Wednesday, March 11, 2026
Wednesday, March 11, 2026
Home Blog Page 405

Madhu Bangarappa ಕೃಷಿ ಚಟುವಟಿಕೆಗೆ ವಿದ್ಯುತ್ ವ್ಯತ್ಯಯ ವಾಗದಂತೆ ನೋಡಿಕೊಳ್ಳಿ : ಸಚಿವ ಎಸ್. ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.

ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.

ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು ಅಳವಡಿಸಬೇಕು. ಅದಕ್ಕಾಗಿ ತಾವು ತಮ್ಮ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯ ಪ್ರತಿಯನ್ನು ಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಸಮಸ್ಯೆಯ ಇತ್ಯರ್ಥಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸುವಂತೆಯೂ ಸೂಚಿಸಿದ ಅವರು ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಮೆಸ್ಕಾಂನ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು ಎಂದರು.

Madhu Bangarappa ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳಲ್ಲಿ ಚಾನಲ್ ಗಳ ಒಣ ಭೂಮಿ ಹಾಗೂ ಕೊನೆಯ ಗ್ರಾಮಗಳಿಗೆ ಸಕಾಲದಲ್ಲಿ ನೀರು ಪೂರೈಸಿದ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಿದಲ್ಲಿ ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗಲಿದೆ. ಇದರಿಂದಾಗಿ ಜನರ ನೀರಿನ ದಾಹ ಇಂಗಿಸಿದಂತಾಗಲಿದೆ ಎಂದ ಅವರು ಮಳೆಗಾಲದಲ್ಲಿ ಮಳೆ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡದಂತೆ ಕೆರೆಗಳನ್ನು ತುಂಬಿಸುವ ಮೂಲಕ ಸದ್ಭಾಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಚಾನಲ್ ಗಳ ದುರಸ್ತಿ, ಹೂಳು ತೆಗೆಯುವ ಕಾರ್ಯಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು.

ತಾಲೂಕಿನಲ್ಲಿ ಜಾಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಈಗಾಗಲೇ ಕೈಗೊಂಡಿರುವ ಯೋಜನೆಗಳ ಅನುಸ್ತಾನದಲ್ಲಿ ಅತೀವ ವಿಳಂಬವಾಗುತ್ತಿರುವುದು ಬೇಸರ ತಂದಿದೆ ಎಂದ ಅವರು ಸ್ಥಳೀಯವಾಗಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಂಡು ಕಾಮಗಾರಿಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

University of Agricultural & Horticultural Sciences ಜೇನು ಸಾಕಾಣಿಕೆ ತಂತ್ರಜ್ಞಾನದಿಂದ ರೈತರ ಸಬಲೀಕರಣ : ಡಾ.ಆರ್.ಸಿ.ಜಗದೀಶ

