್ತಕ ಪರಿಷ್ಕರಣೆಗೆ ಸಹಿ ಮಾಡಿದೆ. ಅದರ ಮೂಲಕ ಸಂವಿಧಾನಕ್ಕೆ ಗೌರವ ನೀಡುತ್ತೇ. ಹಾಗೆಯೇ ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಕಲಿಕೆಯ ಮಾಧ್ಯಮದಲ್ಲಿ ಸಂವಿಧಾನದ ಪೀಠಿಕೆ ಕಡ್ಡಾಯ ಮಾಡಿದ್ದೇನೆ. ದೇಶದ ಎಲ್ಲಾ ಜನರಿಗೂ ಅಧಿಕಾರ ಪಡೆಯುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ. ನಮ್ಮ ಸಂವಿಧಾನವನ್ನು ರಕ್ಷಿಸುವ ಕೆಲಸ ಸಿಕ್ಕಿರುವುದು ನಮ್ಮ ಪುಣ್ಯ. ಸಂವಿದಾನ ರಕ್ಷಣೆ ಮಾಡುವ ಉದ್ದೇಶದಿಂದ ಸಂವಿಧಾನ ರಕ್ಷಕ್ ಅಭಿಯಾನವನ್ನು ಕೈಗೊಂಡಿದ್ದೇವೆ. ಈ ಕಾರ್ಯಕ್ರಮ ನಮ್ಮ ಪಕ್ಷದಿಂದ ಇಡೀ ರಾಜ್ಯದಾದ್ಯಂತ ನಡೆಯುತ್ತದೆ. ಇದಕ್ಕೆ ನಮ್ಮ ಸಹಕಾರ ಯಾವಾಗಲೂ ಇರುತ್ತದೆ ಎಂದರು. ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಮಾತನಾಡಿ, ನಮ್ಮ ಸಂವಿಧಾನವನ್ನು ಅಂಬ್ಡೇಕರ್ ಸೇರಿದಂತೆ ಎಲ್ಲ ಸದಸ್ಯರು ಅಧ್ಯಯನ ಮಾಡಿ ರಚಿಸಿದ್ದಾರೆ. ಭಾರತದ ಸಂವಿಧಾನವೇ ಶ್ರೇಷ್ಠ ಎಂದು ಜಗತ್ತಿನಲ್ಲಿಯೇ ಹೆಸರಾಗಿದೆ. ಆದರೆ ಇಂಥಹ ಸಂವಿಧಾನವನ್ನು ಈಗ ಬಿಜೆಪಿಯವರು ಅವಮಾನಮಾಡತೊಡಗಿದ್ದಾರೆ. ಸಂವಿಧಾನಕ್ಕೆ ಅವಮಾನ ಮಾಡುವವರ ವಿರುದ್ಧ ಕಾಂಗ್ರೆಸ್ ಪಕ್ಷ ಎಂದೂ ಸುಮ್ಮನಿರುವುದಿಲ್ಲ. ಹಾಗಾಗಿಯೇ ಇಂಥಹ ಅಭಿಯಾನಗಳು ನಡೆಯುತ್ತಿವೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಕೇಂದ್ರದ ಗೃಹ ಮಂತ್ರಿ ಸೇರಿದಂತೆ ಬಿಜೆಪಿ ನಾಯಕರು ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡುವುದರ ಜೊತೆಗೆ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿದ್ದಾರೆ. ಮನು ಸಂವಿಧಾನ ರಚಿಸುವ ಹುನ್ನಾರ ಸದ್ದಿಲ್ಲದೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಇದಕ್ಕೆ ಅವಕಾಶ ನೀಡುವುದಲ್ಲ ಎಂದರು.