0

University of Agricultural & Horticultural Sciences ಜೇನು ಸಾಕಾಣಿಕೆ ತಂತ್ರಜ್ಞಾನದಿಂದ ರೈತರ ಸಬಲೀಕರಣ ಸಾಧ್ಯವಾಗಿದ್ದು ಜೇನು ಸಾಕಾಣಿಕೆ ತರಬೇತಿಯ ಸದುಪಯೋಗವನ್ನು ರೈತರು ಪಡೆಯಬೇಕೆಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್. ಸಿ. ಜಗದೀಶ ಹೇಳಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ, ಪಿ.ಎಂ.ಇ. ಘಟಕ, ರೈv ತರಬೇತಿ ಸಂಸ್ಥೆ ಹಾಗೂ ತಾಲ್ಲೂಕು ಪಂಚಾಯತಿ, ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ಐ.ಸಿ.ಎ.ಆರ್. ಟಿ.ಎಸ್.ಪಿ. ಯೋಜನೆ “ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಜೇನುಸಾಕಾಣೆ ಯತಂತ್ರಗಳೊAದಿಗೆ ಪರಿಶಿಷ್ಟ ಪಂಗಡಗಳ ಸಬಲೀಕರಣ” ಅಡಿಯಲ್ಲಿ ದಿನಾಂಕ ; 01-02-2025 ರಿಂದ 03-02-2025ರ ವರೆಗೆ ವಿಶ್ವವಿದ್ಯಾಲಯದ ಶರಾವತಿ ಆಡಳಿತ ಭವನದಲ್ಲಿ ಪರಿಶಿಷ್ಟ ಪಂಗಡದ ರೈತರಿಗೆ ಏರ್ಪಡಿಸಲಾಗಿರುವ “ಜೇನು ಸಾಕಾಣಿಕೆ ತರಬೇತಿ”ಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಸಿ ಅವರು ಮಾತನಾಡಿದರು.
ರೈತರಿಗೆ ಮುಕ್ತವಾಗಿರುವ ಈ ವಿಶ್ವವಿದ್ಯಾಲಯದಲ್ಲಿ ನಡೆಯುವ ಹಲವಾರು ತರಬೇತಿಗಳಲ್ಲಿ ರೈತರು ಭಾಗವಹಿಸಬೇಕೆಂದು ಕರೆ ನೀಡಿದರು. ಶಿಬಿರಾರ್ಥಿಗಳಿಗೆ ಜೇನುಸಾಕಣೆಯನ್ನು ಆಸಕ್ತಿಯಿಂದ ಮಾಡಲು ಸಲಹೆ ನೀಡಿ, ಹೆಚ್ಚು ಹೆಚ್ಚು ಜೇನುತುಪ್ಪ ಉತ್ಪಾದಿಸಲು ಸಲಹೆ ನೀಡಿದರು ಹಾಗೂ ಉತ್ಪಾದಿಸಿದ ಹೆಚ್ಚುವರಿ ಜೇನುತುಪ್ಪವನ್ನು ವಿಶ್ವವಿದ್ಯಾಲಯವೇ ಖರೀದಿಸುವುದಾಗಿ ಭರವಸೆ ನೀಡಿದರು. ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರದೊಂದಿಗೆ ಜೇನುಸಾಕಾಣಿಕೆಗೆ ಬೇಕಾದ ಪರಿಕರಗಳನ್ನುವಿ ತರಣೆಮಾಡಿದರು.

University of Agricultural & Horticultural Sciences ಮುಖ್ಯಅಥಿತಿಗಳಾದ ಸಂಶೋಧನಾ ನಿರ್ದೇಶಕ ಡಾ. ಬಿ. ಎಂ. ದುಷ್ಯಂತಕುಮಾ‌ರ್ ಮಾತನಾಡಿ, ಸ್ವಾವಲಂಬಿ ಜೀವನಕ್ಕೆ ದಾರಿಯಾಗಿರುವ ಈ ತರಬೇತಿಯ ಸಂಪೂರ್ಣ ಪ್ರಯೋಜನವನ್ನು ಶಿಬಿರಾರ್ಥಿಗಳು ಪಡೆದುಕೊಳ್ಳಬೇಕೆಂದು ಹಾರೈಸಿದರು. ವಿದ್ಯಾರ್ಥಿ ಕಲ್ಯಾಣ ನಿರ್ದೇಶಕ ಡಾ. ನಾರಾಯಣಎಸ್. ಮಾವರಕರ್, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. ನೋಡಲ್‌ ಅಧಿಕಾರಿ ಹಾಗೂ ಪ್ರಧಾನ ಪರಿಶೋಧಕರಾದ ಡಾ.ಜಯಲಕ್ಷ್ಮೀ ನಾರಾಯಣ ಹೆಗಡೆ, ಮೂರು ದಿನಗಳ ಕಾಲ ನಡೆದ ತರಬೇತಿಯ ಕುರಿತುವಿವರಣೆ ನೀಡಿದರು. ಸಹಾಯಕ ಪ್ರಾಧ್ಯಾಪಕ (ಕೃಷಿಕೀಟಶಾಸ್ತ್ರ) ಡಾ. ಕೃಷ್ಣ ರೆಡ್ಡಿ ಪಿ., ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶ್ರೀವಿಷ್ಟೇಶ ತಲಕಾಲಕೊಪ್ಪ, ಡಾ. ದರ್ಶನ್ ಆರ್, ಶ್ರೀಸುಧೀ‌ರ್, ಶ್ರೀಮನೋಹರ ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲೆಯ ಸುತ್ತಮುತ್ತಲಿನ ಹಳ್ಳಿಯ ಪರಿಶಿಷ್ಟ ಪಂಗಡಗಳ 30 ರೈತ ಮಹಿಳೆಯರು/ರೈತರು/ಯುವಕ/ಯುವತಿಯರು ಈ ತರಬೇತಿಯಲ್ಲಿಭಾಗವಹಿಸಿದ್ದರು.

Madhu Bangarappa ಶಿಕಾರಿಪುರ ಕಚೇರಿ ಸಭಾಂಗಣದಲ್ಲಿ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆ

0

Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.

ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

Madhu Bangarappa ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.

Madhu Bangarappa ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ : ಮಧು ಬಂಗಾರಪ್ಪ

0

Madhu Bangarappa ಗ್ರಾಮೀಣ ಪ್ರದೇಶಗಳಲ್ಲಿನ ರೈತರು ತಮ್ಮ ಚಟುವಟಿಕೆಗಳಿಗಾಗಿ ಕೆರೆಗಳಿಂದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಲ್ಲಿ ಕಂದಾಯ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಹಾಗೂ ಯಾವುದೇ ಧನ ಭರಿಸದೆ ಮಣ್ಣನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದಲ್ಲಿ ನಿಯಮಾನುಸಾರ ಕಠಿಣ ಕಾನೂನು ಕ್ರಮಗಳನ್ನು ಅನುಸರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಪರೀಕ್ಷೆಗಳನ್ನು ನಿಯಮಾನಸಾರ ಕಟ್ನೆಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನು ತಿರಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು.

Madhu Bangarappa ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್, ಜಿಲ್ಲಾ ಆರೋಗ್ಯ ಮತ್ತು hಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಸಚಿವರು ಸಾರ್ವಜನಿಕರಿಂದ ಅಹ್ ಅಹವಾಲುಗಳನ್ನು ಸ್ವೀಕರಿಸಿದರು

Sahyadri Arts College ಶಿವಮೊಗ್ಗದ ಸ್ಥಳೀಯ ಸಂಸ್ಥೆಗಳಲ್ಲಿ ಕಲಿಕೆ ಕಾರ್ಯಕ್ರಮ

0

Sahyadri Arts College ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮೈಭಾರತ್, ಮಹಾನಗರ ಪಾಲಿಕೆಜಿಲ್ಲಾ ನಗರಾಭಿವೃದ್ಧಿ ಕೋಶ, ನೆಹರು ಯುವ ಕೇಂದ್ರ ಹಾಗೂ ಸಹ್ಯಾದ್ರಿ ಕಲಾ ಕಾಲೇಜು, ಸಮಾಜಕಾರ್ಯ ವಿಭಾಗ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಪಾಲಿಕೆಯಲ್ಲಿ ಹಮ್ಮಿಕೊಳ್ಳಲಾಗಿರುವ ಸಮುದಾಯಕ್ಕೆ ಪ್ರಾಮುಖ್ಯತೆಯಿರುವ ಅನೇಕ ಕ್ಷೇತ್ರಗಳಲ್ಲಿ ಯುವಜನರಿಗೆ ಸ್ವಯಂಸೇವಕ ಅವಕಾಶಗಳಿಗಾಗಿ 15 ದಿನಗಳ ಕಾಲ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾಯೋಗಿಕ ಕಲಿಕೆ ಕಾರ್ಯಕ್ರಮಕ್ಕೆ ಪಾಲಿಕೆಯ ಆಯುಕ್ತರಾದ ಡಾ.ಕವಿತ ಯೋಗಪ್ಪನವರ್ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಕ್ರಮ ನಿರ್ದೇಶಕರಾದ ರಂಗಸ್ವಾಮಿ.ಕೆ ರವರು ಯುವಜನರಿಗೆ ಮೈಭಾರತ್ ಕಿಟ್‌ನ್ನು ನೀಡುವುದರ ಮೂಲಕ ಚಾಲನೆ ನೀಡಿದರು.

ಕಲಿಕೆ ಕಾರ್ಯಕ್ರದಲ್ಲಿ ನಗರಾಭಿವೃದ್ಧಿ ಕೋಶದ ಪ್ರಸಾದ್ ಮಾತನಾಡಿ, ಪುರಸಭೆಯ ಆಡಳಿತ ಕಾರ್ಯಗಳಾದ ಪುರಸಭೆಗಳ ರಚನೆ, ಅದರ ಪಾತ್ರಗಳು ಮತ್ತು ಜವಾಬ್ದಾರಿಗಳು, ಕೌನ್ಸಿಲ್ ಸಂಸ್ಥೆಗಳು, ಆರ್.ಟಿ.ಐ ಬಗ್ಗೆ ಸಂಬಂಧಿಸಿದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು.