Ambedkar Bhavan ಮನುಷ್ಯನನ್ನು ಉತ್ತಮ ಮನುಷ್ಯನನ್ನಾಗಿಸುವುದೇ ಸಂವಿಧಾನದ ಮುಖ್ಯ ಉದ್ದೇಶ ಎಂದು ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ.ಕೆ.ಜಿ. ವೆಂಕಟೇಶ್ ಹೇಳಿದರು. ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಸಂವಿಧಾನ ಎಂದು ಕೆಡುಕು ಉಂಟುಮಾಡುವುದಿಲ್ಲ. ಆದರೆ ಅದನ್ನು ಮನುಷ್ಯರಾದ ನಾವು ಗೌರವಿಸಬೇಕು. ಸ್ವಾತಂತ್ರ್ಯ ಸಮಾನತೆ ಮಾತೃತ್ವದ ಮುಖ್ಯ ತತ್ವಗಳು ಇಲ್ಲಿವೆ. ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ಡಾ.ಬಿ.ಆರ್. ಅಂಬೇಡ್ಕರ್ ಭಾರತ ದೇಶಕ್ಕೆ ಒಂದು ಉತ್ತಮ ಸಂವಿಧಾನವನ್ನು ನೀಡಿದ್ದಾರೆ. ಇದು ಮನುಷ್ಯರ ಮಾನವಿಯತೆಯನ್ನು ಪ್ರತಿಬಿಂಬಿಸುವ ಸ್ವರೂಪವು ಆಗಿದೆ ಎಂದರು.

ಸಂವಿಧಾನವನ್ನು ಸಂವಿಧಾನವೇ ರಕ್ಷಣೆ ಮಾಡಿಕೊಳ್ಳುತ್ತದೆ. ಮೂಲಭೂತ ಉದ್ದೇಶಗಳಿಗೆ ಯಾವುದೇ ಚ್ಯುತಿಯಾಗದಂತೆ ಸಂವಿಧಾನವನ್ನು ಬದಲಾವಣೆ ಮಾಡಬಹುದಾಗಿದೆ. ಸಂವಿಧಾನದ ಪೀಠಿಕೆಯಲ್ಲಿಯೇ ಅದರ ಮುಖ್ಯ ಉದ್ದೇಶಗಳನ್ನ ತಿಳಿಸಲಾಗಿದೆ. 395 ವಿಧಿಗಳಿದ್ದು ಈಗ ಅದು ತಿದ್ದುಪಡಿಯ ಮೂಲಕ 442 ವಿಧಿಗಳಾಗಿವೆ. ಆರಂಭದಲ್ಲಿ 8 ಷಡ್ಯುಲ್‍ಗಳಿದ್ದು, ಈಗ 12 ಷಡ್ಯುಲ್‍ಗಳಲಿವೆ. ಜಗತ್ತಿನಲ್ಲಿ ಅತಿ ದೊಡ್ಡ ಸಂವಿಧಾನ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಇಂತಹ ಸಂವಿಧಾನದ ರಕ್ಷಣೆಯೂ ಕೂಡ ನಮ್ಮದೇ ಅಗಿದೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ಡಾ.ಶ್ರೀನಿವಾಸ್ ಕರಿಯಣ್ಣ, ಕಲಿಂ ಪಾಶಾ, ಶಿವಕುಮಾರ್, ರವಿಕುಮಾರ್, ಎಸ್.ಪಿ.ಶೇಷಾದ್ರಿ, ಎಚ್.ಸಿ.ಯೋಗೀಶ್, ರಮೇಶ್ ಶಂಕರಘಟ್ಟ, ಸಿ.ಎಸ್.ಚಂದ್ರಭೂಪಾಲ್, ರಮೇಶ್ ಇಕ್ಕೇರಿ, ಜಿ.ಡಿ.ಮಂಜುನಾಥ್, ಉಮಾಪತಿ, ವಿಜಯಕುಮಾರ್ (ದನಿ), ನಾಗರಾಜ್ ಕಂಕಾರಿ, ಸುವರ್ಣ ನಾಗರಾಜ್, ಭಾರತಿ ರಾಮಕೃಷ್ಣ, ಹರ್ಷಿತ್ ಗೌಡ, ನಗರದ ಮಹಾದೇವಪ್ಪ, ಮಂಜುನಾಥ ಬಾಬು, ವಿಜಯಲಕ್ಷ್ಮೀ ಪಾಟೀಲ್, ಎಚ್.ಎಮ್.ಮಧು, ಶಿಜು ಪಾಶಾ, ಪದ್ಮನಾಭ ಸೇರಿದಂತೆ ಹಲವರಿದ್ದರು.