Sahyadri Arts College ಪ್ರಾಯೋಗಿಕ ಕಲಿಕೆ ಕಾರ್ಯಕ್ರಮದ ಮುಂದಿನ ದಿನಗಳಲ್ಲಿ ಯುವ ಜನರಿಗೆ ವಿವಿಧ ಸಂಸ್ಥೆಗಳಿಗೆ ಸಂಬಂಧಿಸಿದಂತೆ, ಆದಾಯ ತೆರಿಗೆ ಇಲಾಖೆಗೆ ಸಂಬಂಧಿಸಿದ ಅಂಶಗಳಾದ ಖಾತಾ ಸಂಬಂಧಿತ, ತೆರಿಗೆ, ಅನುಮತಿ ಮತ್ತು ಕಾರ್ಯವಿಧಾನ, ನೀರಿನ ನಿರ್ವಹಣೆ, ಘನ ತ್ಯಾಜ್ಯ ನಿರ್ವಹಣೆ, ಕಲ್ಯಾಣ ಯೋಜನೆಗಳು ಮತ್ತು ಕಾರ್ಯಕ್ರಮಗಳು ವಸತಿ ಯೋಜನೆಗಳು ಮತ್ತು ಕಾರ್ಯಕ್ರಮಗಳು, ಲೆಕ್ಕ ಪರಿಶೋಧನೆಗೆ ಸಂಬಂಧಿಸಿದ ಮಾಹಿತಿಗಳು, ಜಿಎಸ್‌ಟಿ ಮುಂತಾದ ವಿಷಯಗಳ ಬಗ್ಗೆ, ಮಾಹಿತಿ ತಂತ್ರಜ್ಞಾನದ ಬಗ್ಗೆ ಇನ್ನು ಹಲವಾರು ವಿಷಯಗಳ ಕುರಿತಾದ ಮಾಹಿತಿ ನೀಡಲಾಗುವುದು ಎಂದರು.

ನೆಹರು ಯುವ ಕೇಂದ್ರದ ಯುವ ಅಧಿಕಾರಿ ಉಲ್ಲಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಐ.ಟಿ ನೋಡಲ್ ಅಧಿಕಾರಿ ಸುದೀಪ್ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಉಪನ್ಯಾಸಕರಾದ ಗೌರಿಶಂಕರ್ ರವರು ಉಪಸ್ಥಿತರಿದ್ದರು.

District Health and Family Welfare Department ಮೆದುಳು ಜ್ವರದ ಕುರಿತು ವೈದ್ಯರಿಗೆ ತರಬೇತಿ ಅಗತ್ಯ : ಡಾ. ನಟರಾಜ್

0

District Health and Family Welfare Department ಮೆದುಳು ಜ್ವರಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಈ ರೋಗ ತಗುಲಿದ ಶೇ.30 ರಿಂದ 50 ರಷ್ಟು ಮಕ್ಕಳು ಮರಣ ಹೊಂದುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಡಿಹೆಚ್‌ಓ ಡಾ.ನಟರಾಜ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯತ್ರಂಣ ಕಾರ್ಯಕ್ರಮ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಂಭಾಗಣದಲ್ಲಿ ವೈದ್ಯರುಗಳಿಗೆ ಏರ್ಪಡಿಸಲಾಗಿದ್ದ ಮೆದುಳು ಜ್ವರ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮೆದುಳು ಜ್ವರು ವೈರಾಣುವಿನಿಂದ ಉಂಟಾಗುವ ರೋಗ. ಈ ರೋಗವು ಸೋಂಕಿರುವ ಹಂದಿಗಳು, ಹಂಸ ಪಕ್ಷಿಗಳಿಂದ ಕ್ಯುಲೆಕ್ಸ್ ಜಾತಿಯ ಸೊಳ್ಳೆಗಳ ಮೂಲಕ ಹರಡುತ್ತದೆ. ಮಾನವನಿಗೆ ಇದು ಆಕಸ್ಮಿಕವಾಗಿ ತಗಲುತ್ತದೆ. ಈ ರೋಗಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಮುನ್ನೆಚ್ಚರಿಕೆ ಕ್ರಮಗಳಿಂದ ಈ ರೋಗವನ್ನು ನಿಯಂತ್ರಿಸಬಹುದು. ಆದ್ದರಿಂದ ಎಲ್ಲರೂ ಮುನ್ನಚ್ಚರಿಕೆ ವಹಿಸಬೇಕೆಂದರು.

District Health and Family Welfare Department,ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಗುಡದಪ್ಪ ಕಸಬಿ ಮಾತನಾಡಿ, ನಮ್ಮ ದೇಶದಲ್ಲಿ ಈ ಮೆದಳು ಜ್ವರ ಸಂಕ್ರಾಮಿಕ ರೋಗವು 2005 ರಲ್ಲಿ ಉತ್ತರಪ್ರದೇಶದಲ್ಲಿ ಮೊದಲ ಬಾರಿಗೆ ಕಂಡು ಬಂದಿತು.ಪ್ರತಿ ವರ್ಷ ವಿಶ್ವದಲ್ಲಿ ಐವತ್ತು ಸಾವಿರ ಮೆದುಳು ಜ್ವರದ ಪ್ರಕರಣಗಳು ಕಂಡು ಬರುತ್ತವೆ. ಅದರಲ್ಲಿ ಹತ್ತು ಸಾವಿರ ಸಾವು ಸಂಭವಿಸುತ್ತದೆ. ಹದಿನೈದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಶೇ.85 ರಷ್ಟು ಮೆದುಳು ಜ್ವರದ ಪ್ರಕರಣಗಳು ಕಂಡು ಬರುತ್ತಿವೆ.
ಜ್ವರ, ತಲೆನೋವು, ಕತ್ತಿನ ಬಿಗಿತ, ತಲೆ ಸುತ್ತುವಿಕೆ, ಮೈ ನಡುಕ, ಎಚ್ಚರ ತಪ್ಪುವುದು ಮೆದುಳು ಜ್ವರದ ಲಕ್ಷಣಗಳಾಗಿದ್ದು, ಖಾಯಿಲೆಯು ಉಲ್ಬಣಗೊಂಡಾಗ ಮೆದುಳು ಊತಗೊಂಡು ಸಾವು ಸಂಭವಿಸಬಹುದು. ಆದ್ದರಿಂದ ಮುನ್ನೆಚ್ಚರಿಕೆ ಕ್ರಮಗಳಾದ ಮಕ್ಕಳಿಗೆ ಮೆದುಳು ಜ್ವರ ವಿರುದ್ದದ ಲಸಿಕೆ ಕೊಡಿಸುವುದು. ಹಂದಿಗಳನ್ನು ಜನರ ವಾಸಸ್ಥಳದಿಂದ ಕನಷ್ಟ ಪಕ್ಷ 3 ಕಿ.ಮೀ ದೂರಕ್ಕೆ ಸ್ಥಳಾಂತರಿಸುವುದು. ಸಂಜೆ ವೇಳೆಯಲ್ಲಿ ಮೈ ತುಂಬಾ ಬಟ್ಟೆ ಧರಿಸಿ ಓಡಾಡುವುದು, ಹಂದಿ ಗೂಡುಗಳಿಗೆ ಸೊಳ್ಳೆ ನಿರೋಧಕ ಜಾಲರಿ ಅಳವಡಿಸುವುದು ಮತ್ತು ಕೀಟ ನಾಶಕ ಸಿಂಪಡಿಸುವುದು, ರೋಗ ಲಕ್ಷಣ ಕಂಡು ಬಂದ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಬೇಕೆಂದರು.
ವೈದ್ಯರುಗಳಾದ ಡಾ. ಪೃಥ್ವಿ ಮಾತನಾಡಿ, ಡಾ. ಶಶಿಕಾಂತ್, ಡಾ. ಪಿ.ಕೆ. ಪೈರವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಮೆದುಳು ಜ್ವರದ ಲಕ್ಷಣಗಳು, ರೋಗ ನಿಯಂತ್ರಣ ಮತ್ತು ಮುನ್ನೆಚ್ಚರಿಕೆ ಕ್ರಮ ಹಾಗೂ ಚಿಕಿತ್ಸೆ ಕುರಿತು ತಿಳಿಸಿದರು.

Keladi Shivappa Nayaka Agriculture and Horticulture University ಕೃಷಿ ವಿವಿಯಲ್ಲಿ ಬೇಕರಿ ಉತ್ಪನ್ನಗಳ ಕುರಿತು ತರಬೇತಿ ಕಾರ್ಯಗಾರ

0

Keladi Shivappa Nayaka Agriculture and Horticulture University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:14/02/2025 ರಿಂದ ದಿ:15/03/2025 ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ.

ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ್ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡೋನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು.

Keladi Shivappa Nayaka Agriculture and Horticulture University ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ದಿ:12/02/2025 ರೊಳಗಾಗಿ ಡಾ. ಜಯಶ್ರೀ ಎಸ್.-9449187763, ಜಯಶಂಕರ-9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳುವುದು. ತರಬೇತಿ ಶುಲ್ಕ ರೂ. 4500/- ಆಗಿರುತ್ತದೆ ಎಂದು ತಿಳಿಸಿದೆ.

Canara Bank Rural Self Employment Training Institute ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

0
Canara Bank Rural Self Employment Training Institute 

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ೧೮ ರಿಂದ ೪೫ ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು ೮ನೇ ತರಗತಿ ಉತ್ತೀರ್ಣರಾಗಿರಬೇಕು.

ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Canara Bank Rural Self Employment Training Institute ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ ತರಬೇತಿಗಳು
ಕ್ರ ಸ ತರಬೇತಿಗಳು ಅವದಿ ಪ್ರಾರಂಬ ದಿನಾಂಕ
೧ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ೩೦ ದಿನಗಳು ೧೩/೦೨/೨೦೨೫
ತರಬೇತಿಯು ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. ೯೭೪೩೪೨೯೫೯೫, ೯೧೬೪೪೧೧೫೮೦, ೮೭೨೨೩೮೪೫೪೧, ೮೧೦೫೩೭೮೭೩೫ ೯೪೪೯೩೭೧೫೭೯, ೯೪೮೧೯೫೫೭೨೧,

Adhichunchanagiri Mahasamsthana Math ಮಕ್ಕಳೇ,ಕಲಿಯಿರಿ.ಚೆನ್ನಾಗಿ ಓದಿ. ಸೋಮಾರಿತನ ಬಿಡಿ.ಸಂಸ್ಕೃತಿ ಅರಿವು ನಿಮಗಿರಲಿ- ಶ್ರೀಪ್ರಸನ್ನನಾಥಶ್ರೀ