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

0

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ ಪುರ ಆಶ್ರಯ ಮನೆಗಳನ್ನು ಲಾಟರಿ ಮೂಲಕ ಫಲಾನುಭವಿಗಳಿಗೆ ಹಂಚಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ತಿಳಿಸಿದರು.

ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಗೋವಿಂದಾ ಪುರದಲ್ಲಿ ಎರಡನೇ ಹಂತದ 625 ಆಶ್ರಯ ಮನೆಗಳನ್ನು ಫಲಾನುಭವಿಗಳ ಸಮ್ಮುಖದಲ್ಲಿ ಲಾಟರಿ ಮೂಲಕ ಮನೆಯ ಕೀ ಯನ್ನು ಹಸ್ತಾಂತರಿಸಲಾಗುತ್ತದೆ ಎಂದರು.

ಆಶ್ರಯ ಸಮಿತಿ ತೀರ್ಮಾನದಂತೆ ತಾತ್ಕಾಲಿಕವಾಗಿ ನೀರಿನ ಸೌಲಭ್ಯ, ವಿದ್ಯುತ್ ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.

ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಆಗಮಿಸಲಿದ್ದಾರೆ. ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾ ನಾಯ್ಕ್ ಪಾಲ್ಗೊಳ್ಳಲಿದ್ದಾರೆ ಎಂದರು.

ಮಾ.03 ರಂದು ಅದ್ದೂರಿಯಾಗಿ ಹಂಚುವ ಯೋಜನೆ ಇತ್ತು ಆದರೆ ಫಲಾನುಭವಿಗಳ ಒತ್ತಡದ ಮೇರೆಗೆ ಫೆ.25 ರಂದು ಲಾಟರಿ ಮೂಲಕ 625 ಮನೆಗಳನ್ನು ಹಂಚಲು ಬಹಳ ಸಂತೋಷವಾಗುತ್ತಿದೆ. 2017 ರಂದು ನಮ್ಮ ಸರ್ಕಾರದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು. ಇದು ನಮ್ಮ ಸರ್ಕಾರದ ಹೋರಾಟದ ಫಲ ಎಂದು ಹೇಳಬಹುದು.

ಆ ವೇಳೆ ಇನ್ನಷ್ಟು ಮನೆಗಳನ್ನು ಹಂಚಬೇಕೆಂಬ ಬೇಡಿಕೆಯನ್ನು ಇದೆ. ಸಚಿವರು ಇನ್ನಷ್ಟು ಮನೆಗಳನ್ನು ಹಂಚುತ್ತಾರೆಂಬ ನಂಬಿಕೆ ಇದೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಫೆ.25 ರ ಮಂಗಳವಾರದಂದು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಶಿವಮೊಗ್ಗ ಆಗಮಿಸಲಿದ್ದಾರೆ. ಆಶ್ರಯ ಮನೆಗಳ ಇನ್ನುಳಿದ ವ್ಯವಸ್ಥೆಯನ್ನು ವೇಗವಾಗಿ ಮಾಡಲಾಗುವುದು. ಇದಕ್ಕೆ ಬೇಕಾದ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡುವ ಕೆಲಸ ಆಗಲಿ, ಗೋಪಿಶೆಟ್ಟಿಕೊಪ್ಪದಲ್ಲಿ ಮನೆ ನಿರ್ಮಾಣವಾಗಬೇಕು. ಮನೆ ಮಾತ್ರವಲ್ಲದೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯ ಮಾಡಿದರು.