0

Adhichunchanagiri Mahasamsthana Math ಶಿವಮೊಗ್ಗ ಸಂಸ್ಕೃತಿ ಹಾಗೂ ಕಲೆಗಳ ತವರೂರು ಇಂತಹ ತವರೂರಿನಲ್ಲಿ ಜನಿಸಿದ ನಾವು ಪುಣ್ಯವಂತರು. ಈ ತಾಯಿಯ ಅಂಗಳದಲ್ಲಿ ನಾವುಗಳು ಕೇವಲ ಅಂಕಗಳಿಗೋಸ್ಕರ ಓದುವುದು ಬೇಡ, ಅದರ ಜೊತೆಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವನ್ನು ಹೊಂದುವುದು ಮುಖ್ಯ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದರು.
ಅವರು ಶಿವಮೊಗ್ಗ ಗುರುಪುರ ಹೊರ ವಲಯದ ಬಿಜಿಎಸ್ ಶಾಲಾ-ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡುತ್ತಾ, ನಮಗೆ ನಮ್ಮ ಗುರುಗಳು ಯಾವತ್ತೂ ಭಿಕ್ಷೆ ಎತ್ತುವುದನ್ನು ಬಿಡಬೇಡಿ ಜನಸೇವೆಗೆ ಅದರಿಂದ ಸಹಾಯ ಮಾಡಿ ಉಳ್ಳವರ ಕೈಯಿಂದ ಪಡೆದು ಅಶಕ್ತರ, ದುಬ್ಬಲರ ಬದುಕಿಗೆ ದಾರಿ ದೀಪವಾಗುವಂತಹ ಕೆಲಸವನ್ನು ಮಾಡಿ,ಈ ಹಿನ್ನೆಲೆಯಲ್ಲಿ ಜ್ಞಾನದಾಸೋಹ, ಅನ್ನದಾಸೋಹವನ್ನ ಮಕ್ಕಳಿಗೆ ಹಾಗೂ ಜನರಿಗೆ ನೀಡುವ ಮೂಲಕ ಸಮಾಜದ ಒಳಿತಿಗೆ,ಸಂಸ್ಕೃತಿಯ ಒಳಿತಿಗೆ ಕೆಲಸ ಮಾಡಲು ನಿರ್ಧರಿಸಿ, ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಹತ್ತಾರು ಮಹತ್ತರ ಸಾಮಾಜಿಕ ಕಾರ್ಯಕ್ರಮಗಳನ್ನ ನಡೆಸುತ್ತಾ ಬಂದಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಅಡಿಯಲ್ಲಿ ಅಂದರ, ಕಿವುಡರ ಬದುಕಿಗೆ ದಾರಿದೀಪವಾಗುವಂತಹ ಶಾಲೆಗಳನ್ನು ತೆರೆದಿದೆ. ವೃದ್ಯಾಪ್ಯದಲ್ಲಿ ಅವರನ್ನು ಅನಾಥರನ್ನಾಗಿಸುವ ಮಕ್ಕಳ ಸ್ಥಿತಿಯನ್ನು ಅವಲೋಕಿಸಿದಾಗ ನಿಜಕ್ಕೂ ಬೇಸರವಾಗುತ್ತದೆ.ಈ ಹಿನ್ನೆಲೆಯಲ್ಲಿ ನಾವು ಗುರು ಹಿರಿಯರನ್ನ ಪೂಜ್ಯ ತಂದೆ-ತಾಯಿಯರನ್ನ ಗೌರವಿಸುವ ಪಾಠ ಕಲಿಯಬೇಕಿದೆ. ಮಕ್ಕಳು ಕನಿಷ್ಠಪಕ್ಷ ದಿನಕ್ಕೊಮ್ಮೆಯಾದರೂ ಹಿರಿಯರನ್ನ, ಹೆತ್ತವರನ್ನು ಗೌರವಿಸುವುದನ್ನು, ನಮಸ್ಕರಿಸುವುದನ್ನು ಕಲಿಯಿರಿ, ಚೆನ್ನಾಗಿ ಓದಿ, ಸೋಮಾರಿತನ ಬಿಡಿ ಸಂಸ್ಕೃತಿ ಅರಿವು ನಿಮಗಿರಲಿ ಮಕ್ಕಳಿಗೆ ಕಿವಿಮಾತು ಹೇಳಿದರು.
ಶಿವಮೊಗ್ಗ ಶಾಸಕರಾದ ಎಸ್. ಎನ್.ಚನ್ನಬಸಪ್ಪ ಅವರು ಮಾತನಾಡುತ್ತಾ,ಗುರುಗಳಿದ್ದಾಗ ಮಾತ್ರ ಗುರಿ ತಲುಪಲು ಸಾಧ್ಯ,ನಮ್ಮ ಧರ್ಮ ಒಂದು ಮಹತ್ತರ ಮೈಲಿಗಲ್ಲನ್ನು ತಲುಪಿದೆ ಎಂದು ತಿಳಿಸಿದರು.
Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ವಿದ್ಯಾ ಸಂಸ್ಥೆ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ೪೫೦ಕ್ಕೂ ಹೆಚ್ಚು ಎಲ್ಲಾ ಬಗೆಯ ಶಾಲಾ ಕಾಲೇಜುಗಳನ್ನು ನಡೆಸುತ್ತಿದ್ದು, ಸುಮಾರು ಒಂದು ಲಕ್ಷ ನಲವತ್ತು ಸಾವಿರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ವಿಷಯ ತಿಳಿದು ಸಂತೋಷವಾಯಿತು. ಸರ್ಕಾರ ಮಾಡಬೇಕಾದ ಕಾರ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠಹಾಗೂ ಗುರುಗಳು ಮಾಡುತ್ತಿದ್ದಾರೆ. ನಿಜಕ್ಕೂ ಈ ವಿಷಯದಲ್ಲಿ ನಾವು ಧನ್ಯರು ಎಂದರು.
ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ನಿರ್ದೇಶಕರಗಳು, ಪ್ರಾಂಶುಪಾಲರು, ಸಿಬ್ಬಂದಿಯ ವರ್ಗದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.
ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಶಾಲಾ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಪೂಜ್ಯರಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಕೊನೆಯಲ್ಲಿ ಬಿಜಿಎಸ್ ಕಲಾ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

Micro Finance ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆಯಿಂದ ಜನತೆ ಪಾರಾಗಲು ಸಹಾಯವಾಣಿ

0

Micro Finance ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ 112 ಅಥವಾ 1902 ಸಂಖ್ಯೆಗೆ ದೂರು ನೀಡಬಹುದು.