3000 ಮನೆಗಳನ್ನು ಕಟ್ಟಬೇಕು ಎಂದು ಇತ್ತು. ಸುಮಾರು 600 ಮನೆ ಹಿಂದೆ ನೀಡಲಾಗಿತ್ತು, ಈಗ 625 ಮನೆ ನೀಡಲಾಗುತ್ತಿದೆ. ಜನರಿಗೆ ಬೇಕಾದ ಅಗತ್ಯ ಸೌಲಭ್ಯಗಳಾದ ಬಸ್ಸಿನ ಸೌಲಭ್ಯ, ಆಸ್ಪತ್ರೆ ಸೌಲಭ್ಯ, ಶಾಲೆಯ ಸೌಲಭ್ಯ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯ ಮಾಡಲಾಗುತ್ತದೆ ಎಂದರು.

ಸಮಿತಿ ವತಿಯಿಂದ ಹೋಗಿ ಸ್ಥಳದ ಪರಿಸ್ಥಿತಿಯ ತನಿಖೆ ಮಾಡಲಾಗಿದೆ. ಆಗುವ ಕೆಲಸವನ್ನು ವೇಗವಾಗಿ ಮಾಡಲು ಕಾರ್ಪೋರೇಶನ್ ಗೆ ತಿಳಿಸಲಾಗಿದೆ. ಶಾಸಕರೂ ಸಹ 2-3 ಬಾರಿ ಸದನದಲ್ಲಿ ಚರ್ಚಿಸಿ ವೇಗವಾಗಿ ಆಗುವಂತೆ ಮಾಡಿದ್ದಾರೆ. ಅವರು ಕಂಡ ಕನಸು ನನಸು ಆಗುವ ಸಂದರ್ಭ ಇದಾಗಿದ್ದು, ಹಬ್ಬದ ರೀತಿ ಆಚರಿಸಲಾಗುವುದು ಎಂದರು.

ಗುತ್ತಿಗೆ ದಾರರು ಬೇಗ ಮನೆಯನ್ನು ಪೂರ್ಣ ಗೊಳಿಸಿಕೊಡಬೇಕೆಂಬುದು ನಮ್ಮ ಕೋರಿಕೆ. 2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 3000 ಮನೆಗಳನ್ನು ಕಟ್ಟಲು ಆದೇಶಿಸಿದ್ದರು. ಆದರೆ ಮಧ್ಯದಲ್ಲಿ ಬಂದ ಸರ್ಕಾರಗಳು ಇದರ ಬಗ್ಗೆ ಹೆಚ್ಚಿನ ಗಮನ ವಹಿಸಲಿಲ್ಲ. ಬರಿ ಮನೆ ಕೊಡುವುದಷ್ಟೇ ಅಲ್ಲದೆ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಕೋರಿದ್ದೇವೆ.
ಕುಟುಂಬದೊಂದಿಗೆ ಫಲಾನುಭವಿಗಳು ಈ ಕಾರ್ಯಕ್ರಮಕ್ಕೆ ಭಾಗವಹಿಸಬೇಕು. ಫಲಾನುಭವಿಗಳಿಗೆ ಅಂದು ಕಾರ್ಯಕ್ರಮಕ್ಕೆ ಆಗಮಿಸಲು ಕಾರ್ಪೋರೇಶನ್ ವತಿಯಿಂದ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೀಗದ ಕೀಯೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಅಂದು ನೀಡಲಾಗುವುದು.
ನೀರಿನ ವ್ಯವಸ್ಥೆಯನ್ನು ಈಗ ತಾತ್ಕಾಲಿಕವಾಗಿ ಮಾಡಿದ್ದೇವೆ. ಜೂನ್ ತಿಂಗಳಲ್ಲಿ ಅದರ ಕಾಮಗಾರಿಯನ್ನು ಪೂರ್ಣ ಗೊಳಿಸುತ್ತೇವೆ ಎಂದರು.

ಹೆಚ್.ಸಿ.ಯೋಗೀಶ್ ಮಾತನಾಡಿ, ಮನೆಕಟ್ಟಿ ನೋದು ಮದುವೆ ಮಾಡಿ ನೋಡು ಎನ್ನುವಂತೆ ಜಿ+20 ಮಾದರಿಯಲ್ಲಿ ಮಾಡಲಾಗಿದೆ. ಬೊಮ್ಮನ ಕಟ್ಟೆಯಲ್ಲಿ ಸಹ ನಮ್ಮ ಸರ್ಕಾರದಿಂದ ಮನೆಗಳನ್ನು ನೀಡಿದ್ದೇವೆ. ಮತ್ತೊಮ್ಮೆ ಸಿದ್ದರಾಮಯ್ಯರವರು ಅಧಿಕಾರಕ್ಕೆ ಬಂದಾಗ ಮನೆಯನ್ನು ನೀಡುತ್ತಿದ್ದಾರೆ. ಫಲಾನುಭವಿಗಳಿಗೆ ಮನೆಯನ್ನು ಕೊಡುವ ಸುವರ್ಣ ಅವಕಾಶ ನಮಗೆ ದೊರೆತಿದೆ ಎಂದರು.

ಫಲಾನುಭವಿಗಳಿಗೆ ಮಹಾನಗರ ಪಾಲಿಕೆಯಿಂದ ಬಸ್ಸಿನ ವ್ಯವಸ್ಥೆಯನ್ನು ಮಾಡಿದ್ದೇವೆ. ಮನೆಗಳ ಸಂಖ್ಯೆಯನ್ನು ಲಾಟರಿ ಮುಖಾಂತರ ಎತ್ತುವ ಉದ್ದೇಶವಿದೆ. ಫಲಾನುಭವಿಗಳ ನಡುವೆ ಫಸ್ಟ್ ಫ್ಲೋರ್ 2 ಫ್ಲೋರ್ ಮನೆ ಬೇಕೆಂಬ ಗೊಂದಲ ಸೃಷ್ಟಿಯಾಗಬಾರದೆಂದು ಲಾಟರಿ ಮೂಲಕ ಎತ್ತುವ ಉದ್ದೇಶ ಇದೆ ಎಂದರು.

3 ಕಿಮೀ ಕಾಮಗಾರಿ ಮುಗಿದ ನಂತರ ನೀರಿನ ವ್ಯವಸ್ಥೆ ಆಗುತ್ತದೆ. ಫಲಾನುಭವಿಗಳು ಕುಟುಂಬ ಸಮೇತರಾಗಿ ಆಗಮಿಸಬೇಕು. ಊಟದ ವ್ಯವಸ್ಥೆಯನ್ನು ಕೂಡಾ ಕಾರ್ಪೋರೇಶನ್ ವತಿಯಿಂದ ಮಾಡಲಾಗಿದೆ. ಸರ್ಕಾರಿ ಬಸ್ಸಿನ ವ್ಯವಸ್ಥೆಗೆ ಮನವಿ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಲೀಮ್ ಪಾಷಾ, ಶಿವಕುಮಾರ್, ಲಕ್ಷ್ಮಣ್, ಮುಹಿ ಪಾಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

B.Y.Vijayendra ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಖಂಡನೀಯ: ಬಿ.ವೈ.ವಿಜಯೇಂದ್ರ

0

B.Y.Vijayendra ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ, ಗಡಿ ಸೌಹಾರ್ದತೆಯೂ ಇಮ್ಮಡಿಸುತ್ತಿದೆ. ಈ ನಡುವೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ.

B.Y.Vijayendra ಮರಾಠಿ ಭಾಷೆಯ ಹೆಸರಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ವಾಹಕರ ಮೇಲೆ ಹಲ್ಲೆ ನಡೆದಿರುವ ಘಟನೆ ಭಾಷಾ ದೌರ್ಜನ್ಯದ ಪರಮಾವಧಿಯಾಗಿದೆ. ನಾಗರಿಕ ಸಮಾಜ ತಲೆತಗ್ಗಿಸುವ ಈ ದುರ್ವರ್ತನೆಯನ್ನು ಸಹಿಕೊಳ್ಳುವ ಪ್ರಶ್ನೆಯೇ ಇಲ್ಲ. ದುಷ್ಕರ್ಮಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ಮರಾಠಿ-ಕನ್ನಡದ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಕನ್ನಡ ವಿರೋಧಿ ಮನಸ್ಥಿತಿಯ ದುರಾಕ್ರಮಣಗಳು ಪುನರಾವರ್ತನೆಯಾಗದ ರೀತಿಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮವಹಿಸಲಿ ಎಂದು ಒತ್ತಾಯಿಸುತ್ತೇನೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ‌ತಾಕೀತು ಮಾಡಿದ್ದಾರೆ.

Madhu Bangarappa ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗ ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಈ ಸಮಸ್ಯೆಯಿಂದ ಪಾರಾಗಲು ರೈತರಿಗೆ ಇರಬಹುದಾದ ಸಾಧ್ಯತೆಗಳ ಬಗ್ಗೆ ಪ್ರಥಮ ಹಂತದ ಮಾಹಿತಿ ಕಾರ್ಯಾಗಾರಗಳನ್ನು ಆಯೋಜಿಸುವಂತೆ ಸಚಿವರು ಸೂಚಿಸಿದರು.

ಮಲೆನಾಡು ಸೇರಿದಂತೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ನೂತನ ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಗೆ ಸಂಭಂದಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಕ್ರಿಯಾಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಸರ್ಕಾರದಿಂದ ಹೆಚ್ಚಿನ ಅನುದಾನ ತರಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದವರು ನುಡಿದರು.

ಈ ವಿಷಯಕ್ಕೆ ಸಂಭಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಸಚಿವರ ಉಪಸ್ಥಿತಿಯಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ಶೀಘ್ರದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಳೆದ ಶೈಕ್ಷಣಿಕ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಸರ್ಕಾರಿ ಕಟ್ಟಡಗಳು, ಶಿಥಿಲಗೊಂಡ ಶಾಲೆಗಳ ವಿವರಗಳನ್ನು ನೀಡುವಂತೆ ಸೂಚಿಸಿದ ಅವರು, ಈಗಾಗಲೇ ಕೈಗೆತ್ತಿಕೊಂಡಿರುವ ರಸ್ತೆ, ಸೇತುವೆ, ಕಾಲುವೆ ಮತ್ತಿತರ ಕಟ್ಟಡಗಳ ಕಾಮಗಾರಿಯನ್ನು ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

Madhu Bangarappa ಗ್ರಾಮೀಣ ಜನರಿಗೆ ಉತ್ತಮ ಸಂಪರ್ಕ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 400ಕಾಲುಸಂಕಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆ ಪೈಕಿ ಈಗಾಗಲೇ 150 ಕಾಲುಸಂಕಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಕಿ ಇರುವೆಡೆಗಳಲ್ಲಿ ಆದ್ಯತೆಯ ಮೇಲೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಅಲ್ಲದೆ ಜಿಲ್ಲೆಯಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಗ್ರಾಮದ ನಿವಾಸಿಗಳಿಗೆ ಮೊಬೈಲ್ ಸಂಪರ್ಕ ಸೌಲಭ್ಯ ಕಲ್ಪಿಸಿಕೊಡಲು ನಿರ್ಮಿಸಲಾಗುತ್ತಿರುವ ಟವರ್ ಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಈ ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕಾಗಿ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಇಟ್ಟುಕೊಳ್ಳುವಂತೆ ಅವರು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ ಬಾನು, ರಾಜ್ಯ ಬೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಸಿ. ಸಿ. ಎಫ್. ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.